Tag: Agriculture Officer

  • ಬೀದರ್‌ನಲ್ಲಿ ಏಕಕಾಲಕ್ಕೆ 4 ಕಡೆ ಲೋಕಾಯುಕ್ತ ದಾಳಿ – ಭ್ರಷ್ಟ ಅಧಿಕಾರಿಗೆ ಶಾಕ್ ಶಾಕ್‌

    ಬೀದರ್‌ನಲ್ಲಿ ಏಕಕಾಲಕ್ಕೆ 4 ಕಡೆ ಲೋಕಾಯುಕ್ತ ದಾಳಿ – ಭ್ರಷ್ಟ ಅಧಿಕಾರಿಗೆ ಶಾಕ್ ಶಾಕ್‌

    ಬೀದರ್: ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ಬೀದರ್‌ನಲ್ಲಿ‌ (Bidar) ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಎಂಬ ಅಧಿಕಾರಿಯ ನಿವಾಸ ಸೇರಿದಂತೆ ಏಕಕಾಲಕ್ಕೆ ಜಿಲ್ಲೆಯಾದ್ಯಂತ ಒಟ್ಟು 4 ಕಡೆ ದಾಳಿ ಮಾಡಲಾಗಿದೆ.

    ಬೀದರ್ ನಗರದ ಗುರುನಾನಕ್ ಕಾಲೋನಿಯ ನಿವಾಸ, ಭಾಲ್ಕಿಯ ಕಡ್ಯಾಳ ಗ್ರಾಮದ ನಿವಾಸ, ಔರಾದ್‌ನ ಎಡಿ ಆಫೀಸ್ ಮತ್ತು ಔರಾದ್‌ನ ಮುದೋಳ ಕಚೇರಿ ಮೇಲೆ ದಾಳಿ‌‌ (Lokayukta Raid) ಮಾಡಲಾಗಿದೆ‌. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಶಾಕ್; ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ

    ಅಕ್ರಮ ಆಸ್ತಿಗಳಿಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಿ ಲೋಕಾಯುಕ್ತ ಅಧಿಕಾರಿಗಳು ನಿವಾಸದಲ್ಲಿ ದಾಖಲೆಗಳನ್ನ ತೀವ್ರ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದಲ್ಲಿ 4 ಕಡೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಇದನ್ನೂ ಓದಿ: ಹಬ್ಬಕ್ಕೆ ಸಾಲು ಸಾಲು ರಜೆ – ಖಾಸಗಿ ಬಸ್ ಪ್ರಯಾಣ ದರ ಏರಿಕೆ, ನಿಮ್ಮೂರಿಗೆ ಎಷ್ಟು ನೋಡಿ!

  • ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ದಾಳಿ – ಕೃಷಿ ಅಧಿಕಾರಿ ಬ್ಯಾಗಲ್ಲಿ ಸಿಕ್ತು ಕಂತೆ ಕಂತೆ ಹಣ!

    ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ದಾಳಿ – ಕೃಷಿ ಅಧಿಕಾರಿ ಬ್ಯಾಗಲ್ಲಿ ಸಿಕ್ತು ಕಂತೆ ಕಂತೆ ಹಣ!

    ಚಿಕ್ಕಬಳ್ಳಾಪುರ: ಲಂಚ ಸ್ವೀಕರಿಸುತ್ತಿದ್ದ ಬಾಗೇಪಲ್ಲಿ ತಾಲೂಕು ಕೃಷಿ ಅಧಿಕಾರಿಯನ್ನು (Agriculture Officer) ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡಾಗಿ (Lokayukta Raids) ಹಿಡಿದು ಹಾಕಿದ್ದಾರೆ. ಈ ವೇಳೆ ಅಧಿಕಾರಿಯ ಬ್ಯಾಗ್‌ನಲ್ಲಿ ಲಂಚ ಪಡೆಯುತ್ತಿದ್ದ ಹಣ ಸೇರಿ 13 ಲಕ್ಷ ರೂ. ಹಣ ಪತ್ತೆಯಾಗಿದೆ.

    ಗುತ್ತಿಗೆದಾರ ಮಂಜುನಾಥ್ ಎಂಬವರ ಬಳಿ 3 ಲಕ್ಷ ರೂ. ಲಂಚಕ್ಕೆ ಕೃಷಿ ಅಧಿಕಾರಿ ಶಂಕರಯ್ಯ ಬೇಡಿಕೆ ಇಟ್ಟಿದ್ದರು. ಅದರಂತೆ 1 ಲಕ್ಷ ಮುಂಗಡ ಹಣ ಪಡೆದಿದ್ದರು. ಚಿಕ್ಕಬಳ್ಳಾಪುರದ (Chikkaballapura ) ಕೃಷಿ ಜಂಟಿ‌ ನಿರ್ದೇಶಕರ ಕಚೇರಿಯಲ್ಲಿ ಮತ್ತೆ 2 ಲಕ್ಷ ರೂ. ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಶಂಕರಯ್ಯ ಬ್ಯಾಗ್‌ನಲ್ಲಿ 13 ಲಕ್ಷದ 3003 ರೂ. ಹಣ ಪತ್ತೆಯಾಗಿದೆ. ಇದನ್ನೂ ಓದಿ: ಬಿಜೆಪಿ ಸರ್ಕಾರದ ಕೋವಿಡ್ ಹಗರಣ ಆರೋಪ – ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ

    ಈ ಹಣ ಯಾವುದು ಎಂದು ಲೋಕಾಯುಕ್ತ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಅಧಿಕಾರಿ ಉತ್ತರಿಸಿಲ್ಲ. ಇನ್ನೂ ಇಷ್ಟೊಂದು ಹಣ ಜಂಟಿ ನಿರ್ದೇಶಕರಾದ ಜಾವೀದಾ ಖಾನಂ ಕಚೇರಿಗೆ ತಂದಿದ್ದಾದರೂ ಯಾಕೆ ಎಂಬುದರ ಬಗ್ಗೆ ಮಾಹಿತಿ ಸಹ ಕೊಡುತ್ತಿಲ್ಲ. ಹೀಗಾಗಿ ಲಂಚ ಪಡೆದ 2 ಲಕ್ಷ ಹಾಗೂ ಬ್ಯಾಗ್‌ನಲ್ಲಿ ಸಿಕ್ಕ 13 ಲಕ್ಷದ 3003 ರೂ. ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

    ಪ್ರಕರಣದಲ್ಲಿ ಬಾಗೇಪಲ್ಲಿ ಸಹಾಯಕ ಕೃಷಿ ಅಧಿಕಾರಿ ಲಕ್ಷ್ಮೀ ಹಾಗೂ ಚಿಕ್ಕಬಳ್ಳಾಪುರ ಜಂಟಿ ಕೃಷಿ‌ನಿರ್ದೇಶಕ ಜಾವೀದಾ ಖಾನಂ ಪಾತ್ರ ಇದೆಯೇ ಎಂಬ ಬಗ್ಗೆಯೂ ಲೋಕಾಯುಕ್ತ ಪೊಲೀಸರು ವಿಚಾರಣೆ‌ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹೆಡ್ ಕಾನ್‍ಸ್ಟೇಬಲ್ ಮನೆಗೆ ಕನ್ನ – 5 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

  • ಸೇತುವೆ ಮೇಲೆ ಕಾರು ಪಾರ್ಕ್ ಮಾಡಿ ನದಿಗೆ ಜಿಗಿದ ಕೃಷಿ ಅಧಿಕಾರಿ

    ಸೇತುವೆ ಮೇಲೆ ಕಾರು ಪಾರ್ಕ್ ಮಾಡಿ ನದಿಗೆ ಜಿಗಿದ ಕೃಷಿ ಅಧಿಕಾರಿ

    – ಅರುಣಾ ಆತ್ಮಹತ್ಯೆಗೆ ಕಾರಣವೇನು..?

    ಹೈದರಾಬಾದ್: ಮಹಿಳಾ ಕೃಷಿ ಅಧಿಕಾರಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಧ್ರಪ್ರದೇಶದ ಸಂಗರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿಯನ್ನು ಅರುಣಾ(23) ಎಂದು ಗುರುತಿಸಲಾಗಿದೆ. ಅರುಣಾ ಮನೋರ್ ಮಂಡಲದಲ್ಲಿರುವ ಮಂಜೀರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಕೆ ಸಂಗರೆಡ್ಡಿಯಲ್ಲಿರುವ ರೈತ ತರಬೇತಿ ಕೇಂದ್ರದಲ್ಲಿ ಕೃಷಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

    ಈ ಘಟನೆ ಕಳೆದ ಶನಿವಾರವೇ ನಡೆದಿದೆ ಎನ್ನಲಾಗಿದ್ದು, ಸೇತುವೆಯ ಮೇಲೆ ಬಹಳ ದಿನಗಳಿಂದ ಕಾರು ನಿಂತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಕಾರನ್ನು ತಪಾಸಣೆ ಮಾಡಿದಾಗ ಅದರಲ್ಲಿ ಅರುಣಾ ಅವರ ಫೋನ್ ಮತ್ತು ಅವರು ವಾಲೆಟ್ ಸಿಕ್ಕಿದೆ. ನಂತರ ಅರುಣಾ ಮನೆಯವರನ್ನು ಸಂಪರ್ಕ ಮಾಡಿದ್ದು, ಅವರು ಕೂಡ ಅರುಣಾ ಅವರು ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದಾರೆ. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

    ಈ ವಿಷಯ ತಿಳಿದ ಪೊಲೀಸರು ಅಗ್ನಿಶಾಮಕ ದಳವರ ಜೊತೆ ಬಂದು ಅರುಣಾ ಅವರ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಅರುಣಾ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂದು ತಿಳಿದು ಬಾರದ ಕಾರಣ ಪೊಲೀಸರು ತನಿಖೆಯನ್ನು ಆರಂಭ ಮಾಡಿದ್ದಾರೆ. ಈ ಸಂಬಂಧ ಸಂಗರೆಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.