Tag: Agriculture Minister BC Patil

  • ಬಡವರ ಆಹಾರ ಇಂದಿನ ದಿನಗಳಲ್ಲಿ ಶ್ರೀಮಂತರ ಆಹಾರವಾಗಿದೆ: ಬಿ.ಸಿ.ಪಾಟೀಲ್

    ಬಡವರ ಆಹಾರ ಇಂದಿನ ದಿನಗಳಲ್ಲಿ ಶ್ರೀಮಂತರ ಆಹಾರವಾಗಿದೆ: ಬಿ.ಸಿ.ಪಾಟೀಲ್

    ಚಿತ್ರದುರ್ಗ: ಬಡವರ ಆಹಾರ ಇಂದಿನ ದಿನಗಳಲ್ಲಿ ಶ್ರೀಮಂತರ ಆಹಾರವಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

    ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಬಬ್ಬೂರು ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇಂದು ಕೃಷಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಿರಿಧಾನ್ಯಗಳ ಉತ್ಕøಷ್ಟತಾ ಕೇಂದ್ರ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಡವರ ಆಹಾರ ಇಂದಿನ ದಿನಗಳಲ್ಲಿ ಶ್ರೀಮಂತರ ಆಹಾರವಾಗಿದೆ. ಸಿರಿಧಾನ್ಯಗಳ ಸೇವನೆಯಿಂದ ಉತ್ತಮ ಆರೋಗ್ಯ ವೃದ್ಧಿಸುತ್ತೆ. ಆಧುನಿಕ ಜೀವನದಲ್ಲಿ ಸಿರಿಧಾನ್ಯಗಳ ಪ್ರಾಮುಖ್ಯತೆ ಹೆಚ್ಚಿದ್ದು, ಇವು ವಿವಿಧ ಪೋಷಕಾಂಶಗಳ ಆಗರವಾಗಿರುತ್ತವೆ ಎಂದಿದ್ದಾರೆ. ಇದನ್ನೂ ಓದಿ:  ಅರಣ್ಯ ಇಲಾಖೆಯ ಹುತಾತ್ಮ ಅಧಿಕಾರಿ, ಸಿಬ್ಬಂದಿಗೆ ಗೌರವ ನಮನ ಸಲ್ಲಿಕೆ

    ಸಿರಿಧಾನ್ಯಗಳನ್ನು ಚಿತ್ರದುರ್ಗ ಜಿಲ್ಲೆಯ ಹೆಚ್ಚಿನ ಪ್ರದೇಶದಲ್ಲಿ ಬೆಳೆಯಲಾಗುತ್ತದೆ. ಪ್ರಮುಖವಾಗಿ ಹೊಸದುರ್ಗ ತಾಲೂಕಿನಲ್ಲಿ ಹೆಚ್ಚಿನ ವಿಸ್ತೀರ್ಣ ಬರುತ್ತಿದ್ದು, ಸಾವೆ, ನವಣೆ, ರಾಗಿ, ಊದಲು, ಹಾರಕ, ಕೊರಲೆ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಆಹಾರ ಪದ್ಧತಿಯಲ್ಲಿ ಸಿರಿಧಾನ್ಯಗಳನ್ನು ರೂಢಿಸಿಕೊಂಡು, ಆರೋಗ್ಯ ಸುಧಾರಣೆ ಕ್ರಮಕೈಗೊಳ್ಳಬೇಕು. ಇದರ ಜೊತೆಗೆ ಬೇಡಿಕೆಯನ್ನು ಹೆಚ್ಚಿಸಿದ್ದಲ್ಲಿ ರೈತರಿಗೆ ಸಿರಿಧಾನ್ಯಗಳನ್ನು ಬೆಳೆಯಲು ಪ್ರೋತ್ಸಾಹ ನೀಡಲು ಸಹಕಾರಿಯಾಗಲಿದೆ ಎಂದು ಆಶಿಸಿದ್ದಾರೆ.

    ಸಿರಿಧಾನ್ಯ ಬೆಳೆಯುವ ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ 2018-19ನೇ ಸಾಲಿನಲ್ಲಿ ರಾಷ್ಟ್ರೀಯ ವಿಕಾಸ ಯೋಜನೆಯಡಿ ಸಿರಿಧಾನ್ಯಗಳ ಉತ್ಕøಷ್ಟತಾ ಕೇಂದ್ರದ ಅಗತ್ಯತೆಯ ಪ್ರಸ್ತಾವನೆಯನ್ನು ಕೃಷಿ ಇಲಾಖೆಯ ಮೂಲಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಯಿತು. 2019-20ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಅನುಮತಿ ನೀಡಿ ಜಿಲ್ಲೆಯ ರೈತರಿಗೆ ತರಬೇತಿ ನೀಡುವ ಸಲುವಾಗಿ ಸಿರಿಧಾನ್ಯಗಳ ಉತ್ಕøಷ್ಟತಾ ಕೇಂದ್ರದ ಕಟ್ಟಡ ಪ್ರಾರಂಭವಾಗಿ ಉದ್ಘಾಟನೆಗೊಳ್ಳುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಬಿಜೆಪಿಗೆ ಬರುವ ಮುನ್ನ ದುಡ್ಡಿನ ಆಫರ್ ಕೊಟ್ಟಿದ್ದು ನಿಜ: ಶ್ರೀಮಂತ ಪಾಟೀಲ್

    ಸಿರಿಧಾನ್ಯಗಳ ಉತ್ಕಷ್ಟತಾ ಕೇಂದ್ರದ ಮೂಲ ಉದ್ದೇಶ ತರಬೇತಿ ನೀಡಿ ರೈತರಲ್ಲಿ ಸಿರಿಧಾನ್ಯಗಳ ಪ್ರಾಮುಖ್ಯತೆ ವಿಶಿಷ್ಟ ಗುಣಗಳ ಬಗ್ಗೆ ಅರಿವು ಮೂಡಿಸಿ ಹೆಚ್ಚಿನ ಪ್ರದೇಶದಲ್ಲಿ ಸಿರಿಧಾನ್ಯಗಳಗಳನ್ನು ಬೆಳೆಸಿ ರೈತರನ್ನು ಅರ್ಥಿಕವಾಗಿ ಸಬಲರನ್ನಾಗಿ ಮಾಡುವುದಾಗಿದೆ ತಿಳಿಸಿದ್ದಾರೆ. ಮುಂಬರುವ 2023ನೇ ವರ್ಷವನ್ನು ಅಂತರ ರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಹಾಗೂ ಅಂತರ ರಾಷ್ಟ್ರೀಯ ಸಿರಿಧಾನ್ಯ ಮೇಳವನ್ನೂ ಸಹ ರಾಜ್ಯದಲ್ಲಿ ಆಚರಿಸಲಾಗುವುದು ಎಂದಿದ್ದಾರೆ.

    ಸಿರಿಧಾನ್ಯಗಳನ್ನು ಹೆಚ್ಚು ಬೆಳೆಯುವುದರ ಮೂಲಕ ಆರೋಗ್ಯದ ಆಹಾರವನ್ನು ಒದಗಿಸುವ ಕೆಲಸ ರೈತರಿಂದ ಆಗಬೇಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹಿರಿಯೂರು ಶಾಸಕರಾದ ಪೂರ್ಣಿಮಾ ಕೆ.ಶ್ರೀನಿವಾಸ್, ಶಾಸಕರಾದ ಟಿ.ರಘುಮೂರ್ತಿ, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್.ಲಿಂಗಮೂರ್ತಿ, ಬಯಲುಸೀಮೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎನ್.ಇ.ಜೀವನ್‍ಮೂರ್ತಿ, ನಿರ್ದೇಶಕ ಡಾ.ಪಿ.ರಮೇಶ್ ಕುಮಾರ್, ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಡಾ.ಎನ್.ಎ.ಪ್ರವೀಣ್ ಚೌಧರಿ, ಡಾ.ಹುಲಿರಾಜ್ ಸೇರಿದಂತೆ ಮತ್ತಿತರರು ಇದ್ದರು. ಇದನ್ನೂ ಓದಿ:  ನನ್ನ ಮದ್ವೆಯಾಗುವ ಹುಡುಗ 40 ಸಾವಿರ ಆದ್ರೂ ದುಡಿಯಬೇಕು: ಅದಿತಿ

  • ಹುಟ್ಟಹಬ್ಬದಂದೇ ಟ್ರ್ಯಾಕ್ಟರ್ ಚಲಾಯಿಸಿ ರಾಗಿ, ಕಬ್ಬು ಬಿತ್ತನೆ ಮಾಡಿದ್ರು ಬಿ.ಸಿ ಪಾಟೀಲ್!

    ಹುಟ್ಟಹಬ್ಬದಂದೇ ಟ್ರ್ಯಾಕ್ಟರ್ ಚಲಾಯಿಸಿ ರಾಗಿ, ಕಬ್ಬು ಬಿತ್ತನೆ ಮಾಡಿದ್ರು ಬಿ.ಸಿ ಪಾಟೀಲ್!

    ಮಂಡ್ಯ: ಗ್ರಾಮ ವಾಸ್ತವ್ಯ ಮಾದರಿಯಲ್ಲಿ ರೈತರೊಂದಿಗೆ ವಾಸ್ತವ್ಯ ಮಾಡಲು ಕೃಷಿ ಸಚಿವ ಬಿಸಿ ಪಾಟೀಲ್ ರೈತರೊಂದಿಗೆ ಒಂದು ದಿನ ಎಂಬ ವಿಶೇಷ ಕಾರ್ಯಕ್ರಮವನ್ನು ಆರಂಭಿಸಿದ್ದು, ಮಂಡ್ಯದಲ್ಲಿ ಟ್ರ್ಯಾಕ್ಟರ್ ಚಲಾಯಿಸಿ ರಾಗಿ, ಕಬ್ಬು ಬಿತ್ತನೆಗೆ ಚಾಲನೆ ನೀಡಿದರು. ತಮ್ಮ ಹುಟ್ಟಹಬ್ಬದ ದಿನದಂದೇ ಸಚಿವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು ವಿಶೇಷವಾಗಿತ್ತು.

    ಕೆ.ಆರ್. ಪೇಟೆ ತಾಲೂಕಿನ ಮಡುವಿನಕೋಡಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಬಿ.ಸಿ.ಪಾಟೀಲ್, ಮಾಜಿ ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡುತ್ತಿದ್ದರು. ನಾನು ವಾಸ್ತವತೆಯನ್ನು ಅರಿಯುತ್ತಿದ್ದೇನೆ. ನಾನು ಅವರನ್ನು ಕಾಪಿ ಮಾಡುತ್ತಿಲ್ಲ. ಅವರು ಗ್ರಾಮದಲ್ಲಿ ಇದ್ದು ಮಲಗಿ ಹೋಗುತ್ತಿದ್ದರು. ನಾನು ಬೆಳಗ್ಗಿಯಿಂದ ರಾತ್ರಿವರೆಗೂ ಇದ್ದು ವಾಸ್ತವತೆ ಅರಿಯುತ್ತಿದ್ದೇನೆ. ಪ್ರತಿ ಜಿಲ್ಲೆಗೂ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸುತ್ತೇವೆ. ನಾವು ಮಾಡುವ ಕಾರ್ಯಕ್ರಮದಿಂದ ರೈತರ ಸಮಸ್ಯೆ ತಿಳಿಯುತ್ತದೆ. ತಿಂಗಳಿಗೆ ಮೂರು ದಿನ ಈ ಕಾರ್ಯಕ್ರಮ ಮಾಡುತ್ತೇನೆ. ಎಲ್ಲಾ ಜಿಲ್ಲೆ ಸುತ್ತಿದ ಬಳಿಕ ಸಿಎಂಗೆ ವರದಿ ನೀಡುತ್ತೇನೆ. ರೈತರ ಸಂಕಷ್ಟಗಳನ್ನು ಹೇಗೆ ನಿವಾರಿಸಬಹುದು ಎಂದು ಯೋಚನೆ ಮಾಡುತ್ತೇವೆ. ನಾನು ರೈತನ ಮಗನಾಗಿದ್ದು, ಮೊದಲೆಲ್ಲಾ ನಾನು ಎಲ್ಲಾ ಕೆಲಸವನ್ನು ಮಾಡಿದ್ದೇನೆ. ಪೊಲೀಸ್ ಇಲಾಖೆಗೆ, ಸಿನಿಮಾಗೆ ಬಂದ ಮೇಲೆ ಅನುಭವ ಕಡಿಮೆಯಾಗಿದೆ. ಹೀಗಾಗಿ ಮೈ ಸ್ವಲ್ಪ ಬಗ್ಗುತ್ತಿಲ್ಲ. ಈಗ ಮತ್ತೆ ಮೈ ಬಗ್ಗಿಸಿದ್ರೆ ರೈತರ ರೀತಿ ಕೆಲಸ ಮಾಡುತ್ತೇವೆ ಎಂದರು.

    ಜಿಲ್ಲೆಯ ಮಡುವಿನಕೋಡಿ ಗ್ರಾಮದ ಹೊರಹೊಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಬಿಸಿ ಪಾಟೀಲ್ ಕಬ್ಬು ತರಗು ನಿವರ್ಹಣೆ ಬಗ್ಗೆ ಪ್ರಾತ್ಯಕ್ಷಿಕೆಯನ್ನು ವೀಕ್ಷಣೆ ಮಾಡಿದರು. ಇದೇ ವೇಳೆ ಟ್ರ್ಯಾಕ್ಟರ್ ಚಲಾಯಿಸಿ ರಾಗಿ, ಕಬ್ಬು ಬಿತ್ತನೆ ಚಾಲನೆ ನೀಡಿದರು. ಅಲ್ಲದೇ ಮಾಯಿಗೌಡ ಅವರ ಜಮೀನಿನಲ್ಲಿ ರೈತ ಮಹಿಳೆಯರೊಂದಿಗೆ ರಾಗಿ ನಾಟಿ ಮಾಡಿದರು. ಜೈ ಕಿಸಾನ್ ಘೋಷಣೆ ಕೂಗೂತ್ತ ಸಚಿವರು ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು.

    ಬಳಿಕ ಕೆಆರ್ ಪೇಟೆ ತಾಲೂಕಿನ ಹೊಸಕೋಟೆ ಗ್ರಾಮದಲ್ಲಿರುವ ಲಕ್ಷ್ಮೀ ದೇವಮ್ಮ ಅವರ ಸಮಗ್ರ ಕೃಷಿ ತೋಟಕ್ಕೆ ಭೇಟಿ ಕೊಟ್ಟ ಸಚಿವರು, ಭತ್ತದ ಗದ್ದೆ ವೀಕ್ಷಿಣೆ ಮಾಡಿ ಗೊಬ್ಬರವನ್ನು ಚೆಲ್ಲುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಸು ಮತ್ತು ಕುರಿಗಳ ಮೇವಿಗಾಗಿ ಹಲ್ಲು ಕಟಾವು ಮಾಡಿದರು. ಬಿಸಿ ಪಾಟೀಲ್ ಅವರಿಗೆ ಸಚಿವ ನಾರಾಯಣಗೌಡ ಸಾಥ್ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ತೋಟಗಾರಿಕಾ ಸಚಿವರಾದ ನಾರಾಯಣಗೌಡ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವರಿಗೆ, ಕಾರ್ಯಕರ್ತರು ಶುಭಾಶಯ ಕೋರಿದರು.

    ರೈತರಿಗೆ ಆತ್ಮಸ್ಥೆರ್ಯ ತುಂಬುವ, ಸಮಗ್ರ ಕೃಷಿ ಮತ್ತು ಉತ್ಪಾದನಾ ವೆಚ್ಚ ಹಾಗೂ ರೈತರ ಆತ್ಮಹತ್ಯೆ ಕಾರಣ ಏನು ಎಂಬುದನ್ನು ತಿಳಿಯುವುದು. ಮಾದರಿ ರೈತರನ್ನು ಭೇಟಿ ಮಾಡಿ ಅವರ ಅನುಭವ ಬೇರೆ ರೈತರಿಗೆ ಮಾದರಿಯಾಗುವಂತೆ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಪ್ರತಿ ತಿಂಗಳು 2 ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಗ್ಗೆ 7 ರಿಂದ ದಿನಪೂರ್ತಿ ರೈತರೊಂದಿಗೆ ಇದ್ದು, ಸಮಗ್ರ ಮಾಹಿತಿ ಸಂಗ್ರಹಿಸಿ ಕೃಷಿ ಇಲಾಖೆಯಲ್ಲಿ ಹೊಸ ಬದಲಾವಣೆ ಮಾಡಲು ಸಚಿವರು ಕಾರ್ಯಕ್ರಮವನ್ನು ಆರಂಭಿಸಿದ್ದಾರೆ.

  • ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ: ಬಿ.ಸಿ.ಪಾಟೀಲ್

    ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಹೋರಾಡುತ್ತಿದೆ: ಬಿ.ಸಿ.ಪಾಟೀಲ್

    -ಕರ್ನಾಟಕ ಬಂದ್ ದುರದೃಷ್ಟಕರ

    ಹಾವೇರಿ: ಕರ್ನಾಟಕ ಬಂದ್ ಮಾಡಿರುವುದು ದುರದೃಷ್ಟಕರವಾಗಿದ್ದು, ಇಂದಿನ ಬಂದ್ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

    ಜಿಲ್ಲೆಯ ಹಿರೇಕೆರೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರೈತ ಮುಖಂಡರ ಸಭೆ ಮಾಡಿ ತಿದ್ದುಪಡಿಯಿಂದ ರೈತರಿಗೆ ಆಗುವ ಲಾಭಗಳ ಬಗ್ಗೆ ಮಾಹಿತಿ ನೀಡಿದ್ದರು. ಪ್ರಧಾನಿ ಮೋದಿ ಅವರು ಕೂಡ ಈ ಬಗ್ಗೆ ಮಾಹಿತಿ ಹಂಚಿಕೊಂಡು ರೈತರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದ್ದಾರೆ. ಆದರೂ ಬಂದ್ ಮಾಡುತ್ತಿರುವುದು ದುರದೃಷ್ಟಕರ ಎಂದು ಅಭಿಪ್ರಾಯಪಟ್ಟರು.

    ಕೃಷಿ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆಗಳಿಂದ ಆಗುವ ಲಾಭಗಳ ಬಗ್ಗೆ ಪ್ರಧಾನಿಗಳೇ ಹೇಳಿದ್ದಾರೆ. ಅನವಶ್ಯಕವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಬಂದ್‍ಗೆ ಬೆಂಬಲ ಕೊಟ್ಟಿದ್ದಾರೆ. 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆಯನ್ನು ತೆಗಿಯಬೇಕು ಎಂದು ಹೇಳಿದ್ದರು. ಭೂ ಸುಧಾರಣೆ ಕಾಯ್ದೆಯ 79 ಮತ್ತು 80 ಕಲಂ ಕೈಬಿಡಬೇಕು ಎಂದು ಈ ಹಿಂದೆ ಪ್ರಿಯಾಂಕ್ ಖರ್ಗೆ, ದೇಶಪಾಂಡೆ, ಡಿಕೆ ಶಿವಕುಮಾರ್ ಅವರೇ ವಿಧಾನಸಭೆಯಲ್ಲೇ ಹೇಳಿದ್ದರು. ಆದರೆ ಈಗ ಬಂದ್‍ಗೆ ಬೆಂಬಲ ಸೂಚಿಸಿರುವುದು ಅವರ ದ್ವಿಮುಖ ನೀತಿ ಎದ್ದುಕಾಣುತ್ತದೆ ಎಂದು ಟೀಕಿಸಿದರು.

    ಕಾಂಗ್ರೆಸ್ ಪಕ್ಷದ ನಾಯಕರು ಮಾತನಾಡಿರುವ ದಾಖಲೆಗಳು ವಿಧಾನಸಭೆಯ ರೆಕಾರ್ಡ್ ನಲ್ಲಿದೆ. ಕಾಂಗ್ರೆಸ್ ನಾಯಕರದ್ದು ದ್ವಿಮುಖ ನೀತಿ. ಹೇಳುವುದು ಒಂದು, ಮಾಡುವುದು ಮತ್ತೊಂದು. ಕಾಂಗ್ರೆಸ್ ಪಕ್ಷ ಇಂದು ಸಂಪೂರ್ಣ ಅಸ್ತಿತ್ವ ಕಳೆದುಕೊಂಡಿದ್ದು, ತಮ್ಮ ಅಸ್ತಿತ್ವದ ಉಳಿವಿಗಾಗಿ ಕಾಂಗ್ರೆಸ್ ನಾಯಕರು ಬಂದ್‍ಗೆ ಬೆಂಬಲ ನೀಡಿದ್ದಾರೆ. ಬಂದ್ ಬೇಡ ಎಂದು ಸಿಎಂ ರೈತ ಬಾಂಧವರಲ್ಲಿ ಮನವಿ ಮಾಡಿದ್ದರು. ಆದರೂ ರೈತರು ಬಂದ್ ಮಾಡುತ್ತಿದ್ದಾರೆ. ಇದು ಒಳ್ಳೆಯದಲ್ಲ ಎಂದರು.