ವಾಷಿಂಗ್ಟನ್: ಏರ್ ಇಂಡಿಯಾ ದುರಂತದಲ್ಲಿ (Air India Crash) ಮೃತಪಟ್ಟ ಬ್ರಿಟನ್ (Britain) ಪ್ರಜೆಗಳ ಕುಟುಂಬಸ್ಥರು ಅಮೆರಿಕ (America) ಹಾಗೂ ಬ್ರಿಟನ್‌ನ (Britain) ನ್ಯಾಯಾಲಯದಲ್ಲಿ (Court) ವಿಮಾನಯಾನ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಜೂ.12 ರಂದು ಅಹಮದಾಬಾದ್‌ನಲ್ಲಿ (Ahmedabad) ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನ ಅಪಘಾತಕ್ಕೆ ಈಡಾಗಿತ್ತು. ಈ ವಿಮಾನದಲ್ಲಿದ್ದ 242 ಜನರಲ್ಲಿ 241 ಜನ ಮೃತಪಟ್ಟು, ಒಬ್ಬರು ಮಾತ್ರ ಬದುಕುಳಿದಿದ್ದರು. ಈ ದುರಂತದಲ್ಲಿ 53 ಬ್ರಿಟನ್ ಪ್ರಜೆಗಳು ಮೃತಪಟ್ಟಿದ್ದರು. ಈ ಅವಘಡಕ್ಕೆ ಸಂಬಂಧಿಸಿದಂತೆ ಅಮೆರಿಕ ಮತ್ತು ಬ್ರಿಟನ್‌ನ ಕಾನೂನು ತಂಡಗಳು ಎರಡೂ ದೇಶಗಳಲ್ಲೂ ಮೊಕದ್ದಮೆ ಹೂಡಲು ಸಿದ್ಧತೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್ ಬಾಕ್ಸ್ ಅಮೆರಿಕಕ್ಕೆ ರವಾನೆ
ಅಂತಾರರಾಷ್ಟ್ರೀಯ ಕಾನೂನು ತಂಡಗಳು ಅಪಘಾತದಲ್ಲಿ ಮೃತಪಟ್ಟ ಬ್ರಿಟನ್ ಪ್ರಯಾಣಿಕರ ಕುಟುಂಬಗಳೊಂದಿಗೆ ಮಾತುಕತೆ ನಡೆಸುತ್ತಿವೆ. ಎಲ್ಲಾ ಪುರಾವೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಲಂಡನ್‌ನ ಹೈಕೋರ್ಟ್‌ನಲ್ಲಿ ಏರ್ ಇಂಡಿಯಾ ವಿರುದ್ಧ ಪ್ರಕರಣ ಹಾಗೂ ಅಮೆರಿಕದಲ್ಲಿ ಬೋಯಿಂಗ್ ವಿರುದ್ಧ ಮೊಕದ್ದಮೆ ಹೂಡಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಕಾನೂನು ತಜ್ಞರು, ಈ ದೇಶಗಳಲ್ಲಿನ ನ್ಯಾಯಾಲಯಗಳು ಸಾಮಾನ್ಯವಾಗಿ ಮೊಕದ್ದಮೆಗಳನ್ನು ಸಲ್ಲಿಸುವ ಜನರಿಗೆ ಹೆಚ್ಚು ಬೆಂಬಲ ನೀಡುತ್ತವೆ. ಈ ಪ್ರಕರಣಗಳು ನ್ಯಾಯವ್ಯಾಪ್ತಿಯ ಸಮಸ್ಯೆಗಳಿಂದಾಗಿ ವಿಳಂಬ ಆಗಬಹುದು ಎಂದು ಹೇಳಿದ್ದಾರೆ.
ಪತನಗೊಂಡ ವಿಮಾನದಲ್ಲಿ 169 ಭಾರತೀಯ ಪ್ರಯಾಣಿಕರು, 53 ಬ್ರಿಟನ್, 7 ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಯಾಣಿಕರಿದ್ದರು. ಅಲ್ಲದೇ 12 ಸಿಬ್ಬಂದಿ ಇದ್ದರು. ಈ ದುರಂತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿಯವರು ಸಾವಿಗೀಡಾಗಿದ್ದರು.
ಗಾಂಧೀನಗರ: ಅಹಮದಾಬಾದ್‌ನಲ್ಲಿ (Ahmedabad) ಶುಕ್ರವಾರ ನಡೆದ 148ನೇ ಜಗನ್ನಾಥ ರಥಯಾತ್ರೆಯ (Jagannath Rath Yatra) ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಆನೆಗಳು ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿರುವ ಘಟನೆ ನಡೆದಿದೆ. ಪರಿಣಾಮ ಇಬ್ಬರು ಭಕ್ತರು ಗಾಯಗೊಂಡಿದ್ದಾರೆ.
ಶುಕ್ರವಾರ ಬೆಳಗ್ಗೆ 10:15 ರ ಸುಮಾರಿಗೆ ರಥಯಾತ್ರೆ ನಗರದ ಖಾದಿಯಾ ಪ್ರದೇಶದ ಮೂಲಕ ಹಾದುಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಆನೆಯೊಂದು ಇದ್ದಕ್ಕಿದ್ದಂತೆ ಗುಂಪಿನಿಂದ ದೂರ ಸರಿದು ವಿರುದ್ಧ ದಿಕ್ಕಿನಲ್ಲಿ ಓಡಲು ಪ್ರಾರಂಭಿಸಿತು. ಕಿರಿದಾದ ಬೀದಿಯಾದ್ದರಿಂದ ಜನರು ಭಯಭೀತರಾದರು. ಇದರ ಜೊತೆ ಇನ್ನೆರಡು ಆನೆಗಳು ಸಹ ಓಡಿದವು. ಅವಘಡದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ನಂತರ ಮಾವತರು ಆನೆಗಳನ್ನು ನಿಯಂತ್ರಿಸಿದರು. ಆನೆಗಳನ್ನು ಕರೆದೊಯ್ದ ಬಳಿಕ ಮೆರವಣಿಗೆ ಮುಂದುವರಿಯಿತು. ಇದನ್ನೂ ಓದಿ: ಇಂದು ವೈಭವದ ಪುರಿ ಜಗನ್ನಾಥ ರಥಯಾತ್ರೆ
ಗಾಯಗೊಂಡಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಯಿತು. ಪುರುಷ ಭಕ್ತನನ್ನು ಚಿಕಿತ್ಸೆಗಾಗಿ ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
148ನೇ ರಥಯಾತ್ರೆಯ 16 ಕಿ.ಮೀ. ಮೆರವಣಿಗೆಯು ಶುಕ್ರವಾರ ಮುಂಜಾನೆ ಆರಂಭವಾಯಿತು. ಮೆರವಣಿಗೆಗೆ ಜಮಾಲ್ಪುರದ ಜಗನ್ನಾಥ ದೇವಸ್ಥಾನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳ ಆರತಿ ಮೂಲಕ ಚಾಲನೆ ಕೊಟ್ಟರು. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಪಾಲ್ಗೊಂಡಿದ್ದರು. ರಾಜ್ಯದ ಐತಿಹಾಸಿಕ ಮತ್ತು ದೊಡ್ಡ ರಥಯಾತ್ರೆಯ ಭದ್ರತೆಗಾಗಿ 23,000 ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಇತರ ಪಡೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಗಾಂಧೀನಗರ: ಪುರಿಯಲ್ಲಿ ಶುಕ್ರವಾರದಿಂದ ವೈಭವದ ಜಗನ್ನಾಥ ರಥಯಾತ್ರೆ (Jagannath Rath Yatra) ಆರಂಭವಾಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ.
ಯಾತ್ರೆಗೆ ಸಮಗ್ರ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಪುರಿ ಜಿಲ್ಲಾಧಿಕಾರಿ ಸಿದ್ಧಾರ್ಥ್ ಸ್ವೈನ್ ಅವರು, ಗುಂಡಿಚಾ ಯಾತ್ರೆಗಾಗಿ ಮೂರು ರಥಗಳನ್ನು ಅವುಗಳ ಗೊತ್ತುಪಡಿಸಿದ ಸ್ಥಳಕ್ಕೆ ತರಲಾಗಿದೆ. ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮ – ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಸಾಗರ
ಇಂದು ಮಹಾಪ್ರಭುಗಳ ರಥಯಾತ್ರೆ ನಡೆಯಲಿದೆ. ಪುರಿಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ. ಪೊಲೀಸರು ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಸಾರ್ವಜನಿಕ ಸುರಕ್ಷತೆ, ಜನಸಂದಣಿ ನಿರ್ವಹಣೆ ಮತ್ತು ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಂಚಾರ ಸುಗಮಗೊಳಿಸುವಿಕೆಯನ್ನು ನೋಡಿಕೊಳ್ಳಲಾಗಿದೆ. ಕೇಂದ್ರ ಸಂಸ್ಥೆಗಳು ಸಹ ಸಹಾಯ ಮಾಡಿವೆ. ರಥಯಾತ್ರೆಯನ್ನು ಸುಗಮವಾಗಿ ನಡೆಸಲಾಗುವುದು. ನಮ್ಮ ಕಣ್ಗಾವಲು ತಂಡಗಳು ಸಂಯೋಜಿತ ನಿಯಂತ್ರಣ ಕೊಠಡಿಯಲ್ಲಿ ಇರುತ್ತವೆ. ನಮ್ಮಲ್ಲಿ ಡ್ರೋನ್ ವಿರೋಧಿ ತಂಡಗಳೂ ಇವೆ. ಅವರು ಇಂದು ಮೂರು ಡ್ರೋನ್‌ಗಳನ್ನು ಹೊಡೆದುರುಳಿಸಿದರು. ಸ್ನೇಹಪರ ಡ್ರೋನ್‌ಗಳನ್ನು ಹೊರತುಪಡಿಸಿ, ಬೇರೆ ಯಾವುದೇ ಡ್ರೋನ್ ಚಲನೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪುರಿ ಎಸ್‌ಪಿ ವಿನೀತ್ ಅಗರ್‌ವಾಲ್ ಹೇಳಿದ್ದಾರೆ.
ನಾನು ಮುಂಬೈನಿಂದ ಬಂದಿದ್ದೇನೆ. ಇದು ಇಹಲೋಕದ ಹೊರಗಿನ ಅನುಭವ. ನಾನು ಜಗನ್ನಾಥನ ಭಕ್ತ. ಆದರೆ ನಾನು ಇಲ್ಲಿಗೆ ಬಂದಿರುವುದು ಇದೇ ಮೊದಲು. ಇದು ದೈವಿಕ ಅನುಭವ. ನಾನು ರಥವನ್ನು ಎಳೆಯಲು ಬಯಸುತ್ತೇನೆ. ಒಂದು ದಿನ ಭಗವಂತ ತನ್ನ ವಾಸಸ್ಥಾನದಿಂದ ಹೊರಬಂದು ವಿಶ್ವವನ್ನು ಆಶೀರ್ವದಿಸುತ್ತಾನೆ. ಎಲ್ಲರೂ ಇಲ್ಲಿಗೆ ಬಂದು ಆಶೀರ್ವಾದ ಪಡೆಯಬೇಕು. ಇಲ್ಲಿನ ಹವಾಮಾನ ತುಂಬಾ ಆಹ್ಲಾದಕರವಾಗಿದೆ. ರಾತ್ರಿಯಿಡೀ ಮಳೆಯಾಯಿತು ಎಂದು ಭಕ್ತೆಯೊಬ್ಬರು ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಘಟಪ್ರಭಾ ತಟದಲ್ಲಿ ಪ್ರವಾಹ ಭೀತಿ – ಮುಧೋಳ ತಾಲೂಕಿನ ಸೇತುವೆ ಜಲಾವೃತ ಸಾಧ್ಯತೆ
ಏನೇನು ಕಾರ್ಯಕ್ರಮ?
ಗುಂಡಿಚಾ ಮಾರ್ಜನಾ (ದೇವಾಲಯ ಶುಚಿಗೊಳಿಸುವಿಕೆ): ಜೂನ್ 26
ರಥಯಾತ್ರೆ (ರಥ ಮೆರವಣಿಗೆ): 27 ಜೂನ್ (ಶುಕ್ರವಾರ)
ಹೇರಾ ಪಂಚಮಿ: ಜುಲೈ 1
ಬಹುದಾ ಯಾತ್ರೆ: ಜುಲೈ 4–5
ಸುನಾ ಬೇಶಾ (ಚಿನ್ನದ ಉಡುಪು): ಜುಲೈ 5–6.
ನೀಲಾದ್ರಿ ಬಿಜಯ್: ಜುಲೈ 8.
ಪುರಿಯಾದ್ಯಂತ ಮತ್ತು 35 ಕಿಮೀ ದೂರದಲ್ಲಿರುವ, 13 ನೇ ಶತಮಾನದ ಸೂರ್ಯ ದೇವಾಲಯಕ್ಕೆ ಹೆಸರುವಾಸಿಯಾದ ಕೊನಾರ್ಕ್‌ನ ರಸ್ತೆಗಳಲ್ಲಿ ಕಣ್ಗಾವಲುಗಾಗಿ 275 ಕ್ಕೂ ಹೆಚ್ಚು ಎಐ ವ್ಯವಸ್ಥೆಯ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಜಗನ್ನಾಥ ರಥಯಾತ್ರೆ
ಅಹಮದಾಬಾದ್‌ನಲ್ಲಿ ನಡೆಯುವ ರಥಯಾತ್ರೆ ಅದೊಂದು ಐತಿಹಾಸಿಕ ಹಿಂದೂ ಹಬ್ಬ. 1878ರಿಂದಲೂ ಪ್ರತಿವರ್ಷ ರಥೋತ್ಸವ ಜರುಗುತ್ತಿದೆ. ಜಗನ್ನಾಥ ದೇವಸ್ಥಾನವು ಆಷಾಢ ಸುಧ್ ಬಿಜ್‌ನಂದು ರಥಯಾತ್ರೆ ಮೆರವಣಿಗೆಯನ್ನು ಆಯೋಜಿಸುತ್ತದೆ. ಈ ಹಬ್ಬದಂದು ಜಗನ್ನಾಥ, ಬಲರಾಮ ಮತ್ತು ಸುಭದ್ರ ದೇವತೆಗಳನ್ನು ಪೂಜಿಸಲಾಗುತ್ತದೆ. ಈಗ ಮತ್ತೆ 148ನೇ ಜಗನ್ನಾಥ ರಥಯಾತ್ರೆಗೆ ವೇದಿಕೆ ಸಿದ್ಧವಾಗಿದೆ.
ನವದೆಹಲಿ: ಅಹಮದಾಬಾದ್ ಏರ್ ಇಂಡಿಯಾ (Ahmedabad Plane Crash) ವಿಮಾನ ದುರಂತದ ಅಂತಿಮ ಕ್ಷಣದಲ್ಲಿ ಏನಾಯಿತು ಎಂದು ತಿಳಿದುಕೊಳ್ಳಲು ನಿರ್ಣಾಯಕವಾಗಿದ್ದ ಬ್ಲ್ಯಾಕ್ ಬಾಕ್ಸ್ (Black Box) ಮಾಹಿತಿಯನ್ನು ನಾಗರಿಕ ವಿಮಾನಯಾನ ಸಚಿವಾಲಯವು ಸದ್ಯ ಡೌನ್‌ಲೋಡ್ ಮಾಡಿಕೊಂಡು ವಿಶ್ಲೇಷಣೆ ಪ್ರಾರಂಭಿಸಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಜೂ.12ರಂದು ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಸ್ಥಳೀಯರು ಸೇರಿ 275 ಜನರ ಸಾವನ್ನಪ್ಪಿದ್ದರು. ಅವಶೇಷಗಳನ್ನು ತೆರವುಗೊಳಿಸುವ ವೇಳೆ ಬಿಜೆ ಮೆಡಿಕಲ್ ಹಾಸ್ಟೆಲಿನ ಮೇಲ್ಛಾವಣಿಯಲ್ಲಿ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿತ್ತು. ಇದನ್ನು ವಶಪಡಿಸಿಕೊಂಡಿದ್ದ ವಿಮಾನ ಅಪಘಾತ ತನಿಖಾ ಬ್ಯೂರೋ ತನಿಖೆ ಆರಂಭಿಸಿತ್ತು. ಇದನ್ನೂ ಓದಿ: NASA Axiom-4 Mission | ಸ್ಪೇಸ್ ಎಕ್ಸ್ ಡ್ರ್ಯಾಗನ್ ನೌಕೆ ಡಾಕಿಂಗ್ ಯಶಸ್ವಿ
ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ (Union Ministry of Civil Aviation) ಕ್ರ‍್ಯಾಶ್ ತನಿಖಾ ವಿಭಾಗದ ಅಡಿಯಲ್ಲಿ ಬರುವ ವಿಮಾನ ಅಪಘಾತ ತನಿಖಾ ಬ್ಯೂರೋ (Aircraft Accident Investigation Bureau) ಪ್ರಯೋಗಾಲಯದಲ್ಲಿ ಬ್ಲ್ಯಾಕ್ ಬಾಕ್ಸ್‌ನ ಮುಂಭಾಗದ ಕಪ್ಪು ಪೆಟ್ಟಿಗೆಯಿಂದ ಕ್ರ‍್ಯಾಶ್ ಪ್ರೊಟೆಕ್ಷನ್ ಮಾಡ್ಯೂಲ್‌ನ್ನು ರಿಕವರಿ ಮಾಡಿಕೊಂಡಿದ್ದಾರೆ. ಬಳಿಕ ಮೆಮೊರಿ ಮಾಡ್ಯೂಲ್‌ನಲ್ಲಿನ ಡೇಟಾವನ್ನು ಯಶಸ್ವಿಯಾಗಿ ಡೌನ್‌ಲೋಡ್ ಮಾಡಿಕೊಂಡಿದೆ.
ಅಪಘಾತದಲ್ಲಿ ತಾಪಮಾನ 1,000 ಡಿಗ್ರಿ ಸೆಲ್ಸಿಯಸ್ ತಲುಪಿದ್ದರಿಂದ ಬ್ಲ್ಯಾಕ್ ಬಾಕ್ಸ್ ಕೂಡ ತೀವ್ರವಾಗಿ ಹಾನಿಗೊಳಗಾಗಿತ್ತು. ಸದ್ಯ ತನಿಖೆ ಪೂರ್ಣಗೊಳಿಸಲು ವಿಮಾನ ಅಪಘಾತ ತನಿಖಾ ಬ್ಯೂರೋ ಮೂರು ತಿಂಗಳ ಕಾಲಾವಕಾಶ ಪಡೆದಿದ್ದು, ಬಳಿಕ ವಿಮಾನ ಅಪಘಾತದ ವೇಳೆ ಆಗಿದ್ದೇನು ಎನ್ನುವ ಮಾಹಿತಿ ತಿಳಿದು ಬರಲಿದೆ. ಈ ಮೂಲಕ ಅಪಘಾತಕ್ಕೆ ಕಾರಣವಾಗುವ ಅಂಶಗಳ ಪುನರ್‌ನಿರ್ಮಾಣ, ವಾಯುಯಾನ ಸುರಕ್ಷತೆ ಹೆಚ್ಚಳ ಹಾಗೂ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಹಾಯಕವಾಗುತ್ತದೆ.
ಅಹಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಬಿಜೆ ಮೆಡಿಕಲ್ ಆಸ್ಪತ್ರೆಗೆ ಡಿಕ್ಕಿ ಹೊಡೆದು ಪತನಗೊಂಡಿತ್ತು. ಪರಿಣಾಮ ಸ್ಥಳೀಯರು ಸೇರಿದಂತೆ ಸುಮಾರು 275 ಜನ ಸಾವನ್ನಪ್ಪಿದ್ದರು.ಇದನ್ನೂ ಓದಿ: ನಟ ಸೂರ್ಯ ಚಿತ್ರವನ್ನು ನಿರ್ಮಾಣ ಮಾಡಲಿದೆ ಡ್ರೀಮ್ ವಾರಿಯರ್
ಏನಿದು ಬ್ಲ್ಯಾಕ್ ಬಾಕ್ಸ್?
ವಿಮಾನದಲ್ಲಿ ಧ್ವನಿಗ್ರಹಣಕ್ಕೆ ಬಳಸಲಾಗುವ ಎರಡು ಸಾಧನಗಳನ್ನು ತಾಂತ್ರಿಕ ಭಾಷೆಯಲ್ಲಿ ಬ್ಲ್ಯಾಕ್ ಬಾಕ್ಸ್ ಎಂದು ಕರೆಯಲಾಗುತ್ತದೆ. ಬ್ಲ್ಯಾಕ್ ಬಾಕ್ಸ್ ಅನ್ನು ಫ್ಲೈಟ್ ಡೇಟಾ ರೆಕಾರ್ಡರ್ ಎಂದೂ ಕರೆಯುತ್ತಾರೆ. ಬ್ಲ್ಯಾಕ್ ಬಾಕ್ಸ್ ಹಾರಾಟದ ಸಮಯದಲ್ಲಿನ ವಿಮಾನದ ಎಲ್ಲಾ ಚಟುವಟಿಕೆಗಳನ್ನು ದಾಖಲಿಸುತ್ತದೆ. ಎಲ್ಲ ರೀತಿಯ ವಿಮಾನಗಳಲ್ಲಿ ಬ್ಲ್ಯಾಕ್ ಬಾಕ್ಸ್ ಅನ್ನು ಕಡ್ಡಾಯವಾಗಿ ಅಳವಡಿಸಲಾಗುತ್ತದೆ.
ವಿಮಾನ ಅಪಘಾತವಾದಾಗ ಅದಕ್ಕೆ ಕಾರಣ ಪತ್ತೆ ಹಚ್ಚಲು ನೆರವಾಗಲೆಂದೇ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಭದ್ರತೆಯ ದೃಷ್ಟಿಯಿಂದ ಕಪ್ಪು ಪೆಟ್ಟಿಗೆಯನ್ನು ಸಾಮಾನ್ಯವಾಗಿ ವಿಮಾನದ ಹಿಂಭಾಗದಲ್ಲಿ ಇಡಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ, ಸುತ್ತಲೂ ಬೆಂಕಿ ಇದ್ದರೂ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಹಾನಿಯಾಗುವುದಿಲ್ಲ.
ಅಪಘಾತದ ಸಂಭವಿಸಿದಾಗ ಹಿಂಭಾಗದಲ್ಲಿ ಅದರಲ್ಲೂ ಬಾಲದ ಕಡೆ ಪೆಟ್ಟು ಬೀಳುವುದು ಕಡಿಮೆ. ಯಾಕೆಂದರೆ ಬಾಲ ಎತ್ತರದಲ್ಲಿರುತ್ತದೆ. ಈ ಕಾರಣಕ್ಕೆ ಬಾಲದಲ್ಲಿ ಅಳವಡಿಸಲಾಗಿರುತ್ತದೆ. ವಿಮಾನದ ಎಂಜಿನ್‌ಗೆ ಜೋಡಿಸಲಾದ ಜನರೇಟರ್ ನಿಂದ ಬ್ಲ್ಯಾಕ್ ಬಾಕ್ಸ್ ಚಾರ್ಜ್ ಆಗುತ್ತದೆ.
ಎರಡು ಪ್ರತ್ಯೇಕ ಪೆಟ್ಟಿಗೆಗಳಿವೆ 1. ಫ್ಲೈಟ್ ಡೇಟಾ ರೆಕಾರ್ಡರ್: ಈ ಪೆಟ್ಟಿಗೆಯಲ್ಲಿ ನಿರ್ದೇಶನ, ಎತ್ತರ, ಇಂಧನ, ವೇಗ, ಕ್ಯಾಬಿನ್ ತಾಪಮಾನ ಇತ್ಯಾದಿಗಳ ಬಗ್ಗೆ ಮಾಹಿತಿ ಇರುತ್ತದೆ. ಕೊನೆಯ 25 ಗಂಟೆಗಳ ಕಾಲದ ಒಟ್ಟು 88 ಮಾಹಿತಿಗಳ ಡೇಟಾವನ್ನು ಸಂಗ್ರಹಿಸುತ್ತದೆ. 1,100 ಡಿಗ್ರಿ ಸೆಲ್ಶಿಯಸ್ ತಾಪಮಾನ ಇದ್ದರೆ 1 ಗಂಟೆ, 260 ಡಿಗ್ರಿ ಸೆಲ್ಶಿಯಸ್ ತಾಪಮಾನ ಇದ್ದರೆ ಇದ್ದರೆ 10 ಗಂಟೆಗಳ ಕಾಲ ಡೇಟಾವನ್ನು ತಡೆದಿಟ್ಟುಕೊಳ್ಳಬಹುದು. ತನಿಖಾಧಿಕಾರಿಗಳಿಗೆ ಸುಲಭವಾಗಿ ಗುರುತಿಸಲು ಕೆಂಪು ಅಥವಾ ಗುಲಾಬಿ ಬಣ್ಣದಲ್ಲಿ ಈ ಪೆಟ್ಟಿಗೆಯನ್ನು ಮಾಡಲಾಗುತ್ತದೆ.
2. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್: ಈ ಬಾಕ್ಸ್ ಕೊನೆಯ ಎರಡು ಗಂಟೆಗಳ ವಿಮಾನದ ಧ್ವನಿಯನ್ನು ದಾಖಲಿಸುತ್ತದೆ. ಯಾವುದೇ ಅಪಘಾತ ಸಂಭವಿಸುವ ಮೊದಲು ಎಂಜಿನ್, ತುರ್ತು ಎಚ್ಚರಿಕೆ, ಕ್ಯಾಬಿನ್ ಮತ್ತು ಕಾಕ್‌ಪಿಟ್ ಧ್ವನಿಯನ್ನು ದಾಖಲಿಸುತ್ತದೆ.
ಹೇಗೆ ಕಾರ್ಯನಿರ್ವಹಿಸುತ್ತದೆ?
ಯಾವುದೇ ವಿದ್ಯುತ್ ಇಲ್ಲದೆ 30 ದಿನಗಳವರೆಗೆ ಬ್ಲಾಕ್ ಬಾಕ್ಸ್ ಕೆಲಸ ಮಾಡಬಹುದು. ಪತ್ತೆ ಕಾರ್ಯ ಸುಲಭವಾಗಲು ಸುಮಾರು 30 ದಿನಗಳವರೆಗೆ ಸಿಗ್ನಲ್ ಹೊರಸೂಸುತ್ತಿರುತ್ತದೆ. ಈ ಧ್ವನಿಯನ್ನು ತನಿಖಾಧಿಕಾರಿಗಳು ಸುಮಾರು 2-3 ಕಿಲೋಮೀಟರ್ ದೂರದಿಂದ ಗುರುತಿಸಬಹುದು. 14 ಸಾವಿರ ಅಡಿ ಆಳದ ಸಮದ್ರದಲ್ಲಿದ್ದರೂ ಸಿಗ್ನಲ್ ಹೊರ ಸೂಸುತ್ತಿರುತ್ತದೆ.ಇದನ್ನೂ ಓದಿ: ಡ್ರಗ್ಸ್ ಸೇವನೆ: ನಟ ಶ್ರೀಕಾಂತ್ ಬಳಿಕ ಮತ್ತೋರ್ವ ನಟನ ಬಂಧನ
ಅಹಮದಾಬಾದ್: ಇಲ್ಲಿನ ಮೇಘನಿ ನಗರದಲ್ಲಿ ಪತನವಾದ ಏರ್ ಇಂಡಿಯಾ (Air India) ಬೋಯಿಂಗ್-787 ವಿಮಾನದ ಬ್ಲ್ಯಾಕ್ ಬಾಕ್ಸ್ ಅನ್ನು ಡೇಟಾ ರಿಕವರಿಗಾಗಿ ಅಮೆರಿಕಕ್ಕೆ ಕಳುಹಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಜೂನ್ 13ರಂದು ಬಿಜೆ ಮೆಡಿಕಲ್ ಹಾಸ್ಟೆಲಿನ ಮೇಲ್ಛಾವಣಿಯಲ್ಲಿದ್ದ ಏರ್ ಇಂಡಿಯಾ ವಿಮಾನದ ಬ್ಲ್ಯಾಕ್ ಬಾಕ್ಸ್ (Black Box) ಅನ್ನು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ವಶಪಡಿಸಿಕೊಂಡಿತ್ತು. ಆದ್ರೆ ಬ್ಲ್ಯಾಕ್ ಬಾಕ್ಸ್‌ಗೆ ಬೆಂಕಿ ಬಿದ್ದು ಬಾಹ್ಯವಾಗಿ ಹಾನಿಯಾಗಿದೆ. ಇದರಿಂದ ಸ್ಥಳೀಯ ತನಿಖಾಧಿಕಾರಿಗಳಿಂದ ಮಾಹಿತಿ ಹೊರ ತೆಗೆಯಲು ಸಾಧ್ಯವಾಗಿಲ್ಲ. ಈ ಹಿನ್ನೆಲೆ ಡೇಟಾ ರಿಕವರಿಗಾಗಿ ಬ್ಲ್ಯಾಕ್‌ಬಾಕ್ಸ್ ಅನ್ನು ಅಮೆರಿಕಾಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?
2ನೇ ಬ್ಲ್ಯಾಕ್ ಬಾಕ್ಸ್ ಪರಿಶೀಲನೆ
ಏರ್ ಇಂಡಿಯಾ ಬೋಯಿಂಗ್-787 ವಿಮಾನದ 2ನೇ ಬ್ಲ್ಯಾಕ್ ಬಾಕ್ಸ್ (ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್) ಕಳೆದ ಭಾನುವಾರ ಪತ್ತೆಯಾಗಿತ್ತು. ಇದು ʻಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ʼ ಆಗಿದ್ದು, ವಿಮಾನದಲ್ಲಿ ಪ್ರತಿ ಸೆಕೆಂಡ್‌ನಲ್ಲಿ ಏನಾಯ್ತು ಎಂಬುದನ್ನ ಅರ್ಥಮಾಡಿಕೊಳ್ಳಲು ಸಹಾಯಕವಾಗಲಿದೆ. ಇದು ಕಾಕ್‌ಪಿಟ್ ಮತ್ತು ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎಂಬುದರ ಕುರಿತು ವಸ್ತುನಿಷ್ಠ ಮಾಹಿತಿಯನ್ನು ನೀಡುತ್ತದೆ. ಎಲ್ಲಾ ಕಾಕ್‌ಪಿಟ್ ಆಡಿಯೋ, ಪೈಲಟ್ ಸಂಭಾಷಣೆಗಳು, ರೇಡಿಯೋ ಪ್ರಸರಣಗಳು ಹಾಗೂ ಇತರೇ ಯಾಂತ್ರಿಕ ಶಬ್ಧಗಳ ಮಾಹಿತಿಯನ್ನು ಸಂಗ್ರಹಿಸಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ ತಿಳಿಸಿದ್ದರು. ಸದ್ಯ 2ನೇ ಬ್ಲ್ಯಾಕ್‌ಬಾಕ್ಸ್ ಅನ್ನು ಭಾರತದಲ್ಲೇ ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು
ಏನಿದು ಬ್ಲ್ಯಾಕ್ ಬಾಕ್ಸ್?
ವಿಮಾನದಲ್ಲಿ ಧ್ವನಿಗ್ರಹಣಕ್ಕೆ ಬಳಸಲಾಗುವ ಎರಡು ಸಾಧನಗಳನ್ನು ತಾಂತ್ರಿಕ ಭಾಷೆಯಲ್ಲಿ ‘ಬ್ಲ್ಯಾಕ್ ಬಾಕ್ಸ್’ ಎಂದು ಕರೆಯಲಾಗುತ್ತದೆ. ಬ್ಲ್ಯಾಕ್ ಬಾಕ್ಸ್ ಅನ್ನು ‘ಫ್ಲೈಟ್ ಡಾಟಾ ರೆಕಾರ್ಡರ್’ ಎಂದೂ ಕರೆಯುತ್ತಾರೆ. ಬ್ಲ್ಯಾಕ್ ಬಾಕ್ಸ್ ಹಾರಾಟದ ಸಮಯದಲ್ಲಿನ ವಿಮಾನದ ಎಲ್ಲಾ ಚಟುವಟಿಕೆಗಳನ್ನು ದಾಖಲಿಸುತ್ತದೆ. ಎಲ್ಲ ರೀತಿಯ ವಿಮಾನಗಳಲ್ಲಿ ಬ್ಲ್ಯಾಕ್ ಬಾಕ್ಸ್ ಅನ್ನು ಕಡ್ಡಾಯವಾಗಿ ಅಳವಡಿಸಲಾಗುತ್ತದೆ. ಇದನ್ನೂ ಓದಿ: ಬ್ಲ್ಯಾಕ್‌ಬಾಕ್ಸ್‌ನಲ್ಲಿ ಅಡಗಿದೆ ವಿಮಾನ ದುರಂತದ ರಹಸ್ಯ – ನಾಳೆಯೊಳಗೆ ಅಪಘಾತಕ್ಕೆ ಅಸಲಿ ಕಾರಣ ಸಿಗುತ್ತಾ?
ವಿಮಾನ ಅಪಘಾತವಾದಾಗ ಅದಕ್ಕೆ ಕಾರಣ ಪತ್ತೆ ಹಚ್ಚಲು ನೆರವಾಗಲೆಂದೇ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಭದ್ರತೆಯ ದೃಷ್ಟಿಯಿಂದ ಕಪ್ಪು ಪೆಟ್ಟಿಗೆಯನ್ನು ಸಾಮಾನ್ಯವಾಗಿ ವಿಮಾನದ ಹಿಂಭಾಗದಲ್ಲಿ ಇಡಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ, ಸುತ್ತಲೂ ಬೆಂಕಿ ಇದ್ದರೂ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಆಘಾತವನ್ನು ತಡೆದುಕೊಳ್ಳುವ ಶಕ್ತಿಯನ್ನು ಹೊಂದಿದೆ.
ಅಪಘಾತದ ಸಂಭವಿಸಿದಾಗ ಹಿಂಭಾಗದಲ್ಲಿ ಅದರಲ್ಲೂ ಬಾಲದ ಕಡೆ ಪೆಟ್ಟು ಬೀಳುವುದು ಕಡಿಮೆ. ಯಾಕೆಂದರೆ ಬಾಲ ಎತ್ತರದಲ್ಲಿರುತ್ತದೆ. ಈ ಕಾರಣಕ್ಕೆ ಬಾಲದಲ್ಲಿ ಅಳವಡಿಸಲಾಗಿರುತ್ತದೆ. ವಿಮಾನದ ಎಂಜಿನ್‌ಗೆ ಜೋಡಿಸಲಾದ ಜನರೇಟರ್ ನಿಂದ ಬ್ಲ್ಯಾಕ್ ಬಾಕ್ಸ್ ಚಾರ್ಜ್ ಆಗುತ್ತದೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಸೂರತ್‌ನಲ್ಲಿ ಓರ್ವ ಬಿಲ್ಡರ್‌ನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಿಕೊಂಡು, ಬಳಿಕ ಬ್ಲ್ಯಾಕ್‌ಮೇಲ್ ಮಾಡಲು ಪ್ರಾರಂಭಿಸಿದ್ದಳು. ಅದಾದ ನಂತರ ಕೋಟ್ಯಂತರ ರೂ.ಗೆ ಬೇಡಿಕೆ ಇಟ್ಟಿದ್ದಳು. ಈ ಕುರಿತು ಪ್ರಕರಣ ದಾಖಲಾದ ಬೆನ್ನಲ್ಲೇ ಆರೋಪಿ ಕೀರ್ತಿ ತಲೆಮರೆಸಿಕೊಂಡಿದ್ದಳು. ಎಫ್‌ಐಆರ್‌ನಲ್ಲಿ ಎ1 ಆರೋಪಿಯ ಹೊರತಾಗಿ ಇನ್ನೂ ನಾಲ್ವರ ಹೆಸರನ್ನು ಉಲ್ಲೇಖಿಸಲಾಗಿತ್ತು. ಆ ನಾಲ್ವರನ್ನು ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ ಬಂಧಿಸಲಾಗಿತ್ತು. ಇದಲ್ಲದೇ ಸುಲಿಗೆ ಹಾಗೂ ಭೂಕಬಳಿಕೆ ಆರೋಪಗಳು ಆಕೆಯ ಮೇಲಿದೆ ಎಂದು ತನಿಖೆ ವೇಳೆ ತಿಳಿದುಬಂದಿದೆ.
ಈ ಕುರಿತು ಉಪಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಮಾತನಾಡಿ, ಪ್ರಕರಣ ದಾಖಲಾದ ಸ್ವಲ್ಪ ಸಮಯದ ನಂತರ ಸೂರತ್ ನ್ಯಾಯಾಲಯ ಆರೋಪಿಯ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ಕೀರ್ತಿ ಪಟೇಲ್‌ನ್ನು ಪತ್ತೆಹಚ್ಚಲು ಕಳೆದ 10 ತಿಂಗಳಿನಿಂದ ಪ್ರಯತ್ನಿಸುತ್ತಿದ್ದೆವು. ಆರೋಪಿ ಪೊಲೀಸರಿಗೆ ದಾರಿ ತಪ್ಪಿಸುವ ಉದ್ದೇಶದೊಂದಿಗೆ ದಿನೇ ದಿನೇ ಊರು ಬದಲಾಯಿಸುವುದು, ಸಿಮ್ ಕಾರ್ಡ್ ಬದಲಾಯಿಸುವುದನ್ನು ಮಾಡುತ್ತಿದ್ದಳು. ನಮ್ಮ ತಾಂತ್ರಿಕ ತಂಡ, ಸೈಬರ್ ತಜ್ಞರು ಹಾಗೂ ಬೇರೆ ಬೇರೆ ಪೊಲೀಸ್ ಠಾಣೆಯೊಂದಿಗೆ ಸಂಪರ್ಕದಲ್ಲಿದ್ದ ನಾವು ಕೊನೆಗೆ ಇನ್‌ಸ್ಟಾಗ್ರಾಂ ಸಹಾಯದಿಂದ ಆರೋಪಿಯನ್ನು ಅಹಮದಾಬಾದ್‌ನ ಸರ್ಖೇಜ್ ಪ್ರದೇಶದಲ್ಲಿ ಪತ್ತೆಹಚ್ಚಿದ್ದೇವೆ ಎಂದು ತಿಳಿಸಿದ್ದಾರೆ.
ಸದ್ಯ ಆರೋಪಿಯ ಹೇಳಿಕೆಗಳನ್ನು ದಾಖಲಿಸಿ, ತನಿಖೆ ಮುಂದುವರಿಸಿದ್ದೇವೆ. ಜೊತೆಗೆ ಸಾರ್ವಜನಿಕರು ಸುಲಿಗೆಯಂತಹ ಯಾವುದೇ ತೊಂದರೆಯಲ್ಲಿ ಸಿಲುಕಿಕೊಂಡಿದ್ದರೂ ಪೊಲೀಸ್ ಠಾಣೆಗೆ ಹಾಗೂ ಎಸಿಪಿ, ಡಿಸಿಪಿ ಕಚೇರಿಗೆ ದೂರು ಸಲ್ಲಿಸಿ ಎಂದು ಹೇಳಿದ್ದಾರೆ.ಇದನ್ನೂ ಓದಿ: Israel-Iran Conflict – ಇರಾನ್‍ನಿಂದ ದೆಹಲಿ ತಲುಪಿದ 110 ಭಾರತೀಯರು
ನವದೆಹಲಿ: ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಮಂಗಳವಾರ ಏರ್ ಇಂಡಿಯಾ (Air India) ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಅಧಿಕಾರಿಗಳೊಂದಿಗೆ ತುರ್ತು ಸಭೆ ಕರೆದಿದೆ.
ಏರ್ ಇಂಡಿಯಾ ಎಂಜಿನಿಯರಿಂಗ್ ಮುಖ್ಯಸ್ಥ, ಎಂಡಿ ಮತ್ತು ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್, ವಿಮಾನ ಕಾರ್ಯಾಚರಣೆಗಳ ನಿರ್ದೇಶಕ ಕ್ಯಾಪ್ಟನ್ ಪಂಕುಲ್ ಮಾಥುರ್, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಿಇಒ ಅಲೋಕ್ ಸಿಂಗ್ ಸೇರಿದಂತೆ ಇನ್ನಿತರೆ ಅಧಿಕಾರಿಗಳ ಜೊತೆ ಸಭೆ ಕರೆಯಲಾಗಿದೆ. ಡಿಜಿಸಿಎ ಮಹಾನಿರ್ದೇಶಕ ಫಾಜಿ ಅಹ್ಮದ್ ಕಿದ್ವಾಯಿ ಈ ವರ್ಚುವಲ್ ಸಭೆಯ ಅಧ್ಯಕ್ಷತೆಯಲ್ಲಿ ವಹಿಸಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಸೌದಿ ಏರ್‌ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ – ಟೈಯರ್‌ನಿಂದ ಚಿಮ್ಮಿದ ಬೆಂಕಿ ಕಿಡಿ, ಲಕ್ನೋದಲ್ಲಿ ತಪ್ಪಿದ ದುರಂತ
ಅಹಮದಾಬಾದ್ (Ahmedabad) ನಡೆದ ಘೋರ ವಿಮಾನ ದುರಂತದಲ್ಲಿ (Plane Crash) 271 ಜನ ಸಾವಿಗೀಡಾದ ಬೆನ್ನಲ್ಲೇ ಈ ಸಭೆ ಕರೆಯಲಾಗಿದೆ. ಅದರ ಜೊತೆ ಇತ್ತೀಚೆಗೆ ಪದೇ ಪದೇ ಬೋಯಿಂಗ್ 787 ವಿಮಾನಗಳಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಳ್ಳುತ್ತಿದ್ದು, ಈ ವಿಚಾರದ ಬಗ್ಗೆ ಅಧಿಕಾರಿಗಳು, ಏರ್ ಇಂಡಿಯಾ ಎಂಜಿನಿಯರಿಂಗ್ ಮುಖ್ಯಸ್ಥರು ಹಾಗೂ ಇನ್ನಿತರರ ಜೊತೆ ಚರ್ಚಿಸಲಿದ್ದಾರೆ.
ಇತ್ತೀಚೆಗೆ ನಡೆದ ಏರ್ ಇಂಡಿಯಾ ವಿಮಾನ ದುರಂತದ ತನಿಖೆಯ ಭಾಗವಾಗಿ, ಅಪಘಾತಕ್ಕೀಡಾದ ವಿಮಾನದ ಪೈಲಟ್‌ಗಳು ಮತ್ತು ಸಿಬ್ಬಂದಿಯ ತರಬೇತಿ ದಾಖಲೆಗಳನ್ನು ಭಾರತದ ವಾಯುಯಾನ ಸುರಕ್ಷತಾ ಸಂಸ್ಥೆ (Aviation Safety Agency of India) ಏರ್ ಇಂಡಿಯಾವನ್ನು ಕೇಳಿತ್ತು. ಅಲ್ಲದೇ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಎಲ್ಲಾ ವಿಮಾನ ಹಾರಾಟ ತರಬೇತಿ ಸಂಸ್ಥೆಗಳಿಗೆ, ತರಬೇತಿ ಕ್ರಮಗಳ ಪರಿಶೀಲನೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದೆ ಎಂದು ವರದಿಯಾಗಿದೆ.
ಅಹಮದಾಬಾದ್ನಲ್ಲಿ (Ahmedabad) ನಡೆದ ವಿಮಾನ ಪತನದ ಬಳಿಕ ದೇಶದ ಜನತೆಗೆ ಇಂದಿಗೂ ದುರ್ಘಟನೆಯ ನೋವಿನಿಂದ ಹೊರಬರಲಾಗುತ್ತಿಲ್ಲ. ಈ ವೇಳೆ ಏರ್‌ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿ ಧೈರ್ಯ ಹೇಳುವ ಪೋಸ್ಟ್ ಹಾಕಿದ್ದಾರೆ ನಟಿ ರವೀನಾ ಟಂಡನ್ (Raveena Tandon).
ಏರ್‌ಇಂಡಿಯಾದ (Air India) ಟಿಕೆಟ್ ಪಡೆದು ವಿಮಾನದಲ್ಲಿ ಕುಳಿತಿರುವ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ರವೀನಾ, ಏರ್ ಇಂಡಿಯಾ ಸಿಬ್ಬಂದಿಗಳಲ್ಲಿ ಇನ್ನೂ ಅವಿತಿರುವ ಬೇಸರ, ದುಃಖದಿಂದ ಕೂಡಿರುವ ನಗು ಹಾಗೂ ಪ್ರಯಾಣಿಕರ ಮೌನದ ಕುರಿತು ಸುದೀರ್ಘವಾಗಿ ಅನಿಸಿಕೆ ಹಂಚಿಕೊಂಡಿದ್ದಾರೆ.
ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುವ ಏರ್ ಇಂಡಿಯಾ ವಿಮಾನದಲ್ಲಿ ದುರ್ಘಟನೆಯಲ್ಲಿ 265ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಈ ನೋವು ದೇಶದ ಜನರಲ್ಲಿ ಆತಂಕ ಮೂಡಿಸಿದೆ ಜೊತೆಗೆ ಏರ್ ಇಂಡಿಯಾ ವಿಮಾನ ಪ್ರಯಾಣಿಕರ ಸಂಖ್ಯೆಯನ್ನೂ ಕುಗ್ಗಿಸುತ್ತಿದೆ. ಈ ಹೊತ್ತಲ್ಲೇ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣ ಬೆಳೆಸಿರುವ ರವೀನಾ ಒಂದಿಷ್ಟು ಆತ್ಮವಿಶ್ವಾಸ ತುಂಬುವ ಮಾತುಗಳನ್ನಾಡಿದ್ದಾರೆ.
“ಪ್ರತಿಕೂಲಗಳ ವಿರುದ್ಧ ಎದ್ದು ನಿಲ್ಲಬೇಕಿದೆ, ಎಲ್ಲವನ್ನೂ ಬಾಚಿಕೊಂಡು ಪ್ರಾರಂಭಿಸಬೇಕು, ಹೊಸ ಆರಂಭಗಳಾಗಬೇಕು, ಹೊಸ ಶಕ್ತಿಯ ಕಡೆಗೆ ಸಂಕಲ್ಪ ಶುರುವಾಗಬೇಕು, ವಾತಾವರಣ ಗಂಭೀರವಾಗಿದ್ದರೂ ಏರ್ ಇಂಡಿಯಾ ಸಿಬ್ಬಂದಿಗಳು ದುಃಖದೊಂದಿಗೆ ನಗುವಿನ ಮುಖದಲ್ಲಿ ಸ್ವಾಗತಿಸುತ್ತಾರೆ. ಪ್ರಯಾಣಿಕರು ಹಾಗೂ ಸಿಬ್ಬಂದಿಗಳ ಮೌನವು ಮಾತನಾಡದೇ ಸಂತಾಪ ಸೂಚಿಸುತ್ತಿದೆ. ಇದು ಎಂದಿಗೂ ವಾಸಿಯಾಗದ ಗಾಯ. ಏರ್‌ಇಂಡಿಯಾಗೆ ಯಾವಾಗಲೂ ದೇವರೇ ದಿಕ್ಕು. ನಿರ್ಭೀತಿಯಿಂದ ಎಲ್ಲವನ್ನೂ ಜಯಿಸಲು ಇಚ್ಛಾಶಕ್ತಿಯೇ ಬಲವಾಗಬೇಕು” ಎಂದಿದ್ದಾರೆ ರವೀನಾ ಟಂಡನ್.
ದುರ್ಘಟನೆಯ ಬಳಿಕ ಏರ್‌ಇಂಡಿಯಾ ವಿಮಾನ ಪ್ರಯಾಣಿಕರ ಸಂಖ್ಯೆಯೂ ಕುಸಿಯುತ್ತಿದೆ. ಈ ಹೊತ್ತಲ್ಲಿ ಅದೇ ವಿಮಾನದಲ್ಲಿ ಪ್ರಯಾಣಿಸುವ ಮೂಲಕ ಪ್ರಯಾಣಿಕರಿಗೂ ಹಾಗೂ ಸಿಬ್ಬಂದಿಗಳಿಗೂ ಒಂದಿಷ್ಟು ಆತ್ಮವಿಶ್ವಾಸ ತುಂಬುವ ಮಾತನ್ನ ಪದಗಳಲ್ಲಿ ಹೇಳಿದ್ದಾರೆ ಬಾಲಿವುಡ್ ನಟಿ ರವೀನಾ ಟಂಡನ್. ಸದ್ಯದ ಏರ್‌ಇಂಡಿಯಾ ಪ್ರಯಾಣದ ಪರಿಸ್ಥಿತಿಯನ್ನ ಅವರ ಮಾತುಗಳಲ್ಲಿ ವಿವರಿಸಿದ್ದಾರೆ ನಟಿ.
ಬೆಂಗಳೂರು: ನಾವು ಅಹಮದಾಬಾದ್ (Ahmedabad) ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡುವುದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿರುಗೇಟು ನೀಡಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟುಹೋಗಿದ್ದಾರೆ. ಆ ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತದೆ. ಅಕಸ್ಮಾತ್ 500 ಮೀ. ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಮಂದಿಯ ಜೀವಹಾನಿಯಾಗುತ್ತಿತ್ತು. ಈ ದುರಂತದಿಂದ ವೈದ್ಯಕೀಯ ಹಾಸ್ಟೆಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೆಲವು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿ ಮಾತನಾಡಿಸಿದೆವು. ಈ ಅಪಘಾತ ಕುರಿತು ಬ್ಲ್ಯಾಕ್‌ಬಾಕ್ಸ್ ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಅಲ್ಲಿ ಹೋಗಿ ಸಾಂತ್ವನ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕಲಬುರಗಿ | ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶ ಸಾವು
ಈ ಘಟನೆ ನಂತರ ವಿಮಾನಯಾನ ಸಚಿವರ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡುತ್ತಿವೆ ಎಂದು ಕೇಳಿದಾಗ, ಬಿಜೆಪಿ ಹಾಗೂ ಜೆಡಿಎಸ್‌ನವರಿಗೆ ಹೆಣದ ಮೇಲೆ ರಾಜಕೀಯ ಮಾಡುವುದೇ ಕೆಲಸ. ನಾವು ಹಳೇ ಪ್ರಕರಣ ಹಾಗೂ ಈ ಪ್ರಕರಣವನ್ನು ಮುಂದಿಟ್ಟುಕೊಂಡು ಟೀಕೆ ಮಾಡಬಹುದು. ಆದರೆ ನಾವು ಅವರ ಮಟ್ಟಕ್ಕೆ ಇಳಿಯುವುದಿಲ್ಲ. ಈ ವಿಚಾರದಲ್ಲಿ ಅನೇಕ ತಾಂತ್ರಿಕ ಅಂಶಗಳಿವೆ. ನಾನು ಅವುಗಳ ತಜ್ಞನಲ್ಲ. ಈ ಎಲ್ಲಾ ವಿಚಾರವಾಗಿ ಚರ್ಚೆ ಆಗುತ್ತಿದೆ. ಆದರೆ ಈ ವಿಚಾರವನ್ನು ರಾಜಕೀಯಗೊಳಿಸುವ ವ್ಯಕ್ತಿ ನಾನಲ್ಲ. ಈ ಸಮಯದಲ್ಲಿ ಕೇಂದ್ರ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಇದು ದೇಶದ ಗಂಭೀರ ವಿಚಾರ ಎಂದಿದ್ದಾರೆ.
ಅಹಮದಾಬಾದ್: ಏರ್ ಇಂಡಿಯಾ (Air India) ವಿಮಾನ ದುರಂತದಲ್ಲಿ ಮೃತಪಟ್ಟ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ (Vijay Rupani) ಅವರ ಅಂತ್ಯಕ್ರಿಯೆ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ (Rajkot) ನಡೆಯಲಿದೆ.
ವಿಜಯ್ ರೂಪಾನಿ ರಾಜ್‌ಕೋಟ್ ಪ್ರತಿನಿಧಿಸುತ್ತಿದ್ದರು. ಭಾನುವಾರ ವಿಜಯ್ ರೂಪಾನಿ ಡಿಎನ್‌ಎ ಮ್ಯಾಚ್ ಆಗಿತ್ತು. ಅವರ ಸಹೋದರಿ ಡಿಎನ್‌ಎ ಜೊತೆಗೆ ವಿಜಯ್ ರೂಪಾನಿ ಡಿಎನ್‌ಎ ಮ್ಯಾಚ್ ಆಗಿತ್ತು. ಇಂದು ಬೆಳಗ್ಗೆ 11:30ಕ್ಕೆ ಸಿವಿಲ್ ಆಸ್ಪತ್ರೆಯಿಂದ ಮೃಹದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುತ್ತದೆ. ಬಳಿಕ ಮೃತದೇಹವನ್ನು ವಿಮಾನದ ಮೂಲಕ ರಾಜ್‌ಕೋಟ್‌ಗೆ ಕೊಂಡೊಯ್ಯಲಾಗುವುದು. ಇದನ್ನೂ ಓದಿ: ಅವಳ ಮಾತು ಕೇಳಿದ್ದಕ್ಕೆ ಜೀವ ಉಳಿಯಿತು.. ಥ್ಯಾಂಕ್ಸ್ ಹೆಂಡ್ತಿ: ಪತನವಾದ ಫ್ಲೈಟ್‌ನಲ್ಲೇ ಹೋಗ್ಬೇಕಿದ್ದ ವೈದ್ಯ ಪಾರು
ಮಧ್ಯಾಹ್ನ 2 ಗಂಟೆಯ ವೇಳೆಗೆ ರಾಜ್‌ಕೋಟ್ ತಲುಪುವ ನಿರೀಕ್ಷೆಯಿದೆ. ಸಂಜೆ 5 ಗಂಟೆಗೆ ಅಂತಿಮ ಯಾತ್ರೆ ಆರಂಭವಾಗಲಿದ್ದು, 6 ಗಂಟೆಯ ವೇಳೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ವಿಜಯ್ ರೂಪಾನಿ ಅವರ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಗಾಳಿ-ಮಳೆಗೆ ಧರೆಗುರುಳಿದ ಮರ; ಮುಳ್ಳಯ್ಯನಗಿರಿ-ದತ್ತಪೀಠ ಮಾರ್ಗ ಬಂದ್