ಮಂಡ್ಯ: ಹೆಣ್ಣು ಭ್ರೂಣ ಪತ್ತೆ (Foeticide) ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಡ್ಯ (Mandya) ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 12 ಜನರನ್ನು ಪೊಲೀಸರು ಜೈಲಿಗಟ್ಟಿದ್ದಾರೆ. ಪ್ರಕರಣದಲ್ಲಿ ಇನ್ನೂ ಆರೇಳು ಆರೋಪಿಗಳು ಭಾಗಿಯಾಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿ ತನಿಖೆ ಮುಂದುವರಿಸಿದ್ದರು. ಬಂಧಿತರಿಂದ 2 ಸ್ಕ್ಯಾನಿಂಗ್ ಯಂತ್ರ ಹಾಗೂ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್ ಆಲ್‌ರೌಂಡರ್ ಮೊಯಿಲ್ ಅಲಿ ಗುಡ್‌ಬೈ
ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ (Foeticide) ಪ್ರಕರಣದಲ್ಲಿ ಸಿಐಡಿ (CID) ಬಹುತೇಕ ತನಿಖೆ ಮುಗಿಸಿದೆ. ಭ್ರೂಣ ಪತ್ತೆಗೆ ಬಳಸುತ್ತಿದ್ದ ಸ್ಕ್ಯಾನಿಂಗ್ ಯಂತ್ರಗಳ ಮೂಲ ಸಿಐಡಿ ತನಿಖೆಯಲ್ಲೂ ಕೂಡ ಪತ್ತೆಯಾಗಿಲ್ಲ. ಹೀಗಾಗಿ ಸರ್ಕಾರದಿಂದ ಅನುಮತಿ ಪಡೆದು ಆರೋಗ್ಯ ಇಲಾಖೆಗೆ (Health Department) ವರದಿ ಕೊಡಲು ಸಿದ್ಧತೆ ಮಾಡಿಕೊಂಡಿದೆ.
ಸ್ಕ್ಯಾನಿಂಗ್ ಯಂತ್ರಗಳ ಮಾರಾಟ ಹಾಗೂ ಬಳಕೆ ಅಕ್ರಮವಾಗಿದ್ದು, ಆದರೆ ಭ್ರೂಣ ಪತ್ತೆಗೆ ಬಳಸುತ್ತಿದ್ದ ಯಂತ್ರಗಳು ತಂದಿದ್ದು ಎಲ್ಲಿಂದ ಎಂಬುದೇ ನಿಗೂಢವಾಗಿದೆ. ಬೈಯಪ್ಪನಹಳ್ಳಿ ಪೊಲೀಸರು ಚೆನ್ನೈ ಮೂಲದ ವೈದ್ಯ ತುಳಸಿರಾಮ್, ಮೈಸೂರಿನ ಖಾಸಗಿ ಆಸ್ಪತ್ರೆಯೊಂದರ ವೈದ್ಯ ಡಾ. ಚಂದನ್ ಬಲ್ಲಾಳ್, ಆತನ ಪತ್ನಿ ಮೀನಾ, ಮೈಸೂರಿನ ಖಾಸಗಿ ಆಸ್ಪತ್ರೆಯ ರಿಸೆಪ್ಶನಿಸ್ಟ್ ರಿಜ್ಮಾ, ಲ್ಯಾಬ್ ಟೆಕ್ನಿಶಿಯನ್ ನಿಸ್ಸಾರ್ ಎಂಬಾತನ ಬಂಧನ ಮಾಡಿದ್ದಾರೆ. ಇದನ್ನೂ ಓದಿ: ಉದ್ಯೋಗ ಕೊಡಿಸುವ ನೆಪದಲ್ಲಿ 20 ಮಹಿಳೆಯರ ಮೇಲೆ ಗ್ಯಾಂಗ್‌ರೇಪ್ – ಇಬ್ಬರ ವಿರುದ್ಧ ದೂರು ದಾಖಲು
ಆರೋಪಿಗಳು ಮಂಡ್ಯದ ಆಲೆಮನೆಯಲ್ಲಿ ಸ್ಕ್ಯಾನಿಂಗ್ ಯಂತ್ರಗಳನ್ನಿಟ್ಟು ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡಲಾಗುತ್ತಿತ್ತು. ಕೇವಲ ಮೂರೇ ತಿಂಗಳಲ್ಲಿ 245 ಭ್ರೂಣ ಹತ್ಯೆ ಮಾಡಿದ್ದು ಬೆಳಕಿಗೆ ಬಂದಿತ್ತು. ಒಂದೊಂದು ಭ್ರೂಣ ಹತ್ಯೆಗೆ ಪ್ಯಾಕೇಜ್ ರೀತಿ 60,000 ಫಿಕ್ಸ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಕರಣ ಎರಡು ತಿಂಗಳ ಹಿಂದೆ ಸಿಐಡಿಗೆ ವರ್ಗಾವಣೆ ಮಾಡಿದ್ದು, ಇದೀಗ ತನಿಖೆ ಬಹುತೇಕ ಮುಕ್ತಾಯಗೊಂಡಿದೆ. ಇದನ್ನೂ ಓದಿ: ಪ್ರೀತಿಸಲು ಒಪ್ಪದ ಬಾಲಕಿ ಕೊಂದಿದ್ದವನಿಂದ ಆತ್ಮಹತ್ಯೆ ಯತ್ನ- ಸಾಯಲು ಬಿಡಿ ಎಂದು ಡ್ರಾಮಾ
ಮಂಡ್ಯ: ಜಿಲ್ಲೆಯ ಆಲೆಮನೆಯಲ್ಲಿ (Alemane) ಭ್ರೂಣ ಪತ್ತೆ ಹಾಗೂ ಹತ್ಯೆ (Foeticide) ಪ್ರಕರಣ ಬೆಳಕಿಗೆ ಬಂದ ಬಳಿಕ ಜಿಲ್ಲೆಯ ಆರೋಗ್ಯ ಇಲಾಖೆ (Health Department) ಫುಲ್ ಅಲರ್ಟ್ ಆಗಿದೆ. ಜಿಲ್ಲೆಯಲ್ಲಿನ ಸ್ಕ್ಯಾನಿಂಗ್ ಸೆಂಟರ್‌ಗಳ (Scanning Centre) ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿ ಲೋಪವಿರುವ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಸೀಜ್ (Seize) ಮಾಡಲಾಗುತ್ತಿದೆ.
ಮಂಗಳವಾರ ಸಂಜೆ ನಾಗಮಂಗಲದ (Nagamangala) 2 ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಸಿಬ್ಬಂದಿಗಳ ಕಳ್ಳಾಟ ಬೆಳಕಿಗೆ ಬಂದಿದೆ. ಇಲ್ಲಿನ ಸಿಸ್ಟಮ್‌ನಲ್ಲಿದ್ದ ಡೇಟಾ ಡಿಲೀಟ್ ಮಾಡಿ ಅಧಿಕಾರಿಗಳನ್ನು ಕಣ್ತಪ್ಪಿಸಲು ಮಾಲೀಕರು ಪ್ರಯತ್ನ ಪಟ್ಟಿದ್ದಾರೆ. ಅಧಿಕಾರಿಗಳ ಭೇಟಿ ವೇಳೆ ಸಮರ್ಪಕ ದಾಖಲೆ ನೀಡದ ಹಿನ್ನೆಲೆ ಅಧಿಕಾರಿಗಳು ಸಿಸ್ಟಮ್ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ಅಧಿಕಾರಿಗಳಿಗೆ ಶಾಕ್ ಆಗಿದ್ದು, ಸ್ಕ್ಯಾನಿಂಗ್ ಮಾಡಿದ್ದ ಇಮೇಜ್ ಹಾಗೂ ಡೇಟಾವನ್ನೇ ಸಿಬ್ಬಂದಿಗಳು ಡಿಲೀಟ್ ಮಾಡಿರುವುದು ಕಂಡುಬಂದಿದೆ. ಇದನ್ನೂ ಓದಿ: 5 ದಿನಗಳ ಹಿಂದೆ ಬೆಂಗ್ಳೂರಿನಲ್ಲಿ ಕೊರೊನಾದಿಂದ ವ್ಯಕ್ತಿ ಸಾವು: ದಿನೇಶ್ ಗುಂಡೂರಾವ್
ಮಾಹಿತಿ ಡಿಲೀಟ್ ಮಾಡಿರುವ ಹಿನ್ನೆಲೆ ಇಲ್ಲಿನ 2 ಸ್ಕ್ಯಾನಿಂಗ್ ಸೆಂಟರ್‌ಗಳನ್ನು ಸೀಜ್ ಮಾಡಲಾಗಿದೆ. ಕಾವೇರಿ ಹಾಗೂ ಲಕ್ಷ್ಮೀ ಡಯಾಗ್ನೋಸ್ಟಿಕ್ ಸೆಂಟರ್‌ಗಳಿಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಲಕ್ಷ್ಮೀ ಡಯಾಗ್ನೋಸ್ಟಿಕ್ ಸೆಂಟರ್‌ನಲ್ಲಿ 2 ವರ್ಷದ ಮಾಹಿತಿ ಹಾಗೂ ಕಾವೇರಿ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ 3 ತಿಂಗಳ ಮಾಹಿತಿ ಡಿಲೀಟ್ ಆಗಿದೆ. ನಾಗಮಂಗಲದ ಸರ್ಕಾರಿ ಆಸ್ಪತ್ರೆ ಸಮೀಪವೇ ಈ ಸ್ಕ್ಯಾನಿಂಗ್ ಸೆಂಟರ್‌ಗಳು ಇದ್ದು, ಉಪವಿಭಾಗಾಧಿಕಾರಿ ನಂದೀಶ್ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬೆಟ್ಟಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಿ ಸೀಜ್ ಮಾಡಲಾಗಿದೆ. ಇದನ್ನೂ ಓದಿ: NIAಯಿಂದ ಬಂಧನಕ್ಕೊಳಗಾದ ವಿದ್ಯಾರ್ಥಿಗೆ ಕಾಲೇಜಲ್ಲಿರುವಾಗ್ಲೇ ಇತ್ತು ISIS ಸಂಪರ್ಕ!
ಮಂಡ್ಯ: ಇಲ್ಲಿನ ಹುಳ್ಳೇನಹಳ್ಳಿಯ ಆಲೆಮನೆಯಲ್ಲಿ ನಡೆಯುತ್ತಿದ್ದ ಭ್ರೂಣ (Foetus) ಪತ್ತೆ ಮತ್ತು ಹತ್ಯೆಯ ಕರಾಳ ದಂಧೆಯನ್ನು ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರು ಬಯಲಿಗೆ ತಂದಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಸೇರಿದಂತೆ ಹಲವು ಮಾಧ್ಯಮಗಳಲ್ಲಿ ಪ್ರಸಾರವಾಗಿರುವ ವರದಿಗಳು ವ್ಯಾಪಕ ಚರ್ಚೆಗೆ ಗ್ರಾಸವಾಗಿವೆ.
ಮಂಗಳವಾರ ಆರೋಗ್ಯ ಇಲಾಖೆಯಿಂದ ಡಿಎಚ್‍ಓ ಮೋಹನ್, ಕಂದಾಯ ಇಲಾಖೆಯಿಂದ ಎಸಿ ಶಿವಮೂರ್ತಿ ಹಾಗೂ ಪೊಲೀಸ್ ಇಲಾಖೆಯಿಂದ ಡಿವೈಎಸ್‍ಪಿ ಶಿವಮೂರ್ತಿ ಹಾಗೂ ಇತರ ಅಧಿಕಾರಿಗಳು ಆಲೆಮನೆಗೆ ಭೇಟಿ ನೀಡಿದರು. ಈ ವೇಳೆ ಪರಿಶೀಲನೆ ನಡೆಸಿ ಒಂದಷ್ಟು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಈ ತಂಡ ತೆರಳಿದ ಮೇಲೆ ಲೋಕಾಯುಕ್ತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಜೊತೆ ಹುಳ್ಳೇನಹಳ್ಳಿ ಗ್ರಾಮದಲ್ಲಿನ ಗ್ರಾಮಸ್ಥರ ಜೊತೆಯೂ ಸಹ ಒಂದಷ್ಟು ಮಾಹಿತಿಗಳನ್ನು ಕಲೆ ಹಾಕಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಆರಂಭದಿಂದ ತನಿಖೆ ನಡೆಸುತ್ತಿದ್ದು, ಸಂಕ್ಷಿಪ್ತ ವರದಿಯನ್ನು ಕಲೆ ಹಾಕ್ತಾ ಇದ್ದಾರೆ. ಇದರಲ್ಲಿ ಆರೋಗ್ಯ ಇಲಾಖೆ, ಪೊಲೀಸರು ಶಾಮಿಲಾಗಿದ್ದಾರಾ ಎಂಬುದರ ಬಗ್ಗೆಯೂ ಇನ್ವೇಷ್ಟಿಕೇಷನ್ ಸಹ ಮಾಡ್ತಾ ಇದ್ದಾರೆ. ಒಂದು ವೇಳೆ ಯಾರಾದ್ರು ಅಧಿಕಾರಿಗಳು ಹಾಗೂ ಸಿಬ್ಬಂದಿ ಶಾಮೀಲಾಗಿರುವ ಬಗ್ಗೆ ತಿಳಿದು ಬಂದ್ರೆ ಲೋಕಾಯುಕ್ತ ಅಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು ತನಿಖೆ ನಡೆಸುವ ಸಾಧ್ಯತೆ ದಟ್ಟವಾಗಿ ಕಾಣ್ತಾ ಇದೆ.
ಒಂದು ಕಡೆ ಈ ಕರಾಳ ದಂದೆಯ ತನಿಖೆ ನಡೆಯುತ್ತಿದ್ರೆ, ಇನ್ನೊಂದೆಡೆ ದಂಧೆ ನಡೆಯುವಾಗ ಸೈಲೆಂಟ್ ಆಗಿದ್ದ ಆರೋಪಿ ನವೀನ್ ಅಕ್ಕನ ಮಗ ಪ್ರಶಾಂತ್ ಆಶಾ ಕಾರ್ಯಕರ್ತೆರಿಗೆ ಬೆದರಿಸುವ ಕೆಲಸಕ್ಕೆ ಮುಂದಾಗಿದ್ದಾನೆ. ನಿನ್ನೆ ಆಶಾ ಕಾರ್ಯಕರ್ತೆಯರು ಆಲೆಮನೆ ಸಮೀಪ ಹೋಗಿ ಪ್ರಶಾಂತ್‍ಗೆ ಕರೆಮಾಡಿ ಸ್ಥಳಕ್ಕೆ ಬರುವಂತೆ ಹೇಳಿದ್ದಾರೆ. ಈ ವೇಳೆ ಪ್ರಶಾಂತ್ ಯಾರ ಪರ್ಮಿಷನ್ ತೆಗೆದುಕೊಂಡು ಆಲೆಮನೆ ಬಳಿ ಹೋಗಿದ್ದೀರಾ. ಅಲ್ಲಿ ಬೆಲೆ ಬಾಳುವ ವಸ್ತುಗಳು ಇವೆ. ನಾವು ಅಲ್ಲಿ ಸಿಸಿ ಕ್ಯಾಮೆರಾ ಹಾಕಿಸಿದ್ದೇವೆ. ನಿಮ್ಮ ನಂಬರ್ ನಿಂದ ಕರೆ ಬಂದಿದೆ, ಏನಾದ್ರು ಆದರೆ ನಿಮ್ಮ ಮೇಲೆ ಕೇಸ್ ಕೊಡ್ತೀನಿ ಎಂದು ಬೆದರಿಕೆ ಹಾಕಿದ್ದಾನೆ.
ಬೆಂಗಳೂರು: ಮಂಡ್ಯದ (Mandya) ಆಲೆಮನೆಯಲ್ಲಿ (Alemane) ಭ್ರೂಣ ಹತ್ಯೆ (Foeticide) ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರೂಣ ಪತ್ತೆ ಮಾಡಿ ಹತ್ಯೆ ಮಾಡುತ್ತಿರುವುದು ಪತ್ತೆಯಾಗಿದೆ. ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ (B.Dayanand) ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಅ.15ರಂದು ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ಆರೋಪಿಗಳು ಕಾರು ನಿಲ್ಲಸದೇ ಹೋಗಿದ್ದಾರೆ. ಅವರನ್ನು ಹಿಂಬಾಲಿಸಿ ವಿಚಾರಣೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ. ಹೆಣ್ಣು ಮಗು ಎಂದು ಗೊತ್ತಾದರೇ ಹತ್ಯೆ ಮಾಡುತ್ತಿರುವುದು ಗೊತ್ತಾಗಿದೆ. ಇಲ್ಲಿಯವರೆಗೂ 9 ಜನರನ್ನು ಬಂದಿಸಿದ್ದು, ಇಬ್ಬರು ಡಾಕ್ಟರ್‌ಗಳು, ಮೂವರು ಲ್ಯಾಬ್ ಟೆಕ್ನಿಷಿಯನ್ ಮತ್ತು ಮಧ್ಯವರ್ತಿಗಳು ಸಿಕ್ಕಿದ್ದಾರೆ. ಇವರೆಲ್ಲರೂ ಕೂಡಾ ಮೈಸೂರು (Mysuru) ಮತ್ತು ಮಂಡ್ಯ ಮೂಲದವರಾಗಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: 1 ವರ್ಷದ ಬಳಿಕ ರೇಣುಕಾಚಾರ್ಯ ಅಣ್ಣನ ಮಗ ಸಾವು ಪ್ರಕರಣ ಮುಕ್ತಾಯ; ಅಪಘಾತದಿಂದಲೇ ಸಾವು ಎಂದು ವರದಿ
ಮಂಡ್ಯದ ಆಲೆಮನೆಯಲ್ಲಿ ಭ್ರೂಣ ಹತ್ಯೆ ಮಾಡಿರುವುದು ಪತ್ತೆಯಾಗಿದ್ದು, ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ್ದಾರೆ. ಪ್ರತಿ ಭ್ರೂಣ ಹತ್ಯೆಗೆ 25ರಿಂದ 30,000 ರೂ. ಚಾರ್ಜ್ ಮಾಡುತ್ತಿದ್ದರು. ಪತ್ತೆಗೆ 25ರಿಂದ 30,000 ರೂ. ಹಾಗೂ ಹತ್ಯೆಗೆ ಮತ್ತೆ 30,000 ರೂ. ಸೇರಿದಂತೆ ಒಟ್ಟು 60,000 ರೂ. ಪ್ಯಾಕೇಜ್ ರೀತಿಯಲ್ಲಿ ದಂಧೆ ನಡೆಸುತ್ತಿದ್ದರು. ತನಿಖೆ ಮುಂದುವರಿಸಿದ್ದೇವೆ. ಇನ್ನೂ ಇಬ್ಬರು ಮಧ್ಯವರ್ತಿಗಳು ಸಿಗಬೇಕಿದೆ. ಅವರು ಸಿಕ್ಕಮೇಲೆ ಇತರೆ ಮಾಹಿತಿಗಳು ಸಿಗಬೇಕಿದೆ ಎಂದರು. ಇದನ್ನೂ ಓದಿ: ಬೆಂಗ್ಳೂರಲ್ಲಿ ಹಸುಗೂಸುಗಳ ಮಾರಾಟ ದಂಧೆ – ಬೃಹತ್ ಜಾಲ ಭೇದಿಸಿದ ಸಿಸಿಬಿ, 8 ಮಂದಿ ಅರೆಸ್ಟ್
ಮೂರು ತಿಂಗಳಲ್ಲಿ 242 ಭ್ರೂಣ ಹತ್ಯೆ ಮಾಡಿದ್ದು, ಆರೋಪಿಗಳೇ ಒಪ್ಪಿಕೊಂಡಂತೆ ಎರಡು ವರ್ಷಗಳಿಂದ ಭ್ರೂಣ ಹತ್ಯೆ ಮಾಡುತ್ತಿದ್ದಾರೆ. ಒಂದು ವರ್ಷಕ್ಕೆ ಕನಿಷ್ಠ 1,000 ಭ್ರೂಣ ಹತ್ಯೆ ಮಾಡುತ್ತಾರೆ. ಎರಡು ವರ್ಷಕ್ಕೆ 2,000 ಭ್ರೂಣ ಹತ್ಯೆ ಮಾಡಿರುವ ಶಂಕೆ ಇದೆ. ಪೊಲೀಸರ ತನಿಖೆಯಲ್ಲಿ ಮೂರು ವರ್ಷದಿಂದ ಕೃತ್ಯವೆಸಗಿರುವುದು ಗೊತ್ತಾಗಿದೆ. ಅಲ್ಲಿಗೆ 3,000 ದಷ್ಟು ಭ್ರೂಣ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಅಪ್ರಾಪ್ತ ಮಗಳ ಮೇಲೆಯೇ ರೇಪ್ ಮಾಡಲು ಪ್ರೇಮಿಗೆ ಅವಕಾಶ ಕೊಟ್ಟ ಮಹಿಳೆಗೆ 40 ವರ್ಷ ಜೈಲು ಶಿಕ್ಷೆ
ಬೆಂಕಿ ಅವಘಡದ ಮಾಹಿತಿ ಅರಿತ ಚಾಮರಾಜನಗರ ಅಗ್ನಿಶಾಮಕ ದಳದ ರಾಮಚಂದ್ರಮೂರ್ತಿ ಮತ್ತು ತಂಡ ಎರಡು ತಾಸು ಕಾರ್ಯಾಚರಣೆ ಕೈಗೊಂಡು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಕಿಡಿಗೇಡಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಆಗಿರುವ ನಷ್ಟಕ್ಕೆ ಪರಿಹಾರ ಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಘಟನೆ ಸಂಬಂಧ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Live Tv
[brid partner=56869869 player=32851 video=960834 autoplay=true]