Tag: air india

  • ಟಾಟಾ ಸಂಸ್ಥೆಗೆ ಏರ್‌ ಇಂಡಿಯಾ ಅಧಿಕೃತ ಹಸ್ತಾಂತರ

    ಟಾಟಾ ಸಂಸ್ಥೆಗೆ ಏರ್‌ ಇಂಡಿಯಾ ಅಧಿಕೃತ ಹಸ್ತಾಂತರ

    ನವದೆಹಲಿ: ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಟಾಟಾ ಸನ್ಸ್‌ಗೆ ಅಧಿಕೃತವಾಗಿ ಹಸ್ತಾಂತರಿಸಲಾಗಿದೆ.

    ಏರ್‌ ಇಂಡಿಯಾ ಅಧಿಕೃತ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾಟಾ ಸನ್ಸ್‌ ಅಧ್ಯಕ್ಷ ಎನ್.ಚಂದ್ರಶೇಖರನ್‌ ಭೇಟಿಯಾಗಿದ್ದರು. ಟಾಟಾ ಗ್ರೂಪ್, ಏರ್‌ ಇಂಡಿಯಾವನ್ನು ಮರಳಿ ಪಡೆದಿದ್ದಕ್ಕೆ ಸಂತೋಷವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಮತ್ತೆ ʼಮಹಾರಾಜʼನಾದ ಟಾಟಾ – Welcome Back ಏರ್‌ ಇಂಡಿಯಾ ಎಂದ ರತನ್‌ ಟಾಟಾ

    ಹರಾಜಿಗೆ ಸಂಬಂಧಿಸಿದ ಎಲ್ಲಾ ವಿಧಾನಗಳು ಪೂರ್ಣಗೊಂಡಿವೆ. ಏರ್‌ ಇಂಡಿಯಾ ಹೂಡಿಕೆ ಪ್ರಕ್ರಿಯೆ ಮುಚ್ಚಲಾಗಿದೆ. ಷೇರುಗಳನ್ನು ಏರ್‌ ಇಂಡಿಯಾದ ಹೊಸ ಮಾಲೀಕರಾಗಿರುವ ತಾಲೇಸ್‌ ಪ್ರೈವೆಟ್‌ ಲಿಮಿಟೆಡ್‌ಗೆ (ಟಾಟಾ ಸನ್ಸ್‌) ವರ್ಗಾಯಿಸಲಾಗಿದೆ ಎಂದು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ ಕಾರ್ಯದರ್ಶಿ ತುಹಿನ್‌ ಕಾಂತ್‌ ಪಾಂಡೆ ತಿಳಿಸಿದ್ದಾರೆ.

    ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸರ್ಕಾರವು 18,000 ಕೋಟಿಗೆ ಏರ್‌ ಇಂಡಿಯಾವನ್ನು ಟಾಟಾ ಗ್ರೂಪ್ಸ್‌ಗೆ ಮಾರಾಟ ಮಾಡಿತ್ತು. ಅದಾದ ನಂತರ ವಿಮಾನಯಾನ ಸಂಸ್ಥೆಯಲ್ಲಿನ ತನ್ನ ಶೇ.100 ಪಾಲನ್ನು ಮಾರಾಟ ಮಾಡಲು ಸರ್ಕಾರದ ಇಚ್ಛೆಯನ್ನು ದೃಢೀಕರಿಸಲು ಟಾಟಾ ಗ್ರೂಪ್ಸ್‌ಗೆ ಲೆಟರ್‌ ಆಫ್‌ ಇಂಟೆಂಟ್‌ (ಎನ್‌ಒಐ) ನೀಡಲಾಯಿತು. ನಂತರ ಕೇಂದ್ರವು ಷೇರು ಖರೀದಿ ಒಪ್ಪಂದಕ್ಕೆ ಸಹಿ ಹಾಕಿತ್ತು. ಇದನ್ನೂ ಓದಿ: ಏರ್‌ ಇಂಡಿಯಾ ಹರಾಜು – ಟಾಟಾ ಡೀಲ್‌ ಪ್ರಶ್ನಿಸಿ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾ

    1932 ರಲ್ಲಿ ಜೆಆರ್‌ಡಿ ಟಾಟಾ ಅವರು ಟಾಟಾ ಏರ್‌ಲೈನ್ಸ್‌ ಸಂಸ್ಥೆಯನ್ನು ಆರಂಭಿಸಿದರು. ನಂತರ ಅದಕ್ಕೆ 1946ರಲ್ಲಿ ಏರ್‌ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿತು. ಸರ್ಕಾರವು 1953 ರಲ್ಲಿ ಏರ್‌ಲೈನ್ಸ್‌ನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿತು. ಆದರೆ ಜೆಆರ್‌ಡಿ ಟಾಟಾ 1977ರವರೆಗೆ ಅದರ ಅಧ್ಯಕ್ಷರಾಗಿ ಮುಂದುವರಿದರು. ಸುಮಾರು 67 ವರ್ಷಗಳ ನಂತರ ಏರ್‌ ಇಂಡಿಯಾವನ್ನು ಟಾಟಾ ಸಂಸ್ಥೆ ಮತ್ತೆ ಪಡೆದುಕೊಂಡಿದೆ.

    ಸಾಲದ ಸುಳಿಯಲ್ಲಿದ್ದ ಏರ್‌ ಇಂಡಿಯಾವನ್ನು ಕೇಂದ್ರ ಸರ್ಕಾರವು ಟಾಟಾ ಸನ್ಸ್‌ಗೆ ಮಾರಾಟ ಮಾಡಿದೆ.

  • ಏರ್ ಇಂಡಿಯಾ ನೂತನ ಮುಖ್ಯಸ್ಥರಾಗಿ ವಿಕ್ರಮ್ ದೇವ್ ದತ್ ನೇಮಕ

    ಏರ್ ಇಂಡಿಯಾ ನೂತನ ಮುಖ್ಯಸ್ಥರಾಗಿ ವಿಕ್ರಮ್ ದೇವ್ ದತ್ ನೇಮಕ

    ನವದೆಹಲಿ: ಹಿರಿಯ ಐಎಎಸ್ ಅಧಿಕಾರಿ ವಿಕ್ರಮ್ ದೇವ್ ದತ್ ಅವರನ್ನು ಏರ್ ಇಂಡಿಯಾ ಲಿಮಿಟೆಡ್‌ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕನಾಗಿ ಮಂಗಳವಾರ ಕೇಂದ್ರ ಸರ್ಕಾರ ನೇಮಿಸಿದೆ.

    ವಿಕ್ರಮ್ ದೇವ್ ದತ್ ಅವರು ಎಜಿಎಮ್‌ಯುಟಿ(ಅರುಣಾಚಲ ಪ್ರದೇಶ, ಗೋವಾ, ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶ) ಕೇಡರ್‌ನ 1993-ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ. ಅವರನ್ನು ಹೆಚ್ಚುವರಿ ಕಾರ್ಯದರ್ಶಿ ಶ್ರೇಣಿ ಹಾಗೂ ವೇತನದಲ್ಲಿ ಏರ್ ಇಂಡಿಯಾ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. ಇದನ್ನೂ ಓದಿ: ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ನಿಧನ

    ದತ್ ಅವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಸರ್ಕಾರದಲ್ಲಿ ಹಣಕಾಸು ಪ್ರಧಾನ ಕಾರ್ಯದರ್ಶಿಯಾಗಿ, ಗೋವಾ ಸರ್ಕಾರದಲ್ಲಿ ಪ್ರವಾಸೋದ್ಯಮ ಕಾರ್ಯದರ್ಶಿಯಾಗಿ ಹಾಗೂ ಭಾರತ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ನಿಭಾಯಿಸಿದ್ದಾರೆ. ಇದನ್ನೂ ಓದಿ: ED ದಾಳಿ ಬಿಜೆಪಿಯ ನೆಚ್ಚಿನ ಅಸ್ತ್ರ: ರಾಹುಲ್ ಗಾಂಧಿ

    ರಾಷ್ಟ್ರೀಯ ಹೆದ್ದಾರಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಚಂಚಲ್ ಕುಮಾರ್ ಅವರನ್ನು ನೇಮಿಸಲಾಗಿದೆ. ಕುಮಾರ್ 1992-ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಬಿಹಾರದಲ್ಲಿ ಅವರ ಕೇಡರ್ ರಾಜ್ಯವನ್ನು ನಿಯೋಜಿಸಲಾಗಿದೆ.

  • ಏರ್‌ ಇಂಡಿಯಾ ಹರಾಜು – ಟಾಟಾ ಡೀಲ್‌ ಪ್ರಶ್ನಿಸಿ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾ

    ಏರ್‌ ಇಂಡಿಯಾ ಹರಾಜು – ಟಾಟಾ ಡೀಲ್‌ ಪ್ರಶ್ನಿಸಿ ಸುಬ್ರಮಣಿಯನ್‌ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾ

    ನವದೆಹಲಿ: ಸಾಲದ ಸುಳಿಯಲ್ಲಿರುವ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಯ ಹರಾಜು ಪ್ರಕ್ರಿಯೆಯಲ್ಲಿ ಟಾಟಾ ಸನ್ಸ್‌ ಸಲ್ಲಿಸಿರುವ ಬಿಡ್‌ಗೆ ಅನುಮೋದನೆ ಸಿಕ್ಕಿರುವುದನ್ನು ಪ್ರಶ್ನಿಸಿ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರು ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ.

    18,000 ಕೋಟಿ ರೂ.ಗೆ ಟಾಟಾ ಕಂಪನಿ ಬಿಡ್‌ ಕೂಗಿದೆ. ಆದರೆ, ಏರ್‌ ಇಂಡಿಯಾ ಹೂಡಿಕೆ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಇದು ಅಸಾಂವಿಧಾನಿಕ, ಅನ್ಯಾಯ ಮತ್ತು ಟಾಟಾ ಪರವಾಗಿ ಕೆಲಸ ಮಾಡಲಾಗಿದೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ತನ್ನ ಹೆಸರನ್ನೇ ಬಿಟ್ಟು All-Time XI ಹೆಸರಿಸಿದ ಸಚಿನ್ – ಈ ಸ್ಟಾರ್ ಆಟಗಾರಿಗಿಲ್ಲ ಸ್ಥಾನ!

    ಹೂಡಿಕೆ ಹಿಂತೆಗೆದುಕೊಳ್ಳುವಿಕೆಯು ನೀತಿ ನಿರ್ಧಾರವಾಗಿದೆ. ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದಿಲ್ಲ. ರಾಷ್ಟ್ರೀಯ ವಿಮಾನಯಾನ ಸಂಸ್ಥೆಯು ಪ್ರತಿದಿನ ಸಾವಿರಾರು ಕೋಟಿಯಷ್ಟು ನಷ್ಟವನ್ನು ಅನುಭವಿಸುತ್ತಿದೆ ಎಂದು ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಕೋರ್ಟ್‌ಗೆ ತಿಳಿಸಿದ್ದರು.

     

    ಸರ್ಕಾರಿ ಸ್ವಾಮ್ಯದ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಗೆ ಟಾಟಾ ಸನ್ಸ್‌ ಸಲ್ಲಿಸಿರುವ ಬಿಡ್‌ಗೆ 2021ರ ಅಕ್ಟೋಬರ್‌ 8ರಂದು ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್‌ ಸಮಿತಿಯು ಅನುಮೋದನೆ ನೀಡಿದೆ. ಇದನ್ನು ಪ್ರಶ್ನಿಸಿ ಸುಬ್ರಮಣಿಯನ್‌ ಸ್ವಾಮಿ ಅವರು ಕೋರ್ಟ್‌ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಪ್ರಧಾನಿಗೆ ಭದ್ರತಾ ವೈಫಲ್ಯ – ಸುಪ್ರೀಂ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ, ನಾಳೆ ಮಹತ್ವದ ವಿಚಾರಣೆ

    ಅರ್ಜಿ ವಜಾಗೊಂಡಿರುವುದಕ್ಕೆ ಪ್ರತಿಕ್ರಿಯಿಸಿದ ಸುಬ್ರಮಣಿಯನ್‌ ಸ್ವಾಮಿ ಅವರು, ನಮ್ಮ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ವಜಾಗೊಳಿಸಿದೆ. ಅದರ ಆದೇಶವು ತರ್ಕಬದ್ಧವಾಗಿದೆ. ನಾವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ್ದೇವೆ ಎಂದು ಟ್ವೀಟ್‌ ಮಾಡಿದ್ದಾರೆ.

    ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷದವರೇ ಆದ ಸುಬ್ರಮಣಿಯನ್‌ ಸ್ವಾಮಿ ಅವರು, ಸರ್ಕಾರಿ ಸ್ವಾಮ್ಯದ ಸಂಸ್ಥೆಯೊಂದನ್ನು ಖಾಸಗಿ ಅವರಿಗೆ ನೀಡುವ ನಿರ್ಧಾರವನ್ನು ತೀವ್ರವಾಗಿ ಖಂಡಿಸಿದ್ದಾರೆ.

  • ಟೇಕ್ ಆಫ್ ಆಗ್ತಿದ್ದಂತೇ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

    ಟೇಕ್ ಆಫ್ ಆಗ್ತಿದ್ದಂತೇ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

    ದಿಸ್ಪುರ್: ಏರ್ ಇಂಡಿಯಾ ವಿಮಾನ ಇಂದು ಟೇಕ್ ಆಫ್ ಆದ ಕೂಡಲೇ ತುರ್ತು ಭೂಸ್ಪರ್ಶ ಮಾಡಿದ ಘಟನೆ ಅಸ್ಸಾಂನ ಸಿಲ್ಚಾರ್‌ನಲ್ಲಿ ನಡೆದಿದೆ.

    ಹಿಂಬದಿಯ ಚಕ್ರ ತಾಂತ್ರಿಕ ದೋಷದಿಂದಾಗಿ ವಿಮಾನ ಟೇಕ್ ಆಫ್ ಆದ ಕೂಡಲೇ ಸಿಲ್ಚಾರ್ ಕುಂಭಿಗ್ರಾಮ್ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿದೆ. ಈ ವಿಮಾನದಲ್ಲಿ ಪ್ರಯಾಣಿಕರು ತುಂಬಿದ್ದು, ಯಾರಿಗೂ ಯಾವುದೇ ಪ್ರಾಣಾಪಾಯವಾಗಿಲ್ಲ. ಇದನ್ನೂ ಓದಿ: ಮೃಗಾಲಯದ 4 ಸಿಂಹಗಳಿಗೆ ಕೊರೊನಾ ಪಾಸಿಟಿವ್

    ಈ ವಿಮಾನವು ಸಿಲ್ಚಾರ್‌ನಿಂದ ಕೋಲ್ಕತ್ತಾಗೆ ಹೋಗುತ್ತಿದ್ದು, ವಿಮಾನದಲ್ಲಿ ದೋಷ ಕಂಡು ಬಂದ ಕೂಡಲೇ ಇಂದು ಬೆಳಗ್ಗೆ ಸಿಲ್ಚಾರ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಈ ರೀತಿಯ ಘಟನೆ ಇದೇ ಮೊದಲೇನೂ ಅಲ್ಲ. ಹಿಂದೆ ಇದೇ ವರ್ಷ ಜುಲೈನಲ್ಲಿ ಸೌದಿ ಅರೇಬಿಯಾಗೆ ಪ್ರಯಾಣ ಬೆಳೆಸುತ್ತಿದ್ದ ವಿಮಾನದ ವಿಂಡ್‍ಶೀಲ್ಡ್ ನಲ್ಲಿ ಬಿರುಕು ಕಾಣಿಸಿಕೊಂಡ ಕಾರಣ, ತಿರುವನಂತಪುರಂನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು.

    ಏರ್ ಇಂಡಿಯಾ ಎಕ್ಸ್ ಪ್ರೆಸ್ ವಕ್ತಾರರ ಪ್ರಕಾರ, ದಮ್ಮಾಮ್‍ಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಐಎಕ್ಸ್-1581ನಲ್ಲಿ ಪೈಲಟ್ ವಿಂಡ್‌ಶೀಲ್ಡ್ ನಲ್ಲಿ ಬಿರುಕು ಕಂಡು ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ. ಈ ವಿಮಾನವನ್ನು ಸುಮಾರು ಒಂದು ಗಂಟೆಗಳ ಕಾಲ ಹಾರಾಟ ಮಾಡಿ, ನಂತರ ಮುನ್ನೆಚ್ಚರಿಕೆಯಾಗಿ ಲ್ಯಾಂಡ್ ಮಾಡಲಾಯಿತು ಎಂದು ತಿಳಿಸಿದರು. ಇದನ್ನೂ ಓದಿ: ಚಳ್ಳಕೆರೆಮ್ಮ ದೇಗುಲಕ್ಕೆ ಕನ್ನ- ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

    AIR INDIA

    ಅದು ಅಲ್ಲದೇ ಈ ವಿಮಾನದಲ್ಲಿ ಯಾವ ಪ್ರಯಾಣಿಕರು ಇರಲಿಲ್ಲ. ಬದಲಾಗಿ ಸರಕು ಮತ್ತು ಸಿಬ್ಬಂದಿ ಮಾತ್ರ ಇದ್ದರು. ಈ ಹಿನ್ನೆಲೆ ಯಾರಿಗೂ ಯಾವುದೇ ರೀತಿ ಅಪಾಯವಾಗದೆ, ವಿಮಾನದಲ್ಲಿ ದೋಷ ಕಂಡ ತಕ್ಷಣ ದಮ್ಮಾಮ್‍ನಿಂದ ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಿ, ಕಾರ್ಯಾಚರಣೆಗೆ ನಿಗದಿಪಡಿಸಲಾಯಿತು.

  • ಏರ್ ಇಂಡಿಯಾ ನೌಕರರನ್ನು ಕನಿಷ್ಠ ಒಂದು ವರ್ಷ ಟಾಟಾ ಕಂಪನಿ ಮುಂದುವರಿಸಬೇಕು: ಕೇಂದ್ರ ಸರ್ಕಾರ

    ಏರ್ ಇಂಡಿಯಾ ನೌಕರರನ್ನು ಕನಿಷ್ಠ ಒಂದು ವರ್ಷ ಟಾಟಾ ಕಂಪನಿ ಮುಂದುವರಿಸಬೇಕು: ಕೇಂದ್ರ ಸರ್ಕಾರ

    ಮುಂಬೈ: ಕೇಂದ್ರ ಸರ್ಕಾರದ ಏರ್ ಇಂಡಿಯಾ ಖಾಸಗೀಕರಣಗೊಳಿಸುವ ಬಿಡ್ ಗೆದ್ದ ಟಾಟಾ ಸನ್ಸ್ ಗೆ ಕೇಂದ್ರ ಸರ್ಕಾರ ಒಂದು ಷರತ್ತು ವಿಧಿಸಿದೆ. ಟಾಟಾ ಕಂಪನಿ ಕನಿಷ್ಠ ಒಂದು ವರ್ಷದವರೆಗೆ ಈಗಿರುವ ಏರ್ ಇಂಡಿಯಾದ ನೌಕರರನ್ನು ಸೇವೆಯಲ್ಲಿ ಮುಂದುವರಿಸಬೇಕೆಂದು ಸ್ಪಷ್ಟಪಡಿಸಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ವಿಮಾನಯಾನ ಸಚಿವಾಲಯ ಕಾರ್ಯದರ್ಶಿ ರಾಜೀವ್ ಬನ್ಸಲ್, ಏರ್ ಇಂಡಿಯಾದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಲ್ಲಾ ನೌಕರರ ಹಿತಾಸಕ್ತಿಗಳನ್ನು ಪರಿಗಣಿಸಿ, ಬಿಡ್ಡಿಂಗ್ ನಲ್ಲಿ ಗೆದ್ದಿರುವ ಟಾಟಾ ಗ್ರೂಪ್ ನೌಕರರನ್ನು ಒಂದು ವರ್ಷ ಮುಂದುವರಿಸಬೇಕು. ಯಾವುದೇ ಕಾರಣಕ್ಕೂ ತೆಗೆದು ಹಾಕುವಂತಿಲ್ಲ. ಜೊತೆಗೆ ಒಂದು ವರ್ಷ ನಂತರ ಸಂಸ್ಥೆ ಸೇವೆಯಿಂದ ತೆಗೆದುಹಾಕುವ ನೌಕರರಿಗೆ ವಿಆರ್‍ಎಸ್ ಸೌಲಭ್ಯವನ್ನು ನೀಡಬೇಕೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಏರ್ ಇಂಡಿಯಾ ಬಿಡ್ ಗೆದ್ದ ಟಾಟಾ – ಮಾತೃ ಸಂಸ್ಥೆಗೆ ಮಾರಾಟ

    ಈ ಹಿಂದೆ ಏರ್ ಇಂಡಿಯಾದಲ್ಲಿ ಒಟ್ಟು 8 ಸಾವಿರಕ್ಕೂ ಅಧಿಕ ಖಾಯಂ ಮತ್ತು 4 ಸಾವಿರಕ್ಕೂ ಹೆಚ್ಚು ಗುತ್ತಿಗೆ ಸಿಬ್ಬಂದಿಯನ್ನು ಒಳಗೊಂಡು ಒಟ್ಟು 12 ಸಾವಿರಕ್ಕೂ ಅಧಿಕ ಉದ್ಯೋಗಿಗಳಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ಸುಮಾರು 5 ಸಾವಿರ ಉದ್ಯೋಗಿಗಳು ಸಂಸ್ಥೆಯಿಂದ ನಿವೃತ್ತರಾಗಲಿದ್ದಾರೆ. ನೌಕರರ ನಿವೃತ್ತಿಯ ನಿಯಮಗಳ ಪ್ರಕಾರ ವೈದ್ಯಕೀಯ ಪ್ರಯೋಜನಗಳನ್ನು ಪಡೆಯಬಹುದಾಗಿದ್ದು, ಸುಮಾರು 55 ಸಾವಿರ ನಿವೃತ್ತ ಸಿಬ್ಬಂದಿ ಏರ್ ಇಂಡಿಯಾದಿಂದ ಕೆಲ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

    ಕೆಲದಿನಗಳ ಹಿಂದೆ ಟಾಟಾ ಕಂಪನಿ ಏರ್ ಇಂಡಿಯಾ ಬಿಡ್ ಗೆದ್ದ ಬಳಿಕ ಏರ್ ಇಂಡಿಯಾ ನೌಕರರ ಒಕ್ಕೂಟ, ನೌಕರರ ನಿವೃತ್ತಿ ಮತ್ತು ಸರ್ಕಾರದಿಂದ ಸಿಗುವ ಇತರ ಸೌಲಭ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು ಇದೀಗ ಸರ್ಕಾರ ಈ ಬಗ್ಗೆ ಸ್ಪಷ್ಟ ನಿಲುವನ್ನು ತೆಗೆದುಕೊಂಡಿದೆ. ಇದನ್ನೂ ಓದಿ: ಮತ್ತೆ ʼಮಹಾರಾಜʼನಾದ ಟಾಟಾ – Welcome Back ಏರ್‌ ಇಂಡಿಯಾ ಎಂದ ರತನ್‌ ಟಾಟಾ

    ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ (ಡಿಐಪಿಎಎಂ) ಕಾರ್ಯದರ್ಶಿ ತುಹಿನ್‌ ಕಾಂತಾ, ಟಾಟಾ ಸಮೂಹ  ಒಟ್ಟು 18 ಸಾವಿರ ಕೋಟಿ ರೂ. ಬಿಡ್‌ ಮಾಡಿತ್ತು. ಡಿ.10ರ ವೇಳೆ ಸಂಪೂರ್ಣವಾಗಿ ಏರ್‌ ಇಂಡಿಯಾವನ್ನು ಹಸ್ತಾಂತರ ಮಾಡಲಾಗುವುದು ಎಂದು ತಿಳಿಸಿದ್ದಾರೆ.

     

  • ಮತ್ತೆ ʼಮಹಾರಾಜʼನಾದ ಟಾಟಾ – Welcome Back ಏರ್‌ ಇಂಡಿಯಾ ಎಂದ ರತನ್‌ ಟಾಟಾ

    ಮತ್ತೆ ʼಮಹಾರಾಜʼನಾದ ಟಾಟಾ – Welcome Back ಏರ್‌ ಇಂಡಿಯಾ ಎಂದ ರತನ್‌ ಟಾಟಾ

    ನವದೆಹಲಿ: ನಷ್ಟದ ಸುಳಿಯಲ್ಲಿ ಸಿಲುಕಿರುವ ʼಮಹಾರಾಜʼನನ್ನು ಟಾಟಾ ಸನ್ಸ್‌ ಖರೀದಿಸಿದೆ. ʼಮಹಾರಾಜ’ ಲಾಂಛನದಿಂದ ಗುರುತಿಸಿಕೊಂಡಿರುವ ಏರ್‌ ಇಂಡಿಯಾ ಖಾಸಗೀಕರಣಗೊಳಿಸುವ ಬಿಡ್ ಅನ್ನು ಟಾಟಾ ಸನ್ಸ್ ಗೆದ್ದುಕೊಂಡಿದೆ.

    ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆ (ಡಿಐಪಿಎಎಂ) ಕಾರ್ಯದರ್ಶಿ ತುಹಿನ್‌ ಕಾಂತಾ, ಟಾಟಾ ಸಮೂಹ  ಒಟ್ಟು 18 ಸಾವಿರ ಕೋಟಿ ರೂ. ಬಿಡ್‌ ಮಾಡಿತ್ತು. ಡಿ.10ರ ವೇಳೆ ಸಂಪೂರ್ಣವಾಗಿ ಏರ್‌ ಇಂಡಿಯಾವನ್ನು ಹಸ್ತಾಂತರ ಮಾಡಲಾಗುವುದು ಎಂದು ತಿಳಿಸಿದ್ದಾರೆ.

    ಮೊದಲ ವರ್ಷ ಎಲ್ಲ ಉದ್ಯೋಗಿಗಳು ಏರ್‌ ಇಂಡಿಯಾದಲ್ಲಿ ಇರಲಿದ್ದಾರೆ. ಅವರನ್ನು ಯಾವುದೇ ಕಾರಣಕ್ಕೂ ತೆಗೆಯುವುದಿಲ್ಲ. ಒಂದು ವರ್ಷದ ನಂತರ ಟಾಟಾ ಸಮೂಹವು ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ಯೋಜನೆಯನ್ನು ನೀಡಲು ಅವಕಾಶವನ್ನು ಹೊಂದಿರುತ್ತದೆ.

    ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ತಿಳಿಸುತ್ತಿದ್ದಂತೆ ಟಾಟಾ ಕಂಪನಿಯ ಮುಖ್ಯಸ್ಥ ರತನ್‌ ಟಾಟಾ Welcome back ಏರ್‌ ಇಂಡಿಯಾ ಎಂದು ಬರೆದು ವಿಮಾನ ಮತ್ತು ಮನೆಯ ಇಮೋಜಿ ಹಾಕಿ ಟ್ವೀಟ್‌ ಮಾಡಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

    https://twitter.com/RNTata2000/status/1446431109122650118

    ಏರ್ ಇಂಡಿಯಾ ಖಾಸಗೀಕರಣಗೊಳಿಸುವ ಪ್ರಕ್ರಿಯೆಯ ಬಿಡ್‍ನಲ್ಲಿ ಕೊನೆಯಲ್ಲಿ ಅಜಯ್ ಸಿಂಗ್ ಅವರ ಸ್ಪೈಸ್ ಜೆಟ್ ಕಂಪನಿ ಮತ್ತು ಟಾಟಾ ಸನ್ಸ್ ಇತ್ತು. ಕೇಂದ್ರ ಸರ್ಕಾರ ಬಿಡ್‍ಗೆ 15-20 ಸಾವಿರ ಕೋಟಿ ರೂ. ಹಣವನ್ನು ಮೂಲ ಬೆಲೆಯಾಗಿ ಇಟ್ಟಿತ್ತು ಎಂದು ವರದಿಯಾಗಿತ್ತು. ಟಾಟಾ ಕಂಪನಿ ಸ್ಪೈಸ್ ಜೆಟ್‍ಗಿಂತಲೂ 5 ಸಾವಿರ ಕೋಟಿ ಹೆಚ್ಚು ಬಿಡ್ ಮಾಡಿತ್ತು ಎಂದು ವರದಿಯಾಗಿತ್ತು.

    2007ರಲ್ಲಿ ಇಂಡಿಯನ್ ಏರ್‌ಲೈನ್ಸ್‌ ವಿಲೀನದ ಬಳಿಕ ಏರ್ ಇಂಡಿಯಾ ನಷ್ಟವನ್ನು ಅನುಭವಿಸುತ್ತಿದ್ದು ಆಗಸ್ಟ್‌ 2021ರ ವೇಳೆಗೆ 61,562 ಕೋಟಿ ರೂ. ನಷ್ಟದಲ್ಲಿತ್ತು. ಏರ್ ಇಂಡಿಯಾ ಸೇವೆಯಿಂದ ಪ್ರತಿದಿನ ಕೇಂದ್ರ ಸರ್ಕಾರಕ್ಕೆ 20 ಕೋಟಿ ರೂ. ನಷ್ಟವಾಗುತ್ತಿದೆ. ಖರೀದಿಯ ಬಳಿಕ ಟಾಟಾಗೆ 4,400 ದೇಶೀಯ ಮತ್ತು 1,800 ಅಂತರಾಷ್ಟ್ರೀಯ ಲ್ಯಾಂಡಿಂಗ್ ಸಿಗಲಿದೆ.

    2019ರ ಲೋಕಸಭಾ ಚುನಾವಣೆಗೂ ಮೊದಲೇ ಏರ್ ಇಂಡಿಯಾವನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿತ್ತು. ಆದರೆ ಏರ್‌ ಇಂಡಿಯಾ ಮಾರಾಟ ಮಾಡುವ ಕೇಂದ್ರ ಸರ್ಕಾರದ ಮೊದಲ ಪ್ರಯತ್ನ ವಿಫಲವಾಗಿತ್ತು. 2018ರಲ್ಲಿ ಕೇಂದ್ರ ಸರ್ಕಾರ ಬಿಡ್‌ ಆಹ್ವಾನಿಸಿತ್ತು. ಆದರೆ ಯಾರೂ ಖರೀದಿಗೆ ಆಸಕ್ತಿ ತೋರಿಸಲಿಲ್ಲ. ಈ ಸಂದರ್ಭದಲ್ಲಿ ಶೇ.76 ರಷ್ಟು ಪಾಲು ಮಾರಾಟ ಮಾಡುವುದರ ಜೊತೆಗೆ ಸಾಲವನ್ನು ಪಾವತಿಸಬೇಕೆಂಬ ಷರತ್ತು ವಿಧಿಸಲಾಗಿತ್ತು. ಇದನ್ನೂ ಓದಿ: ಕೆಜಿಎಫ್ 2 ಚಿತ್ರೀಕರಣದ ಫೋಟೋ ವೈರಲ್

    ಎರಡನೇ ಬಾರಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್ ಪ್ರೆಸ್ ಶೇ.100 ರಷ್ಟು ಖಾಸಗೀಕರಣಕ್ಕೆ ಮುಂದಾಗಿತ್ತು. ಈ ಮಧ್ಯೆ ಕೋವಿಡ್ ಕಾರಣದಿಂದ ಬಿಡ್ ಪ್ರಕ್ರಿಯೆ ವಿಳಂಬವಾಗಿತ್ತು. 2018ರ ಬಿಡ್ಡಿಂಗ್ ಪ್ರಕ್ರಿಯೆ ಸಮಯದಲ್ಲಿ ನಷ್ಟದಲ್ಲಿರುವ ಏರ್ ಇಂಡಿಯಾವನ್ನು ಖರೀದಿಸಿ ಲಾಭ ಆಗುತ್ತದೆ ಎಂಬ ನಿರೀಕ್ಷೆ ಇಲ್ಲ ಎಂದು ಇಂಡಿಗೋ ಹೇಳಿತ್ತು.

    ವಿಶೇಷ ಏನೆಂದರೆ 89 ವರ್ಷದ ಹಿಂದೆ ಟಾಟಾ ಕಂಪನಿಯೇ ಏರ್‌ ಇಂಡಿಯಾ ಕಂಪನಿಯನ್ನು ಆರಂಭಿಸಿತ್ತು. 1932ರಲ್ಲಿ ಜೆ.ಆರ್.ಡಿ ಟಾಟಾ ಏರ್ ಇಂಡಿಯಾವನ್ನು ಸ್ಥಾಪಿಸಿದ್ದರು. 1932ರಲ್ಲಿ ಟಾಟಾ ಏರ್‌ಲೈನ್ಸ್‌ ಹೆಸರಿನಲ್ಲಿ ಆರಂಭಗೊಂಡ ಕಂಪನಿ ಬಳಿಕ 1946ರಲ್ಲಿ ಏರ್‌ ಇಂಡಿಯಾ ಕಂಪನಿಯಾಗಿ ಬದಲಾಗಿತ್ತು. ಸ್ವಾತಂತ್ರ್ಯ ಸಿಕ್ಕಿದ ಬಳಿಕ 1953ರಲ್ಲಿ ಏರ್ ಇಂಡಿಯಾವನ್ನು ರಾಷ್ಟ್ರೀಕರಣಗೊಳಿಸಲಾಗಿತ್ತು. ಈಗಾಗಲೇ ಭಾರತದಲ್ಲಿ ಟಾಟಾ ಸನ್ಸ್ ಮತ್ತು ಸಿಂಗಾಪುರ ಏರ್‌ಲೈನ್ಸ್‌ ಜೊತೆಯಾಗಿ ವಿಸ್ತಾರಾ ಏರ್ ಲೈನ್ಸ್ ಸೇವೆ ನೀಡುತ್ತಿದೆ.

  • ಏರ್ ಇಂಡಿಯಾ ಬಿಡ್ ಗೆದ್ದ ಟಾಟಾ – ಮಾತೃ ಸಂಸ್ಥೆಗೆ ಮಾರಾಟ

    ಏರ್ ಇಂಡಿಯಾ ಬಿಡ್ ಗೆದ್ದ ಟಾಟಾ – ಮಾತೃ ಸಂಸ್ಥೆಗೆ ಮಾರಾಟ

    ನವದೆಹಲಿ: ಏರ್ ಇಂಡಿಯಾ ಟಾಟಾ ತೆಕ್ಕೆಗೆ ಮರಳಿದೆ. ಕೇಂದ್ರ ಸರ್ಕಾರದ ಏರ್ ಇಂಡಿಯಾ ಖಾಸಗೀಕರಣಗೊಳಿಸುವ ಬಿಡ್ ಅನ್ನು ಟಾಟಾ ಸನ್ಸ್ ಗೆದ್ದುಕೊಂಡಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಬಸ್, ಟ್ರಕ್ ಮಧ್ಯೆ ಭೀಕರ ಅಪಘಾತಕ್ಕೆ 7 ಬಲಿ – 14 ಮಂದಿ ಗಂಭೀರ

    ಈ ವಿಚಾರದ ಬಗ್ಗೆ ಟಾಟಾ ಕಂಪನಿಯ ವಕ್ತಾರರು ಮತ್ತು ಹಣಕಾಸು ಸಚಿವಾಲಯ ಅಧಿಕೃತವಾಗಿ ತಿಳಿಸಿಲ್ಲ. ಏರ್ ಇಂಡಿಯಾ ಖಾಸಗೀಕರಣಗೊಳಿಸುವ ಪ್ರಕ್ರಿಯೆಯ ಬಿಡ್‍ನಲ್ಲಿ ಕೊನೆಯಲ್ಲಿ ಅಜಯ್ ಸಿಂಗ್ ಅವರ ಸ್ಪೈಸ್ ಜೆಟ್ ಕಂಪನಿ ಮತ್ತು ಟಾಟಾ ಸನ್ಸ್ ಇತ್ತು.

    ಕೇಂದ್ರ ಸರ್ಕಾರ ಬಿಡ್‍ಗೆ 15-20 ಸಾವಿರ ಕೋಟಿ ರೂ. ಹಣವನ್ನು ಮೂಲ ಬೆಲೆಯಾಗಿ ಇಟ್ಟಿತ್ತು ಎಂದು ವರದಿಯಾಗಿತ್ತು. ಟಾಟಾ ಕಂಪನಿ ಮೂಲ ಬೆಲೆಗಿಂತಲೂ 3 ಸಾವಿರ ಕೋಟಿ ಮತ್ತು ಸ್ಪೈಸ್ ಜೆಟ್‍ಗಿಂತಲೂ 5 ಸಾವಿರ ಕೋಟಿ ಹೆಚ್ಚು ಬಿಡ್ ಮಾಡಿತ್ತು ಎಂದು ವರದಿಯಾಗಿದೆ. ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಮಿತಿ ಶೀಘ್ರವೇ ಬಿಡ್ ಅಂತಿಮಗೊಳಿಸಿ ಕೆಲ ದಿನಗಳಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಮಾಂಜ್ರಾ ನದಿಗೆ ಮತ್ತೆ ಭಾರೀ ಪ್ರಮಾಣದ ನೀರು ಬಿಡುಗಡೆ- ಮಹಾ ನೆರೆಯ ಭೀತಿ 

    2007ರಲ್ಲಿ ಇಂಡಿಯನ್ ಏರ್‍ಲೈನ್ಸ್ ವಿಲೀನದ ಬಳಿಕ ಏರ್ ಇಂಡಿಯಾ ನಷ್ಟವನ್ನು ಅನುಭವಿಸುತ್ತಿದ್ದು 90 ಸಾವಿರ ಕೋಟಿಗೂ ಅಧಿಕ ಸಾಲದ ಸುಳಿಯಲ್ಲಿದೆ. ಏರ್ ಇಂಡಿಯಾ ಸೇವೆಯಿಂದ ಪ್ರತಿದಿನ ಕೇಂದ್ರ ಸರ್ಕಾರಕ್ಕೆ 20 ಕೋಟಿ ರೂ. ನಷ್ಟವಾಗುತ್ತಿದೆ. ಮುಂದಿನ 4 ತಿಂಗಳಿನಲ್ಲಿ ಏರ್ ಇಂಡಿಯಾವನ್ನು ಪೂರ್ಣವಾಗಿ ಟಾಟಾ ಕಂಪನಿಗೆ ಸರ್ಕಾರ ಹಸ್ತಾಂತರಿಸಲಿದೆ. ಖರೀದಿಯ ಬಳಿಕ ಟಾಟಾಗೆ 4,400 ದೇಶೀಯ ಮತ್ತು 1,800 ಅಂತರಾಷ್ಟ್ರೀಯ ಲ್ಯಾಂಡಿಂಗ್ ಸಿಗಲಿದೆ.

    2019ರ ಲೋಕಸಭಾ ಚುನಾವಣೆಗೂ ಮೊದಲೇ ಏರ್ ಇಂಡಿಯಾವನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿತ್ತು. ಆದರೆ ಶೇ.76 ರಷ್ಟು ಷೇರನ್ನು ಮಾರಾಟ ಮಾಡಿ ಶೇ.24 ರಷ್ಟು ಷೇರನ್ನು ತನ್ನ ಬಳಿ ಇಡುವ ಕೇಂದ್ರದ ಪ್ರಸ್ತಾಪಕ್ಕೆ ಬಿಡ್ ಮಾಡಲು ಯಾರೂ ಆಸಕ್ತಿ ತೋರಿಸಿರಲಿಲ್ಲ. ಇದನ್ನೂ ಓದಿ: ಗುದನಾಳದಲ್ಲಿ 42 ಲಕ್ಷ ಬೆಲೆ ಬಾಳುವ ಚಿನ್ನದ ಪೇಸ್ಟ್- ವ್ಯಕ್ತಿ ವಶಕ್ಕೆ

    ಎರಡನೇ ಬಾರಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್ ಪ್ರೆಸ್ ಶೇ.100 ರಷ್ಟು ಖಾಸಗೀಕರಣಕ್ಕೆ ಮುಂದಾಗಿತ್ತು. ಈ ಮಧ್ಯೆ ಕೋವಿಡ್ ಕಾರಣದಿಂದ ಬಿಡ್ ಪ್ರಕ್ರಿಯೆ ವಿಳಂಬವಾಗಿತ್ತು. 2018ರ ಬಿಡ್ಡಿಂಗ್ ಪ್ರಕ್ರಿಯೆ ಸಮಯದಲ್ಲಿ ನಷ್ಟದಲ್ಲಿರುವ ಏರ್ ಇಂಡಿಯಾವನ್ನು ಖರೀದಿಸಿ ಲಾಭ ಆಗುತ್ತದೆ ಎಂಬ ನಿರೀಕ್ಷೆ ಇಲ್ಲ ಎಂದು ಇಂಡಿಗೋ ಹೇಳಿತ್ತು.

    1932ರಲ್ಲಿ ಜೆ.ಆರ್.ಡಿ ಟಾಟಾ ಏರ್ ಇಂಡಿಯಾವನ್ನು ಸ್ಥಾಪಿಸಿದ್ದರು. ಸ್ವಾತಂತ್ರ್ಯ ಸಿಕ್ಕಿದ ಬಳಿಕ 1947ರಲ್ಲಿ ಏರ್ ಇಂಡಿಯಾವನ್ನು ರಾಷ್ಟ್ರೀಕರಣಗೊಳಿಸಲಾಗಿತ್ತು. ಈಗಾಗಲೇ ಭಾರತದಲ್ಲಿ ಟಾಟಾ ಸನ್ಸ್ ಮತ್ತು ಸಿಂಗಾಪುರ ಏರ್‍ಲೈನ್ಸ್ ಜೊತೆಯಾಗಿ ವಿಸ್ತಾರಾ ಏರ್ ಲೈನ್ಸ್ ಸೇವೆ ನೀಡುತ್ತಿದೆ.

  • ಮೂರು ಗಂಟೆ ರನ್‍ವೇನಲ್ಲೇ ನಿಂತ ವಿಮಾನ- ಪ್ರಯಾಣಿಕರು ಕಂಗಾಲು

    ಮೂರು ಗಂಟೆ ರನ್‍ವೇನಲ್ಲೇ ನಿಂತ ವಿಮಾನ- ಪ್ರಯಾಣಿಕರು ಕಂಗಾಲು

    ಬೆಂಗಳೂರು: ದೆಹಲಿಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷದಿಂದ ಹಾರಾಟ ಮಾಡಲಾಗದೇ 3 ಗಂಟೆಗಳ ಕಾಲ ರನ್‍ವೇನಲ್ಲೇ ಲಾಕ್ ಆದ ಘಟನೆ ಇಂದು ನಡೆದಿದೆ.

    ಬೆಂಗಳೂರಿನಿಂದ ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹೊರಡಬೇಕಿದ್ದ ಏರ್ ಇಂಡಿಯಾ ವಿಮಾನ ಬೆಳಗ್ಗೆ 10.35 ಗಂಟೆಯಿಂದ 1.30 ಗಂಟೆವರೆಗೆ ರನ್‍ವೇನಲ್ಲೇ ನಿಂತಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಕಾರಣ ಹಾರಾಟ ಮಾಡಲಾಗದೆ. ವಿಮಾನ ರನ್‍ವೇನಲ್ಲೆ ಲಾಕ್ ಆಗಿ ವಿಮಾನದಲ್ಲಿದ್ದ ಪ್ರಯಾಣಿಕರು ಆತಂಕಕ್ಕೆ ಒಳಗಾಗಿದ್ದರು. ಇದನ್ನೂ ಓದಿ: ರಾತ್ರೋರಾತ್ರಿ ವ್ಹೀಲಿಂಗ್ ಮಾಡುತ್ತಾ ಯುವಕರ ಪುಂಡಾಟ-ನೆಲಮಂಗಲ ಫ್ಲೈಓವರ್‌ನಲ್ಲಿ ಮೋಜು ಮಸ್ತಿ

    ಪ್ರಯಾಣಿಕರು ವಿಮಾನದಲ್ಲಿನ ತಾಂತ್ರೀಕ ದೋಷದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಂತರ ಡಿಜಿಸಿಐ ಪ್ರಯಾಣಿಕರನ್ನು ವಿಮಾನದಿಂದ ಇಳಿಸಲು ಅನುಮತಿ ಸಿಕ್ಕ ಬಳಿಕ ಬಸ್ ಮೂಲಕ ರನ್‍ವೇಯಿಂದ ಪ್ರಯಾಣಿಕರನ್ನು ವಾಪಸ್ ಕರೆತರಲಾಯಿತು. ಈ ಸಮಸ್ಯೆ 3 ಗಂಟೆ ಬಳಿಕ ಪರಿಹಾರ ಕಂಡಿತು. ಬಳಿಕ ದೆಹಲಿಗೆ ತೆರಳಲು ಸಂಜೆ 5.15ಕ್ಕೆ ಪರ್ಯಾಯ ವಿಮಾನ ವ್ಯವಸ್ಥೆ ಮಾಡಿಕೊಡಲಾಗಿದೆ. ಇದನ್ನೂ ಓದಿ: ದಳ ತೊರೆದು ಕೈ ಹಿಡಿಯಲು ನಿರ್ಧರಿಸಿದ ಕೋಲಾರ ಶಾಸಕ ಶ್ರೀನಿವಾಸಗೌಡ

  • 1 ವರ್ಷದ ಬಳಿಕ ಕೇರಳ ವಿಮಾನ ದುರಂತಕ್ಕೆ ಕಾರಣ ಸಿಕ್ತು- ತನಿಖಾ ವರದಿಯಲ್ಲಿ ಏನಿದೆ?

    1 ವರ್ಷದ ಬಳಿಕ ಕೇರಳ ವಿಮಾನ ದುರಂತಕ್ಕೆ ಕಾರಣ ಸಿಕ್ತು- ತನಿಖಾ ವರದಿಯಲ್ಲಿ ಏನಿದೆ?

    ನವದೆಹಲಿ: ಪೈಲಟ್ ಮಾರ್ಗಸೂಚಿಯನ್ನು ಸರಿಯಾಗಿ ಪಾಲನೆ ಮಾಡದ ಕಾರಣ ಕೇರಳದ ಕೋಯಿಕ್ಕೋಡ್‍ನಲ್ಲಿ ವಿಮಾನ ದುರಂತ ಸಂಭವಿಸಿದೆ ಎಂದು ವಿಮಾನ ಅಪಘಾತ ತನಿಖಾ ಬ್ಯೂರೋ(ಎಎಐಬಿ) ಹೇಳಿದೆ.

    ನಾಗರಿಕ ವಿಮಾನಯಾನ ಸಚಿವಾಲಯದ ವಿಭಾಗವಾದ ಎಎಐಬಿ 257 ಪುಟಗಳ ವರದಿಯನ್ನು ಶನಿವಾರ ಸರ್ಕಾರಕ್ಕೆ ಸಲ್ಲಿಸಿದೆ. ವರದಿಯಲ್ಲಿ ವಿಮಾನವನ್ನು ಚಲಾಯಿಸುತ್ತಿದ್ದ ಪೈಲಟ್ ಲ್ಯಾಂಡಿಂಗ್ ವೇಳೆ ಪಾಲಿಸ ಬೇಕಾದ ಮಾರ್ಗಸೂಚಿಯನ್ನು ಸರಿಯಾಗಿ ಪಾಲನೆ ಮಾಡಲಿಲ್ಲ ಎಂದು ಹೇಳಿದೆ.

    ಟೇಬಲ್ ಟಾಪ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ಸಮಯದಲ್ಲಿ ಭಾರೀ ಮಳೆ ಬರುತ್ತಿತ್ತು. ಇದರಿಂದಾಗಿ ಪೈಲಟ್‍ಗೆ ರನ್‍ವೇ ಸರಿಯಾಗಿ ಗೋಚರಿಸಲಿಲ್ಲ. ಈ ವೇಳೆ ‘ಗೋ ಅರೌಂಡ್’ ಎಂಬ ಸಂದೇಶವನ್ನು ಏರ್ ಟ್ರಾಫಿಕ್ ಕಂಟ್ರೋಲ್(ಎಟಿಸಿ) ರೂಮಿಗೆ ಕಳುಹಿಸಿದ ಬಳಿಕವೂ ಪೈಲಟ್ ಟಚ್‍ಡೌನ್ ವಲಯವನ್ನು ದಾಟಿ ರನ್‍ವೇಯ ಅರ್ಧ ದೂರದಲ್ಲಿ ಲ್ಯಾಂಡ್ ಮಾಡಿದ್ದಾರೆ. ಇದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಿದೆ. ಇದನ್ನೂ ಓದಿ: ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಹೇಗೆ ಕೆಲಸ ಮಾಡುತ್ತೆ? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

    ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲು ಸಾಧ್ಯವಾಗುವುದಿಲ್ಲ ಎಂದು ಪೈಲಟ್‍ಗೆ ಅನಿಸಿದಾಗ ಗೋ ಅರೌಂಡ್ ಸಂದೇಶವನ್ನು ಕಳುಹಿಸುತ್ತಾರೆ. ಈ ಸಂದೇಶ ಬಂದ ಕೂಡಲೇ ವಿಮಾನ ಲ್ಯಾಂಡ್ ಮಾಡಲು ಪೈಲಟ್‍ಗೆ ಸಾಧ್ಯವಾಗುವುದಿಲ್ಲ ಎನ್ನುವುದು ಎಟಿಸಿಯಲ್ಲಿ ಕಾರ್ಯನಿರ್ವಹಣೆ ಮಾಡುವವರಿಗೆ ತಿಳಿಯುತ್ತದೆ. ಕೂಡಲೇ ಅವರು ಹತ್ತಿರದಲ್ಲೇ ಎಲ್ಲಿ ಲ್ಯಾಂಡಿಂಗ್ ಮಾಡಬಹುದು ಎಂಬುದರ ಬಗ್ಗೆ ಮಾಹಿತಿ ನೀಡುತ್ತಾರೆ.

    ವಿಮಾನದ ಗಾಜಿನ ವೈಪರ್ ದೋಷಪೂರಿತವಾಗಿತ್ತು. ಪ್ರತಿಕೂಲ ಹವಾಮಾನದಿಂದ ಲ್ಯಾಂಡಿಂಗ್ ಮಾಡುವುದು ಕಷ್ಟ ಎನ್ನುವುದು ಪೈಲಟ್‍ಗೆ ಗೊತ್ತಿತ್ತು. ಈ ವಿಚಾರಗಳು ಪೈಲಟ್‍ಗೆ ಮೊದಲೇ ಗೊತ್ತಿತ್ತು.  ಆದರೂ ಪೈಲಟ್ ಟಚ್‍ಡೌನ್ ವಲಯ(ವಿಮಾನದ ಚಕ್ರಗಳು ಮೊದಲು ರನ್‍ವೇಯನ್ನು ಸ್ಪರ್ಶಿಸುವ ಸ್ಥಳ) ದಾಟಿ ಅರ್ಧ ದೂರಲ್ಲಿ ಲ್ಯಾಂಡಿಂಗ್ ಮಾಡಿದ್ದಾರೆ. ಇದರಿಂದಾಗಿ ವಿಮಾನ ನಿಯಂತ್ರಣಕ್ಕೆ ಸಿಗದೇ ಟೇಬಲ್ ಟಾಪ್ ರನ್‍ವೇಯಿಂದ ಕೆಳಗೆ ಜಾರಿ ಬಿದ್ದಿದೆ ಎಂದು ವರದಿ ತಿಳಿಸಿದೆ. ಇದನ್ನೂ ಓದಿ: ಯುದ್ಧವಿಮಾನವನ್ನು ಹಾರಿಸಿದ್ದ ಪೈಲಟ್‌ ಸಾಠೆ 2 ಬಾರಿ ಲ್ಯಾಂಡಿಂಗ್‌ಗೆ ಪ್ರಯತ್ನಿಸಿದ್ರು

    ದುಬೈಯಿಂದ ವಂದೇ ಭಾರತ್ ಮಿಷನ್ ಅಡಿ 2020ರ ಆಗಸ್ಟ್ 7ರಂದು 184 ಪ್ರಯಾಣಿಕರನ್ನು ಹೊತ್ತುಕೊಂಡು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಕೋಯಿಕ್ಕೊಂಡಿಗೆ ಬಂದಿತ್ತು. ಈ ವೇಳೆ ರನ್‍ವೇ ಸರಿಯಾಗಿ ಕಾಣಿಸದ ಹಿನ್ನೆಲೆಯಲ್ಲಿ ವಿಮಾನ ಕೆಳಗೆ ಜಾರಿ ಬಿದ್ದ ಪರಿಣಾಮ ಇಬ್ಬರು ಪೈಲಟ್ ಸೇರಿದಂತೆ 21 ಮಂದಿ ಮೃತಪಟ್ಟಿದ್ದರು. ಇದನ್ನೂ ಓದಿ: ‘ಕೊರೊನಾ ಕುರಿತು ಹರಟೆ’- ಪಾಕ್ ವಿಮಾನ ದುರಂತಕ್ಕೆ ಪೈಲಟ್‍ಗಳ ನಿರ್ಲಕ್ಷ್ಯವೇ ಕಾರಣ

    ಏನಿದು ಟೇಬಲ್ ಟಾಪ್ ವಿಮಾನ ನಿಲ್ದಾಣ?
    ಸುತ್ತಲೂ ಆಳ ಕಣಿವೆಯಿಂದ ಕೂಡಿ, ಬೆಟ್ಟದ ತುದಿಯಲ್ಲಿ ರನ್ ವೇ ಇರುವ ನಿಲ್ದಾಣಗಳನ್ನು ಟೇಬಲ್ ಟಾಪ್ ವಿಮಾನ ನಿಲ್ದಾಣ ಎಂದು ಗುರುತಿಸಲಾಗಿದೆ. ಮಂಗಳೂರು ಹೊರತು ಪಡಿಸಿ ದೇಶದಲ್ಲಿ ಕೋಯಿಕ್ಕೋಡ್‍ ಮತ್ತು ಲೆಂಗ್‍ಪುಯಿನಲ್ಲಿ ಈ ರೀತಿಯ ವಿಮಾನ ನಿಲ್ದಾಣಗಳನ್ನು ಕಾಣಬಹುದು.

  • ನಷ್ಟದಲ್ಲಿರುವ ʼಮಹಾರಾಜʼನನ್ನು ಖರೀದಿಸಲು ಮುಂದಾದ ಟಾಟಾ ಕಂಪನಿ

    ನಷ್ಟದಲ್ಲಿರುವ ʼಮಹಾರಾಜʼನನ್ನು ಖರೀದಿಸಲು ಮುಂದಾದ ಟಾಟಾ ಕಂಪನಿ

    ನವದೆಹಲಿ: 90 ಸಾವಿರ ಕೋಟಿ ರೂ. ನಷ್ಟದ ಸುಳಿಯಲ್ಲಿ ಸಿಲುಕಿರುವ ʼಮಹಾರಾಜʼನನ್ನು ಖರೀದಿಸಲು ಟಾಟಾ ಕಂಪನಿ ಆಸಕ್ತಿ ತೋರಿಸಿದೆ.

    ʼಮಹಾರಾಜ’ ಲಾಂಛನದಿಂದ ಗುರುತಿಸಿಕೊಂಡಿರುವ ಏರ್‌ ಇಂಡಿಯಾ ಕಂಪನಿಯನ್ನು ಮಾರಾಟ ಮಾಡುವ ಸಂಬಂಧ ಕೇಂದ್ರ ಸರ್ಕಾರ ಬಿಡ್ಡಿಂಗ್‌ ಆಹ್ವಾನಿಸಿದ್ದು ಇಂದು ಸಂಜೆ 5 ಗಂಟೆಗೆ ಅವಧಿ ಮುಕ್ತಾಯವಾಗಿದೆ.

    ಈ ಬಿಡ್ಡಿಂಗ್‌ನಲ್ಲಿ ಟಾಟಾ ಕಂಪನಿ, ಏರ್‌ ಇಂಡಿಯಾ ನೌಕರರ ಒಕ್ಕೂಟ ಮತ್ತು ಅಮೆರಿಕದ ಇಂಟರ್ಅಪ್ಸ್ ಕಂಪನಿ ಖರೀದಿಸಲು ಆಸಕ್ತಿ ತೋರಿಸಿದೆ. ಕೇಂದ್ರ ಸರ್ಕಾರ ಜನವರಿ 5 ರಂದು ಬಿಡ್ಡಿಂಗ್‌ಗೆ ಅರ್ಹತೆ ಪಡೆದವರ ಹೆಸರನ್ನು ಪ್ರಕಟಿಸುವ ಸಾಧ್ಯತೆಯಿದೆ.

    ಏರ್‌ ಇಂಡಿಯಾ ಮಾರಾಟ ಮಾಡುವ ಕೇಂದ್ರ ಸರ್ಕಾರದ ಮೊದಲ ಪ್ರಯತ್ನ ವಿಫಲವಾಗಿತ್ತು. 2018ರಲ್ಲಿ ಕೇಂದ್ರ ಸರ್ಕಾರ ಬಿಡ್‌ ಆಹ್ವಾನಿಸಿತ್ತು. ಆದರೆ ಯಾರೂ ಖರೀದಿಗೆ ಆಸಕ್ತಿ ತೋರಿಸಲಿಲ್ಲ. ಈ ಸಂದರ್ಭದಲ್ಲಿ ಶೇ.76 ರಷ್ಟು ಪಾಲು ಮಾರಾಟ ಮಾಡುವುದರ ಜೊತೆಗೆ ಸಾಲವನ್ನು ಪಾವತಿಸಬೇಕೆಂಬ ಷರತ್ತು ವಿಧಿಸಲಾಗಿತ್ತು.

    ಈ ಬಾರಿ ಬಿಡ್‌ನಲ್ಲಿ ಶೇ.100 ರಷ್ಟು ಷೇರನ್ನು ಮಾರಾಟ ಮಾಡುವುದಾಗಿ ಕೇಂದ್ರ ಸರ್ಕಾರ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಕಂಪನಿಗಳು ಬಿಡ್‌ನಲ್ಲಿ ಭಾಗವಹಿಸಿ ಖರೀದಿಸಲು ಆಸಕ್ತಿ ತೋರಿಸಿವೆ.

    ಮಾಧ್ಯಮಗಳಲ್ಲಿ ಪ್ರಕಟವಾದಂತೆ ಟಾಟಾ ಗ್ರೂಪ್, ಮಲೇಷ್ಯಾದ ಏರ್ ಏಷ್ಯಾ ಗ್ರೂಪ್‌ ಜೊತೆ ಸೇರಿ ಜಂಟಿಯಾಗಿ ಬಿಡ್‌ನಲ್ಲಿ ಭಾಗವಹಿಸಿದೆ ಎಂದು ವರದಿಯಾಗಿದೆ. ಸದ್ಯ ಏರ್‌ ಏಷ್ಯಾ ಇಂಡಿಯಾದಲ್ಲಿ ಟಾಟಾ ಗ್ರೂಪ್‌ ಶೇ.49ರಷ್ಟು ಪಾಲುದಾರಿಕೆ ಹೊಂದಿದೆ. 2020-21ರ ಅಂತ್ಯದ ವೇಳೆಗೆ ಏರ್‌ಏಷ್ಯಾ ಇಂಡಿಯಾದಲ್ಲಿನ ತನ್ನ ಪಾಲನ್ನು ನಿಧಾನವಾಗಿ ಶೇ.76 ಕ್ಕಿಂತ ಹೆಚ್ಚಿಸಲು ಟಾಟಾ ಸಂಸ್ಥೆ ಯೋಚಿಸುತ್ತಿರುವ ಹಿನ್ನೆಲೆಯಲ್ಲಿ ಏರ್‌ ಇಂಡಿಯಾ ಖರೀದಿಗೆ ಆಸಕ್ತಿ ತೋರಿಸಿದೆ ಎನ್ನಲಾಗುತ್ತಿದೆ.

    ವಿಶೇಷ ಏನೆಂದರೆ 88 ವರ್ಷದ ಹಿಂದೆ ಟಾಟಾ ಕಂಪನಿಯೇ ಏರ್‌ ಇಂಡಿಯಾ ಕಂಪನಿಯನ್ನು ಆರಂಭಿಸಿತ್ತು. 1932ರಲ್ಲಿ ಟಾಟಾ ಏರ್‌ಲೈನ್ಸ್‌ ಹೆಸರಿನಲ್ಲಿ ಆರಂಭಗೊಂಡ ಕಂಪನಿ ಬಳಿಕ 1946ರಲ್ಲಿ ಏರ್‌ ಇಂಡಿಯಾ ಕಂಪನಿಯಾಗಿ ಬದಲಾಗಿತ್ತು.