Tag: Akshaya Tritiya

  • 2 ವರ್ಷಗಳ ಬಳಿಕದ ದಾಖಲೆ – ಅಕ್ಷಯ ತೃತೀಯದಂದು ಭರ್ಜರಿ ಸೇಲ್

    2 ವರ್ಷಗಳ ಬಳಿಕದ ದಾಖಲೆ – ಅಕ್ಷಯ ತೃತೀಯದಂದು ಭರ್ಜರಿ ಸೇಲ್

    ನವದೆಹಲಿ: ಕೋವಿಡ್ ಸಂದರ್ಭದಲ್ಲಿ ಕುಸಿದಿದ್ದ ಆಭರಣ ಮಾರುಕಟ್ಟೆ 2 ವರ್ಷಗಳ ಬಳಿಕ ಈ ಬಾರಿಯ ಅಕ್ಷಯ ತೃತೀಯದಂದು ಮತ್ತೆ ಚೇತರಿಸಿಕೊಂಡಿದೆ.

    ದೇಶಾದ್ಯಂತ 2 ವರ್ಷಗಳ ಬಳಿಕ 2022ರ ಅಕ್ಷಯ ತೃತೀಯದಂದು 15,000 ಕೋಟಿ ರೂ. ಮೌಲ್ಯದ ಆಭರಣ ಮಾರಾಟವಾಗಿದೆ. ಇದು ಕೋವಿಡ್‌ನಿಂದ ವಿಧಿಸಲಾದ ಲಾಕ್‌ಡೌನ್ ಬಳಿಕದ ಅತಿ ದೊಡ್ಡ ಆಭರಣ ವ್ಯವಹಾರವಾಗಿದೆ ಎಂದು ಅಖಿಲ ಭಾರತ ವ್ಯಾಪರಗಳ ಒಕ್ಕೂಟ(ಸಿಎಐಟಿ) ತಿಳಿಸಿದೆ. ಇದನ್ನೂ ಓದಿ: ವಾಣಿಜ್ಯ, ಸರ್ಕಾರಿ ಬಳಕೆದಾರರಿಗೆ ಟ್ವಿಟ್ಟರ್‌ನಲ್ಲಿ ಶುಲ್ಕ ಸಾಧ್ಯತೆ: ಮಸ್ಕ್

    ಕೋವಿಡ್ ವಕ್ಕರಿಸಿಕೊಳ್ಳುತ್ತಿದ್ದಂತೆಯೇ ದೇಶಾದ್ಯಂತ ಚಿನ್ನದ ಮಾರಾಟದಲ್ಲಿ ಶೇ.80 ರಷ್ಟು ಭಾರೀ ಇಳಿಕೆ ಕಂಡು ಬಂದಿತ್ತು. ಈ ಬಾರಿ ಕೋವಿಡ್ ಹಾವಳಿ ಕಡಿಮೆಯಿರುವುದರಿಂದ ಹಾಗೂ ಹಬ್ಬದ ಪ್ರಯುಕ್ತ ರಜೆ ಇದ್ದಿದ್ದರಿಂದ ಚಿನ್ನ ಖರೀದಿಗೆ ಜನರು ಮುಗಿ ಬಿದ್ದಿದ್ದಾರೆ. ದೇಶಾದ್ಯಂತ ಒಂದೇ ದಿನ ಬರೋಬ್ಬರಿ 30 ಟನ್ ಚಿನ್ನ ಮಾರಾಟವಾಗಿದೆ.

    2 ತಿಂಗಳ ಹಿಂದೆ ಚಿನ್ನದ ಬೆಲೆ 55,000 ದಿಂದ 58,000 ರೂ. ವರೆಗೂ ತಲುಪಿತ್ತು. ಇದೀಗ ಚಿನ್ನದ ಬೆಲೆ 50,000 ರೂ.ಗೆ ಇಳಿಕೆಯಾಗಿರುವುದರಿಂದ ಹಾಗೂ ಇದು ಮದುವೆ ಸಮಾರಂಭಗಳಂತಹ ಸಮಯವಾಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಚಿನ್ನಾಭರಣ ಮಾರಟವಾಗಿದೆ ಎಂದು ಸಿಎಐಟಿ ಕಾರ್ಯದರ್ಶಿ ಪ್ರವೀಣ್ ಖಂಡೇವಾಲ್ ತಿಳಿಸಿದ್ದಾರೆ. ಇದನ್ನೂ ಓದಿ: ಬಿಸಿಲಿನ ತಾಪಕ್ಕೆ 25 ಬಲಿ, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ

    ರಾಜ್ಯದಲ್ಲೂ ಭಾರೀ ಮಾರಾಟ:
    ಕರ್ನಾಟಕದಲ್ಲೂ ಅಕ್ಷಯ ತೃತೀಯ ಅಂಗವಾಗಿ ಜನರು ಚಿನ್ನಾಭರಣ ಖರೀದಿಗೆ ಮುಗಿಬಿದ್ದಿದ್ದಾರೆ. ಮಂಗಳವಾರ ಒಂದೇ ದಿನ ಸುಮಾರು 1,680 ಕೋಟಿ ರೂ. ವ್ಯವಹಾರ ನಡೆದಿದೆ. ಬೆಂಗಳೂರಿನಲ್ಲಿ 650 ಕೋಟಿ ರೂ. ವ್ಯಾಪಾರ ನಡೆದಿದೆ ಎಂದು ಕರ್ನಾಟಕ ಜ್ಯುವೆಲ್ಲರ್ಸ್ ಫೆಡರೇಷನ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಡಾ. ಜಿ ರಾನಚಾರಿ ತಿಳಿಸಿದ್ದಾರೆ.

  • ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಅಭಿಯಾನ

    ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಅಭಿಯಾನ

    ಬೆಂಗಳೂರು: ಹಿಜಬ್, ಹಲಾಲ್, ಅಜಾನ್ ಬೆನ್ನೆಲೆ ಇದೀಗ ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಹಿಂದೂ ಪರ ಸಂಘಟನೆಗಳು ಅಭಿಯಾನ ಶುರುವಾಗಿದೆ.

    ಮೇ 3ರಂದು ಅಕ್ಷಯ ತೃತೀಯ ಹಬ್ಬವಿದ್ದು, ಈ ವಿಶೇಷ ದಿನ ಸಾಮಾನ್ಯವಾಗಿ ಜನರು ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಈ ಹಿನ್ನೆಲೆ ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಟ್ವಿಟ್ಟರ್‌ನಲ್ಲಿ  ಹಿಂದೂ ಪರ ಸಂಘಟನೆಗಳು ಅಭಿಯಾನ ಪ್ರಾರಂಭವಾಗಿದೆ.

    ರಾಜ್ಯದಲ್ಲಿ ಸರಿ ಸುಮಾರು ಮೂವತ್ತು ಸಾವಿರ ಚಿನ್ನದಂಗಡಿಗಳಿವೆ. ಅದರಲ್ಲಿ ಶೇಕಡಾ 30 ರಷ್ಟು ಮುಸ್ಲಿಂ ಮಾಲೀಕತ್ವದ ಮಳಿಗೆಗಳಿದ್ದು, ಬಹುತೇಕ ಮುಸ್ಲಿಂ ವ್ಯಾಪಾರಿಗಳು ಕೇರಳ ಮೂಲದ ಮುಸ್ಲಿಂ ವ್ಯಾಪಾರಿಗಳಾಗಿದ್ದಾರೆ. ಕಳೆದ ಎರಡು ವರ್ಷದಿಂದ ಕೊರೊನಾ ಹಿನ್ನೆಲೆ ವ್ಯಾಪಾರ ಡಲ್ ಆಗಿತ್ತು. ಆದರೆ ಈ ವರ್ಷದ ಅಕ್ಷಯ ತೃತೀಯಕ್ಕೆ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿ ಚಿನ್ನದ ಅಂಗಡಿ ಮಾಲೀಕರಿದ್ದಾರೆ. ಇದನ್ನೂ ಓದಿ: ಗೋಡ್ಸೆ ಸಿದ್ಧಾಂತವನ್ನು ಮೋದಿ ಬೆಂಬಲಿಸುತ್ತಿದ್ದಾರೆ: ಕೆಟಿಆರ್

    ಅಕ್ಷಯ ತೃತೀಯ ದಿನದಂದೇ ರಾಜ್ಯಾದ್ಯಂತ ಬರೋಬ್ಬರಿ ಒಂದು ಸಾವಿರ ಕೋಟಿ ವ್ಯಾಪಾರವಾಗುಚ ನಿರೀಕ್ಷೆಯನ್ನು ಮಾಲೀಕರು ಹೊಂದಿದ್ದಾರೆ. ಸದ್ಯ ಶುರುವಾಗಿರುವ ಅಭಿಯಾನದಿಂದ ಯಾರಿಗೆ ನಷ್ಟ, ಯಾರಿಗೆ ಲಾಭ ಎನ್ನುವ ಲೆಕ್ಕಾಚಾರ ಆರಂಭವಾಗಿದ್ದು, ಒಂದು ವೇಳೆ ಅಭಿಯಾನ ಸಕ್ಸಸ್ ಆದರೆ, ನೂರಾರು ಕೋಟಿ ವ್ಯಾಪಾರಕ್ಕೆ ಕತ್ತು ಬೀಳಲಿದೆ. ಇನ್ನೂ ಈ ಅಭಿಯಾನಕ್ಕೆ ಹಿಂದೂ ಪರ ಸಂಘಟನೆಗಳು ಸಾಥ್ ನೀಡುತ್ತಾರಾ ಕಾದು ನೋಡಬೇಕಾಗಿದೆ.  ಇದನ್ನೂ ಓದಿ: ಪ್ರಧಾನಿ ಮೋದಿಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ

  • ಅಕ್ಷಯ ತೃತೀಯಗೆ ರಾಜಕಾರಣಿಗಳ ‘ಗೋಲ್ಡನ್’ ಮ್ಯಾಚ್ ಫಿಕ್ಸಿಂಗ್-ಒಂದೇ ದಿನದಲ್ಲಿ ದಾಖಲೆಯ ಚಿನ್ನ ಮಾರಾಟ

    ಅಕ್ಷಯ ತೃತೀಯಗೆ ರಾಜಕಾರಣಿಗಳ ‘ಗೋಲ್ಡನ್’ ಮ್ಯಾಚ್ ಫಿಕ್ಸಿಂಗ್-ಒಂದೇ ದಿನದಲ್ಲಿ ದಾಖಲೆಯ ಚಿನ್ನ ಮಾರಾಟ

    ಬೆಂಗಳೂರು: ಬುಧವಾರ ಅಕ್ಷಯ ತೃತೀಯ ಆಗಿದ್ದರಿಂದ ಹೆಚ್ಚಿನ ಮಹಿಳೆಯರು ಚಿನ್ನ ಖರೀದಿಯಲ್ಲಿ ಬ್ಯುಸಿ ಆಗಿದ್ದರು. ಸದ್ಯ ರಾಜ್ಯದಲ್ಲಿ ಚುನಾವಣೆ ರಣಕಣ ರಂಗೇರುತ್ತಿದ್ದು, ಅಕ್ಷಯ ತೃತೀಯವನ್ನ ರಾಜಕಾರಣಿಗಳು ಬಹು ಚಾಲಾಕಿತನದಿಂದ ಬಳಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆ ಪಬ್ಲಿಕ್ ಟಿವಿ ರಾಜಕಾರಣಿಗಳು ಮತದಾರರಿಗೆ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ನೀಡಲು ಮುಂದಾಗುತ್ತಿದ್ದಾರೆ ಎಂಬ ಸುದ್ದಿಯನ್ನು ಬಿತ್ತರಿಸಿತ್ತು.

    ಚುನಾವಣಾ ಆಯೋಗದ ಹದ್ದಿನ ಕಣ್ಣು ತಪ್ಪಿಸಿ ಕೆಲ ರಾಜಕೀಯ ಮುಖಂಡರು ಮತದಾರರಿಗೆ ಫ್ರೀಯಾಗಿ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ನೀಡಿದ್ದಾರೆ ವಿಷಯ ರಿವೀಲ್ ಆಗಿದೆ. ಈ ಬಾರಿ ಚುನಾವಣೆ ಆಯೋಗ ಎಲ್ಲ ಚಿನ್ನದ ಮಳಿಗೆಗಳಿಗೆ ಬಲ್ಕ್ ಗೋಲ್ಡ್ ಖರೀದಿಯ ಡೀಟೈಲ್ಸ್ ಹಾಗೂ ಅಭರಣದಂಗಡಿಯಲ್ಲಿ ಸಿಸಿಟಿವಿ ಫೋಟೇಜ್ ನೀಡುವಂತೆ ಹೇಳಿದೆ. ಆದ್ರೆ ಮುಖಂಡರು ಚಿನ್ನದಂಗಂಡಿ ಮಾಲೀಕರ ಜೊತೆ ಹೊರಗಡೆಯೇ ಡೀಲ್ ಮಾಡಿದ್ದಾರೆ.

    ಏನದು ಡೀಲ್?: ರಾಜಕೀಯ ನಾಯಕರು ಟೋಕನ್ ಕೊಟ್ಟು ಚಿನ್ನವನ್ನು ತಾವಿದ್ದ ಸ್ಥಳಕ್ಕೆ ತರಿಸಿಕೊಂಡು ಜನರಿಗೆ ಹಂಚಿದ್ದಾರೆ ಎನ್ನಲಾಗಿದೆ. ನೀಲಿ ಟೋಕನ್ ಕೊಟ್ರೆ ಚಿನ್ನದ ಒಡವೆ, ಕೆಂಪು ಟೋಕನ್ ಕೊಟ್ರೆ ಬೆಳ್ಳಿ ಅಂತಾ ಮೊದಲೇ ಡೀಲ್ ಮಾಡಿಕೊಂಡು ಆಭರಣದಂಗಡಿಗೆ ಜನರನ್ನು ಕಳುಹಿಸಿ ಪ್ರತ್ಯೇಕವಾಗಿ ವಹಿವಾಟು ನಡೆದಿದೆ. ಇನ್ನು ದೇವಸ್ಥಾನದಲ್ಲಿ ನಿನ್ನೆ ಮಹಿಳೆಯರಿಗೆ ಬಾಗಿನ ಕೊಟ್ಟು ಅದ್ರಲ್ಲಿ ಚಿನ್ನದ ಒಡವೆ ಇಟ್ಟು ಯಾರಿಗೂ ತಿಳಿಸದಂತೆ ರಾಜಕೀಯ ಮುಖಂಡರು ದೇವರ ಮೇಲೆ ಪ್ರಮಾಣ ಮಾಡಿಸಿಕೊಂಡಿದ್ದಾರೆ ಅಂತಾ ತಿಳಿದು ಬಂದಿದೆ.

    ರಾಜ್ಯದಲ್ಲಿ ಒಂದೇ ದಿನದಲ್ಲಿ ದಾಖಲೆಯ ಚಿನ್ನ ಮಾರಾಟವಾಗಿದೆ. ಈ ವರ್ಷ 3,495 ಕೆಜಿ ಚಿನ್ನ ಸೇಲ್ ಆಗಿದೆ. ಒಟ್ಟಾರೆಯಾಗಿ ಹಿಂದಿನ ವರ್ಷಕ್ಕಿಂತ ಈ ಬಾರಿ ಶೇ.25ರಷ್ಟು ವ್ಯಾಪಾರ ಹೆಚ್ಚಳವಾಗಿದೆ. ವ್ಯಾಪಾರದಲ್ಲಿ ಬೆಂಗಳೂರು ನಂಬರ್ ಒನ್ ಆದ್ರೆ, ಹುಬ್ಬಳ್ಳಿ, ಬೆಳಗಾವಿ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.