Tag: alliance government

  • ಹುಬ್ಬಳ್ಳಿಯಿಂದಲೇ ಪ್ರಧಾನಿ ಮೋದಿ ಪ್ರಚಾರ ಆರಂಭ: ಆರ್.ಅಶೋಕ್

    ಹುಬ್ಬಳ್ಳಿಯಿಂದಲೇ ಪ್ರಧಾನಿ ಮೋದಿ ಪ್ರಚಾರ ಆರಂಭ: ಆರ್.ಅಶೋಕ್

    – ಫೆಬ್ರವರಿ 10ಕ್ಕೆ ಹುಬ್ಬಳ್ಳಿಯಲ್ಲಿ ನಡೆಯಲಿದೆ ಬೃಹತ್ ರ‍್ಯಾಲಿ

    ಹುಬ್ಬಳ್ಳಿ: ಹುಬ್ಬಳ್ಳಿಯಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಮೈದಾನದಲ್ಲಿ ಫೆಬ್ರವರಿ 10ರಂದು ಬೃಹತ್ ಸಮಾವೇಶ ನಡೆಯಲಿದೆ. ಧಾರವಾಡ, ಹಾವೇರಿ ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾರ್ಯಕರ್ತರು ಸೇರಿದಂತೆ ರಾಜ್ಯ ನಾಯಕರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಆದರೆ ಚುನಾವಣಾ ಕಣಕ್ಕೆ ಇಳಿಯುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಲ್ಲ. ಈ ಕುರಿತು ಪಕ್ಷದ ವರಿಷ್ಠರೇ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಮಾಹಿತಿ ನೀಡಿದರು.

    ಮೈತ್ರಿ ಸರ್ಕಾರ ವಿರುದ್ಧ ಕಿಡಿಕಾರಿದ ಆರ್.ಅಶೋಕ್ ಅವರು, ರಾಜ್ಯದಲ್ಲಿ ಅಧಿಕೃತ ಸಿಎಂ ಯಾರು? ಅನಧಿಕೃತ ಸಿಎಂ ಯಾರು? ನಾನು ಹೇಳಿರುವ ಬಜೆಟ್ ಮಂಡನೆಯಾಗುತ್ತದೆ. ನಾನು ಹೇಳಿದ ಸಂಗತಿಗಳು ಬಜೆಟ್‍ನಲ್ಲಿ ಇವೆ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಕುಟುಕಿದರು.

    ಮೈತ್ರಿ ಸರ್ಕಾರದ ಬಜೆಟ್ ಮಂಡನೆ ಆಗುತ್ತದೆಯೋ ಅಥವಾ ಕಾಂಗ್ರೆಸ್ ಬಜೆಟ್ ಮಂಡನೆಯಾಗುತ್ತದೆಯೋ ಎಂದ ಅವರು, ನಾವು ಯಾವುದೇ ಕಾರಣಕ್ಕೂ ಇನ್ನು ಮುಂದೆ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಯಾವ ಸಮಯದಲ್ಲಿ ಬೇಕಾದ್ರೂ ಬಿಜೆಪಿ ಅಧಿಕಾರಕ್ಕೆ ಬರಬಹುದು ಎಂದು ಮೈತ್ರಿ ಸರ್ಕಾರಕ್ಕೆ ಆಪರೇಷನ್ ಕಮಲ ಆತಂಕ ಮೂಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ತನ್ನದೇ ಶೈಲಿಯಲ್ಲಿ ಬಿಜೆಪಿ ಶಾಸಕರಿಗೆ ಕಾಂಗ್ರೆಸ್‍ನಿಂದ ಸಂಕ್ರಾಂತಿಯ ವಿಶ್!

    ತನ್ನದೇ ಶೈಲಿಯಲ್ಲಿ ಬಿಜೆಪಿ ಶಾಸಕರಿಗೆ ಕಾಂಗ್ರೆಸ್‍ನಿಂದ ಸಂಕ್ರಾಂತಿಯ ವಿಶ್!

    ಬೆಂಗಳೂರು: ಗುರುಗ್ರಾಮದ ಪಂಚತಾರಾ ಹೋಟೆಲ್‍ನಲ್ಲಿರುವ ಬಿಜೆಪಿ ಶಾಸಕರಿಗೆ ಕರ್ನಾಟಕ ಕಾಂಗ್ರೆಸ್ ಮಂಗಳವಾರ ರಾತ್ರಿ ವಿಶೇಷವಾಗಿ ಶುಭಾಶಯ ತಿಳಿಸಿದೆ.

    ಕರ್ನಾಟಕ ಕಾಂಗ್ರೆಸ್‍ನ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿ, ರೆಸಾರ್ಟ್ ಬಂಧನದಲ್ಲಿರುವ ಬಿಜೆಪಿಯ 104 ಶಾಸಕರಿಗೆ ಸಂಕ್ರಾಂತಿಯ ಶುಭಾಶಯಗಳು. ಗೋಮಾತೆ ಬಗ್ಗೆ ಅತಿ ಹೆಚ್ಚು ಮಾತನಾಡುವವರು ಇಂದು ಗೋವುಗಳನ್ನು ಕಿಚ್ಚು ಹಾಯಿಸದೆ, ಅವುಗಳ ಪೂಜೆ ಮಾಡದೇ ರೆಸಾರ್ಟ್ ನಲ್ಲಿ ಮೋಜು ಮಾಡುತ್ತಿದ್ದಾರೆ. ಕುಟುಂಬದವರೊಂದಿಗೆ ಸಂಕ್ರಾಂತಿ ಆಚರಣೆಯನ್ನೂ ಮಾಡಲಾಗದ ಹಕ್ಕುಗಳ ಹರಣ ಬಿಜೆಪಿಯಿಂದ ತಮ್ಮ ಶಾಸಕರ ಮೇಲೆಯೇ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ.

    ಈ ಟ್ವೀಟ್ ನೋಡಿದ ಕೆಲ ನೆಟ್ಟಿಗರು ಕಾಂಗ್ರೆಸ್ ಕಾಲೆಳೆದಿದ್ದಾರೆ. ರೆಸಾರ್ಟ್ ಹೊರಗಡೆ ಇದ್ದೂ ಕೂಡ ಹಬ್ಬ ಸೆಲೆಬ್ರೇಟ್ ಮಾಡದೆ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿರುವ ತಮಗೂ ಹಬ್ಬದ ಶುಭಾಶಯಗಳು. ವಿಧಾನಸಭಾ ಚುನಾವಣೆ ಮುಗಿದ ಮೇಲೆ ನಿಮ್ಮ ಶಾಸಕರನ್ನು ರೆಸಾರ್ಟ್ ನಲ್ಲಿ ಕೂಡಿ ಹಾಕಿ, ಅವರಿಗೆ ಹೆಚ್ಚು ಹಕ್ಕುಗಳನ್ನು ಕೊಟ್ಟಿದ್ರಿ ಅಲ್ವಾ ಎಂದು ಸೋಮು ಸಜ್ಜನ್ ಎಂಬವರು ಟಾಂಗ್ ಕೊಟ್ಟಿದ್ದಾರೆ.

    ಮೈತ್ರಿ ಸರ್ಕಾರ ರಚಿಸುವ ಮೊದಲು ಕಾಂಗ್ರೆಸ್ ಹಾಗೂ ಜೆಡಿಎಸ್‍ನ ಶಾಸಕರನ್ನು ರೆಸಾರ್ಟ್ ನಲ್ಲಿ ಇರಿಸಿದ್ದೀರಿ ಅಲ್ಲವೇ? ಗುಜರಾತಿನಿಂದ ಕೆಲ ಶಾಸಕರನ್ನು ರಾಜ್ಯಕ್ಕೆ ಕರೆತಂದು ಬಿಡದಿಯಲ್ಲಿ ಇಟ್ಟವರು ನೀವಲ್ಲವೇ? ಬೆರಳು ತೋರಿಸಲು ನಾಚಿಕೆ ಇಲ್ಲವೇ ಎಂದು ಸಂತೋಷ್ ಪ್ರಭು ಎಂಬವರು ಪ್ರಶ್ನಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಟ್ರಬಲ್ ಶೂಟರ್ ಕಾಲಿಗೆ ಬಿದ್ದ ಪಿಟಿಪಿ, ತುಕಾರಾಂ – ರಾಜಭವನದಲ್ಲಿ ಡಿಕೆಶಿ ಮಿಂಚಿಂಗ್

    ಟ್ರಬಲ್ ಶೂಟರ್ ಕಾಲಿಗೆ ಬಿದ್ದ ಪಿಟಿಪಿ, ತುಕಾರಾಂ – ರಾಜಭವನದಲ್ಲಿ ಡಿಕೆಶಿ ಮಿಂಚಿಂಗ್

    ಬೆಂಗಳೂರು: ಮೈತ್ರಿ ಸರ್ಕಾರದ ಕಾಂಗ್ರೆಸ್ ಪಕ್ಷದ ಪಾಲಿಗೆ ತೀವ್ರ ತಲೆ ನೋವಾಗಿದ್ದ ಸಂಪುಟ ವಿಸ್ತರಣೆ ಕಾರ್ಯಕ್ರಮ ಇಂದು ನಡೆದಿದ್ದು, ಸರ್ಕಾರದ ನೂತನ ಸಚಿವರಾಗಿ 8 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಆದರೆ ಇಂದು ನಡೆದ ಕಾರ್ಯಕ್ರಮದಲ್ಲಿ ನೂತನ ಸಚಿವರಿಗಿಂತ ಜಲಸಂಪ್ಮೂಲ ಸಚಿವ ಡಿಕೆ ಶಿವಕುಮಾರ್ ಅವರೇ ಹೆಚ್ಚು ಮಿಂಚಿದರು.

    ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಹಾಜರಿದ್ದ ಸಚಿವ ಡಿಕೆಶಿ ಅವರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಆಗಮಿಸಿದ ಶಾಸಕರನ್ನು ಬರಮಾಡಿಕೊಂಡರು. ಬಳ್ಳಾರಿ ಪಾಲಿಟಿಕ್ಸ್ ನಲ್ಲಿ ಗೆದ್ದ ಖುಷಿಯಲ್ಲಿ ಡಿಕೆಶಿವಕುಮಾರ್ ಕಾಲಿಗೆ ಪಿಟಿ ಪರಮೇಶ್ವರ್ ನಾಯ್ಕ್ ಮತ್ತು ತುಕಾರಾಂ ಬಿದ್ದು ಆಶಿರ್ವಾದ ತೆಗೆದುಕೊಂಡರು.

    ಮೊದಲಿಗೆ ಎಂಬಿ ಪಾಟೀಲ್, ಆರ್‍ಬಿ ತಿಮ್ಮಾಪುರ, ಸತೀಶ್ ಜಾರಕಿಹೊಳಿ, ಸಿಎಸ್ ಶಿವಳ್ಳಿ, ಪಿಟಿ ಪರಮೇಶ್ವರ ನಾಯ್ಕ್, ಇ ತುಕಾರಂ, ರಹೀಂ ಖಾನ್, ಎಂಟಿಬಿ ನಾಗರಾಜ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜೂಭಾಯ್ ವಾಲಾ ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿದರು. ಸಮಾರಂಭದಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

    ಉಳಿದಂತೆ ಬಳ್ಳಾರಿಯಲ್ಲಿ ತಮ್ಮ ರಾಜಕೀಯ ರಾಜಕೀಯ ಗೇಮ್ ಆಡಲು ಶುರುಮಾಡಿರುವ ಡಿಕೆಶಿ ಅವರು ತಮ್ಮದೇ ತಂತ್ರದ ಮೂಲಕ ಶಾಸಕರಿಗೆ ಸಚಿವ ಸ್ಥಾನ ಸಿಗುವಂತೆ ಮಾಡಿದ್ದಾರೆ ಎಂಬ ಚರ್ಚೆ ನಡೆದಿದೆ. ಬಳ್ಳಾರಿಯಿಂದ ಪಿ.ಟಿ ಪರಮೇಶ್ವರ್ ನಾಯ್ಕ್ ಮತ್ತು ತುಕಾರಂ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಡಿಕೆ ಶಿವಕುಮಾರ್ ತಮ್ಮ ಯೋಜನೆಯಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಬಳ್ಳಾರಿಯಿಂದ ಕಾಂಗ್ರೆಸ್ ಶಾಸಕರಾದ ನಾಗೇಂದ್ರ ಮತ್ತು ಆನಂದ್ ಸಿಂಗ್ ಮಂತ್ರಿ ಸ್ಥಾನ ಸಿಗುತ್ತದೆ ಬಗ್ಗೆ ಹೆಚ್ಚಿನ ನಿರೀಕ್ಷೆ ಇತ್ತು. ಆದರೆ ಅಂತಿಮ ಹಂತದಲ್ಲಿ ಪ್ರಭಾವಿಗಳಲ್ಲದ ಇಬ್ಬರು ನಾಯಕರಿಗೆ ಸಚಿವಗಿರಿ ಕೊಡಲಾಗುತ್ತಿದೆ. ಈ ಮೂಲಕ ನಾಗೇಂದ್ರ ಮತ್ತು ಆನಂದ್ ಸಿಂಗ್ ಮಂತ್ರಿಯಾದರೇ ಬಳ್ಳಾರಿಯಲ್ಲಿ ತಮ್ಮ ಪ್ರಾಬಲ್ಯವಿರುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಅವರೇ ಅವರಿಬ್ಬರ ಮಂತ್ರಿ ಸ್ಥಾನಕ್ಕೆ ಕೊಕ್ಕೆ ಹಾಕಿದ್ದಾರೆ ಎಂದು ಬಳ್ಳಾರಿ ಜನತೆ ಮಾತನಾಡಿಕೊಳ್ಳುತ್ತಿದ್ದಾರೆ.

    ತುಕಾರಂ – ಪಿ.ಟಿ ಪರಮೇಶ್ವರ್ ನಾಯ್ಕ್ 

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಂಪುಟ ಸಭೆಯ ವೇಳೆ ಅರ್ಧಕ್ಕೆ ಹೊರ ನಡೆದ ರಮೇಶ್ ಜಾರಕಿಹೊಳಿ!

    ಸಂಪುಟ ಸಭೆಯ ವೇಳೆ ಅರ್ಧಕ್ಕೆ ಹೊರ ನಡೆದ ರಮೇಶ್ ಜಾರಕಿಹೊಳಿ!

    ಬೆಂಗಳೂರು: ಸಂಪುಟ ಸಭೆಯ ವೇಳೆ ಅರ್ಧಕ್ಕೆ ಎದ್ದು ಪೌರಾಡಳಿತ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿ ಹೊರ ನಡೆದಿದ್ದಾರೆ. ಇವರ ಈ ನಡೆ ಈಗ ಮೈತ್ರಿ ಸರ್ಕಾರದಲ್ಲಿ ಭಾರೀ ಚರ್ಚೆಯಾಗುತ್ತಿದೆ.

    ಕಬ್ಬು ಬೆಳೆಗಾರರ ಪ್ರತಿಭಟನೆಯ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟ ಸಭೆ ಕರೆದಿದ್ದರು. ಈ ಸಭೆಯಲ್ಲಿ ಸಿಎಂ ಕೇಳಿದ ಪ್ರಶ್ನೆಯಿಂದ ಅಸಮಾಧಾನಗೊಂಡು ಹೊರನಡೆದಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ.

    ಸಭೆಯಲ್ಲಿ ನಿಮ್ಮ ಕಾರ್ಖಾನೆಯಿಂದಲೇ ರೈತರಿಗೆ ಸಾಕಷ್ಟು ಹಣ ಬಾಕಿ ಇದೆ. ಆದರೆ ಇದಕ್ಕೆ ಸಂಬಂಧಿಸಿದಂತೆ ನೀವೇ ಮಾತನಾಡುತ್ತಿಲ್ಲ. ನಿಮ್ಮ ನಿಮ್ಮ ಜಿಲ್ಲೆಯಲ್ಲಿ ರೈತ ಮುಖಂಡರ ಜೊತೆ ಮಾತನಾಡಬೇಕಿತ್ತು. ಮಾತನಾಡದ ಕಾರಣ ಈಗ ಇಲ್ಲಿಯವರೆಗೆ ತಲುಪಿದೆ ಎಂದು ಸಿಎಂ ಖಾರವಾಗಿ ಪ್ರಶ್ನೆ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ.

    ಎಚ್.ಡಿ.ಕುಮಾರಸ್ವಾಮಿ ಅವರ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ಸಚಿವ ರಮೇಶ್ ಜಾರಕಿಹೊಳಿ ಸಭೆಯಿಂದ ಹೊರ ನಡೆದಿದ್ದಾರೆ. ಅಷ್ಟೇ ಅಲ್ಲದೆ ವಿಧಾನ ಸೌಧದ ಉತ್ತರ ಬಾಗಿಲಿನಲ್ಲಿ ಮಾಧ್ಯಮದವರು ಇರುತ್ತಾರೆ ಎನ್ನುವ ಕಾರಣಕ್ಕೆ ಮಾರ್ಗ ಬದಲಿಸಿ ಪಶ್ಚಿಮ ಬಾಗಿಲಿನ ಮೂಲಕ ಹೊರ ಬಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆ: ಎಚ್‍ಡಿಡಿ

    ಮೈತ್ರಿ ಸರ್ಕಾರ ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆ: ಎಚ್‍ಡಿಡಿ

    ಬೆಂಗಳೂರು: ಇಂದು ಕರ್ನಾಟಕ ಲೋಕಸಭಾ ಮತ್ತು ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಮಾಜಿ ಪ್ರಧಾನ ಮಂತ್ರಿ ದೇವೇಗೌಡ ಅವರು ಟ್ವೀಟ್ ಮೂಲಕ ರಾಜ್ಯದ ಜನತೆಗೆ ಅಭಿನಂದನೆಯನ್ನು ತಿಳಿಸಿದ್ದಾರೆ.

    ಉಪಚುನಾವಣೆಯಲ್ಲಿ ಮೈತ್ರಿ ಸರ್ಕಾರ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಚ್‍ಡಿ ದೇವೇಗೌಡ ಅವರು “ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ಬೆಂಬಲಿಸುತ್ತಿರುವ ರಾಜ್ಯದ ಜನತೆಗೆ ನನ್ನ ಅಭಿನಂದನೆಗಳು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

    ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರ ಇಡಲು ನಾವು ಒಂದಾಗಿದ್ದೇವೆ ಎಂದು ವಿಧಾನಸಭಾ ಚುನಾವಣೆಯ ಫಲಿತಾಂಶದ ವೇಳೆ ಹೇಳಿದ್ದ ಎಚ್‍ಡಿಡಿ ಈ ಚುನಾವಣೆಯ ಸಮಯದಲ್ಲಿ ಮೋದಿಯನ್ನು ಸೋಲಿಸಲು ಒಂದಾಗಿದ್ದೇವೆ. ಲೋಕಸಭಾ ಚುನಾವಣೆಗೆ ಇಲ್ಲಿಂದಲೇ ಸ್ಪಷ್ಟ ಸಂದೇಶ ರವಾನಿಸುತ್ತೇವೆ ಎಂದು ಪ್ರಚಾರದ ವೇಳೆ ಭಾಷಣ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಸವರಾಜ ಹೊರಟ್ಟಿಗೆ ಸಿಗುತ್ತಾ ಮಂತ್ರಿ ಭಾಗ್ಯ..?

    ಬಸವರಾಜ ಹೊರಟ್ಟಿಗೆ ಸಿಗುತ್ತಾ ಮಂತ್ರಿ ಭಾಗ್ಯ..?

    ಬೆಂಗಳೂರು: ವಿಧಾನ ಪರಿಷತ್ ಹಂಗಾಮಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮಂತ್ರಿ ಭಾಗ್ಯ ಸಿಗಲಿದೆ ಎಂದು ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದ ಮೂಲಗಳು ತಿಳಿಸಿವೆ.

    ಬಿಎಸ್‍ಪಿಯ ಎನ್.ಮಹೇಶ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಗೆ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಆಯ್ಕೆ ಸಾಧ್ಯತೆ ಇದೆ. ತೆರವಾದ ಖಾತೆ ಈಗ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಬಳಿಯೇ ಇದೆ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಪರೀಕ್ಷೆಗಳು ಹತ್ತಿರವಾಗುತ್ತಿದ್ದು, ಬಹಳ ದಿನಗಳ ಕಾಲ ಖಾತೆ ಮುಖ್ಯಮಂತ್ರಿಗಳ ಬಳಿ ಇರಿಸಲು ಅಸಾಧ್ಯ. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಮೈತ್ರಿ ಸರ್ಕಾರದಲ್ಲಿ ಭಾರೀ ಲಾಬಿ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.

    ಈ ಹಿಂದೆ ಬಸವರಾಜ ಹೊಟ್ಟಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅಷ್ಟೇ ಅಲ್ಲದೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಮನವಿಗೆ ಬಸವರಾಜ ಹೊರಟ್ಟಿ ಸಕಾರಾತ್ಮಕವಾಗಿ ಸ್ಪಂದಿಸುತ್ತಾರೆ ಎನ್ನುವ ನಂಬಿಕೆಯಿಂದ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

    ಸಚಿವ ಸಂಪುಟ ವಿಸ್ತರಣೆಗೂ ಮುನ್ನವೇ ಬಸವರಾಜ ಹೊರಟ್ಟಿ ಅವರಿಗೆ ಮಂತ್ರಿಗಿರಿ ಸಿಗಲಿದೆ. ಈ ಹಿಂದೆಯೇ ಅವರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದರು. ಈಗ ಆ ಭಾಗ್ಯ ಕೂಡಿಬಂದಿದೆ ಎನ್ನಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಮ್ಮಿಶ್ರ ಸರ್ಕಾರ ಸೇಫ್ಟಿಗೆ ನಾಯಕರ ಮುಂದಿದೆ ಎರಡು ಮಹತ್ವದ ಮೆಟ್ಟಿಲು!

    ಸಮ್ಮಿಶ್ರ ಸರ್ಕಾರ ಸೇಫ್ಟಿಗೆ ನಾಯಕರ ಮುಂದಿದೆ ಎರಡು ಮಹತ್ವದ ಮೆಟ್ಟಿಲು!

    – ಸಕ್ಸಸ್ ಆದ್ರೆ, ಮೈತ್ರಿಯನ್ನ ಟಚ್ ಮಾಡೋಕೆ ಆಗಲ್ಲವಂತೆ!

    ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಮುಂದೆ ಎರಡು ಮಹತ್ವದ ಮೆಟ್ಟಿಲುಗಳಿದ್ದು, ಒಂದು ವೇಳೆ ಈ ಮೆಟ್ಟಿಲು ಏರಿದ್ದಲ್ಲಿ ಮೈತ್ರಿಯನ್ನು ಯಾರಿಂದಲೂ ಟಚ್ ಮಾಡೋದಕ್ಕೆ ಸಾಧ್ಯವಿಲ್ಲ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

    ಹೌದು, ರಾಜ್ಯದಲ್ಲೂ ಉಪಚುನಾವಣೆ ಎದುರಾಗಿದ್ದು, ಮೂರು ಪಕ್ಷಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಮೈತ್ರಿ ಸರ್ಕಾರದ ರಚನೆಯ ಬಳಿಕ ಪ್ರತಿನಿತ್ಯ ‘ಆಪರೇಷನ್ ಕಮಲ’ಕ್ಕೆ ಯಾರು ಒಳಗಾಗುತ್ತಾರೋ ಎಂಬ ಪ್ರಶ್ನೆಯೊಂದು ಜೆಡಿಎಸ್ ಮತ್ತು ಕಾಂಗ್ರೆಸ್ ವರಿಷ್ಠರಲ್ಲಿ ಹುಟ್ಟಿಕೊಂಡಿರುವುದು ನಿಜ. ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಚುನಾವಣೆ ಪೂರ್ವ ಮೈತ್ರಿಯನ್ನು ಮಾಡಿಕೊಂಡಿದ್ದು, ಕ್ಷೇತ್ರಗಳನ್ನು ಸಹ ಹಂಚಿಕೊಂಡಿವೆ. ಮಂಡ್ಯ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರ, ರಾಮನಗರದ ವಿಧಾನಸಭಾ ಕ್ಷೇತ್ರ ಜೆಡಿಎಸ್ ಪಾಲಾದ್ರೆ, ಜಮಖಂಡಿ ಹಾಗು ಬಳ್ಳಾರಿ ಕಾಂಗ್ರೆಸ್ ಪಡೆದುಕೊಂಡಿದೆ. ಚುನಾವಣೆಯಲ್ಲಿ ಅತಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಜನ ಮೈತ್ರಿ ಪರವಾಗಿ ಇದ್ದಾರೆ ಎಂಬುದನ್ನು ತೋರಿಸಲು ನಾಯಕರು ಕಸರತ್ತು ಆರಂಭಿಸಿದ್ದಾರೆ.

    ಇತ್ತ ಬಿಜೆಪಿ ಸಹ ಕಾಂಗ್ರೆಸ್ ಮತ್ತು ಜೆಡಿಎಸ್ ಭದ್ರಕೋಟೆಯಲ್ಲಿ ಗೆಲುವು ಸಾಧಿಸುವ ಮೂಲಕ ಜನ ಮೈತ್ರಿ ವಿರುದ್ಧ ಇದ್ದಾರೆ. ಇದು 2019ರ ಲೋಕಸಭಾ ಚುನಾವಣೆಗೆ ಮುನ್ನುಡಿ ಎಂದು ಸಾಬೀತು ಮಾಡಲು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ರಣತಂತ್ರ ರೂಪಿಸಲಾಗುತ್ತಿದೆ. ಸದ್ಯ ಸರ್ಕಾರದ ಮುಂದೆ ಎರಡು ಮಹತ್ವದ ಮೆಟ್ಟಿಲುಗಳಿದ್ದು, ಒಂದು ವೇಳೆ ಎರಡು ಮೆಟ್ಟಿಲುಗಳಿದ್ದು ಕಾಂಗ್ರೆಸ್ ಮತ್ತು ಜೆಡಿಎಸ್ ಯಶಸ್ವಿಯಾಗಿ ಏರಿದಲ್ಲಿ ಮುಂದಿನ ದಿನಗಳಲ್ಲಿ ಸಮ್ಮಿಶ್ರ ಸರ್ಕಾರವನ್ನು ಯಾರಿಂದಲೂ ಟಚ್ ಮಾಡೋದಕ್ಕೆ ಸಾಧ್ಯವಿಲ್ಲ ಎಂದು ವಿಶ್ಲೇಷಣೆ ಕೇಳಿಬಂದಿದೆ.

    ಮೊದಲ ಮೆಟ್ಟಿಲು ಏನು?
    ಯಡಿಯೂರಪ್ಪರ ಸ್ವಕ್ಷೇತ್ರ ಶಿವಮೊಗ್ಗದಲ್ಲಿ ಜೆಡಿಎಸ್ ಗೆಲುವು ಸಾಧಿಸಿದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಲಿದೆ. ಶಿವಮೊಗ್ಗದಲ್ಲಿ ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಕಣಕ್ಕೆ ಇಳಿಯುವುದು ಖಚಿತವಾಗಿದೆ. ಒಂದು ವೇಳೆ ಬಿ.ವೈ.ರಾಘವೇಂದ್ರ ಸೋಲನ್ನಪ್ಪಿದ್ದಲ್ಲಿ, ಮಗನನ್ನೆ ಗೆಲ್ಲಿಸಿಕೊಳ್ಳಲಾಗದ ಬಿಎಸ್‍ವೈ ಆಪರೇಷನ್ ಕಮಲದ ಬಗ್ಗೆ ಮಾತನಾಡುತ್ತಾರೆ ಎನ್ನುವ ವಿಚಾರವನ್ನು ಪ್ರಸ್ತಾಪಿಸಿ ತಿರುಗೇಟು ನೀಡಲು ಮೈತ್ರಿ ನಾಯಕರು ಚಿಂತನೆ ನಡೆಸಿದ್ದಾರೆ.

    ಯಡಿಯೂರಪ್ಪನವರ ರಾಜೀನಾಮೆಯಿಂದ ತೆರವಾಗಿರುವ ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನ ಗೆಲ್ಲಿಸಲೇಬೇಕಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಾಕಷ್ಟು ಚುನಾವಣಾ ತಂತ್ರಗಳನ್ನು ಬೈ ಎಲೆಕ್ಷನ್ ನಲ್ಲಿ ಪ್ರಯೋಗಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

    ಮಾಜಿ ಸಿಎಂ ಬಂಗಾರಪ್ಪ ಕುಟುಂಬಸ್ಥರಾದ ಪುತ್ರ ಮಧು ಬಂಗಾರಪ್ಪ ಅಥವಾ ಪುತ್ರಿ ಗೀತಾ ಶಿವರಾಜ್‍ಕುಮಾರ್ ಅವರನ್ನು ಕಣಕ್ಕಿಳಿಸುವ ಚಿಂತನೆಯಲ್ಲಿ ಜೆಡಿಎಸ್ ಇದೆ. ಆದ್ರೆ ಇಬ್ಬರು ಚುನಾವಣೆಗೆ ಸ್ಫರ್ಧಿಸಲು ನಿರಾಸಕ್ತಿ ತೋರಿಸುತ್ತಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ. ಇಷ್ಟು ಬೇಗ ರಾಷ್ಟ್ರ ರಾಜಕಾರಣಕ್ಕೆ ಹೋಗೋದು ಬೇಡ, ಸಮ್ಮಿಶ್ರ ಸರ್ಕಾರದಲ್ಲಿ ಬೇರೆ ಅಧಿಕಾರ ಪಡಯುವ ಕುರಿತು ಮಧು ಬಂಗಾರಪ್ಪ ಚಿಂತಿಸುತ್ತಿದ್ದಾರೆ ಅಂತಲೂ ಹೇಳಲಾಗುತ್ತಿದೆ. ಇತ್ತ ಈ ಬಾರಿ ನಮಗೆ ಚುನಾವಣೆವೇ ಬೇಡ, ಬೇಕಾದ್ರೆ ಬಂದು ಪ್ರಚಾರ ಮಾಡುತ್ತೇವೆ ಎಂದು ಶಿವರಾಜ್‍ಕುಮಾರ್ ಸಿಎಂ ಕುಮಾರಸ್ವಾಮಿ ಅವರಿಗೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಎರಡನೇ ಮೆಟ್ಟಿಲು ಏನು?
    ಶಾಸಕ ಶ್ರೀರಾಮುಲು ಅವರ ರಾಜೀನಾಮೆಯಿಂದ ತೆರುವಾಗಿರುವ ಬಿಜೆಪಿ ಭದ್ರಕೋಟೆ ಬಳ್ಳಾರಿ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 6 ಶಾಸಕರು ಕಾಂಗ್ರೆಸ್‍ನಿಂದ ಆಯ್ಕೆಯಾಗಿ ಬಂದಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆ ಬಳಿಕ ಆಪರೇಷನ್ ಕಮಲ ಶ್ರೀರಾಮುಲು ಮುಂದಾಳತ್ವದಲ್ಲಿಯೇ ನಡೆಯುತ್ತಿದೆ ಎನ್ನುವ ಮಾತುಗಳು ಕೇಳಿಬಂದಿದೆ. ಇತ್ತ ಕಾಂಗ್ರೆಸ್ ಟ್ರಬಲ್ ಶೂಟರ್ ಸಚಿವ ಡಿ.ಕೆ.ಶಿವಕುಮಾರ್ ಬಳ್ಳಾರಿಯ ಉಸ್ತುವಾರಿ ಸಚಿವರು. ಈ ಹಿನ್ನೆಲೆಯಲ್ಲಿ ಶ್ರೀರಾಮುಲು ಮತ್ತು ಡಿ.ಕೆ.ಶಿವಕುಮಾರ್ ನಡುವೆ ಪ್ರತಿಷ್ಠೆಯ ಕಣವಾಗಿ ಬಳ್ಳಾರಿ ಉಪಚುನಾವಣೆ ಏರ್ಪಟ್ಟಿದೆ. ಬಳ್ಳಾರಿಯಲ್ಲಿ ಗೆಲುವು ಸಾಧಿಸುವ ಮೂಲಕ ಆಪರೇಷನ್ ಕಮಲಕ್ಕೆ ಮುಂದಾದವರಿಗೆ ಶಾಕ್ ಕೊಡಲು ಡಿಕೆ ಶಿವಕುಮಾರ್ ಪ್ಲಾನ್ ಮಾಡುತ್ತಿದ್ದಾರೆ.

    ಬಿಜೆಪಿಯಿಂದ ಶ್ರೀರಾಮುಲು ಸಹೋದರಿ ಜೆ.ಶಾಂತಾ ಸ್ಪರ್ಧಿಸೋದು ಖಚಿತವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಇದೂವರೆಗೂ ಅಂತಿಮವಾಗಿಲ್ಲ. ಬಳ್ಳಾರಿ ಚುನಾವಣೆಯಿಂದ ಜೆಡಿಎಸ್ ದೂರ ಉಳಿದಿದ್ದು, ಕಾಂಗ್ರೆಸ್‍ಗೆ ಸುಲಭ ಜಯ ಸಿಗುತ್ತೆ ಎಂಬುವುದು ಕೈ ನಾಯಕರ ಲೆಕ್ಕಾಚಾರ. ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಶ್ರೀರಾಮುಲುಗೆ ಮುಖಭಂಗ ಮಾಡಬೇಕು. ಕೈ ಅಭ್ಯರ್ಥಿ ಜಯಗಳಿಸಿದರೆ ಶ್ರೀರಾಮುಲು ಸಹ ಸಮ್ಮಿಶ್ರ ಸರ್ಕಾರದ ಬಗ್ಗೆ ಮತಾನಾಡಲಾರರು ಎನ್ನುವ ಅಭಿಪ್ರಾಯಕ್ಕೆ ಕಾಂಗ್ರೆಸ್ ನಾಯಕರು ಬಂದಿದ್ದಾರೆ ಎನ್ನಲಾಗಿದೆ.

    ಕೈ ಹಾಗೂ ತೆನೆ ನಾಯಕರ ಪ್ಲಾನ್ ವರ್ಕ್ ಔಟ್ ಆಗುತ್ತಾ? ಕೈ ಹಾಗೂ ತೆನೆ ನಾಯಕರಿಗೆ ಮುಖಭಂಗವಾಗಿ ಆಪರೇಷನ್ ಭೀತಿ ಮತ್ತಷ್ಟು ಹೆಚ್ಚುತ್ತಾ? ಎಲ್ಲದಕ್ಕೂ ಉಪ ಚುನಾವಣಾ ಫಲಿತಾಂಶವೇ ಉತ್ತರ ನೀಡಲಿದೆ. ನವೆಂಬರ್ 3ರಂದು ಜಮಖಂಡಿ, ರಾಮನಗರ ವಿಧಾನಸಭೆ ಮತ್ತು ಶಿವಮೊಗ್ಗ, ಮಂಡ್ಯ ಬಳ್ಳಾರಿ ಲೋಕಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ನವೆಂಬರ್ 6ರಂದು ಫಲಿತಾಂಶ ಹೊರ ಬರಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉಪಚುನಾವಣೆಯಿಂದ ದೂರವಿರಿ: ಶಾಸಕ ಸುಧಾಕರ್ ಟ್ವೀಟ್

    ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉಪಚುನಾವಣೆಯಿಂದ ದೂರವಿರಿ: ಶಾಸಕ ಸುಧಾಕರ್ ಟ್ವೀಟ್

    ಚಿಕ್ಕಬಳ್ಳಾಪುರ: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಉಪಚುನಾವಣೆಯಿಂದ ದೂರ ಇರಿ ಎಂದು ಶಾಸಕ ಸುಧಾಕರ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಉಪಚುನಾವಣೆಯಿಂದ ದೂರವಿರಿ. ಮೂರು ಲೋಕಸಭಾ ಸ್ಥಾನಗಳ ಉಪಚುನಾವಣೆಯಿಂದ ದೂರವಿರಿ. 4-5 ತಿಂಗಳಲ್ಲಿ ಮುಖ್ಯ ಚುನಾವಣೆ ಬರುವಾಗ ಉಪಚುನಾವಣೆ ಯಾಕೆ ಬೇಕು? ಕೇಂದ್ರ ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಪ್ರತಿಭಟಿಸಬೇಕು. ಇದರಿಂದ ಖಜಾನೆಯ ಹಣ ಖಾಲಿಯಾಗಲಿದ್ದು ಇದೊಂದು ಪ್ರಜಾಪ್ರಭುತ್ವದ ಕುಣಿತ ಅಂತ ಟ್ವೀಟ್ ಮಾಡಿದ್ದಾರೆ.

    ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಉಪಚುನಾವಣೆ ಘೋಷಣೆ ಮಾಡಿದ್ದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದರು.

    ಬಳ್ಳಾರಿ, ಶಿವಮೊಗ್ಗ ಮತ್ತು ಮಂಡ್ಯ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 3ರಂದು ನಡೆಯಲಿದ್ದು ನವೆಂಬರ್ 6 ರಂದು ಫಲಿತಾಂಶ ಪ್ರಕಟವಾಗಲಿದೆ. ಬಳ್ಳಾರಿ ಲೋಕಸಭೆ ಸದಸ್ಯರಾಗಿದ್ದ ಶ್ರೀರಾಮುಲು, ಶಿವಮೊಗ್ಗದ ಸಂಸದರಾಗಿದ್ದ ಬಿ.ಎಸ್. ಯಡಿಯೂರಪ್ಪ ಹಾಗೂ ಮಂಡ್ಯದಿಂದ ಆಯ್ಕೆಯಾಗಿದ್ದ ಪುಟ್ಟರಾಜು ಅವರು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಆಯ್ಕೆಯಾದ ಹಿನ್ನೆಲೆಯಲ್ಲಿ ಈ ಉಪ ಚುನಾವಣೆ ನಡೆಯಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೈತ್ರಿ ಸರ್ಕಾರದ ಸಂಪುಟ ಸಭೆ- ವರಮಹಾಲಕ್ಷ್ಮಿ ಹಬ್ಬಕ್ಕೆ ಸರ್ಕಾರ ಕೊಡುತ್ತಾ ಸಿಹಿ ಸುದ್ದಿ?

    ಮೈತ್ರಿ ಸರ್ಕಾರದ ಸಂಪುಟ ಸಭೆ- ವರಮಹಾಲಕ್ಷ್ಮಿ ಹಬ್ಬಕ್ಕೆ ಸರ್ಕಾರ ಕೊಡುತ್ತಾ ಸಿಹಿ ಸುದ್ದಿ?

    ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಂಪುಟ ಸಭೆ ಇಂದು ನಡೆಯಲಿದ್ದು, ಸಭೆಯಲ್ಲಿ ಹಲವು ಪ್ರಮುಖ ವಿಷಯಗಳು ಚರ್ಚೆ ಬರುವ ಸಾಧ್ಯತೆಗಳಿವೆ. ಅಲ್ಲದೇ ರಾಜ್ಯದ ರೈತರಿಗೆ ವರಮಹಾಲಕ್ಷ್ಮಿ ಹಬ್ಬಕ್ಕೆ ಮತ್ತೊಂದು ಸಿಹಿ ಸುದ್ದಿ ನೀಡಲಿದೆ ಎನ್ನಲಾಗಿದೆ.

    ಈಗಾಗಲೇ ಸಹಕಾರ ಬ್ಯಾಂಕ್‍ಗಳಲ್ಲಿನ ರೈತರ ಸಾಲಮನ್ನಾ ಮಾಡಿರುವ ಸರ್ಕಾರ, ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿನ ಸಾಲವನ್ನೂ ಮನ್ನಾ ಮಾಡುವುದಾಗಿ ಘೋಷಿಸಿತ್ತು. ಇಂದು ಸಂಜೆ 4 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ಗಳ ಸಾಲಮನ್ನಾಕ್ಕೆ ಸಮ್ಮತಿ ಸಿಗಲಿದೆ ಎನ್ನಲಾಗಿದೆ. ಇದರ ಜೊತೆಗೆ, ಕೊಡಗಿನ ನೆರೆ ಸಂತ್ರಸ್ತರಿಗೆ ಪರಿಹಾರ, ಪುನರ್ ನಿರ್ಮಾಣದ ಅನುದಾನದ ಬಗ್ಗೆಯೂ ಘೋಷಣೆಯಾಗುವ ಸಾಧ್ಯತೆ ಇದೆ.

    ಇತ್ತ ಕೇರಳ ರಾಜ್ಯ ಸರ್ಕಾರ ಪ್ರವಾಹದಲ್ಲಿ ಸಿಲುಕಿರುವ ಅಲ್ಲಿನ ಸಂತ್ರಸ್ತರ ಸಹಾಯಕ್ಕೆ ಬಂದಿದ್ದು, ಸಿಎಂ ಪಿಣರಾಯಿ ವಿಜಯನ್ ಪ್ರವಾಹ ಸಂತ್ರಸ್ತರಿಗೆ 1 ಲಕ್ಷ ರೂ. ವರೆಗೂ ಬಡ್ಡಿ ರಹಿತ ಸಾಲ ಘೋಷಣೆ ಮಾಡಿದ್ದಾರೆ. ಕುಟುಂಬದ ಒಬ್ಬರಿಗೆ 1 ಲಕ್ಷ ರೂ. ಇದು ಅನ್ವಯವಾಗಲಿದ್ದು, ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಅನುಕೂಲವಾಗಲಿದೆ. ಇದರೊಂದಿಗೆ ಸದ್ಯ ರಾಜ್ಯ ಸರ್ಕಾರದ ಮೇಲೂ ನಿರೀಕ್ಷೆ ಹೆಚ್ಚಾಗಿದ್ದು, ಕೊಡಗಿನ ಪ್ರವಾಹ ಸಂತ್ರಸ್ತರಿಗೂ ಬಡ್ಡಿ ರಹಿತ ಘೋಷಣೆ ಮಾಡಿ ಸರ್ಕಾರ ನೆರವು ನೀಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ದೋಸ್ತಿ ಸರ್ಕಾರ ನಡೆಸೋದು ಕಠಿಣ – ಇದು ಡಿಸಿಎಂ ಪರಮೇಶ್ವರ್ ಮಾತು

    ದೋಸ್ತಿ ಸರ್ಕಾರ ನಡೆಸೋದು ಕಠಿಣ – ಇದು ಡಿಸಿಎಂ ಪರಮೇಶ್ವರ್ ಮಾತು

    – ಆದ್ರೂ ರಾಜ್ಯದ ಒಳಿತಿಗೆ ಸಹಿಸ್ಕೋತೀವಿ

    ತುಮಕೂರು: ಸಮ್ಮಿಶ್ರ ಸರ್ಕಾರ ನಡೆಸೋದು ಕಠಿಣ ಅಂತಾ ಗೊತ್ತು. ಆದ್ರೂ ರಾಜ್ಯದ ಜನರ ಕಲ್ಯಾಣಕ್ಕಾಗಿ, ಎಲ್ಲರ ಒಳಿತಿಗಾಗಿ ಎಲ್ಲ ನೋವುಗಳನ್ನು ನುಂಗಿಕೊಂಡು ಕೆಲಸ ಮಾಡುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.

    ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಯ 76ನೇ ವರ್ಷಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿ ಉಪ ಮುಖ್ಯಮಂತ್ರಿಗಳು, ಸರ್ಕಾರ ರಚನೆಯ ವೇಳೆಯಲ್ಲಿ ಜೆಡಿಎಸ್ ಗೆ ನಾವು ರಾಜಕೀಯವಾಗಿ ಷರತ್ತು ಹಾಕಿಲ್ಲ. ನಮ್ಮ ಕಾಂಗ್ರೆಸ್ ಸರ್ಕಾರ ಬಡವರಿಗಾಗಿ ರೂಪಿಸಿರುವ ಅನ್ನ ಭಾಗ್ಯ, ಕ್ಷೀರ ಭಾಗ್ಯ, ಶಾದಿ ಭಾಗ್ಯ ಅಂತಹ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗಬೇಕೆಂಬ ಆಂತರಿಕ ಒಪ್ಪಂದ ಮಾಡಿಕೊಳ್ಳಲಾಗಿದೆ. ಆದರೂ ಸಮ್ಮಿಶ್ರ ಸರ್ಕಾರ ನಡೆಸೋದು ಕಠಿಣ. ರಾಜ್ಯದ ಆಡಳಿತದ ದೃಷ್ಟಿಯಿಂದ ಎಲ್ಲವನ್ನು ಸಹಿಸಿಕೊಂಡು ಸರ್ಕಾರ ನಡೆಸುತ್ತಿದ್ದೇವೆ ಎಂದು ಮನದಾಳದ ಮಾತನ್ನು ಹೊರಹಾಕಿದರು.

    ಆರ್‍ಎಸ್‍ಎಸ್ ನವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿಲ್ಲ. ಹಾಗಾಗಿ ಅವರಿಗೆ ಕ್ವಿಟ್ ಇಂಡಿಯಾ ಚಳವಳಿ ಗೊತ್ತೆ ಇಲ್ಲ. ಅಂತಹವರು ಕಾಂಗ್ರೆಸ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ಆರ್‍ಎಸ್‍ಎಸ್ ನವರು ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿಲ್ಲ ಅನ್ನೋದಕ್ಕೆ ನಮ್ಮಲ್ಲಿ ಪುರಾವೆಗಳಿವೆ. ಸ್ವಾತಂತ್ರ್ಯದ ಅರಿವಿಲ್ಲದ್ದವರು ಇಂದು ನಮ್ಮ ಕಾಂಗ್ರೆಸ್ ಬಗ್ಗೆ ಮಾತನಾಡುತ್ತಿದ್ದಾರೆ. ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ. ನಮ್ಮ ಪಕ್ಷದ ಅಡಿಯಲ್ಲೇ ಸ್ಥಳೀಯ ಸಂಸ್ಥೆಯ ಚುನಾವಣೆ ಎದುರಿಸುತ್ತೇವೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews