Tag: air india

  • ಏರ್‌ ಇಂಡಿಯಾ ದುರಂತಕ್ಕೆ ಪೈಲಟ್ ಕಾರಣನಾ? – ಅಮೆರಿಕ ವರದಿಯಿಂದ ಗೊಂದಲ; ಪ್ರತಿಕ್ರಿಯೆಗೆ ಕೇಂದ್ರ ನಕಾರ

    ಏರ್‌ ಇಂಡಿಯಾ ದುರಂತಕ್ಕೆ ಪೈಲಟ್ ಕಾರಣನಾ? – ಅಮೆರಿಕ ವರದಿಯಿಂದ ಗೊಂದಲ; ಪ್ರತಿಕ್ರಿಯೆಗೆ ಕೇಂದ್ರ ನಕಾರ

    ಅಹ್ಮದಾಬಾದ್: ಇಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತ (Air India Plane Crash) ಹೇಗಾಯ್ತು ಅನ್ನೋ ಗೊಂದಲ ಮುಂದುವರಿದಿದೆ. ಈ ಮಧ್ಯೆ ಅಮೆರಿಕದ ವಾಲ್‌ಸ್ಟ್ರೀಟ್‌ ಜರ್ನಲ್, 260 ಜನರ ಸಾವಿಗೆ ಕಾರಣವಾದ ಅಂಶ ವರದಿ ಮಾಡಿದೆ.

    ಟೇಕಾಫ್ ಆಗಿದ್ದ ವಿಮಾನದ ಇಂಧನ ಕಟ್ ಆಗಿದ್ದೇ ದುರಂತಕ್ಕೆ ಕಾರಣ ಎಂದು ವರದಿ ಮಾಡಿದೆ. ಕ್ಯಾಪ್ಟನ್ ಸುಮೀತ್ ಸಬರ್‌ವಾಲ್ ಯಡವಟ್ಟಿನಿಂದಲೇ ಈ ದುರಂತ ನಡೆದೋಗಿದೆ. 15,000 ಗಂಟೆಗಳಷ್ಟು ಹಾರಾಟದ ಅನುಭವ ಹೊಂದಿದ್ದ ಸುಮಿತ್ ಸಬರ್‌ವಾಲ್, ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಇಂಧನ ಪೂರೈಕೆ ಕಟ್ ಆಫ್ ಮಾಡಿದ್ದರು. ಇದನ್ನು ಗಮನಿಸಿದ ಕೋ ಪೈಲಟ್ ಕ್ಲೈವ್‌ ಕುಂದರ್, ಗಾಬರಿಯಿಂದಲೇ ಕ್ಯಾಪ್ಟನ್‌ಗೆ ಕೇಳಿದ್ದಾರೆ. ಇಂಧನ ಯಾಕೆ ಸ್ವಿಚ್ ಆಫ್ ಮಾಡಿದ್ರಿ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಕ್ಯಾಪ್ಟನ್ ಸುಮೀತ್, ನಾನೇನು ಮಾಡಿಲ್ಲ ಅಂತ ಉತ್ತರ ಕೊಟ್ಟಿದ್ದಾರೆ. ಕಾಕ್‌ಪಿಟ್‌ನ ಸಂಭಾಷಣೆ ಬ್ಲಾಕ್‌ ಬಾಕ್ಸ್‌ನಲ್ಲಿ ರೆಕಾರ್ಡ್ ಆಗಿದೆ ಎನ್ನುತ್ತಿದೆ ವಾಲ್‌ಸ್ಟ್ರೀಟ್‌ ಜರ್ನಲ್‌ನ ವರದಿ. ಇದನ್ನೂ ಓದಿ:  ಇಂಧನಕ್ಕೆ ಪ್ರಮುಖ ಆದ್ಯತೆ – ನ್ಯಾಟೋ ಮುಖ್ಯಸ್ಥನ ನಿರ್ಬಂಧಗಳ ಬೆದರಿಕೆಗೆ ಭಾರತ ತಿರುಗೇಟು

    ಅಮೆರಿಕದ ಜರ್ನಲ್ ಮಾಡಿರೋ ವರದಿ ಬಗ್ಗೆ ವಿದೇಶಾಂಗ ಇಲಾಖೆ ಪ್ರತಿಕ್ರಿಯೆಗೆ ನಿರಾಕರಿಸಿದೆ. ವರದಿ ನೋಡಿ ಪ್ರತಿಕ್ರಿಯಿಸೋದಾಗಿ ವಿದೇಶಾಂಗ ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ಇನ್ನೂ ವೈಮಾನಿಕ ತಜ್ಞರು, ಏರ್ ಇಂಡಿಯಾ ಪೈಲಟ್‌ಗಳನ್ನ ಟಾರ್ಗೆಟ್ ಮಾಡಿ ವರದಿ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಯುಪಿಯಲ್ಲಿ ಯೋಗಿ ಆದಿತ್ಯನಾಥ್‌ ಸಿಎಂ ಆದ ನಂತರ 15,000 ಎನ್‌ಕೌಂಟರ್‌ – 238 ಮಂದಿ ಹತ್ಯೆ

    AAIB ಪ್ರಾಥಮಿಕ ವರದಿಯಲ್ಲಿ ಏನಿದೆ?
    ಇದಕ್ಕೂ ಮುನ್ನ ಬಹಿರಂಗವಾಗಿದ್ದ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಪ್ರಾಥಮಿಕ ವರದಿ, ಬೋಯಿಂಗ್ 787 ಡ್ರೀಮ್‌ಲೈನರ್‌ ವಿಮಾನದಲ್ಲಿ ಏನೆಲ್ಲಾ ಆಯ್ತು ಅನ್ನೋದನ್ನ ತಿಳಿಸಿತ್ತು. ವಿಮಾನ ಅಪಘಾತ ತನಿಖಾ ಬ್ಯೂರೋ ವರದಿಯಲ್ಲಿ ಪೈಲಟ್‌ಗಳ ಕಾಕ್‌ಪಿಟ್‌ (Cockpit) ಧ್ವನಿ ರೆಕಾರ್ಡಿಂಗ್‌ ಡೇಟಾವನ್ನ ಉಲ್ಲೇಖಿಸಲಾಗಿದೆ. ಇದರಲ್ಲಿ ವಿಮಾನವು ವಾಯುಪ್ರದೇಶಕ್ಕೆ ತಲುಪಿದ ಕೆಲವೇ ಸೆಕೆಂಡುಗಳಲ್ಲಿ ಡ್ಯುಯಲ್-ಎಂಜಿನ್ ಸ್ಥಗಿತಗೊಂಡಿರುವುದು ಅಪಘಾತಕ್ಕೆ ಕಾರಣ ಎಂದು ಸೂಚಿಸಲಾಗಿದೆ. ಅಪಘಾತಕ್ಕೆ ಕೆಲ ಸೆಕೆಂಡುಗಳಿಗೂ ಮುನ್ನ ನಡೆದ ಸಂಭಾಷಣೆಯ ಒಂದು ಭಾಗದಲ್ಲಿ ಇದು ತಿಳಿದಿದೆ. ಜೊತೆಗೆ ವಿಮಾನವು 8 ಡಿಗ್ರಿ ಮೂಗು ಮೇಲಕ್ಕೆತ್ತಿದ ಸ್ಥಿತಿಯಲ್ಲಿತ್ತು. ಆದರೆ ಇಂಜಿನ್‌ಗಳು ಆಫ್ ಆಗಿದ್ದವು. ಇದರಿಂದ ವಿಮಾನವು ಏರಲು ಸಾಧ್ಯವಾಗಲಿಲ್ಲ ಎಂದು ವರದಿ ತಿಳಿಸಿದೆ.

    ಟೇಕ್ ಆಫ್ ಆದ 3 ಸೆಕೆಂಡ್‌ಗಳ ನಂತರ, ಎರಡೂ ಇಂಜಿನ್‌ಗಳ ಫ್ಯೂಯಲ್ ಕಂಟ್ರೋಲ್ ಸ್ವಿಚ್‌ಗಳು ರನ್‌ ನಿಂದ ಕಟ್‌ಆಫ್‌ಗೆ ಬದಲಾದವು. ಇದರಿಂದಾಗಿ ಥ್ರಸ್ಟ್ ಇದ್ದಕ್ಕಿದ್ದಂತೆ ಕಡಿಮೆಯಾಯಿತು. ಅಲ್ಲದೇ ಒಂದು ಪೈಲಟ್ ʻನೀವು ಏಕೆ ಕಟ್ ಆಫ್ ಮಾಡಿದ್ರಿ?ʼ ಎಂದು ಕೇಳುವುದು ಕೇಳಿಸುತ್ತದೆ. ಅದಕ್ಕೆ ಇನ್ನೊಬ್ಬ ಪೈಲಟ್ ʻನಾನು ಮಾಡಿಲ್ಲʼ ಎಂದು ಉತ್ತರಿಸುತ್ತಾರೆ. ಇದರಿಂದ ತಾಂತ್ರಿಕ ದೋಷ ಅಥವಾ ಆಕಸ್ಮಿಕವಾಗಿ ಸ್ವಿಚ್ ಆಫ್ ಆಗಿರಬಹುದು ಎಂದು ಶಂಕಿಸಲಾಗಿದೆ. ʻWhy did you cutoff?ʼ ಮತ್ತು ʻI did not do so,ʼ ಎಂಬ ಮಾತುಗಳು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಸಿಎಂ ನಿತೀಶ್ ಕುಮಾರ್ ಪಕ್ಷದ ನಾಯಕನ ಬರ್ಬರ ಹತ್ಯೆ – ನಾಲ್ಕೇ ದಿನಗಳಲ್ಲಿ 2ನೇ ರಾಜಕೀಯ ಹತ್ಯೆ

    ಇನ್ನೂ ಫ್ಲೈಟ್ ಡೇಟಾ ರೆಕಾರ್ಡರ್‌ ಪ್ರಕಾರ, ಇಂಜಿನ್-1 ಅನ್ನು ಸ್ವಯಂಚಾಲಿತವಾಗಿ ಮರುಪ್ರಾರಂಭಿಸಲು ಪ್ರಯತ್ನಿಸಿ, ಅದು ಯಶಸ್ವಿಯಾಯಿತು. ಆದ್ರೆ ಇಂಜಿನ್ 2 ಅನ್ನು ಮರುಪ್ರಾರಂಭಿಸಲು ಸಾಧ್ಯವಾಗಲಿಲ್ಲ. ಈ ಕಾರಣಕ್ಕಾಗಿ ರಾಮ್ ಏರ್ ಟರ್ಬೈನ್ (RAT) ಅನ್ನು ತುರ್ತು ವಿದ್ಯುತ್ ಮೂಲವಾಗಿ ಬಳಸಲಾಗಿತ್ತು. ಇದು ಟೇಕ್ ಆಫ್ ಆದ ತಕ್ಷಣವೇ ಕಾರ್ಯನಿರ್ವಹಿಸಲು ಪ್ರಾರಂಭಿಸಿತು. ಇದರಿಂದ ಅಗತ್ಯ ಸಿಸ್ಟಮ್‌ಗಳಿಗೆ ವಿದ್ಯುತ್ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು ಎಂದು ವರದಿ ತಿಳಿಸಿದೆ. RAT ಅಂದರೆ ವಿಮಾನದಲ್ಲಿನ ಎಲೆಕ್ಟ್ರಿಕಲ್ ವ್ಯವಸ್ಥೆ ಕೈಕೊಟ್ಟಾಗ ಉಪಯೋಗಿಸುವ ಒಂದು ಸಾಧನ.

  • ಫ್ಯುಯೆಲ್ ಸ್ವಿಚ್ ನಿರ್ವಹಿಸುವಾಗ ಜಾಗ್ರತೆ – ಪೈಲಟ್‍ಗಳಿಗೆ ಆದೇಶಿಸಿದ ಇತಿಹಾದ್ ಏರ್‌ಲೈನ್ಸ್‌

    ಫ್ಯುಯೆಲ್ ಸ್ವಿಚ್ ನಿರ್ವಹಿಸುವಾಗ ಜಾಗ್ರತೆ – ಪೈಲಟ್‍ಗಳಿಗೆ ಆದೇಶಿಸಿದ ಇತಿಹಾದ್ ಏರ್‌ಲೈನ್ಸ್‌

    – ದ.ಕೊರಿಯಾದಲ್ಲೂ ಬೋಯಿಂಗ್ ವಿಮಾನಗಳ ಫ್ಯುಯೆಲ್ ಕಂಟ್ರೋಲ್ ಸ್ವಿಚ್ ಪರಿಶೀಲನೆ

    ಅಬುಧಾಬಿ: ಏರ್ ಇಂಡಿಯಾ (Air India) ವಿಮಾನ ಅಪಘಾತದ ಬಳಿಕ, ದುಬೈನ (Dubai) ಇತಿಹಾದ್ ಎರ್‌ಲೈನ್ಸ್ (Etihad Airlines) ಬೋಯಿಂಗ್ 787 (Boeing 787) ವಿಮಾನಗಳಲ್ಲಿನ ಇಂಧನ ಸ್ವಿಚ್ ಲಾಕ್‌ಗಳನ್ನು ಪರಿಶೀಲಿಸಲು ಮುಂದಾಗಿದೆ. ಬೋಯಿಂಗ್ 787 ಡ್ರೀಮ್‌ಲೈನರ್‌ಗಳ ಲಾಕಿಂಗ್ ಫ್ಲೀಟ್-ವೈಡ್ ತಪಾಸಣೆಗೆ ವಿಮಾನಯಾನ ಸಂಸ್ಥೆ ಆದೇಶಿಸಿದೆ. ಅಲ್ಲದೇ ಪೈಲಟ್‌ಗಳಿಗೆ ಇಂಧನದ ಸ್ವಿಚ್‌ ನಿರ್ವಹಿಸುವಾಗ ಜಾಗ್ರತೆವಹಿಸುವಂತೆ ಸೂಚಿಸಲಾಗಿದೆ.

    ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನದ ಎರಡೂ ಎಂಜಿನ್ ಇಂಧನ ನಿಯಂತ್ರಣ ಸ್ವಿಚ್‌ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ‘RUN’ ನಿಂದ ‘CUTOFF’ ಸ್ಥಾನಕ್ಕೆ ಬಂದಿತ್ತು ಎಂದು AAIB ವರದಿ ಬಹಿರಂಗಪಡಿಸಿದೆ. ಇದು ವಿಮಾನದ ಎಂಜಿನ್ ಒತ್ತಡ ಕಳೆದುಕೊಳ್ಳಲು ಕಾರಣವಾಯಿತು. ಈ ಬಗ್ಗೆ ಪೈಲಟ್‌ಗಳ ಸಂಭಾಷಣೆ ಬ್ಲಾಕ್‌ ಬಾಕ್ಸ್‌ನಲ್ಲಿ ರೆಕಾರ್ಡ್‌ ಆಗಿದ್ದು, ನೀವು ಇಂಧನದ ಸ್ವಿಚ್ ಏಕೆ ಆಫ್‌ ಮಾಡಿದ್ದೀರಿ ಎಂದು ಸಹಪೈಲಟ್‌ ಕೇಳಿದ್ದು ದಾಖಲಾಗಿದೆ. ಅಲ್ಲದೇ ಇದಕ್ಕೆ ಉತ್ತರಿಸಿರುವ ಮತ್ತೊಬ್ಬ ಪೈಲಟ್‌ ನಾನು ಆಫ್ ಮಾಡಲಿಲ್ಲ ಎಂದಿದ್ದರು. ಇದನ್ನೂ ಓದಿ: Air India Crash | 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಆಗದಿದ್ದೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ ಬಹಿರಂಗ

    ಇದೀಗ ಈ ವರದಿ ಬಿಡುಗಡೆಯಾದ ಬಳಿಕ ಇತಿಹಾದ್ ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಇಂಧನ ನಿಯಂತ್ರಣ ಸ್ವಿಚ್‌ಗಳ ಲಾಕಿಂಗ್ ಕಾರ್ಯವಿಧಾನಗಳ ಫ್ಲೀಟ್-ವೈಡ್ ತಪಾಸಣೆಗೆ ಪ್ರತ್ಯೇಕ ಎಂಜಿನಿಯರಿಂಗ್ ಬುಲೆಟಿನ್‌ನ್ನು ಸಹ ಬಿಡುಗಡೆ ಮಾಡಲಾಗಿದೆ.

    2018ರಲ್ಲಿ ಯುಎಸ್ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (ಎಫ್‌ಎಎ) ನವೀಕರಣ ಸಲಹೆ ಹೊರಡಿಸಿದ ಬಳಿಕ ಇತಿಹಾದ್ ಈ ಕ್ರಮ ಕೈಗೊಂಡಿದೆ. ಈ ಮೂಲಕ ಬೋಯಿಂಗ್ ವಿಮಾನಗಳ ನಿರ್ವಾಹಕರಿಗೆ ಇಂಧನ ನಿಯಂತ್ರಣ ಸ್ವಿಚ್‌ಗಳ ಮೇಲಿನ ಲಾಕಿಂಗ್ ಕಾರ್ಯವಿಧಾನಗಳನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ. ಅಲ್ಲದೇ, ಏರ್ ಇಂಡಿಯಾ ಈ ಸಲಹೆಯ ಮೇಲೆ ಕಾರ್ಯನಿರ್ವಹಿಸಲು ವಿಫಲವಾಗಿದೆ ಎಂದು ಇತಿಹಾದ್ ತನ್ನ ವರದಿಯಲ್ಲಿ ಹೇಳಿದೆ.

    ದಕ್ಷಿಣ ಕೊರಿಯಾದ (South Korea) ರಸ್ತೆ, ಮೂಲಸೌಕರ್ಯ ಮತ್ತು ಸಾರಿಗೆ ಸಚಿವಾಲಯ (MOLIT) ಬೋಯಿಂಗ್ 787 ವಿಮಾನಗಳನ್ನು ನಿರ್ವಹಿಸುವ ಎಲ್ಲಾ ಕೊರಿಯನ್ ವಿಮಾನಯಾನ ಸಂಸ್ಥೆಗಳಿಗೆ ಇಂಧನ ಸ್ವಿಚ್ ಕಾರ್ಯವಿಧಾನ ಪರಿಶೀಲನೆ ನಡೆಸುವುದು ಕಡ್ಡಾಯ ಎಂದು ಘೋಷಿಸಿದೆ. ಏರ್ ಇಂಡಿಯಾ ಅಪಘಾತದ ಬಳಿಕ ಮತ್ತು 2018ರ FAA ಸುರಕ್ಷತಾ ವರದಿಯ ಎಚ್ಚರಿಕೆಯ ಶಿಫಾರಸುಗಳಿಗೆ ಅನುಗುಣವಾಗಿ ಈ ಪರಿಶೀಲನೆಗೆ ಸೂಚಿಸಲಾಗುತ್ತಿದೆ. ಇದನ್ನೂ ಓದಿ: Ahmedabad Plane Crash | ನಾಗರಿಕ ವಿಮಾನಯಾನ ಸಚಿವಾಲಯಕ್ಕೆ 2 ಪುಟಗಳ ಪ್ರಾಥಮಿಕ ವರದಿ ಸಲ್ಲಿಸಿದ AAIB

  • ವಿಮಾನ ದುರಂತ | ಮೃತಪಟ್ಟ ಬ್ರಿಟನ್ ಪ್ರಜೆಗಳ ಕುಟುಂಬಸ್ಥರಿಂದ ಏರ್‌ ಇಂಡಿಯಾ ವಿರುದ್ಧ ಯುಕೆ, ಯುಎಸ್‍ನಲ್ಲಿ ದೂರು ಸಾಧ್ಯತೆ

    ವಿಮಾನ ದುರಂತ | ಮೃತಪಟ್ಟ ಬ್ರಿಟನ್ ಪ್ರಜೆಗಳ ಕುಟುಂಬಸ್ಥರಿಂದ ಏರ್‌ ಇಂಡಿಯಾ ವಿರುದ್ಧ ಯುಕೆ, ಯುಎಸ್‍ನಲ್ಲಿ ದೂರು ಸಾಧ್ಯತೆ

    ವಾಷಿಂಗ್ಟನ್‌: ಏರ್ ಇಂಡಿಯಾ ದುರಂತದಲ್ಲಿ (Air India Crash) ಮೃತಪಟ್ಟ ಬ್ರಿಟನ್‌ (Britain) ಪ್ರಜೆಗಳ ಕುಟುಂಬಸ್ಥರು ಅಮೆರಿಕ (America) ಹಾಗೂ ಬ್ರಿಟನ್‌ನ (Britain) ನ್ಯಾಯಾಲಯದಲ್ಲಿ (Court) ವಿಮಾನಯಾನ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

    ಜೂ.12 ರಂದು ಅಹಮದಾಬಾದ್‌ನಲ್ಲಿ (Ahmedabad) ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನ ಅಪಘಾತಕ್ಕೆ ಈಡಾಗಿತ್ತು. ಈ ವಿಮಾನದಲ್ಲಿದ್ದ 242 ಜನರಲ್ಲಿ 241 ಜನ ಮೃತಪಟ್ಟು, ಒಬ್ಬರು ಮಾತ್ರ ಬದುಕುಳಿದಿದ್ದರು. ಈ ದುರಂತದಲ್ಲಿ 53 ಬ್ರಿಟನ್ ಪ್ರಜೆಗಳು ಮೃತಪಟ್ಟಿದ್ದರು. ಈ ಅವಘಡಕ್ಕೆ ಸಂಬಂಧಿಸಿದಂತೆ ಅಮೆರಿಕ ಮತ್ತು ಬ್ರಿಟನ್‌ನ ಕಾನೂನು ತಂಡಗಳು ಎರಡೂ ದೇಶಗಳಲ್ಲೂ ಮೊಕದ್ದಮೆ ಹೂಡಲು ಸಿದ್ಧತೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್‌ ಬಾಕ್ಸ್ ಅಮೆರಿಕಕ್ಕೆ ರವಾನೆ

    ಅಂತಾರರಾಷ್ಟ್ರೀಯ ಕಾನೂನು ತಂಡಗಳು ಅಪಘಾತದಲ್ಲಿ ಮೃತಪಟ್ಟ ಬ್ರಿಟನ್‌ ಪ್ರಯಾಣಿಕರ ಕುಟುಂಬಗಳೊಂದಿಗೆ ಮಾತುಕತೆ ನಡೆಸುತ್ತಿವೆ. ಎಲ್ಲಾ ಪುರಾವೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಲಂಡನ್‌ನ ಹೈಕೋರ್ಟ್‌ನಲ್ಲಿ ಏರ್ ಇಂಡಿಯಾ ವಿರುದ್ಧ ಪ್ರಕರಣ ಹಾಗೂ ಅಮೆರಿಕದಲ್ಲಿ ಬೋಯಿಂಗ್ ವಿರುದ್ಧ ಮೊಕದ್ದಮೆ ಹೂಡಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.

    ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಕಾನೂನು ತಜ್ಞರು, ಈ ದೇಶಗಳಲ್ಲಿನ ನ್ಯಾಯಾಲಯಗಳು ಸಾಮಾನ್ಯವಾಗಿ ಮೊಕದ್ದಮೆಗಳನ್ನು ಸಲ್ಲಿಸುವ ಜನರಿಗೆ ಹೆಚ್ಚು ಬೆಂಬಲ ನೀಡುತ್ತವೆ. ಈ ಪ್ರಕರಣಗಳು ನ್ಯಾಯವ್ಯಾಪ್ತಿಯ ಸಮಸ್ಯೆಗಳಿಂದಾಗಿ ವಿಳಂಬ ಆಗಬಹುದು ಎಂದು ಹೇಳಿದ್ದಾರೆ.

    ಪತನಗೊಂಡ ವಿಮಾನದಲ್ಲಿ 169 ಭಾರತೀಯ ಪ್ರಯಾಣಿಕರು, 53 ಬ್ರಿಟನ್‌, 7 ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಯಾಣಿಕರಿದ್ದರು. ಅಲ್ಲದೇ 12 ಸಿಬ್ಬಂದಿ ಇದ್ದರು. ಈ ದುರಂತದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿಯವರು ಸಾವಿಗೀಡಾಗಿದ್ದರು.

    ಇದೆಲ್ಲದರ ನಡುವೆ ವಿಮಾನ ಉತ್ತಮವಾಗಿ ನಿರ್ವಹಣೆ ಮಾಡಲಾಗಿತ್ತು. ಪೈಲಟ್‌ಗಳಿಗೆ ಸಾಕಷ್ಟು ಅನುಭವವಿತ್ತು ಎಂದು ವಿಮಾನಯಾನ ಸಂಸ್ಥೆ ಹೇಳಿಕೊಂಡಿದೆ. ಇದನ್ನೂ ಓದಿ: ವಿಮಾನ ದುರಂತವಾಗಿ ದಿನಗಳೂ ಕಳೆದಿರಲಿಲ್ಲ – ಪಾರ್ಟಿ ಮೂಡ್‌ನಲ್ಲಿದ್ದ ಉದ್ಯೋಗಿಗಳ ವಜಾಗೊಳಿಸಿದ Air India ವೆಂಚರ್‌

  • ವಿಮಾನ ದುರಂತವಾಗಿ ದಿನಗಳೂ ಕಳೆದಿರಲಿಲ್ಲ – ಪಾರ್ಟಿ ಮೂಡ್‌ನಲ್ಲಿದ್ದ ಉದ್ಯೋಗಿಗಳ ವಜಾಗೊಳಿಸಿದ Air India ವೆಂಚರ್‌

    ವಿಮಾನ ದುರಂತವಾಗಿ ದಿನಗಳೂ ಕಳೆದಿರಲಿಲ್ಲ – ಪಾರ್ಟಿ ಮೂಡ್‌ನಲ್ಲಿದ್ದ ಉದ್ಯೋಗಿಗಳ ವಜಾಗೊಳಿಸಿದ Air India ವೆಂಚರ್‌

    ನವದೆಹಲಿ: 270 ಜನರ ಸಾವಿಗೆ ಕಾರಣವಾದ ಅಹಮದಾಬಾದ್‌ ವಿಮಾನ ದುರಂತದ (Ahmedabad Plane Crash) ನಂತರದ ದಿನಗಳಲ್ಲಿ ಕರ್ತವ್ಯದ ಸ್ಥಳದಲ್ಲಿ ಪಾರ್ಟಿ ಮೂಡ್‌ನಲ್ಲಿದ್ದ ಏರ್‌ ಇಂಡಿಯಾ (Air India) ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

    ಏರ್ ಇಂಡಿಯಾದ ವಿಮಾನ ನಿಲ್ದಾಣದ ಗೇಟ್‌ವೇ ಸೇವಾ ಪೂರೈಕೆದಾರ AISATS ನ ನಾಲ್ವರು ಹಿರಿಯ ಉದ್ಯೋಗಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ನೌಕರರು ಕೆಲಸದ ಸ್ಥಳದಲ್ಲಿ ಪಾರ್ಟಿ ಮಾಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿತ್ತು. ಇದರ ಬೆನ್ನಲ್ಲೇ ಖಡಕ್‌ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಪುರಿ ಜಗನ್ನಾಥ ರಥೋತ್ಸವ ವೇಳೆ ಕಾಲ್ತುಳಿತ – 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, 40ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕ

    ಅಹಮದಾಬಾದ್‌ನಲ್ಲಿ 270 ಜನರನ್ನು ಬಲಿತೆಗೆದುಕೊಂಡ ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್‌ಲೈನರ್ ಅಪಘಾತವಾಗಿ ಕೆಲ ದಿನಗಳೂ ಕಳೆದಿರಲಿಲ್ಲ. ಕರಾಳತೆ ಇನ್ನೂ ಮಾಸದಿದ್ದರೂ, ಗುರುಗ್ರಾಮ್‌ನ AISATS ಕಚೇರಿಯಲ್ಲಿ ಪಾರ್ಟಿಯನ್ನು ಆಯೋಜಿಸಲಾಗಿತ್ತು ಎಂದು ವರದಿಯಾಗಿದೆ.

    ಏರ್‌ ಇಂಡಿಯಾ 171 ವಿಮಾನದ ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬಗಳೊಂದಿಗೆ ಕಂಪನಿಯು ನಿಲ್ಲುತ್ತದೆ ಎಂದು AISATS ವಕ್ತಾರರು ತಿಳಿಸಿದ್ದಾರೆ. ಅಲ್ಲದೇ, ತಮ್ಮದೇ ಸಿಬ್ಬಂದಿಯ ಈ ವರ್ತನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಇಂತಹ ಸಂಭ್ರಮಕ್ಕೆ ಇದು ಸೂಕ್ತ ಸಮಯವಲ್ಲ ಎಂದು ನೆಟ್ಟಿಗರು ಕಾಮೆಂಟ್‌ ಮಾಡಿ ತರಾಟೆಗೆ ತೆಗೆದುಕೊಂಡಿದ್ದರು. ಇದನ್ನೂ ಓದಿ: ಮಧ್ಯಪ್ರದೇಶ ಸಿಎಂ ಬೆಂಗಾವಲು ಪಡೆಯ 19 ವಾಹನಗಳಿಗೆ ನೀರು ಮಿಶ್ರಿತ ಡೀಸೆಲ್ ತುಂಬಿದ ಬಂಕ್ ಸಿಬ್ಬಂದಿ!

    ಇಂತಹ ನಡವಳಿಕೆಯು ನಮ್ಮ ಮೌಲ್ಯಗಳಿಗೆ ತಕ್ಕುದಲ್ಲ. ನಾವು ಸಹಾನುಭೂತಿ, ವೃತ್ತಿಪರತೆ ಮತ್ತು ಹೊಣೆಗಾರಿಕೆಗೆ ಬದ್ಧರಾಗಿದ್ದೇವೆ. ಈ ಲೋಪಕ್ಕೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ವಕ್ತಾರರು ಸ್ಪಷ್ಟಪಡಿಸಿದ್ದಾರೆ.

  • ತಾಂತ್ರಿಕ ದೋಷ – ಜಮ್ಮುವಿಗೆ ಹೊರಟಿದ್ದ ಏರ್‌ಇಂಡಿಯಾ ವಿಮಾನ ದೆಹಲಿಗೆ ವಾಪಸ್

    ತಾಂತ್ರಿಕ ದೋಷ – ಜಮ್ಮುವಿಗೆ ಹೊರಟಿದ್ದ ಏರ್‌ಇಂಡಿಯಾ ವಿಮಾನ ದೆಹಲಿಗೆ ವಾಪಸ್

    ನವದೆಹಲಿ: ದೆಹಲಿಯಿಂದ (Delhi) ಜಮ್ಮುವಿಗೆ (Jammu) ಹೊರಟಿದ್ದ ಏರ್ ಇಂಡಿಯಾ (Air India) ವಿಮಾನ ತಾಂತ್ರಿಕ ದೋಷದಿಂದಾಗಿ ದೆಹಲಿಗೆ ವಾಪಸಾಗಿದೆ.

    ಏರ್ ಇಂಡಿಯಾ ಎಕ್ಸ್‌ಪ್ರೆಸ್‌ IX2564 ವಿಮಾನವೊಂದು ಭಾನುವಾರ ದೆಹಲಿಯಿಂದ ಜಮ್ಮುವಿಗೆ ಹೊರಟಿತ್ತು. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ತಾಂತ್ರಿಕ ದೋಷದಿಂದಾಗಿ ಲ್ಯಾಂಡಿಂಗ್ ಆಗದೇ ದೆಹಲಿಗೆ ಹಿಂದಿರುಗಿದೆ. ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ಬಳಿಕ ಪರ್ಯಾಯ ವಿಮಾನದ ವ್ಯವಸ್ಥೆ ಮಾಡಿ, ದೆಹಲಿಯಿಂದ ಜಮ್ಮುವಿಗೆ ಪ್ರಯಾಣ ಬೆಳೆಸಿತು.ಇದನ್ನೂ ಓದಿ: ನಾವು, ನಮ್ಮ ಕುಟುಂಬ ಇ.ಡಿ ಎದುರಿಸಲು ರೆಡಿ ಇದ್ದೇವೆ: ಡಿಕೆಶಿ

    ಅದೇ ದಿನ ಭಾನುವಾರ ತಿರುವನಂತಪುರದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವನ್ನು ಹಕ್ಕಿ ಡಿಕ್ಕಿಯಾಗಿದ್ದಕ್ಕೆ ರದ್ದುಗೊಳಿಸಲಾಯಿತು. ಬಳಿಕ ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡಲಾಗಿದೆ.

    ವಿಮಾನಗಳ ಸುರಕ್ಷಿತ ಕಾರ್ಯಾಚರಣೆಗಳಿಗಾಗಿ ಹಾಗೂ ವಿಮಾನ ಹಾರಾಟದ ತೊಂದರೆಗಳ ಪರಿಶೀಲನೆಗಾಗಿ ತಾತಾಲ್ಕಿಕವಾಗಿ ವಿಮಾನಗಳನ್ನು ರದ್ದುಗೊಳಿಸಲಾಗುತ್ತಿದೆ. ಕೊನೆಯ ಕ್ಷಣದಲ್ಲಿ ಯಾವುದೇ ತೊಂದರೆಯಾಗದಂತೆ ನೊಡಿಕೊಳ್ಳಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಏರ್ ಇಂಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.ಇದನ್ನೂ ಓದಿ: ಹಳದಿ ಲುಕ್‌ನಲ್ಲಿ ಬಿಂದಾಸ್ ಸ್ಟೆಪ್‌ ಹಾಕಿದ ವೈಷ್ಣವಿ ಗೌಡ!

  • ‘ಮೇಡೇ’ ಘೋಷಿಸಿ 168 ಪ್ರಯಾಣಿಕರಿದ್ದ‌ ಇಂಡಿಗೋ ಫ್ಲೈಟ್‌ ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್!

    ‘ಮೇಡೇ’ ಘೋಷಿಸಿ 168 ಪ್ರಯಾಣಿಕರಿದ್ದ‌ ಇಂಡಿಗೋ ಫ್ಲೈಟ್‌ ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್!

    ನವದೆಹಲಿ: 168 ಪ್ರಯಾಣಿಕರನ್ನು ಹೊತ್ತು ಸಾಗಿದ್ದ ಇಂಡಿಗೋ (IndiGo Flight) ವಿಮಾನ ಹಾರಾಟದ ಸಮಯದಲ್ಲೇ ‘ಮೇಡೇ’ ಘೋಷಿಸಿದೆ. ಅದೃಷ್ಟವಶಾತ್‌ ವಿಮಾನ ಸುರಕ್ಷಿತವಾಗಿ ಲ್ಯಾಂಡ್‌ ಆಗಿದೆ.

    168 ಪ್ರಯಾಣಿಕರಿದ್ದ ಇಂಡಿಗೋದ ಗುವಾಹಟಿ-ಚೆನ್ನೈ ವಿಮಾನವು ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಅಹಮದಾಬಾದ್‌ನಲ್ಲಿ ಟೇಕಾಫ್‌ ಆದ ಸ್ವಲ್ಪ ಸಮಯದಲ್ಲೇ ಏರ್‌ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿತ್ತು. ಪೈಲಟ್‌ಗಳು ‘ಮೇಡೇ’ ಘೋಷಿಸಿದ ಕೆಲ ಹೊತ್ತಲ್ಲೇ ಈ ದುರಂತ ಸಂಭವಿಸಿತ್ತು. ಇದನ್ನೂ ಓದಿ: ʻಮೇ ಡೇʼ – ವಿಮಾನ ಪತನಕ್ಕೂ ಮುನ್ನ ಎಟಿಸಿಗೆ ಪೈಲಟ್‌ ಕೊಟ್ಟ ಕೊನೆಯ ಸಂದೇಶ

    ಗುರುವಾರ ಈ ಘಟನೆ ನಡೆದಿದೆ. ಇಂಧನವು ತೀರಾ ಕಡಿಮೆ ಇದ್ದ ಇಂಡಿಗೋ ವಿಮಾನವು ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿಯಿತು. ವಿಪತ್ತಿನ ಕರೆ ಬಂದ ನಂತರ, ಎಟಿಸಿ (ವಾಯು ಸಂಚಾರ ನಿಯಂತ್ರಣ) ಸಿಬ್ಬಂದಿಗೆ ಮಾಹಿತಿ ನೀಡಿತು. ಅವರು ಕಾರ್ಯಪ್ರವೃತ್ತರಾದರು. ವೈದ್ಯಕೀಯ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿದ್ದರು. ವಿಮಾನವು ರಾತ್ರಿ 8:20 ಕ್ಕೆ ಸುರಕ್ಷಿತವಾಗಿ ಇಳಿಯಿತು ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಇದನ್ನೂ ಓದಿ: Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

    ಮಧುರೈಗೆ ಹೋಗುತ್ತಿದ್ದ ಇಂಡಿಗೋ ವಿಮಾನವು ಆಕಾಶದಲ್ಲೇ ತಾಂತ್ರಿಕ ದೋಷವನ್ನು ಅನುಭವಿಸಿತು. ಸುಮಾರು 168 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಸುರಕ್ಷಿತವಾಗಿ ಇಳಿಯಿತು. ಎಲ್ಲಾ ಪ್ರಯಾಣಿಕರನ್ನು ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಕೆಳಗಿಳಿಸಲಾಯಿತು.

  • ಮೂವರು ಅಧಿಕಾರಿಗಳನ್ನು ವಜಾಗೊಳಿಸಿ, ಇಲ್ದೆ ಇದ್ರೆ ಲೈಸನ್ಸ್‌ ರದ್ದು ಆಗುತ್ತೆ: ಏರ್‌ ಇಂಡಿಯಾಗೆ ಡಿಜಿಸಿಎ ಎಚ್ಚರಿಕೆ

    ಮೂವರು ಅಧಿಕಾರಿಗಳನ್ನು ವಜಾಗೊಳಿಸಿ, ಇಲ್ದೆ ಇದ್ರೆ ಲೈಸನ್ಸ್‌ ರದ್ದು ಆಗುತ್ತೆ: ಏರ್‌ ಇಂಡಿಯಾಗೆ ಡಿಜಿಸಿಎ ಎಚ್ಚರಿಕೆ

    ನವದೆಹಲಿ: ಮೂವರು ಹಿರಿಯ ಅಧಿಕಾರಿಗಳನ್ನು ತಕ್ಷಣವೇ ಕೆಲಸದಿಂದ ತೆಗೆದು ಹಾಕುವಂತೆ ಏರ್‌ ಇಂಡಿಯಾಗೆ (Air India) ನಾಗರಿಕ ವಿಮಾನಯಾನ ನಿಯಂತ್ರಕ (DGCA) ಸೂಚಿಸಿದೆ.

    ವಿಮಾನ ಸಿಬ್ಬಂದಿ ವೇಳಾಪಟ್ಟಿ ಮತ್ತು ರೋಸ್ಟರಿಂಗ್‌ಗೆ ಸಂಬಂಧಿಸಿದ ಎಲ್ಲಾ ಜವಾಬ್ದಾರಿಗಳಿಂದ ವಿಭಾಗೀಯ ಉಪಾಧ್ಯಕ್ಷ ಸೇರಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ತಕ್ಷಣ ತೆಗೆದುಹಾಕುವಂತೆ ಆದೇಶಿಸಲಾಗಿದೆ.

    ಹೆಸರು ಬಹಿರಂಗಪಡಿಸದ ಮೂವರು ಅಧಿಕಾರಿಗಳ ವಿರುದ್ಧ ವಿಳಂಬ ಮಾಡದೇ ಆಂತರಿಕ ತನಿಖೆ ನಡೆಸಬೇಕು. ಒಂದು ವೇಳೆ ವಿಫಲವಾದರೆ ವಿಮಾನಯಾನ ಸಂಸ್ಥೆಯು ತನ್ನ ಕಾರ್ಯಾಚರಣೆಯ ಅನುಮತಿಯನ್ನು ಕಳೆದುಕೊಳ್ಳುವ ಸಾಧ್ಯತೆ ಸೇರಿದಂತೆ ಕಠಿಣ ಕ್ರಮಕ್ಕೆ ಕಾರಣವಾಗಬಹದು ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಕೇಂದ್ರ ಸಚಿವ ಸೋಮಣ್ಣ ಕಾಲಿಗೆ ಬಿದ್ದ ಹಾಸನ ಡಿಸಿ

    ಸಾಂದರ್ಭಿಕ ಚಿತ್ರ

    ವಿಮಾನಯಾನ ಸಂಸ್ಥೆಯ ದೇಶೀಯ ಮತ್ತು ಅಂತರರಾಷ್ಟ್ರೀಯ ಜಾಲದಾದ್ಯಂತ ಸಿಬ್ಬಂದಿ ನಿಯೋಜನೆಯನ್ನು ಮೇಲ್ವಿಚಾರಣೆ ಮಾಡುವ ಏರ್ ಇಂಡಿಯಾದ ಇಂಟಿಗ್ರೇಟೆಡ್ ಆಪರೇಷನ್ಸ್ ಕಂಟ್ರೋಲ್ ಸೆಂಟರ್ (ಐಒಸಿಸಿ) ಲೆಕ್ಕಪರಿಶೋಧನೆಯ ಬಳಿಕ ಡಿಜಿಸಿಎ ಈ ಕ್ರಮಕ್ಕೆ ಮುಂದಾಗಿದೆ. ಇದನ್ನೂ ಓದಿ: 10 ಅಡಿ ಆಳದಲ್ಲಿ ಸೊಸೆಯನ್ನು ಹೂತಿದ್ದ ಪಾಪಿಗಳು – ಓಡಿ ಹೋಗಿದ್ದಾಳೆ ಎಂದು ಕತೆ ಕಟ್ಟಿದ್ದ ಪತಿ ಕುಟುಂಬಸ್ಥರು ಅರೆಸ್ಟ್‌!

    ನಿಯಂತ್ರಕ ಹೊರಡಿಸಿದ ಶೋಕಾಸ್ ನೋಟಿಸ್ ಪ್ರಕಾರ, ಮೇ 16 ಮತ್ತು ಮೇ 17 ರಂದು ಬೆಂಗಳೂರಿನಿಂದ ಲಂಡನ್ ಹೀಥ್ರೂಗೆ ಏರ್ ಇಂಡಿಯಾ ನಿರ್ವಹಿಸುವ ಎರಡು ವಿಮಾನಗಳು – ಎಐ 133 – ಗರಿಷ್ಠ ಹಾರಾಟದ ಕರ್ತವ್ಯ ಸಮಯ ಮಿತಿ 10 ಗಂಟೆಗಳನ್ನು ಮೀರಿತ್ತು ಎಂದು ತಿಳಿಸಿದೆ.

    ಶೋಕಾಸ್‌ ನೋಟಿಸ್‌ನಲ್ಲಿ ಹಲವಾರು ಪ್ರಶ್ನೆಗಳನ್ನು ಕೇಳಲಾಗಿತದ್ದು 7 ದಿನಗಳ ಒಳಗಡೆ ಉತ್ತರಿಸಬೇಕೆಂದು ಏರ್‌ ಇಂಡಿಯಾಗೆ ಸೂಚಿಸಿದೆ.

  • ಒಂದೇ ದಿನ 8 ಏರ್ ಇಂಡಿಯಾ ವಿಮಾನ ಹಾರಾಟ ರದ್ದು, 16 ಅಂತಾರಾಷ್ಟ್ರೀಯ ಮಾರ್ಗಗಳು ಬಂದ್

    ಒಂದೇ ದಿನ 8 ಏರ್ ಇಂಡಿಯಾ ವಿಮಾನ ಹಾರಾಟ ರದ್ದು, 16 ಅಂತಾರಾಷ್ಟ್ರೀಯ ಮಾರ್ಗಗಳು ಬಂದ್

    – 3 ವಿದೇಶಿ ತಾಣಗಳಿಗೆ ವಿಮಾನ ಸಂಚಾರ ರದ್ದು

    ನವದೆಹಲಿ: ಅಹಮದಾಬಾದ್ (Ahmedabad) ವಿಮಾನ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ಏರ್ ಇಂಡಿಯಾ (Air India) ಸಂಸ್ಥೆ ಈಗ ವಿಮಾನಗಳ ತಾಂತ್ರಿಕ ಪರಿಶೀಲನೆಗೆ ಮುಂದಾಗಿದೆ. ಈ ಹಿನ್ನೆಲೆ ದೇಶಾದ್ಯಂತ 8 ವಿಮಾನಗಳ ಹಾರಾಟ ರದ್ದುಗೊಳಿಸಿದೆ. ಜೊತೆಗೆ ಜು.15ರವರೆಗೆ 16 ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ವಿಮಾನಯಾನವನ್ನು ಸ್ಥಗಿತಗೊಳಿಸಿರುವುದಾಗಿ ತಿಳಿಸಿದೆ ಎಂದು ವರದಿಯಾಗಿದೆ.

    ಜೂ.12ರ ಅಹಮದಾಬಾದ್ ವಿಮಾನ ದುರಂತದ ಬಳಿಕ ಏರ್ ಇಂಡಿಯಾ ವಿಮಾನಗಳಲ್ಲಿ ಒಂದಿಲ್ಲೊಂದು ದೋಷಗಳು ಕಾಣಿಸಿಕೊಳ್ಳುತ್ತಲೇ ಇದೆ. ಹೀಗಾಗಿ ವಿಮಾನಗಳಲ್ಲಿನ ತಾಂತ್ರಿಕ ಸಮಸ್ಯೆ ಹಾಗೂ ಇನ್ನಿತರ ಪರಿಶೀಲನೆ ನಡೆಸಲು ಮುಂದಾಗಿದೆ. ಈ ಹಿನ್ನೆಲೆ ಇಂದು (ಜೂ.20) ಏರ್ ಇಂಡಿಯಾದ ಎಂಟು ದೇಶೀಯ ಹಾಗೂ ಅಂತಾರಾಷ್ಟ್ರೀಯ ವಿಮಾನಗಳನ್ನು ರದ್ದುಗೊಳಿಸಲಾಗಿದೆ.ಇದನ್ನೂ ಓದಿ: ʻಲಕ್ಷ್ಮೀ ನಿವಾಸʼದಿಂದ ಹೊರನಡೆದ ಶ್ವೇತಾ

    ಜೊತೆಗೆ ಜೂ.21ರಿಂದ ಜು.15ರವೆಗೆ 16 ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ವಿಮಾನಯಾನ ಸ್ಥಗಿತಗೊಳ್ಳಲಿದೆ ಹಾಗೂ 3 ವಿದೇಶಿ ತಾಣಗಳಲ್ಲಿ ವಿಮಾನ ಸಂಚಾರ ಇರುವುದಿಲ್ಲ ಎಂದು ತಿಳಿಸಿದೆ.

    ಯಾವ ಯಾವ ವಿಮಾನಗಳು ರದ್ದು?
    ಸಮಸ್ಯೆ ಮುಂದುವರಿದ ಹಿನ್ನೆಲೆ ಅಂತಾರಾಷ್ಟ್ರೀಯ ವಿಮಾನಗಳಾದ AI906 ದುಬೈನಿಂದ ಚೆನ್ನೈಗೆ, AI308 ದೆಹಲಿಯಿಂದ ಮೆಲ್ಬೋರ್ನ್‌ಗೆ, AI309 ಮೆಲ್ಬೋರ್ನ್‌ನಿಂದ ದೆಹಲಿಗೆ, AI2204 ದುಬೈನಿಂದ ಹೈದರಾಬಾದ್‌ಗೆ ಹಾಗೂ ದೇಶೀಯ ವಿಮಾನಗಳಾದ AI874 ಪುಣೆಯಿಂದ ದೆಹಲಿಗೆ, AI456 ಅಹಮದಾಬಾದ್‌ನಿಂದ ದೆಹಲಿಗೆ, AI2872 ಹೈದರಾಬಾದ್‌ನಿಂದ ಮುಂಬೈಗೆ, AI571 ಚೆನ್ನೈನಿಂದ ಮುಂಬೈಗೆ ಸಂಚರಿಸಬೇಕಿದ್ದ ವಿಮಾನಗಳು ರದ್ದಾಗಿವೆ. ಹೀಗಾಗಿ ಪ್ರಯಾಣಿಕರಿಗೆ ಟಿಕೆಟ್ ರದ್ದತಿ ಹಾಗೂ ಮರುಹೊಂದಿಕೆ, ಸಂಪೂರ್ಣ ಮರುಪಾವತಿ ನೀಡುವುದಾಗಿ ತಿಳಿಸಿದೆ.ಇದನ್ನೂ ಓದಿ: RSS ಮುಖಂಡನ ಮನೆ ಮೇಲೆ ಮಧ್ಯರಾತ್ರಿ ದಾಳಿ – ಕಾರಣ ಕೇಳಿ ದ.ಕ. ಎಸ್‌ಪಿಗೆ ಹೈಕೋರ್ಟ್‌ ನೋಟಿಸ್‌

    ಇದಲ್ಲದೆ ಉತ್ತರ ಅಮೆರಿಕ, ಯುರೋಪ್, ಆಸ್ಟ್ರೇಲಿಯಾ ಮತ್ತು ದೂರದ ಪೂರ್ವ ನಗರಗಳನ್ನು ಸಂಪರ್ಕಿಸುವ 16 ಅಂತಾರಾಷ್ಟ್ರೀಯ ಮಾರ್ಗಗಳಲ್ಲಿ ವಿಮಾನಯಾನ ಸ್ಥಗಿತಗೊಳ್ಳಲಿದೆ. ಜೊತೆಗೆ ಉತ್ತರ ಅಮೆರಿಕಾದ ಮಾರ್ಗಗಳಾದ ದೆಹಲಿ-ಟೊರೊಂಟೊ, ದೆಹಲಿ-ವ್ಯಾಂಕೋವರ್, ದೆಹಲಿ-ಸ್ಯಾನ್ ಫ್ರಾನ್ಸಿಸ್ಕೊ, ದೆಹಲಿ-ಚಿಕಾಗೊ ಮತ್ತು ದೆಹಲಿ-ವಾಷಿಂಗ್ಟನ್‌ಗೆ ವಿಮಾನ ಸಂಚಾರ ಕಡಿಮೆಯಾಗಲಿದೆ.

    ದೆಹಲಿ-ನೈರೋಬಿ, ಅಮೃತಸರ-ಲಂಡನ್ ಮತ್ತು ಗೋವಾ-ಲಂಡನ್ ಮಾರ್ಗಗಳಲ್ಲಿ ಜು.15ರವರೆಗೆ ವಿಮಾನಯಾನ ಸ್ಥಗಿತಗೊಳ್ಳಲಿದೆ. ವಾರಕ್ಕೆ ನಾಲ್ಕು ವಿಮಾನಗಳನ್ನು ಹೊಂದಿರುವ ದೆಹಲಿ-ನೈರೋಬಿ ಮಾರ್ಗ, ವಾರಕ್ಕೆ ತಲಾ ಮೂರರಂತೆ ವಿಮಾನಗಳನ್ನು ಹೊಂದಿರುವ ಅಮೃತಸರ-ಲಂಡನ್ (ಗ್ಯಾಟ್ವಿಕ್) ಹಾಗೂ ಗೋವಾ (ಮೋಪಾ)-ಲಂಡನ್ (ಗ್ಯಾಟ್ವಿಕ್) ಮಾರ್ಗಗಳಲ್ಲಿ ವಿಮಾನ ಸಂಚರಿಸುವುದಿಲ್ಲ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

    ಏರ್ ಇಂಡಿಯಾ ವಿಮಾನ ಅಪಘಾತದ ನಂತರದಿಂದ ಈವರೆಗೆ 60 ವಿಮಾನಗಳು ರದ್ದಾಗಿದ್ದು, ವಿಮಾನ ದುರಂತದ ನಂತರ ವಿಮಾನಗಳ ಪರಿಶೀಲನೆ ಹಾಗೂ ತನಿಖಾ ದೃಷ್ಟಿಯಿಂದ ಈ ಬೆಳವಣಿಗೆ ನಡೆದಿದೆ. ಮುಂದಿನ ದಿನಗಳಲ್ಲಿ ವಿಮಾನಗಳ ಪರಿಶೀಲನೆ ಹೆಚ್ಚಾಗಲಿದೆ.ಇದನ್ನೂ ಓದಿ: ಸರ್ಕಾರದ ಬುಡಕ್ಕೆ ಮತ್ತೊಂದು ಭ್ರಷ್ಟಾಚಾರ ಬಾಂಬ್‌; ಜಮೀರ್ ಪಿಎ – ಬಿ.ಆರ್ ಪಾಟೀಲ್‌ರದ್ದು ಎನ್ನಲಾದ ಆಡಿಯೋ ವೈರಲ್‌ 

  • Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್‌ ಬಾಕ್ಸ್ ಅಮೆರಿಕಕ್ಕೆ ರವಾನೆ

    Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್‌ ಬಾಕ್ಸ್ ಅಮೆರಿಕಕ್ಕೆ ರವಾನೆ

    ಅಹಮದಾಬಾದ್‌: ಇಲ್ಲಿನ ಮೇಘನಿ ನಗರದಲ್ಲಿ ಪತನವಾದ ಏರ್‌ ಇಂಡಿಯಾ (Air India) ಬೋಯಿಂಗ್-787 ವಿಮಾನದ ಬ್ಲ್ಯಾಕ್‌ ಬಾಕ್ಸ್‌ ಅನ್ನು ಡೇಟಾ ರಿಕವರಿಗಾಗಿ ಅಮೆರಿಕಕ್ಕೆ ಕಳುಹಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ವಿಮಾನದ ಡಿಜಿಟಲ್ ಫ್ಲೈಟ್ ಡೇಟಾ ರೆಕಾರ್ಡರ್ (DFDR)ಗೆ ಬೆಂಕಿ ಬಿದ್ದು ಬಾಹ್ಯವಾಗಿ ಹಾನಿಯಾದ ಹಿನ್ನೆಲೆ ಅಮೆರಿಕಕ್ಕೆ ಕಳುಹಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

    ಜೂನ್‌ 13ರಂದು ಬಿಜೆ ಮೆಡಿಕಲ್‌ ಹಾಸ್ಟೆಲಿನ ಮೇಲ್ಛಾವಣಿಯಲ್ಲಿದ್ದ ಏರ್‌ ಇಂಡಿಯಾ ವಿಮಾನದ ಬ್ಲ್ಯಾಕ್‌ ಬಾಕ್ಸ್‌ (Black Box) ಅನ್ನು‌ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ವಶಪಡಿಸಿಕೊಂಡಿತ್ತು. ಆದ್ರೆ ಬ್ಲ್ಯಾಕ್‌‌ ಬಾಕ್ಸ್‌ಗೆ ಬೆಂಕಿ ಬಿದ್ದು ಬಾಹ್ಯವಾಗಿ ಹಾನಿಯಾಗಿದೆ. ಇದರಿಂದ ಸ್ಥಳೀಯ ತನಿಖಾಧಿಕಾರಿಗಳಿಂದ ಮಾಹಿತಿ ಹೊರ ತೆಗೆಯಲು ಸಾಧ್ಯವಾಗಿಲ್ಲ. ಈ ಹಿನ್ನೆಲೆ ಡೇಟಾ ರಿಕವರಿಗಾಗಿ ಬ್ಲ್ಯಾಕ್‌ಬಾಕ್ಸ್‌ ಅನ್ನು ಅಮೆರಿಕಾಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

    2ನೇ ಬ್ಲ್ಯಾಕ್‌ ಬಾಕ್ಸ್‌ ಪರಿಶೀಲನೆ
    ಏರ್‌ ಇಂಡಿಯಾ ಬೋಯಿಂಗ್-787 ವಿಮಾನದ 2ನೇ ಬ್ಲ್ಯಾಕ್‌ ಬಾಕ್ಸ್‌ (ಡಿಜಿಟಲ್‌ ಫ್ಲೈಟ್‌ ಡೇಟಾ ರೆಕಾರ್ಡರ್) ಕಳೆದ ಭಾನುವಾರ ಪತ್ತೆಯಾಗಿತ್ತು. ಇದು ʻಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ʼ ಆಗಿದ್ದು, ವಿಮಾನದಲ್ಲಿ ಪ್ರತಿ ಸೆಕೆಂಡ್‌ನಲ್ಲಿ ಏನಾಯ್ತು ಎಂಬುದನ್ನ ಅರ್ಥಮಾಡಿಕೊಳ್ಳಲು ಸಹಾಯಕವಾಗಲಿದೆ. ಇದು ಕಾಕ್‌ಪಿಟ್‌ ಮತ್ತು ವಿಮಾನ ವ್ಯವಸ್ಥೆಯಲ್ಲಿ ಏನಾಯ್ತು ಎಂಬುದರ ಕುರಿತು ವಸ್ತುನಿಷ್ಠ ಮಾಹಿತಿಯನ್ನು ನೀಡುತ್ತದೆ. ಎಲ್ಲಾ ಕಾಕ್‌ಪಿಟ್ ಆಡಿಯೋ, ಪೈಲಟ್ ಸಂಭಾಷಣೆಗಳು, ರೇಡಿಯೋ ಪ್ರಸರಣಗಳು ಹಾಗೂ ಇತರೇ ಯಾಂತ್ರಿಕ ಶಬ್ಧಗಳ ಮಾಹಿತಿಯನ್ನು ಸಂಗ್ರಹಿಸಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಹಿರಿಯ ಸಹಾಯಕ ಪಿ.ಕೆ. ಮಿಶ್ರಾ ತಿಳಿಸಿದ್ದರು. ಸದ್ಯ 2ನೇ ಬ್ಲ್ಯಾಕ್‌ಬಾಕ್ಸ್‌ ಅನ್ನು ಭಾರತದಲ್ಲೇ ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

    ಏನಿದು ಬ್ಲ್ಯಾಕ್‌ ಬಾಕ್ಸ್‌?
    ವಿಮಾನದಲ್ಲಿ ಧ್ವನಿಗ್ರಹಣಕ್ಕೆ ಬಳಸಲಾಗುವ ಎರಡು ಸಾಧನಗಳನ್ನು ತಾಂತ್ರಿಕ ಭಾಷೆಯಲ್ಲಿ ‘ಬ್ಲ್ಯಾಕ್ ಬಾಕ್ಸ್’ ಎಂದು ಕರೆಯಲಾಗುತ್ತದೆ. ಬ್ಲ್ಯಾಕ್ ಬಾಕ್ಸ್ ಅನ್ನು ‘ಫ್ಲೈಟ್ ಡಾಟಾ ರೆಕಾರ್ಡರ್’ ಎಂದೂ ಕರೆಯುತ್ತಾರೆ. ಬ್ಲ್ಯಾಕ್ ಬಾಕ್ಸ್ ಹಾರಾಟದ ಸಮಯದಲ್ಲಿನ ವಿಮಾನದ ಎಲ್ಲಾ ಚಟುವಟಿಕೆಗಳನ್ನು ದಾಖಲಿಸುತ್ತದೆ. ಎಲ್ಲ ರೀತಿಯ ವಿಮಾನಗಳಲ್ಲಿ ಬ್ಲ್ಯಾಕ್‌ ಬಾಕ್ಸ್‌ ಅನ್ನು ಕಡ್ಡಾಯವಾಗಿ ಅಳವಡಿಸಲಾಗುತ್ತದೆ. ಇದನ್ನೂ ಓದಿ: ಬ್ಲ್ಯಾಕ್‌ಬಾಕ್ಸ್‌ನಲ್ಲಿ ಅಡಗಿದೆ ವಿಮಾನ ದುರಂತದ ರಹಸ್ಯ – ನಾಳೆಯೊಳಗೆ ಅಪಘಾತಕ್ಕೆ ಅಸಲಿ ಕಾರಣ ಸಿಗುತ್ತಾ?

    ವಿಮಾನ ಅಪಘಾತವಾದಾಗ ಅದಕ್ಕೆ ಕಾರಣ ಪತ್ತೆ ಹಚ್ಚಲು ನೆರವಾಗಲೆಂದೇ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಭದ್ರತೆಯ ದೃಷ್ಟಿಯಿಂದ ಕಪ್ಪು ಪೆಟ್ಟಿಗೆಯನ್ನು ಸಾಮಾನ್ಯವಾಗಿ ವಿಮಾನದ ಹಿಂಭಾಗದಲ್ಲಿ ಇಡಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ, ಸುತ್ತಲೂ ಬೆಂಕಿ ಇದ್ದರೂ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಆಘಾತವನ್ನು ತಡೆದುಕೊಳ್ಳುವ ಶಕ್ತಿಯನ್ನು ಹೊಂದಿದೆ.

    ಅಪಘಾತದ ಸಂಭವಿಸಿದಾಗ ಹಿಂಭಾಗದಲ್ಲಿ ಅದರಲ್ಲೂ ಬಾಲದ ಕಡೆ ಪೆಟ್ಟು ಬೀಳುವುದು ಕಡಿಮೆ. ಯಾಕೆಂದರೆ ಬಾಲ ಎತ್ತರದಲ್ಲಿರುತ್ತದೆ. ಈ ಕಾರಣಕ್ಕೆ ಬಾಲದಲ್ಲಿ ಅಳವಡಿಸಲಾಗಿರುತ್ತದೆ. ವಿಮಾನದ ಎಂಜಿನ್‌ಗೆ ಜೋಡಿಸಲಾದ ಜನರೇಟರ್ ನಿಂದ ಬ್ಲ್ಯಾಕ್ ಬಾಕ್ಸ್ ಚಾರ್ಜ್ ಆಗುತ್ತದೆ.

  • ಬೆಂಗಳೂರು – ಲಂಡನ್‌ ಸೇರಿದಂತೆ ದಿಢೀರ್‌ 7 ಏರ್‌ ಇಂಡಿಯಾ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು

    ಬೆಂಗಳೂರು – ಲಂಡನ್‌ ಸೇರಿದಂತೆ ದಿಢೀರ್‌ 7 ಏರ್‌ ಇಂಡಿಯಾ ಅಂತರಾಷ್ಟ್ರೀಯ ವಿಮಾನಗಳ ಹಾರಾಟ ರದ್ದು

    ನವದೆಹಲಿ: ತಾಂತ್ರಿಕ ದೋಷ ಮತ್ತು ವಿಮಾನಗಳ ಲಭ್ಯತೆ ಇಲ್ಲದಿರುವುದು ಸೇರಿದಂತೆ ವಿವಿಧ ಕಾರಣಗಳಿಂದಾಗಿ ಒಟ್ಟು ಏಳು ಏರ್ ಇಂಡಿಯಾ (Air India) ಅಂತರರಾಷ್ಟ್ರೀಯ ವಿಮಾನಗಳನ್ನು ರದ್ದುಪಡಿಸಲಾಗಿದೆ. ರದ್ದಾದ ವಿಮಾನಗಳಲ್ಲಿ ಆರು ಬೋಯಿಂಗ್ 787-8 ಡ್ರೀಮ್‌ಲೈನರ್‌ಗಳು (787 Dreamliners) ಆಗಿದೆ.

    ಯಾವೆಲ್ಲ ವಿಮಾನ ರದ್ದು?
    AI915 – ದೆಹಲಿಯಿಂದ ದುಬೈ – B788 ಡ್ರೀಮ್‌ಲೈನರ್
    AI153 – ದೆಹಲಿಯಿಂದ ವಿಯೆನ್ನಾ – B788 ಡ್ರೀಮ್‌ಲೈನರ್
    AI143 – ದೆಹಲಿಯಿಂದ ಪ್ಯಾರಿಸ್ – B788 ಡ್ರೀಮ್‌ಲೈನರ್
    AI159 – ಅಹಮದಾಬಾದ್‌ನಿಂದ ಲಂಡನ್ – B788 ಡ್ರೀಮ್‌ಲೈನರ್
    AI170 – ಲಂಡನ್‌ನಿಂದ ಅಮೃತಸರ – B788 ಡ್ರೀಮ್‌ಲೈನರ್
    AI133 – ಬೆಂಗಳೂರಿನಿಂದ ಲಂಡನ್ – B788 ಡ್ರೀಮ್‌ಲೈನರ್
    AI179 – ಮುಂಬೈನಿಂದ ಸ್ಯಾನ್ ಫ್ರಾನ್ಸಿಸ್ಕೋ – B777

     

    ದೆಹಲಿ-ಪ್ಯಾರಿಸ್‌ ಮಧ್ಯೆ ವಿಮಾನ ಲಭ್ಯವಿಲ್ಲದ ಕಾರಣ ರದ್ದಾಗಿದ್ದರೆ ಉಳಿದ ವಿಮಾನಗಳ ರದ್ದಿಗೆ ಕಾರಣ ತಿಳಿದು ಬಂದಿಲ್ಲ ಇದನ್ನೂ ಓದಿ: ಟ್ರಂಪ್‌ ಹೆಸರಿನಲ್ಲಿ ಫೋನ್‌ – ಮೊಬೈಲ್‌ ಉದ್ಯಮಕ್ಕೆ ಕಾಲಿಟ್ಟ ಟ್ರಂಪ್‌ | ಬೆಲೆ ಎಷ್ಟು? ಗುಣವೈಶಿಷ್ಟ್ಯ ಏನು?

    ಜೂನ್ 12 ರಂದು ಅಹಮದಾಬಾದ್‌ನಲ್ಲಿ ದುರ್ಘಟನೆ ನಡೆದ ಬಳಿಕ ಏರ್ ಇಂಡಿಯಾ ತನ್ನ ವಿಮಾನಗಳಲ್ಲಿ ಅದರಲ್ಲೂ ವಿಶೇಷವಾಗಿ ಅದರ ಬೋಯಿಂಗ್ 787 ಡ್ರೀಮ್‌ಲೈನರ್ ಫ್ಲೀಟ್‌ನ ಸುರಕ್ಷತಾ ತಪಾಸಣೆಗಳನ್ನು ಹೆಚ್ಚಿಸಿದೆ.

    ನಮ್ಮ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಮತ್ತು ಅವರನ್ನು ಆದಷ್ಟು ಬೇಗ ಅವರು ತೆರಳಬೇಕಾದ ಜಾಗಗಳಿಗೆ ಅವರನ್ನು ತಲುಪಿಸಲು ಪರ್ಯಾಯ ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ. ನಾವು ಹೋಟೆಲ್ ವಸತಿ ಸೌಕರ್ಯವನ್ನು ಒದಗಿಸುತ್ತಿದ್ದೇವೆ. ಮರುಪಾವತಿ ಅಥವಾ ಉಚಿತ ಮರುಹೊಂದಿಸುವಿಕೆಯನ್ನು ಸಹ ನೀಡುತ್ತಿದ್ದೇವೆ ಎಂದು ಏರ್ ಇಂಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.