Tag: Ajith Pawar

  • 1 ಗ್ಯಾರಂಟಿಗೆ ಅರ್ಧ ಕೊಕ್ – ಬಡ ಮಹಿಳೆಯರಿಗೆ ಮಾತ್ರ ದುಡ್ಡು

    1 ಗ್ಯಾರಂಟಿಗೆ ಅರ್ಧ ಕೊಕ್ – ಬಡ ಮಹಿಳೆಯರಿಗೆ ಮಾತ್ರ ದುಡ್ಡು

    ಮುಂಬೈ: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸಂಕಷ್ಟ ಹೆಚ್ಚಾಗುತ್ತಿದ್ದಂತೆ ಮಹಾರಾಷ್ಟ್ರ (Maharatsra) ಸರ್ಕಾರ ಈಗ ಎಚ್ಚರಿಕೆ ಹೆಜ್ಜೆ ಇಡಲು ಆರಂಭಿಸಿದೆ.

    ಕರ್ನಾಟಕದ ಗೃಹ ಲಕ್ಷ್ಮಿ ಯೋಜನೆ ಮಾದರಿಯಲ್ಲಿ ಮಹಾರಾಷ್ಟ್ರದಲ್ಲಿ ಎಲ್ಲಾ ಮಹಿಳೆಯರಿಗೆ ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್ ಮಾಸಾಶನವನ್ನು 1500 ರೂ. ನೀಡಲಾಗುತ್ತಿತ್ತು. ಇದೀಗ ಈ ಯೋಜನೆಯನ್ನು ಬಡ ಮಹಿಳೆಯರಿಗಷ್ಟೇ ಸೀಮಿತಗೊಳಿಸಲು ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇದನ್ನೂ ಓದಿ: ‘ಕಿಸ್ಸಿಕ್’ ಬೆಡಗಿಗೆ ಬೇಡಿಕೆ- ಬಹುಭಾಷೆಗಳಲ್ಲಿ ಶ್ರೀಲೀಲಾ ಬ್ಯುಸಿ

    ಇತ್ತೀಚೆಗೆ ಮಂಡನೆಯಾದ ಬಜೆಟ್‌ನಲ್ಲಿ ಯೋಜನೆಗೆ ಪ್ರಸಕ್ತ ವರ್ಷದ ಅನುದಾನವನ್ನೂ ಕಡಿತಗೊಳಿಸಿತ್ತು. ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದಂತೆ ಮಾಸಿಕ ನೆರವಿನ ಪ್ರಮಾಣವನ್ನು 1500 ರೂ.ನಿಂದ 2100 ರೂ.ಗೆ ಹೆಚ್ಚಿಸುವ ಕುರಿತು ಪ್ರಸ್ತಾಪ ಮಾಡಿರಲಿಲ್ಲ. ಇದನ್ನೂ ಓದಿ: ಬಾಹ್ಯಾಕಾಶದಲ್ಲಿ ವಿಶ್ವದಾಖಲೆ ನಿರ್ಮಿಸಿ ಭೂಮಿಗೆ ಮರಳಿದ ಸುನಿತಾ

    ಈ ಕುರಿತು ವಿಧಾನಸಭೆಯಲ್ಲಿ ರಾಜ್ಯ ವಿತ್ತ ಸಚಿವ, ಡಿಸಿಎಂ ಅಜಿತ್ ಪವಾರ್ ಮಾತನಾಡಿ, ಕೆಲವು ಶ್ರೀಮಂತರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಗಡಿಬಿಡಿ ಹಾಗೂ ಗೊಂದಲದಿಂದ ಹೀಗಾಗಿದೆ. ಲಡ್ಡಿ ಬಹಿನ್ ಯೋಜನೆಯು ಬಡ ಮಹಿಳೆಯರಿಗಷ್ಟೇ ಸೀಮಿತವಾಗಿದ್ದು, ಇದಕ್ಕೆ ಬೇಕಾದ ಬದಲಾವಣೆಯನ್ನು ಮಾಡುತ್ತೇವೆ ಎಂದರು. ಇದನ್ನೂ ಓದಿ: ನಿಶ್ಚಿತಾರ್ಥದ ಸಂಭ್ರಮದಲ್ಲಿ ‘ದೃಷ್ಟಿಬೊಟ್ಟು’ ಸೀರಿಯಲ್ ನಟಿ

    ಲಡ್ಕಿ ಬಹಿನ್ ಯೋಜನೆಯನ್ನು ನಿಲ್ಲಿಸುವುದಿಲ್ಲ. ಅಲ್ಲದೇ ಈಗಾಗಲೇ ಈ ಯೋಜನೆಯ ಫಲಾನುಭವಿಗಳಾಗಿದ್ದ ಶ್ರೀಮಂತರು ಹಣವನ್ನು ಹಿಂದಿರುಗಿಸಬೇಕಾಗಿಲ್ಲ. ಇನ್ನು ಮುಂದೆ ಬಡ ಮಹಿಳೆಯರು ಮಾತ್ರ ಈ ಯೋಜನೆ ಫಲಾನುಭವಿಗಳಾಗಿರುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಶ್ರೀಗಂಧ ಕಳ್ಳತನ – 41 ಕೆಜಿ ಶ್ರೀಗಂಧ ತುಂಡು ಸಮೇತ ಮೂವರ ಬಂಧನ

    ಸಾಮಾಜಿಕ ನ್ಯಾಯ ಮತ್ತು ಬುಡಕಟ್ಟು ಕಲ್ಯಾಣ ಇಲಾಖೆಯಿಂದ 10 ಸಾವಿರ ಕೋಟಿ ರೂ. ಲಡ್ಕಿ ಬಹಿನ್ ಯೋಜನೆಗೆ ಬಳಸಲಾಗುತ್ತಿದೆ ಎಂಬ ಆರೋಪದ ಬಗ್ಗೆ ಅವರು ಪ್ರತಿಕ್ರಿಯಿಸಿದರು. ವಾರ್ಷಿಕ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಶೇ.40ರಷ್ಟು ನಿಧಿಯನ್ನು ಯೋಜನೆಗೆ ಬಳಸುತ್ತಿದೆ. ಲಡ್ಕಿ ಬಹಿನ್‌ಗೆ ಬಳಸಲಾದ ಹಣವನ್ನು ಹೊರತು ಪಡಿಸಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ನಿಧಿಯಲ್ಲಿ ಶೇ.18 ಹಾಗೂ 19ರಷ್ಟು ಏರಿಕೆಯಾಗಿದೆ ಎಂದು ಹೇಳಿದರು.

  • ಮಹಾರಾಷ್ಟ್ರ ಚುನಾವಣೆ – ಭಾರಿ ಹೈಡ್ರಾಮಾ ಬಳಿಕ ಎನ್‌ಸಿಪಿ ಅಭ್ಯರ್ಥಿಯಾಗಿ ನವಾಬ್‌ ಮಲಿಕ್‌ ಅಖಾಡಕ್ಕೆ

    ಮಹಾರಾಷ್ಟ್ರ ಚುನಾವಣೆ – ಭಾರಿ ಹೈಡ್ರಾಮಾ ಬಳಿಕ ಎನ್‌ಸಿಪಿ ಅಭ್ಯರ್ಥಿಯಾಗಿ ನವಾಬ್‌ ಮಲಿಕ್‌ ಅಖಾಡಕ್ಕೆ

    ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಮಂಗಳವಾರ ನಾಮಪತ್ರ ಸಲ್ಲಿಕೆಗೆ 5 ನಿಮಿಷ ಬಾಕಿಯಿರುವ ವೇಳೆ ಅಜಿತ್‌ ಪವಾರ್‌ ಬಣದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (NCP) ನಾಯಕ ನವಾಬ್ ಮಲಿಕ್ (Nawab Malik) ಅವರು ಪಕ್ಷದ `ಬಿ’ ಫಾರಂ ಅನ್ನು ಪಡೆದುಕೊಂಡರು.

    ಇದೇ ನವೆಂಬರ್‌ 20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ (Maharashtra Assembly Poll) ಮನ್‌ಖುರ್ದ್‌ ಶಿವಾಜಿ ನಗರ ಕ್ಷೇತ್ರದಿಂದ ಅಧಿಕೃತವಾಗಿ ಸ್ಪರ್ಧಿಸಲು ಪಕ್ಷ ಅವಕಾಶ ಕಲ್ಪಿಸಿದೆ. ಅಜಿತ್‌ ಪವಾರ್‌ ಎನ್‌ಸಿಪಿ ಬಣದ ಪ್ರಮುಖ ನಾಯನಾಗಿರುವ ನವಾಬ್‌ ಮಲಿಕ್‌, ಸಮಾಜವಾದಿ ಪಕ್ಷದ ಪ್ರಭಾವಿ ಅಬು ಅಜ್ಮಿ ವಿರುದ್ಧ ಮುಖಾಮುಖಿಯಾಗಿದ್ದಾರೆ.

    ಈ ಹಿಂದೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನವಾಬ್‌ ಮಲಿಕ್‌, ಮಂಗಳವಾರ ಕೊನೇಕ್ಷಣದಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಬಳಿಕ ನಾನು ಮನ್‌ಖುರ್ದ್‌ ಶಿವಾಜಿ ನಗರದಿಂದ ಅಧಿಕೃತವಾಗಿ ಎನ್‌ಸಿಪಿ ಅಭ್ಯರ್ಥಿಯಾಗಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ವಕ್ಫ್ ಕ್ಯಾತೆ ವಿರೋಧಿಸಿ ರೈತರ ಹೋರಾಟ – ರಾತ್ರೋರಾತ್ರಿ ಪ್ರತಿಭಟನೆಗೆ ಧುಮುಕಿದ ರೈತರು

    ನವಾಬ್‌ ಸ್ಪರ್ಧೆಗೆ ಬಿಜೆಪಿ ಆಕ್ಷೇಪ:
    ಮಹಾಯುತಿಯಲ್ಲಿನ ಪಾಲುದಾರರು ತಮ್ಮ ಅಭ್ಯರ್ಥಿಗಳನ್ನಾಗಿ ಯಾರನ್ನ ಬೇಕದರೂ ಘೋಷಣೆ ಮಾಡಬಹುದು. ಆದ್ರೆ ನವಾಬ್‌ ಮಲಿಕ್‌ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ರೆ, ಪಕ್ಷದ ಕಾರ್ಯಕರ್ತರು ಅವರ ಪರ ಪ್ರಚಾರ ನಡೆಸುವುದಿಲ್ಲ. ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಪರ್ಕ ಹೊಂದಿದವರ ಬಗ್ಗೆ ಅವರ ನಿಲುವು ಸ್ಪಷ್ಟವಾಗಿದೆ ಎಂದು ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೆಲಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಸತತ 35 ಗಂಟೆಗಳ ಇಡಿ ದಾಳಿ ಅಂತ್ಯ – 2 ದಿನ, 5 ಅಧಿಕಾರಿಗಳಿಂದ ಮಹತ್ವದ ದಾಖಲೆ ಸಂಗ್ರಹ!

    ಸದ್ಯ 288 ಕ್ಷೇತ್ರದ ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ಬಿಜೆಪಿ 152, ಎನ್‌ಸಿಪಿ ಅಜಿತ್ ಪವಾರ್ ಬಣದ 52 ಮತ್ತು ಏಕನಾಥ್ ಶಿಂಧೆ ಅವರ ಶಿವಸೇನೆ 80 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಇನ್ನೂ ಮಹಾವಿಕಾಸ್‌ ಅಘಾಡಿ ಮೈತ್ರಿಕೂಟದಿಂದ ಕಾಂಗ್ರೆಸ್ 103 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ, ಶಿವಸೇನೆಯ ಉದ್ಧವ್ ಠಾಕ್ರೆ ಬಣ ಮತ್ತು ಎನ್‌ಸಿಪಿ ಶರದ್ ಪವಾರ್ ಬಣದಿಂದ 87 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಹಾರಾಷ್ಟ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 20 ರಂದು ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಭಾರತದಲ್ಲಿ ವಾಯು ಮಾಲಿನ್ಯದಿಂದ ವರ್ಷಕ್ಕೆ 33,000 ಸಾವು – ಬೆಂಗ್ಳೂರಿನ ಸ್ಥಿತಿ ಏನು?