Tag: air india

  • ಏರ್‌ ಇಂಡಿಯಾ ವಿಮಾನ ದುರಂತ – ಸಂತಾಪ ಸೂಚಿಸಿದ ಸಿದ್ದರಾಮಯ್ಯ

    ಏರ್‌ ಇಂಡಿಯಾ ವಿಮಾನ ದುರಂತ – ಸಂತಾಪ ಸೂಚಿಸಿದ ಸಿದ್ದರಾಮಯ್ಯ

    ಬೆಂಗಳೂರು: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ ದುರಂತಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಸಂತಾಪ ಸೂಚಿಸಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಮೇಘಾನಿ ಪ್ರದೇಶ ಮೆಡಿಕಲ್ ಕಾಲೇಜ್‌ವೊಂದರ (Medical College) ಮೇಲೆ ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ಈ ಸುದ್ದಿ ತಿಳಿದು ತುಂಬಾ ಆಘಾತವಾಗಿದೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಳಿಗೆ, ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ಬೇಸರ ವ್ಯಕ್ತಪಡಿಸಿದರು.ಇದನ್ನೂ ಓದಿ: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

    ಘಟನೆ ಏನು?
    ಟೇಕಾಫ್ ನಂತರ ಎಂಜಿನ್‌ನಲ್ಲಿ ತಾಂತ್ರಿಕದೋಷ ಉಂಟಾದ ಪರಿಣಾಮ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನ ವಿಮಾನ ನಿಲ್ದಾಣದ ಬಳಿಯ ಮೆಡಿಕಲ್ ಕಾಲೇಜಿನ ಮೇಲೆ ಪತನಗೊಂಡಿದೆ. ವಿಮಾನ ನಿಲ್ದಾಣದಿಂದ ಕೇವಲ 2 ಕಿ.ಮೀ ದೂರದ ಮೇಘಾನಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ.

    ಅಲ್ಲದೇ ಮೆಡಿಕಲ್ ಕಾಲೇಜಿಗೆ ವಿಮಾನ ಬಡಿದ್ದಿದ್ದು, ಭಾರೀ ಸಾವು-ನೋವಿನ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ 7 ಅಗ್ನಿಶಾಮಕ ಹಾಗೂ ಎನ್‌ಡಿಆರ್‌ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ 30 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.ಇದನ್ನೂ ಓದಿ: ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

  • ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

    ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

    ಅಹಮದಾಬಾದ್‌: ಏರ್ ಇಂಡಿಯಾ (Air India) ವಿಮಾನ ಪತನಗೊಂಡ (Air India Flight Crash) ಘಟನೆ ಬಗ್ಗೆ ಕೇಳಿ ನನಗೆ ಆಘಾತವಾಯಿತು. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ವಿಮಾನದಲ್ಲಿದ್ದ ಪ್ರಯಾಣಿಕರ ಜೊತೆ ನಾವಿದ್ದೇವೆ ಎಂದು ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು (Ram Mohan Naidu) ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.

    ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳುವಂತೆ ನಿರ್ದೇಶಿಸಿದ್ದೇನೆ. ಸ್ಥಳದಲ್ಲಿ ರಕ್ಷಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ. ವೈದ್ಯಕೀಯ ನೆರವು ನೀಡುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ನಾನು ವೈಯಕ್ತಿಕವಾಗಿ ಪರಿಸ್ಥಿತಿಯ ಬಗ್ಗೆ ಮಾಹತಿ ಪಡೆಯುತ್ತಿದ್ದೇನೆ. ವಿಮಾನದಲ್ಲಿದ್ದ ಪ್ರಯಾಣಿಕರು ಹಾಗೂ ಅವರ ಕುಟುಂಬಗಳಿಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಅಹಮದಾಬಾದ್‌ನ ವಸತಿ ಪ್ರದೇಶದಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ

    ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಪರಿಣಾಮ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಇಂಡಿಯಾ ವಿಮಾನ (Air India Plane Crash) ಅಹಮದಾಬಾದ್‌ನ (Ahmedabad) ವಿಮಾನ ನಿಲ್ದಾಣ ಸಮೀಪದ ಜನವಸತಿ ಪ್ರದೇಶದಲ್ಲಿ ಪತನಗೊಂಡಿದೆ.

    ಸುಮಾರು 232 ಪ್ರಯಾಣಿಕರಿದ್ದ ವಿಮಾನ ಪತನಗೊಂಡಿದ್ದು, ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ. ಮಧ್ಯಾಹ್ನ 1:50ರ ಸುಮಾರಿಗೆ ಅಹಮದಾಬಾದ್‌ನ ಮೇಘಾನಿ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ವಿಮಾನ ಪ್ರಯಾಣಿಕರನ್ನು ಹೊತ್ತು ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ. ಟೇಕಾಫ್‌ ಆದ 2 ಕಿ.ಮೀ ದೂರದಲ್ಲಿ ವಿಮಾನ ಪತನಗೊಂಡಿದೆ.

    ಈ ಅವಘಡದಲ್ಲಿ 110 ಮಂದಿ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಳವಾಗುವ ಆತಂಕವಿದೆ. ಇದನ್ನೂ ಓದಿ: ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

  • ಏರ್‌ ಇಂಡಿಯಾ ವಿಮಾನ ಪತನ – ಪೈಲಟ್‌ಗೆ ಇತ್ತು 8,200 ಗಂಟೆಗಳ ಹಾರಾಟದ ಅನುಭವ

    ಏರ್‌ ಇಂಡಿಯಾ ವಿಮಾನ ಪತನ – ಪೈಲಟ್‌ಗೆ ಇತ್ತು 8,200 ಗಂಟೆಗಳ ಹಾರಾಟದ ಅನುಭವ

    ನವದೆಹಲಿ: ಪತನಗೊಂಡ ಏರ್‌ ಇಂಡಿಯಾ (Air India) ವಿಮಾನದ ಪೈಲಟ್‌ 8,200 ಗಂಟೆಗಳ ಹಾರಾಟದ ಅನುಭವ ಹೊಂದಿದ್ದರು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು (ಡಿಜಿಸಿಎ) ತಿಳಿಸಿದೆ.

    ಅಹಮದಾಬಾದ್‌ನಲ್ಲಿ ಲಂಡನ್‌ಗೆ ಹೊರಟ್ಟಿದ್ದ ಏರ್‌ ಇಂಡಿಯಾ ವಿಮಾನ ತಾಂತ್ರಿಕ ಸಮಸ್ಯೆಯಿಂದ ಪತನಗೊಂಡ ಬೆನ್ನಲ್ಲೇ ಡಿಜಿಸಿಎ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

    ಹೇಳಿಕೆಯಲ್ಲಿ ಏನಿದೆ?
    ಅಹಮದಾಬಾದ್‌ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.39ಕ್ಕೆ ಟೇಕಾಫ್‌ ಆಗಿದೆ. ವಿಮಾನದಲ್ಲಿ 2 ಪೈಲಟ್‌ಗಳು ಮತ್ತು 10 ಕ್ಯಾಬಿನ್ ಸಿಬ್ಬಂದಿ ಸೇರಿದಂತೆ 242 ಜನ ಪ್ರಯಾಣಿಸುತ್ತಿದ್ದರು.

    ಪೈಲಟ್‌ ಕ್ಯಾಪ್ಟನ್ ಸುಮೀತ್ ಸಭರ್ವಾಲ್ 8,200 ಗಂಟೆಗಳ ಅನುಭವ ಹೊಂದಿದ್ದರೆ ಸಹ-ಪೈಲಟ್ 1,100 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದರು. ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಏರ್‌ ಟ್ರಾಫಿಕ್‌ ಕಂಟ್ರೋಲ್‌ ಕರೆ ಬಂದಿದೆ. ನಂತರ ಎಟಿಸಿ ಮಾಡಿದ ಕರೆಗಳಿಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

  • ಶ್ರೀನಗರ, ಜಮ್ಮು ಸೇರಿ 5 ನಗರಗಳಿಗೆ ಇಂಡಿಗೋ, ಏರ್‌ ಇಂಡಿಯಾ ವಿಮಾನ ಹಾರಾಟ ರದ್ದು

    ಶ್ರೀನಗರ, ಜಮ್ಮು ಸೇರಿ 5 ನಗರಗಳಿಗೆ ಇಂಡಿಗೋ, ಏರ್‌ ಇಂಡಿಯಾ ವಿಮಾನ ಹಾರಾಟ ರದ್ದು

    ನವದೆಹಲಿ: ಇಂಡಿಗೋ (IndiGo) ಮತ್ತು ಏರ್ ಇಂಡಿಯಾ (Air India) ಇಂದು ಶ್ರೀನಗರ, ಜಮ್ಮು, ಅಮೃತಸರ, ಚಂಡೀಗಢ ಮತ್ತು ಇತರ ಮೂರು ಗಡಿ ನಗರಗಳಿಗೆ ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ಘೋಷಿಸಿದೆ.

    ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗಳಿಗೆ ದ್ವಿಮುಖ ವಿಮಾನ ಕಾರ್ಯಾಚರಣೆಯನ್ನು ರದ್ದುಗೊಳಿಸಲಾಗಿದೆ ಎಂದು ಏರ್ ಇಂಡಿಯಾ ತಿಳಿಸಿದೆ. ಇಂಡಿಗೋ ಜಮ್ಮು, ಅಮೃತಸರ, ಚಂಡೀಗಢ, ಲೇಹ್, ಶ್ರೀನಗರ ಮತ್ತು ರಾಜ್‌ಕೋಟ್‌ಗಳಿಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಸಹ ರದ್ದುಗೊಳಿಸಿದೆ. ಇದನ್ನೂ ಓದಿ: ರಜೆಯಲ್ಲಿದ್ದ ಯೋಧ ಮರಳಿ ಗಡಿಯತ್ತ – ಬೀಳ್ಕೊಟ್ಟ ಗುಬ್ಬಿ ನಾಗರಿಕರು

    ಇತ್ತೀಚಿನ ಬೆಳವಣಿಗೆ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಹೋಗುವ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಮೇ 13ರ ಮಂಗಳವಾರ ರದ್ದುಗೊಳಿಸಲಾಗಿದೆ. ನಾವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ನಿಮಗೆ ಮಾಹಿತಿ ನೀಡುತ್ತೇವೆ ಎಂದು ಏರ್ ಇಂಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

    ಭಾರತ ಮತ್ತು ಪಾಕಿಸ್ತಾನ ನಡುವಿನ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿದ್ದ ವಿಮಾನ ನಿಲ್ದಾಣಗಳು ಸೋಮವಾರ ನಾಗರಿಕ ವಿಮಾನಯಾನಕ್ಕಾಗಿ ಮತ್ತೆ ತೆರೆದಿದ್ದವು. ಕಳೆದ ವಾರ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ 32 ವಿಮಾನ ನಿಲ್ದಾಣಗಳಲ್ಲಿ ಮೇ 15ರ ಬಳಿಕ ನಾಗರಿಕ ವಿಮಾನ ಕಾರ್ಯಾಚರಣೆಗಳು ಪುನರಾರಂಭಗೊಳ್ಳಲಿವೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಸೋಮವಾರ ಪ್ರಕಟಿಸಿದೆ. ಇದನ್ನೂ ಓದಿ: ಎರಡೂ ಕಡೆಯಿಂದ ಒಂದೇ ಒಂದು ಗುಂಡು ಹೊಡೆಯಬಾರದು: DGMO ಸಭೆಯಲ್ಲಿ ಏನಾಯ್ತು?

    ಅಧಂಪುರ, ಅಂಬಾಲಾ, ಅವಂತಿಪುರ, ಬಟಿಂಡಾ, ಬಿಕಾನೇರ್, ಹಲ್ವಾರ, ಹಿಂಡನ್, ಜೈಸಲ್ಮೇರ್, ಕಾಂಡ್ಲಾ, ಕಂಗ್ರಾ (ಗಗ್ಗಲ್), ಕೆಶೋದ್, ಕಿಶನ್‌ಗಢ್, ಕುಲು ಮನಾಲಿ (ಭುಂಟರ್), ಮುಂದ್ರಾ, ಮುಂದ್ರಾ, ಪಠಾಣ್, ಪಠಾಣ್, ಸಾರ್ವಭೌಮ, ಪಠಾಣ್, ಸಿವಿಲಿಯನ್ ಫ್ಲೈಟ್ ಕಾರ್ಯಾಚರಣೆಯನ್ನು ಪುನರಾರಂಭಿಸಲು ವಿಮಾನ ನಿಲ್ದಾಣಗಳಿಗೆ ಅನುಮತಿಸಲಾಗಿದೆ.

  • ಏರ್ ಇಂಡಿಯಾದಿಂದ ಸಶಸ್ತ್ರ ಪಡೆ ಸಿಬ್ಬಂದಿಗೆ ಟಿಕೆಟ್‌ ಉಚಿತ ಮರುಹೊಂದಿಕೆ ಆಫರ್‌

    ಏರ್ ಇಂಡಿಯಾದಿಂದ ಸಶಸ್ತ್ರ ಪಡೆ ಸಿಬ್ಬಂದಿಗೆ ಟಿಕೆಟ್‌ ಉಚಿತ ಮರುಹೊಂದಿಕೆ ಆಫರ್‌

    ನವದೆಹಲಿ: ಟಿಕೆಟ್‌ ಬುಕಿಂಗ್ ಮಾಡಿರುವ ಸಶಸ್ತ್ರ ಪಡೆಗಳ ಸಿಬ್ಬಂದಿಗೆ (Armed Forces) ಉಚಿತ ಮರುಹೊಂದಿಕೆ (Rescheduling) ಅಥವಾ ರದ್ದತಿಯ ಮೇಲೆ ಪೂರ್ಣ ಮರುಪಾವತಿ ನೀಡುವ ಆಫರ್‌ ಅನ್ನು ಏರ್ ಇಂಡಿಯಾ (Air India), ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ (Air India Express) ವಿಮಾನಯಾನ ಸಂಸ್ಥೆ ನೀಡಿದೆ.

    ಪಾಕಿಸ್ತಾನ ಮತ್ತು ಪಿಒಕೆಯ 9 ಉಗ್ರರ ನೆಲೆಗಳ ಮೇಲೆ ʻಆಪರೇಷನ್‌ ಸಿಂಧೂರʼ (Operation Sindoor) ಹೆಸರಿನಲ್ಲಿ ಭಾರತದ ಸಶಸ್ತ್ರ ಪಡೆಗಳು ದಾಳಿ ನಡೆಸಿದ ಹಿನ್ನೆಲೆ ಏರ್‌ ಇಂಡಿಯಾ ಮತ್ತು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಈ ಘೋಷಣೆ ಮಾಡಿದೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್‌ – ಆಳ ಸಮುದ್ರ ಮೀನುಗಾರಿಕೆಗೆ ನಿಷೇಧ

    ಈ ದಾಳಿ ನಡೆಸಿದ ಹಿನ್ನೆಲೆ, ಕೆಲ ವಾಯು ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಇದರಿಂದ ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಆದ್ದರಿಂದ ವಿಮಾನಯಾನ ಸಂಸ್ಥೆ ಈ ನಿರ್ಧಾರ ಪ್ರಕಟಿಸಿದೆ.

    ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಏರ್ ಇಂಡಿಯಾ, ಮೇ 31 ರವರೆಗೆ ಬುಕ್ ಮಾಡಲಾದ ರಕ್ಷಣಾ ಸಿಬ್ಬಂದಿಗೆ ಈ ಸೌಲಭ್ಯ ಮಾಡಿಕೊಡಲಾಗಿದೆ. ಸೈನಿಕರ ಸೇವೆಯನ್ನು ಬೆಂಬಲಿಸಲು ಟಿಕೆಟ್ ರದ್ದತಿಗೆ ಸಂಪೂರ್ಣ ಮರುಪಾವತಿಯನ್ನು ನೀಡುತ್ತಿದ್ದೇವೆ ಎಂದು ಏರ್ ಇಂಡಿಯಾ ತಿಳಿಸಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕೂಡ ಇದೇ ಪೋಸ್ಟ್ ಹಂಚಿಕೊಂಡಿದೆ.

    18 ಏರ್‌ಪೋರ್ಟ್‌ಗಳ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ
    ʻಆಪರೇಷನ್‌ ಸಿಂಧೂರʼ ಬೆನ್ನಲ್ಲೇ ಏರ್ ಇಂಡಿಯಾ, ಇಂಡಿಗೋ, ಸ್ಪೈಸ್‌ಜೆಟ್, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಆಕಾಶ ಏರ್ ಮತ್ತು ಕೆಲವು ವಿದೇಶಿ ವಿಮಾನಯಾನ ಸಂಸ್ಥೆಗಳು ವಿವಿಧ ವಿಮಾನ ನಿಲ್ದಾಣಗಳಿಗೆ ತಮ್ಮ ಸೇವೆಗಳನ್ನು ರದ್ದುಗೊಳಿಸಿವೆ. ಒಟ್ಟು 18 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನ ರದ್ದುಗೊಳಿಸಲಾಗಿದೆ, ಈ ಪೈಕಿ ಶ್ರೀನಗರ, ಲೇಹ್, ಜಮ್ಮು, ಅಮೃತಸರ, ಪಠಾಣ್‌ಕೋಟ್, ಚಂಡೀಗಢ, ಜೋಧ್‌ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್‌ನಗರ ನಿಲ್ದಾಣಗಳೂ ಸೇರಿವೆ. ಒಟ್ಟಾರೆಯಾಗಿ ವಿವಿಧ ವಿಮಾನಯಾನ ಸಂಸ್ಥೆಗಳ 200ಕ್ಕೂ ಹೆಚ್ಚು ವಿಮಾನ ಹಾರಾಟವನ್ನ ರದ್ದುಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಪೂಂಚ್‌ನಲ್ಲಿ ಪಾಕಿಸ್ತಾನ ಶೆಲ್‌ ದಾಳಿ – ಭಾರತೀಯ ಯೋಧ ಹುತಾತ್ಮ

  • ವಾಯುನೆಲೆ ನಿರ್ಬಂಧ – ಮೇ 10ರವರೆಗೆ 165ಕ್ಕೂ ಹೆಚ್ಚು ಇಂಡಿಗೋ ವಿಮಾನ ಬಂದ್

    ವಾಯುನೆಲೆ ನಿರ್ಬಂಧ – ಮೇ 10ರವರೆಗೆ 165ಕ್ಕೂ ಹೆಚ್ಚು ಇಂಡಿಗೋ ವಿಮಾನ ಬಂದ್

    ನವದೆಹಲಿ: ಭಾರತವು ಪಾಕಿಸ್ತಾನದ(Pakistan) ಉಗ್ರರ ತಾಣಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ವಾಯುನೆಲೆಯನ್ನು ನಿರ್ಬಂಧಿಸಲಾಗಿದ್ದು, ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋ(Indigo) 165ಕ್ಕೂ ಹೆಚ್ಚು ವಿಮಾನಯಾನವನ್ನು ಸ್ಥಗಿತಗೊಳಿಸಿದೆ.

    ಜಮ್ಮು, ಶ್ರೀನಗರ, ಅಮೃತಸರ, ಲೇಹ್, ಚಂಡೀಗಢ, ಜೋಧ್‌ಪುರ, ಧರ್ಮಶಾಲಾ, ಬಿಕಾನೇರ್, ಗ್ವಾಲಿಯರ್, ಕಿಶನ್‌ಗಢ ಮತ್ತು ರಾಜ್‌ಕೋಟ್‌ಗೆ ತೆರಳುವ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಮೇ 10ರವರೆಗೆ ಇಂಡಿಗೋ ರದ್ದುಗೊಳಿಸಿದೆ. ಇದನ್ನೂ ಓದಿ: ರಾಜಕಾರಣಿಗಳು ಹೇಗೆ ಬದಲಾಗುತ್ತಾರೆ ಎಂಬುದಕ್ಕೆ ಸಿಎಂ ಸಿಂಧೂರವೇ ಸಾಕ್ಷಿ: ಪ್ರತಾಪ್‌ ಸಿಂಹ ಲೇವಡಿ

    ಪರಿಸ್ಥಿತಿ ಸೂಕ್ಷ್ಮತೆಯನ್ನು ಗಮನಿಸಿ ಇತರ ನಿಲ್ದಾಣಗಳಿಗೆ ವಿಮಾನ ಹಾರಾಟವನ್ನು ಹೊಂದಾಣಿಕೆ ಮಾಡಲಾಗುವುದು. ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು ಪ್ರಯಾಣಿಕರು ತಮ್ಮ ಪ್ರಯಾಣದ ಸ್ಥಿತಿಯನ್ನು ಪರಿಶೀಲಿಸುವಂತೆ ಗ್ರಾಹಕರಿಗೆ ಇಂಡಿಗೋ ಸಲಹೆ ನೀಡಿದೆ. ಇದನ್ನೂ ಓದಿ: JEM ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್‌ ಅಜರ್‌ ಕುಟುಂಬದ 10 ಜನ ಸೇರಿ 14 ಮಂದಿ ಹತ್ಯೆ

    ಅಲ್ಲದೇ ಏರ್ ಇಂಡಿಯಾ(Air India) ಸಂಸ್ಥೆ ಕೂಡ ಜಮ್ಮು, ಶ್ರೀನಗರ, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್ ನಿಲ್ದಾಣಗಳಿಗೆ ತೆರಳುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳ ಹಾರಾಟಗಳನ್ನು ಮೇ 10ರ ವರೆಗೆ ಬಂದ್ ಮಾಡಿದೆ ಎಂದು ಎಕ್ಸ್ ಮೂಲಕ ತಿಳಿಸಿದೆ. ಇದನ್ನೂ ಓದಿ: ಏರ್‌ಸ್ಟ್ರೈಕ್‌ಗೆ ಸಾಕ್ಷಿ ಎಲ್ಲಿದೆ ಅಂದವರ ಬಾಯಿಯನ್ನೇ ಬಂದ್‌ ಮಾಡಿದ ಸೇನೆ!

    `ಆಪರೇಷನ್ ಸಿಂಧೂರ'(Operation Sindoor) ಅಡಿಯಲ್ಲಿ ಭಾರತವು ಪಾಕಿಸ್ತಾನದ 9 ಉಗ್ರರ ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯ ನಂತರ ಭಾರತದ ಗಡಿಭಾಗಗಳಲ್ಲಿ ವಿಮಾನ ಹಾರಾಟವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: I TOLD MODI – ಆಪರೇಷನ್‌ ಸಿಂಧೂರ ಬೆನ್ನಲ್ಲೇ ಕಾರ್ಟೂನ್‌ ವೈರಲ್‌ !

    18 ಏರ್‌ಪೋರ್ಟ್‌ಗಳ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ
    ಇನ್ನೂ ʻಆಪರೇಷನ್‌ ಸಿಂಧೂರʼ ಬೆನ್ನಲ್ಲೇ ಏರ್ ಇಂಡಿಯಾ, ಇಂಡಿಗೋ, ಸ್ಪೈಸ್‌ಜೆಟ್, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಆಕಾಶ ಏರ್ ಮತ್ತು ಕೆಲವು ವಿದೇಶಿ ವಿಮಾನಯಾನ ಸಂಸ್ಥೆಗಳು ವಿವಿಧ ವಿಮಾನ ನಿಲ್ದಾಣಗಳಿಗೆ ತಮ್ಮ ಸೇವೆಗಳನ್ನು ರದ್ದುಗೊಳಿಸಿವೆ. ಒಟ್ಟು 18 ವಿಮಾನ ನಿಲ್ದಾಣಗಳ ಕಾರ್ಯಾಚರಣೆಯನ್ನ ರದ್ದುಗೊಳಿಸಲಾಗಿದೆ, ಈ ಪೈಕಿ ಶ್ರೀನಗರ, ಲೇಹ್, ಜಮ್ಮು, ಅಮೃತಸರ, ಪಠಾಣ್‌ಕೋಟ್, ಚಂಡೀಗಢ, ಜೋಧ್‌ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್‌ನಗರ ನಿಲ್ದಾಣಗಳೂ ಸೇರಿವೆ. ಒಟ್ಟಾರೆಯಾಗಿ ವಿವಿಧ ವಿಮಾನಯಾನ ಸಂಸ್ಥೆಗಳ 200ಕ್ಕೂ ಹೆಚ್ಚು ವಿಮಾನ ಹಾರಾಟವನ್ನ ರದ್ದುಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

  • ಪೈಲಟ್‌ಗಳಿಲ್ಲದ ವಿಮಾನಕ್ಕೆ ಏಕೆ ಹತ್ತಿಸುತ್ತೀರಿ – ಏರ್‌ ಇಂಡಿಯಾ ವಿರುದ್ಧ ಡೇವಿಡ್‌ ವಾರ್ನರ್‌ ಗರಂ!

    ಪೈಲಟ್‌ಗಳಿಲ್ಲದ ವಿಮಾನಕ್ಕೆ ಏಕೆ ಹತ್ತಿಸುತ್ತೀರಿ – ಏರ್‌ ಇಂಡಿಯಾ ವಿರುದ್ಧ ಡೇವಿಡ್‌ ವಾರ್ನರ್‌ ಗರಂ!

    ನವದೆಹಲಿ/ಕ್ಯಾನ್ಬೆರಾ: ಏರ್‌ ಇಂಡಿಯಾ (Air India) ವಿಮಾನ ವಿಳಂಬವಾಗಿದ್ದಕ್ಕೆ ಆಸ್ಟ್ರೇಲಿಯಾ ಮಾಜಿ ಸ್ಟಾರ್‌ ಕ್ರಿಕೆಟರ್‌ ಡೇವಿಡ್‌ ವಾರ್ನರ್‌ (David Warner) ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

    ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ʻʻನಾವು ಪೈಲಟ್‌ಗಳಿಲ್ಲದ ಏರ್‌ ಇಂಡಿಯಾ ವಿಮಾನ ಹತ್ತಿದ್ದೇವೆ. ಗಂಟೆಗಟ್ಟಲೆ ವಿಮಾನದಲ್ಲಿ ಕಾಯುತ್ತಿದ್ದೇವೆ. ಪೈಲಟ್‌ಗಳಿಲ್ಲದ ವಿಮಾನಕ್ಕೆ ನೀವು ಏಕೆ ಪ್ರಯಾಣಿಕರನ್ನು ಹತ್ತಿಸುತ್ತೀರಿ?ʼ ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    ಇದಕ್ಕೆ ಪ್ರತಿಕ್ರಿಯಿಸಿರುವ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆ, ಬೆಂಗಳೂರು ಏರ್‌ಪೋರ್ಟ್‌ನಿಂದ (Bengaluru Airport) ಹವಾಮಾನ ಸಂಬಂಧಿತ ಅಡಚಣೆಗಳಿಂದಾಗಿ ಎಲ್ಲಾ ವಿಮಾನಯಾನ ಸಂಸ್ಥೆಗಳ ಮಾರ್ಗ ಬದಲಾವಣೆ ಮತ್ತು ಕೆಲ ವಿಮಾನಗಳ ಹಾರಾಟದಲ್ಲಿ ವ್ಯತ್ಯವಾಗಿದೆ. ಹೀಗಾಗಿ ನಿಮ್ಮ ವಿಮಾನ ನಿರ್ವಹಿಸುವ ಸಿಬ್ಬಂದಿಯನ್ನ ತಡೆಯಹಿಡಿಯಲಾಗಿದ್ದು, ವಿಳಂಬಕ್ಕೆ ಕಾರಣವಾಗಿದೆ.. ನಿಮ್ಮ ತಾಳ್ಮೆಯನ್ನು ಪ್ರಸಂಶಿಸುತ್ತೇವೆ, ನಮ್ಮ ವಿಮಾನ ಆಯ್ಕೆ ಮಾಡಿಕೊಂಡಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದೆ.

    ಡೇವಿಡ್‌ ವಾರ್ನರ್‌ ಅವರು ಟ್ರಾವೆಲ್‌ ಏಜೆಂಟ್‌ ಮೂಲಕ ಟಿಕೆಟ್‌ ಬುಕ್‌ ಮಾಡಿದ್ದರು. ಮರುಪಾವತಿ ಲಭ್ಯವಿಲ್ಲದ ಟಿಕೆಟ್‌ ಬುಕ್‌ ಮಾಡಿದ ಕಾರಣ ಟ್ರಾವೆಲ್‌ ಏಜೆಂಟ್‌ ಟಿಕೆಟ್‌ ಹಣ ವಾಪಸ್‌ ನೀಡಲು ನಿರಾಕರಿಸಿದ್ದಾರೆ ಎಂದು ಸಹ ವರದಿಗಳು ತಿಳಿಸಿವೆ. ಇದನ್ನೂ ಓದಿ: ಅಮೆರಿಕ | ಗುಜರಾತ್‌ ಮೂಲದ ಅಪ್ಪ-ಮಗಳಿಗೆ ಗುಂಡಿಕ್ಕಿ ಹತ್ಯೆ – ಶೂಟರ್‌ ಅರೆಸ್ಟ್‌

    ಕಳೆದ ಫೆಬ್ರವರಿಯಲ್ಲಿ ಮಧ್ಯಪ್ರದೇಶ ಮಾಜಿ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌, ಮುರಿದ ಸೀಟನ್ನು ನೀಡಿದ್ದಕ್ಕೆ ಏರ್‌ ಇಂಡಿಯಾ ವಿರುದ್ಧ ಕಿಡಿ ಕಾರಿದ್ದರು. ಇತ್ತೀಚೆಗೆ ಭಾರತೀಯ-ಕೆನಡಾದ ನಟಿ ಲೀಸಾ ರೇ ಸಹ ತಮ್ಮ ಎಕ್ಸ್‌ ಪೋಸ್ಟ್‌ನಲ್ಲಿ ಏರ್‌ ಇಂಡಿಯಾವನ್ನು ಟೀಕಿಸಿದ್ದರು. ಇದನ್ನೂ ಓದಿ: ಮುರಿದ ಸೀಟ್‌ ನೀಡಿ ಮೋಸ ಮಾಡಿದ್ದೀರಿ: ಏರ್‌ ಇಂಡಿಯಾ ವಿರುದ್ಧ ಶಿವರಾಜ್‌ ಸಿಂಗ್‌ ಚೌಹಾಣ್‌ ಕೆಂಡಾಮಂಡಲ

  • ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಸಾವು

    ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕ ಸಾವು

    ಲಕ್ನೋ: ದೆಹಲಿಯಿಂದ ಲಕ್ನೋಗೆ ಪ್ರಯಾಣಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಕ್ನೋ (Lucknow) ಚೌಧರಿ ಚರಣ್ ಸಿಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Chaudhary Charan Singh International Airport) ನಡೆದಿದೆ.

    ಮೃತರನ್ನು ಬಿಹಾರದ (Bihar) ಗೋಪಾಲ್‌ಗಂಜ್‌ನ ಆಸಿಫುಲ್ಲಾ ಅನ್ಸಾರಿ(52) ಎಂದು ಗುರುತಿಸಲಾಗಿದೆ. ಬೆಳಗ್ಗೆ 8:10ಕ್ಕೆ ವಿಮಾನ ಲಕ್ನೋದ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ನಂತರ, ಸಿಬ್ಬಂದಿ ಆಸಿಫುಲ್ಲಾರೊಂದಿಗೆ ಮಾತನಾಡಲು ಪ್ರಯತ್ನಿಸಿದರು. ಇದನ್ನೂ ಓದಿ: ಜಾನ್ವಿ ಕಪೂರ್‌ಗೆ ವಿಶೇಷ ಉಡುಗೊರೆ ನೀಡಿದ ರಾಮ್ ಚರಣ್ ಪತ್ನಿ

    ಈ ವೇಳೆ ಆಸಿಫುಲ್ಲಾರಿಂದ ಯಾವುದೇ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ವಿಮಾನದಲ್ಲಿದ್ದ ವೈದ್ಯರು ಪರೀಕ್ಷಿಸಿ ಅವರು ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದರು. ಪ್ರಯಾಣದ ಮಧ್ಯೆ ಆಸಿಫುಲ್ಲಾ ಅವರು ಮೃತಪಟ್ಟಿರಬಹುದು ಎನ್ನಲಾಗಿದೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಕೋಲಾಹಲ- ಸ್ಪೀಕರ್‌ ಮೇಲೆ ಪೇಪರ್‌ ಎಸೆತ

    ಮರಣೋತ್ತರ ಪರೀಕ್ಷೆಗೆ ಮೃತ ದೇಹ ರವಾಸಿದ್ದಾರೆ. ಬಳಿಕವೇ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಮೂಲಗಳು ತಿಳಿಸಿವೆ.

  • ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ – ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನ ಮುಂಬೈಗೆ ವಾಪಸ್‌

    ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ – ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನ ಮುಂಬೈಗೆ ವಾಪಸ್‌

    ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ (Air India Flight) ವಿಮಾನಕ್ಕೆ ಭದ್ರತಾ ಬೆದರಿಕೆ ಬಂದಿದೆ. ವಿಮಾನದ ಶೌಚಾಲಯವೊಂದರಲ್ಲಿ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದ್ದು, ಈ ಬೆನ್ನಲ್ಲೇ ವಿಮಾನವನ್ನು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು‌.

    ಘಟನೆಯನ್ನು ದೃಢಪಡಿಸಿದ ಏರ್ ಇಂಡಿಯಾ, ವಿಮಾನ ವಾಪಸ್ ಬರುವ ಮುನ್ನ ಅಗತ್ಯವಿರುವ ಎಲ್ಲಾ ಶಿಷ್ಟಾಚಾರಗಳನ್ನು ಅನುಸರಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

    ಮಾ.10 ರಂದು ಮುಂಬೈ-ನ್ಯೂಯಾರ್ಕ್ (ಜೆಎಫ್‌ಕೆ) ವಿಮಾನದಲ್ಲಿ ಹಾರಾಟ ನಡೆಸುತ್ತಿದ್ದಾಗ, ವಿಮಾನವು ಹಾರಾಟದ ಮಧ್ಯದಲ್ಲಿ ಸಂಭಾವ್ಯ ಭದ್ರತಾ ಬೆದರಿಕೆಯನ್ನು ಪತ್ತೆಹಚ್ಚಲಾಯಿತು. ಅಗತ್ಯ ಶಿಷ್ಟಾಚಾರಗಳನ್ನು ಅನುಸರಿಸಿದ ನಂತರ, ವಿಮಾನದಲ್ಲಿದ್ದ ಎಲ್ಲರ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ವಿಮಾನವು ಮುಂಬೈಗೆ ಮರಳಿತು.

    ವಿಮಾನವು ಬೆಳಗ್ಗೆ 10:25 ಕ್ಕೆ ಮುಂಬೈನಲ್ಲಿ ಸುರಕ್ಷಿತವಾಗಿ ಇಳಿಯಿತು. ವಿಮಾನವು ಭದ್ರತಾ ಸಂಸ್ಥೆಗಳಿಂದ ಕಡ್ಡಾಯ ತಪಾಸಣೆಗೆ ಒಳಗಾಗುತ್ತಿದೆ. ಏರ್ ಇಂಡಿಯಾ ಅಧಿಕಾರಿಗಳಿಗೆ ತನ್ನ ಸಂಪೂರ್ಣ ಸಹಕಾರವನ್ನು ನೀಡುತ್ತಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

    ಈಗ ವಿಮಾನದ ವೇಳಾಪಟ್ಟಿಯನ್ನು ಮಾ.11 ರಂದು ಬೆಳಗ್ಗೆ 5 ಗಂಟೆಗೆ ಹೊರಡುವಂತೆ ಮರು ನಿಗದಿಪಡಿಸಲಾಗಿದೆ. ಅಲ್ಲಿಯವರೆಗೆ ಎಲ್ಲಾ ಪ್ರಯಾಣಿಕರಿಗೆ ಹೋಟೆಲ್ ವಸತಿ, ಊಟ ಮತ್ತು ಇತರ ಸಹಾಯವನ್ನು ನೀಡಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

    ಭದ್ರತಾ ಸಂಸ್ಥೆಗಳು ಪ್ರಸ್ತುತ ವಿಮಾನವನ್ನು ಪರಿಶೀಲಿಸುತ್ತಿದ್ದು, ಭದ್ರತಾ ಬೆದರಿಕೆಯ ಸ್ವರೂಪದ ಕುರಿತು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ. ಬೋಯಿಂಗ್ 777-300 ಇಆರ್ ವಿಮಾನದಲ್ಲಿ 19 ಸಿಬ್ಬಂದಿ ಸೇರಿದಂತೆ 322 ಜನರು ಪ್ರಯಾಣ ಮಾಡ್ತಿದ್ದರು.

    ಪ್ರತ್ಯೇಕ ಘಟನೆಯಲ್ಲಿ ಚಿಕಾಗೋದಿಂದ ದೆಹಲಿಗೆ ಹೋಗುತ್ತಿದ್ದ ಮತ್ತೊಂದು ಏರ್ ಇಂಡಿಯಾ ವಿಮಾನವು ತಾಂತ್ರಿಕ ದೋಷದಿಂದಾಗಿ ತನ್ನ 12 ಶೌಚಾಲಯಗಳಲ್ಲಿ 11 ಶೌಚಾಲಯಗಳನ್ನು ನಿರುಪಯುಕ್ತಗೊಳಿಸಿದ ನಂತರ ಹಾದಿ ಮಧ್ಯೆ ಹಿಂತಿರುಗಬೇಕಾಯಿತು.

    ವಿಮಾನಯಾನ ವೆಬ್‌ಸೈಟ್ ವ್ಯೂ ಫ್ರಮ್ ದಿ ವಿಂಗ್ ವರದಿಯ ಪ್ರಕಾರ, ಏರ್ ಇಂಡಿಯಾ ವಿಮಾನ AI126 ತನ್ನ ಪ್ರಯಾಣದ ಸುಮಾರು ನಾಲ್ಕೂವರೆ ಗಂಟೆಗಳ ನಂತರ ಗ್ರೀನ್‌ಲ್ಯಾಂಡ್ ಮೇಲೆ ಹಾರುವಾಗ ಈ ಸಮಸ್ಯೆ ಕಂಡುಬಂದಿದೆ. 300 ಕ್ಕೂ ಹೆಚ್ಚು ಪ್ರಯಾಣಿಕರು ಮತ್ತು ಕೇವಲ ಒಂದು ಶೌಚಾಲಯ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾಗ, ವಿಮಾನವು ಚಿಕಾಗೋಗೆ ಹಿಂತಿರುಗಿತು.

  • ಮುರಿದ ಸೀಟ್‌ ನೀಡಿ ಮೋಸ ಮಾಡಿದ್ದೀರಿ: ಏರ್‌ ಇಂಡಿಯಾ ವಿರುದ್ಧ ಶಿವರಾಜ್‌ ಸಿಂಗ್‌ ಚೌಹಾಣ್‌ ಕೆಂಡಾಮಂಡಲ

    ಮುರಿದ ಸೀಟ್‌ ನೀಡಿ ಮೋಸ ಮಾಡಿದ್ದೀರಿ: ಏರ್‌ ಇಂಡಿಯಾ ವಿರುದ್ಧ ಶಿವರಾಜ್‌ ಸಿಂಗ್‌ ಚೌಹಾಣ್‌ ಕೆಂಡಾಮಂಡಲ

    ನವದೆಹಲಿ: ಏರ್‌ ಇಂಡಿಯಾದ (Air India) ಕೆಟ್ಟ ಸೇವೆಗೆ ಕೇಂದ್ರ ಕೃಷಿ ಸಚಿವ, ಮಾಜಿ ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Singh Chouhan) ಕೆಂಡಾಮಂಡಲವಾಗಿದ್ದಾರೆ.

    ಮುರಿದ ಸೀಟನ್ನು ನೀಡಿದ್ದಕ್ಕೆ ಸಿಟ್ಟಾದ ಚೌಹಾಣ್‌ ಗ್ರಾಹಕರಿಗೆ ನೀವು ಮೋಸ ಮಾಡುತ್ತಿದ್ದೀರಿ. ಟಿಕೆಟ್‌ಗೆ ಪೂರ್ಣ ಶುಲ್ಕ ವಿಧಿಸಿದ ನಂತರ ಕೆಟ್ಟು ಹೋದ ಸೀಟ್‌ ಮೇಲೆ ಕುಳಿತುಕೊಳ್ಳುವಂತೆ ಹೇಳುವುದು ಅನೈತಿಕ. ಇದು ಪ್ರಯಾಣಿಕರಿಗೆ ಮಾಡುತ್ತಿರುವ ಮೋಸ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೆಟ್ಟ ಸೇವೆಗೆ ಸಾಮಾಜಿಕ ಜಾಲತಾಣದಲ್ಲಿ ದೀರ್ಘವಾದ ಪೋಸ್ಟ್‌ ಮಾಡಿ ಏರ್‌ ಇಂಡಿಯಾವನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

    ಶಿವರಾಜ್‌ ಸಿಂಗ್‌ ಅವರ ಪೋಸ್ಟ್‌ ಪ್ರಕಟವಾದ ನಂತರ ಏರ್‌ ಇಂಡಿಯಾ ಕ್ಷಮೆಯಾಚನೆ ಮಾಡಿದೆ. ಭವಿಷ್ಯದಲ್ಲಿ ಇಂತಹ ಯಾವುದೇ ಘಟನೆಗಳು ಸಂಭವಿಸದಂತೆ ನಾವು ಈ ವಿಷಯವನ್ನು ಎಚ್ಚರಿಕೆಯಿಂದ ಪರಿಶೀಲಿಸುತ್ತಿದ್ದೇವೆ. ದಯವಿಟ್ಟು ನಿಮ್ಮನ್ನು ಸಂಪರ್ಕಿಸಲು ಅನುಕೂಲಕರ ಸಮಯದ ಬಗ್ಗೆ ನಮಗೆ ಡೈರೆಕ್ಟ್‌ ಮೆಸೇಜ್‌ ಮಾಡಿ ಎಂದು ಕೇಳಿಕೊಂಡಿದೆ. ಇದನ್ನೂ ಓದಿ: ಅಪರಿಚಿತ ಮಹಿಳೆಗೆ `ನೀನು ತೆಳ್ಳಗೆ, ಬೆಳ್ಳಗೆ ಇದ್ದೀಯʼ ಅಂತ ಮೆಸೇಜ್‌ ಕಳಿಸೋದು ಅಶ್ಲೀಲತೆ: ಮುಂಬೈ ಕೋರ್ಟ್‌

    ಪೋಸ್ಟ್‌ನಲ್ಲಿ ಏನಿದೆ?
    ಇಂದು ನಾನು ಭೋಪಾಲ್‌ನಿಂದ ದೆಹಲಿಗೆ ಬಂದು ಪುಸಾದಲ್ಲಿ ಕಿಸಾನ್ ಮೇಳವನ್ನು ಉದ್ಘಾಟಿಸಿ, ಕುರುಕ್ಷೇತ್ರದಲ್ಲಿ ನೈಸರ್ಗಿಕ ಕೃಷಿ ಮಿಷನ್‌ನ ಸಭೆಯನ್ನು ನಡೆಸಿ, ಚಂಡೀಗಢದಲ್ಲಿ ಕಿಸಾನ್ ಸಂಘಟನೆಯ ಗೌರವಾನ್ವಿತ ಪ್ರತಿನಿಧಿಗಳೊಂದಿಗೆ ಚರ್ಚಿಸಬೇಕಿತ್ತು.

    ದೆಹಲಿಗೆ ಬರುವ ಉದ್ದೇಶದಿಂದ ಏರ್ ಇಂಡಿಯಾ ವಿಮಾನ ಸಂಖ್ಯೆ AI436 ರಲ್ಲಿ ಟಿಕೆಟ್ ಬುಕ್ ಮಾಡಿದ್ದೆ, ನನಗೆ ಸೀಟ್ ಸಂಖ್ಯೆ 8C ನೀಡಲಾಗಿತ್ತು. ನಾನು ಹೋಗಿ ಸೀಟಿನಲ್ಲಿ ಕುಳಿತೆ. ಆದರೆ ಆ ಸೀಟು ಮುರಿದು ಹೋಗಿತ್ತು.

    ಮುರಿದು ಹೋದ ಸೀಟನ್ನು ಯಾಕೆ ಹಂಚಿಕೆ ಮಾಡಲಾಗಿದೆ ಎಂದು ನಾನು ವಿಮಾನಯಾನ ಸಿಬ್ಬಂದಿಯನ್ನು ಕೇಳಿದ್ದೆ. ಅದಕ್ಕೆ ಅವರು, ಈ ಸೀಟು ಚೆನ್ನಾಗಿಲ್ಲ ಮತ್ತು ಅದರ ಟಿಕೆಟ್ ಮಾರಾಟ ಮಾಡಬಾರದು ಎಂದು ಆಡಳಿತ ಮಂಡಳಿಗೆ ಮೊದಲೇ ತಿಳಿಸಲಾಗಿತ್ತು ಎಂದು ಅವರು ನನಗೆ ಹೇಳಿದರು. ಆದರೆ ಈ ಒಂದು ಸೀಟು ಮಾತ್ರವಲ್ಲ ಇನ್ನು ಹಲವು ಸೀಟುಗಳು ಮುರಿದು ಹೋಗಿತ್ತು.

    ನನ್ನ ಸಹ ಪ್ರಯಾಣಿಕರು ನನ್ನ ಸೀಟನ್ನು ಬದಲಾಯಿಸಿ ಉತ್ತಮ ಸೀಟಿನಲ್ಲಿ ಕುಳಿತುಕೊಳ್ಳಲು ನನ್ನನ್ನು ಕೇಳಿದರು. ಆದರೆ ನನಗಾಗಿ ನಾನು ಇನ್ನೊಬ್ಬ ಸ್ನೇಹಿತನಿಗೆ ಯಾಕೆ ತೊಂದರೆ ಕೊಡಬೇಕು ಎಂದು ಭಾವಿಸಿ ನಾನು ಸೀಟಿನಲ್ಲೇ ಕುಳಿತು ಪ್ರಯಾಣವನ್ನು ಪೂರ್ಣಗೊಳಿಸಲು ನಿರ್ಧರಿಸಿದೆ.

    ಟಾಟಾ (TATA) ಆಡಳಿತವನ್ನು ವಹಿಸಿಕೊಂಡ ನಂತರ ಏರ್ ಇಂಡಿಯಾದ ಸೇವೆ ಸುಧಾರಣೆಯಾಗಲಿದೆ ಎಂದು ನನ್ನ ಅನಿಸಿಕೆಯಾಗಿತ್ತು. ಆದರೆ ಅದು ನನ್ನ ತಪ್ಪು ಕಲ್ಪನೆ ಎನ್ನುವುದು ಈಗ ನನಗೆ ಅರಿವಾಗಿದೆ. ಪ್ರಯಾಣಿಕರಿಂದ ಪೂರ್ಣ ಟಿಕೆಟ್‌ ದರವನ್ನು ಪಡೆದ ನಂತರ ಕೆಟ್ಟ ಮತ್ತು ಅನಾನುಕೂಲಕರವಾದ ಆಸನಗಳ ಮೇಲೆ ಕುಳಿತುಕೊಳ್ಳುವಂತೆ ಮಾಡುವುದು ಅನೈತಿಕ. ಇದು ಪ್ರಯಾಣಿಕರನ್ನು ಮೋಸಗೊಳಿಸುವುದಿಲ್ಲವೇ?

    ಭವಿಷ್ಯದಲ್ಲಿ ಯಾವುದೇ ಪ್ರಯಾಣಿಕರು ಇಂತಹ ಅನಾನುಕೂಲತೆಯನ್ನು ಎದುರಿಸದಂತೆ ಏರ್ ಇಂಡಿಯಾ ಆಡಳಿತ ಮಂಡಳಿ ಕ್ರಮ ಕೈಗೊಳ್ಳುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.