Tag: Almatti Dam

  • ತುಂಗಭದ್ರಾ ಜಲಾಶಯಕ್ಕೆ ಹೆಚ್ಚಾದ ಒಳಹರಿವು – 24 ಗಂಟೆಯಲ್ಲಿ 9 ಟಿಎಂಸಿ ನೀರು ಸಂಗ್ರಹ!

    ತುಂಗಭದ್ರಾ ಜಲಾಶಯಕ್ಕೆ ಹೆಚ್ಚಾದ ಒಳಹರಿವು – 24 ಗಂಟೆಯಲ್ಲಿ 9 ಟಿಎಂಸಿ ನೀರು ಸಂಗ್ರಹ!

    – ವಾರದೊಳಗೆ ಜಲಾಶಯ ಭರ್ತಿ ಸಾಧ್ಯತೆ
    – ಆಲಮಟ್ಟಿ ಜಲಾಶಯದ 14 ಗೇಟ್ ಓಪನ್

    ಬಳ್ಳಾರಿ: ಮಲೆನಾಡು ಅಚ್ಚುಕಟ್ಟು ಪ್ರದೇಶದಲ್ಲಿ ನಿರಂತರ ಮಳೆ (Heavy Rain) ಸುರಿಯುತ್ತಿರುವುದರಿಂದ ತುಂಗಭದ್ರಾ ಜಲಾಶಯಕ್ಕೆ‌ (Tungabhadra Dam) ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ವಿಜಯನಗರ (Vijayanagara) ಜಿಲ್ಲೆಯ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಎರಡು ದಿನಗಳಿಂದ ಪ್ರತಿನಿತ್ಯ 1 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬರ್ತಿದೆ.

    105 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇದೀಗ 55.972 ಟಿಎಂಸಿ ನೀರು ಸಂಗ್ರಹವಾಗಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 9 ಟಿಎಂಸಿ ನೀರು ಜಲಾಶಯಕ್ಕೆ ಹರಿದುಬಂದಿದೆ (Water Inflow). ಸದ್ಯ ಜಲಾಶಯಕ್ಕೆ 1,08,090 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, 400 ಕ್ಯುಸೆಕ್ ನೀರನ್ನ ಹೊರಗೆ ಬಿಡಲಾಗ್ತಿದೆ. ಇದನ್ನೂ ಓದಿ: ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲ ಅನ್ನೋ ಸಿದ್ದರಾಮಯ್ಯ ಮಾತನ್ನ ಯಾರೂ ನಂಬಲ್ಲ: ಸಿ.ಟಿ ರವಿ

    ಗುರುವಾರವು (ಜು.18) ಸಹ 7 ಟಿಎಂಸಿ, ಶುಕ್ರವಾರ (ಇಂದು) 9 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ಇದೇ ರೀತಿ ನೀರು ಹರಿದುಬಂದರೆ ಒಂದೇ ವಾರದೊಳಗೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.

    ಆಲಮಟ್ಟಿ ಜಲಾಶಯದ 14 ಗೇಟ್ ಓಪನ್:
    ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ (Almatti Dam) ಭರಪೂರ ನೀರು ಹರಿದು ಬರ್ತಿದೆ. ಪ್ರತಿನಿತ್ಯ ಸಾವಿರಾರು ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ನಾರಾಯಣಪುರ ಜಲಾಶಯಕ್ಕೂ ನೀರು ಹರಿಬಿಡಲಾಗುತ್ತಿದೆ.

    ಜಲಾಶಯ ಒಟ್ಟು 123.081 ಟಿಎಂಸಿ ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, ಸದ್ಯ 92 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನೂ ನಾರಾಯಣಪುರ ಜಲಾಶಯಕ್ಕೆ 14 ಗೇಟ್‌ಗಳ ಮೂಲಕ 65,000 ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ಇದರಿಂದ ಕೃಷಿಗೆ ನೀರು ಪೂರೈಕೆಯಾಗುತ್ತಿದ್ದು, ರೈತರ ಮೊಗದಲ್ಲೂ ಮಂದಹಾಸ ಮೂಡಿದೆ. ಇದನ್ನೂ ಓದಿ: ಹಾಸನದ ಮಲೆನಾಡು ಭಾಗದಲ್ಲೂ ಮಳೆಯಬ್ಬರ; ಶಿರಾಡಿಘಾಟ್‌ನಲ್ಲಿ ಸರಣಿ ಭೂಕುಸಿತ – ಬೆಂಗಳೂರು, ಮಂಗಳೂರು ಸಂಚಾರ ಬಂದ್

  • ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಜನರಲ್ಲಿ ಹರ್ಷವೋ ಹರ್ಷ

    ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು – ಜನರಲ್ಲಿ ಹರ್ಷವೋ ಹರ್ಷ

    ವಿಜಯಪುರ: ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆಯಾಗುತ್ತಿದೆ. ಅದರಂತೆ ಕೃಷ್ಣಾನದಿ ಉಗಮಸ್ಥಾನ ಮಹಾಬಲೇಶ್ವರದಲ್ಲೂ ಭಾರೀ ಮಳೆಯಾಗಿದ್ದು, ಆಲಮಟ್ಟಿ ಜಲಾಶಯಕ್ಕೆ (Almatti Dam) ಒಳಹರಿವು ಹೆಚ್ಚಾಗಿದೆ.

    ಶುಕ್ರವಾರದಿಂದ (ಜೂ.8) ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ 2,578 ಕ್ಯೂಸೇಕ್ ಒಳಹರಿವು ದಾಖಲಾಗಿದೆ. ಇದರಿಂದ ಕೃಷ್ಣಾ ನದಿ (Krishna River) ಪಾತ್ರದ ಜನರಲ್ಲಿ ಸಂತಸ ಮನೆ ಮಾಡಿದೆ. ಕಳೆದ ವರ್ಷ ಜೂನ್ ಕಳೆದರೂ ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರದಲ್ಲೇ ಒಳಹರಿವು ಆರಂಭವಾದ ಕಾರಣ ಕೃಷ್ಣಾ ನದಿ ಪಾತ್ರದ ಜನರಲ್ಲಿ ಸಂತಸ ಮೂಡಿದೆ. ಇದನ್ನೂ ಓದಿ: Exclusive: ಮುಂದಿನ ತಿಂಗಳಿಂದ ತೃತೀಯ ಲಿಂಗಿಗಳಿಗೆ ಗೃಹಲಕ್ಷ್ಮಿ ಹಣ – ಅರ್ಜಿ ಸಲ್ಲಿಕೆ ಯಾವಾಗಾ, ಹೇಗೆ?

    ಜಿಲ್ಲೆಯಾದ್ಯಂತ ತಡರಾತ್ರಿ ಧಾರಾಕಾರ ಮಳೆ:
    ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಇದರಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. 15ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಮನೆಯಿಂದ ನೀರು ಹೊರಹಾಕಲು ಜನರ ಹರಸಾಹಸ ಪಡುವಂತಾಗಿದೆ. ನಿನ್ನೆ ತಡರಾತ್ರಿ 1 ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಯಿಂದ ಈ ಆವಾಂತರ ಸೃಷ್ಟಿಯಾಗಿದೆ.

    ಕರಾವಳಿಯಲ್ಲಿ ಮುಂದಿನ 15 ದಿನ ಮಳೆ:
    ಇನ್ನೂ ರಾಜ್ಯದಲ್ಲಿ ದಾವಣಗೆರೆ, ಬೆಳಗಾವಿ, ಚಿತ್ರದುರ್ಗ, ಧಾರವಾಡ, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅರ್ಭಟ ಮುಂದುವರಿದಿದೆ. ಉಡುಪಿ , ಉತ್ತರಕನ್ನಡ ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ 15 ದಿನ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: NCP ನಾಯಕ ಪ್ರಫುಲ್‌ ಪಟೇಲ್‌ಗೆ ಬಿಗ್‌ ರಿಲೀಫ್‌ – 180 ಕೋಟಿ ರೂ. ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಇಡಿ ಆದೇಶ ರದ್ದು!

  • `ಆಲಮಟ್ಟಿ’ ಭರ್ತಿಯಾದ್ರೂ ಬಾಗಿನ ಅರ್ಪಿಸದ ಸಿಎಂ – ಮೈಸೂರಿಗೊಂದು, ಉತ್ತರ ಕರ್ನಾಟಕ ಭಾಗಕ್ಕೊಂದು ನೀತಿ ಎಂದು ಜನಾಕ್ರೋಶ

    `ಆಲಮಟ್ಟಿ’ ಭರ್ತಿಯಾದ್ರೂ ಬಾಗಿನ ಅರ್ಪಿಸದ ಸಿಎಂ – ಮೈಸೂರಿಗೊಂದು, ಉತ್ತರ ಕರ್ನಾಟಕ ಭಾಗಕ್ಕೊಂದು ನೀತಿ ಎಂದು ಜನಾಕ್ರೋಶ

    ವಿಜಯಪುರ: ವಿಜಯಪುರದಲ್ಲಿ (Vijayapura) ಉತ್ತಮ ಮಳೆಯಾಗದಿದ್ದರೂ ಮಹಾರಾಷ್ಟ್ರದಲ್ಲಿ ಮಳೆರಾಯ ಅಬ್ಬರಿಸಿದ್ದರಿಂದ ಕೃಷ್ಣಾ ನದಿ ತುಂಬಿ ಆಲಮಟ್ಟಿ ಜಲಾಶಯ (Almatti Dam) ಆಗಸ್ಟ್ ಮೊದಲ ವಾರದಲ್ಲೇ ತುಂಬಿದೆ. ಆದರೆ ಈವರೆಗೂ ಸಿಎಂ ಬಾಗಿನ ಅರ್ಪಿಸಲು ಬಂದಿಲ್ಲ. ಸರ್ಕಾರ ಮೈಸೂರು ಭಾಗಕ್ಕೊಂದು, ಉತ್ತರ ಕರ್ನಾಟಕ ಭಾಗಕ್ಕೊಂದು ನೀತಿ ಅನುಸರಿಸುತ್ತಿದ್ದಾರೆ ಎಂದು ಜಿಲ್ಲೆಯ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಅವಳಿ ಜಿಲ್ಲೆಗಳ ಜನ, ಜಾನುವಾರು ಸೇರಿದಂತೆ ಜಮೀನುಗಳಿಗೂ ಆಲಮಟ್ಟಿ ಜಲಾಶಯವೇ ಆಶಾಕಿರಣವಾಗಿದೆ. ಮುಂಗಾರು ಮಳೆ ಕೈ ಕೊಟ್ಟರು ಜಲಾಶಯ ತುಂಬಿದ್ದು, ಅವಳಿ ಜಿಲ್ಲೆಯ ಜನರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಇದನ್ನೂ ಓದಿ: ತಮಿಳುನಾಡಿಗೆ ಕೆಆರ್‌ಎಸ್ ನೀರು ಬಂದ್ – ಇಂದು ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ವಿಚಾರಣೆ

    ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಒರೆಸುವ ಕೆಲಸ ಮಾಡುತ್ತಿದೆ. ಇದನ್ನು ಬಿಟ್ಟು ಈ ಕೂಡಲೆ ಸಿಎಂ ಸಿದ್ದರಾಮಯ್ಯ (Siddaramaiah) ಬಂದು ಅವಳಿ ಜಿಲ್ಲೆಗಳ ಜೀವನದಿ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಬೇಕು ಎಂದು ಜನರು ಆಗ್ರಹಿಸಿದ್ದಾರೆ. ಅಲ್ಲದೆ ಸಿಎಂ ಇದಕ್ಕೆ ಹಿಂದೇಟು ಹಾಕಿದರೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ – ಲಕ್ಷ್ಮಿಯರಿಗೆ ದೇಗುಲದಲ್ಲಿ ಸಿಗಲಿದೆ ಸ್ಪೆಷಲ್ ಗಿಫ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾರಾಯಣಪುರದ ಬಸವಸಾಗರ ಜಲಾಶಯ ಬಹುತೇಕ ಭರ್ತಿ – ರೈತರ ಮೊಗದಲ್ಲಿ ಮಂದಹಾಸ

    ನಾರಾಯಣಪುರದ ಬಸವಸಾಗರ ಜಲಾಶಯ ಬಹುತೇಕ ಭರ್ತಿ – ರೈತರ ಮೊಗದಲ್ಲಿ ಮಂದಹಾಸ

    ಯಾದಗಿರಿ: ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳ ರೈತರ ಜೀವನಾಡಿಯಾಗಿರುವ ಯಾದಗಿರಿ ಜಿಲ್ಲೆ ನಾರಾಯಣಪುರದ ಬಸವಸಾಗರ ಜಲಾಶಯ (Basava Sagara Dam) ಸದ್ಯ ಬಹುತೇಕ ಭರ್ತಿಯಾಗಿದೆ.

    33.33 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಈಗ ಬರೋಬ್ಬರಿ 22 TMC ನೀರು ಸಂಗ್ರಹವಾಗಿದೆ. 20 ದಿನಗಳ ಹಿಂದೆ ಮೈನಸ್ 1 ಟಿಎಂಸಿ ಡೆಡ್ ಸ್ಟೋರೇಜ್ ದಾಟಿದ್ದ ಜಲಾಶಯದ ಸದ್ಯ ಭರ್ತಿ ಆಗಿರೋದ್ರಿಂದ ರೈತರ (Farmers) ಮೊಗದಲ್ಲಿ ಮಂದಹಾಸ ಮೂಡಿದೆ. ಇದನ್ನೂ ಓದಿ: ನಾನು ಗುತ್ತಿಗೆದಾರರಿಂದ ಕಮಿಷನ್ ಕೇಳಿದ್ದು ಸಾಬೀತು ಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಡಿಕೆಶಿ

    ಪ್ರತಿವರ್ಷ ಜೂನ್ 15ಕ್ಕೆ ನಾರಾಯಣಪುರ ಜಲಾಶಯದಿಂದ ಎಡ ಹಾಗೂ ಬಲದಂಡೆ ನಾಲೆಗೆ ನೀರು ಹರಿಸಲಾಗುತ್ತಿತ್ತು. ಆದ್ರೆ ಈ ಬಾರಿ 15 ದಿನ ತಡವಾಗಿ ನಾಲೆಗೆ ನೀರು ಹರಿಸಲಾಗಿದೆ. ಆದರೂ ಬೇಸಿಗೆ ಬೆಳೆಗೆ ನೀರು ಸಿಗುವ ವಿಶ್ವಾಸದಲ್ಲಿ ಅನ್ನದಾತರಿದ್ದಾರೆ. ಇದನ್ನೂ ಓದಿ: ನಕಲಿ ಇನ್‌ಸ್ಟಾಗ್ರಾಂ ಖಾತೆ ಸೃಷ್ಟಿಸಿ ವಿದ್ಯಾರ್ಥಿನಿಯರಿಗೆ ಬೆದರಿಕೆ – ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್

    ಆಲಮಟ್ಟಿ ಜಲಾಶಯವೂ ಭರ್ತಿ:
    ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲಬಾಹ್ದೂರ್‌ ಶಾಸ್ತ್ರಿ ಜಲಾಶಯವೂ (Almatti Dam) ಬಹುತೇಕ ಭರ್ತಿ ಆಗಿದೆ. ಮುಂಗಾರು ಮಳೆ ಕೈ ಕೊಟ್ಟ ಕಾರಣ ಅವಳಿ ಜಿಲ್ಲೆಗಳಾದ ವಿಜಯಪುರ-ಬಾಗಲಕೋಟೆ ಜನರು ಆತಂಕಕ್ಕೆ ಒಳಗಾಗಿದ್ದರು. ಆದ್ರೆ ತಡವಾಗಿಯಾದರೂ ಜಲಾಶಯ ಭರ್ತಿ ಆಗಿದ್ದಕ್ಕೆ ಜನರು ನಿಟ್ಟುಸಿರು ಬಿಟ್ಟಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪದೇ ಪದೇ ಭೂಕಂಪಕ್ಕೆ ಆಲಮಟ್ಟಿ ಡ್ಯಾಂ ಕಾರಣ: ಶಿವಾನಂದ ಪಾಟೀಲ್

    ಪದೇ ಪದೇ ಭೂಕಂಪಕ್ಕೆ ಆಲಮಟ್ಟಿ ಡ್ಯಾಂ ಕಾರಣ: ಶಿವಾನಂದ ಪಾಟೀಲ್

    ವಿಜಯಪುರ: ಜಿಲ್ಲೆಯಲ್ಲಿ ಪದೇ ಪದೇ ಆಗುತ್ತಿರುವ ಭೂಕಂಪಕ್ಕೆ ಆಲಮಟ್ಟಿ ಡ್ಯಾಂ ಕಾರಣ. ನನ್ನ ಅನುಭವದ ಪ್ರಕಾರ ಇದು ನನ್ನ ಊಹೆ ಎಂದು ಶಾಸಕ ಶಿವಾನಂದ ಪಾಟೀಲ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮರಿ ಖರ್ಗೆ ಹೆಸರು ಗಂಡೋ, ಹೆಣ್ಣೋ ಎಂಬ ಕ್ಲಾರಿಟಿ ಇಲ್ಲ: ಪ್ರತಾಪ್ ಸಿಂಹ

    ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಯ್ನಾ ಡ್ಯಾಂ ಆದಾಗ ಸುತ್ತಮುತ್ತನಲ್ಲಿ ಈ ರೀತಿ ಆಗಿದ್ದನ್ನು ನಾವು ಕೇಳಿದ್ದೇವೆ.ಎನ್‍ಟಿಪಿಸಿಗೂ ಭೂಕಂಪಕ್ಕು ಸಂಬಂಧವಿಲ್ಲ. ನನ್ನ ಪ್ರಕಾರ ಇದು ಆಲಮಟ್ಟಿ ಡ್ಯಾಂ ನಿಂದಾಗಿ ಆಗುತ್ತಿದೆ ಎಂದರು. ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಸರಣಿ ಭೂಕಂಪದ ಅನುಭವ


    ರಾಜ್ಯ ಸರ್ಕಾರ ಮೂರು ಬಾರಿ ತಜ್ಞರ ತಂಡ ಕಳುಹಿಸಿದೆ. ಆದರೆ ಅದರ ಫೈನಲ್ ವರದಿ ಬಂದಿಲ್ಲ. ಅವರ ವರದಿ ಬಂದ ಮೇಲೆ ಇದರ ಬಗ್ಗೆ ಮಾತನಾಡುವುದು ಸೂಕ್ತ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಇದರ ಬಗ್ಗೆ ಗಮನ ಸೆಳೆಯುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆ ಅಂತ ಘೋಷಣೆ ಕೂಗಿವದರು ಪಕ್ಷ ದ್ರೋಹಿಗಳು ಹೊರಗೆ ಹೋಗಿ: ಡಿಕೆಶಿ ಗರಂ

  • ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ಒತ್ತಾಯ

    ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ಒತ್ತಾಯ

    ಬೆಂಗಳೂರು: ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ರೈತರು ಒತ್ತಾಯ ಮಾಡಿದ್ದಾರೆ. ಈ ವಿಚಾರವಾಗಿ ರೈತರ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ.

    ಯುಕೆಪಿ 3ನೇ ಹಂತದಲ್ಲಿ ಮುಳುಗಡೆಯಾಗುವ ಬಬಲೇಶ್ವರ ತಾಲೂಕಿನ ಎಲ್ಲಾ ಜಮೀನುಗಳಿಗೆ ಏಕರೂಪ ಪರಿಹಾರ ಒದಗಿಸಲು ಕೋರಿ ರೈತರ ನಿಯೋಗ ಇಂದು ಮುಖ್ಯಮಂತ್ರಿಗಳನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿತು. ಈ ವೇಳೆ ರೈತರ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದು, ನಮ್ಮ ಬೇಡಿಕೆ ಈಡೇರಿಸುವ ಭರವಸೆ ದೊರೆತಿದೆ ಎಂದು ರಾಜ್ಯ ಬಾರ್ ಕೌನ್ಸಿಲ್ ಅಧ್ಯಕ್ಷ ರಾಜೇಂದ್ರ ದೇಸಾಯಿ ತಿಳಿಸಿದ್ದಾರೆ. ಇದನ್ನೂ ಓದಿ:  5 ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ, 8 ನ್ಯಾಯಮೂರ್ತಿಗಳ ಪದೋನ್ನತಿಗೆ ಕೊಲಿಜಿಯಂ ಶಿಫಾರಸು

    ಆಲಮಟ್ಟಿ ಆಣೆಕಟ್ಟು 524.256ಮೀ ಎತ್ತರಿಸಿ, ನೀರು ನಿಲ್ಲಿಸಿದಾಗ ಅಂದಾಜು 75 ಸಾವಿರ ಎಕರೆ ಪ್ರದೇಶದಷ್ಟು ಜಮೀನು ಮುಳುಗಡೆಯಾಗಲಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳು ಮುಳುಗಡೆಯಾಗಲಿವೆ. ಈ ಹಿಂದೆ 2015-16ರಲ್ಲಿ ಮಾರ್ಗಸೂಚಿ ಬೆಲೆಯನ್ನು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಗ್ರಾಮಗಳಿಗೆ ನಿಗದಿಪಡಿಸಿರುತ್ತಾರೆ. ಆದರೆ ಬಾಗಲಕೋಟೆಯ ಜಮಖಂಡಿ ಮತ್ತು ಬೀಳಗಿ ತಾಲೂಕಿನ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಿರುತ್ತಾರೆ. ಅದರಂತೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳ ಜಮೀನುಗಳ ಮಾರ್ಗಸೂಚಿ ಪರಿಷ್ಕರಣೆ ಮಾಡಿ ಎಲ್ಲಾ ರೈತರಿಗೆ ನ್ಯಾಯ ದೊರಕಿಸಲು ಕೋರಿ ಮಾಜಿ ಸಚಿವ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಅವರ ನೇತೃತದಲ್ಲಿ ಮುಖ್ಯಮಂತ್ರಿಗಳನ್ನು ಇಂದು ಭೇಟಿ ಮಾಡಿದ್ದಾಗ ಅವರಿಂದ ಸಕಾರಾತ್ಮಕ ಭರವಸೆ ದೊರೆತಿದೆ ಎಂದರು. ಇದನ್ನೂ ಓದಿ:  ಮಕ್ಕಳ ನಿರ್ಲಕ್ಷ್ಯ- ಬೇಸತ್ತ ವೃದ್ಧ ತಂದೆ, ತಾಯಿ ಆತ್ಮಹತ್ಯೆ

    ಈ ಸಂದರ್ಭದಲ್ಲಿ ಎಂ.ಬಿ.ಪಾಟೀಲ್ ಅವರು ರೈತರ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಉಪಸ್ಥಿತರಿದ್ದು, ರೈತರ ಮನವಿಯನ್ನು ಆಲಿಸಿದರು.

    ಈ ಸಂದರ್ಭದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಶಶಿಕಾಂತಗೌಡ ಪಾಟೀಲ್, ಉಪಾಧ್ಯಕ್ಷ ಎಚ್.ಆರ್.ಬಿರಾದಾರ, ಜಿ.ಪಂ ಮಾಜಿ ಅಧ್ಯಕ್ಷ ಬಸವರಾಜ್ ದೇಸಾಯಿ, ತಾಲೂಕು ಪಂಚಾಯತ ಮಾಜಿ ಅಧ್ಯಕ್ಷ ಶ್ರೀಶೈಲ ಸುಳ್ಳದ, ಭೀಮನಗೌಡ ಪಾಟೀಲ್, ರಾಮನಗೌಡ ಪಾಟೀಲ್, ವೆಂಕಟೇಶ ನಿಡೋಣಿ, ಸುಭಾಸ ಪಾಟೀಲ್, ಸಂಗನಗೌಡ ಪಾಟೀಲ್, ಸಂಗಣ್ಣ ಹುಣಸಿಕಟ್ಟಿ, ಶಿವಾನಂದ ಕಳ್ಳಿಗುದ್ದಿ, ಹಣಮಂತ ಮುದಕರೆಡ್ಡಿ, ವೆಂಕಣ್ಣ ಬಿರಾದಾರ, ರಮೇಶ ಗಡದಾನಿ, ವಿಠ್ಠಲ ಶೇಬಾನಿ, ಸುರೇಶ ಪೂಜಾರಿ, ಗೋವಿಂದಪ್ಪ ಶಿರಬೂರ, ಮಹೇಶ್ ಯರಗಟ್ಟಿ, ಸುರೇಶ್ ಬಿರಾದಾರ, ಸುರೇಶ್ ಕೊಡಬಾಗಿ, ಸುನೀಲ್‍ಗೌಡ ಪಾಟೀಲ್, ಮಹಾದೇವ ಮಾಸರೆಡ್ಡಿ, ವಿಜಯ್ ಸುತಗುಂಡಿ, ವೆಂಕಪ್ಪ ಚಿಕ್ಕಗಲಗಲಿ, ಅರವಿಂದ್ ಗುರಡ್ಡಿ, ವಿಠ್ಠಲ ಪೋತರೆಡ್ಡಿ, ಗಿರೀಶ್ ಪಾಟೀಲ್ ಸೇರಿದಂತೆ ಚಿಕ್ಕಗಲಗಲಿ, ಜೈನಾಪುರ, ಲಿಂಗದಳ್ಳಿ, ಹಂಗರಗಿ, ಬೆಳ್ಳುಬ್ಬಿ, ಬಬಲಾದ, ದೇವರಗೆಣ್ಣೂರ, ಕಣಬೂರ, ಹೊಸೂರ, ಸುತಗುಂಡಿ, ಜಂಬಗಿ, ಶಿರಬೂರ, ಮಂಗಳೂರ, ತಾಜಪೂರ ಗ್ರಾಮದ ರೈತರು ಉಪಸ್ಥಿತರಿದ್ದರು.

  • ಆಲಮಟ್ಟಿ, ನಾರಾಯಣಪುರ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ, ಪ್ರವಾಹ ಭೀತಿ

    ಆಲಮಟ್ಟಿ, ನಾರಾಯಣಪುರ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ, ಪ್ರವಾಹ ಭೀತಿ

    ವಿಜಯಪುರ/ ಯಾದಗಿರಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ‌ ಮಳೆಯಿಂದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ.ಆಲಮಟ್ಟಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳಹರಿವು ಹೆಚ್ಚಳವಾಗಿದ್ದು 26 ಗೇಟ್ ಗಳ ಪೈಕಿ 22 ಗೇಟ್ ಗಳ ಮೂಲಕ ಅಪಾರ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ.

    1.47 ಲಕ್ಷ ಕ್ಯುಸೆಕ್‌ ಒಳ ಹರಿವು ದಾಖಲಾಗಿದ್ದು,1.50 ಲಕ್ಷ ಕ್ಯುಸೆಕ್‌ ನೀರನ್ನ ಹೊರಬಿಡಲಾಗುತ್ತಿದೆ. ಕ್ಷಣ ಕ್ಷಣಕ್ಕೂ ನೀರು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಹತ್ತಿರದ ಗ್ರಾಮಗಳ ಮೀನುಗಾರರು, ಗ್ರಾಮಸ್ಥರು ನದಿಗೆ ಇಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

    123.081 ಟಿಎಂಸಿ ಸಂಗ್ರಹ ಸಮರ್ಥ್ಯ ಇರುವ ಜಲಾಶಯದಲ್ಲಿ ಈಗ 97.70 ಟಿಎಂಸಿ ನೀರು ಸಂಗ್ರಹಗೊಂಡಿದೆ. 519 ಮೀಟರ್‌ ಎತ್ತರದ ಜಲಾಶಯದಲ್ಲಿ ಈಗ 518 ಮೀಟರ್‌ ನೀರು ಸಂಗ್ರಹಗೊಂಡಿದೆ.

    ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಮತ್ತೆ ಕೃಷ್ಣಾ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆಯಾಗಿದೆ.

    ಜಲಾಶಯಕ್ಕೆ 1.50 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, 1,63,650 ಕ್ಯೂಸೆಕ್ ನೀರನ್ನು 10 ಗೇಟ್‌ ತೆರೆದು ಬಿಡುಗಡೆ ಮಾಡಲಾಗಿದೆ. ಜಲಾಶಯದ ಸಂಗ್ರಹ ಸಾಮರ್ಥ್ಯ 33.313 ಟಿಎಂಸಿ ಇದ್ದು, ಈಗಾಗಲೇ 29.570 ಟಿಎಂಸಿ ನೀರು ಸಂಗ್ರಹವಿದೆ. ಮಧ್ಯಾಹ್ನ ವೇಳೆಗೆ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆಯಾಗುವ ಸಾಧ್ಯತೆಯಿದೆ.

    ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
    ಕ್ಯೂಸೆಕ್ ಎಂಬುದು Cubic feet per Second ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

  • ಆಲಮಟ್ಟಿಯಿಂದ 4 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಛಾಯಾ ಭಗವತಿ ದೇವಸ್ಥಾನ ಮುಳುಗಡೆ

    ಆಲಮಟ್ಟಿಯಿಂದ 4 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಛಾಯಾ ಭಗವತಿ ದೇವಸ್ಥಾನ ಮುಳುಗಡೆ

    ವಿಜಯಪುರ: ಆಲಮಟ್ಟಿ ಜಲಾಶಯದಿಂದ 4 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ವಿಜಯಪುರ ಮುದ್ದೇಬಿಹಾಳ ತಾಲೂಕಿನ ಗಡಿ ಭಾಗದಲ್ಲಿ ಬರುವ ನಾರಾಯಣಪೂರ ಸಮೀಪದ ಛಾಯಾ ಭಗವತಿ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ.

    ಜಲಾವೃತಗೊಂಡ ಕಾರಣ ಛಾಯಾ ಭಗವತಿಗೆ ದೇವಸ್ಥಾನದಲ್ಲಿ ಪೂಜೆ ಸ್ಥಗಿತಗೊಂಡಿದೆ. ಅಲ್ಲದೆ ಪೊಲೀಸರು ಪ್ರವಾಸಿಗರನ್ನು ಮೆಟ್ಟಿಲು ಬಳಿ ತೆರಳದಂತೆ ಕಣ್ಗಾವಲು ಇಟ್ಟಿದ್ದಾರೆ.

    ಆಲಮಟ್ಟಿ ಜಲಾಶಯದ ಗರಿಷ್ಠ ಮಟ್ಟ 519.60 ಅಡಿ ಇದ್ದು, ಇಂದಿನ ಮಟ್ಟ 517.10 ಅಡಿಯಾಗಿದೆ. ಒಟ್ಟು 123.081 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 87.737 ಟಿಎಂಸಿ ನೀರಿನ ಸಂಗ್ರಹವಿದೆ. ಆಲಮಟ್ಟಿ ಜಲಾಶಯದ ಒಳಹರಿವು 3,67,318 ಕ್ಯೂಸೆಕ್ ಇದ್ದರೆ, 3,90,929 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತದೆ.

    ಇತ್ತ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದರಿಂದ ಜಿಲ್ಲೆಯ ಅಲಮೇಲ ತಾಲೂಕಿನ ತಾರಾಪುರ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಇಂದು ಬೆಳಗ್ಗೆ ತಾರಾಪುರಕ್ಕೆ ತೆರಳುವ ರಸ್ತೆ ಹೊರ ಜಗತ್ತಿನಿಂದ ಸಂಪರ್ಕ ಕಳೆದುಕೊಂಡಿದೆ.

    ಗ್ರಾಮದ ಸಂಪರ್ಕ ಸೇತುವೆ ಮೇಲೆ 4 ಅಡಿ ಅಷ್ಟು ನೀರು ನಿಂತಿದ್ದು, ಗ್ರಾಮಸ್ಥರು ವಾಹನಗಳು ಗ್ರಾಮದ ಹೊರಗಡೆ ನಿಲ್ಲಿಸಿದ್ದಾರೆ. ವಾಹನಗಳು ಗ್ರಾಮದ ಒಳಗೆ ಹೋಗಲು ಸಾಧ್ಯವಾಗದ ಕಾರಣ ಜನರು ನಡೆದುಕೊಂಡು ಗ್ರಾಮಕ್ಕೆ ತೆರಳುತ್ತಿದ್ದಾರೆ. ತಾರಾಪುರಕ್ಕೆ ತೆರಳುವ ರಸ್ತೆ ತಗ್ಗು ಪ್ರದೇಶದಲ್ಲಿ ಇರುವುದರಿಂದ ಗ್ರಾಮಕ್ಕೆ ತೆರಳುವ ಸಂಪರ್ಕ ರಸ್ತೆಯಲ್ಲಿ ನೀರು ಆವರಿಸುತ್ತಿದೆ.