Tag: air india flight

  • ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಫ್ಲೈಟ್‌ ದೆಹಲಿಗೆ ವಾಪಸ್‌

    ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಫ್ಲೈಟ್‌ ದೆಹಲಿಗೆ ವಾಪಸ್‌

    ನವದೆಹಲಿ: ಇಂದೋರ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನದ (Air India Flight) ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

    ವಿಮಾನವು ಇಂದೋರ್‌ಗೆ ಹೊರಟಿತ್ತು. ಈ ವೇಳೆ ಫ್ಲೈಟ್‌ನ ಬಲ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ನಿಮಿಷ ವಿಮಾನ ಹಾರಾಟ ನಡೆಸಿದೆ. ಬೆಂಕಿ ಸೂಚನೆ ಸಿಕ್ಕ ಬೆನ್ನಲ್ಲೇ ವಿಮಾನ ದೆಹಲಿಗೆ ವಾಪಸ್‌ ಆಗಿದೆ. ಇದನ್ನೂ ಓದಿ: ಭಾರತಕ್ಕೆ 50% ತೆರಿಗೆ ಹಾಕಿ – ಯುರೋಪ್‌ಗೆ ಅಮೆರಿಕ ಮನವಿ

    A320 ನಿಯೋ ವಿಮಾನದ ಒಂದು ಎಂಜಿನ್ ಸ್ಥಗಿತಗೊಂಡಿದ್ದು, ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಏರ್ ಇಂಡಿಯಾ ತಿಳಿಸಿದೆ. ಬೆಳಗ್ಗೆ 6:15 ರ ಸುಮಾರಿಗೆ ವಿಮಾನವು ತುರ್ತು ಭೂಸ್ಪರ್ಶ ಮಾಡಿತು. 90 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿಸಿದೆ.

    ಪ್ರಮಾಣಿತ ಕಾರ್ಯವಿಧಾನವನ್ನು ಅನುಸರಿಸಿ ಕಾಕ್‌ಪಿಟ್ ಸಿಬ್ಬಂದಿ ಎಂಜಿನ್ ಅನ್ನು ಆಫ್ ಮಾಡಲು ನಿರ್ಧರಿಸಿದರು. ವಿಮಾನವು ದೆಹಲಿಗೆ ಹಿಂತಿರುಗಿ ಸುರಕ್ಷಿತವಾಗಿ ಇಳಿಯಿತು. A320 ನಿಯೋ ವಿಮಾನದಿಂದ ಕಾರ್ಯನಿರ್ವಹಿಸುತ್ತಿದ್ದ ಈ ವಿಮಾನವು ದೆಹಲಿಯಲ್ಲಿ ಮತ್ತೆ ಇಳಿಯುವ ಮೊದಲು 30 ನಿಮಿಷಗಳಿಗಿಂತ ಹೆಚ್ಚು ಕಾಲ ಹಾರಾಟ ನಡೆಸಿತ್ತು. ಪ್ರಯಾಣಿಕರಿಗೆ ಪರ್ಯಾಯ ವಿಮಾನ ವ್ಯವಸ್ಥೆ ಮಾಡಲಾಗಿದ್ದು, ಅದು ಇಂದೋರ್‌ಗೆ ಪ್ರಯಾಣ ಬೆಳೆಸಲಿದೆ. ಇದನ್ನೂ ಓದಿ: ಇಂದಿನಿಂದಲೇ ಕರ್ನಾಟಕದಲ್ಲಿ ಆಸ್ತಿ ಖರೀದಿ ಶುಲ್ಕ ದುಪ್ಪಟ್ಟು

    ಇತ್ತೀಚಿನ ದಿನಗಳಲ್ಲಿ ಏರ್ ಇಂಡಿಯಾ ವಿಮಾನಗಳು ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ನಿದರ್ಶನಗಳಿವೆ. ಘಟನೆಯ ಬಗ್ಗೆ ವಾಯು ಸುರಕ್ಷತಾ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ತಿಳಿಸಲಾಗಿದೆ.

  • ಜ್ವಾಲಾಮುಖಿ ಸ್ಫೋಟ – ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ವಾಪಸ್

    ಜ್ವಾಲಾಮುಖಿ ಸ್ಫೋಟ – ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ವಾಪಸ್

    ನವದೆಹಲಿ: ದ್ವೀಪಸಮೂಹದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ (Volcanic Eruption) ದೆಹಲಿಯಿಂದ ಇಂಡೋನೇಷ್ಯಾದ ಬಾಲಿಗೆ (Bali) ತೆರಳುತ್ತಿದ್ದ ಏರ್‌ ಇಂಡಿಯಾ (Air India Flight) ವಿಮಾನವು ದೆಹಲಿಗೆ ವಾಪಸ್‌ ಆಗಿದೆ.

    ದೆಹಲಿಯಿಂದ (Delhi) ಹೊರಟಿದ್ದ ಏರ್ ಇಂಡಿಯಾ ವಿಮಾನ AI2145, ಬಾಲಿಯ ವಿಮಾನ ನಿಲ್ದಾಣದ ಬಳಿ ಜ್ವಾಲಾಮುಖಿ ಸ್ಫೋಟದ ವರದಿಗಳ ಕಾರಣ ದೆಹಲಿಗೆ ಹಿಂತಿರುಗಲು ಸೂಚಿಸಲಾಯಿತು ಎಂದು ವಿಮಾನ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಪ್ರವಾಹ ಪರಿಸ್ಥಿತಿ – 9 ಜನರಿದ್ದ ಇಕೋ ಕಾರು ನೀರುಪಾಲು, ನಾಲ್ವರು ಸಾವು

    ಬುಧವಾರ ದೆಹಲಿಯಿಂದ ಬಾಲಿಗೆ ಏರ್ ಇಂಡಿಯಾ ವಿಮಾನ AI2145 ಹೊರಟಿತ್ತು. ಬಾಲಿಯ ಗಮ್ಯಸ್ಥಾನ ವಿಮಾನ ನಿಲ್ದಾಣದ ಬಳಿ ಜ್ವಾಲಾಮುಖಿ ಸ್ಫೋಟದ ವರದಿಗಳು ಕೇಳಿಬಂದವು. ಸುರಕ್ಷತೆಯ ದೃಷ್ಟಿಯಿಂದ ದೆಹಲಿಗೆ ಹಿಂತಿರುಗಲು ಸೂಚಿಸಲಾಯಿತು ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

    ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು. ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಇಳಿಸಲಾಯಿತು. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ. ತೊಂದರೆಗೊಳಗಾದ ಪ್ರಯಾಣಿಕರಿಗೆ ಹೋಟೆಲ್ ವಸತಿ ಒದಗಿಸಲಾಗಿದೆ. ಟಿಕೆಟ್‌ ಹಣವನ್ನು ಪ್ರಯಾಣಿಕರಿಗೆ ಹಿಂದಿರುಗಿಸಲಾಗುವುದು ಎಂದು ತಿಳಿಸಿದೆ. ಇದನ್ನೂ ಓದಿ: ಕೇದಾರನಾಥ ಟ್ರಕ್ಕಿಂಗ್ ದಾರಿಯಲ್ಲಿ ಭೂಕುಸಿತ – ಇಬ್ಬರು ಸಾವು, ಮೂವರಿಗೆ ಗಾಯ

    ಬಾಲಿಯ ಪೂರ್ವದಲ್ಲಿರುವ ಜ್ವಾಲಾಮುಖಿ ಸ್ಫೋಟಗೊಂಡ ನಂತರ ಬುಧವಾರ ಬಾಲಿಗೆ ಹೋಗುವ ಮತ್ತು ಬರುವ ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

  • ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

    ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

    ಬ್ಯಾಂಕಾಕ್: ಅಹಮದಾಬಾದ್‌ ದುರಂತದ ಬೆನ್ನಲ್ಲೇ ಥೈಲ್ಯಾಂಡ್‌ನ (Thailand) ಫುಕೆಟ್‌ನಿಂದ ದೆಹಲಿಗೆ ಬರುತ್ತಿದ್ದ ಏರ್‌ ಇಂಡಿಯಾಗೆ (Air India Flight) ಬಾಂಬ್‌ ಬೆದರಿಕೆ ಕರೆ ಹಿನ್ನೆಲೆಯಲ್ಲಿ ಶುಕ್ರವಾರ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.

    ವಿಮಾನವು ಸುರಕ್ಷಿತವಾಗಿ ಇಳಿಯಿತು. ಫುಕೆಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಡ್ಡಾಯ ಭದ್ರತಾ ತಪಾಸಣೆಗೆ ಒಳಗಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

    ತುರ್ತು ಯೋಜನೆಗಳಿಗೆ ಅನುಗುಣವಾಗಿ ಪ್ರಯಾಣಿಕರನ್ನು ವಿಮಾನ AI 379 ನಿಂದ ಹೊರಗೆ ಕರೆದೊಯ್ಯಲಾಯಿತು ಎಂದು ಥೈಲ್ಯಾಂಡ್ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    ವಿಮಾನದ ಕ್ರೂಸಿಂಗ್ ಹಂತದಲ್ಲಿ ಭದ್ರತಾ ಎಚ್ಚರಿಕೆಯನ್ನು ಸ್ವೀಕರಿಸಲಾಯಿತು. ನಂತರ ಪೈಲಟ್ ಮಾರ್ಗ ಮಧ್ಯದಲ್ಲೇ ಫುಕೆಟ್‌ಗೆ ಹಿಂತಿರುಗಿದರು. ಪ್ರಾಥಮಿಕ ಶೋಧದ ನಂತರ ಅಧಿಕಾರಿಗಳು ವಿಮಾನದೊಳಗೆ ಯಾವುದೇ ಬಾಂಬ್ ಪತ್ತೆಯಾಗಿಲ್ಲ ಎಂದು ಖಚಿತಪಡಿಸಿದ್ದಾರೆ. ಇದನ್ನೂ ಓದಿ: ವಿಮಾನ ದುರಂತ – ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾವು

    ವಿಮಾನದಲ್ಲಿ 156 ಪ್ರಯಾಣಿಕರಿದ್ದರು. ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಶುಕ್ರವಾರ ಸ್ಥಳೀಯ ಕಾಲಮಾನ ಬೆಳಗ್ಗೆ 9:30 ಕ್ಕೆ ಫುಕೆಟ್ ವಿಮಾನ ನಿಲ್ದಾಣದಿಂದ ಭಾರತದ ರಾಜಧಾನಿಗೆ ಹೊರಟ ವಿಮಾನವು ಅಂಡಮಾನ್ ಸಮುದ್ರದ ಸುತ್ತಲೂ ವಿಶಾಲವಾದ ಲೂಪ್ ಮಾಡಿ ಥಾಯ್ ದ್ವೀಪದಲ್ಲಿ ಮತ್ತೆ ಇಳಿಯಿತು ಎಂದು ಫ್ಲೈಟ್ ಟ್ರ್ಯಾಕರ್ ಫ್ಲೈಟ್‌ರಾಡರ್ 24 ತಿಳಿಸಿದೆ.

  • ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

    ಬಿಜೆ ಮೆಡಿಕಲ್ ಆಸ್ಪತ್ರೆಗೆ ಬಡಿದ ಏರ್ ಇಂಡಿಯಾ ವಿಮಾನ – 7 ವಿದ್ಯಾರ್ಥಿಗಳ ಸಾವು ಶಂಕೆ

    – ತಿಂತಿದ್ದ ಊಟದ ತಟ್ಟೆಯನ್ನು ಅರ್ಧಕ್ಕೆ ಬಿಟ್ಟು ಓಡಿದ ವಿದ್ಯಾರ್ಥಿಗಳು

    ಅಹಮದಾಬಾದ್: ಏರ್ ಇಂಡಿಯಾ ವಿಮಾನವು (Air India Flight) ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಮೇಘಾನಿ ಪ್ರದೇಶದ(Meghani area) ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನ ಮೇಲೆ ಬಡಿದಿದೆ. ಈ ಪರಿಣಾಮ 7 ಎಂಬಿಬಿಎಸ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

    ಈ ದುರಂತದ ವೇಳೆ ಮೆಸ್‌ನಲ್ಲಿದ್ದ ವಿದ್ಯಾರ್ಥಿಗಳು ಮಧ್ಯಾಹ್ನ ತಿನ್ನುತ್ತಿದ್ದ ಊಟವನ್ನು ಅರ್ಧಕ್ಕೆ ಬಿಟ್ಟು ದಿಕ್ಕಾಪಾಲಾಗಿ ಓಡಿರುವ ಅಪಘಾತದ ಭೀಕರತೆಯ ದೃಶ್ಯವನ್ನು ಚಿತ್ರವೊಂದು ವಿವರಿಸುತ್ತದೆ. ಈ ಚಿತ್ರದಲ್ಲಿ ಟೇಬಲ್ ಮೇಲೆ ಬಡಿಸಿಟ್ಟಿದ್ದ ಊಟದ ತಟ್ಟೆ, ಲೋಟ ಎಲ್ಲವೂ ಹಾಗೆ ಇವೆ. ಇದನ್ನೂ ಓದಿ: ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

    ಮಧ್ಯಾಹ್ನ ಊಟದ ಸಮಯದಲ್ಲಿ ಮೆಡಿಕಲ್ ಕಾಲೇಜ್ ಕ್ಯಾಂಟೀನ್ ಕಟ್ಟಡಕ್ಕೆ ವಿಮಾನ ಬಡಿದಿದೆ. ಈ ಪರಿಣಾಮ ಮೆಡಿಕಲ್ ಕಾಲೇಜಿನ ಅಡುಗೆ ಮನೆಗೆ ಬೆಂಕಿ ಹೊತ್ತಿಕೊಂಡು ಗೋಡೆಗಳು ಛಿದ್ರ ಛಿದ್ರಗೊಂಡಿದೆ. ಈ ದುರಂತದ ವೇಳೆ ಮೆಸ್‌ನಲ್ಲಿ ಎಷ್ಟು ಮಂದಿ ಇದ್ದರು ಎಂಬ ನಿಖರ ಮಾಹಿತಿ ಲಭ್ಯವಾಗಿಲ್ಲ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ – ತಜ್ಞರು ಹೇಳೋದು ಏನು?

  • ಅಹಮದಾಬಾದ್ ವಿಮಾನ ಪತನ ದುರಾದೃಷ್ಟಕರ ಘಟನೆ: ಡಿ.ಕೆ ಶಿವಕುಮಾರ್

    ಅಹಮದಾಬಾದ್ ವಿಮಾನ ಪತನ ದುರಾದೃಷ್ಟಕರ ಘಟನೆ: ಡಿ.ಕೆ ಶಿವಕುಮಾರ್

    ಬೆಂಗಳೂರು: ಅಹಮದಾಬಾದ್ ವಿಮಾನ ಪತನ (Air India Flight Crash) ದುರಾದೃಷ್ಟಕರ ಘಟನೆಯಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (D K Shivakumar) ಹೇಳಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಈ ಬಗ್ಗೆ ಮಾತನಾಡಿದ ಅವರು, ಗುಜರಾತ್‌ನ ಅಹಮದಾಬಾದ್‌ನಲ್ಲಿ (Ahmedabad) ಏರ್ ಇಂಡಿಯಾ ವಿಮಾನ ಪತನ ಆಗಿದೆ. ಈ ಘಟನೆ ನಡೆದಿರುವುದು ನನಗೆ ಆಶ್ಚರ್ಯ ತರಿಸಿದೆ. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ವಿಮಾನಗಳು ಉತ್ತಮವಾಗಿ ಸಂಚಾರ ಆಗ್ತಿತ್ತು. ನಾನು ಕೆಲ ದೃಶ್ಯಗಳನ್ನ ನೋಡಿದ್ದೇನೆ. ಬೆಂಕಿ ಹತ್ತಿಕೊಂಡು ಉರಿಯುತ್ತಿತ್ತು ಎಂದಿದ್ದಾರೆ. ಇದನ್ನೂ ಓದಿ: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

    ನಾನು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಈ ದೇಶದಲ್ಲಿ ಹೆಚ್ಚು ಸಾವು ಆಗಬಾರದು. ದುರಂತದಲ್ಲಿ ಸಾವನ್ನಪ್ಪಿದವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

    ವಿಮಾನ ಪತನ ಯಾಕೆ ಆಗಿದೆ ಅನ್ನೋದನ್ನ ಸಿವಿಲ್ ಏವಿಯೇಷನ್ ಅವರು ಕಂಡುಹಿಡಿಯುತ್ತಾರೆ. ಇದು ಬಹಳ ದುರಾದೃಷ್ಟಕರ ಘಟನೆ. ನಮ್ಮೆಲ್ಲಾ ಕರ್ನಾಟಕ ಸರ್ಕಾರದ ಹಾಗೂ ನಮ್ಮ ಪಕ್ಷದ ಪ್ರಾರ್ಥನೆ ಅವರ ಮೇಲೆ ಇದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

  • ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

    ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

    – ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

    ಅಹಮದಾಬಾದ್: ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡ (Air India Plane) ಘಟನೆಗೆ ಸಂಬಂಧಿಸಿದಂತೆ 110 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

    ವಿಮಾನದಲ್ಲಿ 230 ವಯಸ್ಕರು ಹಾಗು 2 ಮಕ್ಕಳನ್ನು ಒಳಗೊಂಡಂತೆ ಒಟ್ಟು 232 ಪ್ರಯಾಣಿಕರು ಇದ್ದರು. ಈ ಪೈಕಿ 169 ಮಂದಿ ಭಾರತೀಯರು ಇದ್ದರು. ಟೇಕಾಫ್ ಆದ ಒಂದೇ ನಿಮಿಷದಲ್ಲಿ ಸಂಪರ್ಕ ಕಡಿದುಕೊಂಡ ವಿಮಾನ ಎಂಜಿನ್‌ನಲ್ಲಿ ತಾಂತ್ರಿಕ ದೋಷದಿಂದಾಗಿ ಮೇಘಾನಿ ಪ್ರದೇಶದಲ್ಲಿ (Meghani Residential Area) ಪತನಗೊಂಡಿದೆ. ಹತ್ತಾರು ಅಂಬುಲೆನ್ಸ್‌ಗಳಲ್ಲಿ ಸುಟ್ಟು ಕರಕಲಾದ ದೇಹಗಳನ್ನು ಅಹಮದಾಬಾದ್‌ನ ಸಿವಿಲ್ ಆಸ್ಪತ್ರೆಗೆ ರವಾನಿಸಲಾಗುತ್ತಿದೆ.

    ಮೇಘಾನಿ ಪ್ರದೇಶದ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್‌ಗೆ ವಿಮಾನ ಬಡಿದ್ದಿದ್ದು, ಹಾಸ್ಟೆಲ್‌ನಲ್ಲಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳು ಕೂಡ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವಿಮಾನದಲ್ಲಿ ಇಬ್ಬರು ಪೈಲಟ್ ಹಾಗೂ 10 ಮಂದಿ ಸಿಬ್ಬಂದಿ ಇದ್ದರು. 300ರಿಂದ 600 ಅಡಿ ಎತ್ತರದಿಂದ ವಿಮಾನ ನೆಲಕ್ಕಪ್ಪಳಿಸಿದೆ.

    ಇದೇ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣಿಸುತ್ತಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ವಿಮಾನಯಾನ ಸಚಿವ ರಾಮ್‌ಮೋಹನ್ ನಾಯ್ಡು ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಘಟನಾ ಸ್ಥಳಕ್ಕೆ ಆಗಮಿಸಲಿದ್ದಾರೆ.

  • ಹೌತಿ ಕ್ಷಿಪಣಿ ದಾಳಿ – ಮೇ 6ರ ವರೆಗೆ ಇಸ್ರೇಲ್‌ಗೆ ಏರ್ ಇಂಡಿಯಾ ವಿಮಾನಯಾನ ಬಂದ್

    ಹೌತಿ ಕ್ಷಿಪಣಿ ದಾಳಿ – ಮೇ 6ರ ವರೆಗೆ ಇಸ್ರೇಲ್‌ಗೆ ಏರ್ ಇಂಡಿಯಾ ವಿಮಾನಯಾನ ಬಂದ್

    ನವದೆಹಲಿ: ಬೆನ್ ಗುರಿಯನ್ ವಿಮಾನ ನಿಲ್ದಾಣದಲ್ಲಿಂದು ಬೆಳಗ್ಗೆ ಹೌತಿ ಬಂಡುಕೋರರು ಕ್ಷಿಪಣಿ ದಾಳಿ (Missile Attack) ನಡೆಸಿದ ಪರಿಣಾಮ ಏರ್ ಇಂಡಿಯಾ (Air India) ಸಂಸ್ಥೆಯು ಮುಂದಿನ 2 ದಿನಗಳ ಕಾಲ ಇಸ್ರೇಲ್ (Israel) ರಾಜಧಾನಿ ಟೆಲ್ ಅವಿವ್‌ಗೆ (Tel Aviv) ವಿಮಾನಯಾನವನ್ನ ಸ್ಥಗಿತಗೊಳಿಸಿದೆ.

    ಕ್ಷಿಪಣಿ ದಾಳಿಯ ಕುರಿತು ಲಭ್ಯವಾಗುತ್ತಿದ್ದಂತೆ ದೆಹಲಿಯಿಂದ ಟೆಲ್ ಅವಿವ್‌ಗೆ ಹೋಗುತ್ತಿದ್ದ ವಿಮಾನವನ್ನು ಅಬುಧಾಬಿಗೆ ತಿರುಗಿಸಲಾಯಿತು ಎಂದು ವಿಮಾನಯಾನ ಸಂಸ್ಥೆ ತಿಳಿಸಿವೆ. ಇಸ್ರೇಲ್‌ಗೆ ಟಿಕೆಟ್ ಹೊಂದಿರುವವರಿಗೆ ವಿನಾಯಿತಿ ಅಥವಾ ವಿಮಾನಯಾನದ ಮರು ವೇಳಾಪಟ್ಟಿಯನ್ನು ನೀಡಲಾಗುವುದು ಎಂದು ಏರ್ ಇಂಡಿಯಾ ಮಾಹಿತಿ ನೀಡಿದೆ. ಇದನ್ನೂ ಓದಿ: ನನಗೆ ನ್ಯಾಯ ಬೇಕು – ಪಾಕ್‌ ಯುವತಿಯನ್ನು ಮದುವೆಯಾಗಿ ವಜಾಗೊಂಡಿದ್ದ ಯೋಧನಿಂದ ಮೋದಿಗೆ ಮನವಿ

    ಏರ್ ಇಂಡಿಯಾದಲ್ಲಿ, ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆಗೆ ಪ್ರಮುಖ ಆದ್ಯತೆ ನೀಡಲಾಗುತ್ತದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ.

  • ಭಾರೀ ಭದ್ರತಾ ಲೋಪ | ದುಬೈ-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಅಮ್ಯುನಿಷನ್ ಕಾಟ್ರಿಡ್ಜ್ ಪತ್ತೆ

    ಭಾರೀ ಭದ್ರತಾ ಲೋಪ | ದುಬೈ-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಅಮ್ಯುನಿಷನ್ ಕಾಟ್ರಿಡ್ಜ್ ಪತ್ತೆ

    ನವದೆಹಲಿ: ಅಕ್ಟೋಬರ್‌ 27ರಂದು ದುಬೈನಿಂದ ದೆಹಲಿಗೆ ಬಂದ ಏರ್ ಇಂಡಿಯಾ ವಿಮಾನದ (Dubai-Delhi Air India flight) ಸೀಟಿನ ಪಾಕೆಟ್‌ನಲ್ಲಿ ಒಂದು ಮದ್ದುಗುಂಡಿನ ಕಾರ್ಟ್ರಿಡ್ಜ್ (Ammunition cartridge) ಪತ್ತೆಯಾಗಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

    ಭದ್ರತಾ ಪ್ರೋಟೋಕಾಲ್‌ಗಳ ಅನುಸಾರ ತಕ್ಷಣವೇ ಏರ್‌ಪೋರ್ಟ್ ಪೊಲೀಸರಿಗೆ ವಿಮಾನದ ಸಿಬ್ಬಂದಿ ದೂರು ನೀಡಿದ್ದಾರೆ. ಕಾರ್ಟ್ರಿಡ್ಜ್ ಎನ್ನುವುದು ಬಂದೂಕಿಗೆ ಬಳಸುವ ಮದ್ದುಗುಂಡಿನ ಸಾಮಗ್ರಿಯಾಗಿದೆ. ವಿಮಾನದಲ್ಲಿ ಅಂತಹ ವಸ್ತುಗಳನ್ನು ಕೊಂಡೊಯ್ಯುವುದಕ್ಕೆ ನಿಷೇಧವಿದೆ ಎಂದು ವಕ್ತಾರರು ತಿಳಿಸಿದ್ದಾರೆ.

    ಇತ್ತೀಚೆಗೆ ವಿಮಾನಗಳಿಗೆ ಹುಸಿಬಾಂಬ್‌ ಬೆದರಿಕೆಗಳು ಹೆಚ್ಚಾಗಿದೆ. ಇದರ ನಡುವೆ ಈ ಘಟನೆ ಆತಂಕಕ್ಕೆ ಕಾರಣವಾಗಿದೆ. ಇನ್ನೂ ಸೋಮವಾರ ಮುಂಜಾನೆ ಏರ್ ಇಂಡಿಯಾ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಬಳಿಕ ಪರಿಶೀಲನೆ ವೇಲೆ ವಿಮಾನದಲ್ಲಿ ಯಾವುದೇ ಅನುಮಾನಾಸ್ಪದ ಅಥವಾ ಸ್ಫೋಟಕಗಳು ಪತ್ತೆಯಾಗಿರಲಿಲ್ಲ.

    ಇತ್ತೀಚೆಗೆ 400ಕ್ಕೂ ಹೆಚ್ಚು ವಿಮಾನಗಳನ್ನು ಗುರಿಯಾಗಿಸಿಕೊಂಡು ಬೆದರಿಕೆ ಸಂದೇಶಗಳು ಬಂದಿದ್ದವು. ಇದಾದ ಬಳಿಕ ನಾಗರಿಕ ವಿಮಾನಯಾನ ಸಚಿವಾಲಯವು ಬೆದರಿಕೆಗಳ ವಿರುದ್ಧ ಬಲವಾದ ಕ್ರಮಗಳನ್ನು ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿತ್ತು. ಈ ಕ್ರಮದಲ್ಲಿ ಆಪಾಧಿತನಿಗೆ ನೋ-ಫ್ಲೈ ಸಹ ಸೇರಿರಲಿದೆ ಎಂದು ಸಚಿವಾಲಯ ತಿಳಿಸಿತ್ತು.

    ಇನ್ನೂ ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕಿರುವ ಆರೋಪದ ಮೇಲೆ ಶ್ರೀರಾಮ್ ಉಯಿಕೆ ಎಂಬಾತನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ವಿಚಾರಣೆ ನಡೆಯುತ್ತಿದೆ.

  • ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ

    ಮುಂಬೈನಿಂದ ನ್ಯೂಯಾರ್ಕ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ

    ನವದೆಹಲಿ: ಮುಂಬೈನಿಂದ (Mumbai) ನ್ಯೂಯಾರ್ಕ್‌ಗೆ (New York) ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ (Air India flight) ಬಾಂಬ್ ಬೆದರಿಕೆ ಹಾಕಲಾಗಿದ್ದು, ಭದ್ರತಾ ದೃಷ್ಟಿಯಿಂದ ಮಾರ್ಗ ಬದಲಾವಣೆ ಮಾಡಲಾಗಿದೆ. ಮಧ್ಯದಲ್ಲೇ ವಾಪಸ್‌ ತಿರುಗಿಸಿ ದೆಹಲಿ  (Delhi) ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್‌ ಮಾಡಲಾಗಿದೆ. ಬಳಿಕ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

    ವಿಮಾನವು ಪ್ರಸ್ತುತ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

    ಮುಂಬೈನಿಂದ ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣಕ್ಕೆ AI 119 ವಿಮಾನವು ಮುಂಬೈನಿಂದ ಸುಮಾರು 2 ಗಂಟೆಗೆ ಹೊರಟಿತ್ತು. ಬಾಂಬ್‌ ಬೆದರಿಕೆ ಬಳಿಕ ವಿಮಾನವನ್ನು ದೆಹಲಿಗೆ ತಿರುಗಿಸಲಾಯಿತು.

    ಕಳೆದ ತಿಂಗಳು ಮುಂಬೈನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಬಳಿಕ ಅದನ್ನು ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿತ್ತು.

  • ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ – ತುರ್ತು ಭೂ ಸ್ಪರ್ಶ

    ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ – ತುರ್ತು ಭೂ ಸ್ಪರ್ಶ

    ಬೆಂಗಳೂರು: ನಗರದಿಂದ ಕೊಚ್ಚಿಗೆ (Kochi) ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ (Air India Flight) ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ವಿಮಾನವನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ತುರ್ತು ಭೂ ಸ್ಪರ್ಶ (Emergency Landing) ಮಾಡಿದ ಘಟನೆ ನಡೆದಿದೆ.

    ಶನಿವಾರ ರಾತ್ರಿ 11:20ಕ್ಕೆ ಬೆಂಗಳೂರಿನಿಂದ 179 ಪ್ರಯಾಣಿಕರನ್ನು ಹೊತ್ತು ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 1132ರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ವಿಮಾನವನ್ನು ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಯಿತು. ವಿಮಾನ ಲ್ಯಾಂಡಿಂಗ್ ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಪ್ರಯಾಣಿಕರು ಹಾಗೂ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಶೂ ವ್ಯಾಪಾರಿ ಮನೆಯಲ್ಲಿ ಕಂತೆ ಕಂತೆ ಹಣ – ಬರೋಬ್ಬರಿ 40 ಕೋಟಿ ರೂ. ಜಪ್ತಿ!

    ಇತ್ತೀಚೆಗಷ್ಟೇ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು.

    ಮೆ 17ರ ಸಂಜೆ 6 ಗಂಟೆಗೆ ಏರ್ ಇಂಡಿಯಾ ವಿಮಾನ ದೆಹಲಿಯಿಂದ ಹೊರಟಿತ್ತು. ಈ ವೇಳೆ ವಿಮಾನದ ಎಸಿಯಲ್ಲಿ (ಹವಾನಿಯಂತ್ರಣ ಘಟಕ) ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ 6:38 ಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು. ಇದನ್ನೂ ಓದಿ: ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ – ಮನನೊಂದು ಸಹೋದರಿ ಆತ್ಮಹತ್ಯೆಗೆ ಯತ್ನ