Tag: Ahmedabad

  • ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಕಾರು ಡಿಕ್ಕಿ – ಅಪ್ರಾಪ್ತ ಚಾಲಕನಿಗೆ ಸ್ಥಳೀಯರಿಂದ ಧರ್ಮದೇಟು

    ರಸ್ತೆಯಲ್ಲಿ ಆಟವಾಡುತ್ತಿದ್ದ ಬಾಲಕಿಗೆ ಕಾರು ಡಿಕ್ಕಿ – ಅಪ್ರಾಪ್ತ ಚಾಲಕನಿಗೆ ಸ್ಥಳೀಯರಿಂದ ಧರ್ಮದೇಟು

    – ಅದೃಷ್ಟವಶಾತ್‌ ಬಾಲಕಿ ಪಾರು

    ಗಾಂಧಿನಗರ: ಅಹಮದಾಬಾದ್‌ನ (Ahmedabad) ನೋಬಲ್‌ನಗರದಲ್ಲಿ ಅಪ್ರಾಪ್ತನೊಬ್ಬ ಚಲಾಯಿಸುತ್ತಿದ್ದ ಕಾರು (Car) ಮೂರು ವರ್ಷದ ಬಾಲಕಿಗೆ (Accident) ಡಿಕ್ಕಿಯಾಗಿದೆ. ‌

    ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸರೆಯಾಗಿದ್ದು, ಬಾಲಕಿಗೆ ಕಾರಿನ ಮುಂಭಾಗ ಡಿಕ್ಕಿಯಾಗಿ ಕೆಳಕ್ಕೆ ಬಿದ್ದಿದ್ದಾಳೆ. ಅದೃಷ್ಟವಶಾತ್‌ ಬಾಲಕಿ ಕಾರಿನ ನಡು ಭಾಗದಲ್ಲಿ ಕೆಳಗೆ ಬಿದ್ದಿದ್ದಾಳೆ. ಕಾರು ಮುಂದೆ ಚಲಿಸುತ್ತಿದ್ದಂತೆ, ಹಿಂಬದಿಯಿಂದ ಎದ್ದು ನಡೆದು ಬಂದಿದ್ದಾಳೆ. ಈ ವೇಳೆ ಅಪ್ರಾಪ್ತ ಕಾರು ನಿಲ್ಲಿಸಿ ಬಾಲಕಿ ಬಳಿ ಬಂದಿದ್ದಾನೆ. ಇದನ್ನೂ ಓದಿ: ಟಿಪ್ಪರ್‌, ಇನ್ನೋವಾ ನಡುವೆ ಡಿಕ್ಕಿ – ಚಾಲಕ ಸಜೀವ ದಹನ

    ಸ್ಥಳಕ್ಕೆ ಬಂದ ಸ್ಥಳೀಯ ನಿವಾಸಿಗಳು ಬಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಕಪಾಳಮೋಕ್ಷ ಮಾಡಿದ್ದಾರೆ. ಬಾಲಕನಿಗೆ ಕಪಾಳಮೋಕ್ಷ ಮಾಡುವ ವೀಡಿಯೋ ವೈರಲ್‌ ಆಗಿದೆ. ಈ ಸಂಬಂಧ ಚಾಲಕನ ವಿರುದ್ಧ ಅಹಮದಾಬಾದ್ ಪೊಲೀಸರು ಬಿಎನ್ಎಸ್ ಸೆಕ್ಷನ್ 281, 125(ಎ), ಮತ್ತು ಮೋಟಾರು ವಾಹನ ಕಾಯ್ದೆ ಸೆಕ್ಷನ್ 177, 184, 181 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಕಾರಿನ ಕೀಗಳನ್ನು ಅಪ್ರಾಪ್ತರಿಗೆ ನೀಡಬಾರದು. ಅವರಿಗೆ ಸಿಗದಂತೆ ಇಡಬೇಕು ಎಂದು ಒಬ್ಬರು ಅಪಘಾತದ ವೀಡಿಯೋಗೆ ಕಾಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು ಪವಾಡಗಳು ಸಂಭವಿಸುತ್ತವೆ ಎಂಬುದಕ್ಕೆ ಈ ವೀಡಿಯೊ ಪುರಾವೆಯಾಗಿದೆ. ಆದರೆ ಪ್ರತಿ ಬಾರಿಯೂ ಅದು ಸಂಭವಿಸಲ್ಲ. ರಸ್ತೆ ಆಟದ ಮೈದಾನವಲ್ಲ, ಪೋಷಕರು ಯಾವಾಗಲೂ ಮಕ್ಕಳ ಮೇಲೆ ಕಣ್ಣಿಡಬೇಕು ಎಂದು ಬರೆದುಕೊಂಡಿದ್ದಾರೆ.

    ಮತ್ತೊಬ್ಬರು, ಅಪ್ರಾಪ್ತ ವಯಸ್ಕನಿಗೆ ಕಾರಿನ ಕೀ ಹೇಗೆ ಸಿಕ್ಕಿತು? ಅವನ ಪೋಷಕರನ್ನು ಶಾಶ್ವತವಾಗಿ ಜೈಲಿಗೆ ಹಾಕಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಬೆಳಗಾವಿ | ಭಿಕ್ಷೆ ಬೇಡುತ್ತಾ ರಸ್ತೆ ದಾಟುತ್ತಿದ್ದ ವೃದ್ಧನ ಮೇಲೆ ಹರಿದ ಲಾರಿ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

  • ಅಹಮದಾಬಾದ್‌ನಲ್ಲಿ ನಡೆಯಲಿದೆ 2030ರ ಕಾಮನ್‌ವೆಲ್ತ್‌ ಗೇಮ್ಸ್‌

    ಅಹಮದಾಬಾದ್‌ನಲ್ಲಿ ನಡೆಯಲಿದೆ 2030ರ ಕಾಮನ್‌ವೆಲ್ತ್‌ ಗೇಮ್ಸ್‌

    ಲಂಡನ್‌: 2030ರ ಕಾಮನ್‌ವೆಲ್ತ್‌ ಗೇಮ್ಸ್‌ ಗುಜರಾತಿನ ಅಹಮದಾಬಾದ್‌ನಲ್ಲಿ (Ahmedabad)  ನಡೆಯಲಿದೆ.  2030ರ ಶತಮಾನೋತ್ಸವದ ಕಾಮನ್‌ವೆಲ್ತ್ ಕ್ರೀಡಾಕೂಟ (Commonwealth Games 2030) ಆಯೋಜನೆ ಮಾಡಲು ಕಾಮನ್‌ವೆಲ್ತ್ ಗೇಮ್ಸ್‌ನ ಕಾರ್ಯನಿರ್ವಾಹಕ ಮಂಡಳಿ ಅಹಮದಾಬಾದ್‌ ನಗರವನ್ನು ಶಿಫಾರಸು ಮಾಡಿದೆ.

    2030 ರ ಗೇಮ್ಸ್‌ ಆಯೋಜನೆಗೆ ನೈಜೀರಿಯಾ ತನ್ನ ರಾಜಧಾನಿ ಅಬುಜಾ ನಗರವನ್ನು ಬಿಡ್‌ಗೆ ಕಳುಹಿಸಿತ್ತು. ಆದರೆ ಅಬುಜಾ ನಗರದಲ್ಲಿ 2034ರ ಗೇಮ್ಸ್‌ ನಡೆಯುವ ಸಾಧ್ಯತೆಯಿದೆ.   ಕುರಿತು ಅಂತಿಮ ನಿರ್ಧಾರವು ನವೆಂಬರ್ 26 ರಂದು ಗ್ಲಾಸ್ಗೋದಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟಡ ಮಹಾಸಭೆಯಲ್ಲಿ ಪ್ರಕಟವಾಗಲಿದೆ.

    ಇದನ್ನೂ ಓದಿ:  ವಿಂಡೀಸ್‌ 2-0 ವೈಟ್‌ವಾಶ್‌ – ಭಾರತಕ್ಕೆ 7 ವಿಕೆಟ್‌ಗಳ ಜಯ; ಗಿಲ್‌ ನಾಯಕತ್ವದಲ್ಲಿ ಮೊದಲ ಸರಣಿ ಗೆಲುವು

    ಕಾಮನ್‌ವೆಲ್ತ್ ಗೇಮ್ಸ್‌ನ ಮಧ್ಯಂತರ ಅಧ್ಯಕ್ಷರಾದ ಡಾ. ಡೊನಾಲ್ಡ್ ರುಕರೆ ಮಾತನಾಡಿ, 2030 ರ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸಲು ಭಾರತ ಮತ್ತು ನೈಜೀರಿಯಾಗಳು ತೋರಿದ ಪ್ರಸ್ತಾಪಕ್ಕೆ ನಾವು ಕೃತಜ್ಞರಾಗಿದ್ದೇವೆ. ಎರಡೂ ನಗರಗಳ ಪ್ರಸ್ತಾಪಗಳು ಸ್ಪೂರ್ತಿದಾಯಕವಾಗಿದ್ದವು. ನಮ್ಮ ಶತಮಾನೋತ್ಸವ ಕ್ರೀಡಾಕೂಟವನ್ನು ನಾವು ಎದುರು ನೋಡುತ್ತಿದ್ದು, ಗ್ಲ್ಯಾಸ್ಗೋದಲ್ಲಿ ನಡೆಯುವ ಸಾಮಾನ್ಯ ಸಭೆಯಲ್ಲಿ ನಮ್ಮ ಸದಸ್ಯರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

    ಈ ಹಿಂದೆ 2010 ರಲ್ಲಿ ಭಾರತ ದೆಹಲಿಯಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆಯೋಜನೆ ಮಾಡಿತ್ತು. 2036 ರ ಒಲಿಂಪಿಕ್ಸ್‌ ಆಯೋಜನೆಗೆ ಭಾರತ ಈಗಾಗಲೇ ಬಿಡ್‌ ಸಲ್ಲಿಸಿದೆ.

  • ವಿಂಡೀಸ್‌ ವಿರುದ್ಧ ಇನ್ನಿಂಗ್ಸ್ & 140 ರನ್‌ಗಳ ಭರ್ಜರಿ ಗೆಲುವು – WTC ಅಂಕಪಟ್ಟಿಯಲ್ಲಿ 3ನೇ ಸ್ಥಾನ ಕಾಯ್ದುಕೊಂಡ ಭಾರತ

    ವಿಂಡೀಸ್‌ ವಿರುದ್ಧ ಇನ್ನಿಂಗ್ಸ್ & 140 ರನ್‌ಗಳ ಭರ್ಜರಿ ಗೆಲುವು – WTC ಅಂಕಪಟ್ಟಿಯಲ್ಲಿ 3ನೇ ಸ್ಥಾನ ಕಾಯ್ದುಕೊಂಡ ಭಾರತ

    – ಜಡ್ಡು ಆಲ್‌ರೌಂಡ್‌ ಆಟ; ಶುಭಮನ್‌ ಗಿಲ್‌ ನಾಯಕತ್ವದಲ್ಲಿ ತವರಿನಲ್ಲಿ ಮೊದಲ ಜಯ

    ಅಹಮದಾಬಾದ್: ಭಾರತೀಯ ಸ್ಪಿನ್ನರ್‌ಗಳ ಮೋಡಿ, ರವೀಂದ್ರ ಜಡೇಜಾ ಅವರ ಆಲ್‌ರೌಂಡ್‌ ಪ್ರದರ್ಶನಕ್ಕೆ ಪತರುಗುಟ್ಟಿದ ವೆಸ್ಟ್‌ ಇಂಡೀಸ್‌ (West Indies) ತಂಡ 2ನೇ ಇನ್ನಿಂಗ್ಸ್‌ನಲ್ಲಿ ಕೇವಲ 146 ರನ್‌ಗಳಿಗೆ ಆಲೌಟ್‌ ಆಗಿದೆ. ಪರಿಣಾಮ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Modi Stadium) ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ಇನ್ನೂ ಒಂದು ಇನ್ನಿಂಗ್ಸ್‌ ಬಾಕಿ ಇರುವಂತೆ 140 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

    ಮೊದಲ ಇನ್ನಿಂಗ್ಸ್‌ನಲ್ಲಿ 2ನೇ ದಿನದ ಅಂತ್ಯಕ್ಕೆ 448 ರನ್‌ ಗಳಿಸಿದ್ದ ಭಾರತ 286 ರನ್‌ಗಳ ಮುನ್ನಡೆ ಕಾಯ್ದುಕೊಂಡಿತ್ತು. 3ನೇ ದಿನ ಡಿಕ್ಲೇರ್‌ ಘೋಷಿಸುತ್ತಿದ್ದಂತೆ ಕಣಕ್ಕಿಳಿದ ವಿಂಡೀಸ್‌ 2ನೇ ಇನ್ನಿಂಗ್ಸ್‌ನಲ್ಲೂ ಭಾರತದ ಸ್ಪಿನ್ನರ್‌ಗಳ ದಾಳಿಗೆ ಪತರುಗುಟ್ಟಿತು. ಅಲಿಕ್ ಅಥನಾಜೆ 38 ರನ್‌, ಜಸ್ಟಿನ್ ಗ್ರೀವ್ಸ್ 25 ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ಅಲ್ಪಮೊತ್ತಕ್ಕೆ ನೆಲ ಕಚ್ಚಿದರು. ಹೀಗಾಗಿ ಮೂರನೇ ದಿನವೇ ಭಾರತ ಗೆಲುವು ಸಾಧಿಸಿತು. ಇದನ್ನೂ ಓದಿ: ಆಸೀಸ್‌ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್‌ ಕ್ಯಾಪ್ಟನ್‌; ರೋಹಿತ್‌, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?

    2ನೇ ಇನ್ನಿಂಗ್ಸ್‌ನಲ್ಲಿ ಭಾರತದ ಪರ ರವೀಂದ್ರ ಜಡೇಜಾ 4 ವಿಕೆಟ್‌ ಕಿತ್ತರೆ, ಸಿರಾಜ್‌ 3 ವಿಕೆಟ್‌, ಕುಲ್‌ದೀಪ್‌ ಯಾದವ್‌ 2 ವಿಕೆಟ್‌, ವಾಷಿಂಗ್ಟನ್‌ ಸುಂದರ್‌ 1 ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: ಆರ್‌ಸಿಬಿ ಸೇಲ್‌ – ಪುಣೆಯ ಶತಕೋಟ್ಯಧಿಪತಿ ಪೂನಾವಾಲಾ ತೆಕ್ಕೆಗೆ ಹೋಗುತ್ತಾ ಬೆಂಗಳೂರು?

    ಇದಕ್ಕೂ ಮುನ್ನ ಮೊದಲ ದಿನ 2 ವಿಕೆಟ್‌ ನಷ್ಟಕ್ಕೆ 121 ರನ್‌ ಗಳಿಸಿದ್ದ ಭಾರತ 2ನೇ ದಿನ 327 ರನ್‌ ಕಲೆ ಹಾಕಿತ್ತು. 2ನೇ ದಿನದ ಅಂತ್ಯಕ್ಕೆ 128 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 448 ರನ್‌ ಗಳಿಸಿತ್ತು. ಮೊದಲ ದಿನ 18 ರನ್‌ಗಳಿಸಿದ್ದ ನಾಯಕ ಶುಭಮನ್‌ ಗಿಲ್‌ 2ನೇ ದಿನ 50 ರನ್‌ ಹೊಡೆದರೆ ಕೆಎಲ್‌ ರಾಹುಲ್‌ 197 ಎಸೆತಗಳಲ್ಲಿ 12 ಬೌಂಡರಿಗಳ ನೆರವಿನಿಂದ ಶತಕ ಸಿಡಿಸಿ ಔಟಾದರು. ಧ್ರುವ್ ಜುರೆಲ್ 210 ಎಸೆತಗಳಲ್ಲಿ 15 ಬೌಂಡರಿ, 3 ಸಿಕ್ಸರ್‌ ಸಿಡಿಸಿ 125 ರನ್ ಗಳಿಸಿ ವಿಕೆಟ್‌ ಒಪ್ಪಿಸಿದರು. ಧ್ರುವ್ ಜುರೆಲ್ ಮತ್ತು ಜಡೇಜಾ 5ನೇ ವಿಕೆಟಿಗೆ 331 ಎಸೆತಗಳಲ್ಲಿ 206 ರನ್‌ ಜೊತೆಯಾಟವಾಡಿದ್ದರಿಂದ ಭಾರತ ಬೃಹತ್‌ ಮುನ್ನಡೆ ಸಾಧಿಸಿತು.

    ರವೀಂದ್ರ ಜಡೇಜಾ ಔಟಾಗದೇ 104 ರನ್‌ (176 ಎಸೆತ, 6 ಬೌಂಡರಿ, 5 ಸಿಕ್ಸ್‌) ಸಿಡಿಸಿದರೆ ವಾಷಿಂಗ್ಟನ್‌ ಸುಂದರ್‌ 9 ರನ್‌ಗಳಿಸಿ ಅಜೇಯರಾಗಿ ಉಳಿದಿದ್ದರು. ಇದನ್ನೂ ಓದಿ: ಯುದ್ಧವನ್ನ ಕ್ರೀಡೆಗೆ ಎಳೆದು ತರೋದು ಹತಾಶೆಯನ್ನ ತೋರಿಸುತ್ತೆ – ಮೋದಿ ಟ್ವೀಟ್‌ಗೆ ನಖ್ವಿ ರಿಯಾಕ್ಷನ್‌

    ವೆಸ್ಟ್‌ ಇಂಡೀಸ್‌ ವಿರುದ್ಧ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿದ ಬಳಿಕ ಭಾರತ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ 3ನೇ ಸ್ಥಾನ ಕಾಯ್ದುಕೊಂಡಿದೆ. 40 ಅಂಕಗಳು, 55.56 ಪಿಸಿಟಿಯೊಂದಿಗೆ (Percentage Of Points Earned) 3ನೇ ಸ್ಥಾನದಲ್ಲಿದ್ದರೆ, 36 ಅಂಕ 100 ಪಿಟಿಸಿ ಗಳಿಸಿರುವ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದೆ. 66.67 ಪಿಸಿಟಿಯೊಂದಿಗೆ ಶ್ರೀಲಂಕಾ 2ನೇ ಸ್ಥಾನದಲ್ಲಿದೆ.

  • Air India Plane Crash | ಪೈಲಟ್ ಕಡೆಯಿಂದ ಲೋಪ ಎಂಬ ಆರೋಪ ಬೇಜವಾಬ್ದಾರಿ ಎಂದ ಸುಪ್ರೀಂ

    Air India Plane Crash | ಪೈಲಟ್ ಕಡೆಯಿಂದ ಲೋಪ ಎಂಬ ಆರೋಪ ಬೇಜವಾಬ್ದಾರಿ ಎಂದ ಸುಪ್ರೀಂ

    – ಪ್ರಾಥಮಿಕ ತನಿಖಾ ವರದಿಯ ಕೆಲ ಅಂಶಗಳಿಗೆ ಸುಪ್ರೀಂ ಕೋರ್ಟ್ ಆಕ್ಷೇಪ
    – ಕೇಂದ್ರ ಮತ್ತು ಡಿಜಿಸಿಎ ಪ್ರತಿಕ್ರಿಯೆ ಕೇಳಿದ ಕೋರ್ಟ್

    ನವದೆಹಲಿ: ಜೂನ್ 12 ರಂದು ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತ (Air India Plane Crash)ದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಸಲ್ಲಿಸಿದ ಪ್ರಾಥಮಿಕ ವರದಿಯ ಕೆಲವು ಅಂಶಗಳ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.

    ದುರಂತದ ಬಗ್ಗೆ ಸ್ವತಂತ್ರ, ನ್ಯಾಯಯುತ ಮತ್ತು ಕಾಲಮಿತಿಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಕೇಂದ್ರ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA)ಗೆ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: Air India Crash | 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಆಗದಿದ್ದೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ ಬಹಿರಂಗ

    ಜುಲೈ 12 ರಂದು ಬಿಡುಗಡೆಯಾದ AAIB ಪ್ರಾಥಮಿಕ ವರದಿಯು ಪೈಲಟ್‌ಗಳ (Pilots) ಕಡೆಯಿಂದ ಲೋಪಗಳನ್ನು ಸೂಚಿಸಿದೆ ಎಂಬುದನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್. ಕೋಟಿಶ್ವರ್ ಸಿಂಗ್ ಅವರಿದ್ದ ದ್ವಿಸದಸ್ಯ ಪೀಠವು ಗಮನಿಸಿತು. ಈ ಅಂಶಗಳು ದುರದೃಷ್ಟಕರ, ಬೇಜವಾಬ್ದಾರಿ ಎಂದ ಪೀಠ ಈ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿತು.

    ಈ ವರದಿಯ ಉಲ್ಲೇಖಗಳನ್ನು ಪ್ರಶ್ನಿಸಿ ವಿಮಾನಯಾನ ಸುರಕ್ಷತೆ ಎನ್‌ಜಿಒ ಸೇಫ್ಟಿ ಮ್ಯಾಟರ್ಸ್ ಫೌಂಡೇಶನ್, ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಹೂಡಿತ್ತು. ಇಂಧನ-ಸ್ವಿಚ್ ದೋಷಗಳು ಮತ್ತು ವಿದ್ಯುತ್ ದೋಷಗಳಂತಹ ವ್ಯವಸ್ಥಿತ ವೈಪರೀತ್ಯಗಳನ್ನು ಕಡಿಮೆ ಮಾಡಿ, ಪೈಲಟ್ ದೋಷದ ನಿರೂಪಣೆ ಮಾಡಲಾಗಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಟೀಕಿಸಲಾಗಿತ್ತು. ಅಂತಾರಾಷ್ಟ್ರೀಯ ಪೈಲಟ್‌ ಒಕ್ಕೂಟ ಕೂಡ ಪ್ರಾಥಮಿಕ ತನಿಖಾ ವರದಿಯನ್ನು ಪ್ರಶ್ನಿಸಿತ್ತು.

    ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಅಪಘಾತ ಸಂಭವಿಸಿ 100ಕ್ಕೂ ಹೆಚ್ಚು ದಿನಗಳು ಕಳೆದಿದೆ. ಆದರೆ ಇದುವರೆಗೂ ಕೇವಲ ಪ್ರಾಥಮಿಕ ವರದಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಅಲ್ಲದೇ ವರದಿಯಲ್ಲಿ ಯಾವುದೇ ಅಪಘಾತಕ್ಕೆ ನಿಖರ ಕಾರಣ ಮತ್ತು ಮುನ್ನೆಚ್ಚರಿಕಾ ಕ್ರಮಗಳ ಉಲ್ಲೇಖ ಇರದಿರುವುದರಿಂದ, ಬೋಯಿಂಗ್ ವಿಮಾನಗಳಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರು ಇಂದು ಅಪಾಯದಲ್ಲಿದ್ದಾರೆ ಎಂದು ವಾದಿಸಿದರು. ಇದನ್ನೂ ಓದಿ: Air India Crash | ವಿಮಾನ ದುರಂತಕ್ಕೂ ಮುನ್ನವೇ ಏರ್‌ ಇಂಡಿಯಾಕ್ಕೆ ಎಚ್ಚರಿಕೆ ನೀಡಿತ್ತು ಅಮೆರಿಕ

    ಅಪಘಾತದ ತನಿಖೆಗಾಗಿ ರಚಿಸಲಾದ ಐವರು ಸದಸ್ಯರ ತಂಡವು, ವಾಯುಯಾನ ನಿಯಂತ್ರಕ ಡಿಜಿಸಿಎಯ ಮೂವರು ಸದಸ್ಯರನ್ನು ಹೊಂದಿದ್ದು, ಗಂಭೀರ ಹಿತಾಸಕ್ತಿ ಸಂಘರ್ಷವನ್ನು ಸೃಷ್ಟಿಸುತ್ತದೆ. ಅಪಘಾತಕ್ಕೆ ಯಾವ ಸಂಸ್ಥೆಯನ್ನು ಪ್ರಶ್ನಿಸಲಾಗುತ್ತಿದೆಯೋ ಅದೇ ಸಂಸ್ಥೆಯ ಸದಸ್ಯರು ಹೇಗೆ ತನಿಖೆ ನಡೆಸಲು ಸಾಧ್ಯ? ಎಂದು ಪ್ರಶ್ನಿಸಿದರಲ್ಲದೇ ಅಪಘಾತದ ನಿಜವಾದ ಕಾರಣ ಸ್ಪಷ್ಟಪಡಿಸಲು ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ ನಿಂದ ಡೇಟಾವನ್ನು ಪಡೆಯಲು ಭೂಷಣ್ ಕೋರಿದರು.

    ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು, ಅರ್ಜಿದಾರರ ವಾದ ಪುರಸ್ಕರಿಸಿತಾದರೂ, ಪ್ರಾಥಮಿಕ ತನಿಖೆಯ ಎಲ್ಲಾ ವರದಿಗಳನ್ನು ಸಾರ್ವಜನಿಕಗೊಳಿಸಿವುರಿಂದ ತನಿಖೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿತು. ಆದ್ರೆ ಅಪಘಾತಕ್ಕೆ ಪೈಲಟ್‌ ದೋಷ ನಿರೂಪಣೆಯನ್ನು ದ್ವಿಸದಸ್ಯ ಪೀಠ ದುರದೃಷ್ಟಕರ ಎಂದು ಬಣ್ಣಿಸಿತು.

    ಅಲ್ಲದೇ ಕೆಲವು ಮಾಹಿತಿಯನ್ನು ಪ್ರತಿಸ್ಪರ್ಧಿ ವಿಮಾನಯಾನ ಸಂಸ್ಥೆಗಳು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಗಮನಿಸಿದ ಪೀಠವು ಡಿಜಿಸಿಎ ಪ್ರತಿಕ್ರಿಯೆ ಕೇಳಿ ನೋಟಿಸ್‌ ಜಾರಿಗೊಳಿಸಲು ಸೂಚನೆ ನೀಡಿತು. ಇದನ್ನೂ ಓದಿ: Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್‌ ಬಾಕ್ಸ್ ಅಮೆರಿಕಕ್ಕೆ ರವಾನೆ

  • 2030ರ ಕಾಮನ್‌ವೆಲ್ತ್ ಗೇಮ್ಸ್‌ನ ಹರಾಜು ಪ್ರಕ್ರಿಯೆಗೆ ಕೇಂದ್ರ ಅಸ್ತು

    2030ರ ಕಾಮನ್‌ವೆಲ್ತ್ ಗೇಮ್ಸ್‌ನ ಹರಾಜು ಪ್ರಕ್ರಿಯೆಗೆ ಕೇಂದ್ರ ಅಸ್ತು

    ನವದೆಹಲಿ: 2030ರ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು (Commonwealth Games 2030) ಆಯೋಜಿಸುವ ಭಾರತದ ಹರಾಜು ಪ್ರಕ್ರಿಯೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

    ಹರಾಜು ಪ್ರಕ್ರಿಯೆ ಅಂಗೀಕಾರವಾದರೆ ಗುಜರಾತ್ ಸರ್ಕಾರಕ್ಕೆ ಅಗತ್ಯವಾದ ಅನುದಾನವನ್ನು ಮಂಜೂರು ಮಾಡಲು ಸಹ ಅನುಮೋದನೆ ನೀಡಿದೆ. ಪ್ರತಿಷ್ಠಿತ ಕಾಮನ್‌ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸಲು ಅಹಮದಾಬಾದ್ (Ahmedabad) ನಗರ ಯೋಗ್ಯವೆಂದು ಗುರುತಿಸಿದೆ. ವಿಶ್ವ ದರ್ಜೆಯ ಕ್ರೀಡಾಂಗಣಗಳು, ಅತ್ಯಾಧುನಿಕ ತರಬೇತಿ ಸೌಲಭ್ಯಗಳು ಮತ್ತು ಉತ್ಸಾಹಭರಿತ ಕ್ರೀಡಾ ಸಂಸ್ಕೃತಿಯಿಂದಾಗಿ ಅಹಮದಾಬಾದ್ ಅನ್ನು ಆತಿಥೇಯ ನಗರವಾಗಿ ಪ್ರಸ್ತಾಪಿಸಿದೆ. ಇದನ್ನೂ ಓದಿ: ಅನುಶ್ರೀ-ರೋಷನ್‌ ಹಳದಿ ಶಾಸ್ತ್ರದ ಫೋಟೋಸ್‌ ವೈರಲ್‌ – ಆ.28ರಂದು ಹಸೆಮಣೆ ಏರಲಿರುವ

    ಭಾರತವು ಕಾಮನ್‌ವೆಲ್ಸ್ ಕ್ರೀಡಾಕೂಟವನ್ನು ಆಯೋಜಿಸುವ ಬಗ್ಗೆ ಇದೇ ಮಾರ್ಚ್‌ನಲ್ಲಿ ಆಸಕ್ತಿ ವ್ಯಕ್ತಪಡಿಸಿತ್ತು. ಈ ಪ್ರಸ್ತಾವನೆಗೆ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅನುಮೋದನೆ ನೀಡಿತ್ತು. ಇದೀಗ ಕೇಂದ್ರ ಸಚಿವ ಸಂಪುಟವು ಸಹ ಸಮ್ಮತಿಯನ್ನು ಸೂಚಿಸಿದೆ. ಇದನ್ನೂ ಓದಿ: ಗದಗದ ಬಡ ಕುಟುಂಬಕ್ಕೆ `ಪಬ್ಲಿಕ್ ಬೆಳಕು’ – ಸಂಪೂರ್ಣ ಮನೆ ದುರಸ್ತಿ ಮಾಡಿಸಿಕೊಟ್ಟ ಉಸಿರು ಫೌಂಡೇಶನ್

    ಬಿಡ್ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದ್ದು, ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದಿಸಿದೆ.

  • ಎಷ್ಟೇ ಒತ್ತಡ ಬಂದ್ರೂ ತಡೆದುಕೊಳ್ಳುವ ಶಕ್ತಿ ನಮಗಿದೆ – ಟ್ರಂಪ್‌ಗೆ ಮೋದಿ ಖಡಕ್‌ ಸಂದೇಶ

    ಎಷ್ಟೇ ಒತ್ತಡ ಬಂದ್ರೂ ತಡೆದುಕೊಳ್ಳುವ ಶಕ್ತಿ ನಮಗಿದೆ – ಟ್ರಂಪ್‌ಗೆ ಮೋದಿ ಖಡಕ್‌ ಸಂದೇಶ

    – ಗುಜರಾತ್‌ನಲ್ಲಿದ್ದ ಕರ್ಫ್ಯೂ ದಿನಗಳನ್ನ ಇಂದಿನ ಯುವ ಪೀಳಿಗೆ ನೋಡಿಲ್ಲ; ಪಿಎಂ

    ನವದೆಹಲಿ: ರಷ್ಯಾದಿಂದ ತೈಲ ಖರೀದಿಸುತ್ತಿರುವ ಕಾರಣಕ್ಕೆ ಭಾರತದ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿಧಿಸಿರುವ ಶೇ.50ರಷ್ಟು ಸುಂಕ ಅಧಿಕೃತವಾಗಿ ಜಾರಿಯಾಗಲು ಇನ್ನೆರಡು ದಿನ ಬಾಕಿ ಇದೆ (ಇಂದು ಸೇರಿದಂತೆ). ಆದ್ರೆ ಗಡುವು ಮೀರುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ (Narendra Modi), ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರಿಗೆ ಖಡಕ್‌ ಅಂದೇಶ ಕೊಟ್ಟಿದ್ದಾರೆ.

    ಅಹಮದಾಬಾದ್‌ನಲ್ಲಿ (Ahmedabad) ನಡೆದ‌ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಮೋದಿ, ಅಮೆರಿಕದ ಒತ್ತಡದ ಹೊರತಾಗಿಯೂ ನಾವು ಪರಿಹಾರ ಕಂಡುಕೊಳ್ಳುತ್ತೇವೆ. ಒತ್ತಡದಿಂದ ಹೊರಬರುವುದಕ್ಕೆ ನಮ್ಮ ಸರ್ಕಾರ ಬೇರೆ ಮಾರ್ಗವನ್ನು ಕಂಡುಕೊಳ್ಳುತ್ತದೆ ಎಂದಿದ್ದಾರೆ.

    ಎಷ್ಟೇ ಒತ್ತಡ ಬಂದರೂ, ಅದನ್ನ ತಡೆದುಕೊಳ್ಳುವ ಶಕ್ತಿ ಬೆಳೆಸಿಕೊಂಡಿದ್ದೇವೆ. ನಮ್ಮ ದೇಶದ ಸಣ್ಣ ಉದ್ಯಮಿಗಳು, ರೈತರಿಗೆ ನಾನು ಭರವಸೆ ಕೊಡ್ತೇನೆ. ಈ ಮೋದಿಗೆ ನಿಮ್ಮ ಹಿತಾಸಕ್ತಿಗಳೇ ಮುಖ್ಯ. ನನ್ನ ಸರ್ಕಾರವು ಸಣ್ಣ ಉದ್ಯಮಿಗಳು, ರೈತರು ಮತ್ತು ಜಾನುವಾರು ಮಾಲೀಕರಿಗೆ ತೊಂದರೆ ಮಾಡಲು ಎಂದಿಗೂ ಅವಕಾಶ ಕೊಡಲ್ಲ. ಎಷ್ಟೇ ಒತ್ತಡ ಬಂದರೂ ಅದನ್ನು ತಡೆದು ಪರಿಹಾರ ಕಂಡುಕೊಳ್ಳುವ ಹಾಗೂ ನಮ್ಮ ಶಕ್ತಿ ಹೆಚ್ಚಿಸಿಕೊಳ್ಳುತ್ತೇವೆ ಎಂದು ಮೋದಿ ಗುಡುಗಿದ್ದಾರೆ.

    ಮುಂದುವರಿದು.. ʻಆತ್ಮನಿರ್ಭರ ಭಾರತʼ (Atmanirbhar Bharat) ಅಭಿಯಾನವು ಗುಜರಾತ್‌ನಿಂದ ಸಾಕಷ್ಟು ಶಕ್ತಿಯನ್ನ ಪಡೆಯುತ್ತಿದೆ. ಪ್ರತಿದಿನ ಇಲ್ಲಿ ಕರ್ಫ್ಯೂ ವಿಧಿಸಲಾಗುತ್ತಿತ್ತು. ಆದ್ರೆ ಆ ದಿನಗಳನ್ನ ಇಂದಿನ ಯುವ ಪೀಳಿಗೆ ನೋಡಿಲ್ಲ. ಇಲ್ಲಿ ವ್ಯಾಪಾರ ಮಾಡುವುದೂ ಕಷ್ಟಕರವಾಗಿತ್ತು. ಆದರಿಂದು ಅಹಮದಾಬಾದ್ ದೇಶದ ಸುರಕ್ಷಿತ ನಗರಗಳಲ್ಲಿ ಒಂದಾಗಿದೆ. ಇದರ ಹಿಂದೆ 2 ದಶಕಗಳ ಕಠಿಣ ಪರಿಶ್ರಮವಿದೆ ಎಂದು ಬಣ್ಣಿಸಿದರು.

    ಗುಜರಾತ್‌ನಲ್ಲಿ (Gujarat) ಶಾಂತಿ ಮತ್ತು ಭದ್ರತೆಯ ವಾತಾವರಣವು ಉತ್ತಮ ಫಲಿತಾಂಶ ಕೊಡುತ್ತಿರುವುದನ್ನು ನಾವು ನೋಡ್ತಿದ್ದೇವೆ. ನಮ್ಮ ರಾಜ್ಯವು ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿರುವುದನ್ನ ನೋಡಿ ಇಡೀ ಗುಜರಾತ್ ಹೆಮ್ಮೆಪಡುತ್ತದೆ ಎಂದು ಶ್ಲಾಘಿಸಿದರು.

  • ಟೇಕಾಫ್ ವೇಳೆ ಅಹಮದಾಬಾದ್-ದಿಯು ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ಬೆಂಕಿ – ಹಾರಾಟ ಸ್ಥಗಿತ

    ಟೇಕಾಫ್ ವೇಳೆ ಅಹಮದಾಬಾದ್-ದಿಯು ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ಬೆಂಕಿ – ಹಾರಾಟ ಸ್ಥಗಿತ

    ಗಾಂಧೀನಗರ: ಅಹಮದಾಬಾದ್‌ನಿಂದ (Ahmedabad) ದಿಯುಗೆ (Diu) ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕ್ ಆಫ್ ಆಗುವಾಗ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿಮಾನಯಾನವನ್ನು ಸ್ಥಗಿತಗೊಳಿಸಲಾಯಿತು.

    ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 11 ಗಂಟೆಗೆ ಇಂಡಿಗೋ ವಿಮಾನ 6ಇ7966 60 ಪ್ರಯಾಣಿಕರನ್ನು ಹೊತ್ತು ದಿಯುಗೆ ಹೊರಟಿತ್ತು. ಆದರೆ ಟೇಕ್ ಆಫ್ ಆಗುವಾಗ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನೆಲೆ ವಿಮಾನಯಾನವನ್ನು ರದ್ದುಗೊಳಿಸಲಾಗಿದೆ.ಇದನ್ನೂ ಓದಿ: ಉಡುಪಿ, ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ

    ಟೇಕ್ ಆಫ್ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಮೇಡೇ ಘೋಷಿಸಿದ ಪೈಲಟ್ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿದರು. ವಿಮಾನದ ಕಾರ್ಯಾಚರಣೆಯನ್ನು ಪುನರಾರಂಭಿಸುವ ಮುನ್ನ ವಿಮಾನವನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಇದಕ್ಕೂ ಮುನ್ನ ಸೋಮವಾರ (ಜು.21) ಗೋವಾದಿಂದ ಇಂದೋರ್‌ಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿತ್ತು. ಪರಿಣಾಮ ವಿಮಾನವನ್ನು ಮತ್ತೆ ಗೋವಾದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಯಿತು.ಇದನ್ನೂ ಓದಿ: 5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ

  • ಅಹಮದಾಬಾದ್ | ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ

    ಅಹಮದಾಬಾದ್ | ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ

    ಗಾಂಧಿನಗರ: ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್‌ನ (Gujarat) ಅಹಮದಾಬಾದ್‌ನ (Ahmedabad) ಬಾವ್ಲಾ ತಾಲೂಕಿನಲ್ಲಿ ನಡೆದಿದೆ.

    ಮೃತರನ್ನು ಬಾಗೋದರಾ (Bagodara) ಬಸ್ ನಿಲ್ದಾಣದ ಬಳಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ರಿಕ್ಷಾ ಚಾಲಕ ವಿಪುಲ್ ಕಾಂಜಿ ವಾಘೇಲಾ (34), ಅವರ ಪತ್ನಿ ಸೋನಾಲ್ (26), ಮಕ್ಕಳಾದ ಕರೀನಾ ಅಲಿ ಸಿಮ್ರಾನ್ (11), ಮಯೂರ (5) ಮತ್ತು ರಾಜ್‌ಕುಮಾರ್ (8) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಯಾರೀ ಕೇರಳ ನರ್ಸ್‌ ನಿಮಿಷಾ ಪ್ರಿಯಾ; ಯೆಮನ್‌ನಲ್ಲಿ ಗಲ್ಲುಶಿಕ್ಷೆಯೇ ಯಾಕೆ – ಏನಿದು ಸ್ಟೋರಿ!?

    ಈ ಕುಟುಂಬದವರು ಮೂಲತಃ ಧೋಲ್ಕಾದ ಬಾರ್ಕೋಥಾದ ದೇವಿಪೂಜಕ್ ವಾಸ್ ಪ್ರದೇಶದವರಾಗಿದ್ದು, ಸ್ವಲ್ಪ ಸಮಯ ಹಿಂದೆ ಬಾಗೋದ್ರಾಗೆ ಬಂದು ನೆಲೆಸಿದ್ದರು. ವಿಪುಲ್ ಅವರು ಆಟೋ ಓಡಿಸಿ, ಬಂದ ಹಣದಲ್ಲಿ ಜೀವನವನ್ನು ಸಾಗಿಸುತ್ತಿದ್ದರು. ವಿಫುಲ್, ಶನಿವಾರ ತಡರಾತ್ರಿ ಮೂವರು ಮಕ್ಕಳು ಹಾಗೂ ಪತ್ನಿಯೊಂದಿಗೆ ವಿಷ ಸೇವಿಸಿ ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ | ಬಾಯ್ಸ್ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್ ಕೇಸ್ – ಬಾಗಲಕೋಟೆ ಆರೋಪಿಗೆ ಜಾಮೀನು

    ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ಆರ್ಥಿಕ ಸಮಸ್ಯೆಯಿಂದ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಿದ್ದಾರೆ.

  • ಏರ್ ಇಂಡಿಯಾ ದುರಂತ | ತನಿಖಾ ವರದಿ ಬಹಿರಂಗಕ್ಕೂ ಮುನ್ನವೇ ವಿದೇಶಿ ಮಾಧ್ಯಮಗಳಲ್ಲಿ ಪ್ರಕಟ – ಕೇಂದ್ರಕ್ಕೆ ಪ್ರಿಯಾಂಕಾ ಚತುರ್ವೇದಿ ಪತ್ರ

    ಏರ್ ಇಂಡಿಯಾ ದುರಂತ | ತನಿಖಾ ವರದಿ ಬಹಿರಂಗಕ್ಕೂ ಮುನ್ನವೇ ವಿದೇಶಿ ಮಾಧ್ಯಮಗಳಲ್ಲಿ ಪ್ರಕಟ – ಕೇಂದ್ರಕ್ಕೆ ಪ್ರಿಯಾಂಕಾ ಚತುರ್ವೇದಿ ಪತ್ರ

    ನವದೆಹಲಿ: ಏರ್ ಇಂಡಿಯಾ ಅಪಘಾತದ (Air India Crash) ಪ್ರಾಥಮಿಕ ತನಿಖೆಯ ವರದಿಯ ಬಿಡುಗಡೆ ಮುನ್ನವೇ ವಿದೇಶಿ ಮಾಧ್ಯಮಗಳಲ್ಲಿ ಪ್ರಕಟ ಆಗಿರುವ ಬಗ್ಗೆ ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ (Priyanka Chaturvedi) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

    ಭಾರತದ ಅಧಿಕೃತ ವರದಿ ಬಿಡುಗಡೆಗೂ ಮುನ್ನವೇ ಏರ್ ಇಂಡಿಯಾ ವಿಮಾನ 171 ರ ಅಪಘಾತ ವರದಿ ವಿದೇಶದಲ್ಲಿ ಹೇಗೆ ಸೋರಿಕೆಯಾಯಿತು? ವರದಿ ಬಿಡುಗಡೆ ಅಪಾರದರ್ಶಕವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಕೇಂದ್ರ ವಿಮಾನಯಾನ ಸಚಿವ ಕೆ ರಾಮಮೋಹನ್ ನಾಯ್ಡು ( K Rammohan Naidu) ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಫ್ಯುಯೆಲ್ ಸ್ವಿಚ್ ನಿರ್ವಹಿಸುವಾಗ ಜಾಗ್ರತೆ – ಪೈಲಟ್‍ಗಳಿಗೆ ಆದೇಶಿಸಿದ ಇತಿಹಾದ್ ಏರ್‌ಲೈನ್ಸ್‌

    ವಿಮಾನ ಅಪಘಾತ ಮತ್ತು ಅದರ ಮಧ್ಯಂತರ ವರದಿಯ ಸುತ್ತಲಿನ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಏನು ನಡೆಯುತ್ತಿದೆ ಎಂಬುದರ ಬಗ್ಗೆ ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ ಎಂದು ಎಕ್ಸ್‌ನಲ್ಲಿ ಅವರು ಬರೆದುಕೊಂಡಿದ್ದಾರೆ. ಅಲ್ಲದೇ ಪತ್ರವನ್ನು ಹಂಚಿಕೊಂಡಿದ್ದಾರೆ.

    ಭಾರತದಲ್ಲಿ ಔಪಚಾರಿಕವಾಗಿ ಸಂಬಂಧಪಟ್ಟ ಪಾಲುದಾರರಿಗೆ ಮತ್ತು ಸಾರ್ವಜನಿಕರಿಗೆ ಮಾಹಿತಿ ನೀಡುವ ಮೊದಲೇ ವಾಲ್ ಸ್ಟ್ರೀಟ್ ಜರ್ನಲ್‌ನಂತಹ ಮಾಧ್ಯಮಗಳಲ್ಲಿ ತನಿಖೆಯ ಪ್ರಮುಖ ವಿವರಗಳು ಬಂದಿವೆ. ಇದು ಮಾಹಿತಿ ಗೌಪ್ಯತೆಯಲ್ಲಿ ಆದ ಗಂಭೀರ ಲೋಪವಾಗಿದೆ. ವಿದೇಶಿ ಸಂಸ್ಥೆಗಳು ಹೇಗೆ ಮಾಹಿತಿ ಪಡೆದುಕೊಂಡವು ಎಂದು ಅವರು ಪ್ರಶ್ನಿಸಿದ್ದಾರೆ.

    ಇಂತಹ ಮಾಹಿತಿ ಸೋರಿಕೆಗಳು ಭಾರತದ ವಾಯುಯಾನ ಸುರಕ್ಷತಾ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ಹಾಳುಮಾಡುತ್ತವೆ. ಅಲ್ಲದೇ ತಮ್ಮನ್ನು ಆರೋಪಗಳಿಂದ ರಕ್ಷಿಸಿಕೊಳ್ಳಲು ಸಾಧ್ಯವಾಗದ ಜೀವಂತವಾಗಿಲ್ಲದ ಪೈಲಟ್‌ಗಳ ಮೇಲೆ ಅಪಪ್ರಚಾರ ಮಾಡುವ ಊಹಾಪೋಹಗಳನ್ನು ಸೃಷ್ಟಿಸುತ್ತವೆ ಎಂದು ಅವರು ಕಟುವಾಗಿ ವಾದಿಸಿದ್ದಾರೆ.

    ವರದಿಯನ್ನು ಮಾಧ್ಯಮಗಳ ಮುಂದೆ ಬಿಡುಗಡೆ ಮಾಡದೇ, ಹಠಾತ್ ತಡರಾತ್ರಿ ಬಿಡುಗಡೆ ಮಾಡಿರುವುದು ತನಿಖೆಯ ಪಾರದರ್ಶಕತೆಯ ಬಗ್ಗೆ ಅನುಮಾನಗಳನ್ನು ಹೆಚ್ಚಿಸಿದೆ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

    ಜೂನ್ 12 ರಂದು ಅಹಮದಾಬಾದ್‌ನಲ್ಲಿ (Ahmedabad) ಟೇಕಾಫ್‌ ಆಗಿದ್ದ ಬೋಯಿಂಗ್ 787 ಡ್ರೀಮ್‌ಲೈನರ್‌ ವಿಮಾನ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ಅವಘಡಕ್ಕೆ ಕಾಕ್‌ಪಿಟ್‌ನಲ್ಲಿನ ಎರಡೂ ಇಂಧನ ನಿಯಂತ್ರಣ ಸ್ವಿಚ್‌ಗಳು ‘RUN’ ನಿಂದ ‘CUTOFF’ ಗೆ ಬಂದಿದ್ದು ಕಾರಣ ಎಂದು AAIB 15 ಪುಟಗಳ ಪ್ರಾಥಮಿಕ ತನಿಖೆಯ ವರದಿ ನೀಡಿತ್ತು. ಇದನ್ನೂ ಓದಿ: ಮುಂಬೈ ಏರ್‌ಪೋರ್ಟ್‌ನಲ್ಲಿ ಆಕಾಸ ಏರ್ ವಿಮಾನಕ್ಕೆ ಟ್ರಕ್‌ ಡಿಕ್ಕಿ

  • Ahmedabad Plane Crash | ನಾಗರಿಕ ವಿಮಾನಯಾನ ಸಚಿವಾಲಯಕ್ಕೆ 2 ಪುಟಗಳ ಪ್ರಾಥಮಿಕ ವರದಿ ಸಲ್ಲಿಸಿದ AAIB

    Ahmedabad Plane Crash | ನಾಗರಿಕ ವಿಮಾನಯಾನ ಸಚಿವಾಲಯಕ್ಕೆ 2 ಪುಟಗಳ ಪ್ರಾಥಮಿಕ ವರದಿ ಸಲ್ಲಿಸಿದ AAIB

    ನವದೆಹಲಿ: ಗುಜರಾತ್‌ನ (Gujarat) ಅಹಮದಾಬಾದ್‌ನಲ್ಲಿ (Ahmedabad) ನಡೆದಿದ್ದ ಏರ್ ಇಂಡಿಯಾ (Air India) ವಿಮಾನ ದುರಂತ ಸಂಬಂಧ ಇಂದು ಎಎಐಬಿ (AAIB) 2 ಪುಟಗಳ ಪ್ರಾಥಮಿಕ ತನಿಖಾ ವರದಿ ಸಲ್ಲಿಸಿದೆ.

    ಜೂ.12ರಂದು ಏರ್ ಇಂಡಿಯಾ ವಿಮಾನ ಪತನಗೊಂಡ ಪರಿಣಾಮ ಸ್ಥಳೀಯರು, ಪ್ರಯಾಣಿಕರು ಸೇರಿ 260ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಅವಶೇಷಗಳನ್ನು ತೆರವುಗೊಳಿಸುವ ವೇಳೆ ಬಿಜೆ ಮೆಡಿಕಲ್ ಹಾಸ್ಟೆಲಿನ ಮೇಲ್ಛಾವಣಿಯಲ್ಲಿ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿತ್ತು. ಇದನ್ನು ವಶಪಡಿಸಿಕೊಂಡಿದ್ದ ವಿಮಾನ ಅಪಘಾತ ತನಿಖಾ ಬ್ಯೂರೋ ತನಿಖೆ ಆರಂಭಿಸಿತ್ತು.ಇದನ್ನೂ ಓದಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡ ಸೋದರ ಮಾವ

    ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಕ್ರ್ಯಾಶ್‌ ತನಿಖಾ ವಿಭಾಗದ ಅಡಿಯಲ್ಲಿ ಬರುವ ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಯೋಗಾಲಯದಲ್ಲಿ ಬ್ಲ್ಯಾಕ್ ಬಾಕ್ಸ್‌ನ ಮುಂಭಾಗದ ಕಪ್ಪು ಪೆಟ್ಟಿಗೆಯಿಂದ ಕ್ರ್ಯಾಶ್‌ ಪ್ರೊಟೆಕ್ಷನ್ ಮಾಡ್ಯೂಲ್‌ನ್ನು ರಿಕವರಿ ಮಾಡಿಕೊಂಡಿದ್ದರು. ಬಳಿಕ ಮೆಮೊರಿ ಮಾಡ್ಯೂಲ್‌ನಲ್ಲಿನ ಡೇಟಾವನ್ನು ಯಶಸ್ವಿಯಾಗಿ ಡೌನ್‌ಲೋಡ್ ಮಾಡಿದ್ದರು. ಸದ್ಯ ವಿಮಾನ ದುರಂತಕ್ಕೆ ಕಾರಣ ಏನು ಎಂಬುವುದರ ವರದಿ ಸಲ್ಲಿಸಿದೆ. ವಿಮಾನ ಅಪಘಾತಕ್ಕೆ ಕಾರಣ ಏನೆಂದು ಈ ವರದಿಯಲ್ಲಿ ಬಹಿರಂಗವಾಗುವ ಸಾಧ್ಯತೆಯಿದ್ದು, ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಈ ತಿಂಗಳ ಕೊನೆಯ ವಾರದಲ್ಲಿ ಸಾರ್ವಜನಿಕರಿಗೆ ಈ ಕುರಿತು ಮಾಹಿತಿ ನೀಡುವ ಸಾಧ್ಯತೆಯಿದೆ.

    ವಿಮಾನ ಅಪಘಾತವಾದ ಮರುದಿನವೇ ಅಂತಾರಾಷ್ಟ್ರೀಯ ಮಾನದಂಡ, ಶಿಷ್ಟಾಚಾರಗಳಿಗೆ ಅನುಗುಣವಾಗಿ ಜೂ.13ರಂದು ತನಿಖಾ ತಂಡ ರಚಿಸಲಾಗಿತ್ತು. ಎಎಐಬಿ ತಂಡವು ಜೂ.24ರಂದು ವಿಮಾನದ ಬ್ಲಾö್ಯಕ್ ಬಾಕ್ಸ್ ದಾಖಲೆ ಹೊರತೆಗೆಯುವ ಪ್ರಕ್ರಿಯೆ ಪ್ರಾರಂಭಿಸಿತ್ತು. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಮತ್ತು ಫ್ಲೈಟ್ ಡೇಟಾ ರೆಕಾರ್ಡರ್‌ನ ವಿಶ್ಲೇಷಣೆಯನ್ನೂ ನಡೆಸಲಾಗಿತ್ತು.

    ಇನ್ನು ವಿಮಾನಯಾನ ಸಂಸ್ಥೆಯಿಂದ ನಡೆದ ಮತ್ತೊಂದು ತನಿಖೆ ಪ್ರಕಾರ, ಡಬಲ್ ಎಂಜಿನ್ ವೈಫಲ್ಯದಿಂದಾಗಿ ಬೋಯಿಂಗ್ 787 ಡ್ರೀಮ್‌ಲೈನರ್ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಹೇಳಿದೆ.

    ಏನಿದು ಬ್ಲ್ಯಾಕ್ ಬಾಕ್ಸ್?
    ವಿಮಾನದಲ್ಲಿ ಧ್ವನಿಗ್ರಹಣಕ್ಕೆ ಬಳಸಲಾಗುವ ಎರಡು ಸಾಧನಗಳನ್ನು ತಾಂತ್ರಿಕ ಭಾಷೆಯಲ್ಲಿ ಬ್ಲ್ಯಾಕ್ ಬಾಕ್ಸ್ ಎಂದು ಕರೆಯಲಾಗುತ್ತದೆ. ಬ್ಲ್ಯಾಕ್ ಬಾಕ್ಸ್ ಅನ್ನು ಫ್ಲೈಟ್ ಡೇಟಾ ರೆಕಾರ್ಡರ್ ಎಂದೂ ಕರೆಯುತ್ತಾರೆ. ಬ್ಲ್ಯಾಕ್ ಬಾಕ್ಸ್ ಹಾರಾಟದ ಸಮಯದಲ್ಲಿನ ವಿಮಾನದ ಎಲ್ಲಾ ಚಟುವಟಿಕೆಗಳನ್ನು ದಾಖಲಿಸುತ್ತದೆ. ಎಲ್ಲ ರೀತಿಯ ವಿಮಾನಗಳಲ್ಲಿ ಬ್ಲ್ಯಾಕ್ ಬಾಕ್ಸ್ ಅನ್ನು ಕಡ್ಡಾಯವಾಗಿ ಅಳವಡಿಸಲಾಗುತ್ತದೆ.

    ವಿಮಾನ ಅಪಘಾತವಾದಾಗ ಅದಕ್ಕೆ ಕಾರಣ ಪತ್ತೆ ಹಚ್ಚಲು ನೆರವಾಗಲೆಂದೇ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಭದ್ರತೆಯ ದೃಷ್ಟಿಯಿಂದ ಕಪ್ಪು ಪೆಟ್ಟಿಗೆಯನ್ನು ಸಾಮಾನ್ಯವಾಗಿ ವಿಮಾನದ ಹಿಂಭಾಗದಲ್ಲಿ ಇಡಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ, ಸುತ್ತಲೂ ಬೆಂಕಿ ಇದ್ದರೂ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಹಾನಿಯಾಗುವುದಿಲ್ಲ.ಇದನ್ನೂ ಓದಿ: ಹರಿಯಾಣದ ರೈಲಿನಲ್ಲಿ ಗ್ಯಾಂಗ್‌ ರೇಪ್ -‌ ಅತ್ಯಾಚಾರ ಬಳಿಕ ರೈಲ್ವೆ ಹಳಿಗಳ ಮೇಲೆ ಮಹಿಳೆ ಎಸೆದ ಪಾಪಿಗಳು

    ಅಪಘಾತದ ಸಂಭವಿಸಿದಾಗ ಹಿಂಭಾಗದಲ್ಲಿ ಅದರಲ್ಲೂ ಬಾಲದ ಕಡೆ ಪೆಟ್ಟು ಬೀಳುವುದು ಕಡಿಮೆ. ಯಾಕೆಂದರೆ ಬಾಲ ಎತ್ತರದಲ್ಲಿರುತ್ತದೆ. ಈ ಕಾರಣಕ್ಕೆ ಬಾಲದಲ್ಲಿ ಅಳವಡಿಸಲಾಗಿರುತ್ತದೆ. ವಿಮಾನದ ಎಂಜಿನ್‌ಗೆ ಜೋಡಿಸಲಾದ ಜನರೇಟರ್ ನಿಂದ ಬ್ಲ್ಯಾಕ್ ಬಾಕ್ಸ್ ಚಾರ್ಜ್ ಆಗುತ್ತದೆ.

    ಎರಡು ಪ್ರತ್ಯೇಕ ಪೆಟ್ಟಿಗೆಗಳಿವೆ
    1. ಫ್ಲೈಟ್ ಡೇಟಾ ರೆಕಾರ್ಡರ್: ಈ ಪೆಟ್ಟಿಗೆಯಲ್ಲಿ ನಿರ್ದೇಶನ, ಎತ್ತರ, ಇಂಧನ, ವೇಗ, ಕ್ಯಾಬಿನ್ ತಾಪಮಾನ ಇತ್ಯಾದಿಗಳ ಬಗ್ಗೆ ಮಾಹಿತಿ ಇರುತ್ತದೆ. ಕೊನೆಯ 25 ಗಂಟೆಗಳ ಕಾಲದ ಒಟ್ಟು 88 ಮಾಹಿತಿಗಳ ಡೇಟಾವನ್ನು ಸಂಗ್ರಹಿಸುತ್ತದೆ. 1,100 ಡಿಗ್ರಿ ಸೆಲ್ಶಿಯಸ್ ತಾಪಮಾನ ಇದ್ದರೆ 1 ಗಂಟೆ, 260 ಡಿಗ್ರಿ ಸೆಲ್ಶಿಯಸ್ ತಾಪಮಾನ ಇದ್ದರೆ ಇದ್ದರೆ 10 ಗಂಟೆಗಳ ಕಾಲ ಡೇಟಾವನ್ನು ತಡೆದಿಟ್ಟುಕೊಳ್ಳಬಹುದು. ತನಿಖಾಧಿಕಾರಿಗಳಿಗೆ ಸುಲಭವಾಗಿ ಗುರುತಿಸಲು ಕೆಂಪು ಅಥವಾ ಗುಲಾಬಿ ಬಣ್ಣದಲ್ಲಿ ಈ ಪೆಟ್ಟಿಗೆಯನ್ನು ಮಾಡಲಾಗುತ್ತದೆ.

    2. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್: ಈ ಬಾಕ್ಸ್ ಕೊನೆಯ ಎರಡು ಗಂಟೆಗಳ ವಿಮಾನದ ಧ್ವನಿಯನ್ನು ದಾಖಲಿಸುತ್ತದೆ. ಯಾವುದೇ ಅಪಘಾತ ಸಂಭವಿಸುವ ಮೊದಲು ಎಂಜಿನ್, ತುರ್ತು ಎಚ್ಚರಿಕೆ, ಕ್ಯಾಬಿನ್ ಮತ್ತು ಕಾಕ್‌ಪಿಟ್ ಧ್ವನಿಯನ್ನು ದಾಖಲಿಸುತ್ತದೆ.

    ಹೇಗೆ ಕಾರ್ಯನಿರ್ವಹಿಸುತ್ತದೆ?
    ಯಾವುದೇ ವಿದ್ಯುತ್ ಇಲ್ಲದೆ 30 ದಿನಗಳವರೆಗೆ ಬ್ಲಾಕ್ ಬಾಕ್ಸ್ ಕೆಲಸ ಮಾಡಬಹುದು. ಪತ್ತೆ ಕಾರ್ಯ ಸುಲಭವಾಗಲು ಸುಮಾರು 30 ದಿನಗಳವರೆಗೆ ಸಿಗ್ನಲ್ ಹೊರಸೂಸುತ್ತಿರುತ್ತದೆ. ಈ ಧ್ವನಿಯನ್ನು ತನಿಖಾಧಿಕಾರಿಗಳು ಸುಮಾರು 2-3 ಕಿಲೋಮೀಟರ್ ದೂರದಿಂದ ಗುರುತಿಸಬಹುದು. 14 ಸಾವಿರ ಅಡಿ ಆಳದ ಸಮದ್ರದಲ್ಲಿದ್ದರೂ ಸಿಗ್ನಲ್ ಹೊರ ಸೂಸುತ್ತಿರುತ್ತದೆ.ಇದನ್ನೂ ಓದಿ: ರಕ್ಷಿತಾ ಪ್ರೇಮ್ ಸಹೋದರ ರಾಣಾ ನಟನೆಯ ಚಿತ್ರದ ಟೈಟಲ್ ಟೀಸರ್ ರಿಲೀಸ್