Tag: agriculture

  • ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಸೂಚನೆ

    ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಸೂಚನೆ

    ಬೆಂಗಳೂರು: ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ (Chaluvaraya Swamy) ಅವರು ಅಧಿಕಾರಿಗಳಿಗೆ ಸೂಚಿಸಿದರು.

    ಕೃಷಿ ಇಲಾಖೆ ಜವಾಬ್ದಾರಿ ವಹಿಸಿಕೊಂಡ ಬಳಿಕ ಚಲುವರಾಯಸ್ವಾ ಮಂಗಳವಾರ ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ ಇಲಾಖೆಯ ಯೋಜನೆಗಳು, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು.

    ಪೂರ್ವ ಮುಂಗಾರಿನಲ್ಲಿ ವಾಡಿಕೆಯಾಗಿ 108 ಮಿ.ಮೀ ಮಳೆಯಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 108 ಮಿ.ಮೀ ಮಳೆಯಾಗಿದ್ದು, ಯಾವುದೇ ಕೊರತೆ ಆಗಿಲ್ಲ. 2022-23 ನೇ ಸಾಲಿನ 3ನೇ ಮುಂಗಡ ಅಂದಾಜಿನಂತೆ 139.28 ಲಕ್ಷ ಟನ್‌ಗಳಷ್ಟು ಆಹಾರ ಧಾನ್ಯಗಳ ಉತ್ಪಾದನೆಯನ್ನು ಅಂದಾಜಿಸಲಾಗಿದೆ. 2023 ರ ಮುಂಗಾರು ಹಂಗಾಮಿನಲ್ಲಿ 82.35 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇದೆ. ಪೂರ್ವ ಮುಂಗಾರು ಬೆಳೆಗಳ 2.95 ಲಕ್ಷ ಹೆಕ್ಟೇರ್ ಗುರಿಯಿದ್ದು, ಇದುವರೆಗೆ 2.48 ಲಕ್ಷ ಹೆಕ್ಟೇರ್ (84%) ಪ್ರದೇಶದಲ್ಲಿ ಕೈಗೊಳ್ಳಲಾಗಿದೆ. 5.54 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳ ಬೇಡಿಕೆಯಿದ್ದು, 7.85 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಗಳು ಲಭ್ಯವಿದೆ. ಬಿತ್ತನೆ ಬೀಜದಲ್ಲಿ ಯಾವುದೇ ಕೊರತೆ ಇಲ್ಲ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

    2023-24 ಸಾಲಿನ ಮುಂಗಾರು ಹಂಗಾಮಿಗೆ 25.47 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದೆ. 7.30 ಮೆಟ್ರಿಕ್ ಟನ್ ರಸಗೊಬ್ಬರ ಸರಬರಾಜು ಆಗಿದೆ. ಪ್ರಸ್ತುತ ಖಾಸಗಿ ಹಾಗೂ ಸಹಕಾರ ಸಂಘಗಳಲ್ಲಿ 13.90 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ. 1.68 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಕಾಪು ದಾಸ್ತಾನು (Buffer Stock) ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಲಭ್ಯವಿದ್ದು, ಪ್ರಸ್ತುತ ರಸಗೊಬ್ಬರದ ಯಾವುದೇ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು.

    ಅಗತ್ಯವಾದ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಇದ್ದು, ರೈತರಿಗೆ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗಬಾರದು. ಪರೀಕ್ಷೆ ಮಾಡಿ ಗುಣಮಟ್ಟದ ಬಿತ್ತನೆ ಬೀಜಗಳನ್ನು ರೈತರಿಗೆ ಪೂರೈಕೆ ಮಾಡಬೇಕು. ರೈತರಿಗೆ ಅಗತ್ಯವಿರುವ ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಪೂರೈಸಬೇಕು. ಮುಂಗಾರಿನಲ್ಲಿ ರೈತರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ಅವರು ಸೂಚನೆ ನೀಡಿದರು.

    ಇದರ ಜೊತೆಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ಕಡ್ಡಾಯವಾಗಿ ಎಒಗಳು ಹಾಜರಿರಬೇಕು. ಮಣ್ಣಿನ ಪರೀಕ್ಷೆಯ (Soil Test) ರಿಪೋರ್ಟ್‌ಗಳನ್ನು ಸೂಕ್ತ ಸಮಯದಲ್ಲಿ ನೀಡಬೇಕು. ಬೆಳೆ ವಿಮೆ ನೀಡುವಲ್ಲಿ ರೈತರಿಗೆ ಸಮಸ್ಯೆ ಆಗಬಾರದು. ಜಿಲ್ಲಾ ಮಟ್ಟದಲ್ಲಿ ಯಾವುದೇ ಸಮಸ್ಯೆಯಾದರೂ ಜಂಟಿ ನಿರ್ದೇಶಕರೇ ನೇರ ಹೊಣೆ ಆಗ್ತೀರಾ ಎಂದು ಸಚಿವರು ಎಚ್ಚರಿಕೆ ನೀಡಿದರು.

    ನೆಟೆ ರೋಗ – ಶೀಘ್ರ ಪರಿಹಾರ ಬಿಡುಗಡೆ:
    2022-23ನೇ ಸಾಲಿನಲ್ಲಿ ನೆಟೆ ರೋಗದಿಂದ ಕಲಬುರಗಿ ಜಿಲ್ಲೆಯಲ್ಲಿ 1,98,488 ಹೆಕ್ಟೇರ್, ಬೀದರ್ ಜಿಲ್ಲೆಯಲ್ಲಿ 14,495 ಹೆಕ್ಟೇರ್, ವಿಜಯಪುರ ಜಿಲ್ಲೆಯಲ್ಲಿ 20,401 ಹೆಕ್ಟೇರ್, ಯಾದಗಿರಿ ಜಿಲ್ಲೆಯಲ್ಲಿ 10,259 ಪ್ರದೇಶದಲ್ಲಿ ತೊಗರಿ ಬೆಳೆ ಹಾನಿಯಾಗಿದೆ. ಇದರಿಂದ ನಷ್ಟವಾದ ರೈತರಿಗೆ ಪ್ರತಿ ಹೆಕ್ಟೇರ್ 10,000 ರೂ. ಪರಿಹಾರದಂತೆ ಗರಿಷ್ಠ 2 ಹೆಕ್ಟೇರ್‌ಗೆ ಸೀಮಿತಗೊಳಿಸಿ ಸರ್ಕಾರದಿಂದ 223 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಶೀಘ್ರದಲ್ಲೇ ಪರಿಹಾರ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು. ಇದನ್ನೂ ಓದಿ: ಅಶ್ವಥ್‌ ನಾರಾಯಣ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

    ಹುದ್ದೆಗಳ ಭರ್ತಿಗೆ ಅಗತ್ಯ ಕ್ರಮ:
    ಕೃಷಿ ಇಲಾಖೆಯಲ್ಲಿ 58% ರಷ್ಟು ಹುದ್ದೆಗಳು ಖಾಲಿಯಿದ್ದು, ಯೋಜನೆಗಳನ್ನು ಪರಿಣಾಮಕಾರಿಯಾಗಿ ರೈತರಿಗೆ ತಲುಪಿಸಲು ವಿಳಂಬ ಆಗಲಿದೆ. ಆ ನಿಟ್ಟಿನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಅವಶ್ಯವಿದೆ. ಹಾಗಾಗಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಕೃಷಿ ಇಲಾಖೆಗೆ ಒಟ್ಟು 8,982 ಹುದ್ದೆಗಳು ಮಂಜೂರಾಗಿದ್ದು, ಆ ಪೈಕಿ 3,787 ಹುದ್ದೆಗಳು ಭರ್ತಿಯಾಗಿವೆ. 5,195 ಹುದ್ದೆಗಳು ಖಾಲಿ ಇರುತ್ತವೆ ಎಂದು ಮಾಹಿತಿ ನೀಡಿದರು.

    ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: 10 ಕೆಜಿ ಉಚಿತ ಅಕ್ಕಿ – ಸರ್ಕಾರದ ಲೆಕ್ಕಾಚಾರ ಏನು?

  • ಕೃಷಿಪತ್ತಿನ ಸೊಸೈಟಿಗಳಿಗೆ ಪೆಟ್ರೋಲ್‌, ಎಲ್‌ಪಿಜಿ ಬಂಕ್‌ ಏಜೆನ್ಸಿ

    ಕೃಷಿಪತ್ತಿನ ಸೊಸೈಟಿಗಳಿಗೆ ಪೆಟ್ರೋಲ್‌, ಎಲ್‌ಪಿಜಿ ಬಂಕ್‌ ಏಜೆನ್ಸಿ

    ನವದೆಹಲಿ: ಪ್ರಾಥಮಿಕ ಕೃಷಿಪತ್ತಿನ ಸೊಸೈಟಿಗಳಿಗೆ (PACS) ಮುಂದಿನ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ (Petrol, Diesel) ಮತ್ತು ಎಲ್‌ಪಿಜಿ (LPG ) ಡೀಲರ್‌ಶಿಪ್‌ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ.

    ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ ಮತ್ತು ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಪುರಿ ನಡುವೆ ಬುಧವಾರ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ದೇಶದ ಸಹಕಾರ ವಲಯಕ್ಕೆ ಇನ್ನಷ್ಟು ಬಲ ತುಂಬಲು ಸರ್ಕಾರ ಮುಂದಾಗಿದೆ.

    ಈಗಾಗಲೇ ಪೆಟ್ರೋಲ್/ ಡೀಸೆಲ್ ಸಗಟು ಗುತ್ತಿಗೆ ಹೊಂದಿರುವ ಸೊಸೈಟಿಗಳಿಗೆ ಅದನ್ನು ಚಿಲ್ಲರೆ ಮಾರಾಟ ಮಳಿಗೆಗಳಾಗಿ ಬದಲಾಯಿಸುವ ಒಂದು ಬಾರಿಯ ಅವಕಾಶವನ್ನೂ ನೀಡಲು ನಿರ್ಧರಿಸಿದೆ ಎಂದು ಉಭಯ ಸಚಿವಾಲಯಗಳು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿವೆ.  ಇದನ್ನೂ ಓದಿ: ಹಾವೇರಿಯಲ್ಲಿ ಎಷ್ಟು ಸೀಟು ಗೆಲ್ಲಿಸ್ತಾನೋ ನೋಡೋಣ: ಸೇಡಿನ ರಾಜಕಾರಣಿ – ಸಿಎಂ ವಿರುದ್ಧ ನೆಹರೂ ಓಲೇಕಾರ್ ಕಿಡಿ

    ಸಕ್ಕರೆ ಸಹಕಾರಿ ಕಾರ್ಖಾನೆಗಳಿಗೆ ಎಥೆನಾಲ್ ಮಿಶ್ರಣ ಯೋಜನೆಯ ಅಡಿ ಎಥೆನಾಲ್ ಮಾರಾಟ ಮಾಡುವ ಅನುಮತಿಯನ್ನು ಆದ್ಯತೆಯ ಮೇರೆಗೆ ನೀಡಲಾಗುತ್ತದೆ.

     

    ದೇಶದ ಸಹಕಾರ ವಲಯಕ್ಕೆ ಬಲ ತುಂಬಲು 25 ವಿವಿಧ ಯೋಜನೆಗಳ ಮೂಲಕ ಪ್ರಾಥಮಿಕ ಕೃಷಿ ಪತ್ತಿನ ಸೊಸೈಟಿಗಳನ್ನು ಗ್ರಾಮೀಣ ಅರ್ಥಿಕಾಭಿವೃದ್ಧಿ ಕೇಂದ್ರಗಳನ್ನಾಗಿ ಪರಿವರ್ತಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

  • Union Budget 2023: ಬಜೆಟ್‍ನಲ್ಲಿ ಕೃಷಿ ಕೇತ್ರಕ್ಕೆ ಸಿಕ್ಕಿದ್ದೇನು?- ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಅನುದಾನ?

    Union Budget 2023: ಬಜೆಟ್‍ನಲ್ಲಿ ಕೃಷಿ ಕೇತ್ರಕ್ಕೆ ಸಿಕ್ಕಿದ್ದೇನು?- ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಅನುದಾನ?

    ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಂಡಿಸಿದ ಕೇಂದ್ರ ಬಜೆಟ್‍ನಲ್ಲಿ (Union Budget 2023) ಅನ್ನದಾತರಿಗೆ (Agriculture) ಬಂಪರ್ ಅನುದಾನ ನೀಡಲಾಗಿದೆ.

    ಪ್ರಮುಖವಾಗಿ ಕೃಷಿ ಸಾಲಗಳಿಗಾಗಿ 20 ಲಕ್ಷ ಕೋಟಿ ರೂ. ವಿತರಣೆ ಗುರಿ ಇಟ್ಟುಕೊಂಡಿದೆ., ಸಿರಿಧಾನ್ಯಗಳ ಬೆಳೆಗಳಿಗೆ ಸಹಕಾರ – ಶ್ರೀ ಅನ್ನ ಯೋಜನೆ, ಕೃಷಿಧಾನ್ಯ ಸಂಗ್ರಹಾಗಾರಗಳ ವಿಕೇಂದ್ರೀಕರಣ, ಕೃಷಿಗಾಗಿ ಡಿಜಿಟಲ್ ಸರ್ಕಾರಿ ಮೂಲ ಸೌಕರ್ಯ, ಕೃಷಿ ರಂಗಕ್ಕೆ ಸಾಲ ಸೌಲಭ್ಯ, ಮಾರ್ಕೆಟಿಂಗ್ ಸೌಲಭ್ಯ, ಕೃಷಿ ಸ್ಟಾರ್ಟ್‍ಪ್‍ಗಳಿಗೆ ಬೆಂಬಲ, ಪ್ರತ್ಯೇಕ ನಿಧಿ, ಬೆಳೆಗಳ ರಕ್ಷಣೆಗಾಗಿ ಕೃಷಿ ಕೇಂದ್ರಿತ ಸೇವೆ ಆರಂಭ, ಹತ್ತಿ ಬೇಸಾಯ ಹೆಚ್ಚಿಸಲು ಪ್ರತ್ಯೇಕ ಕ್ರಮ, ಮಾರ್ಕೆಟಿಂಗ್ ಸೌಲಭ್ಯ, ರಸಗೊಬ್ಬರ ಸಬ್ಸಿಡಿ ಮೊತ್ತ 1.75 ಲಕ್ಷ ಕೋಟಿಗೆ ಇಳಿಕೆ (ಕಳೆದ ವರ್ಷ 2.25 ಲಕ್ಷ ಕೋಟಿ ಕೊಟ್ಟಿತ್ತು) ಮತ್ತು ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಗೆ ಮತ್ತಷ್ಟು ಬೆಂಬಲ ನೀಡುವುದಾಗಿ ಘೋಷಿಸಿ ಕೃಷಿ ಕ್ಷೇತ್ರದ ಬೆಳವಣಿಗೆ ಬಜೆಟ್‍ನಲ್ಲಿ ಅನುದಾನ ನೀಡಲಾಗಿದೆ. ಇದನ್ನೂ ಓದಿ: Union Budget 2023: ಎಲ್ಲಾ ರಾಜ್ಯಗಳಲ್ಲೂ ʼಯೂನಿಟಿ ಮಾಲ್‌ʼ

    ಪ್ರಧಾನಿ ನರೇಂದ್ರ ಮೋದಿ (Narendra Modi) ಸರ್ಕಾರ ಮಂಡಿಸಿದ ಬಜೆಟ್‍ನ ಗಾತ್ರ 45 ಲಕ್ಷ 3 ಸಾವಿರದ 97 ಕೋಟಿ ರೂಪಾಯಿ. ಇದು ಕಳೆದ ವರ್ಷಕ್ಕೆ ಹೋಲಿಸಿದ್ರೆ 6 ಲಕ್ಷ ಕೋಟಿ ಜಾಸ್ತಿ ಮೊತ್ತವಾಗಿದೆ. ಈ ಬಜೆಟ್‍ನಲ್ಲಿ ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಅನುದಾನ ನಿಗದಿ ಮಾಡಿದೆ ಎನ್ನುವುದನ್ನು ನೋಡುವುದಾದರೆ. ಇದನ್ನೂ ಓದಿ:  Budget 2023: ಮನೆ ಕಟ್ಟೋರಿಗೆ ಗುಡ್‌ ನ್ಯೂಸ್‌ – ಪ್ರಧಾನಮಂತ್ರಿ ಆವಾಸ್ ಯೋಜನೆಗಾಗಿ 79,000 ಕೋಟಿ ಅನುದಾನ

    ಯಾವ್ಯಾವ ವಲಯಕ್ಕೆ ಎಷ್ಟೆಷ್ಟು ಅನುದಾನ:
    ರಕ್ಷಣಾ ವಲಯ – 5.94 ಲಕ್ಷ ಕೋಟಿ ರೂ.
    ರಸ್ತೆ, ಹೆದ್ದಾರಿ – 2.70 ಲಕ್ಷ ಕೋಟಿ ರೂ.
    ರೈಲ್ವೇ ವಲಯ – 2.41 ಲಕ್ಷ ಕೋಟಿ ರೂ.
    ಆಹಾರ ಇಲಾಖೆ – 2.06 ಲಕ್ಷ ಕೋಟಿ ರೂ.
    ಗೃಹ – 1.96 ಲಕ್ಷ ಕೋಟಿ ರೂ.
    ಗ್ರಾಮೀಣಾಭಿವೃದ್ಧಿ – 1.60 ಲಕ್ಷ ಕೋಟಿ ರೂ.
    ಕೃಷಿ ಕಲ್ಯಾಣ – 1.25 ಲಕ್ಷ ಕೋಟಿ ರೂ.
    ದೂರಸಂಪರ್ಕ – 1.23 ಲಕ್ಷ ಕೋಟಿ ರೂ.

    ಬಜೆಟ್‍ನ ಇತರೆ ಪ್ರಮುಖಾಂಶ:
    ಆರೋಗ್ಯ ವಲಯಕ್ಕೆ 7,200 ಕೋಟಿ ರೂ., ಆಯುಷ್ಮಾನ್ ಭಾರತ್‍ಗಾಗಿ 646 ಕೋಟಿ ರೂ.
    ಸ್ವದೇಶಿ ಉತ್ಪನ್ನಗಳ ಮಾರಾಟಕ್ಕೆ ದೇಶಾದ್ಯಂತ ಯೂನಿಟಿ ಮಾಲ್
    ದೇಶಾದ್ಯಂತ ಹೊಸದಾಗಿ 50 ಏರ್‌ಪೋರ್ಟ್‌, ಹೆಲಿಪ್ಯಾಡ್
    ಪಿಎಂ ಕೌಶಲ್ ಯೋಜನೆಯಡಿ 4 ಲಕ್ಷ ಮಂದಿಗೆ ಟ್ರೈನಿಂಗ್
    ಮತ್ತೆ ಮೂರು ವರ್ಷ ನೀತಿ ಆಯೋಗ ವಿಸ್ತರಣೆ
    5ಜಿ ಅಪ್ಲಿಕೇಷನ್‍ಗಳ ಅಭಿವೃದ್ಧಿಗಾಗಿ 100 ಲ್ಯಾಬ್
    ಖಾಸಗಿ ಹೂಡಿಕೆ ಆಕರ್ಷಿಸಲು ಪ್ರತ್ಯೇಕ ವಿಭಾಗ
    ಇ-ಕೋರ್ಟ್‍ಗಳ ಸ್ಥಾಪನೆಗೆ 7 ಸಾವಿರ ಕೋಟಿ ರೂ.
    ರಾಷ್ಟ್ರೀಯ ಸಹಕಾರ ಡೇಟಾ ಬೇಸ್‍ಗಾಗಿ 2,516 ಕೋಟಿ ರೂ.

    ಫಿನ್‍ಟೆಕ್ ಸೇವೆಗಳಿಗಾಗಿ ಡಿಜಿಲಾಕರ್ ಕೆವೈಸಿ ಸರಳೀಕರಣ
    ಲ್ಯಾಬ್‍ಗಳಲ್ಲಿ ವಜ್ರ ತಯಾರಿಸಲು ಐಐಟಿಗಳಿಗೆ ಪ್ರತ್ಯೇಕ ನಿಧಿ
    ಕೃತಕ ಬುದ್ದಿಮತ್ತೆಯ ಅಭಿವೃದ್ಧಿಗಾಗಿ ವಿಶೇಷ ಅನುದಾನ
    ಮೇಕ್ ಇನ್ ಇಂಡಿಯಾ, ಮೇಕ್ ಎ ವರ್ಕ್ ಮಿಷನ್ ಶುರು
    ವಿಶ್ವಕರ್ಮ ಯೋಜನೆಯಡಿ ವಿಶ್ವಕರ್ಮ ಸಮುದಾಯಕ್ಕೆ ಸಹಾಯಧನ
    ದೇಶಾದ್ಯಂತ ಹೊಸದಾಗಿ 157 ನರ್ಸಿಂಗ್ ಕಾಲೇಜ್ ಸ್ಥಾಪನೆ
    ಶಿಕ್ಷಕರ ತರಬೇತಿಗಾಗಿ ಡಿಜಿಟಲ್ ಶಿಕ್ಷಣ ವಿಧಾನ
    ಯುವಕರು ಮಕ್ಕಳಿಗಾಗಿ ರಾಷ್ಟ್ರೀಯ ಡಿಜಿಟಲ್ ಲೈಬ್ರೆರಿ
    ಪಂಚಾಯತ್, ವಾರ್ಡ್ ಮಟ್ಟದಲ್ಲಿ ಗ್ರಂಥಾಲಯಗಳ ಸ್ಥಾಪನೆ
    ದೇಶಾದ್ಯಂತ ಏಕಲವ್ಯ ಮಾಡೆಲ್ ಸ್ಕೂಲ್, 38,800 ಶಿಕ್ಷಕರ ನೇಮಕ
    ದೇಶದ 50 ಪ್ರವಾಸಿ ತಾಣಗಳ ಅಭಿವೃದ್ಧಿಗೆ ವಿಶೇಷ ಅನುದಾನ
    ದೇಖೋ ಅಪ್ನಾ ದೇಶ್ ಯೋಜನೆ ಪ್ರಾರಂಭ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರೈತರ ಬದುಕಿನ ಅನಿಶ್ಚಿತತೆ ಹೋಗಲಾಡಿಸಲು ವೈಜ್ಞಾನಿಕ ಔಟ್‌ಲುಕ್ ವರದಿ ಅಗತ್ಯ – ಸಿಎಂ

    ರೈತರ ಬದುಕಿನ ಅನಿಶ್ಚಿತತೆ ಹೋಗಲಾಡಿಸಲು ವೈಜ್ಞಾನಿಕ ಔಟ್‌ಲುಕ್ ವರದಿ ಅಗತ್ಯ – ಸಿಎಂ

    ಬೆಂಗಳೂರು: ರೈತರ ಬದುಕಿನ ಅನಿಶ್ಚಿತತೆಯನ್ನು ಬದಲಾಯಿಸಲು ಔಟ್‌ಲುಕ್ ವರದಿಯನ್ನು ವೈಜ್ಞಾನಿಕವಾಗಿ ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅಭಿಪ್ರಾಯಪಟ್ಟರು.

    ಶುಕ್ರವಾರ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ- 2023 (International Millets & Organic Mela) ಉದ್ಘಾಟಿಸಿ ಮಾತನಾಡಿದ ಅವರು, ಬೇರೆ ದೇಶಗಳಲ್ಲಿ ಮುಂದಿನ ಋತುವಿಗೆ ಎಷ್ಟು ಮಳೆಯಾಗಬಹುದು ಎಂದು ಕಳೆದ 10 ವರ್ಷಗಳ ಮಳೆ ಮಾದರಿಯನ್ನು ಆಧರಿಸಿ, ಬಿತ್ತನೆ, ಉತ್ಪಾದನೆ, ಅಂತರರಾಷ್ಟ್ರೀಯ ಮಾರುಕಟ್ಟೆ, ಸ್ಥಳೀಯ ಮಾರುಕಟ್ಟೆಗಳನ್ನು ಪರಿಶೀಲಿಸಿ, ಒಂದು ಬೆಲೆಯನ್ನು ನಿಗದಿ ಮಾಡುವ ಔಟ್‍ಲುಕ್ ವರದಿ ತಯಾರಿಸುತ್ತಾರೆ. ಈ ವರದಿಯನ್ನು ಸಿದ್ಧಪಡಿಸಬೇಕು. ರೈತ ಬೆಳೆಯುವ ಬೆಳೆಗೆ ಎಷ್ಟು ಖರ್ಚು ತಗುಲಿ, ಎಷ್ಟು ಧಾರಣೆ ದೊರೆಯುತ್ತದೆ ಎಂದು ತಿಳಿದರೆ, ಈ ಮೊತ್ತದೊಳಗೆಯೇ ಖರ್ಚು ಮಾಡುತ್ತಾನೆ. ಬೆಳೆ ಉಳಿಸುವ ಸಲುವಾಗಿ ಖರ್ಚು ಮಾಡುವ ಈ ವಿಧಾನದ ಬಗ್ಗೆ ಚರ್ಚೆ ಮಾಡಿ ನಿರ್ಧಾರಕ್ಕೆ ಬರಲಾಗುವುದು. ಈ ವರದಿಯನ್ನು ಇಲಾಖೆ ಹಾಗೂ ಕೃಷಿ ದರ ಆಯೋಗದ ಸಹಯೋಗದೊಂದಿಗೆ ಸಿದ್ಧಪಡಿಸಬೇಕು ಎಂದರು. ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂತ ಬಿಜೆಪಿ ನಮ್ಮ ನಾಯಕರನ್ನು ಟಾರ್ಗೆಟ್ ಮಾಡುತ್ತಿದೆ: ಡಿಕೆಶಿ

     

    ಗ್ರಾಮೀಣ ಸಾಲ ಪದ್ದತಿ ಬದಲಾಗಬೇಕು
    ಗ್ರಾಮೀಣ ಆರ್ಥಿಕತೆ ಸುಧಾರಿಸಲು ಗ್ರಾಮೀಣ ಸಾಲ ಪದ್ದತಿ ಬದಲಾಗಬೇಕು. ಭೂಮಿಯಿಂದ ಸಾಲದ ಅನುಪಾತವನ್ನು ಯಾರೂ ನಿರ್ವಹಣೆ ಮಾಡಿಲ್ಲ. 20 ಸಾವಿರ ನೀಡಬೇಕಾದರೆ 7 ರಿಂದ 8 ಸಾವಿರ ನೀಡಲಾಗುತ್ತದೆ. ನಿಖರವಾಗಿ ಸಾಲ ನೀಡಿದರೆ ರೈತ ಮಾರವಾಡಿಗಳ ಎದುರು ಕೈ ಚಾಚುವುದನ್ನು ನಿಲ್ಲಿಸುತ್ತಾನೆ. ಗ್ರಾಮೀಣ ಸಾಲ ಪದ್ದತಿ ಬದಲಾಗಬೇಕು ಎಂದು ಕೇಂದ್ರ ಹಣಕಾಸು ಸಚಿವರು ಹಾಗೂ ಕೃಷಿ ಸಚಿವರಿಗೆ ಒತ್ತಾಯವನ್ನು ಮಾಡಿದ್ದು, ರಚನೆ ಬದಲಾಯಿಸಿ, ನಬಾರ್ಡ್ ಈ ಸಾಲ ಪದ್ದತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲು ಒತ್ತಾಯಿಸಲಾಗಿದೆ. ಈ ಕೆಲಸಗಳಾದರೆ ರೈತರ ಬದುಕಿಗೆ ನಿಶ್ಚಿತತೆಯನ್ನು ತರಬಹುದು. ರಾಜ್ಯ ಸರ್ಕಾರ ಈ ವರ್ಷ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲದ ನೆರವು ನೀಡಿದ್ದು, 3 ಲಕ್ಷ ಹೊಸ ರೈತರಿಗೆ ಸಾಲ ನೀಡಿರುವುದು ದಾಖಲೆ. ರೈತಶಕ್ತಿ ಯೋಜನೆ 10 ದಿನಗಳ ಕಾಲದಲ್ಲಿ ಪ್ರಾರಂಭಿಸಲಾಗಿದೆ. ಯಶಸ್ವಿನಿ ಯೋಜನೆಯನ್ನು ಮರುಪ್ರಾರಂಭಿಸಲಾಗಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದೆ. 10 ಹೆಚ್‌ಪಿ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಈ ಯೋಜನೆಗೆ ಶುಲ್ಕ ಪಡೆಯಬೇಕೆಂದು ಹಿಂದಿನ ಸರ್ಕಾರಗಳು ಆಜ್ಞೆ ಮಾಡಿದ್ದವು. ಒಂದು ಪಂಪ್‌ಗೆ 10 ಸಾವಿರ ರೂ.ಗಳನ್ನು ಪಡೆಯಬೇಕೆಂಬ ಪ್ರಸ್ತಾವನೆ ಹಿಂದಿನ ಸರ್ಕಾರದಲ್ಲಿತ್ತು. ಆದರೆ ಈ ಪ್ರಸ್ತಾವನೆಯನ್ನು ಅನುಷ್ಠಾನ ಮಾಡುವ ಧೈರ್ಯ ಮಾಡಲಿಲ್ಲ. ನಮ್ಮ ರಾಜ್ಯ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡುತ್ತಿರುವುದರಿಂದ ಹಾಗೂ ಸೋಲಾರ್ ಕೃಷಿ ಪಂಪ್‍ಸೆಟ್‌ಗಳಿಗೆ ನರೇಂದ್ರ ಮೋದಿಯವರ ಸರ್ಕಾರ ಯೋಜನೆಗಳನ್ನು ನೀಡಿ ದೊಡ್ಡ ಪ್ರಾಮಾಣದಲ್ಲಿ ಪ್ರೋತ್ಸಾಹಿಸಲಾಗುತ್ತಿದೆ. ರೈತ ವಿದ್ಯಾ ನಿಧಿಯಡಿ 11 ಲಕ್ಷ ರೈತರ ಮಕ್ಕಳು ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದರು.

    ಸಿರಿಧಾನ್ಯದ ಬೆಳೆ ಬಗ್ಗೆ ರೈತರಲ್ಲಿ ಜಾಗೃತಿ
    ರಾಜ್ಯದಲ್ಲಿ ನವಣಿ, ಸಾವೆ, ರಾಗಿ ಜೋಳ ಸೇರಿದಂತೆ ಎಲ್ಲ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದೆ. ಆಗ ಕೃಷಿ ಕೇವಲ ಆಹಾರ ಉತ್ಪಾದನೆಗೆ ಮಾತ್ರ ಸೀಮಿತವಾಗಿತ್ತು. ಈಗ ವಾಣಿಜ್ಯ ಉದ್ದೇಶಕ್ಕೆ ಕೃಷಿ ಮಾಡಲಾಗುತ್ತಿದೆ. ಆಹಾರ ಧಾನ್ಯ ಉತ್ಪಾದನೆ ಹಾಗೂ ವಾಣಿಜ್ಯ ಬೆಳೆಗಳ ನಡುವೆ ಸಮತೋಲನವನ್ನು ಕಾಯ್ದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಆಹಾರ ಸುರಕ್ಷತೆಗೆ ತೊಂದರೆಯುಂಟಾಗಬಹುದು. ಬರುವ ದಿನಮಾನದಲ್ಲಿ ಆಹಾರ ಕೊರತೆ ಉಂಟಾಗಬಹುದೆಂದು ವಿಶ್ವ ಆಹಾರ ತಜ್ಞರು ತಿಳಿಸಿದ್ದಾರೆ. ಆಹಾರದ ಪ್ರಮಾಣ, ಧಾನ್ಯಗಳು, ನಾರಿನಾಂಶ, ಪೌಷ್ಟಿಕಾಂಶ ಇರಬೇಕು ಎಂಬ ಬಗ್ಗೆ ಅಧ್ಯಯನ ಮಾಡಿ ಈ ವಿಷಯಗಳಲ್ಲಿ ರೈತರಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂದರು. ಇದನ್ನೂ ಓದಿ: ಕಾಂಗ್ರೆಸ್-ಜೆಡಿಎಸ್ ಸಭೆಗಳಲ್ಲಿ ಚಪ್ಪಲಿ ಹಿಡಿದು ಕಿತ್ತಾಟ – ಬಿಜೆಪಿ ಸಭೆಯಲ್ಲಿ ಮಾತ್ರ ಶಿಸ್ತು: ನಳಿನ್ ಕುಮಾರ್ ಕಟೀಲ್

    ಪಡಿತರದಲ್ಲಿ ಜೋಳ ಮತ್ತು ರಾಗಿ
    ವಾಣಿಜ್ಯ ಬೆಳೆಯಾದ ಅಡಿಕೆ ಕಳೆದ ಎರಡು ವರ್ಷದಲ್ಲಿ ಇಳುವರಿ ಹೆಚ್ಚಾಗಿದೆ. ಸಿರಿಧಾನ್ಯಗಳ ಉತ್ತಮ ನೀರಾವರಿ ಹೆಚ್ಚಾಗಿದ್ದರಿಂದ ದೊಡ್ಡ ಪ್ರಮಾಣದಲ್ಲಿ ಭತ್ತ ಬೆಳೆಯಲಾಗುತ್ತಿದೆ. ರಾಜ್ಯದಲ್ಲಿ ಜೋಳ ಮತ್ತು ರಾಗಿಯನ್ನು ಜನ ಹೆಚ್ಚಾಗಿ ಬಳಸುತ್ತಾರೆ. ಕಳೆದ ಮೂರು ವರ್ಷದಿಂದ ಜೋಳ ಮತ್ತು ರಾಗಿಯನ್ನು ನಮ್ಮ ಪಡಿತರ ವ್ಯವಸ್ಥೆಯಲ್ಲಿ ಕೊಡಲಾಗುತ್ತಿದೆ. ಇದರಿಂದ ರೈತರು ಬೆಳೆದ ಬೆಳೆಗೆ ಹೆಚ್ಚಿನ ಬೆಲೆ ದೊರೆಯುತ್ತದೆ. ರಾಗಿಗೆ ದೊಡ್ಡ ಪ್ರಮಾಣದಲ್ಲಿ ಬೇಡಿಕೆ ಇದ್ದು, ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡಿ ರಾಗಿ ಖರೀದಿಸುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಿದೆ ಎಂದು ಹೇಳಿದರು.

    ಸಿರಿಧಾನ್ಯ ಕೃಷಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪ್ರೋತ್ಸಾಹ
    ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ದೊರೆಯುತ್ತಿದೆ. ಈ ವರ್ಷ ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಣೆ ಮಾಡಿದ್ದರಿಂದ ರಾಜ್ಯದಲ್ಲಿ ರೈತರಿಗೆ ಹೆಚ್ಚಿನ ಅನುಕೂಲವಾಗಿದೆ. ಕೇಂದ್ರ ಸರ್ಕಾರ ಸಿರಿಧಾನ್ಯ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ಅನುದಾನವನ್ನು ರಾಜ್ಯಕ್ಕೆ ನೀಡಿದೆ. ಜನರಿಗೆ ಆರೋಗ್ಯ ಹಾಗೂ ರೈತರಿಗೆ ಲಾಭವನ್ನು ತರುವಂತಹ ಸಿರಿಧಾನ್ಯ ಕೃಷಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಪ್ರೋತ್ಸಾಹ ನೀಡಲು ಸಿರಿಧಾನ್ಯ ಮೇಳವನ್ನು ಆಯೋಜಿಸಲಾಗಿದೆ ಎಂದರು.

    ಕೃಷಿ ವಿವಿಗಳು ಕ್ಯಾಂಪಸ್‌ನ್ನು ಬಿಟ್ಟು ಹೊರಬರಬೇಕು
    ಕೃಷಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಆಗಲಿದೆ. ಹವಾಮಾನದ ಬದಲಾವಣೆಗೆ ಅನುಗುಣವಾಗಿ ಕೃಷಿ ಕ್ಷೇತ್ರವನ್ನು ಸಜ್ಜುಗೊಳಿಸಲು ಕೃಷಿ ವಿಶ್ವವಿದ್ಯಾಲಯಗಳು ಸನ್ನದ್ದವಾಗಬೇಕು. ಕೃಷಿ ಕ್ಷೇತ್ರದಲ್ಲಿನ ಇಂದಿನ ಸವಾಲುಗಳ ಬಗ್ಗೆ ಸಂಶೋಧನೆಗಳನ್ನು ಮಾಡಬೇಕು. ಹವಾಮಾನ ಬದಲಾವಣೆ, ಮಣ್ಣಿನ ಸವಕಳಿ, ಹೆಚ್ಚಿನ ನೀರು ಬಳಕೆ, ಜವುಳು, ಭೂಮಿಯ ಮೇಲೆ ರಾಸಾಯನಿಕದಿಂದ ಆಗುತ್ತಿರುವ ಸಮಸ್ಯೆ, ಕಳಪೆ ಹಾಗೂ ನಕಲಿ ಬೀಜ ಮಾರಾಟ ತಡೆಯುವ ಬಗ್ಗೆ ವಿಶ್ವವಿದ್ಯಾಲಯಗಳು ಕ್ರಮ ಕೈಗೊಳ್ಳಬೇಕು. ಕೃಷಿ ವಿವಿಗಳು ಕ್ಯಾಂಪಸ್‌ನ್ನು ಬಿಟ್ಟು ಹೊರ ಬನ್ನಿ. ರೈತನ ಹೊಲವನ್ನೇ ಕ್ಯಾಂಪಸ್‌ನ್ನಾಗಿ‌ ಮಾಡಿಕೊಳ್ಳಿ. ರೈತನ ಹೊಲದಲ್ಲಿ ಎಲ್ಲವೂ ಅನಿಶ್ಚಿತತೆಯಿಂದ ಕೂಡಿದೆ. ರೈತರ ಈ ಅನಿಶ್ಚಿತತೆಯನ್ನು ನಿವಾರಿಸಲು ಉತ್ತಮ ಬೀಜ, ಕೃಷಿ ವಿಧಾನ, ಒಳ್ಳೆಯ ಔಷಧಿ ಸಿಂಪಡಣೆ ಅಗತ್ಯವಿದೆ ಸಲಹೆ ನೀಡಿದರು. ಇದನ್ನೂ ಓದಿ: ತನಿಖೆ ಮಾಡಿದ್ರೆ ಕಾಂಗ್ರೆಸ್ಸಿನವರಿಗೋಸ್ಕರ ಹೊಸ ಜೈಲು ತೆರೆಯಬೇಕಾಗುತ್ತೆ: ಆರಗ ತಿರುಗೇಟು

    ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಕೃಷಿ ಸಚಿವ ಬಿ.ಸಿ.ಪಾಟೀಲ್, ಸಚಿವ ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಛಲವಾದಿ ನಾರಾಯಣಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರೈತರ ಮಕ್ಕಳಿಗೆ ಹೆಣ್ಣು ಕೊಡ್ತಿಲ್ಲ – ಜಾಗೃತಿ ಮೂಡಿಸಲು ತಹಶೀಲ್ದಾರ್‌ಗೆ ಗ್ರಾಮಸ್ಥರ ಮನವಿ

    ರೈತರ ಮಕ್ಕಳಿಗೆ ಹೆಣ್ಣು ಕೊಡ್ತಿಲ್ಲ – ಜಾಗೃತಿ ಮೂಡಿಸಲು ತಹಶೀಲ್ದಾರ್‌ಗೆ ಗ್ರಾಮಸ್ಥರ ಮನವಿ

    ಹುಬ್ಬಳ್ಳಿ: ಜಿಲ್ಲೆಯಲ್ಲಿ ರೈತರ (Farmers) ಮಕ್ಕಳು ಮದುವೆಯಾಗಲು (Marriage) ಹೆಣ್ಣು ಕೊಡುತ್ತಿಲ್ಲ. ಸರ್ಕಾರ (Government) ಈ ಬಗ್ಗೆ ಜಾಗೃತಿ ಮೂಡಿಸುವಂತೆ ರೈತ ಪೋಷಕರು ಹಾಗೂ ಮಕ್ಕಳು ಮನವಿ ಮಾಡಿದ್ದಾರೆ.

    ಸರ್ಕಾರ ಜಾಗೃತಿ ಮೂಡಿಸಬೇಕೆಂದು ಧಾರವಾಡ ಜಿಲ್ಲೆಯ ಹೊಸಳ್ಳಿ ಗ್ರಾಮಸ್ಥರು ಕುಂದಗೋಳ ತಹಶಿಲ್ದಾರ್‌ಗೆ ಗ್ರಾಮ ವಾಸ್ತವ್ಯ ವೇಳೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಇಂಡೋನೇಷ್ಯಾದಲ್ಲಿ ಭಾರೀ ಭೂಕಂಪ – 162 ಮಂದಿ ಸಾವು, 700ಕ್ಕೂ ಅಧಿಕ ಮಂದಿಗೆ ಗಾಯ

    ಇತ್ತೀಚಿನ ದಿನಗಳಲ್ಲಿ ರೈತರ ಮಕ್ಕಳಿಗಾಗಿ ಮದುವೆಯಾಗಲು ಹೆಣ್ಣು ಕೊಡೋದಕ್ಕೆ ನಿರಾಕರಿಸುತ್ತಿದ್ದಾರೆ. ನೌಕರಿ ಇದ್ದರೆ ಮಾತ್ರ ಕನ್ಯೆ ಕೊಡ್ತೀವಿ ಅಂತಿದ್ದಾರೆ. ಆದ್ದರಿಂದ ಸರ್ಕಾರ ರೈತರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ವಿನಂತಿ ಮಾಡಿದ್ದಾರೆ. ಇದನ್ನೂ ಓದಿ: ಚಳಿಗೆ ನಡುಗಿದ ಬೆಂಗಳೂರು – ಕಳೆದ 10 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು

    ಸರ್ಕಾರ ಅರಿವು ಕಾರ್ಯಕ್ರಮ ಮಾಡಿ ರೈತರ ಮಕ್ಕಳಿಗೆ ಕನ್ಯೆ ಕೊಡಿಸಿ, ಕೃಷಿಗೆ ಉತ್ತೇಜಿಸಬೇಕು. ರೈತ ದೇಶದ ಬೆನ್ನೆಲಬು ಅಂತಾರೆ, ಅನ್ನ ನೀಡಲು ರೈತ ಬೇಕು, ಹೀಗಾಗಿ ನಾವು ಕೃಷಿ ಅವಲಂಬಿಸಿದ್ದೇವೆ ಎಂದು ಕೋರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೋದಿ ನಿಜವಾದ ದೇಶಭಕ್ತ- `Make In India’ ಪರಿಕಲ್ಪನೆ ಹೊಗಳಿದ ರಷ್ಯಾ

    ಮೋದಿ ನಿಜವಾದ ದೇಶಭಕ್ತ- `Make In India’ ಪರಿಕಲ್ಪನೆ ಹೊಗಳಿದ ರಷ್ಯಾ

    ಮಾಸ್ಕೋ: ಮೋದಿ (Narendra Modi) ನಿಜವಾದ ದೇಶಭಕ್ತ ಎಂದಿರುವ ರಷ್ಯಾ (Russia) ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) `ಮೇಕ್ ಇನ್ ಇಂಡಿಯಾ’ (Make In India) ಪರಿಕಲ್ಪನೆಯನ್ನು ಶ್ಲಾಘಿಸಿದ್ದಾರೆ.

    ಮಾಸ್ಕೋ ಮೂಲದ ಚಿಂತಕರ ಚಾವಡಿಯ ವಾಲ್ಡೈ ಚರ್ಚಾ ಕ್ಲಬ್‌ನ ವಾರ್ಷಿಕ ಭಾಷಣದಲ್ಲಿ ಮಾತನಾಡಿದ ಪುಟಿನ್, ಮೋದಿ ನಿಜವಾದ ದೇಶಭಕ್ತ. ತಮ್ಮ ನಾಯಕತ್ವದಲ್ಲಿ ದೇಶಕ್ಕೆ ಬಹಳಷ್ಟು ಕೆಲಸ ಮಾಡಿದ್ದಾರೆ. ಅವರ ಮೇಕ್ ಇನ್ ಇಂಡಿಯಾ ಪರಿಕಲ್ಪನೆಯು ಆರ್ಥಿಕ ಮತ್ತು ನೈತಿಕವಾಗಿ ಮುಖ್ಯವಾಗಿದೆ. ಅಲ್ಲದೇ ಭಾರತದ ಬೆಳವಣಿಗೆಯು ಬ್ರಿಟಿಷ್ ವಸಾಹತುಗಳ ಅಭಿವೃದ್ಧಿಯ ಫಲಿತಾಂಶವನ್ನು ನೀಡುತ್ತದೆ ಎಂದರಲ್ಲದೇ ಭಾರತ (India) ಮತ್ತು ರಷ್ಯಾ (Russia) ನಡುವಿನ ಸಂಬಂಧವನ್ನು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಡೀಲ್ ಮುಗಿಯುವ ಮುನ್ನವೇ ಟ್ವಿಟ್ಟರ್ ಚೀಫ್ ಎಂದು ಘೋಷಿಸಿಕೊಂಡ ಮಸ್ಕ್

    ಭಾರತದ ಕೃಷಿಗೆ (Agriculture) ಬಹಳ ಮುಖ್ಯವಾದ ರಸಗೊಬ್ಬರ ಪೂರೈಕೆ ಹೆಚ್ಚಿಸುವಂತೆ ಪ್ರಧಾನಿ ಮೋದಿ ಕೇಳಿಕೊಂಡಿದ್ದಾರೆ. ನಾವೂ 7.6 ರಷ್ಟು ಪ್ರಮಾಣವನ್ನು ಹೆಚ್ಚಿಸಿದ್ದೇವೆ. ಇದರಿಂದ ಕೃಷಿ ಉತ್ಪನ್ನಗಳ ವ್ಯಾಪಾರವು ದ್ವಿಗುಣಗೊಂಡಿದೆ. ಇದು ಭಾರತ ಮತ್ತು ರಷ್ಯಾ ನಡುವಿನ ಹಲವು ದಶಕಗಳ ನಿಕಟ ಮಿತ್ರ ಸಂಬಂಧದಿಂದ ಆಧಾರವಾಗಿದೆ. ನಾವು ಎಂದಿಗೂ ಯಾವುದೇ ಕಷ್ಟಕರ ಸಮಸ್ಯೆಗಳನ್ನು ಹೊಂದಿರಲಿಲ್ಲ. ಬದಲಾಗಿ ಪರಸ್ಪರ ಬೆಂಬಲಿಸಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ರಸ್ತೆ ಅಪಘಾತ – ಮೂವರು ಭಾರತೀಯರು ಸೇರಿದಂತೆ 20 ಮಂದಿ ಸಾವು

    ರಷ್ಯಾ ಕಳೆದ ಫೆಬ್ರವರಿ 24ರಂದು ಉಕ್ರೇನ್ ಮೇಲೆ ಆಕ್ರಮಣ ಆರಂಭಿಸಿತು. ತನ್ನ ಪ್ರಾಬಲ್ಯ ಸಾಧಿಸುವುದಕ್ಕೆ ಮುಂದಾಯಿತು. ಆದರೆ ಕೆಲವು ಪಾಶ್ಚಿಮಾತ್ಯ ರಾಷ್ಟ್ರಗಳು ಅಸ್ತಿತ್ವಕ್ಕಾಗಿ ಅಪಾಯಕಾರಿ ಹಾದಿ ಹಿಡಿಯುತ್ತಿವೆ. ಇದು ಮುಂದೆ ರಕ್ತಸಿಕ್ತಕ್ಕೆ ಕಾರಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕ್ಯಾನ್ಸರ್‌ಗೆ ಹೆದರಿ ಗಲ್ಫ್‌ನಿಂದ ಮರಳಿದ ವ್ಯಕ್ತಿಯ ಕೈಹಿಡಿಯಿತು ಕೃಷಿ

    ಕ್ಯಾನ್ಸರ್‌ಗೆ ಹೆದರಿ ಗಲ್ಫ್‌ನಿಂದ ಮರಳಿದ ವ್ಯಕ್ತಿಯ ಕೈಹಿಡಿಯಿತು ಕೃಷಿ

    ಮಂಗಳೂರು: ಕ್ಯಾನ್ಸರ್ ಕಾಯಿಲೆ ಬಂತೆಂದ್ರೆ ಇನ್ನು ಸಾವೇ ಗತಿ ಎನ್ನುವವರೇ ಹೆಚ್ಚು. ಆದರೆ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಮೂಡಬಿದ್ರೆಯ ವ್ಯಕ್ತಿಯೋರ್ವರು ಕ್ಯಾನ್ಸರನ್ನೇ (Cancer) ಗೆದ್ದು ತೋರಿಸಿದ್ದಾರೆ.

    ಹೌದು… ಕ್ಯಾನ್ಸರ್ ಜೊತೆ ಸೆಣಸಾಡುತ್ತಿರುವ ಅದೇಷ್ಟೋ ಸಾವಿರ ಮಂದಿಗೆ ಇವರು ಸ್ಫೂರ್ತಿದಾಯಕವಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ (Moodbidri) ತಾಲೂಕಿನ ಪುಚ್ಚೆಮೊಗರು ಗ್ರಾಮದ ನಿವಾಸಿ ಥಾಮಸ್ ಗ್ರೇಜರಿ ರೆಬೆಲ್ಲೋ ಹುಟ್ಟಿನಿಂದಲೇ ಕೃಷಿಕರಲ್ಲ. ಗಲ್ಫ್‌ ರಾಷ್ಟ್ರದಲ್ಲಿ ಒಳ್ಳೆಯ ಉದ್ಯೋಗದಲ್ಲಿದ್ದು ಅಲ್ಲೇ ಸೆಟಲ್ ಆಗುವ ಯೋಚನೆಯಲ್ಲಿದ್ದರು. ಆದರೆ ಗಂಟಲಿನ ಕ್ಯಾನ್ಸರ್ ಇವರ ಯೋಜನೆಯನ್ನೇ ಬದಲಾಯಿಸಿತು. ಕ್ಯಾನ್ಸರ್ ದೇಹದೊಳಗೆ ಆಕ್ರಮಿಸುತ್ತಾ ಹೋಯಿತು.

    ಸತ್ರೆ ಜನ್ಮಭೂಮಿಯಲ್ಲೇ ಸಾಯೋಣ ಅಂತಾ ಹಳ್ಳಿಗೆ ಬಂದ ಥಾಮಸ್ ಗ್ರೇಜರಿ ರೆಬೆಲ್ಲೋ ಅವರಲ್ಲಿ ಊರಿಗೆ ಬಂದ ನಂತರ ಕಂಡಿದ್ದು ಅಚ್ಚರಿಯ ಬದಲಾವಣೆ. ಕತ್ತರಿಸಲ್ಪಟ್ಟ ಗಂಟಲು, ದೇಹದೊಳಗೆ ಕಾಡುತ್ತಿದ್ದ ಆರೋಗ್ಯದ ಸಮಸ್ಯೆಯ ನಡುವೆಯೇ ಕಾಡುತ್ತಿದ್ದ ಒಂಟಿತನವನ್ನು ದೂರಮಾಡಲು ಕೃಷಿ (Agriculture) ಕೆಲಸಕ್ಕೆ ಕೈ ಹಾಕಿದರು.

    ದಿನ ಕಳೆದಂತೆ ಥಾಮಸ್ ಅವರ ಆರೋಗ್ಯದಲ್ಲಿ ಕಂಡಿದ್ದೇ ಅಚ್ಚರಿಯ ಬದಲಾವಣೆಯಾಯಿತು. ಸಾವಿನ ದಿನ ಎಣಿಸುತ್ತಿದ್ದ ಥಾಮಸ್ ತನ್ನ ಒಂದೂವರೆ ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಾ ಮಾಡುತ್ತಾ ಕ್ಯಾನ್ಸರ್ ಜೊತೆ ಹೋರಾಡುತ್ತಾ ಹನ್ನೆರಡು ವರ್ಷಗಳೇ ಕಳೆದುಹೋಗಿದೆ. ಅವರ ಪತ್ನಿ ಮತ್ತು ಮಗ ವಿದೇಶದಲ್ಲಿದ್ದು, ಥಾಮಸ್ ಮಾತ್ರ ಊರಲ್ಲೇ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ತಕ್ಕ ಪ್ರಾಶಸ್ತ್ಯ ಸಿಗುತ್ತಿಲ್ಲ: ಶರದ್ ಪವಾರ್ ಬೇಸರ

    ಅಡಿಕೆ, ತೆಂಗು, ತರಕಾರಿ ಕೃಷಿ ಮಾಡುತ್ತಾ ಮಾಡುತ್ತಾ ತನ್ನೊಳಗಿರುವ ಮಹಾಮಾರಿಯನ್ನೇ ಮರೆತು ಸ್ಫೂರ್ತಿಯಾಗಿದ್ದಾರೆ. ಪ್ರಾರಂಭದಲ್ಲಿ ಕ್ಯಾನ್ಸರ್ ಜೊತೆಗೆ ಸಕ್ಕರೆ ಖಾಯಿಲೆ ಕೂಡಾ ಕಾಡಿದ್ದರೂ ಈಗ ಅದೂ ಸಂಪೂರ್ಣ ಮಾಯವಾಗಿದೆ. ಈ ಬಗ್ಗೆ ಥಾಮಸ್ ಗ್ರೇಜರಿ ರೆಬೆಲ್ಲೊ ಮಾತನಾಡಿ, ಕ್ಯಾನ್ಸರ್‌ ರೋಗಿಗಳು ಧೃತಿಗೆಡದೆ ಕೃಷಿ ಮಾಡಿ. ಕೃಷಿಯಲ್ಲಿ ಖುಷಿ ಪಡಿ ಎನ್ನುವ ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ ಕ್ಯಾನ್ಸರ್ ರೋಗಕ್ಕೆ ಲಕ್ಷಾಂತರ ರೂ. ಖರ್ಚು ಮಾಡಿ ಹೋರಾಡುವವರಿಗಿಂತ ಥಾಮಸ್ ಭಿನ್ನವಾಗಿ ಕಾಣುತ್ತಾರೆ. ಇದನ್ನೂ ಓದಿ: ಕೊಡಗಿನಲ್ಲಿ 3ನೇ ಸಾಕಾನೆ ಶಿಬಿರ ಲೋಕಾರ್ಪಣೆ – ಹಾರಂಗಿ ವಿಶೇಷತೆ ಏನು?

    Live Tv
    [brid partner=56869869 player=32851 video=960834 autoplay=true]

  • ಭಾರೀ ಮಳೆಗೆ ಪಂಜ-ಉಳ್ಯ ಜಲಾವೃತ – ಆತಂಕದಲ್ಲಿ ಕೃಷಿಕರು

    ಭಾರೀ ಮಳೆಗೆ ಪಂಜ-ಉಳ್ಯ ಜಲಾವೃತ – ಆತಂಕದಲ್ಲಿ ಕೃಷಿಕರು

    ಮಂಗಳೂರು: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಗಳೂರು ಹೊರವಲಯದ ಕಿನ್ನಿಗೋಳಿ ಲೊಕೆಮ್ರಾಲ್ ಗ್ರಾ.ಪಂ. ವ್ಯಾಪ್ತಿಯ ಉಳ್ಯ, ಮೊಗಪಾಡಿ, ಕೊಯ್ಕುಡೆ, ಬೈಲಗುತ್ತು ಪಂಜ ಸಂಪೂರ್ಣ ಜಲಾವೃತವಾಗಿದ್ದು ಭತ್ತದ ಕೃಷಿಗೆ ವ್ಯಾಪಕ ಹಾನಿಯುಂಟಾಗಿದೆ.

    ನಂದಿನಿ ನದಿಯ ಕವಲು ಇಲ್ಲಿ ಹರಿಯುತ್ತಿದ್ದು ಮಳೆಯಿಂದಾಗಿ ಉಕ್ಕಿ ತೋಟಕ್ಕೆ ನೆರೆ ನೀರು ಹರಿಯುತ್ತಿದೆ. ಉಪ್ಪು ನೀರು ನುಗ್ಗಿ ಗದ್ದೆ, ತೋಟಕ್ಕೆ ಹಾನಿಯಾಗಿದ್ದು ಕೃಷಿಕರು ಕಂಗಾಲಾಗಿದ್ದಾರೆ. ಬೈಲಗುತ್ತು, ಪಂಜ ತಗ್ಗು ಪ್ರದೇಶವಾಗಿದ್ದು ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಹೊಳೆಯಂತಾಗಿದೆ. ಇಲ್ಲಿನ ಜನರು ಭತ್ತ, ತೆಂಗು, ಕಂಗು ಕೃಷಿಯನ್ನೇ ಜೀವನಾಧಾರವನ್ನಾಗಿ ಮಾಡಿಕೊಂಡಿದ್ದು ನೆರೆಯಿಂದಾಗಿ ತುಂಬಲಾರದ ನಷ್ಟವುಂಟಾಗಿದೆ. ಇದನ್ನೂ ಓದಿ: ಜುಲೈ 5ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ

    ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸೂಕ್ತ ಪರಿಹಾರ ಒದಗಿಸಬೇಕೆಂದು ಕೃಷಿಕ ಚಂದ್ರಹಾಸ್ ಶೆಟ್ಟಿ ಮೊಗಪಾಡಿ ಅವರು ಮನವಿ ಮಾಡಿದ್ದಾರೆ. ಸ್ಥಳಕ್ಕೆ ಕೆಮ್ರಾಲ್ ಗ್ರಾ.ಪಂ. ಉಪಾಧ್ಯಕ್ಷ ಸುರೇಶ್ ಪಂಜ, ಸದಸ್ಯ ಕೇಶವ ಪೂಜಾರಿ ಪಂಜ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಪ್ರತಿಭಟನೆ – ಮೂವರು ಕಾರ್ಯಕರ್ತರ ಪ್ಯಾಂಟ್‍ಗೆ ತಗುಲಿದ ಬೆಂಕಿ

    Live Tv

  • ಕೃಷಿ ಕ್ಷೇತ್ರ ಹಾಳುಗೆಡವಿದ್ದೇ ಮೋದಿ ಸಾಧನೆ: ಸಿದ್ದು ಕಿಡಿ

    ಕೃಷಿ ಕ್ಷೇತ್ರ ಹಾಳುಗೆಡವಿದ್ದೇ ಮೋದಿ ಸಾಧನೆ: ಸಿದ್ದು ಕಿಡಿ

    ಬೆಂಗಳೂರು: ಕೃಷಿ ಕ್ಷೇತ್ರವನ್ನು ಸಂಪೂರ್ಣ ಹಾಳುಗೆಡವಿ ಅದನ್ನು ಕಾರ್ಪೊರೇಟ್ ಬಂಡವಾಳಗಾರರ ಕಾಲಿಗೆ ತಳ್ಳಿರುವುದೇ ಪ್ರಧಾನಿ ನರೇಂದ್ರ ಮೋದಿ ಅವರ 8 ವರ್ಷದ ಸಾಧನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

    ಈ ಕುರಿತು ಪತ್ರಿಕಾ ಹೇಳಿರುವ ಅವರು, ಕಳೆದ 8 ವರ್ಷಗಳಲ್ಲಿ ಮೋದಿಯವರು ಹೇಳಿದ ಸುಳ್ಳುಗಳಿಗೆ ಲೆಕ್ಕವೇ ಇಲ್ಲ. ಅವುಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವುದೂ ಸೇರಿದೆ. ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಘೋಷಣೆ ಮಾಡಿದ್ದ ಮೋದಿ ಅದನ್ನು ಸಂಪೂರ್ಣ ಹಾಳುಗೆಡವಿದ್ದಾರೆ. ಇದನ್ನೂ ಓದಿ: ಪರಿಷ್ಕೃತ ಪಠ್ಯ ರದ್ದು ಮಾಡಿ, ರೋಹಿತ್ ಚಕ್ರತೀರ್ಥರನ್ನು ವಜಾಗೊಳಿಸಬೇಕು – ಸಿದ್ದರಾಮಯ್ಯ ಆಗ್ರಹ

    ನ್ಯಾಷನಲ್ ಮಾದರಿ ಸಮೀಕ್ಷೆ ಪ್ರಕಾರ 2015-16 ರಲ್ಲಿ ಪ್ರತಿ ರೈತ ಕುಟುಂಬದ ವಾರ್ಷಿಕ ಆದಾಯ 96,703 ರೂಪಾಯಿಗಳಷ್ಟಿತ್ತು ಎಂದು ಅಂದಾಜಿಸಲಾಗಿದೆ. ಅಂದರೆ ಒಂದು ಕೃಷಿ ಕುಟುಂಬದ ತಿಂಗಳ ಸರಾಸರಿ ಆದಾಯ 8,000 ರೂಪಾಯಿ ಎಂದಾಯಿತು. ಈ 8 ಸಾವಿರ ರೂಪಾಯಿಗಳಲ್ಲಿ ಸರಾಸರಿ ಶೇ.43 ರಷ್ಟು ಕೂಲಿಯಿಂದ ಬರುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಇದನ್ನೂ ಓದಿ: ಬೀದರ್ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್, ಆಂದೋಲನ ಶ್ರೀಗಳಿಗೆ ಬ್ಯಾನ್

    2022 ರಲ್ಲಿ ಇದು ದ್ವಿಗುಣಗೊಳ್ಳಬೇಕಾದರೆ 2015-16ರ ಬೆಲೆಗಳಲ್ಲಿ ಲೆಕ್ಕ ಹಾಕಿದರೆ ಸರಾಸರಿ ಪ್ರತಿ ರೈತ ಕುಟುಂಬದ ತಿಂಗಳ ಆದಾಯ 16,000 ರೂಪಾಯಿಗಳಿಗೆ ಏರಿಕೆಯಾಗಬೇಕು. ವರ್ಷಕ್ಕೆ 1,72,694 ರೂಪಾಯಿಗಳಷ್ಟಾಗಬೇಕು. ಇಂದಿನ ಬೆಲೆಗಳಲ್ಲಿ, ಹಣದುಬ್ಬರ ಸೇರಿಸಿ ಲೆಕ್ಕ ಹಾಕಿದರೆ 2.5 ರಿಂದ 2.8 ಲಕ್ಷ ರೂಪಾಯಿಗಳಾಗಬೇಕು ಅಥವಾ ತಿಂಗಳಿಗೆ 22 ರಿಂದ 25 ಸಾವಿರ ರೂಪಾಯಿಗಳಾಗಬೇಕು ಎಂದು ತಜ್ಞರು ಹೇಳುತ್ತಿದ್ದಾರೆ. ರೈತರ ಆದಾಯ ದ್ವಿಗುಣಗೊಳ್ಳಬೇಕಾಗಿದ್ದರೆ 2016 ರಿಂದಲೆ ನಿರಂತರವಾಗಿ ಕೃಷಿ ಕ್ಷೇತ್ರದ ಬೆಳವಣಿಗೆ ಪ್ರತಿ ವರ್ಷ ಸುಮಾರು ಶೇ.10.5 ರಷ್ಟು ಇರಬೇಕಿತ್ತು. ಆದರೆ ವಾಸ್ತವವಾಗಿ ಬೆಳವಣಿಗೆಯಾಗಿದ್ದು ಕೇವಲ ಶೇ.2.88 ರಷ್ಟು ಮಾತ್ರ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

    NARENDRA MODI

    2019-20 ರಲ್ಲಿ ಎನ್‌ಎಸ್‌ಎಸ್‌ಒ ಹಲವು ಆಯಾಮಗಳಲ್ಲಿ ಸಮೀಕ್ಷೆ ಮಾಡಿತು. ಆದರೆ ಸಮೀಕ್ಷೆಯ ವರದಿಗಳನ್ನು ಗುಪ್ತವಾಗಿ ಪರಿಶೀಲಿಸಿದ ಕೇಂದ್ರ ಸರ್ಕಾರಕ್ಕೆ, ಆ ವರದಿಯು ತನಗೆ ವ್ಯತಿರಿಕ್ತವಾಗಿದೆ ಎಂದಬು ಪರಿಗಣಿಸಿಯೇ ವರದಿ ಬಿಡುಗಡೆ ಮಾಡಲಿಲ್ಲ. ಆದರೂ ಮಾಧ್ಯಮಗಳಿಗೆ ವರದಿ ಸೋರಿಕೆಯಾಯಿತು. ಸರ್ಕಾರದ ಡೇಟಾ ನೋಡಿದರೂ ಕೂಡ ಮನಮೋಹನಸಿಂಗ್ ಅವರ ಯುಪಿಎ ಅವಧಿಯಲ್ಲಿ ಕೃಷಿಯ ಜಿವಿಎ ಬೆಳವಣಿಗೆ ದರ ಸರಾಸರಿ ಶೇ. 4.6 ಕ್ಕಿಂತ ಹೆಚ್ಚಿಗೆ ಇತ್ತು. ಮೋದಿಯವರ ಕಾಲದಲ್ಲಿ ಕೇವಲ ಶೇ. 3.3ಕ್ಕೆ ಇಳಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

    SIDDARAMAIAH

    ಇಷ್ಟೆಲ್ಲಾ ಆದರೂ ಮೋದಿ ಅವರ ಸರ್ಕಾರ ಜಾಹಿರಾತು ಕೊಟ್ಟು ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ಕೃಷಿಕರ ಉಳಿವಿಗಾಗಿ ಎಂಎಸ್‌ಪಿ ಹೆಚ್ಚಿಸಿದ್ದೇವೆ ಎಂದು ಹೇಳುತ್ತಾರೆ. ಇದನ್ನೂ ಓದಿ: ಹಿಂದೂಗಳ ರಕ್ಷಣೆ ಹೆಸರಲ್ಲಿ ಅಧಿಕಾರಕ್ಕೇರಿ, ಹಿಂದೂ ವಿರೋಧಿ ವರ್ತನೆ ಸರಿಯಲ್ಲ: ಮುತಾಲಿಕ್

    ಮನಮೋಹನಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ 2004 ರಿಂದ 2013-14ರ ವೇಳೆಗೆ ಹಲವಾರು ಕೃಷಿ ಉತ್ಪನ್ನಗಳಿಗೆ ಶೇ.204ರ ವರೆಗೆ ಬೆಂಬಲ ಬೆಲೆ ಹೆಚ್ಚಿಸಿದ್ದರು. ಭತ್ತದ ಮೇಲೆ ನೀಡುವ ಎಂಎಸ್‌ಪಿ ಶೇ.126 ರಷ್ಟು ಹೆಚ್ಚು ಮಾಡಿದ್ದರು. ಮೋದಿಯವರು ಈ 8 ವರ್ಷಗಳಲ್ಲಿ ಭತ್ತದ ಎಂಎಸ್‌ಪಿ ಯನ್ನು ಶೇ.44 ರಷ್ಟು ಹೆಚ್ಚಿಸಿದ್ದಾರೆ ಎಂದು ಹೇಳಿದ್ದಾರೆ.

    ತೊಗರಿಯ ಬೆಂಬಲ ಬೆಲೆಯನ್ನು ಮನಮೋಹನಸಿಂಗರು ಶೇ.204 ರಷ್ಟು ಹೆಚ್ಚಿಸಿದ್ದರೆ ಮೋದಿಯವರು ಶೇ.44 ರಷ್ಟು ಹೆಚ್ಚಿಸಿದ್ದಾರೆ. ಬಿಳಿ ಜೋಳದ ಮೇಲೆ ಶೇ.178 ರಷ್ಟು ಹೆಚ್ಚಿಸಿದ್ದರೆ ಮೋದಿಯವರ ಸರ್ಕಾರ ಕೇವಲ ಶೇ.78 ರಷ್ಟು ಹೆಚ್ಚಿಸಿದೆ. ಶೇಂಗಾ ಪರಿಸ್ಥಿತಿಯೂ ಅಷ್ಟೆ ಯುಪಿಎ ಸರ್ಕಾರ ಶೇ.163 ರಷ್ಟು ಹೆಚ್ಚಿಸಿತ್ತು. ಬಿಜೆಪಿ ಸರ್ಕಾರ ಕೇವಲ ಶೇ. 31.5 ರಷ್ಟು ಹೆಚ್ಚಿಸಿದೆ. ಹೆಸರು ಕಾಳಿನ ಮೇಲಿನ ಎಂಎಸ್‌ಪಿಯನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ಶೇ.196 ರಷ್ಟು ಹೆಚ್ಚಿಸಿದ್ದರೆ ಬಿಜೆಪಿ ಸರ್ಕಾರ ಕೇವಲ ಶೇ.56 ರಷ್ಟು ಹೆಚ್ಚಿಸಿದೆ ಎಂದು ಮಾಹಿತಿ ನೀಡಿದ್ದಾರೆ.

    ಕಳೆದ ವರ್ಷದವರೆಗೆ 47 ಲಕ್ಷ ರೈತ ಕುಟುಂಬಗಳಿಗೆ ತಿಂಗಳಿಗೆ ನೀಡಿದ್ದು ಕೇವಲ 166 ರೂಪಾಯಿ ಮಾತ್ರ. ಇದು ಬಿಜೆಪಿಯವರ ಸಾಧನೆ. ಕೃಷಿಕರ ಆದಾಯ 8 ವರ್ಷಗಳಲ್ಲಿ ದ್ವಿಗುಣಗೊಳ್ಳುವ ಬದಲು ಅವರ ಸಾಲದ ಪ್ರಮಾಣ ದ್ವಿಗುಣಗೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ತೆಲಂಗಾಣ ಸಿಎಂ ಅಸ್ತು

    ಭತ್ತ ಖರೀದಿ ಕೇಂದ್ರ ಪ್ರಾರಂಭಿಸಲು ತೆಲಂಗಾಣ ಸಿಎಂ ಅಸ್ತು

    ಹೈದರಾಬಾದ್: ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ತಿಳಿಸಿದರು.

    ಬುಧವಾರ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಹಾರ ಭದ್ರತೆಗೆ ಉತ್ತೇಜನ ನೀಡಲು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಸಾಂವಿಧಾನಿಕ ಸುರಕ್ಷತೆ ಒದಗಿಸುವ `ಸಂಯೋಜಿತ ನೂತನ ಕೃಷಿ ನೀತಿ’ ರೂಪಿಸಲು ಶೀಘ್ರವೇ ಅರ್ಥಶಾಸ್ತ್ರಜ್ಞರು ಹಾಗೂ ರೈತ ಮುಖಂಡರ ಸಭೆ ಕರೆಯುವುದಾಗಿಯೂ ಅವರು ಹೇಳಿದರು. ಇದನ್ನೂ ಓದಿ: ಝೊಮ್ಯಾಟೊ ಡೆಲಿವರಿ ಬಾಯ್ ಆದ ಶಿಕ್ಷಕ- ಕಥೆಯೇ ರೋಚಕ!

    paddy 2

    ತೆಲಂಗಾಣ ರಾಷ್ಟ್ರೀಯ ಸಮಿತಿ (TRS) ಸರ್ಕಾರವು ರೈತರ ಉತ್ಪನ್ನಗಳನ್ನು ಸಂಗ್ರಹಿಸುವ ಜವಾಬ್ದಾರಿಯನ್ನು ಕೇಂದ್ರ ಸರ್ಕಾರಕ್ಕೆ ನೆನಪಿಸಲು ಪ್ರಯತ್ನಿಸಿದೆ. ಏಕೆಂದರೆ, ನರೇಂದ್ರ ಮೋದಿ ಸರ್ಕಾರವು ಕಾರ್ಪೋರೇಟ್‌ಗಳು ಹಾಗೂ ಬ್ಯಾಂಕುಗಳಿಗೆ ವಂಚಿಸಿದವರ 10.50 ಲಕ್ಷ ಕೋಟಿ ರೂ.ಗಳ ಸಾಲ ಮನ್ನಾ ಮಾಡಿದೆ. ಆದರೆ ಒಂದು ರಾಜ್ಯದ ರೈತರ ಹಿತದೃಷ್ಟಿಯಿಂದ 3,500 ಕೋಟಿ ರೂ. ಹಣವನ್ನು ಭರಿಸಲು ಕೇಂದ್ರ ಸಿದ್ಧವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ತೆಲಂಗಾಣದಲ್ಲಿ ರಬಿ ಹಂಗಾಮಿನಲ್ಲಿ ಉತ್ಪಾದಿತವಾದ ಭತ್ತವನ್ನು ಬೇಸಿಗೆಯಲ್ಲಿ ಕೊಯ್ಲು ಮಾಡುವುದರಿಂದ ಕಡಿಮೆ ಪ್ರಮಾಣದ ಅಕ್ಕಿಯ ಉತ್ಪಾದನೆಯಾಗಿದ್ದು 3,500 ಕೋಟಿ ನಷ್ಟವಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕನಿಕರವಿಲ್ಲ. ಆದರೆ ನಮ್ಮ ಸರ್ಕಾರ ರೈತರನ್ನು ಕಂಗಾಲಾಗಲು ಬಿಡುವುದಿಲ್ಲ. ಇಂದಿನಿಂದಲೇ ಎಲ್ಲ ಗ್ರಾಮಗಳಲ್ಲೂ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕೆಜಿಗೆ 350ರೂ. ದಾಟಿದ ನಿಂಬೆಹಣ್ಣಿನ ಬೆಲೆ – ಜನ ಸಾಮಾನ್ಯರು ತತ್ತರ

    Reliance paddy agrulture farm bill (1)
    ಸಾಂದರ್ಭಿಕ ಚಿತ್ರ

    ಬಿಜೆಪಿ ಕೇಂದ್ರ ಸರ್ಕಾರ ದೇಶಕ್ಕೆ ಹಲವು ರೀತಿಯಲ್ಲಿ ನೋವುಂಟು ಮಾಡಿದೆ, ಕೋಮುವಾದವನ್ನು ಪ್ರಚೋದಿಸುತ್ತಿದೆ ಎಂದು ಬುದ್ಧಿಜೀವಿಗಳು ಅಭಿಪ್ರಾಯಪಟ್ಟಿದ್ದಾರೆ. ಬೆಲೆ ಏರಿಕೆ ಮತ್ತು ಇತರ ನಕಾರಾತ್ಮಕ ಅಂಶಗಳ ನಡುವೆಯೂ ರಾಜಕೀಯ ಲಾಭಕ್ಕಾಗಿ `ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವನ್ನು ಬಳಸಿಕೊಂಡಿದೆ ಎಂದು ಕಿಡಿಕಾರಿದರು.