Tag: aircraft

  • ಯುಎಸ್ ಮಿಲಿಟರಿ ವಿಮಾನ ಪತನ- ನಾಲ್ವರ ದುರ್ಮರಣ

    ಯುಎಸ್ ಮಿಲಿಟರಿ ವಿಮಾನ ಪತನ- ನಾಲ್ವರ ದುರ್ಮರಣ

    ಕ್ಯಾಲಿಫೋರ್ನಿಯಾ: ಸೇನಾ ವಿಮಾನವೊಂದು ಪತನಗೊಂಡು ನಾಲ್ವರು ಮೃತಪಟ್ಟ ಘಟನೆ ದಕ್ಷಿಣ ಕ್ಯಾಲಿಫೋರ್ನಿಯಾದ ಇಂಪೀರಿಯಲ್ ಕೌಂಟಿಯಲ್ಲಿ ನಡೆದಿದೆ.

    3ಡಿ ಮೆರೈನ್ ಏರ್‌ಕ್ರಾಫ್ಟ್ ವಿಂಗ್‍ಗೆ ಸೇರಿದ ವಿಮಾನವು ಗ್ಲಾಮಿಸ್ ಬಳಿ ಪತನಗೊಂಡಿದೆ. ಈ ವಿಮಾನದಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಅದರಲ್ಲಿ ನಾಲ್ವರು ಮೃತಪಟ್ಟಿದ್ದು, ಮತ್ತೊಬ್ಬರಿಗಾಗಿ ಹುಡುಕಾಡುತ್ತಿದ್ದಾರೆ. ಮೆಕ್ಸಿಕನ್ ಗಡಿಯಿಂದ ಕೇವಲ 35 ಕಿ.ಮೀ ದೂರದಲ್ಲಿರುವ ಗ್ಲಾಮಿಸ್ ಬಳಿ ವಿಮಾನವು ಪತನಕ್ಕಿಡಾಗಿದ್ದು, ಅದರಲ್ಲಿ ಯಾವುದೇ ಹಾನಿಕಾರಕ ವಸ್ತುಗಳಿರಲಿಲ್ಲ ಎಂದು ಮಿಲಿಟರಿ ಸ್ಪಷ್ಟಪಡಿಸಿದೆ.

    ವಿಮಾನ ಪತನಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ವಿಮಾನದಲ್ಲಿ ಪರಮಾಣುವಿನಂತಹ ವಸ್ತಗಳನ್ನು ಹೊಂದಿದ್ದವು ಎಂಬ ಸುದ್ದಿ ಹರಿದಾಡುತ್ತಿತ್ತು. ಇದಕ್ಕೆ ಮೆರೈನ್ ಕಾರ್ಪ್ಸ್ ಏರ್ ಸ್ಟೇಷನ್ ಯುಮಾದ ಕ್ಯಾಪ್ಟನ್ ಬ್ರೆಟ್ ವ್ಯಾನಿಯರ್ ಸ್ಪಷ್ಟನೆ ನೀಡಿದ್ದು, ವದಂತಿಗಳನ್ನು ನಿರಾಕರಿಸಿದ್ದಾರೆ. ಇದರ ಜೊತೆಗೆ ಪತನದ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: 105 ಗಂಟೆಯಲ್ಲಿ 75 ಕಿ.ಮೀ ಹೆದ್ದಾರಿ ನಿರ್ಮಿಸಿ ಗಿನ್ನಿಸ್ ದಾಖಲೆ ಬರೆದ NHAI

    ಕಳೆದ ವಾರ ಕ್ಯಾಲಿಫೋರ್ನಿಯಾದ ಟ್ರೋನಾದಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿ ನೌಕಾಪಡೆಯ ಪೈಲಟ್ ಸಾವನ್ನಪ್ಪಿದರು. ಇದಾದ ಬಳಿಕ ಇಂದು ಈ ಎರಡನೇ ಮಿಲಿಟರಿ ವಿಮಾನ ಪತನಗೊಂಡಿದೆ. ಇದನ್ನೂ ಓದಿ: ಬಿಜೆಪಿ ಶಾಸಕಾಂಗ ಸಭೆಯಲ್ಲಿ ಶಾಸಕರ ಸಮಸ್ಯೆ ಆಲಿಸದ ಸಿಎಂ

  • ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 – ಪ್ರಚಾರದ ಏರ್ ಕ್ರಾಫ್ಟ್‌ಗೆ ನಾರಾಯಣಗೌಡ ಚಾಲನೆ

    ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021 – ಪ್ರಚಾರದ ಏರ್ ಕ್ರಾಫ್ಟ್‌ಗೆ ನಾರಾಯಣಗೌಡ ಚಾಲನೆ

    ಬೆಂಗಳೂರು: ಕ್ರೀಡಾಪಟುಗಳಿಗೆ ಪ್ಯಾರಾ ಸೈಲಿಂಗ್ ಹಾಗೂ ಕ್ರೀಡಾಕೂಟದ ಪ್ರಚಾರದ ಏರ್ ಕ್ರಾಫ್ಟ್‌ಗಳಿಗೆ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು.

    ಸಚಿವರು ಸಸ್ನಾ 172 ವಿಮಾನದಲ್ಲಿ ಹಾರಾಟ ನಡೆಸುವ ಮೂಲಕ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ ಪ್ರಚಾರದ ಏರ್ ಕ್ರಾಫ್ಟ್‌ಗಳಿಗೆ ಚಾಲನೆ ನೀಡಿದರು. ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆಯಲ್ಲಿ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನಲ್ಲಿ ಪಾಲ್ಗೊಂಡಿರುವ ಕ್ರೀಡಾಪಟುಗಳಿಗಾಗಿ ಏರ್ಪಡಿಸಿರುವ ಪ್ಯಾರಾ ಸೈಲಿಂಗ್‍ಗೆ ನಾರಾಯಣಗೌಡ ಚಾಲನೆ ನೀಡಿದ್ದು, ಇಂದಿನಿಂದ ಕ್ರೀಡಾಪಟುಗಳಿಗೆ ಉಚಿತವಾಗಿ ಪ್ಯಾರಾ ಸೈಲಿಂಗ್‍ಗೆ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಓಮಿಕ್ರಾನ್ ಉಪ-ತಳಿಗಳು ಅಪಾಯವನ್ನುಂಟು ಮಾಡುತ್ತವೆ: ಮೋದಿ ಎಚ್ಚರಿಕೆ

     

    ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್‌ನ ಪ್ರಚಾರಕ್ಕೆ ಜಕ್ಕೂರು ಸರ್ಕಾರಿ ವೈಮಾನಿಕ ತರಬೇತಿ ಶಾಲೆ ಕೈಜೋಡಿಸಿದೆ. ಸರ್ಕಾರಿ ವೈಮಾನಿಕ ಶಾಲೆಯ ಎರಡು ವಿಮಾನಗಳ ಮೂಲಕ ಪ್ರಚಾರ ಆರಂಭಿಸಿದೆ. ಈ ಎರಡು ವಿಮಾನ ಪ್ರತಿದಿನ ಸಿಟಿರೌಂಡ್ಸ್ ಮಾಡಲಿವೆ. ಜೈನ್ ವಿವಿ ಸೇರಿದಂತೆ ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪುಷ್ಪಾನಮನ ಸಲ್ಲಿಸಲಾಗುತ್ತದೆ. ಜೊತೆಗೆ ಸಮಾರೋಪ ಸಮಾರಂಭದ ದಿನ ವಿಮಾನದ ಮೂಲಕ ಪುಷ್ಪ ನಮನ ಸಲ್ಲಿಸಲು ಕೂಡ ಚಿಂತನೆ ನಡೆಸಲಾಗಿದೆ. ಇದನ್ನೂ ಓದಿ: ಭಾರತದ ಅಭಿವ್ಯಕ್ತಿ ಸ್ವಾತಂತ್ರ್ಯ ವಿಚಾರವಾಗಿ ಟ್ವಿಟ್ಟರ್‌ ತಲೆಹಾಕಿದ್ರೆ ಕ್ರಮಕೈಗೊಳ್ಳಿ: ಶಶಿ ತರೂರ್‌

  • ತುರ್ತು ಭೂಸ್ಪರ್ಶ ವೇಳೆ ಕಾರ್ಗೋ ವಿಮಾನ ಇಬ್ಬಾಗ

    ತುರ್ತು ಭೂಸ್ಪರ್ಶ ವೇಳೆ ಕಾರ್ಗೋ ವಿಮಾನ ಇಬ್ಬಾಗ

    ವಾಷಿಂಗ್ಟನ್: ಗುರುವಾರ ಕೋಸ್ಟ್ರಿಕಾದಲ್ಲಿ ತುರ್ತು ಭೂಸ್ಪರ್ಶದ ವೇಳೆ ಕಾರ್ಗೋ ವಿಮಾನವೊಂದು ತುಂಡಾಗಿರುವ ಘಟನೆ ನಡೆದಿದೆ. ಡಿಹೆಚ್‌ಎಲ್ ಕಾರ್ಗೋ ವಿಮಾನ ರನ್‌ವೇಯಿಂದ ಜಾರಿದ ಪರಿಣಾಮ ಮುರಿದು ಬಿದ್ದಿದೆ.

    ಘಟನೆ ಸಂಭವಿಸಿದ ವೇಳೆ ಸ್ಯಾನ್ ಜೋಸ್‌ನಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಯಿತು. ಘಟನೆ ವೇಳೆ ವಿಮಾನದಲ್ಲಿ ಇಬ್ಬರು ಸಿಬ್ಬಂದಿ ಇದ್ದರು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇಬ್ಬರನ್ನು ಆಸ್ಪತ್ರಗೆ ದಾಖಲಿಸಲಾಗಿದೆ. ಇದನ್ನೂ ಓದಿ: E-ಸೈಕಲ್ ಖರೀದಿಗೆ ಬಂಪರ್ ಆಫರ್ ಕೊಟ್ಟ ದೆಹಲಿ ಸರ್ಕಾರ : ಯಾರಿಗೆ ಸಿಗುತ್ತೆ?

    ಗುರುವಾರ ಬೆಳಗ್ಗೆ ವಿಮಾನ ಜುವಾಮ್ ಸಾಂತಾಮಾರಿಯಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು. ಇದಾದ 25 ನಿಮಿಷಗಳಲ್ಲಿ ವಿಮಾನದಲ್ಲಿ ತಾಂತ್ರಿಕ ವೈಫಲ್ಯ ಕಂಡುಬಂದಿತ್ತು. ಹೀಗಾಗಿ ವಿಮಾನವನ್ನು ಪೈಲಟ್‌ಗಳು ತುರ್ತು ಭೂಸ್ಪರ್ಶ ಮಾಡಲು ನಿರ್ಧರಿಸಿದರು. ಈ ಸಂದರ್ಭ ಘಟನೆ ನಡೆದಿದೆ. ಇದನ್ನೂ ಓದಿ: ಸ್ಪೇಸ್‌ ಎಕ್ಸ್‌ ರಾಕೆಟ್‌ ಮೂಲಕ ಕಾಫಿನಾಡು ಯುವಕನ ಶಕುಂತಲಾ ಉಪಗ್ರಹ ಉಡಾವಣೆ

     

  • ಅಡುಗೆ ಎಣ್ಣೆಯಿಂದ ತಯಾರಿಸಿದ ಇಂಧನದಲ್ಲಿ 3 ಗಂಟೆ ಹಾರಾಡಿತು ವಿಮಾನ

    ಅಡುಗೆ ಎಣ್ಣೆಯಿಂದ ತಯಾರಿಸಿದ ಇಂಧನದಲ್ಲಿ 3 ಗಂಟೆ ಹಾರಾಡಿತು ವಿಮಾನ

    ಪ್ಯಾರಿಸ್: ಇತ್ತೀಚೆಗೆ ಅಡುಗೆ ಎಣ್ಣೆಯಿಂದ ತಯಾರಿಸಲಾದ ಇಂಧನದಿಂದ ವಿಮಾನವೊಂದನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ. ಈ ಇಂಧನದಿಂದ ವಿಮಾನ 3 ಗಂಟೆಗಳ ಕಾಲ ಪ್ರಾಯೋಗಿಕ ಹಾರಾಟ ನಡೆಸಿದೆ.

    ಎ380 ಏರ್‌ಬಸ್ ವಿಮಾನ ಇತ್ತೀಚೆಗೆ ಫ್ರಾನ್ಸ್ ದೇಶದ ಬ್ಲಾಗ್ನಾಕ್ ವಿಮಾನ ನಿಲ್ದಾಣದಿಂದ ಪ್ರಾಯೋಗಿಕ ಹಾರಾಟವನ್ನು ನಡೆಸಿತು. ವಿಶೇಷವೆಂದರೆ ವಿಮಾನದಲ್ಲಿ ಅಡುಗೆ ಎಣ್ಣೆಯನ್ನು ಹೊರತುಪಡಿಸಿ ಬೇರೇನೂ ಬಳಸಲಾಗಿಲ್ಲ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಧ್ಯೆ ವಿದ್ಯುತ್ ಶಾಕ್ – ಯೂನಿಟ್‍ಗೆ 35 ಪೈಸೆ ಹೆಚ್ಚಳ

    ಸಸ್ಟೆನೆಬಲ್ ಏವಿಯೇಷನ್ ಫ್ಯೂಯೆಲ್(ಎಸ್‌ಎಎಫ್) ಎಂದು ಕರೆಯಲಾಗುವ ಇಂಧನವನ್ನು ಈ ವಿಮಾನದಲ್ಲಿ ಬಳಸಲಾಗಿದ್ದು, ಇದು ಅಡುಗೆ ಎಣ್ಣೆ ಹಾಗೂ ತ್ಯಾಜ್ಯದಿಂದ ಮಾಡಲ್ಪಟ್ಟಿದೆ. ಕೇವಲ ಒಂದು ರೋಲ್ಸ್ ರಾಯ್ಸ್ ಟ್ರೆಂಟ್ 900 ಎಂಜಿನ್ ಮೂಲಕ ಈ ವಿಮಾನವನ್ನು ಹಾರಿಸಲಾಗಿದೆ.

    ಏನಿದು ಎಸ್‌ಎಎಫ್:
    ಎಸ್‌ಎಎಫ್ ಒಂದು ರೀತಿಯ ಇಂಧನವಾಗಿದ್ದು ಇದನ್ನು ಮುಖ್ಯವಾಗಿ ಅಡುಗೆ ಎಣ್ಣೆ ಹಾಗೂ ತ್ಯಾಜ್ಯದಿಂದ ಮಾಡಲಾಗಿದೆ. ಪರೀಕ್ಷೆಯಲ್ಲಿ ಬಳಸಲಾದ ಇಂಧನವನ್ನು ಹೈಡ್ರೊ ಪ್ರೊಸೆಸ್ಡ್ ಎಸ್ರ‍್ಸ್ ಹಾಗೂ ಫ್ಯಾಟಿ ಆಸಿಡ್(ಹೆಚ್‌ಇಎಫ್‌ಎ)ಗಳಿಂದ ತಯಾರಿಸಲಾಗಿದೆ. ಇದು ಸುಗಂಧ ಹಾಗೂ ಸಲ್ಫರ್ ಮುಕ್ತವಾಗಿದ್ದು, ಫ್ರಾನ್ಸ್‌ನ ನಾರ್ಮಂಡಿ ಪ್ರದೇಶದ ಟೋಟಲ್ ಎನರ್ಜಿಸ್ ಕಂಪನಿ ಪೂರೈಸಿದೆ. ಇದನ್ನೂ ಓದಿ: ಎಡಿಟ್ ಫೀಚರ್ ತರಲಿದ್ದೇವೆ ಎಂದ ಟ್ವಿಟ್ಟರ್ – ಇದು ಏಪ್ರಿಲ್ ಫೂಲ್ ಅಂದ್ರು ನೆಟ್ಟಿಗರು

    ಎಸ್‌ಎಎಫ್ ಇಂಧನವನ್ನು ಬಳಸಿ ಹಾರುವ ವಿಮಾನಗಳು ಶೇ.53 ರಿಂದ ಶೇ.71ರ ವರೆಗೆ ಹೊರ ಹಾಕುವ ಇಂಗಾಲವನ್ನು ಕಡಿತಗೊಳಿಸಬಹುದು ಎಂದು ಕಂಪನಿ ತಿಳಿಸಿದೆ.

  • ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ

    ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ

    ನವದೆಹಲಿ: ರಷ್ಯಾದ ಮಿಲಿಟರಿ ದಾಳಿಯಿಂದಾಗಿ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಏರ್ ಇಂಡಿಯಾ ಶುಕ್ರವಾರ ರೋಮೇನಿಯಾ ರಾಜಧಾನಿ ಬುಕಾರೆಸ್ಟ್‍ಗೆ 2 ವಿಮಾನಗಳನ್ನು ಕಳುಹಿಸಲು ಯೋಜಿಸಿದೆ.

    ಉಕ್ರೇನ್‍ನ ವಾಯುಪ್ರದೇಶವನ್ನು ಗುರುವಾರ ಮುಚ್ಚಲಾಗಿದೆ. ಹೀಗಾಗಿ ಉಕ್ರೇನ್‍ನಲ್ಲಿ ಭಾರತಿಯ ಪ್ರಯಾಣಿಕರು ಮಾತ್ರವಲ್ಲದೇ ಇತರ ದೇಶದ ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. ಇದನ್ನೂ ಓದಿ: ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದ ರಷ್ಯಾ!

    ಪ್ರಯಾಣಿಕರು ರಸ್ತೆಯ ಮೂಲಕ ಉಕ್ರೇನ್-ರೊಮೇನಿಯಾ ಗಡಿ ತಲುಪಿದರೆ, ಅಲ್ಲಿಂದ ಭಾರತ ಸರ್ಕಾರ ಅಧಿಕಾರಿಗಳು ಅವರನ್ನು ಬುಕಾರೆಸ್ಟ್‍ಗೆ ಕರೆದೊಯ್ಯಲಿದ್ದಾರೆ. ಬಳಿಕ ವಿಮಾನದ ಮೂಲಕ ಭಾರತಕ್ಕೆ ಹಿಂದಿರುಗಿಸುವಂತೆ ಏರ್ ಇಂಡಿಯಾ ಯೋಜಿಸಿದೆ. ಶನಿವಾರ 2 ಏರ್ ಇಂಡಿಯಾ ವಿಮಾನಗಳು ಬುಕಾರೆಸ್ಟ್‍ನಿಂದ ಹೊರಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 20 ಸಾವಿರ ಭಾರತೀಯರು ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಸಿಲುಕಿಕೊಂಡಿದ್ದಾರೆ.

    ಉಕ್ರೇನ್ ರಾಜಧಾನಿ ಕೀವ್‍ನಿಂದ ರೊಮೇನಿಯಾ ಗಡಿಗೆ ಸುಮಾರು 600 ಕಿ.ಮೀ ದೂರ ಇದೆ. ರಸ್ತೆ ಮಾರ್ಗವಾಗಿ ಕೀವ್‍ನಿಂದ ರೊಮೇನಿಯಾ ಗಡಿ ತಲುಪಲು 8 ರಿಂದ 11 ಗಂಟೆ ತಗುಲಬಹುದು. ಉಕ್ರೇನ್-ರೊಮೇನಿಯಾ ಗಡಿಯಿಂದ ಬುಕಾರೆಸ್ಟ್ 500 ಕಿ.ಮೀ ಅಂತರದಲ್ಲಿದೆ. ಇದರ ಪ್ರಯಾಣಕ್ಕೆ ಸುಮಾರು 7 ರಿಂದ 9 ಗಂಟೆ ತಗುಲಬಹುದು. ಇದನ್ನೂ ಓದಿ: Russia-Ukraine War: ಉಕ್ರೇನ್ ಯೂನಿಫಾರ್ಮ್ ಧರಿಸಿ ರಷ್ಯಾ ಸೈನಿಕರ ಎಂಟ್ರಿ – ಸಿಕ್ಕ ಸಿಕ್ಕಲ್ಲಿ ರಕ್ತಪಾತ

    ಈಗಾಗಲೇ ಉಕ್ರೇನ್‍ನಲ್ಲಿ ರಷ್ಯಾ ಬಾಂಬುಗಳ ಸುರಿಮಳೆ ಹರಿಸಿದ್ದು, ನೂರಾರು ಸೈನಿಕರು ಸಾವನ್ನಪ್ಪಿದ್ದಾರೆ. ಹಲವು ದೇಶಗಳು ರಷ್ಯಾಗೆ ಯುದ್ಧ ನಿಲ್ಲಿಸುವಂತೆ ಮನವಿ ಮಾಡಿದ್ದರೂ ದಾಳಿ ನಿಲ್ಲುವಂತೆ ಕಾಣಿಸುತ್ತಿಲ್ಲ.

  • ಏರ್​ಪೋರ್ಟ್‌ನಲ್ಲಿ ಧಗಧಗ ಹೊತ್ತಿ ಉರಿದ ವಿಮಾನದ ಪುಶ್‍ಬ್ಯಾಕ್ ವಾಹನ

    ಏರ್​ಪೋರ್ಟ್‌ನಲ್ಲಿ ಧಗಧಗ ಹೊತ್ತಿ ಉರಿದ ವಿಮಾನದ ಪುಶ್‍ಬ್ಯಾಕ್ ವಾಹನ

    ಮುಂಬೈ: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪುಶ್‍ಬ್ಯಾಕ್ ವಾಹನವೊಂದು(ವಿಮಾನವನ್ನು ಹಿಂದಕ್ಕೆ ತಳ್ಳುವ ವಾಹನ) ಹೊತ್ತಿ ಉರಿದ ಘಟನೆ ಮುಂಬೈ  ಏರ್​ಪೋರ್ಟ್‌ನಲ್ಲಿ ಇಂದು ನಡೆದಿದೆ.

    ವಿಮಾನಕ್ಕೆ ಪುಶ್‍ಬ್ಯಾಕ್ ನೀಡುತ್ತಿದ್ದ ವಾಹನ ವಿಮಾನದ ಬಳಿಯೇ ಧಗ ಧಗ ಹೊತ್ತಿ ಉರಿಯಿತು. ವಿಮಾನ ನಿಲ್ದಾಣದ ಅಧಿಕಾರಿಗಳು 10 ನಿಮಿಷದಲ್ಲಿ ಬೆಂಕಿ ನಂದಿಸಿ ಹತೋಟಿಗೆ ತಂದಿದ್ದಾರೆ. ಇದನ್ನೂ ಓದಿ: ನನ್ನನ್ನು ನೋಡಿದ್ರೆ ಕೊರೊನಾ ಇದೆ ಅಂತ ಅನ್ನಿಸುತ್ತಾ?: ಡಿ.ಕೆ. ಶಿವಕುಮಾರ್

    ಇಂದು ಮಧ್ಯಾಹ್ನ 1 ಗಂಟೆಗೆ ಈ ಘಟನೆ ನಡೆದಿದೆ.  Air India flight AI-647ಅನ್ನು ಹಿಂದಕ್ಕೆ ತಳ್ಳಲು ಹೊರಟಿದ್ದು, ವಿಮಾನದ ಬಳಿ ಬೆಂಕಿ ಹೊತ್ತಿಕೊಂಡಿದೆ. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೇ ರೀತಿಯ ಗಾಯ ಅಥವಾ ಪ್ರಾಣಹಾನಿ ಆಗಿಲ್ಲ. ಇದನ್ನೂ ಓದಿ: ಹಿರಿಯ ಸಾಹಿತಿ, ರಾಷ್ಟ್ರಪ್ರಶಸ್ತಿ ವಿಜೇತ ಎನ್.ಎಸ್.ದೇವಿಪ್ರಸಾದ್ ನಿಧನ

    ಏರ್ ಇಂಡಿಯಾ ವಿಮಾನ ಮುಂಬೈನಿಂದ ಗುಜರಾತ್‍ನ ಜಾಮ್ ನಗರಕ್ಕೆ ತೆರಳುತ್ತಿತ್ತು. ಇದರಲ್ಲಿ 85 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.

  • ರಾಜಸ್ಥಾನದಲ್ಲಿ ಮಿಗ್-21 ವಿಮಾನ ಪತನ – ಪೈಲಟ್‍ ಹುತಾತ್ಮ

    ರಾಜಸ್ಥಾನದಲ್ಲಿ ಮಿಗ್-21 ವಿಮಾನ ಪತನ – ಪೈಲಟ್‍ ಹುತಾತ್ಮ

    ಜೈಪುರ: ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯು ಸೇನೆಯ ಮಿಗ್-21 ವಿಮಾನ ಇಂದು ಸಂಜೆ ಪತನಗೊಂಡಿದೆ.

    ಮಿಗ್-21 ವಿಮಾನ ಪತನದ ಬಗ್ಗೆ ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಜೈಸಲ್ಮೇರ್‍ನ ಎಸ್‍ಪಿ ಅಜಯ್ ಸಿಂಗ್, ನಮಗೆ ಇಂದು ಸಂಜೆ ಭಾರತೀಯ ಸೇನೆಯ ಮಿಗ್-21 ವಿಮಾನ ಮರುಭೂಮಿ ರಾಷ್ಟ್ರೀಯ ಉದ್ಯಾನವನ (DNP) ಬಳಿ ಪತನ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ನಾವು ವಿಮಾನ ಪತನಗೊಂಡ ಸ್ಥಳಕ್ಕೆ ತೆರಳುತ್ತಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 44 ವರ್ಷ ಹಳೆಯ ಕಾರನ್ನು ಯಾರೂ ಬಳಸಲಾರರು – ಮಿಗ್ ಬಳಕೆ ಕುರಿತು ಧನೋವಾ ಮಾತು

    ವಿಮಾನ ಪತನಗೊಂಡಿರುವುದನ್ನು ಮೊದಲು ಅರಣ್ಯ ಅಧಿಕಾರಿಗಳು ನೋಡಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಜಯ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ವಾಯು ಸೇನೆ ಪೈಲಟ್ ಹುತಾತ್ಮರಾಗಿರುವ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್‌ ಮಾಡಿದೆ.

    ರಷ್ಯಾದ ಮಿಕೋಯಾನ್ ಗುರೇವಿಚ್(ಮಿಗ್) 21 ಬೈಸನ್ 1959 ರಲ್ಲಿ ತಯಾರಾಗಿದ್ದು, 1963 ರಲ್ಲಿ ಮಿಗ್ 21 ವಿವಿಧ ಆವೃತ್ತಿ ಒಟ್ಟು 874 ವಿಮಾನಗಳು ಭಾರತದ ವಾಯುಸೇನೆಗೆ ಸೇರ್ಪಡೆಯಾಗಿತ್ತು. 1971 ರಲ್ಲಿ ಬಾಂಗ್ಲಾ ಕದನದ ವೇಳೆ ಪ್ರಮುಖ ಪಾತ್ರವಾಹಿಸಿದ್ದ ಮಿಗ್ ಪಾಕಿಸ್ತಾನ 9 ವಿಮಾನಗಳನ್ನು ಹೊಡೆದು ಹಾಕಿತ್ತು. ಉಳಿದ ಯುದ್ಧ ವಿಮಾನಗಳಿಗೆ ಹೋಲಿಸಿದರೆ ಈ ವಿಮಾನಗಳ ಸಾಮರ್ಥ್ಯ ಕಡಿಮೆ ಎಂದು ಗೊತ್ತಾದ ಬಳಿಕ 1990 ರಲ್ಲಿ ಇವುಗಳನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಇದನ್ನೂ ಓದಿ: ಯೋಧರ ನಾಡಿಗೆ ಬಂದ ಮಿಗ್-21 ಯುದ್ಧ ವಿಮಾನ

    ಸದ್ಯ ಭಾರತದಲ್ಲಿ ಈಗ 100ಕ್ಕೂ ಅಧಿಕ ಮಿಗ್ ವಿಮಾನಗಳಿವೆ. ಖರೀದಿಸಿದ ಪೈಕಿ 500ಕ್ಕೂ ಹೆಚ್ಚು ವಿಮಾನಗಳು ಪತನಗೊಂಡಿದೆ. ಹೀಗಾಗಿ ವಾಯುಪಡೆಯಲ್ಲಿ ಈ ವಿಮಾನಗಳು ಹಾರುವ ಶವಪೆಟ್ಟಿಗೆ ಎಂದೇ ಕುಖ್ಯಾತಿ ಪಡೆದಿವೆ. ಹಾರಾಟದ ಸಮಯದಲ್ಲಿ ಎಂಜಿನ್ ವೈಫಲ್ಯಗೊಂಡು ಪತನದ ಸೂಚನೆ ಸಿಕ್ಕಿದ ಕೂಡಲೇ ಹಲವು ಪೈಲಟ್ ಗಳು ಎಜೆಕ್ಟ್ ಆಗದೇ ವಿಮಾನವನ್ನು ಜನವಸತಿ ಇಲ್ಲದ ಕಡೆಗೆ ತಿರುಗಿಸಿ ಪ್ರಾಣಬಿಟ್ಟಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಉತ್ತರ ಪ್ರದೇಶದಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ

    “ಹಾರುವ ಶವಪೆಟ್ಟಿಗೆ” ಎಂಬ ಕುಖ್ಯಾತಿ, ಎಫ್ 16 ಮುಂದೆ ಏನು ಅಲ್ಲ ಎಂದು ಭಾವಿಸಿದ್ದರೂ ಅಭಿನಂದನ್ ಈ ವಿಮಾನ ಮೂಲಕವೇ ಪಾಕ್ ಸೇನೆಯನ್ನು ಹಿಮ್ಮೆಟ್ಟಿಸಿ ಒಂದು ವಿಮಾನವನ್ನು ಉರುಳಿಸಿದ್ದರು. 2016 ರಲ್ಲಿ 110 ಮಿಗ್ 21 ಜೆಟ್ ವಿಮಾನಗಳನ್ನು ಮೇಲ್ದರ್ಜೆಗೆ ಏರಿಸಲಾಗಿತ್ತು. ಈ ಸಂದರ್ಭದಲ್ಲಿ ಮಲ್ಟಿ ಮೋಡ್ ರೇಡಾರ್, ಉತ್ತಮ ಏವಿಯಾನಿಕ್ಸ್, ಸಂವಹನ ವ್ಯವಸ್ಥೆಯನ್ನು ನೀಡಲಾಗಿತ್ತು.

  • ಫಸ್ಟ್ ಟೈಂ ವಾಯುಸೇನೆ ವಿಮಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಲ್ಯಾಂಡಿಂಗ್

    ಫಸ್ಟ್ ಟೈಂ ವಾಯುಸೇನೆ ವಿಮಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಲ್ಯಾಂಡಿಂಗ್

    ಜೈಪುರ: ಭಾರತದ ವಾಯು ಪಡೆಯ ವಿಮಾನಗಳು ಮೊಟ್ಟ ಮೊದಲ ಬಾರಿಗೆ ರಾಜಸ್ಥಾನದ ಜಲೋರಿನಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಲ್ಯಾಂಡಿಂಗ್ ಆಗಿದೆ.

     

    ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮತ್ತು ಏರ್ ಚೀಫ್ ಮಾರ್ಷಲ್ ಆರ್‍ಕೆಎಸ್ ಭದೌರಿಯಾ ಅವರ ಸಮ್ಮುಖದಲ್ಲಿ ಸುಖೋಯ್ ಸು-30 ಎಂಕೆಐ ಮತ್ತು ಸಿ-130 ಜೆ ಸೂಪರ್ ಹರ್ಕ್ಯುಲಸ್ ವಿಮಾನವು ಜಲೋರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಫೀಲ್ಡ್ ಲ್ಯಾಂಡಿಂಗ್ ಆಯಿತು.

    ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಅವರು ರಾಜಸ್ಥಾನದ ಬಾರ್ಮೇರ್‍ ನಲ್ಲಿ ರಾಷ್ಟ್ರೀಯ ಹೆದ್ದಾರಿ (ಎನ್‍ಎಚ್) 925ಂಯ ಸತ್ತಾ-ಗಂಧವ್ ರಸ್ತೆಯಲ್ಲಿ ತುರ್ತು ಲ್ಯಾಂಡಿಂಗ್ ಸೌಲಭ್ಯವನ್ನು ಇಂದು ಉದ್ಘಾಟಿಸಿದರು. ಇದನ್ನೂ ಓದಿ: ಪ್ಯಾರಾಲಂಪಿಕ್ಸ್ ಕ್ರೀಡಾಪಟುಗಳನ್ನು ನಿವಾಸದಲ್ಲಿ ಅಭಿನಂದಿಸಿದ ಪ್ರಧಾನಿ

    ಭಾರತ ದೇಶದಲ್ಲಿ ವಿಮಾನವೊಂದು ತುರ್ತು ಭೂಸ್ಪರ್ಶಕ್ಕಾಗಿ ರಾಷ್ಟ್ರೀಯ ಹೆದ್ದಾರಿಯನ್ನು ಬಳಸುವುದು ಇದೇ ಮೊದಲ ಬಾರಿಯಾಗಿದೆ. ಈ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣವಾಗಿರುವ ಈ ವಾಯು ನೆಲೆ ಸಹಾಯಕ ಮಿಲಿಟರಿ ವಾಯುನೆಲೆಯಾಗಿ ಕಾರ್ಯನಿರ್ವಹಿಸಲು ಸಂಪೂರ್ಣ ಸಿದ್ಧವಾಗಿದೆ ಎಂಬುದು ದೃಢಪಟ್ಟಿದೆ. ಇದನ್ನೂ ಓದಿ: ಲಿವ್‌ ಇನ್‌ ರಿಲೇಷನ್‌ಶಿಪ್‌ ಜೊತೆಗಿದ್ದ ಯುವಕನ ಕೊಂದಳಾಕೆ..!

  • ಅಫ್ಘಾನಿಸ್ತಾನದ ಮಹಿಳೆಗೆ ಮಿಲಿಟರಿ ವಿಮಾನದಲ್ಲಿ ಹೆರಿಗೆ

    ಅಫ್ಘಾನಿಸ್ತಾನದ ಮಹಿಳೆಗೆ ಮಿಲಿಟರಿ ವಿಮಾನದಲ್ಲಿ ಹೆರಿಗೆ

    ವಾಷಿಂಗ್ಟನ್: ತಾಲಿಬಾನಿಯರ ಕೈವಶವಾಗಿರುವ ಅಫ್ಘಾನಿಸ್ತಾನದ ಕಾಬೂಲ್‍ನಿಂದ ಜರ್ಮನಿಯ ರ್‍ಯಾಮ್‌ಸ್ಟೈನ್ ವಾಯುನೆಲೆಗೆ ಹಾರಿದ ವಾಯುಪಡೆಯ ಸಿ-17 ವಿಮಾನದಲ್ಲಿ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿರುವುದಾಗಿ ಅಮೆರಿಕ ಮಿಲಿಟರಿ ಮಾಹಿತಿ ನೀಡಿದೆ.

    ರ್‍ಯಾಮ್‌ಸ್ಟೈನ್ ವಾಯುನೆಲೆಯ ಸಹಕಾರದೊಂದಿಗೆ ಅಫ್ಘಾನಿಸ್ತಾನದಲ್ಲಿ ಸಿಲುಕಿರುವವರನ್ನು ರಕ್ಷಿಸುವ ವೇಳೆ ಈ ಘಟನೆಗೆ ಸಿ-17 ವಿಮಾನ ಸಾಕ್ಷಿಯಾಗಿದೆ. ಇದೇ ವಿಚಾರದ ಕುರಿತು ಟ್ವೀಟ್ ಮಾಡಿರುವ ಅಮೆರಿಕ ಮಿಲಿಟರಿಯ ಏರ್ ಮೊಬಿಲಿಟಿ ಕಮಾಂಡ್, ಕಾಬೂಲ್‍ನಿಂದ ಜರ್ಮನಿಗೆ ಹೊರಟಿದ್ದ ವಿಮಾನದಲ್ಲಿ ಶನಿವಾರದಂದು ಮಹಿಳಾ ಪ್ರಯಾಣಿಕರೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿಮಾನದಲ್ಲಿ ವಾಯು ಒತ್ತಡವನ್ನು ಮತ್ತಷ್ಟು ಹೆಚ್ಚು ಮಾಡುವ ಸಲುವಾಗಿ ವಿಮಾನ ಹಾರಾಟದ ಎತ್ತರವನ್ನು ಹೆಚ್ಚಿಸಲು ವಿಮಾನದ ಕಮಾಂಡರ್ ತೀರ್ಮಾನಿಸಿದ್ದರು. ಆ ರೀತಿ ಮಾಡುವುದರಿಂದ ಗರ್ಭಿಣಿಯ ದೇಹದ ಆರೋಗ್ಯದಲ್ಲಿ ಸ್ಥಿರತೆ ಕಾಪಾಡಿಕೊಳ್ಳುವುದು ಸಾಧ್ಯವಾಗುತ್ತದೆ ಹಾಗೂ ಜೀವಕ್ಕೆ ಅಪಾಯವಾಗದಂತೆ ನೋಡಿಕೊಳ್ಳಲು ಸಹಕಾರವಾಗುತ್ತದೆ ಎನ್ನುವುದು ಅವರಿಗೆ ತಿಳಿದಿತ್ತು ಎಂದು ಹೇಳಿದೆ. ಇದನ್ನೂ ಓದಿ: ನಮ್ಮಲ್ಲೂ ಅಯೋಗ್ಯ ಸ್ವಾಮೀಜಿಗಳು ಇದ್ದಾರೆ- ಯತ್ನಾಳ್ ಕಿಡಿ

    ರ್‍ಯಾಮ್‌ಸ್ಟೈನ್ ವಾಯುನೆಲೆಗೆ ಬರುತ್ತಿದ್ದಂತೆಯೇ, ಅಮೆರಿಕದ ವೈದ್ಯಕೀಯ ಸಿಬ್ಬಂದಿ ಗರ್ಭಿಣಿಗೆ ವಿಮಾನದಲ್ಲೇ ಚಿಕಿತ್ಸೆ ಆರಂಭಿಸಿದರು. ಹೆರಿಗೆ ನೋವು ಅದಾಗಲೇ ಕಾಣಿಸಿಕೊಂಡಿತ್ತಾದ್ದರಿಂದ ಹೆರಿಗೆ ಮಾಡಿಸಲಾಯಿತ್ತು. ಅದೃಷ್ಟವಶಾತ್ ಯಾವುದೇ ತೊಂದರೆ ಇಲ್ಲದೇ ಹೆರಿಗೆ ಆಗಿದ್ದು, ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಕ್ಷಣವೇ ತಾಯಿ ಮತ್ತು ಮಗುವನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದ್ದು ಇದೀಗ ತಾಯಿ, ಮಗೂ ಇಬ್ಬರೂ ಆರೋಗ್ಯವಾಗಿದ್ದಾರೆ.

  • ಭಾರತದ ವಿಮಾನಗಳ ಮೇಲೆ ಹೇರಿದ್ದ ನಿಷೇಧವನ್ನು ಸೆ.21ರವರೆಗೆ ವಿಸ್ತರಿಸಿದ ಕೆನಡಾ

    ಭಾರತದ ವಿಮಾನಗಳ ಮೇಲೆ ಹೇರಿದ್ದ ನಿಷೇಧವನ್ನು ಸೆ.21ರವರೆಗೆ ವಿಸ್ತರಿಸಿದ ಕೆನಡಾ

    ಒಟ್ಟಾವಾ: ಕೋವಿಡ್-19 ತಡೆಗಟ್ಟುವ ಸಲುವಾಗಿ ಕೆನಡಾ ಭಾರತದಿಂದ ತೆರಳುವ ಅಂತರಾಷ್ಟ್ರೀಯ ವಿಮಾನ ಹಾರಾಟದ ಮೇಲೆ ವಿಧಿಸಿದ್ದ ನಿಷೇಧವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಿದೆ ಎಂದು ಫೆಡರಲ್ ಸಾರಿಗೆ ಸಚಿವಾಲಯ ತಿಳಿಸಿದೆ.

    ಕೆನಾಡದ ಸಾರ್ವಜನಿಕ ಆರೋಗ್ಯ ಏಜೆನ್ಸಿಯು ಸಾರ್ವಜನಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡಿದ್ದು, ಟ್ರಾನ್ಸ್ ಪೋರ್ಟ್ ಕೆನಡಾ ಏರ್‍ಮೆನ್‍ಗೆ ನೋಟಿಸ್ ವಿಸ್ತರಿಸಿದೆ. ಭಾರತದಿಂದ ಕೆನಡಾಕ್ಕೆ ವಾಣಿಜ್ಯ ಮತ್ತು ಖಾಸಗಿ ಪ್ರಯಾಣಿಕರ ವಿಮಾನವನ್ನು 2021ರ ಸೆಪ್ಟೆಂಬರ್ 21ರವರೆಗೆ ನಿರ್ಬಂಧಿಸಲಾಗಿದೆ.

    ಈ ಮುನ್ನ ಏಪ್ರಿಲ್ 22ರಂದು ಭಾರತದಿಂದ ಕೆನಡಾಕ್ಕೆ ವಿಮಾನ ಹಾರಾಟವನ್ನು ನಿಷೇಧಿಸಲಾಗಿತ್ತು. ಇದೀಗ ಐದನೇ ಬಾರಿಗೆ ಈ ನಿಷೇಧವನ್ನು ವಿಸ್ತರಿಸಲಾಗಿದೆ. ಈ ಹಿಂದೆ ಹೇರಲಾಗಿದ್ದ ನಿಷೇಧ ಆಗಸ್ಟ್ 21ರಂದು ಮುಕ್ತಾಯಗೊಳ್ಳಬೇಕಿತ್ತು, ಆದರೆ ಇದೀಗ ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ. ಆದರೆ ಸರಕು ಅಥವಾ ವೈದ್ಯಕೀಯ ವರ್ಗಾವಣೆಗೆ ನಿಷೇಧ ಅನ್ವಯವಾಗುವುದಿಲ್ಲ. ಇದನ್ನೂ ಓದಿ:ಆ.21ರವರೆಗೆ ಭಾರತದ ವಿಮಾನಗಳ ಮೇಲೆ ನಿಷೇಧ ಹೇರಿದ ಕೆನಡಾ