Tag: air india flight

  • ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

    ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

    ನವದೆಹಲಿ: ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ (Bengaluru) ಬರುತ್ತಿದ್ದ ಏರ್ ಇಂಡಿಯಾ ವಿಮಾನ (Air India Flight) ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

    ದೆಹಲಿಯಿಂದ (New Delhi) ಬೆಂಗಳೂರಿಗೆ ಇಂದು (ಶುಕ್ರವಾರ) ಸಂಜೆ 6 ಗಂಟೆಗೆ ಏರ್ ಇಂಡಿಯಾ ವಿಮಾನ ಹೊರಟಿತ್ತು. ಈ ವೇಳೆ ವಿಮಾನದ ಎಸಿಯಲ್ಲಿ (ಹವಾನಿಯಂತ್ರಣ ಘಟಕ) ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ 6:38 ಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. ಇದನ್ನೂ ಓದಿ: ಪೆನ್‌ಡ್ರೈವ್‌ ರೆಡಿ ಮಾಡಿದ್ದೇ ಡಿ.ಕೆ.ಶಿವಕುಮಾರ್: ಹೊಸ ಬಾಂಬ್‌ ಸಿಡಿಸಿದ ವಕೀಲ ದೇವರಾಜೇಗೌಡ

    175 ಪ್ರಯಾಣಿಕರೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ವಿಮಾನ ಹೊರಟಿತ್ತು. ವಿಮಾನ ದೆಹಲಿಗೆ ಮರಳಿ ಸುರಕ್ಷಿತ ಲ್ಯಾಂಡಿಂಗ್ ಮಾಡಿದೆ.

    ಪ್ರಯಾಣಿಕರು ಬೆಂಗಳೂರಿಗೆ ತೆರಳಲು ಪರ್ಯಾಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಫ್ಲೈಟ್ ಟ್ರ್ಯಾಕಿಂಗ್ ವೆಬ್‌ಸೈಟ್ ಫ್ಲೈಟ್‌ರಾಡಾರ್ 24 ರಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ವಿಮಾನವನ್ನು A321 ಏರ್‌ಕ್ರಾಫ್ಟ್‌ನೊಂದಿಗೆ ನಿರ್ವಹಿಸಲಾಗಿದೆ. ಇದನ್ನೂ ಓದಿ: ಮೋದಿ, ಅವರ ಸಚಿವರು ವಿಮಾನಗಳಲ್ಲಿ ಫ್ರೀಯಾಗಿ ಓಡಾಡ್ತಾರೆ.. ಮಹಿಳೆ ಯಾಕೆ ಫ್ರೀ ಬಸ್‌ ಪ್ರಯಾಣ ಮಾಡಬಾರದು: ಕೇಜ್ರಿವಾಲ್‌ ಪ್ರಶ್ನೆ

  • ಪ್ರಯಾಣಿಕನ ಮೊಬೈಲ್ ಬ್ಲಾಸ್ಟ್ – ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

    ಪ್ರಯಾಣಿಕನ ಮೊಬೈಲ್ ಬ್ಲಾಸ್ಟ್ – ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

    ಜೈಪುರ: ಉದಯಪುರದಿಂದ (Udaipur) ದೆಹಲಿಗೆ (Delhi)  ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದರಲ್ಲಿ (Air India Flight) ಪ್ರಯಾಣಿಕರೊಬ್ಬರ ಮೊಬೈಲ್ ಸ್ಫೋಟಗೊಂಡಿದ್ದು (Mobile Blast) ತಕ್ಷಣವೇ ವಿಮಾನವನ್ನು ವಾಪಸ್ ಉದಯಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ (Emergency Landing) ಮಾಡಲಾಗಿದೆ.

    ಸೋಮವಾರ ಏರ್ ಇಂಡಿಯಾದ ಎಐ470 ವಿಮಾನ ಉದಯಪುರ ವಿಮಾನ ನಿಲ್ದಾಣದಿಂದ ಟೇಕಾಫ್ ಆಗುತ್ತಿದ್ದ ವೇಳೆ ಪ್ರಯಾಣಿಕರೊಬ್ಬರ ಮೊಬೈಲ್ ಬ್ಯಾಟರಿ ಸ್ಫೋಟಗೊಂಡಿದೆ. ತಕ್ಷಣವೇ ವಿಮಾನವನ್ನು ಮತ್ತೆ ಅದೇ ನಿಲ್ದಾಣದಲ್ಲಿ ಇಳಿಸಲಾಗಿದೆ. ಇದನ್ನೂ ಓದಿ: ಬೇಗ ಬಂದುಬಿಡು ಸೀಮಾ, ಹೊಸ ಜೀವನ ಶುರು ಮಾಡೋಣ – ಸೌದಿಯಲ್ಲಿ ಮೊದಲ ಪತಿಯ ಗೋಳಾಟ

    ಸದ್ಯ ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರೂ ಸುರಕ್ಷಿತವಾಗಿದ್ದಾರೆ. ವಿಮಾನವನ್ನು ಎಲ್ಲಾ ರೀತಿಯ ತಾಂತ್ರಿಕ ತಪಾಸಣೆಗೆ ಒಳಪಡಿಸಲಾಗಿದೆ. ಆದರೆ ಘಟನೆಯ ಬಳಿಕ ಕೆಲ ಪ್ರಯಾಣಿಕರು ವಿಮಾನ ಹತ್ತಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಅಮಿತ್ ಶಾ ಉಪಸ್ಥಿತಿಯಲ್ಲೇ 2,400 ಕೋಟಿ ಮೌಲ್ಯದ ಡ್ರಗ್ಸ್ ನಾಶ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿಲ್ಲಿಯಿಂದ ಸ್ಯಾನ್‌ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರಷ್ಯಾದಲ್ಲಿ ತುರ್ತು ಭೂಸ್ಪರ್ಶ

    ದಿಲ್ಲಿಯಿಂದ ಸ್ಯಾನ್‌ ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರಷ್ಯಾದಲ್ಲಿ ತುರ್ತು ಭೂಸ್ಪರ್ಶ

    ಮಾಸ್ಕೋ: ದೆಹಲಿಯಿಂದ (New Delhi) ಸ್ಯಾನ್ ಫ್ರಾನ್ಸಿಸ್ಕೋಗೆ (San Francisco) ಹೊರಟಿದ್ದ ಏರ್ ಇಂಡಿಯಾ (Air India) ವಿಮಾನದ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ರಷ್ಯಾದ (Russia) ಮಗದನ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

    ಇಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ 216 ಪ್ರಯಾಣಿಕರು ಮತ್ತು 16 ಸಿಬ್ಬಂದಿಯಿದ್ದ ವಿಮಾನವನ್ನು ರಷ್ಯಾದ ಮಗದನ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು ಎಂದು ಟಾಟಾ ಗ್ರೂಪ್ ಒಡೆತನದ ಖಾಸಗಿ ವಾಹಕ ಹೇಳಿಕೆಯಲ್ಲಿ ತಿಳಿಸಿದೆ. ಏರ್ ಇಂಡಿಯಾ ಪ್ರಯಾಣಿಕರನ್ನು ಸ್ಯಾನ್ ಫ್ರಾನ್ಸಿಸ್ಕೋಗೆ ಕರೆದೊಯ್ಯಲು ಮತ್ತೊಂದು ವಿಮಾನವು ಮುಂಬೈನಿಂದ ಮಧ್ಯಾಹ್ನ 1 ಗಂಟೆಗೆ ರಷ್ಯಾದ ಮಗದನ್‌ಗೆ ಹೊರಡಲಿದೆ ಎಂದು ಹೇಳಿದೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಜಲಾಶಯ ಸ್ಫೋಟ – ಸಾವಿರಾರು ಮಂದಿ ಸ್ಥಳಾಂತರ

    ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗಿದೆ. ಪ್ರಯಾಣಿಕರಿಗೆ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ರಷ್ಯಾದ ಮಗದನ್ ವಿಮಾನ ನಿಲ್ದಾಣದಿಂದ ತನ್ನ ಪ್ರಯಾಣಿಕರನ್ನು ಕರೆದೊಯ್ಯಲು ಪರ್ಯಾಯ ವಿಮಾನ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲಿಯವರೆಗೆ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಗೆ ಮಗದನ್‌ನ ಸ್ಥಳೀಯ ಹೋಟೆಲ್‌ಗಳಲ್ಲಿ ವಸತಿ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದೆ.

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ, ಯುನೈಟೆಡ್ ಸ್ಟೇಟ್ಸ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ಟೇಟ್ ಡಿಪಾರ್ಟ್‌ಮೆಂಟ್ ಉಪ ವಕ್ತಾರ ವೇದಾಂತ್ ಪಟೇಲ್, ಯುಎಸ್‌ಗೆ ತೆರಳುವ ವಿಮಾನವು ರಷ್ಯಾದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಆ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಮಗದನ್‌ನಲ್ಲಿ ಸಿಲುಕಿರುವ ಪ್ರಯಾಣಿಕರ ಕುರಿತು ಅಸೋಸಿಯೇಟೆಡ್‌ ಪ್ರೆಸ್‌ ವರದಿ ಮಾಡಿದೆ. 16 ವರ್ಷದ ಗಿರ್ವಾನ್ ಕಾಹ್ಮಾ ತನ್ನ ಚಿಕ್ಕಪ್ಪ ಮತ್ತು ಸಹೋದರನೊಂದಿಗೆ ಈ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಅವರು ಈಗ ಮಗದನ್‌ನಲ್ಲಿ ತಂಗಿರುವ ಹಾಸ್ಟೆಲ್‌ನಿಂದ ಹೊರಹೋಗುವುದನ್ನು ನಿರ್ಬಂಧಿಸಲಾಗಿದೆ. ಉಕ್ರೇನ್‌ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾಗೆ ನಿರ್ಬಂಧ ವಿಧಿಸಿರುವುದರಿಂದ ಅವರು ವಸ್ತುಗಳನ್ನು ಕೊಳ್ಳಲು ಕ್ರೆಡಿಟ್‌ ಕಾರ್ಡ್‌ ಬಳಸದಂತಾಗಿದೆ ಎಂದು ತಿಳಿಸಿದೆ.

  • ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿ ಶಂಕರ್ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ

    ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಆರೋಪಿ ಶಂಕರ್ ಮಿಶ್ರಾಗೆ 14 ದಿನ ನ್ಯಾಯಾಂಗ ಬಂಧನ

    ನವದೆಹಲಿ/ಬೆಂಗಳೂರು: ನ್ಯೂಯಾರ್ಕ್‌ನಿಂದ  (New York) ದೆಹಲಿಗೆ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ (Air India Flight) ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ ಆರೋಪಿ ಸಹಪ್ರಯಾಣಿಕ ಶಂಕರ್ ಮಿಶ್ರಾನನ್ನು ಬೆಂಗಳೂರಿನಲ್ಲಿ (Bengaluru) ದೆಹಲಿ ಪೊಲೀಸರು (Delhi Police) ಬಂಧಿಸಿದ್ದರು. ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ದೆಹಲಿ ಪಟಿಯಾಲ ಹೌಸ್ ಕೋರ್ಟ್ (Delhi’s Patiala House court) ಮಿಶ್ರಾನನ್ನ ಜನವರಿ 21ರ ವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸುವಂತೆ ಆದೇಶಿಸಿದೆ. ಜನವರಿ 11 ರಂದು ಮಹೇಶ್ ಮಿಶ್ರಾ ಕೇಸ್‌ಗೆ ಸಂಬಂಧಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: 22 ರಾಜ್ಯಗಳಲ್ಲಿ ಬಿಸಿನೆಸ್‌ ಮಾಡ್ತಿದ್ದೇವೆ; ಎಲ್ಲವನ್ನೂ ಬಿಜೆಪಿ ಜೊತೆ ಮಾಡ್ತಿಲ್ಲ – ಗೌತಮ್‌ ಅದಾನಿ

    ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದ ದೆಹಲಿ ಪೊಲೀಸರು ಇಲ್ಲಿನ ಪಟಿಯಾಲ ಹೌಸ್ ಕೋರ್ಟ್ಗೆ ಹಾಜರುಪಡಿಸಿದ್ದರು. ಪೊಲೀಸರು ಆರೋಪಿಯನ್ನು ಮೂರು ದಿನಗಳ ಕಾಲ ಕಸ್ಟಡಿಗೆ ಕೇಳಿದ್ದರು. ಆದಾಗ್ಯೂ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: 9 ಸಿಕ್ಸರ್‌, 7 ಬೌಂಡರಿ – 45 ಎಸೆತಗಳಲ್ಲೇ ಸ್ಫೋಟಕ ಶತಕ ಸಿಡಿಸಿದ ದಾಖಲೆ ವೀರ ಸೂರ್ಯ

    ಮಿಶ್ರಾ ಏರ್ ಇಂಡಿಯಾದ ಇಬ್ಬರು ಕ್ಯಾಪ್ಟನ್‌ಗಳು ಹಾಗೂ ಮೂವರು ಕ್ಯಾಬಿನ್ ಸಿಬ್ಬಂದಿಗೆ ಕರೆ ಮಾಡಿದ್ದಾರೆ. ಹಾಗಾಗಿ ಅವರನ್ನೂ ವಿಚಾರಿಸಬೇಕಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

    ಏನಿದು ಘಟನೆ?
    ನ್ಯೂಯಾರ್ಕ್ ನಿಂದ ದೆಹಲಿಗೆ ನ.26 ರಂದು ಏರ್ ಇಂಡಿಯಾ ವಿಮಾನ ಎಐ-102 ಸಂಚರಿಸುತ್ತಿತ್ತು. ಈ ವಿಮಾನದಲ್ಲಿ ಬಿಸಿನೆಸ್ ಕ್ಲಾಸ್‌ನಲ್ಲಿ ಸಂಚರಿಸುತ್ತಿದ್ದ ಪುರುಷ ಪ್ರಯಾಣಿಕರೊಬ್ಬರು ಕುಡಿದ ಮತ್ತಿನಲ್ಲಿ ಸಹಪ್ರಯಾಣಿಕರಾಗಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದರು. ಮೂತ್ರದಿಂದ ಮಹಿಳೆಯ ಬಟ್ಟೆ, ಶೂ, ಬ್ಯಾಗ್ ಒದ್ದೆಯಾಗಿತ್ತು. ಬ್ಯಾಗ್‌ನಲ್ಲಿ ಅಮೆರಿಕನ್ ಕರೆನ್ಸಿ, ಪಾಸ್‌ಪೋರ್ಟ್ ಸೇರಿ ಮುಖ್ಯವಾದ ದಾಖಲೆಗಳಿದ್ದವು. ಏರ್ ಹೋಸ್ಟೆಸ್ ಕೂಡಾ ಇದನ್ನು ಮುಟ್ಟಲು ನಿರಾಕರಿಸಿದ್ರು. ಬಳಿಕ ಮಹಿಳೆಯನ್ನು ಬಾತ್ ರೂಂಗೆ ಕರೆದುಕೊಂಡು ಹೋಗಿ ಬೇರೆ ಬಟ್ಟೆ ನೀಡಿದ್ರು. ನಂತರ ಬೇರೆ ಸೀಟ್ ಕೊಡುವಂತೆ ಮಹಿಳೆ ಕೇಳಿಕೊಂಡಿದ್ದರು. ಈ ವೇಳೆ ಸೀಟ್‌ಗಳೆಲ್ಲಾ ಭರ್ತಿಯಾಗಿದೆ ಎಂದು ಸಿಬ್ಬಂದಿ ಏರ್ ಹೋಸ್ಟೆಸ್ ಪ್ರಯಾಣ ಮಾಡುವ ಸೀಟ್ ನೀಡಿ ದೆಹಲಿಗೆ ಕರೆದುಕೊಂಡು ಬಂದಿದ್ದರು.

    ಈ ಘಟನೆಯ ಬಳಿಕ ಮಹಿಳೆ ಬಳಿ ಶಂಕರ್ ಮಿಶ್ರಾ ಕ್ಷಮೆಯಾಚಿಸಿದ್ದ. ಆದರೆ ಏರ್ ಇಂಡಿಯಾ ಮಾತ್ರ ಮಿಶ್ರಾ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಜೊತೆಗೆ ಮಹಿಳೆಯೊಂದಿಗೆ ಏರ್ ಇಂಡಿಯಾ ಸಿಬ್ಬಂದಿ ನಡೆದುಕೊಂಡ ರೀತಿಯಿಂದ ಮನನೊಂದು ಮಹಿಳೆ ಈ ಬಗ್ಗೆ ಟಾಟಾ ಸನ್ಸ್ ಗ್ರೂಪ್‌ನ ಮುಖ್ಯಸ್ಥರಿಗೆ ಪತ್ರ ಬರೆದು ಮಾಹಿತಿ ಹಂಚಿಕೊಂಡಿದ್ದರು. ಶನಿವಾರ (ಜ.7) ಬೆಂಗಳೂರಿನಲ್ಲಿ ದೆಹಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಬೆಂಗಳೂರು ಕಂಪನಿಯಿಂದ ಆರೋಪಿ ವಜಾ

    ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಬೆಂಗಳೂರು ಕಂಪನಿಯಿಂದ ಆರೋಪಿ ವಜಾ

    ಮುಂಬೈ: ಏರ್ ಇಂಡಿಯಾ ವಿಮಾನದಲ್ಲಿ (Air India Flight) ಹಿರಿಯ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದ ವ್ಯಕ್ತಿಯನ್ನು ವೇಲ್ಸ್‌ ಫಾರ್ಗೋ ಕಂಪನಿ ವಜಾಗೊಳಿಸಿದೆ.

    ಮದ್ಯದ ಅಮಲಿನಲ್ಲಿ ಅಸಭ್ಯವಾಗಿ ವರ್ತಿಸಿದ್ದ ಅಮೆರಿಕದ ಹಣಕಾಸು ಸಂಸ್ಥೆ ವೇಲ್ಸ್ ಫಾರ್ಗೋ ಸಂಸ್ಥೆಯ ಭಾರತ ಉಪಾಧ್ಯಕ್ಷ ಶಂಕರ್ ಮಿಶ್ರಾ ಇದೀಗ ತಲೆ ಮರೆಸಿಕೊಂಡಿದ್ದಾನೆ. ಆತನಿಗಾಗಿ ಬೆಂಗಳೂರು (Bengaluru), ಮುಂಬೈನಲ್ಲಿ (Mumbai) ಶೋಧ ಕಾರ್ಯ ನಡೆದಿದೆ. ಲುಕೌಟ್ ನೊಟೀಸ್ ಕೂಡ ಜಾರಿಯಾಗಿದೆ. ಇದನ್ನೂ ಓದಿ: ವಿಮಾನದಲ್ಲಿ ಕಂಠಪೂರ್ತಿ ಕುಡಿದು ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಸಹಪ್ರಯಾಣಿಕ

    ಈ ಪ್ರಕರಣದಿಂದ ತೀವ್ರ ಮುಜುಗರ ಅನುಭವಿಸಿದ ವೇಲ್ಸ್ ಫಾರ್ಗೋ (Wells Fargo) ಸಂಸ್ಥೆ ಶಂಕರ್ ಮಿಶ್ರಾ ನನ್ನ ಕೆಲಸದಿಂದಲೇ ವಜಾ ಮಾಡಿದೆ. ಈ ನಡುವೆ ಪ್ರಕರಣ ಬೆಳಕಿಗೆ ಬಂದ ನಂತರ ತೀವ್ರ ಇರಿಸುಮುರುಸಿಗೆ ಗುರಿಯಾಗಿರುವ ಏರ್ ಇಂಡಿಯಾ (Air India) ವಿಮಾನಯಾನ ಸಂಸ್ಥೆ ಎಚ್ಚೆತ್ತುಕೊಂಡಿದ್ದು, ಮುಂದೆ ಇಂತಹ ಸಮಸ್ಯೆಗಳು ಬರದಂತೆ ನೋಡಿಕೊಳ್ಳಲು ಮುಂದಾಗಿದೆ. ಇದನ್ನೂ ಓದಿ: ದೇವಾಲಯಕ್ಕೆ ಡಿಕ್ಕಿ ಹೊಡೆದು ವಿಮಾನ ಪತನ – ತರಬೇತಿ ಪಡೀತಿದ್ದ ಪೈಲಟ್ ಸಾವು

    ಇಂತಹ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು. ಅನುಚಿತ ವರ್ತನೆ ತೋರಿದ ಘಟನೆಗಳು ನಡೆದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು. ಪ್ರಯಾಣಿಕರು ರಾಜಿಯಾದರೂ ಮೇಲಾಧಿಕಾರಿಗಳ ಗಮನಕ್ಕೆ ತರಲೇಬೇಕು ಎಂದು ಎಚ್ಚರಿಸಿದೆ. ಡಿಜಿಸಿಎ ಕೂಡ ವಿಮಾನ ಸಿಬ್ಬಂದಿಗೆ ಪ್ರತ್ಯೇಕ ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ.

    ಇದಕ್ಕೂ ಮುನ್ನ ಪೊಲೀಸ್ ತನಿಖೆ (Police Investigation) ವೇಳೆ ಸಂತ್ರಸ್ತೆ ಆರೋಪಿಯ ಬಗ್ಗೆ ಮಾಹಿತಿ ನೀಡಿದ್ದರು. ಮೂತ್ರ ವಿಸರ್ಜನೆ ಮಾಡಿದ ನಂತರ ಅವನು ಅಳಲು ಪ್ರಾರಂಭಿಸಿದ. ನನ್ನಲ್ಲಿ ಕೈಮುಗಿದು ಕ್ಷಮೆಯಾಚಿಸಿದ. ನಾನು ಒಂದು ಕ್ಷಣ ದಿಗ್ಭ್ರಮೆಗೊಂಡೆ. ಅಲ್ಲದೇ ಅವನು ನಾನು ಫ್ಯಾಮಿಲಿ ಮ್ಯಾನ್, ಘಟನೆಯಿಂದ ನನ್ನ ಹೆಂಡತಿ ಮಗುವಿಗೆ ತೊಂದರೆಯಾಗಬಾರದು ಎಂದು ಪರಿಪರಿಯಾಗಿ ಬೇಡಿಕೊಂಡಿದ್ದ. ಆದ್ದರಿಂದ ಅವನ ವಿರುದ್ಧ ಆರೋಪ ಹೊರಿಸುವುದು ನನಗೆ ತುಂಬಾ ಕಷ್ಟಕರವೆನಿಸಿತ್ತು ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ವಿಮಾನದಲ್ಲಿ ಕಂಠಪೂರ್ತಿ ಕುಡಿದು ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಸಹಪ್ರಯಾಣಿಕ

    ವಿಮಾನದಲ್ಲಿ ಕಂಠಪೂರ್ತಿ ಕುಡಿದು ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಸಹಪ್ರಯಾಣಿಕ

    ನವದೆಹಲಿ: ನ್ಯೂಯಾರ್ಕ್‍ನಿಂದ (New York) ನವದೆಹಲಿಗೆ (Delhi) ಸಂಚರಿಸುತ್ತಿದ್ದ ಏರ್ ಇಂಡಿಯಾ (Air India)  ವಿಮಾನದಲ್ಲಿ (Flight) ಮಹಿಳೆಯೊಬ್ಬರ ಮೇಲೆ ಸಹಪ್ರಯಾಣಿಕ ಕಂಠಪೂರ್ತಿ ಕುಡಿದು ಮೂತ್ರ ವಿಸರ್ಜಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ನ್ಯೂಯಾರ್ಕ್‍ನಿಂದ ದೆಹಲಿಗೆ ನ.26 ರಂದು ಏರ್ ಇಂಡಿಯಾ ವಿಮಾನ AI-102 ಸಂಚರಿಸುತ್ತಿತ್ತು. ಈ ವಿಮಾನದಲ್ಲಿ ಬ್ಯುಸಿನೆಸ್ ಕ್ಲಾಸ್‍ನಲ್ಲಿ ಸಂಚರಿಸುತ್ತಿದ್ದ ಪುರುಷ ಪ್ರಯಾಣಿಕರೊಬ್ಬರು ಕುಡಿದ ಮತ್ತಿನಲ್ಲಿ (Drunk Man) ಸಹಪ್ರಯಾಣಿಕರಾಗಿದ್ದ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ್ದಾರೆ. ಈ ಬಗ್ಗೆ ಮಹಿಳೆ ಕೂಡಲೇ ಏರ್ ಇಂಡಿಯಾ ವಿಮಾನದಲ್ಲಿದ್ದ ಸಿಬ್ಬಂದಿಗೆ ತಿಳಿಸಿದ್ದಾರೆ. ಸಿಬ್ಬಂದಿ ಬಂದು ವಿಚಾರಿಸುತ್ತಿದ್ದಂತೆ ಕುಡಿದ ಮತ್ತಿನಲ್ಲಿ ಏನು ಅರಿಯದವರಂತೆ ವರ್ತಿಸಿದ್ದಾರೆ. ಇದನ್ನೂ ಓದಿ: ಹತ್ಯೆ ಕೇಸ್- ಅಮಾನತುಗೊಂಡ ಬಿಜೆಪಿ ನಾಯಕನ ಅಕ್ರಮ ಹೋಟೆಲ್ ನೆಲಸಮ

    ಘಟನೆ ಬಳಿಕ ಮಹಿಳೆ ಈ ಬಗ್ಗೆ ಟಾಟಾ ಸನ್ಸ್‌ ಗ್ರೂಪ್‌ನ (Tata Group) ಮುಖ್ಯಸ್ಥ ನಟರಾಜನ್‌ ಚಂದ್ರಶೇಖರನ್‌ ಅವರಿಗೆ ಪತ್ರ ಬರೆದು ಘಟನೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ವಿಮಾನದ ಸಿಬ್ಬಂದಿ ಘಟನೆಯ ಬಳಿಕ ಈ ಬಗ್ಗೆ ಯಾವುದೇ ರೀತಿಯ ರೆಸ್ಪಾನ್ಸ್ ಮಾಡಿಲ್ಲ. ಇದರಿಂದ ವಿಮಾನದಲ್ಲಿ ಸಂಚರಿಸುವಾಗ ನಮ್ಮ ಸುರಕ್ಷತೆ ಬಗ್ಗೆ ಪ್ರಶ್ನೆ ಮಾಡುವಂತಾಗಿದೆ. ಇದನ್ನೂ ಓದಿ: ತ್ರಿಪುರಾದ ಮಾಜಿ ಸಿಎಂ ಪೂರ್ವಜರ ಮನೆಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

    ಊಟದ ಬಳಿಕ ವಿಮಾನದ ಲೈಟ್ ಆಫ್ ಮಾಡಲಾಗಿತ್ತು. ಈ ವೇಳೆ ಪ್ರಯಾಣಿಕರೊಬ್ಬರು ನನ್ನ ಸೀಟ್ ಬಳಿ ಬಂದು ಮೂತ್ರ ವಿಸರ್ಜಿಸಿದ್ದಾರೆ. ಈ ವೇಳೆ ಅವರ ಖಾಸಗಿ ಅಂಗವನ್ನು ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಏರ್ ಇಂಡಿಯಾ ಘಟನೆ ಬಗ್ಗೆ ಇದೀಗ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಅಸಭ್ಯವಾಗಿ ವರ್ತಿಸಿದ ಪ್ರಯಾಣಿಕರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ರಷ್ಯಾದಿಂದ ದೆಹಲಿಗೆ ಬಂದ ವಿಮಾನದಲ್ಲಿ ಬಾಂಬ್ ಬೆದರಿಕೆ – ದೆಹಲಿ ಏರ್‌ಪೋರ್ಟ್ ಹೈ ಅಲರ್ಟ್

    ರಷ್ಯಾದಿಂದ ದೆಹಲಿಗೆ ಬಂದ ವಿಮಾನದಲ್ಲಿ ಬಾಂಬ್ ಬೆದರಿಕೆ – ದೆಹಲಿ ಏರ್‌ಪೋರ್ಟ್ ಹೈ ಅಲರ್ಟ್

    ನವದೆಹಲಿ: ರಷ್ಯಾದ ಮಾಸ್ಕೋದಿಂದ (Moscow) ದೆಹಲಿಗೆ ಬಂದಿಳಿದ ವಿಮಾನದಲ್ಲಿ ಬಾಂಬ್ (Bomb) ಇರುವುದಾಗಿ ತಡರಾತ್ರಿ ಎಚ್ಚರಿಕೆಯ ಇಮೇಲ್ (Email) ಬಂದಿದ್ದು, ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  (Indira Gandhi International Airport) ಭಾರೀ ಭದ್ರತೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಬೆದರಿಕೆ ಮೇಲ್ ಬಂದ ನಂತರ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ವಿಮಾನವನ್ನು (Flight) ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: ಹಿಜಬ್ ಭರವಸೆ ಬಲವಾಗಿದೆ – ನ್ಯಾ. ದುಲಿಯಾ ತೀರ್ಪಿಗೆ ಆಲಿಯಾ ಅಸ್ಸಾದಿ ಮೆಚ್ಚುಗೆ

    ಪೊಲೀಸರ (Airport Police) ಪ್ರಕಾರ, ವಿಮಾನವು ಮಾಸ್ಕೋದಿಂದ ಬೆಳಗಿನ ಜಾವ 3:20ಕ್ಕೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಆದರೆ ಟರ್ಮಿನಲ್ 3ಕ್ಕೆ ಬರುತ್ತಿದ್ದ ವಿಮಾನ ಸಂಖ್ಯೆ SU232ರಲ್ಲಿ ಬಾಂಬ್ ಇರುವುದಾಗಿ ರಾತ್ರಿ 11:55ಕ್ಕೆ ಕರೆ ಬಂದಿತು. ಇದರಿಂದಾಗಿ ಒಟ್ಟು 386 ಹಾಗೂ 16 ಸಿಬ್ಬಂದಿಯನ್ನ ವಿಮಾನದಿಂದ ಕೆಳಗಿಳಿಸಿ ಪರಿಶೀಲಿಸಲಾಯಿತು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಕೇರಳದಲ್ಲಿ ನರಬಲಿ ಕೇಸ್‌ – ಮಾಟ ಮಂತ್ರ ತಡೆಗೆ ಕಠಿಣ ಕಾನೂನು: ಕೇರಳ ಸರ್ಕಾರ ನಿರ್ಧಾರ

    ಇಂತಹ ಘಟನೆ ನಡೆಯುತ್ತಿರುವುದು ಇದೇ ಮೊದಲೇನಲ್ಲ. ಸೆ.10 ರಂದು ಲಂಡನ್‌ಗೆ ಹೋಗುವ ಏರ್ ಇಂಡಿಯಾ ವಿಮಾನಕ್ಕೆ (Air India Flight) ಬಾಂಬ್ ಬೆದರಿಕೆ ಕರೆ ಬಂದಿತ್ತು.

    Live Tv
    [brid partner=56869869 player=32851 video=960834 autoplay=true]

  • ಉಕ್ರೇನ್‍ನಿಂದ 2ನೇ ವಿಮಾನದಲ್ಲಿ ದೆಹಲಿಗೆ ಬಂದ 250 ಭಾರತೀಯರು

    ಉಕ್ರೇನ್‍ನಿಂದ 2ನೇ ವಿಮಾನದಲ್ಲಿ ದೆಹಲಿಗೆ ಬಂದ 250 ಭಾರತೀಯರು

    ನವದೆಹಲಿ: ಉಕ್ರೇನ್‍ನಲ್ಲಿ ಸಿಲುಕಿದ್ದ 250 ಭಾರತೀಯ ಪ್ರಜೆಗಳನ್ನು ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ ಏರ್ ಇಂಡಿಯಾದ ಎರಡನೇ ವಿಮಾನವು ಭಾನುವಾರ ಮುಂಜಾನೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

    ಏರ್ ಇಂಡಿಯಾ (ಎಐ)-192 ವಿಶೇಷ ವಿಮಾನವು ಬೆಳಗ್ಗೆ 3 ಗಂಟೆಗೆ ‘ಆಪರೇಷನ್ ಗಂಗಾ’ ಅಡಿಯಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಯಶಸ್ವಿಯಾಗಿ ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿಸಿದೆ.  ಇದನ್ನೂ ಓದಿ:  ರಷ್ಯಾ ಜಾಗತಿಕ ಪಾವತಿ ವ್ಯವಸ್ಥೆ ಕಡಿತ – ಯುಎಸ್, ಮಿತ್ರರಾಷ್ಟ್ರಗಳ ಒಪ್ಪಿಗೆ

    ಈ ವೇಳೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ.ಮುರಳೀಧರನ್ ಅವರು, ಉಕ್ರೇನ್‍ನಿಂದ ಬುಚಾರೆಸ್ಟ್ ಮೂಲಕ ಸುರಕ್ಷಿತವಾಗಿ ಬಂದ ಭಾರತೀಯರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

    ಈ ವಿಮಾನದಲ್ಲಿ ಬಂದ ಭಾರತೀಯ ವಿದ್ಯಾರ್ಥಿಯೊಬ್ಬರು ಮಾಧ್ಯಮದೊಂದಿಗೆ ಮಾತನಾಡಿ, ಕೈವ್‍ನ ಹಲವಾರು ಸ್ಥಳಗಳಲ್ಲಿ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ನಾಗರಿಕರು ತಮ್ಮ ದೇಶವನ್ನು ಉಳಿಸಲು ಶಸ್ತ್ರಾಸ್ತ್ರಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.  ಇದನ್ನೂ ಓದಿ:  ಉಕ್ರೇನ್‍ನಿಂದ ತಾಯ್ನಾಡಿಗೆ ಬಂದ್ರು ಭಾರತೀಯರು – ಮುಂಬೈನಲ್ಲಿ ವಿಮಾನ ಲ್ಯಾಂಡಿಂಗ್

    ಶನಿವಾರ ರಾತ್ರಿ ಉಕ್ರೇನ್‍ನಿಂದ 219 ಭಾರತೀಯ ವಿದ್ಯಾರ್ಥಿಗಳು ಏರ್ ಇಂಡಿಯಾ ವಿಮಾನ ಮೂಲಕ ಮುಂಬೈಗೆ ಬಂದಿಳಿದಿದ್ದರು. ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‍ನಿಂದ ಮಧ್ಯಾಹ್ನ ಭಾರತದ ಪ್ರಜೆಗಳನ್ನು ಹೊತ್ತು ವಿಮಾನ ಟೇಕಾಫ್ ಆಗಿತ್ತು. ಉಕ್ರೇನ್‍ನಿಂದ ಸುರಕ್ಷಿತವಾಗಿ ಸ್ಥಳಾಂತರಿಸಲ್ಪಟ್ಟ ಭಾರತೀಯರನ್ನು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದು ಇಳಿಸಿತ್ತು. ಈ ವೇಳೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ವಿದ್ಯಾರ್ಥಿಗಳನ್ನು ಸ್ವಾಗತಿಸಿದ್ದರು.

  • ವಿಮಾನಕ್ಕೆ ಬಂದ ವಿಶೇಷ ಅತಿಥಿಯಿಂದ 12 ತಾಸು ಲೇಟಾಯ್ತು ಟೇಕಾಫ್

    ವಿಮಾನಕ್ಕೆ ಬಂದ ವಿಶೇಷ ಅತಿಥಿಯಿಂದ 12 ತಾಸು ಲೇಟಾಯ್ತು ಟೇಕಾಫ್

    ಹೈದರಾಬಾದ್: ಭಾನುವಾರ ಹೈದರಾಬಾದ್‍ನಿಂದ ವಿಶಾಖಪಟ್ಟಣಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನವು ವಿಶೇಷ ಅತಿಥಿ ಫ್ಲೈಟ್‍ನಲ್ಲಿ ಕಾಣಿಸಿಕೊಂಡಿದ್ದಕ್ಕೆ ಬರೋಬ್ಬರಿ 12 ಗಂಟೆ ಲೇಟಾಗಿ ಟೇಕಾಫ್ ಆಗಿದೆ.

    ಆ ವಿಶೇಷ ಅತಿಥಿ ಯಾರು ಎಂದು ತಿಳಿದರೆ ತಮಾಷೆ ಅನಿಸುತ್ತೆ. ಯಾಕೆಂದರೆ ವಿಮಾನ 12 ಗಂಟೆ ವಿಳಂಬವಾಗುವಂತೆ ಮಾಡಿದ್ದು ಕೇವಲ ಒಂದು ಇಲಿ. ಹೌದು. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈದರಾಬಾದ್‍ನಿಂದ ವಿಶಾಖಪಟ್ಟಣಕ್ಕೆ ತೆರಳಬೇಕಿದ್ದ ವಿಮಾನ ಇನ್ನೇನು ಟೇಕಾಫ್ ಆಗಬೇಕಿತ್ತು. ಆದರೆ ಈ ವೇಳೆ ಮೂಷಿಕರಾಜನ ಎಂಟ್ರಿ ಕಂಡು ಪ್ರಯಾಣಿಕರು ಗಲಿಬಿಲಿಗೊಂಡ ಕಾರಣ ಸಿಬ್ಬಂದಿ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿದರು. ವಿಮಾನದಲ್ಲಿ ಸೇರಿದ್ದ ಒಂದೇ ಒಂದು ಇಲಿ ಹಿಡಿಯಲು ಸಿಬ್ಬಂದಿ 12 ಗಂಟೆಗಳ ಕಾಲ ಹರಸಾಹಸವನ್ನೇ ಪಟ್ಟಿದ್ದಾರೆ.

    ಬೆಳಗ್ಗೆ 6.10ಕ್ಕೆ ಹೊರಡಬೇಕಿದ್ದ ಏರ್ ಇಂಡಿಯಾದ AI-952 ವಿಮಾನ ಸಂಜೆ 5.30ಕ್ಕೆ ಟೇಕಾಫ್ ಆಗಿದೆ. ಇಲಿಯ ಎಂಟ್ರಿಯಿಂದ ಬರೋಬ್ಬರಿ 12 ಗಂಟೆ ತಡವಾಗಿ ವಿಮಾನ ಟೇಕಾಫ್ ಆಗಿದೆ. ಹೀಗಾಗಿ ಬೆಳಗ್ಗೆಯಿಂದ ಸಂಜೆಯವರೆಗೂ ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ಕಾಲ ಕಳೆದಿದ್ದಾರೆ. ಸಂಜೆಯ ವೇಳೆಗೆ ಕೊನೆಗೂ ಏರ್‌ಲೈನ್ಸ್ ಸಿಬ್ಬಂದಿ ವಿಮಾನದಲ್ಲಿದ್ದ ಇಲಿಯನ್ನು ಹಿಡಿದಿದ್ದೇವೆ ಎಂದು ತಿಳಿಸಿ ಪ್ರಯಾಣಿಕರನ್ನು ವಿಮಾನದಲ್ಲಿ ಹತ್ತಿಸಿಕೊಂಡು ವಿಶಾಖಪಟ್ಟಣಕ್ಕೆ ತೆರಳಿದ್ದಾರೆ. ಅಲ್ಲಿಂದ ಇದೇ ವಿಮಾಣ ದೆಹಲಿಯತ್ತ ಪ್ರಯಾಣ ಬೆಳೆಸಿದೆ.

    ಬೆಳಗ್ಗೆಯಿಂದ ಸಂಜೆಯವರೆಗೆ ಕಾದ ಪ್ರಯಾಣಿಕರು ಘಟನೆಯಿಂದ ಆಕ್ರೋಶಗೊಂಡು, ಬೇಸತ್ತು ಸಾಮಾಜಿಕ ಜಾಲತಾಣದಲ್ಲಿ ಏರ್ ಇಂಡಿಯಾ ಸಂಸ್ಥೆಯ ವಿರುದ್ಧ ಕಮೆಂಟ್, ಟ್ರೋಲ್ ಮಾಡಿಕೊಂಡಿ ಸಿಟ್ಟನ್ನು ಹೊರಹಾಕಿದ್ದಾರೆ.

  • ಏರ್ ಇಂಡಿಯಾ ಫ್ಲೈಟ್‍ನಲ್ಲಿ ಎಸಿ ಸಮಸ್ಯೆ- ಪ್ರಯಾಣಿಕರು ಗಾಳಿ ಬೀಸಿಕೊಳ್ತಿರೋ ವಿಡಿಯೋ ವೈರಲ್

    ಏರ್ ಇಂಡಿಯಾ ಫ್ಲೈಟ್‍ನಲ್ಲಿ ಎಸಿ ಸಮಸ್ಯೆ- ಪ್ರಯಾಣಿಕರು ಗಾಳಿ ಬೀಸಿಕೊಳ್ತಿರೋ ವಿಡಿಯೋ ವೈರಲ್

    ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಎಸಿ ಸಮಸ್ಯೆಯಿಂದಾಗಿ ಪ್ರಯಾಣಿಕರು ಉಸಿರಾಟದ ಸಮಸ್ಯೆ ಎದುರಿಸಿದ್ದು, ವಿಪರೀತ ಸೆಕೆ ತಾಳಲಾರದೆ ತಮ್ಮ ಕೈಯಲ್ಲಿದ್ದ ಕರಪತ್ರ ಅಥವಾ ಮ್ಯಾಗಜಿನ್‍ಗಳಲ್ಲಿ ಗಾಳಿ ಬೀಸಿಕೊಳ್ಳುತ್ತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದೆ.

    ಭಾನುವಾರ ಮಧ್ಯಾಹ್ನ 1.55ರ ವೇಳೆಗೆ ಏರ್ ಇಂಡಿಯಾ ಎಐ-880 ವಿಮಾನ ಪಶ್ಚಿಮ ಬಂಗಾಳದ ಬಾಗ್ದೋರಾದಿಂದ 168 ಪ್ರಯಾಣಿಕರನ್ನು ಹೊತ್ತು ನವದೆಹಲಿಗೆ ಹೊರಟಿತ್ತು. ವಿಮಾನ ಟೇಕ್ ಆಫ್ ಆದ 20 ನಿಮಿಷದಲ್ಲೇ ಎಸಿ ಕೆಲಸ ಮಾಡುತ್ತಿಲ್ಲ ಎಂದು ಪ್ರಯಾಣಿಕರು ದೂರು ನೀಡಿದ್ದರು. ಕೆಲವು ಪ್ರಯಾಣಿಕರು ಆಕ್ಸಿಜನ್ ಮಾಸ್ಕ್ ಹಾಕಿಕೊಂಡ್ರೂ ಅದೂ ಕೂಡ ಕೆಲಸ ಮಾಡುತ್ತಿರಲಿಲ್ಲ ಎಂದು ವರದಿಯಾಗಿದೆ.

    ಪ್ರಯಾಣಿಕರು ವಿಮಾನದ ಸಿಬ್ಬಂದಿಗೆ ಎಸಿ ಕಾರ್ಯ ನಿರ್ವಹಿಸದ ಬಗ್ಗೆ ದೂರು ನೀಡಿದ್ದರು. ಸ್ವಲ್ಪ ಸಮಯದಲ್ಲೇ ಎಸಿಯನ್ನ ಸರಿ ಮಾಡಲಾಗುತ್ತದೆ ಎಂದು ಸಿಬ್ಬಂದಿ ಭರವಸೆ ನೀಡಿದ್ದರು. ಆದ್ರೆ ಸಮಸ್ಯೆ ಮಾತ್ರ ಬಗೆಹರಿದಿರಲಿಲ್ಲ.

    ಘಟನೆಯಿಂದ ಸಿಟ್ಟಿಗೆದ್ದ ಪ್ರಯಾಣಿಕರೊಬ್ಬರು ವಿಮಾನದಲ್ಲಿ ಪ್ರಯಾಣಿಕರು ತಮ್ಮ ಕರವಸ್ತ್ರಗಳಲ್ಲಿ ಗಾಳಿ ಬೀಸಿಕೊಳ್ಳುತ್ತಿರುವುದನ್ನು ವಿಡಿಯೋ ಮಾಡಿದ್ದಾರೆ. ಕೆಲ ಪ್ರಯಾಣಿಕರು ವಿಮಾನದಲ್ಲಿ ಎದುರಿಸಿದ ತೊಂದರೆಯ ಬಗ್ಗೆ ಟ್ವಿಟ್ಟರ್‍ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಏರ್ ಇಂಡಿಯಾವನ್ನ ಸಂಪರ್ಕಿಸಿದಾಗ, ತಾಂತ್ರಿಕ ಸಮಸ್ಯೆಯಿಂದ ಹೀಗಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.