Tag: All Party Delegation

  • ಆಪರೇಷನ್ ಸಿಂಧೂರ | ಜೂ.9ರಂದು ಸರ್ವಪಕ್ಷಗಳ ನಿಯೋಗ ಭೇಟಿಯಾಗಲಿದ್ದಾರೆ ಪ್ರಧಾನಿ ಮೋದಿ

    ಆಪರೇಷನ್ ಸಿಂಧೂರ | ಜೂ.9ರಂದು ಸರ್ವಪಕ್ಷಗಳ ನಿಯೋಗ ಭೇಟಿಯಾಗಲಿದ್ದಾರೆ ಪ್ರಧಾನಿ ಮೋದಿ

    – ವಿದೇಶಿ ಭೇಟಿ ಬಗ್ಗೆ ಸಮಗ್ರ ಮಾಹಿತಿ ಪಡೆಯಲಿರುವ ಪ್ರಧಾನಿ

    ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿ ಮತ್ತು ಆಪರೇಷನ್‌ ಸಿಂಧೂರ (Operation Sindoor) ಬಳಿಕ ಪಾಕಿಸ್ತಾನದ ಮುಖವಾಡವನ್ನ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಬಯಲು ಮಾಡಲು ಹೊರಟಿರುವ ಭಾರತದ ಸರ್ವಪಕ್ಷಗಳ ನಿಯೋಗದ ಸದಸ್ಯರನ್ನ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶೀಘ್ರದಲ್ಲೇ ಭೇಟಿ ಮಾಡಲಿದ್ದಾರೆ.

    ಜೂನ್‌ 9 ಅಥವಾ 10ರಂದು ಮೋದಿ ನೇತೃತ್ವದಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ. ಈ ಸಭೆಯಲ್ಲಿ ಸರ್ವಪಕ್ಷಗಳ ನಿಯೋಗಗಳು ತಮ್ಮ ವಿದೇಶಿ ಭೇಟಿಗಳ ಬಗ್ಗೆ ಸಮಗ್ರ ಮಾಹಿತಿಯನ್ನ ಪ್ರಧಾನಿಗಳಿಗೆ ವಿವರಿಸಲಿದ್ದಾರೆ. ಇದನ್ನೂ ಓದಿ: ʻಆಪರೇಷನ್‌ ಸಿಂಧೂರʼ ವೇಳೆ ಭಾರತ ಧ್ವಂಸಗೊಳಿಸಿದ್ದ ಮುರಿಡ್ಕೆ ಮಸೀದಿಯಲ್ಲಿ ಮತ್ತೆ ತಲೆಎತ್ತಿದ ಲಷ್ಕರ್‌ ಗುಂಪು; ವಿಡಿಯೋ ವೈರಲ್‌

    ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟಕ್ಕೆ ಜಾಗತಿಕ ಬೆಂಬಲ ಪಡೆಯುವ ತನ್ನ ಉಪಕ್ರಮದ ಭಾಗವಾಗಿ, ಬಿಜೆಪಿ ನೇತೃತ್ವದ ಸರ್ಕಾರವು 33 ರಾಜಧಾನಿಗಳಿಗೆ ಭೇಟಿ ನೀಡಲು 7 ಸರ್ವಪಕ್ಷಗಳ ನಿಯೋಗವನ್ನು ರಚಿಸಿತ್ತು. ಆಡಳಿತ ಪಕ್ಷವಾದ NDA (NDA)ಯ 31 ರಾಜಕೀಯ ನಾಯಕರು, ಇತರ ರಾಜಕೀಯ ಪಕ್ಷಗಳ 20 ಪ್ರತಿನಿಧಿಗಳನ್ನು ಒಳಗೊಂಡ 7 ನಿಯೋಗಗಳಲ್ಲಿ ಒಟ್ಟು 59 ಸದಸ್ಯರು ಇದ್ದರು. ಇದನ್ನೂ ಓದಿ: ಪಂಜಾಬ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 113 ಡ್ರಗ್ ಪೆಡ್ಲರ್‌ಗಳು ಅರೆಸ್ಟ್

    ಸರ್ವಪಕ್ಷಗಳ ನಿಯೋಗದ ರುವಾರಿಗಳು
    * ಶಶಿ ತರೂರ್ (INC)
    * ರವಿಶಂಕರ್ ಪ್ರಸಾದ್ (BJP)
    * ಸಂಜಯ್ ಕುಮಾರ್ ಝಾ (JDU)
    * ಬೈಜಯಂತ್ ಪಾಂಡಾ (BJP)
    * ಕನಿಮೋಳಿ ಕರುಣಾನಿಧಿ (DMK)
    * ಸುಪ್ರಿಯಾ ಸುಳೆ (NCP)
    * ಶ್ರೀಕಾಂತ್ ಏಕನಾಥ್ ಶಿಂಧೆ (ಶಿವಸೇನೆ)

    ಏಪ್ರಿಲ್‌ 22ರಂದು ಪಹಲ್ಗಾಮ್‌ನಲ್ಲಿ ನಡೆದಿದ್ದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿತ್ತು. ದಾಳಿ ಬಳಿಕ ಪಾಕ್‌ನ ಭಯೋತ್ಪಾದನೆಯ ಮುಖವಾಡವನ್ನ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕಳಚಲು ತೀರ್ಮಾನಿಸಿ ಸರ್ವಪಕ್ಷಗಳ ನಿಯೋಗವನ್ನ ರಚನೆ ಮಾಡಿತ್ತು. ವಿಶ್ವದಾದ್ಯಂತ ಅನೇಕ ದೇಶಗಳಿಗೆ ಭೇಟಿ ನೀಡಿರುವ ಈ ನಿಯೋಗಗಳು ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದು, ಭಾರತದ ಹೋರಾಟಕ್ಕೆ ಬೆಂಬಲ ದೊರೆತಿದೆ. ಇದನ್ನೂ ಓದಿ: ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳಕ್ಕೆ `ಮಹಾ’ ಸಿಎಂ ಆಕ್ಷೇಪ – ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸಲು ಕೇಂದ್ರಕ್ಕೆ ಡಿಕೆಶಿ ಮನವಿ

    ಟೀಂ ಇಂಡಿಯಾಕ್ಕೆ ಜಾಗತೀಕ ಬೆಂಬಲ:
    ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟಕ್ಕೆ ಸೌದಿ ಅರೇಬಿಯಾ, ದಕ್ಷಿಣ ಆಫ್ರಿಕಾ, ಕೊಂಬಿಯಾ, ಇಂಡೋನೇಷ್ಯಾ ಸೇರಿದಂತೆ ಹಲವು ರಾಷ್ಟ್ರಗಳು ಬೆಂಬಲ ಸೂಚಿಸಿವೆ. ಈ ಬಗ್ಗೆ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಪ್ರತಿಜ್ಞೆ ಸ್ವೀಕರಿಸುವುದಾಗಿ ಹೇಳಿದ್ದು, ಭಾರತಕ್ಕೆ ರಾಜತಾಂತ್ರಿಕ ಯಶಸ್ಸು ಕೂಡ ಸಿಕ್ಕಂತಾಗಿದೆ.

  • ಪಾಕ್‌ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

    ಪಾಕ್‌ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ

    – ದೇಶದ ಸಂದೇಶವನ್ನ ವಿಶ್ವಕ್ಕೆ ತಲುಪಿಸಲು ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಹೆಮ್ಮೆ: ಬ್ರಿಜೇಶ್ ಚೌಟ

    ನವದೆಹಲಿ: `ಆಪರೇಷನ್ ಸಿಂಧೂರ'(Operation Sindoor) ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ(Brijesh Chowta) ಅವರನ್ನು ಒಳಗೊಂಡ ಡಿಎಂಕೆ ಕನಿಮೋಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು(All-Party Delegation)  ಗುರುವಾರ ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ.

    ದೆಹಲಿ(Delhi) ವಿಮಾನ ನಿಲ್ದಾಣ ಮೂಲಕ ಬೆಳಗ್ಗೆ 11ಗಂಟೆಗೆ ಹೊರಟ ತಂಡದಲ್ಲಿ ಕ್ಯಾ. ಚೌಟ ಅವರ ಜೊತೆ ಡಿಎಂಕೆ ಪಕ್ಷದ ಸಂಸದೆ ಕನಿಮೋಳಿ, ಸಮಾಜವಾದಿ ಪಕ್ಷದ ರಾಜೀವ್ ರೈ, ನ್ಯಾಷನಲ್ ಕಾನ್ಫರೆನ್ಸ್ ಸಂಸದ ಮಿಯಾನ್ ಅಲ್ತಾಫ್ ಅಹ್ಮದ್, ಆರ್‌ಜೆಡಿ ಪಕ್ಷದ ಪ್ರೇಮ್ ಚಂದ್ ಗುಪ್ತಾ, ಎಎಪಿ ಪಕ್ಷದ ಅಶೋಕ್ ಮಿತ್ತಲ್, ನೇಪಾಳದ ಮಾಜಿ ರಾಯಭಾರಿ ಮಂಜೀವ್ ಪುರಿ ಹಾಗೂ ಫ್ರಾನ್ಸ್ನ ಮಾಜಿ ರಾಯಭಾರಿ ಜಾವೇದ್ ಅಶ್ರಫ್ ಇದ್ದರು. ಈ ನಿಯೋಗವು ಮೊದಲು ರಷ್ಯಾ(Russia) ದೇಶಕ್ಕೆ ತೆರಳುತ್ತಿದೆ. ನಂತರ ಸ್ಲೊವೇನಿಯಾ(ಮೇ 25), ಗ್ರೀಸ್(ಮೇ 27), ಲಾಟ್ವಿಯಾ(ಮೇ 29) ಮತ್ತು ಸ್ಪೇನ್(ಮೇ 31) ದೇಶಕ್ಕೆ ಭೇಟಿ ನೀಡಲಿದೆ. ಇದನ್ನೂ ಓದಿ: ಚಿಂತಾಮಣಿಯಲ್ಲಿ ವಿವಾದಿತ ಅಂಬೇಡ್ಕರ್ ಪ್ರತಿಮೆ ತೆರವು ವಿಚಾರ – ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

    ವಿದೇಶಕ್ಕೆ ತೆರಳುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ದಕ್ಷಿಣ ಕನ್ನಡ(Dakshina Kannada) ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಮೊದಲ ಬಾರಿಗೆ ಸಂಸದನಾಗಿರುವ ಹಾಗೂ ಸೇನೆಯಲ್ಲಿ ಸೇವೆ ಸಲ್ಲಿಸಿದ ಓರ್ವ ಯೋಧನಾಗಿರುವ ನನಗೆ, ಭಯೋತ್ಪಾದನೆ ವಿರುದ್ಧ ಅದರಲ್ಲೂ ನಿರ್ದಿಷ್ಟವಾಗಿ ಪಾಕಿಸ್ತಾನ(Pakistan) ಪ್ರೇರಿತ ಜಿಹಾದಿ ಉಗ್ರಗಾಮಿತ್ವದ ಅಪಾಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ನೇತೃತ್ವದಲ್ಲಿ ಮುನ್ನಡೆಯುತ್ತಿರುವ ಭಾರತದ ದೃಢ ಮತ್ತು ಒಗ್ಗಟ್ಟಿನ ಸಂದೇಶವನ್ನು ಜಾಗತಿಕ ಮಟ್ಟದಲ್ಲಿ ಸಾರುವುದಕ್ಕೆ ಈ ಅಪರೂಪದ ಅವಕಾಶ ದೊರಕಿದೆ. ನಿಯೋಗದ ಭಾಗವಾಗಿರುವುದು ಬಹಳ ಹೆಮ್ಮೆ ಮತ್ತು ಸೌಭಾಗ್ಯದ ಸಂಗತಿ ಎಂದರು. ಇದನ್ನೂ ಓದಿ: ಕ್ಯಾನ್ಸರ್ ರೋಗಿಗಳಿಗೆ ಗುಡ್ ನ್ಯೂಸ್ – ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಓಪನ್

    ಮೋದಿ ಅವರ ಸಂದೇಶದಂತೆ ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ. ಹಾಗೆಯೇ ಭಯೋತ್ಪಾದನೆ ಮತ್ತು ವ್ಯಾಪಾರ ಒಟ್ಟಿಗೆ ಸಾಗಲು ಸಾಧ್ಯವಿಲ್ಲ. ಅಷ್ಟೇ ಅಲ್ಲ ನೀರು ಮತ್ತು ರಕ್ತ ಎಂದಿಗೂ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು ಏರ್-ಸ್ಟ್ರಿಪ್ ನಿರ್ಮಾಣ: ಭೂಸ್ವಾಧೀನಕ್ಕೆ ಬಾಕಿ ಇರುವ 17 ಕೋಟಿ ಬಿಡುಗಡೆಗೆ ಕ್ರಮ

    ಭಾರತದ ನಿಲುವು ಬಹಳ ಸ್ಪಷ್ಟವಾಗಿದ್ದು, ಹೀಗಿರುವಾಗ ಪಾಕಿಸ್ತಾನ ಹರಡಲು ಯತ್ನಿಸುತ್ತಿರುವ ಸುಳ್ಳಿನ ಕಥೆಯನ್ನು ಜಾಗತಿಕವಾಗಿಯೂ ಬಯಲಿಗೆಳೆಯಲಿದೆ. ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ದೃಢವಾಗಿದೆ. ನಮ್ಮ ದೇಶವು ವಿಕಸಿತ ಭಾರತದತ್ತ ಹೆಜ್ಜೆ ಹಾಕುತ್ತಿರುವ ಈ ಮಹತ್ವದ ಕಾಲಘಟ್ಟದಲ್ಲಿ, ನಮ್ಮ ದೇಶದ ಜನತೆ, ಭವಿಷ್ಯ ಮತ್ತು ಪ್ರಗತಿಯ ಮೇಲೆ ಭಯೋತ್ಪಾದನೆಯ ಕರಿನೆರಳು ಬೀಳಲು ನಾವೆಂದಿಗೂ ಬಿಡುವುದಿಲ್ಲ ಎಂದು ಹೇಳಿದರು.

  • ಭಯೋತ್ಪಾದನೆ ವಿರುದ್ಧ ಸರ್ವಪಕ್ಷ ನಿಯೋಗ – ಕಾಂಗ್ರೆಸ್‌ ಕೊಟ್ಟ 4 ಹೆಸರು ಬಿಟ್ಟು ಶಶಿ ತರೂರ್‌ ಆಯ್ಕೆಮಾಡಿದ ಕೇಂದ್ರ!

    ಭಯೋತ್ಪಾದನೆ ವಿರುದ್ಧ ಸರ್ವಪಕ್ಷ ನಿಯೋಗ – ಕಾಂಗ್ರೆಸ್‌ ಕೊಟ್ಟ 4 ಹೆಸರು ಬಿಟ್ಟು ಶಶಿ ತರೂರ್‌ ಆಯ್ಕೆಮಾಡಿದ ಕೇಂದ್ರ!

    – ವಿಶ್ವ ವೇದಿಕೆಯಲ್ಲಿ ಪಾಕ್‌ ನಿಜ ಬಣ್ಣ ಬಯಲು ಮಾಡಲು ಮುಂದಾದ ಭಾರತ

    ನವದೆಹಲಿ: ಕಳೆದ ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ʻಆಪರೇಷನ್ ಸಿಂಧೂರʼದ ಮೂಲಕ ಪ್ರತೀಕಾರ ತೀರಿಸಿಕೊಂಡಿರುವ ಭಾರತ ಇದೀಗ ಭಯೋತ್ಪಾದನೆ, ಉಗ್ರ ಪೋಷಿತ ಕೃತ್ಯಗಳಿಗೆ ಬೆಂಬಲ ನೀಡುತ್ತಿರುವ ಪಾಕಿಸ್ತಾನದ ಮುಖವಾಡವನ್ನ ಇಡೀ ವಿಶ್ವದ ಮುಂದೆ ಬಿಚ್ಚಿಡಲು ಸಜ್ಜಾಗಿದೆ. ಅದಕ್ಕಾಗಿ ವಿವಿಧ ರಾಜಕೀಯ ಪಕ್ಷಗಳ 7 ಸಂಸದರ ನಿಯೋಗವನ್ನ ರಚಿಸಿದೆ.

    7 ಸಂಸದರ ನಿಯೋಗದ ಪಟ್ಟಿಗೆ ಕಾಂಗ್ರೆಸ್‌ ಸಂಸದ ಶಶಿ ತರೂ‌ರ್ (Shashi Tharoor) ಅವರ ಹೆಸರನ್ನೂ ಕೇಂದ್ರ ಸರ್ಕಾರ ಸೇರಿಸಿದೆ. ವಿಶೇಷವೆಂದರೆ ಕಾಂಗ್ರೆಸ್‌ನಿಂದ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾದ ಪಟ್ಟಿಯಲ್ಲಿ 4 ಹೆಸರುಗಳ ಪೈಕಿ ಶಶಿ ತರೂರ್‌ ಅವರ ಹೆಸರೇ ಇಲ್ಲದಿರುವುದು ಚರ್ಚೆಗೆ ಗ್ರಾಸವಾಗಿದೆ.

    Supriya sule

    ಆಪರೇಷನ್‌ ಸಿಂಧೂರದ ಬಳಿಕ ಶಶಿ ತರೂರ್‌ ಅವರು ಪ್ರಧಾನಿ ಮೋದಿ ಬಗ್ಗೆ ಹೊಗಳಿಕೆಯ ಮಾತುಗಳನ್ನಾಡಿದ್ದರು. ಇದರಿಂದ ʻಲಕ್ಷ್ಮಣ ರೇಖೆʼ ಮೀರಿದ್ದಾರೆ ಎಂದು ಕಾಂಗ್ರೆಸ್‌ನಿಂದಲೇ ಟೀಕೆಗೆ ಒಳಗಾಗಿದ್ದರು.

    ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮೇ 16ರಂದು ನಿಯೋಗಕ್ಕೆ 4 ಸಂಸದರ ಹೆಸರು ಶಿಫಾರಸು ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೋರಿದ್ದರು. ಅದರಂತೆಯೇ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಸೂಚನೆಯಂತೆ ಆನಂದ ಶರ್ಮಾ, ಗೌರವ್ ಗೊಗೊಯಿ, ಡಾ. ಸಯದ್ ನಾಸೀರ್ ಹುಸೇನ್ ಮತ್ತು ರಾಜ್ ಬ್ರಾರ್ ಅವರ ಹೆಸರುಗಳನ್ನು ಶಿಫಾರಸು ಮಾಡಿ ಶುಕ್ರವಾರ ಸಂಜೆಯೇ ಪಟ್ಟಿ ಕಳುಹಿಸಲಾಗಿದೆ ಎಂದು ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ.

    ಸಂಸದೀಯ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ತಿರುವನಂತಪುರದ ಸಂಸದ ಕಾಂಗ್ರೆಸ್‌ನ ಶಶಿ ತರೂ‌ರ್ ಹೆಸರು ಮೊದಲನೆಯದ್ದಾಗಿದೆ. ಬಿಜೆಪಿ ಸಂಸದ ರವಿಶಂಕರ್‌ ಪ್ರಸಾದ್ ಮತ್ತು ಬೈಜಯಂತ್ ಪಾಂಡಾ, ಜೆಡಿಯು ಸಂಸದ ಸಂಜಯ್ ಜಾ, ಡಿಎಂಕೆ ಸಂಸದೆ ಕನಿಮೋಳಿ, ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಳೆ, ಶಿವಸೇನಾ ಸಂಸದ ಶ್ರೀಕಾಂತ್ ಶಿಂದೆ ಅವರ ಹೆಸರುಗಳಿವೆ.