Tag: Akhanda Srinivas Murthy

  • ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರ್ಪಡೆ

    ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರ್ಪಡೆ

    ಬೆಂಗಳೂರು: ಕಾಂಗ್ರೆಸ್‌ನಿಂದ ವಿಧಾನಸಭಾ ಟಿಕೆಟ್ ಕೈತಪ್ಪಿದ್ದಕ್ಕೆ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ (Akhanda Srinivas Murthy) ಬುಧವಾರ ಬಿಜೆಪಿ ಸೇರ್ಪಡೆಗೊಂಡರು.

    ನಗರದ ಬಿಜೆಪಿ (BJP) ಕಚೇರಿ ಜಗನ್ನಾಥ ಭವನದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (Yediyurappa) ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಅವರು ಬಿಜೆಪಿ ಸೇರಿದರು. ಪುಲಿಕೇಶಿನಗರ ಕ್ಷೇತ್ರದ ತಮ್ಮ ಬೆಂಬಲಿಗರ ಜತೆ ಅಖಂಡ ಬಿಜೆಪಿ ಸೇರ್ಪಡೆಗೊಂಡರು. ಪಕ್ಷದ ಧ್ವಜ ಕೊಟ್ಟು, ಪಕ್ಷದ ಶಾಲು ಹಾಕಿ ಯಡಿಯೂರಪ್ಪ ಪಕ್ಷಕ್ಕೆ ಬರಮಾಡಿಕೊಂಡರು. ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ, ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್, ಶಾಸಕ ಸುನೀಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: 500 ವರ್ಷದ ಬಳಿಕ ರಾಮನವಮಿಯಂದು ಅಯೋಧ್ಯೆಯಲ್ಲಿ ಬಾಲ ರಾಮನಿಗೆ ಅಭಿಷೇಕ, ಸೂರ್ಯ ತಿಲಕ!

    ಈ ವೇಳೆ ಮಾತನಾಡಿದ ಯಡಿಯೂರಪ್ಪ, ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರಿದ್ದು ನಮಗೆ ದೊಡ್ಡ ಬಲ ತಂದಿದೆ. ಎರಡೂವರೆ ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲೋದು ನಿಶ್ಚಿತ. ಅಖಂಡ ಮನೆಗೆ ಬೆಂಕಿ ಹಾಕಿದಾಗ ಕಾಂಗ್ರೆಸ್ ಅವರ ಪರ ನಿಲ್ಲಲಿಲ್ಲ. ಅಖಂಡ ಚುನಾವಣೆ ಸಮಯದಲ್ಲಿ ಬಂದಿರೋದ್ರಿಂದ ಶೋಭಾ ಅವರು ದೊಡ್ಡ ಅಂತರದಲ್ಲಿ ಗೆಲ್ಲಲು ಅನುಕೂಲ ಆಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.

    ಬಿಜೆಪಿ ಸೇರಿದ ನಂತರ ಅಖಂಡ ಶ್ರೀನಿವಾಸ್ ಮೂರ್ತಿ ಮಾತನಾಡಿ, ಶ್ರೀರಾಮನವಮಿಯಂದು ಪಕ್ಷ ಸೇರ್ಪಡೆಯಾಗಲು ಅವಕಾಶ ನೀಡಿದ್ದಾರೆ. ನಾನು ಬಿಜೆಪಿ ಸೇರಲು ಕಾರಣ ಶ್ರೀರಾಮನ ಆಶೀರ್ವಾದ. ಯಡಿಯೂರಪ್ಪ, ಶೋಭಕ್ಕ ಆಶೀರ್ವಾದ ಕಾರಣ. ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಲು ನಾನು ಸಿದ್ಧ. 2018 ರಲ್ಲಿ ಅತಿ ಹೆಚ್ಚು ವೋಟು ಪಡೆದು ಗೆದ್ದವನು ನಾನು. ನನಗೆ ಟಿಕೆಟ್ ತಪ್ಪಿಸಿದ್ದು ಕಾಂಗ್ರೆಸ್. ನನ್ನದಲ್ಲದ ತಪ್ಪಿಗೆ ನನ್ನ ಮನೆ ಸುಟ್ಟು ಹಾಕಿದ್ರು ಎಂದು ಬೇಸರ ಹೊರಹಾಕಿದರು. ಇದನ್ನೂ ಓದಿ: ಡಿ.ಕೆ.ಸುರೇಶ್‌ ಆಪ್ತನ ಮನೆ ಮೇಲೆ ಐಟಿ ದಾಳಿ

    ನಮ್ಮ ಕ್ಷೇತ್ರದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ನರು ಒಗ್ಗಟ್ಟಾಗಿದ್ದೇವೆ. ಮುಸ್ಲಿಂ ಬಾಂಧವರಿಗೆ ಮನವಿ ಮಾಡ್ತೀನಿ. ಅಮಾಯಕರು ಜೈಲಲ್ಲಿದ್ದಾರೆ ಅಂತ ಆರೋಪ ಮಾಡಿದ್ದಾರೆ. ಅದಕ್ಕೆ ನಾನು ಕಾರಣ ಅಲ್ಲ. ನಿಜವಾಗಿ ಬೆಂಕಿ ಹಚ್ಚಿದವರು ಹೊರಗೆ ಓಡಾಡಿಕೊಂಡು, ಪಕ್ಷದಲ್ಲಿ ಪದವಿ ಪಡೆದುಕೊಂಡಿದ್ದಾರೆ. ನನಗೆ ಕಾಂಗ್ರೆಸ್‌ನಲ್ಲಿ ಟಿಕೆಟ್ ತಪ್ಪಿಸಿದ್ದು ಒಳ್ಳೆಯದಾಯ್ತು. ಇದರಿಂದ ನಾನು ಬಿಜೆಪಿಗೆ ಬರುವಂತಾಗಿದೆ. ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಕ್ಷೇತ್ರದಲ್ಲಿ ಅತಿ ಹೆಚ್ಚು ಲೀಡ್ ಕೊಡಿಸೋಣ. ನಾವೆಲ್ಲರೂ ಒಗ್ಗಟ್ಟಾಗಿ ಶೋಭಕ್ಕಗೆ ಲೀಡ್ ಕೊಟ್ಟು ಗೆಲ್ಲಿಸೋಣ ಎಂದು ಕರೆ ನೀಡಿದರು.

  • ಮಾಜಿ ಕಾಂಗ್ರೆಸ್‌ ಶಾಸಕ ಅಖಂಡ ಬುಧವಾರ ಬಿಜೆಪಿ ಸೇರ್ಪಡೆ

    ಮಾಜಿ ಕಾಂಗ್ರೆಸ್‌ ಶಾಸಕ ಅಖಂಡ ಬುಧವಾರ ಬಿಜೆಪಿ ಸೇರ್ಪಡೆ

    ಬೆಂಗಳೂರು: ಮಾಜಿ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ (Akhanda Srinivas Murthy) ಬುಧವಾರ ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

    ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಎಸ್‌ಪಿಯಿಂದ (BSP) ಪುಲಿಕೇಶಿನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ ಅಖಂಡ ಶ್ರೀನಿವಾಸ ಮೂರ್ತಿ ಸೋತಿದ್ದರು. ಅಖಂಡ ಬಿಜೆಪಿ ಸೇರ್ಪಡೆಯಿಂದ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಗೆ ಅನುಕೂಲವಾಗುವ ಸಾಧ್ಯತೆಯಿದೆ.  ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ದ್ವಾರಕೀಶ್

     

    ಪುಲಿಕೇಶಿನಗರ (Pulakeshinagar) ಎಸ್‌ಸಿ ಮೀಸಲು ಕ್ಷೇತ್ರವಾಗಿದ್ದು 2018ರ ಚುನಾವಣೆಯಲ್ಲಿ 81 ಸಾವಿರ ಮತಗಳಿಂದ ಅಖಂಡ ಶ್ರೀನಿವಾಸ ಮೂರ್ತಿ ಗೆಲುವು ಸಾಧಿಸಿದ್ದರು. ಆದರೆ 2023ರ ವಿಧಾನ ಸಭಾ ಚುನಾವಣೆಯಲ್ಲಿ ಟಿಕೆಟ್‌ ಸಿಗದ ಕಾರಣ ಬಿಎಸ್‌ಪಿಯಿಂದ ಸ್ಪರ್ಧಿಸಿದ್ದರು.

    ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಕಾಂಗ್ರೆಸ್ಸಿಗರೇ ಬೆಂಕಿ ಹಚ್ಚಿದ್ದಾರೆ. ವೋಟ್‌ ಬ್ಯಾಂಕ್‌ ರಾಜಕೀಯಕ್ಕಾಗಿ ಅವರನ್ನು ಮೂಲೆಗುಂಪು ಮಾಡಿ ಅನ್ಯಾಯ ಮಾಡಿದ್ದಾರೆ ಎಂದಿ ಬಿಜೆಪಿ ಚುನಾವಣಾ ಸಮಯದಲ್ಲಿ ಕಾಂಗ್ರೆಸ್‌ ವಿರುದ್ಧ ಆರೋಪಿಸಿತ್ತು.  ಇದನ್ನೂ ಓದಿ: ಸುರ್ಜೇವಾಲಾಗೆ ಶಾಕ್‌ – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

     

    ವಿಧಾನಸಭಾ ಚುನಾವಣಾ ಸಮಯದಲ್ಲಿ ಪ್ರತಿಕ್ರಿಯಿಸಿದ್ದ ಅಖಂಡ ಶ್ರೀನಿವಾಸ ಮೂರ್ತಿ, ಕೆಜೆ ಹಳ್ಳಿ ಡಿಜೆಹಳ್ಳಿ ಗಲಾಟೆಯಾದ್ರೂ ನಾವೆಲ್ಲಾ ಅಣ್ಣತಮ್ಮಂದಿರಂತೆ ಇದ್ದೆವು. ಆದರೆ ಬೆಂಕಿ ಹಚ್ಚಿ ಜೈಲಿಗೆ ಹೋಗಿಬಂದ ನಾಯಕರೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ನನ್ನ ತಂದೆ 40 ವರ್ಷ ಬ್ಲಾಕ್ ಕಾಂಗ್ರಸ್ ಅಧ್ಯಕ್ಷರಾಗಿದ್ದರು ಎಂದು ತಿಳಿಸಿದ್ದರು.

  • ನಮ್ಮ ಮನೆಗೆ ಬೆಂಕಿ ಹಚ್ಚಿದವರನ್ನ ಪಕ್ಷದ ಅಧ್ಯಕ್ಷರು ಜೊತೆಯಲ್ಲಿಟ್ಟುಕೊಂಡು ಓಡಾಡ್ತಿದ್ದಾರೆ: ಅಖಂಡ

    ನಮ್ಮ ಮನೆಗೆ ಬೆಂಕಿ ಹಚ್ಚಿದವರನ್ನ ಪಕ್ಷದ ಅಧ್ಯಕ್ಷರು ಜೊತೆಯಲ್ಲಿಟ್ಟುಕೊಂಡು ಓಡಾಡ್ತಿದ್ದಾರೆ: ಅಖಂಡ

    ಬೆಂಗಳೂರು: ನಮ್ಮ ಮನೆಗೆ ಬೆಂಕಿ ಹಚ್ಚಿದವರನ್ನು ಪಕ್ಷದ ಅಧ್ಯಕ್ಷರು ಜೊತೆಯಲ್ಲಿಟ್ಟುಕೊಂಡು ಓಡಾಡುತ್ತಿದ್ದಾರೆ ಎಂದು ಹೆಸರು ಹೇಳಿದೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಆರೋಪ ಮಾಡಿದರು.

    ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಅತಿ ಹೆಚ್ಚು ಮತ ಪಡೆದೆ ಎಂಬ ಕಾರಣಕ್ಕೆ ನನ್ನ ಮೇಲೆ ಹಿರಿಯ ನಾಯಕರು ಷಡ್ಯಂತ್ರ ರೂಪಿಸಿದರು. ಈ ಚುನಾವಣೆಯಲ್ಲಿ ಟಿಕೆಟ್ ಕೂಡ ತಪ್ಪಿಸಿದರು. ನನ್ನನ್ನು ಸೋಲಿಸಲು ಪ್ರಯತ್ನಿಸಿದರು. ಉಳಿದ ಶಾಸಕರಿಗಾದರೂ ನ್ಯಾಯ ಕೊಡಿ ಅವರಿಗೆ ಅನ್ಯಾಯ ಮಾಡಬೇಡಿ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ವಿವಾದ – ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

    2020 ರಲ್ಲಿ ನನ್ನ ಮನೆಗೆ ಬೆಂಕಿ ಹಾಕಿ ಪೊಲೀಸ್ ಠಾಣೆಗೂ ಬೆಂಕಿ ಹಚ್ಚಿದ್ದರು. ಗಾಡಿಗಳಿಗೂ ಬೆಂಕಿ ಹಾಕಿದ್ದರು. ಸಿಸಿಟಿವಿ ಫೂಟೇಜ್ ನೋಡಿಯೆ ಆರೋಪಿಗಳನ್ನ ಹುಡುಕಿ ಕೇಸು ಹಾಕಿದ್ದಾರೆ. ಅಮಾಯಕರನ್ನ ಕೇಸಿನಿಂದ ಅವಾಗಲೇ ಕೈ ಬಿಟ್ಟಿದ್ದಾರೆ. ಈಗ ಈ ಬೆಳವಣಿಗೆ ಆಗಿದೆ. ಇದರ ಹಿಂದೆ ಯಾರೋ ಕಿಂಗ್‌ಪಿನ್ ಇದ್ದಾರೆ. ಹಿರಿಯ ನಾಯಕರ ಶಡ್ಯಂತ್ರ ಇದೆ ಎಂದು ಆರೋಪಿಸಿದರು.

    ನಾನು ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಕೋರ್ಟ್‌ಗೂ ಮನವಿ ಮಾಡುತ್ತೇನೆ. ನಮ್ಮ ವಕೀಲರ ಮೂಲಕ ಸರ್ಕಾರದ ನಡೆ ಬಗ್ಗೆ ಕೋರ್ಟ್‌ಗೆ ಮನವಿ ಮಾಡುತ್ತೇನೆ. ಅಮಾಯಕರಿದ್ದರೆ ಅವರನ್ನ ಬಿಡಿ ಎಂದು ಹಿಂದೆ ನಾನೇ ಹೇಳಿದ್ದೆ. ಸಿಸಿ ಕ್ಯಾಮೆರಾ ಫೂಟೇಜ್ ನೋಡಿಯೆ ಪೊಲೀಸರು ಹಾಗೂ ಎನ್‌ಐಎ ತಪ್ಪಿತಸ್ಥರನ್ನ ಬಂಧಿಸಿರುವುದು. ಈಗ ಹೀಗೆ ಮಾಡುವುದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: ಫ್ರೆಂಡ್ಸ್ ನಡುವಿನ ಘಟನೆಯನ್ನ ಎಲ್ಲಿಗೋ ತೆಗೆದುಕೊಂಡು ಹೋಗ್ಬೇಡಿ: ಉಡುಪಿ ಕೇಸ್ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯೆ

    ನಾನು ದಲಿತ ಶಾಸಕ. ನನಗೆ ರಕ್ಷಣೆ ಕೊಡಲಿಲ್ಲ. ಅಂದು ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ. ತನ್ವಿರ್ ಸೇಠ್ ಪತ್ರದ ಹಿಂದೆ ಹಿರಿಯ ನಾಯಕರು ಇದ್ದಾರೆ. ನಾನು 2018 ರಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದೆ. ಸಿಎಂ ಹಾಗೂ ಗೃಹ ಸಚಿವರಿಗೆ ಮನವಿ ಮಾಡುತ್ತೇನೆ. ಸರ್ಕಾರದ ಈ ನಡೆ ವಿರುದ್ಧ ಕೋಟ್‌ನಲ್ಲೂ ಹೋರಾಟ ಮಾಡ್ತೀನಿ ಎಂದು ತಿಳಿಸಿದರು.

    ಆರೋಪಿಗಳನ್ನ ಬಿಡುಗಡೆ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಹಾಗೂ ಸಂಪತ್ ರಾಜು ವಿರುದ್ಧ ಅಖಂಡ ಶ್ರೀನಿವಾಸ ಮೂರ್ತಿ ಗುಡುಗಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿದ್ದು, ಡಿಕೆಶಿ ಫೈಟ್‌ನಲ್ಲಿ ಗೆದ್ದ ಪರಮೇಶ್ವರ್‌!

    ಸಿದ್ದು, ಡಿಕೆಶಿ ಫೈಟ್‌ನಲ್ಲಿ ಗೆದ್ದ ಪರಮೇಶ್ವರ್‌!

    ಬೆಂಗಳೂರು: ಪುಲಕೇಶಿನಗರದಲ್ಲಿ (Pulakeshinagar) ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭವಾಗಿದ್ದು ಪರಮೇಶ್ವರ್‌ (Parameshwar) ಆಪ್ತನಿಗೆ ಕಾಂಗ್ರೆಸ್‌ ಟಿಕೆಟ್‌ ಸಿಕ್ಕಿದೆ.

    ಮನೆಗೆ ಬೆಂಕಿ ಬಿದ್ದವರಿಗೂ ಇಲ್ಲ. ಬೆಂಕಿ ಹಾಕಿದ ಆರೋಪ ಹೊತ್ತವರಿಗೂ ಟಿಕೆಟ್ ಸಿಕ್ಕಿಲ್ಲ. ಇಬ್ಬರ ನಡುವಿನ ಜಗಳ ಎರಡು ಬಣದ ನಡುವಿನ ಫೈಟ್ ಮೂರನೇ ಬಣಕ್ಕೆ ನೆರವಾಗಿದೆ.

    ಕೆಜಿಹಳ್ಳಿ ಡಿಜೆಹಳ್ಳಿ ಗಲಾಟೆಯ ಸಂದರ್ಭದಲ್ಲಿ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ (Akhanda Srinivas Murthy) ಮನೆಗೆ ಬೆಂಕಿ ಬಿದ್ದಿತ್ತು. ಸಂಪತ್‌ ರಾಜ್‌ ಮೇಲೆ ಬೆಂಕಿ ಹಾಕಿಸಿದ ಆರೋಪ ಬಂದಿತ್ತು.

    ಪರಿಶಿಷ್ಟ ವರ್ಗಕ್ಕೆ ಮೀಸಲಾಗಿರುವ ಈ ಕ್ಷೇತ್ರದಲ್ಲಿ ಅನುಕಂಪದ ಆಧಾರದ ಮೇಲೆ ಶ್ರೀನಿವಾಸ ಮೂರ್ತಿ ಅವರಿಗೆ ಟಿಕೆಟ್‌ ನೀಡುವಂತೆ ಸಿದ್ದರಾಮಯ್ಯ (Siddaramaiah) ಲಾಬಿ ಮಾಡಿದ್ದರೆ ಮಾಜಿ ಬಿಬಿಎಂಪಿ ಮೇಯರ್‌ ಸಂಪತ್‌ ರಾಜ್‌ (Sampath Raj) ಪರ ಡಿಕೆ ಶಿವಕುಮಾರ್‌ ಬ್ಯಾಟ್‌ ಬೀಸಿದ್ದರು.

    ಇಬ್ಬರ ನಡುವಿನ ಹಗ್ಗಜಗ್ಗಾಟ ಈಗ ಪರಮೇಶ್ವರ್ ಆಪ್ತ ಎ.ಸಿ ಶ್ರೀನಿವಾಸ್‍ಗೆ ಪುಲಿಕೇಶಿನಗರದ ಟಿಕೆಟ್‌ ಸಿಕ್ಕಿದೆ. ಶ್ರೀನಿವಾಸ್‌ ಅವರು ದೇವನಹಳ್ಳಿ ಕ್ಷೇತ್ರದಿಂದ ಕಣಕ್ಕೆ ಇಳಿಯಲು ಮುಂದಾಗಿದ್ದರು. ಆದರೆ ಅಲ್ಲಿಯ ಟಿಕೆಟ್‌ ಕೈ ತಪ್ಪಿದ್ದರೂ ಈಗ ಪುಲಕೇಶಿನಗರದ ಟಿಕೆಟ್‌ ಸಿಕ್ಕಿದೆ. ಇದನ್ನೂ ಓದಿ: ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ – ಈಶ್ವರಪ್ಪಗೆ ಹೈಕಮಾಂಡ್‌ ಶಾಕ್‌

     

    ಕಾಂಗ್ರೆಸ್‌ ಬಿಡುಗಡೆ ಮಾಡಿದ ಮೂರು ಪಟ್ಟಿಯಲ್ಲಿ ತನ್ನ ಹೆಸರು ಇಲ್ಲದ ಕಾರಣ ಅಖಂಡ ಶ್ರೀನಿವಾಸಮೂರ್ತಿ ಈಗಾಗಲೇ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

    ಕಳೆದ ಬಾರಿ ಚುನಾವಣೆಯಲ್ಲಿ ಅಖಂಡ 81 ಸಾವಿರ ಮತಗಳ ಅಂತರದಿಂದ ಭರ್ಜರಿ ಜಯಗಳಿಸಿದ್ದರು. ಶ್ರೀನಿವಾಸಮೂರ್ತಿಗೆ 97,574 ಮತಗಳು ಬಿದ್ದಿದ್ದರೆ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಪ್ರಸನ್ನಕುಮಾರ್‌ಗೆ 15,948 ಮತಗಳು ಸಿಕ್ಕಿತ್ತು. ಬಿಜೆಪಿಯಿಂದ ಸ್ಪರ್ಧಿಸಿದ್ದ ಸುಶೀಲಾ ದೇವರಾಜ್‌ಗೆ 9,479 ಮತಗಳು ಬಿದ್ದಿದ್ದವು.

  • ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ

    ಶಾಸಕ ಸ್ಥಾನಕ್ಕೆ ಅಖಂಡ ಶ್ರೀನಿವಾಸಮೂರ್ತಿ ರಾಜೀನಾಮೆ

    ಕಾರವಾರ: ಪುಲಕೇಶಿ ನಗರದ ಶಾಸಕರಾಗಿದ್ದ ಅಖಂಡ ಶ್ರೀನಿವಾಸ್ ಮೂರ್ತಿ (Akhanda Srinivas Murthy) ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಭಾನುವಾರ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ಅವರ ನಿವಾಸಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಈ ದೇಶದಲ್ಲಿ ಧೈರ್ಯವಾಗಿ ಮಾತನಾಡುವ ಮನುಷ್ಯ ರಾಹುಲ್ ಗಾಂಧಿ ಮಾತ್ರ – ಮಲ್ಲಿಕಾರ್ಜುನ ಖರ್ಗೆ

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನಾನು ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್‌ನ (Congress) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ನಾಳೆ ಪಕ್ಷದ ಕಾರ್ಯಕರ್ತರ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶೆಟ್ಟರ್ ರಾಜೀನಾಮೆಯಿಂದ ಬಿಜೆಪಿಗೆ ಯಾವುದೇ ಡ್ಯಾಮೇಜ್ ಆಗಲ್ಲ: ಅರವಿಂದ ಬೆಲ್ಲದ್

    ಅಕ್ಕಪಕ್ಕದ ಕ್ಷೇತ್ರದ ನಾಯಕರು ಹೇಳಿದರು ಅಂತಾ ನನಗೆ ಟಿಕೆಟ್ ತಪ್ಪಿಸಿದರು. ಕೆಜೆ ಹಳ್ಳಿ ಡಿಜೆಹಳ್ಳಿ ಗಲಾಟೆಯಾದ್ರೂ ನಾವೆಲ್ಲಾ ಅಣ್ಣತಮ್ಮಂದಿರಂತೆ ಇದ್ದೆವು. ಆದ್ರೆ ಬೆಂಕಿ ಹಚ್ಚಿ ಜೈಲಿಗೆ ಹೋಗಿಬಂದ ನಾಯಕರೇ ನನಗೆ ಟಿಕೆಟ್ ತಪ್ಪಿಸಿದ್ದಾರೆ. ನನ್ನ ತಂದೆ 40 ವರ್ಷ ಬ್ಲಾಕ್ ಕಾಂಗ್ರಸ್ ಅಧ್ಯಕ್ಷರಾಗಿದ್ದವರು. ಹಾಗಾಗಿ ಹಿರಿಯ ನಾಯಕರ ಮೇಲೆ ನನಗಿನ್ನೂ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.

  • ಅಖಂಡ ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್‌ಗೆ ಗುಡ್‌ಬೈ

    ಅಖಂಡ ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್‌ಗೆ ಗುಡ್‌ಬೈ

    ಬೆಂಗಳೂರು: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನ (Congress) 3ನೇ ಪಟ್ಟಿ ಬಿಡುಗಡೆಯಾಗಿದೆ. ಆದರೆ ಈ 3 ಪಟ್ಟಿಗಳಲ್ಲೂ ಹಾಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ (Akhanda Srinivas Murthy) ಟಿಕೆಟ್ ನೀಡಲಾಗಿಲ್ಲ. ಇದೀಗ ಪುಲಕೇಶಿ ನಗರದ ಶಾಸಕ  ಅಖಂಡ ಶ್ರೀನಿವಾಸ್ ಮೂರ್ತಿ ಕಾಂಗ್ರೆಸ್‌ ವಿರುದ್ಧ  ಸಿಡಿದು ರಾಜೀನಾಮೆ ನೀಡಲು ಮುಂದಾಗಿದ್ದಾರೆ.

    ಶ್ರೀನಿವಾಸ್ ಮುರ್ತಿ ಶನಿವಾರ ಈ ಬಗ್ಗೆ ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿದ್ದಾರೆ. ನಿಮ್ಮ ಯಾವುದೇ ತೀರ್ಮಾನಕ್ಕೂ ನಾವು ಬದ್ಧ ಎಂದು ಕಾರ್ಯಕರ್ತರು ತಿಳಿಸಿದ್ದಾರೆ. ಭಾನುವಾರ ಅಖಂಡ ಅವರು ಸ್ಪೀಕರ್ ಕಾಗೇರಿಗೆ ರಾಜೀನಾಮೆ ಸಲ್ಲಿಸಲು ಶಿರಸಿಗೆ ತೆರಳಿದ್ದಾರೆ. ಇದನ್ನೂ ಓದಿ: ಶೆಟ್ಟರ್ ರಾಜೀನಾಮೆಯಿಂದ ವೈಯಕ್ತಿಕವಾಗಿ ಬೇಸರವಾಗಿದೆ: ಬೊಮ್ಮಾಯಿ

    ಸಿದ್ದರಾಮಯ್ಯ ಮತ್ತು ಜಮೀರ್ ಅಖಂಡ ಪರವಾಗಿ ಬ್ಯಾಟ್ ಮಾಡಿದ್ದರು. ಆದರೆ ಡಿಕೆ ಶಿವಕುಮಾರ್ ತಮ್ಮ ಅಭ್ಯರ್ಥಿಯ ಪರವಾಗಿ ಹೈಕಮಾಂಡ್ ಮುಂದೆ ಬ್ಯಾಟ್ ಬೀಸಿದ್ದರು. ಇದನ್ನೂ ಓದಿ: ಮತ್ತೊಂದು ವಿಕೆಟ್‌ ಪತನ – ಜೆಡಿಎಸ್‌ನತ್ತ ಮುಖಮಾಡಿದ ನಾಗಮಾರಪಳ್ಳಿ

  • ಅಖಂಡ ಶ್ರೀನಿವಾಸ ಮೂರ್ತಿಗೆ ಕಾಂಗ್ರೆಸ್ ಟಿಕೆಟ್‌ಗಾಗಿ ದೇಗುಲ, ಮಸೀದಿಯಲ್ಲಿ ವಿಶೇಷ ಪೂಜೆ

    ಅಖಂಡ ಶ್ರೀನಿವಾಸ ಮೂರ್ತಿಗೆ ಕಾಂಗ್ರೆಸ್ ಟಿಕೆಟ್‌ಗಾಗಿ ದೇಗುಲ, ಮಸೀದಿಯಲ್ಲಿ ವಿಶೇಷ ಪೂಜೆ

    ಬೆಂಗಳೂರು: ಕಾಂಗ್ರೆಸ್‌ನ (Congress) ಮೂರನೇ ಪಟ್ಟಿಯಲ್ಲಿ ಪುಲಕೇಶಿನಗರದ ವಿಧಾನಸಭಾ ಕ್ಷೇತ್ರಕ್ಕೆ ಅಖಂಡ ಶ್ರೀನಿವಾಸ ಮೂರ್ತಿ (Akhanda Srinivas Murthy) ಅವರ ಹೆಸರು ಬರಲಿ ಹಾಗೂ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗಲಿ ಎಂದು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಬೆಂಬಲಿಗರು ದೇಗುಲ ಮತ್ತು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

    ಪುಲಕೇಶಿನಗರದಲ್ಲಿನ ತಂಗಬೆಟ್ಟ ಸುಬ್ರಮಣ್ಯ ದೇಗುಲ ಹಾಗೂ ಮಸೀದಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅಭಿಮಾನಿಗಳು, ಟಿಕೆಟ್‌ಗಾಗಿ ಪೂಜೆ, ಪುನಸ್ಕಾರ ಮಾಡಿದರು. ಇದನ್ನೂ ಓದಿ: ಹಿಂದೂಗಳ ಭಾವನೆಗೆ ಧಕ್ಕೆ ಆರೋಪ: ಶಾಸಕ ಡಾ.ಶಿವರಾಜ್ ಪಾಟೀಲ್ ವಿರುದ್ಧ ಜೆಡಿಎಸ್ ದೂರು

    ಕಾಂಗ್ರೆಸ್ ಹೈಕಮಾಂಡ್ ಬಳಿ ತೆರಳಿ ಅವರಲ್ಲಿ ಟಿಕೆಟ್‌ಗಾಗಿ ಮನವಿ ಮಾಡಲು ಸಾಧ್ಯವಿಲ್ಲ. ಆದ್ದರಿಂದ ದೇವರ ಮೊರೆ ಹೋಗಿದ್ದೇವೆ. ಇಲ್ಲಿಯ ಪೂಜೆಯಿಂದ ಹೈಕಮಾಂಡ್ ಅಖಂಡ ಶ್ರೀನಿವಾಸ ಮೂರ್ತಿಯವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಿ ಎಂದು ಪ್ರಾರ್ಥಿಸಿದರು.

    ಕಳೆದ ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಅತೀ ಹೆಚ್ಚು ಅಂದರೆ, 81 ಸಾವಿರ ಮತಗಳಿಂದ ಅಮೋಘ ಗೆಲುವು ಸಾಧಿಸಿರುವ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಈ ಬಾರಿ ಟಿಕೆಟ್ ನೀಡಲು ವಿಳಂಬವಾಗುತ್ತಿರುವುದಕ್ಕೆ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಗುಜರಾತ್ ನಾಯಕರನ್ನು ಮೆಚ್ಚಿಸಲು KMF ಮುಗಿಸುವ ಹುನ್ನಾರ: ಹೆಚ್ಡಿಕೆ ವಾಗ್ದಾಳಿ

    ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಈ ಬಾರಿ ಟಿಕೆಟ್ ನೀಡಿದ್ದೇ ಆದ್ದಲ್ಲಿ ಅವರನ್ನು ಕಳೆದ ಬಾರಿಗಿಂತ ಇನ್ನೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸುವಂತೆ ಮಾಡಲಾಗುವುದು ಎಂದು ಬೆಂಬಲಿಗರು ಭರವಸೆ ನೀಡಿದ್ದಾರೆ. ಹಾಗೆಯೇ ಅಖಂಡ ಶ್ರೀನಿವಾಸ ಮೂರ್ತಿ ಅವರ ಪರ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಹಾಕಿದರು.

  • ವಿಶ್ವನಾಥ್‍ಗೆ ಪಕ್ಷದ ಸಿದ್ಧಾಂತ ಗೊತ್ತಿಲ್ಲ, ಕರೆದು ತಿಳಿ ಹೇಳುತ್ತೇವೆ: ಕಟೀಲ್

    ವಿಶ್ವನಾಥ್‍ಗೆ ಪಕ್ಷದ ಸಿದ್ಧಾಂತ ಗೊತ್ತಿಲ್ಲ, ಕರೆದು ತಿಳಿ ಹೇಳುತ್ತೇವೆ: ಕಟೀಲ್

    ರಾಯಚೂರು: ಎಚ್. ವಿಶ್ವನಾಥ್ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅವರು ಇತ್ತೀಚೆಗೆ ನಮ್ಮ ಪಾರ್ಟಿಗೆ ಸೇರಿದ್ದಾರೆ. ಅವರನ್ನು ಕರೆದು ನಮ್ಮ ಪಕ್ಷದ ಸಿದ್ಧಾಂತದ ಬಗ್ಗೆ ತಿಳಿ ಹೇಳುತ್ತೇವೆ ಅಂತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

    ರಾಯಚೂರಿನಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಹಾಗೂ ಬಿಜೆಪಿ ಕಾರ್ಯಾಲಯ ಉದ್ಘಾಟನೆಗೆ ಆಗಮಿಸಿದ್ದ ಕಟೀಲ್, ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಊಹಾಪೋಹಗಳ ಮೂಲಕ ನಾನು ಉತ್ತರ ಕೊಡೋಕೆ ಆಗಲ್ಲ. ಎಲ್ಲರ ಹತ್ತಿರ ನಾನೂ ಮಾತನಾಡಿದ್ದೇನೆ, ಅರುಣ್ ಸಿಂಗ್ ಮಾತನಾಡಿದ್ದಾರೆ ಎಂದರು.

    ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ವಿಚಾರ ತನಿಖಾ ಹಂತದಲ್ಲಿದೆ ಸರ್ಕಾರ ಅದನ್ನ ನೋಡಿಕೊಳ್ಳುತ್ತದೆ. ನಾನು ಉತ್ತರ ಕೊಡುವುದು ಸರಿಯಲ್ಲ. ಪ್ರತಿ ಜನಪ್ರತಿನಿಧಿಗೂ ಸ್ವಾತಂತ್ರ್ಯವಿದೆ. ಅವರು ಯಾವ ಮಸೀದಿ, ದೇವಸ್ಥಾನ, ಮಠಕ್ಕೂ ಹೋಗಬಹುದು ಅಂತ ಹೇಳಿದರು. ಫಡ್ನವಿಸ್ ಜಾರಕಿಹೊಳಿ ಭೇಟಿ ವಿಚಾರವಾಗಿ ಮಾತನಾಡಿದ ಕಟಿಲ್, ಅವರು ನಮ್ಮ ಪಕ್ಷದ ನಾಯಕರನ್ನು ಭೇಟಿಯಾಗಿದ್ದಾರೆ. ಫಡ್ನವಿಸ್-ರಮೇಶ್ ಜಾರಕಿಹೊಳಿಯದ್ದು ಸಾಮಾನ್ಯ ಭೇಟಿ ಅದಕ್ಕೆ ಬೇರೆ ಅರ್ಥಗಳನ್ನ ಕಲ್ಪಿಸುವ ಅಗತ್ಯವಿಲ್ಲ ಎಂದರು. ಇದನ್ನೂ ಓದಿ: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ

    ಇವತ್ತು ಪ್ರಶ್ನೆ ಮಾಡಬೇಕಾಗಿರುವುದು ಸೋತು ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್ ಬಗ್ಗೆ ಸಿದ್ದರಾಮಯ್ಯ ಡಿ.ಕೆ. ಶಿವಕುಮಾರ್ ಜಗಳ ಪ್ರಾರಂಭ ಮಾಡಿದ್ದಾರೆ. ಪಕ್ಷದಲ್ಲಿ ಖುರ್ಚಿ ಹೋರಾಟ ಪ್ರಾರಂಭವಾಗಿದೆ. ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಾಕಿದ ಜೈಲಿನಲ್ಲಿದ್ದವನನ್ನೇ ಸಸ್ಪೆಂಡ್ ಮಾಡಲು ಆಗಲಿಲ್ಲ. ಪಕ್ಷದ ಪದಾಧಿಕಾರಿಗಳನ್ನ ಆಯ್ಕೆ ಮಾಡಲು ಹೈಕಮಾಂಡಗೆ ಹೋಗಿ ಗಲಾಟೆ ಮಾಡಿ ಹೈಕಮಾಂಡ್ ಅದನ್ನ ನಿಲ್ಲಿಸುವಂತ ಕೆಲಸಗಳಾಗಿವೆ. ಕಾಂಗ್ರೆಸ್ ನಲ್ಲಿ ನಾಯಕತ್ವದ ಪ್ರಶ್ನೆಗಳಿವೆ. ಗುಂಪುಗಾರಿಕೆ ಇರುವಂತಹದ್ದು ಕಾಂಗ್ರೆಸ್‍ನಲ್ಲಿ, ಒಡಂಬಡಿಕೆಯಿಲ್ಲದಿರುವುದು ಕಾಂಗ್ರೆಸ್‍ನಲ್ಲಿ. ಮುಂದಿನ ಸರ್ಕಾರ ನಮ್ಮದೇ ಬರುತ್ತೆ ಆದ್ರೆ ಕಾಂಗ್ರೆಸ್ ನವರು ಈಗಲೇ ಗಲಾಟೆ ಶುರು ಮಾಡಿಕೊಂಡಿದ್ದಾರೆ. ಮೂಲ ವಲಸಿಗ ತಿಕ್ಕಾಟ ಕಾಂಗ್ರೆಸ್‍ನಲ್ಲಿ ಶುರುವಾಗಿದೆ ಅಂತ ಹೇಳಿದರು.

    ಮಸ್ಕಿ ಉಪಚುನಾವಣೆ ಸೋಲಿನ ಬಗ್ಗೆ ಅವಲೋಕನ ಮಾಡುತ್ತಿದ್ದೇವೆ. ಬೆಳಗಾವಿಯಲ್ಲಿ ಕೆಲವಡೆ ಹಿನ್ನೆಡೆಯಾಗಿರುವ ಬಗ್ಗೆಯೂ ಅವಲೋಕನ ನಡೆಸಿದೆ. ಪಕ್ಷದ ಕಾರ್ಯಕರ್ತರ ಸಭೆ ಮೂಲಕ ಚರ್ಚೆ ಮಾಡುತ್ತಿದ್ದೇವೆ ಅಂತ ನಳಿನ್ ಕುಮಾರ್ ಕಟೀಲ್ ಹೇಳಿದರು.

  • ಸಂಪತ್ ರಾಜ್ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದ ಡಿಕೆಶಿ

    ಸಂಪತ್ ರಾಜ್ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದ ಡಿಕೆಶಿ

    ಬೆಂಗಳೂರು: ಡಿ.ಜೆ.ಹಳ್ಳಿ ಕೆ.ಜೆ.ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ವಿರುದ್ಧ ಕಡೆಗೂ ಶಿಸ್ತು ಕ್ರಮ ಕೈಗೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಂದಾಗಿದ್ದಾರೆ.

    ಅಖಂಡ ಮನೆಗೆ ಬೆಂಕಿ ಬಿದ್ದು 4 ತಿಂಗಳಾದ ಬಳಿಕ ಸಂಪತ್ ರಾಜ್ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವಂತೆ ಕೆಪಿಸಿಸಿಯ ಶಿಸ್ತುಪಾಲನ ಸಮಿತಿಗೆ ಶಿಫಾರಸ್ಸು ಮಾಡಿದ್ದಾರೆ. ರೆಹಮಾನ್ ಖಾನ್ ನೇತೃತ್ವದ ಶಿಸ್ತುಪಾಲನಾ ಸಮಿತಿ ನೀಡುವ ವರದಿ ಆಧಾರದ ಮೇಲೆ ಸಂಪತ್ ರಾಜ್ ಭವಿಷ್ಯ ತೀರ್ಮಾನ ಆಗಲಿದೆ.

    ಶಾಸಕ ಅಖಂಡ ಶ್ರೀನಿವಾಸಮೂರ್ತಿ ಎಷ್ಟು ಬಾರಿ ಮಾಡಿದ್ರೂ ಡಿಕೆ ಶಿವಕುಮಾರ್ ತಮ್ಮ ಶಿಷ್ಯನ ವಿರುದ್ಧ ಕ್ರಮಕ್ಕೆ ಮುಂದಾಗಿರಲಿಲ್ಲ. ಈ ಬಗ್ಗೆ ಬಹಿರಂಗವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು. ಕೊನೆಗೆ ಇದು ಆಗೋ ಕೆಲಸ ಅಂತಾ ಹೈಕಮಾಂಡ್‍ಗೆ ದೂರು ಕೊಡಲು ಅಖಂಡ ಶ್ರೀನಿವಾಸಮೂರ್ತಿ ತಯಾರಿ ನಡೆಸಿದ್ದರು. ಇದು ಗೊತ್ತಾಗುತ್ತಲೇ ಡಿಕೆ ಶಿವಕುಮಾರ್, ಸಂಪತ್ ರಾಜ್ ವಿರುದ್ಧ ಶಿಸ್ತುಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

  • ಅಖಂಡ ನೋವು ಅರ್ಥವಾಗ್ತಿದೆ, ಅವರ ಸ್ಥಾನದಲ್ಲಿ ನಾನಿರುತ್ತಿದ್ರೂ ನೋವಾಗ್ತಿತ್ತು: ಡಿಕೆಶಿ

    ಅಖಂಡ ನೋವು ಅರ್ಥವಾಗ್ತಿದೆ, ಅವರ ಸ್ಥಾನದಲ್ಲಿ ನಾನಿರುತ್ತಿದ್ರೂ ನೋವಾಗ್ತಿತ್ತು: ಡಿಕೆಶಿ

    ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ ಅವರು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

    ಡಿಕೆಶಿ ಅವರ ಸದಾಶಿವ ನಗರ ನಿವಾಸದಲ್ಲಿ ಭೇಟಿಯಾದ ಅಖಂಡ, ತಮ್ಮ ನಿವಾಸಕ್ಕೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಸಂಪತ್ ರಾಜು ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಅಖಂಡ ನೋವು ನನಗೆ ಅರ್ಥ ಆಗುತ್ತೆ. ಕೆಲವೊಂದು ವಿಷಯ ಹೇಳಿದ್ದಾರೆ. ಖಂಡಿತಾ ಅವರಿಗೆ ನ್ಯಾಯ ಒದಗಿಸಿ ಕೊಡುತ್ತೇನೆ. ಶಿಸ್ತುಪಾಲನಾ ಸಮಿತಿಗೆ ಶಿಫಾರಸು ಮಾಡುವುದಾಗಿ ತಿಳಿಸಿದರು.

    ಮೂರು-ನಾಲ್ಕು ದಿನದಿಂದ ಭೇಟಿಗೆ ಸಮಯ ಕೇಳಿದ್ದರು. ನಾನು ಇವತ್ತು ಬರೋಕೆ ಹೇಳಿದ್ದೆ. ಅವರ ಸಮಸ್ಯೆ ಕೇಳಿದೆ. ಭಾರೀ ನೋವಲ್ಲಿ ಇದ್ದಾರೆ. ಅವರ ನೋವು ನನಗೆ ಅರ್ಥ ಆಗುತ್ತೆ. ನಾನೇ ಅವರ ಸ್ಥಾನದಲ್ಲಿದ್ದರೂ ನೋವಾಗುತ್ತಿತ್ತು ಎಂದು ಡಿಕೆಶಿ ಹೇಳಿದರು.

    ಇದೇ ವೇಳೆ ಅಖಂಡ ಮಾತನಾಡಿ, ಮಾಜಿ ಮೇಯರ್ ಸಂಪತ್ ರಾಜ್, ಜಾಕೀರ್ ರನ್ನ ಪಕ್ಷದಿಂದ ಉಚ್ಚಾಟಿಸಬೇಕು ಅಂತ ಹೇಳಿದ್ದೀನಿ. ನ್ಯಾಯ ಸಿಗುತ್ತೆ ಅನ್ನೋ ಭರವಸೆ ಇದೆ. ಎಲ್ಲವನ್ನೂ ಹೇಳಿದ್ದೇನೆ. ವಿಚಾರವನ್ನ ಶಿಸ್ತು ಪಾಲನಾ ಸಮಿತಿಗೆ ಶಿಫಾರಸು ಮಾಡ್ತೀನಿ ಅಂದಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗಬೇಕು. ನ್ಯಾಯ ಸಿಗುತ್ತೆ ಅನ್ನೊ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಭೇಟಿ ವೇಳೆ ಇಬ್ಬರು ಮಹಿಳಾ ಜನ ಪ್ರತಿನಿಧಿಗಳು ಡಿಕೆಶಿ ಕಾಲಿಗೆ ಬಿದ್ದು ನಮಸ್ಕರಿಸಿದ ಪ್ರಸಂಗ ನಡೆಯಿತು. ರಾಮನಗರ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಜಯರತ್ನ ರಾಜೇಂದ್ರ ಹಾಗೂ ಕನಕಪುರ ತಾಲೂಕು ಪಂಚಾಯತ ಉಪ ಅಧ್ಯಕ್ಷೆ ಮಂಜುಳಾ ಬೇಡ.. ಬೇಡ ಅಂದ್ರೂ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ.