Tag: Ajjaiah

  • ಯೋಗರಾಜ್ ಭಟ್ಟರು ಮೀಸೆ ತೆಗೆದಿದ್ದಕ್ಕೆ ಅಜ್ಜಯ್ಯ ಕಾರಣ

    ಯೋಗರಾಜ್ ಭಟ್ಟರು ಮೀಸೆ ತೆಗೆದಿದ್ದಕ್ಕೆ ಅಜ್ಜಯ್ಯ ಕಾರಣ

    ನಿರ್ದೇಶಕ ಯೋಗರಾಜ್ ಭಟ್ (Yogaraj Bhatt) ಮೀಸೆ ತೆಗೆದಿದ್ದಾರೆ. ಮೀಸೆ (Meese) ಹೊತ್ತ ಗಂಡಸಿಗೆ ಡಿಮಾಂಡ್ ಅಪ್ಪೋ ಡಿಮಾಂಡೋ ಅಂತ ಹಾಡು ಫೇಮಸ್ ಆಗಿರುವಾಗಲೂ, ಭಟ್ಟರು ಏಕೆ ಮೀಸೆ ತೆಗೆದರು ಎನ್ನುವ ಅನುಮಾನ ಎಲ್ಲರಲ್ಲೂ ಮೂಡಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಮೀಸೆ ತೆಗೆದಿದ್ದಕ್ಕೆ ಅವರು ಕಾರಣವನ್ನೂ ಕೊಟ್ಟಿದ್ದಾರೆ.

    ಯೋಗರಾಜ್ ಭಟ್ ಗರಡಿ ಸಿನಿಮಾ ನಂತರ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ ನಲ್ಲಿ ಸಿನಿಮಾವೊಂದನ್ನು ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಭಟ್ಟರು ಮಹತ್ವದ ಪಾತ್ರವೊಂದನ್ನು ಮಾಡುತ್ತಿದ್ದಾರೆ. ಅಜ್ಜಯ್ಯ (Ajjaiah) ಎಂಬ ಹೆಸರಿನ ಪಾತ್ರಕ್ಕಾಗಿ ಅವರು ಗಡ್ಡ ತಗೆದಿದ್ದಾರಂತೆ. ಅವರೇ ನಿರ್ದೇಶನ ಮಾಡುತ್ತಾ, ಅವರೇ ಆಕ್ಟ್ ಮಾಡುತ್ತಿರುವ ಸಿನಿಮಾ ಇದಾಗಿದೆ. ಇದನ್ನೂ ಓದಿ:‘ದೇವರ ಆಟ ಬಲ್ಲವರಾರು’ ಎನ್ನುತ್ತಾ 3 ವರ್ಷಗಳ ನಂತರ ಬಣ್ಣ ಹಚ್ಚಿದ ಸಿಂಧೂ ಲೋಕನಾಥ

    ಈ ಸಿನಿಮಾ ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗುತ್ತಿದ್ದು, ವಿಚಿತ್ರವಾಗಿರುವಂಥ ಶೀರ್ಷಿಕೆ ಇಡಲಾಗಿದೆ. ಈವರೆಗೂ ಟೈಟಲ್ ವಿಷಯದಲ್ಲಿ ಉಪೇಂದ್ರ ಮಾತ್ರ ತಲೆಕೆಡಿಸುತ್ತಿದ್ದರು. ಇದೀಗ ಆ ಸಾಲಿಗೆ ಯೋಗರಾಜ್ ಭಟ್ಟರು ಕೂಡ ಸೇರ್ಪಡೆಗೊಂಡಿದ್ದಾರೆ. ಟೈಟಲ್ ನೋಡಿದವರು, ಏನ್ ಗುರು ಇದರ ಅರ್ಥ ಎಂದು ಕೇಳುವಂತಾಗಿದೆ.

     

    ಈಗಾಗಲೇ ಬೆಂಗಳೂರಿನಲ್ಲಿ ಈ ಸಿನಿಮಾದ ಚಿತ್ರೀಕರಣ ಶುರುವಾಗಿದ್ದು, ಪ್ರಭುದೇವ್ ಮತ್ತು ಶಿವರಾಜ್ ಕುಮಾರ್ ಪಾಲ್ಗೊಂಡಿದ್ದಾರೆ. ಶೂಟಿಂಗ್ ನಡುವೆಯೇ ಚಿತ್ರಕ್ಕೆ ‘K ಕರಟಕ D ದಮನಕ’ (Karataka Damanaka) ಎಂದು ವಿಭಿನ್ನ ಶೀರ್ಷಿಕೆ ಇಟ್ಟಿದ್ದಾರೆ. ಹಲವು ದಿನಗಳಿಂದ ಈ ಸಿನಿಮಾದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ರಾಕ್ ಲೈನ್ ವೆಂಕಟೇಶ್ ಕೂಡ ಈ ಚಿತ್ರಕ್ಕಾಗಿ ಬಣ್ಣ ಹಚ್ಚಿದ್ದಾರೆ. ಅವರು ಈ ಸಿನಿಮಾದಲ್ಲಿ ಪೊಲೀಸ್ ಆಫೀಸರ್ ಪಾತ್ರ ನಿರ್ವಹಿಸುತ್ತಿದ್ದಾರೆ.