Tag: Ahamadabad

  • ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ ಪ್ರಕರಣ – 7 ಅಧಿಕಾರಿಗಳು ಅಮಾನತು

    ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ ಪ್ರಕರಣ – 7 ಅಧಿಕಾರಿಗಳು ಅಮಾನತು

    – ಹೈಕೋರ್ಟ್‌ ತರಾಟೆ ಬಳಿಕ ಎಚ್ಚೆತ್ತ ಗುಜರಾತ್‌ ಸರ್ಕಾರ

    ಗಾಂಧಿನಗರ: ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಮೇ 25ರಂದು ಗೇಮಿಂಗ್‌ ಝೋನ್‌ನಲ್ಲಿ ನಡೆದ ಅಗ್ನಿ ಅವಘಡ (Gaming Zone Fire Accident) ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ ಸರ್ಕಾರ (Gujarat Govt) ಸೋಮವಾರ 7 ಅಧಿಕಾರಿಗಳನ್ನು ಅಮಾನತುಗೊಳಿಸಿದೆ.

    ಅಗತ್ಯ ಅನುಮೋದನೆಗಳಿಲ್ಲದೇ ಗೇಮಿಂಗ್‌ ಝೋನ್‌ ಕಾರ್ಯನಿರ್ವಹಿಸಲು ಅನುಮತಿ ನೀಡಿದ್ದು ಅಧಿಕಾರಿಗಳ ನಿರ್ಲಕ್ಷ್ಯವನ್ನು ತೋರಿಸಿದೆ. ಹಾಗಾಗಿ ವಿಶೇಷ ತನಿಖಾ ತಂಡ (SIT) ಸಲ್ಲಿಸಿದ ವರದಿ ಆಧರಿಸಿ 7 ಅಧಿಕಾರಿಗಳನ್ನ ಅಮಾನತುಗೊಳಿಸಲಾಗಿದೆ. ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಕೆಲವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಅವರನ್ನ ಪತ್ತೆ ಮಾಡಿ ಬಂಧಿಸಲು 17 ತಂಡಗಳನ್ನ ರಚಿಸಲಾಗಿದೆ ಎಂದು ಗೃಹ ಸಚಿವ ಹರ್ಷ ಸಾಂಘ್ವಿ (Harsh Sanghavi) ತಿಳಿಸಿದ್ದಾರೆ. ಇದನ್ನೂ ಓದಿ: ಅದಾನಿ ಗ್ರೂಪ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡದಂತೆ ಮೋದಿ, ರಾಹುಲ್‌ಗೆ ನಿರ್ದೇಶಿಸಿ: ಕೋರ್ಟ್‌ಗೆ ಅರ್ಜಿ ಸಲ್ಲಿಕೆ

    ಹೈಕೋರ್ಟ್‌ ತರಾಟೆ ಬಳಿಕ ಎಚ್ಚೆತ್ತ ಸರ್ಕಾರ:
    ರಾಜ್‌ಕೋಟ್‌ನ ಟಿಆರ್‌ಪಿ ಗೇಮಿಂಗ್ ಝೋನ್‌ನಲ್ಲಿ ಸಂಭವಿಸಿದ ಅಗ್ನಿಅವಘಡಕ್ಕೆ ಸಂಬಂಧಿಸಿದಂತೆ ಮುನ್ಸಿಪಲ್ ಕಾರ್ಪೊರೇಷನ್ ಅನ್ನು ಗುಜುರಾತ್ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಅಧಿಕಾರಿಗಳ ನಿರ್ಲಕ್ಷ್ಯ ಆಡಳಿತ ಯಂತ್ರದ ಮೇಲಿನ ನಂಬಿಕೆಯನ್ನು ಪ್ರಶ್ನಿಸುವಂತಾಗಿದೆ ಎಂದು ಹೇಳಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾ. ಬಿರೇನ್ ವೈಷ್ಣವ್ ಮತ್ತು ನ್ಯಾ.ದೇವನ್ ದೇಸಾಯಿ ಅವರನ್ನೊಳಗೊಂಡ ವಿಶೇಷ ಪೀಠ, ಗೇಮಿಂಗ್ ವಲಯ ನಿರ್ವಾಹಕರು ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್‌ನಿಂದ (Muncipal Corporation) ಕಡ್ಡಾಯ ಅನುಮತಿಗಳು ಮತ್ತು ಪರವಾನಗಿಗಳನ್ನು ತೆಗೆದುಕೊಂಡಿಲ್ಲ ಎಂದು ವರದಿಯಾಗಿದೆ. ಅಧಿಕಾರಿಗಳು ಏನು ನಿದ್ದೆ ಮಾಡುತ್ತಿದ್ದಾರ ಎಂದು ಖಾರವಾಗಿ ಪ್ರಶ್ನಿಸಿತ್ತು. ಕೋರ್ಟ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೆಲವೇ ಗಂಟೆಗಳಲ್ಲಿ ಸರ್ಕಾರ 7 ಅಧಿಕಾರಿಗಳನ್ನ ಅಮಾನತುಗೊಳಿದೆ. ಇದನ್ನೂ ಓದಿ: ಮುಂಬೈ ತಾಜ್‌ ಹೋಟೆಲ್‌, ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ – ಉತ್ತರ ಪ್ರದೇಶದಲ್ಲಿ ಲೊಕೇಶನ್‌ ಪತ್ತೆ!

    ಡಿಎನ್‌ಎ ಮೂಲಕ ಗುರುತು ಪತ್ತೆ ಕಾರ್ಯ:
    ಅಗ್ನಿ ದುರಂತಕ್ಕೆ ಸಿಕ್ಕಿ ಸಜೀವ ಹೊಂದಿರುವವರ ಗುರುತನ್ನು ಡಿಎನ್‌ಎ ಮೂಲಕ ಪತ್ತೆ ಮಾಡುವ ಕಾರ್ಯಕ್ಕೆ ಸರ್ಕಾರ ಮುಂದಾಗಿದೆ. ಶನಿವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ 7 ಅಪ್ರಾಪ್ತರು ಸೇರಿ 28 ಮಂದಿ ಸಾವನ್ನಪ್ಪಿದ್ದರು. ಈ ಪೈಕಿ ಒಬ್ಬರ ಮೃತದೇಹ ಮಾತ್ರ ನಾಪತ್ತೆಯಾಗಿದ್ದು, ಉಳಿದ ಮೃತದೇಹಗಳನ್ನ ಹೊರತೆಗೆಯಲಾಗಿದೆ. ಸೋಮವಾರವಾದ ಇಂದು ಟಿಆರ್‌ಪಿ ಗೇಮಿಂಗ್ ಝೋನ್ ಫೈರ್ ಸೈಟ್‌ನಿಂದ ಪತ್ತೆಯಾದ ಕನಿಷ್ಠ 5 ಸುಟ್ಟ ದೇಹಗಳ ಗುರುತುಗಳನ್ನು ಡಿಎನ್‌ಎ ಮೂಲಕ ದೃಢಪಡಿಸಲಾಗಿದೆ. ಉಳಿದ ಮಾದರಿಗಳ ಪರೀಕ್ಷೆ ನಡೆಯುತ್ತಿದ್ದು, ಶೀಘ್ರವೇ ಎಲ್ಲ ಮೃತ ದೇಹಗಳ ಗುರುತು ಪತ್ತೆಯಾಗಲಿದೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಾಚಾರವಲ್ಲ – ಜಮೀರ್‌ಗೆ ಸುಪ್ರೀಂ ರಿಲೀಫ್

  • ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ ಪ್ರಕರಣ – ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

    ಗೇಮಿಂಗ್ ಝೋನ್‌ನಲ್ಲಿ ಅಗ್ನಿ ಅವಘಡ ಪ್ರಕರಣ – ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

    ಅಹಮದಾಬಾದ್: ರಾಜ್‌ಕೋಟ್‌ನ (Rajkot) ಟಿಆರ್‌ಪಿ ಗೇಮಿಂಗ್ ಝೋನ್‌ನಲ್ಲಿ (Gaming Zone) ಸಂಭವಿಸಿದ ಅಗ್ನಿಅವಘಡಕ್ಕೆ (Fire Accident) ಸಂಬಂಧಿಸಿದಂತೆ ಮುನ್ಸಿಪಲ್ ಕಾರ್ಪೊರೇಷನ್ (Muncipal Corporation) ಅನ್ನು ಗುಜುರಾತ್ ಹೈಕೋರ್ಟ್ (Gujarat Highcourt) ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯ ಆಡಳಿತ ಯಂತ್ರದ ಮೇಲಿನ ನಂಬಿಕೆಯನ್ನು ಪ್ರಶ್ನಿಸುವಂತಾಗಿದೆ ಎಂದು ಹೇಳಿದೆ.

    ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಬಿರೇನ್ ವೈಷ್ಣವ್ ಮತ್ತು ನ್ಯಾ.ದೇವನ್ ದೇಸಾಯಿ ಅವರನ್ನೊಳಗೊಂಡ ವಿಶೇಷ ಪೀಠ, ಗೇಮಿಂಗ್ ವಲಯ ನಿರ್ವಾಹಕರು ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್‌ನಿಂದ ಕಡ್ಡಾಯ ಅನುಮತಿಗಳು ಮತ್ತು ಪರವಾನಗಿಗಳನ್ನು ತೆಗೆದುಕೊಂಡಿಲ್ಲ ಎಂದು ವರದಿಯಾಗಿದೆ. ಅಧಿಕಾರಿಗಳು ಏನು ನಿದ್ದೆ ಮಾಡುತ್ತಿದ್ದಾರ ಎಂದು ಖಾರವಾಗಿ ಪ್ರಶ್ನಿಸಿದೆ. ಇದನ್ನೂ ಓದಿ: ನಕ್ಸಲರಿಂದ ನಿರಂತರ ಬೆದರಿಕೆ- ಪದ್ಮಶ್ರೀ ಹಿಂದಿರುಗಿಸಲು ಹೇಮಚಂದ್ ಮಾಂಝಿ ನಿರ್ಧಾರ

    ನಮ್ಮ ಆದೇಶದ ನಾಲ್ಕು ವರ್ಷಗಳ ನಂತರವೂ ಅಗ್ನಿ ಸುರಕ್ಷತೆಯ ವಿಷಯದಲ್ಲಿ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಆರ್‌ಎಂಸಿ ಹೇಗೆ ಹೊಣೆಯಾಗುವುದಿಲ್ಲ? ಇದಕ್ಕೆ ಅಧಿಕಾರಿಗಳು ಹೊಣೆ. ಈ ಬಗ್ಗೆ ಪರಿಶೀಲನೆ ನಡೆಯದಿರುವುದು ಯಾರ ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿತು. ಇದನ್ನೂ ಓದಿ: ಇವಿಎಂ ಯಂತ್ರಗಳು ಏನು ಆಗದೇ ಹೋದರೆ ಸರಿ, ಜನ ನಮ್ಮ ಪರವಾಗಿದ್ದಾರೆ: ಡಿಕೆಶಿ

    ಗೇಮಿಂಗ್ ಝೋನ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಒಂಭತ್ತು ಮಕ್ಕಳು ಸೇರಿ 28 ಮಂದಿ ಸಾವನ್ನಪ್ಪಿದ್ದರು. ಘಟನೆ ಬಳಿಕ ಮಾಲೀಕ ಸೇರಿ ಮೂವರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಆರು ಅಧಿಕಾರಿಗಳನ್ನು ಅಮಾನತುಗೊಳಿಸಿ ಗುಜರಾತ್ ಸರ್ಕಾರ ಸೋಮವಾರ ಆದೇಶ ಹೊರಡಿಸಿತ್ತು. ಇದನ್ನೂ ಓದಿ:  ಶಾರ್ಟ್‌ಸರ್ಕ್ಯೂಟ್‌ನಿಂದ ಎಲೆಕ್ಟ್ರಿಕ್‌ ಚಾರ್ಜಿಂಗ್ ಬ್ಯಾಟರಿ ಅಂಗಡಿ ಧಗಧಗ

  • ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಬಿಜೆಪಿಗೆ ಸೇರ್ಪಡೆ

    ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಬಿಜೆಪಿಗೆ ಸೇರ್ಪಡೆ

    ಅಹಮದಾಬಾದ್: ಟೀಮ್ ಇಂಡಿಯಾದ ಆಲ್ ರೌಂಡರ್ ರವೀಂದ್ರ ಜಡೇಜಾ ಅವರ ಪತ್ನಿ ಹಾಗೂ ಕರ್ಣಿ ಸೇನೆಯ ಮಹಿಳಾ ಘಟಕದ ಅಧ್ಯಕ್ಷೆಯಾಗಿರುವ ರಿವಾಬಾ ಜಡೇಜಾ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

    ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ರಿವಾಬಾ ಜಡೇಜಾ, ಬಿಜೆಪಿ ಸೇರಲು ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಸ್ಫೂರ್ತಿ. ಕೇವಲ ನಮ್ಮ ಸಮುದಾಯಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ನನ್ನ ಸೇವೆಸಲ್ಲಿಸಲು ಬಿಜೆಪಿ ಸೇರಿದ್ದರಿಂದ ನನಗೆ ಅವಕಾಶ ದೊರಕಿದೆ ಅಂತ ನಾನು ನಂಬಿದ್ದೇನೆ ಎಂದಿದ್ದಾರೆ.

    ಈ ಸಂದರ್ಭದಲ್ಲಿ ಗುಜರಾತಿನ ಕೃಷಿ ಸಚಿವ ಆರ್.ಸಿ ಫಾಲ್ದು ಹಾಗೂ ಸಂಸದರಾದ ಪೂನಮ್ ಮದಂ ಅವರು ಉಪಸ್ಥಿತರಿದ್ದರು. ಕರ್ಣಿ ಸೇನೆಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ರಿವಾಬಾ ಅವರು ಬಹಳಷ್ಟು ಹೆಸರು ಗಳಿಸಿದ್ದು, ಈಗ ರಾಜಕೀಯಕ್ಕೆ ಕಾಲಿಟ್ಟು ದೇಶಕ್ಕೆ ಸೇವೆ ಸಲ್ಲಿಸಲು ಮುಂದಾಗಿದ್ದಾರೆ.

    ಜಡೇಜಾ ಅವರ ಜನಪ್ರಿಯತೆ ನಿಮಗೆ ಚುನಾವಣೆಗೆ ಲಾಭವಾಗುತ್ತದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಡೇಜಾ ಅವರು ನಮ್ಮ ರಜಪೂತ್ ಸಮುದಾಯಕ್ಕೆ ಮಾತ್ರ ಹೆಮ್ಮೆಯಲ್ಲ, ಯುವ ಜನಾಂಗಕ್ಕೂ ಹೆಮ್ಮೆ. ಆದ್ರೆ ಬಿಜೆಪಿ ಸೇಪಡೆಯಾಗುವ ವಿಚಾರ ನನ್ನ ವೈಯಕ್ತಿಕ ನಿರ್ಧಾರ. ಇದರಿಂದ ಸಮಾಜದಲ್ಲಿ ನನ್ನನ್ನು ನಾನು ಗುರುತಿಸುಕೊಳ್ಳುವುದಕ್ಕೆ ನೆರವಾಗುತ್ತದೆ. ಮಹಿಳಾ ಸಬಲಿಕರಣಕ್ಕೆ ಒಂದು ಉದಾಹರಣೆಯಾಗುತ್ತದೆ. ನಾನು ದೇಶಕ್ಕೆ ಮತ್ತು ನನ್ನ ಸಮುದಾಯಕ್ಕೆ ಸೇವೆ ಸಲ್ಲಿಸಲು ಬಿಜೆಪಿ ಸೇರಿದ್ದೇನೆ ಎಂದಿದ್ದಾರೆ.

    ಆದ್ರೆ ನನ್ನ ಪತಿ ಸೆಲೆಬ್ರಿಟಿಯಾಗಿರುವುದರಿಂದ ಅವರು ಯುತ್ ಐಕಾನ್. ಇದರಿಂದ ಬಹಳಷ್ಟು ಯುವಕರು ಕೂಡ ಬಿಜೆಪಿಯತ್ತ ಮುಖಮಾಡುವ ಸಾಧ್ಯತೆಯಿದೆ ಎಂದು ರಿವಾಬಾ ಅಭಿಪ್ರಾಯ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪತ್ನಿಯ ಖಾಸಗಿ ಅಂಗಕ್ಕೆ ಬಿಸಿ ಚಾಕು ಇಟ್ಟ ಕ್ರೂರ ಪತಿ!

    ಪತ್ನಿಯ ಖಾಸಗಿ ಅಂಗಕ್ಕೆ ಬಿಸಿ ಚಾಕು ಇಟ್ಟ ಕ್ರೂರ ಪತಿ!

    ಅಹಮದಾಬಾದ್: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗವನ್ನು ಬಿಸಿ ಚಾಕುವಿನಿಂದ ಸುಟ್ಟು ವಿಕೃತಿ ಮೆರೆದಿರುವ ಘಟನೆ ಗುಜರಾತ್‍ನ ರಾಯಗಢ ಪ್ರದೇಶದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಶುಕ್ರವಾರದಂದು 40 ವರ್ಷದ ಮಹಿಳೆ ತನ್ನ ಸ್ನೇಹಿತನ ಜೊತೆ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಳು. ಈ ವೇಳೆ ಮನೆಗೆ ಬಂದ ಪತಿ, ಪತ್ನಿ ಫೋನ್‍ನಲ್ಲಿ ಮಾತನಾಡುತ್ತಿರುವುದನ್ನು ಕೇಳಿಸಿಕೊಂಡಿದ್ದಾನೆ. ಬಳಿಕ ಇಬ್ಬರ ನಡುವೆ ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಟ್ಟು ಜಗಳವಾಡಿದ್ದಾನೆ. ಆಗ ತಾನು ಏನು ತಪ್ಪು ಮಾಡಿಲ್ಲ ಅಂತ ಪತ್ನಿ ಮಕ್ಕಳ ಮೇಲೆ ಪ್ರಮಾಣ ಮಾಡಿದಾಗ ಇನ್ನಷ್ಟು ಕೋಪಗೊಂಡ ಪತಿ ಆಕೆಗೆ ಬೆಲ್ಟ್‍ನಿಂದ ಹಿಗ್ಗಾಮುಗ್ಗಾ ಥಳಿಸಿ ಹಲ್ಲೆ ಮಾಡಿದ್ದಾನೆ.

    ಥಳಿತದಿಂದ ಪತ್ನಿ ಪ್ರಜ್ಞೆತಪ್ಪಿ ಬಿದ್ದಿದ್ದಾಳೆ. ಆಗ ಆಕೆಯ ಖಾಸಗಿ ಅಂಗಕ್ಕೆ ಚಾಕುವೊಂದನ್ನು ಬಿಸಿ ಮಾಡಿ ಇಟ್ಟು ಚಿತ್ರಹಿಂಸೆ ನೀಡಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ಮರುದಿನ ಮತ್ತೆ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಪತಿ ಮನೆಯಿಂದ ಹೊರ ಹೋಗ್ತಿದ್ದಂತೆ ಅಲ್ಲಿಂದ ತಪ್ಪಿಸಿಕೊಂಡ ಪತ್ನಿ, ಸಂಬಂಧಿಕರಿಗೆ ಕರೆ ಮಾಡಿ ವಿಷಯ ತಿಳಿಸಿ ಬಳಿಕ ಆಸ್ಪತ್ರೆ ಸೇರಿದ್ದಾಳೆ.

    ಈ ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ವಿಕೃತಿ ಮೆರೆದ ಪತಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಪಾಪಿ ಪತಿ ಪರಾರಿಯಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಾಹುಬಲಿ ಸಿನಿಮಾವನ್ನು ಅಧ್ಯಯನ ಮಾಡಲಿದ್ದಾರೆ ಐಐಎಂ ವಿದ್ಯಾರ್ಥಿಗಳು!

    ಬಾಹುಬಲಿ ಸಿನಿಮಾವನ್ನು ಅಧ್ಯಯನ ಮಾಡಲಿದ್ದಾರೆ ಐಐಎಂ ವಿದ್ಯಾರ್ಥಿಗಳು!

    ಅಹಮದಾಬಾದ್: ಭಾರತೀಯ ಚಿತ್ರರಂಗದಲ್ಲಿ ಹಲವು ದಾಖಲೆಗಳನ್ನು ಬರೆದಿರುವ ಬಾಹುಬಲಿ ಈಗ ಶೈಕ್ಷಣಿಕ ವಲಯದಲ್ಲಿ ಅಧ್ಯಯನ ವಿಷಯವಾಗಿ ಆಯ್ಕೆಯಾಗಿದೆ.

    ಬಾಹುಬಲಿ ಸಿನಿಮಾ ಭಾರತದ ಇತಿಹಾಸದಲ್ಲಿ ಸಂಚಲವನ್ನೇ ಮೂಡಿಸಿತ್ತು. ರಾಜಮೌಳಿ ನಿರ್ದೇಶನದ ಬಾಹಬಲಿ 2 2017ರ ಏಪ್ರಿಲ್ 28 ರಂದು ತೆಲುಗು, ತಮಿಳು, ಹಿಂದಿ, ಮಲೆಯಾಳಂ ಭಾಷೆಯಲ್ಲಿ ಬಿಡುಗಡೆಯಾಗಿತ್ತು. ಮೊದಲ ದಿನವೇ 100 ಕೋಟಿ ರೂ. ಗಳಿಕೆ ಪಡೆದಿತ್ತು. ಒಂದು ವಾರದಲ್ಲಿ 300 ಕೋಟಿ ರೂ. ದಾಟಿ ಮುನ್ನುಗ್ಗಿತ್ತು. ಅಷ್ಟೇ ಅಲ್ಲೇ 1825 ಕೋಟಿ ರೂ. ಕಲೆಕ್ಷನ್ ಗಳಿಸಿ ಮಾಡಿತ್ತು.

    ಈಗ ಬಾಹುಬಲಿ ಸಿನಿಮಾವನ್ನು ಬ್ಯುಸಿನೆಸ್ ವಿದ್ಯಾರ್ಥಿಗಳು ಅಧ್ಯಯನ ಮಾಡಲಿದ್ದಾರೆ. ಮರುಕಟ್ಟೆಯಲ್ಲಿ ಬಾಹುಬಲಿ ಯಶಸ್ಸು ವಿಚಾರವನ್ನು ಇಟ್ಟುಕೊಂಡು ಅಹಮದಾಬಾದ್ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೆಜ್‍ಮೆಂಟ್‍ನ ವಿದ್ಯಾರ್ಥಿಗಳು ಅಧ್ಯಯನ ನಡೆಸಲಿದ್ದಾರೆ.

    ಸಮಕಾಲಿನ ಚಿತ್ರೋದ್ಯಮದ ವ್ಯಾಸಂಗಕ್ಕಾಗಿ ಮತ್ತು ಮಾರುಕಟ್ಟೆ ದೃಷ್ಟಿಕೋನದಿಂದ ಅಧ್ಯಯನ ಮಾಡಲು ಬಾಹುಬಲಿ 2 ಸಿನಿಮಾವನ್ನು ಆಯ್ಕೆ ಮಾಡಲಾಗಿದೆ. ಅಷ್ಟೆ ಅಲ್ಲದೇ ಸಿನಿಮಾ ರಂಗದ ಸವಾಲಿನ ಬಗ್ಗೆಯೂ ವಿದ್ಯಾರ್ಥಿಗಳು ಅಧ್ಯಯನ ನಡೆಸಲಿದ್ದಾರೆ ಎಂದು ಐಐಎಂ ಹೇಳಿದೆ.

    ಭಾರತದಲ್ಲಿ ಬಾಹುಬಲಿ 2 2017ರ ಗೂಗಲ್ ಸರ್ಚ್ ನಲ್ಲಿ ಅಗ್ರಸ್ಥಾನ ಸಿಕ್ಕಿದ್ದು, 2017 ರಲ್ಲಿ ಟ್ವಿಟರ್ ಟಾಪ್ ಟ್ರೆಂಡಿಗ್ ಟಾಪಿಕ್ ಆಗಿತ್ತು. ಅಷ್ಟೇ ಅಲ್ಲದೇ ಅತಿ ಖಾಸಗಿ ವಾಹಿನಿಯಲ್ಲಿ ಅತಿ ಹೆಚ್ಚು ಟಿಆರ್‍ಪಿ ರೇಟಿಂಗ್ ಪಡೆದುಕೊಂಡ ಹಿಂದಿ ಚಿತ್ರ ಎನ್ನುವ ಹೆಗ್ಗಳಿಕೆಗೆ ಬಾಹುಬಲಿ ಪಾತ್ರವಾಗಿತ್ತು. ಇದನ್ನು ಓದಿ: ಭಾರತೀಯ ಚಿತ್ರರಂಗದಲ್ಲಿ ಒಂದೇ ದಿನ 10 ದಾಖಲೆಗಳನ್ನು ಬರೆದ ಬಾಹುಬಲಿ-2: ಇಲ್ಲಿದೆ ಪೂರ್ಣ ಪಟ್ಟಿ

    ಎಸ್.ರಾಜಮೌಳಿ ನಿರ್ದೇಶನದ ಸರಣಿ ಬಾಹುಬಲಿ ಚಲನಚಿತ್ರ 150 ಕೋಟಿ ರೂ. ಬಜೆಟ್‍ನಲ್ಲಿ ನಿರ್ಮಾಣಗೊಂಡಿತ್ತು. `ಬಾಹುಬಲಿ ದಿ ಬಿಗಿನಿಂಗ್’ 2015 ರಲ್ಲಿ ಬಿಡುಗಡೆಗೊಂಡಿತ್ತು. ಪ್ರಭಾಸ್, ಅನುಷ್ಕಾ ಶೆಟ್ಟಿ, ರಾಣಾ ದಗ್ಗುಬಾಟಿ, ರಮ್ಯಕೃಷ್ಣ, ಸತ್ಯರಾಜ್ ಅಭಿನಯಿಸಿದ್ದರು. ಬಾಹುಬಲಿ ಭಾಗ 2 ಚಿತ್ರಕ್ಕೆ ನಿರ್ಮಾಣಕ್ಕೆ 150 ಕೋಟಿ ರೂ. ವೆಚ್ಚವಾಗಿದ್ದು, ಬಾಕ್ಸ್ ಆಫೀಸ್ ನಲ್ಲಿ 1725 ಕೋಟಿ ರೂ. ಕಲೆಕ್ಷನ್ ಮಾಡಿತ್ತು. ಇದನ್ನು ಓದಿ: ಟಿವಿ ಟಿಆರ್‍ಪಿಯಲ್ಲೂ ಹೊಸ ದಾಖಲೆ ಬರೆದ ಬಾಹುಬಲಿ