Tag: akhila bharatiya hindu mahasabha

  • ಇಸ್ಲಾಮಿಕ್ ಸಮವಸ್ತ್ರ ಪದ್ಧತಿಯನ್ನು ಶಾಲೆಯಲ್ಲಿ ತರಲು ಪ್ರಯತ್ನ: ಹಿಂದೂ ಮಹಾಸಭಾ ಕಿಡಿ

    ಇಸ್ಲಾಮಿಕ್ ಸಮವಸ್ತ್ರ ಪದ್ಧತಿಯನ್ನು ಶಾಲೆಯಲ್ಲಿ ತರಲು ಪ್ರಯತ್ನ: ಹಿಂದೂ ಮಹಾಸಭಾ ಕಿಡಿ

    ಬೆಂಗಳೂರು: ಕೋರ್ಟ್ ತೀರ್ಪು ಬರುವ ತನಕ ಯಾವುದೇ ಧಾರ್ಮಿಕ ಉಡುಪು ಧರಿಸುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡಿದ್ದರೂ, ಅದನ್ನು ಮೀರಿ ಅಲ್ಪ ಸಂಖ್ಯಾತರು ಹಿಜಾಬ್ ಜೊತೆಗೆ ಬುರ್ಕಾ ಧರಿಸಿ ಬರುತ್ತಿದ್ದಾರೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ವಕ್ತಾರ ಮೋಹನ್ ಗೌಡ ಕಿಡಿಕಾರಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ಮಧ್ಯಂತರ ಆದೇಶ ಬಂದ ನಂತರದಿಂದ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಬಿಟ್ಟು ತರಗತಿಗೆ ಹಾಜರಾಗಿದ್ದಾರೆ. ಕುಶಾಲನಗರ ಸೇರಿದಂತೆ ಹಲವು ಕಡೆ ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡುತ್ತಿದ್ದಾರೆ. ಜೊತೆಗೆ ಕಾನೂನು ಚೌಕಟ್ಟು ಮೀರಿ ಮುಸ್ಲಿಂ ವಿದ್ಯಾರ್ಥಿಗಳು ವರ್ತಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಹಿಜಾಬ್ ವಿವಾದದ ಹಿಂದೆ ಮತೀಯ ಶಕ್ತಿಗಳು ಕೆಲಸ ಮಾಡುತ್ತಿವೆ. ಇಸ್ಲಾಮಿಕ್‍ನ ಸಮವಸ್ತ್ರ ಪದ್ಧತಿಯನ್ನು ಶಾಲೆಯಲ್ಲಿ ತರಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ:  ವಜಾ ಮಾಡೋದಾದ್ರೆ ಕಾಂಗ್ರೆಸ್‍ನವರನ್ನೇ ಮಾಡಬೇಕು: ಆರ್ ಅಶೋಕ್

    ಹಿಜಬ್ ವಿವಾದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗುತ್ತಿದೆ. ನ್ಯಾಯಾಲಯದ ಆದೇಶಕ್ಕೆ ಬೆಲೆ ನೀಡುತ್ತಿಲ್ಲ. ಶಿಕ್ಷಕಿ ಶಶಿಕಲಾ ಮುಸ್ಲಿಂ ಪೋಷಕರ ಗಲಾಟೆಯಿಂದ ತನ್ನ ಕೆಲಸವನ್ನೆ ಕಳೆದುಕೊಂಡರು. ಇದೇ ರೀತಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆಗುತ್ತಿದೆ ಜೊತೆಗೆ ಬೆದರಿಕೆ ಕರೆಗಳು ಬರುತ್ತಿವೆ. ಹಿಂದೂ ವಿದ್ಯಾರ್ಥಿಗಳಿಗೆ ರಕ್ಷಣೆ ಬೇಕಿದೆ. ಈ ಸಂಬಂಧ ಗೃಹ ಸಚಿವರ ಗಮನಕ್ಕೆ ತಂದಿದ್ದೆವೆ ಎಂದರು. ಇದನ್ನೂ ಓದಿ: ಹಿಜಬ್ ವಿವಾದ – ರಾಮನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ರಜೆ ಘೋಷಣೆ

  • ಸಿಎಂ ಬಸವರಾಜ ಬೊಮ್ಮಾಯಿಗೆ ಕೊಲೆ ಬೆದರಿಕೆ

    ಸಿಎಂ ಬಸವರಾಜ ಬೊಮ್ಮಾಯಿಗೆ ಕೊಲೆ ಬೆದರಿಕೆ

    ಮಂಗಳೂರು: ಮೈಸೂರು ದೇಗುಲ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ.

    ಮಂಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಬಿಟ್ಟಿಲ್ಲ ನಾವು. ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಹತ್ಯೆ ಮಾಡಲಾಗಿದೆ. ಅಂತಹ ಸಂದರ್ಭದಲ್ಲಿ ನೀವು ಯಾವ ಲೆಕ್ಕ ಬೊಮ್ಮಾಯಿಯವರೇ. ನಿಮ್ಮ ವಿಚಾರದಲ್ಲಿ ಅಲೋಚನೆ ಮಾಡಲು ಸಾಧ್ಯವಿಲ್ಲ ಅಂದುಕೊಳ್ಳಬೇಡಿ ದೇಗುಲ ಧ್ವಂಸ ಮಾಡಿರೋದು ಒಂದು ಕೊಲೆಗೆ ಸಮಾನ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಮೂರು ಗಂಟೆ ರನ್‍ವೇನಲ್ಲೇ ನಿಂತ ವಿಮಾನ- ಪ್ರಯಾಣಿಕರು ಕಂಗಾಲು

    ದೇವಾಲಯ ಧ್ವಂಸದ ಮೂಲಕ ಅಲ್ಪಸಂಖ್ಯಾತ ಮತಗಳಿಕೆ ಪ್ರಯತ್ನ ಮಾಡುತ್ತಿದ್ದೀರಿ. ಬಿಜೆಪಿಯಿಂದ ಅಲ್ಪಸಂಖ್ಯಾತರ ಓಲೈಕೆಯಾಗುತ್ತಿದೆ. ಬೊಮ್ಮಾಯಿಯವರೇ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಧಾರ್ಮಿಕ ದತ್ತಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆಯವರೇ ನೀವು ಮೊಟ್ಟೆ ಕದ್ದು ಹಣಮಾಡಿದ್ದೀರಿ. ಇದೀಗ ದೇವಸ್ಥಾನಗಳನ್ನು ಧ್ವಂಸ ಮಾಡಿ ಯಾಕೆ ದುಡ್ಡು ಮಾಡಲು ಹೊರಟಿದ್ದೀರಿ. ಸಂಘಪರಿವಾರ ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡೋದು ಅಲ್ಲ. ಪರಿವಾರ ಸಂಘಟನೆಗಳು ಬಿಜೆಪಿಯನ್ನೇ ಬಹಿಷ್ಕಾರ ಮಾಡಲಿ ಎಂದು ವಾಗ್ದಾಳಿ ನಡೆಸಿದರು.  ಇದನ್ನೂ ಓದಿ: ದಳ ತೊರೆದು ಕೈ ಹಿಡಿಯಲು ನಿರ್ಧರಿಸಿದ ಕೋಲಾರ ಶಾಸಕ ಶ್ರೀನಿವಾಸಗೌಡ