Tag: Air sirens

  • ʻಆಪರೇಷನ್ ಅಭ್ಯಾಸ್ʼ – KRS ನಲ್ಲಿ ಮೇ 11 ರಂದು ಮಾಕ್ ಡ್ರಿಲ್

    ʻಆಪರೇಷನ್ ಅಭ್ಯಾಸ್ʼ – KRS ನಲ್ಲಿ ಮೇ 11 ರಂದು ಮಾಕ್ ಡ್ರಿಲ್

    ಮಂಡ್ಯ: ತುರ್ತು ಸಂದರ್ಭಗಳಲ್ಲಿ ಅಣೆಕಟ್ಟು ರಕ್ಷಣೆ ಮಾಡುವ ಬಗ್ಗೆ ಸಾರ್ವಜನಿಕರು, ಪ್ರವಾಸಿಗರಿಗೆ ಜಾಗೃತಿ ಮೂಡಿಸಲು ಮೇ 11ರಂದು‌ ಕೆಆರ್‌ಎಸ್ ಬೃಂದಾವನ (KRS Brindavan) ಉದ್ಯಾನವನದಲ್ಲಿ ʻಆಪರೇಷನ್ ಅಭ್ಯಾಸ್ʼ (Operation Abhyas) ಅಡಿಯಲ್ಲಿ ಅಣಕು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

    ಅಂದು ಅಂಜೆ ಸಂಜೆ 4 ಗಂಟೆಯಿಂದ 7 ಗಂಟೆ ವರೆಗೆ ಅಣಕು ಪ್ರದರ್ಶನ ಹಮ್ಮಿಕೊಳ್ಳಲಾಗಿದೆ‌. ಇದು ಜಾಗೃತಿ ಉದ್ದೇಶದಿಂದ ಮಾಡಲಾಗುತ್ತಿದ್ದು, ಸಾರ್ವಜನಿಕರು, ಪ್ರವಾಸಿಗರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದ್ದಾರೆ. ಇಂದು ಮಂಡ್ಯ (Mandya) ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದನ್ನೂ ಓದಿ: ದೇಶಕ್ಕಾಗಿ ನಾನು ಪ್ರಾಣ ಕೊಡಲು ಸಿದ್ಧ: ಜಮೀರ್ ಅಹ್ಮದ್

    ಬೆಂಕಿ ಅನಾಹುತಗಳು (Fire Accident), ತುರ್ತು‌ ಸಂದರ್ಭದಲ್ಲಿ ಜನರು ಗಾಬರಿ ಅಥವಾ ಆತಂಕಕ್ಕೆ ಒಳಗಾಗದಂತೆ ಆತ್ಮ ವಿಶ್ವಾಸ ತುಂಬಿ, ಅರಿವು ಮೂಡಿಸುವ ಉದ್ದೇಶದಿಂದ ಅಣುಕು ಪ್ರದರ್ಶನ (Mock Drill) ಆಯೋಜಿಸಲಾಗುತ್ತಿದೆ. ಅಲ್ಲದೇ ತುರ್ತು ಕಾರ್ಯಾಚರಣೆ ವೇಳೆ ನಾಗರಿಕರ ರಕ್ಷಣೆ, ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಿಕೆ, ಗಾಯಗೊಂಡವರಿಗೆ ಆಸ್ಪತ್ರೆಗೆ ಸ್ಥಳಾಂತರಿಸುವ ಕುರಿತು ಹಾಗೂ ಬ್ಲಾಕ್ ಔಟ್ ಚಟುವಟಿಕೆಗಳ ಬಗ್ಗೆ ಅಣುಕು ಪ್ರದರ್ಶನ ಮಾಡಲಾಗುತ್ತದೆ. ಜನರು ಜನತೆ ಯಾವುದೇ ರೀತಿಯ ಗಾಬರಿ, ಆತಂಕಕ್ಕೆ ಒಳಗಾಗದೇ ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್ ಉದ್ವಿಗ್ನ ಸ್ಥಿತಿ; ದೆಹಲಿ ಏರ್‌ಪೋರ್ಟ್‌ನಲ್ಲಿ 138 ವಿಮಾನ ಹಾರಾಟ ರದ್ದು

    ಇದೇ ವೇಳೆ ಅಣುಕು‌ ಕಾರ್ಯಾಚರಣೆಗೆ ವಾರ್ನಿಂಗ್ ಟೀಂ, ಕಂಟ್ರೋಲ್‌ ರೂಂ, ಇವ್ಯಾಕುಯೇಷನ್ ಟೀಂ (ಸ್ಥಳಾಂತರಿಸುವ ರಕ್ಷಣಾ ತಂಡ), ಅಗ್ನಿ ಶಾಮಕ ದಳ, ಎನ್‌ಸಿಸಿ ತಂಡ, ಹೋಂ ಗಾರ್ಡ್ಸ್‌, ಪೊಲೀಸ್ ಇಲಾಖೆ, ಪ್ರಥಮ ಚಿಕಿತ್ಸೆ ತಂಡ, ವೈದ್ಯಕೀಯ ತಂಡ, ಸಾರಿಗೆ ತಂಡ, ಸಂವಹನ ತಂಡಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಿದರು. ಇದನ್ನೂ ಓದಿ: ಗಡಿಯಲ್ಲಿ ಬುಲ್ಡೋಜರ್ ಘರ್ಜನೆ – 28 ಮದರಸಾ, 9 ಮಸೀದಿ, 6 ದೇವಾಲಯ, 1 ಈದ್ಗಾ ನೆಲಸಮ

  • ಪಾಕ್‌ನಿಂದ ಸಂಭಾವ್ಯ ದಾಳಿ ಮುನ್ಸೂಚನೆ – ಚಂಢೀಗಡದಲ್ಲಿ ಸೈರನ್ ಮೊಳಗಿಸಿ ಎಚ್ಚರಿಕೆ

    ಪಾಕ್‌ನಿಂದ ಸಂಭಾವ್ಯ ದಾಳಿ ಮುನ್ಸೂಚನೆ – ಚಂಢೀಗಡದಲ್ಲಿ ಸೈರನ್ ಮೊಳಗಿಸಿ ಎಚ್ಚರಿಕೆ

    ಚಂಡೀಗಢ: ಪಾಕಿಸ್ತಾನ(Pakistan) ಸೇನೆ ದಾಳಿ ಮಾಡುವ ಮುನ್ಸೂಚನೆ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ವಾಯು ಸೇನೆಯ ಸೂಚನೆಯಂತೆ ಚಂಢೀಗಡದಲ್ಲಿ(Chandigarh) ಸೈರನ್ ಮೊಳಗಿಸಲಾಗಿದೆ. ಜನರು ರಸ್ತೆಗಳಲ್ಲಿ ಓಡಾಡದಂತೆ, ಬಾಲ್ಕನಿಗಳಲ್ಲೂ ಕಾಣಿಸಿಕೊಳ್ಳದಂತೆ ಸೂಚನೆ ನೀಡಲಾಗಿದೆ.

    ಗುರುವಾರ ರಾತ್ರಿ ಪಂಜಾಬ್, ಚಂಡೀಗಢದ ಹಲವು ಪ್ರದೇಶಗಳನ್ನು ಗುರಿಯಾಗಿಸಿ ಪಾಕಿಸ್ತಾನ ಡ್ರೋನ್, ಕ್ಷಿಪಣಿ ದಾಳಿ ನಡೆಸಿತ್ತು. ಈ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಭಾರತೀಯ ಸೇನೆ ಪಾಕಿಸ್ತಾನದ ಕ್ಷಿಪಣಿ, ಡ್ರೋನ್‌ಗಳನ್ನು ಹೊಡೆದುರುಳಿಸಿತ್ತು. ಇದನ್ನೂ ಓದಿ: ಭಾರತ ಮಿಸೈಲ್‌ ದಾಳಿಗೆ ಪಾಕ್‌ ತತ್ತರ – ಭಿಕ್ಷೆ ಬೇಡುತ್ತಿದೆ ʻಭಿಕಾರಿಸ್ತಾನʼ

    ಪಂಜಾಬ್ ಮತ್ತು ಹರಿಯಾಣದ ರಾಜಧಾನಿ ಚಂಡೀಗಢದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಗಡಿ ಪ್ರದೇಶದಲ್ಲಿರುವ ಮೊಹಾಲಿಯಲ್ಲೂ ಜನತೆಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಭಾರತ-ಪಾಕ್ ಉದ್ವಿಗ್ನ ಸ್ಥಿತಿ – ಬೆಂಗಳೂರಿನ ಹೆಚ್‌ಎಎಲ್‌ನಲ್ಲಿ ಹೈಅಲರ್ಟ್

    ಉಧಂಪುರ, ಸಾಂಬಾ, ಜಮ್ಮು, ಅಖ್ನೂರ್, ನಾಗ್ರೋಟಾ ಮತ್ತು ಪಠಾಣ್‌ಕೋಟ್ ಪ್ರದೇಶಗಳಲ್ಲಿ ಭಾರತೀಯ ಸೇನೆಯ ವಾಯು ರಕ್ಷಣಾ ಘಟಕಗಳು ನಡೆಸಿದ ದೊಡ್ಡ ಪ್ರಮಾಣದ ಪ್ರತಿ ಡ್ರೋನ್ ಕಾರ್ಯಾಚರಣೆಯಲ್ಲಿ 50 ಕ್ಕೂ ಹೆಚ್ಚು ಡ್ರೋನ್‌ಗಳನ್ನು ಯಶಸ್ವಿಯಾಗಿ ತಟಸ್ಥಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.