Tag: Ajay Singh

  • ಶಾಸಕ ಅಜಯ್ ಸಿಂಗ್ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆ ಕೆಲಸದಾತನ ಶವ ಪತ್ತೆ

    ಶಾಸಕ ಅಜಯ್ ಸಿಂಗ್ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆ ಕೆಲಸದಾತನ ಶವ ಪತ್ತೆ

    ಕಲಬುರಗಿ: ಜೇವರ್ಗಿ (Jewargi) ಶಾಸಕ ಡಾ. ಅಜಯ್ ಸಿಂಗ್ (Ajay Singh) ನಿವಾಸದಲ್ಲಿ ಮನೆ ಕೆಲಸದ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಕಲಬುರಗಿ (Kalaburagi) ನಗರದ ಶರಣ ನಗರ ಬಡಾವಣೆಯಲ್ಲಿ ಶಾಸಕರ ನಿವಾಸದಲ್ಲಿರುವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ದೇವೇಂದ್ರ ಪಟ್ಟೆದಾರ ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ತಿಳಿದುಬಂದರೂ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಪಿ ಅಡ್ಡೂರು ಶ್ರೀನಿವಾಸಲು, ಅಜಯ್ ಸಿಂಗ್ ಅವರ ಮನೆಯಲ್ಲಿ ಕೆಲಸದಾತ ದೇವೇಂದ್ರನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಳಗ್ಗೆ 6 ಗಂಟೆಗೆ ನಮಗೆ ಈ ಬಗ್ಗೆ ಮಾಹಿತಿ ಬಂದಿದೆ. ಎಫ್‌ಎಸ್‌ಎಲ್ ತಂಡದವರು, ನಮ್ಮ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ-ಮಗ ಸಾವು

    ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ನಿವಾಸಿದ್ದ ದೇವೇಂದ್ರ, ಅಜಯ್ ಸಿಂಗ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಗ್ಗೆ ಮಾಹಿತಿ ಇದೆ. ಘಟನೆ ನಡೆದ ಸಂದರ್ಭದಲ್ಲಿ ಅಜಯ್ ಸಿಂಗ್ ಅವರು ಮನೆಯಲ್ಲಿ ಇದ್ದ ಬಗ್ಗೆ ಮಾಹಿತಿ ಇಲ್ಲ. ಸಾವಿಗೆ ನಿಖರವಾದ ಯಾವುದೇ ಕಾರಣ ಸದ್ಯ ತಿಳಿದುಬಂದಿಲ್ಲ. ತನಿಖೆ ನಡೆದ ಬಳಿಕವಷ್ಟೇ ಸಾವಿನ ಹಿಂದಿರುವ ಕಾರಣ ಬಯಲಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೃದಯಾಘಾತದಿಂದ ಪೊಲೀಸ್ ಕಾನ್ಸ್‌ಟೇಬಲ್ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಮುದಾಯ ನಂಬದೇ ಅಭಿವೃದ್ಧಿ ಕೆಲಸದಿಂದ ಜಯ: ಇದು ಕಲಬುರಗಿ ವಿಶೇಷತೆ

    ಸಮುದಾಯ ನಂಬದೇ ಅಭಿವೃದ್ಧಿ ಕೆಲಸದಿಂದ ಜಯ: ಇದು ಕಲಬುರಗಿ ವಿಶೇಷತೆ

    ಕಲಬುರಗಿ: ‌ ಚುನಾವಣೆಯಲ್ಲಿ ಗೆಲ್ಲಬೇಕಾದರೆ ಸಮುದಾಯದ ಜನರ ಸಂಖ್ಯೆ ಹೆಚ್ಚಿರಬೇಕು ಎಂಬ ಮಾತು ಪ್ರಚಲಿತದಲ್ಲಿದೆ. ಆದರೆ  ಸೂಫಿ ಸಂತರ ನಾಡು ಎಂದೇ ಖ್ಯಾತಿ ಪಡೆದಿರುವ ಕಲಬುರಗಿ (Kalaburagi) ಜಿಲ್ಲೆಯ ಹಲವು ನಾಯಕರು ಅವರ ಸಮುದಾಯದ (Community) ಮತಗಳು ಬೆರಳೆಣಿಕೆಯಷ್ಟಿದ್ದರೂ ಕ್ಷೇತ್ರದಲ್ಲಿ ಹಲವು ಬಾರಿ ಜಯಗಳಿಸಿದ್ದಾರೆ.‌ ಅಂತಹ ಸಾಲಿಗೆ‌ ಮಾಜಿ ಸಿಎಂ ದಿವಂಗತ ಧರಂ ಸಿಂಗ್ ಆಳಂದ ಶಾಸಕ ಸುಭಾಶ್ ಗುತ್ತೇದಾರ ಹಾಗೂ ಹಾಲಿ ಜೇವರ್ಗಿ ಶಾಸಕ ಧರಂಸಿಂಗ್ ಪುತ್ರ ಅಜಯ್ ಸಿಂಗ್ ಸಮುದಾಯ‌ ನಂಬದೇ ಅಭಿವೃದ್ಧಿ ಕೆಲಸಗಳಿಂದ ಜಯಗಳಿಸಿದವರು ಎಂದರೇ ತಪ್ಪಾಗಲಾರದು.

    ಧರಂಸಿಂಗ್: ರಾಜಕೀಯದಲ್ಲಿ ಅಜಾತ ಶತ್ರು ಎಂದೇ ಖ್ಯಾತಿ ಹೊಂದಿದ ಮಾಜಿ ಸಿಎಂ ಧರಂಸಿಂಗ್ (Dharam Singh) ಜೇವರ್ಗಿ ಕ್ಷೇತ್ರದಿಂದ ಸತತ 8 ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಈ ಕ್ಷೇತ್ರದಲ್ಲಿ ಧರಂ ಸಿಂಗ್ ಅವರ ರಜಪೂತ ಜನಾಂಗದ ಮತಗಳು ಇರುವ ಮನೆಗಳು ಕೇವಲ ಬೆರಳೆಣಿಕೆಯಷ್ಟು ಮಾತ್ರ ಇದೆ. ಹೀಗಿದ್ದರೂ ಧರಂಸಿಂಗ್ ಅವರು ಜನಪರ‌ ಕಾಳಜಿ ಹಾಗೂ ಅಭಿವೃದ್ಧಿ ಹೆಚ್ಚು ಒತ್ತು ನೀಡಿದ್ದರು. ಎಲ್ಲಾ ಸಮುದಾಯದ ಜೊತೆ ಉತ್ತಮ ಸಂಬಂಧದಿಂದ ಅವರ ಸಮುದಾಯದ‌ ಜನಸಂಖ್ಯೆ ಇಲ್ಲದಿದ್ದರೂ ಸತತ ಜಯಗಳಿಸಿದ್ದರು. ಇದನ್ನೂ ಓದಿ: ಗೌರಿಬಿದನೂರು ಕ್ಷೇತ್ರದಲ್ಲಿ ಪಕ್ಷೇತರರದ್ದೇ ನಿರ್ಣಾಯಕ ಪಾತ್ರ – ಈ ಬಾರಿ ಶಿವಶಂಕರ ರೆಡ್ಡಿ ಗೆಲ್ತಾರಾ?

    ಸುಭಾಶ್ ಗುತ್ತೇದಾರ್: ಸದ್ಯ ಬಿಜೆಪಿಯ (BJP) ಆಳಂದ ಕ್ಷೇತ್ರದ ಶಾಸಕರಾದ ಸುಭಾಶ್ ಗುತ್ತೇದಾರ್ (Subhash Guttedar) ಅವರು ಈಡಿಗ ಸಮುದಾಯಕ್ಕೆ ಸೇರಿದ್ದಾರೆ. ಆಳಂದ ಕ್ಷೇತ್ರದಲ್ಲಿ 500 ರಿಂದ 600 ಮತಗಳು ಮಾತ್ರ ಅವರ ಸಮುದಾಯಕ್ಕೆ ಸೇರಿದ ಮತಗಳಾಗಿವೆ. ಆದರೆ ಸಮುದಾಯದ‌ ಮತ ಇಲ್ಲದಿದ್ದರೂ ಕ್ಷೇತ್ರದ ಬಹುಸಂಖ್ಯಾತ ಲಿಂಗಾಯತ, ದಲಿತ ಸೇರಿದಂತೆ ಹಿಂದುಳಿದ ವರ್ಗದ ಮತ ಪಡೆದು ಕ್ಷೇತ್ರದಲ್ಲಿ ಇಲ್ಲಿಯವರೆಗೆ ನಾಲ್ಕು ಬಾರಿ ಆಯ್ಕೆಯಾಗಿದ್ದಾರೆ.

    ಅಜಯ್‌ಸಿಂಗ್: ಸದ್ಯ ಜೇವರ್ಗಿ (Jevargi) ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಅಜಯ್ ಸಿಂಗ್ (Dr Ajay Singh) ಸಹ ತಂದೆ ಹಾಕಿಕೊಟ್ಟ ಮಾರ್ಗದಲ್ಲಿಯೇ ಸಾಗಿದ್ದು, ತಂದೆಯ ಬಳಿಕ ಎರಡನೇ ಬಾರಿ ಜೇವರ್ಗಿ ಕ್ಷೇತ್ರದ ಶಾಸಕರಾಗಿದ್ದಾರೆ. 2023ರಲ್ಲಿ ಮತ್ತೆ ಸ್ಪರ್ಧಿಸಿ ಹ್ಯಾಟ್ರಿಕ್ ಜಯಗಳಿಸಲು ಪ್ರಯತ್ನಿಸುತ್ತಿದ್ದಾರೆ.

  • ಸ್ವಗ್ರಾಮದಲ್ಲೇ ಶಾಸಕ ಅಜಯ್ ಸಿಂಗ್‌ಗೆ ಗ್ರಾಮಸ್ಥರಿಂದ ಕ್ಲಾಸ್

    ಸ್ವಗ್ರಾಮದಲ್ಲೇ ಶಾಸಕ ಅಜಯ್ ಸಿಂಗ್‌ಗೆ ಗ್ರಾಮಸ್ಥರಿಂದ ಕ್ಲಾಸ್

    ಕಲಬುರಗಿ: ಸ್ವ ಗ್ರಾಮದಲ್ಲೇ ಶಾಸಕ ಅಜಯ್ ಸಿಂಗ್ (Ajay Singh) ಅವರಿಗೆ ಗ್ರಾಮಸ್ಥರು ಕ್ಲಾಸ್ ತೆಗೆದುಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

    ಕಲಬುರಗಿಯ (Kalaburagi) ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಾಜಿ ಮುಖ್ಯಮಂತ್ರಿ ದಿವಂಗತ ಎನ್.ಧರಮ್ ಸಿಂಗ್ (N.Dharam Singh) ಪುತ್ರ ಶಾಸಕ ಅಜಯ್ ಸಿಂಗ್ ಅವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ನೆಲೋಗಿ (Nelogi) ಗ್ರಾಮದ ದಡದಲ್ಲಿರುವ ಭೀಮಾ ನದಿಯಲ್ಲಿ (Bhima River) ಅಕ್ರಮ ಮರಳು ದಂಧೆ (Sand trade) ನಡೆಯುತ್ತಿದ್ದು, ಮರಳುಗಾರಿಕೆ ತಡೆಯುವಂತೆ ರಸ್ತೆಗೆ ಕಲ್ಲು ಅಡ್ಡ ಹಾಕಿ, ಶಾಸಕರ ಕಾರು ತಡೆದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪುತ್ರ ಸಿಕ್ಕಿಬಿದ್ದ ಬೆನ್ನಲ್ಲೇ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ನಾಪತ್ತೆ

    ಅಕ್ರಮ ಮರಳುಗಾರಿಕೆ ದಂಧೆಯಿಂದ ರೋಸಿ ಹೋದ ಜನ, ನಮಗೆ ಮನೆಕಟ್ಟಲು ಮರಳು ಕೊಡುತ್ತಿಲ್ಲ. ಬೇರೆಯವರು ಬಂದು ಇಲ್ಲಿ ಮರಳು ದಂಧೆ ಮಾಡುತ್ತಿದ್ದಾರೆ. ನೀವು ಏನು ಮಾಡುತ್ತಿದ್ದೀರಿ ಎಂದು ಶಾಸಕರನ್ನು ತರಾಟೆಗೆ ತೆಗೆದುಕೊಂಡರು. ಶಾಸಕರಿಗೆ ಗ್ರಾಮಸ್ಥರು ಕ್ಲಾಸ್ ತೆಗೆದುಕೊಂಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಟವಲ್‍ನಲ್ಲಿ ಮಹಿಳೆ ಜೊತೆ ಸಿಕ್ಕಿಬಿದ್ದ ಕಾಂಗ್ರೆಸ್ ಮಾಜಿ ಶಾಸಕನ ಸಹೋದರ

    ಅಕ್ರಮ ಮರಳುಗಾರಿಕೆ ತಡೆಯಲು ಎಸ್‌ಪಿಗೆ ತಿಳಿಸಲಾಗಿದೆ ಎಂದು ಶಾಸಕ ಅಜಯ್ ಸಿಂಗ್ ಗ್ರಾಮಸ್ಥರನ್ನು ಸಮಾಧಾನ ಪಡಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ 50 ಟಿಕೆಟ್ ಹೊಸಬರಿಗೆ ಫಿಕ್ಸ್?

  • ಡಿಜಿಸಿಎ ಸೂಚನೆ ಸ್ವಾಗತಾರ್ಹ: ಸ್ಪೈಸ್‌ಜೆಟ್

    ಡಿಜಿಸಿಎ ಸೂಚನೆ ಸ್ವಾಗತಾರ್ಹ: ಸ್ಪೈಸ್‌ಜೆಟ್

    ನವದೆಹಲಿ: ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ(ಡಿಜಿಸಿಎ) ಸೂಚನೆಯನ್ನು ನಾವು ಸ್ವಾಗತಿಸುತ್ತೇವೆ. ಇಂತಹ ಆತಂಕದ ಸಮಯದಲ್ಲಿ ನಾವು ಅವರೊಂದಿಗೆ ಕೆಲಸ ಮಾಡಲು ಸಂತೋಷಪಡುತ್ತೇವೆ ಎಂದು ಸ್ಪೈಸ್‌ಜೆಟ್ ಅಧ್ಯಕ್ಷ ಅಜಯ್ ಸಿಂಗ್ ತಿಳಿಸಿದ್ದಾರೆ.

    ಕಳೆದ 18 ದಿನಗಳಲ್ಲಿ ಸ್ಪೈಸ್‌ಜೆಟ್ ಸಂಸ್ಥೆಯ ವಿಮಾನಗಳಲ್ಲಿ ನಿರಂತರವಾಗಿ ತಾಂತ್ರಿಕ ದೋಷಗಳು ಕಂಡುಬಂದಿದ್ದ ಹಿನ್ನೆಲೆ ಡಿಜಿಸಿಎ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಿತ್ತು.

    ಈ ಬಗ್ಗೆ ತಿಳಿಸಿದ ಅಜಯ್ ಸಿಂಗ್, ದೇಶದಲ್ಲಿ ಮಾತ್ರವಲ್ಲದೇ ಪ್ರಪಂಚದಾದ್ಯಂತ ನಾವು ಅತ್ಯುತ್ತಮ ಸುರಕ್ಷತಾ ದಾಖಲೆಗಳನ್ನು ಹೊಂದಿದ್ದೇವೆ. ನಾವು ಪ್ರತಿ ಸಂದರ್ಭದಲ್ಲೂ ಸುರಕ್ಷತೆಗೆ ಅತ್ಯಂತ ಪ್ರಮುಖ ಆದ್ಯತೆ ನೀಡುತ್ತೇವೆ ಹಾಗೂ ಈ ದಾಖಲೆಯನ್ನು ಉಳಿಸಿಕೊಂಡು ಹೋಗುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕನ್ಹಯ್ಯ ಲಾಲ್ ಪುತ್ರರಿಗೆ ಸರ್ಕಾರಿ ನೌಕರಿ – ಗೆಹ್ಲೋಟ್ ನಿರ್ಧಾರ

    ಭಾರತೀಯ ವಿಮಾನಯಾನದಲ್ಲಿ ಪ್ರತಿ ದಿನ ಸರಾಸರಿ 30 ರಷ್ಟು ತಾಂತ್ರಿಕ ದೋಷಗಳು ಕಂಡುಬರುತ್ತವೆ. ನಾವು ಇಂತಹ ಘಟನೆಗಳನ್ನು ಮರುಗಳಿಸದಂತೆ ಎಷ್ಟೇ ಪ್ರಯತ್ನ ಪಟ್ಟರೂ ಅವು ಮತ್ತೆ ಮತ್ತೆ ಸಂಭವಿಸುತ್ತದೆ. ಆದರೆ ಅವು ಅಷ್ಟೊಂದು ಗಂಭೀರವಾಗಿಲ್ಲ. ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬೂಸ್ಟರ್ ಡೋಸ್ ನಡುವಿನ ಅಂತರ 9 ರಿಂದ 6 ತಿಂಗಳಿಗೆ ಇಳಿಕೆ

    ಮಂಗಳವಾರ ದೆಹಲಿಯಿಂದ ದುಬೈಗೆ ಪ್ರಯಾಣಿಸುತ್ತಿದ್ದ ವಿಮಾನ ಅಸಮರ್ಪಕ ಇಂಧನದ ಸೂಚಕದ ಕಾರಣ ಕರಾಚಿಗೆ ತಿರುಗಿಸಲಾಯಿತು. ವಿಮಾನದ ಎಂಜಿನ್ ಹೆಚ್ಚು ಇಂಧನವನ್ನು ಬಳಸುತ್ತಿದೆ ಎಂದು ಭಾವಿಸಿ, ಹತ್ತಿರದ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿತ್ತು. ಇದು ತುರ್ತು ಲ್ಯಾಂಡಿಂಗ್ ಆಗಿರಲಿಲ್ಲ. ಪ್ರಯಾಣಿಕರ ಸುರಕ್ಷತೆ ನಮಗೆ ಅತ್ಯಂತ ಮುಖ್ಯ. ಕರಾಚಿಯಲ್ಲಿ ಇಳಿಸಿದ ನಿರ್ಧಾರ ಸರಿಯಾಗಿಯೇ ಇತ್ತು. ಈ ಬಗ್ಗೆ ನಾವೇ ಪರಿಶೀಲನೆ ನಡೆಸಿದ್ದೇವೆ. ಇದು ಗಂಭೀರ ಘಟನೆಯಲ್ಲ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾಳೆ ಬಿಎಸ್‍ವೈ ಬಹುಮತ ಸಾಬೀತು ಪಡಿಸ್ತಾರೆ- ಕೈ ಶಾಸಕ ಅಜಯ್‍ಸಿಂಗ್

    ನಾಳೆ ಬಿಎಸ್‍ವೈ ಬಹುಮತ ಸಾಬೀತು ಪಡಿಸ್ತಾರೆ- ಕೈ ಶಾಸಕ ಅಜಯ್‍ಸಿಂಗ್

    – ವಿಪಕ್ಷದಲ್ಲಿ ಕೂರಲು ಕಾಂಗ್ರೆಸ್ ಸಿದ್ಧ

    ಕಲಬುರಗಿ: ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸದನದಲ್ಲಿ ಬಹುಮತ ಸಾಬೀತು ಪಡಿಸುತ್ತಾರೆ ಎಂದು ಕಾಂಗ್ರೆಸ್ ಜೇವರ್ಗಿ ಶಾಸಕ ಡಾ ಅಜಯ್‍ಸಿಂಗ್ ಹೇಳಿದ್ದಾರೆ.

    ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈಯಲ್ಲಿರೋ ಅತೃಪ್ತ ಶಾಸಕರು ವಾಪಸ್ ಬರುವ ಲಕ್ಷಣಗಳು ಗೋಚರಿಸುತ್ತಿಲ್ಲ. ಹೀಗಾಗಿ ಸಾಮಾನ್ಯವಾಗಿ ಬಿಜೆಪಿ ಬಹುಮತ ಸಾಬೀತುಪಡಿಸೋದು ಗ್ಯಾರಂಟಿ ಎಂದು ಹೇಳಿದ್ದಾರೆ.

    ನಮ್ಮದು ಕಾದು ನೋಡುವ ನೀತಿ. ವಿಪಕ್ಷದಲ್ಲಿ ಕೂರಲು ಕಾಂಗ್ರೆಸ್ ಸಿದ್ಧವಿದೆ ಎಂದರು. ಈ ವೇಳೆ ಅತೃಪ್ತ ಶಾಸಕರ ಬಗ್ಗೆ ಮಾತನಾಡಿ ಅತೃಪ್ತ ಶಾಸಕರು ಮುಂಬೈ ಹೋದಮೇಲೆ ನನ್ನನ್ನು ಸಂಪರ್ಕಿಸಿಲ್ಲ. ಆದರೆ ಮುಂಬೈ ಹೋಗುವಾಗ ನನ್ನ ಜತೆ ಚರ್ಚಿಸಿದ್ದರು ಎಂದು ತಿಳಿಸಿದರು.

  • ತಂದೆ ಹಾದಿಯಲ್ಲಿ ಸಾಗುತ್ತಿರುವ ಶಾಸಕ ಅಜಯ್ ಸಿಂಗ್: ವಿಡಿಯೋ ನೋಡಿ

    ತಂದೆ ಹಾದಿಯಲ್ಲಿ ಸಾಗುತ್ತಿರುವ ಶಾಸಕ ಅಜಯ್ ಸಿಂಗ್: ವಿಡಿಯೋ ನೋಡಿ

    ಕಲಬುರಗಿ: ಮಾಜಿ ಸಿಎಂ ದಿವಂಗತ ಧರಂ ಸಿಂಗ್ ಅವರ ತಮ್ಮ ಭಾಷಣದಲ್ಲಿನ ಶಾಯರಿ ಮೂಲಕವೇ ಜನರನ್ನು ರಂಜಿಸುತ್ತಿದ್ದರು, ಇದೀಗ ತಂದೆ ಹಾದಿಯಲ್ಲಿಯೇ ಅವರ ಪುತ್ರ ಹಾಗೂ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಸಹ ಸಾಗಿದ್ದಾರೆ.

    ಶಾಸಕ ಅಜಯ್ ಸಿಂಗ್ ಅವರು ತಮ್ಮ ಪ್ರತಿ ಭಾಷಣದಲ್ಲಿ ಸಹ ಶಾಯರಿ ಹೇಳಲು ಆರಂಭಿಸಿದ್ದಾರೆ. ಇದನ್ನು ಅರಿತ ಮಾಜಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಸೇರಿದಂತೆ ಹಲವು ಮುಖಂಡರು, ಇತ್ತೀಚೆಗೆ ಕಲಬುರಗಿಯಲ್ಲಿ ಒಂದೆಡೆ ಸೇರಿದ್ದಾರೆ.

    ಈ ವೇಳೆ ಅವರು ಅಜಯ್ ಸಿಂಗ್ ಅವರಿಗೆ ಶಾಯರಿ ಹೇಳಲು ಒತ್ತಾಯಿಸಿದ್ದಾರೆ. ಮುಖಂಡರ ಒತ್ತಾಯದ ಮೇರೆಗೆ ಅಜಯ್ ಸಿಂಗ್ ಹೇಳಿರುವ ಶಾಯರಿ ಇದೀಗ ಸಕತ್ ವೈರಲ್ ಆಗುತ್ತಿದೆ. ಇನ್ನು ಶಾಸಕರ ಶಾಯರಿ ಕೇಳಿದ ಕೈ ಮುಖಂಡರು ವಾ ವಾ ಎಂದು ಅಜಯ್ ಸಿಂಗ್ ಅವರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಖರ್ಗೆಯನ್ನು ಸೋಲಿಸಲು ಮುಂದಾದ ಕುಚುಕು ಗೆಳೆಯ ಧರಂಸಿಂಗ್ ಪುತ್ರ?

    ಖರ್ಗೆಯನ್ನು ಸೋಲಿಸಲು ಮುಂದಾದ ಕುಚುಕು ಗೆಳೆಯ ಧರಂಸಿಂಗ್ ಪುತ್ರ?

    ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದ ರಾಷ್ಟ್ರವ್ಯಾಪಿ ಚರ್ಚೆಗೆ ಒಳಗಾಗುತ್ತಿದೆ. ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಉಮೇಶ್ ಜಾಧವ್ ಈ ಬಾರಿಯ ಕಮಲದ ಅಭ್ಯರ್ಥಿ ಎಂದು ಬಿಂಬಿತರಾಗಿದ್ದಾರೆ. ಇದೀಗ ತಂದೆಯ ಕುಚುಕು ಗೆಳೆಯ ಮಲ್ಲಿಕಾರ್ಜುನ ಖರ್ಗೆಯರನ್ನು ಸೋಲಿಸಲು ಮಾಜಿ ಸಿಎಂ ಧರಂಸಿಂಗ್ ಪುತ್ರ ಅಜಯ್ ಸಿಂಗ್ ಮುಂದಾದ್ರಾ ಎಂದು ಕೈ ವಲಯದಲ್ಲಿ ಚರ್ಚೆ ಶುರುವಾಗಿದೆ.

    ಉಮೇಶ್ ಜಾಧವ್ ಬಿಜೆಪಿ ಸೇರ್ಪಡೆ ಬಳಿಕ ನನ್ನ ಬಳಿಯೂ ಅಸ್ತ್ರಗಳಿವೆ. ಸಮಯ ಬಂದಾಗ ಪ್ರಯೋಗಿಸುತ್ತೇನೆ ಎಂದು ಹೇಳಿಕೆಯನ್ನು ನೀಡಿದ್ದರು. ಈ ಸುದ್ದಿಯನ್ನು ಪಬ್ಲಿಕ್ ಟಿವಿ ವೈಬ್‍ಸೈಟ್ ಪ್ರಕಟಿಸಿತ್ತು. ಈ ಸುದ್ದಿಗೆ ಫೇಸ್‍ಬುಕ್ ನಲ್ಲಿ ಶಾಸಕ ಅಜಯ್ ಸಿಂಗ್ ಖಾತೆಯಿಂದ ‘ಗ್ರೇಟ್ ಜಾಧವ್ ಜೀ’ ಎಂದು ಕಮೆಂಟ್ ಮಾಡುವ ಮೂಲಕ ಪರೋಕ್ಷವಾಗಿ ಬಿಜೆಪಿ ಬೆಂಬಲಕ್ಕೆ ನಿಂತ್ರಾ ಎಂಬ ಪ್ರಶ್ನೆ ಹುಟ್ಟುಹಾಕಿದೆ.

    ಅಜಯ್ ಸಿಂಗ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉಮೇಶ್ ಜಾಧವ್ ಅವರನ್ನು ಬೆಂಬಲಿಸುತ್ತಾರಾ ಎಂಬುದರ ಬಗ್ಗೆ ತೀವ್ರ ಚರ್ಚೆಗಳು ಆರಂಭಗೊಂಡಿವೆ. ಇತ್ತ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮತ್ತು ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್ ಇಬ್ಬರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಚುನಾವಣಾ ತಂತ್ರಗಳನ್ನು ರಚಿಸುತ್ತಿದ್ದಾರೆ.

    ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎದುರು ಡಾ.ಉಮೇಶ್ ಜಾಧವ್ ಸ್ಪರ್ಧೆಯಿಂದ ಕಲಬುರಗಿ ಲೋಕಸಭೆ ಇದೀಗ ಸ್ಟಾರ್ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಈ ಬಾರಿ ಕನಿಷ್ಟ ಅಂದ್ರು 200 ಕೋಟಿಗೂ ಅಧಿಕ ಕುರುಡು ಕಾಂಚಾಣ ಹರಿಯಲ್ಲಿದೆಯಂತೆ. ಹೀಗಾಗಿ ಚುನಾವಣಾ ಆಯೋಗ ಈ ಕ್ಷೇತ್ರದ ಮೇಲೆ ಹದ್ದಿನ ಕಣ್ಣಿಟ್ಟಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಅಜಯ್ ಸಿಂಗ್, ಕಮೆಂಟ್ ಬಂದಿರುವ ಫೇಸ್ ಬುಕ್ ಖಾತೆ ನನ್ನದಲ್ಲ ಎಂದು  ಸ್ಪಷ್ಟನೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಕೊನೆಕ್ಷಣದಲ್ಲಿ ಸಿದ್ದರಾಮಯ್ಯ ಆಪ್ತನ ಪದಗ್ರಹಣಕ್ಕೆ ಸಿಎಂ ಗೈರು- ಮುನಿಸು ಮುಂದುವರಿಸಿದ್ರಾ ಎಚ್‍ಡಿಕೆ?

    ಕೊನೆಕ್ಷಣದಲ್ಲಿ ಸಿದ್ದರಾಮಯ್ಯ ಆಪ್ತನ ಪದಗ್ರಹಣಕ್ಕೆ ಸಿಎಂ ಗೈರು- ಮುನಿಸು ಮುಂದುವರಿಸಿದ್ರಾ ಎಚ್‍ಡಿಕೆ?

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಅಜಯ್ ಸಿಂಗ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಗೈರಾಗಿದ್ದಾರೆ.

    ಇಂದು ವಿಧಾನಸೌಧದಲ್ಲಿ ದೆಹಲಿ ವಿಶೇಷ ಪ್ರನಿಧಿಯಾಗಿ ಶಾಸಕ ಅಜಯ್ ಸಿಂಗ್ ಅವರು ಅಧಿಕಾರ ಸ್ವೀಕಾರ ಸಮಾರಂಭವಿತ್ತು. ಇಲ್ಲಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಒಟ್ಟೊಟ್ಟಿಗೆ ಕಾಣಿಸಿಕೊಳ್ಳಬೇಕಿತ್ತು. ಆದ್ರೆ ಕೊನೆಯ ಕ್ಷಣದಲ್ಲಿ ದೋಸ್ತಿ ಸರ್ಕಾರದ ಸಿಎಂ ಸಮಾರಂಭದಿಂದ ದೂರ ಉಳಿದಿದ್ದಾರೆ. ಇದರಿಂದ ನಿನ್ನೆಯಷ್ಟೇ ರಾಜೀನಾಮೆ ಕೊಡ್ತೀನಿ ಎಂದು ಕಾಂಗ್ರೆಸ್ ಶಾಸಕರ ವಿರುದ್ಧ ಗುಡುಗಿದ್ದ ಸಿಎಂ ಕುಮಾರಸ್ವಾಮಿ ಅವರ ಮುನಿಸು ಮುಂದುವರಿದಂತೆ ಕಾಣುತ್ತಿದೆ.

    ಅಚ್ಚರಿಯೆಂದರೆ ಇಂದು ಸಿಎಂ ಕಚೇರಿಯಿಂದ ಎರಡು ಟಿಪಿ ಹೊರಡಿಸಲಾಗಿತ್ತು. ಮೊದಲ ಟಿಪಿಯಲ್ಲಿ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಬರುವ ಸಮಯ ನಿಗದಿಯಾಗಿತ್ತು. ಮತ್ತೆ ದಿಢೀರನೇ ಆ ಟಿಪಿ ಬದಲಾವಣೆ ಮಾಡಿ ಮತ್ತೊಂದು ಟಿಪಿ ಹೊರಡಿಸಿದ್ದಾರೆ. ಆ ಟಿಪಿಯಲ್ಲಿ ಸಿಎಂ ಅವರು ಕೃಷ್ಣಾದಲ್ಲಿ ಕಾರ್ಯಕ್ರಮವನ್ನಿಟ್ಟುಕೊಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಕೃಷ್ಣಾದಲ್ಲಿ ಕಾರ್ಯಕ್ರಮ ಇರುವ ಕಾರಣ ಪದಗ್ರಹಣ ಕಾರ್ಯಕ್ರಮದಲ್ಲಿ ಗೈರಾಗಿದ್ದಾರೆ ಎನ್ನುವ ಕಾರಣ ನೀಡಬಹುದಾದರೂ ಗೈರಿಗೆ ಸಿದ್ದರಾಮಯ್ಯನವರ ಮೇಲಿರುವ ಅಸಮಾಧಾನವೇ ಕಾರಣ ಎನ್ನಲಾಗುತ್ತಿದೆ.

    ಒಟ್ಟಿನಲ್ಲಿ ಅಜಯ್ ಸಿಂಗ್ ಅವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿಎಂ ಅವರ ಗೈರು ಹಾಜರಿ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಮೂಲಕ ಸಿಎಂ ಅವರಿಗೆ ಸಿದ್ದರಾಮಯ್ಯ ಅವರ ಮೇಲೆ ಸಿಟ್ಟು, ಮುನಿಸು ಇದ್ಯಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಯಾಕಂದ್ರೆ ಮೊನ್ನೆಯಷ್ಟೇ ಸಿದ್ದರಾಮಯ್ಯ ಅವರ ಬೆಂಬಲಿಗರು, ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎಂಬ ಹೇಳಿಕೆ ಕೊಟ್ಟಿದ್ದರು. ಅಲ್ಲದೇ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

    ಇದರಿಂದ ಬೇಸರಗೊಂಡ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ನನ್ನ ಕಾರ್ಯವೈಖರಿ ಇಷ್ಟವಾಗಿಲ್ಲವೆಂದಲ್ಲಿ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ಧನಿದ್ದೇನೆ. ಸಿಎಂ ಕುರ್ಚಿಗೆ ನಾನು ಅಂಟುಕೊಂಡಿಲ್ಲ ಎಂದು ಹೇಳಿದ್ದರು. ಇದೀಗ ಇಂದಿನ ಈ ಕಾರ್ಯಕ್ರಮ ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲೋ ಒಂದು ಕಡೆ ಎಲ್ಲವೂ ಸರಿ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಮಾನವೀಯತೆ ಮೆರೆದ ಜೇವರ್ಗಿ ಶಾಸಕ ಅಜಯ್ ಸಿಂಗ್

    ಮಾನವೀಯತೆ ಮೆರೆದ ಜೇವರ್ಗಿ ಶಾಸಕ ಅಜಯ್ ಸಿಂಗ್

    ಕಲಬುರಗಿ: ಜಿಲ್ಲೆಯ ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರು ಮಾನವೀಯತೆ ಮೆರೆದಿದ್ದಾರೆ.

    ಅಪಘತಕ್ಕೀಡಾಗಿ ಗಾಯಗೊಂಡು ಕಾರಿನಲ್ಲಿದ್ದ ವ್ಯಕ್ತಿಯನ್ನು ಕಾಪಾಡಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಅಜಯ್ ಸಿಂಗ್ ಮಾನವೀಯತೆ ಮೆರೆದಿದ್ದಾರೆ. ಈ ಕುರಿತು ಸ್ವತಃ ಅಜಯ್ ಸಿಂಗ್ ಅವರೇ ತಮ್ಮ ಫೇಸ್ ಬುಕ್ ಅಕೌಂಟ್ ನಲ್ಲಿ ಫೋಟೋ ಸಮೇತ ಬರೆದುಕೊಂಡಿದ್ದಾರೆ.

    ನಿಂತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಬಂದು ಕಾರ್ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಚಾಲಕ ಇಮಾಮ್ ಅಲಿ ಗಂಭೀರವಾಗಿ ಗಾಯಗೊಂಡಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ಶಾಸಕರು ಬರುತ್ತಿದ್ದರು. ಘಟನೆಯ ಮಾಹಿತಿ ಅರಿತ ಅಜಯ್ ಸಿಂಗ್ ಅವರು ತಮ್ಮ ಕಾರನ್ನು ಘಟನಾ ಸ್ಥಳದ ಸಮೀಪ ನಿಲ್ಲಿಸಿದ್ದಾರೆ. ಬಳಿಕ ಕಾರಿನಿಂದ ಇಳಿದು ಜೆಸಿಬಿ ಮೂಲಕ ಅಪಘಾತಕ್ಕೀಡಾದ ಕಾರನ್ನು ನಿಲ್ಲಿಸಿ, ನಂತರ ಗಾಯಗೊಂಡಿದ್ದ ಚಾಲಕನನ್ನು ರಕ್ಷಣೆ ಮಾಡಿದ್ದಾರೆ.

    ಗಾಯಾಳು ಇಮಾಮ್ ಅಲಿಯನ್ನ ಜೇವರ್ಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಿದ್ದರಾಮಯ್ಯ ಬಣದಿಂದ ಸಚಿವ ಸ್ಥಾನಕ್ಕೆ ಲಾಬಿ

    ಸಿದ್ದರಾಮಯ್ಯ ಬಣದಿಂದ ಸಚಿವ ಸ್ಥಾನಕ್ಕೆ ಲಾಬಿ

    – ಪರಮೇಶ್ವರ್ ನಾಯ್ಕ್, ಅಜೇಯ ಸಿಂಗ್, ಪ್ರಸಾದ ಅಬ್ಬಯ್ಯ ಕಾವೇರಿ ನಿವಾಸಕ್ಕೆ ಭೇಟಿ

    ಬೆಂಗಳೂರು/ರಾಯಚೂರು: ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ನಾಯಕರು ಚರ್ಚೆ ನಡೆಸುತ್ತಿರುವ ಬೆನ್ನಲ್ಲೇ ಶಾಸಕರು ಮಂತ್ರಿಗಿರಿಗೆ ಲಾಬಿ ನಡೆಸುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿ ನೀಡುತ್ತಿದ್ದಾರೆ.

    ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಹೂವಿನ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರ್ ನಾಯ್ಕ್, ಜೇವರ್ಗಿಯ ಅಜೇಯ ಸಿಂಗ್ ಹಾಗೂ ಹುಬ್ಬಳ್ಳಿ-ಧಾರವಾಡ ಪೂರ್ವ ಶಾಸಕ ಪ್ರಸಾದ ಅಬ್ಬಯ್ಯ ಅವರು ಭೇಟಿ ನೀಡಿದ್ದಾರೆ. ಜೆಡಿಎಸ್, ಕಾಂಗ್ರೆಸ್ ಸರ್ಕಾರದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಮಾಜಿ ಸಿಎಂ ಮೂಲಕ ಮಂತ್ರಿಗಿರಿ ಪಡೆದುಕೊಳ್ಳುವ ನಿಟ್ಟಿನಲ್ಲಿ ಲಾಬಿಗೆ ಮುಂದಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಇತ್ತೀಚೆಗೆ ಬಾಗಲಕೋಟೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಅವರು, ಮಂತ್ರಿಗಿರಿ ಕೈ ತಪ್ಪಿದ್ದಕ್ಕೆ ಯಾವುದೇ ಶಾಸಕರು ಅಸಮಾಧಾನಗೊಂಡಿಲ್ಲ. ಅಲ್ಲದೇ ಸಂಪುಟ ವಿಸ್ತರಣೆಯಲ್ಲಿ ಬಾಗಲಕೋಟೆ ನಾಯಕರಿಗೆ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದ ಪರೋಕ್ಷವಾಗಿ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರಿಗೆ ಟಾಂಗ್ ಕೊಟ್ಟಿದ್ದರು.

    ಮಂತ್ರಿಗಿರಿಯಿಂದ ಎಂ.ಬಿ.ಪಾಟೀಲ್ ಅವರನ್ನು ಕೈಬಿಟ್ಟರೆ ನಮಗೆ ಅವಕಾಶ ಸಿಗಬಹುದು ಎನ್ನುವ ಲೆಕ್ಕಾಚಾರ ಉಳಿದ ಶಾಸಕರಲ್ಲಿ ಮೂಡಿದೆ. ಇದರಿಂದಾಗಿ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ ಸಚಿವ ಸ್ಥಾನಕ್ಕೆ ಏರುವ ತವಕದಲ್ಲಿ ಅನೇಕ ನಾಯಕರು ಮುಂದಾಗುತ್ತಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಬಿ.ಸಿ.ಪಾಟೀಲ್ ಹಾಗೂ ಎಂ.ಬಿ.ಪಾಟೀಲ್ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದರು.

    ನಾನು ಆಕಾಂಕ್ಷಿ:
    ಸಂಪುಟ ವಿಸ್ತರಣೆಯಲ್ಲಿ ನಾನೂ ಪ್ರಬಲ ಆಕಾಂಕ್ಷಿಯಾಗಿದ್ದು, ನನಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ಪಕ್ಷದ ವರಿಷ್ಠರು ನೀಡಿದ್ದಾರೆ ಎಂದು ಮಾನ್ವಿಯ ಜೆಡಿಎಸ್ ಶಾಸಕ ವೆಂಕಟಪ್ಪ ನಾಯಕ್ ಹೇಳಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ವಾಲ್ಮಿಕಿ ನಾಯಕ ಸಮಾಜದಿಂದ ನಾನೊಬ್ಬನೇ ಗೆದ್ದಿರುವುದು. ಹೀಗಾಗಿ ನನಗೆ ಸಚಿವ ಸ್ಥಾನ ನೀಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ. ಎರಡು ಸಚಿವ ಸ್ಥಾನಗಳಲ್ಲಿ ಈಗಾಗಲೇ ಒಂದು ಸ್ಥಾನವನ್ನು ಅಲ್ಪಸಂಖ್ಯಾತ ಶಾಸಕರಿಗೆಂದು ನಿರ್ಧರಿಸಲಾಗಿದೆ. ಎನ್.ಮಹೇಶ್ ರಾಜಿನಾಮೆಯಿಂದ ತೆರವಾದ ಸ್ಥಾನವನ್ನು ನನಗೆ ನೀಡಬೇಕು. ರಾಜ್ಯದ ನಾಯಕ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸಲು ಮಂತ್ರಿಗಿರಿ ನನಗೇ ನೀಡಬೇಕು ಅಂತ ವೆಂಕಟಪ್ಪ ನಾಯಕ್ ಪಟ್ಟುಹಿಡಿದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv