Tag: aishwarya rajanikanth

  • ಧನುಷ್ ಹಾಡಿದ ‘ಕೊಲವೆರಿ ಡಿ’ ಇಡೀ ಚಿತ್ರವನ್ನೇ ನುಂಗಿ ಹಾಕಿತ್ತು- ಐಶ್ವರ್ಯ ರಜನಿಕಾಂತ್

    ಧನುಷ್ ಹಾಡಿದ ‘ಕೊಲವೆರಿ ಡಿ’ ಇಡೀ ಚಿತ್ರವನ್ನೇ ನುಂಗಿ ಹಾಕಿತ್ತು- ಐಶ್ವರ್ಯ ರಜನಿಕಾಂತ್

    ಜನಿಕಾಂತ್ ಪುತ್ರಿ ಐಶ್ವರ್ಯ (Aishwarya Rajanikanth) ವಿಭಿನ್ನ ಸಿನಿಮಾಗಳನ್ನು ನಿರ್ದೇಶಿಸುವ ಮೂಲಕ ಗಮನ ಸೆಳೆದಿದ್ದಾರೆ. ‘ಲಾಲ್ ಸಲಾಂ’ (Lal Salam) ಸಿನಿಮಾ ಮಕಾಡೆ ಮಲಗಿದ ಬೆನ್ನಲ್ಲೇ ಐಶ್ವರ್ಯ ಸಂದರ್ಶನವೊಂದರಲ್ಲಿ ನೀಡಿರುವ ಹೇಳಿಕೆ ಸದ್ದು ಮಾಡುತ್ತಿದೆ. ಧನುಷ್ (Dhanush) ಹಾಡಿದ ‘ಕೊಲವೆರಿ ಡಿ’ ಸಾಂಗ್ ನನ್ನ ಚಿತ್ರವನ್ನೇ ನುಂಗಿ ಹಾಕಿತ್ತು ಎಂದು ಐಶ್ವರ್ಯ ಮಾತನಾಡಿದ್ದಾರೆ. ಇದನ್ನೂ ಓದಿ:ಇಂದ್ರಜಿತ್ ಲಂಕೇಶ್ ಪುತ್ರನ ಜೊತೆ ಪ್ರೇಮಿಗಳ ದಿನಕ್ಕೂ ಮುನ್ನ ಸಾನ್ಯಾ ಫೋಟೋಶೂಟ್

    ಐಶ್ವರ್ಯ ರಜನಿಕಾಂತ್ (Rajanikanth) ನಿರ್ದೇಶನದಲ್ಲಿ ‘ತ್ರಿ’ ಸಿನಿಮಾ ಮೂಡಿ ಬಂದಿತ್ತು. ಧನುಷ್ ಮತ್ತು ಶ್ರುತಿ ಹಾಸನ್ ಜೋಡಿಯಾಗಿ ನಟಿಸಿದ್ದರು. ಈ ಚಿತ್ರದ ಬಗ್ಗೆ ಐಶ್ವರ್ಯ ಪ್ರತಿಕ್ರಿಯಿಸಿ, ‘ತ್ರಿ’ ಚಿತ್ರ ಪ್ರಯೋಗಾತ್ಮಕ ಸಿನಿಮಾವಾಗಿತ್ತು. ‘ಕೊಲವೆರಿ ಡಿ’ ಸೂಪರ್ ಹಿಟ್ ಆಗಿತ್ತು. ಆದರೆ ಅದರಿಂದ ಸಿನಿಮಾಗೆ ತೊಂದರೆಯಾಯ್ತು ಎಂದಿದ್ದಾರೆ. ಧನುಷ್ ಹಾಡಿದ ಹಾಡಿನಿಂದ ಸಿನಿಮಾಗೆ ಯಾವುದೇ ಪ್ರಯೋಜನ ಆಗಲಿಲ್ಲ. ಈ ಹಾಡು ನನ್ನ ಸಿನಿಮಾವನ್ನೇ ನುಂಗಿ ಹಾಕಿತ್ತು. ಹಾಗಾಗಿ ನನಗೆ ನಷ್ಟವಾಯ್ತು ಎಂದು ಮಾತನಾಡಿದ್ದಾರೆ.

    ‘ಕೊಲವೆರಿ ಡಿ’ ಹಾಡು ಹಿಟ್ ಆದ್ಮೇಲೆ ಜನರ ನಿರೀಕ್ಷೆ ಹೆಚ್ಚಾಯ್ತು. ನನ್ನ ಕಥೆಗೆ ಪ್ರಾಮುಖ್ಯತೆ ಇರುವ ಸಿನಿಮಾ ಮಾಡಿದೆ. ನಾನು ಹೇಳಲು ಪ್ರಯತ್ನಿಸಿದ ಕಥೆ ಪ್ರೇಕ್ಷಕರನ್ನು ತಲುಪಲಿಲ್ಲ. ಅದರಿಂದ ನನ್ನ ಸಿನಿಮಾಗೆ ಪೆಟ್ಟಾಯ್ತು ಎಂದು ಮಾಜಿ ಪತಿ ಹಾಡಿದ ಹಾಡಿನ ಬಗ್ಗೆ ಐಶ್ವರ್ಯ ಅಸಮಾಧಾನ ಹೊರಹಾಕಿದ್ದಾರೆ.

    ಫೆ.9ರಂದು ‘ಲಾಲ್ ಸಲಾಂ’ ಸಿನಿಮಾ ರಿಲೀಸ್ ಆಗಿತ್ತು. ಅತಿಥಿ ಪಾತ್ರದಲ್ಲಿ ರಜನಿಕಾಂತ್ ನಟಿಸಿದ್ದರು. ಚಿತ್ರಕ್ಕೆ ಐಶ್ವರ್ಯ ರಜನಿಕಾಂತ್ ಆ್ಯಕ್ಷನ್ ಕಟ್ ಹೇಳಿದ್ದರು. ಆದರೆ ‘ಲಾಲ್ ಸಲಾಂ’ ಚಿತ್ರ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡೋದ್ರಲ್ಲಿ ಸೋತಿದೆ. ‘ಲಾಲ್ ಸಲಾಂ’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಸೋತ ಬೆನ್ನಲ್ಲೇ ಐಶ್ವರ್ಯ, ಧನುಷ್ ಕುರಿತು ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    2004ರಲ್ಲಿ ಧನುಷ್ ಮತ್ತು ಐಶ್ವರ್ಯ ಮದುವೆಯಾಗಿದ್ದರು. 2022ರಲ್ಲಿ ಡಿವೋರ್ಸ್ ಕುರಿತು ಐಶ್ವರ್ಯ-ಧನುಷ್ ಸಾಮಾಜಿಕ ಜಾಲತಾಣದಲ್ಲಿ ಅಧಿಕೃತವಾಗಿ ತಿಳಿಸಿದ್ದರು. ಇಬ್ಬರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.

  • ಸೌರವ್ ಗಂಗೂಲಿ ಬಯೋಪಿಕ್‌ಗೆ ರಣ್‌ಬೀರ್ ಬದಲು ಮತ್ತೊಬ್ಬ ನಟನ ಎಂಟ್ರಿ

    ಸೌರವ್ ಗಂಗೂಲಿ ಬಯೋಪಿಕ್‌ಗೆ ರಣ್‌ಬೀರ್ ಬದಲು ಮತ್ತೊಬ್ಬ ನಟನ ಎಂಟ್ರಿ

    ಬಾಲಿವುಡ್ (Bollywood)  ಅಂಗಳದಲ್ಲಿ ಸೌರವ್ ಗಂಗೂಲಿ (Sourav Ganguly) ಬರುವ ಬಗ್ಗೆ ಈ ಹಿಂದೆಯೇ ಬಿಗ್ ಅಪ್‌ಡೇಟ್ ನೀಡಿದ್ದರು. ಸೌರವ್ ಗಂಗೂಲಿ ರೋಲ್‌ನಲ್ಲಿ ರಣಬೀರ್ ಕಪೂರ್ ನಟಿಸಬೇಕಿತ್ತು, ಆದರೆ ಸೌರವ್ ಪಾತ್ರಕ್ಕೆ ಬಾಲಿವುಡ್‌ನ ಮತ್ತೊಬ್ಬ ಸ್ಟಾರ್ ನಟ ಕಾಣಿಸಿಕೊಳ್ಳುವ ಬಗ್ಗೆ ಮಾಹಿತಿ ಹರಿದಾಡುತ್ತಿದೆ.

    ಚಿತ್ರರಂಗದಲ್ಲಿ ಬಯೋಪಿಕ್‌ಗಳ ಹಾವಳಿ ಜಾಸ್ತಿಯಾಗಿದೆ. ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರ ಜೀವನವನ್ನು ಈಗಾಗಲೇ ಬೆಳ್ಳಿಪರದೆ ತೋರಿಸುವ ಟ್ರೆಂಡ್ ಶುರುವಾಗಿದೆ. ಕೆಲ ವರ್ಷಗಳ ಹಿಂದೆ ಕ್ರಿಕೆಟಿಗ ಎಂ.ಎಸ್ ಧೋನಿ (M.s Dhoni) ಬಯೋಪಿಕ್ ಸಿನಿಮಾ ಬಂದಿತ್ತು. ಚಿತ್ರಮಂದಿರದಲ್ಲಿ ಸಿನಿಮಾ ಕಮಾಲ್ ಮಾಡಿತ್ತು. ಈಗ ಮತ್ತೊಬ್ಬ ಕ್ರಿಕೆಟಿಗ ಸೌರವ್ ಗಂಗೂಲಿ ಜೀವನದ ಬಗ್ಗೆ ಬಯೋಪಿಕ್ ಬರುವ ಈ ಹಿಂದೆಯೇ ತಿಳಿಸಲಾಗಿತ್ತು. ಸೌರವ್ ಪಾತ್ರ ರಣಬೀರ್ ಕಪೂರ್ ನಟಿಸೋದು ಫೈನಲ್ ಆಗಿತ್ತು. ಆದರೆ ಈಗ ಹೀರೋ ಚೇಂಜ್ ಆಗಿದ್ದಾರೆ.

    ಈಗಾಗಲೇ ಸಂಜಯ್ ದತ್ ಬಯೋಪಿಕ್ ಮಾಡಿ ನಟಿಸಿ ಸೈ ಎನಿಸಿಕೊಂಡಿರುವ ರಣ್‌ಬೀರ್ ಕಪೂರ್ (Ranbir Kapoor) ಅವರು ಸೌರವ್ ಬಯೋಪಿಕ್‌ಗೆ ಸೆಲೆಕ್ಟ್ ಆಗಿದ್ದರು. ಆದರೆ ಈಗ ಸಿನಿಮಾದಲ್ಲಿ ಕೊಂಚ ಬದಲಾವಣೆ ಆಗಿದೆ. ರಣಬೀರ್ ಬದಲು ಆಯುಷ್ಮಾನ್ ಖುರಾನ್ ನಟಿಸಲಿದ್ದಾರೆ. ಸೌರವ್ ಗಂಗೂಲಿ ರೋಲ್‌ಗೆ ನಟ ಆಯುಷ್ಮಾನ್ ಕಾಣಿಸಿಕೊಳ್ಳಲಿದ್ದಾರಂತೆ. ಇದನ್ನೂ ಓದಿ:27 ವರ್ಷಗಳ ಬಳಿಕ ಮಲಯಾಳಂ ಸಿನಿಮಾ ರಂಗಕ್ಕೆ ಕೀರವಾಣಿ ಎಂಟ್ರಿ

    ಒಂದ್ ಕಡೆ ರಣ್‌ಬೀರ್- ಆಯುಷ್ಮಾನ್ ಹೆಸರು ಚಾಲ್ತಿಯಲ್ಲಿದ್ರೆ, ಮತ್ತೊಂದು ಕಡೆ ಈ ಚಿತ್ರಕ್ಕೆ ರಜನಿಕಾಂತ್ ಪುತ್ರಿ ಐಶ್ವರ್ಯ (Aishwarya Rajanikanth) ನಿರ್ದೇಶನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟಕ್ಕೂ ಈ ಸುದ್ದಿ ನಿಜಾನಾ.? ಈ ಬಗ್ಗೆ ಚಿತ್ರತಂಡ ಹೇಳುವವರೆಗೂ ಕಾದುನೋಡಬೇಕಿದೆ.

  • ಮಗಳ ಸಿನಿಮಾದಲ್ಲಿ ಮೊಹಿದ್ದೀನ್ ಭಾಯ್ ಆಗಿ ಬಂದ ತಲೈವಾ- ‌’ಲಾಲ್‌ ಸಲಾಂ’ ಪೋಸ್ಟರ್‌ ಔಟ್

    ಮಗಳ ಸಿನಿಮಾದಲ್ಲಿ ಮೊಹಿದ್ದೀನ್ ಭಾಯ್ ಆಗಿ ಬಂದ ತಲೈವಾ- ‌’ಲಾಲ್‌ ಸಲಾಂ’ ಪೋಸ್ಟರ್‌ ಔಟ್

    ಸೂಪರ್ ಸ್ಟಾರ್ ರಜನಿಕಾಂತ್ (Rajanikanth) ಸದ್ಯ ‘ಜೈಲರ್’ನಲ್ಲಿ (Jailer)  ಹೀರೋ ಆಗಿ ನಟಿಸುತ್ತಿದ್ದಾರೆ. ಇದರ ಜೊತೆ ಮಗಳು ಐಶ್ವರ್ಯ ನಿರ್ದೇಶನದ ‘ಲಾಲ್ ಸಲಾಂ’ (Lal Salam) ಚಿತ್ರದಲ್ಲಿ ಭಿನ್ನ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡ್ತಿದ್ದಾರೆ. ಸದ್ಯ ಸಿನಿಮಾದಲ್ಲಿನ ತಲೈವಾ ಲುಕ್ ರಿವೀಲ್ ಆಗಿದೆ. ಇದನ್ನೂ ಓದಿ:‘ದಿ ಕೇರಳ ಸ್ಟೋರಿ’ ತಮಿಳು ನಾಡಿನಲ್ಲಿ ಪ್ರದರ್ಶನವಿಲ್ಲ

    ಲೈಕಾ ಪ್ರೋಡಕ್ಷನ್ಸ್ ಅಡಿಯಲ್ಲಿ ‘ಲಾಲ್ ಸಲಾಂ’ ಸಿನಿಮಾವನ್ನ ಐಶ್ವರ್ಯ ರಜಿನಿಕಾಂತ್ ನಿರ್ದೇಶನ ಮಾಡಿದ್ದಾರೆ. ತಲೈವಾ ಅವರು ಕೀ ರೋಲ್‌ನಲ್ಲಿ ಕಾಣಿಸಿಕೊಳ್ತಿದ್ದಾರೆ. ಚಿತ್ರದಲ್ಲಿ ಮೊಹಿದ್ದೀನ್ ಭಾಯ್ ಪಾತ್ರಕ್ಕೆ ತಲೈವಾ ಜೀವತುಂಬಿದ್ದಾರೆ. ಗಲಭೆ ಹಿನ್ನೆಲೆ, ಶೆರ್ವಾನಿಯಲ್ಲಿ ಸನ್ ಗ್ಲ್ಯಾಸ್ ಧರಿಸಿ ನಡೆದು ಬರುತ್ತಿರುವ ತಲೈವಾ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮುಂಬೈನಲ್ಲಿ ಭರ್ಜರಿಯಾಗಿ ನಡೆಯುತ್ತಿದೆ. ಸದ್ಯ ಸಿನಿಮಾದ ಪೋಸ್ಟರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

    1995ರಲ್ಲಿ ಬಂದಿದ್ದ ‘ಬಾಷಾ’ ಚಿತ್ರದಲ್ಲಿ ಜನಸ್ನೇಹಿ ಡಾನ್ ಆಗಿ ರಜನಿಕಾಂತ್ ಅಬ್ಬರಿಸಿದ್ದರು. ಅದೇ ಚಿತ್ರದ ಪಾತ್ರವನ್ನು ‘ಲಾಲ್ ಸಲಾಂ’ ಮೊಹಿದ್ದೀನ್ ಭಾಯ್ ನೆನಪಿಸುತ್ತಿರುವುದು ಸುಳ್ಳಲ್ಲ. ‘ಲಾಲ್ ಸಲಾಂ’ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಆಗಿದ್ದು ಕ್ರಿಕೆಟ್ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ. ವಿಷ್ಣು ವಿಶಾಲ್ ಹಾಗೂ ವಿಕ್ರಾಂತ್ ಲೀಡ್ ರೋಲ್‌ಗಳಲ್ಲಿ ನಟಿಸುತ್ತಿದ್ದಾರೆ. ಜೀವಿತಾ ರಾಜಶೇಖರ್ ನಾಯಕಿಯಾಗಿ ಮಿಂಚಲಿದ್ದಾರೆ. ವಿಷ್ಣು ರಂಗಸ್ವಾಮಿ ಛಾಯಾಗ್ರಹಣ- ಎಆರ್ ರೆಹಮಾನ್ ಸಂಗೀತ ಈ ಚಿತ್ರಕ್ಕಿದೆ. ರಜನಿಕಾಂತ್ ಕಾರಣಕ್ಕೆ ಈ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಾಕ್ಕಿದೆ.

    ದಾಂಪತ್ಯ ಜೀವನದಲ್ಲಿ ಸೋತಿರೋ ಐಶ್ವರ್ಯಗೆ ಈ ಸಿನಿಮಾದಿಂದ ಬಿಗ್ ಬ್ರೇಕ್ ಬೇಕಾಗಿದೆ. ರಜನಿಕಾಂತ್ ಚಿತ್ರದಲ್ಲಿ ನಟಿಸುತ್ತಿರುವ ಕಾರಣ, ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ರಿಲೀಸ್ ಬಳಿಕ ಸಿನಿಮಾಗೆ ಯಾವ ರೀತಿ ರೆಸ್ಪಾನ್ಸ್ ಸಿಗಲಿದೆ ಕಾದುನೋಡಬೇಕಿದೆ.

  • 10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲಾ ಎಂದ ತಲೈವಾ: ಮಗಳ ಡಿವೋರ್ಸ್‌ ವಿಚಾರದಲ್ಲಿ ಕುಗ್ಗಿದ್ರಾ ರಜನಿಕಾಂತ್

    10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲಾ ಎಂದ ತಲೈವಾ: ಮಗಳ ಡಿವೋರ್ಸ್‌ ವಿಚಾರದಲ್ಲಿ ಕುಗ್ಗಿದ್ರಾ ರಜನಿಕಾಂತ್

    ಕಾಲಿವುಡ್ ಸೂಪರ್‌ಸ್ಟಾರ್ ರಜನಿಕಾಂತ್ ವಯಸ್ಸು 71 ಆದ್ದರು. ಚಿತ್ರರಂಗದಲ್ಲಿ ಇವರ ಮೇಲಿರುವ ಕ್ರೇಜ್ ಒಂದಚೂರು ಕಡಿಮೆಯಾಗಿಲ್ಲ. ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ನಟನ ಬದುಕಿನಲ್ಲಿ 10 ಪರ್ಸೆಂಟ್ ಕೂಡ ನೆಮ್ಮದಿ ಇಲ್ಲ ಅಂತಾ ಇತ್ತೀಚಿನ ಸಂದರ್ಶನವೊಂದರಲ್ಲಿ ರಜನೀಕಾಂತ್ ಹೇಳಿರುವುದು ಇದೀಗ ಸಖತ್ ವೈರಲ್ ಆಗಿದೆ.

    ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ತಲೈವಾ ಕಾಲ್‌ಶೀಟ್‌ಗಾಗಿ ಕಾದು ಕೂರುವವರಿದ್ದಾರೆ. ಹಣ, ಆಸ್ತಿ, ಕೀರ್ತಿ ಜತೆಗೆ ಸಾಕು ಅನ್ನೋವಷ್ಟು ಸಿನಿಮಾ ಅವಕಾಶಗಳಿದ್ದರು. ರಜನೀಕಾಂತ್ ವೈಯಕ್ತಿಕ ಜೀವನದಲ್ಲಿ ಕಿಂಚಿಂತೂ ನೆಮ್ಮದಿ ಇಲ್ಲವಂತೆ. ಹಾಗಂತ ಅಚ್ಚರಿಯ ಹೇಳಿಕೆಯೊಂದನ್ನ ನೀಡಿದ್ದಾರೆ. ಇದನ್ನೂ ಓದಿ:68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ವಾಣಿಜ್ಯ ಮಂಡಳಿಯಲ್ಲಿ ಸನ್ಮಾನ

    ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಜೀವನದಲ್ಲಿ 10 ಪರ್ಸೆಂಟ್‌ನಷ್ಟು ನೆಮ್ಮದಿ ಇಲ್ಲಾ ಅಂತಾ ಹೇಳಿಕೊಂಡಿದ್ದಾರೆ. ಐಶ್ವರ್ಯ ಮತ್ತು ಧನುಷ್ ಡಿವೋರ್ಸ್ ನಂತರ ರಜನೀಕಾಂತ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಗಳ ಡಿವೋರ್ಸ್ ಮನಸ್ಸಿಗೆ ಮತ್ತಷ್ಟು ಘಾಸಿ ಮಾಡಿದ್ಯಾ, ಎಲ್ಲಾ ಇದ್ದು ಮಕ್ಕಳ ಜೀವನ ಹಳಿ ದಾಟಿ ಹೋಗಿರುವುದು ರಜನಿಕಾಂತ್ ಆರೋಗ್ಯಕ್ಕೆ ಮತ್ತಷ್ಟು ಘಾಸಿ ಮಾಡಿದ್ಯ ಅಂತಾ ಅಭಿಮಾನಿಗಳ ವಲಯದಲ್ಲಿ ಸಖತ್ ಚರ್ಚೆ ಆಗುತ್ತಿದೆ.

    ಮಕ್ಕಳ ಜೀವನವೇ ಮನಸ್ಸಿನಲ್ಲಿಕೊಂಡು ಈ ಮಾತು ಹೇಳಿದ್ರಾ ರಜನಿಕಾಂತ್. ಒಟ್ನಲ್ಲಿ ಸಕ್ಸಸ್‌ಫುಲ್ ಆಕ್ಟರ್ ಆಗಿದ್ದರು. ಖುಷಿ, ನೆಮ್ಮದಿ ಇಲ್ಲದೇ ಬದುಕುವುದು ಕಷ್ಟ. ನೆಚ್ಚಿನ ನಟನ ಈ ಕಾಮೆಂಟ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಐಶ್ವರ್ಯ ರಜನಿಕಾಂತ್ ನಿರ್ದೇಶನದಲ್ಲಿ ಸೌರವ್ ಗಂಗೂಲಿ ಬಯೋಪಿಕ್

    ಐಶ್ವರ್ಯ ರಜನಿಕಾಂತ್ ನಿರ್ದೇಶನದಲ್ಲಿ ಸೌರವ್ ಗಂಗೂಲಿ ಬಯೋಪಿಕ್

    ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಕ್ರಿಕೆಟ್ ಕುರಿತ ಸಿನಿಮಾ ಮಾಡಲು ಮುಂದಾಗಿದ್ದಾರೆ. ಕ್ರಿಕೆಟ್ ಜಗತ್ತಿನ ಮಹಾನ್ ಕ್ರಿಕೆಟಿಗ ಸೌರವ್ ಗಂಗೂಲಿ ಬಯೋಪಿಕ್ ತೆರೆಗೆ ತರಲು ತಯಾರಿ ನಡೆಸುತ್ತಿದ್ದಾರೆ.

    ಸ್ಟಾರ್ ನಟ ಧನುಷ್ ಜೊತೆ ಡಿವೋರ್ಸ್ ಪಡೆದ ಮೇಲೆ ರಜನಿಕಾಂತ್ ಪುತ್ರಿ ಐಶ್ವರ್ಯ ಮತ್ತಷ್ಟು ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಈಗಾಗಲೇ ಸಾಕಷ್ಟು ಚಿತ್ರಗಳನ್ನು ನಿರ್ದೇಶನ ಮಾಡುವ ಮೂಲಕ ಐಶ್ವರ್ಯ ರಜನೀಕಾಂತ್ ಸೈ ಎನಿಸಿಕೊಂಡಿದ್ದಾರೆ. ಈಗ ಕ್ರಿಕೆಟ್‌ನತ್ತ ಒಲವು ತೋರಿಸುತ್ತಿದ್ದಾರೆ. ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿರುವ, ಕ್ರಿಕೆಟ್ ಜಗತ್ತಿನ ದಂತಕಥೆ ಸೌರವ್ ಗಂಗೂಲಿ ಇಂಚಿಂಚೂ ಕಥೆಯನ್ನ ಬೆಳ್ಳಿಪರದೆಯಲ್ಲಿ ತೋರಿಸಲು ನಿರ್ದೇಶಕಿ ಐಶ್ವರ್ಯ ಸಜ್ಜಾಗಿದ್ದಾರೆ. ಇದನ್ನೂ ಓದಿ: ಪತ್ನಿ ರಮ್ಯಾ ಜೊತೆ `ನಾಗಿಣಿ 2′ ಖ್ಯಾತಿಯ ನಿನಾದ್ ದಾಂಪತ್ಯಗೀತೆ

    ನಿರ್ದೇಶಕ ಲವ್ ರಂಜನ್ ಒಡೆತನದ ಲವ್ ಫಿಲ್ಮ್ಸ್‌ ನಿರ್ಮಾಣದ ಅಡಿಯಲ್ಲಿ ಸೌರವ್ ಗಂಗೂಲಿ ಬಯೋಪಿಕ್ ತೆರೆಗೆ ಬರಲು ಸಿದ್ಧವಾಗುತ್ತಿದೆ. ಈಗಾಗಲೇ ಸೌರವ್ ಅವರ ಜೊತೆ ಈ ಕುರಿತು ಮಾತುಕತೆ ನಡೆದಿದ್ದು, ಬಯೋಪಿಕ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಕುರಿತು ಮಾಜಿ ಕ್ರಿಕೆಟಿಗ ಸೌರವ್ ಕೂಡ ಈ ಹಿಂದೆಯೇ ಅಧಿಕೃತವಾಗಿ ಟ್ವೀಟರ್‌ನಲ್ಲಿ ಹೇಳಿಕೊಂಡಿದ್ದರು.

    ಸೌರವ್ ಗಂಗೂಲಿ ಅವರ ಬಯೋಪಿಕ್‌ನಲ್ಲಿ ಸೌರವ್ ಪಾತ್ರಕ್ಕೆ ಯಾರು ಜೀವ ತುಂಬಲಿದ್ದಾರೆ ಎಂಬುದರ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಹುಟ್ಟು ಹಾಕಿದೆ. ಇದರ ಬಗ್ಗೆ ಚಿತ್ರತಂಡ ಯಾವುದೇ ಮಾಹಿತಿ ನೀಡಿಲ್ಲ. ಸದ್ಯದಲ್ಲೇ ಈ ಕುರಿತು ಅಪ್‌ಡೇಟ್ ನೀಡಲಿದೆ ಚಿತ್ರತಂಡ. ಒಟ್ನಲ್ಲಿ ಐಶ್ವರ್ಯ ರಜನೀಕಾಂತ್ ನಿರ್ದೇಶನದಲ್ಲಿ ಸಿನಿಮಾ ಹೇಗೆ ಮೂಡಿ ಬರಲಿದೆ ಎಂಬುದನ್ನ ಕಾದುನೋಡಬೇಕಿದೆ.