Tag: alliance government

  • ಸಿಎಂ ಖುರ್ಚಿಯ ಡೆಡ್ ಲೈನ್ ಸೋಮವಾರನಾ? ಮಂಗಳವಾರನಾ?

    ಸಿಎಂ ಖುರ್ಚಿಯ ಡೆಡ್ ಲೈನ್ ಸೋಮವಾರನಾ? ಮಂಗಳವಾರನಾ?

    ಬೆಂಗಳೂರು: ಸಿಎಂಗೆ ರಾಜ್ಯಪಾಲರು ವಿಧಿಸಿದ್ದ ಎರಡು ಡೆಡ್ ಲೈನ್‍ಗಳನ್ನು ದಾಟಿದ್ದು, ಸೋಮವಾರ ಸರ್ಕಾರ ಪತನವಾಗುತ್ತಾ? ಸೇಫ್ ಆಗುತ್ತಾ ಎನ್ನುವ ಪ್ರಶ್ನೆ ಎದ್ದಿದೆ.

    ರಾಜ್ಯಪಾಲರು ನೀಡಿದ ಎರಡು ಡೆಡ್‍ಲೈನ್ ಗಳಿಗೆ ರಾಜ್ಯ ಸರ್ಕಾರ ಡೋಂಟ್‍ಕೇರ್ ಎದ್ದಿದ್ದು ಈಗ ಸ್ಪೀಕರ್ ಅವರೇ ಸೋಮವಾರ ಎಲ್ಲದ್ದಕ್ಕೂ ಇತಿಶ್ರೀ ಹಾಡಲಾಗುವುದು ಎಂದು ಹೇಳಿದ್ದಾರೆ. ಆದರೆ ಸೋಮವಾರವೂ ವಿಶ್ವಾಸಮತಯಾಚನೆ ಮಾಡುವುದು ಅನುಮಾನ ಎನ್ನುವ ಮಾತು ಕೇಳಿ ಬಂದಿದೆ.

    ಕಳೆದ ಬುಧವಾರ ವಿಶ್ವಾಸ ಮತ ಯಾಚನೆ ಮಾಡಿರುವ ಮುಖ್ಯಮಂತ್ರಿಗಳು ಇನ್ನು ಚರ್ಚೆ ನಡೆಸುತ್ತಿದ್ದಾರೆ. ಈ ಮಧ್ಯೆ ಕಲಾಪಕ್ಕೆ ಗೈರಾಗಿರುವ ಶಾಸಕರಿಗೆ ವಿಪ್ ಅನ್ವಯವಾಗುತ್ತೋ ಇಲ್ಲವೋ ಎನ್ನುವ ಗೊಂದಲ ಪರಿಹಾರಕ್ಕೆ ಎರಡು ಪಕ್ಷ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ಈ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆಗೆ ಮಾನ್ಯ ಮಾಡಿದ್ದಲ್ಲಿ ಕೋರ್ಟ್ ಆದೇಶ ಬರುವವರೆಗೂ ವಿಶ್ವಾಸ ಮತಯಾಚನೆ ನಡೆಯುವುದು ಅನುಮಾನ.

    ಮೈತ್ರಿ ಪಕ್ಷಗಳ ನಾಯಕರು ಹೇಳಿಕೊಂಡಂತೆ ಸೋಮವಾರವೇ ವಿಶ್ವಾಸಮತ ಸಾಬೀತು ಮಾಡಲು ಹೋದರೆ ದೋಸ್ತಿಗಳಿಗೆ ಸಂಖ್ಯಾಬಲದ ಕೊರತೆ ಇದೆ. ಒಂದು ವೇಳೆ ವೋಟ್ ನಡೆದರೆ ಸರ್ಕಾರ ಪತನವಾಗಲಿದೆ.

    ಸೋಮವಾರವು ಚರ್ಚೆ ಮುಂದುವರಿದು ಸುಪ್ರೀಂ ಆದೇಶದ ನಂತರ ಮತಯಾಚನೆ ಮಾಡಲಾಗುವುದು ಎಂದು ಹೇಳಿದರೆ ರಾಜ್ಯಪಾಲರು ಸರ್ಕಾರವನ್ನು ವಜಾಗೊಳಿಸುವ ನಿರ್ಧಾರ ತೆಗೆದುಕೊಂಡರೆ ಸಿಎಂ ಮಂಗಳವಾರ ಮಾಜಿ ಆಗಬಹುದು. ಆದರೆ ವಿಪ್ ಪ್ರಕರಣ ಸುಪ್ರೀಂ ಅಂಗಳದಲ್ಲಿ ಇರುವ ಕಾರಣ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಬರುವುದು ಅಷ್ಟು ಸುಲಬ ಅಲ್ಲ ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ.

  • ಸಮ್ಮಿಶ್ರ ಸರ್ಕಾರಕ್ಕೆ ವಿಷಯಾಧಾರಿತ ಬಾಹ್ಯ ಬೆಂಬಲ: ಎನ್ ಮಹೇಶ್

    ಸಮ್ಮಿಶ್ರ ಸರ್ಕಾರಕ್ಕೆ ವಿಷಯಾಧಾರಿತ ಬಾಹ್ಯ ಬೆಂಬಲ: ಎನ್ ಮಹೇಶ್

    ರಾಮನಗರ: ಕಡೆಗೂ ಬಿಎಸ್‍ಪಿ ಶಾಸಕ ಎನ್.ಮಹೇಶ್ ತಮ್ಮ ನಿಲುವನ್ನು ಪ್ರಕಟಿಸಿದ್ದು, ಸಮಿಶ್ರ ಸರ್ಕಾರಕ್ಕೆ ವಿಷಯಾಧಾರಿತ ಬಾಹ್ಯ ಬೆಂಬಲ ನೀಡುವುದಾಗಿ ಸ್ಪಷ್ಟಪಡಿಸಿದ್ದಾರೆ.

    ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಮ್ಮಿಶ್ರ ಸರ್ಕಾರದ ಒಂದು ಭಾಗವಾಗಿದ್ದೆ. ಲೋಕಸಭಾ ಚುನಾವಣೆಯಲ್ಲಿ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಅವರ ಆದೇಶದ ಮೇಲೆ ಸಮಿಶ್ರ ಸರ್ಕಾರದ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೆವು. ಬಿಜೆಪಿ ಸೇರಿ 3 ಪಕ್ಷಕ್ಕೂ ನೀವು ಸ್ವತಂತ್ರವಾಗಿರಿ ಎಂದು ಮಾಯಾವತಿ ಅವರು 15 ದಿನಗಳ ಹಿಂದೆಯೇ ಹೇಳಿದ್ದಾರೆ ಎಂದು ತಿಳಿಸಿದರು.

    ನನಗೆ ಪ್ರತ್ಯೇಕ ಆಸನ ಕೊಡುವಂತೆ ಸ್ಪೀಕರ್‍ಗೆ ಮನವಿ ಮಾಡಿದ್ದೇನೆ. ಆದರೆ ಸಮ್ಮಿಶ್ರ ಸರ್ಕಾರಕ್ಕೆ ನಾನು ವಿಷಯಾಧಾರಿತ ಬಾಹ್ಯ ಬೆಂಬಲ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ತಿಳಿಸಿದರು.

    ಸಂಜೆಯವರೆಗೂ ಮಹೇಶ್ ಅವರು ಈ ಗುಟ್ಟನ್ನು ಬಿಟ್ಟುಕೊಟ್ಟಿರಲಿಲ್ಲ. ಇಂದು ರಾತ್ರಿ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಜೊತೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆ. ಮಾಯಾವತಿ ಅವರ ತೀರ್ಮಾನವೇ ಅಂತಿಮ. ಸದನಕ್ಕೆ ಹಾಜರಾಗುತ್ತೇನೆ. ಮತ ಯಾರಿಗೆ ಹಾಕಬೇಕು ಎಂಬುದನ್ನು ಮಾಯಾವತಿಯವರು ತೀರ್ಮಾನಿಸುತ್ತಾರೆ. ಅವರ ಸೂಚನೆಯಂತೆ ನಾಳೆ ಮತ ಹಾಕುತ್ತೇನೆ ಎಂದು ಹೇಳಿದ್ದರು. ಇದೀಗ ಅಂತಿಮವಾಗಿ ತಮ್ಮ ನಿರ್ಧಾರ ತಿಳಿಸಿದ್ದಾರೆ.

    ಅತೃಪ್ತ ಶಾಸಕರು ರಾಜೀನಾಮೆ ನೀಡಿದ ಆರಂಭದಲ್ಲಿ ನಾನು ಮೈತ್ರಿ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದ್ದರು. ಆದರೆ, ಕೆಲವೇ ದಿನಗಳಲ್ಲಿ ತಮ್ಮ ನಿರ್ಧಾರ ಬದಲಿಸಿ, ನಾನು ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡುವುದಿಲ್ಲ. ನನಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಿ ಎಂದು ಸ್ಪೀಕರ್‍ಗೆ ಮನವಿ ಮಾಡುವ ಮೂಲಕ ಅಚ್ಚರಿಯನ್ನುಂಟು ಮಾಡಿದ್ದರು. ಇದೀಗ ನಾಳೆಯೇ ಮೈತ್ರಿ ಸರ್ಕಾರ ವಿಶ್ವಾಸ ಮತ ಯಾಚಿಸಬೇಕಿದ್ದು, ಸಂಜೆಯವರೆಗೂ ಎನ್.ಮಹೇಶ್ ನಡೆ ನಿಗೂಢವಾಗಿತ್ತು.

    ಮೈತ್ರಿ ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಹಿಂಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಎನ್.ಮಹೇಶ್, ನಾನೀಗ ತಾಂತ್ರಿಕವಾಗಿ ಸಮ್ಮಿಶ್ರ ಸರ್ಕಾರದ ಭಾಗವಾಗಿಲ್ಲ, ವಿರೋಧ ಪಕ್ಷದಲ್ಲಿದ್ದೇನೆ. ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಅವರು ಹೇಳಿದರೆ ಖಂಡಿತ ಬಿಜೆಪಿಗೆ ಬೆಂಬಲ ನೀಡುತ್ತೇನೆ. ನಾನು ಬಿಎಸ್‍ಪಿಯ ಕಟ್ಟಾ ಕಾರ್ಯಕರ್ತ, ಬಿಎಸ್‍ಪಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ನಾನು ಬಿಎಸ್‍ಪಿ ಪಕ್ಷ ತೊರೆದು ಬಿಜೆಪಿಗೆ ಹೋಗುವುದು ಕೇವಲ ವದಂತಿಯಷ್ಟೇ ಎಂದು ಹೇಳಿದ್ದರು.

  • ಅತೃಪ್ತರ ವಿರುದ್ಧ ಯಾವ ಕ್ರಮ ಕೈಗೊಳ್ಳಬಹುದು – ಸ್ಪೀಕರ್ ಕಚೇರಿಯಲ್ಲಿ ದೋಸ್ತಿಗಳಿಂದ ಚರ್ಚೆ

    ಅತೃಪ್ತರ ವಿರುದ್ಧ ಯಾವ ಕ್ರಮ ಕೈಗೊಳ್ಳಬಹುದು – ಸ್ಪೀಕರ್ ಕಚೇರಿಯಲ್ಲಿ ದೋಸ್ತಿಗಳಿಂದ ಚರ್ಚೆ

    ಬೆಂಗಳೂರು: ಅತೃಪ್ತ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲೇಬೇಕೆಂದು ಮೈತ್ರಿ ನಾಯಕರು ತೀರ್ಮಾನಿಸಿದ್ದು, ಕೋರ್ಟ್ ಬಿಗ್ ರಿಲೀಫ್ ನೀಡಿದ ಹಿನ್ನೆಲೆಯಲ್ಲಿ ಸದನದ ಮೂಲಕ ಕ್ರಮ ಕೈಗೊಳ್ಳಬಹುದೇ ಎಂಬ ದಾರಿಯನ್ನು ಹುಡುಕುತ್ತಿದ್ದಾರೆ.

    ಈ ಸಂಬಂಧ ದೋಸ್ತಿ ನಾಯಕರು ಸ್ಪೀಕರ್ ರಮೇಶ್ ಕುಮಾರ್ ಜೊತೆ ಚರ್ಚೆ ನಡೆಸಿ ಮಾತನಾಡಿದ್ದಾರೆ. ಸ್ಪೀಕರ್ ಭೇಟಿಯ ಬಳಿಕ ಸಚಿವ ಕೃಷ್ಣಭೈರೇಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸದನದಿಂದ ಹೊರಗುಳಿದರೆ ಕ್ರಮ ಕೈಗೊಳ್ಳಲು ಸಾಧ್ಯವಿದೆಯೇ? ಶಾಸಕಾಂಗ ಪಕ್ಷದ ನಿರ್ದೇಶನ ಉಲ್ಲಂಘಿಸಿದ್ದಕ್ಕೆ ಕ್ರಮ ಕೈಗೊಳ್ಳಬಹುದೇ ಎನ್ನುವುದರ ಕುರಿತು ಸ್ಪಷ್ಟೀಕರಣ ಪಡೆಯಲು ಸ್ಪೀಕರ್ ಭೇಟಿಯಾಗಿದ್ದೆವು ಎಂದು ಸ್ಪಷ್ಟಪಡಿಸಿದರು.

    ಸದನದಲ್ಲಿ ಭಾಗವಹಿಸಬೇಕೋ? ಬೇಡವೋ ಎನ್ನುವುನ್ನು ಕೋರ್ಟ್ ಶಾಸಕರ ವಿವೇಚನೆ ಬಿಟ್ಟಿದೆ. ಈ ಮೂಲಕ ಸುಪ್ರೀಂ ಕೋರ್ಟ್ ನಾವು ವಾದ ಮಂಡಿಸಲು ಅವಕಾಶವನ್ನೂ ನೀಡದೇ ನಮ್ಮನ್ನು ವಿಚಾರಣೆಗೂ ಕರೆಯದೆ, ತೀರ್ಪು ನೀಡಿ ನಮ್ಮ ಹಕ್ಕುಗಳನ್ನು ಕಟ್ಟಿ ಹಾಕಿದೆ ಎಂದರು.

    ವಿಪ್ ಜಾರಿಗೊಳಿಸುವುದು ಶಾಸಕಾಂಗ ಪಕ್ಷಗಳ ಹಕ್ಕು. ಅಲ್ಲದೆ, ಶಾಸಕರು ಸದನದಲ್ಲಿ ಭಾಗವಹಿಸುವುದಕ್ಕೆ ವಿನಾಯಿತಿ ನೀಡುವುದು ಹಕ್ಕು ಕಿತ್ತುಕೊಂಡಂತೆ. ಸದನದ ಹೊರಗುಳಿದರೆ, ಕ್ರಮ ಕೈಗೊಳ್ಳುವ ನಿಯಮ ಸದನಲ್ಲಿದೆ. ಆ ಕ್ರಮಕ್ಕೆ ವಿನಾಯಿತಿ ಇದೆಯೇ ಎಂದು ಸ್ಪೀಕರ್ ಬಳಿ ಪ್ರಶ್ನಿಸಿದೆವು. ಇದಕ್ಕೆ ಸ್ಪೀಕರ್ ಉತ್ತರಿಸಿ, ಸದನದ ಹೊರಗುಳಿಯಬೇಕಿದ್ದರೆ ಸದನದ ಒಪ್ಪಿಗೆ ಪಡೆಯಬೇಕು. ಇಲ್ಲವೆ, ಸಭಾಧ್ಯಕ್ಷರ ಮೂಲಕ ಅನುಮತಿ ಪಡೆಯಬೇಕು ಎಂಬ ನಿಯಮ ಕರ್ನಾಟಕದಲ್ಲಿದೆ. ಇದಕ್ಕೂ ವಿನಾಯಿತಿ ನೀಡಲಾಗಿದೆಯೇ ಎಂದು ನಾವು ಪ್ರಶ್ನಿಸಿದ್ದೇವೆ. ಇದಕ್ಕೆ ಸ್ಪೀಕರ್ ಉತ್ತರಿಸಿ, ಹೊರಗುಳಿದರೆ ಸದನದ ಒಪ್ಪಿಗೆ ಪಡೆಯಲೇಬೇಕೆಂದು ತಿಳಿಸಿದ್ದಾರೆ ಎಂದು ಕೃಷ್ಣ ಬೈರೇಗೌಡ ಮಾಹಿತಿ ನೀಡಿದರು.

    ವಿಪ್ ಜಾರಿ ಕುರಿತು ಸಹ ಸ್ಪೀಕರ್ ಸ್ಪಷ್ಟಪಡಿಸಿದ್ದು, ನೀವು ನೀಡಿರುವ ಶಾಸಕಾಂಗ ಪಕ್ಷಗಳ ಹಕ್ಕುಗಳು ನಿಮ್ಮ ವಿವೇಚನೆಗೆ ಬಿಟ್ಟದ್ದು, ಅದರ ಕುರಿತು ನಾನು ಸ್ಪಷ್ಟೀಕರಣ ನೀಡಲು ಸಾಧ್ಯವಿಲ್ಲ. ಆದರೆ, ನಿಮಗಿರುವ ಹಕ್ಕುಗಳ ಪ್ರಕಾರ, ನಿಮ್ಮ ನಿರ್ದೇಶನ ಉಲ್ಲಂಘನೆಯಾಗಿದ್ದಲ್ಲಿ ಸಂವಿಧಾನದ 10ನೇ ಶೆಡ್ಯೂಲ್ ಪ್ರಕಾರ, ಶಾಸಕಾಂಗ ಪಕ್ಷಗಳು ನನಗೆ ಅರ್ಜಿ ಸಲ್ಲಿಸಿದರೆ, ಕರೆದು ವಿಚಾರಣೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.

    ಅತೃಪ್ತ ಶಾಸಕರ ವಿರುದ್ಧ ಏನು ನಿರ್ಧಾರ ಕೈಗೊಳ್ಳಬೇಕು ಎನ್ನುವುದರ ಬಗ್ಗೆ ಪಕ್ಷಗಳು ಸಭೆ ನಡೆಸಿ ನಾಳೆಯೊಳಗೆ ನಿರ್ಧಾರ ಕೈಗೊಳ್ಳುತ್ತವೆ. ವಿಪ್ ನೀಡುವ ಕುರಿತು ಪಕ್ಷದ ಮಟ್ಟದಲ್ಲಿ ತೀರ್ಮಾನ ಮಾಡಲಾಗುವುದು. ಇಲ್ಲಿಯವರೆಗೆ ಚರ್ಚೆ ನಡೆದ ಪ್ರಕಾರ ವಿಪ್ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

  • ಸುಧಾಕರ್, ಎಂಟಿಬಿಯನ್ನು ಸ್ವಾಗತಿಸಿದ ಜಾರಕಿಹೊಳಿ, ನಾಗೇಶ್

    ಸುಧಾಕರ್, ಎಂಟಿಬಿಯನ್ನು ಸ್ವಾಗತಿಸಿದ ಜಾರಕಿಹೊಳಿ, ನಾಗೇಶ್

    ಬೆಂಗಳೂರು: ಮೈತ್ರಿ ನಾಯಕರ ಮನವೊಲಿಕೆಗೂ ಜಗ್ಗದೇ ಅಂತೂ ಎಂಟಿಬಿ ನಾಗರಾಜ್ ಮುಂಬೈನ ಹೋಟೆಲ್‍ನಲ್ಲಿರುವ ಶಾಸಕರನ್ನು ಸೇರಿದ್ದು, ಬಿಜೆಪಿ ಮುಖಂಡ ಆರ್.ಅಶೋಕ್ ಸಹ ಅವರಿಗೆ ಸಾಥ್ ನೀಡಿದ್ದಾರೆ.

    ಶಾಸಕ ಸುಧಾಕರ್ ಅವರೊಂದಿಗೆ ಎಂಟಿಬಿ ನಾಗರಾಜ್ ಅತೃಪ್ತರ ತಂಡ ಸೇರಿದ್ದು, ಮುಂಬೈ ವಿಮಾನ ನಿಲ್ದಾಣದಿಂದ ನೇರವಾಗಿ ಅತೃಪ್ತ ಶಾಸಕರಿರುವ ರೆನೈಸನ್ಸ್ ಹೋಟೆಲ್‍ಗೆ ತೆರಳಿದ್ದಾರೆ. ಸುಧಾಕರ್ ಮೊದಲೇ ಮುಂಬೈ ವಿಮಾನ ನಿಲ್ದಾಣ ತಲುಪಿದ್ದು, ಎಂಟಿಬಿ ನಾಗರಾಜ್ ಅವರಿಗಾಗಿ ಕಾದು ಅವರು ಆಗಮಿಸಿದ ನಂತರ ಅವರೊಟ್ಟಿಗೆ ಹೋಟೆಲ್‍ಗೆ ತೆರಳಿದ್ದಾರೆ. ಇಬ್ಬರೂ ಸಹ ಮುಂಬೈನ ರೆನೈಸಾನ್ಸ್ ಹೊಟೇಲ್‍ಗೆ ತೆರಳುವ ಮೂಲಕ ಮೈತ್ರಿ ಪಕ್ಷದ ನಾಯಕರ ಆಸೆಗೆ ತಣ್ಣೀರೆರೆಚಿದ್ದಾರೆ.

    ರಮೇಶ್ ಜಾರಕಿಹೊಳಿ, ಆರ್.ಶಂಕರ್ ಹಾಗೂ ನಾಗೇಶ್ ಮೂವರು ಶಾಸಕರು ಹೋಟೆಲ್‍ನಿಂದ ಹೊರ ಬಂದು ಮುಂಬೈಗೆ ಆಗಮಿಸಿದ ಎಂಟಿಬಿ ಹಾಗೂ ಸುಧಾಕರ್ ಅವರನ್ನು ಸ್ವಾಗತಿಸಿದ್ದಾರೆ.

    ಇಂದು ಇಬ್ಬರು ಶಾಸಕರು ಆಗಮಿಸುವ ಮೂಲಕ ಮುಂಬೈನಲ್ಲಿ ಅತೃಪ್ತ ಶಾಸಕರ ಬಲ ದಿನೇ ದಿನೇ ಹೆಚ್ಚುತ್ತಿದೆ. ಇದೀಗ ಅತೃಪ್ತರ ಸಂಖ್ಯೆ 11 ರಿಂದ 14ಕ್ಕೆ ಏರಿಕೆಯಾಗಿದೆ. ಈ ಮೂಲಕ ಅತೃಪ್ತರಲ್ಲಿ ವಿಶ್ವಾಸ ಇನ್ನೂ ಇಮ್ಮಡಿಯಾಗಿದ್ದು, ಮುಂಬೈನಿಂದಲೇ ಅತೃಪ್ತ ಶಾಸಕರು ಬಲ ಪ್ರದರ್ಶನ ಮಾಡುತ್ತಿದ್ದಾರೆ.

    ನಿನ್ನೆ ರಾತ್ರಿಯೇ ಶಾಸಕ ಮುನಿರತ್ನ ಮುಂಬೈಗೆ ತೆರಳಿದ್ದು, ಇಂದು ಸುಧಾಕರ್ ಹಾಗೂ ಎಂಟಿಬಿ ಸೇರಿದ್ದಾರೆ. ಈ ಮೂಲಕ ವಿಶ್ವಾಸಮತಯಾಚನೆಗೆ ತೆರಳದೇ ಮುಂಬೈನಿಂದಲೇ ಸರ್ಕಾರ ಉರುಳಿಸಲು ಅತೃಪ್ತರ ಶಾಸಕರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳವಾರದ ಸುಪ್ರೀಂಕೋರ್ಟ್ ತೀರ್ಪು ನೋಡಿ ರಾಜ್ಯಕ್ಕೆ ಮರಳುವ ಬಗ್ಗೆ ಶಾಸಕರು ಚಿಂತನೆ ನಡೆಸಿದ್ದಾರೆ.

    ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಎಂಟಿಬಿ ಅವರು, ಸುಧಾಕರ್ ಅವರನ್ನು ಸಂಪರ್ಕ ಮಾಡಿ ಅವರ ಜೊತೆ ಮಾತನಾಡಿ ನಾವು ನಿರ್ಧರಿಸುತ್ತೇವೆ. ಅಲ್ಲದೆ ಸುಧಾಕರ್ ಜೊತೆ ಮುಂದಿನ ನಡೆಯ ಬಗ್ಗೆ ಚರ್ಚೆ ಮಾಡುತ್ತೇನೆ. ನಾವಿಬ್ಬರೂ ಜೊತೆಯಾಗಿಯೇ ರಾಜೀನಾಮೆ ನೀಡಿದ್ದೇವು. ಇದ್ದರೆ ಪಾರ್ಟಿಯಲ್ಲಿ ಇಬ್ಬರೂ ಇರಬೇಕು, ಹೋದರೆ ಇಬ್ಬರೂ ಹೋಗಬೇಕು ಅಂದುಕೊಂಡು ಬಂದಿದ್ದೇವು. ಅದರಂತೆಯೇ ಸುಧಾಕರ್ ಮನವೊಲಿಸಬೇಕು ಎಂದು ಹೇಳಿದ್ದರು.

    ಅತೃಪ್ತ ಶಾಸಕ ಎಂಟಿಬಿ ನಾಗರಾಜ್ ಮನವೊಲಿಸಲು ಶನಿವಾರ ದಿನವಿಡೀ ಕಾಂಗ್ರೆಸ್ ಯತ್ನಿಸಿತು. ಆದರೆ ಎಂಟಿಬಿ ಮಾತ್ರ ಬಗ್ಗಿರಲಿಲ್ಲ. ಸಿದ್ದರಾಮಯ್ಯ ಇದ್ದರು ಎಂಬ ಕಾರಣಕ್ಕೆ ಆಯ್ತು ರಾಜೀನಾಮೆ ವಾಪಸ್ ಪಡೆಯುವುದಾಗಿ ಹೇಳಿದ್ದರು. ಆದರೆ, ಇದಾದ ಕೇವಲ ಐದು ನಿಮಿಷದಲ್ಲಿ ಎಂಟಿಬಿ ಸ್ವರ ಬದಲಾಗಿತ್ತು. ಹಳೆ ನಿಲುವಿಗೆ ಅಂಟಿಕೊಂಡಿದ್ದು, ಸುಧಾಕರ್ ಜೊತೆ ಚರ್ಚೆ ನಡೆಸಿದ ಬಳಿಕವಷ್ಟೇ ಅಂತಿಮ ತೀರ್ಮಾನ ಎಂದು ಪ್ರಕಟಿಸಿದ್ದರು.

    ಇತ್ತ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಸುಧಾಕರ್ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಅವರು ಮುಂಬೈನಿಂದ ವಾಪಸ್ ಬರುತ್ತಾರೆ ಎಂಬ ನಂಬಿಕೆ ನನಗಿದೆ. ವಿಶ್ವಾಸ ಮತಯಾಚನೆ ವೇಳೆಗೆ ಎಲ್ಲ ಅತೃಪ್ತ ಶಾಸಕರ ಮನವೊಲಿಕೆ ಯತ್ನಿಸುತ್ತೇವೆ ಎಂದು ತಿಳಿಸಿದ್ದರು. ಆದರೆ ಈಗ ಎಂಟಿಬಿ ಅವರು ಕೂಡ ಮುಂಬೈನತ್ತ ಪ್ರಯಾಣ ಬೆಳೆಸಿರುವುದು ದೋಸ್ತಿ ಪಕ್ಷದಲ್ಲಿ ಬಿರುಗಾಳಿ ಎಬ್ಬಿಸಿದೆ.

  • ಮೈತ್ರಿ ಸರ್ಕಾರ ಸತ್ತೋಗಿದೆ, ವೈದ್ಯರು ಘೋಷಿಸಿದ್ದಾರೆ, ಡೆಡ್‍ಬಾಡಿ ವಾಸನೆ ಬರ್ತಿದೆ- ನಡಹಳ್ಳಿ

    ಮೈತ್ರಿ ಸರ್ಕಾರ ಸತ್ತೋಗಿದೆ, ವೈದ್ಯರು ಘೋಷಿಸಿದ್ದಾರೆ, ಡೆಡ್‍ಬಾಡಿ ವಾಸನೆ ಬರ್ತಿದೆ- ನಡಹಳ್ಳಿ

    ಬೆಂಗಳೂರು: ಈ ಸರ್ಕಾರ ಸತ್ತು ಹೋಗಿ ಬಹಳ ದಿನಗಳಾಗಿದೆ. ಇದನ್ನು ವೆಂಟಿಲೇಟರ್ ಮೇಲೆ ಇಟ್ಟಿದ್ದಾರೆ. ಜೀವ ಹೋಗಿದೆ ಎಂದು ವೈದ್ಯರು ಕೂಡ ಘೋಷಿಸಿ ಆಗಿದೆ ಎಂದು ಬಿಜೆಪಿ ಶಾಸಕ ನಡಹಳ್ಳಿ ಅವರು ದೋಸ್ತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾನ್ಯ ಸಿಎಂ ಅವರು ಬಹುಮತವನ್ನು ಕಳೆದುಕೊಂಡಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಬಹುದೊಡ್ಡ ಗೊಂದಲ ಏರ್ಪಟ್ಟಿದೆ ಎಂದು ಅವರೇ ಹೇಳಿದ್ದಾರೆ. ಆದರೆ ಅವರು ತಕ್ಷಣ ರಾಜೀನಾಮೆ ನೀಡಬೇಕಿತ್ತು ಅಥವಾ ವಿಶ್ವಾಸ ಮತಯಾಚನೆ ಕೇಳಬೇಕು ಎಂದಿದ್ದರೆ ಶುಕ್ರವಾರವೇ ಕೇಳಬೇಕಿತ್ತು. ಆದರೆ ನಾನು ಬುಧವಾರ, ಗುರುವಾರ ಕೇಳುತ್ತೇನೆ ಎಂಬುದನ್ನು ಬಿಟ್ಟು ಸೋಮವಾರವೇ ವಿಶ್ವಾಸ ಮತಯಾಚನೆ ಕೇಳಲಿ ನಾವೆಲ್ಲ ತಯಾರಾಗಿದ್ದೇವೆ ಎಂದರು.

    ಈ ಸರ್ಕಾರ ಸತ್ತು ಹೋಗಿ ಬಹಳ ದಿನವಾಗಿದೆ. ಇದನ್ನು ವೆಂಟಿಲೇಟರ್ ಮೇಲೆ ಇಟ್ಟಿದ್ದಾರೆ. ಜೀವ ಹೋಗಿದೆ ಎಂದು ವೈದ್ಯರು ಘೋಷಿಸಿ ಆಗಿದೆ. ಇನ್ನೇನಿದ್ದರೂ ಸಂಬಂಧಿಕರು ಬರುತ್ತಾರೆ ಇರಿ, ಸ್ವಲ್ಪ ಇರಿ ಎಂದು ಸ್ಪೀಕರ್ ಮೂಲಕ ಡೆಡ್ ಬಾಡಿಯನ್ನು ಇಟ್ಟುಕೊಂಡಿದ್ದಾರೆ. ಸ್ಪೀಕರ್ ಕೂಡ ಈ ಸರ್ಕಾರ ಸತ್ತೋಗಿದೆ ಎಂದಿದ್ದಾರೆ. ಆದರೆ ವೆಂಟಿಲೇಟರ್ ತೆಗೆಯಬೇಡಿ ಎಂದು ಸ್ಪೀಕರ್ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಸರ್ಕಾರದ ಬಗ್ಗೆ ನಡಹಳ್ಳಿ ವ್ಯಂಗ್ಯವಾಡಿದ್ದಾರೆ.

    ನಮ್ಮ ಸಂಬಂಧಿಕರು ಮುಂಬೈನಲ್ಲಿದ್ದಾರೆ ಬರುತ್ತಾರೆ ಎಂದು ಈ ಸರ್ಕಾರವನ್ನು ಇರಿಸಿಕೊಂಡಿದ್ದಾರೆ. ಆದರೆ ಈ ಸರ್ಕಾರದ ಸತ್ತಿರುವ ಡೆಡ್‍ಬಾಡಿಯ ವಾಸನೆ ಇಡೀ ರಾಜ್ಯದ 6.5 ಕೋಟಿಯ ಮನೆಯವರ ಬಾಗಿಲಿಗೆ ಹೋಗಿ ಮೂಗಿಗೆ ಹೊಡೆಯುತ್ತಿದೆ. ಈಗಾಗಲೇ ಸರ್ಕಾರ ಸತ್ತು ಆರು ದಿನವಾಗಿದೆ. ದಯವಿಟ್ಟು ಈ ಸತ್ತು ಹೋಗಿರುವ ಡೆಡ್‍ಬಾಡಿಯ ವಾಸನೆ ಎಲ್ಲ ಕಡೆ ಹರಡಲು ಬಿಡಬೇಡಿ. ವೆಂಟಿಲೇಟರ್ ಅನ್ನು ಸೋಮವಾರ ಬೆಳಗ್ಗೆ 10 ಗಂಟೆಗೆ ತೆಗೆಯಿರಿ ಎಂದು ಸ್ಪೀಕರ್ ಬಳಿ ನಡಹಳ್ಳಿ ಮನವಿ ಮಾಡಿಕೊಂಡಿದ್ದಾರೆ.

  • ನಿಂಬೆ ಹಣ್ಣು ರೇವಣ್ಣನ ವಾಮಾಚಾರ ಸಫಲವಾಗಲ್ಲ: ರೇಣುಕಾಚಾರ್ಯ

    ನಿಂಬೆ ಹಣ್ಣು ರೇವಣ್ಣನ ವಾಮಾಚಾರ ಸಫಲವಾಗಲ್ಲ: ರೇಣುಕಾಚಾರ್ಯ

    ಬೆಂಗಳೂರು: ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ನಾಯಕರು ವಿವಿಧ ಮಾರ್ಗಗಳನ್ನು ಅನುಸರಿಸುತ್ತಿದ್ದು, ನಿಂಬೆ ಹಣ್ಣು ರೇವಣ್ಣ ವಾಮಾಚಾರಕ್ಕೆ ಮುಂದಾಗಿದ್ದಾರೆ. ಅವರ ವಾಮಾಚಾರ ಸಫಲವಾಗುವುದಿಲ್ಲ ಎಂದು ಶಾಸಕ ರೇಣುಕಾಚಾರ್ಯ ಹರಿಹಾಯ್ದಿದ್ದಾರೆ.

    ಬಿಜೆಪಿ ಶಾಸಕರ ರೆಸಾರ್ಟ್ ವಾಸ್ತವ್ಯದ ಕುರಿತು ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾವೆಲ್ಲ ಒಟ್ಟಿಗಿದ್ದೇವೆ, ರಿವರ್ಸ್ ಆಪರೇಷನ್ ಭಯ ಇಲ್ಲ. ನಮಗೆಲ್ಲ ಸಂಸ್ಕೃತಿ, ಸಂಸ್ಕಾರ ಇದೆ. ಮುಖ್ಯಮಂತ್ರಿ ವಾಮಮಾರ್ಗ ಅನುಸರಿಸುತ್ತಿದ್ದಾರೆ. ಸಿಎಂ ಕೀಳು ಮಟ್ಟದ ರಾಜಕಾರಣ ನಡೆಸುತ್ತಿದ್ದಾರೆ. ರಿವರ್ಸ್ ಆಪರೇಷನ್ ನಡೆಯಲ್ಲ. ಗೌರವದಿಂದ ಸಿಎಂ ಅವರು ರಾಜೀನಾಮೆ ನೀಡಿ ಹೋಗಬೇಕು. ನಿಂಬೆ ಹಣ್ಣು ರೇವಣ್ಣ ವಾಮಾಚಾರ ಮಾಡಿಸುತ್ತಿದ್ದು, ರೇವಣ್ಣ ಅವರ ವಾಮಾಚಾರ ಸಫಲ ಆಗುವುದಿಲ್ಲ. ರೇವಣ್ಣ ಅವರ ವಾಮಾಚಾರದಿಂದಲೇ ದೇವೇಗೌಡರು ಹಾಸನ ಬಿಟ್ಟು ಬರುವಂತಾಯಿತು ಎಂದು ಗುಡುಗಿದರು.

    ಎಷ್ಟು ದಿನ ರೆಸಾರ್ಟ್ ವಾಸ್ತವ್ಯ ಎಂದು ನಮ್ಮ ನಾಯಕರು ತೀರ್ಮಾನಿಸುತ್ತಾರೆ. ಸೋಮವಾರದವರೆಗೋ ಇಲ್ಲವೆ ಬುಧವಾರದವರೆಗೋ ಎಂಬುದನ್ನು ಯಡಿಯೂರಪ್ಪನವರು ನಿರ್ಧರಿಸುತ್ತಾರೆ. ನಾವು ಯಾರೂ ಕ್ಷೇತ್ರವನ್ನು ನಿರ್ಲಕ್ಷಿಸಿಲ್ಲ. ಸೋಮವಾರ ಇಲ್ಲಿಂದಲೇ ಒಟ್ಟಿಗೆ ಸದನಕ್ಕೆ ಹೋಗುತ್ತೇವೆ ಎಂದು ರೇಣುಕಾಚಾರ್ಯ ತಿಳಿಸಿದರು.

    ಇದೇ ವೇಳೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮಾತನಾಡಿ, ನನ್ನನ್ನು ಯಾರೂ ಸಂಪರ್ಕಿಸಿಲ್ಲ. ನಾನು ಪಕ್ಷ ಬಿಡಲ್ಲ. 99ರಲ್ಲಿ ನಾನು ರಾಜಕೀಯಕ್ಕೆ ಸೇರಿದ್ದು, ಆಗಿನಿಂದಲೂ ಪಕ್ಷದಲ್ಲಿ ನಿಷ್ಠೆಯಿಂದ ಇದ್ದೇನೆ ಎಂದು ತಿಳಿಸಿದರು.

    ಶಿರಗುಪ್ಪ ಶಾಸಕ ಸೋಮಲಿಂಗಪ್ಪ ಮಾತನಾಡಿ, ನನ್ನ ಹೆಸರು ರಿವರ್ಸ್ ಆಪರೇಷನ್‍ನಲ್ಲಿ ಕೇಳಿ ಬರುತ್ತಿದ್ದು ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಒಂದು ತಿಂಗಳಿಂದಲೂ ನನ್ನ ಹೆಸರು ಕೇಳಿ ಬರುತ್ತಿದೆ. ಆದರೆ, ನನಗೆ ಯಾರೂ ಕರೆ ಮಾಡಿಲ್ಲ. ನಾನು ಪಕ್ಷ ಬಿಟ್ಟು ಹೋಗಲ್ಲ. ಯಡಿಯೂರಪ್ಪನವರು ಕೆಜೆಪಿ ಪಕ್ಷ ಕಟ್ಟಿದಾಗಲೂ ನಾನು ಅವರ ಜೊತೆ ಹೋಗಲಿಲ್ಲ. ನಾನು ವಿದ್ಯಾರ್ಥಿ ದೆಸೆಯಿಂದಲೂ ಬಿಜೆಪಿಯಲ್ಲಿದ್ದೇನೆ. ಬಿಜೆಪಿಯಲ್ಲೇ ಇರುತ್ತೇನೆ. ಯಾರೋ ಕಿತಾಪತಿ ಮಾಡಿ ನನ್ನ ಹೆಸರು ತೇಲಿ ಬಿಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದರು.

  • ಸರ್ಕಾರ ಬೀಳಲ್ಲ, ಮುಖ್ಯಮಂತ್ರಿ ಬದಲಾಗುತ್ತಾರೆ: ಕೈ ಶಾಸಕ ರಾಮಪ್ಪ

    ಸರ್ಕಾರ ಬೀಳಲ್ಲ, ಮುಖ್ಯಮಂತ್ರಿ ಬದಲಾಗುತ್ತಾರೆ: ಕೈ ಶಾಸಕ ರಾಮಪ್ಪ

    ದಾವಣಗೆರೆ: ಸರ್ಕಾರ ಸೇಫ್ ಆಗಿರುತ್ತದೆ. ಆದರೆ ಮುಖ್ಯಮಂತ್ರಿ ಮಾತ್ರ ಬದಲಾಗುತ್ತಾರೆ ಎಂದು ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಮತ್ತೊಮ್ಮೆ ತಮ್ಮ ಡೈಲಾಗ್ ಹೇಳಿದ್ದಾರೆ.

    ಶಾಸಕರ ರಾಜೀನಾಮೆ ಕುರಿತು ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾಗಬಹುದು. ಆದರೆ, ಮೈತ್ರಿ ಸರ್ಕಾರಕ್ಕೆ ಏನೂ ತೊಂದರೆಯಾಗುವುದಿಲ್ಲ. ಈ ಬಾರಿ ಮುಖ್ಯಮಂತ್ರಿ ಬದಲಾಗುವ ಸಂಭವವಿದ್ದು, ಯಾರಾಗುತ್ತಾರೆ ಎನ್ನುವುದು ನನಗೆ ತಿಳಿದಿಲ್ಲ. ಇದನ್ನು ಹೈ ಕಮಾಂಡ್ ತೀರ್ಮಾನಿಸಲಿದೆ. ಒಟ್ಟಿನಲ್ಲಿ ಮುಖ್ಯಮಂತ್ರಿ ಬದಲಾಗುತ್ತಾರೆ ಎಂದು ತಿಳಿಸಿದರು.

    ಬಿಜೆಪಿಯವರು ಸಾಕಷ್ಟು ಬಾರಿ ಕರೆದಿರುವುದು ನಿಜ, ಇಂದು ಬೆಳಗ್ಗೆಯೂ ಸಹ ಕರೆ ಮಾಡಿದ್ದರು. ಆದರೆ, ನಾನು ಕಾಂಗ್ರೆಸ್‍ನ ನಿಷ್ಠಾವಂತ ಕಾರ್ಯಕರ್ತ ಯಾವ ಪಕ್ಷಕ್ಕೂ ಬರುವುದಿಲ್ಲ ಎಂದು ಹೇಳಿದ್ದೇನೆ. ನಮ್ಮನ್ನು ನಂಬಿ ಪಕ್ಷ ಎರಡು ಬಾರಿ ಬಿ-ಫಾರಂ ನೀಡಿದೆ. ಅಲ್ಲದೆ, 64 ಸಾವಿರ ಜನ ನನಗೆ ಮತ ಹಾಕಿದ್ದಾರೆ. ಅವರ ಋಣ ತೀರಿಸಬೇಕು. ಹೀಗಾಗಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ ಎಂದು ಬಿಜೆಪಿಯವರಿಗೆ ತಿಳಿಸಿದ್ದೇನೆ. ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಹೋಗಿ ಪ್ರಕೃತಿ ಚಿಕಿತ್ಸೆ ಮುಗಿಸಿಕೊಂಡು ಬಂದಿದ್ದೇನೆ. ನಾಯಕರ ಸೂಚನೆಗೆ ಮೇರೆಗೆ ಇದೀಗ ಬೆಂಗಳೂರಿಗೆ ಹೊರಟಿದ್ದೇನೆ ಎಂದು ತಿಳಿಸಿದರು.

    ಮುಖ್ಯಮಂತ್ರಿಗಳು ಬದಲಾವಣೆಯಾಗುವ ಸಾಧ್ಯತೆ ಇದೆ. ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ ಎಂದು ಭಾನುವಾರ ರಾಮಪ್ಪ ವಿಶ್ವಾಸ ವ್ಯಕ್ತಪಡಿಸಿದ್ದರು. ಬಿಜೆಪಿಯವರು ನನ್ನ ಹಿಂದೆ ಬಿದ್ದಿದ್ದಾರೆ. ಈಗಾಗಲೇ ನಾನು ಪಕ್ಷ ತೊರೆಯಲ್ಲ ಎಂಬುದನ್ನ ಸ್ಪಷ್ಟಪಡಿಸಿದ್ದೇನೆ. ನಾನು ಪಕ್ಷ ತೊರೆಯಲು ಸಿದ್ಧ ಎಂದರೆ ಹಣ ನೀಡಲು ತಯಾರಾಗಿದ್ದಾರೆ. ಆದರೆ, ನಾನು ಪಕ್ಷ ಬಿಡುವ ವಿಷಯವೇ ಬರಲ್ಲ. ನಗರಸಭೆ ಸದಸ್ಯನಾಗಿದ್ದ ನನ್ನನ್ನು ಅಧ್ಯಕ್ಷ, ಶಾಸಕನಾಗಿ ಮತದಾರರು ಆಯ್ಕೆ ಮಾಡಿದ್ದಾರೆ. ಬೇರೆ ಪಕ್ಷಕ್ಕೆ ಹೋದ್ರೆ ನಮಗೆ ನಾವೇ ಮೋಸ ಮಾಡಿಕೊಂಡಂತೆ ಎಂದು ಹೇಳಿದ್ದರು.

  • ಅಲ್ಪಮತದತ್ತ ಮೈತ್ರಿ ಸರ್ಕಾರ-ಬಿಎಸ್‍ವೈ ಮತ್ತೆ ಸಿಎಂ ಆಗ್ತಾರಾ?

    ಅಲ್ಪಮತದತ್ತ ಮೈತ್ರಿ ಸರ್ಕಾರ-ಬಿಎಸ್‍ವೈ ಮತ್ತೆ ಸಿಎಂ ಆಗ್ತಾರಾ?

    ಬೆಂಗಳೂರು: ಸಮ್ಮಿಶ್ರ ಸರ್ಕಾರ ಅಲ್ಪಮತದತ್ತ ಕುಸಿಯುತ್ತಿದ್ದು, ಪತನದಂಚಿಗೆ ತಲುಪಿದೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದ್ದು, ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಸಿಎಂ ಆಗಲಿದ್ದಾರೆ ಎಂದು ಕಮಲ ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ.

    ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡು ಮೂರಂಕಿಯಿಂದ ಎರಡಂಕಿ ಸಮೀಪಕ್ಕೆ ಬಂದು ನಿಂತಿದೆ. ಇದರಿಂದ ಬಿಜೆಪಿ ಉತ್ಸಾಹದಲ್ಲಿದ್ದು, ಕೇಂದ್ರ ನಾಯಕರ ಸೂಚನೆಗೆ ಕಾಯುತ್ತಿದೆ ಎಂಬ ಮಾತು ಬಿಜೆಪಿ ಪಾಳಯದಲ್ಲಿ ಕೇಳಿ ಬರುತ್ತಿದೆ.

    ರಾಜೀನಾಮೆ ಅಂಗೀರಾದ ಕುರಿತು ಅತೃಪ್ತ ಶಾಸಕರು ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿದ್ದು, ಇಂದು ನಡೆಯುವ ಬೆಳವಣಿಗೆಯನ್ನು ಬಿಜೆಪಿ ನಾಯಕರು ತುದಿಗಾಲಲ್ಲಿ ನಿಂತು ನೋಡುತ್ತಿದ್ದಾರೆ. ಒಂದು ವೇಳೆ ತೀರ್ಪು ಅತೃಪ್ತ ಶಾಸಕರ ಪರವಾಗಿ ಬಂದಲ್ಲಿ ಬಿಜೆಪಿಗೆ ಇನ್ನೂ ಬಲ ಬಂದಾಗುತ್ತದೆ. ಅಲ್ಲದೆ, ರಾಜ್ಯಪಾಲರು ಪ್ರಮುಖ ಪಾತ್ರ ವಹಿಸುವ ಸಂದರ್ಭ ಬರುವುದನ್ನೂ ಬಿಜೆಪಿ ಎದುರು ನೋಡುತ್ತಿದ್ದು, ಒಂದು ವೇಳೆ ರಾಜ್ಯಪಾಲರು ಪ್ರಮುಖ ಪಾತ್ರವಹಿಸಿದಲ್ಲಿ ದೆಹಲಿಯ ಬಿಜೆಪಿ ನಾಯಕರು ನೇರ ಎಂಟ್ರಿ ನೀಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಬುಧವಾರ ಮೈತ್ರಿ ಸರ್ಕಾರದ ನಡೆ ವಿರುದ್ಧ, ಸಿಎಂ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ, ಸುಧಾಕರ್ ಕೂಡಿ ಹಾಕಿದ್ದನ್ನು ಸಮರ್ಥವಾಗಿ ಬಳಿಸಿಕೊಂಡು ಬಿಜೆಪಿ ಪ್ರತಿಭಟನೆ ನಡೆಸಿದೆ. ಅತ್ತ ಸ್ಪೀಕರ್ ಭೇಟಿಯಾಗಿ ಅತೃಪ್ತ ಶಾಸಕರ ರಾಜೀನಾಮೆಯನ್ನು ಶೀಘ್ರವೇ ಅಂಗೀಕರಿಸುವಂತೆ ಮನವಿ ಮಾಡಿದೆ. ಅಲ್ಲದೆ, ರಾಜ್ಯಪಾಲರನ್ನೂ ಭೇಟಿ ಮಾಡಿ ಬೇಗನೇ ರಾಜೀನಾಮೆ ಅಂಗೀಕರಿಸಲು ಸ್ಪೀಕರ್‌ಗೆ  ಸೂಚಿಸುವಂತೆ ಮನವಿ ಮಾಡಿದೆ.

  • ಸಮ್ಮಿಶ್ರ ಸರ್ಕಾದ ಬಗ್ಗೆ ಮನಸ್ತಾಪವಿದೆ, ರಾಜೀನಾಮೆ ಕೊಡಲ್ಲ – ಸುಬ್ಬಾರೆಡ್ಡಿ

    ಸಮ್ಮಿಶ್ರ ಸರ್ಕಾದ ಬಗ್ಗೆ ಮನಸ್ತಾಪವಿದೆ, ರಾಜೀನಾಮೆ ಕೊಡಲ್ಲ – ಸುಬ್ಬಾರೆಡ್ಡಿ

    ಚಿಕ್ಕಬಳ್ಳಾಪುರ: ನೀರಾವರಿ ವಿಚಾರದಲ್ಲಿ ನನಗೆ ಅನ್ಯಾಯವಾಗಿದೆ. ಹೀಗಾಗಿ ಸಮ್ಮಿಶ್ರ ಸರ್ಕಾರದ ವಿರುದ್ಧ ನನಗೆ ಮನಸ್ತಾಪ ಇರುವುದು ನಿಜ. ಆದರೆ ಸರ್ಕಾರವೇ ಸಂಕಷ್ಟದಲ್ಲಿ ಇರುವಾಗ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.

    ಬಾಗೇಪಲ್ಲಿ ಪಟ್ಟಣದ ತಮ್ಮ ನಿವಾಸದಲ್ಲಿ ಬೆಂಬಲಿಗರ ಜೊತೆ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 13 ಮಂದಿ ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ. ನಾನು ಕೂಡ ರಾಜೀನಾಮೆ ನೀಡುತ್ತೇನೆ ಎಂದು ಕೆಲ ಮಾಧ್ಯಮದವರು ತೋರಿಸಿದ್ದಾರೆ. ಇದರಿಂದ ಕ್ಷೇತ್ರದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗಿದೆ ಎಂದು ಹೇಳಿದರು.

    ಅಂದಹಾಗೆ ಚೇಳೂರು ಗ್ರಾಮದಲ್ಲಿನ ಜನಸ್ಪಂದನ ಕಾರ್ಯಕ್ರಮದಲ್ಲಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದು ನಿಜ. ನನ್ನ ಬಾಗೇಪಲ್ಲಿ ಕ್ಷೇತ್ರಕ್ಕೆ ಎಚ್.ಎನ್ ವ್ಯಾಲಿ ನೀರು ಬರದಿದ್ದರೆ ಮುಂದಿನ ಕ್ಯಾಬಿನೆಟ್‍ನಲ್ಲಿ ಕೇಳಿ ಅನಂತರ ರಾಜೀನಾಮೆ ನೀಡುವುದಾಗಿ ಹೇಳಿದ್ದೆ. ಅಷ್ಟರಲ್ಲಿ 13 ಮಂದಿ ಶಾಸಕರ ರಾಜೀನಾಮೆಯಿಂದ ಸರ್ಕಾರ ಪತನವಾಗುವ ಲಕ್ಷಣಗಳು ಕಂಡು ಬಂದವು ಎಂದು ತಿಳಿಸಿದರು.

    ಅವರ ರಾಜೀನಾಮೆಗೂ ನನ್ನ ರಾಜೀನಾಮೆಗೂ ಯಾವುದೇ ಸಂಬಂಧವಿಲ್ಲ. ಅವರು ವೈಯುಕ್ತಿಕ ಸೇರಿದಂತೆ ಅನುದಾನ ಕೊರತೆ, ಅಧಿಕಾರಿಗಳ ವರ್ಗಾವಣೆ ಸೇರಿ ಅನೇಕ ಕಾರಣಗಳಿಗೆ ರಾಜೀನಾಮೆ ಕೊಟ್ಟಿರಬಹುದು. ಆದರೆ ನಾನು ಜನರಿಗೆ ಸಂಕಷ್ಟ ಬಂದಾಗ ಕಷ್ಟ ಪರಿಹರಿಸಲು ರಾಜೀನಾಮೆ ನೀಡುವೆ ಹೊರತು ಈ ಸಂದರ್ಭದಲ್ಲಿ ರಾಜೀನಾಮೆ ನೀಡುವುದಿಲ್ಲ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ ಎಂದು ಹೇಳಿದರು.

    ಈಗಲೂ ಕಾಯುತ್ತೇನೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಬಾಗೇಪಲ್ಲಿ ಕ್ಷೇತ್ರಕ್ಕೆ ಎಚ್.ಎನ್ ವ್ಯಾಲಿ ಹಾಗೂ ಎತ್ತಿನಹೊಳೆ ನೀರು ಬರಲಿಲ್ಲ ಅಂದರೆ ನನಗೆ ಮತ ಹಾಕಿದ ಜನರ ಸಮೇತ ವಿಧಾನಸೌಧಕ್ಕೆ ಪಾದಯಾತ್ರೆ ಮೂಲಕ ತೆರಳಿ ಜನರ ಮುಂದೆಯೇ ನನ್ನ ರಾಜೀನಾಮೆ ಪತ್ರ ನಿಡೋದಾಗಿ ತಿಳಿಸಿದರು.

  • ರಾಜ್ಯದಲ್ಲಿ ಏನಾಗ್ತಿದೆ ಅನ್ನೋದು ನಮಗೆ ಗೊತ್ತಾಗುತ್ತಿಲ್ಲ: ಅಶೋಕ್

    ರಾಜ್ಯದಲ್ಲಿ ಏನಾಗ್ತಿದೆ ಅನ್ನೋದು ನಮಗೆ ಗೊತ್ತಾಗುತ್ತಿಲ್ಲ: ಅಶೋಕ್

    ಬೆಂಗಳೂರು: ಕೈ, ತೆನೆ ನಾಯಕರು ಸ್ವ ಇಚ್ಛೆಯಿಂದ ರಾಜೀನಾಮೆ ಕೊಟ್ಟಿದ್ದಾರೆ. ಹೀಗಾಗಿ ರಮೇಶ್ ಕುಮಾರ್ ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳುತ್ತಾರೆ ಎಂದು ಬಿಜೆಪಿ ಮುಖಂಡ ಆರ್. ಅಶೋಕ್ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜೀನಾಮೆ ಕೊಟ್ಟು ಈಗ ಹಾಯಾಗಿದ್ದಾರೆ. ಆದರೆ ನಾವು ತಲೆಕೆಡಿಸಿಕೊಂಡಿದ್ದೇವೆ. ನಮಗೆ ರಾಜ್ಯದಲ್ಲಿ ಏನಾಗುತ್ತಿದೆ ತಳ ಬುಡ ಅರ್ಥವಾಗುತ್ತಿಲ್ಲ. ಎಷ್ಟು ಜನ ರಾಜೀನಾಮೆಗೆ ಕೊಡುತ್ತಾರೆ, ಏನು ಕಥೆ? ಒಂದು ಅರ್ಥವಾಗುತ್ತಿಲ್ಲ ಎಂದು ಹೇಳಿದ್ದಾರೆ.

    ಕೈ- ತೆನೆ ನಾಯಕರು ಸ್ವ ಇಚ್ಛೆಯಿಂದ ರಾಜೀನಾಮೆ ಕೊಟ್ಟಿದ್ದಾರೆ. ಹೀಗಾಗಿ ರಮೇಶ್ ಕುಮಾರ್ ನಿಷ್ಪಕ್ಷಪಾತವಾಗಿ ಕ್ರಮ ಕೈಗೊಳ್ಳುತ್ತಾರೆ. ಅವರ ಮೇಲೆ ಅಪಾರ ಗೌರವ ಇದೆ. ಮಾದರಿ ಸ್ಪೀಕರ್ ಆಗಿ ಈ ವಿಚಾರದಲ್ಲಿ ನಡೆದುಕೊಳ್ಳುತ್ತಾರೆ ನಂಬಿಕೆ ಇದೆ. ಅತೃಪ್ತರು ದೆಹಲಿಗೆ ಹೋಗಿದ್ದಾರಾ? ಮುಂಬೈಗೆ ಹೋಗಿದ್ದಾರ ಅಥವಾ ಸಿಂಗಾಪುರಕ್ಕೆ ಹೋಗಿದ್ದಾರ ಎನ್ನುವ ಬಗ್ಗೆ ನಮಗೆ ಮಾಹಿತಿ ಇಲ್ಲ. ಈ ಹಿಂದೆ ನಾವು ಮೂಗು ತೂರಿಸಿ ಸಮಸ್ಯೆ ಆಗಿದೆ. ಹಾಗಾಗಿ ನಾವು ಈ ಬಾರಿ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಲ್ಲ. ಅವರ ರಾಜೀನಾಮೆಗೂ ನಮಗೂ ಸಂಬಂಧವಿಲ್ಲ ಎಂದು ಆರ್.ಅಶೋಕ್ ತಿಳಿಸಿದ್ದಾರೆ.

    ಮುನಿರತ್ನ ಅವರನ್ನು ಕಳೆದ ದಿನ ಕಾರಿನಲ್ಲಿ ನಮ್ಮ ಪ್ರದೇಶದ ಸಮಸ್ಯೆ ಹೇಳುವುದಕ್ಕೆ ಕರೆದುಕೊಂಡು ಹೋಗಿದ್ದು, ಜಾಲಹಳ್ಳಿಯಲ್ಲಿ ಮನೆ ಇದೆ. ಅಲ್ಲಿ ಮರ, ರಸ್ತೆ ಸಮಸ್ಯೆ ಇತ್ತು. ಅದಕ್ಕೆ ನಾನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದೆ. ನಮ್ಮ ಏರಿಯಾ ಅವರ ವ್ಯಾಪ್ತಿಯಲ್ಲಿ ಬರುತ್ತದೆ. ಅದಕ್ಕೆ ಕರೆದುಕೊಂಡು ಹೋದೆ ಅಷ್ಟೇ ಬೇರೆನೂ ಇಲ್ಲ ಎಂದು ಅಶೋಕ್ ತಿಳಿಸಿದರು.

    ಸರ್ಕಾರ ಇವತ್ತು ಹೋಗುತ್ತಾ, ನಾಳೆ ಹೋಗುತ್ತಾ, 12 ರಂದು ಪತನವಾಗುತ್ತಾ ಗೊತ್ತಿಲ್ಲ. ಮೈತ್ರಿ ಸರ್ಕಾರ ಗಾಳಿಪಟ ಇದ್ದಂತೆ. ಆಗಸದಲ್ಲಿ ಹಾರಾಡುತ್ತಿದೆ. ಹೀಗಾಗಿ ಗಾಳಿಪಾಟದ ದರ ಲೈಟ್ ಕಂಬಕ್ಕೆ ತಗ್ಲಾಕಿಕೊಳ್ಳೊತ್ತಾ? ರಸ್ತೆಯಲ್ಲಿ ಬೀಳುತ್ತಾ? ಅಥವಾ ಹೊಳೆನರಸೀಪುರದ ಹೊಳೆಯಲ್ಲಿ ಬೀಳುತ್ತಾ ಗೊತ್ತಿಲ್ಲ ಎಂದು ಹೇಳಿ ವ್ಯಂಗ್ಯವಾಡಿದರು.