Tag: Agriculture Bill

  • ಕರ್ನಾಟಕ ಬಂದ್- ಎಸ್‍ಎಸ್‍ಎಲ್‍ಸಿ, ಡಿಪ್ಲೊಮಾ ಪರೀಕ್ಷೆಗಳು ಮುಂದೂಡಿಕೆ

    ಕರ್ನಾಟಕ ಬಂದ್- ಎಸ್‍ಎಸ್‍ಎಲ್‍ಸಿ, ಡಿಪ್ಲೊಮಾ ಪರೀಕ್ಷೆಗಳು ಮುಂದೂಡಿಕೆ

    ಬೆಂಗಳೂರು: ಕೃಷಿ ಮಸೂದೆಯನ್ನು ವಿರೋಧಿಸಿ ರೈತ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್ ಘೋಷಿಸಿದ್ದು, ಈ ಹಿನ್ನೆಲೆ ಸೋಮವಾರ ನಡೆಯಬೇಕಿದ್ದ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು ಹಾಗೂ ಡಿಪ್ಲೊಮಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.

    ಸೆಪ್ಟೆಂಬರ್ 28ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಸೋಮವಾರ ನಡೆಯಬೇಕಿದ್ದ ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಅಥವಾ ಹಿಂದೂಸ್ಥಾನಿ ಸಂಗೀತ ಪರೀಕ್ಷೆಗಳನ್ನು ಸೆಪ್ಟೆಂಬರ್ 29ಕ್ಕೆ ಮುಂದೂಡಲಾಗಿದೆ. ಕರ್ನಾಟಕ ಮುಕ್ತ ಶಾಲೆ- ಕೆಓಎಸ್ ಪರೀಕ್ಷೆ ಮತ್ತು ಕೆಓಎಸ್ ವಿಜ್ಞಾನ ಪರೀಕ್ಷೆಗಳನ್ನು ಸಹ ಮುಂದೂಡಿ ಎಸ್‍ಎಸ್‍ಎಲ್‍ಸಿ ಬೋರ್ಡ್ ಆದೇಶ ಹೊರಡಿಸಿದೆ. ಸೋಮವಾರ ಹೊರತುಪಡಿಸಿದರೆ ವೇಳಾಪಟ್ಟಿಯಲ್ಲಿ ಇನ್ನಾವುದೇ ಬದಲಾವಣೆ ಇಲ್ಲ ಎಂದು ಮಂಡಳಿ ತಿಳಿಸಿದೆ.

    ಅದೇ ರೀತಿ ಸೋಮವಾರ ನಡೆಯಬೇಕಿದ್ದ ಡಿಪ್ಲೋಮಾ ಪರೀಕ್ಷೆಗಳನ್ನು ಸಹ ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ಸೋಮವಾರ ಹೊರತುಪಡಿಸಿದರೆ, ವೇಳಾಪಟ್ಟಿಯಲ್ಲಿ ಬೇರೆ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದೆ.

    ಸೋಮವಾರ ಕರ್ನಾಟಕ ಬಂದ್ ಹಮ್ಮಿಕೊಳ್ಳಲಾಗಿದ್ದು, ರಾಜ್ಯವ್ಯಾಪಿ ಹೋರಾಟ ನಡೆಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ಹೋರಾಟ ತೀವ್ರ ಸ್ವರೂಪ ಪಡೆಯಬಹುದು ಎಂಬ ಉದ್ದೇಶದಿಂದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

  • ತುಮಕೂರಲ್ಲಿ ಕಂಗನಾ ವಿರುದ್ಧ  ದೂರು ದಾಖಲು

    ತುಮಕೂರಲ್ಲಿ ಕಂಗನಾ ವಿರುದ್ಧ ದೂರು ದಾಖಲು

    ತುಮಕೂರು: ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ತುಮಕೂರಿನ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.

    ಹೈಕೋರ್ಟ್ ವಕೀಲ ರಮೇಶ್ ನಾಯಕ್ ಖಾಸಗಿ ದೂರು ದಾಖಲಿಸಿದ್ದು, ಸಂಸತ್ತಿನಲ್ಲಿ ಕೃಷಿ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ. ಇದನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರನ್ನು ಭಯೋತ್ಪಾದಕರು ಎಂದು ಕಂಗನಾ ಟ್ವಿಟ್ಟರ್ ನಲ್ಲಿ ಅಪಮಾನಿಸಿದ್ದಾರೆ. ಇದರಿಂದ ಲಕ್ಷಾಂತರ ರೈತರಿಗೆ ಅಪಮಾನ ಮಾಡಿದ್ದಾರೆ ಎಂದು ಜೆಎಮ್‍ಎಫ್ ನ್ಯಾಯಾಲಯದಲ್ಲಿ ಪಿಸಿಆರ್ ಕ್ರಿಮಿನಲ್ ದೂರನ್ನು ರಮೇಶ್ ಶುಕ್ರವಾರ ಮಧ್ಯಾಹ್ನ ದಾಖಲಿಸಿದ್ದಾರೆ.

    ಕಂಗನಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿಪಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದರು. ಪೊಲೀಸರು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ದೂರು ಸಲ್ಲಿಸಲು ಜಿಲ್ಲಾ ಪ್ರಧಾನ ಮತ್ತು ನ್ಯಾಯಾಧೀಶರಿಗೆ ಅನುಮತಿ ಕೋರಿದ್ದರು. ಅನುಮತಿ ಸಿಕ್ಕ ಹಿನ್ನೆಲೆಯಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಮುಂದೆ ಯಾವ ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಕಾದು ನೋಡಬೇಕಿದೆ.

    ಕೃಷಿ ಮಸೂದೆ ಕುರಿತು ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದ್ದು, ಹಲವು ರೈತ ಸಂಘಟನೆಗಳು ರಾಷ್ಟ್ರವ್ಯಾಪಿ ಬಂದ್‍ಗೆ ಕರೆ ನಿಡಿದ್ದರು. ಅಲ್ಲದೆ ಪಂಜಾಬ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಈ ಪ್ರತಿಭಟನೆ ಕುರಿತು ಕಂಗನಾ ರಣಾವತ್ ಟ್ವೀಟ್ ಮಾಡಿ ಹೋರಾಟಗಾರರನ್ನು ಭಯೋತ್ಪಾದಕರಿಗೆ ಹೋಲಿಸಿದ್ದರು. ಹೀಗಾಗಿ ಅವರ ಟ್ವೀಟ್ ಕುರಿತು ಇದೀಗ ವಿವಾದ ಹುಟ್ಟಿಕೊಂಡಿದೆ, ಸಾಕಷ್ಟು ಚರ್ಚೆಯಾಗುತ್ತಿದೆ.

  • ರೈತ ವಿರೋಧಿ ಮಸೂದೆಗಳು ಇಂದು ವಿಧಾನಸಭೆಯಲ್ಲಿ ಮಂಡನೆ

    ರೈತ ವಿರೋಧಿ ಮಸೂದೆಗಳು ಇಂದು ವಿಧಾನಸಭೆಯಲ್ಲಿ ಮಂಡನೆ

    – ರೈತರಿಗೆ ಸಿಎಂ ಬಿಎಸ್‍ವೈ ಸರ್ಕಾರದ ಸೆಡ್ಡು

    ಬೆಂಗಳೂರು: ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ಇವತ್ತು ರೈತರು ರಾಜ್ಯಾದ್ಯಂತ ರಸ್ತೆಗಳನ್ನು ಬಂದ್ ಮಾಡ್ತಿರೋ ಹೊತ್ತಲ್ಲೇ ಸರ್ಕಾರ ರೈತರಿಗೆ ಸೆಡ್ಡು ಹೊಡೆದಿದೆ. ರೈತ ವಿರೋಧಿ ಎಪಿಎಂಸಿ ತಿದ್ದುಪಡಿ ಮಸೂದೆ ಮತ್ತು ಭೂಸುಧಾರಣೆ ಮಸೂದೆಯನ್ನು ವಿಧಾನಸಭೆಯಲ್ಲಿ ಇವತ್ತು ಸರ್ಕಾರ ಮಂಡನೆ ಮಾಡಲಿದೆ.

    ಮಸೂದೆಗೆ ತೀವ್ರ ವಿರೋಧ ಕೇಳಿಬಂದಿರೋ ಹಿನ್ನೆಲೆಯಲ್ಲಿ ಕೆಳಮನೆ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ನಡುವೆ ವಾಕ್ಸಮರಕ್ಕೆ ಸಾಕ್ಷಿ ಆಗಲಿದೆ. ಈ ಹಿನ್ನೆಲೆಯಲ್ಲಿ ತನ್ನ ಶಾಸಕರಿಗೆ ಸದನದಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಬಿಜೆಪಿ ವಿಪ್ ಜಾರಿ ಮಾಡಿದೆ.

    ನಿನ್ನೆ ವಿಧಾನಸಭೆ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿದೆ. ಇದಕ್ಕೆ ಕಾಂಗ್ರೆಸ್‍ನ 23 ಶಾಸಕರು ಎದ್ದು ನಿಂತು ಬೆಂಬಲ ಸೂಚಿಸಿದರು. ಹೀಗಾಗಿ ಅವಿಶ್ವಾಸ ನಿರ್ಣಯ ಮಂಡನೆಗೆ ಕೋರಂ ಇದೆ ಎಂದ ಸ್ಪೀಕರ್ ಕಾಗೇರಿ, ಇಂದು ಅಥವಾ ನಾಳೆ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿದ್ದಾರೆ. ಅವಿಶ್ವಾಸ ನಿರ್ಣಯ ಮಂಡನೆ ಹಿನ್ನೆಲೆಯಲ್ಲಿ ಯಾವುದೇ ಬಿಲ್ ಪಾಸ್ ಮಾಡದಂತೆ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.

  • ಅಮೆರಿಕದಿಂದ ಸೋನಿಯಾ ಗಾಂಧಿ ವಾಪಸ್- ರಾಹುಲ್ ಗಾಂಧಿ ಜೊತೆ ಆಗಮನ

    ಅಮೆರಿಕದಿಂದ ಸೋನಿಯಾ ಗಾಂಧಿ ವಾಪಸ್- ರಾಹುಲ್ ಗಾಂಧಿ ಜೊತೆ ಆಗಮನ

    ನವದೆಹಲಿ: ವೈದ್ಯಕೀಯ ತಪಾಸಣೆಗಾಗಿ ಅಮೆರಿಕಕ್ಕೆ ತೆರಳಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭಾರತಕ್ಕೆ ಮರಳಿದ್ದು, ಮಂಗಳವಾರ ಪುತ್ರ ರಾಹುಲ್ ಗಾಂಧಿ ಅವರೊಂದಿಗೆ ಆಗಮಿಸಿದ್ದಾರೆ.

    ನಿಗದಿತ ವೈದ್ಯಕೀಯ ತಪಾಸಣೆಗಾಗಿ ಸೋನಿಯಾ ಗಾಂಧಿ ಅವರು ಸೆಪ್ಟೆಂಬರ್ 12ರಂದು ಅಮೆರಿಕಕ್ಕೆ ತೆರಳಿದ್ದರು. ಸೋನಿಯಾ ಗಾಂಧಿ ಅವರು ತುಂಬಾ ದಿನಗಳಿಂದ ತಪಾಸಣೆಗೆ ಒಳಗಾಗಿರಲಿಲ್ಲ. ಹೀಗಾಗಿ ಅಮೆರಿಕಕ್ಕೆ ಹೋಗಿ ತಪಾಸಣೆ ಮಾಡಿಕೊಂಡು ಬಂದಿದ್ದಾರೆ. ಕೊರೊನಾ ಕಾರಣದಿಂದಾಗಿ ಅವರು ಮರಳುವುದು ತಡವಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಅಮೆರಿಕಕ್ಕೆ ತೆರಳಿದ್ದರಿಂದ ಸೋನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿ ಅವರು ಅಧೀವೇಶನದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ. ಕೊರೊನಾ ವೈರಸ್ ಹಿನ್ನೆಲೆ ಅಧಿವೇಶನದ ಅವಧಿಯನ್ನು ಮೊಟಕುಗೊಳಿಸಲಾಗಿದ್ದು, ಹೀಗಾಗಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ಭಾಗವಹಿಸುತ್ತಿಲ್ಲ.

    ಕೃಷಿ ಮಸೂದೆ ವಿಚಾರವಾಗಿ ಅಧಿವೇಶನದಲ್ಲಿ ಕೋಲಾಹಲವೇ ಎದ್ದಿದ್ದು, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಕೃಷಿ ಮಸೂದೆ ಕುರಿತು ಅಸಮಾಧಾನ ವ್ಯಕ್ತಪಡಿಸಿವೆ. ಅಲ್ಲದೆ ಇಂದು ವಿರೋಧ ಪಕ್ಷಗಳು ರಾಜ್ಯ ಸಭೆ ಅಧಿವೇಶನವನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿವೆ.

    ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಗುಲಾಮ್ ನಬಿ ಆಝಾದ್ ಈ ಕುರಿತು ಪ್ರತಿಕ್ರಿಯಿಸಿ, ಸದಸ್ಯರ ಅಮಾನತನ್ನು ಹಿಂಪಡೆಯುವ ವರೆಗೆ ನಾವು ನಡಾವಳಿಯನ್ನು ಬಹಿಷ್ಕರಿಸುತ್ತೇವೆ. ಅಲ್ಲದೆ ಸರ್ಕಾರ ನಿಗದಿಪಡಿಸಿದ ಎಂಎಸ್‍ಪಿಗಿಂತ ಕೆಳಗಿನ ರೈತರಿಂದ ಯಾವುದೇ ಖಾಸಗಿ ವ್ಯಕ್ತಿ ಆಹಾರ ಧಾನ್ಯಗಳನ್ನು ಖರೀದಿಸಬಾರದು ಆ ರೀತಿ ಮತ್ತೊಂದು ಮಸೂದೆಯನ್ನು ಸರ್ಕಾರ ತರಬೇಕು ಎಂದು ಆಗ್ರಹಿಸಿವೆ.

    ಅಶಿಸ್ತಿನಿಂದ ವರ್ತಿಸಿದ್ದಕ್ಕೆ ಸೋಮವಾರ 8 ಜನ ರಾಜ್ಯಸಭಾ ಸದಸ್ಯರನ್ನು ಅಮಾನತುಗೊಳಿಸಲಾಗಿದೆ. ಕಾಂಗ್ರೆಸ್‍ನ ರಾಜೀವ್ ಸತವ್, ಸೈಯದ್ ನಜೀರ್ ಹುಸೇನ್, ರಿಪನ್ ಬರೇನ್ ಸೇರಿದಂತೆ ಇತರರನ್ನು ಅಮಾನತುಗೊಳಿಸಲಾಗಿದೆ.

  • ರೈತ ವಿರೋಧಿ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ- ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ

    ರೈತ ವಿರೋಧಿ ಮಸೂದೆ ವಿರುದ್ಧ ಭುಗಿಲೆದ್ದ ಆಕ್ರೋಶ- ಶುಕ್ರವಾರ ಕರ್ನಾಟಕ ಬಂದ್ ಸಾಧ್ಯತೆ

    ಬೆಂಗಳೂರು: ಸೆಪ್ಟೆಂಬರ್ 25ರಂದು ಕರ್ನಾಟಕವೇ ಬಂದ್ ಆಗುವ ಸಾಧ್ಯತೆ ಇದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಶುಕ್ರವಾರ ರಾಜ್ಯಾದ್ಯಂತ ಬಂದ್ ಆಚರಿಸುವ ನಿರೀಕ್ಷೆ ಇದೆ.

    ಈ ಸಂಬಂಧ ಇವತ್ತು ಬೆಳಗ್ಗೆ 11 ಗಂಟೆಗೆ ಅಧಿಕೃತ ಘೋಷಣೆ ಆಗಲಿದೆ. ಬಂದ್‍ಗೆ 32ಕ್ಕೂ ಹೆಚ್ಚು ಸಂಘಟನೆಗಳು ಕೈಜೋಡಿಸಲಿವೆ. ರೈತ ಸಂಘಟನೆಗಳು ಮಾತ್ರವಲ್ಲದೇ ನಾರಾಯಣಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ಓಲಾ-ಉಬರ್, ಆಟೋ, ಟ್ಯಾಕ್ಸಿ ಸಂಘಟನೆಗಳು ಬೆಂಬಲ ಘೋಷಿಸಲಿವೆ. ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನ ಬಂದ್ ಮಾಡಿ ಪ್ರತಿಭಟಿಸಲು ರೈತ ಸಂಘಟನೆಗಳು ತೀರ್ಮಾನಿಸಿವೆ.

    ಬೆಂಗಳೂರಲ್ಲಿ ನಡೆಯುತ್ತಿರುವ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಮತ್ತು ಮೌರ್ಯ ಸರ್ಕಲ್ ಎದುರು ರೈತರು ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ. ನಿನ್ನೆಯಿಂದ ವಿಧಾನಮಂಡಲದ ಅಧಿವೇಶನ ಆರಂಭ ಆಗಿದ್ದು, ಅಧಿವೇಶನದ ಮೊದಲ ದಿನವೇ ರಾಜಧಾನಿಯಲ್ಲಿ ರೈತರು ಹೋರಾಟಕ್ಕಿಳಿದಿದ್ದರು. ಈ ವೇಳೆ ಮಾತನಾಡಿದ್ದ ಕುರುಬೂರು ಶಾಂತಕುಮಾರ್, ಭೂಮಿ ತಾಯಿ ಮಾರಾಟಕ್ಕೆ ಮುಂದಾದ ಸರ್ಕಾರಕ್ಕೆ ತಕ್ಕ ಪಾಠ ಕಲಿಸ್ತೇವೆ. ದೇಶಾದ್ಯಂತ ರೈತರು ದಂಗೆ ಏಳುವ ಮುನ್ನ ಎಚ್ಚೆತುಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದರು. ಇದು ರೈತ ವಿರೋಧಿ ಕೆಲಸ. ರೈತನ ಮಗನಾಗಿದ್ದರೇ ಈ ರೀತಿ ಮಾಡುತ್ತಿರಲಿಲ್ಲ. ಮೋದಿ ಮಾತನ್ನು ಯಾರು ನಂಬಬೇಡಿ ಎಂದು ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ಹೊರಹಾಕಿದ್ದರು.

    ಕೃಷಿ ಬಿಲ್ ವಿರೋಧಿಸಿ ಪಂಜಾಬ್‍ನಲ್ಲಿ ಸೆಪ್ಟೆಂಬರ್ 25ಕ್ಕೆ ಬಂದ್‍ಗೆ ಕರೆ ನೀಡಲಾಗಿದೆ. ಇದನ್ನು ಅಖಿಲ ಭಾರತ ಮಟ್ಟದಲ್ಲಿ ಮಾಡಲು ಕಿಸಾನ್ ಸಭಾ ಚಿಂತನೆ ನಡೆಸುತ್ತಿದೆ. ಇದರ ನಡುವೆಯೇ ಕೃಷಿ ಮಸೂದೆ ಸಂಬಂಧ ಪ್ರಧಾನಿ ಮೋದಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದು, ರೈತರ ಶ್ರೇಯಸ್ಸಿಗಾಗಿಯೇ ಕೃಷಿ ಬಿಲ್ ತರಲಾಗುತ್ತಿದೆ. ಆದರೆ ಈ ಬಗ್ಗೆ ವಿಪಕ್ಷಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿವೆ ಎಂದು ಆರೋಪಿಸಿದ್ದರು. ಕೃಷಿ ಮಸೂದೆಗಳು ಯಾವುದೇ ಕಾರಣಕ್ಕೂ ರೈತ ವಿರೋಧಿ ಅಲ್ಲ. ಇವುಗಳಿಂದ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಆಗಲಿವೆ. ಈ ಮಸೂದೆಗಳಿಂದಾಗಿ ಬೆಳೆಗಳಿಗೆ ಬೆಂಬಲ ಬೆಲೆಯೂ ರದ್ದಾಗಲ್ಲ. ಬೆಂಬಲ ಬೆಲೆ ಮುಂದುವರೆಯಲಿದೆ ಎಂದು ಈ ಮೂಲಕ ರೈತರಿಗೆ ಭರವಸೆ ನೀಡುತ್ತಿದ್ದೇನೆ. ನೂತನ ಕೃಷಿ ಮಸೂದೆಯಿಂದಾಗಿ ರೈತರು ಎಲ್ಲಿ ಬೇಕಾದ್ರೂ ತಮ್ಮ ಉತ್ಪನ್ನಗಳನ್ನು ಮಾರಬಹುದು. ದೇಶದ ಯಾವುದೇ ಮಂಡಿಯನ್ನು ಮುಚ್ಚುವುದಿಲ್ಲ ಎಂದು ಮೋದಿ ಸ್ಪಷ್ಟಪಡಿಸಿದ್ದರು.

  • ಕೇಂದ್ರದ ಕೃಷಿ ಮಸೂದೆಯಲ್ಲಿ ರೈತರ ಶೋಷಣೆಯೇ ಹೆಚ್ಚು – ರಾಜ್ಯಸಭೆಯಲ್ಲಿ ಹೆಚ್‍ಡಿಡಿ ವಿರೋಧ

    ಕೇಂದ್ರದ ಕೃಷಿ ಮಸೂದೆಯಲ್ಲಿ ರೈತರ ಶೋಷಣೆಯೇ ಹೆಚ್ಚು – ರಾಜ್ಯಸಭೆಯಲ್ಲಿ ಹೆಚ್‍ಡಿಡಿ ವಿರೋಧ

    ನವದೆಹಲಿ: ಕೇಂದ್ರ ಸರ್ಕಾರ ಮಂಡಿಸಿರುವ ವಿವಾದಿತ ಕೃಷಿ ಮಸೂದೆಗೆ ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ವಿರೋಧ ವ್ಯಕ್ತಪಡಿಸಿದ್ದಾರೆ.

    ಇಂದಿನ ಕಲಾಪದ ಚರ್ಚೆಯಲ್ಲಿ ಮಾತನಾಡಿದ ಅವರು ರೈತನ ಮಗನಾಗಿ ನಾನು ಈ ಮಸೂದೆಯನ್ನು ವಿರೋಧಿಸುತ್ತೇನೆ. ರೈತರ ವಿಚಾರದಲ್ಲಿ ಆಡಳಿತ ಮತ್ತು ವಿಪಕ್ಷಗಳಿಗೆ ಕಾಳಜಿ ಇದೆ. ಆದರೆ ಕೇಂದ್ರ ಸರ್ಕಾರ ಈ ನಡೆ ಆತುರ ನಿರ್ಧಾರ ಈ ಬಗ್ಗೆ ಸಮಗ್ರ ಪರಿಶೀಲನೆ ಅಗತ್ಯ ಇತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಕಲಾಪದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರ ಮಾಡಿದೆ ಇಂದೇ ರೈತರಿಗೆ ಸಂಬಂಧಪಟ್ಟಂತೆ ಮೂರು ಮಸೂದೆ ಗಳು ಮಂಡನೆಯಾದವು ನನ್ನ ನಿಲುವು ಯಾವಾಗಲೂ ರೈತರ ಪರ ಎಂದರು.

    ಇವತ್ತು ನನಗೆ ಮೂರು ನಿಮಿಷ ಮಾತಾಡೋಕೆ ಅವಕಾಶ ಸಿಕ್ಕಿತ್ತು. ಆದರೆ ಈ ಬಿಲ್‍ನ ಒಳಹೊಕ್ಕಿ ನೋಡಿದರೆ ರೈತರ ಶೋಷಣೆಯೇ ಜಾಸ್ತಿ. ಹೀಗಾಗೀ ಹೆಚ್ಚಿನ ಸಮಯ ಮಾತನಾಡಲು ಬೇಕಿತ್ತು. ಆದರೆ ಅವಕಾಶ ಸಿಗಲಿಲ್ಲ. ಈ ಬಿಲ್‍ಗೆ ನನ್ನ ವಿರೋಧವಿದೆ. ರೈತರಿಗೆ ಇದರಿಂದ ಯಾವುದೇ ಒಳಿತಿಲ್ಲ, ನೀತಿ ಆಯೋಗ ನೀಡಿರುವ ವರದಿಯನ್ನೇ ಮೋದಿ ಸರ್ಕಾರ ಒಪ್ಪುತ್ತಿಲ್ಲ. ರೈತರ ವಿರೋಧಿ ಮಸೂದೆಯನ್ನು ಜಾರಿಗೆ ತರಲು ಕೇಂದ್ರ ಮುಂದಾಗಿದೆ ಎಂದು ವಾಗ್ದಾಳಿ ನಡೆಸಿದರು.