Tag: Ahmedabad

  • ಸ್ಯಾಂಟ್ರೋ ರವಿ ಅರೆಸ್ಟ್‌ – ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ..

    ಸ್ಯಾಂಟ್ರೋ ರವಿ ಅರೆಸ್ಟ್‌ – ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ..

    ಉಡುಪಿ: ಹಲವಾರು ದಿನದಿಂದ ತಲೆಮರೆಸಿಕೊಂಡು ಓಡಾಡ್ತಿದ್ದ ಸ್ಯಾಂಟ್ರೋ ರವಿ (Santro Ravi) ಬಂಧನವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಖಚಿತಪಡಿಸಿದ್ದಾರೆ. ಸ್ಯಾಂಟ್ರೋ ರವಿಯನ್ನು 11 ದಿನಗಳ ನಂತರ ಗುಜರಾತ್‌ನ (Gujarat) ಅಹಮದಾಬಾದ್‌ನಲ್ಲಿ (Ahmedabad) ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

    ನಾಲ್ಕೈದು ಟೀಮ್ ಮಾಡಿಕೊಂಡು ಮೈಸೂರು (Mysuru), ರಾಮನಗರ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದರು. ಪೊಲೀಸರ ಸತತ ಪ್ರಯತ್ನದಿಂದ ಸ್ಯಾಂಟ್ರೋ ರವಿ ಬಂಧನವಾಗಿದೆ. ಗುಜರಾತ್ ರಾಜ್ಯದಲ್ಲಿ ಸ್ಯಾಂಟ್ರೋ ರವಿಯನ್ನು ಅರೆಸ್ಟ್ ಮಾಡಿದ್ದೇವೆ. ಎಲ್ಲಾ ಪ್ರೊಸೀಜರ್ ಮುಗಿಸಿಕೊಂಡು ಆತನನ್ನು ಬೆಂಗಳೂರಿಗೆ ಕರೆತರಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: 15 ಸಿಮ್‌ ಕಾರ್ಡ್‌ ಬದಲಾಯಿಸಿ, ತಲೆ ಬೋಳಿಸಿದ್ದ ಸ್ಯಾಟ್ರೋ ರವಿ ಕೊನೆಗೂ ಸಿಕ್ಕಿಬಿದ್ದ

    ಸರ್ಕಾರದ ಮೇಲೆ ಎಲ್ಲಾ ರೀತಿಯ ಟೀಕೆಗಳು ಕೇಳಿಬಂದಿತ್ತು. ಸರ್ಕಾರ ಮೀನಾಮೇಷ ಎಣಿಸುತ್ತಿದ್ದು, ಒತ್ತಡದಲ್ಲಿದೆ ಎನ್ನುತ್ತಿದ್ದರು. ಸರ್ಕಾರದ ಮೇಲೆ ಯಾವ ಒತ್ತಡವೂ ಇರಲಿಲ್ಲ. ನಾವು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೆವು. ಎಲ್ಲೇ ಅಡಗಿದ್ದರೂ ಹೇಗೆ ಇದ್ದರೂ ಕರೆತಂದು ವಿಚಾರಿಸಬೇಕೆಂದು ಹೇಳಿದ್ದೆವು. ಆತ ನಡೆಸಿದ ಕೃತ್ಯಕ್ಕೆ ಸರಿಯಾದ ಶಿಕ್ಷೆಯಾಗಬೇಕು ಎಂದು ತಿಳಿಸಿದರು.

    ಗುಜರಾತ್‌ನಲ್ಲಿ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸುತ್ತಾರೆ. ನಂತರ ಆತನನ್ನು ಕರೆತರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಇಂದು ಸಂಜೆ ಅಥವಾ ನಾಳೆ ಆತನನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ. ಎರಡು-ಮೂರು ಕಡೆ ಅಂತಿಮ ಕ್ಷಣದಲ್ಲಿ ತಪ್ಪಿಸಿಕೊಂಡಿದ್ದ. ಎಲ್ಲಾ ಆಯಾಮದಲ್ಲೂ ತನಿಖೆ ನಡೆಯುತ್ತದೆ. ಏನೇ ಇದ್ದರೂ ಅಡಗಿಸಿಡುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಬಂಧನ

    ಅತ್ಯಂತ ಪಾರದರ್ಶಕವಾಗಿ ತನಿಖೆ ನಡೆಯುತ್ತದೆ. ಆತ ನಡೆಸಿದ ಎಲ್ಲ ಕೃತ್ಯಕ್ಕೆ ಶಿಕ್ಷೆಯಾಗುತ್ತದೆ. ಯಾವುದೇ ಅಧಿಕಾರಿ, ರಾಜಕಾರಣಿ ಇದ್ದರೂ ಕೂಡ ತನಿಖೆಯಿಂದ ಬಯಲಿಗೆಳೆಯುತ್ತೇವೆ. ಆತನ ಜೊತೆಗೆ ಇರುವವರನ್ನು ಕೂಡ ಬಂಧಿಸಲಾಗುವುದು. ಸದ್ಯ ರವಿ ಬಂಧನವಾಗಿದೆ. ಹೆಚ್ಚಿನ ವಿವರಣೆ ನೀಡಲು ಹೋಗುವುದಿಲ್ಲ. ಪೊಲೀಸರು ಈ ಬಗ್ಗೆ ವಿವರ ನೀಡುತ್ತಾರೆ. ಗುರುವಾರ ನಾನು ಕೂಡ ಅಹಮದಾಬಾದ್‌ನಲ್ಲಿ ಇದ್ದದ್ದು ಕಾಕತಾಳಿಯವಷ್ಟೆ. ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ ಎಂದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಮ್ಮನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಪ್ರಧಾನಿ ಮೋದಿ

    ಅಮ್ಮನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ಪ್ರಧಾನಿ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ (Heeraben Modi) ಅಂತ್ಯಕ್ರಿಯೆಗೂ ಮುನ್ನ ಪಾರ್ಥೀವ ಶರೀರ ಮೆರವಣಿಗೆಯಲ್ಲಿ ಪ್ರಧಾನಿ ಮೋದಿ (Narendra Modi) ಹೆಗಲುಕೊಟ್ಟಿದ್ದಾರೆ.

    ಪಂಕಜ್ ಮೋದಿ ಅವರ ನಿವಾಸದಿಂದ ಪಾರ್ಥೀವ ಶರೀರ ಹೊತ್ತು ಅಂತಿಮ ಯಾತ್ರೆ ಹೊರಟಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಸೆಕ್ಟರ್ 30ರ ರುದ್ರಭೂಮಿಯಲ್ಲಿ ಹೀರಾಬೆನ್ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗ

    https://twitter.com/ANI/status/1608657708382826498?ref_src=twsrc%5Etfw%7Ctwcamp%5Etweetembed%7Ctwterm%5E1608657708382826498%7Ctwgr%5E2351e674e7380e0e692ebedd928f3344e89bfe54%7Ctwcon%5Es1_&ref_url=https%3A%2F%2Fwww.indiatoday.in%2Findia%2Fstory%2Fpm-modi-carries-mortal-remains-of-mother-heeraba-2315247-2022-12-30

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೀರಾಬೆನ್ ಅವರನ್ನು ಬುಧವಾರವಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3.39ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

    ಶತಾಯುಷಿ ಹೀರಾಬೆನ್ ಅವರು ಐವರು ಪುತ್ರರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸದ್ಯ ಹೀರಾಬೆನ್ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಗಣ್ಯರು ಸಂತಾಪಗಳನ್ನು ಸೂಚಿಸುತ್ತಿದ್ದಾರೆ. ಅಲ್ಲದೇ ಪ್ರಧಾನಿಯವರಿಗೆ ಧೈರ್ಯ ತುಂಬುತ್ತಿದ್ದಾರೆ. ಇದನ್ನೂ ಓದಿ: ಇಂದೇ ಮೋದಿ ತಾಯಿ ಹೀರಾಬೆನ್ ಅಂತ್ಯಕ್ರಿಯೆ

    ನಾನ್‌ಸ್ಟಾಪ್ ಕೆಲಸದ ಹಿಂದಿತ್ತು ಅಮ್ಮನ ಟಿಪ್ಸ್: ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಮೋದಿ ನಾನ್ ಸ್ಟಾಪ್ ಕೆಲ್ಸದ ಹಿಂದೆ ಅಮ್ಮನ ಟಿಪ್ಸ್ ಇತ್ತು. ಪರಿಶ್ರಮವೇ- ಜೀವನದ ಮಂತ್ರ ಅಂತಾ ಅಮ್ಮ ಸದಾ ಮಗನಿಗೆ ಕಿವಿಮಾತು ಹೇಳುತ್ತಿದ್ದರು. ಪ್ರಾಮಾಣಿಕತೆ ಮತ್ತು ಸ್ವಾಭಿಮಾನದ ಪಾಠದ ಜೊತೆಗೆ ಸದಾ ಪರಿಶ್ರಮ ಪಡಬೇಕು ಸದಾ ಸಲಹೆ ಪಡೆಯುತ್ತಿದ್ದರು. ಯಾವುದೇ ಸವಾಲನ್ನು ಜಯಿಸಲು ನಿರಂತರ ಪರಿಶ್ರಮಪಡಬೇಕು ಎಂಬುದು ಅವರ ಪ್ರಮುಖ ಮಂತ್ರವಾಗಿತ್ತು. ಅದಕ್ಕಾಗಿಯೇ ನನ್ನ ಯಶಸ್ಸಿನ ಹಿಂದೆ ತಾಯಿಯಿದ್ದಾರೆ ಅಂತಾ ಮೋದಿ ಸದಾ ಹೇಳುತ್ತಿದ್ದರು ಅನ್ನೋದು ಭಾವುಕ.

    Live Tv
    [brid partner=56869869 player=32851 video=960834 autoplay=true]

  • ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು

    ಪ್ರಧಾನಿ ಮೋದಿ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಅವರು ಬುಧವಾರ ಅಹಮದಾಬಾದ್‌ನ (Ahmedabad) ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಈ ವರ್ಷ 99 ವಯಸ್ಸನ್ನು ಪೂರೈಸಿರುವ ಹೀರಾಬೆನ್ ಅವರನ್ನು ಈ ಹಿಂದೆಯೂ ಆಸ್ಪತ್ರೆಗೆ (Hospital) ದಾಖಲಿಸಲಾಗಿತ್ತು. ವರದಿಗಳ ಪ್ರಕಾರ, ಪ್ರಧಾನಿ ಮೋದಿಯವರ ತಾಯಿಯ ಆರೋಗ್ಯ ಹದಗೆಟ್ಟಿದ್ದು, ಇದೀಗ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

    ಈ ಹಿಂದೆ ಗುಜರಾತ್ ವಿಧಾನಸಭಾ ಚುನಾವಣೆ ಪ್ರಚಾರದ ಬಳಿಕ ಪ್ರಧಾನಿ ಮೋದಿ ತಮ್ಮ ತಾಯಿಯನ್ನು ಗಾಂಧಿನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದರು.

    ನಿನ್ನೆ ಮೈಸೂರಿನಲ್ಲಿ ನಡೆದ ಕಾರು ಅಪಘಾತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ ಅವರು ತಮ್ಮ ಮಗ, ಸೊಸೆ ಮತ್ತು ಮೊಮ್ಮಗನೊಂದಿಗೆ ಬಂಡೀಪುರಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಪ್ರಯಾಣಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಉತ್ತರ ಭಾರತದಲ್ಲಿ ಮಂಜಿನ ದಟ್ಟನೆ – ವಿಮಾನ ಸಂಚಾರಕ್ಕೆ ಅಡಚಣೆ

    ಪ್ರಹ್ಲಾದ್ ಮೋದಿ ಅವರನ್ನು ತಮ್ಮ ಕುಟುಂಬದೊಂದಿಗೆ ಚಿಕಿತ್ಸೆಗಾಗಿ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಸುರಕ್ಷಿತರಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ಲಾನ್: ಅಶ್ವಥ್ ನಾರಾಯಣ್ ಘೋಷಣೆ

    Live Tv
    [brid partner=56869869 player=32851 video=960834 autoplay=true]

  • ಗುಜರಾತ್‌ ಚುನಾವಣೆ – ಸರತಿ ಸಾಲಲ್ಲಿ ನಿಂತು ಮತ ಚಲಾಯಿಸಿದ ಮೋದಿ

    ಗುಜರಾತ್‌ ಚುನಾವಣೆ – ಸರತಿ ಸಾಲಲ್ಲಿ ನಿಂತು ಮತ ಚಲಾಯಿಸಿದ ಮೋದಿ

    ಗಾಂಧೀನಗರ: ಪ್ರಧಾನಿ ಮೋದಿ (Narendra Modi) ತವರು ಗುಜರಾತ್‌ ವಿಧಾನಸಭಾ ಚುನಾವಣೆ (Gujarat Election) ಅಂತಿಮ ಹಂತ ತಲುಪಿದೆ. ಇಂದು 2ನೇ ಹಂತದ ಮತದಾನ ನಡೆಯುತ್ತಿದ್ದು, ಅಹಮದಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು.

    ಪ್ರಧಾನಿಯವರು ನಿಶಾನ್ ಪಬ್ಲಿಕ್ ಸ್ಕೂಲ್‌ನಲ್ಲಿರುವ ಮತಗಟ್ಟೆಗೆ ತೆರಳಿ ಮತ ಚಲಾಯಿಸಲು ಕ್ಯೂನಲ್ಲಿ ನಿಂತಿದ್ದ ಜನಸಮೂಹದತ್ತ ಹೋದರು. ನಂತರ ಜನರಿಗೆ ನಮಸ್ಕರಿಸಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಇದನ್ನೂ ಓದಿ: ಪ್ರಾಂಶುಪಾಲರಿಗೆ ಜೈಶ್ರೀರಾಮ್ ಎಂದು ಘೋಷಣೆ ಕೂಗಲು ಒತ್ತಾಯಿಸಿದ ABVP ಕಾರ್ಯಕರ್ತರು

    ರಾಜ್ಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮೋದಿ ಮನವಿ ಮಾಡಿದರು. ಇಂದು ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

    2ನೇ ಹಂತದಲ್ಲಿ 61 ರಾಜಕೀಯ ಪಕ್ಷಗಳ 883 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಎಎಪಿ ಎಲ್ಲ 91 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಕಾಂಗ್ರೆಸ್‌ 90 ಕ್ಷೇತ್ರದಲ್ಲಿ ಕಣದಲ್ಲಿದೆ. ಇದನ್ನೂ ಓದಿ: ತಾಳಿಕಟ್ಟೋ ಕೊನೆ ಕ್ಷಣದಲ್ಲೇ ಹೃದಯಾಘಾತ – 21ರ ಯುವತಿ ಸಾವು

    2017ರ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಈ ಕ್ಷೇತ್ರಗಳಲ್ಲಿ 51 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್‌ 39 ಹಾಗೂ ಇತರರು 3 ಸ್ಥಾನ ಪಡೆದುಕೊಂಡಿದ್ದರು. ಡಿಸೆಂಬರ್‌ 8ರಂದ ಮತ ಎಣಿಕೆ ನಡೆಯಲಿದೆ.

    Live Tv
    [brid partner=56869869 player=32851 video=960834 autoplay=true]

  • ಗುಜರಾತ್ ಚುನಾವಣೆ- ತಾಯಿಯ ಆಶೀರ್ವಾದ ಪಡೆದ ಮೋದಿ

    ಗುಜರಾತ್ ಚುನಾವಣೆ- ತಾಯಿಯ ಆಶೀರ್ವಾದ ಪಡೆದ ಮೋದಿ

    ಗಾಂಧಿನಗರ: ನಾಳೆ ನಡೆಯುವ ಗುಜರಾತ್ ವಿಧಾನಸಭಾ ಚುನಾವಣೆಯ (Gujarat Assembly polls) ಎರಡನೇ ಹಂತದ ಮತದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ ಚಲಾಯಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಅಹಮದಾಬಾದ್‍ಗೆ (Ahmedabad) ಬಂದಿಳಿದ ಪ್ರಧಾನಿ ಮೋದಿ ಅವರು, ತಮ್ಮ ತಾಯಿಯ ಆಶೀರ್ವಾದ ಪಡೆದರು.

    ನಾಳೆ ಗುಜರಾತ್‍ನ 14 ಕೇಂದ್ರ ಮತ್ತು ಉತ್ತರ ಜಿಲ್ಲೆಗಳ 93 ವಿಧಾನಸಭಾ ಸ್ಥಾನಗಳಲ್ಲಿ ಮತದಾನ ನಡೆಯಲಿದೆ. ಅಹಮದಾಬಾದ್‍ನಲ್ಲಿ ಬೆಳಗ್ಗೆ 8:30ಕ್ಕೆ ಪ್ರಧಾನಿ ಮೋದಿ ಮತದಾನ ಮಾಡುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಇಂದು ಅಹಮದಾಬಾದ್‍ಗೆ ಬಂದಿದ್ದಾರೆ. ಈ ಸಮಯದಲ್ಲಿ ಪ್ರಧಾನಿ ಮೋದಿ ಅವರು ತಮ್ಮ ತಾಯಿ ಹೀರಾಬೆನ್ ಮೋದಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

    ಹೀರಾಬೆನ್ ಮೋದಿ ಅವರು ಪ್ರಧಾನಿಯವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಗಾಂಧಿನಗರದ ಹೊರವಲಯದಲ್ಲಿರುವ ರೈಸನ್ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಮೋದಿ ಈ ಹಿಂದೆ ಹೀರಾಬೆನ್ ಅವರ 99ನೇ ಹುಟ್ಟುಹಬ್ಬದಂದು ಭೇಟಿ ಮಾಡಿದ್ದರು. ಜೂನ್‌ ತಿಂಗಳಲ್ಲಿ ಹೀರಬೆನ್‌ ಅವರ ಹುಟ್ಟುಹಬ್ಬ ನಡೆದಿತ್ತು. ಇದನ್ನೂ ಓದಿ: ಹೈದರಾಬಾದ್‌ನಲ್ಲಿ ದೇಶದ ಮೊದಲ ಚಿನ್ನದ ATM ಉದ್ಘಾಟನೆ – ಇಲ್ಲಿ ಹಣ ಅಲ್ಲ, ಚಿನ್ನ ಡ್ರಾ ಮಾಡ್ಬೋದು!

    2017ರ ಅಸೆಂಬ್ಲಿ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯು 51 ಸ್ಥಾನಗಳನ್ನು, ಕಾಂಗ್ರೆಸ್ 39 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, 3 ಸ್ಥಾನಗಳನ್ನು ಸ್ವತಂತ್ರ ಅಭ್ಯರ್ಥಿಗಳು ಗೆದ್ದಿದ್ದರು. ಇದನ್ನೂ ಓದಿ: ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

    Live Tv
    [brid partner=56869869 player=32851 video=960834 autoplay=true]

  • ಜನಪ್ರಿಯ ಪಾನೀಯ ರಸ್ನಾ ಸೃಷ್ಟಿಕರ್ತ ಅರೀಜ್ ಪಿರೋಜ್‍ಶಾ ಖಂಬಟ್ಟಾ ನಿಧನ

    ಜನಪ್ರಿಯ ಪಾನೀಯ ರಸ್ನಾ ಸೃಷ್ಟಿಕರ್ತ ಅರೀಜ್ ಪಿರೋಜ್‍ಶಾ ಖಂಬಟ್ಟಾ ನಿಧನ

    ಗಾಂಧೀನಗರ: ಜನಪ್ರಿಯ ಪಾನೀಯ ರಸ್ನಾದ ಸಂಸ್ಥಾಪಕ ಅಧ್ಯಕ್ಷ ಅರೀಜ್ ಪಿರೋಜ್‍ಶಾ ಖಂಬಟ್ಟಾ (Areez Pirojshaw Khambatta) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

    ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೈಗಾರಿಕೋದ್ಯಮಿ ಅರೀಜ್ ಪಿರೋಜ್‍ಶಾ ಖಂಬಟ್ಟಾ ಅವರು ನವೆಂಬರ್ 19 ರಂದು ಸೋಮವಾರ ಅಹಮದಾಬಾದ್‍ನಲ್ಲಿ (Ahmedabad) ಕೊನೆಯುಸಿರೆಳೆದಿದ್ದಾರೆ. ಅರೀಜ್ ಪಿರೋಜ್‍ಶಾ ಖಂಬಟ್ಟಾ ಅವರು, ಪತ್ನಿ ಪರ್ಸಿಸ್ ಮತ್ತು ಮಕ್ಕಳಾದ ಪಿರುಜ್, ಡೆಲ್ನಾ, ರುಜಾನ್, ಸೊಸೆ ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

    ದಶಕಗಳ ಹಿಂದೆ ಅರೀಜ್ ಪಿರೋಜ್‍ಶಾ ಖಂಬಟ್ಟಾ ಅವರ ತಂದೆ ಫಿರೋಜಾ ಖಂಬಟ್ಟಾ ಅವರು ಸಾಮಾನ್ಯ ವ್ಯಾಪಾರವನ್ನು ಪ್ರಾರಂಭಿಸಿದರು. ನಂತರ ಈ ವ್ಯಾಪಾವನ್ನು 60 ಕ್ಕೂ ಹೆಚ್ಚು ದೇಶಗಳಲ್ಲಿ ಅಸ್ತಿತ್ವಕ್ಕೆ ತಂದು ಜನಪ್ರಿಯಗೊಳಿಸಿ, ವಿಶ್ವದ ಅತಿದೊಡ್ಡ ಕೇಂದ್ರೀಕೃತ ತಯಾರಕರಾಗಿ ಗುರುತಿಸಿಕೊಂಡರು. ಇದನ್ನೂ ಓದಿ: BMTCಯಿಂದ ಸಿಹಿಸುದ್ದಿ- ಶೀಘ್ರದಲ್ಲೇ ಹೋಂ ಟು ಮೆಟ್ರೋ ಸ್ಟೇಷನ್ ಮಿನಿಬಸ್

    1970 ರ ದಶಕದಲ್ಲಿ ದುಬಾರಿ ವೆಚ್ಚದಲ್ಲಿ ಮಾರಾಟವಾಗುತ್ತಿದ್ದ ತಂಪು ಪಾನೀಯ ಉತ್ಪನ್ನಗಳಿಗೆ ಪರ್ಯಾಯವಾಗಿ ಕೈಗೆಟುಕುವ ದರದಲ್ಲಿ ರಸ್ನಾದ ತಂಪು ಪಾನೀಯ ಪ್ಯಾಕ್‍ಗಳನ್ನು ತಯಾರಿಸುತ್ತಿದ್ದರು. ಇದು ದೇಶದಲ್ಲಿ 1.8 ಮಿಲಿಯನ್ ಚಿಲ್ಲರೆ ಅಂಗಡಿಗಳಲ್ಲಿ ಮಾರಾಟವಾಗುತ್ತಿದೆ. ಇದನ್ನೂ ಓದಿ: ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ಗುರಿ- ಮಂಗಳೂರು ಸ್ಫೋಟಕ್ಕೆ ಬೆಂಗಳೂರು ಲಿಂಕ್

    ಈಗ ವಿಶ್ವದ ಅತಿ ದೊಡ್ಡ ಸಾಫ್ಟ್ ಡ್ರಿಂಕ್‍ಗಳಲ್ಲಿ ಒಂದಾಗಿರುವ ರಸ್ನಾ, ಅನೇಕ ಬ್ರಾಂಡ್‍ಗಳಿಗೆ ಪೈಪೋಟಿ ನೀಡುವುದರ ಜೊತೆಗೆ ಹೆಚ್ಚಾಗಿ ಮಾರಾಟವಾಗುತ್ತಿದೆ. ಅನೇಕ ಮಂದಿ ರಸ್ನಾ ಪಾನೀಯವನ್ನು ಕುಡಿಯುವ ಮೂಲಕ ಸಾಕಷ್ಟು ಆನಂದಿಸುತ್ತಿದ್ದಾರೆ. 80 ಮತ್ತು 90ರ ದಶಕದ ಬ್ರ್ಯಾಂಡ್‍ನ “ಐ ಲವ್ ಯು ರಸ್ನಾ” ಅಭಿಯಾನವು ಇನ್ನೂ ಜನರ ಮನಸ್ಸಿನಲ್ಲಿ ಹಾಗೆಯೇ  ಇದೆ.

    5 ರೂಪಾಯಿಯ ರಸ್ನಾ ಪ್ಯಾಕ್‍ನಿಂದ 32 ಗ್ಲಾಸ್ ತಂಪು ಪಾನೀಯಗಳನ್ನು ತಯಾರಿಸಬಹುದು. ಪ್ರತಿ ಗ್ಲಾಸ್‍ಗೆ ಕೇವಲ 15 ಪೈಸೆ ವೆಚ್ಚವಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ರೈಲ್ವೇ ಹಳಿಯಲ್ಲಿ ಬಿರುಕು, ಭಾರೀ ಸ್ಫೋಟಕ ಪತ್ತೆ – ಉಗ್ರ ಕೃತ್ಯ ಶಂಕೆ

    ರೈಲ್ವೇ ಹಳಿಯಲ್ಲಿ ಬಿರುಕು, ಭಾರೀ ಸ್ಫೋಟಕ ಪತ್ತೆ – ಉಗ್ರ ಕೃತ್ಯ ಶಂಕೆ

    ಜೈಪುರ: ಉದಯಪುರ ಮತ್ತು ಅಹಮದಾಬಾದ್ ಸಂಪರ್ಕಿಸುವ ಹೊಸದಾಗಿ ತೆರೆಯಲಾದ ರೈಲ್ವೇ ಹಳಿಯಲ್ಲಿ (Railway Track) ಬಿರುಕು ಕಂಡುಬಂದ ತಕ್ಷಣ ಆ ಮಾರ್ಗವಾಗಿ ಪ್ರಯಾಣಿಸಲಿದ್ದ ರೈಲುಗಳನ್ನು (Train) ಭಾನುವಾರ ಸ್ಥಗಿತಗೊಳಿಸಲಾಗಿದೆ. ಈ ಮೂಲಕ ಭಾರೀ ಅನಾಹುತವನ್ನು ತಪ್ಪಿಸಲಾಗಿದೆ.

    ಮೂಲಗಳ ಪ್ರಕಾರ ಅಸರ್ವಾ-ಉದಯಪುರ ಎಕ್ಸ್‌ಪ್ರೆಸ್ ರೈಲು ಇದೇ ಮಾರ್ಗವಾಗಿ ಸಾಗಬೇಕಿದ್ದ ಗಂಟೆಗಳ ಮೊದಲು ರೈಲ್ವೇ ಹಳಿಯಲ್ಲಿ ಸ್ಫೋಟ (Explosion) ಉಂಟಾಗಿದೆ. ತಕ್ಷಣ ಸ್ಥಳಕ್ಕಾಗಮಿಸಿದ ಅಧಿಕಾರಿಗಳಿಗೆ ಹಳಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಅದೇ ಸ್ಥಳದಲ್ಲಿ ಡಿಟೋನೇಟರ್‌ಗಳು ಮತ್ತು ಗನ್‌ಪೌಡರ್‌ಗಳನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದು, ಅದನ್ನು ವಶಪಡಿಸಿಕೊಂಡಿದ್ದಾರೆ. ಇದರಿಂದ ಉದಯಪುರ ಭಯೋತ್ಪಾದನಾ ನಿಗ್ರಹ ದಳ (ATS) ಅಧಿಕಾರಿಗಳಿಗೆ ದೊಡ್ಡ ಪಿತೂರಿಯ ಸುಳಿವು ಸಿಕ್ಕಿದ್ದು, ಭಯೋತ್ಪಾದನಾ ಕೋನದಲ್ಲೂ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಮುಂಬೈ ಏರ್‌ಪೋರ್ಟ್‌ನಲ್ಲಿ ಒಂದೇ ದಿನ 61 ಕೆಜಿ ಚಿನ್ನ ವಶ

    ಈ ಕೃತ್ಯದ ಬಗ್ಗೆ ಎಲ್ಲಾ ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ. ಬಿರುಕು ಬಿದ್ದಿರುವ ಹಳಿಯನ್ನು ಸರಿಪಡಿಸಲಾಗುತ್ತಿದೆ. ಶೀಘ್ರವೇ ಈ ಮಾರ್ಗವಾಗಿ ರೈಲು ಸಂಚಾರ ಪುನರಾರಂಭವಾಗಲಿದೆ ಎಂದು ಉದಯಪುರ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಶೀಘ್ರವೇ ಬರಲಿದೆ ಚಾಲಕನಿಲ್ಲದೇ ಚಲಿಸೋ ರೈಲು

    ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 31 ರಂದು ಅಹಮದಾಬಾದ್‌ನ ಅಸರ್ವಾ ರೈಲು ನಿಲ್ದಾಣದಿಂದ ಈ ಹಳಿಯಲ್ಲಿ ಅಸರ್ವಾ-ಉದಯಪುರ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಏಕ ಭಾರತ್, ಶ್ರೇಷ್ಠ ಭಾರತ್ – ಅಹಮದಾಬಾದ್‌ ಕನ್ನಡ ಸಂಘದ ಕಾರ್ಯಕ್ರಮಕ್ಕೆ ಮೋದಿ ಮೆಚ್ಚುಗೆ

    ಏಕ ಭಾರತ್, ಶ್ರೇಷ್ಠ ಭಾರತ್ – ಅಹಮದಾಬಾದ್‌ ಕನ್ನಡ ಸಂಘದ ಕಾರ್ಯಕ್ರಮಕ್ಕೆ ಮೋದಿ ಮೆಚ್ಚುಗೆ

    ಅಹಮದಾಬಾದ್‌: ಗುಜರಾತ್‌ನ ಅಹಮದಾಬಾದ್‌ ಕನ್ನಡ ಸಂಘದ(Ahmedabad Kannada Organisation) 75ನೇ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ(Narendra Modi) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಏಕ ಭಾರತ್, ಶ್ರೇಷ್ಠ ಭಾರತ್. ಇಂತಹ ಸಾಂಸ್ಕೃತಿಕ ವಿನಿಮಯಗಳು ಉತ್ತೇಜನಕಾರಿ. ಕರ್ನಾಟಕದ ಸಂಸ್ಕೃತಿ ಮತ್ತು ಕನ್ನಡ ಭಾಷೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ಗೌರವಿಸಲಾಗುತ್ತಿದೆ ಎಂದು ಮೋದಿ ಕನ್ನಡದಲ್ಲೇ ಟ್ವೀಟ್‌ ಮಾಡಿದ್ದಾರೆ.

    ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೇಂದ್ರ ಸಂಸದೀಯ ಮತ್ತು ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ, ಅಹಮದಾಬಾದ್‌ನಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಸ್ಥಳ ನೀಡುವಂತೆ ಗುಜರಾತ್(Gujarat) ಸಿಎಂ ಭೂಪೇಂದ್ರ ಪಟೇಲ್ ಅವರಲ್ಲಿ ಮನವಿ ಮಾಡಿದ್ದಾರೆ.

    ಕರ್ನಾಟಕ ಭವನ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರ ಹಾಗೂ ತಮ್ಮ ವೈಯಕ್ತಿಕ ಸಹಕಾರ ನೀಡುವುದಾಗಿ ಅವರು ಹೇಳಿದರು. ವಾರ್ಷಿಕೋತ್ಸವದಲ್ಲಿ ಗುಜರಾತ್‌ ಕನ್ನಡಿಗರೊಂದಿಗೆ ಎರಡು ರಾಜ್ಯಗಳು ಹೊಂದಿರುವ ವಿಶೇಷ ಬಾಂಧವ್ಯದ ಕುರಿತ ಹಲವು ವಿಚಾರಗಳನ್ನು ಹಂಚಿಕೊಂಡರು.

    ಒಂದೆಡೆ ದೇಶದ ಆಜಾದಿ ಕಾ ಅಮೃತ ಮಹೋತ್ಸವ ನಡೆಯುತ್ತಿದೆ. ಗುಜರಾತ್ ನಲ್ಲಿ ಕನ್ನಡ ಸಂಘದ 75ನೇ ವರ್ಷದ ಸಂಭ್ರಮ ನಡೆಯುತ್ತಿದೆ. ಅಂದಿನ ದಿನಗಳಲ್ಲಿಯೇ ಕನ್ನಡಿಗರು ಗುಜರಾತ್ ರಾಜ್ಯಕ್ಕೆ ಬಂದು, ಇಲ್ಲಿನ ಜನರೊಂದಿಗೆ ಬೆರೆತು, ವ್ಯಾಪಾರ-ವಹಿವಾಟು ನಡೆಸಿ ಗುಜರಾತನ ಏಳಿಗೆಗೆ ಕೊಡುಗೆಗಳನ್ನು ನೀಡಿದ್ದಾರೆ. ಇದು ಶ್ಲಾಘನೀಯ ಕಾರ್ಯ. ನರ್ಮದಾ ನದಿಯಿಂದ ಕಾವೇರಿವರೆಗೆ ಕನ್ನಡ ಹಾಗೂ ಗುಜರಾತಿ ಮಾತನಾಡುವವರಿದ್ದಾರೆ. ಈ ಬಾಂಧವ್ಯ ನೂರಾರು ವರ್ಷಗಳಿಂದೆ ನಡೆದುಕೊಂಡು ಬಂದಿದೆ ಎಂದು ಜೋಶಿ(Pralhad joshi) ಸಂತಸ ವ್ಯಕ್ತಪಡಿಸಿದರು.

    ಆರ್‌ಎಸ್‌ಎಸ್‌, ಜನ ಸಂಘ ಹಾಗೂ ಬಿಜೆಪಿಯನ್ನು ಕಟ್ಟುವಾಗ ಆರಂಭಿಕ ದಿನಗಳಲ್ಲಿ ನಮಗೆ ಸಹಕಾರ ನೀಡುತ್ತಿದ್ದವರು ಗುಜರಾತಿಗಳು. ಈ ದೃಷ್ಟಿಯಿಂದ ಈ ಸಮುದಾಯದೊಂದಿಗೆ ನನ್ನ ವಿಶೇಷ ಸಂಬಂಧವಿದೆ ಎಂದು ಜೋಶಿ ತಮ್ಮ ಹಳೆಯ ನೆನಪುಗಳನ್ನು ಸ್ಮರಿಸಿದರು. ಇದನ್ನೂ ಓದಿ: ತಿರುಪತಿಯಲ್ಲಿ ದರ್ಶನಕ್ಕೆ ಕಾಯಬೇಕು 50 ಗಂಟೆ

    ಇಂದು ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶ ಅಭೂತಪೂರ್ವ ಬೆಳವಣಿಗೆ ಕಾಣುತ್ತಿದೆ. 200 ವರ್ಷಗಳ ವರೆಗೆ ನಮ್ಮನ್ನು ಆಳಿ, ದೇಶ ಬಿಟ್ಟು ಹೋಗುವಾಗ ಅಪಹಾಸ್ಯ ಮಾಡಿ, ಈ ದೇಶದ ಏಳಿಗೆ ಸಾಧ್ಯವೇ ಇಲ್ಲ ಎಂಬ ರೀತಿಯಲ್ಲಿ ಮಾತನಾಡಿದ್ದ ಬ್ರಿಟಿಷರನ್ನು ಹಿಂದಿಕ್ಕಿ ನಾವು ಇಂದು ಐದನೇ ಅತ್ಯಂತ ಪ್ರಬಲ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದೇವೆ. ಈ ಸಾಧನೆಯಲ್ಲಿ ಕರ್ನಾಟಕ ಹಾಗೂ ಗುಜರಾತ್ ಅತ್ಯಂತ ಮಹತ್ವದ ಕೊಡುಗೆಗಳನ್ನು ನೀಡಿವೆ ಎಂದು ಜೋಶಿ ತಮ್ಮ ಅನಿಸಿಕೆ ಹಂಚಿಕೊಂಡರು.‌

    ಈಗ ಸರ್ಕಾರ ಕೈಗೆತ್ತಿಕೊಂಡಿರುವ ಮತ್ತೊಂದು ಮಹತ್ವದ ಕಾರ್ಯ ನೂತನ ಶಿಕ್ಷಣ ನೀತಿ. ರಾಷ್ಟ್ರದ ಭವಿಷ್ಯದ ದೃಷ್ಟಿಯಿಂದ ಇದು ಅತ್ಯಂತ ಉತ್ತಮ ನೀತಿಯಾಗಿದೆ. ಆಯಾ ರಾಜ್ಯದಲ್ಲಿ, ಅಲ್ಲಿನ ಮಾತೃ ಭಾಷೆಗೆ ಪ್ರಾಮುಖ್ಯತೆ ನೀಡಲಾಗಿದೆ. ಇಂಗ್ಲೀಷ್‌ಗಿಂತ ಪುರಾತನ ಇತಿಹಾಸ ಹೊಂದಿರುವ ಭಾಷೆಗಳು ನಮ್ಮ ದೇಶದಲ್ಲಿದ್ದು, ಅವುಗಳಿಗೆ ಪ್ರಾಮುಖ್ಯತೆ ನೀಡುವ ದೃಷ್ಟಿಯಿಂದ ಈ ನೀತಿ ಜಾರಿಗೊಳಿಸಲಾಗುತ್ತಿದೆ. 19 ಹಾಗೂ 20ನೇ ಶತಮಾನಗಳು ಪಾಶ್ಚಿಮಾತ್ಯರ ಪಾಲಾಗಿದ್ದರೆ, 21ನೇ ಶತಮಾನ ಭಾರತದ್ದಾಗಿ ಮಾಡುವ ಸಂಕಲ್ಪದೊಂದಿಗೆ ಪ್ರಧಾನಿ ಮೋದಿ ಹಾಗೂ ಅಮಿತ್‌ ಶಾ ಅವರ ನೇತೃತ್ವದಲ್ಲಿ ನಾವು ಶ್ರಮಿಸುತ್ತಿದ್ದೇವೆ ಎಂದು ಇದೇ ವೇಳೆ ಪ್ರಹ್ಲಾದ್‌ ಜೋಶಿ ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಬೆಂಗಾವಲು ವಾಹನ ನಿಲ್ಲಿಸಿ ಅಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಮೋದಿ

    ಬೆಂಗಾವಲು ವಾಹನ ನಿಲ್ಲಿಸಿ ಅಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಮೋದಿ

    ಗಾಂಧಿನಗರ: ದೇಶದಲ್ಲಿರುವ ವಿಐಪಿ ಸಂಸ್ಕೃತಿ ಕುರಿತಂತೆ ಯಾವಾಗಲೂ ವಾಗ್ದಾಳಿ ನಡೆಸುವ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು, ಮಾರ್ಗಮಧ್ಯೆ ತಾವು ಪ್ರಯಾಣಿಸುತ್ತಿದ್ದ ಕಾರನ್ನು ನಿಲ್ಲಿಸುವಂತೆ ಬೆಂಗಾವಲು ಪಡೆಗೆ ಆದೇಶಿಸಿ ಅಂಬುಲೆನ್ಸ್‌ಗೆ (Ambulance) ದಾರಿ ಮಾಡಿಕೊಡುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಅಹಮದಾಬಾದ್‍ನಿಂದ (Ahmedabad) ಗಾಂಧಿನಗರಕ್ಕೆ ಹೋಗುವ ದಾರಿಯಲ್ಲಿ ಬರುತ್ತಿದ್ದ ಅಂಬುಲೆನ್ಸ್ ಕಂಡು ನರೇಂದ್ರ ಮೋದಿ ಅವರು, ತಮ್ಮ ವಾಹನವನ್ನು ನಿಲ್ಲಿಸಿ ಅಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟಿದ್ದಾರೆ. ಮೋದಿ ಯುಗದಲ್ಲಿ ವಿಐಪಿ ಸಂಸ್ಕೃತಿ ಇಲ್ಲ ಎಂದು ಬಿಜೆಪಿ ನಾಯಕ ರುತ್ವಿಜ್ ಪಟೇಲ್ (BJP leader Rutvij Patel) ಟ್ವಿಟರ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಹೋಟೆಲ್ ರೂಮ್‍ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಾಡೆಲ್ ಶವ ಪತ್ತೆ

    ಗುಜರಾತ್ (Gujarat) ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಅಂಬುಲೆನ್ಸ್‌ಗೆ ದಾರಿ ಮಾಡಿಕೊಡುವ ಸಲುವಾಗಿ ತಮ್ಮ ಬೆಂಗಾವಲು ಪಡೆಯನ್ನು ನಿಲ್ಲಿಸಿದರು. ವಿಐಪಿ ಸಂಸ್ಕೃತಿಯ ವಿರುದ್ಧ ಪ್ರಧಾನಿಯವರ ಮತ್ತೊಂದು ನಡೆ. ಇದೊಂದು ಮಾನವೀಯತೆಯನ್ನು ಸೂಚಿಸುತ್ತದೆ ಎಂದು ಬರೆಯಲಾಗಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಹೆಚ್ಚಿನ ದರ ಪಡೆದರೆ ಬಸ್ ರೂಟ್‍ಪರ್ಮಿಟ್ ಕ್ಯಾನ್ಸಲ್

    2017ರಿಂದಲೂ ಭಾರತದಲ್ಲಿರುವ ವಿಐಪಿ ಸಂಸ್ಕೃತಿಯ ವಿರುದ್ಧ ಮಾತನಾಡುವ ನರೇಂದ್ರ ಮೋದಿ ಅವರು, ಪ್ರತಿಯೊಬ್ಬ ವ್ಯಕ್ತಿಯೂ ವಿಐಪಿ ಸಂಸ್ಕೃತಿಯನ್ನು ಬದಲಾಯಿಸಿಕೊಳ್ಳುವುದು ಬಹಳ ಮುಖ್ಯ. ಎಲ್ಲಾ ಭಾರತೀಯರು ವಿಐಪಿ ಮನಸ್ಥಿತಿಯನ್ನು ತೊಡೆದುಹಾಕಬೇಕು. ಪ್ರತಿಯೊಬ್ಬ ವ್ಯಕ್ತಿಗೂ ಮೌಲ್ಯ ಮತ್ತು ಪ್ರಾಮುಖ್ಯತೆ ನೀಡಬೇಕು ಎಂದು ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

  • ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿತ – 7 ಸಾವು, ಒಬ್ಬರ ಸ್ಥಿತಿ ಗಂಭೀರ

    ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿತ – 7 ಸಾವು, ಒಬ್ಬರ ಸ್ಥಿತಿ ಗಂಭೀರ

    ಗಾಂಧೀನಗರ: ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್(Lift) ಕುಸಿದು(Collapse) 7 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುಜರಾತ್‌ನ(Gujarat) ಅಹಮದಾಬಾದ್‌ನಲ್ಲಿ(Ahmedabad) ಬುಧವಾರ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಗುಜರಾತ್ ವಿಶ್ವವಿದ್ಯಾನಿಲಯದ ಬಳಿ ಸುಮಾರು 10 ಗಂಟೆಯ ವೇಳೆಗೆ ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡದ ಲಿಫ್ಟ್ ಕುಸಿದಿದೆ. ಲಿಫ್ಟ್ ಕುಸಿತದ ವೇಳೆ ಅದರಲ್ಲಿ 8 ಕಾರ್ಮಿಕರಿದ್ದರು ಎನ್ನಲಾಗಿದೆ.

    ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್(ಎಎಂಸಿ)ಯ ಅಗ್ನಿಶಾಮಕ ದಳ ಅಥವಾ ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳಿಗೆ ಘಟನೆಯ ಬಗ್ಗೆ ಯಾವುದೇ ಕರೆಗಳು ಬಂದಿಲ್ಲ ಎನ್ನಲಾಗಿದೆ. ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳ ತಲುಪಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕಂದಕಕ್ಕೆ ಉರುಳಿದ ಮಿನಿಬಸ್‌ – 10 ಮಂದಿ ದುರ್ಮರಣ, 28 ಮಂದಿಗೆ ಗಾಯ

    ನಮಗೆ ಘಟನೆಯ ಬಗ್ಗೆ ಯಾವುದೇ ಏಜೆನ್ಸಿ ಅಥವಾ ಡೆವೆಲಪರ್‌ಗಳಿಂದ ಕರೆ ಬಂದಿರಲಿಲ್ಲ. ಮಾಧ್ಯಮಗಳ ವರದಿ ಹಾಗೂ ಪ್ರತಿನಿಧಿಗಳಿಂದ ಬಂದ ದೂರವಾಣಿ ಮೂಲಕ ಘಟನೆ ಬಗ್ಗೆ ತಿಳಿದುಕೊಂಡೆವು. ಬಳಿಕ ಘಟನೆ ಬಗ್ಗೆ ಪರಿಶೀಲಿಸಲು ಸ್ಥಳಕ್ಕೆ ಬಂದೆವು ಎಂದು ಮುಖ್ಯ ಅಗ್ನಿಶಾಮಕ ಅಧಿಕಾರಿ ಜಯೇಶ್ ಖಾಡಿಯಾ ತಿಳಿಸಿದ್ದಾರೆ.

    ಇದು ಖಾಸಗಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವಾಗಿದ್ದು, ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬೇಗುಸರಾಯ್‍ನಲ್ಲಿ ಗುಂಡಿನ ದಾಳಿ – 11 ಮಂದಿಗೆ ಗಂಭೀರ ಗಾಯ, ಓರ್ವ ಸಾವು

    Live Tv
    [brid partner=56869869 player=32851 video=960834 autoplay=true]