Tag: Aishwarya Gowda

  • ಐಶ್ವರ್ಯ ಕೇಸಲ್ಲೀಗ ಪೊಲೀಸರಿಗೆ ಸಿಡಿಆರ್‌ ಸಂಕಷ್ಟ – ಎಸಿಪಿ ಚಂದನ್‌ಗೆ ಹೆಗಲಿಗೆ ತನಿಖೆ ಹೊಣೆ

    ಐಶ್ವರ್ಯ ಕೇಸಲ್ಲೀಗ ಪೊಲೀಸರಿಗೆ ಸಿಡಿಆರ್‌ ಸಂಕಷ್ಟ – ಎಸಿಪಿ ಚಂದನ್‌ಗೆ ಹೆಗಲಿಗೆ ತನಿಖೆ ಹೊಣೆ

    ಬೆಂಗಳೂರು: ಡಿಕೆ ಸುರೇಶ್ (DK Suresh) ಸಹೋದರಿ ಅಂತಾ ಕೋಟಿ ಕೋಟಿ ವಂಚನೆ ಮಾಡಿದ ಪ್ರಕರಣದ ಸಂಬಂಧ ಆರೋಪಿಯಾಗಿರುವ ಐಶ್ವರ್ಯಗೌಡ (Aishwarya Gowda) ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ.

    ನಾಲ್ವರ ಸಿಡಿಆರ್ ಪಡೆದುಕೊಂಡ ಸಂಬಂಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ, ಸಿಡಿಆರ್ ಪಡೆದ ಪ್ರಕರಣದ ತನಿಖೆಗಾಗಿಯೇ ಹೊಸ ತನಿಖಾಧಿಕಾರಿಯನ್ನು ನೇಮಕ ಮಾಡಲಾಗಿದೆ. ಎಸಿಪಿ ಚಂದನ್ ಕುಮಾರ್ (ACP Chandan) ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ಪ್ರಾಥಮಿಕ ತನಿಖೆಯಲ್ಲಿ ಐಶ್ವರ್ಯಗೌಡ ರಾಮನಗರದ ಹಲವು ರಾಜಕೀಯ ಮುಖಂಡರ ಸಿಡಿಆರ್ ಕಲೆಕ್ಟ್ ಮಾಡಿರೋದು ಗೊತ್ತಾಗಿದೆ. ಇದನ್ನೂ ಓದಿ: ಶಾರ್ಟ್‌ಕಟ್‌ ರಾಜಕೀಯಕ್ಕೆ ಜನರು ಶಾರ್ಟ್ ಸರ್ಕ್ಯೂಟ್ ನೀಡಿದ್ದಾರೆ – ಇದು ವಿಕಾಸದ ಗೆಲುವು ಎಂದ ಮೋದಿ

    ಇದಕ್ಕೆ ಕೆಲ ಪೊಲೀಸ್ ಅಧಿಕಾರಿಗಳನ್ನು ಕೂಡ ಬಳಸಿಕೊಂಡು ಅವರ ಜೊತೆಗೆ ಹಣದ ವ್ಯವಹಾರ ನಡೆಸಿದ್ದಾಳೆ. ಯಾವುದೇ ಪ್ರಕರಣದ ತನಿಖಾಧಿಕಾರಿಗೆ ಮಾತ್ರ ಸಿಡಿಆರ್ ಪಡೆಯುವ ಅಧಿಕಾರವಿದ್ದು, ಐಶ್ವರ್ಯಗೌಡ ಹೇಗೆ ರಾಜಕೀಯ ಮುಖಂಡರ ಸಿಡಿಆರ್ ಪಡೆದುಕೊಂಡಿದ್ದಾಳೆ. ಅದನ್ನು ಹೇಗೆ ಯಾವ ಕಾರಣಕ್ಕೆ ಬಳಸಿಕೊಳ್ತದ್ಲು ಅನ್ನೋ ಅನುಮಾನ ಪೊಲೀಸರನ್ನ ಕಾಡಿದೆ. ಇದೇ ಕಾರಣಕ್ಕೆ ಎಸಿಪಿ ಚಂದನ್ ಕುಮಾರ್ ನೇತೃತ್ವದಲ್ಲಿ ಸಿಡಿಆರ್ ಪ್ರಕರಣವನ್ನೇ ಪ್ರತ್ಯಕವಾಗಿ ತನಿಖೆಗೆ ಆದೇಶ ನೀಡಲಾಗಿದೆ.  ಇದನ್ನೂ ಓದಿ: ಕೇಜ್ರಿ`ವಾಲ್’ ಛಿದ್ರಗೊಳಿಸಿದ ಮೋದಿ-ಶಾ ಜೋಡಿಯ ಸಾಮ, ದಾನ, ಬೇಧ, ದಂಡ ತಂತ್ರ?

    ಎಸಿಪಿ ಚಂದನ್‌ಗೆ ತನಿಖೆ ಹೊಣೆ:
    ಅಕ್ರಮವಾಗಿ ಸಿಡಿಆರ್‌ ಪಡೆದ ಪ್ರಕರಣದ ತನಿಖೆಯನ್ನು ವಿಜಯನಗರ ಉಪ ವಿಭಾಗದ ಎಸಿಪಿ ಚಂದನ್‌ ಕುಮಾರ್‌ ಅವರಿಗೆ ಪಶ್ಚಿಮ ವಿಭಾಗದ ಡಿಸಿಪಿ ಎಸ್‌. ಗಿರೀಶ್‌ ವಹಿಸಿದ್ದಾರೆ. ಬ್ಯಾಟರಾಯನಪುರ ಉಪ ವಿಭಾಗದ ಎಸಿಪಿ ದೂರುದಾರರಾಗುರುವ ಕಾರಣ ತನಿಖೆ ಹೊಣೆ ಚಂದನ್‌ ಅವರ ಹೆಗಲಿಗೆ ಬಿದ್ದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ ಹಾಗೂ ಅವರ ತಂಡದ ವಿರುದ್ಧ ಎಸಿಪಿ ಚಂದನ್‌ ತನಿಖೆ ನಡೆಸಿದ್ದರು.  ಇದನ್ನೂ ಓದಿ: ಲೋಕಸಭೆಯಲ್ಲಿ ಅಯೋಧ್ಯೆ ಸೋಲಿನ ಸೇಡನ್ನು ತೀರಿಸಿದ ಬಿಜೆಪಿ

  • ಮಂಡ್ಯದಲ್ಲಿ ಮಹಿಳೆಗೆ 33 ಲಕ್ಷ ಪಂಗನಾಮ – ಐಶ್ವರ್ಯಗೌಡ ವಿರುದ್ಧ ಮತ್ತೊಂದು ಎಫ್‌ಐಆರ್‌

    ಮಂಡ್ಯದಲ್ಲಿ ಮಹಿಳೆಗೆ 33 ಲಕ್ಷ ಪಂಗನಾಮ – ಐಶ್ವರ್ಯಗೌಡ ವಿರುದ್ಧ ಮತ್ತೊಂದು ಎಫ್‌ಐಆರ್‌

    ಮಂಡ್ಯ: ವಂಚಕಿ ಐಶ್ವರ್ಯಗೌಡ (Aishwarya Gowda) ವಿರುದ್ಧ ಮೇಲಿಂದ ಮೇಲೆ ಎಫ್‌ಐಆರ್‌ ದಾಖಲಾಗುತ್ತಲೇ ಇವೆ. 2 ದಿನಗಳ ಹಿಂದೆಯಷ್ಟೇ ಬೆಂಗಳೂರಿನ ಆರ್‌.ಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ವಂಚನೆ ಪ್ರಕರಣದಲ್ಲಿ ಐಶ್ವರ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಇದೀಗ ಮಂಡ್ಯದಲ್ಲಿ (Mandya) ಮತ್ತೊಂದು ಎಫ್‌ಐಆರ್‌ (FIR) ದಾಖಲಾಗಿದೆ.

    ಇಲ್ಲಿನ ಚಾಮುಂಡೇಶ್ವರಿನಗರದ ನಿವಾಸಿ ಭಾಗ್ಯಮ್ಮ ಎಂಬುವವರು ತಮಗೂ ವಂಚನೆ ಮಾಡಿರುವುದಾಗಿ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಮೇರೆಗೆ ಐಶ್ವರ್ಯಗೌಡ ವಿರುದ್ಧ ಐಪಿಸಿ ಸೆಕ್ಷನ್ 406, 420, 417, 120ಬಿ, 540, 34ರ ಅಡಿ ಕೇಸ್ ದಾಖಲಾಗಿದೆ. ನವ್ಯಶ್ರೀ ಅಲಿಯಾಸ್ ಐಶ್ವರ್ಯಗೌಡ, ಪತಿ ಹರೀಶ್, ಸಹೋದರ ಮಂಜುನಾಥ್ ಹಾಗೂ ಯಶವಂತ್ ಎಂಬುವರ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 1 ಕೋಟಿಗೂ ಅಧಿಕ ವಂಚನೆ – ಐಶ್ವರ್ಯಗೌಡ, ಪತಿ ಸೇರಿ 7 ಮಂದಿ ವಿರುದ್ಧ ಕೇಸ್‌ ದಾಖಲು

    ದೂರಿನಲ್ಲಿ ಏನಿದೆ?
    2017ರ ಜನವರಿಯಿಂದ ಜೂನ್‌ ತಿಂಗಳ ಅವಧಿಯಲ್ಲಿ ರಿಯಲ್ ಎಸ್ಟೇಟ್ ಹಾಗೂ ಚೀಟಿ ವ್ಯವಹಾರ ಮಾಡುವುದಾಗಿ ಐಶ್ವರ್ಯ ನಂಬಿಸಿದ್ದಾಳೆ. ಒಟ್ಟು 33 ಲಕ್ಷ ರೂ. ನಗದು ಹಾಗೂ 366 ಗ್ರಾಂ ಚಿನ್ನದ ಒಡವೆಗಳನ್ನ ಪಡೆದುಕೊಂಡಿದ್ದಾಳೆ. ಇದು ತನ್ನ ಮೃತ ಗಂಡನ ನಿವೃತ್ತಿಯ ಹಣ ಅಂತ ಭಾಗ್ಯಮ್ಮ ಹೇಳಿಕೊಂಡಿದ್ದಾಳೆ. 1 ಲಕ್ಷಕ್ಕೆ 10 ಪರ್ಸೆಂಟ್‌ ಬಡ್ಡಿ ಹಣ ನೀಡುವುದಾಗಿ ಆಮಿಷ ಒಡ್ಡಿ ಹಣ ಪಡೆದ ಐಶ್ವರ್ಯ ವಂಚನೆ ಎಸಗಿದ್ದಾಳೆ ಎಂದು ದೂರಿನಲ್ಲಿ ಭಾಗ್ಯಮ್ಮ ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆಯಲ್ಲಿ ಸಂಚರಿಸೋದಕ್ಕೂ ಸುಂಕ ಕಟ್ಟಬೇಕೆ? – ಟ್ರಾಫಿಕ್‌ ನಿಯಂತ್ರಣಕ್ಕೆ ಹೊಸ ಸೂತ್ರ – ಏನಿದು ದೆಹಲಿ ಸರ್ಕಾರದ ಪ್ಲ್ಯಾನ್‌?

    ಈಗಾಗಲೇ ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ರವಿಕುಮಾರ್ ಹಾಗೂ ಪೂರ್ಣಿಮಾ ಎಂಬುವವರು ನೀಡಿದ ದೂರಿನ ಮೇರೆಗೆ ಕೇಸ್‌ ದಾಖಲಾಗಿದೆ. 55 ಲಕ್ಷ ನಗದು ಹಾಗೂ ಚಿನ್ನಾಭರಣ ಪಡೆದು ವಂಚನೆ ಮಾಡಿರುವುದಾಗಿ ಕೇಸ್ ದಾಖಲಾಗಿದೆ.

    ಈ ಮಧ್ಯೆ ಸೋಮವಾರ ಪೊಲೀಸರು ನೋಟೀಸ್ ನೀಡಿದ್ರೂ ವಂಚಕಿ ಐಶ್ವರ್ಯಗೌಡ ವಿಚಾರಣೆಗೆ ಹಾಜರಾಗಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬೆಂಬಲ ತೊಗರಿ ಖರೀದಿ ಶುರು – ಜಿಲ್ಲೆಯಾದ್ಯಂತ 177 ಖರೀದಿ ಕೇಂದ್ರ ಸ್ಥಾಪನೆ

  • 1 ಕೋಟಿಗೂ ಅಧಿಕ ವಂಚನೆ – ಐಶ್ವರ್ಯಗೌಡ, ಪತಿ ಸೇರಿ 7 ಮಂದಿ ವಿರುದ್ಧ ಕೇಸ್‌ ದಾಖಲು

    1 ಕೋಟಿಗೂ ಅಧಿಕ ವಂಚನೆ – ಐಶ್ವರ್ಯಗೌಡ, ಪತಿ ಸೇರಿ 7 ಮಂದಿ ವಿರುದ್ಧ ಕೇಸ್‌ ದಾಖಲು

    ಬೆಂಗಳೂರು: ಡಿ.ಕೆ ಸುರೇಶ್ ( DK Suresh) ತಂಗಿ ಹೆಸರೇಳಿ 1 ಕೋಟಿ ರೂ.ಗಿಂತಲೂ ಅಧಿಕ ಹಣ ವಂಚನೆ ಮಾಡಿರುವ ಆರೋಪದ ಮೇಲೆ ಐಶ್ವರ್ಯಗೌಡ (Aishwarya Gowda) ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

    ಮೂಲತಃ ವೈದ್ಯರಾದ ಡಾ.ದಯಾನಂದ ಲಿಂಗೇಗೌಡ ಅವರಿಗೆ ವಂಚನೆ ಮಾಡಿರುವುದಾಗಿ ಆರ್‌.ಆರ್‌ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಶ್ವರ್ಯಗೌಡ, ಪತಿ ಹರೀಶ್‌ ಸೇರಿ 7 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ಇದನ್ನೂ ಓದು: ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬರೀ ಊಹಾಪೋಹ, ಯಾವುದೇ ಚರ್ಚೆ ನಡೆದಿಲ್ಲ – ಶರಣಪ್ರಕಾಶ್ ಪಾಟೀಲ್

    ದೂರಿನಲ್ಲಿ ಏನಿದೆ?
    ಸ್ನೇಹಿತ ಟಿ.ಪಿ ರಮೇಶ್‌ ಮೂಲಕ ಐಶ್ವರ್ಯಗೌಡ ಪರಿಚಯವಾಗಿದ್ದರು, ಈ ವೇಳೆ ತಾನು ಡಿ.ಕೆ ಸುರೇಶ್‌ ತಂಗಿ ಅಂತ ಹೇಳಿ ವಂಚನೆ ಮಾಡಿದ್ದಾರೆ ಎಂಬುದಾಗಿ ಆರ್.ಆರ್‌ ನಗರ ಪೊಲೀಸ್‌ ಠಾಣೆಗೆ ದಯಾನಂದ ಲಿಂಗೇಗೌಡ ದೂರು ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜ್ಯದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿದ ಸಿಎಂ – ಜನಾರ್ದನ ರೆಡ್ಡಿ ಲೇವಡಿ

    ಹೊಸದಾಗಿ ಕಂಪನಿ ತೆರೆದಿದ್ದೇವೆ. ಅದಕ್ಕೆ ಡಿ.ಕೆ ಸುರೇಶ್‌ ಅವರೇ ಪಾಲುದಾರರು ಅಂತ ನಂಬಿಸಿದ್ದಾರೆ. ನಮ್ಮ ಕಂಪನಿಯಲ್ಲಿ ಠೇವಣಿ ಹೂಡಿದ್ರೆ ಒಳ್ಳೆ ಲಾಭ ಬರುತ್ತೆ. ಜೊತೆಗೆ ಸಿನಿಮಾ, ಸಿರೀಯಲ್‌ಗಳಿಗೂ ಹಣ ಹೂಡಿಕೆ ಮಾಡ್ತೀವಿ ಅಂತ ಆಮಿಷ ಒಡ್ಡಿದ್ದಾರೆ. ತಾನು ಡಿ.ಕೆ ಸುರೇಶ್‌ ತಂಗಿ ಅಂತ ಹೇಳಿ, 1 ಕೋಟಿಗೂ ಅಧಿಕ ಹಣ ವಂಚನೆ ಮಾಡಿದ್ದಾರೆ. ಹಣ ಕೇಳಲು ಹೋದಾಗಲೆಲ್ಲ ಬೆದರಿಕೆ ಹಾಕುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

  • ವೈದ್ಯೆಯಿಂದ 2.52 ಕೋಟಿ ರೂ., 2.350 ಕೆಜಿ ಚಿನ್ನ ಪಡೆದು ವಂಚನೆ – ಐಶ್ವರ್ಯಗೌಡ ಮೇಲೆ ಮತ್ತೊಂದು ಎಫ್‌ಐಆರ್

    ವೈದ್ಯೆಯಿಂದ 2.52 ಕೋಟಿ ರೂ., 2.350 ಕೆಜಿ ಚಿನ್ನ ಪಡೆದು ವಂಚನೆ – ಐಶ್ವರ್ಯಗೌಡ ಮೇಲೆ ಮತ್ತೊಂದು ಎಫ್‌ಐಆರ್

    ಬೆಂಗಳೂರು: ಡಿ.ಕೆ ಸುರೇಶ್ ( DK Suresh) ತಂಗಿ ಹೆಸರೇಳಿ ವಂಚನೆ ಮಾಡಿದ್ದ ಐಶ್ವರ್ಯಗೌಡ ಮೇಲೆ ಇದೀಗ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

    ಸ್ತ್ರೀ ರೋಗ ತಜ್ಞೆ ಮಂಜುಳ ಪಾಟೀಲ್ ಅವರಿಗೂ ಕೂಡ ಐಶ್ವರ್ಯಗೌಡ ವಂಚನೆ ಮಾಡಿರುವುದಾಗಿ ಆರ್‌ಆರ್ ನಗರ (RR Nagar) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಇದನ್ನೂ ಓದಿ:ಬೆಂಗ್ಳೂರಿಂದ ಕುಂಭಮೇಳಕ್ಕೆ ಹೋಗ್ಬೇಕಾ? – ನಿಮಗಾಗಿಯೇ ಹೊರಡಲಿದೆ ವಿಶೇಷ ರೈಲು

    ವೈದ್ಯೆ ಮಂಜುಳ ಪಾಟೀಲ್ ಅವರ ಕ್ಲಿನಿಕ್‌ಗೆ ಬಂದು ಐಶ್ವರ್ಯಗೌಡ ತಾನು ಡಿಕೆ ಸುರೇಶ್ ತಂಗಿ ಎಂದು ಹೇಳಿ ವೈದ್ಯೆಯನ್ನು ಪರಿಚಯ ಮಾಡಿಕೊಂಡಿದ್ದರು. ಜೊತೆಗೆ ಗೋಲ್ಡ್ ಬಿಸಿನೆಸ್, ಕೆಸಿನೊ, ಹಾಗೂ ದೊಡ್ಡ ಮಟ್ಟದಲ್ಲಿ ಬಿಸಿನೆಸ್ ಮಾಡುತ್ತಿರುವುದಾಗಿ ತಿಳಿಸಿದ್ದಳು. 2022ರಿಂದ ಹಂತ ಹಂತವಾಗಿ ಹೂಡಿಕೆ ನೆಪದಲ್ಲಿ ಐಶ್ವರ್ಯಾಗೌಡ ಹಣ ಪಡೆದಿರುತ್ತಾಳೆ. ಒಟ್ಟು 2.52 ಕೋಟಿ ಹಣ ಹಾಗೂ 2.350 ಕೆಜಿ ಚಿನ್ನಾಭರಣ ಪಡೆದು ವಂಚನೆ ಮಾಡಿದ್ದಾಳೆ ಎಂದು ವೈದ್ಯೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಚಂದ್ರಲೇಔಟ್‌ನಲ್ಲಿ (Chandralayout) ಎಫ್‌ಐಆರ್ ದಾಖಲಾಗಿದ್ದ ಬಗ್ಗೆ ತಿಳಿದು ವೈದ್ಯೆ ಶಾಕ್‌ಗೆ ಒಳಗಾಗಿದ್ದರು. ಬಳಿಕ ವೈದ್ಯೆ ಮನೆ ಬಳಿ ಹೋಗಿ ಐಶ್ವರ್ಯ ಡ್ರೈವರ್ ಧನಂಜಯ್ಯ ಐಶ್ವರ್ಯಾಗೆ ಕಾಲ್ ಮಾಡಿ ಕೊಟ್ಟಿದ್ದ. ಕೊಟ್ಟಿರುವ ಹಣದ ಬಗ್ಗೆ ದೂರು ಕೊಟ್ಟರೆ ಸರಿ ಇರಲ್ಲ ಎಂದು ಫೋನ್‌ನಲ್ಲಿ ಐಶ್ವರ್ಯಾ ಬೆದರಿಕೆ ಹಾಕಿದ್ದರು. ಜೊತೆಗೆ ಹಣ ಕೇಳಲು ಮನೆ ಬಳಿ ಹೋದಾಗಲೂ ಕೂಡ ಐಶ್ವರ್ಯ ಡ್ರೈವರ್‌ಗಳಾದ ಅಶ್ವಥ್ ಹಾಗೂ ಧನಂಜಯ್ಯ ಬೆದರಿಕೆ ಹಾಕಿದ್ದರು.

    ಸದ್ಯ ಈ ಸಂಬಂಧ ಆರ್‌ಆರ್‌ನಗರ ಪೊಲೀಸ್ ಠಾಣೆಯಲ್ಲಿ ಐಶ್ವರ್ಯಗೌಡ ಹಾಗು ಇಬ್ಬರು ಡ್ರೈವರ್‌ಗಳಾದ ಅಶ್ವಥ್ ಗೌಡ ಹಾಗೂ ಧನಂಜಯ್ಯನ ವಿರುದ್ಧ ಎಫ್‌ಐಆಆರ್ ದಾಖಲಾಗಿದೆ.ಇದನ್ನೂ ಓದಿ: ಸಂಬಳ ಬೇಕೇ, ಹಾಗಾದ್ರೆ ಕಮೀಷನ್‌ ಕೊಡಿ – ಇಂಧನ ಇಲಾಖೆಯ ಹೊರಗುತ್ತಿಗೆ ಸಿಬ್ಬಂದಿಗೆ ಗುತ್ತಿಗೆದಾರರ ಕಾಟ

  • ಮಂಡ್ಯದಲ್ಲಿ ಐಶ್ವರ್ಯ ಗೌಡಳಿಂದ ವಂಚನೆಗೆ ಒಳಗಾಗಿದ್ರೆ ದೂರು ನೀಡಿ: ಎಸ್ಪಿ

    ಮಂಡ್ಯದಲ್ಲಿ ಐಶ್ವರ್ಯ ಗೌಡಳಿಂದ ವಂಚನೆಗೆ ಒಳಗಾಗಿದ್ರೆ ದೂರು ನೀಡಿ: ಎಸ್ಪಿ

    ಮಂಡ್ಯ: 9 ಕೋಟಿ ರೂ. ಚಿನ್ನ ವಂಚನೆ ಪ್ರಕರಣದಲ್ಲಿ ಜೈಲು ಸೇರಿ ಇದೀಗ ಜಾಮೀನಿನ ಮೇಲೆ ಹೊರಗೆ ಬಂದಿರುವ ಐಶ್ವರ್ಯ ಗೌಡ (Aishwarya Gowda) ವಿರುದ್ಧ ಮತ್ತೆ ಸಾಲುಸಾಲು ದೂರುಗಳು ದಾಖಲಾಗುತ್ತಿವೆ. ಈ ಹಿನ್ನೆಲೆ ಸ್ವತಃ ಮಂಡ್ಯ ಎಸ್ಪಿ (Mandya SP) ಮಲ್ಲಿಕಾರ್ಜುನ ಬಾಲದಂಡಿ, ಐಶ್ವರ್ಯ ಗೌಡರಿಂದ ಏನಾದರೂ ಜನರು ವಂಚನೆಗೆ ಒಳಗಾಗಿದ್ದರೆ ಧೈರ್ಯದಿಂದ ದೂರು ನೀಡವಂತೆ ಮನವಿ ಮಾಡಿದ್ದಾರೆ.

    ನಾನು ಡಿ.ಕೆ.ಸುರೇಶ್‌ಗೆ ತಂಗಿ, ನಿಖಿಲ್ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಅವರು ನನಗೆ ತುಂಬಾ ಪರಿಚಯ. ನಿಮಗೆ ಏನಾದರೂ ಕೆಲಸ ಆಗಬೇಕಿದ್ದರೆ ಹೇಳಿ, ನಾನು ಅವರಿಂದ ಮಾಡಿಸಿಕೊಡುತ್ತೇನೆ. ಹೀಗೆ ಬಣ್ಣಬಣ್ಣದ ಮಾತಿನಿಂದ ಜನರನ್ನು ಯಾಮಾರಿಸಿ ಕೋಟ್ಯಂತರ ರೂ. ವಂಚನೆ ಮಾಡಿರುವ ಆರೋಪ ಚಾಲಾಕಿ ಐಶ್ವರ್ಯ ಗೌಡಳ ಮೇಲೆ ಬಂದಿದೆ. ಕೇವಲ ಬೆಂಗಳೂರು ಮಾತ್ರವಲ್ಲ, ಮಂಡ್ಯದಲ್ಲೂ ಸಹ ಖತರ್ನಾಕ್ ಐಶ್ವರ್ಯ ಗೌಡ ಉರುಫ್ ನವ್ಯಶ್ರೀ ವಿರುದ್ಧ ಪ್ರಕರಣ ದಾಖಲಾಗುತ್ತಿವೆ. ಇದನ್ನೂ ಓದಿ: ಉಡುಪಿ| ಗ್ರಾಪಂ ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯಿಂದ ಪ್ರಾರ್ಥನೆ – ಹಿಂದೂ ಸಂಘಟನೆಗಳ ಅಸಮಾಧಾನ

    ಐಶ್ವರ್ಯಗೌಡ ವಿರುದ್ಧ ಕೆಲವರು ಈಗಾಗಲೇ ದೂರು ನೀಡಿದ್ದರೆ, ಇನ್ನೂ ಹಲವರು ಎಸ್ಪಿ ಕಚೇರಿ ಹಾಗೂ ಜಿಲ್ಲೆಯ ಪೊಲೀಸ್ ಠಾಣೆಗಳಿಗೆ ತೆರಳಿ ಐಶ್ವರ್ಯ ಗೌಡ ವಿರುದ್ಧ ದೂರು ನೀಡಲು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಸೂಕ್ತ ದಾಖಲೆಗಳನ್ನು ತಂದು ದೂರು ದಾಖಲಿಸಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಏರ್‌ಪೋರ್ಟ್ ರಸ್ತೆ ಸವಾರರಿಗೆ ಗುಡ್‌ನ್ಯೂಸ್ – ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಬಿಬಿಎಂಪಿ ಸಜ್ಜು

  • ಗೋಲ್ಡ್‌ ವಂಚಕಿ ಐಶೂಗೆ ಡಿಕೆಸು ಮಾತ್ರವಲ್ಲ ಜೆಡಿಎಸ್‌ ನಾಯಕರೂ ಪರಿಚಯ?

    ಗೋಲ್ಡ್‌ ವಂಚಕಿ ಐಶೂಗೆ ಡಿಕೆಸು ಮಾತ್ರವಲ್ಲ ಜೆಡಿಎಸ್‌ ನಾಯಕರೂ ಪರಿಚಯ?

    ಮಂಡ್ಯ: ಮಾಜಿ ಸಂಸದ ಡಿ.ಕೆ.ಸುರೇಶ್ ತಂಗಿ ಎಂದು ಹೇಳಿಕೊಂಡು 9 ಕೋಟಿ ರೂ. ಮೌಲ್ಯದ ಚಿನ್ನ ಪಡೆದು ವಂಚಿಸಿದ ಆರೋಪ ಎದುರಿಸುತ್ತಿರುವ ಐಶ್ವರ್ಯಗೌಡ, ತನಗೆ ಮಾಜಿ ಸಿಎಂ ಕುಮಾರಸ್ವಾಮಿಯ  (H.D Kumaraswamy) ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿಯೂ (Nikhil Kumaraswamy) ಬಹಳಷ್ಟು ಪರಿಚಿತರು ಎಂದು ಹೇಳಿಕೊಂಡಿರುವುದು ಬೆಳಿಕಿಗೆ ಬಂದಿದೆ.

    ಪೂರ್ಣಿಮಾ ಎಂಬವರಿಂದ 100 ಗ್ರಾಂ ಚಿನ್ನದ ಜೊತೆ 15 ಲಕ್ಷ ರೂ. ಹಣ ಪಡೆದು ವಂಚಿಸಿದ ಆರೋಪ ಐಶ್ವರ್ಯ ಮೇಲಿದೆ. ಇಂದು ನಾಳೆ ವಾಪಸ್ಸು ಕೊಡ್ತೀನಿ ಎಂದು ಸತಾಯಿಸಿದ್ದಾಳೆ.‌ ಅಲ್ಲದೇ ಹಣ ಪಡೆಯುವ ಮುನ್ನ ನಾನು‌ ಡಿ.ಕೆ.ಸುರೇಶ್ ತಂಗಿ ಎಂದು ಐಶ್ವರ್ಯ ಪರಿಚಯ ಮಾಡಿಕೊಂಡ ಬಗ್ಗೆಯೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲದೇ ತನಗೆ ಹೆಚ್‌ಡಿಕೆ ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿಯೂ ಬಹಳಷ್ಟು ಪರಿಚಿತರು ಎಂದು ಬಿಲ್ಡಪ್ ಕೂಡ ಕೊಟ್ಟಿದ್ದಾಳೆ. ಈ ಕುರಿತು ಐಶ್ವರ್ಯಗೌಡ ವಿರುದ್ಧ ಮಂಡ್ಯ ಪೂರ್ವ ಠಾಣೆಯಲ್ಲಿ ರವಿಕುಮಾರ್ ಹಾಗೂ ಪೂರ್ಣಿಮಾ ಸಲ್ಲಿಸಿರುವ ದೂರಿನಲ್ಲಿ ಉಲ್ಲೇಖವಾಗಿದೆ.

    ಅನಿತಾ ಕುಮಾರಸ್ವಾಮಿ, ನಿಖಿಲ್ ಇಬ್ಬರೂ ಬಹಳಷ್ಟು ಪರಿಚಿತರು. ನಿಮಗೆ ಅವರ ಕಡೆಯಿಂದ ಸಹಾಯ ಬೇಕಿದ್ರೆ ನನಗೆ ಹೇಳಿ. ನಾನು ನಿಮಗೆ ಸಹಾಯ ಮಾಡ್ತೇನೆ ಎಂದು ಐಶ್ವರ್ಯಗೌಡ ಹೇಳಿದ್ದಳಂತೆ. ಆ ರೀತಿ ಹೇಳಿಯೆ ನಮ್ಮನ್ನ ನಂಬಿಸಿ ನಮ್ಮ ಬಳಿ ಹಂತ ಹಂತವಾಗಿ 40 ಲಕ್ಷ ರೂ. ಹಾಗೂ ಪೂರ್ಣಿಮಾ ಬಳಿಯೂ ಹಣ, ಚಿನ್ನ ಪಡೆದಿದ್ದಳು. ಈಗ ಹಣ ವಾಪಸ್ಸು ನೀಡದೇ ಮೋಸ ಮಾಡಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದಾರೆ‌.

    ಐಶ್ವರ್ಯ ಕಾಂಗ್ರೆಸ್ ನಾಯಕರ ಹೆಸರನ್ನಷ್ಟೇ ಅಲ್ಲ ಜೆಡಿಎಸ್ ಹೆಸರನ್ನೂ ದುರುಪಯೋಗ ಪಡಿಸಿಕೊಂಡಿದ್ದಾಳೆ ಎಂಬುದು ಈಗ ತಿಳಿದು ಬರುತ್ತಿದೆ.

  • ಚುನಾವಣೆಯಲ್ಲಿ ʻಕೈʼ ಶಾಸಕ ನರೇಂದ್ರಸ್ವಾಮಿಗೆ ಐಶ್ವರ್ಯಗೌಡ ಹಣ ನೀಡಿದ್ದಾರೆ: ಅನ್ನದಾನಿ ಬಾಂಬ್‌

    ಚುನಾವಣೆಯಲ್ಲಿ ʻಕೈʼ ಶಾಸಕ ನರೇಂದ್ರಸ್ವಾಮಿಗೆ ಐಶ್ವರ್ಯಗೌಡ ಹಣ ನೀಡಿದ್ದಾರೆ: ಅನ್ನದಾನಿ ಬಾಂಬ್‌

    – ಐಶ್ವರ್ಯಗೌಡರನ್ನ ಮಂಪರು ಪರೀಕ್ಷೆಗೆ ಒಳಪಡಿಸುವಂತೆ ಆಗ್ರಹ

    ಮಂಡ್ಯ: ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಐಶ್ವರ್ಯಗೌಡ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿಯ ಶಾಸಕ ನರೇಂದ್ರಸ್ವಾಮಿ (Narendra Swamy) ಅವರಿಗೆ ಹಣ ನೀಡಿದ್ದಾರೆ ಎಂದು ಮಾಜಿ ಶಾಸಕ ಅನ್ನದಾನಿ (K Annadani) ಗಂಭೀರ ಆರೋಪ ಮಾಡಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಐಶ್ವರ್ಯಗೌಡ (Aishwarya Gowda) ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದವರು. ಈಕೆ ಮಂಡ್ಯ ಜಿಲ್ಲೆಯಲ್ಲೂ ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ. ಅಮಾಯಕರನ್ನ ನಂಬಿಸಿ ಅವರಿಗೆ ಮೋಸ ಮಾಡಿದ್ದಾರೆ. ಈಕೆಯ ಈ ಮೋಸದ ಜಾಲಕ್ಕೆ ಕಾಂಗ್ರೆಸ್‌ನ ಒಂದಷ್ಟು ಮುಖಂಡರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ದೂರಿದ್ದಾರೆ. ಇದನ್ನೂ ಓದಿ: ದಾವಣಗೆರೆ| ನ್ಯೂ ಇಯರ್ ಸಂಭ್ರಮದ ದಿನವೇ ಬೈಕ್ ಅಪಘಾತಕ್ಕೆ ಯುವಕ ಬಲಿ – ಮತ್ತೋರ್ವ ಗಂಭೀರ

    ಈ ಹಿಂದೆ ಸಾಕಷ್ಟು ಜನ ಐಶ್ವರ್ಯಗೌಡ ವಿರುದ್ಧ ವಂಚನೆಯ ಸಂಬಂಧ ದೂರು‌ ನೀಡಲು ಪೊಲೀಸ್ ಠಾಣೆಗೆ ಹೋಗಿದ್ದರು. ಆದ್ರೆ ಪೊಲೀಸರು ದೂರನ್ನು ಸ್ವೀಕಾರ ಮಾಡಿಯೇ ಇಲ್ಲ. ಇದಕ್ಕೆ ಐಶ್ವರ್ಯಗೌಡ ಹಿಂದಿರುವ ಕಾಂಗ್ರೆಸ್ ನಾಯಕರು ಕಾರಣ ಎಂದಿದ್ದಾರೆ. ಇದನ್ನೂ ಓದಿ: ದೇಗುಲದಲ್ಲಿ ಪುರುಷರು ಶರ್ಟ್ ತೆಗೆಯುವ ಪದ್ಧತಿ ಅನಿಷ್ಟ – ಶಿವಗಿರಿ ಶ್ರೀ

    ಸದ್ಯ ಮಳವಳ್ಳಿ ಶಾಸಕರಾಗಿರುವ ನರೇಂದ್ರಸ್ವಾಮಿಗೆ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಐಶ್ವರ್ಯಗೌಡ ಫಂಡಿಂಗ್‌ ಮಾಡಿದ್ದಾರೆ. ಐಶ್ವರ್ಯಗೌಡರನ್ನ ಮಂಪರು ಪರೀಕ್ಷೆಗೆ ಒಳಪಡಿಸಿದರೆ, ಎಲ್ಲಾ ವಿಚಾರಗಳು ಬೆಳಕಿಗೆ ಬರುತ್ತವೆ. ಐಶ್ವರ್ಯಗೌಡರ ವಂಚನೆ ಪ್ರಕರಣವನ್ನ ಸಿಬಿಐಗೆ ನೀಡಬೇಕೆಂದು ಮಾಜಿ ಶಾಸಕ ಅನ್ನದಾನಿ ಆಗ್ರಹಿಸಿದ್ದಾರೆ.  ಇದನ್ನೂ ಓದಿ: ವಂಚನೆ ಕೇಸಲ್ಲಿ ಐಶ್ವರ್ಯಗೌಡಗೆ ಜಾಮೀನು – ರಾತ್ರಿಯೇ ಜೈಲಿಂದ ರಿಲೀಸ್

  • ಚಿನ್ನ ವಂಚನೆ ಕೇಸ್‌ – ಐಶ್ವರ್ಯಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿ.ಕೆ ಸುರೇಶ್‌ ದೂರು

    ಚಿನ್ನ ವಂಚನೆ ಕೇಸ್‌ – ಐಶ್ವರ್ಯಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿ.ಕೆ ಸುರೇಶ್‌ ದೂರು

    ಬೆಂಗಳೂರು: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ ಸುರೇಶ್ (DK Suresh) ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ (Bengaluru City Police Commissioner) ದೂರು ನೀಡಿದ್ದಾರೆ.

    ಈ ಬಗ್ಗೆ ಡಿ.ಕೆ ಸುರೇಶ್ ಅವರು ಪೊಲೀಸ್ ಆಯುಕ್ತರಿಗೆ ಭಾನುವಾರ ಪತ್ರ ಬರೆದಿದ್ದಾರೆ. ಐಶ್ವರ್ಯಾ ಗೌಡ (Aishwarya Gowda) ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ. ಇದನ್ನೂ ಓದಿ: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಮೃತ ಸಚಿನ್‌ ವಿರುದ್ಧವೇ ಲಕ್ಷಾಂತರ ರೂಪಾಯಿ ವಂಚನೆ ಆರೋಪ

    ಹೀಗಾಗಿ, ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ದೂರು ಪತ್ರದಲ್ಲಿ ಸುರೇಶ್ ಅವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಹೀನಾಯ ಸೋಲು – ಆಸ್ಟ್ರೇಲಿಯಾಗೆ 184 ರನ್‌ಗಳ ಭರ್ಜರಿ ಗೆಲುವು

    ಮಂಡ್ಯದ ಉದ್ಯಮಿಗೂ ದೋಖಾ
    ಆರೋಪಿ ಸ್ಥಾನದಲ್ಲಿರುವ ಐಶ್ವರ್ಯಗೌಡ ಬಿಲ್ಡರ್, ಚಿನ್ನದ ವ್ಯಾಪಾರಿ ಕಮ್ ಕಾಂಗ್ರೆಸ್ ಮುಖಂಡನಿಗೂ ಸಹ ಕೋಟ್ಯಂತರ ರೂಪಾಯಿ ಟೋಪಿ ಹಾಕಿರೋದು ಬೆಳಕಿಗೆ ಬಂದಿದೆ. ಸದ್ಯ ಆ ಉದ್ಯಮಿ ತನ್ನ ಹೆಸರು ಬಹಿರಂಗಪಡಿಸಬೇಡಿ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ವಾಸವಿರುವ ಆತ ಮೈಸೂರು, ಮಂಡ್ಯ, ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಾ ಆತ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾನೆ. ಐಶ್ವರ್ಯ ಗೌಡ ಈ ವ್ಯಕ್ತಿಯಿಂದ 6.5 ಕೋಟಿ ಹಣ ಹಾಗೂ ಒಂದಷ್ಟು ಗೋಲ್ಡ್‌ನ್ನು ಪಡೆದಿದ್ದಾಳೆ ಎನ್ನಲಾಗಿದೆ. ಇದನ್ನೂ ಓದಿ:  ಇಸ್ರೋದ ಸ್ಪೇಡೆಕ್ಸ್‌ ಉಪಗ್ರಹಕ್ಕೆ ರಾಜ್ಯದ ಬಿಜಿಎಸ್ ಕಾಲೇಜಿನ ಪೇಲೋಡ್ ಸೇರ್ಪಡೆ

    ಒಂದೂವರೆ ವರ್ಷದ ಹಿಂದೆ ಈ ಉದ್ಯಮಿ ಕಮ್ ಕಾಂಗ್ರೆಸ್ ಮುಖಂಡನಿಗೆ ಐಶ್ವರ್ಯ ಗೌಡ ಪರಿಚಯವಾಗಿದ್ದಾಳೆ. ಐಷಾರಾಮಿ ಕಾರು, ಬೌನ್ಸರ್, ಗನ್‌ಮ್ಯಾನ್ ಜೊತೆಗೆ ಬಂದು ಆ ಉದ್ಯಮಿಯನ್ನು ಪರಿಚಯ ಮಾಡಿಕೊಂಡಿದ್ದಾಳೆ. ನಂತರ ಇವರಿಬ್ಬರು ಸೇರಿ ರಿಯಲ್ ಎಸ್ಟೇಟ್ ವ್ಯವಹಾರವನ್ನು ಮಾಡಿದ್ದಾರೆ. ಆರಂಭದಲ್ಲಿ ಎಲ್ಲಾ ವ್ಯವಹಾರ ಸರಿಯಾಗಿ ಈ ವಂಚಕಿ ಐಶ್ವರ್ಯ ಗೌಡ ಮಾಡಿದ್ದಾಳೆ. ಇದಾದ ಬಳಿಕ ಆ ವ್ಯಕ್ತಿಯಿಂದ ಚಿನ್ನ ಹಾಗೂ ನಗದು ರೂಪದಲ್ಲಿ 6.5 ಕೋಟಿ ಹಣವನ್ನು ಪಡೆದಿದ್ದಾಳೆ. ಬಳಿಕ ಹಣವನ್ನು ಆತ ಕೇಳಿದ್ರೆ ಇಂದು, ನಾಳೆ ಎಂದು ಕಥೆ ಹೇಳ್ತಾ ಬಂದಿದ್ದಾಳೆ. ಆಗ ರಾಜ್ಯದ ಪ್ರಭಾವಿ ರಾಜಕಾರಣಿ ಮಧ್ಯಸ್ಥಿಕೆ ವಹಿಸಿ ಸಮಯ ನೀಡುವಂತೆ ಹೇಳಿದ್ದಾರೆ. ಇದೀಗ ಈಕೆಯ 9 ಕೋಟಿ ಗೋಲ್ಡ್ ದೋಖಾ ಕಹಾನಿ ಹೊರಬಂದ ಬಳಿಕ ಉದ್ಯಮಿ ಕಮ್ ಕಾಂಗ್ರೆಸ್ ಮುಖಂಡನಿಗೆ ವಂಚನೆಗೆ ಒಳಗಾಗಿರೋದು ಗೊತ್ತಾಗಿದೆ. ಹೀಗಾಗಿ ಆತ ಐಶ್ವರ್ಯ ಗೌಡ ಮೇಲೆ ಮಂಡ್ಯ ಅಥವಾ ಬೆಂಗಳೂರಿನಲ್ಲಿ ದೂರು ದಾಖಲು ಮಾಡಲು ದಾಖಲೆ ಸಮೇತ ಸಿದ್ಧರಾಗಿದ್ದಾರೆ.

  • ಡಿ.ಕೆ.ಸುರೇಶ್ ಹೆಸರೇಳಿ ಚಿನ್ನ ವಂಚನೆ ಕೇಸ್ – ಯಾವುದೇ ಕ್ಷಣದಲ್ಲಿ ನಟ ಧರ್ಮೇಂದ್ರ ಬಂಧನ ಸಾಧ್ಯತೆ

    ಡಿ.ಕೆ.ಸುರೇಶ್ ಹೆಸರೇಳಿ ಚಿನ್ನ ವಂಚನೆ ಕೇಸ್ – ಯಾವುದೇ ಕ್ಷಣದಲ್ಲಿ ನಟ ಧರ್ಮೇಂದ್ರ ಬಂಧನ ಸಾಧ್ಯತೆ

    – ಬಂಧನ ಭೀತಿಯಲ್ಲಿ ನಿರೀಕ್ಷಣಾ ಜಾಮೀನಿಗೆ ನಟ ಅರ್ಜಿ ಸಲ್ಲಿಕೆ

    ಬೆಂಗಳೂರು: ವರಾಹಿ ಜ್ಯುವೆಲ್ಲರ್ಸ್ ಮಾಲೀಕರಿಗೆ ವಂಚನೆ ಪ್ರಕರಣದಲ್ಲಿ ನಟ ಧರ್ಮೇಂದ್ರನನ್ನು ಪೊಲೀಸರು ಯಾವುದೇ ಕ್ಷಣದಲ್ಲಿ ಬಂಧಿಸುವ ಸಾಧ್ಯತೆ ಇದೆ. ಬಂಧನ ಭೀತಿಯಿಂದಾಗಿ ನಟ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

    ಪೊಲೀಸ್ ನೋಟಿಸ್ ಸರ್ವ್ ಆಗುತ್ತಿದ್ದಂತೆ ನಟನ ಫೋನ್ ಸ್ವಿಚ್ ಆಫ್ ಆಗಿದೆ. ಬೆಂಗಳೂರಿನ ಮನೆಯಲ್ಲಿಯೂ ನಟ ಧರ್ಮೇಂದ್ರ ಪತ್ತೆಯಿಲ್ಲ. ಎಫ್‌ಐಆರ್ ದಾಖಲಾಗ್ತಿದ್ದಂತೆ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ನೀಡಿದ್ದರು. ಇದರ ಬೆನ್ನಲ್ಲೇ ನಟ ನಾಪತ್ತೆಯಾಗಿದ್ದಾರೆ. ಇದನ್ನೂ ಓದಿ: ಐಶ್ವರ್ಯ ಗೌಡ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ – ಕಾಂಗ್ರೆಸ್‌ ಮುಖಂಡನಿಗೂ ಕೋಟಿ ಕೋಟಿ ವಂಚನೆ ಆರೋಪ

    ಐಶ್ವರ್ಯ ಗೌಡ ಹಾಗೂ ಹರೀಶ್ ಬಂಧನ ಆಗುತ್ತಿದ್ದಂತೆ ಬಂಧನ ಭೀತಿಯಲ್ಲಿ ತಲೆಮರೆಸಿಕೊಂಡಿದ್ದಾರೆ. ನಟ ಧರ್ಮೇಂದ್ರ ಬಂಧನಕ್ಕೆ ಪ್ರತ್ಯೇಕ ತಂಡ ರಚಿಸಿ ಚಂದ್ರಲೇಔಟ್ ಪೊಲೀಸರು ಹುಡುಕಾಟ ನಡೆಸಿದ್ದಾರೆ.

    ಚಂದ್ರಾಲೇಔಟ್ ಠಾಣೆಯಲ್ಲಿ ದಾಖಲಾಗಿರುವ ಕೇಸ್‌ನಲ್ಲಿ ಧರ್ಮೇಂದ್ರ 3ನೇ ಆರೋಪಿ ಆಗಿದ್ದಾರೆ. ಡಿ.ಕೆ.ಸುರೇಶ್ ಅವರಂತೆ ಹಲವರ ಜೊತೆ ಮಾತಾಡಿ ವಂಚನೆ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ. ಇದನ್ನೂ ಓದಿ: ಸಿಲಿಂಡರ್‌ ಸ್ಫೋಟ ಕೇಸ್‌; ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು – ಮೃತರ ಸಂಖ್ಯೆ 5 ಕ್ಕೆ ಏರಿಕೆ

  • ಐಶ್ವರ್ಯ ಗೌಡ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ – ಕಾಂಗ್ರೆಸ್‌ ಮುಖಂಡನಿಗೂ ಕೋಟಿ ಕೋಟಿ ವಂಚನೆ ಆರೋಪ

    ಐಶ್ವರ್ಯ ಗೌಡ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ – ಕಾಂಗ್ರೆಸ್‌ ಮುಖಂಡನಿಗೂ ಕೋಟಿ ಕೋಟಿ ವಂಚನೆ ಆರೋಪ

    ಮಂಡ್ಯ: ಗೋಲ್ಡ್ ವಂಚನೆ ಕೇಸ್‌ನಲ್ಲಿ ಜೈಲು ಸೇರಿರುವ ಐಶ್ವರ್ಯ ಗೌಡ (Aishwarya Gowda) ವಂಚನೆ ಹಿಸ್ಟರಿ ಬಗೆದಷ್ಟು ಬೆಳಕಿಗೆ ಬರುತ್ತಿದೆ. ಈಕೆಯಿಂದ ಕೋಟಿಗಟ್ಟಲೆ ವಂಚನೆಗೊಳಗಾದ ಮತ್ತೋರ್ವ ವ್ಯಕ್ತಿ ದೂರು ನೀಡಲು ಮುಂದಾಗಿದ್ದಾರೆ.

    ಮಾಜಿ ಸಂಸದ ಡಿ.ಕೆ.ಸುರೇಶ್ (D.K.Suresh) ನನ್ನ ಸಹೋದರ ಎಂದುಕೊಂಡು ಕೋಟಿಗಟ್ಟಲೇ ವಂಚನೆ ಮಾಡಿ ಇದೀಗ ಈ ಐಶ್ವರ್ಯ ಗೌಡ ಜೈಲು ಸೇರಿದ್ದಾಳೆ. ವನಿತಾ ಐತಾಳ ನೀಡಿರುವ ದೂರಿನ ಮೇರೆಗೆ ವಂಚಕಿ ಐಶ್ವರ್ಯ ಗೌಡಳನ್ನು ಇದೀಗ ಪೊಲೀಸರು ಬಂಧನ ಮಾಡಿದ್ದಾರೆ. ವನಿತಾಗೆ ಮಾತ್ರವಲ್ಲ ಹಲವು ಜನರಿಗೆ ಐಶ್ವರ್ಯ ಗೌಡ ಉರುಫ್ ನವ್ಯಶ್ರೀ ಕೋಟಿಗಟ್ಟಲೇ ಮಹಾದೋಖಾ ಮಾಡಿರೋದು ಒಂದೊಂದಾಗಿ ಬೆಳಕಿಗೆ ಬರುತ್ತಿವೆ. ಇದನ್ನೂ ಓದಿ: ಡಿ.ಕೆ ಸುರೇಶ್ ತಂಗಿ ಅಂತ ಹೇಳ್ಕೊಂಡು ವಂಚನೆ ಕೇಸ್ -ಆರೋಪಿ ಐಶ್ವರ್ಯ ಗೌಡ, ಪತಿ ಹರೀಶ್‌ ಅರೆಸ್ಟ್

    ಬಿಲ್ಡರ್, ಚಿನ್ನದ ವ್ಯಾಪಾರಿ ಕಮ್ ಕಾಂಗ್ರೆಸ್ ಮುಖಂಡನಿಗೂ ಸಹ ಕೋಟ್ಯಂತರ ರೂಪಾಯಿ ಟೋಪಿ ಹಾಕಿರೋದು ಬೆಳಕಿಗೆ ಬಂದಿದೆ. ಸದ್ಯ ಆ ಉದ್ಯಮಿ ತನ್ನ ಹೆಸರು ಬಹಿರಂಗಪಡಿಸಬೇಡಿ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ವಾಸವಿರುವ ಆತ ಮೈಸೂರು, ಮಂಡ್ಯ, ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಾ ಆತ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾನೆ. ಐಶ್ವರ್ಯ ಗೌಡ ಈ ವ್ಯಕ್ತಿಯಿಂದ 6.5 ಕೋಟಿ ಹಣ ಹಾಗೂ ಒಂದಷ್ಟು ಗೋಲ್ಡ್‌ನ್ನು ಪಡೆದಿದ್ದಾಳೆ ಎನ್ನಲಾಗಿದೆ.

    ಒಂದೂವರೆ ವರ್ಷದ ಹಿಂದೆ ಈ ಉದ್ಯಮಿ ಕಮ್ ಕಾಂಗ್ರೆಸ್ ಮುಖಂಡನಿಗೆ ಐಶ್ವರ್ಯ ಗೌಡ ಪರಿಚಯವಾಗಿದ್ದಾಳೆ. ಐಷಾರಾಮಿ ಕಾರು, ಬೌನ್ಸರ್, ಗನ್‌ಮ್ಯಾನ್ ಜೊತೆಗೆ ಬಂದು ಆ ಉದ್ಯಮಿಯನ್ನು ಪರಿಚಯ ಮಾಡಿಕೊಂಡಿದ್ದಾಳೆ. ನಂತರ ಇವರಿಬ್ಬರು ಸೇರಿ ರಿಯಲ್ ಎಸ್ಟೇಟ್ ವ್ಯವಹಾರವನ್ನು ಮಾಡಿದ್ದಾರೆ. ಆರಂಭದಲ್ಲಿ ಎಲ್ಲಾ ವ್ಯವಹಾರ ಸರಿಯಾಗಿ ಈ ವಂಚಕಿ ಐಶ್ವರ್ಯ ಗೌಡ ಮಾಡಿದ್ದಾಳೆ. ಇದಾದ ಬಳಿಕ ಆ ವ್ಯಕ್ತಿಯಿಂದ ಚಿನ್ನ ಹಾಗೂ ನಗದು ರೂಪದಲ್ಲಿ 6.5 ಕೋಟಿ ಹಣವನ್ನು ಪಡೆದಿದ್ದಾಳೆ. ಬಳಿಕ ಹಣವನ್ನು ಆತ ಕೇಳಿದ್ರೆ ಇಂದು, ನಾಳೆ ಎಂದು ಕಥೆ ಹೇಳ್ತಾ ಬಂದಿದ್ದಾಳೆ. ಆಗ ರಾಜ್ಯದ ಪ್ರಭಾವಿ ರಾಜಕಾರಣಿ ಮಧ್ಯಸ್ಥಿಕೆ ವಹಿಸಿ ಸಮಯ ನೀಡುವಂತೆ ಹೇಳಿದ್ದಾರೆ. ಇದೀಗ ಈಕೆಯ 9 ಕೋಟಿ ಗೋಲ್ಡ್ ದೋಖಾ ಕಹಾನಿ ಹೊರಬಂದ ಬಳಿಕ ಉದ್ಯಮಿ ಕಮ್ ಕಾಂಗ್ರೆಸ್ ಮುಖಂಡನಿಗೆ ವಂಚನೆಗೆ ಒಳಗಾಗಿರೋದು ಗೊತ್ತಾಗಿದೆ. ಹೀಗಾಗಿ ಆತ ಐಶ್ವರ್ಯ ಗೌಡ ಮೇಲೆ ಮಂಡ್ಯ ಅಥವಾ ಬೆಂಗಳೂರಿನಲ್ಲಿ ದೂರು ದಾಖಲು ಮಾಡಲು ದಾಖಲೆ ಸಮೇತ ಸಿದ್ಧರಾಗಿದ್ದಾರೆ. ಇದನ್ನೂ ಓದಿ: ಡಿ.ಕೆ.ಸುರೇಶ್ ತಂಗಿ ಹೆಸರಲ್ಲಿ ವಂಚನೆ – ಐಶ್ವರ್ಯಗೌಡ, ಪತಿಗೆ 14 ದಿನ ಜೈಲು