ನವದೆಹಲಿ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು (ISS) ಯಶಸ್ವಿಯಾಗಿ ತಲುಪಿ ಇತಿಹಾಸ ಸೃಷ್ಟಿಸಿರುವ ಭಾರತೀಯ ಗಗನಯಾತ್ರಿ, ಐಎಎಫ್ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ (Shubhanshu Shukla) ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಂದು ಅಹಮದಾಬಾದ್ ಏರ್‌ಪೋರ್ಟ್‌ನಲ್ಲಿ ಮುಖಾಮುಖಿಯಾಗಿ ಪರಸ್ಪರ ಕುಶಲೋಪರಿ ವಿಚಾರಿಸಿದ್ರು.
ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕ ಭೇಟಿಯಾದ ಇಬ್ಬರೂ ಕೆಲ ಕಾಲ ಪರಸ್ಪದ ಚರ್ಚೆ ನಡೆಸಿದರು. ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಯಾನದ ಅನುಭವಗಳನ್ನ ಆಲಿಸಿದ ಸಚಿವ ಜೋಶಿ (Pralhad Joshi) ಹರ್ಷ ವ್ಯಕ್ತಪಡಿಸಿದ್ರು. ಇದನ್ನೂ ಓದಿ: ದುಶ್ಯಂತ್-ಆಶಿಕಾ ನಟನೆಯ `ಗತವೈಭವ’ದ ಫಸ್ಟ್ ಸಾಂಗ್ ರಿಲೀಸ್
ಶುಕ್ಲಾ ಅವರ ಈ ಸ್ಫೂರ್ತಿದಾಯಕ ಪ್ರಯಾಣವು ಬಾಹ್ಯಾಕಾಶ ಯಾನದಲ್ಲಿ ಭಾರತದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ. ಅವರ ಸಾಧನೆಗೆ ಇಡೀ ಭಾರತವೇ ಹೆಮ್ಮೆಪಡುತ್ತದೆ ಎಂದು ಸಚಿವ ಜೋಶಿ ಇದೇ ವೇಳೆ ಸಂತಸ ವ್ಯಕ್ತಪಡಿಸುತ್ತಾ ಶುಕ್ಲಾರನ್ನ ಅಭಿನಂದಿಸಿದರು. ಇದನ್ನೂ ಓದಿ: ಕಾರವಾರ| ಸ್ನೇಹಿತರೊಂದಿಗೆ ಈಜಲು ಹೋಗಿ ನೀರು ಪಾಲಾಗಿದ್ದ ಯುವಕನ ಶವ ಪತ್ತೆ
ಗಾಂಧೀನಗರ: ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಸ್ಥಳದಲ್ಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಶೋಧಕಾರ್ಯ ನಡೆಸಿದೆ.
ಈ ಕುರಿತು ಜಂಟಿ ಪೊಲೀಸ್ ಆಯುಕ್ತ ಶರದ್ ಸಿಂಘಾಲ್ ಅವರು ಮಾಹಿತಿ ನೀಡಿದ್ದು, ಅಹಮದಾಬಾದ್‌ನ ಸರ್ದಾರ್ ವಲ್ಲಭಬಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಪರಾಧ ವಿಭಾಗಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಮಾಹಿತಿ ಬೆನ್ನಲ್ಲೇ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಶೋಧ ಕಾರ್ಯ ಮುಂದುವರೆಸಿದೆ.ಇದನ್ನೂ ಓದಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಜೀನಾಮೆ ಅಂಗೀಕರಿಸಿದ ದ್ರೌಪದಿ ಮುರ್ಮು
ಈವರೆಗೂ ವಿಮಾನ ನಿಲ್ದಾಣದಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.
ಇದಕ್ಕೂ ಮುನ್ನ ಗುಜರಾತ್ ಮುಖ್ಯಮಂತ್ರಿ ಕಚೇರಿ ಹಾಗೂ ಗಾಂಧೀನಗರದಲ್ಲಿರುವ ರಾಜ್ಯ ಸಚಿವಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಮೇಲ್ ಬಂದಿತ್ತು. ಕಳೆದ ತಿಂಗಳು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಏರ್ ಇಂಡಿಯಾ ವಿಮಾನವೊಂದು ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ಪತನಗೊಂಡಿತ್ತು. ಪರಿಣಾಮ 241 ಪ್ರಯಾಣಿಕರು ಸೇರಿ 260ಕ್ಕೂ ಅಧಿಕ ಜನ ಸಾವನ್ನಪ್ಪಿದ್ದರು.ಇದನ್ನೂ ಓದಿ: ಡಾಲರ್ ಎಕ್ಸ್‌ಚೇಂಜ್‌ಗೆ ಬಂದಾಗ 2 ಕೋಟಿ ರೂ. ದರೋಡೆ ನಾಟಕ – ದೂರುದಾರ ಸೇರಿ 15 ಮಂದಿ ಅರೆಸ್ಟ್!
ಅಹಮದಾಬಾದ್: ಕಳೆದ ಜೂನ್ 12ರಂದು ಅಹ್ಮದಬಾದ್ ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತಕ್ಕೆ (Air India Crash) ಸಂಬಂಧಿಸಿದಂತೆ ಎಎಐಬಿ ಪ್ರಾಥಮಿಕ ವರದಿ (AAIB Initial Report) ಬಿಡುಗಡೆಯಾಗಿದೆ. 15 ಪುಟಗಳ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದು ಬ್ಲ್ಯಾಕ್ ಬಾಕ್ಸ್ ಸೇರಿ ಇತರೆ ಸಾಕ್ಷ್ಯಗಳ ಆಧಾರದ ಮೇಲೆ ವಿಮಾನ ದುರಂತಕ್ಕೆ ಕಾರಣ ಕಂಡುಕೊಳ್ಳಲಾಗಿದೆ.
ಇಂಧನ ಪೂರೈಸುತ್ತಿದ್ದ ಸ್ವಿಚ್‌ಗಳು ಆಫ್
ಜೂನ್ 12ರಂದು ಅಹ್ಮದಬಾದ್ ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಮೊದಲ ತನಿಖಾ ವರದಿ ಬಿಡುಗಡೆಯಾಗಿದೆ. ವಿಮಾನ ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ಎರಡೂ ಎಂಜಿನ್‌ಗಳಿಗೆ ಇಂಧನ ಪೂರೈಸುತ್ತಿದ್ದ ಸ್ವಿಚ್‌ಗಳು ಆಫ್ (Fuel Cutoff) ಆಗಿದ್ದವು. ಇದಾದ ನಂತರ ಪೈಲಟ್‌ಗಳ ನಡುವೆ ಗೊಂದಲ ಉಂಟಾಯಿತು ಎಂದು ವರದಿ ಹೇಳಿದೆ. ಇದನ್ನೂ ಓದಿ: Air India Crash | 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಆಗದಿದ್ದೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ ಬಹಿರಂಗ
ವಿಮಾನ ಅಪಘಾತ ತನಿಖಾ ಬ್ಯೂರೋ ಈ ವರದಿಯನ್ನು ಬಿಡುಗಡೆ ಮಾಡಿದೆ. ಟೇಕ್-ಆಫ್ ಸಮಯದಲ್ಲಿ ಸಹ-ಪೈಲಟ್ ವಿಮಾನವನ್ನು ನಿಯಂತ್ರಿಸುತ್ತಿದ್ದರೆ, ಮುಖ್ಯ ಪೈಲಟ್ ಮೇಲ್ವಿಚಾರಣೆ ಮಾಡುತ್ತಿದ್ದರು. ವಿಮಾನವು ಗರಿಷ್ಠ 180 ನಾಟ್ಸ್ ವೇಗ ತಲುಪಿದ ತಕ್ಷಣ, ಇಂಧನ ಸ್ವಿಚ್‌ಗಳು ಒಂದರ ನಂತರ ಒಂದು ಆಫ್ ಆಗಿವೆ. ಇದರ ಪರಿಣಾಮವಾಗಿ, ಎಂಜಿನ್‌ಗಳಿಗೆ ಇಂಧನ ಪೂರೈಕೆ ನಿಂತು ಅವುಗಳ ಕಾರ್ಯಕ್ಷಮತೆ ಕುಸಿಯಿತು ಎಂದು ವರದಿ ಹೇಳಿದೆ. ಇದನ್ನೂ ಓದಿ: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ – ದೂರು ದಾಖಲು
ಕಾಕ್‌ಪಿಟ್ ನಲ್ಲಿ ಪೈಲಟ್‌ಗಳ ನಡುವೆ ನಡೆದ ಸಂಭಾಷಣೆಯೂ ರೆಕಾರ್ಡ್ ಆಗಿದ್ದು ಅದರಲ್ಲಿ ಒಬ್ಬ ಪೈಲಟ್ ಇಂಧನ ಆಫ್ ಮಾಡಿದ್ದು ಯಾಕೆ? ಎಂದು ಕೇಳಿದರೆ, ಇನ್ನೊಬ್ಬ ನಾನು ಮಾಡಿಲ್ಲ ಎಂದು ಉತ್ತರಿಸಿದ್ದಾನೆ. ತುರ್ತು ಪರಿಸ್ಥಿತಿ ಅರಿವಿಗೆ ಬರುತ್ತಿದ್ದಂತೆಯೇ ವಿಮಾನದ ಸ್ವಯಂಚಾಲಿತ ವ್ಯವಸ್ಥೆಯನ್ನು ಸಕ್ರಿಯಗೊಳಿಸಲು ಪ್ರಯತ್ನಿಸಲಾಯಿತು. ಆದಾಗ್ಯೂ, ರಾಮ್ ಏರ್ ಟರ್ಬೈನ್ ಅಂದರೆ, ತುರ್ತು ಫ್ಯಾನ್ ಮತ್ತು ಎಪಿಯುನಂತಹ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಿದ ನಂತರವೂ, ವಿಮಾನವನ್ನು ಅಪಘಾತದಿಂದ ರಕ್ಷಿಸಲು ಪೈಟಲ್ಗಳಿಗೆ ಸಾಧ್ಯವಾಗಲಿಲ್ಲ. ಈ ಸಂಭಾಷಣೆ ನಡುವೆಯೇ ಪೈಲಟ್ ಮೇ ಡೇ ಘೋಷಿಸಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನವಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ
ಮುಂದುವರಿದಿದೆ ತನಿಖೆ; ಬೌಸರ್‌ಗಳ ಪರೀಕ್ಷೆ
ವಿಮಾನಕ್ಕೆ ಇಂಧನ ತುಂಬಲು ಬಳಸಿದ ವಾಹನಗಳು (ಬೌಸರ್‌ಗಳು) ಮತ್ತು ಟ್ಯಾಂಕ್‌ಗಳಿಂದ ಇಂಧನದ ಮಾದರಿಗಳನ್ನು ತೆಗೆದು, ಅವುಗಳನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಯಿತು ಎಂದು ವಿಮಾನ ಅಪಘಾತ ತನಿಖಾ ಬ್ಯೂರೋ ಹೇಳಿದೆ. ಈ ಪರೀಕ್ಷೆಯ ನಂತರ, ಇಂಧನದ ಗುಣಮಟ್ಟವು ಯಾವುದೇ ದೋಷವಿಲ್ಲದೆ, ತೃಪ್ತಿಕರವಾಗಿತ್ತು ಎಂದು ದೃಢಪಡಿಸಲಾಗಿದೆ. ಆದ್ರೆ, ವಿಮಾನದ ಕೆಲವು ನಿರ್ದಿಷ್ಟ ಭಾಗಗಳಿಂದ (ಉದಾಹರಣೆಗೆ, ಎಪಿಯು ಫಿಲ್ಟರ್ ಮತ್ತು ಎಡ ರೆಕ್ಕೆಯ ರಿಫ್ಯೂಯಲ್/ಜೆಟ್ಟಿಸನ್ ವಾಲ್ವ್) ಬಹಳ ಕಡಿಮೆ ಪ್ರಮಾಣದ ಇಂಧನದ ಮಾದರಿಗಳು ಮಾತ್ರ ಸಿಕ್ಕಿವೆ. ಈ ಕಡಿಮೆ ಪ್ರಮಾಣದ ಮಾದರಿಗಳನ್ನು ಪರೀಕ್ಷಿಸಲು ವಿಶೇಷ ಸೌಲಭ್ಯಗಳಿರುವ ಬೇರೆ ಪ್ರಯೋಗಾಲಯದ ಅಗತ್ಯವಿದೆ.
ಏರ್ ಇಂಡಿಯಾಕ್ಕೆ ಮೊದಲೇ ಎಚ್ಚರಿಸಿತ್ತು ಅಮೆರಿಕ
ಬೋಯಿಂಗ್ ಡ್ರೀಮ್ ಲೈನರ್ ವಿಮಾನದಲ್ಲಿ ಇಂಧನ ಸ್ವಿಚ್‌ಗಳಲ್ಲಿ ಸಮಸ್ಯೆ ಇರುವ ಬಗ್ಗೆ ಈ ಹಿಂದೆ ಅಮೆರಿಕ ಗುರುತಿಸಿತ್ತು. ಇದರ ಬೆನ್ನಲೆ ಬೋಯಿಂಗ್ ಎಲ್ಲ ಏರ್‌ಲೈನ್‌ಗಳಿಗೆ ಎಚ್ಚರಿಕೆ ನೀಡಿತ್ತು. 7 ವರ್ಷಗಳ ಹಿಂದೆಯೇ ಯುಎಸ್‌ನ FAA ಸಂಸ್ಥೆ 737 ಜೆಟ್‌ಗಳ ಫ್ಯುಯೆಲ್ ಕಂಟ್ರೋಲ್ ಸ್ವಿಚ್ ಬಗ್ಗೆ ಎಚ್ಚರಿಕೆ ನೀಡಿತ್ತು. ಅದರ ಭಾಗವಾಗಿ ಏರ್ ಇಂಡಿಯಾಗೂ ಈ ಮಾಹಿತಿಯನ್ನು ನೀಡಿತ್ತು. ಈ ಸ್ವಿಚ್‌ಗಳ ಬಗ್ಗೆ ಗಮನ ಹರಿಸಲು ಹೇಳಿತ್ತು. ಹೀಗಾಗೀ ಇದರಲ್ಲಿ ನಿರ್ಲಕ್ಷ್ಯ ಯಾರದು ಎನ್ನುವ ಪ್ರಶ್ನೆಯೂ ಉದ್ಬವಿಸಿದೆ.
ಸದ್ಯ ವಿಮಾನ ಅಪಘಾತ ತನಿಖಾ ಬ್ಯೂರೋ ತಂಡವು ಈಗ ಆರಂಭಿಕವಾಗಿ ಸಿಕ್ಕಿರುವ ಮಾಹಿತಿಗಳನ್ನು ಆಧರಿಸಿ, ಅಪಘಾತದ ಬಗ್ಗೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸುತ್ತಿದೆ. ಜೊತೆಗೆ, ವಿಮಾನದಲ್ಲಿ ಅಳವಡಿಸಲಾಗಿರುವ ಫ್ಲೈಟ್ ರೆಕಾರ್ಡರ್‌ನಿಂದ ಡೇಟಾ ವಿಶ್ಲೇಷಿಸಲಾಗುತ್ತಿದೆ. ಈ ವಿಶ್ಲೇಷಣೆಯು ಅಪಘಾತಕ್ಕೆ ನಿಖರ ಕಾರಣವನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ.
ಅಹಮದಾಬಾದ್: ದೇಶಾದ್ಯಂತ ಸಂಚಲನ ಮೂಡಿಸಿದ್ದ ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದಲ್ಲಿ (Air India Plane Crash) 260 ಜನ ಸಾವನ್ನಪ್ಪಿದ್ದರು. ಈ ಘಟನೆಯ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಪ್ರಾಥಮಿಕ ವರದಿ ಬಹಿರಂಗಗೊಂಡಿದ್ದು, ಹಲವು ಅಂಶಗಳು ಬೆಳಕಿಗೆ ಬಂದಿವೆ. ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನದಲ್ಲಿ ಏನೆಲ್ಲಾ ಆಯ್ತು ಅನ್ನೋದನ್ನ 15 ಪುಟಗಳ ವರದಿ ಬಹಿರಂಗಪಡಿಸಿದೆ.
ವಿಮಾನ ಅಪಘಾತ ತನಿಖಾ ಬ್ಯೂರೋ ವರದಿಯಲ್ಲಿ ಪೈಲಟ್‌ಗಳ ಕಾಕ್‌ಪಿಟ್ (Cockpit) ಧ್ವನಿ ರೆಕಾರ್ಡಿಂಗ್ ಡೇಟಾವನ್ನ ಉಲ್ಲೇಖಿಸಲಾಗಿದೆ. ಇದರಲ್ಲಿ ವಿಮಾನವು ವಾಯುಪ್ರದೇಶಕ್ಕೆ ತಲುಪಿದ ಕೆಲವೇ ಸೆಕೆಂಡುಗಳಲ್ಲಿ ಡ್ಯುಯಲ್-ಎಂಜಿನ್ ಸ್ಥಗಿತಗೊಂಡಿರುವುದು ಅಪಘಾತಕ್ಕೆ ಕಾರಣ ಎಂದು ಸೂಚಿಸಲಾಗಿದೆ. ಅಪಘಾತಕ್ಕೆ ಕೆಲ ಸೆಕೆಂಡುಗಳಿಗೂ ಮುನ್ನ ನಡೆದ ಸಂಭಾಷಣೆಯ ಒಂದು ಭಾಗದಲ್ಲಿ ಇದು ತಿಳಿದಿದೆ. ಜೊತೆಗೆ ವಿಮಾನವು 8 ಡಿಗ್ರಿ ಮೂಗು ಮೇಲಕ್ಕೆತ್ತಿದ ಸ್ಥಿತಿಯಲ್ಲಿತ್ತು. ಆದರೆ ಇಂಜಿನ್‌ಗಳು ಆಫ್ ಆಗಿದ್ದವು. ಇದರಿಂದ ವಿಮಾನವು ಏರಲು ಸಾಧ್ಯವಾಗಲಿಲ್ಲ ಎಂದು ವರದಿ ತಿಳಿದಿದೆ. ಇದನ್ನೂ ಓದಿ: ತಾಮ್ರದ ಮೇಲೆ 50%, ಔಷಧ ಆಮದಿನ ಮೇಲೆ 200% ಸುಂಕದ ಎಚ್ಚರಿಕೆ – ಭಾರತದ ಮೇಲೆ ಏನು ಪರಿಣಾಮ?
ಟೇಕ್ ಆಫ್ ಆದ 3 ಸೆಕೆಂಡ್‌ಗಳ ನಂತರ, ಎರಡೂ ಇಂಜಿನ್‌ಗಳ ಫ್ಯೂಯಲ್ ಕಂಟ್ರೋಲ್ ಸ್ವಿಚ್‌ಗಳು ರನ್ ನಿಂದ ಕಟ್‌ಆಫ್‌ಗೆ ಬದಲಾದವು. ಇದರಿಂದಾಗಿ ಥ್ರಸ್ಟ್ ಇದ್ದಕ್ಕಿದ್ದಂತೆ ಕಡಿಮೆಯಾಯಿತು. ಅಲ್ಲದೇ ಒಂದು ಪೈಲಟ್ ʻನೀವು ಏಕೆ ಕಟ್ ಆಫ್ ಮಾಡಿದ್ರಿ?ʼ ಎಂದು ಕೇಳುವುದು ಕೇಳಿಸುತ್ತದೆ. ಅದಕ್ಕೆ ಇನ್ನೊಬ್ಬ ಪೈಲಟ್ ʻನಾನು ಮಾಡಿಲ್ಲʼ ಎಂದು ಉತ್ತರಿಸುತ್ತಾರೆ. ಇದರಿಂದ ತಾಂತ್ರಿಕ ದೋಷ ಅಥವಾ ಆಕಸ್ಮಿಕವಾಗಿ ಸ್ವಿಚ್ ಆಫ್ ಆಗಿರಬಹುದು ಎಂದು ಶಂಕಿಸಲಾಗಿದೆ. ʻWhy did you cutoff?ʼ ಮತ್ತು ʻI did not do so,ʼ ಎಂಬ ಮಾತುಗಳು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಮತ್ತೆ ಉದ್ಯೋಗಕ್ಕೆ ಮರಳಿದ ರಿಷಿ ಸುನಕ್ – 70 ಗಂಟೆ ಕೆಲ್ಸ ಮಾಡಿ ಎಂದು ನೆಟ್ಟಿಗರ ಅಪಹಾಸ್ಯ
ಇನ್ನೂ ಫ್ಲೈಟ್ ಡೇಟಾ ರೆಕಾರ್ಡರ್ ಪ್ರಕಾರ, ಇಂಜಿನ್-1 ಅನ್ನು ಸ್ವಯಂಚಾಲಿತವಾಗಿ ಮರುಪ್ರಾರಂಭಿಸಲು ಪ್ರಯತ್ನಿಸಿ, ಅದು ಯಶಸ್ವಿಯಾಯಿತು. ಆದ್ರೆ ಇಂಜಿನ್ 2 ಅನ್ನು ಮರುಪ್ರಾರಂಭಿಸಲು ಸಾಧ್ಯವಾಗಲಿಲ್ಲ. ಈ ಕಾರಣಕ್ಕಾಗಿ ರಾಮ್ ಏರ್ ಟರ್ಬೈನ್ (RAT) ಅನ್ನು ತುರ್ತು ವಿದ್ಯುತ್ ಮೂಲವಾಗಿ ಬಳಸಲಾಗಿತ್ತು. ಇದು ಟೇಕ್ ಆಫ್ ಆದ ತಕ್ಷಣವೇ ಕಾರ್ಯನಿರ್ವಹಿಸಲು ಪ್ರಾರಂಭಿಸಿತು. ಇದರಿಂದ ಅಗತ್ಯ ಸಿಸ್ಟಮ್‌ಗಳಿಗೆ ವಿದ್ಯುತ್ ಸಂಪೂರ್ಣವಾಗಿ ಸ್ಥಗಿತಗೊಂಡಿತು ಎಂದು ವರದಿ ತಿಳಿಸಿದೆ. RAT ಅಂದರೆ ವಿಮಾನದಲ್ಲಿನ ಎಲೆಕ್ಟ್ರಿಕಲ್ ವ್ಯವಸ್ಥೆ ಕೈಕೊಟ್ಟಾಗ ಉಪಯೋಗಿಸುವ ಒಂದು ಸಾಧನ. ಇದನ್ನೂ ಓದಿ: ಕೆನಡಾ ಮೇಲೆ 35% ಸುಂಕ ವಿಧಿಸಿದ ಟ್ರಂಪ್ – ಪ್ರತೀಕಾರಕ್ಕೆ ಮುಂದ್ರಾದ್ರೆ ಇನ್ನಷ್ಟು ಸುಂಕ ವಿಧಿಸುವುದಾಗಿ ವಾರ್ನಿಂಗ್
ಮೇ ಡೇ ಕೊನೆಯ ಸಂದೇಶ
ವಿಮಾನವು ಏರ್‌ಪೋರ್ಟ್‌ನ ಹೊರಗಿನ ಕಟ್ಟಡಗಳಿಗೆ ಡಿಕ್ಕಿ ಹೊಡೆಯುವ ಕೆಲವೇ ಸೆಕೆಂಡುಗಳ ಮೊದಲು, 08:09:05 ಯುಟಿಸಿ ಗೆ ತುರ್ತು ಕರೆ ಮಾಡಲಾಯಿತು. ಈ ವೇಳೆ ಮೇ ಡೇ ಎಂಬ ಸಂದೇಶವನ್ನು ಪೈಲಟ್ ಕೊಟ್ಟಿದ್ದರು.