Tag: Aligarh

  • ರಾಹುಲ್ಲನನ್ನ ಬಿಟ್ಟು ಬದುಕಲ್ಲ – ಭಾವಿ ಅಳಿಯನೊಂದಿಗೆ ಒಟ್ಟಿಗೆ ಜೀವನ ನಡೆಸಲು ಮುಂದಾದ ಮಹಿಳೆ

    ರಾಹುಲ್ಲನನ್ನ ಬಿಟ್ಟು ಬದುಕಲ್ಲ – ಭಾವಿ ಅಳಿಯನೊಂದಿಗೆ ಒಟ್ಟಿಗೆ ಜೀವನ ನಡೆಸಲು ಮುಂದಾದ ಮಹಿಳೆ

    – 12 ಗಂಟೆ ಕೌನ್ಸೆಲಿಂಗ್‌ ಬಳಿಕವೂ ನಿರ್ಧಾರದಿಂದ ಹಿಂದೆ ಸರಿಯದ ಭಾವಿ ಅತ್ತೆ

    ಲಕ್ನೋ: ಉತ್ತರ ಪ್ರದೇಶದ ಅಲಿಘರ್‌ನಲ್ಲಿ (Uttar Pradesh’s Aligarh) ಭಾವಿ ಅಳಿಯ ಮತ್ತು ಅತ್ತೆಯ ಪ್ರೇಮ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. 10 ದಿನಗಳ ಬಳಿಕ ಪೊಲೀಸರ ಎದುರು ಶರಣಾದ ಸಪ್ನಾ ದೇವಿ ಮತ್ತು ಭಾವಿ ಅಳಿಯ ರಾಹುಲ್‌ ಈಗ ಒಟ್ಟಿಗೆ ಜೀವನ ಕಳೆಯಲು ನಿರ್ಧರಿಸಿದ್ದಾರೆ.

    ತನ್ನ ಮಗಳಿಗೆ ನಿಶ್ಚಯವಾಗಿದ್ದ ಭಾವಿ ಅಳಿಯನೊಂದಿಗೆ ಮನೆಯಲ್ಲಿದ್ದ 3.5 ಲಕ್ಷ ರೂ.ಗೂ ಹೆಚ್ಚು ನಗದು ಮತ್ತು 5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಸಹ ತೆಗೆದುಕೊಂಡು ಪರಾರಿಯಾಗಿದ್ದಳು. ಇದೀಗ ಪೊಲೀಸರಿಗೆ ಶರಣಾಗಿದ್ದು, ತಾನು ಓಡಿಹೋಗಲು ಕಾರಣ ಏನೆಂಬುದನ್ನ ತಿಳಿಸಿದ್ದಾಳೆ.

    UP Women 2

    12 ಗಂಟೆಗಳ ಕಾಲ ಕೌನ್ಸೆಲಿಂಗ್‌:
    ರಾಹುಲ್‌ ಮತ್ತು ಸಪ್ನಾ ದೇವಿ ಪೊಲೀಸರಿಗೆ ಶರಣಾದಾಗ ಸಪ್ನಾ ತನ್ನ ಕುಟುಂಬಸ್ಥರಿಂದ ಅನುಭವಿಸುತ್ತಿದ್ದ ತೊಂದರೆಗಳನ್ನು ಹೇಳಿಕೊಂಡಿದ್ದಳು. ಪತಿ ನಿತ್ಯ ಥಳಿಸುತ್ತಿದ್ದ, ಮಗಳೂ ಸಹ ಜಗಳ ಆಡುತ್ತಿದ್ದಳು, ಇದರಿಂದ ನನ್ನ ಮಾನಸಿಕ ನೆಮ್ಮದಿ ಹಾಳಾಗಿತ್ತು ಎಂದು ಹೇಳಿದ್ದಳು. ಅಲ್ಲದೇ ರಾಹುಲ್‌ ಸಹ ನಾನು ಇಲ್ಲದೇ ಇದ್ದಿದ್ದರೇ ಅವಳು ಬದುಕುತ್ತಿರಲಿಲ್ಲ ಎಂದು ಹೇಳಿದ್ದ. ಇದಾದ ಬಳಿಕ ಪೊಲೀಸರು ಸಪ್ನಾ ಮತ್ತು ಪತಿಗೆ 12 ಗಂಟೆಗಳ ಕಾಲ ಕೌನ್ಸೆಲಿಂಗ್‌ ನಡೆಸಿದರು. ಸಪ್ನಾಳ ಪತಿ ಮತ್ತು ಆತನ ಕುಟುಂಬಸ್ಥರೊಂದಿಗೆ ಮಾತನಾಡಿಸಿ, ಮನವೊಲಿಸುವ ಪ್ರಯತ್ನ ಮಾಡಿದರು. ಆದ್ರೆ ಸಪ್ನಾ ಮಾತ್ರ ರಾಹುಲ್‌ ಜೊತೆಗೇ ಜೀವನ ಕಳೆಯುವ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಕೊನೆಗೆ ಪೊಲೀಸರು ಸಪ್ನಾಳನ್ನ ರಾಹುಲ್‌ ಜೊತೆಗೆ ಕಳುಹಿಸಿದ್ರು ಎಂದು ವರದಿಗಳು ತಿಳಿಸಿವೆ. ಆದ್ರೆ ಸಪ್ನಾ ದೇವಿ ಪತಿ, ಅವಳು ದೋಚಿರುವ ಎಲ್ಲಾ ಹಣ ಮತ್ತು ಚಿನ್ನಾಭರಣ ಹಿಂದಿರುಗಿಸುವವರೆಗೆ ಇಬ್ಬರನ್ನೂ ಬಿಡಲ್ಲ ಎಂದು ಹೇಳಿದ್ದಾನೆ.

    UP Women

    ಏನಿದು ಪ್ರಕರಣ?
    ಸಪ್ನಾಳ ಮಗಳು ಅನಿತಾಳಿಗೆ ಯುವಕನೊಂದಿಗೆ ವಿವಾಹ ನಿಶ್ಚಯವಾಗಿತ್ತು. 10 ದಿನಗಳಲ್ಲಿ ಮದುವೆ ನಡೆಯಬೇಕಿತ್ತು. ಆಮಂತ್ರಣ ಪತ್ರಿಕೆಗಳನ್ನು ಸಹ ಮುದ್ರಿಸಿ, ಸಂಬಂಧಿಕರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ತನ್ನ ಮಗಳನ್ನು ಮದುವೆಯಾಗಬೇಕಿದ್ದ ಯುವಕನೊಂದಿಗೆ ಸಪ್ನಾ ಓಡಿ ಹೋಗಿದ್ದಳು. ಇದು ಇಡೀ ಕುಟುಂಬವನ್ನು ದಿಗ್ಭ್ರಮೆಗೊಳಿಸಿತ್ತು.

    uttar pradesh man

    ನಾನು ಏಪ್ರಿಲ್ 16 ರಂದು ರಾಹುಲ್ ಜೊತೆ ಮದುವೆಯಾಗಬೇಕಿತ್ತು. ಆದರೆ ನನ್ನ ತಾಯಿ ಭಾನುವಾರ ಅವನೊಂದಿಗೆ ಓಡಿಹೋದರು. ರಾಹುಲ್ ಮತ್ತು ನನ್ನ ತಾಯಿ ಕಳೆದ ಮೂರು ನಾಲ್ಕು ತಿಂಗಳಿನಿಂದ ಫೋನ್‌ನಲ್ಲಿ ಸಾಕಷ್ಟು ಮಾತನಾಡುತ್ತಿದ್ದರು. ನಮ್ಮ ಅಲ್ಮಾರಾದಲ್ಲಿ 3.5 ಲಕ್ಷ ರೂ. ನಗದು ಮತ್ತು 5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳಿದ್ದವು. ಅವನು ಕೇಳಿದ್ದನ್ನೆಲ್ಲಾ ಅವಳು ಮಾಡಿದ್ದಾಳೆ. ನನ್ನ ತಾಯಿ ನಮ್ಮ ಎಲ್ಲಾ ಹಣವನ್ನು ತೆಗೆದುಕೊಂಡು ಓಡಿ ಹೋಗಿದ್ದಾಳೆಂದು ವಧು ಅನಿತಾ ನೊಂದು ನುಡಿದಿದ್ದಳು.

    ಸಪ್ನಾಳ ಪತಿ ಕುಮಾರ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ಸಪ್ನಾ ಮತ್ತು ರಾಹುಲ್ ಪತ್ತೆಗೆ ಬಲೆಬೀಸಿದ್ದರು.

  • ಓಟದ ಅಭ್ಯಾಸ ಮಾಡುತ್ತಿರುವಾಗ 14ರ ಬಾಲಕ ಹೃದಯಾಘಾತದಿಂದ ಸಾವು

    ಓಟದ ಅಭ್ಯಾಸ ಮಾಡುತ್ತಿರುವಾಗ 14ರ ಬಾಲಕ ಹೃದಯಾಘಾತದಿಂದ ಸಾವು

    ಲಕ್ನೋ: ಓಟದ ಅಭ್ಯಾಸ ಮಾಡುತ್ತಿರುವಾಗ 14ರ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಅಲಿಗಢ (Aligarh) ಜಿಲ್ಲೆಯ ಸಿರೌಲಿ ಗ್ರಾಮದಲ್ಲಿ ನಡೆದಿದೆ.

    ಮೃತ ಬಾಲಕನನ್ನು 14 ವರ್ಷದ ಮೋಹಿತ್ ಚೌಧರಿ ಎಂದು ಗುರುತಿಸಲಾಗಿದ್ದು, ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಕ್ರೀಡಾ ಸ್ಪರ್ಧೆಗಾಗಿ ಓಟದ ಅಭ್ಯಾಸ ಮಾಡುತ್ತಿರುವಾಗ ಈ ಅವಘಡ ಸಂಭವಿಸಿದೆ.ಇದನ್ನೂ ಓದಿ: Telangana| 7 ಮಂದಿ ಮಾವೋವಾದಿಗಳನ್ನು ಹೊಡೆದುರುಳಿಸಿದ ಪೊಲೀಸರು

    ಅಧಿಕಾರಿಗಳ ಮಾಹಿತಿ ಪ್ರಕಾರ, ಡಿ.07 ರಂದು ಶಾಲೆಯಲ್ಲಿ ಕ್ರೀಡಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಹಿನ್ನೆಲೆ ಬಾಲಕ ತನ್ನ ಶಾಲಾ ಮೈದಾನದಲ್ಲಿ ಓಟದ ಅಭ್ಯಾಸ ಮಾಡುತ್ತಿದ್ದ. ಆರಂಭದಲ್ಲಿ ತನ್ನ ಸ್ನೇಹಿತರೊಂದಿಗೆ ಎರಡು ಸುತ್ತು ಓಡಿದ. ಹಾಗೆಯೇ ಮೂರನೇ ಸುತ್ತನ್ನು ಓಡುವಾಗ ನೆಲಕ್ಕೆ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನ ಸ್ನೇಹಿತರು ಅವರ ಪೋಷಕರಿಗೆ ಕರೆ ಮಾಡಿ, ಮಾಹಿತಿ ನೀಡಿದ್ದಾರೆ. ಕೂಡಲೇ ಆತನನ್ನು ಆಸ್ಪತ್ರೆಗೆ ರವಾನಿಸಿದ್ದು, ವೈದ್ಯರು ಅವನು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

    ಪೊಲೀಸರ ಮಾಹಿತಿ ಪ್ರಕಾರ, ಕಳೆದ 25 ದಿನಗಳಲ್ಲಿ ಅಲಿಗಢದಲ್ಲಿ ಕನಿಷ್ಠ ಮೂರು ಜನ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಅಲಿಘರ್‌ನ ಅರ್ರಾನಾ ಗ್ರಾಮದಲ್ಲಿ 20 ವರ್ಷದ ಮಮತಾ ಎಂಬುವವರು ಓಡುತ್ತಿರುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದರು.

    ಲೋಧಿ ನಗರದಲ್ಲಿ 8 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇನ್ನೂ ವೈದ್ಯರೊಬ್ಬರು ಆಫೀಸ್‌ಗೆ ಹೊರಡಲು ಸಿದ್ಧರಾಗುತ್ತಿರುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನ.20 ರಂದು, ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಎಸ್‌ಎಂ ಅಫ್ಜಲ್ ಅವರ ಪುತ್ರ ಸೈಯದ್ ಬರ್ಕತ್ ಹೈದರ್ ಹೃದಯಾಘಾತದಿಂದ ನಿಧನರಾದರು.

    ಸೆಪ್ಟೆಂಬರ್‌ನಲ್ಲಿ ಉತ್ತರ ಪ್ರದೇಶದ ಲಕ್ನೋದಲ್ಲಿ (Lucknow) 9 ವರ್ಷದ ವಿದ್ಯಾರ್ಥಿನಿ ಶಾಲೆಯಲ್ಲಿ ಆಟವಾಡುತ್ತಿದ್ದಾಗ ಕುಸಿದು ಬಿದ್ದಳು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ಆಕೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು.ಇದನ್ನೂ ಓದಿ: ಒಂದು ಕ್ಷಣವೂ ಯೋಚಿಸದೇ ದಾಖಲೆ, ವೀಡಿಯೋ ರಿಲೀಸ್‌ ಮಾಡ್ಲಿ – ಯತ್ನಾಳ್‌ಗೆ ವಿಜಯೇಂದ್ರ ಸವಾಲ್‌

  • Uttar Pradesh| ಟ್ರಕ್‌ಗೆ ಹಿಂಬದಿಯಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ – ಐವರು ಸಾವು, 15 ಮಂದಿಗೆ ಗಾಯ

    Uttar Pradesh| ಟ್ರಕ್‌ಗೆ ಹಿಂಬದಿಯಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ – ಐವರು ಸಾವು, 15 ಮಂದಿಗೆ ಗಾಯ

    ಲಕ್ನೋ: ಟ್ರಕ್‌ಗೆ (Truck) ಹಿಂಬದಿಯಿಂದ ಡಬಲ್ ಡೆಕ್ಕರ್ ಬಸ್ (Double Decker Bus) ಡಿಕ್ಕಿ ಹೊಡೆದ ಪರಿಣಾಮ 5 ತಿಂಗಳ ಮಗು ಸೇರಿ ಐವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಅಲಿಘರ್‌ನ (Aligarh) ಯಮುನಾ ಎಕ್ಸ್‌ಪ್ರೆಸ್‌ ವೇಯಲ್ಲಿ (Yamuna Expressway) ನಡೆದಿದೆ.

    ದೆಹಲಿಯಿಂದ ಅಜಂಗಢಕ್ಕೆ ತೆರಳುತ್ತಿದ್ದ ಬಸ್ ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಗುದ್ದಿದ ರಭಸಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹ ಹಾಗೂ ಪ್ರಯಾಣಿಕರು ಬಸ್ ಒಳಗೆ ಸಿಲುಕಿಕೊಂಡಿದ್ದಾರೆ. ಅಪಘಾತದಲ್ಲಿ 11 ತಿಂಗಳ ಹೆಣ್ಣು ಮಗು, ಐದು ವರ್ಷದ ಮಗು, ಮೂವರು ಮಹಿಳೆಯರು ಮತ್ತು ಒಂಬತ್ತು ಪುರುಷರು ಸೇರಿದಂತೆ 15 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: PUBLiC TV Impact| ಸರ್ಕಾರಕ್ಕೆ ರೇಷನ್ ಕಾರ್ಡ್ ಪರಿಷ್ಕರಣೆ ವರದಿ ಸಲ್ಲಿಕೆ: ರದ್ದಿಗೆ ಮಾನದಂಡ ಏನು?

    ಸ್ಥಳೀಯರು ಬಸ್ಸಿನ ಗಾಜುಗಳನ್ನು ಒಡೆದು ಗಾಯಾಳುಗಳನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜೇವರ್‌ನ ಕೈಲಾಶ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕಳುಹಿಸಲಾಗಿದೆ. ಮೃತರ ಪೈಕಿ ಮೂರು ಶವಗಳ ಗುರುತು ಪತ್ತೆ ಹಚ್ಚಿದ್ದು, ಇಬ್ಬರ ಗುರುತು ಪತ್ತೆಯಾಗಿಲ್ಲ. ಇದನ್ನೂ ಓದಿ: 6 ತಿಂಗಳಿನಿಂದ ಸಿಕ್ಕಿಲ್ಲ ವೇತನ – ಹಲವು ಇಂದಿರಾ ಕ್ಯಾಂಟೀನ್‌ಗಳಿಗೆ ಬಿತ್ತು ಬೀಗ!

    ಬಸ್ ಫೈಜಾಬಾದ್ ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದೆ. ತಪ್ಪಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಮತ್ತೆ ಕೋಟ್ಯಧೀಶನಾದ ಮಲೆ ಮಾದಪ್ಪ – 2.43 ಕೋಟಿ ರೂ. ಕಾಣಿಕೆ ಹಣ ಸಂಗ್ರಹ

  • ಐಸಿಸ್‌ ಪರ ಕೆಲಸ – ಅಲಿಗಢ ಮುಸ್ಲಿಂ ವಿವಿಯ 6 ವಿದ್ಯಾರ್ಥಿಗಳು ಅರೆಸ್ಟ್‌

    ಐಸಿಸ್‌ ಪರ ಕೆಲಸ – ಅಲಿಗಢ ಮುಸ್ಲಿಂ ವಿವಿಯ 6 ವಿದ್ಯಾರ್ಥಿಗಳು ಅರೆಸ್ಟ್‌

    ಲಕ್ನೋ: ಐಸಿಸ್‌ (ISIS) ಪರವಾಗಿ ಕೆಲಸ ಮಾಡುತ್ತಿದ್ದ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ (Aligarh Muslim University) ಆರು ವಿದ್ಯಾರ್ಥಿಗಳನ್ನು ಉತ್ತರ ಪ್ರದೇಶದ (Uttar Pradesh) ಭಯೋತ್ಪಾದನಾ ನಿಗ್ರಹ ದಳದ (ATS) ಪೊಲೀಸರು ಬಂಧಿಸಿದ್ದಾರೆ.

    ಆರು ವ್ಯಕ್ತಿಗಳನ್ನು ಬಂಧಿಸುವುದರೊಂದಿಗೆ ಅಲಿಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಭಯೋತ್ಪಾದಕ ಜಾಲವು ಬೆಳಕಿಗೆ ಬಂದಿದೆ. ಆರು ಮಂದಿಯಲ್ಲಿ ನಾಲ್ವರನ್ನು ರಕೀಬ್ ಇನಾಮ್, ನಾವೇದ್ ಸಿದ್ದಿಕಿ, ಮೊಹಮ್ಮದ್ ನೋಮನ್ ಮತ್ತು ಮೊಹಮ್ಮದ್ ನಾಜಿಮ್ ಎಂದು ಗುರುತಿಸಲಾಗಿದೆ.  ಇದನ್ನೂ ಓದಿ: ಗಣಪತಿ, ಹಿಂದೂ ಧರ್ಮದ ಬಗ್ಗೆ ಅವಹೇಳನ: ಸಾಣೇಹಳ್ಳಿ ಶ್ರೀ ವಿರುದ್ಧ ಸಂಬರಗಿ ದೂರು

     

    ಎಲ್ಲಾ ಬಂಧಿತ ಆರೋಪಿಗಳು ಅಲಿಗಢ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘಟನೆಯೊಂದಿಗೆ (Student Union) ಸಂಬಂಧ ಹೊಂದಿದ್ದರು. ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳದ ಪ್ರಕಾರ ಬಂಧಿತ ಆರೋಪಿಗಳು ದೇಶದಲ್ಲಿ ದೊಡ್ಡ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದರು. ವಿದ್ಯಾರ್ಥಿ ಸಂಘದ ಸಭೆಗಳು ಐಸಿಸ್‌ನ ಹೊಸ ನೇಮಕಾತಿ ಸೆಲ್ ಆಗಿ ಮಾರ್ಪಟ್ಟಿವೆ ಎಂದು ಹೇಳಿಕೊಂಡಿದೆ.

    ಮೂಲಗಳ ಪ್ರಕಾರ, ಅಲಿಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಈಗ ಕೇಂದ್ರೀಯ ತನಿಖಾ ಸಂಸ್ಥೆಗಳ ನಿಗಾದಲ್ಲಿದ್ದಾರೆ. ಇದನ್ನೂ ಓದಿ: ಅಲಿಗಢ ನಗರದ ಹೆಸರು ಹರಿಗಢವಾಗಿ ಬದಲಾಗುತ್ತಾ?

     

    ಪುಣೆ ಇಸ್ಲಾಮಿಕ್ ಸ್ಟೇಟ್ ಮಾಡ್ಯೂಲ್ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿರುವ ರಿಜ್ವಾನ್ ಮತ್ತು ಶಹನವಾಜ್ ಅವರ ವಿಚಾರಣೆಯ ವೇಳೆ, ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಹಲವು ವಿದ್ಯಾರ್ಥಿಗಳು ದೇಶವಿರೋಧಿ ಅಜೆಂಡಾವನ್ನು ಹರಡಲು ತೊಡಗಿರುವ ವಿಚಾರ ತಿಳಿದುಬಂದಿತ್ತು. ಇಬ್ಬರ ವಿಚಾರಣೆಯ ನಂತರ ಉತ್ತರ ಪ್ರದೇಶ ಎಟಿಎಸ್‌ ಆರು ವಿದ್ಯಾರ್ಥಿಗಳನ್ನು ಬಂಧಿಸಿದೆ.

  • ಅಲಿಗಢ ನಗರದ ಹೆಸರು ಹರಿಗಢವಾಗಿ ಬದಲಾಗುತ್ತಾ?

    ಅಲಿಗಢ ನಗರದ ಹೆಸರು ಹರಿಗಢವಾಗಿ ಬದಲಾಗುತ್ತಾ?

    ಲಕ್ನೋ: ಉತ್ತರ ಪ್ರದೇಶದ ಅಲಿಗಢ (Aligarh) ನಗರದ ಹೆಸರು ಹರಿಗಢ(Harigarh) ಎಂದು ಬದಲಾಗುತ್ತಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ.

    ಅಲಿಗಢ ಮಹಾನಗರ ಪಾಲಿಕೆ (Aligarh Municipal Corporation) ಕೈಗೊಂಡ ನಿರ್ಧಾರದಿಂದ ಈ ಪ್ರಶ್ನೆ ಈಗ ಎದ್ದಿದೆ. ಅಲಿಗಢ ಹೆಸರಿನ ಬದಲು ಹರಿಗಢ ಹೆಸರನ್ನು ನಾಮಕರಣ ಮಾಡಲು ಪಾಲಿಕೆ ನಿರ್ಣಯವನ್ನು ಪಾಸ್‌ ಮಾಡಿದೆ. ಮೊಬೈಲಿನಲ್ಲೇ ಲೇಟೆಸ್ಟ್‌ ಸುದ್ದಿ ಓದಲು ಪಬ್ಲಿಕ್‌ ಟಿವಿ ವಾಟ್ಸಪ್‌ ಚಾನೆಲಿಗೆ ಸೇರ್ಪಡೆಯಾಗಿಪಬ್ಲಿಕ್‌ ಟಿವಿ ವಾಟ್ಸಪ್‌ ಚಾನೆಲ್‌

    ಬಿಜೆಪಿಯ (BJP) ಪಾಲಿಕೆ ಸದಸ್ಯ ಸಂಜಯ್‌ ಪಂಡಿತ್‌ ಮಂಡಿಸಿದ ಪ್ರಸ್ತಾಪವನ್ನು ಪಾಲಿಕೆ ಒಪ್ಪಿಗೆ ಸೂಚಿಸಿದೆ.  ಇದನ್ನೂ ಓದಿ: ಇಸ್ರೇಲ್‌ ದಾಳಿ ನಿಲ್ಲಿಸಲು ನಿಮ್ಮ ಸಾಮರ್ಥ್ಯ ಬಳಸಿ: ಮೋದಿಗೆ ಕರೆ ಮಾಡಿ ಇರಾನ್‌ ಅಧ್ಯಕ್ಷ ಮನವಿ

    ಪಾಲಿಕೆಯಲ್ಲಿ ನಿರ್ಧಾರ ಕೈಗೊಂಡ ಮಾತ್ರಕ್ಕೆ ಹೆಸರು ಬದಲಾಗುವುದಿಲ್ಲ. ಇದು ಮೊದಲ ಹೆಜ್ಜೆಯಾಗಿದ್ದು ರಾಜ್ಯ ಸರ್ಕಾರ ಹೆಸರು ಬದಲಾವಣೆಗೆ ಒಪ್ಪಿಗೆ ನೀಡಿದ ಬಳಿಕವಷ್ಟೇ ಹೆಸರು ಅಧಿಕೃತವಾಗಿ ಬದಲಾಗಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಮೇಯರ್‌ ಪ್ರಶಾಂತ್‌ ಸಿಂಘಾಲ್‌, ನಿನ್ನೆ ಸಂಜಯ್‌ ಪಂಡಿತ್‌ ಮಂಡಿಸಿದ ಪ್ರಸ್ತಾಪದ ಬಗ್ಗೆ ಸಭೆ ನಡೆಯಿತು. ಈ ಪ್ರಸ್ತಾಪಕ್ಕೆ ಎಲ್ಲಾ ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಈ ನಿರ್ಣಯವನ್ನು ನಾವು ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡುತ್ತೇವೆ. ಸರ್ಕಾರ ನಮ್ಮ ಮನವಿಯನ್ನು ಪುರಸ್ಕರಿಸಿ ಹರಿಗಢ ಹೆಸರನ್ನು ಇಡಲು ಒಪ್ಪಿಗೆ ಸೂಚಿಸಬಹುದು ಎಂಬ ನಂಬಿಕೆಯಿದೆ ಎಂದು ತಿಳಿಸಿದರು.

  • ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ತಾರಿಕ್ ಮನ್ಸೂರ್‌ಗೆ ಬಿಜೆಪಿ ಉಪಾಧ್ಯಕ್ಷ ಪಟ್ಟ

    ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ತಾರಿಕ್ ಮನ್ಸೂರ್‌ಗೆ ಬಿಜೆಪಿ ಉಪಾಧ್ಯಕ್ಷ ಪಟ್ಟ

    ನವದೆಹಲಿ: ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (Aligarh Muslim University) ಮಾಜಿ ಉಪಕುಲಪತಿ ತಾರಿಕ್ ಮನ್ಸೂರ್ (Tariq Mansoor) ಅವರಿಗೆ ಬಿಜೆಪಿ ಉಪಾಧ್ಯಕ್ಷ (BJP Vice-President) ಪಟ್ಟ ನೀಡಿದೆ.

    ಉತ್ತರ ಪ್ರದೇಶದ (Uttar Pradesh) ಪಸ್ಮಾಂಡ ಮುಸ್ಲಿಂ ಸಮುದಾಯದ ತಾರಿಕ್ ಮನ್ಸೂರ್ ಜೆಎನ್‌ ಮೆಡಿಕಲ್‌ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದ್ದಾರೆ. 1982ರಲ್ಲಿ  ಅದೇ ಕಾಲೇಜಿನಲ್ಲೇ ಎಂಎಸ್‌ ಓದಿದ್ದರು. ಉತ್ತರ ಪ್ರದೇಶ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯರಾಗಿರುವ ಮನ್ಸೂರ್‌ ಈ ವರ್ಷ ಉಪಕುಲಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು.

    2017ರ ಮೇ 17 ರಂದು ಉಪ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರ ಅಧಿಕಾರ ಅವಧಿ ಮೇ 2022ಕ್ಕೆ ಕೊನೆಯಾಗಬೇಕಿತ್ತು. ಆದರೆ ಕೋವಿಡ್‌ ಇತ್ಯಾದಿ ಕಾರಣಗಳಿಂದಾಗಿ ಕೇಂದ್ರ ಸರ್ಕಾರ ಇವರ ಅಧಿಕಾರ ಅವಧಿಯನ್ನು 1 ವರ್ಷ ವಿಸ್ತರಿಸಿತ್ತು.   ಇದನ್ನೂ ಓದಿ: ರಾಹುಲ್ ಗಾಂಧಿ ಮದುವೆ ಯಾವಾಗ? – ಸೋನಿಯಾ ಗಾಂಧಿ ಹೇಳಿದ್ದೇನು?

    ಉತ್ತರ ಪ್ರದೇಶದ ಮತದಾರರ ಪೈಕಿ ಸರಿಸುಮಾರು 19% ರಷ್ಟು ಮುಸ್ಲಿಂ ಮತದಾರರಿದ್ದಾರೆ. ಕನಿಷ್ಠ 30 ಲೋಕಸಭಾ ಸ್ಥಾನಗಳಲ್ಲಿ ಗಣನೀಯ ಅಸ್ತಿತ್ವವನ್ನು ಹೊಂದಿರುವ ಮುಸ್ಲಿಮರು ಈ ಪೈಕಿ 15 ರಿಂದ 20 ಕ್ಷೇತ್ರಗಳಲ್ಲಿ ಫಲಿತಾಂಶವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.

    ಎಎಂಯು ಉಪ ಕುಲಪತಿಯಾಗುವ ಮೊದಲು ತಾರಿಕ್ ಮನ್ಸೂರ್ ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದರು. ಎಎಂಯುನಲ್ಲಿ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾಗಿದ್ದ ಅವರು ಸುಮಾರು ನಾಲ್ಕು ದಶಕಗಳ ಬೋಧನೆ, ಸಂಶೋಧನೆ, ಕ್ಲಿನಿಕಲ್ ಮತ್ತು ಆಡಳಿತಾತ್ಮಕ ಅನುಭವ ಹೊಂದಿದ್ದಾರೆ.

    ಮನ್ಸೂರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು 2023ರ ಪದ್ಮ ಪ್ರಶಸ್ತಿ ಸಮಿತಿಯ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದರು.  ಭಾರತೀಯ ವೈದ್ಯಕೀಯ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಇವರು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಲಕ್ನೋ), ಮೌಲಾನಾ ಆಜಾದ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ (ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಭಾರತ ಸರ್ಕಾರ) ಮತ್ತು ಶಿಕ್ಷಣ ಸಚಿವಾಲಯದ ಅಲ್ಪಸಂಖ್ಯಾತರ ಶಿಕ್ಷಣದ ರಾಷ್ಟ್ರೀಯ ಮೇಲ್ವಿಚಾರಣಾ ಸಮಿತಿಯಲ್ಲಿಯೂ ಸೇವೆ ಸಲ್ಲಿಸಿದ್ದಾರೆ.

    ಉತ್ತರ ಅಮೆರಿಕ ಯುರೋಪ್, ಪಶ್ಚಿಮ ಏಷ್ಯಾ, ಆಗ್ನೇಯ ಏಷ್ಯಾ ಮತ್ತು ಆಫ್ರಿಕಾದ ಪ್ರಮುಖ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳಿಗೆ ತಾರಿಕ್ ಮನ್ಸೂರ್ ಭೇಟಿ ನೀಡಿದ್ದಾರೆ.

     

    ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಮುಖ್ಯಸ್ಥ ಜಮಾಲ್ ಸಿದ್ದಿಕಿ ಪ್ರತಿಕ್ರಿಯಿಸಿ, ಮನ್ಸೂರ್ ಅವರು ರಾಷ್ಟ್ರೀಯ ಮುಸ್ಲಿಂ ಆಗಿದ್ದು, ಅವರು ಯಾವಾಗಲೂ “ದೇಶ ಮೊದಲು” ಎಂಬ ಆದರ್ಶವನ್ನು ಪ್ರಚಾರ ಮಾಡುತ್ತಿದ್ದಾರೆ. ಅವರು ಎಎಂಯು ವಿದ್ಯಾರ್ಥಿಗಳನ್ನು ಸರಿಯಾದ ಮಾರ್ಗದಲ್ಲಿ ಮುನ್ನಡೆಸಿದ್ದಾರೆ ಎಂದಿದ್ದಾರೆ.

    ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ರಕ್ಷಣಾ ಸಚಿವ ಎಕೆ ಆಂಟನಿ (AK Antony) ಅವರ ಪುತ್ರ ಅನಿಲ್ ಆಂಟನಿ (Anil Antony) ಅವರಿಗೂ ಬಿಜೆಪಿ ಉಪಾಧ್ಯಕ್ಷ ಸ್ಥಾನ ನೀಡಿದೆ. ಕೇರಳದ ಕಾಂಗ್ರೆಸ್ (Kerala Congress) ನಾಯಕರಾಗಿದ್ದ ಅನಿಲ್ ಆಂಟನಿ ಅವರು 2002ರ ಗುಜರಾತ್ ಗಲಭೆಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯ (Narendra Modi) ಕುರಿತು ಬಿಬಿಸಿಯ ಸಾಕ್ಷ್ಯಚಿತ್ರದ (BBC Documentary) ವಿವಾದದ ನಂತರ ಜನವರಿಯಲ್ಲಿ ಪಕ್ಷವನ್ನು ತೊರೆದಿದ್ದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಳೆಯಿಂದ ರಸ್ತೆಯೆಲ್ಲಾ ಜಲಾವೃತ – ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಪೊಲೀಸ್ ಹಾಗೂ ಪತ್ನಿ ಡ್ರೈನೇಜ್ ಗುಂಡಿಗೆ

    ಮಳೆಯಿಂದ ರಸ್ತೆಯೆಲ್ಲಾ ಜಲಾವೃತ – ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಪೊಲೀಸ್ ಹಾಗೂ ಪತ್ನಿ ಡ್ರೈನೇಜ್ ಗುಂಡಿಗೆ

    ಲಕ್ನೋ: ಮಳೆ ನೀರಿನಿಂದ ಜಲಾವೃತವಾದ ರಸ್ತೆಗಳಲ್ಲಿ ಚಲಿಸುವುದು ಎಷ್ಟು ಅಪಾಯಕಾರಿ ಎಂಬುದು ಈ ಘಟನೆಯೇ ಸಾಕ್ಷಿ. ದಾರಿಯೇ ಕಾಣದ ರಸ್ತೆಯಲ್ಲಿ ಪ್ರಯಣಿಸುತ್ತಿದ್ದ ಪೊಲೀಸ್ ಹಾಗೂ ಪತ್ನಿ ಸ್ಕೂಟರ್ ಸಮೇತವಾಗಿ ತೆರೆದ ಚರಂಡಿಗೆ ಬಿದ್ದಿದ್ದಾರೆ.

    ನೀರಿನಿಂದ ಜಲಾವೃತವಾಗಿ ರಸ್ತೆಯೇ ಕಾಣದ ದಾರಿಯಲ್ಲಿ ಸಾಗುತ್ತಿದ್ದ ದಂಪತಿ ಸ್ಕೂಟರ್ ಸಮೇತವಾಗಿ ಡ್ರೈನೇಜ್ ಗುಂಡಿಗೆ ಬಿದ್ದಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ. ಘಟನೆಯಿಂದ ಇಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಕಾಬೂಲ್ ಗುರುದ್ವಾರ ದಾಳಿ: 3 ಗಂಟೆಗಳ ಕಾಲ ದೇವಾಲಯ ರಕ್ಷಿಸಲು ಹೋರಾಡಿದ ತಾಲಿಬಾನ್

    ಡ್ರೈನೇಜ್‌ಗೆ ಬಿದ್ದ ದಂಪತಿಯನ್ನು ಸ್ಥಳೀಯರು ತಕ್ಷಣವೇ ರಕ್ಷಿಸಲು ಧಾವಿಸಿದ್ದಾರೆ. ದಂಪತಿ ಗುಂಡಿಗೆ ಬೀಳುವ ವೀಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದನ್ನು ನಿವೃತ್ತ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದು ಯುಪಿಯ ಸ್ಮಾರ್ಟ್ ಸಿಟಿ ಅಲಿಗಢ, ಇದಕ್ಕೆ ಯಾರಿಗೆ ಧನ್ಯವಾದ ಹೇಳಬೇಕು? ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ಪ್ರತಿಭಟನೆಗಳ ನಡುವೆ, ಅಗ್ನಿವೀರರಿಗೆ ಆನಂದ್ ಮಹೀಂದ್ರಾ ಕೊಟ್ರು ಬಿಗ್ ಆಫರ್

    ಘಟನೆ ಬಗ್ಗೆ ವಿವರಿಸಿದ ಪೊಲೀಸ್ ಅಧಿಕಾರಿ ದಯಾನಂದ್ ಸಿಂಗ್, ನಾವು ಸ್ಕೂಟರ್‌ನಲ್ಲಿ ಆಸ್ಪತ್ರೆಗೆ ಹೋಗುತ್ತಿದ್ದೆವು. ಮಳೆ ನೀರಿನಿಂದ ರಸ್ತೆ ತುಂಬಿದ್ದು, ನಮ್ಮ ಎದುರು ಚರಂಡಿ ಇದ್ದ ವಿಷಯ ತಿಳಿದಿರಲಿಲ್ಲ. ಹೀಗಾಗಿ ಸ್ಕೂಟರ್ ಸಮೇತ ಚರಂಡಿಯಲ್ಲಿ ಬಿದ್ದೆವು, ನಮಗೆ ಸ್ವಲ್ಪ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.

    Live Tv

  • ಕಾಲೇಜ್ ಕ್ಯಾಂಪಸ್‍ನಲ್ಲಿ ನಮಾಜ್ ಮಾಡಿದ ಶಿಕ್ಷಕ-  ಕ್ರಮಕ್ಕೆ ಯುವ ಬಿಜೆಪಿ ಆಗ್ರಹ

    ಕಾಲೇಜ್ ಕ್ಯಾಂಪಸ್‍ನಲ್ಲಿ ನಮಾಜ್ ಮಾಡಿದ ಶಿಕ್ಷಕ- ಕ್ರಮಕ್ಕೆ ಯುವ ಬಿಜೆಪಿ ಆಗ್ರಹ

    ಲಕ್ನೋ: ಅಲಿಗಢದ ಕಾಲೇಜು ಕ್ಯಾಂಪಸ್‍ನಲ್ಲಿ ಶಿಕ್ಷಕರೊಬ್ಬರು ನಮಾಜ್ ಮಾಡುತ್ತಿರುವ ವೀಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆ ಯುವ ಬಿಜೆಪಿ ಮುಖಂಡರು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

    ಅಲಿಗಢದ ಶ್ರೀವರ್ಷಿಣಿ ಕಾಲೇಜಿನಲ್ಲಿ ಶಿಕ್ಷಕರೊಬ್ಬರು ನಮಾಜ್ ಮಾಡುತ್ತಿರುವ ವೀಡಿಯೋ ಎಲ್ಲಕಡೆ ಹರಿದಾಡುತ್ತಿದೆ. ವೀಡಿಯೋ ನೋಡಿದ ಬಿಜೆಪಿ ಯುವ ಮೋರ್ಚಾ ಮುಖಂಡರು ಇದಕ್ಕೆ ಆಕ್ಷೀಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಮೋರ್ಚಾದ ಮಹಾನಗರ ಘಟಕದ ಉಪಾಧ್ಯಕ್ಷ ಅಮಿತ್ ಗೋಸ್ವಾಮಿ ನೇತೃತ್ವದಲ್ಲಿ ಶುಕ್ರವಾರ ಮೇ 27 ರಂದು ಅಲಿಗಢದ ಶ್ರೀವರ್ಷಿಣಿ ಕಾಲೇಜಿಗೆ ಆಗಮಿಸಿ, ಈ ಕುರಿತು ವಿಚಾರಣೆ ನಡೆಸಿದ್ದಾರೆ. ಅದಕ್ಕೆ ಕಾಲೇಜು ಪ್ರಾಂಶುಪಾಲರು, ಸಮಿತಿ ರಚಿಸಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯರ ಮುಖ ಮಾತ್ರ ರಾಮನದ್ದು, ಬುದ್ಧಿ ರಾವಣನದು: ಕಟೀಲ್

    ಈ ಕುರಿತು ಮಾತನಾಡಿದ ಅಮಿತ್ ಗೋಸ್ವಾಮಿ, ಇದು ನಮಾಜ್ ಓದಲು ಧಾರ್ಮಿಕ ಸ್ಥಳವಲ್ಲ. ಪ್ರಾಧ್ಯಾಪಕರು ಮಕ್ಕಳಿಗೆ ತರಗತಿ ಮಾಡುವುದನ್ನು ಬಿಟ್ಟು, ಶಿಕ್ಷಣ ಸಂಸ್ಥೆಯಲ್ಲಿ ಪ್ರಾರ್ಥನೆ ಸಲ್ಲಿಸುವುದು ಹೇಗೆ? ಹಿಂದೂಗಳು, ಮುಸ್ಲಿಮರು, ಸಿಖ್ಖರು ಸೇರಿದಂತೆ ಎಲ್ಲ ಧರ್ಮೀಯರು ಶಿಕ್ಷಣ ಸಂಸ್ಥೆಗಳಿಗೆ ಬರುವುದರಿಂದ ಅವರನ್ನೂ ಸಮಾನವಾಗಿ ಪರಿಗಣಿಸಬೇಕು. ಅದಕ್ಕೆ ನಮಾಜ್ ಮಾಡಿದ ಪ್ರಾಧ್ಯಾಪಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸದರು.

    ಪರಿಸ್ಥಿತಿಯ ಬಗ್ಗೆ ವಿವರಿಸಿದ ಕಾಲೇಜಿನ ಪ್ರಾಂಶುಪಾಲ ಪ್ರೊ.ಅನಿಲ್ ಕುಮಾರ್ ಗುಪ್ತಾ, ಈ ವಿಷಯಕ್ಕೆ ಸಂಬಂಧಿಸಿದಂತೆ, ನಾನು 28 ರಂದು ಬೆಳಗ್ಗೆ ಪ್ರಯಾಗ್‍ರಾಜ್‍ನಿಂದ ಹಿಂತಿರುಗಿದ್ದೇನೆ. ನಾನು ನನ್ನ ಹಾಲಿ ಪ್ರಾಂಶುಪಾಲರನ್ನು ಕರೆದು ವಿಷಯದ ಬಗ್ಗೆ ವಿಚಾರಿಸುತ್ತೇನೆ. ಈ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಿ ಅದರ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು. ಮುಂದೆ ಇಂತಹ ಧಾರ್ಮಿಕ ವಿವಾದ ಸೃಷ್ಟಿಯಾಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡುತ್ತೇನೆ ಎಂದರು. ಇದನ್ನೂ ಓದಿ:  29 ಹೂಡಿಕೆದಾರರಿಗೆ 1.82 ಕೋಟಿ ರೂ. ವಂಚಿಸಿದ ಮಹಿಳೆ ಅರೆಸ್ಟ್ 

  • ಗಿಳಿಗಾಗಿ ಮಾಲೀಕನ ಪರಾದಾಟ – ಹುಡುಕಿಕೊಟ್ಟರೆ 10 ಸಾವಿರ ಬಹುಮಾನ

    ಗಿಳಿಗಾಗಿ ಮಾಲೀಕನ ಪರಾದಾಟ – ಹುಡುಕಿಕೊಟ್ಟರೆ 10 ಸಾವಿರ ಬಹುಮಾನ

    ಲಕ್ನೋ: ಸಾಮಾನ್ಯವಾಗಿ ಮನುಷ್ಯರು ಪ್ರಾಣಿಗಳನ್ನು ಹೆಚ್ಚಾಗಿ ಹಚ್ಚಿಕೊಂಡಿರುವುದನ್ನು ನೋಡಿರುತ್ತೇವೆ. ಆದರೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ವ್ಯಕ್ತಿಯೋರ್ವ ಕಳೆದು ಹೋಗಿರುವ ಗಿಳಿಯನ್ನು ಹುಡುಕಿಕೊಂಡುವಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಲ್ಲದೆ ಗಿಳಿಯನ್ನು ಹುಡುಕಿಕೊಟ್ಟವರಿಗೆ 10,000 ರೂ. ಹಣವನ್ನು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

    ಹೌದ ಸಾಕಿದ್ದ ಗಿಳಿಯೊಂದು ಕಾಣೆಯಾಗಿದ್ದು, ಇದೀಗ ಅಲಿಗಢ ಜಿಲ್ಲೆಯಲ್ಲಿ ಗಿಳಿಯ ವಿಚಾರ ಭಾರೀ ಚರ್ಚೆಯಾಗುತ್ತಿದೆ. ವಿಶೇಷವೆಂದರೆ ಈ ಗಿಳಿ ವಿದೇಶಿ ತಳಿಯದ್ದಾಗಿದೆ. ನಗರದ ಕ್ವಾರ್ಸಿ ಪೊಲೀಸ್ ಠಾಣಾ ಪ್ರದೇಶದಿಂದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದೆ.

    ಗಿಳಿಯ ಮಾಲೀಕ ಎಸ್.ಸಿ.ವಷ್ರ್ನಿ ಎಂದು ಗುರುತಿಸಲಾಗಿದ್ದು, ಇವರು ದೀಂದಯಾಲ್ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಗದು ಬಹುಮಾನ ಮತ್ತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವುದಲ್ಲದೇ, ಗಿಳಿ ಹುಡುಕಲು ಸಹಾಯ ಮಾಡುವಂತೆ ಕರಪತ್ರಗಳನ್ನು ಮುದ್ರಿಸಿ ಸುತ್ತಮುತ್ತಲಿನವರಿಗೆ ಹಂಚಿದ್ದಾರೆ. ಅಲ್ಲದೆ ಗಿಳಿ ಹುಡುಕಲು ಸಹಾಯ ಮಾಡಿದವರಿಗೆ 10,000ರೂ. ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.

  • ಮದ್ವೆ ಪಾರ್ಟಿ ನೀಡದ ಗೆಳೆಯನನ್ನ ಕೊಂದೇ ಬಿಟ್ರು!

    ಮದ್ವೆ ಪಾರ್ಟಿ ನೀಡದ ಗೆಳೆಯನನ್ನ ಕೊಂದೇ ಬಿಟ್ರು!

    – ಹಿಂದಿನ ದಿನವೇ ಪತ್ನಿಯನ್ನ ಕರೆ ತಂದಿದ್ದ
    – ಎಣ್ಣೆ ಪಾರ್ಟಿ ಬೇಕೆಂದು ಹಠ ಹಿಡಿದಿದ್ದ ನಾಲ್ವರು!

    ಲಕ್ನೋ: ಮದುವೆ ಆಗಿದ್ದ ಖುಷಿಗೆ ಪಾರ್ಟಿ ನೀಡದ ಗೆಳೆಯನನ್ನ ಆತನ ಕುಚುಕುಗಳೇ ಕೊಂದಿರುವ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಪಾಲಿಮುಕಿಮ್ಪುರ ಗ್ರಾಮದಲ್ಲಿ ನಡೆದಿದೆ.

    ಬಬ್ಲು ಸೂರ್ಯವಂಶಿ ಕೊಲೆಯಾದ ನವ ವಿವಾಹಿತ. ಪಶು ವ್ಯಾಪಾರಿಯಾಗಿದ್ದ ಬಬ್ಲು ಹಿಂದಿನ ದಿನವೇ ಪತ್ನಿಯನ್ನ ಮನೆಗೆ ಕರೆ ತಂದಿದ್ದನು. ಪತ್ನಿ ಆಗಮನದ ಹಿನ್ನೆಲೆ ಬಬ್ಲು ಸಗ ಖುಷಿಯಲ್ಲಿದ್ದನು. ವಧು ಬಂದ ಮರುದಿನ ಬಬ್ಲು ಗೆಳೆಯನ ಮನೆಗೆ ಹೋಗಿದ್ದಾನೆ. ನಾಲ್ವರು ಗೆಳೆಯರು ಮದುವೆಯಾದ ಖುಷಿಗೆ ಮದ್ಯದ ಪಾರ್ಟಿ ನೀಡಬೇಕೆಂದು ಒತ್ತಾಯಿಸಿದ್ದಾರೆ. ಆದ್ರೆ ಬಬ್ಲು ಮದ್ಯದ ಪಾರ್ಟಿ ನೀಡಲು ಒಪ್ಪಿಲ್ಲ.

    ಬಬ್ಲು ಪಾರ್ಟಿ ನೀಡಲು ಒಪ್ಪದಿದ್ದಾಗ ಗೆಳೆಯರ ನಡುವೆ ಗಲಾಟೆ ನಡೆದಿದೆ. ಕೊನೆಗೆ ಗೆಳೆಯರೆಲ್ಲರೂ ಸೇರಿ ಚಾಕುವಿನಿಂದ ಬಬ್ಲುವಿನ ಕತ್ತು ಕೊಯ್ದು ಎಸ್ಕೇಪ್ ಆಗಿದ್ದಾರೆ. ತದನಂತರ ಬಬ್ಲು ಕುಟುಂಬಸ್ಥರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ವಿಷಯ ತಿಳಿದ ಕುಟುಂಬಸ್ಥರು ಬಬ್ಲುನನ್ನು ಅಲಿಗಢ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಬಬ್ಲುನನ್ನು ಪರೀಕ್ಷಿಸಿ ಮೃತಪಟ್ಟಿರೋದನ್ನ ಖಚಿತ ಪಡಿಸಿದ್ದಾರೆ.

    ಎರಡನೇ ಮದುವೆ: ಬಬ್ಲುಗೆ ಏಳು ವರ್ಷಗಳ ಹಿಂದೆ ಪಾಲಿ ಗ್ರಾಮದ ನಾಗಿಣಿ ಎಂಬವರನ್ನ ಮದುವೆಯಾಗಿದ್ದನು. ದಂಪತಿಗೆ ಎರಡು ಮಕ್ಕಳಿವೆ. ಆದ್ರೆ ಕಳೆದ ಎರಡ್ಮೂರು ವರ್ಷಗಳಿಂದ ನಾಗಿಣಿ ಆನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ನಾಗಿಣಿಯೇ ತನ್ನ ಸ್ವಂತ ತಂಗಿ ಜೊತೆ ಪತಿಗೆ ಎರಡನೇ ಮದುವೆ ಮಾಡಿಸಿ ಮನೆಗೆ ಕರೆ ತಂದಿದ್ದರು.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಕುಟುಂಬಸ್ಥರಿಂದ ಮಾಹಿತಿ ಕಲೆ ಹಾಕಿ, ಮೃತದೇಹವನ್ನ ಮರಣೋತ್ತರ ಶವ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇತ್ತ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದರು. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.