Tag: air crash

  • ಸೇನಾ ವಿಮಾನ ಪತನ – ಅಪಾಯದಿಂದ ಪಾರಾದ ಪೈಲಟ್‌ಗಳು

    ಪಾಟ್ನಾ: ಬಿಹಾರದ ಗಯಾದಲ್ಲಿರುವ ಭಾರತೀಯ ಸೇನಾ ಅಧಿಕಾರಿಗಳ ತರಬೇತಿ ಅಕಾಡೆಮಿಯ ವಿಮಾನವೊಂದು ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನವಾಗಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಪೈಲಟ್‌ಗಳು ಅಪಾಯದಿಂದ ಪಾರಾಗಿದ್ದಾರೆ.

    ಪೈಲಟ್‌ಗಳು ತುರ್ತು ಭೂಸ್ಪರ್ಶ ಮಾಡಲು ಯತ್ನಿಸಿದಾಗ ಭೋದಗಯಾ ಬ್ಲಾಕ್‌ಗೆ ಹೊಂದಿಕೊಂಡಿರುವ ಹೊಲದಲ್ಲಿ ಅಪಘಾತ ಸಂಭವಿಸಿದೆ. ಸೇನಾ ವಿಮಾನದಲ್ಲಿ ತರಬೇತಿ ಪಡೆಯುತ್ತಿದ್ದ ಇಬ್ಬರು ಪೈಲಟ್‌ಗಳು ಸುರಕ್ಷಿತರಾಗಿದ್ದಾರೆ ಎಂದು ಗಯಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಬಂಗಜೀತ್ ಸಾಹಾ ತಿಳಿಸಿದ್ದಾರೆ. ಇದನ್ನೂ ಓದಿ: ಮೂಗಿನ ಮೂಲಕ ನೀಡಲಾಗುವ ಕೋವ್ಯಾಕ್ಸಿನ್‌ನ ಬೂಸ್ಟರ್ ಡೋಸ್ ಪ್ರಯೋಗಕ್ಕೆ ಒಪ್ಪಿಗೆ

    ತರಬೇತಿ ಪಡೆಯುತ್ತಿದ್ದ ಪೈಲಟ್‌ಗಳ ವಿಮಾನ ಕೆಳಗೆ ಬೀಳುವುದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣ ಸ್ಥಳಕ್ಕೆ ಧಾವಿಸಿ ಕೆಡೆಟ್‌ಗಳನ್ನು ಹೊರ ತೆಗೆದಿದ್ದಾರೆ. ಕೂಡಲೆ ಸೇನಾ ಸಿಬ್ಬಂದಿ ಅವರನ್ನು ಚಿಕಿತ್ಸೆಗೆ ಕರೆದೊಯ್ದಿದ್ದು, ಅಪಘಾತಕ್ಕೀಡಾದ ವಿಮಾನದ ಅವಶೇಷಗಳನ್ನು ಸಂಗ್ರಹಿಸಿದ್ದಾರೆ. ಇದನ್ನೂ ಓದಿ: 500 ರೂಪಾಯಿಗೆ ಖರೀದಿಸಿದ್ದ ಕುರ್ಚಿ 16 ಲಕ್ಷಕ್ಕೆ ಹರಾಜು

    ವಿಮಾನ ಅಪಘಾತಕ್ಕೆ ಕಾರಣ ಏನು ಎಂಬುದು ತಾಂತ್ರಿಕ ತಜ್ಞರ ಪರೀಕ್ಷೆಯ ಬಳಿಕವೇ ತಿಳಿಯಲಿದೆ ಎಂದು ಬಂಗಜೀತ್ ತಿಳಿಸಿದ್ದಾರೆ.

  • ಕೇರಳದ ವಿಮಾನ ಅಪಘಾತ – ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ 22 ಅಧಿಕಾರಿಗಳಿಗೆ ಕೊರೊನಾ

    ಕೇರಳದ ವಿಮಾನ ಅಪಘಾತ – ರಕ್ಷಣಾ ಕಾರ್ಯದಲ್ಲಿ ತೊಡಗಿದ್ದ 22 ಅಧಿಕಾರಿಗಳಿಗೆ ಕೊರೊನಾ

    ತಿರುವನಂತಪುರಂ: ಕೇರಳ ವಿಮಾನ ದುರಂತದ ವೇಳೆ ರಕ್ಷಣಾ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದ 22 ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಮಲಪ್ಪುರಂ ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.

    ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನವು ಕೊರೊನಾ ನಡುವೆಯೂ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಭಾರತಕ್ಕೆ ಕರೆತರುತ್ತಿತ್ತು. ಕೇಂದ್ರ ಸರ್ಕಾರದ ವಂದೇ ಭಾರತ್ ಮಿಷನ್ ಅಡಿಯಲ್ಲಿ ದುಬೈನಿಂದ 184 ಪ್ರಯಾಣಿಕರನ್ನು ಕೇರಳಗೆ ಬಂದಿದ್ದರು. ಆದರೆ ಪ್ರತಿಕೂಲ ಹವಾಮಾನದ ಸಮಸ್ಯೆಯಿಂದ ವಿಮಾನ 35 ಅಡಿ ಕಂದಕಕ್ಕೆ ಜಾರಿ ಬಿದ್ದಿತ್ತು. ಪರಿಣಾಮ ಇಬ್ಬರು ಪೈಲಟ್‍ಗಳು ಸೇರಿ 18 ಜನರು ಸಾವನ್ನಪ್ಪಿದ್ದರು.

    ಕಂದಕಕ್ಕೆ ಬಿದ್ದಿದ್ದ ವಿಮಾನದಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು ಮತ್ತು ಸ್ಥಳದಲ್ಲಿದ್ದ ಹಲವು ಅಧಿಕಾರಿಗಳು ಬಂದು ರಕ್ಷಣೆ ಮಾಡಿದ್ದರು. ಇದಾದ ನಂತರ ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದ ಎಲ್ಲ ಅಧಿಕಾರಿಗಳನ್ನು ಕ್ವಾರಂಟೈನ್ ಮಾಡಲಾಗಿತ್ತು. ಈಗ ಇವರ ಪೈಕಿ 22 ಮಂದಿ ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಈ ಎಲ್ಲ ಅಧಿಕಾರಿಗಳು 4 ಗಂಟೆಗಳ ಕಾಲ ರಕ್ಷಣಾ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

    ಅಗಸ್ಟ್ 7ರಂದು ಸಂಜೆ 7.45ರ ಸುಮಾರಿಗೆ ದುಬೈನಿಂದ ಬಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೋಯಿಕ್ಕೋಡ್‍ನ ಕರಿಪುರದಲ್ಲಿ ಲ್ಯಾಂಡಿಗೆ ವೇಳೆ ರನ್ ವೇಯಲ್ಲಿ ಜಾರಿ ದುರಂತಕ್ಕೀಡಾಗಿತ್ತು. ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿಕೊಂಡಿಲ್ಲ. ವಿಮಾನದಲ್ಲಿ 184 ಮಂದಿ ಪ್ರಯಾಣಿಕರಿದ್ದರು. 10 ಮಂದಿ ಮಕ್ಕಳು, ಇಬ್ಬರು ಪೈಲಟ್‍ಗಳು ಹಾಗೂ ಐವರು ಕ್ಯಾಬಿನ್ ಸಿಬ್ಬಂದಿ ಇದ್ದರು.

    ದುಬೈಯಿಂದ 184 ಪ್ರಯಾಣಿಕರನ್ನು ಕರೆತರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ಪೈಲಟ್ ದೀಪಕ್ ವಸಂತ ಸಾಠೆ ಎರಡು ಬಾರಿ ವಿಮಾನ ನಿಲ್ದಾಣಕ್ಕೆ ಸುತ್ತು ಹೊಡೆಸಿದ್ದರು. ಆದರೆ ಪ್ರತಿಕೂಲ ಹವಾಮಾನದ ಸಮಸ್ಯೆಯ ಮಧ್ಯೆಯೂ ವಿಮಾನವನ್ನು ಟೇಬಲ್ ಟಾಪ್ ರನ್‍ವೇಯಲ್ಲಿ ಇಳಿಸಿದರೂ ಅದು 35 ಅಡಿ ಕಂದಕಕ್ಕೆ ಜಾರಿ ಬಿದ್ದು ಗೋಡೆಗೆ ಡಿಕ್ಕಿ ಹೊಡೆದು ಇಬ್ಭಾಗವಾಗಿತ್ತು. ಘಟನೆಯಲ್ಲಿ ಇಬ್ಬರು ಪೈಲಟ್ ಗಳು ಸೇರಿ 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದರು. ಜೊತೆಗೆ 150ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು.

  • ಅಜ್ಜಿ ಮನೆ ನೋಡುವ ಮುನ್ನವೇ ಕಣ್ಣು ಮುಚ್ಚಿದ 1 ವರ್ಷದ ಕಂದಮ್ಮ

    ಅಜ್ಜಿ ಮನೆ ನೋಡುವ ಮುನ್ನವೇ ಕಣ್ಣು ಮುಚ್ಚಿದ 1 ವರ್ಷದ ಕಂದಮ್ಮ

    – ಮೊಮ್ಮಗನಿಗಾಗಿ ಕಾದು ಕುಳಿತಿದ್ದ ಅಜ್ಜ-ಅಜ್ಜಿಗೆ ಶಾಕ್

    ತಿರುವನಂತಪುರಂ: ಕೇರಳದ ಕರಿಪುರ ವಿಮಾನ ನಿಲ್ದಾಣದಲ್ಲಿ ದುರಂತಕ್ಕೀಡಾದವರ ಒಂದೊಂದೇ ಮನಮಿಡಿಯುವ ಕಥೆಗಳು ಬೆಳಕಿಗೆ ಬರುತ್ತಿದೆ.

    ಹೌದು. 1 ವರ್ಷದ ಅಜಮ್ ಮೊಹಮ್ಮದ್ ತನ್ನ ಅಜ್ಜಿ ಮನೆಗೆ ಹೋಗುವ ಮುನ್ನವೇ ಕಣ್ಣುಮುಚ್ಚಿರುವ ಮನಕಲಕುವ ಘಟನೆಯೊಂದು ನಡೆದಿದೆ. ಕೋಯಿಕ್ಕೋಡ್ ವೆಲ್ಲಿಮಡುಕುನ್ನು ಮ್ದು ನಿಜಮ್ ಹಾಗೂ ಸಾಹಿರಾ ದಂಪತಿಗೆ ಒಂದು ವರ್ಷಗಳ ಹಿಂದೆ ಅಜಮ್ ಜನಿಸಿದ್ದಾನೆ.

    ಮಗುವಿಗೆ 1 ವರ್ಷವಾದ ಬಳಿಕ ಇದೀಗ ತಮ್ಮ ಮಗುವನ್ನು ತಾಯ್ನಾಡಿಗೆ ಪರಿಚಯಿಸಲು ತಾಯಿ ತನ್ನ ಮೂವರು ಮಕ್ಕಳೊಂದಿಗೆ ವಿಮಾನ ಹತ್ತಿದ್ದರು. ಆದರೆ ಅಜಮ್ ಮೊದಲ ಪ್ರಯಾಣವೇ ಅಂತಿಮ ಪ್ರಯಾಣವಾಗಿದ್ದು, ಇತ್ತ ಮೊಮ್ಮಗನನ್ನು ನೋಡಲು ಕಾತರದಿಂದ ಕಾಯುತ್ತಿದ್ದ ಅಜ್ಜ-ಅಜ್ಜಿಗೆ ದಿಗಿಲು ಬಡಿದಂತಾಗಿದೆ. ಇದನ್ನೂ ಓದಿ: ಏರ್ ಇಂಡಿಯಾ ವಿಮಾನ ಇಬ್ಭಾಗವಾದ್ರೂ ಬದುಕುಳಿದ ಪುಟ್ಟ ಕಂದಮ್ಮ

    ಅಜಮ್ ತಾಯಿ 29 ವರ್ಷದ ಸಾಹಿರಾ ಬಾನು ಕೂಡ ದುರ್ಘಟನೆಗೆ ಬಲಿಯಾಗಿದ್ದಾರೆ. ಅಜಮ್ ಸಹೋದರರಾದ 8 ವರ್ಷದ ಇಹಾನ್ ಮೊಹಮ್ಮದ್ ಹಾಗೂ 4 ವರ್ಷದ ಮರಿಯಮ್ ಮೊಹಮ್ಮದ್ ಗಾಯಗೊಂಡಿದ್ದು, ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಪರಿಪುರದಲ್ಲಿ ವಿಮಾನ ಲ್ಯಾಂಡಿಂಗ್ ಆಗುತ್ತಿದ್ದ ಸಂದರ್ಭದಲ್ಲಿ ಪುಟ್ಟ ಕಂದಮ್ಮ ಅಜಮ್ ತನ್ನ ತಾಯಿಯ ತೊಡೆಯ ಮೇಲೆ ಕುಳಿತುಕೊಂಡಿದ್ದ ಎನ್ನಲಾಗಿದೆ.

    ನಿಜಮ್ ಹಾಗೂ ಅವರ ಕುಟುಂಬ ಕಳೆದ 10 ವರ್ಷಗಳಿಂದ ದುಬೈನಲ್ಲಿ ನೆಲೆಸಿದೆ. ನಿಜಮ್ ಅಲ್ಲೇ ಉಳಿದುಕೊಂಡಿದ್ದು, ಸಾಹಿರಾ ತಮ್ಮ ಮೂವರು ಮಕ್ಕಳೊಂದಿಗೆ ಶುಕ್ರವಾರ ದುಬೈನಿಂದ ತಾಯ್ನಾಡಿಗೆ ಬರಲು ವಿಮಾನ ಏರಿದ್ದಾರೆ. ಆದರೆ ತಾಯ್ನಾಡಿಗೆ ಕಾಲಿಡುವ ಮೊದಲೇ ದುರಂತಕ್ಕೀಡಾಗಿದ್ದಾರೆ. ಸಾಹಿರಾಗೆ ಹೆರಿಗೆ ಸಮಯದಲ್ಲಿ ಜೊತೆಗಿದಿದ್ದರಿಂದ ತಾಯಿ ಸಕೀನಾ ಮಾತ್ರ ಅಜಮ್ ನನ್ನು ನೋಡಿದ್ದರು. ಹೀಗಾಗಿ ಮಗನಿಗೆ 1 ವರ್ಷ ತುಂಬಿದ ಬಳಿಕ ಆತನನ್ನು ತಾಯ್ನಾಡು ಕಕ್ಕಡ್‍ಗೆ ಪರಿಚಯಿಸಲು ದಂಪತಿ ತುದಿಗಾಲಿನಲ್ಲಿದ್ದರು ಎಂದು ಸಾಹಿರಾ ಸಂಬಂಧಿಕರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಯುದ್ಧವಿಮಾನವನ್ನು ಹಾರಿಸಿದ್ದ ಪೈಲಟ್‌ ಸಾಠೆ 2 ಬಾರಿ ಲ್ಯಾಂಡಿಗ್‌ಗೆ ಪ್ರಯತ್ನಿಸಿದ್ರು

    ಕಳೆದ ರಾತ್ರಿ ಮಕ್ಕಳು ಎಲ್ಲಿದ್ದಾರೆ ಎಂದು ಹುಡುಕಾಡಿದೆವು. ಆದರೆ ಇಬ್ಬರು ಮಕ್ಕಳು ಪ್ರತ್ಯೇಕ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ನಿಟ್ಟುಸಿರು ಬಿಟ್ಟೆವು. ಇಬ್ಬರೂ ಕೂಡ ಅಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸಾಹಿರಾ ಸಂಬಂಧಿಕರು ತಿಳಿಸಿದ್ದಾರೆ. ಇದನ್ನೂ ಓದಿ: ಮರಳಿ ಮನೆಗೆ – ಟೇಕಾಫ್‌ ಮೊದಲು ಕುಟುಂಬದೊಂದಿಗೆ ಫೇಸ್‌ಶೀಲ್ಡ್‌ ಹಾಕಿ ಸೆಲ್ಫಿ, ಪ್ರಯಾಣಿಕ ಸಾವು
     

    ಶುಕ್ರವಾರ ರಾತ್ರಿ ವಿಮಾನ ದುರಂತ ಸಂಭವಿಸುತ್ತಿದ್ದಂತೆಯೇ ಗಂಭೀರ ಗಾಯಗೊಂಡಿದ್ದ ಸಾಹಿರಾರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಯಿಸಿತಾದರೂ ಚಿಕಿತ್ಸೆ ಫಲಕಾರಿಯಾಗೆ ಮೃತಪಟ್ಟಿದ್ದಾರೆ. ಇತ್ತ ಅಜಮ್ ಕೂಡ ಕೋಯಿಕ್ಕೋಡ್ ಮೆಡಿಕಲ್ ಕಾಲೇಜ್ ಅಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಸಹೋದರ ಮರಿಯಮ್ ನನ್ನು ಮೊದಲು ಬೇಬಿ ಮೆಮೊರಿಯಲ್ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈತ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಸಾಹಿರಾ ತಂದೆ ನಿವೃತ್ತ ಶಿಕ್ಷಕರಾಗಿದ್ದು, ಮೊಮ್ಮಗನ ಬರುವಿಕೆಗಾಗಿ ಕಾದು ಕುಳಿತಿದ್ದು, ಇದೀಗ ಮಗಳು, ಮೊಮ್ಮಗನನ್ನು ಕಳೆದುಕೊಂಡು ಕುಟುಂಬ ದುಃಖದ ಕಡಲಲ್ಲಿ ಮುಳುಗಿದೆ. ಇದನ್ನೂ ಓದಿ: ಮಂಗಳೂರು ದುರಂತದ ಬಳಿಕ ಎಚ್ಚರಿಸಿದ್ದೆ, ಆದ್ರೆ ನಿರ್ಲಕ್ಷಿಸಿದ್ರು – ವಾಯು ಸುರಕ್ಷಾ ತಜ್ಞ