Tag: air india

  • Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

    Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

    – ಒಂದೇ ವಾರದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾದ ಮಕ್ಕಳು

    ಅಹಮದಾಬಾದ್: ಒಂದು ವಾರದ ಹಿಂದೆ ಲಂಡನ್‌ನಲ್ಲಿ (London) ಮೃತಪಟ್ಟಿದ್ದ ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಪತಿ ಹಿಂತಿರುಗುವಾಗ ಅಹಮದಾಬಾದ್ ವಿಮಾನ ದುರಂತದಲ್ಲಿ (Ahmedabad Plane Crash) ಮೃತಪಟ್ಟಿದ್ದಾರೆ. ಒಂದೇ ವಾರದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ 8 ಮತ್ತು 4 ವರ್ಷದ ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.

    ಭಾರತ ಮೂಲದ ಲಂಡನ್ ಪ್ರಜೆ ಅರ್ಜುನ್ ಮನುಭಾಯಿ ಪಟೋಲಿಯಾ (Arjun Manubhai Patolia) ಅಹಮದಾಬಾದ್ ವಿಮಾನ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ. ಅರ್ಜುನ್ ಅವರ ಪತ್ನಿ ಭಾರತಿಬೆನ್ ಒಂದು ವಾರಗಳ ಹಿಂದೆ ಲಂಡನ್‌ನಲ್ಲಿ ಮೃತಪಟ್ಟಿದ್ದರು. ಭಾರತಿಬೆನ್ ಸಾವನ್ನಪ್ಪುವ ಮೊದಲು ತನ್ನ ಚಿತಾಭಸ್ಮವನ್ನು ತವರು ನೆಲೆದ ಅಮ್ರೇಲಿಯಲ್ಲಿನ ಪೌಲ್ ನದಿಯಲ್ಲಿ ಬಿಡಬೇಕು ಎಂದು ಕೊನೆ ಆಸೆಯನ್ನು ತಿಳಿಸಿದ್ದರು. ಇದನ್ನೂ ಓದಿ: ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

    ಪತ್ನಿಯ ಕೊನೆ ಆಸೆಯಂತೆ ವಾಡಿಯಾದ ಸಂಬಂಧಿಕರೊಂದಿಗೆ ಸೇರಿ ಅರ್ಜುನ್, ಭಾರತಿಬೆನ್ ಅವರ ಚಿತಾಭಸ್ಮವನ್ನು ಅಮ್ರೇಲಿಯಲ್ಲಿನ ಪೌಲ್ ನದಿಯಲ್ಲಿ ಬಿಟ್ಟು, ವಿಧಿವಿಧಾನಗಳನ್ನು ಮುಗಿಸಿದ್ದರು. ಬಳಿಕ ಲಂಡನ್‌ನಲ್ಲಿರುವ ಇಬ್ಬರು ಮಕ್ಕಳ ಬಳಿಗೆ ತೆರಳುತ್ತಿದ್ದ ವೇಳೆ ವಿಮಾನ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಒಂದೇ ವಾರದಲ್ಲಿ ತಂದೆ, ತಾಯಿಯನ್ನು ಕಳೆದುಕೊಂಡ ಇಬ್ಬರು ಹೆಣ್ಣುಮಕ್ಕಳು ದುಃಖಿಸಿದ್ದಾರೆ. ಇದನ್ನೂ ಓದಿ: Ahmedabad Plane Crash- ಆಕಾಶದಲ್ಲಿ ಹಾರಾಡುವ ಕನಸು ಕಂಡಿದ್ದ ಗಗನಸಖಿಯ ದುರಂತ ಅಂತ್ಯ

    ಏನಿದು ಪ್ರಕರಣ?
    ಜೂನ್ 12ರಂದು ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್‌ಗೆ ಹಾರುತ್ತಿದ್ದ ಎಐ171 ವಿಮಾನ ಮೆಘಾನಿಯ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದ ಮೇಲೆ ಬಿದ್ದಿದೆ. ಈ ಅಪಘಾತದ ಪರಿಣಾಮ ವಿಮಾನದಲ್ಲಿದ್ದ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿ ಸೇರಿ ಒಟ್ಟು 242 ಮಂದಿ ಪ್ರಯಾಣಿಸುತ್ತಿದ್ದರು. 241 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, ಅದೃಷ್ಟವಶಾತ್ ಓರ್ವ ಪ್ರಯಾಣಿಕ ಬದುಕುಳಿದಿದ್ದಾರೆ.

  • ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

    ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

    ಅಹಮದಾಬಾದ್: ಏರ್‌ ಇಂಡಿಯಾ (Air India) ವಿಮಾನ ದುರಂತದಲ್ಲಿ (Plane Crash) ನಾನು ನನ್ನ ಪ್ರೀತಿಯನ್ನು (Love) ಕಳೆದುಕೊಂಡೆ ಎಂದು ಯುವಕನೊಬ್ಬ ಅಹಮದಾಬಾದ್ (Ahmedabad) ಆಸ್ಪತ್ರೆಯ ಮುಂದೆ ಕಣ್ಣೀರಿಟ್ಟಿದ್ದಾನೆ.

    ಆಸ್ಪತ್ರೆಯ ವೇಯ್ಟಿಂಗ್ ರೂಮ್‍ನಲ್ಲಿ ಯುವಕ ಒಬ್ಬನೇ ಕುಳಿತು ಕಣ್ಣೀರು ಹಾಕುತ್ತಿದ್ದ. ಹಳೆಯ ನೆನಪುಗಳನ್ನು ಮೆಲುಕು ಹಾಕ್ತಾ, ಅಳುತ್ತಲೇ ಇದ್ದ. ಅಲ್ಲೇ ಇದ್ದ ಕೆಲವರು, ಆತನಿಗೆ ಯಾರಿಗಾಗಿ ಕಾಯುತ್ತಿರುವೆ? ಯಾರು ಮೃತಪಟ್ಟಿದ್ದಾರೆ ಎಂದು ಕೇಳಿದ್ದಾರೆ. ಈ ವೇಳೆ ಯುವಕ ಉತ್ತರಿಸಿದ್ದು ಒಂದೇ ಒಂದು ಪದ! `ನನ್ನ ಪ್ರೀತಿ’ ಎಂದು ಮತ್ತೆ ಬಿಕ್ಕಳಿಸಿ ಅತ್ತಿದ್ದಾನೆ. ಇದನ್ನೂ ಓದಿ: Ahmedabad Plane Crash- ಆಕಾಶದಲ್ಲಿ ಹಾರಾಡುವ ಕನಸು ಕಂಡಿದ್ದ ಗಗನಸಖಿಯ ದುರಂತ ಅಂತ್ಯ

    ವಿಮಾನ ದುರಂತದ ಸುದ್ದಿ ತಿಳಿಯುತ್ತಿದ್ದಂತೆ ಮುಂಬೈನಿಂದ ಯುವಕ ಬಂದಿದ್ದ. ಆತ ಆಸ್ಪತ್ರೆಯ ಮುಂದೆ ಕಣ್ಣೀರು ಹಾಕುತ್ತ ಮೃತದೇಹಕ್ಕಾಗಿ ಕಾಯುತ್ತಿದ್ದಾನೆ ಎಂದು ತಿಳಿದು ಬಂದಿದೆ.

    ಗುರುವಾರ ಅಹಮದಾಬಾದ್‍ನಲ್ಲಿ ಅಪಘಾತಗೊಂಡ ಏರ್ ಇಂಡಿಯಾ ವಿಮಾನದಲ್ಲಿ 10 ಮಂದಿ ಸಿಬ್ಬಂದಿ ಸೇರಿ 242 ಜನ ಇದ್ದರು. ಈ ಅವಘಡದಲ್ಲಿ 241 ಜನ ಸಾವನ್ನಪ್ಪಿದ್ದಾರೆ. ಓರ್ವ ಮಾತ್ರ ಪವಾಡ ಸದೃಶ್ಯವಾಗಿ ಬದುಕುಳಿದಿದ್ದಾರೆ. ಇದನ್ನೂ ಓದಿ: ಅಪಾರ್ಟ್ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

  • Photo Gallery: ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಮೋದಿ ಭೇಟಿ

    Photo Gallery: ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಮೋದಿ ಭೇಟಿ

    ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಮೃತಪಟ್ಟಿದ್ದಾರೆ. ದುರಂತ ನಡೆದ ಸ್ಥಳಕ್ಕೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಟ್ಟರು. ನಂತರ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

  • Ahmedabad Plane Crash- ಆಕಾಶದಲ್ಲಿ ಹಾರಾಡುವ ಕನಸು ಕಂಡಿದ್ದ ಗಗನಸಖಿಯ ದುರಂತ ಅಂತ್ಯ

    Ahmedabad Plane Crash- ಆಕಾಶದಲ್ಲಿ ಹಾರಾಡುವ ಕನಸು ಕಂಡಿದ್ದ ಗಗನಸಖಿಯ ದುರಂತ ಅಂತ್ಯ

    ಗಾಂಧೀನಗರ: ಆಕಾಶದಲ್ಲೇ ಹಾರಾಡುವ ಕನಸೊತ್ತು ಗಗನಸಖಿಯಾಗಿದ್ದ ಯುವತಿಯೊಬ್ಬಳು ಅಹಮದಾಬಾದ್ (Ahmedabad) ಏರ್ ಇಂಡಿಯಾ (Air India) ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

    ಮೃತ ಯುವತಿಯನ್ನು ಮಹಾರಾಷ್ಟ್ರದ (Maharashtra) ಡೊಂಬಿವ್ಲಿಯ ಮೂಲದ ರೋಷನಿ ಸೊಂಘರೆ (28) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಬೋಯಿಂಗ್‌ ನಿರ್ಮಿತ ವಾಯುಸೇನೆಯ ಅಪಾಚೆ ಹೆಲಿಕಾಪ್ಟರ್‌ ತುರ್ತು ಭೂಸ್ಪರ್ಶ

    ಕಳೆದು ಎರಡು ವರ್ಷಗಳಿಂದ ರೋಷನಿ ತಂದೆ, ತಾಯಿ ಹಾಗೂ ಸಹೋದರನೊಂದಿಗೆ ಮುಂಬೈನ ಡೊಂಬಿವ್ಲಿಯಲ್ಲಿ ವಾಸವಾಗಿದ್ದರು. ಮುಂಬೈನಲ್ಲಿಯೇ ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿದ್ದರು. ಕುಟುಂಬದಲ್ಲಿದ್ದ ಆರ್ಥಿಕ ಸಮಸ್ಯೆಗಳನ್ನು ಎದುರಿಸಿ, ಗಗನಸಖಿಯಾಗುವ ಕನಸನ್ನು ನನಸಾಗಿಸಿಕೊಂಡಿದ್ದರು. ತಮ್ಮ ಕರ್ತವ್ಯಕ್ಕಾಗಿ ಅಹಮದಾಬಾದ್‌ಗೆ ತೆರಳಲು ಒಂದು ದಿನ ಮುಂಚೆಯೇ ಮನೆಯಿಂದ ಹೊರಟಿದ್ದರು. ಆಕಾಶದಲ್ಲೇ ಹಾರಾಡುವ ಕನಸಿನೊಂದಿಗೆ ರೋಷನಿ ಗುರುವಾರ (ಜೂ.12) ಅಹಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ಇಂಡಿಯಾ ಎಐ171 ವಿಮಾನ ಹತ್ತಿದ್ದರು.

    ದುರಂತವೆಂದರೆ ಆಕಾಶದಲ್ಲಿ ಹಾರಾಡುವ ಕನಸು ಆಕಾಶದಲ್ಲೇ ನುಚ್ಚನೂರಾಗಿ ಹೋಯಿತು. ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದ 241 ಜನರಲ್ಲಿ ಗಗನಸಖಿ ರೋಷನಿ ಕೂಡ ಸಾವನ್ನಪ್ಪಿದ್ದರು.

    ಏನಿದು ಘಟನೆ?
    ಅಹಮದಾಬಾದ್ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್‌ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ಪರಿಣಾಮ ಅಹಮದಾಬಾದ್ ಸಮೀಪದ ಮೇಘನಿ ನಗರದ ಬಿಜೆ ಎಂಬಿಬಿಎಸ್ ಕಾಲೇಜು ಹಾಸ್ಟೆಲ್‌ಗೆ ಡಿಕ್ಕಿ ಹೊಡೆದಿತ್ತು. ವಿಮಾನದಲ್ಲಿ ಪೈಲೆಟ್, ಸಿಬ್ಬಂದಿ ಸೇರಿ ಒಟ್ಟು 242 ಪ್ರಯಾಣಿಕರಿದ್ದರು. ಈ ಪೈಕಿ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ಪಾರಾಗಿದ್ದಾರೆ.ಇದನ್ನೂ ಓದಿ: ವಿಮಾನ ದುರಂತ ಬೆನ್ನಲ್ಲೇ ಥೈಲ್ಯಾಂಡಲ್ಲಿ ಏರ್‌ ಇಂಡಿಯಾ ತುರ್ತು ಭೂಸ್ಪರ್ಶ

  • ರಂಜಿತಾ ಸಾವಿಗೆ ವ್ಯಂಗ್ಯ – ಕೇರಳ ಉಪ ತಹಶೀಲ್ದಾರ್ ಅಮಾನತು

    ರಂಜಿತಾ ಸಾವಿಗೆ ವ್ಯಂಗ್ಯ – ಕೇರಳ ಉಪ ತಹಶೀಲ್ದಾರ್ ಅಮಾನತು

    ತಿರುವನಂತಪುರಂ: ನರ್ಸ್‌ ರಂಜಿತಾ (Ranjitha) ಸಾವನ್ನು ವ್ಯಂಗ್ಯಮಾಡಿದ್ದ ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡ್ ತಾಲೂಕಿನ ಡೆಪ್ಯೂಟಿ ತಹಶೀಲ್ದಾರ್ ಪವಿತ್ರನ್ (A Pavithran) ಅವರನ್ನು ಕೇರಳ ಸರ್ಕಾರ (Kerala Government) ಅಮಾನತು ಮಾಡಿದೆ.

    ಕೇರಳ ಸರ್ಕಾರಕ್ಕೆ ರಜೆ ಸಲ್ಲಿಸಿ ಹೋಗಿದ್ದಕ್ಕೆ ರಂಜಿತಾಗೆ ಸಾವು ಎಂದು ಸೋಷಿಯಲ್‌ ಮೀಡಿಯಾದಲ್ಲಿ ಪವಿತ್ರನ್ ವ್ಯಂಗ್ಯವಾಗಿ ಕಮೆಂಟ್ ಹಾಕಿದ್ದರು. ಇನ್ನೊಂದು ಪೋಸ್ಟ್‌ ಮಾಡಿ ಆಕೆ ಇನ್ನೂ ಎತ್ತರಕ್ಕೇರಲಿ ಎಂದು ಪವಿತ್ರನ್‌ ಕಮೆಂಟ್‌ ಮಾಡಿದ್ದರು. ಇದನ್ನೂ ಓದಿ: ಕನಸಿನ ಮನೆಗೆ ಕಾಲಿಡುವ ಮೊದಲೇ ಸಾವಿನ ಮನೆ ಸೇರಿದ ನರ್ಸ್ ರಂಜಿತಾ

     
    ಪವಿತ್ರನ್‌ ಪೋಸ್ಟ್‌ಗೆ ಕೇರಳದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸಿಎಂ ಪಿಣರಾಯಿ ವಿಜಯನ್‌ ಅವರಿಗೆ ಆನ್‌ಲೈನ್‌ನಲ್ಲಿ ಹಲವು ಮಂದಿ ದೂರು ಸಲ್ಲಿಸಿದ್ದರು. ಈ ದೂರಿನ ಬೆನ್ನಲ್ಲೇ ಕಾಸರಗೋಡು ಜಿಲ್ಲಾಧಿಕಾರಿ ಕೆ. ಇಂಬಶೇಖರನ್ ಪವಿತ್ರನ್‌ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಇಡೀ ವಿಮಾನ ಸುಟ್ಟುದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

    ಯುಕೆಯಲ್ಲಿ ನರ್ಸ್‌ ಆಗಿದ್ದ ರಂಜಿತಾ ರಜೆಯ ಮೇಲೆ ಕೇರಳಕ್ಕೆ ಬಂದಿದ್ದರು. ರಂಜಿತಾ ಅವರಿಗೆ ಕೇರಳ ಆರೋಗ್ಯ ಇಲಾಖೆಯಲ್ಲಿ ಕೆಲಸ ಸಿಕ್ಕಿತ್ತು. ಹೀಗಾಗಿ ಸಹಿ ಹಾಕಲು ಕೇರಳಕ್ಕೆ ಆಗಮಿಸಿದ್ದರು. ಆದರೆ ಯುಕೆ ಆಸ್ಪತ್ರೆಯಲ್ಲಿ ಮಾಡಿಕೊಂಡಿದ್ದ ಒಪ್ಪಂದವನ್ನು ಪೂರ್ಣಗೊಳಿಸಲು ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು.

  • 8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

    8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

    – 5 ಮೃತ ದೇಹಗಳು ಕುಟುಂಬಗಳಿಗೆ ಹಸ್ತಾಂತರ

    ಅಹಮದಾಬಾದ್‌: ಇಲ್ಲಿನ ಮೇಘನಿನಗರದಲ್ಲಿ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದ (Air India Plane Crash) ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದಡಿ ಕಾರ್ಯ ನಿರ್ವಹಿಸುವ ವಿಮಾನ ಅಪಘಾತ ತನಿಖಾ ಸಂಸ್ಥೆ ʻಎಎಐಬಿʼ (EEIB) ತನಿಖೆ ನಡೆಸಲು ಮುಂದಾಗಿದೆ.

    ಅಲ್ಲದೇ ಅಮೆರಿಕ (America), ಬ್ರಿಟನ್‌ ದೇಶಗಳೂ ಸಹ ತನಿಖೆಗೆ ಸಹಕರಿಸಲು ಮುಂದಾಗಿವೆ. ಅಮೆರಿಕದ ತನಿಖಾ ಸಂಸ್ಥೆಯಾದ NTSB ಅಧಿಕಾರಿಗಳು, ಬ್ರಿಟನ್‌ನ ಏರ್ ಆಕ್ಸಿಡೆಂಟ್ ಇನ್ವೆಸ್ಟಿಕೇಶನ್ ಬ್ರಾಂಚ್ (Investigation Branch) ತನ್ನ ತಂಡವನ್ನು ಕಳಿಸುವುದಾಗಿ ಹೇಳಿವೆ. ಜೊತೆಗೆ ತಂತ್ರಜ್ಞಾನದ ನೆರವು ನೀಡುವುದಾಗಿಯೂ ಹೇಳಿವೆ. ಮತ್ತೊಂದೆಡೆ ಡಿಜಿಸಿಎ (ನಾಗರಿಕ ವಿಮಾನಯಾನ ಸಚಿವಾಲಯ) ತಂಡವು ಸ್ಥಳಕ್ಕೆ ಧಾವಿಸಿದ್ದು, ಅಪಘಾತಕ್ಕೆ ಕಾರಣವೇನೆಂಬುದನ್ನು ಪತ್ತೆಹಚ್ಚಲು ಮುಂದಾಗಿವೆ. ಈಗಾಗಲೇ ಬ್ಲ್ಯಾಕ್‌ಬಾಕ್ಸ್‌ ಕೂಡ ಪತ್ತೆಯಾಗಿದ್ದು, ಶೀಘ್ರದಲ್ಲೇ ಅಪಘಾತಕ್ಕೆ ನಿಖರ ಕಾರಣ ತಿಳಿಯಲಿದೆ. ಇದನ್ನೂ ಓದಿ: Plane crash | ಲಂಡನ್ ತಲುಪಿ ಫೋನ್ ಮಾಡ್ತೀನಿ ಅಂದಿದ್ದ ಗಗನಸಖಿ ಮಗಳು – ಬಾರದ ಲೋಕಕ್ಕೆ ಹೋದ್ಳು..!

    ಈ ಬೆನ್ನಲ್ಲೇ ಪ್ರಾಥಮಿಕ ತನಿಖೆಯಲ್ಲಿ ಅಚ್ಚರಿ ಅಂಶಗಳು ಬೆಳಕಿಗೆ ಬಂದಿವೆ. ವಿಮಾನ ಟೇಕ್‌ ಆಫ್‌ ಆದಾಗ ಸಹಜ ಮತ್ತು ಸುಸ್ಥಿರ ಸ್ಥಿತಿಯಲ್ಲಿತ್ತು. ಆದ್ರೆ 8 ಸೆಕೆಂಡುಗಳ ನಂತರ ವಿಮಾನ ಹಾರಾಟದಲ್ಲಿ ಅಸಹಜತೆ ಕಂಡುಬಂದಿದೆ. ಹೀಗಾಗಿ 7 ರಿಂದ 12 ಸೆಕೆಂಡುಗಳ ಹಾರಾಟದ ಮೇಲೆ ತನಿಖೆ ನಡೆಸಲು ಸಂಬಂಧಪಟ್ಟ ತನಿಖಾ ತಂಡಗಳು ಮುಂದಾಗಿವೆ. ಇದನ್ನೂ ಓದಿ: ಇಡೀ ವಿಮಾನ ಸುಟ್ಟು ಭಸ್ಮವಾದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

    5 ಮೃತ ದೇಹಗಳು ಕುಟುಂಬಕ್ಕೆ ಹಸ್ತಾಂತರ
    ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಈವರೆಗೆ 200ಕ್ಕೂ ಹೆಚ್ಚು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಡಿಎನ್‌ಎ ಮೂಲಕ ಗುರುತು ಪತ್ತೆ ಮಾಡುವ ಕೆಲಸ ಮಾಡಲಾಗುತ್ತಿದೆ. ಈವರೆಗೆ ಗುರುತು ಪತ್ತೆಯಾದ 5 ಮೃತದೇಹಗಳನ್ನು ಸಂಬಂಧಪಟ್ಟ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದ ಮೃತದೇಹಗಳ ಗುರುತು ಪತ್ತೆ ಕಾರ್ಯ ನಡೆಯುತ್ತಿದ್ದು, ಡಿಎನ್‌ಎ ವರದಿಗಾಗಿ 72 ಗಂಟೆಗಳ ಕಾಲ ಕಾಯಬೇಕಿದೆ ಎಂದು ಸಂಬಂಧಪಟ್ಟ ಅಧಿಕಾರಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

    ಅಹಮದಾಬಾದ್ ಏರ್‌ಪೋರ್ಟ್‌ನಲ್ಲಿ ಆಗಿದ್ದೇನು?
    ಜೂನ್ 12ರಂದು (ಗುರುವಾರ) ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್‌ಗೆ ಹಾರುತ್ತಿದ್ದ AI171 ವಿಮಾನ ಅಪಘಾತಕ್ಕೀಡಾಯಿತು. ಅಂದು ಮಧ್ಯಾಹ್ನ 13.38ಕ್ಕೆ ಅಹಮದಾಬಾದ್‌ನಿಂದ ಹೊರಟ 12 ವರ್ಷದ ಹಳೆಯ ಬೋಯಿಂಗ್ 787-8 ವಿಮಾನ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿತ್ತು. ವಿಮಾನ ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಯಿತು.  ಇದನ್ನೂ ಓದಿ: ವಿಮಾನ ದುರಂತ – ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾವು

    ಇದರಿಂದ ವಿಮಾನದಲ್ಲಿದ್ದ 242 ಜನರಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ. ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮಾನದಲ್ಲಿದ್ದ 230 ಪ್ರಯಾಣಿಕರ ಪೈಕಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಪ್ರಜೆಗಳು ಮತ್ತು ಓರ್ವ ಕೆನಡಾ ಇದ್ದರು. ಬದುಕುಳಿದ ಏಕೈಕ ವ್ಯಕ್ತಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆಯಾಗಿದ್ದಾರೆ ಎಂದು ಏರ್ ಇಂಡಿಯಾ ಖಚಿತಪಡಿಸಿದೆ.

    ಮೇ ಡೇ – ಪೈಲಟ್‌ನ ಕೊನೇ ಸಂದೇಶ
    ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನವು ರನ್ ವೇ 23ರಿಂದ ವಿಮಾನ ಟೇಕಾಫ್ ಆಗಿತ್ತು. ಹಾರಿದ ಮೂರ್ನಾಲ್ಕು ನಿಮಿಷಗಳಲ್ಲೇ ಪೈಲಟ್ `ಮೇ ಡೇ.. ಮೇ ಡೇ..’ ಎಂದು ಎಟಿಸಿಗೆ ಕೊನೆಯ ಸಂದೇಶ ಕೊಟ್ಟಿದ್ದರು. ಮೇ ಡೇ ಅಂದ್ರೆ ವಿಮಾನ ಡೇಂಜರ್‌ನಲ್ಲಿದ್ದು ತುರ್ತು ಅವಶ್ಯಕತೆ ಬಗ್ಗೆ ಎಮರ್ಜೆನ್ಸಿ ಕರೆ ಮಾಡುವುದು. ಎಟಿಸಿ ಮತ್ತೆ ಕರೆ ಮಾಡಿದಾಗ ವಾಪಸ್ ಪ್ರತಿಕ್ರಿಯೆ ಬಂದಿರಲಿಲ್ಲ. ಪೈಲಟ್ ಮೇ ಡೇ ಸಂದೇಶ ಕೊಟ್ಟ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿತ್ತು.

  • ವಿಮಾನ ದುರಂತ – ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾವು

    ವಿಮಾನ ದುರಂತ – ಟೀ ಅಂಗಡಿ ಬಳಿ ನಿಂತಿದ್ದ 14 ವರ್ಷದ ಬಾಲಕ ಸಾವು

    – ತಾಯಿಗೆ ತಿಂಡಿ ಕೊಡಲು ಹೋಗಿದ್ದ ಬಾಲಕ ಬೆಂಕಿಯ ತೀವ್ರತೆಗೆ ದುರ್ಮರಣ

    ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತದ (Air India Flight Crash) ವೇಳೆ ಅಲ್ಲೇ ಪಕ್ಕದ ಟೀ ಸ್ಟಾಲ್ ಬಳಿ ನಿಂತಿದ್ದ 14 ವರ್ಷದ ಬಾಲಕ ಬೆಂಕಿಯ ತೀವ್ರತೆಗೆ ಸಿಲುಕಿ ದಾರುಣ ಅಂತ್ಯ ಕಂಡಿದ್ದಾನೆ.

    ಆಕಾಶ್ (14) ಮೃತ ಬಾಲಕ. ಬಿಜೆ ಹಾಸ್ಟೆಲ್‌ನ ಮುಂಭಾಗ ಆಕಾಶ್ ಕುಟುಂಬವು ಟೀ ಅಂಗಡಿ ಇಟ್ಟುಕೊಂಡಿದ್ದರು. ಆಕಾಶ್ ತಾಯಿಗೆ ತಿಂಡಿ ಕೊಡಲು ಅಂಗಡಿ ಬಳಿ ಹೋಗಿದ್ದ. ವಿಮಾನ ದುರಂತದ ವೇಳೆ ಆಕಾಶ್ (Akash) ಟೀ ಅಂಗಡಿಯ ಮುಂದೆ ನಿಂತಿದ್ದ. ಇದ್ದಕ್ಕಿದ್ದಂತೆ ಸ್ಫೋಟದಿಂದ ದೊಡ್ಡ ಮಟ್ಟದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಆಕಾಶ್ ಮೃತಪಟ್ಟಿದ್ದಾನೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: Plane crash | ಲಂಡನ್ ತಲುಪಿ ಫೋನ್ ಮಾಡ್ತೀನಿ ಅಂದವ್ಳು ಬಾರದ ಲೋಕಕ್ಕೆ ಹೋದ್ಳು..!

    ಆಕಾಶ್‌ನನ್ನು ಕಳೆದುಕೊಂಡ ಸಹೋದರ ಕಲ್ಪೇಶ್ ಆಕ್ರಂದನ ಮುಗಿಲು ಮುಟ್ಟಿತು. ನನ್ನ ದೊಡ್ಡಣ್ಣ ನನಗೆ ಕರೆ ಮಾಡಿ ವಿಚಾರ ತಿಳಿಸಿದ್ದರು. ನಾನು ಆಟೋ ಓಡಿಸುತ್ತಿದ್ದೆ. ಬೆಂಕಿ ತೀವತ್ರೆಗೆ ಗಾಯಗೊಂಡಿದ್ದ ನನ್ನ ತಾಯಿಯನ್ನು ಆಸ್ಪತ್ರೆಗೆ ಕರೆದೊಯ್ದರು. ನನ್ನ ತಮ್ಮ ಅಲ್ಲೇ ಸಿಲುಕಿದ್ದ. ನನ್ನ ತಮ್ಮನನ್ನು ಒಮ್ಮೆ ನೋಡಲು ಬಿಡಿ ಎಂದು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ಇಡೀ ವಿಮಾನ ಸುಟ್ಟು ಭಸ್ಮವಾದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

    ನನ್ನ ತಮ್ಮ ಆಕಾಶ್ ಕೂಡ ಅಲ್ಲೇ ಇದ್ದ. ಆದರೆ ಅವನನ್ನು ಯಾರೂ ರಕ್ಷಣೆ ಮಾಡೋರಿಲ್ಲದೆ ಸಾವನ್ನಪ್ಪಿದ್ದಾನೆ. ನನ್ನ ತಮ್ಮ ಇಲ್ಲದೆ ನಾನು ಹೇಗೆ ಬದುಕಲಿ. ಒಮ್ಮೆ ನನ್ನ ಸಹೋದರನ ಮುಖ ನೋಡಲು ಬಿಡಿ. ದೇವರು ನನ್ನ ತಮ್ಮನ ಕಿತ್ಕೊಂಡ. ನನ್ನ ತಮ್ಮನನ್ನು ನಿನ್ನೆಯಿಂದ ನೋಡಿಲ್ಲ. ದಯಮಾಡಿ ನನ್ನ ಚಿಕ್ಕ ತಮ್ಮನನ್ನು ನೋಡಲು ಬಿಡಿ ಎಂದು ಪರಿ ಪರಿಯಾಗಿ ಬೇಡಿಕೊಂಡರು. ಇದನ್ನೂ ಓದಿ: Plane Crash | ಅಪ್ಪನ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗ ದುರಂತ ಸಾವು

    ನನ್ನ ತಾಯಿಗೆ ಇನ್ನೂ ವಿಷಯ ತಿಳಿದಿಲ್ಲ. ಆಕೆಗೆ ಕೂಡ ಚಿಕಿತ್ಸೆ ಕೊಡಿಸಲಾಗ್ತಿದೆ. ಮಗ ಹೇಗಿದ್ದಾನೆ ಎಂದು ಕೇಳ್ತಿದ್ದಾರೆ. ಆಕಾಶ್‌ಗೆ ಏನೂ ಆಗಿಲ್ಲ, ಚೆನ್ನಾಗಿದ್ದಾನೆ ಎಂದು ಅವರನ್ನು ಸಮಾಧಾನಪಡಿಸಿದ್ದೇವೆ ಎಂದು ದುಃಖಿಸಿದರು.

  • Plane crash | ಲಂಡನ್ ತಲುಪಿ ಫೋನ್ ಮಾಡ್ತೀನಿ ಅಂದಿದ್ದ ಗಗನಸಖಿ ಮಗಳು – ಬಾರದ ಲೋಕಕ್ಕೆ ಹೋದ್ಳು..!

    Plane crash | ಲಂಡನ್ ತಲುಪಿ ಫೋನ್ ಮಾಡ್ತೀನಿ ಅಂದಿದ್ದ ಗಗನಸಖಿ ಮಗಳು – ಬಾರದ ಲೋಕಕ್ಕೆ ಹೋದ್ಳು..!

    – ಮಗಳ ಫೋನ್‌ ಕಾಲ್‌ಗೆ ಕಾಯ್ತಿದ್ದ ಅಪ್ಪನಿಗೆ ಬಂತು ಸಾವಿನ ಸುದ್ದಿಯ ಕರೆ

    ಅಹಮದಾಬಾದ್‌: ಏರ್‌ ಇಂಡಿಯಾ ವಿಮಾನ ದುರಂತದಲ್ಲಿ (Air India Plane Crash) ಮೃತಪಟ್ಟವರ ಹಿಂದೆ ಕಣ್ಣೀರು ತರಿಸುವ ಕಥೆಗಳಿದ್ದು, ಒಂದೊಂದಾಗಿ ಬೆಳಕಿಗೆ ಬರ್ತಿವೆ. ಅದೇ ರೀತಿ ಗುರುವಾರ ಲಂಡನ್ ತಲುಪಿ ಫೋನ್ ಮಾಡ್ತೀನಿ ಅಂದಿದ್ದ ಗಗನಸಖಿ ಬಾರದ ಲೋಕಕ್ಕೆ ಪಯಣಿಸಿದ್ದಾಳೆ.

    ಹೌದು. ಮಹಾರಾಷ್ಟ್ರ ರಾಯಗಢ ಜಿಲ್ಲೆಯ ಪನ್ವೆಲ್‌ ಮೂಲದ ಏರ್ ಇಂಡಿಯಾ ಗಗನಸಖಿ (Air Hostess) ಮೈಥಿಲಿ ಪಾಟೀಲ್ 24 ವರ್ಷಕ್ಕೆ ದುರಂತ ಅಂತ್ಯ ಕಂಡಿದ್ದಾರೆ. ನಿನ್ನೆ ಬೆಳಗ್ಗೆ 11:30ರ ಹೊತ್ತಿಗೆ ಮೈಥಿಲಿ ಅಪ್ಪನೊಂದಿಗೆ ಕೊನೆಯದ್ದಾಗಿ ಮಾತನಾಡಿದ್ದಳು. ಲಂಡನ್‌ಗೆ ತಲುಪಿದ ಕೂಡಲೇ ಕರೆ ಮಾಡುವುದಾಗಿ ತಿಳಿಸಿದ್ದಳು. ಆದರೆ ನಡೆದಿದ್ದೇ ಬೇರೆ… ಅಹಮದಾಬಾದ್‌ ಏರ್‌ಪೋರ್ಟ್‌ನಿಂದ ಟೇಕಾಫ್‌ ಆದ ವಿಮಾನ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು. ಇದೇ ವಿಮಾನದಲ್ಲಿ ಗಗನ ಸಖಿಯಾಗಿದ್ದ ಮೈಥಿಲಿ ಬದುಕಿನ ದುರಂತ ಅಂತ್ಯ ಕಂಡರು. ಇದೀಗ ಮಗಳ ಕರೆಗಾಗಿ ಕಾಯುತ್ತಿದ್ದ ತಂದೆ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.

    ಅಷ್ಟಕ್ಕೂ ಅಹಮದಾಬಾದ್‌ ಏರ್‌ಪೋರ್ಟ್‌ನಲ್ಲಿ ಆಗಿದ್ದೇನು?
    ಜೂನ್ 12ರಂದು (ಗುರುವಾರ) ಅಹಮಾದಾಬಾದ್‌ನ (Ahmedabad) ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್‌ಗೆ ಹಾರುತ್ತಿದ್ದ AI171 ವಿಮಾನ ಅಪಘಾತಕ್ಕೀಡಾಯಿತು. ಮಧ್ಯಾಹ್ನ 13.38ಕ್ಕೆ ಅಹಮದಾಬಾದ್‌ನಿಂದ ಹೊರಟ 12 ವರ್ಷದ ಹಳೆಯ ಬೋಯಿಂಗ್ 787-8 ವಿಮಾನ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿತ್ತು. ವಿಮಾನ ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಯಿತು.

    ಇದರಿಂದ ವಿಮಾನದಲ್ಲಿದ್ದ 242 ಜನರಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ. ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮಾನದಲ್ಲಿದ್ದ 230 ಪ್ರಯಾಣಿಕರ ಪೈಕಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಪ್ರಜೆಗಳು ಮತ್ತು ಓರ್ವ ಕೆನಡಾ ಇದ್ದರು. ಬದುಕುಳಿದ ಏಕೈಕ ವ್ಯಕ್ತಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆಯಾಗಿದ್ದಾರೆ ಎಂದು ಏರ್ ಇಂಡಿಯಾ ಖಚಿತಪಡಿಸಿದೆ.

    ಮೇ ಡೇ – ಕೊನೇ ಸಂದೇಶ
    ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನವು ರನ್ ವೇ 23ರಿಂದ ವಿಮಾನ ಟೇಕಾಫ್ ಆಗಿತ್ತು. ಹಾರಿದ ಮೂರ್ನಾಲ್ಕು ನಿಮಿಷಗಳಲ್ಲೇ ಪೈಲಟ್ `ಮೇ ಡೇ.. ಮೇ ಡೇ..’ ಎಂದು ಎಟಿಸಿಗೆ ಕೊನೆಯ ಸಂದೇಶ ಕೊಟ್ಟಿದ್ದರು. ಮೇ ಡೇ ಅಂದ್ರೆ ವಿಮಾನ ಡೇಂಜರ್‌ನಲ್ಲಿದ್ದು ತುರ್ತು ಅವಶ್ಯಕತೆ ಬಗ್ಗೆ ಎಮರ್ಜೆನ್ಸಿ ಕರೆ ಮಾಡುವುದು. ಎಟಿಸಿ ಮತ್ತೆ ಕರೆ ಮಾಡಿದಾಗ ವಾಪಸ್ ಪ್ರತಿಕ್ರಿಯೆ ಬಂದಿರಲಿಲ್ಲ. ಪೈಲಟ್ ಮೇ ಡೇ ಸಂದೇಶ ಕೊಟ್ಟ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿತ್ತು.

  • Plane Crash | ಅಪ್ಪನ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗ ದುರಂತ ಸಾವು

    Plane Crash | ಅಪ್ಪನ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗ ದುರಂತ ಸಾವು

    – ಕೊನೇ ಕ್ಷಣದ ಫೋಟೋ ಅಷ್ಟೇ ತಾಯಿಗೆ ನೆನಪು

    ಅಹಮದಾಬಾದ್‌: ಇಲ್ಲಿ ಸಂಭವಿಸಿದ ವಿಮಾನ ದುರಂತ (Ahmedabad Plane Crash) ಹೃದಯ ವಿದ್ರಾವಕ ಹಾಗೂ ಆಘಾತಕಾರಿ ಘಟನೆ. ಈ ದುರ್ಘಟನೆ ದೇಶ ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲೂ ಜನರನ್ನ ದಿಗ್ಭ್ರಮೆಗೊಳಿಸಿದೆ. ವಿಮಾನದಲ್ಲಿದ್ದ 242 ಜನರ ಪೈಕಿ 241 ಮಂದಿ ಮೃತಪಟ್ಟಿದ್ದು, ಒಬ್ಬೊಬ್ಬರದ್ದೂ ಒಂದೊಂದು ಕರುಳು ಹಿಂಡುವ ಕಥೆಗಳು ಕೇಳಿಬರುತ್ತಿವೆ. ಅದರಂತೆ ಗುಜರಾತ್‌ (Gujarat) ಮಣಿನಗರದ ನಿವಾಸಿಯೊಬ್ಬರ ಬದುಕು ದುರಂತ ಅಂತ್ಯ ಕಂಡಿರುವುದು ನೋಡಬಹುದು.

    ಅಮ್ಮನೊಂದಿಗೆ ಕೊನೆಯ ಫೋಟೋ
    ಗುಜರಾತ್‌ನ ಮಣಿನಗರ ನಿವಾಸಿ ಲಾರೆನ್ಸ್‌ ಡೇನಿಯಲ್‌ ಅಹಮದಾಬಾದ್‌ ವಿಮಾನ ಪತನದಲ್ಲಿ ಬದುಕಿನ ದುರಂತ ಅಂತ್ಯ ಕಂಡಿದ್ದಾರೆ. ಲಾರೆನ್ಸ್‌ ಪ್ರಸ್ತುತ ಲಂಡನ್‌ನಲ್ಲಿ ಕೆಲಸ ಮಾಡುತ್ತಿದ್ದರು, ಇತ್ತೀಚೆಗೆ ತಮ್ಮ ತೀರಿಕೊಂಡ ಹಿನ್ನೆಲೆ ಮಣಿನಗರಕ್ಕೆ ಆಗಮಿಸಿದ್ದರು. ಅಪ್ಪನ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಲಾರೆನ್ಸ್ ಡೇನಿಯಲ್ ತಮ್ಮ ಬದುಕಿನ ಯಾತ್ರೆಯನ್ನೇ ಮುಗಿಸಿದ್ದಾರೆ.

    ಇತ್ತ ಗಂಡನ ಕಳೆದುಕೊಂಡ ದುಃಖ ಮಾಸುವ ಮುನ್ನವೇ ಮಗನನ್ನು ಕಳೆದುಕೊಂಡ ತಾಯಿ ಮತ್ತೆ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಸಾವಿಗೂ ಮುನ್ನ ಏರ್‌ಪೋರ್ಟ್‌ನಲ್ಲಿ ಮಗನೊಂದಿಗೆ ಕ್ಲಿಕ್ಕಿಸಿಕೊಂಡ ಫೋಟೋವಷ್ಟೇ ತಾಯಿ ಬಳಿ ನೆನಪಾಗಿ ಉಳಿದಿದೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ – ದುರಂತದಲ್ಲಿ ಮಾರ್ಬಲ್‌ ವ್ಯಾಪಾರಿ ಪಿಂಕು ಮೋದಿ ಮಕ್ಕಳು ಸಾವು

    ಏನಿದು ದುರಂತ?
    ಜೂನ್ 12ರಂದು (ಗುರುವಾರ) ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ ಗ್ಯಾಟ್ವಿಕ್‌ಗೆ ಹಾರುತ್ತಿದ್ದ AI171 ವಿಮಾನ ಅಪಘಾತಕ್ಕೀಡಾಯಿತು. ಮಧ್ಯಾಹ್ನ 13.38ಕ್ಕೆ ಅಹಮದಾಬಾದ್‌ನಿಂದ ಹೊರಟ 12 ವರ್ಷದ ಹಳೆಯ ಬೋಯಿಂಗ್ 787-8 ವಿಮಾನ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿತ್ತು. ವಿಮಾನ ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೀಡಾಯಿತು.  ಇದನ್ನೂ ಓದಿ: ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ

    ಇದರಿಂದ ವಿಮಾನದಲ್ಲಿದ್ದ 242 ಜನರಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ. ಬದುಕುಳಿದ ಏಕೈಕ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಮಾನದಲ್ಲಿದ್ದ 230 ಪ್ರಯಾಣಿಕರ ಪೈಕಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಪೋರ್ಚುಗೀಸ್ ಪ್ರಜೆಗಳು ಮತ್ತು ಓರ್ವ ಕೆನಡಾ ಇದ್ದರು. ಬದುಕುಳಿದ ಏಕೈಕ ವ್ಯಕ್ತಿ ಭಾರತೀಯ ಮೂಲದ ಬ್ರಿಟಿಷ್ ಪ್ರಜೆಯಾಗಿದ್ದಾರೆ ಎಂದು ಏರ್ ಇಂಡಿಯಾ ಖಚಿತಪಡಿಸಿದೆ.

    ಮೇ ಡೇ – ಕೊನೇ ಸಂದೇಶ
    ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನವು ರನ್ ವೇ 23ರಿಂದ ವಿಮಾನ ಟೇಕಾಫ್ ಆಗಿತ್ತು. ಹಾರಿದ ಮೂರ್ನಾಲ್ಕು ನಿಮಿಷಗಳಲ್ಲೇ ಪೈಲಟ್ `ಮೇ ಡೇ.. ಮೇ ಡೇ..’ ಎಂದು ಎಟಿಸಿಗೆ ಕೊನೆಯ ಸಂದೇಶ ಕೊಟ್ಟಿದ್ದರು. ಮೇ ಡೇ ಅಂದ್ರೆ ವಿಮಾನ ಡೇಂಜರ್‌ನಲ್ಲಿದ್ದು ತುರ್ತು ಅವಶ್ಯಕತೆ ಬಗ್ಗೆ ಎಮರ್ಜೆನ್ಸಿ ಕರೆ ಮಾಡುವುದು. ಎಟಿಸಿ ಮತ್ತೆ ಕರೆ ಮಾಡಿದಾಗ ವಾಪಸ್ ಪ್ರತಿಕ್ರಿಯೆ ಬಂದಿರಲಿಲ್ಲ. ಪೈಲಟ್ ಮೇ ಡೇ ಸಂದೇಶ ಕೊಟ್ಟ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡಿತ್ತು.  ಇದನ್ನೂ ಓದಿ: ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

  • ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ

    ಅಹಮದಾಬಾದ್ ವಿಮಾನ ದುರಂತ – ಏರ್ ಇಂಡಿಯಾ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ವಿಷಾದ

    – ವಿಮಾನ ಅಪಘಾತದ ತನಿಖೆಗಳು ತುಂಬಾ ಸಮಯ ತೆಗೆದುಕೊಳ್ಳುತ್ತದೆ ಎಂದ ಸಿಇಒ

    ಅಹಮದಾಬಾದ್: ವಿಮಾನ ದುರಂತ ನಡೆದ ದಿನ ನಮಗೆಲ್ಲರಿಗೂ ತುಂಬಾ ಕಷ್ಟಕರವಾದ ದಿನವಾಗಿದೆ. ಅಲ್ಲದೇ ಈ ಘಟನೆಯ ಬಗ್ಗೆ ನಾನು ತೀವ್ರ ದುಃಖವನ್ನು ವ್ಯಕ್ತಪಡಿಸುತ್ತೇನೆ ಎಂದು ಏರ್ ಇಂಡಿಯಾ (Air India) ಸಿಇಒ ಕ್ಯಾಂಪ್ಬೆಲ್ ವಿಲ್ಸನ್ (Campbell Wilson) ವಿಷಾದ ವ್ಯಕ್ತಪಡಿಸಿದ್ದಾರೆ.

    ಏರ್ ಇಂಡಿಯಾ ವಿಮಾನ ಅಪಘಾತದ ಸ್ಥಳಕ್ಕೆ ಸಿಇಒ ಕ್ಯಾಂಪ್ಬೆಲ್ ವಿಲ್ಸನ್ ಭೇಟಿ ನೀಡಿದ್ದರು. ಭೇಟಿಗೂ ಮೊದಲು ವೀಡಿಯೋ ಹೇಳಿಕೆ ನೀಡಿದ್ದಾರೆ. ಈಗ ನಮ್ಮ ಪ್ರಯತ್ನಗಳು ಸಂಪೂರ್ಣವಾಗಿ ನಮ್ಮ ಪ್ರಯಾಣಿಕರು, ಸಿಬ್ಬಂದಿ ಸದಸ್ಯರು, ಅವರ ಕುಟುಂಬಗಳು ಮತ್ತು ಪ್ರೀತಿಪಾತ್ರರ ಅಗತ್ಯಗಳ ಮೇಲೆ ಕೇಂದ್ರೀಕೃತವಾಗಿವೆ. ನಿಮ್ಮಲ್ಲಿ ಹಲವು ಪ್ರಶ್ನೆಗಳಿವೆ ಎಂದು ನನಗೆ ತಿಳಿದಿದೆ. ಈ ಸಂದರ್ಭದಲ್ಲಿ ನಾನು ಅವೆಲ್ಲದಕ್ಕೂ ಉತ್ತರಿಸಲು ಸಾಧ್ಯವಾಗುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಭೇಟಿ – ಅಹಮದಾಬಾದ್‌ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಮೋದಿ

    ವಿಮಾನವು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು. ಪ್ರಯಾಣಿಕರಲ್ಲಿ, 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, ಓರ್ವ ಕೆನಡಾದ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳಿದ್ದರು ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಲಂಡನ್‌ನಲ್ಲಿ ಭವಿಷ್ಯದ ಕನಸು ಕಟ್ಟಿ ವಿಮಾನದಲ್ಲಿ ಹಾರಿದ್ದ ಒಂದೇ ಕುಟುಂಬದ ಐವರು ದುರಂತ ಅಂತ್ಯ

    ತುರ್ತು ಕ್ರಮಗಳಿಗೆ ಅಧಿಕಾರಿಗಳೊಂದಿಗೆ ಏರ್ ಇಂಡಿಯಾ ಕೆಲಸ ಮಾಡುತ್ತಿದೆ. ವಿಮಾನ ಅಪಘಾತದ ತನಿಖೆಗಳು ಸಮಯ ತೆಗೆದುಕೊಳ್ಳುತ್ತದೆ. ಅಲ್ಲಿಯವರೆಗೆ ಏನೇ ವಿಚಾರವಾದರೂ, ಹೆಚ್ಚಿನ ಮಾಹಿತಿಯನ್ನು ಒದಗಿಸಲು ಪ್ರಯಾಣಿಕರ ಹಾಟ್‌ಲೈನ್ ಸಂಖ್ಯೆ 1800 5691 444ಗೆ ಕರೆ ಮಾಹಿತಿ ಪಡೆಯಬಹುದು ಎಂದು ಹೇಳಿದ್ದಾರೆ.