Tag: air pollution

  • ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ ; GRAP ಹಂತ IIರ ನಿಯಮಗಳು ಜಾರಿ

    ದೆಹಲಿಯಲ್ಲಿ ಹೆಚ್ಚಿದ ವಾಯು ಮಾಲಿನ್ಯ ; GRAP ಹಂತ IIರ ನಿಯಮಗಳು ಜಾರಿ

    – ಮುಂದಿನ ಒಂದು ವಾರದಲ್ಲಿ AQI 600ರ ಗಡಿ ದಾಟುವ ಎಚ್ಚರಿಕೆ

    ನವದೆಹಲಿ : ದೀಪಾವಳಿ (Diwali) ಮೊದಲ ದಿನವೇ ದೆಹಲಿಯಲ್ಲಿ ವಾಯು ಮಾಲಿನ್ಯ (Air Pollution) ಹೆಚ್ಚಿದೆ. ಕಳೆದ ಏಳು ದಿನಗಳಿಂದ ನಿರಂತರವಾಗಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಸದ್ಯ AQI 400ರ ಗಡಿ ದಾಟಿದೆ. ಮುಂದಿನ ಒಂದು ವಾರದಲ್ಲಿ ಈ ಪ್ರಮಾಣ AQI 600 ಗಡಿ ದಾಟಬಹುದು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಎಚ್ಚರಿಕೆ ನೀಡಿದೆ.

    ದೆಹಲಿಯ 38 ಮೇಲ್ವಿಚಾರಣಾ ಕೇಂದ್ರಗಳ ಪೈಕಿ 24 ಕೇಂದ್ರಗಳಲ್ಲಿ ಗಾಳಿಯ ಗುಣಮಟ್ಟ ʼತುಂಬಾ ಕಳಪೆʼ ಮಟ್ಟವನ್ನು ದಾಖಲಿಸಿವೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ಸೋಮವಾರ ಬೆಳಗ್ಗೆ, ಆನಂದ್ ವಿಹಾರ್ ನಗರದಲ್ಲಿ ಅತ್ಯಂತ ವಿಷಕಾರಿ ಗಾಳಿಯನ್ನು ವರದಿ ಮಾಡಿದೆ, AQI 417 ರೊಂದಿಗೆ, ಇದು ʼತೀವ್ರ ಕಳಪೆʼ ವರ್ಗಕ್ಕೆ ಇಳಿದಿದೆ. ಇದನ್ನೂ ಓದಿ: ಕುಣಿಗಲ್‌ ಫ್ಲೈಓವರ್‌ನಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ

    ವಜೀರ್‌ಪುರ (364), ವಿವೇಕ್ ವಿಹಾರ್ (351), ದ್ವಾರಕಾ (335), ಮತ್ತು ಆರ್‌ಕೆ ಪುರಂ (323) ಸೇರಿದಂತೆ 12 ನಿಲ್ದಾಣಗಳು ಗಾಳಿಯ ಗುಣಮಟ್ಟವನ್ನು ʼತುಂಬಾ ಕಳಪೆʼ ವ್ಯಾಪ್ತಿಯಲ್ಲಿ ವರದಿ ಮಾಡಿವೆ. ಸಿಪಿಸಿಬಿ ದತ್ತಾಂಶದ ಪ್ರಕಾರ, ಸಿರಿ ಫೋರ್ಟ್, ದಿಲ್ಶಾದ್ ಗಾರ್ಡನ್ ಮತ್ತು ಜಹಾಂಗೀರ್‌ಪುರಿ ಮುಂತಾದ ಇತರ ಪ್ರದೇಶಗಳು 318 ಎಕ್ಯೂಐ ದಾಖಲಿಸಿವೆ. ಪಂಜಾಬಿ ಬಾಗ್ 313, ನೆಹರು ನಗರ 310, ಅಶೋಕ್ ವಿಹಾರ್ 305 ಮತ್ತು ಬವಾನಾ 304ರ ವಾಯು ಗುಣಮಟ್ಟ ಸೂಚ್ಯಂಕವನ್ನು ದಾಖಲಿಸಿವೆ. ಇದನ್ನೂ ಓದಿ: ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

    ದೆಹಲಿಯಲ್ಲಿ ಮಾಲಿನ್ಯ ಹೆಚ್ಚುತ್ತಿರುವ ಹಿನ್ನಲೆ GRAP ಹಂತ IIರ ನಿಯಮಗಳನ್ನು ಜಾರಿ ಮಾಡಿದೆ. ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಹಂತ II ಆಕ್ಷನ್ ಕ್ವಾಲಿಟಿ ಇಂಡೆಕ್ಸ್ (AQI) 301 ರಿಂದ 400ರವರೆಗಿನ ʼಅತ್ಯಂತ ಕಳಪೆʼ ವರ್ಗಕ್ಕೆ ಸೇರಿದಾಗ ಜಾರಿಗೊಳಿಸಲಾಗುತ್ತದೆ. ಇದು ಹಂತ I ನ ನಿಯಮಗಳನ್ನು ಸೇರಿಸಿ ಜಾರಿಯಲ್ಲಿರುತ್ತದೆ. ಇದನ್ನೂ ಓದಿ: ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಭೀಕರ ಅಪಘಾತ – ಇಬ್ಬರು ದುರ್ಮರಣ

    ಈ ನಿಯಮಗಳ ಪ್ರಕಾರ ಮಾಲಿನ್ಯ ನಿಯಂತ್ರಣಕ್ಕೆ ಬರುವವರೆಗೂ ಕಟ್ಟಡ ನಿರ್ಮಾಣ ಕಾಮಗಾರಿಗಳ ನಿಲ್ಲಿಸಬೇಕಾಗುತ್ತದೆ. ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಓಪನ್ ಈಟರಿಗಳಲ್ಲಿ ತಂದೂರ್‌ಗಳಲ್ಲಿ ಕಲ್ಲಿದ್ದಲು ಬಳಕೆ ನಿಷೇಧ ಮಾಡಲಾಗುತ್ತದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಡೀಸೆಲ್ ಜನರೇಟರ್‌ಗಳ ಬಳಕೆಯನ್ನು ನಿರ್ಬಂಧಿಸಲಾಗುತ್ತದೆ. ಇದನ್ನೂ ಓದಿ: ನಾಡಿನಾದ್ಯಂತ ದೀಪಾವಳಿ ಸಂಭ್ರಮ – ಕೆಆರ್ ಮಾರ್ಕೆಟ್‌ನಲ್ಲಿ ಹೂ, ಹಣ್ಣು ಖರೀದಿಗೆ ಮುಗಿಬಿದ್ದ ಜನ

    ಅಂತರ್ ರಾಜ್ಯ ಬಸ್‌ಗಳ ಪ್ರವೇಶವನ್ನು CNG, ಎಲೆಕ್ಟ್ರಿಕ್ ಅಥವಾ BS-VI ಡೀಸೆಲ್ ಇಂಧನದ್ದಕ್ಕೆ ಮಾತ್ರ ಸೀಮಿತಗೊಳಿಸುವುದು. ದೆಹಲಿಯಲ್ಲಿ ಸಾರ್ವಜನಿಕ ಸಾರಿಗೆಯನ್ನು ಬಲಪಡಿಸುವುದು, CNG ಮತ್ತು ಎಲೆಕ್ಟ್ರಿಕ್ ಬಸ್‌ಗಳನ್ನು ಹೆಚ್ಚಿಸುವುದು, ಮೆಟ್ರೋ ಸೇವೆಗಳ ಆಪರೇಷನ್ ಫ್ರೀಕ್ವೆನ್ಸಿಯನ್ನು ಹೆಚ್ಚಿಸುವುದು, ಖಾಸಗಿ ವಾಹನಗಳನ್ನು ತಡೆಯಲು ಪಾರ್ಕಿಂಗ್ ಶುಲ್ಕಗಳನ್ನು ಹೆಚ್ಚಿಸಲಾಗುವುದು. ಇದನ್ನೂ ಓದಿ: ಊರಿಗೆ ತೆರಳಿದ ಜನ – ಮೆಜೆಸ್ಟಿಕ್‌ ಬಸ್‌ನಿಲ್ದಾಣ ಖಾಲಿ ಖಾಲಿ

    ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ದೀಪಾವಳಿಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ನಿವಾಸಿಗಳಿಗೆ ಶುಭ ಹಾರೈಸಿದರು ಮತ್ತು ಸುಪ್ರೀಂ ಕೋರ್ಟ್ ಆದೇಶದಂತೆ ಎಲ್ಲರೂ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಚಿತ್ತಾಪುರ ಆಯ್ತು ಈಗ ಸೇಡಂ – ಕೊನೆ ಕ್ಷಣದಲ್ಲಿ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ಬ್ರೇಕ್‌

    ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಪಟಾಕಿಗಳನ್ನು ಬೆಳಿಗ್ಗೆ 6ರಿಂದ 7ರವರೆಗೆ ಮತ್ತು ನಂತರ ರಾತ್ರಿ 8ರಿಂದ ರಾತ್ರಿ 10ರವರೆಗೆ ಮಾತ್ರ ಮಾರಾಟ ಮಾಡಲು ಅವಕಾಶವಿರುತ್ತದೆ ಮತ್ತು ಅಕ್ಟೋಬರ್ 18 ರಿಂದ 20ರವರೆಗೆ ಮಾರಾಟ ಮಾಡಲಾಗುತ್ತದೆ. ದೀಪಗಳನ್ನು ಬೆಳಗಿಸುವ ಮೂಲಕ, ರಂಗೋಲಿ ಬಿಡಿಸುವ ಮೂಲಕ ಮತ್ತು ಸಿಹಿತಿಂಡಿಗಳನ್ನು ಹಂಚಿಕೊಳ್ಳುವ ಮೂಲಕ ಸಾಂಪ್ರದಾಯಿಕ ರೀತಿಯಲ್ಲಿ ಬೆಳಕಿನ ಹಬ್ಬವನ್ನು ಆಚರಿಸಲು  ಜನರಿಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ ಭಾರೀ ಸುಂಕ ಹಾಕ್ತೇವೆ: ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

  • ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್

    ದೆಹಲಿ ಸರ್ಕಾರದಿಂದ ಯೂಟರ್ನ್ – ಅವಧಿ ಮೀರಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್

    ನವದೆಹಲಿ: ವಾಯುಮಾಲಿನ್ಯ ನಿಯಂತ್ರಣ ಉದ್ದೇಶದಿಂದ ದೆಹಲಿಯಲ್ಲಿ (Delhi) ಅವಧಿ ಮೀರಿದ ಹಳೆಯ ವಾಹನಗಳಿಗೆ ಇಂಧನ ನಿಷೇಧಿಸುವ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ದೆಹಲಿಯ ಬಿಜೆಪಿ ಸರ್ಕಾರ (BJP Government) ಯೂಟರ್ನ್ ಹೊಡೆದಿದೆ. ಯೋಜನೆಯಲ್ಲಿ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧ ಆದೇಶವನ್ನು ವಾಪಸ್ ಪಡೆದಿದೆ.

    ಸರ್ಕಾರ ಜನಾಕ್ರೋಶದ ಬೆನ್ನಲ್ಲೇ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧವನ್ನು ತೆಗೆದುಹಾಕುವಂತೆ ವಾಯು ಗುಣಮಟ್ಟ ನಿರ್ವಹಣಾ ಆಯೋಗಕ್ಕೆ ಪತ್ರ ಬರೆದಿತ್ತು.ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಭೂಕುಸಿತ ಎಚ್ಚರಿಕೆ ನೀಡಿದ ಭೂವಿಜ್ಞಾನಿಗಳು

    ಪತ್ರದಲ್ಲಿ, ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ವ್ಯವಸ್ಥೆ (ANPR) ಕ್ಯಾಮೆರಾಗಳಲ್ಲಿ ತಾಂತ್ರಿಕ ದೋಷಗಳು ಕಂಡುಬಂದಿದೆ ಹಾಗೂ ಸ್ಪೀಕರ್ ಕಾರ್ಯನಿರ್ವಹಿಸದಿರುವಂತಹ ಮುಂತಾದ ಸಮಸ್ಯೆಗಳಿವೆ. ಇನ್ನೂ ನೆರೆಯ ರಾಜ್ಯಗಳ ಪೆಟ್ರೋಲ್ ಪಂಪ್‌ಗಳಲ್ಲಿ ಎಎನ್‌ಪಿಆರ್ ವ್ಯವಸ್ಥೆಯನ್ನು ಜಾರಿಗೆ ತಂದಿಲ್ಲ. ಹೀಗಾಗಿ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕಾರಣಗಳಿಂದ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧವನ್ನು ತೆಗೆದುಹಾಕಲು ಪತ್ರ ಬರೆದಿತ್ತು. ಸರ್ಕಾರದ ಪತ್ರದ ಬೆನ್ನಲ್ಲೇ ಆದೇಶವನ್ನು ಹಿಂಪಡೆಯಲಾಗಿದೆ.

    ಸರ್ಕಾರದ ಬದಲಾದ ನಿರ್ಧಾರದಿಂದಾಗಿ 10 ವರ್ಷಕ್ಕಿಂತ ಹಳೆಯದಾದ (ಡೀಸೆಲ್) ಮತ್ತು 15 ವರ್ಷ ಹಳೆಯದಾದ (ಪೆಟ್ರೋಲ್) ವಾಹನಗಳಿಗೆ ದೆಹಲಿಯ ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ಹಾಕಿಸಬಹುದು. ಪೆಟ್ರೋಲ್ ಪಂಪ್‌ಗಳು ಇನ್ನು ಮುಂದೆ ಹಳೆಯ ವಾಹನಗಳನ್ನು ಅವುಗಳ ವರ್ಷದ ಆಧಾರದ ಮೇಲೆ ಸೇವೆಯನ್ನು ನಿರಾಕರಿಸುವಂತಿಲ್ಲ. ಪಂಪ್‌ಗಳಲ್ಲಿರುವ ಕ್ಯಾಮೆರಾಗಳು ದಾಖಲೆಗಾಗಿ ಕಾರ್ಯನಿರ್ವಹಿಸಿದರೂ, ಈ ಹಿಂದೆ ಘೋಷಿಸಲಾಗಿದ್ದ ಇಂಧನ ನಿಷೇಧವನ್ನು ಜಾರಿಗೊಳಿಸುವಂತಿಲ್ಲ ಎಂದು ತಿಳಿಸಿದೆ.

    ಈ ಕುರಿತು ಪರಿಸರ ಕಾರ್ಯಕರ್ತರು, ಸರ್ಕಾರವು ವಾಹನವನ್ನು ಅದರ ವರ್ಷಗಳ ಆಧಾರದ ಮೇಲೆ ಗುರುತಿಸುವುದಕ್ಕಿಂತ ಹೆಚ್ಚಾಗಿ ಎಲೆಕ್ಟ್ರಿಕ್‌ ವಾಹನಗಳನ್ನು ಉತ್ತೇಜಿಸುವುದು ಒಳ್ಳೆಯದು ಹಾಗೂ ಸಾರ್ವಜನಿಕ ಸಾರಿಗೆಗೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.ಇದನ್ನೂ ಓದಿ: ಉಡುಪಿ | `ರಕ್ತಕ್ಕೆ ರಕ್ತವೇ ಬೇಕು’ ಅಂತ ಸ್ಟೇಟಸ್ ಹಾಕಿದ್ದ ಯುವಕ ಅರೆಸ್ಟ್

  • ಮೆಟ್ರೋ ಟಿಕೆಟ್ ದರ ಏರಿಕೆ ಎಫೆಕ್ಟ್ – ಬೆಂಗ್ಳೂರಲ್ಲಿ ಟ್ರಾಫಿಕ್ ಜೊತೆಗೆ ವಾಯುಮಾಲಿನ್ಯವೂ ಹೆಚ್ಚಳ

    ಮೆಟ್ರೋ ಟಿಕೆಟ್ ದರ ಏರಿಕೆ ಎಫೆಕ್ಟ್ – ಬೆಂಗ್ಳೂರಲ್ಲಿ ಟ್ರಾಫಿಕ್ ಜೊತೆಗೆ ವಾಯುಮಾಲಿನ್ಯವೂ ಹೆಚ್ಚಳ

    ಬೆಂಗಳೂರು: ಮೆಟ್ರೋ ದರ ಏರಿಕೆ (Metro Ticket Price Hike) ಎಫೆಕ್ಟ್ ಒಂದೆಡೆ ಮೆಟ್ರೋ ಪ್ರಯಾಣಿಕರ ಸಂಖ್ಯೆ ಇಳಿಸಿದ್ದರೇ ಮತ್ತೊಂದೆಡೆ ಬೆಂಗಳೂರು ಟ್ರಾಫಿಕ್ (Bengaluru Traffic) ಹೆಚ್ಚಳ ಮಾಡಿದೆ. ಇದರಿಂದಾಗಿ ಬೆಂಗಳೂರಲ್ಲಿ ವಾಯುಮಾಲಿನ್ಯ (Air Pollution) ಹೆಚ್ಚಾಗುತ್ತಿದೆ.

    ಜನವರಿಯಲ್ಲಿ ಬಸ್ ದರ ಏರಿಕೆಯ ನಂತರ ಫೆಬ್ರವರಿ 9ರಿಂದ ಮೆಟ್ರೋ ದರ ಏರಿಕೆ ಮಾಡಲಾಯಿತು. ದರ ಏರಿಕೆ ಹಿನ್ನೆಲೆ ಪ್ರತಿನಿತ್ಯ ಸುಮಾರು 80-90 ಸಾವಿರ ಮೆಟ್ರೋ ಪ್ರಯಾಣಿಕರು ಮೆಟ್ರೋದಿಂದ ದೂರವಾಗಿ ದ್ವಿಚಕ್ರ ವಾಹನ, ಕಾರುಗಳತ್ತ ಮುಖ ಮಾಡುತ್ತಿದ್ದಾರೆ. ಇದರಿಂದ ನಗರದಲ್ಲಿ ಒಂದೆಡೆ ಟ್ರಾಫಿಕ್ ಹೆಚ್ಚಳದ ಜೊತೆಗೆ ವಾಯುಮಾಲಿನ್ಯ ಸಹ ಹೆಚ್ಚಾಗುತ್ತಿದೆ. ಇದನ್ನೂ ಓದಿ: 137 ಅಕ್ರಮ ವಲಸಿಗರು ಪತ್ತೆ, ಕಠಿಣ ಕ್ರಮ ಕೈಗೊಳ್ಳಲಾಗಿದೆ: ಪರಮೇಶ್ವರ್

    ಐಐಎಸ್‌ಸಿ ತಜ್ಞ ಆಶಿಶ್ ವರ್ಮಾ ಅಧ್ಯಯನದಂತೆ 5%ನಷ್ಟು ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗಿದ್ದು, 5%ನಷ್ಟು ಪ್ರಯಾಣಿಕರು ತಮ್ಮ ಸ್ವಂತ ವಾಹನಗಳನ್ನು ಬಳಸುತ್ತಿದ್ದಾರೆ. ಇದು ಜನರ ಜೀವನ ಹಾಗೂ ವಾಯುಮಾಲಿನ್ಯದ ಮೇಲೆ ಪರಿಣಾಮ ಬೀರಲಿದೆ ಎಂದಿದ್ದಾರೆ. ಇದನ್ನೂ ಓದಿ: ಅಣ್ಣನಿಂದಲೇ 7 ತಿಂಗಳ ಗರ್ಭಿಣಿಯಾದ ತಂಗಿ‌

    ಜಯನಗರದ ಕರ್ನಾಟಕ ವಾಯುಮಾಲಿನ್ಯ ನಿಯಂತ್ರಣ ಮಂಡಳಿಯ ಏರ್ ಕ್ವಾಲಿಟಿ ಮಾನಿಟರಿಂಗ್ ಅಧ್ಯಯನದ ಪ್ರಕಾರ, ಮೆಟ್ರೋ ಟಿಕೆಟ್ ಶುಲ್ಕ ಹೆಚ್ಚಳಕ್ಕೆ ಮುಂಚೆ, ಬೆಳಗ್ಗೆ ಮತ್ತು ಸಂಜೆ ಸಂಚಾರ ದಟ್ಟಣೆ ಇರುವ ಸಮಯದಲ್ಲಿ ವಾಯುಮಾಲಿನ್ಯದಲ್ಲಿ ಏರಿಕೆ ಆಗಿದೆ. ಸರಾಸರಿ ಪಿಎಂ 2.5 ಪ್ರತಿ ಘನ ಮೀಟರ್‌ಗೆ 43 ರಿಂದ 54 ಮೈಕ್ರೊಗ್ರಾಮ್ ಇತ್ತು. ಅದೇ ಫೆಬ್ರವರಿ 10 ರಂದು 112-114 ಮೈಕ್ರೊಗ್ರಾಂಗೆ ಏರಿಕೆಯಾಗಿದೆ. ಇನ್ನು ಫೆಬ್ರವರಿ 17 ಮತ್ತು 24ರ ಸೋಮವಾರ ಈ ಮಟ್ಟ ಸರಾಸರಿ 68 ರಿಂದ 105 ಮೈಕ್ರೋಗ್ರಾಂಗೆ ತಲುಪಿದೆ. ಹೀಗೆ ವಾಯುಮಾಲಿನ್ಯ ಏರಿಕೆಯಾದರೆ ಅಸ್ತಮಾದಿಂದ ಕ್ಯಾನ್ಸರ್ ತನಕ ರೋಗಗಳು ಬರಬಹುದಾಗಿದೆ. ಈ ಪ್ರಮಾಣದಲ್ಲಿ ವಾಯುಮಾಲಿನ್ಯ ಮಟ್ಟ ಏರಿಕೆಯಾಗುತ್ತಿರುವುದು ಆತಂಕವನ್ನುಂಟು ಮಾಡಿದೆ. ಇದನ್ನೂ ಓದಿ: 1 ಸಾವಿರ ರೂ. ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ – ಹಂತಕನಿಗೆ 7 ವರ್ಷ ಶಿಕ್ಷೆ

  • ದೆಹಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ 3ನೇ ಹಂತದ ಕ್ರಮ – ಮಕ್ಕಳಿಗೆ ಶಾಲೆಯಿಂದ ವಿನಾಯಿತಿ

    ದೆಹಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ 3ನೇ ಹಂತದ ಕ್ರಮ – ಮಕ್ಕಳಿಗೆ ಶಾಲೆಯಿಂದ ವಿನಾಯಿತಿ

    – ಬಿಎಸ್‌3 ಪೆಟ್ರೋಲ್‌, ಡೀಸೆಲ್‌ ವಾಹನಗಳ ಸಂಚಾರಕ್ಕೆ ತಡೆ

    ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ದೆಹಲಿ ಸರ್ಕಾರದಿಂದ ಮೂರನೇ ಹಂತದ ಕ್ರಮ ಜಾರಿಯಾಗಿದೆ.

    ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲೆಯಿಂದ ವಿನಾಯಿತಿ ನೀಡಲಾಗಿದೆ. ಆನ್‌ಲೈನ್ ಮೂಲಕ ತರಗತಿ ನಡೆಸಲು ಸರ್ಕಾರ ಸೂಚಿಸಿದೆ. BS 3 ಪೆಟ್ರೋಲ್, ಡೀಸೇಲ್ ವಾಹನಗಳ ಸಂಚಾರಕ್ಕೆ ತಡೆ ನೀಡಲಾಗಿದೆ.

    ಸಿಎನ್‌ಜಿ, ಇವಿ ಸೇರಿದಂತೆ ಅಂತರರಾಜ್ಯಗಳ BS4 ಡಿಸೇಲ್ ಬಸ್‌ಗಳಿಗೆ ಮಾತ್ರ ದೆಹಲಿ ಪ್ರವೇಶ ಕಲ್ಪಿಸಿದೆ. ತುರ್ತು ಅಲ್ಲದ ನಿರ್ಮಾಣ ಮತ್ತು ಕಟ್ಟಡ ತೆರವು ಕಾರ್ಯಕ್ಕೆ ತಡೆ ನೀಡಲಾಗಿದೆ. ಸರ್ಕಾರ ಕಾಮಗಾರಿ, ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಕಟ್ಟಡಗಳ ಕಾಮಗಾರಿಗೆ ಮಾತ್ರ ಅನುಮತಿ ನೀಡಲಾಗಿದೆ.

    ಇಡೀ ವಿಶ್ವದಲ್ಲೇ ಮಾಲಿನ್ಯಯುತ ನಗರಗಳ ಪಟ್ಟಿಯಲ್ಲಿ ದೆಹಲಿ ಮೊದಲ ಸ್ಥಾನದಲ್ಲಿದೆ. ದೆಹಲಿಯಲ್ಲಿ AQI 450 ಅನ್ನು ಮೀರಿದೆ. AQI 50 ರೊಳಗೆ ಉಸಿರಾಟಕ್ಕೆ ಯೋಗ್ಯ ಗಾಳಿ. AQI 50-100 ಮಧ್ಯಮ ಮಾಲಿನ್ಯದ ಗಾಳಿ. ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಮಾಲಿನ್ಯದ ಮೀತಿ ಮೀರಿದೆ.

  • ದೆಹಲಿಗೆ ಬರುತ್ತಿದ್ದಂತೆ ಗ್ಯಾಸ್ ಚೇಂಬರ್‌ಗೆ ಪ್ರವೇಶಿಸಿದಂತಾಯ್ತು: ಪ್ರಿಯಾಂಕಾ ಗಾಂಧಿ

    ದೆಹಲಿಗೆ ಬರುತ್ತಿದ್ದಂತೆ ಗ್ಯಾಸ್ ಚೇಂಬರ್‌ಗೆ ಪ್ರವೇಶಿಸಿದಂತಾಯ್ತು: ಪ್ರಿಯಾಂಕಾ ಗಾಂಧಿ

    – ವಯನಾಡಿನಿಂದ ದೆಹಲಿಗೆ ವಾಪಸ್ ಆದ ಪ್ರಿಯಾಂಕಾ

    ನವದೆಹಲಿ: ಗಾಳಿಯ ಗುಣಮಟ್ಟ ಸೂಚ್ಯಂಕ (AQI) 35 ಹೊಂದಿರುವ, ಪರಿಶುದ್ಧ ಗಾಳಿಯಿರುವ ವಯನಾಡಿನಿಂದ ದೆಹಲಿಗೆ ಪ್ರವೇಶಿಸುತ್ತಿದ್ದಂತೆ ಗ್ಯಾಸ್ ಚೇಂಬರ್ ಒಳಗೆ ಪ್ರವೇಶಿಸಿದಂತಾಯಿತು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ (Priyanka Gandhi) ಹೇಳಿದ್ದಾರೆ.

    ವಯನಾಡು (Wayanad) ಲೋಕಸಭಾ ಉಪಚುನಾವಣೆಯ ಬಳಿಕ ದೆಹಲಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ ಅಲ್ಲಿನ ವಾಯುಮಾಲಿನ್ಯದ (Air Pollution) ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ದೆಹಲಿಯಲ್ಲಿ (New Delhi) ಕಲುಷಿತ ಗಾಳಿ ಚಾದರದಂತೆ ನಗರವನ್ನು ಹೊದ್ದುಕೊಂಡಿದೆ. ಮೇಲಿನಿಂದ ನೋಡಿದರೆ ಭಯಾನಕ ಎನಿಸುತ್ತದೆ. ದೆಹಲಿಯ ವಾಯುಗುಣಮಟ್ಟವು ವರ್ಷದಿಂದ ವರ್ಷಕ್ಕೆ ಇಳಿಕೆ ಕಾಣುತ್ತಿದೆ. ನಾವೆಲ್ಲರೂ ಒಟ್ಟಾಗಿ ಈ ಬಗ್ಗೆ ಕೆಲಸ ಮಾಡಬೇಕಿದೆ ಎಂದಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ – ಪ್ರಾಥಮಿಕ ಶಾಲೆಗಳಲ್ಲಿ ಆನ್‌ಲೈನ್ ಕ್ಲಾಸ್

    ಈ ಕೆಲಸದಲ್ಲಿ ಪಕ್ಷಗಳ ಭೇದ ಬೇಡ. ಶುದ್ಧಗಾಳಿಗಾಗಿ ನಾವೆಲ್ಲಾ ಪಕ್ಷಾತೀತವಾಗಿ ಕೆಲಸ ಮಾಡಬೇಕಿದೆ. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗುತ್ತಿರುವುದರಿಂದ ಇಲ್ಲಿನ ಜನರಿಗೆ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿದೆ. ಅಲ್ಲದೇ ದೆಹಲಿಯಲ್ಲಿ ಮಕ್ಕಳಿಗೆ, ಹಿರಿಯರಿಗೆ ಹಾಗೂ ಶ್ವಾಸಕೋಶದ ಸಮಸ್ಯೆ ಇರುವವರಿಗೆ ಈ ಗಾಳಿಯನ್ನು ಉಸಿರಾಡಲು ಸಾಧ್ಯವೇ ಇಲ್ಲದಂತಾಗಿದೆ. ಇದಕ್ಕೆ ನಾವೆಲ್ಲರೂ ಏನಾದರೂ ಮಾಡಬೇಕಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: 50 ಶಾಸಕರಿಗೆ 2,500 ಕೋಟಿ ಬೇಕು, ಯಾರ ಬಳಿ ಇದೆ ಅಷ್ಟೊಂದು ಹಣ? – ಬೊಮ್ಮಾಯಿ

    ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕ ಗಾಂಧಿ 12 ದಿನ ವಯನಾಡಿನಲ್ಲಿ ಮತಪ್ರಚಾರ ನಡೆಸಿದ್ದರು. ಮತದಾನ ಮುಗಿದ ಬಳಿಕ ಈಗ ದೆಹಲಿಗೆ ವಾಪಸ್ ಆಗಿದ್ದಾರೆ. ಇದನ್ನೂ ಓದಿ: ನ.24ಕ್ಕೆ ಕೆ-ಸೆಟ್, ರಾಯಚೂರು ವಿವಿ ಪರೀಕ್ಷೆ- ಕೆಇಎ

  • ಪಾಕಿಸ್ತಾನಕ್ಕೆ ವಾಯುಮಾಲಿನ್ಯ ಕಂಟಕ – ಜನರ ಓಡಾಟಕ್ಕೆ ನಿಷೇಧ, ಅಂಗಡಿ-ಮಾರ್ಕೆಟ್‌ ತೆರೆಯಲು ಮಿತಿ

    ಪಾಕಿಸ್ತಾನಕ್ಕೆ ವಾಯುಮಾಲಿನ್ಯ ಕಂಟಕ – ಜನರ ಓಡಾಟಕ್ಕೆ ನಿಷೇಧ, ಅಂಗಡಿ-ಮಾರ್ಕೆಟ್‌ ತೆರೆಯಲು ಮಿತಿ

    – ವಾಯುಮಾಲಿನ್ಯದಿಂದ ಕಾಯಿಲೆ ಪೀಡಿತರ ಸಂಖ್ಯೆ ದಿನೇ ದಿನೆ ಹೆಚ್ಚಳ

    ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲಿ (Pakistan) ದಿನೇ ದಿನೇ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ವಾಯುಮಾಲಿನ್ಯದಿಂದ (Air Pollution) ಜನರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ, ಸರ್ಕಾರ ಜನರ ಓಡಾಟಕ್ಕೆ ಬ್ರೇಕ್‌ ಹಾಕಿದೆ.

    ಪಾಕಿಸ್ತಾನದ ಪಂಜಾಬ್ ಪ್ರಾಂತ್ಯವು ಹೆಚ್ಚಿನ ಹೊರಾಂಗಣ ಚಟುವಟಿಕೆಗಳನ್ನು ನಿಷೇಧಿಸಿದೆ. ತೀವ್ರವಾದ ವಾಯುಮಾಲಿನ್ಯದಿಂದ ಉಂಟಾಗುವ ಕಾಯಿಲೆಗಳನ್ನು ನಿಗ್ರಹಿಸಲು ಸೋಮವಾರದಿಂದ ಕೆಲವು ಪ್ರದೇಶಗಳಲ್ಲಿ ಅಂಗಡಿಗಳು, ಮಾರುಕಟ್ಟೆಗಳು ಮತ್ತು ಮಾಲ್‌ಗಳನ್ನು ಮುಚ್ಚಲು ಆದೇಶಿಸಿದೆ. ಜನರು ಹೊರಗಡೆ ಹೆಚ್ಚು ಓಡಾಡದಂತೆ ಕ್ರಮ ವಹಿಸಲಾಗಿದೆ. ಇದನ್ನೂ ಓದಿ: ಅಮೆರಿಕದಲ್ಲಿ ನೋ ಸೆಕ್ಸ್‌, ನೋ ಮ್ಯಾರೆಜ್‌, ನೋ ಗಿವಿಂಗ್‌ ಬರ್ತ್‌ – ಏನಿದು ‘4ಬಿ ಮೂವ್‌ಮೆಂಟ್‌’?

    ಸ್ವಿಸ್ ಗ್ರೂಪ್ IQAir ನ ಲೈವ್ ರೇಟಿಂಗ್‌ಗಳ ಪ್ರಕಾರ, ವಾಯು ಗುಣಮಟ್ಟದಲ್ಲಿ ವಿಶ್ವದ ಅತ್ಯಂತ ಕಲುಷಿತ ನಗರವಾದ ಲಾಹೋರ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನ.17 ರ ವರೆಗೆ ಶಿಕ್ಷಣ ಸಂಸ್ಥೆಗಳು ಮತ್ತು ಉದ್ಯಾನಗಳು ಮತ್ತು ಪ್ರಾಣಿಸಂಗ್ರಹಾಲಯಗಳಂತಹ ಸಾರ್ವಜನಿಕ ಸ್ಥಳಗಳನ್ನು ಮುಚ್ಚಲಾಗಿದೆ.

    ಲಾಹೋರ್, ಮುಲ್ತಾನ್, ಫೈಸಲಾಬಾದ್ ಮತ್ತು ಗುಜ್ರಾನ್‌ವಾಲಾ ಜಿಲ್ಲೆಗಳಲ್ಲಿ ಉಸಿರಾಟದ ಕಾಯಿಲೆಗಳು, ಕಣ್ಣು ಮತ್ತು ಗಂಟಲಿನ ಕಿರಿಕಿರಿ ಮತ್ತು ಗುಲಾಬಿ ಕಣ್ಣಿನ ಕಾಯಿಲೆಯ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ಇದನ್ನೂ ಓದಿ: ಇಸ್ರೇಲ್‌ ಮೇಲೆ 150 ರಾಕೆಟ್‌ಗಳ ಸುರಿಮಳೆ – ಹಿಜ್ಬುಲ್ಲಾ ಭೀಕರ ದಾಳಿಗೆ ಹಲವೆಡೆ ಹಾನಿ!

    ಹೊಸ ನಿರ್ಬಂಧಗಳು ನ.17 ರವರೆಗೆ ಜಾರಿಯಲ್ಲಿರುತ್ತವೆ. ಬ್ಯಾಕ್ಟೀರಿಯಾ ಅಥವಾ ವೈರಲ್ ಸೋಂಕು, ಹೊಗೆ, ಧೂಳು ಅಥವಾ ರಾಸಾಯನಿಕ ಮಾನ್ಯತೆಯಿಂದಾಗಿ ಕಾಂಜಂಕ್ಟಿವಿಟಿಸ್ / ಗುಲಾಬಿ ಕಣ್ಣಿನ ಕಾಯಿಲೆಯ ಹರಡುವಿಕೆಯು ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತಿದೆ ಎಂದು ಪಂಜಾಬ್ ಸರ್ಕಾರ ಹೇಳಿದೆ.

    ಕ್ರೀಡಾ ಕಾರ್ಯಕ್ರಮಗಳು, ಪ್ರದರ್ಶನಗಳು, ಉತ್ಸವಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಊಟ ಸೇರಿದಂತೆ ಹೊರಾಂಗಣ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಅನಿವಾರ್ಯ ಧಾರ್ಮಿಕ ಕಾರ್ಯಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

  • ಪಟಾಕಿ ಸಿಡಿಸುವುದು ಮೂಲಭೂತ ಹಕ್ಕು ಎನ್ನುವವರು ಕೋರ್ಟ್‌ಗೆ ಬರಲಿ – ಶಾಶ್ವತ ಪಟಾಕಿ ನಿಷೇಧದ ಬಗ್ಗೆ ಪ್ರಸ್ತಾಪಿಸಿದ ಸುಪ್ರೀಂ

    ಪಟಾಕಿ ಸಿಡಿಸುವುದು ಮೂಲಭೂತ ಹಕ್ಕು ಎನ್ನುವವರು ಕೋರ್ಟ್‌ಗೆ ಬರಲಿ – ಶಾಶ್ವತ ಪಟಾಕಿ ನಿಷೇಧದ ಬಗ್ಗೆ ಪ್ರಸ್ತಾಪಿಸಿದ ಸುಪ್ರೀಂ

    – ಯಾವುದೇ ಧರ್ಮ ವಾಯುಮಾಲಿನ್ಯ ಉಂಟುಮಾಡುವ ಚಟುವಟಿಕೆ ಪ್ರೋತ್ಸಾಹಿಸಲ್ಲ ಎಂದ ಕೋರ್ಟ್‌

    ನವದೆಹಲಿ: ಯಾವುದೇ ಧರ್ಮವು ವಾಯುಮಾಲಿನ್ಯವನ್ನು ಉಂಟುಮಾಡುವ ಚಟುವಟಿಕೆಯನ್ನು ಪ್ರೋತ್ಸಾಹಿಸುವುದಿಲ್ಲ. ದೀಪಾವಳಿ ಹೆಸರಿನಲ್ಲಿ ಈ ಪ್ರಮಾಣದಲ್ಲಿ ಪಟಾಕಿಗಳನ್ನು (Fire Crackers) ಸುಟ್ಟರೆ, ಅದು ನಾಗರಿಕರ ಆರೋಗ್ಯದ ಮೂಲಭೂತ ಹಕ್ಕಿನ ಮೇಲೂ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್ (Supreme Court) ಅಸಮಾಧಾನ ವ್ಯಕ್ತಪಡಿಸಿದೆ.

    ದೆಹಲಿಯಲ್ಲಿನ ಮಾಲಿನ್ಯದ ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಅಭಯ್ ಎಸ್ ಓಕಾ ಮತ್ತು ಆಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠ, ಹಬ್ಬದ ಸಮಯದಲ್ಲಿ ಪಟಾಕಿ ನಿಷೇಧವನ್ನು ಜಾರಿಗೊಳಿಸಲು ವಿಫಲವಾಗಿರುವ ದೆಹಲಿ ಸರ್ಕಾರ ಮತ್ತು ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಸೀಮಿತ ತಿಂಗಳಿಗೆ ಮಾತ್ರ ಪಟಾಕಿ ನಿಷೇಧ ಯಾಕೆ? ವರ್ಷವಿಡಿ ಮಾಡಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿತು. ಅಕ್ಟೋಬರ್ 14 ರಂದು ಜಾರಿಗೊಳಿಸಿದ ದೆಹಲಿ ಸರ್ಕಾರದ ಆದೇಶವನ್ನು ನ್ಯಾಯಾಲಯವು ಪರಿಶೀಲಿಸಿತು. ಇದು ಪಟಾಕಿಗಳ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಿತು, ಆದರೆ ಚುನಾವಣೆಗಳು ಮತ್ತು ಮದುವೆಗಳಂತಹ ಕಾರ್ಯಕ್ರಮಗಳಿಗೆ ವಿನಾಯಿತಿಗಳನ್ನು ನೀಡಿದೆ. ನಿಮ್ಮ ಆದೇಶದಲ್ಲಿ ಚುನಾವಣೆ, ಮದುವೆ ಇತ್ಯಾದಿಗಳಿಗೆ ಪಟಾಕಿಗಳನ್ನು ಸುಡಬಹುದು ಎಂದು ಹೇಳಿದೆಯೇ? ನಿಮ್ಮ ಪ್ರಕಾರ ಮಾಲಿನ್ಯಕ್ಕೆ (Air Pollution) ಪಾಲುದಾರರು ಯಾರು? ಎಂದು ಕೋರ್ಟ್ ಕೇಳಿತು. ಇದನ್ನೂ ಓದಿ: Bengaluru| ಬೈಕ್ ಡಿಕ್ಕಿ ಹೊಡೆದು 8ರ ಬಾಲಕ ಸಾವು

    ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ, ಪ್ರಸ್ತುತ ಆದೇಶವು ಹಬ್ಬ ಹರಿದಿನಗಳಲ್ಲಿ ಮತ್ತು ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ಉಲ್ಬಣಗೊಳಿಸುವ ತಿಂಗಳುಗಳಲ್ಲಿ ಮಾತ್ರ ವಾಯುಮಾಲಿನ್ಯದ ನಿಯಂತ್ರಣದ ಮೇಲೆ ಕೇಂದ್ರೀಕರಿಸಿದೆ ಎಂದು ವಿವರಿಸಿದರು. ಪೀಠವು ಇದನ್ನು ಒಪ್ಪಿಕೊಳ್ಳಲಿಲ್ಲ. ಶಾಶ್ವತ ನಿಷೇಧವನ್ನು ಪರಿಗಣಿಸಬೇಕು ಎಂದು ಸೂಚಿಸಿತು. ನಿಷೇಧ ಆದೇಶದ ಬಗ್ಗೆ ಸಂಬಂಧಪಟ್ಟ ಎಲ್ಲಾ ಮಧ್ಯಸ್ಥಗಾರರಿಗೆ ತಕ್ಷಣವೇ ತಿಳಿಸುವಂತೆ ಮತ್ತು ಪಟಾಕಿಗಳ ಮಾರಾಟ ಮತ್ತು ತಯಾರಿಕೆ ನಿಷೇಧವನ್ನು ಖಚಿತಪಡಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ದೆಹಲಿ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿತು. ಇದನ್ನೂ ಓದಿ: ನಿಮ್ಮ ಜೊತೆ ಯೋಗ್ಯನಾಗಿ ಕೆಲಸ ಮಾಡಲು ಇದೊಂದು ಬಾರಿ ಅವಕಾಶ ಮಾಡಿಕೊಡಿ: ನಿಖಿಲ್‌

    ನವೆಂಬರ್ 25ರ ಮೊದಲು ನಗರದಲ್ಲಿ ಪಟಾಕಿಗಳ ಮೇಲೆ ‘ಶಾಶ್ವತ ನಿಷೇಧ’ವನ್ನು ಪರಿಗಣಿಸುವಂತೆ ದೆಹಲಿ ಸರ್ಕಾರಕ್ಕೆ ಸೂಚಿಸಿದೆ. ಪಟಾಕಿ ನಿಷೇಧ ನಿರ್ದಿಷ್ಟ ಅವಧಿಗೆ ಸೀಮಿತವಾಗಿರದೆ ಒಂದು ವರ್ಷದ ಅವಧಿಯ ನಿಷೇಧದ ಅಗತ್ಯವಿದೆ ಎಂದು ನ್ಯಾಯಾಲಯ ಒತ್ತಿಹೇಳಿತು. ಯಾರಾದರೂ ಪಟಾಕಿ ಸಿಡಿಸುವುದು ಮೂಲಭೂತ ಹಕ್ಕು ಎಂದು ಪ್ರತಿಪಾದಿಸಲು ಬಯಸಿದರೆ, ಅವರು ನ್ಯಾಯಾಲಯಕ್ಕೆ ಬರಲಿ. ದೀಪಾವಳಿ ಮಾತ್ರವಲ್ಲದೆ ವರ್ಷಪೂರ್ತಿ ಪಟಾಕಿಗಳನ್ನು ನಿಷೇಧಿಸಬೇಕು ಎಂದು ನ್ಯಾಯಾಲಯ ಟೀಕಿಸಿದೆ. ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸಿದ ನಂತರ ದೆಹಲಿಯು ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ ಚುನಾವಣೆಗೆ 5,000 ಕೋಟಿ ಅಕ್ರಮವಾಗಿ ಕಳಿಸಿದ್ದಾರೆ: ಮೋದಿ ಬಳಿಕ ಹೆಚ್‌ಡಿಡಿ ಬಾಂಬ್‌

  • ದೆಹಲಿಯಲ್ಲಿ ಕಲುಷಿತ ಗಾಳಿ – ಕುಟುಂಬದಲ್ಲೊಬ್ಬರಿಗೆ ಮಾಲಿನ್ಯ ಸಂಬಂಧಿತ ಕಾಯಿಲೆ

    ದೆಹಲಿಯಲ್ಲಿ ಕಲುಷಿತ ಗಾಳಿ – ಕುಟುಂಬದಲ್ಲೊಬ್ಬರಿಗೆ ಮಾಲಿನ್ಯ ಸಂಬಂಧಿತ ಕಾಯಿಲೆ

    ನವದೆಹಲಿ: ದೀಪಾವಳಿ (Deepavali) ಅವಧಿಯಲ್ಲಿ ದೆಹಲಿಯ (New Delhi) ಗಾಳಿಯ ಗುಣಮಟ್ಟ (Air Quality) ಹದಗೆಡುತ್ತಿದ್ದು, ಈ ನಡುವೆ ರಾಜಧಾನಿಯ 69% ಕುಟುಂಬಗಳ ಒಂದು ಅಥವಾ ಒಂದಕ್ಕಿಂತ ಹೆಚ್ಚಿನ ಸದಸ್ಯರು ಗಂಟಲು ನೋವು, ಕೆಮ್ಮು ಸೇರಿದಂತೆ ಮಾಲಿನ್ಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಇತ್ತೀಚಿನ ಸಮೀಕ್ಷೆಯೊಂದು ಬಹಿರಂಗಪಡಿಸಿದೆ.

    ಡಿಜಿಟಲ್ ಪ್ಲಾಟ್‌ಫಾರ್ಮ್ ಆಗಿರುವ ಲೋಕಲ್ ಸರ್ಕಲ್ಸ್ ನಡೆಸಿದ ಸಮೀಕ್ಷೆಯು ರಾಜಧಾನಿ ದೆಹಲಿಯಾದ್ಯಂತ 21,000ಕ್ಕೂ ಹೆಚ್ಚು ನಿವಾಸಿಗಳಿಂದ ಪ್ರತಿಕ್ರಿಯೆಗಳನ್ನು ಸಂಗ್ರಹಿಸಿದೆ. ಇದರ ಆಧಾರದಲ್ಲಿ ದೆಹಲಿಯ ಜನಸಂಖ್ಯೆಯ ಮೇಲೆ ವಾಯು ಮಾಲಿನ್ಯದ ವ್ಯಾಪಕ ಪರಿಣಾಮಗಳನ್ನು ವರದಿಯು ಬಹಿರಂಗಪಡಿಸಿದೆ. ಹೆಚ್ಚುತ್ತಿರುವ ವಾಯುಮಾಲಿನ್ಯದಿಂದಾಗಿ 62% ಕುಟುಂಬಗಳ ಒಬ್ಬ ಅಥವಾ ಅದಕ್ಕಿಂತ ಹೆಚ್ಚಿನ ಸದಸ್ಯರು ಕಣ್ಣು ಉರಿಯನ್ನು ಅನುಭವಿಸುತ್ತಿದ್ದಾರೆ ಎಂದು ಅಧ್ಯಯನವು ಹೇಳಿದೆ. ಜೊತೆಗೆ 46% ಜನರು ಮೂಗು ಸೋರುವಿಕೆ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ಅದು ಬಹಿರಂಗಪಡಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ ನಿಮ್ಮ ನಾಲಗೆ ಹದ್ದುಬಸ್ತಿನಲ್ಲಿಡಿ: ಜೋಶಿ ಕಿಡಿ

    ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ 31%ನಷ್ಟು ಜನರು ಉಸಿರಾಟದ ತೊಂದರೆ ಅಥವಾ ಅಸ್ತಮಾ ಕಾಯಿಲೆಯಿಂದ ಬಳಲುತ್ತಿರುವ ಬಗ್ಗೆ ವರದಿ ಮಾಡಿದ್ದಾರೆ. ಜೊತೆಗೆ 31% ದಷ್ಟು ಜನರು ತಲೆನೋವು ಅನುಭವಿಸುತ್ತಿದ್ದಾರೆಂದು ತಿಳಿಸಿದ್ದಾರೆ. ಸುಮಾರು 23% ಜನರು ಆತಂಕ ಅಥವಾ ಏಕಾಗ್ರತೆಯ ತೊಂದರೆಯನ್ನು ವ್ಯಕ್ತಪಡಿಸಿದ್ದು, 15% ದಷ್ಟು ಜನರು ನಿದ್ರಾಹೀನತೆ ಬಗ್ಗೆ ಉಲ್ಲೇಖಿಸಿದ್ದಾರೆ. 31%ರಷ್ಟು ಜನರು ತಾವು ಅಥವಾ ಅವರ ಕುಟುಂಬ ಸದಸ್ಯರು ಮಾಲಿನ್ಯಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿಲ್ಲ ಎಂದು ಸೂಚಿಸಿದ್ದಾರೆ. ಹಲವರಿಗೆ ಈಗಾಗಲೇ ಕೆಮ್ಮು ಮತ್ತು ಶೀತವಿದೆ. ಕೆಲವರು ಈಗಾಗಲೇ ಆಸ್ತಮಾ, ಬ್ರಾಂಕೈಟಿಸ್, ಮತ್ತು ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆಯಂತಹ ಉಸಿರಾಟದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಇದನ್ನೂ ಓದಿ: ಗಾಂಜಾ ದಾಸ್ತಾನು ಇಟ್ಟುಕೊಂಡಿದ್ದ ಮನೆ ಮೇಲೆ ಪೊಲೀಸರ ದಾಳಿ – ಮೂವರ ಬಂಧನ

  • ಭಾರತದಲ್ಲಿ ವಾಯು ಮಾಲಿನ್ಯದಿಂದ ವರ್ಷಕ್ಕೆ 33,000 ಸಾವು – ಬೆಂಗ್ಳೂರಿನ ಸ್ಥಿತಿ ಏನು? 

    ಭಾರತದಲ್ಲಿ ವಾಯು ಮಾಲಿನ್ಯದಿಂದ ವರ್ಷಕ್ಕೆ 33,000 ಸಾವು – ಬೆಂಗ್ಳೂರಿನ ಸ್ಥಿತಿ ಏನು? 

    ರಾಜ್ಯ ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ಭಾರತದ 10 ಪ್ರಮುಖ ಮಹಾನಗರಗಳಲ್ಲಿ ವರ್ಷಕ್ಕೆ ಸುಮಾರು 33,000 ಮಂದಿ ವಾಯು ಮಾಲಿನ್ಯದ (Air pollution) ಕಾರಣಕ್ಕೆ ಸಾವಿಗೀಡಾಗುತ್ತಿದ್ದಾರೆಂದು ಲ್ಯಾನ್ಸೆಟ್ ಪ್ಲಾನೆಟರಿ ಹೆಲ್ತ್ ಜರ್ನಲ್ ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ. ಇದಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನ ಕೊಡುಗೆ ಸಹ ಇರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.  

    ವಿಶ್ವ ಆರೋಗ್ಯ ಸಂಸ್ಥೆ (World Health Organisation- WHO) ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ಪ್ರತಿ ಕ್ಯುಬಿಕ್ ಮೀಟರ್‌ನಲ್ಲಿ 15 ಮೈಕ್ರೋಗ್ರಾಮ್ ಗಿಂತಲೂ ಉತ್ತಮವಾಗಿದೆ. ಆದರೆ ಭಾರತದ ನಗರಗಳಲ್ಲಿ ವಿಪರೀತ ವಾಯುಮಾಲಿನ್ಯ ಆಗುತ್ತಿದ್ದು ಇಲ್ಲಿನ ಜನರನ್ನು ವಾಯುಮಾಲಿನ್ಯದ ಅಪಾಯದಿಂದ ಪಾರು ಮಾಡಲು ಭಾರತ ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯನ್ನು ಪಾಲಿಸಲೇ ಬೇಕಾದ ಅನಿವಾರ್ಯತೆ ಇದೆ ಎಂದು ವರದಿ ತಿಳಿಸಿದೆ.

    ಯಾವೆಲ್ಲಾ ನಗರಗಳಲ್ಲಿ ಅಧ್ಯಯನ ನಡೆಸಲಾಗಿದೆ?

    ಬೆಂಗಳೂರು, ಅಹಮದಾಬಾದ್, ಚೆನ್ನೈ, ದೆಹಲಿ, ಹೈದರಾಬಾದ್, ಕೋಲ್ಕತಾ, ಮುಂಬೈ ಪುಣೆ, ಶಿಮ್ಲಾ ಮತ್ತು ವಾರಾಣಸಿ ಮಹಾನಗರಗಳಲ್ಲಿ ಈ ಅಧ್ಯಯನ ನಡೆಸಲಾಗಿದೆ. ಇಷ್ಟೂ ನಗರಗಳಲ್ಲಿ ಪ್ರತಿವರ್ಷ 33 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಪ್ರತಿವರ್ಷವೂ ವಿಶ್ವ ಆರೋಗ್ಯ ಸಂಸ್ಥೆಯು ನಿಗದಿಪಡಿಸಿದ ವಾಯುಮಾಲಿನ್ಯ ಗುಣಮಟ್ಟದ ಮಾರ್ಗಸೂಚಿಗಿಂತಲೂ ಈ ಮಹಾನಗರಗಳು ಕೆಳಮಟ್ಟದಲ್ಲಿಯೇ ಮುಂದುವರಿದಿವೆ.

    ಭಾರತದ 10 ನಗರಗಳು ವಾಯುಮಾಲಿನ್ಯದಿಂದ ಭಾರೀ ಸಮಸ್ಯೆ ಎದುರಿಸುತ್ತಿವೆ. ರಾಷ್ಟ್ರರಾಜಧಾನಿ ದಿಲ್ಲಿಯಲ್ಲೇ ವಾಯುಮಾಲಿನ್ಯಕ್ಕೆ ಅತಿ ಹೆಚ್ಚು ಸಾವುನೋವುಗಳಾಗುತ್ತಿವೆ. ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಿಂತ ಇಲ್ಲಿನ ವಾಯುವಿನ ಗುಣಮಟ್ಟ ಅತ್ಯಂತ ಕೆಳಸ್ತರದಲ್ಲಿದ್ದು ವರ್ಷಕ್ಕೆ 11 ಸಾವಿರ ಮಂದಿ ಸಾವಿಗೀಡಾಗುತ್ತಿದ್ದಾರೆ. 2ನೇ ಸ್ಥಾನದಲ್ಲಿರುವುದು ದೇಶದ ವಾಣಿಜ್ಯ ನಗರಿಯಾಗಿರುವ ಮುಂಬೈನಲ್ಲಿ, ಇಲ್ಲಿ ವರ್ಷಕ್ಕೆ ಸುಮಾರು 5,100 ಮಂದಿ ವಾಯುಮಾಲಿನ್ಯ ಸಂಬಂಧಿ ಕಾಯಿಲೆಗಳಿಂದಾಗಿ ಕೊನೆಯುಸಿರೆಳೆಯುತ್ತಿದ್ದಾರೆ. ಕೋಲ್ಕತಾದಲ್ಲಿ 4,700 ಮಂದಿ, ಚೆನ್ನೈನಲ್ಲಿ 2900 ಮಂದಿ ಸಾವಿಗೀಡಾಗುತ್ತಿದ್ದಾರೆ. 5ನೇ ಸ್ಥಾನದಲ್ಲಿ ಉದ್ಯಾನ ನಗರಿ ಬೆಂಗಳೂರು ಇದೆ. ಇಲ್ಲಿ ವರ್ಷಕ್ಕೆ 2100 ಮಂದಿ ಸಾವಿಗೀಡಾಗುತ್ತಿದ್ದಾರೆ ಎಂದು ಲ್ಯಾನ್ಸೆಟ್ ಪ್ಲಾನೆಟರಿ ಹೆಲ್ತ್ ಜರ್ನಲ್ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. 

    ಬೆಂಗಳೂರಲ್ಲಿ ಕಳೆದ 3 ತಿಂಗಳಿಂದ ನಿರಂತರ ಮಳೆ, ದೊಡ್ಡ ಕಾಮಗಾರಿ ನಡೆಯದೇ ಇರುವುದು, ಮೆಟ್ರೋ ಪ್ರಯಾಣಕ್ಕೆ ಆದ್ಯತೆ ನೀಡುತ್ತಿರುವುದರಿಂದ ವಾಯುಮಾಲಿನ್ಯ ಸಾಕಷ್ಟು ಕಡಿಮೆಯಾಗಿದೆ.

    ಬೆಂಗ್ಳೂರಲ್ಲಿ 50% ವಾಯುಮಾಲಿನ್ಯಕ್ಕೆ ವಾಹನಗಳೇ ಕಾರಣ. ಕಳೆದ 15 ವರ್ಷಗಳಿಂದೀಚೆಗೆ ವಾಹನಗಳ ಸಂಖ್ಯೆ ಹೆಚ್ಚಳದಿಂದ ಸಂಚಾರ ದಟ್ಟಣೆಯೂ ಅಧಿಕವಾಗಿದೆ. ಹಳೆಯ ವಾಹನಗಳಿಂದ ಹೆಚ್ಚು ತೊಂದರೆ ಉಂಟಾಗುತ್ತಿದೆ. ನಗರದಲ್ಲಿ ವಾಯುಮಾಲಿನ್ಯ ಕಡಿಮೆ ಮಾಡುವಲ್ಲಿ ಮೆಟ್ರೋ ದೊಡ್ಡ ಪಾತ್ರ ವಹಿಸಿದೆ. ಸದ್ಯ ನಮ್ಮ ಮೆಟ್ರೋ 74 ಕಿ.ಮೀ. ದೂರ ಸಂಚಾರ ನಡೆಸುತ್ತಿದ್ದು, ಪ್ರತಿ ದಿನ ಸರಾಸರಿ 8 ಲಕ್ಷ ಜನರು ಪ್ರಯಾಣ ಮಾಡುತ್ತಾರೆ. ಮೆಟ್ರೋ ಮಾರ್ಗದಲ್ಲಿ ವಾಹನ ಬಳಕೆ ಕೂಡ ಸಾಕಷ್ಟು ತಗ್ಗಿದ್ದು, ಮಾಲಿನ್ಯ ಪ್ರಮಾಣ ಕಡಿಮೆ ಇದೆ.

    ಗಾಳಿಯ ಗುಣಮಟ್ಟ ಎಷ್ಟಿದ್ದರೆ ಉತ್ತಮ?

    ಗಾಳಿಯ ಗುಣಮಟ್ಟ ಸೂಚ್ಯಂಕವು (ಎಕ್ಯುಐ) 0-50 ಇದ್ದರೆ ಉತ್ತಮ. 51-100 ಇದ್ದರೆ ಸಮಾಧಾನಕರ, 100-200 ಮಧ್ಯಮ, 201-300 ಕಳಪೆ, 301-400 ಇದ್ದರೆ ತುಂಬಾ ಕಳಪೆ ಹಾಗೂ ಎಕ್ಯುಐ ಪ್ರಮಾಣ 401-500 ಇದ್ದರೆ ತೀವ್ರ ಕಳಪೆ ಎಂದು ಪರಿಗಣಿಸಲಾಗುತ್ತದೆ.

    ವಾಯುಮಾಲಿನ್ಯದಿಂದ ಉಂಟಾಗುವ ಸಮಸ್ಯೆಗಳು

    ವಾಯುಮಾಲಿನ್ಯದಿಂದ ಆಸ್ತಮಾ, ಕ್ಯಾನ್ಸರ್, ಪಾರ್ಶ್ವವಾಯು ಮತ್ತು ಶ್ವಾಸಕೋಶದ ಕಾಯಿಲೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡಬಹುದು. ಇದು ಮಕ್ಕಳಲ್ಲಿ ಕಲಿಕೆಯ ಬೆಳವಣಿಗೆಯನ್ನು ತಡೆಯುತ್ತದೆ, ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಮಧುಮೇಹದಂತಹ ಅಸ್ತಿತ್ವದಲ್ಲಿರುವ ಆರೋಗ್ಯ ಸಮಸ್ಯೆಯನ್ನು ಇನ್ನಷ್ಟು ಹದಗೆಡಿಸುತ್ತದೆ.

    ಬೆಂಗಳೂರಿನ ಗಾಳಿ ಗುಣಮಟ್ಟ ದೆಹಲಿಯಡೆಗೆ? 

    ದೆಹಲಿಯಲ್ಲಿ ಮಾಲಿನ್ಯದ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಮುಂದಿನ ಆರು ದಿನಗಳಲ್ಲಿ ಈ ಪ್ರಮಾಣ ಇನ್ನೂ ಏರುವ ನಿರೀಕ್ಷೆ ಇದೆ. ಇದರಿಂದಾಗಿ ಮಕ್ಕಳು ಮತ್ತು ವೃದ್ಧರು ತೀವ್ರ ಸಮಸ್ಯೆ ಎದುರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ದೆಹಲಿಯ ಆನಂದ್ ವಿಹಾರ್ ಸುತ್ತಮುತ್ತಲಿನ ವಾಯು ಗುಣಮಟ್ಟ ಸೂಚ್ಯಂಕವು (Air Quality Index) 405 ರಷ್ಟಿದ್ದು, ಅಪಾಯದ ಮಟ್ಟ ದಾಟಿದೆ. ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (Central Pollution Control Board) ಇದನ್ನು ಗಂಭೀರ ವರ್ಗದಲ್ಲಿ ಇರಿಸಿದೆ. ಇದೇ ಸಮಯದಲ್ಲಿ, CPCB ಪ್ರಕಾರ, ಅಕ್ಷರಧಾಮ ದೇವಾಲಯದ ಸುತ್ತಮುತ್ತ AQI 361 ನಲ್ಲಿ ದಾಖಲಾಗಿದೆ. ಬವಾನಾದಲ್ಲಿ AQI 392, ರೋಹಿಣಿ 380, ITO 357, ದ್ವಾರಕಾ ಸೆಕ್ಟರ್-8 335 ಹಾಗೂ ಮುಂಡ್ಕಾದಲ್ಲಿ AQI 356 ದಾಖಲಾಗಿದೆ.

    ಇದೇ ಪರಿಸ್ಥಿತಿ ಮುಂದಿನ 10 ವರ್ಷಗಳಲ್ಲಿ ಬೆಂಗಳೂರಿಗೂ ಸಹ ಎದುರಾಗಬಹುದು ಎಂಬ ಆತಂಕ ಇದೆ. ಕಳೆದ 15 ವರ್ಷಗಳಿಂದ ಏರಿಕೆಯಾದ ವಾಹನಗಳ ಸಂಖ್ಯೆ ಗಮನಿಸಿದರೆ, ಮುಂದಿನ 5-10 ವರ್ಷಗಳಲ್ಲಿ ಇನ್ನೂ ಹೆಚ್ಚಿನ ವಾಹನಗಳು ಬೆಂಗಳೂರಿನ ರಸ್ತೆಗಳಿಗೆ ಇಳಿಯಲಿವೆ. ಈಗಾಗಲೇ 50% ವಾಯುಮಾಲಿನ್ಯಕ್ಕೆ ವಾಹನಗಳೇ ಕಾರಣ ಎಂಬುದು ಗೊತ್ತಾಗಿದೆ. ಇನ್ನೂ ಮುಂದಿನ ದಿನಗಳಲ್ಲಿ ಇದು ಯಾವ ಮಟ್ಟ ತಲುಪುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ.

  • ದೀಪಾವಳಿಗೂ ಮುನ್ನವೇ ಗ್ಯಾಸ್ ಚೇಂಬರಾಗುವ ಭೀತಿಯಲ್ಲಿ ದೆಹಲಿ

    ದೀಪಾವಳಿಗೂ ಮುನ್ನವೇ ಗ್ಯಾಸ್ ಚೇಂಬರಾಗುವ ಭೀತಿಯಲ್ಲಿ ದೆಹಲಿ

    ನವದೆಹಲಿ: ದೀಪಾವಳಿ (Deepavali) ಹಬ್ಬಕ್ಕೂ ಮುನ್ನವೇ ರಾಷ್ಟ್ರ ರಾಜಧಾನಿ ದೆಹಲಿ (New Delhi) ಗ್ಯಾಸ್ ಚೇಂಬರ್ ಆಗುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ. ದೆಹಲಿಯಲ್ಲಿ ಮಾಲಿನ್ಯದ ಪ್ರಮಾಣ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಮುಂದಿನ ಆರು ದಿನಗಳಲ್ಲಿ ಈ ಪ್ರಮಾಣ ಇನ್ನೂ ಏರುವ ನಿರೀಕ್ಷೆ ಇದೆ. ಇದರಿಂದಾಗಿ ಮಕ್ಕಳು ಮತ್ತು ವೃದ್ಧರು ತೀವ್ರ ಸಮಸ್ಯೆ ಎದುರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

    ದೆಹಲಿಯ ಆನಂದ್ ವಿಹಾರ್ ಸುತ್ತಮುತ್ತಲಿನ ವಾಯು ಗುಣಮಟ್ಟ ಸೂಚ್ಯಂಕವು 405 ರಷ್ಟಿದ್ದು, ಅಪಾಯದ ಮಟ್ಟ ದಾಟಿದೆ. ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (Central Pollution Control Board) ಇದನ್ನು ಗಂಭೀರ ವರ್ಗದಲ್ಲಿ ಇರಿಸಿದೆ. ಇದೇ ಸಮಯದಲ್ಲಿ, CPCB ಪ್ರಕಾರ, ಅಕ್ಷರಧಾಮ ದೇವಾಲಯದ ಸುತ್ತಮುತ್ತ AQI 361 ನಲ್ಲಿ ದಾಖಲಾಗಿದೆ. ಬವಾನಾದಲ್ಲಿ AQI 392, ರೋಹಿಣಿ 380, ITO 357, ದ್ವಾರಕಾ ಸೆಕ್ಟರ್-8 335 ಹಾಗೂ ಮುಂಡ್ಕಾದಲ್ಲಿ AQI 356 ದಾಖಲಾಗಿದೆ. ಇದನ್ನೂ ಓದಿ: MUDA SCAM| ಇಡಿ ದಾಳಿ ಬೆನ್ನಲ್ಲೇ ವಾಕಿಂಗ್‌ ಮಾಡುತ್ತಿದ್ದ ಮುಡಾ ಮಾಜಿ ಆಯುಕ್ತ ಪರಾರಿ

    ಭಾನುವಾರದಿಂದ ಮುಂದಿನ ಆರು ದಿನಗಳವರೆಗೆ ರಾಜಧಾನಿಯ ಜನರು ಕೆಟ್ಟ ಗಾಳಿಯನ್ನು ಉಸಿರಾಡಬೇಕಾಗಬಹುದು, ವಾಯು ಗುಣಮಟ್ಟ ಸೂಚ್ಯಂಕ (AQI) 300ಕ್ಕಿಂತ ಹೆಚ್ಚಿರಬಹುದು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮುನ್ಸೂಚನೆ ನೀಡಿದೆ. ಇಂತಹ ಪರಿಸ್ಥಿತಿಯಲ್ಲಿ ವಾಯು ಮಾಲಿನ್ಯವು ಜನರನ್ನು ಮತ್ತಷ್ಟು ತೊಂದರೆಗೆ ಸಿಲುಕಿಸಲಿದೆ. ಇದನ್ನೂ ಓದಿ: ಸಂಸದ ಪಪ್ಪು ಯಾದವ್‌ಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಕೊಲೆ ಬೆದರಿಕೆ

    ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ನಿಯಂತ್ರಿಸಲು ದೆಹಲಿ ಸರ್ಕಾರದ ಪರಿಸರ ಸಚಿವ ಗೋಪಾಲ್ ರೈ ಅವರು ಎನ್‌ಸಿಆರ್‌ನಲ್ಲಿ ಪಟಾಕಿಯನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ನೆರೆ ರಾಜ್ಯಗಳಲ್ಲಿ ಹುಲ್ಲು ಸುಡುವ ಪ್ರಕರಣಗಳನ್ನು ಕಡಿಮೆ ಮಾಡಲು ವಿನಂತಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರದಿಂದ ಲ್ಯಾಂಡ್‌ ಜಿಹಾದ್‌, ಜಮೀರ್ ಒಬ್ಬ ಆಧುನಿಕ ಟಿಪ್ಪು ಸುಲ್ತಾನ್: ಆರ್.ಅಶೋಕ್

    ದೆಹಲಿಯೊಳಗೆ ಪಟಾಕಿ ಉತ್ಪಾದನೆ, ಸಂಗ್ರಹಣೆ ಮತ್ತು ಯಾವುದೇ ರೀತಿಯ ಮಾರಾಟ ಅಥವಾ ಖರೀದಿಗೆ ಸಂಪೂರ್ಣ ನಿಷೇಧವಿದೆ ಎಂದು ಗೋಪಾಲ್ ರೈ ಹೇಳಿದ್ದಾರೆ. ಈ ನಿಷೇಧವು ಆನ್‌ಲೈನ್‌ನಲ್ಲಿ ಪಟಾಕಿ ವಿತರಣೆಯ ಮೇಲೂ ಅನ್ವಯಿಸುತ್ತದೆ. ದೆಹಲಿಯಂತೆಯೇ ಎನ್‌ಸಿಆರ್‌ನಲ್ಲಿಯೂ ಪಟಾಕಿಯನ್ನು ಸಂಪೂರ್ಣ ನಿಷೇಧಿಸಬೇಕು. ಇದರಿಂದ ಉಂಟಾಗುವ ಮಾಲಿನ್ಯವನ್ನು ತಡೆಯಬಹುದು. ಕೃಷಿ ತಾಜ್ಯ ಸುಡುವ ಘಟನೆಗಳು ಕಡಿಮೆಯಾಗಿದ್ದರೂ ದೀಪಾವಳಿ ನಂತರದ ಸಮಯ ನಿರ್ಣಾಯಕವಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ದಾವಣಗೆರೆ | ಎಸ್​ಬಿಐಗೆ ಕನ್ನ – ನಗದು, ಚಿನ್ನಾಭರಣದ ಜೊತೆಗೆ ಸಿಸಿಟಿವಿ ಡಿವಿಆರ್‌ ಹೊತ್ತೊಯ್ದ ಕಳ್ಳರು!