Tag: AirIndia

  • 11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

    11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

    – 11A ಯಮನನ್ನೇ ಯಾಮಾರಿಸೋ ಸೀಟು!

    ಗಾಂಧೀನಗರ: 27 ವರ್ಷಗಳ ಹಿಂದೆ ನಡೆದಿದ್ದ ವಿಮಾನದ ದುರಂತದಲ್ಲಿ ಬದುಕುಳಿದಿದ್ದ ವ್ಯಕ್ತಿ ಹಾಗೂ ಅಹಮದಾಬಾದ್ (Ahmedabad) ವಿಮಾನ ದುರಂತದಲ್ಲಿ ಬದುಕುಳಿದ ವ್ಯಕ್ತಿ ಇಬ್ಬರು 11A ಸೀಟಿನಲ್ಲೇ ಕುಳಿತಿದ್ದರು. ಈಗ ಈ ಸೀಟನ್ನು ಯಮನನ್ನೇ ಯಾಮಾರಿಸುವ ಸೀಟು ಎನ್ನಲಾಗುತ್ತಿದೆ. ಇದೀಗ, ಮೊದಲ ದುರಂತದಲ್ಲಿ ಬದುಕಿದ ವ್ಯಕ್ತಿ ತಾವು ಪಾರಾದ ರೀತಿಯನ್ನು ನೆನಪಿಸಿಕೊಂಡಿದ್ದಾರೆ.

    ಹೌದು, ಎರಡು ದುರಂತಗಳ ಪೈಕಿ ಒಂದು 1998ರಲ್ಲಿ ಥೈಲ್ಯಾಂಡ್‌ನಲ್ಲಿ (Thailand) ನಡೆದರೆ, ಇನ್ನೊಂದು ಇದೇ ಜೂನ್ 12ರಂದು ಅಹಮದಾಬಾದ್‌ನಲ್ಲಿ ನಡೆದಿತ್ತು. ಮೊದಲ ದುರಂತದಲ್ಲಿ ಥೈಲ್ಯಾಂಡ್‌ನ ಸಿಂಗರ್ ಹಾಗೂ ನಟ ರುವಾಂಗ್ಸಾಕ್ ಲೊಯ್ಚುಸಾಕ್  (Ruangsak Loychusak) ಬದುಕುಳಿದಿದ್ದರು. ಮೊನ್ನೆಯ ದುರಂತದಲ್ಲಿ ರಮೇಶ್ ವಿಶ್ವಾಸ್ ಪ್ರಾಣಾಪಾಯದಿಂದ ಪಾರಾಗಿದ್ದರು. ಅಚ್ಚರಿ ಎಂದರೆ ಇಬ್ಬರು ಕುಳಿತಿದ್ದದ್ದು ಒಂದೇ ಸೀಟಿನಲ್ಲಿ ಅದು 11A.ಇದನ್ನೂ ಓದಿ: ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

    ಥೈಲ್ಯಾಂಡ್ ವಿಮಾನ ದುರಂತದಲ್ಲಿ ಸಿಲುಕಿದಾಗ ರುವಾಂಗ್ಸಾಕ್ ಅವರಿಗೆ 20 ವರ್ಷ. ಇದೀಗ 47 ವರ್ಷ. 27 ವರ್ಷಗಳ ಬಳಿಕ ತಾವು ಪ್ರಾಣಾಪಾಯದಿಂದ ಪಾರಾಗಿದ್ದು ಹೇಗೆ ಎನ್ನುವುದನ್ನು ಹಂಚಿಕೊಂಡಿದ್ದಾರೆ. ವಿಮಾನ ದುರಂತದಲ್ಲಿ ನಾನು ನಿಜಕ್ಕೂ ಸತ್ತೆ ಹೋಗುತ್ತೇನೆ ಎಂದುಕೊಂಡಿದ್ದೆ. ಆದರೆ ಬದುಕಿದೆ. ಇದೀಗ ಭಾರತದಲ್ಲಿ ನಡೆದ ವಿಮಾನ ದುರಂತದಲ್ಲಿಯೂ ಈ ಮಿರಾಕಲ್ ನಡೆದಾಗ ಈ ಸುದ್ದಿಯನ್ನು ಕೇಳಿ ನನಗೆ ನಂಬಲು ಸಾಧ್ಯವಾಗಲಿಲ್ಲ ಎಂದು ಘಟನೆಯ ಪರಿಯನ್ನು ಬಿಚ್ಚಿಟ್ಟಿದ್ದಾರೆ.

    1998ರಲ್ಲಿ ಬ್ಯಾಂಕಾಕ್‌ನಿಂದ ಹೊರಟ ಥಾಯ್ ಏರ್ವೇಸ್ ವಿಮಾನ ದಕ್ಷಿಣ ಥೈಲ್ಯಾಂಡ್‌ನ ನಗರವಾದ ಸೂರತ್ ಥಾನಿಯಲ್ಲಿ ಲ್ಯಾಂಡಿಂಗ್ ಆಗುವಾಗ ಅಪಘಾತಕ್ಕೀಡಾಗಿತ್ತು. ಈ ವೇಳೆ ವಿಮಾನದಲ್ಲಿದ್ದ 146 ಜನರ ಪೈಕಿ 101 ಜನರು ಸಾವನ್ನಪ್ಪಿದ್ದರು. ಬದುಕುಳಿದವರ ಪೈಕಿ ಇವರು ಒಬ್ಬರು.

    ಜೂನ್ 12ರಂದು ಅಹಮದಾಬಾದ್ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ವಿಮಾನದಲ್ಲಿದ್ದ್ 242 ಜನರ ಪೈಕಿ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ಪಾರಾಗಿದ್ದಾರೆ.ಇದನ್ನೂ ಓದಿ: Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

  • ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

    ದುರಂತಕ್ಕೂ ಮುನ್ನ ಇದೇ ವಿಮಾನ ಪ್ಯಾರಿಸ್‌ನಿಂದ ದೆಹಲಿಗೆ ಹಾರಾಟ ನಡೆಸಿತ್ತು!

    ನವದೆಹಲಿ: ಅಹಮದಾಬಾದ್‌ನಲ್ಲಿ (Ahmedabad) ಪತನಗೊಂಡ ಏರ್ ಇಂಡಿಯಾ (Air India) ವಿಮಾನ ಅಪಘಾತಕ್ಕೂ ಮುನ್ನ ಪ್ಯಾರಿಸ್‌ನಿಂದ ದೆಹಲಿಗೆ (Delhi) ಹಾರಾಟ ನಡೆಸಿತ್ತು ಎಂದು ನಾಗರಿಕ ವಿಮಾನಯಾನ ಕಾರ್ಯದರ್ಶಿ ಸಮೀರ್ ಕುಮಾರ್ ಸಿನ್ಹಾ (Samir Kumar Sinha) ಮಾಹಿತಿ ನೀಡಿದ್ದಾರೆ.

    ಏರ್ ಇಂಡಿಯಾ ವಿಮಾನ ದುರಂತ ನಡೆದ 48 ಗಂಟೆ ಬಳಿಕ ಮೊದಲ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್ 12ರಂದು ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗುವ ಮುನ್ನ ಇದೇ ವಿಮಾನವು ಪ್ಯಾರಿಸ್‌ನಿಂದ (Paris) ದೆಹಲಿಗೆ ಹಾಗೂ ದೆಹಲಿಯಿಂದ ಅಹಮದಾಬಾದ್‌ಗೆ ಯಾವುದೇ ಸಮಸ್ಯೆಗಳಿಲ್ಲದೆ ಹಾರಾಟ ನಡೆಸಿತ್ತು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತ ತನಿಖೆಗೆ ಉನ್ನತ ಮಟ್ಟದ ಸಮಿತಿ – 3 ತಿಂಗಳ ಡೆಡ್‌ಲೈನ್: ಸಚಿವ ರಾಮಮೋಹನ್ ನಾಯ್ಡು

    ಇದೇ ವೇಳೆ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಮಾತನಾಡಿ, ಸದ್ಯ ಬ್ಲ್ಯಾಕ್‌ಬಾಕ್ಸ್‌ನ್ನು ಡಿಕೋಡ್ ಮಾಡಲಾಗುತ್ತಿದ್ದು, ದುರಂತಕ್ಕೂ ಮುನ್ನ ವಿಮಾನದಲ್ಲಿ ಆಗಿದ್ದಾದರೂ ಏನು ಎನ್ನುವ ಮಾಹಿತಿ ತಿಳಿದುಬರಲಿದೆ. ಶುಕ್ರವಾರ ಸಂಜೆ ಬ್ಲ್ಯಾಕ್‌ಬಾಕ್ಸ್ ಪತ್ತೆಯಾಗಿದ್ದು. ಅಪಘಾತಕ್ಕೆ ನಿಖರವಾದ ಕಾರಣ ಇದರಿಂದ ತಿಳಿದುಬರಲಿದೆ. ಎಎಐಬಿ ತನ್ನ ತನಿಖೆಯನ್ನು ಪೂರ್ಣಗೊಳಿಸಿದ ಬಳಿಕ ವರದಿ ನೀಡಲಿದ್ದು, ಏನಾಗಿದೆ ಎಂಬುದು ಗೊತ್ತಾಗಲಿದೆ. ಘಟನೆ ಬಗ್ಗೆ ಬ್ರಿಟನ್, ಅಮೆರಿಕ ಸೇರಿದಂತೆ ಕೇಂದ್ರದ ಉನ್ನತ ಮಟ್ಟದ ಸಮಿತಿ ಸಹ ತನಿಖೆ ನಡೆಸುತ್ತಿದೆ ಎಂದರು.

    ಜೂನ್ 12ರಂದು ಅಹಮದಾಬಾದ್ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತ್ತು. ಪರಿಣಾಮ ವಿಮಾನ ನಿಲ್ದಾಣದ ಸಮೀಪದ ಮೇಘನಿ ನಗರದ ಬಿಜೆ ಎಂಬಿಬಿಎಸ್ ಕಾಲೇಜಿನ ಹಾಸ್ಟೆಲ್ ಮೇಲೆ ಬಿದ್ದಿತ್ತು. ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್, ಒಬ್ಬ ಕೆನಡಾ ಮತ್ತು ಏಳು ಪೋರ್ಚುಗೀಸ್ ಪ್ರಜೆಗಳು 12 ಸಿಬ್ಬಂದಿ ಇದ್ದರು. ಈ ಪೈಕಿ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ಪಾರಾಗಿದ್ದಾರೆ. ಜೊತೆಗೆ ಬಿಜೆ ಮೆಡಿಕಲ್ ಕಾಲೇಜಿನ 5 ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಇನ್ನೂ ಭಾರೀ ಬೆಂಕಿ ಹೊತ್ತಿಕೊಂಡ ಪರಿಣಾಮ ಅಲ್ಲಿದ್ದ 19 ಸ್ಥಳೀಯರು ಸಾವಿಗೀಡಾಗಿದ್ದರು.ಇದನ್ನೂ ಓದಿ: Plane Crash | ಇಂಜಿನಿಯರ್‌ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ

  • ಅಹಮದಾಬಾದ್ ವಿಮಾನ ದುರಂತ – ಸಾವಿನ ಸಂಖ್ಯೆ 265ಕ್ಕೆ ಏರಿಕೆ

    ಅಹಮದಾಬಾದ್ ವಿಮಾನ ದುರಂತ – ಸಾವಿನ ಸಂಖ್ಯೆ 265ಕ್ಕೆ ಏರಿಕೆ

    ಗಾಂಧೀನಗರ: ಗುಜರಾತ್‌ನ (Gujarat) ಅಹಮದಾಬಾದ್ (Ahmedabad) ವಿಮಾನ ದುರಂತದಲ್ಲಿ ಅಲ್ಲಿನ ಸ್ಥಳೀಯರು, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 265 ಜನರು ಸಾವಿಗೀಡಾಗಿದ್ದಾರೆ.

    ಗುರುವಾರ ಅಹಮದಾಬಾದ್ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್‌ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ಪರಿಣಾಮ ವಿಮಾನ ನಿಲ್ದಾಣದ ಸಮೀಪದ ಮೇಘನಿ ನಗರದ ಬಿಜೆ ಎಂಬಿಬಿಎಸ್ ಕಾಲೇಜಿನ ಹಾಸ್ಟೆಲ್ ಮೇಲೆ ಬಿದ್ದಿತ್ತು.ಇದನ್ನೂ ಓದಿ: ಅಹಮದಾಬಾದ್ ವಿಮಾನ ದುರಂತ – ಮಗಳ ಸೇರುವ ತವಕದಲ್ಲಿದ್ದ ತಾಯಿ ಸಾವಿನ ಮನೆಗೆ!

    ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್, ಒಬ್ಬ ಕೆನಡಾ ಮತ್ತು ಏಳು ಪೋರ್ಚುಗೀಸ್ ಪ್ರಜೆಗಳು 12 ಸಿಬ್ಬಂದಿ ಇದ್ದರು. ಈ ಪೈಕಿ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ಪಾರಾಗಿದ್ದಾರೆ. ಜೊತೆಗೆ ಬಿಜೆ ಮೆಡಿಕಲ್ ಕಾಲೇಜಿನ 5 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನೂ ಭಾರೀ ಬೆಂಕಿ ಹೊತ್ತಿಕೊಂಡ ಪರಿಣಾಮ ಅಲ್ಲಿದ್ದ 19 ಸ್ಥಳೀಯರು ಸಾವಿಗೀಡಾಗಿದ್ದರು.

    ರಕ್ಷಣಾ ಕಾರ್ಯಾಚರಣೆ ಬಳಿಕ 265 ಜನರ ಮೃತದೇಹಗಳನ್ನು ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಇಡಲಾಗಿತ್ತು. ಗುರುತು ಪತ್ತೆ ಹಚ್ಚಲೂ ಆಗದಷ್ಟು ಸುಟ್ಟು ಕರಕಲಾಗಿದ್ದರಿಂದ ಎಲ್ಲಾ ಮೃತದೇಹಗಳ ಡಿಎನ್‌ಎ ಸಂಗ್ರಹಿಸಲಾಗಿದೆ. ಇನ್ನೂ ಅವಘಡದಲ್ಲಿ ಗಾಯಗೊಂಡವರಿಗೆ ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳಿಗೆ `ಓ’ ನೆಗೆಟಿವ್ ರಕ್ತ ಬೇಕಾಗಿದ್ದು, ಹಲವಾರು ಸೈನಿಕರು ರಕ್ತದಾನ ಮಾಡಿದ್ದಾರೆ.ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

  • ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

    ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

    ಗಾಂಧೀನಗರ: ಭಾರತ ಪ್ರವಾಸ ಮುಗಿಸಿ ಕೆನಡಾಗೆ ಮರಳುತ್ತಿದ್ದ ದಂತವೈದ್ಯೆಯೊಬ್ಬರು ಅಹಮದಾಬಾದ್ (Ahmedabad) ಏರ್ ಇಂಡಿಯಾ (Air India) ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

    ಮೃತ ಮಹಿಳೆಯನ್ನು ಭಾರತೀಯ ಮೂಲದ ಕೆನಡಾದ (Canada) ಟೊರೊಂಟೊದ ಎಟೋಬಿಕೋಕ್‌ನಲ್ಲಿ ನಿವಾಸಿ ನಿರಾಲಿ ಪಟೇಲ್ (32) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

    2016ರಲ್ಲಿ ಭಾರತದಲ್ಲಿ ದಂತ ವೈದ್ಯಕೀಯ ಪದವಿಯನ್ನು ಪಡೆದಿದ್ದ ನಿರಾಲಿ, 2019ರಲ್ಲಿ ಕೆನಾಡದಲ್ಲಿ ಕಾರ್ಯನಿರ್ವಹಿಸಲು ಪರವಾನಗಿಯನ್ನು ಪಡೆದರು. ಬಳಿಕ ಕೆನಡಾದ ಮಿಸ್ಸಿಸೌಗಾ ದಂತ ಚಿಕಿತ್ಸಾಲಯದಲ್ಲಿ ಕೆಲಸ ಮಾಡುತ್ತಿದ್ದರು. 4-5 ದಿನಗಳ ಹಿಂದೆ ಭಾರತಕ್ಕೆ ಭೇಟಿ ನೀಡಿದ್ದ ನಿರಾಲಿ, ಕೆನಡಾಕ್ಕೆ (Canada) ಮರಳುತ್ತಿದ್ದರು. ದುರಾದೃಷ್ಟವಶಾತ್ ವಿಮಾನ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ.

    ನಿರಾಲಿ ಅವರ ಪತಿ ತಮ್ಮ ಒಂದು ವರ್ಷದ ಮಗುವಿನೊಂದಿಗೆ ಭಾರತಕ್ಕೆ ತೆರಳುವ ಯೋಜನೆಯನ್ನು ಹಾಕಿಕೊಂಡಿದ್ದರು. ಆದರೆ ಬಂದಿರಲಿಲ್ಲ. ಈ ಕುರಿತು ನಿರಾಲಿ ಸಹೋದರನಿಗೆ ಮಾಹಿತಿ ನೀಡಿದ್ದು, ವಿಮಾನ ದುರಂತದಿಂದ ಅವರ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಏನಿದು ಘಟನೆ?
    ಅಹಮದಾಬಾದ್ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್‌ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ಪರಿಣಾಮ ಅಹಮದಾಬಾದ್ ಸಮೀಪದ ಮೇಘನಿ ನಗರದ ಬಿಜೆ ಎಂಬಿಬಿಎಸ್ ಕಾಲೇಜು ಹಾಸ್ಟೆಲ್‌ಗೆ ಡಿಕ್ಕಿ ಹೊಡೆದಿತ್ತು. ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್, ಒಬ್ಬ ಕೆನಡಾ ಮತ್ತು ಏಳು ಪೋರ್ಚುಗೀಸ್ ಪ್ರಜೆಗಳು 12 ಸಿಬ್ಬಂದಿ ಇದ್ದರು. ಈ ಪೈಕಿ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ಪಾರಾಗಿದ್ದಾರೆ.ಇದನ್ನೂ ಓದಿ: Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

  • ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

    ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

    – WTC ಫೈನಲ್‌ನ 3ನೇ ದಿನದ ಆರಂಭಕ್ಕೂ ಮುನ್ನ ಮೌನಾಚರಿಸಿದ ಆಟಗಾರರು

    ಲಂಡನ್: ಬೆಕೆನ್‌ಹ್ಯಾಮ್‌ನಲ್ಲಿ (Beckenham) ನಡೆಯುತ್ತಿರುವ ಇಂಟ್ರಾ-ಸ್ಕ್ವಾಡ್ ಪಂದ್ಯದಲ್ಲಿ ಭಾಗಿಯಾಗಿರುವ ಟೀಂ ಇಂಡಿಯಾ (Team India) ಆಟಗಾರರು ಪಂದ್ಯದ ಆರಂಭಕ್ಕೂ ಮುನ್ನ ಕಪ್ಪು ಪಟ್ಟಿ ಧರಿಸಿ ಮೌನಾಚರಣೆ ಮಾಡಿ, ಅಹಮದಾಬಾದ್ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು.

    ಆಗ್ನೇಯ ಲಂಡನ್‌ನ ಬೆಕೆನ್‌ಹ್ಯಾಮ್‌ನಲ್ಲಿ ಇಂಟ್ರಾ-ಸ್ಕ್ವಾಡ್ ಪಂದ್ಯ ನಡೆಯುತ್ತಿದ್ದು, ಟೀಂ ಇಂಡಿಯಾ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಭಾಗಿಯಾಗಿದ್ದಾರೆ. ಅಹಮದಾಬಾದ್ ವಿಮಾನ ದುರಂತದ ಹಿನ್ನೆಲೆ ಪಂದ್ಯದ ಆರಂಭಕ್ಕೂ ಮುನ್ನ ತೋಳಿಗೆ ಕಪ್ಪು ಪಟ್ಟಿ ಧರಿಸಿ ಒಂದು ನಿಮಿಷ ಮೌನಾಚರಣೆ ಮಾಡಿದರು. ಈ ಮೂಲಕ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದರು.ಇದನ್ನೂ ಓದಿ: ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

    ಲಾರ್ಡ್ಸ್‌ನಲ್ಲಿ ಮೌನಾಚರಣೆ:
    ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯ ಲಂಡನ್‌ನ ಲಾರ್ಡ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಇಂದು ಮೂರನೇ ದಿನದ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ಆಟಗಾರರು ಮೌನಾಚರಣೆ ಮಾಡಿದರು.

    ಏನಿದು ಘಟನೆ?
    ಅಹಮದಾಬಾದ್ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್‌ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ಪರಿಣಾಮ ಅಹಮದಾಬಾದ್ ಸಮೀಪದ ಮೇಘನಿ ನಗರದ ಬಿಜೆ ಎಂಬಿಬಿಎಸ್ ಕಾಲೇಜು ಹಾಸ್ಟೆಲ್‌ಗೆ ಡಿಕ್ಕಿ ಹೊಡೆದಿತ್ತು. ವಿಮಾನದಲ್ಲಿ ಪೈಲೆಟ್, ಸಿಬ್ಬಂದಿ ಸೇರಿ ಒಟ್ಟು 242 ಪ್ರಯಾಣಿಕರಿದ್ದರು. ಈ ಪೈಕಿ 241 ಜನ ಸಾವನ್ನಪ್ಪಿದ್ದು, ಓರ್ವ ಪ್ರಯಾಣಿಕ ಪವಾಡ ಸದೃಶ್ಯ ಪಾರಾಗಿದ್ದಾರೆ.ಇದನ್ನೂ ಓದಿ: Photo Gallery: ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಮೋದಿ ಭೇಟಿ

  • ಕನಸಿನ ಕೋರ್ಸ್‌ಗಾಗಿ ಲಂಡನ್‌ಗೆ ಹೊರಟಿದ್ದ ಯುವತಿಯ ದುರಂತ ಅಂತ್ಯ!

    ಕನಸಿನ ಕೋರ್ಸ್‌ಗಾಗಿ ಲಂಡನ್‌ಗೆ ಹೊರಟಿದ್ದ ಯುವತಿಯ ದುರಂತ ಅಂತ್ಯ!

    ಅಹಮದಾಬಾದ್: ಲಂಡನ್‌ನಲ್ಲಿ ತನ್ನ ಇಷ್ಟದ ಕೋರ್ಸ್‌ ಮಾಡಲು ಹೊರಟಿದ್ದ ಪಾಯಲ್ ಖಾಟಿಕ್ ಅವರ ಕನಸು ಕೇವಲ 9 ಗಂಟೆಗಳ ಹಾರಾಟದ ದೂರದಲ್ಲಿತ್ತು! ಆದರೆ ಅವರ ಕನಸು, ಅವರ ದೇಹ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಸುಟ್ಟು ಬೂದಿಯಾಯಿತು.

    ರಾಜಸ್ಥಾನದ ಉದಯಪುರದ ಯುವತಿ ಪಾಯಲ್, ಲಂಡನ್‌ಗೆ ತೆರಳಲು ಅಹಮದಾಬಾದ್‌ನಿಂದ ಏರ್ ಇಂಡಿಯಾ ವಿಮಾನ ಹತ್ತಿದ್ದರು. ಆ ವಿಮಾನ ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ಈ ದುರಂತದಲ್ಲಿ ಅವರು ಸಾವಿಗೀಡಾಗಿದ್ದಾರೆ.

    ಗುಜರಾತ್‌ನ ಹಿಮ್ಮತ್‌ನಗರದಲ್ಲಿ ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದ ಪಾಯಲ್, ಲಂಡನ್‌ನಲ್ಲಿ ಉನ್ನತ ಶಿಕ್ಷಣಕ್ಕಾಗಿ ಪ್ರವೇಶ ಪಡೆಯಲು ಹೋಗುತ್ತಿದ್ದರು. ಸ್ಥಳೀಯರು, ಯುವತಿ ಬಾಲ್ಯದಿಂದಲೂ ಶಾಲೆಯ ಟಾಪರ್ ಆಗಿದ್ದಳು ಎಂದು ಹೇಳಿಕೊಂಡಿದ್ದಾರೆ.

    ಅಪಘಾತಗೊಂಡ ಈ ವಿಮಾನದಲ್ಲಿ ಸುಮಾರು 10 ಮಂದಿ ಸಿಬ್ಬಂದಿ ಸೇರಿ 242 ಜನ ಇದ್ದರು. ಮೂಲಗಳ ಪ್ರಕಾರ 200ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಬಿಡುಗಡೆಯಾಗಿಲ್ಲ.

  • Ahmedabad Plane Crash | ಮೊದಲ ಬಾರಿಗೆ ಪತಿ ನೋಡಲು ಹೊರಟಿದ್ದ ನವವಿವಾಹಿತೆ ಸಾವು

    Ahmedabad Plane Crash | ಮೊದಲ ಬಾರಿಗೆ ಪತಿ ನೋಡಲು ಹೊರಟಿದ್ದ ನವವಿವಾಹಿತೆ ಸಾವು

    – ಆಶೀರ್ವಾದ ಮಗಳೇ ಎಂದು ಸ್ಟೇಟಸ್ ಹಾಕಿದ್ದ ಖುಷ್ಬೂ ತಂದೆ

    ಗಾಂಧೀನಗರ: ವಿವಾಹದ ಬಳಿಕ ಗಂಡನ ಜೊತೆಗಿರಲು ಲಂಡನ್‌ಗೆ ಹೊರಟಿದ್ದ ನವವಿವಾಹಿತೆ ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

    ರಾಜಸ್ಥಾನದ ಬಲೋತಾರಾ ಜಿಲ್ಲೆಯ ಅರಬಾ ಗ್ರಾಮದ ನಿವಾಸಿ ಖುಷ್ಬೂ ರಾಜ್‌ಪುರೋಹಿತ್ ಮೃತ ಮಹಿಳೆ.ಇದನ್ನೂ ಓದಿ: ಪತನಗೊಂಡ ವಿಮಾನದಲ್ಲಿ ಮಗಳು, ಮೊಮ್ಮಗ ಇದ್ರು; ಬೆಳಿಗ್ಗೆಯಷ್ಟೇ ಅವಳ ಜೊತೆ ಮಾತಾಡಿದ್ದೆ – ಕಣ್ಣೀರಿಟ್ಟ ತಂದೆ

    ಜನವರಿಯಲ್ಲಿ ಖುಷ್ಬೂ ಹಾಗೂ ಮನ್ಫೂಲ್ ಸಿಂಗ್ ವೈವಾಹಿತ ಜೀವನಕ್ಕೆ ಕಾಲಿಟ್ಟಿದ್ದರು. ಇದಾದ ಬಳಿಕ ಅವರ ಪತಿ ಲಂಡನ್‌ನಲ್ಲಿ ವಿದ್ಯಾಭ್ಯಾಸಕ್ಕೆ ತೆರಳಿದ್ದರು. ಹೀಗಾಗಿ ಖುಷ್ಬೂ ಲಂಡನ್‌ನಲ್ಲಿದ್ದ ಗಂಡನನ್ನು ನೋಡಲು ಹೊರಟಿದ್ದರು.

    ಮಗಳನ್ನು ಏರ್‌ಪೋರ್ಟ್‌ಗೆ  ಬಿಟ್ಟು, ಆಕೆಯನ್ನು ಕಳುಹಿಸಿಕೊಟ್ಟಿದ್ದ ತಂದೆ ಮದನ್‌ ಸಿಂಗ್‌ ಅವರು, ಆಶೀರ್ವಾದ ಮಗಳೇ Going to London ಎಂದು ವಾಟ್ಸಪ್ ಸ್ಟೇಟಸ್ ಹಾಕಿ ಕಳುಹಿಸಿಕೊಟ್ಟಿದ್ದರು. ಆದರೆ ದುರದೃಷ್ಟವಶಾತ್ ವಿಮಾನ ದುರಂತದಲ್ಲಿ ಮಗಳು ಸಾವನ್ನಪ್ಪಿದ್ದಾರೆ.

    ಏನಿದು ಘಟನೆ?
    ಅಹಮದಾಬಾದ್ ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್‌ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿತು. ಪರಿಣಾಮ ಅಹಮದಾಬಾದ್ ಸಮೀಪದ ಮೇಘನಿ ನಗರದ ಬಿಜೆ ಎಂಬಿಬಿಎಸ್ ಕಾಲೇಜು ಹಾಸ್ಟೆಲ್‌ಗೆ ಡಿಕ್ಕಿ ಹೊಡೆದಿದೆ. ವಿಮಾನದಲ್ಲಿದ್ದ 242 ಪ್ರಯಾಣಿಕ ಪೈಕಿ 241 ಜನ ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

  • ಮತ್ತೊಂದು ಕೇಸ್ – ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ

    ಮತ್ತೊಂದು ಕೇಸ್ – ಕುಡಿದ ಅಮಲಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ

    ನವದೆಹಲಿ: ಇತ್ತೀಚೆಗೆ ವಿಮಾನಗಳಲ್ಲಿ ಮೂತ್ರ ವಿಸರ್ಜನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಏರ್ ಇಂಡಿಯಾ, ಗೋ ಫಸ್ಟ್‌ ಬಳಿಕ ಇದೀಗ ಅಮೆರಿಕನ್ ಏರ್‌ಲೈನ್ಸ್ (American Airlines) ವಿಮಾನದಲ್ಲೂ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

    ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಅಮೇರಿಕನ್ ಏರ್‌ಲೈನ್ಸ್ ವಿಮಾನದಲ್ಲಿ ಕುಡಿದ ಅಮಲಿನಲ್ಲಿ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕನ (Flight Passenger) ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ವಿಮಾನ ದೆಹಲಿಗೆ (Delhi) ಬಂದಿಳಿದ ನಂತರ ಆರೋಪಿಯನ್ನ ವಶಕ್ಕೆ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಮೂತ್ರ ವಿಸರ್ಜನೆ ಕೇಸ್‌ನಲ್ಲಿ ಪೈಲಟ್‌ ಬಲಿಪಶು – ಏರ್‌ ಇಂಡಿಯಾ ಪೈಲಟ್‌ ಒಕ್ಕೂಟ

    Air India

    ಎಎ292 ಅಮೆರಿಕನ್ ಏರ್‌ಲೈನ್ಸ್ ವಿಮಾನವು ಶುಕ್ರವಾರ ರಾತ್ರಿ 9:16ಕ್ಕೆ ನ್ಯೂಯಾರ್ಕ್‌ನಿಂದ ಹೊರಟು, 14 ಗಂಟೆ 26 ನಿಮಿಷಗಳ ನಂತರ (ಶನಿವಾರ ರಾತ್ರಿ 10:12ಕ್ಕೆ) ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (IGIA) ಬಂದಿಳಿಯಿತು. ಇದನ್ನೂ ಓದಿ: DGCA ನಿಮಯಗಳ ಉಲ್ಲಂಘನೆ – ಏರ್‌ಏಷ್ಯಾ ಇಂಡಿಯಾಗೆ 44 ಲಕ್ಷ ದಂಡ

    ಆರೋಪಿಯು ಅಮೇರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದು, ಕುಡಿದ ಅಮಲಿನಲ್ಲಿ ಮಲಗಿದ್ದಾಗ ಮೂತ್ರ ವಿಸರ್ಜನೆ ಮಾಡಿದ್ದಾನೆ. ಬಳಿಕ ಇದು ಹೇಗೋ ಸೋರಿಕೆಯಾಗಿದೆ ಎಂದು ಕ್ಷಮೆಯಾಚಿಸಿದ್ದಾನೆ. ಆದರೂ ಸಹ ಪ್ರಯಾಣಿಕ ಏರ್‌ಲೈನ್ ಸಿಬ್ಬಂದಿಗೆ ದೂರು ನೀಡಿದ್ದರಿಂದಾಗಿ ಆತನನ್ನ ವಶಕ್ಕೆ ಪಡೆದುಕೊಳ್ಳಲಾಗಿದೆ.

    2022ರ ನವೆಂಬರ್ ತಿಂಗಳಿನಲ್ಲಿ ಏರ್ ಇಂಡಿಯಾ ವಿಮಾನದಲ್ಲಿ ಟೆಕ್ಕಿ ಶಂಕರ್ ಮಿಶ್ರಾ ತನ್ನ ಸಹ ಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿತ್ತು. ಇದಾದ ನಂತರ ಗೋ ಫಸ್ಟ್‌ ವಿಮಾನದಲ್ಲೂ ಇದೇ ರೀತಿ ಕೇಸ್ ಬೆಳಕಿಗೆ ಬಂದಿತ್ತು.

  • ಕೂದಲು ಉದುರಿದವರು ಫುಲ್ ಶೇವ್ ಮಾಡ್ಬೇಕು- ಏರ್ ಇಂಡಿಯಾ ನ್ಯೂ ರೂಲ್ಸ್

    ಕೂದಲು ಉದುರಿದವರು ಫುಲ್ ಶೇವ್ ಮಾಡ್ಬೇಕು- ಏರ್ ಇಂಡಿಯಾ ನ್ಯೂ ರೂಲ್ಸ್

    ನವದೆಹಲಿ: ಟಾಟಾ ಒಡೆತನದ ಏರ್ ಇಂಡಿಯಾ (Air India) ತನ್ನ ಕ್ಯಾಬಿನ್ ಸಿಬ್ಬಂದಿಗೆ ಹೊಸ ವಸ್ತ್ರಸಂಹಿತೆ ಜಾರಿ ಮಾಡಿದೆ.

    ಹೊಸ ನಿಯಮದ ಪ್ರಕಾರ ಕೂದಲು ಉದುರಿರುವ ಪುರುಷ ಸಿಬ್ಬಂದಿ ಸಂಪೂರ್ಣವಾಗಿ ತಲೆ ಕೂದಲನ್ನು ತೆಗೆಸಿಕೊಂಡು ಕೆಲಸಕ್ಕೆ ಬರುವಂತೆ ಸೂಚಿಸಿದೆ. ಇನ್ನೂ ಮಹಿಳೆಯರು (Women’s) ಅರಳು ಇರುವ ಕಿವಿ ಓಲೆಗಳನ್ನು ಧರಿಸದಂತೆ ಸೂಚಿಸಿದೆ. ಇದನ್ನೂ ಓದಿ: ವಿದ್ಯಾಭರಣ್ ಬಗ್ಗೆ ಮೊದಲೇ ಗೊತ್ತಾಗಿದ್ದು ಒಳ್ಳೆಯದಾಯ್ತು: ನಟಿ ವೈಷ್ಣವಿ ಸ್ಪಷ್ಟನೆ

    ದಶಕಗಳ ಕಾಲದಿಂದ ವಿಮಾನ ಸೇವೆ ಒದಗಿಸುತ್ತಿರುವ ಏರ್ ಇಂಡಿಯಾ ತನ್ನ ಸಿಬ್ಬಂದಿ ವಸ್ತ್ರಸಂಹಿತೆ ಅಂತಾರಾಷ್ಟ್ರೀಯ ಮಾನದಂಡಕ್ಕೆ ಅನುಗುಣವಾಗಿಲ್ಲ ಎಂಬ ಕಾರಣಕ್ಕೆ ಅದನ್ನು ಬದಲಾಯಿಸಲು ತೀರ್ಮಾನಿಸಿದೆ. ತಲೆಯಲ್ಲಿ ಹೆಚ್ಚು ಕೂದಲು ಉದುರಿ ತಲೆ ಬೋಳು-ಬೋಳಾಗಿ ಕಾಣುವ ಸಿಬ್ಬಂದಿ ಪೂರ್ಣವಾಗಿ ತಮ್ಮ ತಲೆಕೂದಲನ್ನು ಪ್ರತಿನಿತ್ಯ ಶೇವ್ ಮಾಡಬೇಕು. ಅಲ್ಲದೇ ಗುಂಪಿನಲ್ಲಿದ್ದಾಗ ಅಸಭ್ಯ ವರ್ತನೆ ನಿಲ್ಲಿಸಬೇಕು ಎಂದು ಸೂಚಿಸಿದೆ. ಇದನ್ನೂ ಓದಿ: ವೈಷ್ಣವಿ ಜೊತೆಗಿನ ವಿದ್ಯಾಭರಣ್ ಫೋಟೋ ವೈರಲ್ ಬೆನ್ನಲ್ಲೇ ‘ರಹಸ್ಯ’ ನಟಿ ಗಂಭೀರ ಆರೋಪ!

    ಮಹಿಳಾ ಸಿಬ್ಬಂದಿ ಕೇವಲ ಚಿನ್ನ (Gold) ಮತ್ತು ವಜ್ರದ ವೃತ್ತಾಕಾರದ ಕಿವಿ ಓಲೆಗಳನ್ನು ಮಾತ್ರ ಧರಿಸಬೇಕು. 0.5 ಸೆಂ.ಮೀ. ಅಗಲದ ಬಿಂದಿ ಮತ್ತು 1 ಸೆಂ.ಮೀ. ಗಿಂತ ಹೆಚ್ಚು ಅಗಲವಿಲ್ಲದ ಉಂಗುರ ಧರಿಸಬೇಕು. 1 ಕೈಗೆ 1 ಉಂಗುರ ಮಾತ್ರ ಧರಿಸಬೇಕು. ಡಿಸೈನ್‌ಗಳಿಲ್ಲದ 1 ಬಳೆ ಮಾತ್ರ ಧರಿಸಬೇಕು ಎಂದು ತನ್ನ ಸಿಬ್ಬಂದಿಗೆ ಸೂಚಿಸಿದೆ.

    Live Tv
    [brid partner=56869869 player=32851 video=960834 autoplay=true]