Tag: Aishwarya Gowda

  • ನನಗೇ ಗೊತ್ತಿಲ್ಲದೇ ಇನ್ನೊಬಳು ತಂಗಿ ಯಾರು ಅಂತ ನಮ್ಮಣ್ಣ ಬೇಜಾರು ಮಾಡಿಕೊಂಡಿದ್ದಾನಂತೆ: ಡಿಕೆಸು

    ನನಗೇ ಗೊತ್ತಿಲ್ಲದೇ ಇನ್ನೊಬಳು ತಂಗಿ ಯಾರು ಅಂತ ನಮ್ಮಣ್ಣ ಬೇಜಾರು ಮಾಡಿಕೊಂಡಿದ್ದಾನಂತೆ: ಡಿಕೆಸು

    – ಐಶ್ವರ್ಯ ಗೌಡ ವಂಚನೆ ಪ್ರಕರಣ ಸಂಬಂಧ ದೂರು ಕೊಡಲು ನಿರ್ಧಾರ

    ಬೆಂಗಳೂರು: ಡಿಕೆ ಸುರೇಶ್ (DK Suresh)  ತಂಗಿ ಎಂದು ಹೇಳಿ ಐಶರ್ಯಾ ಗೌಡ ವಂಚನೆ ಪ್ರಕರಣ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಲು ಮಾಜಿ ಸಂಸದ ಡಿಕೆ ಸುರೇಶ್ ನಿರ್ಧರಿಸಿದ್ದಾರೆ.

    ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ನನ್ನ ಹೆಸರು ದುರ್ಬಳಕೆ ಆಗಿದೆ. ನಮಗೆ ಇರೋದು ಒಬ್ಬಳೇ ತಂಗಿ. ನಮ್ಮ ಅಣ್ಣಾನೆ ಬೇಜಾರು ಮಾಡಿಕೊಂಡಿದ್ದಾನಂತೆ. ನನಗೆ ಗೊತ್ತಿಲ್ಲದೆ ಇವನಿಗೆ ಇನ್ನೊಬ್ಬಳು ತಂಗಿ ಯಾರು ಅಂತ ಎಂದು ಡಿಕೆ ಸುರೇಶ್‌ ಮುಗುಳುನಕ್ಕರು. ಇದನ್ನೂ ಓದಿ: ಹೊಸ ವರ್ಷಾಚರಣೆಗೆ ಎಂ.ಜಿ ರಸ್ತೆಯಿಂದ ಹೆಚ್ಚುವರಿ ಬಸ್‌ ಸಂಚಾರ – ಮುಂಜಾನೆ 2 ಗಂಟೆವರೆಗೂ ಸಾರಿಗೆ ಲಭ್ಯ

    ನನ್ನ ಹೆಸರು ಬಳಕೆ ಮಾಡಿದ್ರೆ ಕ್ರಮ ತಗೊಳ್ಳಿ ಅಂತ ಪೊಲೀಸರಿಗೆ ಹೇಳ್ತೀನಿ, ಪೊಲೀಸರಿಗೆ ದೂರು ಕೊಡ್ತೀನಿ ಅಂತಾ ತಿಳಿಸಿದ್ರು. ಒಂದು ಕಾರ್ಯಕ್ರಮಕ್ಕೆ ಕರೆದಿದ್ದರು. ಆ ಕಾರ್ಯಕ್ರಮಕ್ಕೆ ಹೋಗಿದ್ದೆ, ಇನ್ನೊಂದು ಕಾರ್ಯಕ್ರಮಕ್ಕೆ ಕರೆದಿದ್ದರು ಆದ್ರೆ ನಾನು ಹೋಗಿಲ್ಲ ಅಂದ್ರು. ಇದನ್ನೂ ಓದಿ: ಮನಮೋಹನ್ ಸಿಂಗ್ ಅಂತ್ಯಕ್ರಿಯೆ ವಿಚಾರದಲ್ಲಿ ಕೆಟ್ಟ ರಾಜಕೀಯ ಮಾಡ್ಬೇಡಿ – ರಾಹುಲ್‌ಗೆ ಬಿಜೆಪಿ ತಿರುಗೇಟು

    ಪೊಲೀಸ್ ಕಮಿಷನರ್‌ಗೆ ಎರಡು ಮೂರು ದಿನದಲ್ಲಿ ಪತ್ರ ಬರೆಯಲಿದ್ದೇನೆ. ಬೆಳ್ಳಿ ಗದೆ ನಾವು ಮನೆಗೆ ತರಲ್ಲ, ಅಲ್ಲೆ ಬೆಳ್ಳಿ ಗದೆಯನ್ನ ಕೊಟ್ಟು ಬಂದಿದ್ದೇನೆ. ನಾನು ನಮ್ಮ ಅಣ್ಣಾ ಯಾವುದನ್ನೂ ಮನೆಗೆ ತರಲ್ಲ. ಪೊಲೀಸ್ ಕಮೀಷನರ್‌ಗೆ ದೂರು ಕೊಡೋಕೆ ಡ್ರಾಫ್ಟ್ ಸಿದ್ದಪಡಿಸಿದ್ದೇನೆ. ಪೊಲೀಸ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ 3-4 ದಿನದಲ್ಲಿ ದೂರು ನೀಡುತ್ತೇನೆ. ನಮಗೆ ಇರೋದು ಒಬ್ಬಳೇ ತಂಗಿ ನಮ್ಮ ಅಣ್ಣಾನೆ ಬೇಜಾರು ಮಾಡಿಕೊಂಡಿದ್ದಾನಂತೆ ನನಗೆ ಗೊತ್ತಿಲ್ಲದೆ ಇವನಿಗೆ ಇನ್ನೊಬ್ಬಳು ತಂಗಿ ಯಾರು ಅಂತ ಎಂದು ಡಿಕೆಸು ಮುಗುಳುನಕ್ಕರು.

  • ಡಿ.ಕೆ.ಸುರೇಶ್ ತಂಗಿ ಹೆಸರಲ್ಲಿ ವಂಚನೆ – ಐಶ್ವರ್ಯಗೌಡ, ಪತಿಗೆ 14 ದಿನ ಜೈಲು

    ಡಿ.ಕೆ.ಸುರೇಶ್ ತಂಗಿ ಹೆಸರಲ್ಲಿ ವಂಚನೆ – ಐಶ್ವರ್ಯಗೌಡ, ಪತಿಗೆ 14 ದಿನ ಜೈಲು

    ಬೆಂಗಳೂರು: ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ (DK Suresh) ಸಹೋದರಿ ಅಂತ ಹೇಳಿಕೊಂಡು 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 9ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.

    ಇಂದು (ಡಿ.28) ಚಂದ್ರಲೇಔಟ್ ಪೊಲೀಸರು ಆರೋಪಿ ಐಶ್ವರ್ಯ ಗೌಡ, ಪತಿ ಹರೀಶ್ ಇಬ್ಬರನ್ನೂ ಬಂಧಿಸಿದ್ದರು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಬಳಿಕ ಆರೋಪಿಗಳನ್ನು ಕೋರಮಂಗಲದ ಜಡ್ಜ್ ಮನೆಯಲ್ಲಿ ಹಾಜರುಪಡಿಸಿದ್ದರು.ಇದನ್ನೂ ಓದಿ: ಕುರಿಗಳ ಜೀವ ಉಳಿಸಲು ಕಂದಕಕ್ಕೆ ಬಸ್ ಇಳಿಸಿದ ಚಾಲಕ

    ಪ್ರಕರಣದ ಐಓ ಎಸಿಪಿ ಭರತ್ ರೆಡ್ಡಿ ಒಂದು ವಾರ ಕಸ್ಟಡಿಗೆ ಪಡೆಯಲು ಸೋಮವಾರ ಬಾಡಿ ವಾರೆಂಟ್ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇತ್ತ ಆರೋಪಿ ಐಶ್ವರ್ಯ ಗೌಡ ಪರ ವಕೀಲರು ಜಾಮೀನು ಕೂಡ ಅರ್ಜಿ ಸಲ್ಲಿಸಿದ್ದಾರೆ.

    ಆರೋಪಿಗಳು ಜನವರಿ 10ರ ವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ. ಆದೇಶದ ಹಿನ್ನೆಲೆ ಸದ್ಯ ಪರಪ್ಪನ ಅಗ್ರಹಾರ ಜೈಲಿನತ್ತ ಐಶ್ವರ್ಯ ಗೌಡನ್ನು ಕರೆದೊಯ್ಯುತ್ತಿದ್ದಾರೆ.

    ಏನಿದು ಪ್ರಕರಣ?
    ಐಶ್ವರ್ಯ ಗೌಡ ಕಳೆದ ಜನವರಿಯಿಂದ ಇಲ್ಲಿಯವರೆಗೂ ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್‌ನಲ್ಲಿ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿದ್ದಳು. ಹಣ ಕೊಡದೇ ಇದ್ದಾಗ, ಡಿಕೆ ಸುರೇಶ್ ಕಡೆಯಿಂದ ಮಾಲೀಕರಿಗೆ ಕರೆ ಮಾಡಿಸೋದಾಗಿ ಬೆದರಿಕೆ ಹಾಕಿದ್ದರು. ಈ ವೇಳೆ ಸಿನಿಮಾ ನಟ ಧರ್ಮೇಂದ್ರ ಎಂಬುವವರಿಂದ ಐಶ್ವರ್ಯಗೌಡ ಕರೆ ಮಾಡಿಸಿ, ಬೆದರಿಕೆ ಹಾಕಿದ್ದಾರೆ ಅನ್ನೋ ಆರೋಪವೂ ಕೇಳಿಬಂದಿದೆ.

    ಧಮೇಂದ್ರ ಡಿ.ಕೆ ಸುರೇಶ್ ವಾಯ್ಸ್‌ನಲ್ಲಿ ಕರೆ ಮಾಡಿದ್ದ ಧರ್ಮೇಂದ್ರ ಮಾಲೀಕರಾದ ವನಿತಾ ಐತಾಳ್‌ಗೆ ಕರೆ ಮಾಡಿ ಸಮಯ ಕೇಳಿದ್ದರು. ಕೊನೆಗೆ ತಾನೇ ಧರ್ಮೇಂದ್ರನನ್ನ ಕಳುಹಿಸಿ ಕೊಲೆ ಮಾಡಿಸುವುದಾಗಿಯೂ ಬೆದರಿಕೆ ಹಾಕಿದ್ದರು. ಅವಾಚ್ಯ ಶಬ್ಧಗಳಿಂದ ಬೈದು, ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ. ಈ ಕುರಿತು ಜ್ಯುವೆಲರಿ ಮಾಲೀಕಾರದ ವನಿತಾ ಆರ್.ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು, ವನಿತಾ ಐತಾಳ್ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಇಂದು ಆರೋಪಿಗಳಿಬ್ಬರನ್ನ ಬಂಧಿಸಿದ್ದಾರೆ. ಅಲ್ಲದೇ ನಟ ಧಮೇಂದ್ರ ಅವರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

    ಎಷ್ಟೆಷ್ಟು ಪ್ರಮಾಣದ ಚಿನ್ನಾಭರಣ ಖರೀದಿ?

    * ಅಕ್ಟೋಬರ್ 12 – 2023 – 62,03,590 ರೂ.
    * ಅಕ್ಟೋಬರ್ 13 – 2023 9,65,320 ರೂ.
    * ಅಕ್ಟೋಬರ್ 18 – 2023 – 95,42,500 ರೂ.
    * ಅಕ್ಟೋಬರ್ 27 – 2023 – 5.2.1,37,42,700 ರೂ.
    * ನವೆಂಬರ್ 29 – 2023 – 5.2.87,71,630 ರೂ.
    * ಡಿಸೆಂಬರ್ 1 – 2023 – 57,25,650 ರೂ.
    * ಜನವರಿ 1 – 2024 – 1,45,51,070 ರೂ.
    * ಅಕ್ಟೋಬರ್ 13 – 2023 – 75,10,200 ರೂ.
    * ನವೆಂಬರ್ 10 – 2023 – 57,22,120 ರೂ.
    * ನವೆಂಬರ್ 12 – 2023 – 57,02,050 ರೂ.
    * ನವೆಂಬರ್ 12 – 2023 – 56,88,600 ರೂ.
    ಒಟ್ಟು 14,659.940 ಗ್ರಾಂ – 8,41,25,430 ರೂ.ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ – ಭಾನುವಾರ ಮೃತ ಸಚಿನ್ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ

  • ಪ್ರವೀರ್ ಶೆಟ್ಟಿ ನಟನೆಯ ‘ಎಂಗೇಜ್‌ಮೆಂಟ್‌’ ಚಿತ್ರದ ಶೂಟಿಂಗ್ ಮುಕ್ತಾಯ

    ಪ್ರವೀರ್ ಶೆಟ್ಟಿ ನಟನೆಯ ‘ಎಂಗೇಜ್‌ಮೆಂಟ್‌’ ಚಿತ್ರದ ಶೂಟಿಂಗ್ ಮುಕ್ತಾಯ

    ಸೈರನ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಪ್ರವೀರ್ ಶೆಟ್ಟಿ (Praveer Shetty) ನಾಯಕನಾಗಿ ನಟಿಸಿರುವ ಹಾಗೂ ಜಾಗ್ವಾರ್, ಪ್ರವೀಣ ಚಿತ್ರದಲ್ಲಿ ನಟಿಸಿರುವ ಐಶ್ವರ್ಯ ಗೌಡ  (Aishwarya Gowda) ನಾಯಕಿ ಆಗಿರುವ ‘ಎಂಗೇಜ್‌ಮೆಂಟ್‌’ (Engagement) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಕೊಡಗು, ಮೈಸೂರು, ಗೋವಾ ಮುಂತಾದ ಕಡೆ ನಲವತ್ತು ದಿನಗಳಿಗೂ ಹೆಚ್ಚು ಕಾಲ ಚಿತ್ರೀಕರಣ ಮಾಡಿದ್ದಾರೆ ನಿರ್ದೇಶಕ ರಾಜು ಬೋನಗಾನಿ.

    ಪ್ರೇಮ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಇದು ರಾಜು ಬೋನಗಾನಿ ನಿರ್ದೇಶನದ ನಾಲ್ಕನೇ ಚಿತ್ರ.  ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣವಾಗುತ್ತಿದೆ‌. ಚಿತ್ರದಲ್ಲಿ ಐದು ಹಾಡುಗಳಿದ್ದು,  ದಿಲೀಪ್ ಭಂಡಾರಿ ಹಾಗೂ ರಜತ್ ಘೋಶ್ ಸಂಗೀತ ನೀಡಿದ್ದಾರೆ. ವೆಂಕಟ್ ಮನಂ ಛಾಯಾಗ್ರಹಣ, ರವಿ ಕೊಂಡವೀಟಿ ಸಂಕಲನ, ವೆಂಕಟೇಶ್ ಕಲಾ ನಿರ್ದೇಶನ,  ಡ್ರ್ಯಾಗನ್ ಪ್ರಕಾಶ್ ಸಾಹಸ ನಿರ್ದೇಶನ ಹಾಗೂ ರಾಜು ಪೈಡೆ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

    ರೋಡಿಯಂ ಎಂಟರ್ಟೈನ್ಮೆಂಟ್ ಅರ್ಪಿಸುವ, ಸುರಾಮ್ ಮೂವೀಸ್ ಲಾಂಛನದಲ್ಲಿ ಜಯರಾಮ್ ದೇವಸಮುದ್ರ ಎಂಗೇಜ್ ಮೆಂಟ್  ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಲಕ್ಷ್ಮೀಕಾಂತ್ ಹಾಗೂ ನಾರಾಯಣಸ್ವಾಮಿ ಈ ಚಿತ್ರದ ಸಹ ನಿರ್ಮಾಪಕರು.

    ಪ್ರವೀರ್ ಶೆಟ್ಟಿ, ಐಶ್ವರ್ಯ ಗೌಡ, ರಾಜಗೋಪಾಲ್ ಅಯ್ಯರ್, ಬಾಲ ರಾಜವಾಡಿ, ಭಾವನ, ರಜನಿಶ್ರೀ, ಶರದ್ ವರ್ಮ, ದೀಪ್ತಿ ಗುಪ್ತ ಹಾಗೂ ಸುಜಯ್ ರಾಮ್ ಮುಂತಾದವರು ಎಂಗೇಜ್‌ಮೆಂಟ್‌ ಚಿತ್ರದ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಂಗೇಜ್ ಮೆಂಟ್ ಮೂಡ್ ನಲ್ಲಿ ನಟಿ ಐಶ್ವರ್ಯಾ ಗೌಡ

    ಎಂಗೇಜ್ ಮೆಂಟ್ ಮೂಡ್ ನಲ್ಲಿ ನಟಿ ಐಶ್ವರ್ಯಾ ಗೌಡ

    ತ್ತೀಚೆಗೆ ಬಿಡುಗಡೆಯಾದ ‘ಪ್ರವೀಣ’ ಚಿತ್ರದಲ್ಲಿ ತಮ್ಮ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ನಟಿ ಐಶ್ವರ್ಯಾ ಗೌಡ (Aishwarya Gowda), ಇದೀಗ ಬೋನಗಾನಿ (Bonagani)ಎಂಟರ್ಟೈನ್ಮೆಂಟ್ ಅಡಿ ನಿರ್ಮಾಣವಾಗುತ್ತಿರುವ ‘ಎಂಗೇಜ್ ಮೆಂಟ್’ (Engagement) ಎಂಬ ಪ್ಯಾನ್ ಇಂಡಿಯಾ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

    ನಿಖಿಲ್ ಕುಮಾರ್ ಅಭಿನಯದ ‘ಜಾಗ್ವಾರ್’ ಚಿತ್ರದಲ್ಲಿ ಬಾಲನಟಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಐಶ್ವರ್ಯಾ, ಪ್ರವೀಣ ಚಿತ್ರದಲ್ಲಿ ನಟಿಸಿದರು. ಆ ನಂತರ ರಾಜು ಬೋನಗಾನಿ ನಿರ್ದೇಶನದ ಪ್ಯಾನ್ ಇಂಡಿಯಾ ಚಿತ್ರ ‘ರೇವ್ ಪಾರ್ಟಿ’ಯಲ್ಲಿ ದ್ವಿತೀಯ ನಾಯಕಿಯಾಗಿ ಅಭಿನಯಿಸಿದರು. ಇಂದಿನ ಯುವಜನತೆ ಡ್ರಗ್ಸ್ ಗೆ ಹೇಗೆ ದಾಸರಾಗುತ್ತಿದ್ದಾರೆ ಎಂದು ಸಾರುವ ಈ ಚಿತ್ರ ಬಿಡುಗಡೆ ಆಗುವುದಕ್ಕಿಂತ ಮೊದಲೇ, ಅದೇ ನಿರ್ದೇಶಕರ ಇನ್ನೊಂದು ಪ್ಯಾನ್ ಇಂಡಿಯಾ ಚಿತ್ರವಾದ ‘ಎಂಗೇಜ್ ಮೆಂಟ್’ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅಪ್ಪಾಜಿ ಮೇಲಿನ ಪ್ರೀತಿ ಉಕ್ಕಿ ಹರಿಯುತ್ತಿದೆ – ನಿಶ್ವಿಕಾ ನಾಯ್ಡು

    ತಮ್ಮ ಚಿತ್ರಜೀವನದ ಕುರಿತು ಮಾತನಾಡುವ ಐಶ್ವರ್ಯಾ, ‘ನನಗೆ ಚಿಕ್ಕಂದಿನಿಂದಲೂ ನಟನೆಯ  ಬಗ್ಗೆ ಅಪಾರವಾದ ಆಸಕ್ತಿ. ಅದೇ ಆಸಕ್ತಿಯಿಂದ ‘ಜಾಗ್ವಾರ್’ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದೆ. ಪ್ರವೀಣ ಚಿತ್ರ ಸಹ ನನಗೆ ಒಳ್ಳೆಯ ಬ್ರೇಕ್ ನೀಡಿತು. ಆ ಚಿತ್ರದಿಂದ ನನಗೆ ರೇವ್ ಪಾರ್ಟಿ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿತು. ಅದರಲ್ಲಿನ ನನ್ನ ಅಭಿನಯದ ನೋಡಿ ನಿರ್ದೇಶಕ ಬೋನಗಾನಿ ಅವರು ‘ಎಂಗೇಜ್ ಮೆಂಟ್’ ಚಿತ್ರದಲ್ಲಿ ನಾಯಕಿಯಾಗುವ ಅವಕಾಶವನ್ನು ನೀಡಿದ್ದಾರೆ. ಈ ಚಿತ್ರ ಸಹ ಬಾಕ್ಸ್ ಆಫೀಸ್ನಲ್ಲಿ ದೊಡ್ಡ ಯಶಸ್ಸು ಕಾಣಲಿದೆ ಎಂಬ ನಂಬಿಕೆ ನನಗಿದೆ’  ಎಂದು ಹೇಳುತ್ತಾರೆ. ‘ಈ ಸಿನಿಮಾದ ಪ್ರೀಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ.