Tag: alcohol

  • ಪೊಲೀಸ್ ಠಾಣೆ ಮುಂದೆಯೇ ಯುವಕನ ಮೇಲೆ ಹಲ್ಲೆ – 6 ಜನರ ಬಂಧನ

    ಪೊಲೀಸ್ ಠಾಣೆ ಮುಂದೆಯೇ ಯುವಕನ ಮೇಲೆ ಹಲ್ಲೆ – 6 ಜನರ ಬಂಧನ

    ರಾಯಚೂರು: ಪೊಲೀಸ್ ಠಾಣೆಯ ಮುಂದೆಯೇ ಯುವಕನ ಮೇಲೆ ಹಲ್ಲೆ ನಡೆದಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದೆ. ದೇವದುರ್ಗ ಪೊಲೀಸ್ ಠಾಣೆಯ ತಾಲೂಕಿನ ಚಿಕ್ಕಬೂದೂರು ಗ್ರಾಮದ ಯುವಕ ಪ್ರಭು ಎಂಬವರ ಮೇಲೆ ಹಲ್ಲೆ ಮಾಡಲಾಗಿದೆ.

    raichuru

    ಘಟನೆ ಹಿನ್ನೆಲೆ 6 ಜನರ ವಿರುದ್ಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿದ ಆರೋಪಿಗಳಾದ ಉಮಾಪತಿ, ಮಲ್ಲಿಕಾರ್ಜುನ, ವೆಂಕಟರೆಡ್ಡಿ, ಚಂದ್ರಶೇಖರ್ ಪ್ರಕಾಶ್ ಹಾಗೂ ಸುರೇಶ್‍ನನ್ನು ವಶಕ್ಕೆ ಪಡೆದು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ:ಪ್ಯಾರಾಲಿಂಪಿಕ್ಸ್ – ಶೂಟಿಂಗ್‍ನಲ್ಲಿ ಮನೀಷ್‍ಗೆ ಚಿನ್ನ, ಸಿಂಗ್‍ರಾಜ್‍ಗೆ ಬೆಳ್ಳಿ

    raichuru

    ಕುಡಿದ ಅಮಲಿನಲ್ಲಿ ಹೆಣ್ಣು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಅಂತ ಪೊಲೀಸ್ ಠಾಣೆಯ ಆವರಣದಲ್ಲೇ ಚಿಕ್ಕಬೂದುರು ಗ್ರಾಮದ 6 ಜನ ಹಲ್ಲೆ ಮಾಡಿದ್ದಾರೆ. ಠಾಣೆಯ ಮುಂದೆಯೇ ಗಲಾಟೆ ನಡೆದಿದ್ದರೂ ಯುವಕನನ್ನು ರಕ್ಷಣೆ ಮಾಡಲು ಪೊಲೀಸರು ಮುಂದಾಗಿಲ್ಲ. ಠಾಣೆಯ ಮುಂದೆ ಜನ ಜಮಾಯಿಸುತ್ತಿದ್ದಂತೆ ಎಚ್ಚೆತ್ತು ಹಲ್ಲೆ ಮಾಡುತ್ತಿದ್ದವರನ್ನು ವಶಕ್ಕೆ ಪಡೆದಿದ್ದಾರೆ. ಗಾಯಾಳು ಯುವಕನನ್ನು ಇದೀಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.  ಇದನ್ನೂ ಓದಿ:ಬೆಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಕೊರೊನಾ ಸ್ಫೋಟ

  • ಮದ್ಯ ಖರೀದಿಗೆ ವ್ಯಾಕ್ಸಿನ್ ಕಡ್ಡಾಯ – ಹೊಸ ರೂಲ್ಸ್‌ಗೆ ಗುಂಡೈಕ್ಳು ಗಢ ಗಢ

    ಮದ್ಯ ಖರೀದಿಗೆ ವ್ಯಾಕ್ಸಿನ್ ಕಡ್ಡಾಯ – ಹೊಸ ರೂಲ್ಸ್‌ಗೆ ಗುಂಡೈಕ್ಳು ಗಢ ಗಢ

    ಚೆನ್ನೈ: ಕೋವಿಡ್-19 ಲಸಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ, ಸರ್ಕಾರಿ ಸ್ವಾಮ್ಯದ ಟಿಎಎಸ್‍ಎಂಸಿ ಮಳಿಗೆಗಳಿಂದ ಮದ್ಯ ಖರೀದಿಸುವವರು ಎರಡೂ ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕೆಂದು ತಮಿಳುನಾಡಿನ ನೀಲಗಿರಿ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

    alcohol

    ತಮಿಳುನಾಡಿನಲ್ಲಿ ಇಂತಹ ನಿಯಮವನ್ನು ಜಾರಿಗೊಳಿಸಿದ ಮೊದಲ ಜಿಲ್ಲೆ ನೀಲಗಿರಿಯಾಗಿದ್ದು, ಇಲ್ಲಿನ ಟಿಎಎಸ್‍ಎಂಸಿ ಮಳಿಗೆಗಳಿಂದ ಮದ್ಯ ಖರೀದಿಸುವವರು ಲಸಿಕೆ ಪಡೆದ ಪ್ರಮಾಣ ಪತ್ರ ಮತ್ತು ಆಧಾರ್ ಕಾರ್ಡ್‍ನನ್ನು ಸಲ್ಲಿಸಬೇಕಾಗುತ್ತದೆ. ಇದನ್ನೂ ಓದಿ:ಪಬ್ಲಿಕ್ ಟಿವಿ ಇಂಪಾಕ್ಟ್ – ರಸ್ತೆ ಗುಂಡಿಗಳನ್ನು ಮುಚ್ಚಲು ಟಾಸ್ಕ್ ಪೋರ್ಸ್ ರಚಿಸಿದ ಬಿಬಿಎಂಪಿ

    ಕೆಲವು ಮಂದಿ ಮದ್ಯಸೇವನೆ ಮಾಡದೇ ತಮಗೆ ಇರಲು ಆಗುವುದಿಲ್ಲ ಎಂದು ತಿಳಿಸಿದ್ದರು. ಹೀಗಾಗಿ ಮದ್ಯ ಖರೀದಿಸುವವರು ವ್ಯಾಕ್ಸಿನ್ ಪಡೆದ ಪ್ರಮಾಣ ಪತ್ರವನ್ನು ತೋರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಸುಮಾರು ಶೇ 97ರಷ್ಟು ಜನರು ವ್ಯಾಕ್ಸಿನ್ ಮೊದಲ ಡೋಸ್ ಸ್ವೀಕರಿಸಿದ್ದು, ಇದೀಗ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗುತ್ತಿದೆ. ಇದನ್ನೂ ಓದಿ:ಹತ್ತಾರು ಎಕರೆ, ಮಾವಿನ ತೋಪು, ನಿರ್ಜನ ಪ್ರದೇಶ – ನೂರಾರು ಜನ… ಕೋಟಿ ಕೋಟಿ ವ್ಯವಹಾರ!

  • ಕುಡಿದು ಅಪಘಾತ – ಪೊಲೀಸರಿಗೆ ಅವಾಜ್ ಹಾಕಿದವ ಅಂದರ್

    ಕುಡಿದು ಅಪಘಾತ – ಪೊಲೀಸರಿಗೆ ಅವಾಜ್ ಹಾಕಿದವ ಅಂದರ್

    ಹಾಸನ: ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡಿದ ಕಾರಣ ನಿಯಂತ್ರಣ ತಪ್ಪಿದ ಕಾರು ಅಪಘಾತಕ್ಕೀಡಾದ ಘಟನೆ ಮುತ್ತಿಗೆ ಗೇಟ್ ಬಳಿ ನಡೆದಿದೆ. ಇದನ್ನೂ ಓದಿ: ಬ್ರಾಡ್‍ಬ್ಯಾಂಡ್ ಉತ್ತೇಜಿಸಲು ಜನರಿಗೆ ಪ್ರತಿ ತಿಂಗಳು 200 ರೂ. ಕ್ಯಾಶ್‍ಬ್ಯಾಕ್ ನೀಡಿ – ಟ್ರಾಯ್ ಶಿಫಾರಸು

    ಜಿಲ್ಲೆಯ ಅರಕಲಗೂಡು ತಾಲೂಕಿನ ಮುತ್ತಿಗೆ ಗೇಟ್ ಬಳಿ ಅಪಘಾತ ಸಂಭವಿಸಿದ್ದು, ಕಾರು ಚಾಲನೆ ಮಾಡುತ್ತಿದ್ದ ಬಾಬು ಕುಡಿದ ಮತ್ತಿನಲ್ಲಿ ವಾಹನ ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತ ನಂತರ ಸ್ಥಳಕ್ಕೆ ಬಂದ ಪೊಲೀಸರ ವಿರುದ್ಧ ಅನವಶ್ಯಕವಾಗಿ ಹರಿಹಾಯ್ದಿರುವ ಚಾಲಕ ಬಾಬು, ಪೊಲೀಸರ ಎದುರು ಕೂಗಾಡುತ್ತಾ ನಾನು ರಕ್ಷಣಾ ವೇದಿಕೆಯ ಕಾರ್ಯಕರ್ತ ಎಂದು ಪೊಲೀಸರಿಗೆ ಅವಾಜ್ ಹಾಕಿದ್ದಾನೆ.

    car accident

    ಪೊಲೀಸರ ಎದುರೇ ಬಟ್ಟೆ ಹರಿದುಕೊಂಡು ಹೈಡ್ರಾಮಾ ಮಾಡಿರುವ ಬಾಬು ವಿರುದ್ಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಮತ್ತು ಅಪಘಾತ ಪ್ರಕರಣವನ್ನು ದಾಖಲು ಮಾಡಲಾಗಿದೆ.ಈ ಸಂಬಂಧ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ನೀನು ಹುಟ್ಟಿದ್ಮೇಲೆ ಸೌಂದರ್ಯ ಹಾಳಾಯ್ತು – ಚಪ್ಪಲಿಯಿಂದ ಮಗುವಿನ ಮೇಲೆ ತಾಯಿ ಹಲ್ಲೆ

  • ಮದ್ಯಪಾನ ಮಾಡ್ಬೇಡಿ ಎಂದಿದಕ್ಕೆ ಹೆಂಡತಿಯನ್ನೇ ಹತ್ಯೆಗೈದ ಪತಿ

    ಮದ್ಯಪಾನ ಮಾಡ್ಬೇಡಿ ಎಂದಿದಕ್ಕೆ ಹೆಂಡತಿಯನ್ನೇ ಹತ್ಯೆಗೈದ ಪತಿ

    ದಾವಣಗೆರೆ: ಮದ್ಯಪಾನ ಮಾಡಬೇಡಿ ಎಂದು ಬುದ್ದಿ ಹೇಳಿದ ಪತ್ನಿಯನ್ನು ಪತಿಯೇ ಕೊಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದಲ್ಲಿ ನಡೆದಿದೆ.

    davangere murder

    ಶಿಲ್ಪಾ(40) ಪತಿಯಿಂದ ಕೊಲೆಯಾದ ದುರ್ದೈವಿ ಪತ್ನಿ. ಗಿರೀಶ್ ಪತ್ನಿಯನ್ನೇ ಕೊಲೆ ಮಾಡಿದ ಆರೋಪಿ ಪತಿ. ಎರಡು ವರ್ಷಗಳಿಂದ ಸೊರಟೂರು ಗ್ರಾಮದಲ್ಲಿ ಗಿರೀಶ್ ಹಾಗೂ ಶಿಲ್ಪಾ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪ್ರತಿನಿತ್ಯ ಕುಡಿದು ಬರುತ್ತಿದ್ದ ಗಿರೀಶ್‍ಗೆ ಶಿಲ್ಪಾ ಬುದ್ಧಿ ಮಾತು ಹೇಳುತ್ತಿದ್ದರು. ಆದರೆ ಒಮ್ಮೆ ಕುಡಿಯಲು ಹಣ ಕೊಡುತ್ತಿಲ್ಲ, ಬುದ್ದಿಮಾತು ಹೇಳುತ್ತೀಯಾ ಎಂದು ಗಿರೀಶ್ ಪತ್ನಿಯನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.  ಇದನ್ನೂ ಓದಿ:ಗಣೇಶೋತ್ಸವದ ಬಗ್ಗೆ ಹೆಚ್ಚು ಪ್ರಶ್ನೆ ಕೇಳಿದ್ದಕ್ಕೆ ಸಿಡಿಮಿಡಿಗೊಂಡ ಕಟೀಲ್

    davangere murder

    ಇದೀಗ ಹೊನ್ನಾಳಿ ಸಿಪಿಐ ದೇವರಾಜ್ ತಂಡ ಶಿಲ್ಪಾಳ ಕೊಲೆಯಾದ 8 ಗಂಟೆಯಲ್ಲಿಯೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಸಂಬಂಧ ಹೊನ್ನಾಳಿ ಪೊಲೀಸ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ:ಕೇರಳದ 32 ಮಂದಿಗೆ ಸೋಂಕು, ಕೋಲಾರದ ನರ್ಸಿಂಗ್ ಕಾಲೇಜು ವಿರುದ್ಧ ಕಠಿಣ ಕ್ರಮ: ಸುಧಾಕರ್

  • ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿ ಅಪಘಾತ -ಯುವಕ ಸಾವು

    ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿ ಅಪಘಾತ -ಯುವಕ ಸಾವು

    ಬೆಂಗಳೂರು: ಕುಡಿದ ಮತ್ತಿನಲ್ಲಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‍ನಲ್ಲಿ ನಡೆದಿದೆ.

    ಅಜಯ್ ಮೃತನಾಗಿದ್ದಾನೆ. ಈತ ನಾಯಕನಹಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿ ಸಾವನ್ನಪಿದ್ದಾನೆ. ಮುತ್ಯಾಲಮಡು ಪ್ರವಾಸಿ ತಾಣದ ಬಳಿ ಅಪಘಾತ ನಡೆದಿದೆ. ಇದನ್ನೂ ಓದಿ: ಟಿವಿ, ರೇಡಿಯೋಗಳಲ್ಲಿ ಮಹಿಳೆಯ ಧ್ವನಿ ಬ್ಯಾನ್- ತಾಲಿಬಾನ್ ಆದೇಶ

    ಅಜಯ್ ನಿನ್ನೆ ಸಂಜೆ ಸ್ನೇಹಿತರ ಜೊತೆ ಪಾರ್ಟಿ ಮಾಡಲೆಂದು ಹೋಗಿದ್ದನು. ರಾತ್ರಿ ಪಾರ್ಟಿ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಮರಕ್ಕೆ ಬೈಕ್ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಅಜಯ್ ಸ್ಥಳದಲ್ಲೆ ಮೃತ ಪಟ್ಟಿದ್ದಾನೆ. ಬೆಳೆಗ್ಗೆ ವೇಳೆ ಅಲ್ಲಿ ಹೋದ ಜನ ಗಮನಿಸಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಎಣ್ಣೆ ಬೇಕು ಎಣ್ಣೆ, ಬಾರ್ ಬಂದ್ ಮಾಡ್ಬೇಡಿ: ಬಿಜೆಪಿ ಮುಖಂಡನ ಪ್ರತಿಭಟನೆ

    ಎಣ್ಣೆ ಬೇಕು ಎಣ್ಣೆ, ಬಾರ್ ಬಂದ್ ಮಾಡ್ಬೇಡಿ: ಬಿಜೆಪಿ ಮುಖಂಡನ ಪ್ರತಿಭಟನೆ

    ಬೆಳಗಾವಿ/ಚಿಕ್ಕೋಡಿ: ಎಣ್ಣೆ ಬೇಕು ಎಣ್ಣೆ ಎಂದು ಬಿಜೆಪಿ ಮುಖಂಡ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಚಿಕ್ಕೋಡಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ.

    ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಬಾರ್ ಬಂದ್ ಮಾಡದಂತೆ ಮದ್ಯ ಪ್ರಿಯರ ಜೊತೆಗೆ ಗ್ರಾಮ ಪಂಚಾಯತಿ ಸದಸ್ಯ ಪ್ರತಿಭಟನೆ ನಡೆಸಿದ್ದಾರೆ. ಬಾರ್ ಎದುರೇ ಗುಂಪು ಕಟ್ಟಿಕೊಂಡು ಎಣ್ಣೆ ಬೇಕು ಎಣ್ಣೆ ಎಂದು ಪ್ರೊಟೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಗಳ ರ‍್ಯಾಗಿಂಗ್- ಆರು ಮಂದಿ ಬಂಧನ

    ಸಂಬರಗಿ ಗ್ರಾಮ ಪಂಚಾಯತ ಸದಸ್ಯ ಅಶೋಕ್ ಭಾನುದಾಸೆ ಮಾನೆ ಹಾಗೂ ಕೆಲವು ಕುಡುಕರು ಸಂಬರಗಿ ಗ್ರಾಮದಲ್ಲಿರುವ ಬಾರ್ ಬಂದ್ ಮಾಡುವಂತೆ ರೈತ ಸಂಘಟನೆ ಹಾಗೂ ಸ್ಥಳೀಯರ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ಸ್ಥಳೀಯರಿಗೆ ವಿರೋಧವಾಗಿ ಗ್ರಾಮ ಪಂಚಾಯತ ಸದಸ್ಯ ಅಶೋಕ್ ಭಾನುದಾಸೆ ಮಾನೆ ಹಾಗೂ ಕುಡುಕರು ಪ್ರತಿಭಟನೆ ನಡೆಸಿದ್ದಾರೆ.

  • ಅಧಿಕ ದರದಲ್ಲಿ ಮದ್ಯ ಮಾರಾಟ-ಗ್ರಾಮದಲ್ಲಿ ಡಂಗುರ ಸಾರಿದ  ಮದ್ಯಪ್ರಿಯರು

    ಅಧಿಕ ದರದಲ್ಲಿ ಮದ್ಯ ಮಾರಾಟ-ಗ್ರಾಮದಲ್ಲಿ ಡಂಗುರ ಸಾರಿದ ಮದ್ಯಪ್ರಿಯರು

    ಕೊಪ್ಪಳ: ಮದ್ಯ ಬೆಲೆ ದುಪ್ಪಟ್ಟಾಗಿದೆ ಒಂದು ಕಡೆ ಕುಳಿತು ಚರ್ಚಿಸೋಣ ಬನ್ನಿ ಎಂದು ಮದ್ಯಪ್ರಿಯರು ಊರಿನಲ್ಲಿ ಡಂಗುರ ಸಾರಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೊಸಹಳ್ಳಿಯಲ್ಲಿ ನಡೆದಿದೆ.

    ಲಾಕ್‍ಡೌನ್ ನೆಪವಾಗಿಟ್ಟುಕೊಂಡು ಅಧಿಕ ದರದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಈ ಆರೋಪಕ್ಕೆ ಪುಷ್ಠಿ ಕೊಡುವಂತೆ ಕೊಪ್ಪಳ ಜಿಲ್ಲೆಯ ಹೊಸಹಳ್ಳಿಯಲ್ಲಿ ದುಪ್ಪಟ್ಟು ದರಕ್ಕೆ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಬೇಸತ್ತ ಮದ್ಯಪ್ರೀಯರು ಗ್ರಾಮದಲ್ಲಿರುವ ಎಲ್ಲಾ ಕುಡುಕರು ಒಂದು ಕಡೆ ಚರ್ಚಿಸೋಣ ಬನ್ನಿ ಎಂದು ಡಂಗುರ ಸಾರಿದ್ದಾರೆ.

    ನಮ್ಮ ಗ್ರಾಮದಲ್ಲಿ ಹಾಗೂ ಗಂಗಾವತಿಯಲ್ಲಿ ದುಪ್ಪಟ್ಟು ದರಕ್ಕೆ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಬಡವರಿಗೆ ತೊಂದರೆಯಾಗುತ್ತಿದೆ. ಲಾಕ್‍ಡೌನ್ ನೆಪ ಹೇಳಿಕೊಂಡು 50 ರೂಪಾಯಿಗೆ ಮಾರಾಟ ಮಾರಾಟವಾಗುವ ಮದ್ಯವನ್ನು 100 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಇದನ್ನು ಪ್ರಶ್ನಿಸಿದರೆ ಬೆಲೆ ಹೆಚ್ಚಳವಾಗಿದೆ ಎಂದು ಹೇಳುತ್ತಿದ್ದಾರೆ. ಇದರಿಂದ ದುಪ್ಪಟ್ಟು ದರದಲ್ಲಿ ಮಾರಾಟ ಮಾಡುವ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಬೇಕು, ಅದಕ್ಕಾಗಿ ಗ್ರಾಮದಲ್ಲಿ ಒಂದು ಕಡೆ ಎಲ್ಲರೂ ಸೇರಿ ಚರ್ಚಿಸೋಣ ಬನ್ನಿ ಎಂದು ಡಂಗುರ ಸಾರಿದ್ದಾರೆ. ಇದನ್ನೂ ಓದಿ:  ರಾಜ್ಯ ಸರ್ಕಾರ ವಜಾಕ್ಕೆ ರಾಜ್ಯಪಾಲರು ಶಿಫಾರಸ್ಸು ಮಾಡಬೇಕು – ಸಿದ್ದರಾಮಯ್ಯ

    ಈ ಡಂಗುರದ ಪ್ರಕಾರ ಇಂದೇ ಗ್ರಾಮದಲ್ಲಿ ಸಭೆ ನಡೆಸಬೇಕು, ಆದರೆ ಡಂಗುರ ಬಾರಿಸಿದವರಿಗೆ ಎಷ್ಟು ಜನರು ಬೆಂಬಲ ವ್ಯಕ್ತಪಡಿಸುತ್ತಾರೆ. ಮದ್ಯ ಮಾರಾಟ ಮಾಡುವವರು ಬಲಿಷ್ಠರಾಗಿದ್ದು, ಅವರ ವಿರುದ್ಧ ಎಷ್ಟು ಜನ ಬಂಡಾಯ ಎಳುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

  • ಅಕ್ರಮ ಮದ್ಯ ಸಾಗಾಟ ದಂಧೆಕೊರರು ಅಂದರ್ – ಲಕ್ಷಾಂತರ ರೂ. ಮೌಲ್ಯದ ಮದ್ಯ ಜಪ್ತಿ

    ಅಕ್ರಮ ಮದ್ಯ ಸಾಗಾಟ ದಂಧೆಕೊರರು ಅಂದರ್ – ಲಕ್ಷಾಂತರ ರೂ. ಮೌಲ್ಯದ ಮದ್ಯ ಜಪ್ತಿ

    ಯಾದಗಿರಿ: ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಮದ್ಯ ಸಿಗದಿರುವ ಕಾರಣ ಎರಡು ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಸಾಗಾಟ ಹೆಚ್ಚಾಗಿದೆ. ವಿಜಯಪುರದಿಂದ ರಾಯಚೂರು ಮತ್ತು ಯಾದಗಿರಿಗೆ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ದಂಧೆಕೊರರನ್ನು ಸೆರೆ ಹಿಡಿಯುವಲ್ಲಿ ಯಾದಗಿರಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ವಿಜಯಪುರದಿಂದ ಅಕ್ರಮವಾಗಿ ಮದ್ಯ ಸಾಗಾಣಿಕೆ ಖಚಿತ ಮಾಹಿತಿ ಪಡೆದ ಹುಣಸಗಿ ಸಿಪಿಐ ದೌಲತ್ ಕುರಿ ನೇತೃತ್ವದ ತಂಡ, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಚೆಕ್ ಪೊಸ್ಟ್ ನಲ್ಲಿ ಅಕ್ರಮದಂಧೆಕೊರರನ್ನು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂ ಬೆಲೆಬಾಳುವ ಮದ್ಯ ಜಪ್ತಿ ಮಾಡಿಕೊಂಡಿದೆ.

    ಅಕ್ರಮ ದಂಧೆಕೊರರು ರಾಯಚೂರು ಜಿಲ್ಲೆಯ ಮಸ್ಕಿ, ಕವಿತಾಳ ಮೂಲದವರಾಗಿದ್ದಾರೆ. ವಿಜಯಪುರದಿಂದ ರಾಯಚೂರಿಗೆ ಮದ್ಯ ಕಳ್ಳಸಾಗಣೆ ಮಾಡುತ್ತಿದ್ದ ವೇಳೆ ಯಾದಗಿರಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಒಟ್ಟು 13 ಜನ ಆರೋಪಿಗಳ ಬಂಧನವಾಗಿದ್ದು, 38 ಮದ್ಯದ ಬಾಟಲ್, 4 ಕಾರು ಜಪ್ತಿ ಮಾಡಲಾಗಿದೆ. ನಾರಾಯಣಪುರ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

  • ಮಂಡ್ಯದಲ್ಲಿ ಮದ್ಯ ಖರೀದಿಗೆ ಮುಗಿಬಿದ್ದ ಜನ

    ಮಂಡ್ಯದಲ್ಲಿ ಮದ್ಯ ಖರೀದಿಗೆ ಮುಗಿಬಿದ್ದ ಜನ

    ಮಂಡ್ಯ: ಜಿಲ್ಲೆಯಲ್ಲಿ ಇಂದು ಲಾಕ್‍ಡೌನ್ ರಿಲೀಫ್ ನೀಡಿರುವ ಹಿನ್ನೆಲೆ ಮದ್ಯಪ್ರಿಯರು ಎಣ್ಣೆ ಖರೀದಿ ಮಾಡಲು ಮದ್ಯದಂಗಡಿಗಳಿಗೆ ಮುಗಿ ಬಿದ್ದಿದ್ದಾರೆ.

    ಮಂಡ್ಯ ಜಿಲ್ಲೆಯಲ್ಲಿ ಮಂಗಳವಾರ, ಬುಧವಾರ ಕಂಪ್ಲೀಟ್ ಲಾಕ್‍ಡೌನ್ ಆಗಿತ್ತು. ಅಲ್ಲದೇ ಶನಿವಾರ ಮತ್ತು ಭಾನುವಾರ ಮತ್ತೆ ಕಂಪ್ಲೀಟ್ ಲಾಕ್‍ಡೌನ್ ಮಾಡಲು ಜಿಲ್ಲಾಡಳಿತ ಆದೇಶ ನೀಡಿದೆ. ಹೀಗಾಗಿ ಮದ್ಯಪ್ರಿಯರು ಮದ್ಯ ಖರೀದಿ ಮಾಡಲು ಮದ್ಯದಂಗಡಿಗಳ ಮುಂದೆ ಕ್ಯೂ ನಿಂತಿದ್ದಾರೆ.

    ಜಿಲ್ಲೆಯಲ್ಲಿ ಇಂದು ಒಂದು ದಿನ ಮಾತ್ರ ಮದ್ಯ ಖರೀದಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಮುಂದಿನ ಮೂರು ದಿನಗಳ ಕಾಲ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಈ ಕಾರಣಕ್ಕೆ ನಾ ಮುಂದು ತಾ ಮುಂದು ಎಂಬಂತೆ ಮದ್ಯ ಖರೀದಿಗೆ ಜನ ಮುಗಿ ಬಿದ್ದಿದ್ದಾರೆ.

  • ಸ್ಯಾನಿಟೈಸರ್‌ನಿಂದ ಮದ್ಯ ತಯಾರಿ- 6 ಮಂದಿ ಅರೆಸ್ಟ್

    ಸ್ಯಾನಿಟೈಸರ್‌ನಿಂದ ಮದ್ಯ ತಯಾರಿ- 6 ಮಂದಿ ಅರೆಸ್ಟ್

    ಚೆನ್ನೈ: ಸ್ಯಾನಿಟೈಸರ್‌ನಿಂದ ಮದ್ಯ ತಯಾರಿಸುತ್ತಿದ್ದ ಗ್ಯಾಂಗ್‍ನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದು, 6 ಜನರನ್ನು ಬಂಧಿಸಿದ್ದಾರೆ.

    ತಮಿಳುನಾಡಿನ ಕಡಲೂರು ಜಿಲ್ಲೆಯ ರಾಮನಾಥನ್ ಕುಪ್ಪಮ್‍ನಲ್ಲಿ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸ್ಯಾನಿಟೈಸರ್ ನಿಂದ ಮದ್ಯ ತಯಾರಿಸುತ್ತಿದ್ದ 6 ಜನರನ್ನು ಬಂಧಿಸಿದ್ದಾರೆ. ಮದ್ಯ ತಯಾರಿಸಲು ಸ್ಯಾನಿಟೈಸರ್ ಬಳಸುತ್ತಿದ್ದರು ಎಂದು ತಪಾಸಣೆ ಬಳಿಕ ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

    ತಮಿಳುನಾಡಿನಲ್ಲಿ ಲಾಕ್‍ಡೌನ್ ಘೋಷಣೆಯಾಗಿರುವುದರಿಂದ ಸರ್ಕಾರದ ಮದ್ಯದ ಅಂಗಡಿಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು, ಮೇ 24ರ ವರೆಗೆ ತಮಿಳುನಾಡಿನಲ್ಲಿ ಸರ್ಕಾರ ಸಂಪೂರ್ಣ ಲಾಕ್‍ಡೌನ್ ವಿಧಿಸಿದೆ. ಹೀಗಾಗಿ ಮದ್ಯ ಪ್ರಿಯರು ಪರದಾಡುವಂತಾಗಿದೆ.

    ತಮಿಳುನಾಡಿನಲ್ಲಿ ಬುಧವಾರ ಒಂದೇ ದಿನ 34,875 ಕೊರೊನಾ ಕೇಸ್‍ಗಳು ಪತ್ತೆಯಾಗಿದ್ದು, ಈ ವರೆಗೆ 16,99,225 ಕೇಸ್‍ಗಳು ಪತ್ತೆಯಾಗಿವೆ. ಹೀಗಾಗಿ ತಮಿಳುನಾಡಿನಲ್ಲಿ ಸಂಪೂರ್ಣ ಲಾಕ್‍ಡೌನ್ ವಿಧಿಸಲಾಗಿದೆ.