Tag: alliance government

  • ಮೋದಿ ಪ್ರಮಾಣ ವಚನದ ದಿನವೇ ಮೈತ್ರಿ ಸರ್ಕಾರ ಬೀಳಿಸಲು ಮೂಹುರ್ತ ಫಿಕ್ಸ್?

    ಮೋದಿ ಪ್ರಮಾಣ ವಚನದ ದಿನವೇ ಮೈತ್ರಿ ಸರ್ಕಾರ ಬೀಳಿಸಲು ಮೂಹುರ್ತ ಫಿಕ್ಸ್?

    ನವದೆಹಲಿ: ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಪ್ರಮಾಣ ವಚನದ ದಿನವೇ ರಾಜ್ಯದ ಮೈತ್ರಿ ಸರ್ಕಾರ ಬೀಳಿಸಲು ಮೂಹುರ್ತ ಫಿಕ್ಸ್ ಆಗಿದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ.

    ರಾಜ್ಯ ಬಿಜೆಪಿ ಡಬಲ್ ಧಮಾಕದ ಸಂಭ್ರಮಕ್ಕೆ ಸಜ್ಜಾಗುತ್ತಿದೆ. ಮೋದಿ ದೊಡ್ಡ ದಿಗ್ವಿಜಯದೊಂದಿದೆ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದ ಅತಿ ದೊಡ್ಡ ಸಂತೋಷದ ಜೊತೆಗೆ ರಾಜ್ಯ ಮೈತ್ರಿ ಸರ್ಕಾರ ಉರುಳಿಸುವ ಮೂಹರ್ತವೂ ಅಂದೇ ನಿಗದಿ ಆಗುತ್ತದೆ ಎಂಬ ಡಬಲ್ ಸಂತೋಷದ ಗಳಿಗೆಯ ನಿರೀಕ್ಷೆಯಲ್ಲಿ ರಾಜ್ಯ ಬಿಜೆಪಿ ಪಾಳಯವಿದೆ ಎನ್ನಲಾಗಿದೆ.

    ಮೋದಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಕಾಂಗ್ರೆಸ್‍ನ ಅತೃಪ್ತ ಶಾಸಕರು ಹಾಗೂ ಪಕ್ಷೇತರ ಶಾಸಕರು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಹೀಗೆ ಬಹಿರಂಗವಾಗಿ ಸಮಾರಂಭದಲ್ಲಿ ಕಾಣಿಸಿ ಕೊಳ್ಳುವ ಮೂಲಕ ತಾವು ಬಿಜೆಪಿ ಸೇರುವ ಸಂದೇಶವನ್ನು ರವಾನಿಸಲಿದ್ದಾರೆ ಎನ್ನಲಾಗುತ್ತಿದೆ.

    ಸಮಾರಂಭಕ್ಕೆ ಕಾಂಗ್ರೆಸ್‍ನ ಅತೃಪ್ತ ಶಾಸಕರನ್ನು ಮತ್ತು ಪಕ್ಷೇತರ ಶಾಸಕರನ್ನು ಕರೆ ತರುವ ಪ್ರಯತ್ನವನ್ನು ರಾಜ್ಯ ಬಿಜೆಪಿ ನಡೆಸಿದೆ. ಇದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ರಾಜ್ಯ ಬಿಜೆಪಿ ಪಾಳಯದ ಲೆಕ್ಕದಂತೆ ಅತೃಪ್ತ ಶಾಸಕರು ಮತ್ತು ಪಕ್ಷೇತರ ಶಾಸಕರು ಮೋದಿ ಅವರ ಪ್ರಮಾಣ ವಚನ ಸಮಾರಂಭಕ್ಕೆ ಬಂದರೆ ಅವತ್ತಿನಿಂದ ರಾಜ್ಯ ಸರ್ಕಾರಕ್ಕೆ ಕೌಂಟ್ ಡೌನ್ ಶುರುವಾಗುವ ಸಾಧ್ಯತೆ ಇದೆ.

    ಕಾಂಗ್ರೆಸ್‍ನ ಪ್ರಮುಖ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಐದು ಅತೃಪ್ತ ಶಾಸಕರು ಈಗಾಗಲೇ ಸಭೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ. ಇವರೆಲ್ಲಾ ಒಟ್ಟಾಗಿ ಮೋದಿ ಸಮಾರಂಭಕ್ಕೆ ಬಂದರೆ ಇನ್ನುಳಿದ ಅತೃಪ್ತ ಶಾಸಕರಿಗೆ ಪಕ್ಷ ಬಿಡಲು ಧೈರ್ಯ ಬರುತ್ತೆ ಎಂಬುದು ಬಿಜೆಪಿ ಲೆಕ್ಕಾಚಾರವಾಗಿದೆ. ಅಂದರೆ ಮೋದಿ ಪ್ರಮಾಣ ವಚನ ಸ್ವೀಕಾರದ ದಿನ ರಾಜ್ಯ ಮೈತ್ರಿ ಸರ್ಕಾರ ಬೀಳಿಸಲು ಮೂಹರ್ತ ನಿಶ್ಚಯ ಎಂಬ ಮಾತು ಬಿಜೆಪಿ ಪಾಳಯದಲ್ಲಿ ದಟ್ಟವಾಗಿ ಕೇಳಿ ಬರುತ್ತಿದೆ.

  • ರಾಜಕಾರಣಿಗಳನ್ನು ಬಫೂನ್ ರೀತಿ ತೋರಿಸ್ತಾರೆ – ಮಾಧ್ಯಮಗಳ ಮೇಲೆ ವಿಶ್ವನಾಥ್ ಕಿಡಿ

    ರಾಜಕಾರಣಿಗಳನ್ನು ಬಫೂನ್ ರೀತಿ ತೋರಿಸ್ತಾರೆ – ಮಾಧ್ಯಮಗಳ ಮೇಲೆ ವಿಶ್ವನಾಥ್ ಕಿಡಿ

    ಮೈಸೂರು: ಮಾಧ್ಯಮಗಳ ಮೇಲೆ ನಿಯಂತ್ರಣ ಕಾಯ್ದೆ ತರಬೇಕು ಎನ್ನುವ ಸಿಎಂ ಕುಮಾರಸ್ವಾಮಿ ಅವರ ಮಾತಿಗೆ ನಮ್ಮ ಸಹಮತ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಹೇಳಿದ್ದಾರೆ.

    ನಗರದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಮಾಧ್ಯಮದಲ್ಲಿ ನಡೆಯುವ ಭ್ರಷ್ಟಾಚಾರವನ್ನು ಮಾಧ್ಯಮದವರು ಬರೆದು ತೋರಿಸಬೇಕು, ಮಾಧ್ಯಮದಲ್ಲಿ ವಾರಕ್ಕೆ ಒಬ್ಬರು ಜೈಲಿಗೆ ಹೋಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

    ಮಾಧ್ಯಮಗಳ ಮೇಲೆ ನಿಯಂತ್ರಣ ಕಾಯ್ದೆ ತರಬೇಕು ಎಂಬ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರ ಪ್ರಸ್ತಾಪಿಸಿದ ವಿಶ್ವನಾಥ್, ಸಿಎಂ ಮಾತಿಗೆ ನಮ್ಮ ಸಹಮತ ಇದೆ. ಅವರು ಹೇಳಿದ್ದು ಮಾಧ್ಯಮಕ್ಕೆ ಸಂಪೂರ್ಣ ನಿಯಂತ್ರಣ ಅಲ್ಲ. ಮಾಧ್ಯಮಗಳ ಕೆಲವು ಕಾರ್ಯಕ್ರಮಗಳು ನಿಯಂತ್ರಣವಾಗಬೇಕಿದೆ. ರಾಜಕಾರಣಿಗಳನ್ನು ಬಫೂನ್ ರೀತಿ ತೋರಿಸಿ ನಗೆ ಪಾಟಲಿಗೆ ಇಡುಮಾಡಿ ಮುಜುಗರ ತರುತ್ತಾರೆ. ಇದು ಅಷ್ಟು ಸಮಂಜಸವಲ್ಲ ರಾಜಕಾರಣಿಗಳಿಗೆ ಅವಮಾನವಾಗುವಂತಹ ಕಾರ್ಯಕ್ರಮ ಬೇಡ ಎಂದು ಕೈ ಮುಗಿದು ಮನವಿ ಮಾಡಿಕೊಂಡರು. ಇದನ್ನು ಓದಿ: ನಾವೇನು ಹಾಸ್ಯಗಾರರಾ? – ಮಾಧ್ಯಮಗಳ ವಿರುದ್ಧ ಸಿಎಂ ಕೆಂಡಾಮಂಡಲ

    ಇದೇ ವೇಳೆ ಹೊರಟ್ಟಿ ಅವರ ಮೈತ್ರಿ ಸರ್ಕಾರ ವಿಸರ್ಜನೆ ಹೇಳಿಕೆ ವಿಚಾರವಾಗಿ ಮಾತನಾಡಿ. ಈ ಸಂದರ್ಭದಲ್ಲಿ ಅವರು ಈ ರೀತಿ ಮಾತನಾಡುವುದು ಸರಿಯಲ್ಲ. ಅಧಿಕಾರ ಪಡೆದ ಕೇವಲ ಒಂದು ವರ್ಷಕ್ಕೆ ಸರ್ಕಾರ ವಿಸರ್ಜನೆ ಮಾಡಿ ಚುನಾವಣೆ ಮಾಡೋದು ಸರಿಯಲ್ಲ. ಅಲ್ಲದೆ ಮೈತ್ರಿ ಸರ್ಕಾರ ಎಂದರೆ ಸಣ್ಣ ಪುಟ್ಟ ಸಮಸ್ಯೆ ಇದ್ದೆ ಇರುತ್ತೆ. ಸಿದ್ದರಾಮಯ್ಯನವರು ಇವತ್ತು ಡೆಲ್ಲಿಗೆ ಹೋಗಿ ಸಮಸ್ಯೆ ಸರಿಮಾಡಿಕೊಂಡು ಬರುತ್ತಾರೆ. ಇಷ್ಟಕ್ಕೆಲ್ಲ ಸರ್ಕಾರ ವಿಸರ್ಜನೆ ಮಾಡಲು ಆಗುತ್ತಾ ಎಂದು ಮತ್ತೊಮ್ಮೆ ಹೊರಟ್ಟಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು.

    ಮೋದಿ ಮಾಧ್ಯಮದವರಿಗೆ ಹೆದರುತ್ತಿದ್ದಾರೆ. ಈ ಹಿಂದೆ ಯಾವ ಪ್ರಧಾನಿಯೂ ಮಾಧ್ಯಮಕ್ಕೆ ಹೆದರಿಲ್ಲ. ಅದರೆ ಯಾಕೆ ಮೋದಿ ಮಾಧ್ಯಮಕ್ಕೆ ಹೆದರುತ್ತಿದ್ದಾರೆ. ಸಿನಿಮಾ ನಟನಿಂದ ಮೋದಿ ಸಂದರ್ಶನ ಮಾಡಿಸಿ ಕೊಳ್ಳುತ್ತಾರೆ. ಆದರೆ ಪತ್ರಕರ್ತರ ಸಂದರ್ಶನಕ್ಕೆ ಹೆದರುತ್ತಾರೆ ಎಂದು ಪ್ರಧಾನಿ ಅವರನ್ನು ಲೇವಡಿ ಮಾಡಿದರು.

  • ಎಲ್ಲರಿಗೂ ಜ್ಞಾನೋದಯವಾಗಿದೆ, ಮೈತ್ರಿ ಮುಖಂಡರ ವಾಕ್ಸಮರ ಇಂದಿನಿಂದ ನಿಲ್ಲುತ್ತದೆ – ಜಿ.ಟಿ ದೇವೇಗೌಡ

    ಎಲ್ಲರಿಗೂ ಜ್ಞಾನೋದಯವಾಗಿದೆ, ಮೈತ್ರಿ ಮುಖಂಡರ ವಾಕ್ಸಮರ ಇಂದಿನಿಂದ ನಿಲ್ಲುತ್ತದೆ – ಜಿ.ಟಿ ದೇವೇಗೌಡ

    ಮಂಡ್ಯ: ರಾಜ್ಯದಲ್ಲಿ ಹಾಗೂ ಮಂಡ್ಯದಲ್ಲಿ ನಡೆಯುತ್ತಿರುವ ಮೈತ್ರಿ ಸರ್ಕಾರದ ಮುಖಂಡರ ವಾಕ್ಸಮರ ಇಂದಿನಿಂದ ನಿಲ್ಲುತ್ತದೆ. ಎಲ್ಲಾ ನಾಯಕರಿಗೂ ಜ್ಞಾನೋದಯವಾಗಿದೆ ಎಂದು ಸಚಿವ ಜಿ.ಟಿ ದೇವೇಗೌಡ ಅವರು ಹೇಳಿದ್ದಾರೆ.

    ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ನಾಯಕರು ಕುಳಿತು ಮಾತನಾಡಿದ್ದಾರೆ. ನಾವೆಲ್ಲರು ಒಗ್ಗಾಟ್ಟಾಗಿದ್ದು ಒಂದೇ ತಟ್ಟೆಯಲ್ಲಿ ಊಟ ಮಾಡುವವರು ಎಂದು ಬುದ್ದಿ ಹೇಳಿದ್ದಾರೆ. ಇನ್ನು ಮುಂದೆ ಮೈತ್ರಿ ನಾಯಕರ ವಾಕ್ಸಮರ ನಿಲ್ಲುತ್ತದೆ ಎಂದು ಹೇಳಿದ್ದಾರೆ.

    ಮೇ 23 ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲರೂ ದೇಶದ ಫಲಿತಾಂಶ ಏನಾಗುತ್ತೆ ಎಂದು ಮೇ 23ರ ತನಕ ಕಾಯುತ್ತಾ ಇದ್ದಾರೆ. ದೇಶದಲ್ಲಿ ಏನಾಗುತ್ತೆ ಯಾರು ಪ್ರಧಾನಿಯಾಗುತ್ತಾರೆ ಎಂದು ಆ ದಿನ ತೀರ್ಮಾನವಾಗುತ್ತದೆ. ಅದನ್ನು ಬಿಟ್ಟರೆ ರಾಜ್ಯದ ರಾಜಕೀಯದ ಮೇಲೆ ಈ ಫಲಿತಾಂಶದಿಂದ ಏನೂ ಆಗುವುದಿಲ್ಲ ಎಂದರು.

    ಕುಮಾರಸ್ವಾಮಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಧಿಕಾರ ಹೋಗುತ್ತೆ ಎನ್ನುತ್ತಿದ್ದಾರೆ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಇನ್ನೂ ನಾಲ್ಕು ವರ್ಷದ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಮಾಡುತ್ತಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಇರುತ್ತೆ ಹಾಗೆಯೇ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿಯಾಗಿ ಜಿ. ಪರಮೇಶ್ವರ್ ಇರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಮಂಡ್ಯದಲ್ಲಿ ಕಾಂಗ್ರೆಸ್ ನಾಯಕರನ್ನು ಕುಮಾರಸ್ವಾಮಿ ಕರೆಯಬೇಕಿತ್ತು ಎಂಬ ವಿಚಾರಕ್ಕೆ ಪ್ರತಿಕ್ರಿಸಿದ ಅವರು, ಈಗಾಗಲೇ ಚುನಾವಣೆ ಮುಗಿದು ಹೋಗಿದೆ. ಅದೆಲ್ಲಾ ಮುಗಿದ ವಿಚಾರ ಅದರ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳಿದರು.

  • ಮೈತ್ರಿ ಸರ್ಕಾರಕ್ಕೆ ಜನರು ಇಚ್ಛಾ ಮರಣದ ವರ ಕೊಟ್ಟಿದ್ದಾರೆ: ಅನಂತ್‍ಕುಮಾರ್ ಹೆಗ್ಡೆ

    ಮೈತ್ರಿ ಸರ್ಕಾರಕ್ಕೆ ಜನರು ಇಚ್ಛಾ ಮರಣದ ವರ ಕೊಟ್ಟಿದ್ದಾರೆ: ಅನಂತ್‍ಕುಮಾರ್ ಹೆಗ್ಡೆ

    ಕಾರವಾರ: ರಾಜ್ಯದ ಜನರು ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರಕ್ಕೆ ಇಚ್ಛಾ ಮರಣದ ವರವನ್ನು ಕೊಟ್ಟಿದ್ದಾರೆ. ಯಾವತ್ತು ಅವರ ಕಲಹ, ಭಿನ್ನಾಭಿಪ್ರಾಯ ಹೆಚ್ಚಾಗುತ್ತದೆಯೋ ಅಂದು ಸರ್ಕಾರ ಬೀಳುತ್ತದೆ ಎಂದು ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗ್ಡೆ ಹೇಳಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದ ಕಾರ್ಯಕರ್ತರಿಗೆ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವರು, ಸರ್ಕಾರ ಬೀಳಿಸಲು ಬೇರೆ ಯಾರ ಪ್ರಯತ್ನವೂ ಬೇಡ. ಅದು ಇಚ್ಛಾ ಮರಣ ವರ ಪಡೆದುಕೊಂಡು ಹೊರಟಿದೆ. ಅದಕ್ಕೆ ಯಾವ ದಿನಾಂಕ ನಿಗದಿ ಮಾಡುವುದು ಬೇಡ. ದೋಸ್ತಿ ನಾಯಕರೇ ನಿರ್ಧರಿಸುವ ದಿನವೇ ಸರ್ಕಾರ ತಾನಾಗಿಯೇ ಬೀಳುತ್ತದೆ ಎಂದು ಲೇವಡಿ ಮಾಡಿದರು.

    ಬಿಜೆಪಿಯು ರಾಜ್ಯದಲ್ಲಿ ಈ ಬಾರಿ 22ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ, ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಾರೆ ಎಂದು ತಿಳಿಸಿದರು.

    ಶಿರಸಿಯಲ್ಲಿ ಏಪ್ರಿಲ್ 23ರಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚ ಉಪಾಧ್ಯಕ್ಷ ಅನಿಶ್ ಮೇಲೆ ಎಸ್‍ಡಿಪಿಐ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ಮಾಡಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವರು, ಇದೊಂದು ಎಸ್‍ಡಿಪಿಐಯ ದೊಡ್ಡ ವಿಕೃತಿಯಾಗಿದೆ. ಎಲ್ಲೆಲ್ಲಿ ಎಸ್‍ಡಿಪಿಐ ಬೆಳೆದಿದೆಯೋ ಅಲ್ಲಲ್ಲಿ ಗೊಂದಲ ಕೋಮು ದ್ವೇಷ ಬೆಳೆಸುತ್ತಿದೆ. ಉತ್ತರ ಕನ್ನಡ ಜಿಲ್ಲೆಗೂ ಕಾಲಿಟ್ಟಿದ್ದು ಸಾರ್ವಜನಿಕರು ಈ ಬಗ್ಗೆ ಜಾಗೃತವಾಗಿರಬೇಕು ಎಂದರು.

    ಎಸ್‍ಡಿಪಿಐ ಮುಸ್ಲಿಂ ಸಮುದಾಯವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸುತ್ತಿದೆ. ಈ ನಿಟ್ಟಿನಲ್ಲಿ ಮೊದಲು ತನ್ನ ಸಮುದಾಯದವರ ಮೇಲೆಯೇ ಹಲ್ಲೆ ಮಾಡಿದೆ. ಇದು ಅಪಾಯಕಾರಿ ಬೆಳವಣಿಗೆ ಎಂದು ಕಿಡಿ ಕಾರಿದರು.

  • ಕಾಂಗ್ರೆಸ್‍ನ 20 ಶಾಸಕರು ರಾಜೀನಾಮೆ ಕೊಡಲು ರೆಡಿ – ಬಿಎಸ್‍ವೈ ಬಾಂಬ್

    ಕಾಂಗ್ರೆಸ್‍ನ 20 ಶಾಸಕರು ರಾಜೀನಾಮೆ ಕೊಡಲು ರೆಡಿ – ಬಿಎಸ್‍ವೈ ಬಾಂಬ್

    ಹುಬ್ಬಳ್ಳಿ: ಕಾಂಗ್ರೆಸ್ಸಿನ 20 ಶಾಸಕರಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನವಿದ್ದು ಅವರು ರಾಜೀನಾಮೆ ಕೊಡಲು ಸಿದ್ಧರಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಾಂಬ್ ಸಿಡಿಸಿದ್ದಾರೆ

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಮತ್ತು ತುಮಕೂರಿನಲ್ಲಿ ಸೋಲುವ ಭಯದಲ್ಲಿ ಸಿಎಂ ಕುಮಾರಸ್ವಾಮಿ ಮತ್ತು ದೇವೇಗೌಡರು ರೆಸಾರ್ಟಿಗೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದರು.

    ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದ ಮೇಲೆ ಕಾಂಗ್ರೆಸ್ ಪಕ್ಷದ 20 ಜನ ಶಾಸಕರಿಗೆ ಅಸಮಾಧಾನವಿದ್ದು ಅವರು ಮುಂದಿನ ಕೆಲವು ದಿನಗಳಲ್ಲಿ ರಾಜೀನಾಮೆ ನೀಡುವ ಸಾಧ್ಯತೆ ಇದೆ. ನಮ್ಮ ಪಕ್ಷದಲ್ಲಿ ಆಗಲೇ 104 ಶಾಸಕರು ಇದ್ದೇವೆ. 3 ಜನ ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡುತ್ತಾರೆ. ಈಗ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದರೆ ಇದು ನಮ್ಮ ಪಕ್ಷಕ್ಕೆ ಸರ್ಕಾರ ರಚನೆ ಮಾಡಲು ಸಹಾಯ ಆಗಲಿದೆ ಎಂದು ಯಡಿಯೂರಪ್ಪ ದೋಸ್ತಿ ಸರ್ಕಾರದ ಪತನದ ಬಗ್ಗೆ ಭವಿಷ್ಯ ನುಡಿದರು.

    ಈ ಬಾರಿ ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರು ಗೆಲ್ಲುತ್ತಾರೆ. ತುಮಕೂರಿನಲ್ಲಿ ದೇವೇಗೌಡರಿಗೆ ಗೆಲ್ಲುವುದು ಕಷ್ಟವಾಗಿದೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸರಿಯಾಗಿಲ್ಲ ಎಂದು ಮೈತ್ರಿ ಸರ್ಕಾರದ ವಿರುದ್ಧ ಕಿಡಿಕಾರಿದರು.

  • ಮೈತ್ರಿ ವಿಚಾರದಲ್ಲಿ ತಪ್ಪಾಗಿದೆ ಎಂದ ಜಿಟಿಡಿ – ದೋಸ್ತಿಗಳಲ್ಲಿ ಬಿರುಕು?

    ಮೈತ್ರಿ ವಿಚಾರದಲ್ಲಿ ತಪ್ಪಾಗಿದೆ ಎಂದ ಜಿಟಿಡಿ – ದೋಸ್ತಿಗಳಲ್ಲಿ ಬಿರುಕು?

    ಮೈಸೂರು: ಮೈತ್ರಿ ವಿಚಾರದಲ್ಲಿ ಒಂದು ಕಡೆ ತಪ್ಪಾಗಿಲ್ಲ. ಎರಡು ಕಡೆ ಪಕ್ಷದಿಂದಲೂ ತಪ್ಪಾಗಿದೆ. ಆಯಾ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕಿತ್ತು ಎಂದು ಸಚಿವ ಜಿ.ಟಿ. ದೇವೇಗೌಡ ಸ್ಫೋಟಕ ಹೇಳಿಕೆಯನ್ನು ಕೊಟ್ಟಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಿ.ಟಿ. ದೇವೇಗೌಡ, ಕುಮಾರಸ್ವಾಮಿ ಮುಖ್ಯಮಂತ್ರಿಯಾದಗಿನಿಂದ ಈ ರೀತಿ ಡೆಡ್‍ಲೈನ್ ಫಿಕ್ಸ್ ಮಾಡುತ್ತಿದ್ದಾರೆ. ಆದರೆ ಸರ್ಕಾರಕ್ಕೆ ಬಹುಮತ ಇದೆ. ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರಕ್ಕೆ ಆತಂಕ ಇಲ್ಲ. ಇನ್ನೂ ಲೋಕಸಭಾ ಚುನಾವಣೆಯ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರಲ್ಲ. ಅದೇನಿದ್ದರೂ ಲೋಕಸಭೆಯಲ್ಲಿ ಪ್ರಧಾನ ಮಂತ್ರಿಯಾಗಲೂ ಮಾತ್ರ ನಡೆಯುತ್ತದೆ  ಎಂದು ಹೇಳಿದರು.

    ಮೈತ್ರಿ ವಿಚಾರದಲ್ಲಿ ಒಂದು ಕಡೆ ತಪ್ಪಾಗಿಲ್ಲ. ಎರಡು ಕಡೆ ಪಕ್ಷದಿಂದಲೂ ತಪ್ಪಾಗಿದೆ. ಆಯಾ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕಿತ್ತು. ಆದರೆ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಎಂಬ ತೀರ್ಮಾನವೇ ಬಹಳ ದಿನ ನಡೆಯಿತು. ಹೀಗಾಗಿ ಮೈತ್ರಿ ಮಾಡಿಕೊಳ್ಳವ ತೀರ್ಮಾನದಲ್ಲಿ ಬಹಳ ತಡವಾಯಿತು. ತಡವಾಗಿ ಮೈತ್ರಿ ಮಾಡಿಕೊಂಡ ಕಾರಣ ಪಕ್ಷದ ಕಾರ್ಯಕರ್ತರ ನಡುವಿನ ಜಿದ್ದಾಜಿದ್ದು ಸರಿ ಮಾಡಲು ಯಾರಿಂದಲೂ ಆಗಲಿಲ್ಲ ಎಂದು ಜಿಟಿ ದೇವೇಗೌಡರು ಹೇಳಿದರು.

    ಲೋಕಸಭಾ ಚುನಾವಣೆಯ ಮುನ್ನವೇ ನಮ್ಮ ನಾಯಕರು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದರೆ ಈ ರೀತಿ ತಪ್ಪು ಆಗುತ್ತಿರಲಿಲ್ಲ. ಜೊತೆಗೆ ಹೆಚ್ಚು ಅನುಕೂಲವಾಗುತ್ತಿತ್ತು. ಆದರೂ ಕೆಲವು ಕಡೆ ಚೆನ್ನಾಗಿ ಮಾಡಿದ್ದಾರೆ. ನಮ್ಮ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಉದ್ಭೂರಿನಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ರೀತಿಯಲ್ಲೇ ಹಳೆಯ ಜಿದ್ದಿನಂತೆ ಕಾರ್ಯಕರ್ತರು ಕೆಲಸ ಮಾಡಿದ್ದಾರೆ ಎಂದರು.

    ಎರಡು ಪಕ್ಷದವರು ಎರಡು ತಿಂಗಳ ಮುಂಚೆ ಒಟ್ಟಾಗಿ ಸೇರಿ ಮಾತಾಡಬೇಕಿತ್ತು. ಕಾಂಗ್ರೆಸ್-ಜೆಡಿಎಸ್ ಎರಡು ಪಕ್ಷ ಚರ್ಚೆ ಮಾಡಿಕೊಂಡು ಒಮ್ಮತದ ಅಭ್ಯರ್ಥಿ ಹಾಕಿದ್ದರೆ ಬಿಜೆಪಿ ರಾಜ್ಯದಲ್ಲಿ ಎಲ್ಲೂ ಗೆಲ್ಲುತ್ತಿರಲಿಲ್ಲ ಎಂದು ಜಿ.ಟಿ. ದೇವೇಗೌಡ ಹೇಳಿದರು.

  • ಮೈತ್ರಿ ಸರ್ಕಾರಕ್ಕೆ ಟೈಂ ಬಾಂಬ್ ಫಿಕ್ಸ್ ಮಾಡಿರೋದು ಸಿದ್ದರಾಮಯ್ಯ: ಆರ್.ಅಶೋಕ್

    ಮೈತ್ರಿ ಸರ್ಕಾರಕ್ಕೆ ಟೈಂ ಬಾಂಬ್ ಫಿಕ್ಸ್ ಮಾಡಿರೋದು ಸಿದ್ದರಾಮಯ್ಯ: ಆರ್.ಅಶೋಕ್

    – ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಗೆಲ್ಲುತ್ತಾರೆ

    ಬೆಂಗಳೂರು: ನಾವು ಮೈತ್ರಿ ಸರ್ಕಾರಕ್ಕೆ ಟೈಂ ಬಾಂಬ್ ಫಿಕ್ಸ್ ಮಾಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಬಾಂಬ್ ಇಟ್ಟಿದ್ದಾರೆ. ಅದು ಯಾವಾಗ ಸ್ಫೋಟವಾಗುತ್ತದೆ ಅಂತ ಅವರೇ ಹೇಳಬೇಕು ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23ರ ನಂತರ ಸರ್ಕಾರ ಪತನವಾಗುತ್ತದೆ ಎನ್ನುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಮೈತ್ರಿ ಸರ್ಕಾರ ಬಿದ್ದರೆ ನಾವು ಕಾರಣರಲ್ಲ. ಸಿದ್ದರಾಮಯ್ಯ ಅವರೇ ಕಾರಣವಾಗುತ್ತಾರೆ. ನಾವಾಗಿಯೇ ಸಮ್ಮಿಶ್ರ ಸರ್ಕಾರ ಬೀಳಿಸಲು ಹೋಗುವುದಿಲ್ಲ ಎಂದರು.

    ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಗೆಲ್ಲುತ್ತಾರೆ. ಸಿಎಂ ಕುಮಾರಸ್ವಾಮಿ ಅವರು ಭಯ ಬಿದ್ದು ಪುತ್ರ ನಿಖಿಲ್ ಪರ 6 ದಿನಗಳ ಕಾಲ ಮಂಡ್ಯದಲ್ಲಿ ಪ್ರಚಾರ ಮಾಡಿದರು. ಅವರ ಮಾತಿನಲ್ಲಿ ಸೋಲು ಕಾಣುತ್ತಿದೆ. ಸುಮಲತಾ ಅವರು ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಹಾಸನದಲ್ಲಿಯೂ ಬಿಜೆಪಿ ಗೆಲ್ಲುವ ವಾತಾವರಣವಿದೆ. ತುಮಕೂರಿನಲ್ಲಿ ನಮ್ಮ ಅಭ್ಯರ್ಥಿಯೇ ಜಯ ಗಳಿಸುತ್ತಾರೆ. ಈ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಒಳ ಜಗಳ ನಮಗೆ ಅನುಕೂಲವಾಯಿತು. ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಬೆಂಗಳೂರಿನ ನಾಲ್ಕೂ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳು ಜಯ ಗಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  • ಕಾಂಗ್ರೆಸ್‍ನಿಂದ ಋಣಮುಕ್ತವಾದ್ರೆ ಸಾಕೆಂದು ಸಿಎಂ ನನ್ಮುಂದೆ ಹೇಳಿದ್ದಾರೆ: ಕೆ.ಎಸ್.ಈಶ್ವರಪ್ಪ

    ಕಾಂಗ್ರೆಸ್‍ನಿಂದ ಋಣಮುಕ್ತವಾದ್ರೆ ಸಾಕೆಂದು ಸಿಎಂ ನನ್ಮುಂದೆ ಹೇಳಿದ್ದಾರೆ: ಕೆ.ಎಸ್.ಈಶ್ವರಪ್ಪ

    ಶಿವಮೊಗ್ಗ: ಕಾಂಗ್ರೆಸ್‍ನಿಂದ ಋಣಮುಕ್ತರಾದರೆ ಸಾಕು ಎಂಬ ಭಾವನೆಯಲ್ಲಿ ಸಿಎಂ ಕುಮಾರಸ್ವಾಮಿ ಇದ್ದಾರೆ. ಈ ವಿಚಾರವನ್ನು ಸ್ವತಃ ಅವರೇ ನನ್ನ ಬಳಿ ಹೇಳಿಕೊಂಡಿದ್ದಾರೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೊಸ ಬಾಂಬ್ ಹಾಕಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಹೆಣೆದ ಬಲೆಯಲ್ಲಿ ಕುಮಾರಸ್ವಾಮಿ ಅವರು ಸಿಕ್ಕಿಕೊಂಡು ಒದ್ದಾಡುತ್ತಿದ್ದಾರೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದರೆ ಚೆನ್ನಾಗಿತ್ತೆಂದು ನಮ್ಮ ಮಂತ್ರಿಗಳು ತಲೆ ಚಚ್ಚಿಕೊಂಡಿದ್ದಾರೆಂದು ನನ್ನ ಬಳಿ ಕುಮಾರಸ್ವಾಮಿ ಹೇಳಿದ್ದಾರೆ. ಇದು ಸುಳ್ಳು ಎನ್ನುವುದಾದರೆ ಅವರ ಆತ್ಮ ಸಾಕ್ಷಿಯಿಂದ ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.

    ಪ್ರಪಂಚದ ಭೂಪಟದಲ್ಲಿ ಪಾಕಿಸ್ತಾನ ಎನ್ನುವುದು ಇರತ್ತೋ? ಇಲ್ಲವೋ ನೋಡೋಕೆ ನಾಲ್ಕು ದಿನ ಕಾಯಬೇಕಿದೆ. ಬಿನ್ ಲಾಡೆನ್ ಹೊಡೆಯೋಕೆ ಅಮೆರಿಕದವರು ಎಷ್ಟು ಸಮಯ ತಗೆದುಕೊಂಡಿದ್ದಾರೆ. ಒಬ್ಬ ವೀರ ಯೋಧನ ರೀತಿ ಪ್ರಧಾನಿ ಮೋದಿ ದೇಶ ಕಾಯುತ್ತಿದ್ದಾರೆ. ಸರಿಯಾದ ಸಮಯದಲ್ಲಿ ಉಗ್ರರರಿಗೆ ಪಾಠ ಕಲಿಸುತ್ತಾರೆ ಎಂದು ಹೇಳಿದರು.

    ಈ ಹಿಂದೆ ಒಬ್ಬ ಯೋಧನನ್ನು ಹತ್ಯೆಯ ವಿಚಾರವಾಗಿ ಹತ್ತು ದಿನ ಪಾರ್ಲಿಮೆಂಟ್‍ನಲ್ಲಿ ಚರ್ಚೆಯಾದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಈಗ ಪ್ರಧಾನಿ ಮೋದಿ ಅವರು ಹಂತ ಹಂತವಾಗಿ ಪಾಕಿಸ್ತಾನಕ್ಕೆ ಉತ್ತರ ನೀಡುತ್ತಿದ್ದಾರೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೈತ್ರಿ ಸರ್ಕಾರಕ್ಕೆ ಪಕ್ಷೇತರ ಶಾಸಕ ನಾಗೇಶ್ ಮತ್ತೆ ಬೆಂಬಲ

    ಮೈತ್ರಿ ಸರ್ಕಾರಕ್ಕೆ ಪಕ್ಷೇತರ ಶಾಸಕ ನಾಗೇಶ್ ಮತ್ತೆ ಬೆಂಬಲ

    ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಅವರು ಮತ್ತೆ ಬೆಂಬಲ ನೀಡಿದ್ದಾರೆ.

    ಮೈತ್ರಿ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಶಾಸಕ ನಾಗೇಶ್ ಅವರು ಕೆಲಹೊತ್ತು ಮಾತುಕತೆ ನಡೆಸಿ, ಬೆಂಬಲ ಪತ್ರವನ್ನು ನೀಡಿದ್ದಾರೆ. ಈ ವೇಳೆ ಜಲಸಂಪನ್ಮೂಲ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಕೂಡ ಇದ್ದರು.

    ಶಾಸಕ ನಾಗೇಶ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಗೂ ಮುನ್ನ ಸಿಎಂ ಕುಮಾರಸ್ವಾಮಿ ಅವರೊಂದಿಗೆ ವಿಧಾನಸಭೆಯಲ್ಲಿ ಮಾತುಕತೆ ನಡೆಸಿದ್ದರು. ಈ ನಿಟ್ಟಿನಲ್ಲಿ ಕಲಾಪ ಮುಗಿದ ಬಳಿಕ ತಮ್ಮ ಬೆಂಬಲ ಪತ್ರವನ್ನು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

    ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡಿದರೆ ಕ್ಷೇತ್ರದ ಅಭಿವೃದ್ಧಿ ಸಾಧ್ಯವಾಗುತ್ತದೆ ಎನ್ನುವ ಉದ್ದೇಶದಿಂದ ನಾಗೇಶ್ ಮತ್ತೆ ಬೆಂಬಲ ನೀಡಿದ್ದಾರೆ. ಆದರೆ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಯಾವುದೇ ಚರ್ಚೆಯಾಗಿಲ್ಲ. ಸಚಿವ ಡಿ.ಕೆ.ಶಿವಕುಮಾರ್ ಅವರ ಜೊತೆಗೆ ಉತ್ತಮ ಸಂಬಂಧ ಇರುವುದರಿಂದ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಶಾಸಕ ನಾಗೇಶ್ ಹಾಗೂ ರಾಣೇಬೆನ್ನೂರು ಶಾಸಕ ಆರ್.ಶಂಕರ್ ಅವರು ಕಳೆದ ತಿಂಗಳು ಮುಂಬೈನ ರೆಸಾರ್ಟಿನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ನಾನು ನಮ್ಮ ನಿರ್ಧಾರವನ್ನು ಬದಲಾಯಿಸಿದ್ದು, ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯುತ್ತೇವೆ ಎಂದು ಮಾಧ್ಯಮಗಳ ಮುಂದೆ ಹೇಳಿದ್ದರು. ಅಷ್ಟೇ ಅಲ್ಲದೆ ರಾಜ್ಯಪಾಲ ವಜುಬಾಯ್ ವಾಲಾ ಅವರಿಗೆ ಬಿಜೆಪಿ ಬೆಂಬಲ ನೀಡುವುದಾಗಿ ಪತ್ರ ನೀಡಿದ್ದರು. ಇದರಿಂದಾಗಿ 104 ಸ್ಥಾನದಿಂದ 106 ಶಾಸಕರ ಬೆಂಬಲ ಬಿಜೆಪಿಗೆ ಸಿಕ್ಕಿತ್ತು.

    ಈ ಹಿಂದೆ ಬೆಂಬಲ ಹಿಂಪಡೆಯಲು ಕಾರಣ ತಿಳಿಸಿದ್ದ ಶಾಸಕ ನಾಗೇಶ್ ಅವರು, ರಾಜ್ಯ ಹಾಗೂ ನಮ್ಮ ಕ್ಷೇತ್ರದ ಅಭಿವೃದ್ಧಿಯಾಗುತ್ತಿಲ್ಲ. ನಾನು ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯುತ್ತೇನೆ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೋಸ್ತಿ ಸರ್ಕಾರಕ್ಕೆ ಮತ್ತೊಂದು ಶಾಕ್- ಕಾಂಗ್ರೆಸ್ ಅತೃಪ್ತರ ಸಂಖ್ಯೆ ಏರಿಕೆ

    ದೋಸ್ತಿ ಸರ್ಕಾರಕ್ಕೆ ಮತ್ತೊಂದು ಶಾಕ್- ಕಾಂಗ್ರೆಸ್ ಅತೃಪ್ತರ ಸಂಖ್ಯೆ ಏರಿಕೆ

    ಬೆಂಗಳೂರು: ಕಾಂಗ್ರೆಸ್‍ನ ಮತ್ತೊಬ್ಬ ಶಾಸಕರು ಅತೃಪ್ತರ ಪಟ್ಟಿಗೆ ಸೇರಿದ್ದು, ಅತೃಪ್ತರ ಶಾಸಕರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಈ ಎಲ್ಲ ಬೆಳವಣಿಗೆಯಿಂದಾಗಿ ಮೈತ್ರಿ ಸರ್ಕಾರ ನಾಯಕರ ನಿದ್ದೆಗೆಡಸಿದೆ.

    ಹಿರೇಕೆರೂರು ಶಾಸಕ ಬಿಸಿ ಪಾಟೀಲ್ ಅವರು ನಿನ್ನೆ ರಾತ್ರಿಯೇ ಮುಂಬೈನ ರೆಸಾರ್ಟ್ ಗೆ ತೆರಳಿದ್ದಾರೆ. ಈ ಮೂಲಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕರಾದ ನಾಗೇಂದ್ರ ಹಾಗೂ ಮಹೇಶ್ ಕುಮಟಳ್ಳಿ ಗುಂಪನ್ನು ಬಿಸಿ ಪಾಟೀಲ್ ಸೇರಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

    ಬಿ.ಸಿ.ಪಾಟೀಲ್ ಅವರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ಸಚಿವ ಸಂಪುಟ ವಿಸ್ತರಣೆಗೂ ಮುನ್ನ ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪ್, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಂತ್ರಿ ಸ್ಥಾನದ ಆಕಾಂಕ್ಷೆಯನ್ನು ಬಿಚ್ಚಿಟ್ಟಿದ್ದರು. ಆದರೆ ಅವರಿಗೆ ಸಚಿವ ಸ್ಥಾನ ಕೈತಪ್ಪಿತ್ತು. ಹೀಗಾಗಿ ಮದುವೆ ನೆಪ ಹೇಳಿ ಕಾಂಗ್ರೆಸ್ ನಾಯಕರಿಂದ ದೂರ ಉಳಿದಿದ್ದರು.

    ಕಳೆದ ಬಾರಿಯ ಸಿಎಲ್‍ಪಿ ಸಭೆಗೆ ಬಂದಿದ್ದ ಬಿ.ಸಿ.ಪಾಟೀಲ್ ಅವರು, ನಾನು ಕಾಂಗ್ರೆಸ್ ಬಿಟ್ಟು ಹೋಗಲ್ಲ. ಅಸಮಾಧಾನ ಇತ್ತು. ಆದರೆ ಈಗಿಲ್ಲ ಎಂದು ಹೇಳಿದ್ದರು. ಈಗ ಅವರು ದಿಢೀರ್ ಆಗಿ ಅತೃಪ್ತ ಶಾಸಕರನ್ನು ಸೇರಿದ್ದು, ಕಾಂಗ್ರೆಸ್ ನಾಯಕರಿಗೆ ಶಾಕ್ ಕೊಟ್ಟಂತಾಗಿದೆ.

    ಮಾಜಿ ಸಿಎಂ ಸಿದ್ದರಾಮಯ್ಯ ಎರಡು ಬಾರಿ ವಿಪ್ ಜಾರಿ ಮಾಡಿದರೂ ಅತೃಪ್ತ ಶಾಸಕರು ಕೈಗೆ ಸಿಗುತ್ತಿಲ್ಲ. ಶಾಸಕರು ಮಾತ್ರ ಹೊಸ ಹೊಸ ಕಾರಣ ಹೇಳುತ್ತಲೇ ಮೈತ್ರಿ ನಾಯಕರಿಂದ ದೂರ ಉಳಿಯುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv