Tag: Akhil Akkineni

  • ಮಾಜಿ ಪತಿ ಕುಟುಂಬದ ಜೊತೆ ಸಮಂತಾ ಒಡನಾಟ.!

    ಮಾಜಿ ಪತಿ ಕುಟುಂಬದ ಜೊತೆ ಸಮಂತಾ ಒಡನಾಟ.!

    ಸೌತ್ ನಟಿ ಸಮಂತಾ (Samantha) ಅವರು ನಾಗಚೈತನ್ಯ (Nagachaitanya) ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿ ಒಂದೂವರೆ ವರ್ಷ ಕಳೆದಿದೆ. ಈವರೆಗೂ ಇಬ್ಬರ ಡಿವೋರ್ಸ್‌ಗೆ (Divorce) ಕಾರಣ ಏನು ಎಂಬುದು ಸೀಕ್ರೆಟ್ ಆಗಿಯೇ ಇದೆ. ಸಂಬಂಧ ಕಳೆದುಕೊಂಡರು ಕೂಡ ಮಾಜಿ ಪತಿಯ ಕುಟುಂಬದ ಜೊತೆ ಸ್ಯಾಮ್‌ಗೆ ಒಡನಾಟವಿದೆ. ಮಾಜಿ ಪತಿಯ ಕುಟುಂಬದ ಮೇಲಿನ ಪ್ರೀತಿ ಸ್ಯಾಮ್‌ಗೆ ಕಮ್ಮಿಯಾಗಿಲ್ಲ. ಬಾಮೈದ ಬರ್ತ್‌ಡೇಗೆ ಸಮಂತಾ ಶುಭಕೋರಿದ್ದಾರೆ.

    ಸಾಕಷ್ಟು ವರ್ಷಗಳ ಡೇಟಿಂಗ್ ನಂತರ ಎರಡು ಕುಟುಂಬವನ್ನು ಒಪ್ಪಿಸಿ ಸಮಂತಾ- ನಾಗಚೈತನ್ಯ ಅದ್ದೂರಿಯಾಗಿ ಮದುವೆಯಾಗಿದ್ದರು. ಆದರೆ ಅವರ ದಾಂಪತ್ಯ ನಾಲ್ಕೇ ವರ್ಷಕ್ಕೆ ಬ್ರೇಕ್ ಬಿತ್ತು. ಸದ್ಯ ಇಬ್ಬರು ತಮ್ಮ ತಮ್ಮ ಸಿನಿಮಾಗಳತ್ತ ಬ್ಯುಸಿಯಾಗಿದ್ದಾರೆ. ಜೊತೆಗೆ ಆಗಾಗ ತಮ್ಮ ಖಾಸಗಿ ವಿಚಾರವಾಗಿ ಸದ್ದು ಮಾಡುತ್ತಾರೆ.

    ಅಖಿಲ್ ಅಕ್ಕಿನೇನಿ (Akhil Akkineni) ಅವರಿಗೆ ಈಗ 29 ವರ್ಷ ವಯಸ್ಸು. ಶನಿವಾರ (ಏಪ್ರಿಲ್ 08) ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಆ ಪ್ರಯುಕ್ತ ಅವರ ಹೊಸ ಸಿನಿಮಾ ‘ಏಜೆಂಟ್’ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಸ್ನೇಹಿತರು, ಅಭಿಮಾನಿಗಳು, ಸೆಲೆಬ್ರಿಟಿಗಳು ಅಖಿಲ್‌ಗೆ ಶುಭಾಶಯ ಕೋರಿದ್ದಾರೆ. ಇನ್ಸ್ಟಾಗ್ರಾಂ ಸ್ಟೋರಿ ಮೂಲಕ ಸಮಂತಾ ಕೂಡ ಅಖಿಲ್‌ಗೆ ಶುಭ ಹಾರೈಸಿದ್ದಾರೆ. `ಏಜೆಂಟ್’ (Agent) ಸಿನಿಮಾ ಸೂಪರ್ ಹಿಟ್ ಆಗಲಿ ಎಂದು ಅವರು ವಿಶ್ ಮಾಡಿದ್ದಾರೆ. ಇದನ್ನೂ ಓದಿ: ನಿಮ್ಮ ಉಪಸ್ಥಿತಿಗೆ ಬೆಲೆ ಕೊಡುವವರನ್ನು ಬಿಟ್ಟೋಗ್ಬೇಡಿ-ರಾಧಿಕಾ ಪಂಡಿತ್ ಹಿಂಗ್ಯಾಕಂದ್ರು?

    ಸೌತ್ ಬ್ಯೂಟಿ ಸಮಂತಾ, ಯಶೋದ ಸೂಪರ್ ಸಕ್ಸಸ್ ನಂತರ ‘ಶಾಕುಂತಲಂ’ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಏ.14ಕ್ಕೆ ಸಿನಿಮಾ ತೆರೆಗೆ ಅಪ್ಪಳಿಸುತ್ತಿದೆ. ಸಮಂತಾ ಶಾಕುಂತಲೆಯಾಗಿ ಬರುತ್ತಿದ್ದಾರೆ.

  • ಅಖಿಲ್ ಅಕ್ಕಿನೇನಿ ಹುಟ್ಟುಹಬ್ಬಕ್ಕೆ ‘ಏಜೆಂಟ್’ ಹೊಸ ಪೋಸ್ಟರ್ ರಿಲೀಸ್

    ಅಖಿಲ್ ಅಕ್ಕಿನೇನಿ ಹುಟ್ಟುಹಬ್ಬಕ್ಕೆ ‘ಏಜೆಂಟ್’ ಹೊಸ ಪೋಸ್ಟರ್ ರಿಲೀಸ್

    ಡೈನಾಮಿಕ್ ಹೀರೋ ಅಖಿಲ್ ಅಕ್ಕಿನೇನಿ (Akhil Akkineni), ಸ್ಟೈಲಿಶ್ ಮೇಕರ್ ಸುರೇಂದರ್ ರೆಡ್ಡಿ (Surender Reddy) ಕಾಂಬಿನೇಶನ್ ಹೈ ವೋಲ್ಟೇಜ್ ಸಿನಿಮಾ ‘ಏಜೆಂಟ್’ (Agent) ಬಿಡುಗಡೆಗೆ ಸಜ್ಜಾಗಿದೆ. ಟಾಲಿವುಡ್ ಅಂಗಳದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲೊಂದಾದ ‘ಏಜೆಂಟ್’ ಏಪ್ರಿಲ್ 28ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ.

    ಮೇಕಿಂಗ್ ವೀಡಿಯೋ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಹೊಸ ಪೋಸ್ಟರ್ ಅಖಿಲ್ ಅಕ್ಕಿನೇನಿ ಹುಟ್ಟುಹಬ್ಬಕ್ಕೆ ರಿಲೀಸ್ ಆಗಿದೆ. ಕೈಯಲ್ಲಿ ಗನ್ ಹಿಡಿದು ಸ್ಟೈಲೀಶ್ ಲುಕ್ ನಲ್ಲಿ ಅಖಿಲ್ ಎಂಟ್ರಿ ಕೊಟ್ಟಿರುವ ಪೋಸ್ಟರ್ ಕಿಚ್ಚು ಹಚ್ಚಿದೆ. ಈ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಚಿತ್ರತಂಡ ಪ್ರಮೋಷನ್ ಗೆ ಕಿಕ್ ಸ್ಟಾರ್ಟ್ ಕೊಟ್ಟಿದೆ. ಮುಂಬರುವ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡು ಏಜೆಂಟ್ ಟೀಂ ಪ್ಲಾನ್ ಮಾಡಿಕೊಂಡಿದೆ. ಇದನ್ನೂ ಓದಿ: ‘ವಿಷ್ಣುಪ್ರಿಯಾ’ಗಾಗಿ ಕೇರಳದಿಂದ ಹಾರಿಬಂದ ಕಣ್ಸನ್ನೆ ಬೆಡಗಿ ಪ್ರಿಯಾ

    ನಿರ್ದೇಶಕ ಸುರೇಂದರ್ ರೆಡ್ಡಿ ಏಜೆಂಟ್ ಚಿತ್ರವನ್ನು ಇತರೆ ಸ್ಪೈ ಥ್ರಿಲ್ಲರ್ ಸಿನಿಮಾಗಳಿಗಿಂತಲೂ ಡಿಫ್ರೆಂಟ್ ಆಗಿ ತೆರೆ ಮೇಲೆ ತರುತ್ತಿದ್ದು ಇಬ್ಬರ ಕಾಂಬಿನೇಶನ್ ಮೇಲೆ ಸಿನಿ ಪ್ರೇಮಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದಲ್ಲಿ ಸಾಕ್ಷಿ ವೈದ್ಯ ಅಖಿಲ್ ಅಕ್ಕಿನೇನಿಗೆ ನಾಯಕಿಯಾಗಿ ನಟಿಸಿದ್ದು, ಮಮ್ಮುಟ್ಟಿ ಚಿತ್ರದ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ರಾಮಬ್ರಹ್ಮಂ ಸುಂಕರ AK ಎಂಟರ್ಟೈನ್ಮೆಂಟ್ಸ್ ಹಾಗೂ ಸುರೇಂದ್ರ 2 ಸಿನಿಮಾ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

    ಚಿತ್ರಕ್ಕೆ ವಕ್ಕನಾಥಂ ವಂಶಿ ಕಥೆ ಬರೆದಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ ಕೊಲ್ಲ ಕಲಾ ನಿರ್ದೇಶನ, ಅಜೇಯ್ ಸುಂಕರ, ಪಾತಿ ದೀಪ ರೆಡ್ಡಿ ಸಹ ನಿರ್ಮಾಣ ಚಿತ್ರಕ್ಕಿದೆ. ಹಿಪ್ ಹಾಪ್ ಥಮೀಜಾ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಏಜೆಂಟ್ ಚಿತ್ರ ರಸೂಲ್ ಎಲ್ಲೋರೆ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿರುವ ಪ್ಯಾನ್ ಇಂಡಿಯಾ ಸಿನಿಮಾ ಏಜೆಂಟ್ ಬೇಸಿಗೆ ರಜೆ ದಿನಗಳಲ್ಲಿ ತೆರೆಗೆ ಬರ್ತಿದ್ದು, ಬಾಕ್ಸಾಫೀಸ್ ಧೂಳ್ ಎಬ್ಬಿಸಲು ಅಖಿಲ್ ಸನ್ನದ್ಧರಾಗಿದ್ದಾರೆ.

  • ಅಖಿಲ್ ಅಕ್ಕಿನೇನಿ ‘ಏಜೆಂಟ್’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್

    ಅಖಿಲ್ ಅಕ್ಕಿನೇನಿ ‘ಏಜೆಂಟ್’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್

    ಯಂಗ್ ಅಂಡ್ ಡೈನಾಮಿಕ್ ಹೀರೋ ಅಖಿಲ್ ಅಕ್ಕಿನೇನಿ, ಸ್ಟೈಲಿಶ್ ಮೇಕರ್ ಸುರೇಂದರ್ ರೆಡ್ಡಿ ಕಾಂಬಿನೇಶನ್ ಹೈ ವೋಲ್ಟೇಜ್ ಸಿನಿಮಾ ‘ಏಜೆಂಟ್’. ಟಾಲಿವುಡ್ ಅಂಗಳದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲೊಂದಾದ ‘ಏಜೆಂಟ್’ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.  ಏಪ್ರಿಲ್ 28ಕ್ಕೆ ಸಿನಿಮಾ ತೆರೆ ಮೇಲೆ ಬರುತ್ತಿದೆ. ಹೊಸ ವರ್ಷದ ಆರಂಭದಲ್ಲಿ ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಿ ಬೇಸಿಗೆಯಲ್ಲಿ ಸಿನಿಮಾ ರಿಲೀಸ್ ಎಂದು ತಿಳಿಸಿದ್ದ ಚಿತ್ರತಂಡ ಇದೀಗ ಬಿಡುಗಡೆಯ ದಿನಾಂಕವನ್ನು ರಿವೀಲ್ ಮಾಡಿದೆ.

    ವೈಲ್ಡ್ ಆಕ್ಷನ್ ಗ್ಲಿಂಪ್ಸ್ ಬಿಡುಗಡೆ ಮಾಡುವ ಮೂಲಕ ‘ಏಜೆಂಟ್’ ಚಿತ್ರದ ರಿಲೀಸ್ ಡೇಟ್ ರಿವೀಲ್ ಮಾಡಿದೆ ಚಿತ್ರತಂಡ. ಚಿತ್ರದಲ್ಲಿ ಅಖಿಲ್ ಅಕ್ಕಿನೇನಿ ಸಖತ್ ಸ್ಟೈಲಿಶ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಸಿಕ್ಸ್ ಪ್ಯಾಕ್ ನಲ್ಲಿ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ನಿರ್ದೇಶಕ ಸುರೇಂದರ್ ರೆಡ್ಡಿ ಈ ಚಿತ್ರವನ್ನು ಇತರೆ ಸ್ಪೈ ಥ್ರಿಲ್ಲರ್ ಸಿನಿಮಾಗಳಿಗಿಂತಲೂ ಡಿಫ್ರೆಂಟ್ ಆಗಿ ತೆರೆ ಮೇಲೆ ತರುತ್ತಿದ್ದು ಇಬ್ಬರ ಕಾಂಬಿನೇಶನ್ ಮೇಲೆ ಸಿನಿ ಪ್ರೇಮಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದಲ್ಲಿ ಸಾಕ್ಷಿ ವೈದ್ಯ ಅಖಿಲ್ ಅಕ್ಕಿನೇನಿಗೆ ನಾಯಕಿಯಾಗಿ ನಟಿಸಿದ್ದು, ಮಮ್ಮುಟ್ಟಿ ಚಿತ್ರದ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇದನ್ನೂ ಓದಿ:ಮಗಳ ಜೊತೆಗಿನ ಮುದ್ದಾದ ಫೋಟೋ ಹಂಚಿಕೊಂಡ ನಟಿ ಬಿಪಾಶಾ ಬಸು

    ರಾಮಬ್ರಹ್ಮಂ ಸುಂಕರ AK ಎಂಟರ್ಟೈನ್ಮೆಂಟ್ಸ್ ಹಾಗೂ ಸುರೇಂದ್ರ 2 ಸಿನಿಮಾ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ವಕ್ಕನಾಥಂ ವಂಶಿ ಕಥೆ ಬರೆದಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ ಕೊಲ್ಲ ಕಲಾ ನಿರ್ದೇಶನ, ಅಜೇಯ್ ಸುಂಕರ, ಪಾತಿ ದೀಪ ರೆಡ್ಡಿ ಸಹ ನಿರ್ಮಾಣ ಚಿತ್ರಕ್ಕಿದೆ. ಹಿಪ್ ಹಾಪ್ ಥಮೀಜಾ ಸಂಗೀತ ನಿರ್ದೇಶನದಲ್ಲಿ ಮೂಡಿ ಬಂದ ಏಜೆಂಟ್ ಚಿತ್ರ ರಸೂಲ್ ಎಲ್ಲೋರೆ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ. ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿರುವ ಏಜೆಂಟ್ ಸಿನಿಮಾ ಏಪ್ರಿಲ್ 28ಕ್ಕೆ ಬಿಡುಗಡೆಯಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಾಜಿ ಪತಿ ಫ್ಯಾಮಿಲಿ ಜೊತೆ ಸಮಂತಾ ಒಡನಾಟ, ವೈರಲಾಯ್ತು ಪೋಸ್ಟ್

    ಮಾಜಿ ಪತಿ ಫ್ಯಾಮಿಲಿ ಜೊತೆ ಸಮಂತಾ ಒಡನಾಟ, ವೈರಲಾಯ್ತು ಪೋಸ್ಟ್

    ಟಾಲಿವುಡ್ (Tollywood) ಬ್ಯೂಟಿ ಸಮಂತಾ (Samantha) ಈಗ ಅಪರೂಪದ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ. ಮತ್ತೆ ಸಿನಿಮಾಗಳತ್ತ ಬ್ಯುಸಿಯಿರುವ ನಟಿ ಮತ್ತೆ ಖಾಸಗಿ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ಅಕ್ಕಿನೇನಿ ಕುಟುಂಬದ ಜೊತೆ ಸ್ಯಾಮ್ ಟಚ್‌ನಲ್ಲಿದ್ದಾರೆ. ಮಾಜಿ ಪತಿ ನಾಗಚೈತನ್ಯ (Nagachaitanya) ಸಹೋದರ ಅಖಿಲ್ ಅಕ್ಕಿನೇನಿ (AKhil Akkineni) ಕಾರ್ಯಕ್ಕೆ ಮೆಚ್ಚುಗೆ ಸೂಚಿಸುವ ಮೂಲಕ ನೆಟ್ಟಿಗರಿಗೆ ಅಚ್ಚರಿ ಮೂಡಿಸಿದ್ದಾರೆ.

    ಬಹುವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ಜೋಡಿ ನಾಗ್-ಸ್ಯಾಮ್ 2021ರಲ್ಲಿ ಡಿವೋರ್ಸ್ ನೀಡುವ ಮೂಲಕ ದೂರವಾದರು. ತೆರೆಯ ಮೇಲೆ ಮತ್ತು ತೆರೆಹಿಂದೆ ರೋಲ್ ಮಾಡೆಲ್ ಆಗಿದ್ದ ಈ ಜೋಡಿ ದೂರವಾಗಿದ್ದು, ಅನೇಕರಿಗೆ ಬೇಸರ ಮೂಡಿಸಿತ್ತು. ಸಾಮಾನ್ಯವಾಗಿ ಡಿವೋರ್ಸ್ (Divorce) ಬಳಿಕ ಮಾಜಿ ಪತಿ ಮತ್ತು ಕುಟುಂಬದ ಜೊತೆ ಯಾವುದೇ ರೀತಿಯ ಒಡನಾಟ ಇಟ್ಟುಕೊಳ್ಳುವುದಿಲ್ಲ. ಆದರೆ ಈಗ ಸಮಂತಾ ನಡೆಗೆ ನೆಟ್ಟಿಗರಿಗೆ ಆಶ್ಚರ್ಯವುಂಟು ಮಾಡಿದೆ. ಇದನ್ನೂ ಓದಿ: ಸನ್ನಿ ಲಿಯೋನ್ ಗೆ ಆತಂಕ ಮೂಡಿಸಿದ ಬಾಂಬ್ ಸ್ಫೋಟ

     

    View this post on Instagram

     

    A post shared by Akhil Akkineni (@akkineniakhil)

    ನಾಗ್ ಚೈತನ್ಯ ಜೊತೆ ಯಾವುದೇ ರೀತಿಯಲ್ಲೂ ಕನೆಕ್ಷನ್ ಇಟ್ಟುಕೊಳ್ಳದೇ ಇದ್ದರೂ, ಅವರ ಸಹೋದರ ಅಖಿಲ್ ಅಕ್ಕಿನೇನಿ ಜೊತೆ ಸಮಂತಾ ಟಚ್‌ನಲ್ಲಿದ್ದಾರೆ. ಅಖಿಲ್ ಅಕ್ಕಿನೇನಿ ಅಭಿನಯ ʻಏಜೆಂಟ್ʼ (Agent Film) ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಖಡಕ್ ಲುಕ್‌ನಲ್ಲಿ ನಟ ಮಿಂಚಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಅಖಿಲ್ ಪೋಸ್ಟ್‌ಗೆ ಸಮಂತಾ ರಿಯಾಕ್ಟ್ ಮಾಡಿದ್ದಾರೆ.

    ಅಖಿಲ್ ಲುಕ್‌ಗೆ ಸ್ಯಾಮ್ ಕ್ರೇಜಿ ಕಾಮೆಂಟ್ ಮಾಡಿದ್ದಾರೆ. ಅತ್ಯುತ್ತಮ ಮೋಡ್ ಎಂದು ಕಾಮೆಂಟ್ ಮಾಡಿದ್ದಾರೆ. ಈ ಮೂಲಕ ಅಖಿಲ್ ಹೊಸ ಸಿನಿಮಾಗೆ ಸಮಂತಾ ಮೆಚ್ಚುಗೆ ಸೂಚಿಸಿದ್ದಾರೆ. ಈ ಮೂಲಕ ಅಕ್ಕಿನೇನಿ ಕುಟುಂಬದ ಜೊತೆ ನಟಿ ಸಂಪರ್ಕದಲ್ಲಿದ್ದಾರೆ. ಇವರಿಬ್ಬರ ಸ್ನೇಹ ನೋಡಿ ಅಭಿಮಾನಿಗಳು ಮತ್ತೆ ನಾಗ್-ಸ್ಯಾಮ್ ಒಂದಾಗಲಿ ಎಂದು ಆಶಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಖಿಲ್ ಅಕ್ಕಿನೇನಿ ನಟನೆಯ ಏಜೆಂಟ್ ಗೆ ಸಾಥ್ ಕೊಟ್ಟ ಸುದೀಪ್ ಹಾಗೂ ಶಿವ ಕಾರ್ತಿಕೇಯನ್

    ಅಖಿಲ್ ಅಕ್ಕಿನೇನಿ ನಟನೆಯ ಏಜೆಂಟ್ ಗೆ ಸಾಥ್ ಕೊಟ್ಟ ಸುದೀಪ್ ಹಾಗೂ ಶಿವ ಕಾರ್ತಿಕೇಯನ್

    ಟಾಲಿವುಡ್ ಚಿತ್ರರಂಗದ ಭರವಸೆ ನಾಯಕ ನಟ ಅಖಿಲ್ ಅಕ್ಕಿನೇನಿ ನಟನೆಯ ಮೋಸ್ಟ್ ಅವೇಟೇಡ್  ಏಜೆಂಟ್ ಸಿನಿಮಾದ ಟೀಸರ್ ರಿವೀಲ್ ಆಗಿದ್ದು, ಯೂಟ್ಯೂಬ್ ನಲ್ಲಿ ಸೆನ್ಸೇಷನಲ್ ಸೃಷ್ಟಿಸ್ತಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಶಿವ ಕಾರ್ತಿಕೇಯನ್ ಟೀಸರ್ ಝಲಕ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ.  ಸಿಕ್ಸ್ ಪ್ಯಾಕ್ ಅವತಾರದಲ್ಲಿ ಸಖತ್ ಸ್ಟೈಲೀಶ್ ಲುಕ್ ನಲ್ಲಿ ಅಖಿಲ್ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು, ಭರ್ಜರಿ ಆಕ್ಷನ್ ಧಮಾಕಾ ಟೀಸರ್ ನಲ್ಲಿದೆ. ಮಮ್ಮುಟ್ಟಿ ಅಮೋಘ ಅಭಿನಯ ನೋಡುಗರಿಗೆ ಥ್ರಿಲ್ ಕೊಡುತ್ತದೆ.

    ಹೈ ಬಜೆಟ್‌ನಲ್ಲಿ ಮೂಡಿಬಂದಿರುವ ಏಜೆಂಟ್ ಸ್ಪೈ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಸಾಕ್ಷಿ ವೈದ್ಯ ಅಖಿಲ್ ಗೆ ಜೋಡಿಯಾಗಿ ನಟಿಸಿದ್ದಾರೆ. ಸೈರಾ ನರಸಿಂಹ ರೆಡ್ಡಿ ಸಿನಿಮಾ ಖ್ಯಾತಿಯ ಸುರೇಂದ್ರ ರೆಡ್ಡಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ವಕ್ಕಂತಂ ವಂಶಿ ಕಥೆ ಬರೆದಿರುವ ಚಿತ್ರವನ್ನು ಎಕೆ ಎಂಟರ್‌ಟೈನ್‌ಮೆಂಟ್ಸ್ ಮತ್ತು ಸುರೇಂದರ್ 2 ಸಿನಿಮಾ ಬ್ಯಾನರ್ ನಡಿ ರಾಮಬ್ರಹ್ಮ ಸುಂಕರ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ : ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಡೇಟಿಂಗ್ ಮಾಡುತ್ತಿದ್ದರು : ಸಾರಾ ಅಲಿ ಖಾನ್

    ಸೆನ್ಸೇಷನಲ್ ಮ್ಯೂಸಿಕ್ ಕಂಪೋಸರ್ ಹಿಪ್ ಹಾಪ್ ತಮಿಝಾ ಸಂಗೀತ, ರಸೂಲ್ ಎಲ್ಲೂರು ಕ್ಯಾಮೆರಾ, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ್ ಕೊಲ್ಲಾ ಕಲಾ ನಿರ್ದೇಶನ ಚಿತ್ರಕ್ಕಿದ್ದು, ಅಜಯ್ ಸುಂಕರ, ಪತಿ ದೀಪಾ ರೆಡ್ಡಿ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈಗಾಗ್ಲೇ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಟೀಸರ್ ರಿಲೀಸ್ ಮಾಡಿ ಪ್ರಚಾರ ಕಹಳೆ‌ ಮೊಳಗಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಅಖಿಲ್ ಅಕ್ಕಿನೇನಿ ನಟನೆಯ ‘ಏಜೆಂಟ್’ಸಿನಿಮಾದ ಟೀಸರ್ ರಿಲೀಸ್ ಗೆ ಮುಹೂರ್ತ ಫಿಕ್ಸ್…

    ಅಖಿಲ್ ಅಕ್ಕಿನೇನಿ ನಟನೆಯ ‘ಏಜೆಂಟ್’ಸಿನಿಮಾದ ಟೀಸರ್ ರಿಲೀಸ್ ಗೆ ಮುಹೂರ್ತ ಫಿಕ್ಸ್…

    ಟಾಲಿವುಡ್ ಚಿತ್ರರಂಗದ ಭರವಸೆ ನಾಯಕ ಅಖಿಲ್ ಅಕ್ಕಿನೇನಿ ಏಜೆಂಟ್ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಲು ಸಜ್ಜಾಗಿದ್ದಾರೆ. ಸುರೇಂದ್ರ ರೆಡ್ಡಿ ನಿರ್ದೇಶನದಲ್ಲಿ ತಯಾರಾಗ್ತಿರುವ ಈ ಸಿನಿಮಾದ ಟೀಸರ್ ಇದೇ 15ಕ್ಕೆ ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗ್ತಿದೆ.

    ಹೈ ಬಜೆಟ್ ಸಿನಿಮಾವಾಗಿರುವ ಏಜೆಂಟ್ ಸ್ಪೈ ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ಈ ಚಿತ್ರಕ್ಕಾಗಿ ಅಖಿಲ್ ಬೇಜಾನ್ ಕಸರತ್ತು ನಡೆಸಿ ಬಾಡಿ ಟ್ರಾನ್ಸ್ ಫಾರ್ಮೆಷನ್ ಮಾಡಿಕೊಂಡಿದ್ದಾರೆ. ಮಲಯಾಳಂ ಸೂಪರ್ ಸ್ಟಾರ್ ಮಮ್ಮುಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಏಜೆಂಟ್ ಚಿತ್ರದಲ್ಲಿ ಸಾಕ್ಷಿ ವೈದ್ಯಗೆ ಅಖಿಲ್ ಗೆ ಜೋಡಿಯಾಗಿ ನಟಿಸಿದ್ದಾರೆ. ವಕ್ಕಂತಂ ವಂಶಿ ಕಥೆ ಬರೆದಿರುವ ಚಿತ್ರವನ್ನು ಎಕೆ ಎಂಟರ್‌ಟೈನ್‌ಮೆಂಟ್ಸ್ ಮತ್ತು ಸುರೇಂದರ್ 2 ಸಿನಿಮಾ ಬ್ಯಾನರ್ ನಡಿ ರಾಮಬ್ರಹ್ಮ ಸುಂಕರ ನಿರ್ಮಾಣ ಮಾಡಿದ್ದಾರೆ. ಇದನ್ನೂ ಓದಿ:`ಹೊಯ್ಸಳ’ ಡಾಲಿಗೆ ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ ಸಾಥ್

    ಸೆನ್ಸೇಷನಲ್ ಮ್ಯೂಸಿಕ್ ಕಂಪೋಸರ್ ಹಿಪ್ ಹಾಪ್ ತಮಿಝಾ ಸಂಗೀತ, ರಸೂಲ್ ಎಲ್ಲೂರು ಕ್ಯಾಮೆರಾ, ರಾಷ್ಟ್ರ ಪ್ರಶಸ್ತಿ ವಿಜೇತ ನವೀನ್ ನೂಲಿ ಸಂಕಲನ, ಅವಿನಾಶ್ ಕೊಲ್ಲಾ ಕಲಾ ನಿರ್ದೇಶನ ಚಿತ್ರಕ್ಕಿದ್ದು, ಅಜಯ್ ಸುಂಕರ, ಪತಿ ದೀಪಾ ರೆಡ್ಡಿ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈಗಾಗ್ಲೇ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ, ಇದೇ ತಿಂಗಳ 15ಕ್ಕೆ ಟೀಸರ್ ಬಿಡುಗಡೆ ಮಾಡುವ ಮೂಲಕ ಪ್ರಚಾರಕ್ಕೆ ಮುನ್ನುಡಿ ಬರೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]