Tag: agriculture university

  • ಧಾರವಾಡ ಕೃಷಿ ಮೇಳಕ್ಕೆ ತೆರೆ – ನಾಲ್ಕೇ ದಿನದಲ್ಲಿ 23.7 ಲಕ್ಷ ಜನರ ಭೇಟಿ

    ಧಾರವಾಡ ಕೃಷಿ ಮೇಳಕ್ಕೆ ತೆರೆ – ನಾಲ್ಕೇ ದಿನದಲ್ಲಿ 23.7 ಲಕ್ಷ ಜನರ ಭೇಟಿ

    ಧಾರವಾಡ: ಜಿಲ್ಲೆಯಲ್ಲಿರುವ ಕೃಷಿ ವಿಶ್ವವಿದ್ಯಾಲಯದ (Agriculture University) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೃಷಿ ಮೇಳಕ್ಕೆ ಮಂಗಳವಾರ (ಸೆ.16) ತೆರೆಬಿದ್ದಿದ್ದು, ನಾಲ್ಕೇ ದಿನದಲ್ಲಿ 23.7 ಲಕ್ಷ ಜನರು ಭೇಟಿ ನೀಡಿದ್ದಾರೆ.

    ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಪ್ರತಿವರ್ಷ ನಡೆಯುವ ಕೃಷಿ ಮೇಳ ಇಡೀ ರಾಜ್ಯದಲ್ಲೇ ಹೆಸರುವಾಸಿ. ಇದನ್ನು ರೈತರ ಜಾತ್ರೆ ಎಂದೇ ಕರೆಯುತ್ತಾರೆ. ಈ ವರ್ಷ ಸೆ.13ರಿಂದ ಸೆ.16ರವರೆಗೆ ಕೃಷಿ ಮೇಳ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದಾಖಲೆಯ ಜನರು ಭೇಟಿ ನೀಡಿದ್ದಾರೆ.ಇದನ್ನೂ ಓದಿ: ದುಂಬಿ ಕೀಟಕ್ಕೆ ಚಿಪ್‌ ಅಳವಡಿಸಿ ಬೇಹುಗಾರಿಕೆ – ರಕ್ಷಣಾ ವ್ಯವಸ್ಥೆ, ಸೇನೆಗೆ ಸಹಕಾರಿ

    ನಾಲ್ಕು ದಿನಗಳ ಕಾಲ ನಡೆದ ಈ ಕೃಷಿ ಮೇಳಕ್ಕೆ ಬರೋಬ್ಬರಿ 23.74 ಲಕ್ಷ ಜನ ಭೇಟಿ ನೀಡಿದ್ದರು. ಮೊದಲ ದಿನ ಶನಿವಾರ (ಸೆ.13) 3.65 ಲಕ್ಷ ಜನ, ಎರಡನೇ ದಿನ ಭಾನುವಾರ (ಸೆ.14) 7.74 ಲಕ್ಷ, ಮೂರನೇ ದಿನ ಸೋಮವಾರ (ಸೆ.15) 8.6 ಲಕ್ಷ ಹಾಗೂ ಕೊನೆಯ ದಿನ ಮಂಗಳವಾರ (ಸೆ.16) 3.75 ಲಕ್ಷ ಜನ ಸೇರಿ ಒಟ್ಟು 23.74 ಲಕ್ಷ ಜನ ಕೃಷಿ ಮೇಳಕ್ಕೆ ಭೇಟಿ ನೀಡಿದ್ದಾರೆ.

  • ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಸಂಪುಟ ಅನಮೋದನೆ -ಸಾಕಾರಗೊಂಡ ದಶಕಗಳ ಕನಸು

    ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಸಂಪುಟ ಅನಮೋದನೆ -ಸಾಕಾರಗೊಂಡ ದಶಕಗಳ ಕನಸು

    ಮಂಡ್ಯ: ಜಿಲ್ಲೆಯ ನೂತನ ಸಮಗ್ರ ಕೃಷಿ ವಿಶ್ವವಿದ್ಯಾಲಯ (Agriculture University) ಸ್ಥಾಪಿಸಬೇಕೆನ್ನುವ ಬಹುದಿನದ ಕನಸು ನನಸಾಗುವ ಹಂತ ತಲುಪಿದೆ.

    ಸಮಗ್ರ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿವಿ ಸ್ಥಾಪನೆಯಿಂದ ರೈತರ ಅನೇಕ ಸಮಸ್ಯೆಗಳಿಗೆ ವಿಶೇಷವಾಗಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಒಂದೇ ಮೂಲದಿಂದ ಪರಿಹಾರ ದೊರಕಿಸಬೇಕೆಂಬ ಮಹತ್ವಕಾಂಕ್ಷಿ ಕನಸನ್ನ ನನಸಾಗಿಸುವ ಉದ್ದೇಶವನ್ನು ಕೃಷಿ ಸಚಿವರು ಚಲುವರಾಯಸ್ವಾಮಿ (Chaluvarajaswamy) ಹೊಂದಿದ್ದರು.

    ಈಗಾಗಲೇ ರಾಜ್ಯದ ಶಿವಮೊಗ್ಗದಲ್ಲಿ (Shivamogga) ಸಸ್ಯಾಧಾರಿತ ಕೃಷಿ ವಿಜ್ಞಾನಗಳ ಸಮಗ್ರ ಕೃಷಿ ಹಾಗೂ ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯವು 2013 ರಿಂದ ರೈತರ ಆಶೋತ್ತರಗಳಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ. ಇದೇ ಮಾದರಿಯಲ್ಲೇ ಮಂಡ್ಯದಲ್ಲೂ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ದೊರೆತಿದೆ. ಇದನ್ನೂ ಓದಿ: ಕುಂಭಮೇಳದಲ್ಲಿ 7 ಅಡಿ ಎತ್ತರದ ರಷ್ಯಾದ ಬಾಬಾ – ‘ಪರಶುರಾಮನ ಅವತಾರ’ ಎಂದ ಭಕ್ತರು

    ನೂತನವಾಗಿ ಪ್ರಾರಂಭಿಸುವ ವಿಶ್ವವಿದ್ಯಾಲಯಕ್ಕೆ ಬೆಂಗಳೂರು ಕೃಷಿ ವಿವಿಯಿಂದ ಮಂಡ್ಯ ಕೃಷಿ ಕಾಲೇಜು (ವಿ.ಸಿ ಫಾರಂ), ಹಾಸನ ಕೃಷಿ ಕಾಲೇಜು ಹಾಗೂ ಚಾಮರಾಜನಗರ ಕೃಷಿ ಕಾಲೇಜುಗಳು ಹಾಗೂ ಶಿವಮೊಗ್ಗ ವಿಶ್ವವಿದ್ಯಾಲಯದಿಂದ ಪೊನ್ನಂಪೇಟೆ ಅರಣ್ಯ ಕಾಲೇಜು ಹಾಗೂ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಮೈಸೂರು ತೋಟಗಾರಿಕೆ ಕಾಲೇಜು ಮಂಡ್ಯ ವಿಶ್ವವಿದ್ಯಾಲಯಕ್ಕೆ ಸೇರ್ಪಡೆಗೊಳ್ಳುತ್ತಿವೆ.

    ನೂತನವಾಗಿ ಪ್ರಾರಂಭಗೊಳ್ಳುವ ಮಂಡ್ಯ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳು ಸೇರ್ಪಡೆಗೊಳ್ಳುತ್ತವೆ. ಕಾರಣ ಈ ಜಿಲ್ಲೆಗಳಲ್ಲಿರುವ ಯಾವುದೇ ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳ ಶಿಕ್ಷಣ, ಸಂಶೋಧನೆ ಹಾಗೂ ವಿಸ್ತರಣಾ ಘಟಕಗಳು ಯಥಾವತ್ತಾಗಿ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಸೇರ್ಪಡೆಗೊಳ್ಳುತ್ತವೆ.

    ಶಿವಮೊಗ್ಗ ತೋಟಗಾರಿಕೆ ಮತ್ತು ಕೃಷಿ ವಿಶ್ವವಿದ್ಯಾಲಯದ ಮಾದರಿಯಲ್ಲಿ ಮಂಡ್ಯದಲ್ಲಿ ಪ್ರಾರಂಭಿಸುವ ನೂತನ ಕೃಷಿ ವಿಶ್ವವಿದ್ಯಾಲಯವನ್ನು ಕೂಡಾ ಎಲ್ಲಾ ಸಸ್ಯ ಶಾಸ್ತ್ರಗಳ ಸಮನ್ವಯತೆಯನ್ನು ಸಾಧಿಸಿ ಮಂಡ್ಯ ಸಮಗ್ರ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: Aeroindia 2025| ಯಲಹಂಕ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಎತ್ತರ ಇಳಿಸಿ: ಬಿಬಿಎಂಪಿ

  • ರೈತರಿಗೆ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ನೀಡಲು ಆದ್ಯತೆ ಕೊಡಿ: ಗೆಹ್ಲೋಟ್‌

    ರೈತರಿಗೆ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ನೀಡಲು ಆದ್ಯತೆ ಕೊಡಿ: ಗೆಹ್ಲೋಟ್‌

    ಬೆಂಗಳೂರು: ರೈತರು ಸಾಂಪ್ರದಾಯಿಕ ಬೆಳೆಗಳೊಂದಿಗೆ ಔಷಧೀಯ ಮತ್ತು ಗಿಡಮೂಲಿಕೆಗಳ ಬೆಳೆಗಳ ಮುಂದುವರಿದ ಕೃಷಿ ಮಾಡುವ ಮೂಲಕ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಬಹುದು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಹೇಳಿದರು.

    ನಗರದ ಜಿಕೆವಿಕೆ ಸಭಾಂಗಣದಲ್ಲಿ ನಡೆದ ಕೃಷಿ ವಿಶ್ವವಿದ್ಯಾಲಯದ (Agriculture University) 57ನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೃಷಿ ಕ್ಷೇತ್ರವು ಭಾರತೀಯ ಆರ್ಥಿಕತೆಯ ಮೂಲ ಸ್ತಂಭವಾಗಿದೆ. ಈ ವಲಯವು ದೇಶದ ಜಿಡಿಪಿಗೆ ಗಣನೀಯ ಕೊಡುಗೆ ನೀಡುತ್ತದೆ. ಇಂದು ಪ್ರಪಂಚದಾದ್ಯಂತ ಔಷಧೀಯ ಮತ್ತು ಸುಗಂಧ ಸಸ್ಯಗಳ ಆಧಾರದ ಮೇಲೆ ವ್ಯಾಪಾರ ಹೆಚ್ಚುತ್ತಿದೆ. ಈಗ ನಮ್ಮ ರೈತರು ಲಭ್ಯವಿರುವ ಸಂಪನ್ಮೂಲಗಳನ್ನು ಸರಿಯಾಗಿ ಬಳಸಿಕೊಳ್ಳುವುದು ಮಾತ್ರವಲ್ಲದೆ ತಮ್ಮ ಸಾಂಪ್ರದಾಯಿಕ ಬೆಳೆಗಳೊಂದಿಗೆ ಔಷಧೀಯ ಮತ್ತು ಗಿಡಮೂಲಿಕೆಗಳ ಬೆಳೆಗಳ ಮುಂದುವರಿದ ಕೃಷಿಯನ್ನು ಮಾಡುವ ಮೂಲಕ ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳುವ ಸಮಯ ಬಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು – ಪ್ರಿಯಾಂಕ್‌ ಖರ್ಗೆ ತಿರುಗೇಟು

    ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತು ಕೃಷಿಯನ್ನು ಹೆಚ್ಚು ಲಾಭದಾಯಕವಾಗಿಸಲು, ಈ ವಿಶ್ವವಿದ್ಯಾಲಯವು ಹೊಸ ತಂತ್ರಜ್ಞಾನಗಳು ಮತ್ತು ತಂತ್ರಗಳ ಸಂಶೋಧನೆ ಹಾಗೂ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿದೆ. ಈ ವಿಶ್ವವಿದ್ಯಾನಿಲಯವು ಕರ್ನಾಟಕ ಮತ್ತು ದೇಶದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವುದು ಸಂತಸ ತಂದಿದೆ. ಈ ವಿಶ್ವವಿದ್ಯಾಲಯದಿಂದ ಪಡೆದ ಜ್ಞಾನವನ್ನು ದೇಶ ಮತ್ತು ಸಮಾಜದ ಹಿತದೃಷ್ಟಿಯಿಂದ ಸಮರ್ಪಿಸಿ ಸ್ವಾವಲಂಬಿ ಭಾರತ ನಿರ್ಮಾಣದಲ್ಲಿ ಪಾಲ್ಗೊಳ್ಳಿರಿ. ಇಂದು ದೇಶದಲ್ಲಿ ಕೃಷಿ ಶಿಕ್ಷಣದ ಅವಶ್ಯಕತೆ ಹೆಚ್ಚಾಗಿದೆ. ಈ ಶಿಕ್ಷಣ ವ್ಯಕ್ತಿಯ ಏಳಿಗೆಗೆ ಸಹಕಾರಿಯಾಗುವುದರ ಜೊತೆಗೆ ಸ್ವಯಂ ಉದ್ಯೋಗ ಹಾಗೂ ಉದ್ಯೋಗ ಸೃಷ್ಟಿ ಮಾಡಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

    ಕೃಷಿ ಅಭಿವೃದ್ಧಿಯಲ್ಲಿ ತೋಟಗಾರಿಕೆ ಕ್ಷೇತ್ರಕ್ಕೆ ವಿಶೇಷ ಸ್ಥಾನವಿದೆ. ತೋಟಗಾರಿಕೆ ಬೆಳೆಗಳ ಪ್ರತಿ ಯೂನಿಟ್ ಪ್ರದೇಶಕ್ಕೆ ಹೆಚ್ಚಿನ ಆದಾಯ, ಉದ್ಯೋಗ ಮತ್ತು ಪೋಷಣೆಯನ್ನು ಒದಗಿಸುವುದರಿಂದ ಈ ಬೆಳೆಗಳು ವಾಣಿಜ್ಯ ರೂಪವನ್ನು ಪಡೆಯುತ್ತಿವೆ. ಇದರಿಂದಾಗಿ ಈ ಬೆಳೆಗಳ ಉತ್ಪಾದನೆಯತ್ತ ರೈತರ ಒಲವು ಹೆಚ್ಚುತ್ತಿದೆ. ಕೃಷಿ ಕ್ಷೇತ್ರದಲ್ಲಿ ಮಹಿಳೆಯರ ಕೊಡುಗೆ ಮತ್ತು ಭಾಗವಹಿಸುವಿಕೆಯಿಂದಾಗಿ, ನಮ್ಮ ದೇಶವು ವಿವಿಧ ರೀತಿಯ ಹಣ್ಣುಗಳು, ತರಕಾರಿಗಳು, ಧಾನ್ಯಗಳು ಇತ್ಯಾದಿಗಳ ಪ್ರಮುಖ ಉತ್ಪಾದಕರಾಗಿ ತನ್ನ ಗುರುತನ್ನು ಸ್ಥಾಪಿಸಿದೆ. ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ಅಭಿವೃದ್ಧಿಗಾಗಿ ಕೃಷಿಯನ್ನು ಲಾಭದಾಯಕ ವ್ಯವಹಾರವನ್ನಾಗಿ ಮಾಡಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ಭಾರತ ಸರ್ಕಾರ, ಕರ್ನಾಟಕ ಸರ್ಕಾರವು ಹಲವಾರು ಯೋಜನೆಗಳನ್ನು ರೂಪಿಸಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಶುಕ್ರವಾರದಿಂದ ಲಾಲ್‍ಬಾಗ್‍ನಲ್ಲಿ ಫ್ಲವರ್ ಶೋ ಆರಂಭ

    ತಳಮಟ್ಟದಲ್ಲಿ ರೈತರೊಂದಿಗೆ ಸಂಪರ್ಕವನ್ನು ಸ್ಥಾಪಿಸಬೇಕು. ರೈತರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು ಮತ್ತು ತಂತ್ರಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರಲ್ಲದೇ, ಸ್ವಾತಂತ್ರ್ಯದ 75 ವರ್ಷಗಳಲ್ಲಿ ದೇಶವು ಎಲ್ಲಾ ಕ್ಷೇತ್ರಗಳಲ್ಲಿ ಅಭೂತಪೂರ್ವ ಪ್ರಗತಿಯನ್ನು ಸಾಧಿಸಿದೆ ಮತ್ತು ದೇಶದ ಆರ್ಥಿಕತೆಯು ಅತ್ಯಂತ ಬಲಿಷ್ಠವಾಗಿದೆ. ಇಂದು ನಮ್ಮ ಆರ್ಥಿಕತೆಯು ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಮುಂಬರುವ ವರ್ಷಗಳಲ್ಲಿ ಜಗತ್ತಿನ 3ನೇ ಅತಿ ದೊಡ್ಡ ಆರ್ಥಿಕತೆಯಾಗುವಲ್ಲಿ ನಮ್ಮೆಲ್ಲರ ಪಾತ್ರ ಬಹಳ ಮುಖ್ಯ. ಮುಂದಿನ 25 ವರ್ಷಗಳ ಅಮೃತ ಕಾಲವು ನಮ್ಮ ದೇಶವನ್ನು ವಿಶ್ವದ ಅತ್ಯುತ್ತಮ ದೇಶಗಳ ವರ್ಗಕ್ಕೆ ತರುವ ಕರ್ತವ್ಯದ ಅವಧಿಯಾಗಿದೆ. ಈ ಕರ್ತವ್ಯದ ಅವಧಿಯನ್ನು ಅವಕಾಶವನ್ನಾಗಿ ಪರಿವರ್ತಿಸುವಲ್ಲಿ ನಾವು ಪಾಲುದಾರರಾಗಬೇಕು ಎಂದು ಕರೆ ನೀಡಿದರು. ಕೃಷಿ ಸಚಿವ ಚೆಲುವರಾಯಸ್ವಾಮಿ, ಕುಲಪತಿ ಡಾ. ಎಸ್. ವಿ. ಸುರೇಶ ಸೇರಿದಂತೆ ಮುಂತಾದ ಗಣ್ಯರು ಹಾಜರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • `ಪವಿತ್ರ’ಪ್ರೇಮ ವಿಫಲ – ಯುವಕ ಕೈಕೊಟ್ಟನೆಂದು ಕಾಲೇಜಿನಲ್ಲೇ ವಿದ್ಯಾರ್ಥಿನಿ ನೇಣಿಗೆ ಶರಣು

    `ಪವಿತ್ರ’ಪ್ರೇಮ ವಿಫಲ – ಯುವಕ ಕೈಕೊಟ್ಟನೆಂದು ಕಾಲೇಜಿನಲ್ಲೇ ವಿದ್ಯಾರ್ಥಿನಿ ನೇಣಿಗೆ ಶರಣು

    ಚಿಕ್ಕಬಳ್ಳಾಪುರ: ಕೃಷಿ ಮಹಾವಿದ್ಯಾಲಯದ ವಸತಿ ನಿಲಯದ ಕೊಠಡಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರುಬೂರ ಗ್ರಾಮದ ಕೃಷಿ ಮಹಾವಿದ್ಯಾಲಯದಲ್ಲಿ ನಡೆದಿದೆ.

    ಚಿಕ್ಕಬಳ್ಳಾಪುರ ತಾಲೂಕಿನ ಬನ್ನಿಕುಪ್ಪೆ ಗ್ರಾಮದ ಪವಿತ್ರಾ(21) ತಡರಾತ್ರಿ 11.30 ಗಂಟೆಗೆ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಂತಿಮ ವರ್ಷದಲ್ಲಿ ಬಿಎಸ್‌ಸಿ ಕೃಷಿ ವ್ಯಾಸಂಗ ಮಾಡ್ತಿದ್ದ ಪವಿತ್ರಾ ಕಾಲೇಜಿನ ವಸತಿನಿಲಯದಲ್ಲೇ ನೇಣು ಬಿಗಿದುಕೊಂಡಿದ್ದು, ಸಾವಿಗೂ ಮುನ್ನ ಡೆತ್‌ನೋಟ್ ಬರೆದಿಟ್ಟು ಮೊಬೈಲ್‌ನಲ್ಲಿ ವೀಡಿಯೋ ಸಹ ಮಾಡಿದ್ದಾಳೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಫಸ್ಟ್ ನೈಟ್ ಅನ್ನೋದೇ ಇಲ್ಲ ಎಂದು ಹೇಳಿ ಪತಿಯನ್ನೇ ಬೆಚ್ಚಿ ಬೀಳಿಸಿದ ನಟಿ ಆಲಿಯಾ ಭಟ್

    CRIME

    ಡೆತ್ ನೋಟ್ ನಲ್ಲಿ ಏನಿತ್ತು?
    ಈಚೆಗಷ್ಟೇ ನನಗೆ ಅಪರಿಚಿತ ಯುವಕನ ಮೊಬೈಲ್ ನಂಬರ್ ಸಿಕ್ಕಿ ಆತನೊಂದಿಗೆ ಪರಿಚಯವಾಗಿ ಪ್ರೇಮವಾಗಿತ್ತು. ಆತ ಒಳ್ಳೆಯವನೆಂದು ಭಾವಿಸಿದ್ದೆ, ಆದ್ರೆ ಅವನು ಒಳ್ಳೆಯವನಲ್ಲ ಪರಿಚಯವಾದ ಕೆಲವೇ ದಿನಗಳಲ್ಲಿ ರೂಂ ಗೆ ಕರೆದಿದ್ದ. ನಂತರ ನಾನು ಆತನೊಂದಿಗೆ ಮಾತನಾಡುವುದನ್ನೇ ಬಿಟ್ಟಿದ್ದೆ. ಅದರೂ ಅವನು ಮತ್ತೆ ಮತ್ತೆ ಫೋನ್‌ಕಾಲ್, ಮೆಸೇಜ್ ಮಾಡುತ್ತಿದ್ದ. ಮತ್ತೆ ಪ್ರೇಮ ಶುರುವಾಗಿ ಆತನೇ ಪ್ರಪಂಚ ಎಂಬಂತಾಗಿತ್ತು. ಈ ವಿಚಾರ ಯುವಕನ ಮನೆಯಲ್ಲಿ ಗೊತ್ತಾಗಿ ಅವನ ಅಕ್ಕ ನನಗೆ ಕರೆ ಮಾಡಿ, ಬೈದಿದ್ದರು. ಇದರಿಂದ ನಾವಿಬ್ಬರೂ ಬೇರೆಯಾಗೋಣ ಅಂತಾನೂ ತೀರ್ಮಾನ ಮಾಡಿದ್ದೀವಿ..’ ಎಂದು ಯುವತಿ ಬರೆದಿದ್ದಾಳೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ಬರೆದಿಲ್ಲ.

    ಪ್ರಕರಣ ದಾಖಲಿಸಿಕೊಂಡಿರುವ ಚಿಂತಾಮಣಿ ಗ್ರಾಮಾಂತರ ಪೊಲೀಸರು ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಕಾಳಿ ಕೈಗೆ ಸಿಗರೇಟು : ಮಾಳವಿಕಾ ಅವಿನಾಶ್ ಛೀಮಾರಿ, ನಟ ಕಿಶೋರ್ ವಿಭಿನ್ನ ಪ್ರತಿಕ್ರಿಯೆ

    ಇನ್ನೂ ಆತ್ಮಹತ್ಯೆ ಮಾಡಿಕೊಂಡ ಅದೇ ದಿನ ತಡರಾತ್ರಿ ಯುವಕ ಪವಿತ್ರಾಗೆ ಕರೆ ಮಾಡಿ ಮಾತನಾಡಿದ್ದಾನೆ. ಈ ವೇಳೆ ಇಬ್ಬರ ನಡುವೆ ಜಗಳ ನಡೆದಿರುವ ಶಂಕೆ ವ್ಯಕ್ತವಾಗಿದೆ. ಇದಾದ ಕೆಲವೇ ಹೊತ್ತಿನಲ್ಲಿ ಯುವಕ ಪವಿತ್ರಾಳ ಸ್ನೇಹಿತೆಗೆ ಕರೆ ಮಾಡಿ `ಪವಿತ್ರಾ ಆತ್ಮಹತ್ಯೆ ಮಾಡಿಕೊಳ್ತಿದ್ದಾಳೆ ಬೇಗ ಹೋಗಿ ನೋಡಿ ಫೋನ್ ತೆಗೀರಿ’ ಅಂತ ಸಂದೇಶ ಕಳಿಸಿರುವುದು ತನಿಖೆ ವೇಳೆ ಗೊತ್ತಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಾಯಚೂರು ಕೃಷಿ ವಿವಿಗೆ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಪಿಎಚ್‍ಡಿ ಪಡೆದ ಮಾಜಿ ಕುಲಪತಿ ಪುತ್ರ

    ರಾಯಚೂರು ಕೃಷಿ ವಿವಿಗೆ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಪಿಎಚ್‍ಡಿ ಪಡೆದ ಮಾಜಿ ಕುಲಪತಿ ಪುತ್ರ

    ರಾಯಚೂರು: ರಾಯಚೂರು ಕೃಷಿ ವಿಶ್ವವಿದ್ಯಾಲಯ ಇತ್ತೀಚೆಗೆ ತನ್ನ ಸಾಧನೆಗಳಿಗಿಂತ ಎಡವಟ್ಟುಗಳಿಂದಲೇ ಸುದ್ದಿಯಾಗುತ್ತಿದೆ. ಕೃಷಿ ವಿಶ್ವವಿದ್ಯಾಲಯ ಆವರಣವನ್ನು ಮದುವೆ ಸಮಾರಂಭಗಳಿಗೆ ಬಾಡಿಗೆ ಕೊಟ್ಟು ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾದ ಬೆನ್ನಲ್ಲೇ ಮತ್ತೊಂದು ಆರೋಪವನ್ನು ಎದುರಿಸುತ್ತಿದೆ.

    ವಿಶ್ವವಿದ್ಯಾಲಯ ಮಾಜಿ ಕುಲಪತಿ ಬಿ.ವಿ.ಪಾಟೀಲ್ ಅವರ ಪುತ್ರ ವಿನಯ್ ಪಾಟೀಲ್ ನಕಲಿ ಪ್ರಮಾಣ ಪತ್ರಗಳನ್ನು ಸಲ್ಲಿಸಿ ಕೃಷಿ ಪದವಿ ಹಾಗೂ ಪಿಎಚ್‍ಡಿ ಪಡೆದಿದ್ದಾರೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಈ ಹಿಂದೆ ವಿಶ್ವವಿದ್ಯಾಲಯ ವಿಚಾರಣಾ ಸಮಿತಿ ಹೋರಾಟಗಾರರ ಆರೋಪವನ್ನು ಎತ್ತಿ ಹಿಡಿದಿತ್ತು. ಅಲ್ಲದೆ ಪ್ರಕರಣ ಹೈಕೋರ್ಟ್ ನಲ್ಲಿದೆ. ಹೀಗಿದ್ದರೂ ವಿನಯ್ ಪಾಟೀಲ್ ಅವರಿಗೆ ಪಿಎಚ್‍ಡಿ ಪ್ರಮಾಣ ಪತ್ರ ನೀಡಲಾಗಿದೆ ಅಂತ ಸ್ಥಳೀಯ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಜಕೀಯ ಪ್ರಭಾವ ಹಾಗೂ ಕೃಷಿ ವಿಶ್ವವಿದ್ಯಾಲಯ ಅಧಿಕಾರಿಗಳ ಲಾಬಿಯಿಂದ ಅನರ್ಹರಿಗೂ ಪಿಎಚ್‍ಡಿ ಸಿಗುತ್ತಿದೆ. ಇದಕ್ಕೆ ಕಡಿವಾಣ ಬೀಳಬೇಕು ಅಂತ ಹೋರಾಟಗಾರರು ಆಗ್ರಹಿಸಿದ್ದಾರೆ. ಇದನ್ನು ಓದಿ: ರಾಜಕಾರಣಿಗಳ ಮಕ್ಕಳ ಮದ್ವೆಗೆ ವೇದಿಕೆಯಾಗ್ತಿದೆ ಕೃಷಿ ವಿವಿ- ಸಾರ್ವಜನಿಕರು ಆಕ್ರೋಶ

    ಮಾಜಿ ಕುಲಪತಿ ಬಿ.ವಿ.ಪಾಟೀಲ್ ಅವರ ಪುತ್ರ ವಿನಯ್ ಪಾಟೀಲ್, ವಿವಿ ಆವರಣದಲ್ಲಿ ಇಸ್ಪೀಟ್ ಆಡಿದ್ದಾರೆ. ಮದ್ಯ ಸೇವನೆ ಸೇರಿದಂತೆ ಹಲವು ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ಈ ಸಂಬಂಧ ಅನೇಕ ಬಾರಿ ನಾವು ದೂರು ನೀಡಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಇಷ್ಟು ಆರೋಪಗಳನ್ನು ಎದುರಿಸುತ್ತಿರುವ ವಿನಯ್ ಪಾಟೀಲ್‍ಗೆ ಗೋಲ್ಡ್ ಮೆಡಲ್ ಹಾಗೂ ಉದ್ಯೋಗ ನೀಡಲಾಗಿದೆ ಎಂದು ಹೋರಾಟಗಾರ ರವಿಕುಮಾರ್ ಆರೋಪಿಸಿದ್ದಾರೆ.

    ವಿನಯ್ ಪಾಟೀಲ್ ಹಗರಣಕ್ಕೆ ಹಾಗೂ ನಕಲಿ ಪ್ರಮಾಣ ಪತ್ರಗಳಿಗೆ ಸಂಬಂಧಿಸಿದಂತೆ ಅನೇಕ ದಾಖಲೆಗಳನ್ನು ಸರ್ಕಾರಕ್ಕೆ ನೀಡಿದ್ದೇವೆ. ಇಲ್ಲಿಯವರೆಗೂ ಅವರ ವಿರುದ್ಧ ಸರ್ಕಾರ ಹಾಗೂ ಕೃಷಿ ಸಚಿವರು ಕ್ರಮಕೈಗೊಂಡಿಲ್ಲ ಎಂದು ದೂರಿದರು.

    ಬಿ.ವಿ.ಪಾಟೀಲ್ ಅವರು ತಮ್ಮ ಆದಾಯ ಪ್ರಮಾಣ ಪತ್ರದಲ್ಲಿದ್ದ 2 ಲಕ್ಷ ರೂ.ವನ್ನು 6.20 ಲಕ್ಷ ರೂ. ಎಂದು ತಿದ್ದುಪಡಿ ಮಾಡಿ ರೈತರ ಕೋಟಾದ ಅಡಿ ಮಗನಿಗೆ ಸೀಟ್ ಕೊಡಿಸಿದ್ದಾರೆ. ಈ ಕುರಿತು ದಾಖಲೆಗಳ ಸಮೇತ ರಾಜ್ಯಪಾಲರು ಹಾಗೂ ಕೃಷಿ ಸಚಿವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಲಿಲ್ಲ. ಹೀಗಾಗಿ ನಾವು ಹೈಕೋರ್ಟ್ ಮೆಟ್ಟಿಲೇರಿದ್ದೇವೆ. ಕೋರ್ಟ್ ನಲ್ಲಿ ಪ್ರಕರಣ ಇದ್ದರೂ ವಿನಯ್ ಪಾಟೀಲ್‍ಗೆ ಪಿಎಚ್‍ಡಿ ನೀಡಲಾಗಿದೆ ಎಂದು ಹೋರಾಟಗಾರ ಟಿ.ಮಾರೆಪ್ಪ ಅಸಮಾಧಾನ ಹೊರಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ರಾಜಕಾರಣಿಗಳ ಮಕ್ಕಳ ಮದ್ವೆಗೆ ವೇದಿಕೆಯಾಗ್ತಿದೆ ಕೃಷಿ ವಿವಿ- ಸಾರ್ವಜನಿಕರು ಆಕ್ರೋಶ

    ರಾಜಕಾರಣಿಗಳ ಮಕ್ಕಳ ಮದ್ವೆಗೆ ವೇದಿಕೆಯಾಗ್ತಿದೆ ಕೃಷಿ ವಿವಿ- ಸಾರ್ವಜನಿಕರು ಆಕ್ರೋಶ

    ರಾಯಚೂರು: ಕೃಷಿ ಸಂಬಂಧಿ ಕಾರ್ಯಕ್ರಮಗಳು ನಡೆಯಬೇಕಾದ ವಿವಿ ಸ್ಥಳವನ್ನ ಖಾಸಗಿ ಸಮಾರಂಭಗಳಿಗೆ ಬಾಡಿಗೆ ನೀಡಿದ್ದು, ಎಂಎಲ್‍ಸಿ ಹಾಗೂ ಎಂಎಲ್‍ಎ ಮಕ್ಕಳ ಕಾರ್ಯಕ್ರಮಕ್ಕೆ ಕೃಷಿ ವಿವಿಯನ್ನ ಬಳಸಿಕೊಳ್ಳಲಾಗುತ್ತಿದೆ.

    ಜಿಲ್ಲೆಯಲ್ಲಿ ಈ ಬಾರಿ ಭೀಕರ ಬರಗಾಲ ಇರುವುದರಿಂದ ಇಲ್ಲಿನ ಕೃಷಿ ವಿಶ್ವವಿದ್ಯಾಲಯ ಈ ವರ್ಷ ಕೃಷಿ ಮೇಳದ ಆಯೋಜನೆಯನ್ನ ಕೈಬಿಟ್ಟಿದೆ. ಆದ್ದರಿಂದ ವಿವಿ ಆವರಣ ಸದ್ಯ ಮದುವೆ ಕಾರ್ಯಕ್ರಮ ಮಾಡುವ ವೇದಿಕೆಯಾಗಿದೆ. ವಿವಿ ಆವರಣದಲ್ಲಿ ದೊಡ್ಡದಾದ ಪೆಂಡಾಲ್, ವೇದಿಕೆ ಸಿದ್ಧಮಾಡಿ ಫೆಬ್ರವರಿ 1 ರಂದು ನಡೆಯಲಿರುವ ರಾಯಚೂರು ವಿಧಾನ ಪರಿಷತ್ ಸದಸ್ಯ ಬಸವರಾಜ್ ಪಾಟೀಲ್ ಇಟಗಿ ಪುತ್ರ ಸುಮನ್ ಹಾಗೂ ಶಹಾಪುರ ಶಾಸಕ ಶರಣಬಸಪ್ಪಾ ದರ್ಶನಾಪೂರ ಪುತ್ರಿ ಸೌಜನ್ಯ ಮದುವೆ ಸಮಾರಂಭವನ್ನು ಅದ್ಧೂರಿಯಾಗಿ ಮಾಡಲು ತಯಾರಿ ನಡೆಯುತ್ತಿದೆ. ಈ ಕಾರ್ಯಕ್ರಮಕ್ಕೆ ಸಿಎಂ, ಡಿಸಿಎಂ, ಗೃಹ ಸಚಿವರು, ಮಾಜಿ ಸಿಎಂಗಳು ಸೇರಿ ನೂರಾರು ಜನ ಗಣ್ಯರು ಹಾಗೂ 20 ಸಾವಿರಕ್ಕೂ ಅಧಿಕ ಅತಿಥಿಗಳು ಬರುವ ನಿರೀಕ್ಷೆಯಿದೆ. ಆದ್ರೆ ವಿವಿ ದುರ್ಬಳಕೆಗೆ ಸಾರ್ವಜನಿಕರು ಹಾಗೂ ಕೃಷಿಕರಿಂದ ತೀವ್ರ ಆಕ್ರೋಶವ್ಯಕ್ತವಾಗಿದೆ.

    ಕೃಷಿ ಕಾರ್ಯಕ್ರಮಗಳು, ಕೃಷಿ ಚಟುವಟಿಕೆಗಳಿಗೆ ಮೀಸಲಾದ ರಾಯಚೂರು ವಿವಿ ಕ್ಯಾಂಪಸ್‍ನಲ್ಲಿ ಎಂಎಲ್‍ಸಿ ಹಾಗೂ ಎಂಎಲ್‍ಎ ಮಕ್ಕಳ ಮದುವೆ ನಡೆಯುತ್ತಿದೆ. ಈ ಕುರಿತು ಹೊಸದಾಗಿ ಬಂದಿರುವ ವಿವಿ ಕುಲಪತಿಗಳಿಗೆ ಕೇಳಿದರೇ ಈ ವಿಚಾರದ ಬಗ್ಗೆ ಮೊದಲೇ ಆಡಳಿತ ಮಂಡಳಿ ನಿರ್ಧಾರ ಮಾಡಿತ್ತು, ನನಗೇನು ಗೊತ್ತಿಲ್ಲ ಅಂತಿದ್ದಾರೆ. ಆದ್ರೆ ಸಾರ್ವಜನಿಕರು ಮಾತ್ರ ಕೃಷಿ ವಿವಿ ದುರ್ಬಳಕೆಯಾಗುತ್ತಿದೆ ಅಂತ ಕಿಡಿಕಾರಿದ್ದಾರೆ.

    ಈ ಕುರಿತು ಬಸವರಾಜ್ ಪಾಟೀಲ್ ಇಟಗಿ ಅವರನ್ನ ಪ್ರಶ್ನಿಸಿದರೆ, ವಿವಿ ಆವರಣದಲ್ಲಿ ಇದೇ ಮೊದಲ ಮದುವೆ ಸಮಾರಂಭವಲ್ಲ ಈ ಹಿಂದೆಯೂ ಅನೇಕ ಕಾರ್ಯಕ್ರಮ ನಡೆದಿವೆ. ನಾನು ಇದೇ ಕೃಷಿ ವಿವಿಯಲ್ಲಿ ಓದಿದ್ದೇನೆ, ಮೂರು ವರ್ಷ ಉಪನ್ಯಾಸಕನಾಗಿ ಕೆಲಸ ಮಾಡಿದ್ದೇನೆ ಅಲ್ಲದೆ 1 ಲಕ್ಷ ರೂಪಾಯಿ ಬಾಡಿಗೆ ನೀಡಿ ಮದುವೆ ಕಾರ್ಯಕ್ರಮ ಮಾಡುತ್ತಿದ್ದೇನೆ ಅಂತ ಬಸವರಾಜ್ ಪಾಟೀಲ್ ಇಟಗಿ ಹೇಳಿದ್ದಾರೆ.

    ಈ ಹಿಂದೆ ಭದ್ರತಾ ದೃಷಿಯಿಂದ ರಾಹುಲ್ ಗಾಂಧಿ, ನರೇಂದ್ರ ಮೋದಿ ಕಾರ್ಯಕ್ರಮಗಳನ್ನೂ ಇದೇ ಸ್ಥಳದಲ್ಲಿ ಮಾಡಲಾಗಿತ್ತು. ಆದ್ರೆ ಈಗ ಸಂಪೂರ್ಣ ಖಾಸಗಿ ಕಾರ್ಯಕ್ರಮಕ್ಕೆ ಕೃಷಿ ವಿ.ವಿ. ಬಳಕೆಯಾಗುತ್ತಿರುವುದಕ್ಕೆ ಸ್ಥಳೀಯರು ಹಾಗೂ ರೈತರು ಬೇಸರ ವ್ಯಕ್ತಪಡಿಸಿದ್ದಾರೆ.

  • ಧಾರವಾಡ ಕೃಷಿ ವಿವಿ 30ನೇ ಘಟಿಕೋತ್ಸವ- 13 ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ

    ಧಾರವಾಡ ಕೃಷಿ ವಿವಿ 30ನೇ ಘಟಿಕೋತ್ಸವ- 13 ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ

    ಧಾರವಾಡ: ಕೃಷಿ ವಿವಿಯ 30 ನೇ ಘಟಿಕೋತ್ಸವದಲ್ಲಿ ಕೇರಳ ಮೂಲದ ಜೆಮ್ಮಿ ಜೋಸೆಫ್ ಅವರು ಬಿಎಸ್‍ಸಿ ಅಗ್ರಿಕಲ್ಚರ್‍ನಲ್ಲಿ 13 ಚಿನ್ನದ ಪದಕ ಪಡೆಯುವ ಮೂಲಕ ಚಿನ್ನದ ಬೆಡಗಿ ಎನ್ನಸಿಕೊಂಡಿದ್ದಾರೆ.

    ಈ ಬಾರಿ ಕೃಷಿ ವಿವಿಯಲ್ಲಿ 44 ಸಂಶೋಧಕ ವಿದ್ಯಾರ್ಥಿಗಳಿಗೆ, 265 ಸ್ನಾತಕ್ಕೋತ್ತರ ಹಾಗೂ 691 ಸ್ನಾತಕ ಪದವಿ ನೀಡಲಾಯಿತು. ಇದೇ ವೇಳೆ 82 ಚಿನ್ನದ ಪದಕ ಹಾಗೂ 8 ನಗದು ಬಹುಮಾನವನ್ನ ವಿದ್ಯಾರ್ಥಿಗಳಿಗೆ ನೀಡಲಾಯಿತು.

    ಈ ಬಾರಿ ಕೇರಳ ಮೂಲದ ವಿದ್ಯಾರ್ಥಿಗಳೇ ಹೆಚ್ಚಿನ ಚಿನ್ನದ ಪದಕ ಪಡೆದು ಮೇಲುಗೈ ಸಾಧಿಸಿದ್ದಾರೆ. ಪದಕ ಪಡೆದ ಹಾಗೂ ಪದವಿ ಪಡೆದ ವಿದ್ಯಾರ್ಥಿಗಳು ಸೆಲ್ಫೀ ತೆಗೆದುಕೊಳ್ಳವ ಮೂಲಕ ಸಂಭ್ರಮಿಸಿದರು. ಇನ್ನೊಂದೆಡೆ ವಿದ್ಯಾರ್ಥಿನಿಯರು ಸೀರೆಯನ್ನುಟ್ಟುಕೊಂಡು ಬಂದಿದ್ದು ಎಲ್ಲರ ಗಮನ ಸೆಳೆಯಿತು.

    ಬೆಳಗಾವಿ ಮೂಲದ ಕೇಂದ್ರ ಸರ್ಕಾರ ಕೃಷಿ ಸಹಕಾರ ಮತ್ತು ರೈತ ಕಲ್ಯಾಣ ಇಲಾಖೆಯ ಅಪರ ಕಾರ್ಯದರ್ಶಿ ಅಶೋಕ್ ದಳವಾಯಿ ಅವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಇಸ್ರೋ ಅಧ್ಯಕ್ಷ ಕಿರಣ್‍ಕುಮಾರ್ ಆಗಮಿಸಿದ್ದರು.

  • ರಾಯಚೂರು ಕೃಷಿ ವಿವಿಗೆ ಬೀಗ ಜಡಿದು ತಾಂತ್ರಿಕ ವಿದ್ಯಾರ್ಥಿಗಳ ಪ್ರತಿಭಟನೆ

    ರಾಯಚೂರು ಕೃಷಿ ವಿವಿಗೆ ಬೀಗ ಜಡಿದು ತಾಂತ್ರಿಕ ವಿದ್ಯಾರ್ಥಿಗಳ ಪ್ರತಿಭಟನೆ

    ರಾಯಚೂರು: ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಕೃಷಿ ಎಂಜಿನಿಯರ್‍ಗಳನ್ನು ಕಡೆಗಣಿಸಿದ್ದನ್ನ ಖಂಡಿಸಿ ರಾಯಚೂರು ಕೃಷಿ ವಿವಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ಆರಂಭಿಸಿದ್ದಾರೆ. ವಿಶ್ವವಿದ್ಯಾಲಯದ ತಾಂತ್ರಿಕ ಮಹಾವಿದ್ಯಾಲಯದ ಮುಖ್ಯ ಗೇಟ್ ಗೆ ಬೀಗ ಜಡಿದು ಹೋರಾಟ ನಡೆಸಿದ್ದಾರೆ.

    ಕೃಷಿ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 16 ,2016 ರಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ರಾಜ್ಯ ಪತ್ರದಲ್ಲಿ ಕೃಷಿ ತಾಂತ್ರಿಕ ಪದವೀಧರರನ್ನ ಕೈಬಿಡಲಾಗಿದೆ. ಈ ಮೊದಲು ಹೊರಡಿಸಿದ್ದ ಗೆಜೆಟ್ ಅಧಿಸೂಚನೆಗಳಲ್ಲಿ ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಕೃಷಿ ಎಂಜಿನಿಯರಿಂಗ್ ಪದವಿಯನ್ನು ಪರಿಗಣಿಸಲಾಗಿತ್ತು. ಹಾಗೇ ಈಗಲೂ ಪರಿಗಣಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

    ತರಗತಿ ಹಾಗೂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿರುವುದರಿಂದ ಕೃಷಿ ವಿವಿ ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳು ರದ್ದಾಗಿವೆ. ಅಧಿಸೂಚನೆ ಹೊರಡಿಸುವುದು ಸರ್ಕಾರ ಮಟ್ಟದ ನಿರ್ಧಾರವಾಗಿರುವುದರಿಂದ ವಿವಿ ಚಟುವಟಿಕೆಗಳಿಗೆ ಅಡ್ಡಿ ಪಡಿಸದಂತೆ ವಿವಿ ಕುಲಪತಿ ಪಿ.ಎಂ.ಸಾಲಿಮಠ್ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ. ಆದ್ರೆ ವಿದ್ಯಾರ್ಥಿಗಳು ಸರ್ಕಾರ ತಾರತಮ್ಯ ನೀತಿ ಬಿಟ್ಟು ನಮ್ಮನ್ನ ಪರಿಗಣಿಸುವವರೆಗೂ ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ.