Tag: Ajit Rai

  • ತಹಶೀಲ್ದಾರ್ ಅಜಿತ್ ರೈ ರಾಯಚೂರಿನ ಸಿರಿವಾರಕ್ಕೆ ಎತ್ತಂಗಡಿ

    ತಹಶೀಲ್ದಾರ್ ಅಜಿತ್ ರೈ ರಾಯಚೂರಿನ ಸಿರಿವಾರಕ್ಕೆ ಎತ್ತಂಗಡಿ

    -ಗ್ರೇಡ್-1 ನಿಂದ ಗ್ರೇಡ್-2ಗೆ ಹಿಂಬಡ್ತಿ

    ರಾಯಚೂರು/ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರಿಂದ (Lokayukta Police) ಬಂಧನಕ್ಕೊಳಗಾಗಿರುವ ತಹಶೀಲ್ದಾರ್ ಅಜಿತ್ ರೈ (Ajit Rai) ಅವರನ್ನ ಬೆಂಗಳೂರು ಕೆ.ಆರ್ ಪುರಂನಿಂದ ರಾಯಚೂರು ಸಿರಿವಾರ ತಾಲೂಕಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

    ಬೆಂಗಳೂರಿನ ಕೆ.ಆರ್ ಪುರಂನಲ್ಲಿ (KR Puram) ಗ್ರೇಡ್-1 ತಹಶೀಲ್ದಾರ್ ಆಗಿದ್ದ ಅಜಿತ್ ರೈ ಅವರಿಗೆ ಗ್ರೇಡ್-2 ಹಿಂಬಡ್ತಿ ನೀಡಿ ಸಿರಿವಾರಕ್ಕೆ (Raichur Siriwara) ವರ್ಗಾವಣೆ ಮಾಡಿ ರಾಜ್ಯಪಾಲರ ಸೂಚನೆ ಮೇರೆಗೆ ಕಂದಾಯ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕೆ.ಆರ್‌ ಪುರಂ ತಹಶೀಲ್ದಾರ್‌ ಅಜಿತ್‌ ರೈ ಅಮಾನತು

    ಜೂನ್ 28ರಿಂದ ಅಮಾನತ್ತಿನಲ್ಲಿರುವ ಅಜಿತ್ ರೈ ಆದಾಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದ ಅಡಿ ಲೋಕಾಯುಕ್ತ ಪೊಲೀಸರ ದಾಳಿಗೆ ಒಳಗಾಗಿದ್ದಾರೆ. ಆದ್ರೆ ವಿಚಾರಣೆಯಲ್ಲಿರುವ ಅಧಿಕಾರಿಯನ್ನ ವರ್ಗಾವಣೆ ಮಾಡಿದ್ದಕ್ಕೆ ಸರ್ಕಾರದ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದಾರೆ. ಹಿಂದುಳಿದ ನೂತನ ತಾಲೂಕು ಸಿರವಾರ ಅಭಿವೃದ್ಧಿಗೆ ದಕ್ಷ ಅಧಿಕಾರಿಯನ್ನ ನೇಮಿಸುವಂತೆ ಜನ ಆಗ್ರಹಿಸಿದ್ದಾರೆ.

    ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್ ರೈ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು. ಪ್ರಸ್ತುತ ಕೆ.ಆರ್. ಪುರಂನಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ 69% ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ಮಲ್ಲಿಗೆ ಮುಡಿಯುವ ಮಹಿಳೆಯರಿಗೆ ಶಾಕ್ – ಹೂವುಗಳ ಬೆಲೆ ಈಗ ಇನ್ನಷ್ಟು ದುಬಾರಿ!

    ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಅಜಿತ್ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸಹಕಾರನಗರದ ನಿವಾಸ ಸೇರಿ 12 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ 40 ಲಕ್ಷ ರೂ. ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶ ಬ್ರ‍್ಯಾಂಡ್‌ನ ಮದ್ಯ ಪತ್ತೆಯಾಗಿತ್ತು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.

    ಆರೋಪಿಯನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಲೋಕಾಯುಕ್ತ ಪೊಲೀಸರು 10 ದಿನಗಳ ಕಸ್ಟಡಿಗೆ ಕೇಳಿದ್ದರು. ಆದರೆ ನ್ಯಾಯಾಲಯ 7 ದಿನ ಪೊಲೀಸ್ ಕಸ್ಟಡಿಗೆ ಅವಕಾಶ ನೀಡಿದೆ. ಅಜಿತ್ ರೈ ಪುತ್ತೂರಿನಲ್ಲೂ ಆಸ್ತಿ ಮಾಡಿದ್ದು, ಸ್ವತಃ ಊರಿಗೆ ಕರೆದುಕೊಂಡು ಹೋಗಿ ತನಿಖೆ ನಡೆಸಲು ಪೊಲೀಸರಿಗೆ ನ್ಯಾಯಾಲಯ ಅವಕಾಶ ನೀಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆ.ಆರ್‌ ಪುರಂ ತಹಶೀಲ್ದಾರ್‌ ಅಜಿತ್‌ ರೈ ಅಮಾನತು

    ಕೆ.ಆರ್‌ ಪುರಂ ತಹಶೀಲ್ದಾರ್‌ ಅಜಿತ್‌ ರೈ ಅಮಾನತು

    ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರ (Lokayukta Police) ವಶದಲ್ಲಿರುವ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ (Ajit Rai) ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

    ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್‌ ರೈ ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು. ಪ್ರಸ್ತುತ ಕೆ.ಆರ್‌. ಪುರಂನಲ್ಲಿ ತಹಶೀಲ್ದಾರ್‌ (KR Puram Tahsildar) ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ 69% ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 

    ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸಹಕಾರನಗರದ ನಿವಾಸ ಸೇರಿ 12 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದರು. ಇದನ್ನೂ ಓದಿ: ಆನ್‍ಲೈನ್ ಶಾಪಿಂಗ್‍ನಲ್ಲಿ ಬೆಂಗಳೂರಿಗರೇ ಮುಂದು – ಸರಾಸರಿ ಖರೀದಿಯಲ್ಲಿ ಮುಂಬೈ ಫಸ್ಟ್

    ಪರಿಶೀಲನೆ ವೇಳೆ 40 ಲಕ್ಷ ರೂ. ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶಿ ಬ್ರ್ಯಾಂಡ್‌ನ ಮದ್ಯ ಪತ್ತೆಯಾಗಿತ್ತು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ಹಿಂದೂಗಳ ಪವಿತ್ರ ‘ಅಮರನಾಥ ಯಾತ್ರೆ’ ಆರಂಭ

    ಆರೋಪಿಯನ್ನು 7 ದಿನಗಳ ಪೊಲೀಸ್‌ ಕಸ್ಟಡಿಗೆ ನೀಡಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿತ್ತು. ಲೋಕಾಯುಕ್ತ ಪೊಲೀಸರು 10 ದಿನಗಳ ಕಸ್ಟಡಿಗೆ ಕೇಳಿದ್ದರು. ಆದರೆ ನ್ಯಾಯಾಲಯ 7 ದಿನ ಪೊಲೀಸ್‌ ಕಸ್ಟಡಿಗೆ ಅವಕಾಶ ನೀಡಿದೆ. ಅಜಿತ್‌ ರೈ ಪುತ್ತೂರಿನಲ್ಲೂ ಆಸ್ತಿ ಮಾಡಿದ್ದು, ಸ್ವತಃ ಊರಿಗೆ ಕರೆದುಕೊಂಡು ಹೋಗಿ ತನಿಖೆ ನಡೆಸಲು ಪೊಲೀಸರಿಗೆ ನ್ಯಾಯಾಲಯ ಅವಕಾಶ ನೀಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈಗೆ 7 ದಿನ ಪೊಲೀಸ್‌ ಕಸ್ಟಡಿ

    ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈಗೆ 7 ದಿನ ಪೊಲೀಸ್‌ ಕಸ್ಟಡಿ

    ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಕೆ.ಆರ್‌. ಪುರಂ ತಹಶೀಲ್ದಾರ್‌ (K.R. Puram Tahsildar) ಅಜಿತ್‌ ರೈನನ್ನು (Ajit Rai) 7 ದಿನ ಪೊಲೀಸ್‌ ಕಸ್ಟಡಿಗೆ (Police Custody) ವಹಿಸಲಾಗಿದೆ.

    ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾ. ವಿ.ಶ್ರೀಕಾಂತ್‌ ಅವರು ಈ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜುಲೈ 6 ಕ್ಕೆ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿ ಕೇಸ್‌; ಕೆ.ಆರ್‌. ಪುರಂ ತಹಶೀಲ್ದಾರ್‌ ಸಹೋದರ ಸೇರಿ ನಾಲ್ವರಿಗೆ ಲೋಕಾಯುಕ್ತ ನೋಟಿಸ್‌

    ಲೋಕಾಯುಕ್ತ ಪೊಲೀಸರು 10 ದಿನಗಳ ಕಸ್ಟಡಿಗೆ ಕೇಳಿದ್ದರು. ಆದರೆ ನ್ಯಾಯಾಲಯ 7 ದಿನ ಪೊಲೀಸ್‌ ಕಸ್ಟಡಿಗೆ ಅವಕಾಶ ನೀಡಿದೆ. ಅಜಿತ್‌ ರೈ ಪುತ್ತೂರಿನಲ್ಲೂ ಆಸ್ತಿ ಮಾಡಿದ್ದು, ಸ್ವತಃ ಊರಿಗೆ ಕರೆದುಕೊಂಡು ಹೋಗಿ ತನಿಖೆ ನಡೆಸಲು ಪೊಲೀಸರಿಗೆ ನ್ಯಾಯಾಲಯ ಅವಕಾಶ ನೀಡಿದೆ.

    ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸಹಕಾರನಗರದ ನಿವಾಸ ಸೇರಿ 12 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದರು. ಇದನ್ನೂ ಓದಿ: ಬಂಧಿತ ತಹಶೀಲ್ದಾರ್‌ ಅಜಿತ್‌ ರೈ ವಾಚ್‌ ಕಲೆಕ್ಷನ್‌ ನೋಡಿ ದಂಗಾದ ಲೋಕಾ ಅಧಿಕಾರಿಗಳು

    ಪರಿಶೀಲನೆ ವೇಳೆ 40 ಲಕ್ಷ ರೂ. ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶಿ ಬ್ರ್ಯಾಂಡ್‌ನ ಮದ್ಯ ಪತ್ತೆಯಾಗಿತ್ತು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಕ್ರಮ ಆಸ್ತಿ ಕೇಸ್‌; ಕೆ.ಆರ್‌. ಪುರಂ ತಹಶೀಲ್ದಾರ್‌ ಸಹೋದರ ಸೇರಿ ನಾಲ್ವರಿಗೆ ಲೋಕಾಯುಕ್ತ ನೋಟಿಸ್‌

    ಅಕ್ರಮ ಆಸ್ತಿ ಕೇಸ್‌; ಕೆ.ಆರ್‌. ಪುರಂ ತಹಶೀಲ್ದಾರ್‌ ಸಹೋದರ ಸೇರಿ ನಾಲ್ವರಿಗೆ ಲೋಕಾಯುಕ್ತ ನೋಟಿಸ್‌

    ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಬಂಧಿಸಿದ ಬೆನ್ನಲ್ಲೇ ಅವರ ಸಹೋದರ ಸೇರಿ ನಾಲ್ವರಿಗೆ ನೋಟಿಸ್‌ ನೀಡಿದ್ದಾರೆ.

    ಸಹೋದರ ಆಶಿಕ್ ರೈ, ಸ್ನೇಹಿತರಾದ ಗೌರವ್, ಹರ್ಷವರ್ಧನ್ ಸೇರಿ ನಾಲ್ವರಿಗೆ ನೋಟಿಸ್‌ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಬಂಧಿತ ತಹಶೀಲ್ದಾರ್‌ ಅಜಿತ್‌ ರೈ ವಾಚ್‌ ಕಲೆಕ್ಷನ್‌ ನೋಡಿ ದಂಗಾದ ಲೋಕಾ ಅಧಿಕಾರಿಗಳು

    ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸಹಕಾರನಗರದ ನಿವಾಸ ಸೇರಿ 12 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದರು.

    ಪರಿಶೀಲನೆ ವೇಳೆ 40 ಲಕ್ಷ ರೂ. ನಗದು, ಕೋಟ್ಯಂತರ ಮೌಲ್ಯದ ಭೂ ದಾಖಲಾತಿ ಪತ್ರಗಳು, ದುಬಾರಿ ಬೆಲೆಯ ಕಾರು ಖರೀದಿಸಿದ ರಶೀದಿಗಳು, ದೇಶ-ವಿದೇಶಿ ಬ್ರ್ಯಾಂಡ್‌ನ ಮದ್ಯ ಪತ್ತೆಯಾಗಿತ್ತು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಆಸ್ತಿ – ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಅರೆಸ್ಟ್

    ಇಂದು ಬೆಳಗ್ಗೆ 11 ಗಂಟೆ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ನಡೆದಿದೆ. 10 ದಿನಗಳ ಕಾಲ ಅಜಿತ್‌ರನ್ನ ಪೊಲೀಸ್ ವಶಕ್ಕೆ ಪಡೆಯಲು ಲೋಕಾಯುಕ್ತ ತಯಾರಾಗಿದೆ. ಜೊತೆಗೆ ಸಹೋದರ ಹಾಗೂ ಸ್ನೇಹಿತರಿಗೂ ಡ್ರಿಲ್ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಹಲವರ ಹೆಸರಿನಲ್ಲಿ ಬೇನಾಮಿ ಆಸ್ತಿ ಮಾಡಿರುವ ಬಗ್ಗೆಯೂ ದಾಖಲೆಗಳು ಪತ್ತೆಯಾಗಿವೆ. ಹೀಗಾಗಿ ಸದ್ಯ ನಾಲ್ವರಿಗೆ ನೋಟಿಸ್ ಕೊಟ್ಟು ವಿಚಾರಣೆಗೆ‌ ಲೋಕಾಯುಕ್ತ ಮುಂದಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಂಧಿತ ತಹಶೀಲ್ದಾರ್‌ ಅಜಿತ್‌ ರೈ ವಾಚ್‌ ಕಲೆಕ್ಷನ್‌ ನೋಡಿ ದಂಗಾದ ಲೋಕಾ ಅಧಿಕಾರಿಗಳು

    ಬಂಧಿತ ತಹಶೀಲ್ದಾರ್‌ ಅಜಿತ್‌ ರೈ ವಾಚ್‌ ಕಲೆಕ್ಷನ್‌ ನೋಡಿ ದಂಗಾದ ಲೋಕಾ ಅಧಿಕಾರಿಗಳು

    ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ (Disproportionate Assets) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೆಆರ್‌ಪುರಂ ತಹಶೀಲ್ದಾರ್‌ (KR Puram Tahsildar) ಅಜಿತ್‌ ರೈ (Ajit Rai) ಮನೆಯಲ್ಲಿರುವ ವಾಚ್‌ಗಳನ್ನು (Watch) ನೋಡಿ ಲೋಕಾಯುಕ್ತ ಅಧಿಕಾರಿಗಳೇ (Lokayukta Officials) ದಂಗಾಗಿದ್ದಾರೆ.

    ಅಜಿತ್ ರೈ ಬಳಿ ಮೂರು Rado ವಾಚ್‌ ಪತ್ತೆಯಾಗಿದೆ. ಈ ಮೂರು ವಾಚ್ ಗಳ ಬೆಲೆ 5 ಲಕ್ಷ ರೂ.ಗೂ ಅಧಿಕ ಇರಬಹುದು ಎಂದು ಅಂದಾಜಿಸಲಾಗಿದೆ. ದಾಳಿ ವೇಳೆ ಸಿಕ್ಕ ಅಷ್ಟೂ ವಾಚ್ ಗಳ ಬೆಲೆ ಬರೋಬ್ಬರಿ ಹತ್ತು ಲಕ್ಷ ರೂ.ಗೂ ಅಧಿಕ ಎಂದು ಅಂದಾಜಿಸಲಾಗಿದೆ.

    ತಪಾಸಣೆಯ ಬೇಳೆ ಅಜಿತ್ ರೈ ಬ್ರಾಂಡ್ ಲೋಗೋ ಸೀಕ್ರೇಟ್ ರಿವೀಲ್ ಆಗಿದೆ. ASR ಹೆಸರಿನಲ್ಲಿ ಅಜಿತ್ ರೈ ಅಫಿಶಿಯಲ್ ಲೋಗೋ ತಯಾರಿಸಿದ್ದರು. ಎಎಸ್‌ಆರ್‌ ಎಂದರೆ ಅಜಿತ್‌ ಸೌಮ್ಯಾ ರೈ. ತನ್ನ ಹೆಸರಿನ ಜೊತೆ ಪತ್ನಿ ಸೌಮ್ಯ ಹೆಸರನ್ನು ಸೇರಿಸಿ ಅಜಿತ್ ರೈ ಲೋಗೋ ವಿನ್ಯಾಸ ಮಾಡಿದ್ದರು.

    ತನ್ನ ಬೈಕ್, ಕಾರ್ ಹಾಗೂ ಇತರೇ ವಸ್ತುಗಳಿಗೆ ವಿಶೇಷವಾಗಿ ಅಜಿತ್‌ ರೈ ಲೋಗೋ ಡಿಸೈನ್ ಮಾಡಿ ಅಂಟಿಸುತ್ತಿದ್ದರು. ಆಡಿ, ಬೆನ್ಜ್ ಕಾರುಗಳ ಲೋಗೋ ಮಾದರಿಯಲ್ಲಿ ವಿನ್ಯಾಸ ಮಾಡಿದ್ದನ್ನು ನೋಡಿ ಲೋಕಾ ಅಧಿಕಾರಿಗಳು ಶಾಕ್‌ ಆಗಿದ್ದಾರೆ.  ಇದನ್ನೂ ಓದಿ: ಅಲ್ಲಾನ ಕೃಪೆಯಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ: ಪರಮೇಶ್ವರ್

    ಏನು ಪತ್ತೆಯಾಗಿದೆ?
    * ಸಹಕಾರನಗರದಲ್ಲಿ 50 ಲಕ್ಷದ ಲೀಸ್‍ನ ಮನೆಯಲ್ಲಿ ವಾಸ
    * ಗೆಳೆಯ ಗೌರವ್ ಹೆಸರಲ್ಲಿ ದೇವನಹಳ್ಳಿ ಬಳಿ 96 ಎಕರೆಯ ರೇಸ್ ಕ್ಲಬ್
    * ಸೋದರ ಅಶೀತ್ ರೈ ಹೆಸರಲ್ಲಿ ಬೇನಾಮಿ ಆಸ್ತಿ
    * ದೇವನಹಳ್ಳಿಯ ಮತ್ತೊಂದು ಕಡೆ 44 ಎಕರೆಯ ಫಾರ್ಮ್ ಹೌಸ್
    * ದೊಡ್ಡ ದೊಡ್ಡ ಕಂಪನಿಗಳಿಗೆ ಜಮೀನು ಕೊಡಿಸಿ ದುಡ್ಡು ಮಾಡ್ತಿದ್ದ ಅಜಿತ್ ರೈ
    * ಬೆಂಗಳೂರು ಗ್ರಾಮಾಂತರ, ದೊಡ್ಡಬಳ್ಳಾಪುರದಲ್ಲಿ ನೂರಾರು ಎಕರೆ ಜಮೀನು ಇರಬಹುದು ಎಂಬ ಶಂಕೆ
    * ನೂರಾರು ಎಕರೆ ಜಮೀನು ಮೌಲ್ಯ 1000ಕೋಟಿಗೂ ಹೆಚ್ಚು ಎಂಬ ಅಂದಾಜು
    * 1368 ಸೀರಿಸ್‍ನ ಐಷಾರಾಮಿ ಕಾರುಗಳು, ಬೈಕ್‍ಗಳು
    * 4 ಫಾರ್ಚೂನರ್, 4 ಥಾರ್, 3 ಐಷಾರಾಮಿ ಬೈಕ್
    * ಅಜಿತ್ ರೈ ಬಳಿಯ ವಾಹನಗಳ ಮೌಲ್ಯ ಐದು ಕೋಟಿ

  • ಅಕ್ರಮ ಆಸ್ತಿ – ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಅರೆಸ್ಟ್

    ಅಕ್ರಮ ಆಸ್ತಿ – ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಅರೆಸ್ಟ್

    ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣದಲ್ಲಿ ಕೆ.ಆರ್. ಪುರಂನ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ತಹಶೀಲ್ದಾರ್ ಮನೆ, ಕಚೇರಿ ದಾಳಿ ನಡೆಸಿ ಎರಡು ದಿನಗಳ ಕಾಲ ನಿರಂತರ ಪರಿಶೀಲನೆ ಬಳಿಕ ಅರೆಸ್ಟ್ ಮಾಡಿದ್ದಾರೆ.

    ಲೋಕಾಯುಕ್ತ ಪೊಲೀಸರ ತನಿಖೆಗೆ ಸರಿಯಾಗಿ ಸ್ಪಂದಿಸಿಲ್ಲ. ಮನೆಯಲ್ಲಿ ಸಿಕ್ಕ ದಾಖಲೆಗಳಿಗೆ ಸಂಬಂಧಿಸಿದಂತೆ ಸರಿಯಾದ ಉತ್ತರ ನೀಡಿಲ್ಲ. ಕಳೆದ 30 ಗಂಟೆಗಳಿಂದ ಮನೆಯಲ್ಲಿ ನಿರಂತರ ಶೋಧ ನಡೆಸಲಾಗಿತ್ತು. ಹೀಗಾಗಿ ತಹಶೀಲ್ದಾರ್ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ತಹಶೀಲ್ದಾರ್ ಮನೆ ಮೇಲೆ ಮುಂದುವರೆದ ʼಲೋಕಾʼ ದಾಳಿ – ಬಗೆದಷ್ಟು ಸಿಗುತ್ತಿದೆ ಕೋಟಿಗಟ್ಟಲೇ ಆಸ್ತಿ

    ಅಜಿತ್ ರೈ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆ. 4 ಥಾರ್ ಕಾರ್, 4 ಫಾರ್ಚೂನರ್ ಕಾರ್, 3 ರಾಯಲ್ ಎನ್‌ಫೀಲ್ಡ್, 1 ಲ್ಯಾಂಡ್ ಕ್ರೂಸರ್ (2.5 ಕೋಟಿ ಮೌಲ್ಯ) ಹೊಂದಿದ್ದಾರೆ. ಎಲ್ಲದಕ್ಕೂ ಒಂದೇ ನಂಬರ್ ರಿಜಿಸ್ಟರ್ ಇದೆ. ಇದ್ಯಾವುದಕ್ಕೂ ಲೆಕ್ಕ ಕೊಡ್ತಾ ಇಲ್ಲ. ಸರಿ ಸುಮಾರು 150 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ ಎನ್ನಲಾಗಿದೆ.

    ತಹಶೀಲ್ದಾರ್‌ನನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ನಾಳೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಮತ್ತೆ ವಶಕ್ಕೆ ಪಡೆಯಲು ತಯಾರಿ ನಡೆಸಿದ್ದಾರೆ. ಇದನ್ನೂ ಓದಿ: ಬಕ್ರೀದ್ ಆಚರಣೆ – ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿದ್ದರಾಮಯ್ಯ ಭಾಗಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]