ಮೃತದೇಹಗಳು ಬೀದರ್‌ಗೆ ಬರುತ್ತಿದ್ದಂತೆ ಗುಂಪಾ ಬಳಿಯ ಅವರ ನಿವಾಸದಲ್ಲಿ ಕುಟುಂಬಸ್ಥರ ಹಾಗೂ ಸ್ಥಳೀಯರು ಆಕ್ರಂದನ ಮುಗಿಲು ಮುಟ್ಟಿತು. ಬಳಿಕ ಬೀದರ್ ತಾಲೂಕಿನ ಸುಲ್ತಾನಪುರ್‌ದಲ್ಲಿ 6 ಜನರನ್ನು ಲಿಂಗಾಯತ ಸಂಪ್ರದಾಯದಂತೆ ಸುರಿಯುವ ಮಳೆಯ ನಡುವೆ ಅಂತ್ಯಕ್ರಿಯೆ ಮಾಡಿದರು. ಇದನ್ನೂ ಓದಿ: ಯುಪಿಯಲ್ಲಿ ಬೀದರ್ ಟಿಟಿ ಅಪಘಾತ – ಯುವತಿ ಸಾವು, ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಬೀದರ್ ತಾಲೂಕಿನ ಅಷ್ಟೂರಿನಲ್ಲಿ ಓರ್ವ ವ್ಯಕ್ತಿಯನ್ನು ಅಂತ್ಯಕ್ರಿಯೆ ಮಾಡಲಾಗಿದೆ. ಅಂತ್ಯಕ್ರಿಯೆ ಮಾಡುವ ಸ್ಥಳದಲ್ಲೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಕೇದಾರನಾಥ್, ಭದ್ರಿನಾಥ್, ಅಯೋಧ್ಯೆ ಸೇರಿದಂತೆ ತೀರ್ಥಯಾತ್ರೆಗೆ ಹೋಗಿದ್ದ ಬೀದರ್ ಮೂಲದ 16 ಜನರಲ್ಲಿ 7 ಜನ ಮಸಣ ಸೇರಿದ್ದು ಮಾತ್ರ ದುರಂತವೇ ಸರಿ.
ಕಾಬೂಲ್: ಅಫ್ಘಾನಿಸ್ತಾನದಲ್ಲಿ ನೆತ್ತರ ಕೋಡಿ ಮುಂದುವರಿದಿದ್ದು, ಇಂದು ನಡೆದ ರಾಕೆಟ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಗುರುವಾರ ನಡೆದ ಬಾಂಬ್ ಸ್ಫೋಟದಲ್ಲಿ 13 ಅಮೆರಿಕ ಸೈನಿಕರು ಸೇರಿದಂತೆ 170 ಜನರು ಸಾವನ್ನಪ್ಪಿದ್ದರು.
ಇಂದು ಸಂಜೆ ಕಾಬೂಲ್ ವಿಮಾನ ನಿಲ್ದಾಣದ ಪಶ್ಚಿಮ ರಿಹಾಯಶಿ ಇಲಾಖೆಯ ಖಾಜಾ-ಏ-ಬುಗಾರದಲ್ಲಿ ಈ ದಾಳಿ ನಡೆದಿದೆ. ಐಸಿಸ್-ಕೆ ಉಗ್ರ ಸಂಘಟನೆ ಕಾಬೂಲ್ ವಿಮಾನ ನಿಲ್ದಾಣದಲ್ಲಿರುವ ಅಮೆರಿಕ ಸೇನೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಮುಂದಾಗಿತ್ತು. ಆದ್ರೆ ಗುರಿ ತಪ್ಪಿದ ರಾಕೆಟ್ ಜನವಸತಿ ಪ್ರದೇಶದಲ್ಲಿ ಬಿದ್ದು ಸ್ಫೋಟಗೊಂಡಿದೆ. ಆದ್ರೆ ಇದರಲ್ಲಿ ಯಾವುದೇ ಸೂಸೈಡ್ ಬಾಂಬರ್ ಗಳು ಇರಲಿಲ್ಲ ಎಂಬುದರ ಬಗ್ಗೆ ಖಚಿತ ಮಾಹಿತಿ ಪ್ರಕಟವಾಗಿಲ್ಲ.
ಕಾಬೂಲ್ ಸ್ಥಳೀಯ ಮಾಧ್ಯಮಗಳ ಪ್ರಕಾರ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮಕ್ಕಳು ಮತ್ತು ಮಹಿಳೆಯರಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತ ಅಫ್ಘಾನ್ ಪೊಲೀಸರ ಪ್ರಕಾರ ರಾಕೆಟ್ ವಿಮಾನ ನಿಲ್ದಾಣದಲ್ಲಿ ಪತನಗೊಂಡಿದೆ ಎಂದು ಹೇಳಲಾಗುತ್ತಿದೆ. . ಇದನ್ನೂ ಓದಿ: ಕಾಬೂಲ್ ವಿಮಾನ ನಿಲ್ದಾಣದ ಎಂಟ್ರಿ ಗೇಟ್ ಬಳಿ ಮತ್ತೆ ಫೈರಿಂಗ್
ಅಮೆರಿಕ ಅಧ್ಯಕ್ಷ ಜೋ ಬೈಡನ್ ಶುಕ್ರವಾರವೇ ಕಾಬೂಲ್ ಏರ್ ಪೋರ್ಟ್ ಮೇಲೆ ಉಗ್ರರ ದಾಳಿ ನಡೆಸುವ ಸಾಧ್ಯತೆಗಳಿವೆ. ಹಾಗಾಗಿ ತಮ್ಮ ದೇಶದ ಜನರು ವಿಮಾನ ನಿಲ್ದಾಣದತ್ತ ಬರಬಾರದು ಎಂದು ಹೇಳಿದ್ದರು. ಇತ್ತ ತಾಲಿಬಾನಿಗಳು ಸಹ ಐಸಿಸ್-ಕೆ ದಾಳಿ ನಡೆಸುವ ಸಾಧ್ಯತೆಗಳಿದ್ದು, ಜನರು ವಿಮಾನ ನಿಲ್ದಾಣದತ್ತ ಬರಕೂಡದು ಎಂದು ಹೇಳಿ, ಏರ್ ಪೋರ್ಟಿಗೆ ಸಂಪರ್ಕಿಸುವ ರಸ್ತೆಗಳಿಗೆ ತನ್ನ ಜನರನ್ನು ನಿಯೋಜಿಸಿತ್ತು. ಇದನ್ನೂ ಓದಿ: ಟಿವಿ, ರೇಡಿಯೋಗಳಲ್ಲಿ ಮಹಿಳೆಯ ಧ್ವನಿ ಬ್ಯಾನ್- ತಾಲಿಬಾನ್ ಆದೇಶ
ಐಎಸ್‍ಕೆಪಿ ಉಗ್ರರು ಯಾವುದೇ ಕ್ಷಣದಲ್ಲಿ ಮತ್ತಷ್ಟು ದಾಳಿಗಳನ್ನು ನಡೆಸಬಹುದು ಎನ್ನಲಾಗಿದೆ. ಈ ದಾಳಿ ನಡುವೆಯೂ ಕಾಬೂಲ್ ಏರ್ ಪೋರ್ಟ್ ನಿಂದ ಜನರ ಏರ್‍ಲಿಫ್ಟ್ ಮುಂದುವರಿದಿದೆ. ಈ ಮಧ್ಯೆ ಕಾಬೂಲ್ ಸೇರಿ ಎಲ್ಲಾ ಕಡೆ, ಬ್ಯಾಂಕ್ ಮತ್ತು ಎಟಿಎಂಗಳಿಗೆ ಜನ ಮುಗಿಬಿದ್ದಿದ್ದಾರೆ. ತಮ್ಮ ಖಾತೆಯಲ್ಲಿನ ಹಣ ಬಿಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದ್ರೆ ಬ್ಯಾಂಕ್‍ನಲ್ಲಿ ದುಡ್ಡಿಲ್ಲ. ಎಟಿಎಂನಲ್ಲಿಯೂ ದುಡ್ಡಿಲ್ಲದೇ ಜನ ಪರದಾಡುತ್ತಿದ್ದಾರೆ. ಜನ ಆಕ್ರೋಶಗೊಳ್ಳುತ್ತಿದ್ದಂತೆ ಅವರನ್ನು ಚೆದುರಿಸಲು ತಾಲಿಬಾನ್ ಉಗ್ರರು ಬ್ಯಾಂಕ್ ಬಳಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ:ಕಾಬೂಲ್‍ನಲ್ಲಿ ಮತ್ತೊಂದು ಪ್ರಬಲ ಬಾಂಬ್ ಸ್ಫೋಟ
ಈ ನಡುವೆ ಭಾರತದೊಂದಿಗೆ ತಾಲಿಬಾನ್ ಉತ್ತಮ ಬಾಂದವ್ಯ ಬಯಸುತ್ತಿದೆ ಅಂತ ತಾಲಿಬಾನ್ ಮುಖಂಡ ಮೊಹಮ್ಮದ್ ಅಬ್ಬಾಸ್ ಸಂದೇಶ ನೀಡಿದ್ದಾರೆ. ಈ ಎಲ್ಲದರ ಮಧ್ಯೆ, ಭಾರತ-ಅಫ್ಘಾನ್ ಸ್ನೇಹದ ಭಾಗವಾಗಿ ಹೆರಾತ್‍ನಲ್ಲಿ ಭಾರತ ಕಟ್ಟಿಸಿರುವ ಬೃಹತ್ ಅಣೆಕಟ್ಟಿಗೆ ಭೇಟಿಗೆ ತಾಲಿಬಾನಿಗಳು ಭೇಟಿ ನೀಡಿದ್ದಾರೆ. ಈ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ರಕ್ಷಣಾ ಸಚಿವ ರಾಜನಾಥ್, ಬದಲಾದ ಪರಿಸ್ಥಿತಿಯಲ್ಲಿ ನಾವೂ ವ್ಯೂಹಗಳನ್ನು ಬದಲಿಸುತ್ತಿದ್ದೇವೆ. ಎಂಥಹ ಪರಿಸ್ಥಿತಿ ಬಂದರೂ ಎದುರಿಸಲು ಸಿದ್ಧ ಇದ್ದೇವೆ ಎಂದು ಘೋಷಿಸಿದ್ದಾರೆ.
ಇತ್ತೀಚೆಗಷ್ಟೇ ಬ್ಯಾಂಕ್ ಪ್ರಾರಂಭಿಸಿದ್ದರೂ ಸಹ ಎಟಿಎಂನಲ್ಲಿ ಹಣವಿಲ್ಲವೆಂದು ಜನರು ಪೇಚಾಡುತ್ತಿದ್ದಾರೆ. ಕೆಲವು ಎಟಿಎಂಗಳು ಕಾರ್ಯನಿರ್ವಹಿಸುತ್ತಿದ್ದರೂ, ಸಹ ಅವುಗಳಲ್ಲಿ ದಿನಕ್ಕೆ 200 ಡಾಲರ್ ಅಷ್ಟೇ ಹಣ ತೆಗೆಯಲು ಸಾಧ್ಯವಾಗುತ್ತಿದೆ. ಈ ಕಾರಣಕ್ಕೆ ಎಟಿಎಂ ಮುಂದೆ ಜನರ ಕ್ಯೂ ನಿಂತಿದ್ದಾರೆ.
ಗುರುವಾರ ಬಾಂಬ್ ದಾಳಿ ಬಳಿಕ ದೇಶ ತೊರೆಯುವವರ ಸಂಖ್ಯೆ ಹೆಚ್ಚಳವಾಗಿದೆ. ಆದ್ದರಿಂದ ತಾಲಿಬಾನಿಗಳನ್ನು ವಿಮಾನ ನಿಲ್ದಾಣದ ಸಮೀಪ ಮತ್ತು ಸಂಪರ್ಕಿಸುವ ಕಲ್ಪಿಸುವ ಮಾರ್ಗಗಳಲ್ಲಿ ಜನರನ್ನು ನೇಮಿಸಿದೆ. ಇತ್ತ ಬ್ರಿಟನ್, ಜರ್ಮನಿ ಸೇರಿದಂತೆ ಹಲವು ದೇಶಗಳು ಏರ್ ಲಿಫ್ಟ್ ಮಾಡೋದನ್ನ ಸ್ಥಗಿತಗೊಳಿಸಿವೆ. ಇತ್ತ ಆಗಸ್ಟ್ 31ರೊಳಗೆ ರಕ್ಷಣಾ ಕಾರ್ಯ ಪೂರ್ಣವಾಗದಿದ್ರೆ ನಮ್ಮ ಕಾರ್ಯಚರಣೆ ಮುಂದುವರಿಯಲಿದೆ ಎಂದು ಅಮೆರಿಕ ಸ್ಪಷ್ಟಪಡಿಸಿದೆ. ಆಗಸ್ಟ್ 31ರೊಳಗೆ ತಮ್ಮ ಸೇನೆಯನ್ನು ಹಿಂಪಡೆಯುವಂತೆ ಅಮೆರಿಕಾಗೆ ತಾಲಿಬಾನಿಗಳು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ:ಕಾಬೂಲ್ ವಿಮಾನ ನಿಲ್ದಾಣದ ಎಂಟ್ರಿ ಗೇಟ್ ಬಳಿ ಮತ್ತೆ ಫೈರಿಂಗ್
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ತೆರಳಿದ್ದ ಉಕ್ರೇನ್ ವಿಮಾನ ಹೈಜಾಕ್ ಮಾಡಲಾಗಿದೆ. ತಮ್ಮ ವಿಮಾನವನ್ನು ಇರಾನ್ ಗೆ ತೆಗೆದುಕೊಂಡು ಹೋಗಲಾಗಿದೆ ಎಂದು ಉಕ್ರೇನ್ ಸರ್ಕಾರದ ಸಚಿವರು ಹೇಳಿದ್ದಾರೆ. ಭಾನುವಾರವೇ ವಿಮಾನವೇ ಹೈಜಾಕ್ ಆಗಿದ್ದು, ಕೆಲ ಅಪರಿಚಿತರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಉಕ್ರೇನ್ ಸರ್ಕಾರ ಹೇಳಿದೆ.
ಉಕ್ರೇನ್ ಡೆಪ್ಯುಟಿ ವಿದೇಶಾಂಗ ಮಂತ್ರಿ ಯೆವ್ಗೆನಿ ಯೆನಿನ್, ಭಾನುವಾರ ಕೆಲ ಅಪರಿಚಿತರು ವಿಮಾನ ಹೈಜಾಕ್ ಮಾಡಿದ್ದು, ಇರಾನ್ ನತ್ತ ತೆಗೆದುಕೊಂಡು ಹೋಗಿದ್ದಾರೆ. ನಮ್ಮ ಜನರು ಏರ್ ಪೋರ್ಟ್ ತಲುಪದ ಕಾರಣ ವಿಮಾನವನ್ನು ನಿಗದಿತ ಪ್ಲಾನ್ ನಂತೆ ಮೂರು ಸ್ಥಳಗಳಿಗೆ ತೆಗೆದುಕೊಂಡು ಹೋಗಲು ವಿಫಲವಾಗಿದ್ದೇವೆ ಎಂದು ಹೇಳಿದ್ದಾರೆ.
A Ukrainian plane that arrived in Afghanistan to evacuate Ukrainians has been hijacked by unidentified people who flew it into Iran, Ukraine’s Deputy Foreign Minister Yevgeny Yenin says: Russian News Agency TASS pic.twitter.com/imHpp5bK6G
ವಿಮಾನ ಈಶಾನ್ಯ ಇರಾನಿನ ಮಶಹದ್ ಏರ್ ಪೋರ್ಟ್ ಗೆ ಬಂದಿತ್ತು. ಅಲ್ಲಿ ರೀಪ್ಯೂಲಿಂಗ್ ಬಳಿಕ ಉಕ್ರೇನ್ ನತ್ತ ಟೇಕಾಫ್ ಆಗಿತ್ತು. ನಂತರ ಕಿವ್ ವಿಮಾನ ನಿಲ್ದಾಣದಲ್ಲಿ ಅದು ಲ್ಯಾಂಡ್ ಆಗಿತ್ತು ಎಂದು ಇರಾನ್ ಮಂತ್ರಿ ಅಬ್ಬಾಸ್ ಅಸ್ಲಾನಿ ಮಾಹಿತಿ ನೀಡಿದ್ದಾರೆ.
Kiev denies hijacking any Ukrainian evacuation plane in Afghanistan: Tehran Times quotes Russian media outlet Interfax pic.twitter.com/PB9esSjUO7
ವಿಮಾನ ಹೈಜಾಕ್ ಮಾಡಿದವರು ಶಸ್ತ್ರಸಜ್ಜಿತರಾಗಿದ್ದರು. ಆದ್ರೆ ಇದುವರೆಗೂ ಈ ವಿಮಾನ ಹೈಜಾಕ್ ಮಾಡಿದವರು ಯಾರು ಎಂಬುದರ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಅಫ್ಘಾನಿಸ್ತಾನ ತಾಲಿಬಾನಿಗಳ ವಶವಾಗುತ್ತಿದ್ದಂತೆ ಉಕ್ರೇನ್ ನಿರಂತರವಾಗಿ ತನ್ನ ಜನರನ್ನು ಏರ್ ಲಿಫ್ಟ್ ಮಾಡುತ್ತಿದೆ. ಇದನ್ನೂ ಓದಿ:ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು
ಕೆಲ ವರದಿಗಳ ಪ್ರಕಾರ, ಕಾಬೂಲ್ ನಿಂದ ಕಿವ್ ವರೆಗೂ 83 ಜನರನ್ನು ಕರೆದುಕೊಂಡು ಬರಲಾಗಿತ್ತು. ಇದರಲ್ಲಿ 31 ಉಕ್ರೇನ್ ಪ್ರಜೆಗಳಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಅಫ್ಘಾನಿಸ್ತಾದಲ್ಲಿ 100 ಉಕ್ರೇನ್ ಪ್ರಜೆಗಳಿದ್ದು, ಅವರನ್ನ ವಾಪಸ್ ಕರೆಸಿಕೊಳ್ಳುವ ಕೆಲಸ ತ್ವರಿತಗತಿಯಲ್ಲಿ ನಡೆಯುತ್ತಿದೆ. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!
ತಾಲಿಬಾನಿಗಳು ಕಾಬೂಲ್ ನಗರ ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆ ಭಾರತ, ಫ್ರಾನ್ಸ್, ಉಕ್ರೇನ್, ಜರ್ಮನಿ, ಬ್ರಿಟನ್, ಅಮೆರಿಕ ತನ್ನ ಪ್ರಜೆಗಳನ್ನು ಕರೆಸಿಕೊಳ್ಳುತ್ತಿದೆ. ನಾಟೋ ದೇಶಗಳ ಜೊತೆ ಸೇರಿ ಕಾಬೂಲ್ ವಿಮಾನ ನಿಲ್ದಾಣವನ್ನು ಅಮೆರಿಕ ತನ್ನ ನಿಯಂತ್ರಣದಲ್ಲಿರಿಸಿಕೊಂಡಿದೆ. ಅಮೆರಿಕದ ಸಹಾಯದಿಂದ ಇನ್ನಿತರ ದೇಶಗಳು ಪ್ರಜೆಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಇದನ್ನೂ ಓದಿ:ಯುದ್ಧದಲ್ಲಿ ಸಹಾಯ ಮಾಡಿದ ಅಫ್ಘನ್ನರಿಗೆ ಅಮೆರಿಕದಲ್ಲಿ ಆಶ್ರಯ: ಜೋ ಬೈಡನ್ ಘೋಷಣೆ
ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಏರ್ ಲಿಫ್ಟ್ ಮಾಡಲು ಮೋದಿ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಮಧ್ಯರಾತ್ರಿ 135 ಮಂದಿ ಭಾರತೀಯರು ಸೇಫಾಗಿ ದೆಹಲಿಯಲ್ಲಿ ಲ್ಯಾಂಡ್ ಆಗಿದ್ದಾರೆ. ಮೂರು ದಿನಗಳ ಹಿಂದೆ 135 ಭಾರತೀಯರನ್ನು ಕಾಬೂಲ್‍ನಿಂದ ಖತಾರ್ ನ ದೋಹಾಗೆ ಏರ್ ಲಿಫ್ಟ್ ಮಾಡಲಾಗಿತ್ತು. ಅವರನ್ನು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ದೋಹದಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ಕರೆತರಲಾಗಿದೆ.
ಅಫ್ಘನ್‍ನಲ್ಲಿ ಸಿಲುಕಿರುವ ಉಳಿದ ಹಿಂದೂಗಳನ್ನು, ಸಿಖ್ಖರನ್ನು, ಮುಸ್ಲಿಮರನ್ನು, ಕ್ರೈಸ್ತರನ್ನು ಕಾಪಾಡಲು ಕಸರತ್ತುಗಳನ್ನು ನಡೆಸಲಾಗ್ತಿದೆ. ಆದ್ರೆ ತಾಲಿಬಾನ್ ಉಗ್ರರು ಅಷ್ಟು ಸುಲಭಕ್ಕೆ ಭಾರತೀಯರನ್ನು ಏರ್ ಪೋರ್ಟ್ ತಲುಪಲು ಬಿಡ್ತಿಲ್ಲ. ಅಲ್ಲಿ ಸಿಲುಕಿರುವ ಭಾರತೀಯರೊಬ್ಬರ ಪ್ರಕಾರ, ಅವರನ್ನು ವಿಮಾನನಿಲ್ದಾಣಕ್ಕೆ ಕರೆದೊಯ್ಯಲು ಕಳೆದ ಎರಡು ದಿನಗಳಿಂದ ನಿರಂತರ ಪ್ರಯತ್ನಗಳು ನಡೆಯತ್ತಿವೆ. ದಾರಿ ಮಧ್ಯೆ ತಾಲಿಬಾನಿ ಉಗ್ರರು ಬಿಡುತ್ತಿಲ್ಲ. ಇದನ್ನೂ ಓದಿ: ತಾಲಿಬಾನಿಗಳನ್ನ RSS, ಬಜರಂಗದಳಕ್ಕೆ ಹೋಲಿಸಿದ ಕವಿ ಮುನ್ವರ್ ರಾಣಾ
ಭಾರತೀಯರು ಇರುವ ಬಸ್ ತಪಾಸಣೆ ನಡೆಸಿದ ಉಗ್ರರು, ಅದರಲ್ಲಿ ಅಫ್ಘಾನಿ ಹಿಂದೂಗಳು, ಸಿಖ್ಖರನ್ನು ಭಾರತೀಯರಿಂದ ಬೇರ್ಪಡಿಸಿ ಫ್ಯಾಕ್ಟರಿಯೊಂದಕ್ಕೆ ಕರೆದೊಯ್ದಿದ್ದಾರೆ. ಕೆಲವರು ಭಯದಿಂದ ಗುರುದ್ವಾರಕ್ಕೆ ವಾಪಸ್ ಆಗಿದ್ದಾರೆ. ಉಳಿದ ಭಾರತೀಯರು ಏರ್ ಪೋರ್ಟ್ ಸಮೀಪದ ಕಲ್ಯಾಣಮಂಟಪದಲ್ಲಿ ಬೀಡುಬಿಟ್ಟಿದ್ದಾರೆ. ಇದರಲ್ಲಿ ಕನ್ನಡಿಗರು ಕೂಡ ಇದ್ದಾರೆ ಎನ್ನಲಾಗಿದೆ. ತಾಲಿಬಾನಿಗಳು ಕೆಲ ಭಾರತೀಯರ ಮೊಬೈಲ್‍ಗಳನ್ನು ಉಡೀಸ್ ಮಾಡಿದ್ದಾರೆ. ಅಲ್ಲದೇ 150 ಭಾರತೀಯರನ್ನು ಕಿಡ್ನಾಪ್ ಮಾಡಿದ್ದಾರೆ ಎನ್ನಲಾಗಿತ್ತು. ಆದ್ರೆ ಇದು ಸುಳ್ಳು ಎಂದು ಸ್ವತಃ ತಾಲಿಬಾನ್ ಸ್ಪಷ್ಟಪಡಿಸಿದೆ. ಇದನ್ನೂ ಓದಿ:ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು
ಮಂಗಳೂರು: ಕ್ವಾರಂಟೈನ್ ನಲ್ಲಿದ್ದ ಗರ್ಭಿಣಿಗೆ ಸೂಕ್ತ ಚಿಕಿತ್ಸೆ ಸಿಗದ ಪರಿಣಾಮ ಹೊಟ್ಟೆಯಲ್ಲೇ ಮಗು ಸಾವನ್ನಪ್ಪಿದೆ ಎಂಬ ಆರೋಪವೊಂದು ವೈದ್ಯರ ವಿರುದ್ಧ ಕೇಳಿಬಂದಿದೆ.
ಮೇ 12ರಂದು ದುಬೈನಿಂದ ಗರ್ಭಿಣಿ ಏರ್ ಲಿಫ್ಟ್ ಆಗಿದ್ದರು. ಮಂಗಳೂರು ವಿಮಾನ ನಿಲ್ದಾಣದಿಂದ ಆಕೆಯನ್ನು ಹೊಟೇಲ್ ಕ್ವಾರಂಟೈನ್ ಆಗಿದ್ದರು. ಮರುದಿನ ನಡೆದ ತಪಾಸಣೆಯಲ್ಲಿ ಕೊರೊನಾ ನೆಗೆಟಿವ್ ಬಂದಿತ್ತು. ಆದರೂ ಗರ್ಭಿಣಿಗೆ ಚಿಕಿತ್ಸೆ ನೀಡಲು ವೈದ್ಯರು ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಲಾಗುತ್ತಿದೆ.
ಗರ್ಭಿಣಿಯ ಆರೋಗ್ಯ ತಪಾಸಣೆ ವಿಚಾರದಲ್ಲಿ ವೈದ್ಯರು ನಿರ್ಲಕ್ಷ್ಯ ವಹಿಸಿದ್ದು, ವರದಿ ನೆಗೆಟಿವ್ ಬಂದರೂ ಗರ್ಭಿಣಿಗೆ ಹೋಂ ಕ್ವಾರಂಟೈನ್ ಸಿಗಲಿಲ್ಲ. ಇಷ್ಟು ಮಾತ್ರವಲ್ಲದೆ ಮಂಗಳೂರಿನ ಕೆಲ ಖಾಸಗಿ ಆಸ್ಪತ್ರೆ ವೈದ್ಯರು ಕೂಡ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ.
ಒಟ್ಟಿನಲ್ಲಿ ಎರಡನೇ ಟೆಸ್ಟ್ ನಲ್ಲಿ ಕೋವಿಡ್ ನೆಗೆಟಿವ್ ಬಂದರೂ ಚಿಕಿತ್ಸೆ ಸಿಗದೇ ಮಗು ಸಾವನ್ನಪ್ಪಿದೆ. ಇದಕ್ಕೆ ವೈದ್ಯರೇ ನೇರ ಹೊಣೆ ಎಂದು ಮಹಿಳೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.