Tag: alcohol

  • ಎಣ್ಣೆ ಸೀಜ್ ಮಾಡಿದ್ದಕ್ಕೆ ಎಸಿಪಿಯೇ ಅಮಾನತು

    ಎಣ್ಣೆ ಸೀಜ್ ಮಾಡಿದ್ದಕ್ಕೆ ಎಸಿಪಿಯೇ ಅಮಾನತು

    ಬೆಂಗಳೂರು: ಸರ್ಕಾರಿ ವಾಹನದಲ್ಲಿ ಸಾಗಿಸುತ್ತಿದ್ದ ಮದ್ಯವನ್ನು ಸೀಜ್ ಮಾಡಿದ್ದ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಎಸಿಪಿಯನ್ನೇ ಅಮಾನತು ಮಾಡಲಾಗಿದೆ.

    ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಎಸಿಪಿ ವಾಸು ಅವರನ್ನು ಅಡಿಷನಲ್ ಕಮಿಷನರ್ ಮುರುಗನ್ ಅಮಾನತುಗೊಳಿಸಿದ್ದಾರೆ. ತನ್ನ ಮಾತಿಗೆ ಬೆಲೆ ಕೊಟ್ಟಿಲ್ಲವೆಂದು ನನ್ನನ್ನು ಅಡಿಷನಲ್ ಕಮಿಷನರ್ ಮುರುಗನ್ ಸಸ್ಪೆಂಡ್ ಮಾಡಿದ್ದಾರೆ ಎಂದು ಎಸಿಪಿ ವಾಸು ಆರೋಪಿಸಿದ್ದಾರೆ.

    ಅಡಿಷನಲ್ ಕಮಿಷನರ್ ಮುರುಗನ್

    ವಿಶ್ವವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ವೈರಸ್ ತಡೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಕೊರೊನಾ ಸೋಂಕಿನಿಂದ ಜನರನ್ನು ಪಾರು ಮಾಡುವಲ್ಲಿ ವೈದ್ಯರು, ಪೊಲೀಸರು ಹೋರಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪೊಲೀಸರು ನಿಷ್ಠೆಯಿಂದ ಕಾರ್ಯ ನಿರ್ವಹಿಸಿದ್ದಕ್ಕೆ ಅವರಿಗೆ ಸಿಕ್ಕ ಬಹುಮಾನ ಅಮಾನತು ಎಂಬ ಆರೋಪ ಕೇಳಿ ಬಂದಿದೆ.

    ಏಪ್ರಿಲ್ 11ರಂದು ಜಾಗೃತಿ ದಳದ ವಾಹನದಲ್ಲಿದ್ದ 100ಕ್ಕೂ ಹೆಚ್ಚು ದುಬಾರಿ ಬೆಲೆಯ ಮದ್ಯ ಬಾಟಲಿಗಳನ್ನು ಬೆಟ್ಟದದಾಸನಪುರದ ಬಳಿ ಸೀಜ್ ಮಾಡಲಾಗಿತ್ತು. ಆ ಮದ್ಯವನ್ನು ಚಾಲಕ ಗೋಪಿ ಎಂಬವರು ಅಡಿಷನಲ್ ಕಮಿಷನರ್ ಮುರುಗನ್ ಅವರಿಗೇ ಸರಬರಾಜು ಮಾಡುತ್ತಿದ್ದರಂತೆ. ಚಾಲಕ ಗೋಪಿ ವಿರುದ್ಧ ಎಫ್‍ಐಆರ್ ದಾಖಲಾಗಿದ್ದರು. ಮುರುಗನ್ ಅವರು ಜಾಮೀನು ಕೊಟ್ಟು ಬಿಡುಗೊಡೆಗೊಳಿಸಿದ್ದಾರೆ. ನಂತರ ಕೇಸನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಪ್ರಾಮಾಣಿಕವಾಗಿ ಕೆಲಸ ಮಾಡಿದ ನನಗೆ ಸಸ್ಪೆಂಡ್ ಶಿಕ್ಷೆ ಅಂತ ಎಸಿಪಿ ವಾಸು ಆರೋಪಿಸಿದ್ದಾರೆ.

  • ಅಕ್ರಮ ಮದ್ಯ ಮಾರಾಟದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿ: ರವಿ ಡಿ. ಚೆನ್ನಣ್ಣವರ್

    ಅಕ್ರಮ ಮದ್ಯ ಮಾರಾಟದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿ: ರವಿ ಡಿ. ಚೆನ್ನಣ್ಣವರ್

    ಆನೇಕಲ್: ಅಕ್ರಮ ಮದ್ಯ ಮಾರಾಟದ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ತಿಳಿಸಿದ್ರೆ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಎಸ್.ಪಿ ರವಿ ಡಿ ಚನ್ನಣ್ಣನವರ್ ಹೇಳಿದ್ದಾರೆ.

    ಆನೇಕಲ್ ಪಟ್ಟಣದಲ್ಲಿ ಕರುಣೆಯ ಕುಟೀರ ಹಾಗೂ ವಾಚನಾಲಯವನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಅವರು, ಆನೇಕಲ್ ನ ಪೋಲಿಸರು ಹಾಗೂ ಸಾರ್ವಜನಿಕರ ಸಹಯೋಗದೊಂದಿಗೆ ಕರುಣೆಯ ಕುಟೀರ ಹಾಗೂ ವಾಚನಾಲಯ ತೆರೆಯಲಾಗಿದೆ. ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಸಹಾಯ ಮಾಡಬೇಕೆನ್ನುವವರು ಸಹಾಯಹಸ್ತ ನೀಡಬಹುದು. ಬಡವರಿಗೆ ಸಹಾಯ ಆಗುವ ನಿಟ್ಟಿನಲ್ಲಿ ಮಾಡಲಾಗಿದೆ ಎಂದು ತಿಳಿಸಿದರು.

    ಅಕ್ರಮ ಮದ್ಯ ಮಾರಾಟವಾಗುತ್ತಿರುವ ಬಗ್ಗೆ ಹಲವು ದೂರುಗಳು ಬಂದಿವೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ತಿಳಿಸಿದ್ರೆ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಈಗಾಗಲೇ ಬನ್ನೇರುಘಟ್ಟ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದರು.

    ಲಾಕ್ ಡೌನ್ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಅನಾವಶ್ಯಕವಾಗಿ ಓಡಾಡುತ್ತಿದ್ದಂತಹ 700ಕ್ಕೂ ಹೆಚ್ಚು ವಾಹನಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ಬೆಂಗಳೂರು ಜಿಲ್ಲೆಯಾದ್ಯಂತ ಲಾಕ್ ಡೌನ್ ಉಲ್ಲಂಘನೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ, ರಾಜನಕುಂಟೆ ಪೋಲಿಸ್ ಠಾಣಾ ವ್ಯಾಪ್ತಿಗಳಲ್ಲಿ 4 ಪ್ರಕರಣಗಳ ಸಂಬಂಧ ದೂರು ದಾಖಲಾಗಿದೆ ಎಂದರು.

    ಜಿಗಣಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆಯ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧನ ಮಾಡಲಾಗಿದೆ. ಕೊರೋನಾ ಹೊಗಲಾಡಿಸುವ ನಿಟ್ಟಿನಲ್ಲಿ ಪೊಲೀಸರು, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಗಲಿರುಳು ಶ್ರಮಿಸುತ್ತಿದ್ದು ಅವರನ್ನು ಎಲ್ಲರೂ ಗೌರವಿಸಬೇಕು ಎಂದರು.

  • ಪಾಸ್ ದುರ್ಬಳಕೆ ಮಾಡ್ಕೊಂಡು ವಾಹನದಲ್ಲಿ ಮದ್ಯ ಸಾಗಾಟ – ಕೈ ಕಾರ್ಯಕರ್ತರು ಅರೆಸ್ಟ್

    ಪಾಸ್ ದುರ್ಬಳಕೆ ಮಾಡ್ಕೊಂಡು ವಾಹನದಲ್ಲಿ ಮದ್ಯ ಸಾಗಾಟ – ಕೈ ಕಾರ್ಯಕರ್ತರು ಅರೆಸ್ಟ್

    ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ತುರ್ತು ಅವಶ್ಯಕ ವಸ್ತುಗಳ ಸಾಗಾಟಕ್ಕೆ ಅವಕಾಶ ನೀಡಿ ಸರ್ಕಾರ ಪಾಸ್ ಗಳನ್ನು ನೀಡಲಾಗಿದೆ. ಆದರೆ ಈ ಪಾಸ್ ಗಳನ್ನೇ ಕಾಂಗ್ರೆಸ್ ಕಾರ್ಯಕರ್ತರು ದುರ್ಬಳಕೆ ಮಾಡಿಕೊಂಡು ಮದ್ಯ ಸಾಗಾಟ ಮಾಡಿ ಸಿಕ್ಕಿಬಿದ್ದಿದ್ದಾರೆ.

    ಬಂಧಿತ ವ್ಯಕ್ತಿಗಳು ಕರ್ನಾಟಕ ಮೂಲಕ ಬಸವರಾಜ್ ಶಿಲ್ಲೆ, ತೆಲಂಗಾಣ ಮೂಲದ ಶ್ರವಣ್ ರಾವ್ ಎಂದು ಗುರುತಿಸಲಾಗಿದೆ.

    ಪಾಸ್ ಪಡೆದ ಕಾರಿನಲ್ಲಿ ಹರಿಯಾಣದಿಂದ ದೆಹಲಿಗೆ ಮದ್ಯ ಸಾಗಾಟ ಮಾಡುವಾಗ ಇಬ್ಬರು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಸಿಕ್ಕಿಬಿದ್ದಿದ್ದಾರೆ. ದೆಹಲಿ ಪೊಲೀಸರು ಈ ಇಬ್ಬರನ್ನು ಬಂಧಿಸಿ ಅಬಕಾರಿ ಕಾಯ್ದೆ ಸೆಕ್ಷನ್ 33 ಮತ್ತು 58 ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ.

    ಆರೋಪಿಗಳು ದೆಹಲಿಯಲ್ಲಿ ಯೂತ್ ಕಾಂಗ್ರೆಸ್ ಅಡಿ ಜನರಿಗೆ ತುರ್ತು ಅವಶ್ಯಕ ವಸ್ತುಗಳು ಸಾಗಾಟ ಮಾಡುವ ಕೆಲಸ ಮಾಡುತ್ತಿದ್ದರು. ಇದೇ ವಿನಾಯಿತಿ ಪಡೆದ ಕಾರಿನಲ್ಲಿ ಹರಿಯಾಣದಿಂದ 12 ಬಾಟಲ್ ಗಳನ್ನು ದೆಹಲಿಗೆ ತರುವಾಗ ಪರಿಶೀಲನೆ ವೇಳೆ ಸಿಕ್ಕಿಬಿದ್ದಿದ್ದಾರೆ.

  • ಮದ್ಯ ಸಿಗದ್ದಕ್ಕೆ ಕೋಲಾರದಲ್ಲಿ 8 ಮದ್ಯದಂಗಡಿ ಕಳವು, 6 ಕಳ್ಳಭಟ್ಟಿ ಪ್ರಕರಣ ದಾಖಲು

    ಮದ್ಯ ಸಿಗದ್ದಕ್ಕೆ ಕೋಲಾರದಲ್ಲಿ 8 ಮದ್ಯದಂಗಡಿ ಕಳವು, 6 ಕಳ್ಳಭಟ್ಟಿ ಪ್ರಕರಣ ದಾಖಲು

    ಕೋಲಾರ: ಕೋಲಾರದಲ್ಲಿ ಮದ್ಯ ಸಿಗದ ಹಿನ್ನೆಲೆಯಲ್ಲಿ ಮದ್ಯ ಪ್ರಿಯರು ಅನ್ಯ ಮಾರ್ಗಗಳನ್ನ ಕಂಡುಕೊಳ್ಳುತ್ತಿದ್ದು, ಮದ್ಯ ಕಳವು, ಕಳ್ಳಭಟ್ಟಿಯಂತಹ ಕೃತ್ಯಗಳಲ್ಲಿ ತೊಡಗಿದ್ದಾರೆ.

    ಲಾಕ್‍ಡೌನ್‍ನಿಂದಾಗಿ ಮದ್ಯದಂಗಡಿಗಳು ಬಂದ್ ಆದ ಕಾರಣ ಗಡಿ ಜಿಲ್ಲೆ ಕೋಲಾರದ ಜನರು ಕಳ್ಳಭಟ್ಟಿ, ಸೇಂದಿಗೆ ಮೊರೆ ಹೋಗುತ್ತಿದ್ದಾರೆ. ಮತ್ತೆ ಕೆಲವರು ಬಾರ್‍ಗಳಿಗೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮದ್ಯ ಕಳ್ಳತನ ಮಾಡುತ್ತಿದ್ದಾರೆ. ಆಂಧ್ರಪ್ರದೇಶ ಹಾಗೂ ತಮಿಳುನಾಡು ಗಡಿಯಲ್ಲಿ ಅಕ್ರಮ ಕಳ್ಳಬಟ್ಟಿ ಹಾಗೂ ಸೇಂಧಿ ಮಾರಾಟ, ಸಾಗಾಟ ನಿಯಂತ್ರಣಕ್ಕೆ ಬರುತ್ತಿಲ್ಲ. ದಿನೇ ದಿನೆ ಅಬಕಾರಿ ಇಲಾಖೆಗೆ ಕಳ್ಳಭಟ್ಟಿ, ಸೇಂಧಿ ಮಾರಾಟ ಜಾಲ ತಲೆ ನೋವಾಗಿ ಪರಿಣಮಿಸಿದೆ.

    ಕೋಲಾರ ಜಿಲ್ಲೆಯಲ್ಲಿ 140 ಬಾರ್‍ಗಳಿದ್ದು, ಇದುವರೆಗೂ 8 ಬಾರ್ ಗಳು ಕಳ್ಳತನವಾಗಿದೆ. ಸುಮಾರು 6 ಕಳ್ಳಭಟ್ಟಿ ಹಾಗೂ ಸೇಂಧಿ ಪ್ರಕರಣಗಳು ದಾಖಲಾಗಿವೆ ಎಂದು ಅಬಕಾರಿ ಅಧೀಕ್ಷಕಿ ಸುಮಿತಾ ತಿಳಿಸಿದ್ದಾರೆ. ಕೋಲಾರ ಅಬಕಾರಿ ಅಧೀಕ್ಷಕರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್‍ಡೌನ್ ಆದ ಬಳಿಕ ಜಿಲ್ಲೆಯಲ್ಲಿ ಮದ್ಯಕ್ಕೆ ಎಲ್ಲಿಲ್ಲದ ಬೇಡಿಕೆ ಬಂದಿದೆ. ಆದರೆ ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‍ಗಳನ್ನು ಬಂದ್ ಮಾಡಿದ ಬಳಿಕ ಕಳ್ಳತನ ಪ್ರಕರಣಗಳು ಹೆಚ್ಚಾಗಿವೆ ಎಂದರು.

    ಮದ್ಯ ಸಿಗದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಲ್ಲಿ ಇದುವರೆಗೂ 6 ಕಳ್ಳಭಟ್ಟಿ ಹಾಗೂ ಸೇಂಧಿ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಇದರಿಂದ 180 ಲೀಟರ್ ನಷ್ಟು ಬೆಲ್ಲದ ಕೊಳೆ, 3 ಲೀ. ಸೇಂಧಿ ಹಾಗೂ 35 ಲೀಟರ್ ನಷ್ಟು ಕಳ್ಳಬಟ್ಟಿಯನ್ನು ವಶಪಡಿಸಿಕೊಂಡಿದ್ದು, ಮೂರು ಜನರನ್ನು ಬಂಧಿಸಲಾಗಿದೆ. ಇದುವರೆಗೆ ಸುಮಾರು ಏಳುವರೆ ಲಕ್ಷದಷ್ಟು ಮದ್ಯ ಕಳುವಾಗಿದೆ ಎಂದು ಸ್ಪಷ್ಟಪಡಿಸಿದರು.

  • ಮದ್ಯ ಮಾರಾಟ – ಬಿಜೆಪಿ ಮುಖಂಡ ಅರೆಸ್ಟ್

    ಮದ್ಯ ಮಾರಾಟ – ಬಿಜೆಪಿ ಮುಖಂಡ ಅರೆಸ್ಟ್

    ಬಳ್ಳಾರಿ: ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡಿ, ಕದ್ದುಮುಚ್ಚಿ ಮದ್ಯ ಮಾರಾಟ ಮಾಡಿದ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿದ್ದಾರೆ.

    ಬಿಜೆಪಿ ಮುಖಂಡ ಡಿ.ರಾಘವೇಂದ್ರನನ್ನು ಅಕ್ರಮವಾಗಿ ಮದ್ಯ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಇಡೀ ದೇಶವೇ ಕೊರೊನಾ ಭೀತಿಯಿಂದ ಲಾಕ್‍ಡೌನ್ ಆಗಿದೆ. ಆದರೂ ಬಿಜೆಪಿ ಮುಖಂಡನ ಮಾಲೀಕತ್ವದ ಮದ್ಯದಂಗಡಿಯಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.

    ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಅಬಕಾರಿ ಇಲಾಖೆ ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಇರುವ ಮದ್ಯದಂಗಡಿಯ ಮೇಲೆ ದಾಳಿ ಮಾಡಿದ್ದರು. ಬಿಜೆಪಿ ಮುಖಂಡ ರಾಘವೇಂದ್ರ ಮಾಲೀಕತ್ವದ ಮದ್ಯದಂಗಡಿ ಸೇರಿದಂತೆ ಮೂರು ಬಾರ್ ಮೇಲೆ ದಾಳಿ ನಡೆಸಲಾಗಿದೆ.

    ರಾಘವೇಂದ್ರ ಸಂಡೂರಿನಲ್ಲಿರುವ ಕಾರ್ತಿಕ್ ರೆಸಿಡೆನ್ಸಿ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕನಾಗಿದ್ದು, ಈ ಹಿಂದೆಯೇ ಲಾಕ್‍ಡೌನ್ ಸಮಯದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಮದ್ಯದಂಗಡಿಯನ್ನು ಮುಚ್ಚಿದ್ದರು. ಹೀಗಾಗಿ ಕದ್ದುಮುಚ್ಚಿ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಿದ ಆರೋಪದಡಿ ಬಿಜೆಪಿ ಮುಖಂಡ ಡಿ.ರಾಘವೇಂದ್ರನನ್ನು ಬಂಧಿಸಲಾಗಿದೆ. ರಾಘವೇಂದ್ರ ಸೇರಿದಂತೆ ಮೂರು ಬಾರ್ ಮಾಲೀಕರನ್ನು ಬಂಧಿಸಲಾಗಿದೆ.

  • ಶಾಶ್ವತವಾಗಿ ಮದ್ಯಪಾನ ನಿಷೇಧಿಸಿ – ಸರ್ಕಾರಕ್ಕೆ ರೈತ ಮುಖಂಡರ ಮನವಿ

    ಶಾಶ್ವತವಾಗಿ ಮದ್ಯಪಾನ ನಿಷೇಧಿಸಿ – ಸರ್ಕಾರಕ್ಕೆ ರೈತ ಮುಖಂಡರ ಮನವಿ

    ಶಿವಮೊಗ್ಗ: ಕೊರೊನಾ ವೈರಸ್ ಭೀತಿಯಿಂದಾಗಿ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಲಾಗಿದೆ. ಲಾಕ್‍ಡೌನ್‍ನಿಂದಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿದೆ. ಆದರೆ ಈಗ ಮುಚ್ಚಿರುವ ಮದ್ಯದ ಅಂಗಡಿಗಳನ್ನು ಮತ್ತೆ ತೆರೆಯಲು ಅವಕಾಶ ಕೊಡದೆ, ಶಾಶ್ವತವಾಗಿ ಮುಚ್ಚುವಂತೆ ಶಿವಮೊಗ್ಗದಲ್ಲಿ ರೈತ ಸಂಘದ ಮುಖಂಡರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ರೈತ ಸಂಘದ ಮುಖಂಡರು ಕೊರೊನಾ ವೇಳೆ ಮದ್ಯಪಾನ ನಿಷೇಧದಿಂದಾಗಿ ಕುಡಿತಕ್ಕೆ ಒಳಗಾದವರ ಕುಟುಂಬಗಳು ನೆಮ್ಮದಿಯಿಂದ ಇವೆ. ಹೀಗಾಗಿ ಇದೇ ರೀತಿ ಮದ್ಯದ ಅಂಗಡಿಗಳನ್ನು ಶಾಶ್ವತವಾಗಿ ಬಂದ್ ಮಾಡಿದರೇ ಮದ್ಯ ವ್ಯಸನಿಗಳ ಕುಟುಂಬಸ್ಥರು ನೆಮ್ಮದಿಯಿಂದ ಇರುತ್ತಾರೆ. ಆದ್ದರಿಂದ ಸರ್ಕಾರ ಹೇಗೋ ಕಳೆದ ಒಂದು ತಿಂಗಳಿನಿಂದ ಮದ್ಯದ ಮೇಲೆ ನಿರ್ಬಂಧ ವಿಧಿಸಿದೆ. ಇದನ್ನು ಹೀಗೆ ಮುಂದುವರಿಸುವಂತೆ ರೈತ ಮುಖಂಡರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

    ಈಗಾಗಲೇ ಮದ್ಯ ಸಿಗದೆ ಮದ್ಯ ಪ್ರಿಯರು ಕಂಗಾಲಾಗಿದ್ದಾರೆ. ಈ ಮದ್ಯೆ ರೈತ ಮುಖಂಡರು ಶಾಶ್ವತವಾಗಿ ಮದ್ಯ ನಿಷೇಧಿಸಿ ಎಂದು ಮನವಿ ಸಲ್ಲಿಸಿರುವುದು ಎಣ್ಣೆ ಪ್ರಿಯರ ಕೆಂಗಣ್ಣಿಗೆ ಕಾರಣವಾಗಿದೆ.

  • 43 ಸಾವಿರ ಮೌಲ್ಯದ ಬ್ರಾಂಡೆಡ್ ಮದ್ಯ ಕಳವು

    43 ಸಾವಿರ ಮೌಲ್ಯದ ಬ್ರಾಂಡೆಡ್ ಮದ್ಯ ಕಳವು

    ಕಾರವಾರ: ಲಾಕ್‍ಡೌನ್‍ನಿಂದ ಮದ್ಯ ಮಾರಾಟ ಸಹ ಬಂದ್ ಆಗಿದೆ. ಇದರಿಂದ ಮದ್ಯ ಪ್ರಿಯರಿಗಂತೂ ನುಂಗಲಾರದ ತುತ್ತಾಗಿದೆ. ಇದರಿಂದ ಮದ್ಯಕ್ಕಾಗಿ ಪಟ್ಟಣದ ವೈನ್ ಶಾಪ್ ಒಂದಕ್ಕೆ ಕಳ್ಳರು ಕನ್ನ ಹಾಕಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

    ಕುಮಟಾ ಪಟ್ಟಣದ ಎಪಿಎಂಸಿ ಬಳಿ ಇರುವ ಅಲ್ಫಾ ವೈನ್ ಶಾಪ್‍ನಲ್ಲಿ ಕಳ್ಳತನ ಮಾಡಲಾಗಿದೆ. ವೈನ್ ಶಾಪ್‍ನ ಶಟರ್ ಒಡೆದು ಕಳ್ಳತನ ಮಾಡಲಾಗಿದೆ. ಒಟ್ಟು 43,665 ರೂಪಾಯಿ ಮೌಲ್ಯದ ವಿವಿಧ ಬ್ರಾಂಡ್ ಮದ್ಯಗಳನ್ನ ಕಳ್ಳರು ಕದ್ದು ಪರಾರಿಯಾಗಿದ್ದಾರೆ.

    ಅಂಗಡಿ ಮಾಲೀಕ ಅಂಗಡಿ ಬಳಿ ಬಂದು ನೋಡಿದಾಗ ಶಟರ್ ಮೇಲಕ್ಕೆ ಎತ್ತಿರುವುದು ಕಂಡು ಬಂದಿದ್ದು, ತಕ್ಷಣ ಈ ಸಂಬಂಧ ಕುಮಟಾ ಪೊಲೀಸರಿಗೆ ದೂರು ನೀಡಿದ್ದಾರೆ. ಮದ್ಯಕ್ಕಾಗಿ ಪರದಾಟ ನಡೆಸುತ್ತಿರುವುವರೇ ಕಳ್ಳತನ ಮಾಡಿರಬಹುದು ಎಂದು ಶಂಕಿಸಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮದ್ಯ ಬಿಟ್ಟ ಮೇಲೆ ಜೀವನ ಚೆನ್ನಾಗಿದೆ: ಶ್ರುತಿ ಹಾಸನ್

    ಮದ್ಯ ಬಿಟ್ಟ ಮೇಲೆ ಜೀವನ ಚೆನ್ನಾಗಿದೆ: ಶ್ರುತಿ ಹಾಸನ್

    ಮುಂಬೈ: ಮದ್ಯಪಾನ ಮಾಡುವುದನ್ನು ಬಿಟ್ಟ ಮೇಲೆ ಜೀವನ ತುಂಬ ಚೆನ್ನಾಗಿದೆ ಎಂದು ನಟ ಕಮಲ್ ಹಾಸನ್ ಪುತ್ರಿ ನಟಿ ಶ್ರುತಿ ಹಾಸನ್ ಹೇಳಿದ್ದಾರೆ.

    ಶ್ರುತಿ ಹಾಸನ್ ಅವರು ಭಾರತ ಚಿತ್ರರಂಗದ ಮೇರು ನಟ ಕಮಲ್ ಹಾಸನ್ ಮತ್ತು ಸಾರಿಕಾ ಅವರ ಪುತ್ರಿ. ಈ ಮುಂಚೆ ಮದ್ಯಪಾನ ಪ್ರಿಯೆ ಆಗಿದ್ದ ಶ್ರುತಿ, ತನ್ನ ಕೆಲ ವಿವಾದಗಳಿಂದ ಹೆಚ್ಚು ಟ್ರೋಲ್ ಆದವರು. ಈಗ ಶ್ರುತಿ ಅವರು ಟ್ರೋಲ್‍ಗಳನ್ನು ಹೇಗೆ ತೆಗೆದುಕೊಳ್ಳುತ್ತಾರೆ ಮತ್ತು ಮದ್ಯಪಾನದ ಬಗ್ಗೆ ಅವರ ಅಭಿಪ್ರಾಯವೇನು ಎಂಬುದನ್ನು ತಿಳಿಸಿದ್ದಾರೆ.

    ಈ ವಿಚಾರವಾಗಿ ಸಂದರ್ಶನವೊಂದರಲ್ಲಿ ಮಾತನಾಡಿರುವ ಶ್ರುತಿ ಅವರು, ಈ ಹಿಂದೆ ನಾನು ನನ್ನ ಸ್ನೇಹಿತರ ಜೊತೆ ಸೇರಿಕೊಂಡು ತುಂಬ ಮದ್ಯಪಾನ ಮಾಡುತ್ತಿದ್ದೆ. ಜೊತೆಗೆ ವೀಕೆಂಡ್ ಬಂತು ಎಂದರೆ ಶನಿವಾರ ರಾತ್ರಿ ತುಂಬ ಮದ್ಯವನ್ನು ಸೇವಿಸುತ್ತಿದೆ. ಈಗ ಜೀವನಕ್ಕೆ ಸಾಕಾಗುಷ್ಟು ಮದ್ಯಪಾನ ಮಾಡಿದ್ದೇನೆ. ಈಗ ಮತ್ತೆ ಯಾವತ್ತು ನಾನು ಮದ್ಯವನ್ನು ಮುಟ್ಟುವುದಿಲ್ಲ ಎಂದು ಹೇಳಿದ್ದಾರೆ.

    ನಾನು ಹೇಳುತ್ತಿರುವುದು ಏನೆಂದರೆ ನಾನು ಮದ್ಯವನ್ನು ಬಿಟ್ಟಿದ್ದೇನೆ. ಅದು ಮತ್ತೆ ನನ್ನ ಜೀವನದಲ್ಲಿ ಯಾವತ್ತು ಬೇಡ ಎಂದು ತೀರ್ಮಾನಿಸಿದ್ದೇನೆ. ನಾನು ಇನ್ನೂ ಮುಂದೆ ಒಂದು ಗ್ಲಾಸ್ ವೈನ್ ಅಥವಾ ಬಿಯರ್ ಅನ್ನು ಕೂಡ ಮುಟ್ಟುವುದಿಲ್ಲ. ಅದರಿಂದ ಹೊರಗೆ ಬಂದು ಜೀವನವನ್ನು ಬದಲಾಯಿಸಿಕೊಳ್ಳುವ ಪ್ರಯತ್ನವನ್ನು ನಾನು ಮಾಡುತ್ತಿದ್ದೇನೆ. ನಾನು ಕುಡಿಯುವುದನ್ನು ಬಿಟ್ಟ ಮೇಲೆ ಮದ್ಯ ನನಗೆ ಏನನೂ ಸಹಾಯ ಮಾಡಿಲ್ಲ ಎಂಬುದು ನನಗೆ ಮನವರಿಕೆಯಾಗಿದೆ ಎಂದು ಶ್ರುತಿ ತಿಳಿಸಿದ್ದಾರೆ.

    ಈ ಸಮಾಜದಲ್ಲಿ ಪುರುಷ ಮದ್ಯಪಾನ ಮಾಡಿದರೆ, ಯಾಕೆ ಮದ್ಯಪಾನ ಮಾಡುತ್ತಿದ್ದೀಯಾ ಎಂದು ಯಾರೂ ಕೂಡ ಅವನನ್ನು ಪ್ರಶ್ನೆ ಮಾಡುವುದಿಲ್ಲ. ಯಾವಾಗ ಮಹಿಳೆ ಮದ್ಯಪಾನ ಮಾಡುತ್ತಾಳೆ ಆಗ ಸಮಾಜ ಅದರ ಬಗ್ಗೆ ಮಾತನಾಡಲು ಶುರು ಮಾಡುತ್ತೆ. ಗಂಡಂದಿರ ಹೊಡೆತವನ್ನು ತಡೆದುಕೊಳ್ಳಲು ಮಹಿಳೆಯರು ದಿನಲೂ ಹಳ್ಳಿಗಳಲ್ಲಿ ಮದ್ಯಪಾನ ಮಾಡುತ್ತಾರೆ. ಇದನ್ನು ಅರ್ಥ ಮಾಡಿಕೊಳ್ಳದ ಜನರು ವಿವಾದ ಮಾಡಲು ಬಯಸಿದರೆ ಅದು ಅವರ ಇಚ್ಛೆ ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಶ್ರುತಿ ಹೇಳಿದ್ದಾರೆ.

    ಈ ಹಿಂದೆ ಇಟಲಿ ಮೂಲದ ಮೈಕಲ್ ಕೋರ್ಸೇಲ್ ಜೊತೆ ರಿಲೇಶನ್ ಶಿಪ್‍ನಲ್ಲಿ ಇದ್ದ ಶ್ರುತಿ ಇತ್ತೀಚೆಗಷ್ಟೇ ಬ್ರೇಕ್‍ಆಪ್ ಮಾಡಿಕೊಂಡಿದ್ದರು. ಕ್ರಿಸ್‍ಮಸ್, ನ್ಯೂ ಇಯರ್ ಪಾರ್ಟಿ ಎಂದು ಜೊತೆಗೆ ಇರುತ್ತಿದ್ದ ಮೈಕಲ್ ಮತ್ತು ಶ್ರುತಿ ತಮ್ಮ ಕ್ಯೂಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದರು. ಜೊತೆಗೆ ಇವರಿಬ್ಬರು ಮದುವೆಯಾಗುತ್ತಾರೆ ಎಂದು ಹೇಳಲಾಗಿತ್ತು.

  • ಕಿಂಡಿ ಕೊರೆದು, ಸಿಸಿಟಿವಿಗೆ ಪೇಪರ್ ಗ್ಲಾಸ್ ಕವರ್ ಮಾಡಿ ಮದ್ಯ ಕಳವು

    ಕಿಂಡಿ ಕೊರೆದು, ಸಿಸಿಟಿವಿಗೆ ಪೇಪರ್ ಗ್ಲಾಸ್ ಕವರ್ ಮಾಡಿ ಮದ್ಯ ಕಳವು

    – ಕುಡುಕನ ಮಾಸ್ಟರ್ ಪ್ಲಾನ್

    ಚಿಕ್ಕಬಳ್ಳಾಪುರ: ಲಾಕ್‍ಡೌನ್‍ನಿಂದ ಮದ್ಯ ಪ್ರಿಯರು ಪ್ರತಿದಿನ ಪರದಾಡುತ್ತಿದ್ದಾರೆ. ಇತ್ತ ಸರ್ಕಾರ ಮತ್ತೆ ಲಾಕ್‍ಡೌನ್ ಮುಗಿಯವರೆಗೂ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಈ ಮಧ್ಯೆ ಕಳ್ಳನೊಬ್ಬ ಮದ್ಯದಂಗಡಿಗೆ ಕಿಂಡಿ ಕೊರೆದು ಮದ್ಯ ಕಳವು ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

    ನಗರದ ಮುಖ್ಯರಸ್ತೆ ಬಿಬಿ ರಸ್ತೆಯ ಮಾಲೀಕ ರಮೇಶ್ ಎಂಬವರಿಗೆ ಸೇರಿದ ಬಾಲಾಜಿ ವೈನ್ಸ್ ಸ್ಟೋರ್ ನಲ್ಲಿ ಕಳವು ನಡೆದಿದೆ. ವೈನ್ ಶಾಪ್ ಹಿಂಭಾಗದಲ್ಲಿ ಕಿಂಡಿ ಕೊರೆದು ಕಳ್ಳ ಓಳನುಗ್ಗಿದ್ದಾನೆ. ಬಳಿಕ ಮದ್ಯದ ಬಾಟಲ್‍ಗಳನ್ನು ಕದ್ದು ಅಲ್ಲಿಂದ ಪರಾರಿಯಾಗಿದ್ದಾರೆ.

    ಅಷ್ಟೇ ಅಲ್ಲದೇ ಕಳ್ಳ ಕ್ಯಾಶ್ ಕೌಂಟರ್ ಲ್ಲಿದ್ದ ಸಿಸಿಟಿವಿಗೆ ಪೇಪರ್ ಗ್ಲಾಸ್ ಕವರ್ ಮಾಡಿ ತನ್ನ ಮುಖ ಕಾಣದಂತೆ ಎಚ್ಚರಿಕೆ ವಹಿಸಿದ್ದಾನೆ. ಇಂದು ಬೆಳಗ್ಗೆ ಸ್ಥಳೀಯರು ನೋಡಿ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ.

    ಈ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸರು ಹಾಗೂ ಅಬಕಾರಿ ಇಲಾಖಾಧಿಕಾರಿಗಳು ವೈನ್ ಶಾಪ್ ಬೀಗಮುದ್ರೆ ತೆಗೆದು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯಕ್ಕೆ ಪೊಲೀಸರು ಸ್ಟಾಕ್ ಚೆಕ್ ಮಾಡುತ್ತಿದ್ದು, ಎಷ್ಟು ಮದ್ಯ ಕಳವಾಗಿದೆ ಎಂಬುದು ಗೊತ್ತಾಗಬೇಕಿದೆ.

  • ಏಪ್ರಿಲ್ 14ರ ಬಳಿಕ ಸಿಗುತ್ತಾ ಮದ್ಯ? – 2 ದಿನದಲ್ಲಿ ಸ್ಪಷ್ಟ ನಿರ್ಧಾರ

    ಏಪ್ರಿಲ್ 14ರ ಬಳಿಕ ಸಿಗುತ್ತಾ ಮದ್ಯ? – 2 ದಿನದಲ್ಲಿ ಸ್ಪಷ್ಟ ನಿರ್ಧಾರ

    ಬೆಂಗಳೂರು: ಏಪ್ರಿಲ್ 14ರ ನಂತರ ಮದ್ಯ ಸಿಗುತ್ತಾ? ಮದ್ಯ ಪ್ರೇಮಿಗಳ ಈ ಪ್ರಶ್ನೆಗೆ ಶೀಘ್ರವೇ ಶುಭಸುದ್ದಿ ಸಿಗುವ ಲಕ್ಷಣ ಕಾಣಿಸಿದೆ.

    ಏಪ್ರಿಲ್ 30ರವರೆಗೆ ಲಾಕ್‍ಡೌನ್ ವಿಸ್ತರಿಸುವ ಸಂಬಂಧ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಯಡಿಯೂರಪ್ಪ, ಇನ್ನೆರಡು ದಿನದಲ್ಲಿ ನಿರ್ಧಾರವಾಗಲಿದೆ. ಮದ್ಯ ಮಾರಾಟದ ಬಗ್ಗೆಯೂ ಆಗಲೇ ನಿರ್ಧಾರ ಮಾಡುತ್ತೇವೆ. ಪ್ರಧಾನಿ ಮೋದಿ ಮಾರ್ಗಸೂಚಿ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

    ಬಾರ್‍ಗಳಿಗೆ ಅವಕಾಶ ನೀಡದೇ ಎಂಎಸ್‍ಐಎಲ್ ಅಂಗಡಿಗಳ ಮೂಲಕ ಮದ್ಯ ಮಾರಾಟಕ್ಕೆ ಚಿಂತನೆ ನಡೆದಿದೆ ಎನ್ನಲಾಗುತ್ತಿದೆ. ಇನ್ನು ಎರಡು ದಿನಗಳ ಈ ಬಗ್ಗೆ ಸರ್ಕಾರದಿಂದ ಸ್ಪಷ್ಟವಾದ ನಿರ್ಧಾರ ಪ್ರಕಟವಾಗಲಿದೆ.

    ರಾಜ್ಯದಲ್ಲಿ ಮದ್ಯ ಸಿಗದೇ ಹಲವು ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೇ ಖಿನ್ನತೆಗೆ ಒಳಗಾಗಿ ಮಾನಸಿಕವಾಗಿ ಕುಗುತ್ತಿದ್ದಾರೆ ಎನ್ನುವ ವಿಚಾರವನ್ನು ಮನಶಾಸ್ತ್ರಜ್ಞರು ತಿಳಿಸಿದ್ದರು.

    ಮದ್ಯ ಸಿಗದ ಕಾರಣ ದುಬಾರಿ ಬೆಲೆಗೆ ಮದ್ಯವನ್ನು ಮಾರಾಟ ಮಾಡುತ್ತಿದ್ದ ಹಲವು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಂಗಡಿಗೆ ಕನ್ನ ಹಾಕಿ ಮದ್ಯವನ್ನು ಕಳ್ಳತನ ಮಾಡಿದ್ದ ಪ್ರಕರಣಗಳು ದಾಖಲಾಗಿದ್ದವು.