Tag: alcohol

  • ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲೇ ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ – ವೀಡಿಯೋ ವೈರಲ್

    ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲೇ ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ – ವೀಡಿಯೋ ವೈರಲ್

    ಚಿತ್ರದುರ್ಗ: ಡಿಡಿಪಿಐ ಕಚೇರಿಯಲ್ಲೇ (DDPI Office) ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ (Party) ನಡೆದಿರುವ ಆರೋಪ ಚಿತ್ರದುರ್ಗದಲ್ಲಿ (Chitradurga) ಕೇಳಿಬಂದಿದೆ. ಕಚೇರಿಯ ಸಿಬ್ಬಂದಿಯೋರ್ವ ಹೊಸ ಕಾರು ಖರೀದಿಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲೇ ಎಣ್ಣೆ ಪಾರ್ಟಿ ನಡೆಸಿರೊ ವೀಡಿಯೋ ವೈರಲ್ ಆಗಿದೆ.

    20 ಲೀಟರ್‌ನ ವಾಟರ್ ಕ್ಯಾನ್‌ಗೆ ಉಪನಿರ್ದೇಶಕರ ಕಾರಿನ ಚಾಲಕ ಮದ್ಯ ಬೆರೆಸಿದ್ದು, ಇನ್ನಿತರೆ ಸಿಬ್ಬಂದಿ ಅಯ್ಯಪ್ಪ ಸ್ವಾಮಿಗೆ ಬಂಗಾರ ಮೀಸಲು ಹೋಗುತ್ತಲ್ಲ ಹಾಗಾಯ್ತು ಇದು ಅಂತ ಸಂಭಾಷಣೆ ನಡೆಸಿದ್ದಾರೆ. ಹೀಗಾಗಿ ಇಡೀ ಸಮಾಜಕ್ಕೆ ಮಾದರಿಯಾಗಿರಬೇಕಿದ್ದ ಶಿಕ್ಷಣ ಇಲಾಖೆ ಸಿಬ್ಬಂದಿ ಕಚೇರಿಯನ್ನೇ ಎಣ್ಣೆ ಪಾರ್ಟಿಗೆ ದುರ್ಬಳಕೆ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ – ಇಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಹಾಗೆಯೇ ಡಿಡಿಪಿಐ ಕಚೇರಿಯಲ್ಲೇ ಸಿಬ್ಬಂದಿ ಕುಡಿದು ಮೋಜು ಮಸ್ತಿ ಮಾಡಿರುವ ವೀಡಿಯೋ ವೈರಲ್ ಆದ ಪರಿಣಾಮ ಜಿಲ್ಲೆಯಾದ್ಯಂತ ಭಾರೀ ಜನಾಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: 1 ರೂಪಾಯಿ ಬಡ್ಡಿಗೆ ಲೋನ್‌ ಕೊಡಿಸ್ತೀವಿ ಅಂತ ಬರ್ತಾರೆ ಹುಷಾರ್‌ – ಬೆಂಗಳೂರಲ್ಲೊಂದು ಖತರ್ನಾಕ್ ಲೇಡಿ ಗ್ಯಾಂಗ್

  • ಗಂಡಸರಿಗೆ ಉಚಿತವಾಗಿ ವಾರಕ್ಕೆ 2 ಬಾಟಲಿ ಮದ್ಯ ಕೊಡಿ: ಶಾಸಕ ಎಂ.ಟಿ ಕೃಷ್ಣಪ್ಪ

    ಗಂಡಸರಿಗೆ ಉಚಿತವಾಗಿ ವಾರಕ್ಕೆ 2 ಬಾಟಲಿ ಮದ್ಯ ಕೊಡಿ: ಶಾಸಕ ಎಂ.ಟಿ ಕೃಷ್ಣಪ್ಪ

    ಬೆಂಗಳೂರು: ಗ್ಯಾರಂಟಿ ಯೋಜನೆಗಳ (Guarantee Scheme) ಮಾದರಿಯಲ್ಲಿ ಪುರುಷರಿಗೆ ಉಚಿತವಾಗಿ ವಾರಕ್ಕೆ ಎರಡು ಬಾಟಲಿ ಮದ್ಯ (Alcohol) ಕೊಡಿ ಎಂದು ತುರುವೇಕೆರೆ ಜೆಡಿಎಸ್ (JDS) ಶಾಸಕ ಎಂಟಿ ಕೃಷ್ಣಪ್ಪ (MT Krishnappa) ಹೇಳಿದ್ದಾರೆ.

    ಪುರುಷರ ವೆಚ್ಚದಲ್ಲಿ, ನೀವು ಮಹಿಳೆಯರಿಗೆ ತಿಂಗಳಿಗೆ 2,000 ರೂ. ಹಣ, ಉಚಿತ ವಿದ್ಯುತ್ ಮತ್ತು ಉಚಿತ ಬಸ್ ಪ್ರಯಾಣವನ್ನು ನೀಡುತ್ತಿದ್ದೀರಿ. ಆದ್ದರಿಂದ, ಕುಡಿಯುವವರಿಗೆ, ಪ್ರತಿ ವಾರ ಅವರಿಗೆ ಎರಡು ಬಾಟಲಿಗಳನ್ನು ಉಚಿತವಾಗಿ ನೀಡಿ. ಅವರು ಕುಡಿಯಲು ಬಿಡಿ. ನಾವು ಪುರುಷರಿಗೆ ಪ್ರತಿ ತಿಂಗಳು ಹಣ ನೀಡಲು ಸಾಧ್ಯವಿಲ್ಲ. ಅದರ ಬದಲಾಗಿ, ಅವರಿಗೆ ಏನಾದರೂ ನೀಡಿ. ವಾರಕ್ಕೆ ಎರಡು ಬಾಟಲಿ ಕೊಟ್ಟರೆ ತಪ್ಪೇನಿದೆ? ಸರ್ಕಾರವು ಇದನ್ನು ಸೊಸೈಟಿಗಳ ಮೂಲಕ ಒದಗಿಸಬಹುದು ಎಂದು ಕೃಷ್ಣಪ್ಪ ಸಲಹೆ ನೀಡಿದರು. ಇದನ್ನೂ ಓದಿ:  ಚಿಕ್ಕಮಗಳೂರು| ಬೈಕಿಗೆ ಹಿಂದಿನಿಂದ ಪೊಲೀಸ್ ಜೀಪ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

    ದುಡಿಯುವ ಕಾರ್ಮಿಕರು, ಜನರು ಮದ್ಯ ಸೇವಿಸುತ್ತಾರೆ. ಇದನ್ನು ತಪ್ಪಿಸಲು ಸಾಧ್ಯವಿಲ್ಲ. ಹೀಗಾಗಿ ಪುರುಷರಿಗೆ ಉಚಿತವಾಗಿ ಮದ್ಯ ವಿತರಿಸುವ ಯೋಜನೆಯನ್ನ ರಾಜ್ಯ ಸರ್ಕಾರ ತರಬೇಕು. ಸಹಕಾರ ಸಂಘಗಳ ಮೂಲಕ ಉಚಿತ ಮದ್ಯ ವಿತರಿಸಬೇಕು ಎಂದು ಜೆಡಿಎಸ್ ಶಾಸಕ ಕೃಷ್ಣಪ್ಪ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಆಯುಷ್ಮಾನ್ ಭಾರತ್ ವ್ಯಾಪ್ತಿಗೆ ಹೃದಯಾಘಾತ, ಪಾರ್ಶ್ವವಾಯುಗೆ ಚಿಕಿತ್ಸೆ ತರಲು ಹೆಚ್.ಡಿ.ದೇವೇಗೌಡರ ಒತ್ತಾಯ

    ಪಂಚ ಗ್ಯಾರಂಟಿ ಯೋಜನೆಗಳನ್ನ ಜನರಿಗೆ ಸಮರ್ಪಕವಾಗಿ ತಲುಪಿಸೋಕೆ ಸರ್ಕಾರ ಹೆಣಗಾಡುತ್ತಿದೆ. ಸರಿಯಾಗಿ ಅನ್ನಭಾಗ್ಯದ ಅಕ್ಕಿ ನೀಡಲಾಗುತ್ತಿಲ್ಲ. ಗೃಹಲಕ್ಷ್ಮಿ ಹಣ ಅದ್ಯಾವಾಗ ಫಲಾನುಭವಿಗಳ ಖಾತೆಗೆ ಹೋಗುತ್ತೋ ಗೊತ್ತಿಲ್ಲ. ಪರಿಸ್ಥಿತಿ ಹೀಗಿರುವಾಗ, ಮುಂದಿನ ಬಾರಿಯೂ ನಮ್ಮ ಸರ್ಕಾರ ಬಂದರೆ ಗೃಹಲಕ್ಷ್ಮಿ ಹಣವನ್ನು 2,000 ದಿಂದ 4,000ಕ್ಕೆ ಏರಿಕೆ ಮಾಡುತ್ತೇವೆ ಎಂದು ಸದನದ ಸಾಕ್ಷಿಯಾಗಿ ಕುಣಿಗಲ್ ಶಾಸಕ ರಂಗನಾಥ್ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು| ಬೈಕಿಗೆ ಹಿಂದಿನಿಂದ ಪೊಲೀಸ್ ಜೀಪ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

  • ತೆಲಂಗಾಣದಲ್ಲಿ ಇನ್ನು ಮುಂದೆ ಕಿಂಗ್‌ಫಿಷರ್, ಹೈನೆಕೆನ್ ಬಿಯರ್‌ ಸಿಗೋದು ಡೌಟ್‌ – ಕಾರಣವೇನು ಗೊತ್ತಾ?

    ತೆಲಂಗಾಣದಲ್ಲಿ ಇನ್ನು ಮುಂದೆ ಕಿಂಗ್‌ಫಿಷರ್, ಹೈನೆಕೆನ್ ಬಿಯರ್‌ ಸಿಗೋದು ಡೌಟ್‌ – ಕಾರಣವೇನು ಗೊತ್ತಾ?

    – ಪ್ರತಿ ಕೇಸ್‌ ಮೇಲೆ 100 ರೂ. ನಷ್ಟ!

    ಕಿಂಗ್‌ಫಿಶರ್ ಮತ್ತು ಹೈನೆಕೆನ್ ಬಿಯರ್‌ಗಳ (Beer) ತಯಾರಕರಾದ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್ (UB), ತೆಲಂಗಾಣ (Telangana) ಬೆವರೇಜಸ್ ಕಾರ್ಪೊರೇಷನ್ ಲಿಮಿಟೆಡ್‌ಗೆ (TGBCL) ತನ್ನ ಬಿಯರ್ ಪೂರೈಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.

    ಈ ಬಿಯರ್‌ಗಳು ತನ್ನದೇ ಆದ ಮದ್ಯ ಪ್ರಿಯ ಗ್ರಾಹಕರನ್ನು ಹೊಂದಿದೆ. ಈಗ ಯುವ ಜನತೆ ಹಾಟ್‌ ಡ್ರಿಂಕ್ಸ್‌ಗಿಂತ ಬಿಯರ್‌ಗಳನ್ನು ಹೆಚ್ಚು ಇಷ್ಟಪಡುತ್ತಾರೆ. ಆದರಲ್ಲಿಯೂ ಕಿಂಗ್ ಫಿಶರ್ ಬಿಯರ್ ಕ್ರೇಜ್ ಬೇರೆಯದೇ ಇದೇ! ಇದೀಗ ಸ್ಥಗಿತಗೊಳಿಸಲು ನಿರ್ಧರಿಸಿರುವುದು ಬಿಯರ್‌ ಪ್ರಿಯರಿಗೆ ಶಾಕ್‌ ಆಗಿದೆ.

    ಪೂರೈಕೆ ನಿಲ್ಲಿಸಲು ಕಾರಣವೇನು?
    2 ವರ್ಷದಿಂದಲೂ ತೆಲಂಗಾಣದಲ್ಲಿ ಬಿಯರ್‌ ಮೂಲ ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕಂಪನಿ ಮನವಿ ಮಾಡಿತ್ತು. ಆದರೆ ತೆಲಂಗಾಣ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಇದರಿಂದಾಗಿ ಭಾರೀ ಪ್ರಮಾಣದ ನಷ್ಟವಾಗಿದೆ ಎಂದು ಕಂಪನಿ ಹೇಳಿಕೊಂಡಿದೆ. ಅಂದರೆ 2019-20ನೇ ಹಣಕಾಸು ವರ್ಷದಿಂದ ಯುನೈಟೆಡ್ ಬ್ರೇವರಿಸ್‌ ಬಿಯರ್‌ನ ಮೂಲ ಬೆಲೆಯನ್ನು TGBCL ಪರಿಷ್ಕರಿಸಿಲ್ಲ, ಇದು ರಾಜ್ಯದಲ್ಲಿ ಕಂಪನಿಗೆ ಆರ್ಥಿಕ ನಷ್ಟಕ್ಕೆ ಕಾರಣ ಎಂದು ಕಂಪನಿ ದೂರಿದೆ.

    ಹೆಚ್ಚುತ್ತಿರುವ ಬಿಯರ್‌ ತಯಾರಿಕೆಗೆ ಕಚ್ಚಾ ವಸ್ತುಗಳ ಬೆಲೆಗಳಿಂದ ಉತ್ಪಾದನಾ ವೆಚ್ಚದಲ್ಲಿ 40% ಹೆಚ್ಚಳವನ್ನು ಸರಿದೂಗಿಸಲು 2024ರ ನವೆಂಬರ್‌ನಲ್ಲಿ ತೆಲಂಗಾಣ ಸರ್ಕಾರವನ್ನು ಕಂಪನಿ ಒತ್ತಾಯಿಸಿತ್ತು. ಅಂದರೆ ಪ್ರತಿ ಬಾಟಲಿಗೆ ಕನಿಷ್ಠ 10 ರೂ.ಗಳಷ್ಟು ಬಿಯರ್ ಬೆಲೆಯನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಲಾಗಿತ್ತು. ಇನ್ನೂ ಡಿಸೆಂಬರ್‌ನಲ್ಲಿ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಬಿಯರ್ ಕಂಪನಿಗಳ ಬೇಡಿಕೆಗಳನ್ನು ತಿರಸ್ಕರಿಸಿದ್ದರು.

    2019 ರಿಂದ ಉತ್ಪಾದನಾ ವೆಚ್ಚವನ್ನು ಆಧರಿಸಿದ ದರವೇ ಇಂದಿಗೂ ಇದೆ. ಇದು ಪ್ರತಿ ಬಿಯರ್ ಕೇಸ್‌ ಮೇಲೆ ಅಂದಾಜು 100 ರೂ. ನಷ್ಟಕ್ಕೆ ಕಾರಣವಾಗುತ್ತಿದೆ ಎಂದು ಕಂಪನಿ ಅಳಲು ತೋಡಿಕೊಂಡಿದೆ.

    TGBCL ಉಳಿಸಿಕೊಂಡ ಹಳೆಯ ಬಾಕಿ 3,900 ಕೋಟಿ!
    TGBCL ಕಂಪನಿಗೆ 3,900 ಕೋಟಿ ರೂ. ಪಾವತಿಸಿಲ್ಲ. ಇದು ಕಂಪನಿಯ ನಷ್ಟಕ್ಕೆ ಕಾರಣವಾಗಿದೆ. ಬ್ರೇವರಿಸ್‌ ಅಸೋಸಿಯೇಷನ್ ಆಫ್ ಇಂಡಿಯಾ (ಬಿಎಐ) ಕೂಡ ಮದ್ಯ ತಯಾರಿಕಾ ವಲಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದಿದೆ. ಇಲ್ಲಿಯವರೆಗೂ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಆದರೂ ಆರ್ಥಿಕ ಒತ್ತಡ ಪರಿಸ್ಥಿತಿಯ ನಡುವೆಯೂ ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ಮದ್ಯ ಪೂರೈಸಲಾಗಿದೆ ಎಂದು ಕಂಪನಿ ಹೇಳಿಕೊಂಡಿದೆ.

    ಯುನೈಟೆಡ್ ಬ್ರೇವರಿಸ್‌ ಕಂಪನಿ ಹೇಳೋದೇನು?
    ನಷ್ಟದಿಂದಾಗಿ ಬಿಯರ್‌ನ್ನು ಟಿಜಿಬಿಸಿಎಲ್‌ಗೆ ನಿರಂತರವಾಗಿ ಪೂರೈಸಲು ಸಾಧ್ಯವಿಲ್ಲ. ಇದಲ್ಲದೇ ತೆಲಂಗಾಣ ಸರ್ಕಾರಕ್ಕೆ ಸೇರಿದ ಸಾರ್ವಜನಿಕ ವಲಯದ ಕಂಪನಿಯಾದ TGBCL ರಾಜ್ಯದಲ್ಲಿ ಮದ್ಯದ ಸಗಟು ಮತ್ತು ಚಿಲ್ಲರೆ ಮಾರಾಟದ ಮೇಲೆ ಹಿಡಿತವಿದೆ. ಆದರೂ ನಮ್ಮ ಮನವಿಗೆ ಸ್ಪಂದಿಸಿ ಬೆಲೆ ಏರಿಸಿಲ್ಲ ಎಂದು ಕಂಪನಿ ಹೇಳಿದೆ. ಈ ಬಗ್ಗೆ TGBCL ಇನ್ನೂ ಯಾವುದೇ ಹೇಳಿಕೆಯನ್ನೂ ನೀಡಿಲ್ಲ.

    ರಾಜ್ಯಕ್ಕೆ ಭಾರೀ ಆದಾಯ!
    ಯುನೈಟೆಡ್ ಬ್ರೇವರಿಸ್‌ ಕಂಪನಿಯು ಮದ್ಯ ಪೂರೈಕೆ ಮತ್ತು ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕವಾಗಿ 24,500 ಕೋಟಿ ರೂ. ಆದಾಯ ಬರುತ್ತಿದೆ. ಆದರೆ, ಕಂಪನಿಗಳಿಗೆ ಲಾಭವಾಗುತ್ತಿಲ್ಲ. ಸರ್ಕಾರವು ಕೂಡಲೇ ಮದ್ಯದ ಬೆಲೆ ಏರಿಕೆಗೆ ಕ್ರಮಕೈಗೊಳ್ಳಬೇಕು ಎಂದು ಮದ್ಯ ತಯಾರಕರು ಒತ್ತಾಯಿಸಿದ್ದಾರೆ. ಇದಕ್ಕೆ ಸರ್ಕಾರ ಒಪ್ಪದಿದ್ದರೆ ಇನ್ಮುಂದೆ ತೆಲಂಗಾಣದಲ್ಲಿ ಕಿಂಗ್‌ ಫಿಶರ್‌ ಬಿಯರ್‌ ಪೂರೈಕೆ ಸಂಪೂರ್ಣವಾಗಿ ನಿಲ್ಲಲಿದೆ ಎಂದು ಎಚ್ಚರಿಕೆ ನೀಡಿದೆ.

    302 ಲಕ್ಷಕ್ಕೂ ಹೆಚ್ಚು ಬಿಯರ್‌ಗಳ ಮಾರಾಟ
    ತೆಲಂಗಾಣವು ಬಿಯರ್‌ಗೆ ಪ್ರಮುಖ ಮಾರುಕಟ್ಟೆಯಾಗಿ ಬೆಳದಿದೆ. ರಾಷ್ಟ್ರೀಯ ಸಾರ್ವಜನಿಕ ಹಣಕಾಸು ಮತ್ತು ನೀತಿ ಸಂಸ್ಥೆ (NIPFP) ಇತ್ತೀಚಿನ ಸಮೀಕ್ಷೆಯು ಬಿಯರ್ ಮಾರಾಟದಲ್ಲಿ ದಕ್ಷಿಣ ಭಾರತದಲ್ಲಿಯೇ ಮುಂಚೂಣಿಯಲ್ಲಿದೆ ಎಂದು ಉಲ್ಲೇಖಿಸಲಾಗಿದೆ. ಏಪ್ರಿಲ್ ಮತ್ತು ಅಕ್ಟೋಬರ್ 2024 ರ ನಡುವೆ, ತೆಲಂಗಾಣದಲ್ಲಿ 302 ಲಕ್ಷಕ್ಕೂ ಹೆಚ್ಚು ಬಿಯರ್‌ಗಳು ಮಾರಾಟವಾಗಿದೆ.

  • ಕನ್ನಡ ಬರಲ್ಲ ಅಂದಿದ್ದಕ್ಕೆ ಕ್ಯಾಶಿಯರ್ ಮೇಲೆ ಹಲ್ಲೆ

    ಕನ್ನಡ ಬರಲ್ಲ ಅಂದಿದ್ದಕ್ಕೆ ಕ್ಯಾಶಿಯರ್ ಮೇಲೆ ಹಲ್ಲೆ

    ಬೆಂಗಳೂರು: ಕನ್ನಡ (Kannada) ಬರಲ್ಲ ಅಂದಿದ್ದಕ್ಕೆ ಕ್ಯಾಶಿಯರ್ (Cashier) ಮೇಲೆ ಹಲ್ಲೆ ನಡೆಸಿದ ಘಟನೆ ವಿಜಯನಗರದ ಹಂಪಿನಗರದಲ್ಲಿ (Hampinagara) ನಡೆದಿದೆ

    ಮದ್ಯ ಸೇವಿಸಿದ ವ್ಯಕ್ತಿಯಿಂದ ಅಂಗಡಿ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ್ದಾನೆ. ಶನಿವಾರ ಮಧ್ಯಾಹ್ನ 3:30ಕ್ಕೆ ಈ ಘಟನೆ ನಡೆದಿದ್ದು ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ವಿವಿಐಪಿ ಪ್ರದೇಶದಲ್ಲಿ ಶವವಾಗಿ ಪತ್ತೆ

     

    ಅಂಗಡಿಗೆ ಬರುವ ಮೊದಲೇ ಮದ್ಯ (Alcohol) ಸೇವಿಸಿದ್ದ ವ್ಯಕ್ತಿ ವಸ್ತು ಖರೀದಿಸಿದ ಬಳಿಕ ಹಣ ಪಾವತಿಸಿರಲಿಲ್ಲ. ಈ ವೇಳೆ ಹಣ ಪಾವತಿಸುವಂತೆ ಕ್ಯಾಶಿಯರ್‌ ಹೇಳಿದಾಗ ಕನ್ನಡದಲ್ಲಿ ಮಾತನಾಡು ಎಂದಿದ್ದಾನೆ.

    ಈ ವೇಳೆ ಕನ್ನಡ ಬರುವುದಿಲ್ಲ ಎಂದಿದ್ದಕ್ಕೆ ಅತನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ.  ನಂತರ ಕ್ಯಾಶಿಯರ್ ಮೇಲೆ ಹಲ್ಲೆ ಮಾಡಿ ಕನ್ನಡ ಬಾರದೇ ಇದ್ದರೆ ಕಲಿ ಎಂದು ಅವಾಜ್ ಹಾಕಿದ್ದಾನೆ.

     

  • 35,496 ರೂ. ಮೌಲ್ಯದ 80.24 ಲೀಟರ್ ಅಕ್ರಮ ಮದ್ಯ ಜಪ್ತಿ

    35,496 ರೂ. ಮೌಲ್ಯದ 80.24 ಲೀಟರ್ ಅಕ್ರಮ ಮದ್ಯ ಜಪ್ತಿ

    ಹಾವೇರಿ: ಜಿಲ್ಲೆಯಲ್ಲಿ ಎಲ್ಲೆಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಅಕ್ರಮ ಮದ್ಯ ಮಾರಾಟದ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ದಾಳಿ ಮಾಡಿದ ಪೊಲೀಸರು 35,496 ರೂ. ಮೌಲ್ಯದ 80.24 ಲೀಟರ್ ಮದ್ಯವನ್ನು (Alcohol) ಜಪ್ತಿ ಮಾಡಿಕೊಂಡಿದ್ದಾರೆ.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ ಮಾರ್ಗದರ್ಶನದಲ್ಲಿ ವಿಶೇಷ ದಾಳಿ ನಡೆಸಿತ್ತು. ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸರು 19 ಜನ ಆರೋಪಿಗಳ ವಿರುದ್ಧ 19 ಪ್ರಕರಣಗಳನ್ನು ದಾಖಲಿಸಿದ್ದಾರೆ.

    ಇನ್ನು ಮುಂದೆ ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟದಂತಹ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದರೆ 112 ವಾಹನ, ಸ್ಥಳೀಯ ಪೊಲೀಸ್ ಠಾಣೆ ಅಥವಾ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಎಸ್‌ಪಿ ಅಂಶುಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಜೈಲಿನಿಂದ ಹೊರ ಬಂದ ಬಳಿಕ ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ

  • ಎಣ್ಣೆ ಬೇಡ ಎಂದಿದ್ದಕ್ಕೆ ಸ್ನೇಹಿತನೇ ಮನೆಯ ಟೆರೇಸ್‌ನಿಂದ ತಳ್ಳಿದ!

    ಎಣ್ಣೆ ಬೇಡ ಎಂದಿದ್ದಕ್ಕೆ ಸ್ನೇಹಿತನೇ ಮನೆಯ ಟೆರೇಸ್‌ನಿಂದ ತಳ್ಳಿದ!

    – ಕೆಳಕ್ಕೆ ಬಿದ್ದ ನಂತ್ರ ಮನಬಂದಂತೆ ಗೆಳೆಯರಿಂದ ಥಳಿತ

    ಲಕ್ನೋ: ಮದ್ಯ (Alcohol) ಸೇವಿಸಲು ನಿರಾಕರಿಸಿದನೆಂದು ಆತನ ಸ್ನೇಹಿತನೇ ಮನೆಯ ಟೆರೇಸ್‌ನಿಂದ ಕೆಳಕ್ಕೆ ತಳ್ಳಿದ ಘಟನೆ ಉತ್ತರಪ್ರದೇಶದಲ್ಲಿ (Uttarpradesh) ನಡೆದಿದೆ.

    ಗಾಯಾಳುವನ್ನು ರಂಜೀತ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಈತನನ್ನು ಲಕ್ನೋದ ರುಪ್ಪುರ್ ಖಾದ್ರಾದಲ್ಲಿರುವ ಅವರ ಮನೆಯ ಟೆರೇಸ್‌ನಿಂದ ಓರ್ವ ಕೆಳಕ್ಕೆ ತಳ್ಳಿದ್ದಾನೆ. ಅಲ್ಲದೇ ಕೆಳಗೆ ಬಿದ್ದ ಬಳಿಕ ಇತರ ಮೂವರು ಸೇರಿ ರಂಜೀತ್‌ಗೆ ಮನಬಂದಂತೆ ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ; ಗೋವಾದಲ್ಲಿ ಕನ್ನಡ ನಿರ್ಮಾಪಕರ ಗಲಾಟೆ

    ಘಟನೆಯ ಸಂಪೂರ್ಣ ದೃಶ್ಯ ಮನೆಯ ಸುತ್ತಮುತ್ತ ಇರುವ ಕಟ್ಟಡದಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ವೀಡಿಯೋದಲ್ಲಿ ಯುವಕನೊಬ್ಬ ರಂಜೀತ್ ಸಿಂಗ್‌ನನ್ನು ಟೆರೇಸ್‌ನಿಂದ ತಳ್ಳುತ್ತಿರುವುದನ್ನು ತೋರಿಸುತ್ತದೆ. ಇನ್ನು ಇತರ ಮೂವರು ರಸ್ತೆಯಲ್ಲಿ ನಿಂತಿರುವುದನ್ನು ಕಾಣಬಹುದು. ಹಲ್ಲೆ ಅಲ್ಲಿಗೆ ನಿಲ್ಲುವುದಿಲ್ಲ. ರಂಜೀತ್‌ ಕೆಳಕ್ಕೆ ಬಿದ್ದ ಬಳಿಕ ಆತನ ಮೇಲೆ ಹಿಗ್ಗಾಮುಗ್ಗ ಥಳಿಸುವುದನ್ನು ಕೂಡ ಕಾಣಬಹುದಾಗಿದೆ.

    ಘಟನೆ ನಡೆದ ಕೂಡಲೇ ರಂಜೀತ್ ಸಿಂಗ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ಡಿಸ್ಚಾರ್ಜ್ ಮಾಡಲಾಗಿದೆ. ಪ್ರಕರಣ ಸಂಬಂಧ ನಾಲ್ವರ ಪೈಕಿ ಮೂವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ನಾಲ್ಕನೇ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

  • ಗೋವಾದಿಂದ ಆಂಧ್ರಕ್ಕೆ ಅಕ್ರಮ ಸಾಗಾಟ – 28 ಲಕ್ಷ ರೂ. ಮೌಲ್ಯದ ಮದ್ಯ ವಶ

    ಗೋವಾದಿಂದ ಆಂಧ್ರಕ್ಕೆ ಅಕ್ರಮ ಸಾಗಾಟ – 28 ಲಕ್ಷ ರೂ. ಮೌಲ್ಯದ ಮದ್ಯ ವಶ

    ಚಿಕ್ಕೋಡಿ: ಯಮಕನಮರಡಿ (Yamakanamaradi) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗೋವಾದಿಂದ‌ (Goa) ಆಂಧ್ರಕ್ಕೆ (Andhra Pradesh) ಅಕ್ರಮ ಸಾಗಾಟ ಮಾಡುತ್ತಿದ್ದ ಮದ್ಯವನ್ನು (Alcohol) ವಶಕ್ಕೆ ಪಡೆದಿದ್ದಾರೆ.

    16,848 ಲೀಟರ್ ಅಕ್ರಮ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಾರ್ಡ್‌ವೇರ್ ವಸ್ತು ಸಾಗಾಟ ಮಾಡುತ್ತೇವೆ ಎಂದು ಲೈಸೆನ್ಸ್ ಪಡೆದು ಹಾರ್ಡ್‌ವೇರ್ ಬದಲಿಗೆ ಗೋವಾದ ಅಕ್ರಮ ಮದ್ಯ ಸಾಗಾಟ ಮಾಡಲಾಗುತ್ತಿತ್ತು. ಈ ಹಿನ್ನೆಲೆ ಒಟ್ಟು 28 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಕಳೆದ ಐದು ದಿನದಲ್ಲಿ ಧರೆಗುರುಳಿದ 271 ಮರ

    ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ್ ಹಲಗೆ, ಸದಾಶಿವ ಗೇರಡೆ ಎಂಬ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ

  • ಪತಿಯ ಮರ್ಮಾಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ ಕೊಟ್ಟ ಪತ್ನಿ!

    ಪತಿಯ ಮರ್ಮಾಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ ಕೊಟ್ಟ ಪತ್ನಿ!

    ಲಕ್ನೋ: ಅಚ್ಚರಿಯ ಪ್ರಕರಣವೊಂದರಂತೆ ಪತ್ನಿಯೊಬ್ಬಳು ತನ್ನ ಪತಿಗೆ ಚಿತ್ರಹಿಂಸೆ ಕೊಟ್ಟ ಆಘಾತಕಾರಿ ಘಟನೆಯೊಂದು ಉತ್ತರಪ್ರದೇಶದ (Uttar Pradesh) ಸಿಯೋಹರಾ ಜಿಲ್ಲೆಯಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಪತ್ನಿ ಮೆಹರ್‌ (30) ಹಾಗೂ ಪತಿಯನ್ನು ಮನ್ನನ್ ಜೈದಿ ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದಾಗಿ ಪತ್ನಿ ತನ್ನ ಪತಿಯ ಮೇಲೆ ಈ ರೀತಿಯ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ. ಸದ್ಯ ಪತಿಯ ಮೇಲೆ ಕ್ರೌರ್ಯ ಮೆರೆದ ಪತ್ನಿಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ (Social Media) ವೈರಲ್‌ ಆಗುತ್ತಿದೆ.

    ಮೆಹರ್‌ ಹಾಗೂ ಮುನ್ನನ್‌ ಜೈದಿ ಪ್ರತ್ಯೇಕವಾಗಿ ವಾಸವಾಗಿದ್ದರು. ಇವರಿಬ್ಬರ ದಾಂಪತ್ಯದ ನಡುವೆ ಬಿರುಕು ಮೂಡಿದ ಬಳಿಕ ಮೆಹರ್‌ ಮದ್ಯಪಾನ ಹಾಗೂ ಸಿಗರೇಟ್‌ ಸೇದಲು ಆರಂಭಿಸಿದ್ದಾಳೆ. ಅಲ್ಲದೇ ಮೆಹರ್ ತನ್ನನ್ನು ದೈಹಿಕವಾಗಿ ನಿಂದಿಸಿದ್ದಾಳೆ. ತನ್ನ ಮೇಲೆ ಸುಳ್ಳು ಆರೋಪ ಹೊರಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ತನ್ನ ಖಾಸಗಿ ಅಂಗಗಳನ್ನು ಸಿಗರೇಟಿನಿಂದ ಸುಡುವ ಮುನ್ನ ಪತ್ನಿ ತನ್ನ ಕೈಕಾಲುಗಳನ್ನು ಕಟ್ಟಿ ಹಾಕಿದ್ದಾಳೆ ಎಂದು ಸಂತ್ರಸ್ತ ಆರೋಪಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಭ್ರೂಣಹತ್ಯೆ ದಂಧೆ: ದಂಪತಿ ಅರೆಸ್ಟ್

    ತನ್ನ ಸುರಕ್ಷತೆಯ ಬಗ್ಗೆ ಕಳವಳ ವ್ಯ ಕ್ತಪಡಿಸಿದ ಮನ್ನನ್ ತಮ್ಮ ಮನೆಯಲ್ಲಿ ಸಿಸಿಕ್ಯಾಮೆರಾ ಅಳವಡಿಸಿದ್ದಾರೆ ಈ ಕ್ಯಾಮೆರಾದಲ್ಲಿ ಮೆಹರ್‌ ಕ್ರೂರ ಕೃತ್ಯ ಸೆರೆಯಾಗಿದ್ದು, ಮುನ್ನನ್‌ ಪೊಲೀಸರಿಗೆ ಈ ದೃಶ್ಯವನ್ನು ನೀಡಿದ್ದಾರೆ. ಪತಿ ದೂರು ಮತ್ತು ಸಿಸಿಟಿವಿ ದೃಶ್ಯಾ ವಳಿಗಳನ್ನು ಸಲ್ಲಿಸಿದ ನಂತರ ಸಿಯೋಹರಾ ಜಿಲ್ಲಾ ಪೊಲೀಸರು ಕ್ರಮ ಕೈಗೊಂಡಿದ್ದು, ಭಾನುವಾರ ಮಹಿಳೆಯನ್ನು ಬಂಧಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯ ವಿರುದ್ಧ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಕೇಸ್‌ ದಾಖಲಿಸಿಕೊಂಡಿದ್ದಾರೆ ಎಂದು ಎಸ್‌ಪಿ ಪೂರ್ವ ಧರಂಪಾಲ್ ಸಿಂಗ್ ತಿಳಿಸಿದ್ದಾರೆ.

  • ಮದ್ಯ ಕುಡಿಸಿ ವಿದ್ಯಾರ್ಥಿಯೊಂದಿಗೆ ಸೆಕ್ಸ್‌ – ಪಾಠ ಹೇಳಿಕೊಡಲು ಹೋದ ಶಿಕ್ಷಕಿ ಹೀಗೆ ಮಾಡೋದಾ?

    ಮದ್ಯ ಕುಡಿಸಿ ವಿದ್ಯಾರ್ಥಿಯೊಂದಿಗೆ ಸೆಕ್ಸ್‌ – ಪಾಠ ಹೇಳಿಕೊಡಲು ಹೋದ ಶಿಕ್ಷಕಿ ಹೀಗೆ ಮಾಡೋದಾ?

    – ನೆಚ್ಚಿನ ವಿದ್ಯಾರ್ಥಿಗಳಿಗೆ ನಗ್ನ ಫೋಟೋ ಕಳಿಸುತ್ತಿದ್ದಳಂತೆ ಶಿಕ್ಷಕಿ

    ವಾಷಿಂಗ್ಟನ್‌: ತನ್ನ ವಿದ್ಯಾರ್ಥಿಗಳಿಗೆ (Students) ಆಗಾಗ್ಗೆ ನಗ್ನ ಫೋಟೋಗಳನ್ನು ಕಳುಹಿಸೋದು, ಬಾರ್‌ಗಳಲ್ಲಿ ಮದ್ಯ ತಂದು ಕುಡಿಸುವುದರ ಜೊತೆಗೆ ವಿದಾರ್ಥಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಆರೋಪಗಳ ಮೇಲೆ ಲೂಯಿಸಿಯಾಬದ ಶೀಕ್ಷಕಿಯನ್ನು (US School Teacher) ಬಂಧಿಸಿರುವ ಘಟನೆ ಅಮೆರಿಕದ ನ್ಯೂಯಾರ್ಕ್‌ ನಗರದಲ್ಲಿ ನಡೆದಿದೆ.

    ಅಲೆಕ್ಸಾ ವಿಂಗರ್ಟರ್‌ (35) ಬಂಧಿತ ಶಿಕ್ಷಕಿ. ತನ್ನ ಪುರುಷ ವಿದ್ಯಾರ್ಥಿಗಳಿಗೆ ಸ್ಥಳೀಯ ಬಾರ್‌ಗಳಿಂದ ಮದ್ಯ (Alcohol) ತಂದು ಕೊಡುವುದಲ್ಲದೇ, ಓರ್ವ ವಿದ್ಯಾರ್ಥಿಯೊಂದಿಗೆ ಸೆಕ್ಸ್‌ ನಡೆಸಿದ್ದಾಳೆ ಎಂಬ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಕಳೆದ ಮಾರ್ಚ್‌ ತಿಂಗಳಲ್ಲಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕ್ರೀಡಾ ವಿದ್ಯಾರ್ಥಿಯೊಂದಿಗೆ ಕಾರಿನಲ್ಲಿ ಸೆಕ್ಸ್‌ – ಶಿಕ್ಷಕಿಯನ್ನ ರೆಡ್‌ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ ತಾಯಿ

    ಯಾವ ಸಿನಿಮಾಗೂ ಕಡಿಮೆಯಿಲ್ಲ ಈಕೆ ಸ್ಟೋರಿ?
    ಹೌದು. ಶಾಲೆಗೆ ಹೋಗಿ ಪಾಠ ಹೇಳಿಕೊಡಬೇಕಾದ ಶಿಕ್ಷಕಿ ಸ್ಥಳೀಯ ಬಾರ್‌ಗಳಿಂದ ಮದ್ಯ ತಂದು ವಿದ್ಯಾರ್ಥಿಗಳಿಗೆ ಕೊಡುತ್ತಿದ್ದಳಂತೆ, ಅಷ್ಟೇ ಕೆಲ ವಿದ್ಯಾರ್ಥಿಗಳಿಗೆ ತನ್ನ ಬೆತ್ತಲೆ ಫೋಟೋಗಳನ್ನು ಕಳಿಸಿಕೊಡುತ್ತಿದ್ದಂತೆ. ಇಂತಹ ಕೃತ್ಯ ನಡೆಸುತ್ತಿದ್ದಾಲೇ ಮದ್ಯ ಕುಡಿದು ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಓರ್ವ ವಿದ್ಯಾರ್ಥಿಯೊಂದಿಗೆ ಲೈಂಗಿಕ ಕ್ರಿಯೆ ಸಹ ನಡೆಸಿದ್ದಾಳೆ ಎಂದು ಪೊಲೀಸ ತನಿಖೆಯಲ್ಲಿ ಬಯಲಾಗಿದೆ. ಇದನ್ನೂ ಓದಿ: ಗಾಳಿಯಲ್ಲಿ ಹಾರಿ ಮರಕ್ಕೆ ಅಪ್ಪಳಿಸಿದ ಕಾರು – ಅಮೆರಿಕದಲ್ಲಿ ಮೂವರು ಭಾರತದ ಮಹಿಳೆಯರು ಸಾವು

    ಕಳೆದ ಮಾರ್ಚ್‌ನಲ್ಲಿ ಈಕೆಯನ್ನು ಬಂಧಿಸಿದ ಬಳಿಕ ಸ್ಲೈಡೆಲ್ ಪೊಲೀಸರು ಪ್ರಾಥಮಿಕ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಆಕೆಯ ಮೊಬೈಲ್‌ ಅನ್ನು ಪರಿಶೀಲಿಸಿದಾಗ, ವಿದ್ಯಾರ್ಥಿಗಳಿಗೆ ಬೆತ್ತಲೆ ಫೋಟೋಗಳನ್ನು ಕಳುಹಿಸಿರುವುದು ಹಾಗೂ ಸೆಕ್ಸ್‌ ಚಾಟ್‌ ನಡೆಸಿರುವುದು ಬಯಲಾಗಿದೆ. ಅಲ್ಲದೇ ಈಕೆ 18 ವರ್ಷ ಪುರುಷ ವಿದ್ಯಾರ್ಥಿಯೊಂದಿಗೆ ಸೆಕ್ಸ್‌ ನಡೆಸಿದ್ದಾಳೆ ಎಂಬುದೂ ತನಿಖೆಯಲ್ಲಿ ಪುರಾವೆಗಳೊಂದಿಗೆ ಸಾಬೀತಾಗಿದೆ. ಈಕೆ ತನ್ನ ವಿದ್ಯಾರ್ಥಿಗಳಿಗೆ ಸ್ಥಳೀಯ ಬಾರ್‌ಗಳಿಂದ ಮದ್ಯ ತಂದು ಕೊಡುತ್ತಿದ್ದುದ್ದಕ್ಕೆ ವೀಡಿಯೋ ಆಧಾರಗಳು ಸಿಕ್ಕಿವೆ ಈ ಹಿನ್ನೆಲೆಯಲ್ಲಿ ಆಕೆಯನ್ನ ಮುಂದಿನ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಹೇಳಲಾಗಿದೆ.

    ಟೀಚರ್‌ ಸಸ್ಪೆಂಡ್‌: ವಿಂಗರ್ಟರ್‌ ಸೇಂಟ್ ಟಮ್ಮನಿ ಪ್ಯಾರಿಷ್ ಸ್ಕೂಲ್‌ನಲ್ಲಿ ಕೆಲಸ ಮಾಡುತ್ತಿದ್ದಳು, ಆದ್ರೆ ಯಾವ ವಿಷಯ ಬೋಧಿಸುತ್ತಿದ್ದಳು ಎಂಬುದು ತಿಳಿದುಬಂದಿಲ್ಲ. ಸದ್ಯ ಶಾಲಾ ಮಂಡಳಿ ಆಕೆಯನ್ನ ಕೆಲಸದಿಂದ ವಜಾಗೊಳಿಸಿದೆ. ನಮ್ಮ ವಿದ್ಯಾರ್ಥಿಗಳ ಸುರಕ್ಷತೆಗೆ ಧಕ್ಕೆ ತರುವ ಯಾವುದೇ ನಡವಳಿಕೆಯನ್ನು ಸಹಿಸುವುದಿಲ್ಲ ಎಂದು ಮಂಡಳಿ ಹೇಳಿದೆ. ಈ ಶಾಲೆಯಲ್ಲಿ ಸುಮಾರು 40,000 ವಿದ್ಯಾರ್ಥಿಗಳಿದ್ದಾರೆ. ಇದನ್ನೂ ಓದಿ: ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ ಮೇಲೆ ದಾಳಿ ಕೇಸ್‌ – ಖಲಿಸ್ತಾನಿ ಪರ ಆರೋಪಿ ಬಂಧನ

  • Lok Sabha Election 2024: 14 ಕ್ಷೇತ್ರದಲ್ಲಿ 3 ದಿನ ಮದ್ಯ ಮಾರಾಟ ಬಂದ್

    Lok Sabha Election 2024: 14 ಕ್ಷೇತ್ರದಲ್ಲಿ 3 ದಿನ ಮದ್ಯ ಮಾರಾಟ ಬಂದ್

    ಬೆಂಗಳೂರು: ರಾಜ್ಯದಲ್ಲಿ ಮೊದಲನೇ ಹಂತದ ಸಾರ್ವತ್ರಿಕ ಲೋಕಸಭಾ ಚುನಾವಣೆ 2024ರ (General Elections 2024) ಮತದಾನಕ್ಕೆ ಕ್ಷಣಗಣನೆ ಆಂಭವಾಗಿದ್ದು, ಶಾಂತಿ ಪಾಲನೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ.

    ಸಾರ್ವತ್ರಿಕ ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ರಾಜ್ಯಾದ್ಯಂತ 26 ರಂದು ಮತದಾನ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ. ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ, ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತ್ತು ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನದಂದು ಚುನಾವಣಾ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಟಿಯಿಂದ ಏಪ್ರಿಲ್ 24 ರಂದು ಸಂಜೆ 5:00 ಗಂಟೆಯಿಂದ ಏಪ್ರಿಲ್ 26 ರ ಮಧ್ಯರಾತ್ರಿ 12.00 ಗಂಟೆಯವರೆಗೆ ನಿಷೇಧಿಸಲಾಗಿದೆ. ಇನ್ನೂ ಇಂದು ಸಂಜೆ 5 ಗಂಟೆಯಿಂದ ಈ ಕ್ರಮ ಜಾರಿಗೆ ಬರಲಿದೆ.

    ಬೆಂಗಳೂರು ನಹರ ಮತ್ತು ಗ್ರಾಮಾಂತರ ಜಿಲ್ಲೆಯಾದ್ಯಂತ ಮದ್ಯ ಉತ್ಪಾದನೆ, ಮಾರಾಟ, ಹಂಚಿಕೆ, ಸಾಗಾಣಿಕೆ, ಶೇಖರಣೆ, ಇತ್ಯಾದಿಗಳನ್ನು ನಿಷೇಧಿಸಿ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು, ಮದ್ಯ (Alcohol) ಮಾರಾಟ ಡಿಪೋಗಳನ್ನು, ಮದ್ಯ, ಬಿಯರ್, ವೈನ್ ತಯಾರಿಕಾ ಡಿಸ್ಟಿಲರಿ, ಬ್ರಿವರಿ, ವೈನರಿಗಳನ್ನು, ಸ್ಟಾರ್ ಹೋಟೆಲ್‍ಗಳನ್ನು ಮುಚ್ಚಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ಆದೇಶಿಸಿದ್ದಾರೆ.

    ALCOHOL

    ಜಿಲ್ಲಾಧಿಕಾರಿ ಆದೇಶದಂತೆ ಪಾಲನೆ ಮಾಡುವುದಾಗಿ ಬಾರ್ ಗಳ ಮುಂದೆ ನಾಮಫಲಕ ಹಾಕಿ ಅಧಿಕಾರಿಗಳ ಆದೇಶ ಪಾಲನೆ ಮಾಡಲಾಗಿದೆ. ಒಟ್ಟಾರೆ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳು, ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮ ಇಂದು ಸಂಜೆ 5 ಗಂಟೆಯಿಂದ ಜಾರಿಗೆ ಬರಲಿದೆ. ಇದನ್ನೂ ಓದಿ: ಕೈ ಅಭ್ಯರ್ಥಿ ಡಿ.ಕೆ ಸುರೇಶ್ ಆಪ್ತರಿಗೆ ಐಟಿ ಶಾಕ್