Tag: AisaCup

  • ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 16 ವರ್ಷ ಪೂರೈಸಿದ ಹಿಟ್‌ಮ್ಯಾನ್

    ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 16 ವರ್ಷ ಪೂರೈಸಿದ ಹಿಟ್‌ಮ್ಯಾನ್

    ಮುಂಬೈ: 20ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎಂಟ್ರಿ ಕೊಟ್ಟ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಬದುಕಿನಲ್ಲಿ ಯಶಸ್ವಿಯಾಗಿ 16 ವರ್ಷ ಪೂರೈಸಿದ್ದಾರೆ.

    2007ರ ಜೂನ್ 23ರಂದು ಭಾರತ ತಂಡದ (Team India) ಹಾಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ನಾಯಕತ್ವದಲ್ಲಿ ಐರ್ಲೆಂಡ್‌ನಲ್ಲಿ ನಡೆದ ಏಕದಿನ ಪಂದ್ಯದ ಮೂಲಕ ರೋಹಿತ್ ಶರ್ಮಾ ಟೀಂ ಇಂಡಿಯಾಕ್ಕೆ ಎಂಟ್ರಿ ಕೊಟ್ಟಿದ್ದರು. ಅಂದು ಬೆಲ್ಫಾಸ್‌ನಲ್ಲಿ ಪೂರ್ಣ ತೋಳಿನ ಜಂಪರ್‌ಗಳಲ್ಲಿ ರೋಹಿತ್ ಕಾಣಿಸಿಕೊಂಡಿದ್ದರು. ಈ ಪಂದ್ಯದಲ್ಲಿ ಭಾರತ ಜಯಭೇರಿ ಬಾರಿಸಿತ್ತು.

    ಇದುವೆರೆಗೆ 441 ಅಂತಾರಾಷ್ಟ್ರೀಯ (International Cricket) ಪಂದ್ಯಗಳನ್ನಾಡಿರುವ ಹಿಟ್‌ಮ್ಯಾನ್, 17,115 ರನ್ ಪೂರೈಸಿದ್ದಾರೆ. 43 ಅಂತಾರಾಷ್ಟ್ರೀಯ ಶತಕಗಳೂ ಇದರಲ್ಲಿ ಸೇರಿವೆ. 36ರ ಹರೆಯದ `ಹಿಟ್ ಮ್ಯಾನ್’ ಈಗ ತಮ್ಮ ವೃತ್ತಿಜೀವನದ ಪ್ರಮುಖ ಹೊಸ್ತಿಲಲ್ಲಿದ್ದಾರೆ. ಇದನ್ನೂ ಓದಿ: ಪೂಜಾರ ಔಟ್‌, ಯಶಸ್ವಿ ಇನ್‌ – ವಿಂಡೀಸ್‌ ಸರಣಿಗೆ ಭಾರತ ಟೆಸ್ಟ್‌, ಏಕದಿನ ತಂಡ ಪ್ರಕಟ

    3 ದ್ವಿಶತಕ ಸಿಡಿಸಿದ ನಂ.1 ಬ್ಯಾಟರ್:
    ಟೀಂ ಇಂಡಿಯಾ ಹಾಲಿ ನಾಯಕನಾಗಿರುವ ರೋಹಿತ್ ಶರ್ಮಾ ಮೂರು ದ್ವಿಶತಕ ಬಾರಿಸಿದ ವಿಶ್ವದ ನಂ.1 ಬ್ಯಾಟ್ಸ್‌ಮ್ಯಾನ್‌ ಸಹ ಆಗಿದ್ದಾರೆ. ಇದನ್ನೂ ಓದಿ: T20 ಕ್ರಿಕೆಟ್‌ನಲ್ಲಿ ಸಿಕ್ಸರ್‌ ಬ್ಲಾಸ್ಟ್‌ – ಒಂದೇ ಓವರ್‌ನಲ್ಲಿ 6,6,6,6,6 ಚಚ್ಚಿದ RCB ಸ್ಟಾರ್‌

    ರೋಹಿತ್ ಶರ್ಮಾ 2013ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ 209 ರನ್ ಗಳಿಸಿದ್ದರು. 2014ರಲ್ಲಿ ಈಡನ್ ಗಾರ್ಡನ್‌ನಲ್ಲಿ ಶ್ರೀಲಂಕಾ ವಿರುದ್ಧ ಅಜೇಯ 264 ರನ್ ಚಚ್ಚಿದ್ದರು. 2017ರಲ್ಲಿ ಮೂರನೇ ಬಾರಿಗೆ ಶ್ರೀಲಂಕಾ ವಿರುದ್ಧವೇ ಮೊಹಾಲಿಯಲ್ಲಿ 208 ರನ್ ಸಿಡಿಸಿದ್ದರು. ಈ ಮೂಲಕ ಮೂರು ಬಾರಿ ದ್ವಿಶತಕ ಸಿಡಿಸಿದ ನಂ.1 ಬ್ಯಾಟ್ಸ್‌ಮ್ಯಾನ್‌ ಎನಿಸಿಕೊಂಡರು.

    ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಇಶಾನ್ ಕಿಶನ್, ಶುಭಮನ್ ಗಿಲ್ ತಲಾ ಒಂದೊಂದು ಬಾರಿ ದ್ವಿಶತಕ ಸಿಡಿಸಿದ್ದಾರೆ.

  • ಮತ್ತೆ ಟೀಂ ಇಂಡಿಯಾ ಸೇರಲಿದ್ದಾರೆ ಜಡೇಜಾ

    ಮತ್ತೆ ಟೀಂ ಇಂಡಿಯಾ ಸೇರಲಿದ್ದಾರೆ ಜಡೇಜಾ

    ಮುಂಬೈ: ಮೊಣಕಾಲು ಗಾಯಕ್ಕೆ ತುತ್ತಾಗಿದ್ದ ಟೀಂ ಇಂಡಿಯಾದ (Team India) ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಮತ್ತೆ ಟೀಂ ಇಂಡಿಯಾಕ್ಕೆ ಮರಳುತ್ತಿದ್ದಾರೆ.

    ಬಾಂಗ್ಲಾದೇಶದ (Bangladesh) ವಿರುದ್ಧ ಡಿಸೆಂಬರ್‌ನಲ್ಲಿ ನಡೆಯಲಿರುವ ಟೆಸ್ಟ್ (Test Cricket) ಹಾಗೂ ಏಕದಿನ ಸರಣಿ ಮೂಲಕ ತಂಡಕ್ಕೆ ಮರಳಲಿದ್ದಾರೆ. ಈ ಬಗ್ಗೆ ಬಿಸಿಸಿಐ (BCCI) ಅಧಿಕೃತವಾಗಿ ತಿಳಿಸಿದೆ. ಇದನ್ನೂ ಓದಿ: ದುಬೈನಲ್ಲಿ ರವೀಂದ್ರ ಜಡೇಜಾ ಎಡವಟ್ಟು – BCCI ಕೆಂಡಾಮಂಡಲ

    ಹೌದು. ಏಷ್ಯಾಕಪ್‌ನ (AisaCup2022) ಮೊದಲೆರಡು ಪಂದ್ಯಗಳಲ್ಲಿ ಆಲ್‌ರೌಂಡರ್ ಆಟವಾಡಿದ್ದ ರವೀಂದ್ರ ಜಡೇಜಾ ನಂತರ ಮೊಣಕಾಲು ಗಾಯಕ್ಕೆ ತುತ್ತಾದರು. ತಂಡದ ಸ್ಟಾರ್ ಆಟಗಾರನಾಗಿ ಗುರುತಿಸಿಕೊಂಡಿದ್ದ ಜಡೇಜಾ ಗಾಯಗೊಂಡು ಟೂರ್ನಿಯಿಂದ ಹೊರ ನಡೆದರು. ಆ ಬಳಿಕ ಸೋಲಿನತ್ತ ಮುಖ ಮಾಡಿದ ಭಾರತ ಸೂಪರ್ ಫೋರ್ ಹಂತದಲ್ಲೇ ಮುಗ್ಗರಿಸಿ ನಿರಾಸೆ ಮೂಡಿಸಿತ್ತು. ಅಲ್ಲದೇ ಮೊಣಕಾಲಿನ ಗಾಯದ ಸಮಸ್ಯೆಯಿಂದಾಗಿ ವಿಶ್ವಕಪ್‌ನಲ್ಲೂ (T20 WorldCup) ಜಡೇಜಾ ಸ್ಥಾನ ಕಳೆದುಕೊಂಡರು.

    ಇದೀಗ ಶಸ್ತ್ರಚಿಕಿತ್ಸೆಯಿಂದ ಗುಣಮುಖರಾಗಿದ್ದು, ಡಿಸೆಂಬರ್‌ನಲ್ಲಿ ನಡೆಯುವ ಬಾಂಗ್ಲಾದೇಶದ (Bangladesh) ವಿರುದ್ಧದ ಏಕದಿನ ಹಾಗೂ ಟೆಸ್ಟ್ ಸರಣಿಯ ಮೂಲಕ ಮತ್ತೆ ಟೀಂ ಇಂಡಿಯಾಕ್ಕೆ (Team India) ಮರಳಲಿದ್ದಾರೆ. ಇದನ್ನೂ ಓದಿ: ಖಾಸಗಿತನಕ್ಕೆ ಧಕ್ಕೆ ತರಬೇಡಿ – ಹೋಟೆಲ್ ವಿರುದ್ಧ ಕೊಹ್ಲಿ ಕೆಂಡ

    ಬಾಂಗ್ಲಾದೇಶ ವಿರುದ್ಧ ಸೆಣಸುವ ಏಕದಿನ ತಂಡ:
    ರೋಹಿತ್ ಶರ್ಮಾ (ನಾಯಕ) (Rohit Sharma), ಕೆಎಲ್ ರಾಹುಲ್ (KL Rahul) (ಉಪನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ (Virat Kohli), ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಬ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್, ಯಶ್ ದಯಾಳ್.

    ಟೆಸ್ಟ್ ಕ್ರಿಕೆಟ್ ತಂಡ:
    ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್‌ದೀಪ್‌ ಯಾದವ್ , ಶಾರ್ದೂಲ್ ಠಾಕೂರ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.

    Live Tv
    [brid partner=56869869 player=32851 video=960834 autoplay=true]

  • #ArrestKohli: ಫ್ಯಾನ್ಸ್‌ವಾರ್‌ನಲ್ಲಿ ನಡೆದೇ ಹೋಯ್ತು ಕೊಲೆ – ಕಿಂಗ್ ಕೊಹ್ಲಿ ಬಂಧನಕ್ಕೆ ಆಗ್ರಹ

    #ArrestKohli: ಫ್ಯಾನ್ಸ್‌ವಾರ್‌ನಲ್ಲಿ ನಡೆದೇ ಹೋಯ್ತು ಕೊಲೆ – ಕಿಂಗ್ ಕೊಹ್ಲಿ ಬಂಧನಕ್ಕೆ ಆಗ್ರಹ

    ಚೆನ್ನೈ: ಟಿ20 ವಿಶ್ವಕಪ್ (T20 WorldCup) ನಲ್ಲಿ ಪಾಲ್ಗೊಳ್ಳಲು ಆಸ್ಟ್ರೇಲಿಯಾಕ್ಕೆ ಬಂದಿಳಿದಿರುವ ಟೀಂ ಇಂಡಿಯಾ (Team India) ಕಾಂಗರೂ ನಾಡಿನಲ್ಲಿ ಅಭ್ಯಾಸ ಆರಂಭಿಸಿದೆ. ಏಷ್ಯಾಕಪ್ -2022 (AisaCup) ಗ್ರೇಟ್ ಕಂಬ್ಯಾಕ್ ಆಗಿರುವ ವಿರಾಟ್ ಕೊಹ್ಲಿ ಅವರಿಂದ ಭರ್ಜರಿ ರನ್‌ಗಳನ್ನ ಅಭಿಮಾನಿಗಳು ಎದುರುನೋಡುತ್ತಿದ್ದಾರೆ. ಇಂತಹ ಹೊತ್ತಿನಲ್ಲಿ ಕೊಹ್ಲಿಯನ್ನು ಬಂಧಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

    #ArrestKohli ಹ್ಯಾಶ್‌ಟ್ಯಾಗ್‌ನೊಂದಿಗೆ ಅಭಿಯಾನ ಶುರುವಾಗಿದ್ದು, ವಿರಾಟ್ ಕೊಹ್ಲಿ (Virat Kohli) ಅವರನ್ನ ಅರೆಸ್ಟ್ ಮಾಡುವಂತೆ ಒತ್ತಾಯಿಸಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳ ಗಲಾಟೆಯಲ್ಲಿ ಸಂಭವಿಸಿದ ದುರಂತದಿಂದ ಇದೀಗ ಸ್ಟಾರ್‌ಗಳು ತಲೆ ಕೆಡಿಸಿಕೊಳ್ಳುವಂತಾಗಿದೆ. ಇದನ್ನೂ ಓದಿ: ಬಿಸಿಸಿಐಗೆ ಜಿಎಸ್‍ಟಿ ಬರೆ – 2023ರ ವಿಶ್ವಕಪ್‍ಗೂ ಮುನ್ನ 955 ಕೋಟಿ ರೂ. ನಷ್ಟದ ಭೀತಿ

    ಘಟನೆಗೆ ಕಾರಣವೇನು?
    ವಿರಾಟ್ ಕೊಹ್ಲಿ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬಗ್ಗೆ ಸ್ನೇಹಿತರಿಬ್ಬರ ನಡುವೆ ನಡೆದ ಚರ್ಚೆ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ತಮಿಳುನಾಡಿನ (Tamilnadu) ಅರಿಯಾಲೂರ್ ಜಿಲ್ಲೆಯಲ್ಲಿ ನಡೆದಿದೆ. ಆರ್‌ಸಿಬಿ ತಂಡವನ್ನು ಲೇವಡಿ ಮಾಡಿದ್ದ ಕಾರಣಕ್ಕಾಗಿ ಸ್ನೇಹಿತ ಮುಂಬೈ ಇಂಡಿಯನ್ಸ್ ಹಾಗೂ ರೋಹಿತ್ ಶರ್ಮಾ ಅಭಿಮಾನಿಯನ್ನು ಕೊಲೆ ಮಾಡಿದ್ದಾನೆ.  

    ಕೊಲೆ ಆರೋಪಿಯನ್ನು ಈಗಾಗಲೇ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಮದ್ಯ ಸೇವಿಸಿ ಇಬ್ಬರೂ ಸ್ನೇಹಿತರು ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕುರಿತಾಗಿ ಅಭಿಮಾನದಿಂದ ವಾಗ್ವಾದ ಮಾಡುತ್ತಿದ್ದರು. ವಾಗ್ವಾದ ವಿಕೋಪಕ್ಕೆ ತಿರುಗಿ ಧರ್ಮರಾಜ್ ತನ್ನ ಸ್ನೇಹಿತನಾಗಿದ್ದ ವಿಘ್ನೇಶ್‌ನನ್ನು ಬಾಟಲಿಯಿಂದ ಹೊಡೆದು ಸಾಯಿಸಿದ್ದಾನೆ. ಇದನ್ನೂ ಓದಿ: ಲಂಕನ್ನರಿಗೆ ಲಗಾಮು ಹಾಕಿ 7ನೇ ಬಾರಿ ಏಷ್ಯಾಕಪ್ ಗೆದ್ದ ಭಾರತ

    https://twitter.com/its_monk45/status/1580963457742307328

    ಘಟನೆಯ ಬೆನ್ನಲ್ಲೇ ರೋಹಿತ್ ಶರ್ಮಾ ಹಾಗೂ ಮುಂಬೈ ಇಂಡಿಯನ್ಸ್ (Mumbai Indians) ತಂಡದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ (Social Media) ವಿರಾಟ್ ಕೊಹ್ಲಿಯನ್ನು ಬಂಧಿಸಿ ಎನ್ನುವ ಅಭಿಯಾನ ಆರಂಭಿಸಿದ್ದಾರೆ. ಇದಕ್ಕೆ ಕೌಂಟರ್ ನೀಡುವ ಪ್ರಯತ್ನವನ್ನು ಕೊಹ್ಲಿ ಹಾಗೂ ಆರ್‌ಸಿಬಿ ಅಭಿಮಾನಿಗಳು ಮಾಡಿದ್ದಾರೆ.

    ಐಪಿಎಲ್‌ನಲ್ಲಿ (IPL) ಕಾದಾಡುವ ಇದೇ ಆಟಗಾರರು, ಟೀಂ ಇಂಡಿಯಾ ಪರ ಒಟ್ಟಿಗೇ ಕಣಕ್ಕಿಳಿಯುವ ಮೂಲಕ ದೇಶವೇ ಗರ್ವ ಪಡುವಂತಹ ರೀತಿಯಲ್ಲಿ ಆಡುತ್ತಿದ್ದಾರೆ. ಆದರೆ ಹುಟ್ಟು ಅಭಿಮಾನದಿಂದ ಆಗಿರುವ ಘಟನೆ ಸ್ಟಾರ್ ಕ್ರಿಕೆಟಿಗರಿಗೆ ತಲೆನೋವುಂಟು ಮಾಡಿದೆ.

    Live Tv
    [brid partner=56869869 player=32851 video=960834 autoplay=true]