Tag: All-Party Meeting

  • ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು – ಖರ್ಗೆ ಅಸಮಾಧಾನ

    ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು – ಖರ್ಗೆ ಅಸಮಾಧಾನ

    ನವದೆಹಲಿ: ಕಾಶ್ಮೀರದ ಬೈಸರನ್‌ ಕಣಿವೆ ಪ್ರದೇಶದಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಕೊನೆಗೂ ಭಾರತ (India) ಪ್ರತೀಕಾರ ತೀರಿಸಿಕೊಂಡಿದೆ. ʻಆಪರೇಷನ್‌ ಸಿಂಧೂರʼ (Operation Sindoor) ಹೆಸರಿನಡಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರ (PoK)ದ 9 ಉಗ್ರ ತಾಣಗಳನ್ನ ಹೊಡೆದುರುಳಿಸಿದೆ. ಭಾರತ ಸೇನಾ ಕಾರ್ಯಾಚರಣೆ ಯಶಸ್ಸಿನ ಬೆನ್ನಲ್ಲೇ ಇಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಯಿತು.

    ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸಭೆಯ ಅಧ್ಯಕ್ಷತೆ ವಹಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ ವಿವಿಧ ರಾಜಕೀಯ ಪಕ್ಷದ ಪ್ರಮುಖರು ಪಾಲ್ಗೊಂಡಿದ್ದರು. ಇದನ್ನೂ ಓದಿ: ʻಆಪರೇಷನ್‌ ಸಿಂಧೂರʼದಲ್ಲಿ 100 ಉಗ್ರರ ಹತ್ಯೆ – ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರದಿಂದ ಮಾಹಿತಿ

    100 ಉಗ್ರರ ಹತ್ಯೆ:
    ಸಭೆಯನ್ನುದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಭಾರತೀಯ ಸೇನೆ ನಡೆಸಿದ ವಾಯುದಾಳಿಯಲ್ಲಿ 100 ಉಗ್ರರ ಹತ್ಯೆಯಾಗಿದೆ ಎಂದು ಮಾಹಿತಿ ನೀಡಿದರು. ಅಲ್ಲದೇ ಈ ಪರಿಸ್ಥಿತಿಯನ್ನು ಬೆಳೆಸಲು ನಾವು ಬಯಸುವುದಿಲ್ಲ. ಒಂದು ವೇಳೆ ಪಾಕಿಸ್ತಾನ ಕಿತಾಪತಿ ಮಾಡಿದ್ರೆ ಸಹ ಹಿಂದೆ ಸರಿಯಲ್ಲ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಅಮೃತಸರದತ್ತ ಹಾರಿದ ಪಾಕ್‌ ಕ್ಷಿಪಣಿ ಅರ್ಧದಲ್ಲೇ ಉಡೀಸ್‌

    ಮೋದಿ ಗೈರು; ಖರ್ಗೆ ಅಸಮಾಧಾನ:
    ಇನ್ನೂ ಆಪರೇಷನ್‌ ಸಿಂಧೂರ ಕುರಿತು ನಡೆದ ಮಹತ್ವದ ಸರ್ವಪಕ್ಷ ಸಭೆಗೆ ಮೋದಿ ಗೈರಾದ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪಿಸಿ, ಅಸಮಾಧಾನ ವ್ಯಕ್ತಪಡಿಸಿದರು. ಜೊತೆಗೆ ಪಹಲ್ಗಾಮ್‌ ಉಗ್ರರ ದಾಳಿ ಬಳಿಕ ನಡೆದ ಸರ್ವಪಕ್ಷ ಸಭೆಗೂ ಮೋದಿ ಗೈರಾಗಿದ್ದನ್ನು ನೆನಪಿಸಿದ್ರು.

    ಇನ್ನೂ ಸಭೆಯ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ನಾವು ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ನೀಡುವುದನ್ನು ಮುಂದುವರಿಸುತ್ತೇವೆ. ಆದ್ರೆ ಅವರು (ಕೇಂದ್ರ ಸರ್ಕಾರ) ನಾವು ಚರ್ಚಿಸಲು ಬಯಸದ ಕೆಲವು ವಿಷಯಗಳಿವೆ ಅಂತ ಹೇಳಿದ್ದಾರೆಂದು ತಿಳಿಸಿದರು. ಇದನ್ನೂ ಓದಿ: ಉಗ್ರರ ನೆಲೆಗಳ ಮೇಲೆ ಬಿದ್ದ ಸೂಸೈಡ್‌ ಡ್ರೋನ್‌ಗಳು ತಯಾರಾಗಿದ್ದು ಬೆಂಗಳೂರಿನಲ್ಲಿ!

  • ಕಾವೇರಿ ವಿಚಾರದಲ್ಲಿ ಒಗ್ಗಟ್ಟು, ಸರ್ವಪಕ್ಷ ಸಂಸದರ ಬೆಂಬಲ: ಡಿಕೆಶಿ

    ಕಾವೇರಿ ವಿಚಾರದಲ್ಲಿ ಒಗ್ಗಟ್ಟು, ಸರ್ವಪಕ್ಷ ಸಂಸದರ ಬೆಂಬಲ: ಡಿಕೆಶಿ

    ನವದೆಹಲಿ: ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದರೂ ಕಾವೇರಿ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ರಾಜ್ಯದ ಪರ ನಿಲ್ಲುವುದಾಗಿ ಸರ್ವಪಕ್ಷಗಳ ಸಂಸದರು ಮಾತುಕೊಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

    ದೆಹಲಿಯ (New Delhi) ಖಾಸಗಿ ಹೋಟೆಲ್‌ನಲ್ಲಿ ಸರ್ವಪಕ್ಷ ಸಂಸದರ ಸಭೆಯ (All Party MP Meeting) ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾವೇರಿ (Kaveri) ವಿಚಾರವಾಗಿ ಸಂಸತ್ ಅಧಿವೇಶನದಲ್ಲಿ ದನಿ ಎತ್ತುವುದಾಗಿ ಎಲ್ಲಾ ಸಂಸದರು ಭರವಸೆ ನೀಡಿದ್ದಾರೆ ಎಂದರು. ಮಂಗಳವಾರ ತಡ ರಾತ್ರಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ (Pralhad Joshi) ಅವರನ್ನು ಮುಖ್ಯಮಂತ್ರಿಗಳು ಹಾಗೂ ನಾನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ. ಅವರು ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಪರಿಸ್ಥಿತಿ ವಿವರಿಸುವುದಾಗಿ ಭರವಸೆ ನೀಡಿದ್ದಾರೆ. ಮಳೆ ಕಡಿಮೆ ಬಿದ್ದಾಗ ನೀರನ್ನು ಎಷ್ಟು ಹಂಚಿಕೆ ಮಾಡಬೇಕು ಎನ್ನುವ ಬಗ್ಗೆ ಕಾವೇರಿ ನೀರು ನಿರ್ವಹಣಾ ಸಮಿತಿ (CWMC) ಸರಿಯಾದ ಸೂತ್ರ ಹಂಚಿಕೆ ಮಾಡಿಲ್ಲ. 5,000 ಕ್ಯೂಸೆಕ್ ನೀರು ಹರಿಸಿ ಎಂದು ಹೇಳಿರುವುದು ಅವೈಜ್ಞಾನಿಕ ಎಂದು ಹೇಳಿದರು. ಇದನ್ನೂ ಓದಿ: ಕಾವೇರಿ ವಿಚಾರವಾಗಿ CWMA ಆದೇಶಕ್ಕೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

    ಸುಪ್ರೀಂನಲ್ಲಿ ನ್ಯಾಯ ಸಿಗುವ ಭರವಸೆ:
    ರಾಜ್ಯದಲ್ಲಿ ಕಾವೇರಿ ನೀರಿನ ಲಭ್ಯತೆ ಅತ್ಯಂತ ಕಡಿಮೆ ಇದ್ದು, ಇದನ್ನು ಸುಪ್ರೀಂ ಕೋರ್ಟಿಗೆ (Supreme Court) ಮನವರಿಕೆ ಮಾಡುತ್ತೇವೆ. ಅಲ್ಲಿ ನಮಗೆ ನ್ಯಾಯ ಸಿಗುವ ಭರವಸೆಯಿದೆ. ಕಳೆದ 120 ವರ್ಷಗಳಲ್ಲೇ ಅತ್ಯಂತ ಕಷ್ಟದ ಸಂದರ್ಭವನ್ನು ಕರ್ನಾಟಕ ಎದುರಿಸುತ್ತಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 5,000 ಕ್ಯೂಸೆಕ್ ನೀರು ಬಿಡುಗಡೆಗೆ ಆದೇಶ ನೀಡಿದ್ದು ಇಷ್ಟೆಲ್ಲಾ ಸಂಕಷ್ಟಗಳಿಗೆ ದಾರಿ ಮಾಡಿಕೊಟ್ಟಿದೆ ಎಂದರು. ಇದನ್ನೂ ಓದಿ: ಕಾವೇರಿ ನೀರು ಹಂಚಿಕೆ ಸಂಕಷ್ಟ – ದಿಲ್ಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಭೇಟಿಯಾದ ಡಿಕೆಶಿ

    ರಾಜ್ಯದ ನೆಲ-ಜಲದ ಸಂರಕ್ಷಣೆಗೆ ಸದಾ ಬೆನ್ನೆಲುಬಾಗಿ ನಾವು ನಿಲ್ಲುತ್ತೇವೆ ಎಂದು ಸಭೆಗೆ ಬಂದಿದ್ದ ಬಿಜೆಪಿ, ಕಾಂಗ್ರೆಸ್, ಜನತಾ ದಳ ಮತ್ತು ಪಕ್ಷೇತರ ಸಂಸದರು ಹಾಗೂ ರಾಜ್ಯಸಭಾ ಸದಸ್ಯರಿಗೆ ಕರ್ನಾಟಕ ಸರ್ಕಾರ ಅಭಾರಿಯಾಗಿರುತ್ತದೆ ಎಂದು ಧನ್ಯವಾದ ತಿಳಿಸಿದರು. ಇದನ್ನೂ ಓದಿ: ಹಳೆ ಸಂಸತ್‌ ಭವನದ ಮುಂದಿನ ಕಥೆ ಏನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾವೇರಿ, ಮಹದಾಯಿ ವಿಚಾರವಾಗಿ ಆಗಸ್ಟ್ 23ರಂದು ಸರ್ವಪಕ್ಷ ಸಭೆ: ಡಿಕೆಶಿ

    ಕಾವೇರಿ, ಮಹದಾಯಿ ವಿಚಾರವಾಗಿ ಆಗಸ್ಟ್ 23ರಂದು ಸರ್ವಪಕ್ಷ ಸಭೆ: ಡಿಕೆಶಿ

    ಬೆಂಗಳೂರು: ಮಹದಾಯಿ, ಕಾವೇರಿ ನೀರು (Kaveri Water) ವಿಚಾರವಾಗಿ ಇದೇ ಆಗಸ್ಟ್ 23 ರಂದು ಸರ್ವಪಕ್ಷಗಳ ಸಭೆ ನಡೆಯಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ (All Party Meeting) ನಡೆಯಲಿದೆ. ಸಭೆಗೆ ಸಿಎಂ ಅವರೇ ದಿನಾಂಕ ನಿಗದಿ ಮಾಡಿದ್ದು, ಎಲ್ಲ ಸಂಸದರನ್ನ ಆಹ್ವಾನಿಸಲಾಗಿದೆ. ಸಭೆಯಲ್ಲಿ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ.

    ಇದೇ ವೇಳೆ ಆ.21ರಂದು ಮಾಜಿ ಕಾರ್ಪೊರೇಟರ್ಸ್ ಸೇರಿದಂತೆ ಹಲವರ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾರೂ ಅರ್ಜಿ ಹಾಕಿಲ್ಲ, ಮುಂದೆ ಕಾದು ನೋಡಬೇಕು. ಅವರವರ ಬದುಕು ಭವಿಷ್ಯ ನೋಡಿಕೊಳ್ತಾರೆ. ಸಿಟಿ ರವಿ ಹಿರಿಯರಿದ್ದಾರೆ, ಅವರು ಬೆದರಿಕೆಯೊಡ್ಡುತ್ತಿದ್ದಾರೆ, ಕೈಕತ್ತರಿಸಿಬಿಡ್ತೀವಿ ಅಂತಾ? ಜೆಡಿಎಸ್, ಕಾಂಗ್ರೆಸ್ ಶಾಸಕರನ್ನ ಕರ್ಕೊಂಡು ಮಜಾ ಮಾಡಿದ್ರಲ್ಲ ಆವಾಗ ಏನಾಗಿತ್ತು? ಅವರ ರಾಜಕಾರಣ ಅವರು ಮಾಡಲಿ, ನಿಮಗೆ ಬರೋ ಬೆದರಿಕೆ ತರ, ಬೇರೆಯವರಿಗೂ ಬರುತ್ತೆ. ನಾವು ಯಾರನ್ನೂ ಕರೀತಿಲ್ಲ. ನಮಗಿರೋ ನಂಬರ್‌ಗೆ ಯಾರೂ ಅವಶ್ಯಕತೆ ಇಲ್ಲ. ಆದ್ರೆ ಪಕ್ಷಕ್ಕೆ ಬರೋರನ್ನ ನಾನು ತಡೆಯೋಕೆ ಆಗುತ್ತಾ? ಕೋಳಿ ಕೇಳಿ ಮಸಾಲೆ ಅರಿಯೋಕೆ ಆಗುತ್ತಾ? ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಸರ್ಕಾರಕ್ಕೆ ಶಾಕ್‌ ಕೊಟ್ಟ ಮದ್ಯಪ್ರಿಯರು – ಮದ್ಯ ಮಾರಾಟ ಪ್ರಮಾಣ 15% ಇಳಿಕೆ

    ಎರಡೂವರೆ ವರ್ಷ ಆದ್ಮೇಲೆ ಸಚಿವ ಸ್ಥಾನ ಬಿಟ್ಟುಕೊಡಬೇಕೆಂಬ ಮುನಿಯಪ್ಪ ಹೇಳಿಕೆ ವಿಚಾರಕ್ಕೆ ಉತ್ತರಿಸಿದ ಡಿಸಿಎಂ, ಪಾರ್ಟಿ, ಹೈಕಮಾಂಡ್ ಏನ್ ಹೇಳುತ್ತೋ ಅದಕ್ಕೆ ಎಲ್ಲರೂ ಬದ್ಧರಾಗಿರಬೇಕು. ನಾವು ಯಾರು ಅದನ್ನ ಬಹಿರಂಗವಾಗಿ ಚರ್ಚೆ ಮಾಡುವ ವಿಷಯವಲ್ಲ. ಮುಂದಿನ ವಾರ ನಮ್ಮ ರಾಷ್ಟ್ರೀಯ ನಾಯಕರು ಬರುತ್ತಾರೆ, ಅವರ ಬಳಿ ಮಾತನಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3 ಸಕ್ಸಸ್ ಆಗುತ್ತೆ – ಕೋಡಿಮಠ ಶ್ರೀಗಳ ಭವಿಷ್ಯ

    Web Stories

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇಶದ ಒಂದು ಇಂಚು ಜಾಗವನ್ನು ಯಾರಿಗೂ ಬಿಟ್ಟು ಕೊಡಲ್ಲ: ಮೋದಿ

    ದೇಶದ ಒಂದು ಇಂಚು ಜಾಗವನ್ನು ಯಾರಿಗೂ ಬಿಟ್ಟು ಕೊಡಲ್ಲ: ಮೋದಿ

  • ಮೋದಿ ನೇತೃತ್ವದಲ್ಲಿ ಇಂದು ಸರ್ವ ಪಕ್ಷ ಸಭೆ – ಏನು ಚರ್ಚೆಯಾಗಬಹುದು?

    ಮೋದಿ ನೇತೃತ್ವದಲ್ಲಿ ಇಂದು ಸರ್ವ ಪಕ್ಷ ಸಭೆ – ಏನು ಚರ್ಚೆಯಾಗಬಹುದು?

    ನವದೆಹಲಿ: ಕಳೆದ ಮೂರು ದಿನಗಳಿಂದ ಗಡಿಯಲ್ಲಿ ಚೀನಾ ಉಪಟಳ ಹೆಚ್ಚಾಗಿದೆ. ಒಂದು ಕಡೆ ಮಾತುಕತೆ ನಡೆಸುತ್ತಿರುವ ಡ್ರ್ಯಾಗನ್ ಬೆನ್ನ ಹಿಂದೆ ಯುದ್ಧಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಚೀನಾದ ಬೆನ್ನು ಮುರಿಯುವ ಎಚ್ಚರಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ರವಾನಿಸಿದ್ದಾರೆ. ಈ ಬೆಳವಣಿಗಳ ನಡುವೆ ಇಂದು ಸಂಜೆ ಐದು ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಸರ್ವ ಪಕ್ಷದ ಸಭೆ ನಡೆಸಲಿದ್ದಾರೆ.

    ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗಗಳ ಬಗ್ಗೆ ಮಾಹಿತಿ ನೀಡುವಂತೆ ವಿಪಕ್ಷಗಳು ಒತ್ತಡ ಹೇರಿದ್ದವು. ಈ ಹಿನ್ನಲೆ ಇಂದು ಸಂಜೆ ಐದು ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ವ ಪಕ್ಷಗಳ ಸಭೆ ನಡೆಸಲಿದ್ದು ಗಡಿಯಲ್ಲಿ ನಡೆಯುತ್ತಿರುವ ಬಗ್ಗೆ ವಿವರಣೆ ನೀಡಲಿದ್ದಾರೆ.

    ಸಭೆಯಲ್ಲಿ ಕಾಂಗ್ರೆಸ್, ಸಿಪಿಐ, ಸಿಪಿಎಂ, ತೃಣ ಮೂಲ ಕಾಂಗ್ರೆಸ್, ಎನ್‍ಸಿಪಿ, ಶಿವಸೇನೆ, ಜೆಡಿಎಸ್, ಬಿಎಸ್ಪಿ, ಎಸ್ಪಿ, ಬಿಜೆಪಿ, ಆಮ್ ಅದ್ಮಿ, ಸೇರಿದಂತೆ ಸುಮಾರು 19 ವಿಪಕ್ಷಗಳ ನಾಯಕರು ಭಾಗಿಯಾಗುವ ಸಾಧ್ಯತೆ ಇದೆ.

    ಸಭೆಯಲ್ಲಿ ಏನು ಚರ್ಚೆಯಾಗಬಹುದು?
    * ಕಳೆದ ಒಂದು ತಿಂಗಳಿನಿಂದ ಗಾಲ್ವಾನ್ ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ವಿವರಣೆ.
    * ವಾಸ್ತವ ಗಡಿ ರೇಖೆಯಲ್ಲಿ ಚೀನಾ ಸೃಷ್ಟಿಸಿರುವ ಆತಂಕದ ಬಗ್ಗೆ ಮಾಹಿತಿ ಹಂಚಿಕೆ.
    * ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕಳೆದ ಒಂದು ತಿಂಗಳಿನಿಂದ ಚೀನಾ ಜೊತೆಗಿನ ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆ ಕುರಿತು ವಿವರಣೆ.
    * ಜೂನ್ 15 ರ ರಾತ್ರಿ ನಡೆದ ಭಾರತೀಯ ಸೈನಿಕರ ಮೇಲೆ ನಡೆದ ಹಲ್ಲೆಯ ಬಗ್ಗೆ ವರದಿ ನೀಡಬಹುದು.


    * ಸೇನಾ ಅಧಿಕಾರಿಗಳು ನೀಡಿದ ಮಾಹಿತಿಯನ್ನು ಆಧಾರಿಸಿ ಗಡಿ ಸಮಸ್ಯೆ ಇತ್ಯರ್ಥ ಮಾರ್ಗಗಳ ಬಗ್ಗೆ ಚರ್ಚೆ ನಡೆಸಬಹುದು.
    * ದೇಶದ 20 ಸೈನಿಕರ ವೀರ ಮರಣಕ್ಕೆ ಪ್ರತಿಕಾರವೇನು? ಚೀನಾದ ಪ್ರತಿಕ್ರಿಯೆ ಆಧರಿಸಿ ಭಾರತದ ತೆಗೆದುಕೊಳ್ಳಲಿರುವ ನಿಲುವುಗಳ ಕುರಿತು ವಿವರಣೆ ನೀಡಬಹುದು
    * ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ವಿಪಕ್ಷಗಳಿಂದ ಸಲಹೆ ಕೇಳಬಹುದು.
    * ಗಡಿ ಸಮಸ್ಯೆ ಉದ್ವಿಗ್ನವಾಗಿರುವ ಹಿನ್ನೆಲೆ ಸರ್ಕಾರ ತೆಗೆದುಕೊಳ್ಳಲಿರುವ ಎಲ್ಲ ನಿರ್ಧರಗಳಿಗೆ ವಿಪಕ್ಷಗಳು ಸಹಕಾರ ನೀಡುವಂತೆ ಮನವಿ ಮಾಡಬಹುದು.

    ಭಾರತದ ಇಪ್ಪತ್ತು ಸೈನಿಕರ ಸಾವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಿ ಮೋದಿ ಶಪಥ ಮಾಡಿದ್ದಾರೆ. ಪ್ರತಿಯೊಬ್ಬ ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಗುಡುಗಿದ್ದಾರೆ. ಈಗ ವಿಪಕ್ಷಗಳ ಸಭೆ ನಡೆಸುತ್ತಿರುವ ಪ್ರಧಾನಿ ಮೋದಿ ಜೂನ್ 21ರ ರಾಷ್ಟ್ರೀಯ ಭಾಷಣದಲ್ಲಿ ಮಹತ್ವದ ನಿರ್ಧಾರ ಘೋಷಿಸಬಹುದು.

  • ಕೊರೊನಾ ಕುರಿತ ಸರ್ವ ಪಕ್ಷಗಳ ಸಭೆ – ಏನು ನಿರ್ಣಯ ತೆಗೆದುಕೊಳ್ಳಲಾಗಿದೆ?

    ಕೊರೊನಾ ಕುರಿತ ಸರ್ವ ಪಕ್ಷಗಳ ಸಭೆ – ಏನು ನಿರ್ಣಯ ತೆಗೆದುಕೊಳ್ಳಲಾಗಿದೆ?

    ಬೆಂಗಳೂರು: ಕೊರೊನಾ ಕುರಿತು ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ವಪಕ್ಷಣಗಳ ಸಭೆ ನಡೆದಿದೆ. ಈ ಸಭೆಯಲ್ಲಿ ಕೊರೊನಾ ವಿರುದ್ಧ ರಾಜ್ಯ ಹೋರಾಡಲು ಬೇಕಾದ ಕೆಲ ನಿರ್ಣಯಗಳನ್ನು ತಗೆದುಕೊಳ್ಳಲಾಗಿದೆ.

    ಸಭೆ ಬಳಿಕ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ಸರ್ವ ಪಕ್ಷಗಳ ಸಭೆಯಲ್ಲಿ ನಾಯಕರು ಉಪಯುಕ್ತ ಸಲಹೆಗಳನ್ನು ನೀಡಿರುತ್ತಾರೆ. ಸರ್ಕಾರ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಅನುಷ್ಠಾನಕ್ಕೆ ತರಲಿದೆ. ಸರ್ವ ಪಕ್ಷದ ಮುಖಂಡರು ಸರ್ಕಾರದ ಕ್ರಮಗಳಿಗೆ ಒಕ್ಕೊರಲಿನ ಬೆಂಬಲ ವ್ಯಕ್ತಪಡಿಸಿ, ಈ ಸಂಕಷ್ಟದ ಸನ್ನಿವೇಶದಲ್ಲಿ ಸರ್ಕಾರದ ಜೊತೆ ಕೈಜೋಡಿಸುವುದಾಗಿ ಸಹಮತ ವ್ಯಕ್ತಪಡಿಸಿದರು ಎಂದು ತಿಳಿಸಿದ್ದಾರೆ.

    ಜೊತೆಗೆ ಸಭೆಯಲ್ಲಿ ನಾಯಕರು ಸಲಹೆ ನೀಡಿದಂತೆ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್‍ಗಳು ಹಾಗೂ ಅರೇ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನಗಳನ್ನು ಒದಗಿಸಲು ಕೂಡಲೇ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

    ರಾಜ್ಯದ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು. ಸೋಂಕಿಗೊಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.

    ರೈತರ ಕೃಷಿ ಉತ್ಪನ್ನಗಳ, ಸಾಗಣೆ, ಮಾರಾಟ ಮತ್ತು ಒಳಕೆದಾರರಿಗೆ ಸೂಕ್ತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು. ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಪಡಿತರವನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು. ಮುಸ್ಲಿಂ ಬಾಂಧವರ ಜೊತೆ ನಾನು ಸಭೆ ನಡೆಸಿದ್ದು, ಅವರೆಲ್ಲರೂ ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆಯನ್ನು ನಡೆಸಲು ಒಪ್ಪಿ ಸಹಕರಿಸಿರುತ್ತಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಸಿಎಂ ಸರ್ವ ಪಕ್ಷಗಳ ಸಭೆಯಲ್ಲಿ ತಗೆದುಕೊಂಡ ನಿರ್ಧಾರಗಳನ್ನು ತಿಳಿಸಿದರು.

    ಈ ಸಭೆಯಲ್ಲಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಜೆಡಿಎಸ್ ನಾಯಕರಾದ ಹೆಚ್.ಡಿ.ರೇವಣ್ಣ, ಬಸವರಾಜ್ ಹೊರಟ್ಟಿ, ಮಾಜಿ ಸಿಎಂ ಕುಮಾರಸ್ವಾಮಿ, ಸಚಿವರಾದ ಶ್ರೀರಾಮುಲು, ಸುಧಾಕರ್, ಬೊಮ್ಮಾಯಿ, ಲಕ್ಷ್ಮಣ್ ಸವದಿ, ಅಧಿಕಾರಿಗಳು ಉಪಸ್ಥಿತಿರಿದ್ದರು.