Tag: Ahmedabad

  • ಆರತಿ ವೇಳೆ ಬೆಂಕಿ ತಗುಲಿ ತೀವ್ರ ಗಾಯ – ಕೇಂದ್ರ ಮಾಜಿ ಸಚಿವೆ ಗಿರಿಜಾ ವ್ಯಾಸ್ ನಿಧನ

    ಆರತಿ ವೇಳೆ ಬೆಂಕಿ ತಗುಲಿ ತೀವ್ರ ಗಾಯ – ಕೇಂದ್ರ ಮಾಜಿ ಸಚಿವೆ ಗಿರಿಜಾ ವ್ಯಾಸ್ ನಿಧನ

    ಅಹಮದಾಬಾದ್: ಆರತಿ ವೇಳೆ ಬೆಂಕಿ ತಗುಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಹಿರಿಯ ನಾಯಕಿ, ಕೇಂದ್ರದ ಮಾಜಿ ಸಚಿವೆ ಗಿರಿಜಾ ವ್ಯಾಸ್ (Girija Vyas) ಗುರುವಾರ ಅಹಮದಾಬಾದ್‌ನಲ್ಲಿ (Ahmedabad) ನಿಧನರಾಗಿದ್ದಾರೆ.

    ಗಿರಿಜಾ ಅವರ ನಿಧನದ ಕುರಿತು ಸಹೋದರ ಗೋಪಾಲ್ ಶರ್ಮಾ ಖಚಿತಪಡಿಸಿದ್ದಾರೆ. ಉದಯಪುರದ ತಮ್ಮ ಮನೆಯಲ್ಲಿ ಏ.2ರಂದು ಗಿರಿಜಾ ವ್ಯಾಸ್ ದೇವರಿಗೆ ಆರತಿ ಮಾಡುವ ವೇಳೆ ಅವರ ಉಡುಪಿಗೆ ಬೆಂಕಿ ತಗುಲಿ ತೀವ್ರ ಸುಟ್ಟಗಾಯಗಳಾಗಿತ್ತು. ಈ ಹಿನ್ನೆಲೆ ಗಿರಿಜಾ ಅವರನ್ನು ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲೇ ಗಿರಿಜಾ ವ್ಯಾಸ್ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಪ್ರೇಮ ವಿವಾಹವಾದ ಹಿಂದೂ, ಮುಸ್ಲಿಮ್‌ ಜೋಡಿ – ಈಗ ರಕ್ಷಣೆಗೆ ಪೊಲೀಸರ ಮೊರೆ

    ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥೆಯೂ ಆಗಿದ್ದ ಗಿರಿಜಾ ವ್ಯಾಸ್ ರಾಜ್ಯ ಮತ್ತು ಕೇಂದ್ರ ಸಚಿವೆಯಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿಯೂ ಕೆಲಸ ಮಾಡಿದ್ದರು. ಇದನ್ನೂ ಓದಿ: ಯುದ್ಧ ಭೀತಿ – ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 10 ದಿನ ಮದರಸಾ ಬಂದ್!

    1991ರಲ್ಲಿ ಉದಯಪುರ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಸಂಸತ್ತು ಪ್ರವೇಶಿಸಿದ್ದ ಗಿರಿಜಾ, ಅಂದಿನ ಪ್ರಧಾನಿಯಾಗಿದ್ದ ನರಸಿಂಹ ರಾವ್ ಅವರ ನೇತೃತ್ವದ ಸರ್ಕಾರದಲ್ಲಿ ಕೇಮದ್ರ ಸಚಿವೆಯಾಗಿದ್ದರು. ಇದನ್ನೂ ಓದಿ: Bengaluru | ಮಳೆಗೆ ಆಟೋದ ಮೇಲೆ ಬಿದ್ದ ಮರ – ಚಾಲಕ ಸಾವು

  • ಗುಜರಾತ್‌ನಲ್ಲಿ ನೆಲೆಸಿದ್ದ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಬಂಧನ

    ಗುಜರಾತ್‌ನಲ್ಲಿ ನೆಲೆಸಿದ್ದ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಬಂಧನ

    ಅಹಮದಾಬಾದ್: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಇಡೀ ದೇಶಾದ್ಯಂತ ನೆಲೆಸಿರುವ ಪಾಕಿಸ್ತಾನಿಯರನ್ನ ವಾಪಸ್‌ ಕಳುಹಿಸುವ ಕಾರ್ಯಾಚರಣೆಯನ್ನು ಸರ್ಕಾರಗಳು ಚುರುಕುಗೊಳಿಸಿವೆ. ಈ ನಡುವೆ ವಿವಿಧ ದೇಶಗಳಿಂದ ಬಂದು ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು (Illegal Immigrants) ಪತ್ತೆಹಚ್ಚುವ ಕೆಲಸಕ್ಕೆ ಪೊಲೀಸ್‌ ಇಲಾಖೆ ಮುಂದಾಗಿದೆ.

    ಅದರಂತೆ ಅಹಮದಾಬಾದ್ (Ahmedabad) ಮತ್ತು ಸೂರತ್‌ನಲ್ಲಿ ನಡೆದ ಶೋಧ ಕಾರ್ಯಾಚರಣೆಯ ನಂತರ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 1,000ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾದೇಶಿಗರನ್ನು (Bangladeshis) ಬಂಧಿಸಲಾಗಿದೆ. ಗುಜರಾತ್ ಪೊಲೀಸರು (Gujarat Police) ಇಲ್ಲಿಯವರೆಗೆ ನಡೆಸಿದ ಅತಿದೊಡ್ಡ ಕಾರ್ಯಾಚರಣೆ ಇದಾಗಿದ್ದು, ಬಂಧಿತರನ್ನ ಶೀಘ್ರವೇ ಗಡೀಪಾರು ಮಾಡುವ ಪ್ರಕ್ರಿಯೆ ಚುರುಕುಗೊಂಡಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘ್ವಿ ತಿಳಿಸಿದ್ದಾರೆ.

    ಅಹಮದಾಬಾದ್‌ನಲ್ಲಿ ಕನಿಷ್ಠ 890 ಮತ್ತು ಸೂರತ್‌ನಲ್ಲಿ 134 ಬಾಂಗ್ಲಾದೇಶಿಗರನ್ನ ಬಂಧಿಸಲಾಗಿದೆ. ಬಂಧಿತರು ಗುಜರಾತ್‌ಗೆ ಬರುವ ಮುನ್ನ ಭಾರತದ ವಿವಿಧ ಭಾಗಗಳಲ್ಲಿ ಉಳಿಯಲು ಪಶ್ಚಿಮ ಬಂಗಾಳದಿಂದ ಪಡೆದ ನಕಲಿ ದಾಖಲೆಗಳನ್ನು ಬಳಸಿದ್ದಾರೆ ಎಂದು ಸಹ ಸಚಿವರು ಮಾಹಿತಿ ನೀಡಿದ್ದಾರೆ.

    ಗುಜರಾತ್‌ನಲ್ಲಿ ವಾಸಿಸುವ ಅಕ್ರಮ ವಲಸಿಗರು ಸ್ವಯಂಪ್ರೇರಿತವಾಗಿ ಪೊಲೀಸರ ಮುಂದೆ ಶರಣಾಗಬೇಕು, ಇಲ್ಲದಿದ್ದರೆ ಅವರನ್ನು ಬಂಧಿಸಿ ಗಡೀಪಾರು ಮಾಡಲಾಗುವುದು ಎಚ್ಚರಿಕೆ ಸಹ ನೀಡಿದ್ದಾರೆ.

  • ಇವಿಎಂ ದುರ್ಬಳಕೆ, ಮಹಾರಾಷ್ಟ್ರ ಚುನಾವಣೆಯಲ್ಲಿ ಮೋಸ – ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ

    ಇವಿಎಂ ದುರ್ಬಳಕೆ, ಮಹಾರಾಷ್ಟ್ರ ಚುನಾವಣೆಯಲ್ಲಿ ಮೋಸ – ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ

    ಅಹಮದಾಬಾದ್: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ (Maharashtra Assembly Election) ಬಿಜೆಪಿ ಮೋಸದ ಮೂಲಕ ಗೆಲುವು ಸಾಧಿಸಿದೆ. ಈ ಚುನಾವಣೆಯಲ್ಲಿ ಇವಿಎಂ (EVM machine) ಬಳಕೆಯ ಮೂಲಕ ಪ್ರಜಾಪ್ರಭುತ್ವವನ್ನು ಹಾಳು ಮಾಡಲಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಗಂಭೀರ ಆರೋಪ ಮಾಡಿದ್ದಾರೆ.

    ಗುಜರಾತ್‌ನ (Gujarat) ಅಹಮದಾಬಾದ್‌ನ (Ahmedabad) ಸಾಬರಮತಿ ನದಿ ತೀರದಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ. ನಾವು ಎಲ್ಲೆಡೆ ಈ ವಿಷಯವನ್ನು ಪ್ರಸ್ತಾಪಿಸಿದ್ದೇವೆ. ರಾಹುಲ್ ಗಾಂಧಿ ಈ ಬಗ್ಗೆ ತೀವ್ರವಾಗಿ ಧ್ವನಿ ಎತ್ತಿದ್ದಾರೆ. ಒಟ್ಟಾರೆಯಾಗಿ ಮಹಾರಾಷ್ಟ್ರ ಚುನಾವಣೆ ಒಂದು ಮೋಸವಾಗಿತ್ತು ಎಂದರು.ಇದನ್ನೂ ಓದಿ: ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಇದಕ್ಕೆ ರಾಯರೆಡ್ಡಿ ಹೇಳಿಕೆಯೇ ಸಾಕ್ಷಿ: ನಿಖಿಲ್

    ಹರಿಯಾಣದಲ್ಲೂ ಇದೇ ರೀತಿಯಾಗಿ ನಡೆದಿದೆ. ಇಂತಹ ಮೋಸ ಈ ಹಿಂದೆ ಎಂದೂ ನಡೆದಿರಲಿಲ್ಲ. ಇದು ಪ್ರಜಾಪ್ರಭುತ್ವವನ್ನು ನಾಶಪಡಿಸುವ ಉದ್ದೇಶದಿಂದ ಮಾಡಲಾಗಿದೆ. ನಾವು ಇದನ್ನು ಕಂಡುಹಿಡಿಯುತ್ತೇವೆ. ಕಳ್ಳ ಒಂದು ದಿನ ಸಿಕ್ಕಿಬೀಳುತ್ತಾನೆ. ನಮ್ಮ ವಕೀಲರು ಮತ್ತು ನಾಯಕರು ಈ ಬಗ್ಗೆ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

    ವಿಶ್ವದಾದ್ಯಂತ ಇವಿಎಂಗಳಿಂದ ಮತ ಪತ್ರಗಳತ್ತ ಮರಳುತ್ತಿವೆ. ಆದರೆ ನಾವು ಇನ್ನೂ ಇವಿಎಂಗಳನ್ನೇ ಬಳಸುತ್ತಿದ್ದೇವೆ. ಇದು ಸಂಪೂರ್ಣ ಮೋಸ. ಅವರು ನಮ್ಮನ್ನು ಸಾಬೀತುಪಡಿಸುವಂತೆ ಕೇಳುತ್ತಾರೆ. ಆದರೆ ಅವರು ರೂಪಿಸಿರುವ ತಂತ್ರಗಳು ಆಡಳಿತ ಪಕ್ಷಕ್ಕೆ ಲಾಭವನ್ನು ತಂದುಕೊಡುತ್ತವೆ ಮತ್ತು ಪ್ರತಿಪಕ್ಷಕ್ಕೆ ಅನಾನುಕೂಲ ಮಾಡುತ್ತವೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ದೇಶದ ಯುವಜನರು ಎದ್ದು ನಮಗೆ ಮತಪತ್ರ ಬೇಕು ಎಂದು ಒತ್ತಾಯಿಸುವ ಸಮಯ ಬಂದಿದೆ ಎಂದು ಘೋಷಿಸಿದರು.

    ಕಳೆದ 11 ವರ್ಷಗಳಿಂದ ಆಡಳಿತ ಪಕ್ಷ ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ. ಸಂವಿಧಾನಿಕ ಸಂಸ್ಥೆಗಳು ಮತ್ತು ತತ್ವಗಳ ಮೇಲೆ ಆಕ್ರಮಣ ನಡೆಯುತ್ತಿದೆ. ಇವುಗಳನ್ನು ರಕ್ಷಿಸಲು ನಾವು ಹೋರಾಡಬೇಕಾಗಿದೆ. ಸರ್ಕಾರವು ಸಂಸತ್ತಿನ ಬಜೆಟ್ ಅಧಿವೇಶನವನ್ನು ತನ್ನ ಇಚ್ಛೆಯಂತೆ ನಡೆಸುತ್ತಿದೆ. ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಮಾತನಾಡಲು ಅವಕಾಶ ನೀಡಲಿಲ್ಲ. ಇದು ಪ್ರಜಾಪ್ರಭುತ್ವಕ್ಕೆ ಅವಮಾನವಾಗಿದೆ ಎಂದು ಹೇಳಿದರು.ಇದನ್ನೂ ಓದಿ: ವೃತ್ತಿ ಜೀವನದ ಕೊನೆಯ ದಿನ ಲೋಕಾಯುಕ್ತ ಬಲೆಗೆ ಬಿದ್ದ ಸ್ಮಾರ್ಟ್ ಸಿಟಿ ಮುಖ್ಯಸ್ಥ!

    ಮೋದಿ ಸರ್ಕಾರವು ಸಾರ್ವಜನಿಕ ಸಂಪನ್ಮೂಲಗಳನ್ನು ಕೆಲವೇ ಕೆಲವು ಉದ್ಯಮಿಗಳಿಗೆ ಮಾರಾಟ ಮಾಡುತ್ತಿದೆ. SC, ST ಮತ್ತು OBC ಮೀಸಲಾತಿಯನ್ನು ಖಾಸಗೀಕರಣದ ಮೂಲಕ ನಾಶಪಡಿಸಲಾಗುತ್ತಿದೆ. ಇದೇ ರೀತಿ ಮುಂದುವರಿದರೆ, ಮೋದಿ ಸರ್ಕಾರ ಇಡೀ ದೇಶವನ್ನು ಮಾರಿ ಹೋಗುತ್ತದೆ. ಬಿಜೆಪಿ-ಆರ್‌ಎಸ್‌ಎಸ್ 500 ವರ್ಷಗಳ ಹಳೆಯ ವಿಷಯಗಳನ್ನು ಎತ್ತಿ ಜನರಲ್ಲಿ ಧಾರ್ಮಿಕ ಒಡಕು ಮೂಡಿಸುತ್ತಿದೆ ಎಂದು ಟೀಕಿಸಿದ ಅವರು, ಜಾತಿಗಣತಿಗೆ ಆಗ್ರಹಿಸಿದರು ಮತ್ತು ಪ್ರಧಾನಿ ಮೋದಿ (PM Modi) ಒಬಿಸಿ ಸ್ಥಾನಮಾನವನ್ನು ರಾಜಕೀಯ ಲಾಭಕ್ಕಾಗಿ ಮಾತ್ರ ಬಳಸುತ್ತಿದ್ದಾರೆ ಎಂದು ಆರೋಪಿಸಿದರು.

    ಕಾಂಗ್ರೆಸ್ (Congress) ಪಕ್ಷದೊಳಗಿನ ಕಾರ್ಯಕ್ಷಮತೆ ಕುಂಠಿತರಿಗೆ ಎಚ್ಚರಿಕೆ ನೀಡಿದ ಖರ್ಗೆ, ಪಕ್ಷಕ್ಕೆ ಸಹಾಯ ಮಾಡದವರು ವಿಶ್ರಾಂತಿ ಪಡೆಯಬೇಕು, ಜವಾಬ್ದಾರಿಗಳನ್ನು ನಿಭಾಯಿಸದವರು ನಿವೃತ್ತರಾಗಬೇಕು ಎಂದು ತಾಕೀತು ಮಾಡಿದರು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಹೆಚ್ಚಿನ ಅಧಿಕಾರ ನೀಡುವುದಾಗಿ ಘೋಷಿಸಿದ ಅವರು, ಎಐಸಿಸಿ ಮಾರ್ಗಸೂಚಿಗಳ ಪ್ರಕಾರ ಅವರನ್ನು ಆಯ್ಕೆ ಮಾಡಲಾಗುವುದು ಎಂದರು.ಇದನ್ನೂ ಓದಿ: ಇನ್ನು ಮುಂದೆ ಹೊಟೇಲ್‌ಗಳಲ್ಲಿ ಆಧಾರ್ ಕಾರ್ಡ್ ತೋರಿಸುವ ಅಗತ್ಯವಿಲ್ಲ – ಫೇಸ್ ಐಡಿಯಲ್ಲೇ ದೃಢೀಕರಣ

  • 64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ – ಹಲವು ಮಹತ್ವದ ನಿರ್ಣಯ ಸಾಧ್ಯತೆ

    64 ವರ್ಷಗಳ ಬಳಿಕ ಗುಜರಾತ್‌ನಲ್ಲಿ ಎಐಸಿಸಿ ಅಧಿವೇಶನ – ಹಲವು ಮಹತ್ವದ ನಿರ್ಣಯ ಸಾಧ್ಯತೆ

    ಅಹಮದಾಬಾದ್: 64 ವರ್ಷಗಳ ಬಳಿಕ ಇಂದು ಮತ್ತು ನಾಳೆ (ಬುಧವಾರ) ಗುಜರಾತ್‌ನಲ್ಲಿ (Gujarat) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ನೇತೃತ್ವದಲ್ಲಿ ಎಐಸಿಸಿ ಮಹತ್ವದ ಸಭೆ ನಡೆಯಲಿದೆ.

    ಇಂದು ಮತ್ತು ನಾಳೆ ರಾಷ್ಟ್ರಮಟ್ಟದಲ್ಲಿ ಮಹತ್ವದ ಅಧಿವೇಶನ (AICC Session) ನಡೆಯಲಿದೆ. ಶಾಹಿಬಾಗ್‌ನಲ್ಲಿರುವ ಐತಿಹಾಸಿಕ ಸರ್ದಾರ್ ಸ್ಮಾರಕದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ 3,000ಕ್ಕೂ ಅಧಿಕ ನಾಯಕರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಮಧ್ಯರಾತ್ರಿ ಎದೆ ಮುಟ್ಟಿ ಯುವಕನ ಅಸಭ್ಯ ವರ್ತನೆ ಕೇಸ್‌ – ಯುವತಿಯನ್ನು ಪತ್ತೆ ಹಚ್ಚೋದೆ ದೊಡ್ಡ ಸವಾಲು

    ಎಐಸಿಸಿ ಮಹಾ ಅಧಿವೇಶನದಲ್ಲಿ ಕಾಂಗ್ರೆಸ್ ಸಂಘಟನೆಗೆ ಒತ್ತು ನೀಡಲಿದ್ದು, ಪಕ್ಷದ ಪುನಶ್ಚೇತನಕ್ಕೆ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಸಂಘಟನೆ, ತಂತ್ರಗಾರಿಗೆ ಸಂಬಂಧ ಹಲವು ಆಯಾಮಗಳಲ್ಲಿ ಚರ್ಚೆ ನಡೆಯಲಿದ್ದು, ಮುಂಬರುವ ಚುನಾವಣೆಗೆ ಸಂಘಟನಾತ್ಮಕ ಕಾರ್ಯತಂತ್ರದ ಪರಿಷ್ಕರಣೆ ನಡೆಯಲಿದೆ. ಸಂಘಟನಾ ಅಧಿಕಾರದ ವಿಕೇಂದ್ರೀಕರಣ, ಮೈತ್ರಿ ನಿರ್ವಹಣೆ ಮತ್ತು ಸಾರ್ವಜನಿಕ ಸಂಪರ್ಕದ ಕುರಿತಾಗಿಯೂ ಚರ್ಚೆ ನಡೆಯಲಿದೆ. ಅಲ್ಲದೇ 2027ರ ವೇಳೆಗೆ ಗುಜರಾತ್‌ನಲ್ಲಿ ರಾಜಕೀಯ ನೆಲೆಯನ್ನು ಮರಳಿ ಪಡೆಯಲು ರೂಪರೇಷೆ ನಡೆಸಲಿದ್ದಾರೆ. ಇದನ್ನೂ ಓದಿ: ಗೋಲ್ಡ್ ಪ್ರಿಯರಿಗೆ ಗುಡ್‌ನ್ಯೂಸ್ – ಚಿನ್ನದ ದರ ಇಳಿಕೆ!

    ಆರು ಪ್ರಮುಖ ರಾಜ್ಯಗಳ ಚುನಾವಣೆಗಳು ಸನ್ನಿಹಿತವಾಗುತ್ತಿರುವ ಹಿನ್ನೆಲೆ ಪ್ರಿಯಾಂಕಾ ಗಾಂಧಿಗೆ ಹೆಚ್ಚು ನೇರ ಮತ್ತು ರಚನಾತ್ಮಕ ಜವಾಬ್ದಾರಿ ನೀಡುವ ಬಗ್ಗೆ ಸಮಾಲೋಚನೆ ನಡೆಯಲಿದೆ. ಸದ್ಯ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದರೂ ಯಾವುದೇ ನಿರ್ದಿಷ್ಟ ಜವಬ್ದಾರಿ ಇಲ್ಲ. ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಜವಬ್ದಾರಿ ನೀಡುವ ಬಗ್ಗೆ ಚರ್ಚೆ ನಡೆಯಲಿದೆ. ಇದನ್ನೂ ಓದಿ: ಮೇಲುಕೋಟೆಯ ವೈರಮುಡಿ ಬ್ರಹ್ಮೋತ್ಸವ ಸಂಪನ್ನ

  • ಕೋಲ್ಕತ್ತಾ, ಅಹಮದಾಬಾದಲ್ಲಿ ವಕ್ಫ್ ಮಸೂದೆ ವಿರುದ್ಧ ಭಾರೀ ಪ್ರತಿಭಟನೆ – ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

    ಕೋಲ್ಕತ್ತಾ, ಅಹಮದಾಬಾದಲ್ಲಿ ವಕ್ಫ್ ಮಸೂದೆ ವಿರುದ್ಧ ಭಾರೀ ಪ್ರತಿಭಟನೆ – ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ

    – ಶುಕ್ರವಾರದ ಪ್ರಾರ್ಥನೆ ಬಳಿಕ ಪ್ರತಿಭಟನೆ ಆರಂಭ

    ಕೋಲ್ಕತ್ತಾ/ ಅಹಮದಾಬಾದ್‌: ವಕ್ಫ್‌ ತಿದ್ದುಪಡಿ ಮಸೂದೆ (Waqf Amendment Bill) ಸಂಸತ್ತಿನಲ್ಲಿ ಅಂಗೀಕಾರವಾಗಿದ್ದು, ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು (Protest) ಆರಂಭಗೊಂಡಿವೆ. ಶುಕ್ರವಾರ ಪ್ರಾರ್ಥನೆಯ ಬಳಿಕ ಕೋಲ್ಕತ್ತಾ (Kolkata), ಚೆನ್ನೈ (Chennai) ಮತ್ತು ಅಹಮದಾಬಾದ್‌ನಲ್ಲಿ (Ahmedabad) ಸಾವಿರಾರು ಜನ ಬೀದಿಗಿಳಿದು ಪ್ರತಿಭಟಿಸಿದ್ದು, ಪ್ರತಿಭಟನಾಕಾರರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸಪಟ್ಟಿದ್ದಾರೆ.

    ಕೋಲ್ಕತ್ತಾದಲ್ಲಿ ರಾಷ್ಟ್ರಧ್ವಜ ಹಿಡಿದು, ‘ನಾವು ವಕ್ಫ್ ತಿದ್ದುಪಡಿಯನ್ನು ತಿರಸ್ಕರಿಸುತ್ತೇವೆ’ ಎಂಬ ಪೋಸ್ಟರ್‌ಗಳನ್ನು ಹಿಡಿದು ಸಾವಿರಾರು ಜನ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಪರದಾಡಿದ್ದಾರೆ. ಇದನ್ನೂ ಓದಿ: ರಾಜ್ಯಸಭೆಯಲ್ಲೂ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

    ಅಹಮದಾಬಾದ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ರಸ್ತೆಯಲ್ಲಿ ಕುಳಿತಿದ್ದ ಪ್ರತಿಭಟನಾಕಾರರನ್ನು ಬಲವಂತವಾಗಿ ಪೊಲೀಸರು ಹತ್ತಿಕ್ಕಲು ಪ್ರಯತ್ನಿಸಿದ್ದಾರೆ. ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀಮ್ (ಎಐಎಂಐಎಂ) ರಾಜ್ಯ ಘಟಕದ ಮುಖ್ಯಸ್ಥ ಮತ್ತು ಅದರ 40 ಸದಸ್ಯರನ್ನು ವಶಕ್ಕೆ ಪಡೆದರು.

    ಚೆನ್ನೈನಲ್ಲಿ ಸಹ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು. ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು. ಚೆನ್ನೈ ಮತ್ತು ಕೊಯಮತ್ತೂರು ಮತ್ತು ತಿರುಚಿರಾಪಳ್ಳಿಯಂತಹ ಪ್ರಮುಖ ನಗರಗಳಲ್ಲಿ ಟಿವಿಕೆ ಕಾರ್ಯಕರ್ತರು ಜಮಾಯಿಸಿ ವಕ್ಫ್ ಮಸೂದೆಯ ವಿರುದ್ಧ ಘೋಷಣೆ ಕೂಗಿದರು.

    ನಟ ವಿಜಯ್‌ ಪ್ರತಿಕ್ರಿಯಿಸಿ, ವಕ್ಫ್ ಮಸೂದೆಯನ್ನು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಅದರ ಅಂಗೀಕಾರವು ಭಾರತದ ಜಾತ್ಯತೀತ ಅಡಿಪಾಯವನ್ನು ಪ್ರಶ್ನಿಸುತ್ತದೆ ಎಂದು ಟೀಕಿಸಿದರು.

    ಏ.2 ರಂದು ವಿಪಕ್ಷಗಳ ವ್ಯಾಪಕ ವಿರೋಧದ ನಡುವೆಯೂ ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿತ್ತು. ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು (Kiran Rijiju) ಮಸೂದೆಯನ್ನು ಮಂಡಿಸಿದ್ದರು. ಲೋಕಸಭೆ ಅಂಗೀಕಾರದ ನಂತರ ಅವರು ಗುರುವಾರ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Waqf Amendment Bill) ಮಂಡಿಸಿದ್ದರು. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಾರದೇ ಇದ್ದರೆ ಈ ಸಂಸತ್ತನ್ನೇ ಕಾಂಗ್ರೆಸ್‌ ವಕ್ಫ್‌ಗೆ ನೀಡ್ತಿತ್ತು: ಕಿರಣ್‌ ರಿಜಿಜು

  • ಕಿಂಗ್ಸ್ ಗೆಲುವಿಗೆ ಕನ್ನಡಿಗನ ಕಾಣಿಕೆ – ವೈಶಾಖ್ ವಿಜಯ್ ಯಾರು?

    ಕಿಂಗ್ಸ್ ಗೆಲುವಿಗೆ ಕನ್ನಡಿಗನ ಕಾಣಿಕೆ – ವೈಶಾಖ್ ವಿಜಯ್ ಯಾರು?

    – ಕನ್ನಡದಲ್ಲೇ ಸಂತಸ ಹಂಚಿಕೊಂಡ ವೈಶಾಖ್

    ಅಹಮದಾಬಾದ್: ಉದಯೋನ್ಮುಖ ಪ್ರತಿಭೆಗಳಿಗೆ ವೇದಿಕೆಯಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (IPL) ಹೊಸ ಹೊಸ ಪ್ರತಿಭೆಗಳು ಗುರುತಿಸಿಕೊಳ್ಳುತ್ತಿವೆ. ಮಂಗಳವಾರ ನಡೆದ ಪಂಜಾಬ್ ಕಿಂಗ್ಸ್ (Punjab Kings), ಗುಜರಾತ್ ಟೈಟನ್ಸ್ ನಡುವಿನ ಜಿದ್ದಾಜಿದ್ದಿ ಕಣದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿದ ವೈಶಾಖ್ ವಿಜಯ್ ಕುಮಾರ್ (Vyshak Vijay Kumar) ತಮ್ಮ ಬೌಲಿಂಗ್‌ನಿಂದ ಗಮನ ಸೆಳೆದಿದ್ದಾರೆ.

    ಹೌದು. 243 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದ್ದ ಪಂಜಾಬ್, ಟೈಟನ್ಸ್ (Gujarat Titans) ವಿರುದ್ಧ ಕೇವಲ 11 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿತು. ಆದ್ರೆ ಈ ರೋಚಕ ಗೆಲುವಿಗೆ ಕಾರಣವಾಗಿದ್ದು, ಕನ್ನಡಿಗ ವೈಶಾಖ್ ವಿಜಯ್ ಕುಮಾರ್. ಯಾವುದೇ ವಿಕೆಟ್ ಪಡೆಯದಿದ್ದರೂ ತಮ್ಮ ಬೌಲಿಂಗ್ ಸಾಮರ್ಥ್ಯದಿಂದ ಹೆಚ್ಚು ರನ್ ಬಿಟ್ಟುಕೊಡದೇ ಎದುರಾಳಿಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. 3 ಓವರ್‌ಗಳಲ್ಲಿ 28 ರನ್ ಬಿಟ್ಟುಕೊಟ್ಟು ತಂಡವನ್ನು ಗೆಲುವಿನ ದಡ ಸೇರಿಸಿದರು.

    ಇನ್ನು ಪಂದ್ಯದ ಬಳಿಕ ಕನ್ನಡದಲ್ಲೇ ಮಾತನಾಡಿದ ವೈಶಾಖ್, ಫೀಲ್ಡ್ ಸೆಟ್ಟಿಂಗ್ ಮೊದಲೇ ಪ್ಲ್ಯಾನ್ ಮಾಡಿದ್ದೆವು. ಪ್ರಾಕ್ಟಿಸ್ ಪಂದ್ಯದಲ್ಲೇ ಈ ಬಗ್ಗೆ ಯೋಜನೆ ರೂಪಿಸಿದ್ದೆವು. ಅದೇ ರೀತಿ ಪಂದ್ಯದಲ್ಲಿ ಯೋಜನೆಯನ್ನು ಕಾರ್ಯಗತಗೊಳಿಸಿದೆವು. ಅದು ಪಂದ್ಯ ಗೆಲ್ಲಲು ಸಹಾಯವಾಯಿತು. ಖಂಡಿತವಾಗಿಯೂ ನಾವು ಗೆಲ್ಲುತ್ತೇವೆ ಎಂದರು.

     

    ವೈಶಾಖ್ ವಿಜಯ್ ಕುಮಾರ್ ಯಾರು?
    ದೇಶೀಯ ಕ್ರಿಕೆಟ್‌ನಲ್ಲಿ ಕರ್ನಾಟಕದ ಪರ ಹಲವು ಟೂರ್ನಿಗಳಲ್ಲಿ ಆಡಿರುವ ವೈಶಾಖ್ ವಿಜಯ್ ಕುಮಾರ್, 26 ವರ್ಷ ವಯಸ್ಸಿನ ಬಲಗೈ ವೇಗದ ಬೌಲರ್. ವೈಶಾಖ್ 1997ರ ಜನವರಿ 31ರಂದು ಬೆಂಗಳೂರಿನಲ್ಲಿ ಜನಿಸಿದರು.

    2021ರ ಫೆಬ್ರವರಿ 24ರಂದು ವಿಜಯ್ ಹಜಾರೆ ಟ್ರೋಫಿಯಲ್ಲಿ ಒಡಿಶಾ ವಿರುದ್ಧ ತಮ್ಮ ಚೊಚ್ಚಲ ಲಿಸ್ಟ್ ಎ ಪಂದ್ಯ ಆಡಿದರು. ಸರ್ವೀಸಸ್ ತಂಡದ ವಿರುದ್ಧ ಆಡಿದ ಮೊದಲ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದಲ್ಲಿ, 25 ರನ್ ಬಿಟ್ಟುಕೊಟ್ಟು ಮೂರು ವಿಕೆಟ್ ಪಡೆದು ಮಿಂಚಿದ್ದರು. 2022ರ ಫೆಬ್ರವರಿ 17ರಂದು ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ರೈಲ್ವೇಸ್ ವಿರುದ್ಧ ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಕ್ಕೆ ಪಾದಾರ್ಪಣೆ ಮಾಡಿದರು.

    ಈಗಾಗಲೇ ವಿಜಯ್ ಹಜಾರೆ ಟ್ರೋಫಿ, ರಣಜಿ ಟ್ರೋಫಿ ಮತ್ತು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕರ್ನಾಟಕದ ಪರ ಆಡಿದ ಅನುಭವ ವೈಶಾಖ್ ವಿಜಯ್‌ಗಿದೆ. ಇದುವರೆಗ ಆಡಿದ 10 ಪ್ರಥಮ ದರ್ಜೆ ಪಂದ್ಯಗಳಲ್ಲಿ, ಅವರು 38 ವಿಕೆಟ್‌ಗಳನ್ನು ಪಡೆದು ಮಿಂಚಿದ್ದಾರೆ. ಇದೇ ವೇಳೆ ಲಿಸ್ಟ್ ಎ ಕ್ರಿಕೆಟ್‌ನಲ್ಲಿ 11 ವಿಕೆಟ್ ಕಬಳಿಸಿದ್ದಾರೆ. ದೇಶಿಯ ಮಟ್ಟದಲ್ಲಿ 14 ಟಿ20 ಪಂದ್ಯಗಳನ್ನು ಆಡಿದ ಅನುಭವವಿರುವ ಯುವ ವೇಗಿ, 22 ವಿಕೆಟ್‌ಗಳನ್ನು ಪಡೆದು ಮಿಂಚಿದ್ದಾರೆ.

    ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ವೈಶಾಖ್ 10 ಪಂದ್ಯಗಳಿಂದ 15 ವಿಕೆಟ್ ಕಬಳಿಸಿದ್ದರು. ಆ ಮೂಲಕ ಪಂದ್ಯಾವಳಿಯಲ್ಲಿ ಐದನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. 6.31ರ ಎಕಾನಮಿಯಲ್ಲಿ ಬೌಲಿಂಗ್ ಮಾಡಿ, ತಾವು ಹೆಚ್ಚು ರನ್ ಸೋರಿಕೆಯಾಗಲು ಅವಕಾಶ ಕೊಡುವುದಿಲ್ಲ ಎಂಬುದನ್ನು ಸಾಬೀತುಪಡಿಸಿದ್ದರು.

  • ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ – ಪಕ್ಷದ ವೇದಿಕೆಯಲ್ಲೇ ರಾಹುಲ್ ಗಾಂಧಿ ಅಸಮಾಧಾನ

    ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ – ಪಕ್ಷದ ವೇದಿಕೆಯಲ್ಲೇ ರಾಹುಲ್ ಗಾಂಧಿ ಅಸಮಾಧಾನ

    ಅಹಮದಾಬಾದ್: ಗುಜರಾತ್ ಕಾಂಗ್ರೆಸ್‌ನಲ್ಲಿ (Gujarat Congress) ಎರಡು ಬಣಗಳಿವೆ. ಒಂದು ಸಾರ್ವಜನಿಕರೊಂದಿಗೆ ಇದ್ದರೆ, ಇನ್ನೊಂದು ಸಾರ್ವಜನಿಕರಿಂದ ದೂರವಿರುತ್ತದೆ. ಕಾಂಗ್ರೆಸ್ ಪಕ್ಷವು 20-30 ಜನರನ್ನು ಹೊರಹಾಕಬೇಕಾಗಿದ್ದರೂ ಸಹ ಹಾಗೆ ಮಾಡಲು ಯಾವುದೇ ಹಿಂಜರಿಕೆ ಇರಬಾರದು. ಪಕ್ಷದಲ್ಲಿ ಹಲವು ಸಿಂಹಗಳಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ.

    ಅಹಮದಾಬಾದ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಪಕ್ಷದ ಕಾರ್ಯಕರ್ತರು ಮತ್ತು ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮದೇ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಬೆಂಗಳೂರಲ್ಲಿ ಲಾಂಗ್‌ ಹಿಡಿದು ಬೈಕ್‌ ರೈಡ್‌ – ರೌಡಿಶೀಟರ್‌ ಸಿದ್ದಿಕಿ ಬಂಧನ

    ಗುಜರಾತ್ ಪ್ರದೇಶ ಕಾಂಗ್ರೆಸ್ ನಾಯಕರು ನಿರ್ದೇಶನ ನೀಡುವಲ್ಲಿ ವಿಫಲರಾಗಿದ್ದಾರೆ ಎಂಬುದನ್ನು ಒಪ್ಪಿಕೊಳ್ಳುವುದರಲ್ಲಿ ತಮಗೆ ಯಾವುದೇ ಸಮಸ್ಯೆ ಇಲ್ಲ. ಸ್ಥಳೀಯ ನಾಯಕರ ಹೃದಯದಲ್ಲಿ ಏನಿದೆ ಎಂಬುದನ್ನು ತಿಳಿದುಕೊಳ್ಳುವುದು ಮತ್ತು ಅರ್ಥಮಾಡಿಕೊಳ್ಳುವುದು ನನ್ನ ಗುರಿಯಾಗಿತ್ತು. ಈ ಸಂಭಾಷಣೆಯಲ್ಲಿ, ಸಂಘಟನೆ, ಗುಜರಾತ್ ರಾಜಕೀಯ ಮತ್ತು ಇಲ್ಲಿನ ಸರ್ಕಾರದ ಕಾರ್ಯವೈಖರಿಗೆ ಸಂಬಂಧಿಸಿದ ಹಲವು ವಿಷಯಗಳು ಬೆಳಕಿಗೆ ಬಂದವು ಎಂದರು. ಇದನ್ನೂ ಓದಿ: ಮೇಕೆದಾಟು ವರ ಅಂತ ತ.ನಾಡು ಶಾಸಕರೇ ಹೇಳಿದ್ದಾರೆ, ರಾಜಕೀಯಕ್ಕಾಗಿ ವಿರೋಧ: ನಂಜಾವಧೂತ ಶ್ರೀ

    ಗುಜರಾತ್‌ನ ಕಾಂಗ್ರೆಸ್ ಸಂಘಟನೆಗಳಲ್ಲಿ ಹಲವು ವಿಭಜನೆಗಳಿವೆ. ಒಬ್ಬರು ಸಾರ್ವಜನಿಕರನ್ನು ಗೌರವಿಸುತ್ತಾರೆ, ಸಾರ್ವಜನಿಕ ಸಮಸ್ಯೆಗಳಿಗೆ ಧ್ವನಿ ಎತ್ತುತ್ತಾರೆ ಮತ್ತು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಹೃದಯದಲ್ಲಿ ಇಟ್ಟುಕೊಂಡಿದ್ದಾರೆ. ಇನ್ನೊಂದು ಗುಂಪು ಸಾರ್ವಜನಿಕರನ್ನು ಗೌರವಿಸುವುದಿಲ್ಲ. ಈ ಎರಡು ರೀತಿಯ ಪಕ್ಷದ ನಾಯಕರನ್ನು ಬೇರ್ಪಡಿಸದ ಹೊರತು, ಇಲ್ಲಿಯ ಜನರು ಕಾಂಗ್ರೆಸ್ ಅನ್ನು ನಂಬಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕವಿ ಸಿದ್ದಲಿಂಗ ಪಟ್ಟಣಶೆಟ್ಟಿ `ವಿದಿಶಾ ಪ್ರಹಸನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿ

  • ಹೃದಯಾಘಾತದಿಂದ 8 ವರ್ಷದ ಬಾಲಕಿ ಸಾವು

    ಹೃದಯಾಘಾತದಿಂದ 8 ವರ್ಷದ ಬಾಲಕಿ ಸಾವು

    – ಕುಸಿದು ಬೀಳುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

    ಗಾಂಧೀನಗರ: ಹೃದಯಾಘಾತದಿಂದ 8 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಗುಜರಾತ್‌ನ (Gujarat) ಅಹಮದಾಬಾದ್‌ನ (Ahmedabad) ಶಾಲೆಯಲ್ಲಿ ನಡೆದಿದೆ.

    ಮೃತ ಬಾಲಕಿಯನ್ನು 3ನೇ ತರಗತಿ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದ್ದು, ಹೆಸರನ್ನು ಬಹಿರಂಗ ಪಡಿಸಿಲ್ಲ.ಇದನ್ನೂ ಓದಿ: ನೀವೇ ಮುಡಾ ಸದಸ್ಯರಾಗಿದ್ದೀರಿ, ಹೀಗಿದ್ರೂ ಅಕ್ರಮ ಹೇಗಾಯ್ತು? – ಶಾಸಕರ ಮೇಲೆ ಸಿಎಂ ಗರಂ

    ಇಂದು ಬೆಳಗ್ಗೆ ಈ ಘಟನೆ ನಡೆದಿದ್ದು, ಬಾಲಕಿಗೆ ಹೃದಯಾಘಾತವಾಗುವ ದೃಶ್ಯ ಶಾಲೆಯಲ್ಲಿದ್ದ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ. ದೃಶ್ಯದಲ್ಲಿ ಶಾಲೆಯ ಕಾರಿಡಾರ್‌ನಲ್ಲಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ನಿಂತಲ್ಲಿಯೇ ನಿಲ್ಲುತ್ತಾಳೆ. ಬಳಿಕ ಮತ್ತೆ ಮುಂದೆ ಹೋಗಿ ಪಕ್ಕದಲ್ಲಿದ್ದ ಬೆಂಚ್‌ನಲ್ಲಿ ಕುಳಿತುಕೊಳ್ಳುತ್ತಾಳೆ. ಸ್ವಲ್ಪ ಹೊತ್ತು ಕುಳಿತುಕೊಂಡವಳೆ ದಿಢೀರ್ ನೆಲಕ್ಕೆ ಕುಸಿಯುತ್ತಾಳೆ. ಆಗ ಅಲ್ಲೇ ನಿಂತಿದ್ದ ಶಿಕ್ಷಕಿಯರು ಆಕೆಯನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿದರು. ಆಸ್ಪತ್ರೆಯಲ್ಲಿ ವೈದ್ಯರ ತಪಾಸಣೆಯ ಬಳಿಕ ಮೃತಪಟ್ಟಿರುವುದಾಗಿ ತಿಳಿಸಿದರು.

    ಶಾಲೆಯ ಪ್ರಾಂಶುಪಾಲೆ ಶರ್ಮಿಷ್ಠ ಸಿನ್ಹಾ ಪ್ರಕಾರ, ಬಾಲಕಿಗೆ ಉಸಿರಾಟದ ತೊಂದರೆ ಇತ್ತು. ಅಸ್ವಸ್ಥಳಾಗಿದ್ದ ಆಕೆ ಶಾಲೆಯ ಕಾರಿಡಾರ್‌ನಲ್ಲಿ ಕುಸಿದು ಬಿದ್ದಿದ್ದಾಳೆ ಎಂದು ತಿಳಿಸಿದರು.

    ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ಆರಂಭಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಬಾಲಕಿ ಹೃದಯಘಾತದಿಂದ ಸಾವನ್ನಪ್ಪಿದ್ದಾಳೆ. ಬಾಲಕಿಯ ಪೋಷಕರು ಮುಂಬೈನಲ್ಲಿ ವಾಸಿಸುತ್ತಿದ್ದು, ಆಕೆ ಅಹಮದಾಬಾದ್‌ನಲ್ಲಿ ತನ್ನ ಅಜ್ಜಿಯೊಂದಿಗೆ ವಾಸಿಸುತ್ತಿದ್ದಳು.ಇದನ್ನೂ ಓದಿ: ಕುಂಭಮೇಳದಲ್ಲಿ ಭಾಗಿಯಾಗ್ತಾರೆ ಆ್ಯಪಲ್ ಸಹ-ಸಂಸ್ಥಾಪಕ ಸ್ವೀವ್‌ ಜಾಬ್ಸ್‌ ಪತ್ನಿ

  • ಸಿಜೆಐ ಸೋಗಿನಲ್ಲಿ ವೃದ್ಧನಿಗೆ 1.26 ಕೋಟಿ ವಂಚನೆ – ನಾಲ್ವರು ಆರೋಪಿಗಳ ಬಂಧನ

    ಸಿಜೆಐ ಸೋಗಿನಲ್ಲಿ ವೃದ್ಧನಿಗೆ 1.26 ಕೋಟಿ ವಂಚನೆ – ನಾಲ್ವರು ಆರೋಪಿಗಳ ಬಂಧನ

    ಗಾಂಧೀನಗರ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ (Chief Justice Of India), ಹಿರಿಯ ಪೊಲೀಸ್ ಮತ್ತು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವಯೋವೃದ್ಧರೊಬ್ಬರಿಗೆ 1.26 ಕೋಟಿ ರೂ. ವಂಚನೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಅಹ್ಮದಾಬಾದ್ ಸೈಬರ್ ಕ್ರೈಂ ಪೊಲೀಸರು (Ahmedabad Crime Branch Police)  ಬಂಧಿಸಿದ್ದಾರೆ.

    ಬಂಧಿತರನ್ನು ಮೊಹಮ್ಮದ್ ಹುಸೇನ್ ಜಾವೇದ್ ಅಲಿ, ತರುಣ್ ಸಿಂಗ್ ವಘೇಲಾ, ಬ್ರಿಜೇಶ್ ಪರೇಖ್ ಮತ್ತು ಶುಭಂ ಠಾಕರ್ ಎಂದು ಗುರುತಿಸಲಾಗಿದೆ.

    ಸೈಬರ್ ಕ್ರೈಂ ಪ್ರಕರಣದಲ್ಲಿ ಶುಭಂ ಠಾಕರ್‌ನನ್ನು ಈ ಹಿಂದೆ ಹರಿಯಾಣ ಪೊಲೀಸರು (Hariyana Police) ಬಂಧಿಸಿದ್ದರು. ಪ್ರಕರಣದಲ್ಲಿ ಆರೋಪಿಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಇದನ್ನೂ ಓದಿ: ಪರಿಷತ್‌ ಉಪ ಚುನಾವಣೆ| ಬಿಜೆಪಿಯ ಕಿಶೋರ್ ಕುಮಾರ್‌ಗೆ ಭರ್ಜರಿ ಜಯ

    ಸಂತ್ರಸ್ತ ವೃದ್ಧ ವಿಡಿಯೋ ಕಾಲ್ ಸ್ವೀಕರಿಸಿದ ಕರೆಗಳು ಕಾಂಬೋಡಿಯಾದಲ್ಲಿ ಎಂದು ಪತ್ತೆಹಚ್ಚಲಾಗಿದೆ. ವರ್ಗಾವಣೆಯಾಗಿರುವ ಹಣದ ಹಲವು ಖಾತೆಗಳು ಗುಜರಾತ್‌ನಲ್ಲಿರುವುದು ಗೊತ್ತಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಅ.10 ರಂದು ವೃದ್ಧನಿಗೆ ಕರೆ ಮಾಡಿದ್ದ ವಂಚಕರು, ತಾನು ಹಿರಿಯ ಪೊಲೀಸ್ ಅಧಿಕಾರಿ, ಸಿಬಿಐ ಅಧಿಕಾರಿ ಮತ್ತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಎಂದು ಹೇಳಿಕೊಂಡಿದ್ದರು. ವೃದ್ಧನಿಗೆ ಕರೆ ಮಾಡಿ ಅವರ ಖಾತೆಯಿಂದ 2 ಕೋಟಿ ರೂ. ಹಣದ ವಹಿವಾಟು ನಡೆದಿದೆ. ಬ್ಯಾಂಕ್ ಖಾತೆಯು ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದೆ ಮತ್ತು ನೀವು ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಬಹುದು ಎಂದು ಬೆದರಿಕೆ ಹಾಕಿದ್ದಾರೆ.

    ತನಿಖೆಯ ನೆಪದಲ್ಲಿ ಸಂತ್ರಸ್ತನ ಸ್ಥಿರ ಠೇವಣಿಗಳನ್ನು ಕ್ಲೋಸ್ ಮಾಡಿ, ಹಣವನ್ನು ಪರಿಶೀಲನೆಗೆ ವರ್ಗಾಯಿಸುವಂತೆ ಒತ್ತಡ ಹಾಕಿದ್ದಾರೆ. ಹಣವನ್ನು 48 ಗಂಟೆಯೊಳಗೆ ಹಿಂತಿರುಗಿಸುವುದಾಗಿ ಭರವಸೆ ನೀಡಿದ್ದಾರೆ. ವೃದ್ಧಮನ್ನು ನಂಬಿಸಲು ನಕಲಿ ಸುಪ್ರೀಂಕೋರ್ಟ್ ಪ್ರಮಾಣಪತ್ರವನ್ನು ತೋರಿಸಿದ್ದಾರೆ. ತಮ್ಮ ಠೇವಣಿಗಳನ್ನು ತೆಗೆದು ಹಣ ವರ್ಗಾವಣೆ ಮಾಡಿದ ಬಳಿಕ ವೃದ್ಧನಿಂದ ಆರೋಪಿಗಳು ಸಂಪರ್ಕ ಕಟ್ ಮಾಡಿಕೊಂಡಿದ್ದರು.ಇದನ್ನೂ ಓದಿ: ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ : 5 ಕೋಟಿ ಬೇಡಿಕೆಯಿಟ್ಟಿದ್ದ ತರಕಾರಿ ಮಾರಾಟಗಾರ ಅರೆಸ್ಟ್‌

  • ನಕಲಿ ನೋಟು ಕೇಸ್‌ನಲ್ಲಿ ಗುಜರಾತ್‌ ಪೊಲೀಸರಿಗೆ ಶಾಕ್‌ – ನೋಟುಗಳಲ್ಲಿ ಗಾಂಧೀಜಿ ಬದಲಿಗೆ ಇತ್ತು ಬಾಲಿವುಡ್‌ ನಟನ ಫೋಟೋ

    ನಕಲಿ ನೋಟು ಕೇಸ್‌ನಲ್ಲಿ ಗುಜರಾತ್‌ ಪೊಲೀಸರಿಗೆ ಶಾಕ್‌ – ನೋಟುಗಳಲ್ಲಿ ಗಾಂಧೀಜಿ ಬದಲಿಗೆ ಇತ್ತು ಬಾಲಿವುಡ್‌ ನಟನ ಫೋಟೋ

    ಗಾಂಧೀನಗರ: ನಕಲಿ ನೋಟುಗಳ (Fake Notes) ಪ್ರಕರಣ ಬೇಧಿಸಿದ ಗುಜರಾತ್‌ ಪೊಲೀಸರು ಶಾಕ್‌ ಆಗಿದ್ದಾರೆ. 500 ರೂ. ಮುಖಬೆಲೆಯ ನಕಲಿ ನೋಟುಗಳಲ್ಲಿ ಗಾಂಧೀಜಿ ಬದಲಿಗೆ ಬಾಲಿವುಡ್‌ ನಟ ಅನುಪಮ್‌ ಖೇರ್‌ (Anupam Kher) ಅವರ ಚಿತ್ರ ಬಳಸಿರುವುದು ಕಂಡುಬಂದಿದೆ.

    ಸುಮಾರು 1.6 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನೋಟುಗಳಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬದಲಿಗೆ ‘ರಿಸೋಲ್ ಬ್ಯಾಂಕ್ ಆಫ್ ಇಂಡಿಯಾ’ ಎಂದು ಪದ ಬಳಕೆ ಮಾಡಲಾಗಿದೆ. ಇದೀಗ ನೋಟಿನ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ದೇಶಿ ಹಸುಗಳನ್ನು ‘ರಾಜ್ಯಮಾತಾ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ

    ಅಹಮದಾಬಾದ್‌ನ ವ್ಯಾಪಾರಿಯೊಬ್ಬರು ನಕಲಿ ನೋಟುಗನ್ನು ಬಳಸಿ ವಂಚಿಸಿರುವ ಸಂಬಂಧ ವೈರಲ್‌ ಆಗಿರುವ ವೀಡಿಯೋವನ್ನು ಟ್ಯಾಗ್‌ ಮಾಡಿ ಅನುಪಮ್‌ ಖೇರ್‌ ಅಚ್ಚರಿ ವ್ಯಕ್ತಪಡಿಸಿದ್ದಾರೆ. 500 ರೂ. ನೋಟುಗಳಲ್ಲಿ ಗಾಂಧೀಜಿಯವರ ಫೋಟೋ ಬದಲಿಗೆ ನನ್ನ ಫೋಟೋ ಎಂದು ನಟ ಶೀರ್ಷಿಕೆ ನೀಡಿದ್ದಾರೆ.

    ಸೆ.24 ರಂದು ನವರಂಗಪುರ ಪೊಲೀಸ್ ಠಾಣೆಯಲ್ಲಿ ಬುಲಿಯನ್ ವ್ಯಾಪಾರಿ ಮೆಹುಲ್ ಠಕ್ಕರ್ ದೂರು ದಾಖಲಿಸಿದ್ದರು. 1.6 ಕೋಟಿ ರೂ. ಮೌಲ್ಯದ 2,100 ಗ್ರಾಂ ಚಿನ್ನವನ್ನು ಒಳಗೊಂಡ ಡೀಲ್‌ಗಾಗಿ ಶಂಕಿತರು ತಮ್ಮ ಉದ್ಯೋಗಿಯೊಬ್ಬರನ್ನು ಸಂಪರ್ಕಿಸಿದ್ದರು. ಉಳಿದ 30 ಲಕ್ಷವನ್ನು ಮರುದಿನ ಪಾವತಿಸುವುದಾಗಿ ಭರವಸೆ ನೀಡಿ, 1.3 ಕೋಟಿ ನಗದು ನೀಡಿದ್ದಾರೆ. ಆದರೆ, ಚಿನ್ನವನ್ನು ಹಸ್ತಾಂತರಿಸಿದ ನಂತರ ಅವರು ಎಸ್ಕೇಪ್‌ ಆದರು. ಎಲ್ಲಾ ನೋಟುಗಳನ್ನು ಗಮನಿಸಿದಾಗ ನಕಲಿ ಎಂದು ತಿಳಿಯಿತು.

    ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: MUDA Scam Case: ಸಿಎಂ ಸಿದ್ದರಾಮಯ್ಯ ವಿರುದ್ಧ ಇಸಿಐಆರ್ ದಾಖಲಿಸಿದ ED