Tag: AlokKumar

  • ಉದ್ಘಾಟನೆಗೊಂಡು ನಾಲ್ಕೇ ದಿನಕ್ಕೆ ಕೈಕೊಟ್ಟ ಎಕ್ಸ್‌ಪ್ರೆಸ್‌ವೇ ಸ್ಪೀಡ್ ಡಿಟೆಕ್ಟರ್

    ಉದ್ಘಾಟನೆಗೊಂಡು ನಾಲ್ಕೇ ದಿನಕ್ಕೆ ಕೈಕೊಟ್ಟ ಎಕ್ಸ್‌ಪ್ರೆಸ್‌ವೇ ಸ್ಪೀಡ್ ಡಿಟೆಕ್ಟರ್

    ಮಂಡ್ಯ: ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ (Expressway) ನಾಲ್ಕು ದಿನಗಳ ಹಿಂದಷ್ಟೆ ಅಳವಡಿಸಲಾಗಿದ್ದ ಸ್ಪೀಡ್ ಡಿಟೆಕ್ಟರ್‌ಗಳು ಇಂದು ಕೈಕೊಟ್ಟಿವೆ.

    ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಸ್ಪೀಡ್ ಲಿಮಿಟ್ ಜಾರಿ ಮಾಡಲಾಗಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಮಂಡ್ಯದ (Mandya) ಉಮ್ಮಡಹಳ್ಳಿ ಗೇಟ್ ಬಳಿ ಸೋಲರ್‍ನಿಂದ ಕಾರ್ಯ ನಿರ್ವಹಿಸುವ ಸ್ಪೀಡ್ ಡಿಟೆಕ್ಟರ್ ಹಾಗೂ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಆದರೆ ಈ ಕ್ಯಾಮೆರಾಗಳು ನಾಲ್ಕೇ ದಿನಕ್ಕೆ ಹಾಳಾಗಿವೆ. ಇದನ್ನೂ ಓದಿ: ಎಕ್ಸ್‌ಪ್ರೆಸ್‌ವೇಯಲ್ಲಿ AI ಕ್ಯಾಮೆರಾ – ಇಷ್ಟಬಂದಂತೆ ವಾಹನ ಚಲಾಯಿಸಿದ್ರೆ ಬೀಳುತ್ತೆ ದಂಡ

    ಜುಲೈ 29 ರಿಂದ ಎಐ ಕ್ಯಾಮೆರಾಗಳ ಜೊತೆ ಸ್ಪೀಡ್ ಡಿಟೆಕ್ಟರ್‌ಗಳು ಕಾರ್ಯನಿರ್ವಹಿಸುತ್ತಿದ್ದವು. ಈ ಡಿಟೆಕ್ಟರ್‌ಗಳನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದರು. ಈ ಯೋಜನೆಗೆ ಲಕ್ಷಾಂತರ ರೂ.ಗಳನ್ನು ವಿನಿಯೋಗಿಸಲಾಗಿದೆ.

    ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ (AlokKumar) ಆದೇಶದ ಮೇರೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸ್ವಯಂಚಾಲಿತ (Artificial Intelligence) ನಂಬರ್ ಪ್ಲೇಟ್ ಗುರುತಿಸುವ ಕ್ಯಾಮೆರಾವನ್ನು ಅಳವಡಿಕೆ ಮಾಡಲಾಗಿತ್ತು. ವೇಗದ ಮಿತಿ ಮೀರಿದರೆ ವಾಹನದ ನಂಬರ್‌ನಿಂದ ಆರ್‌ಟಿಒ ಸಂಪರ್ಕ ಪಡೆದು ಮೊಬೈಲಿಗೆ ದಂಡ ಪಾವತಿಸುವಂತೆ ನೋಟಿಸ್ ಬರುವಂತೆ ತಂತ್ರಜ್ಞಾನ ರೂಪಿಸಲಾಗಿತ್ತು.

    ಈ ಸಂಬಂಧ ಟ್ವೀಟ್ ಮಾಡಿದ್ದ ಅಲೋಕ್ ಕುಮಾರ್, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾಗಳನ್ನು ಪ್ರಾಯೋಗಿಕವಾಗಿ ಅಳವಡಿಕೆ ಮಾಡಲಾಗಿದೆ. ಅಪಘಾತಗಳು ಮತ್ತು ಸಾವುನೋವುಗಳ ಸಂಖ್ಯೆಗಳನ್ನು ಕಡಿಮೆ ಮಾಡಲು ಇದು ಸಹಾಯವಾಗಲಿದೆ. ಅಲ್ಲದೇ ಭಾರತದ ರಸ್ತೆಯಲ್ಲಿ ಅತಿವೇಗವೇ ಪ್ರಮುಖ ಕೊಲೆಗಾರ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ವಾಹನಗಳ ವೇಗಮಿತಿ ಹೆಚ್ಚಾಗುತ್ತಾ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೈಸೂರಿನಲ್ಲಿ ಬೇಕಾಬಿಟ್ಟಿ ಮನೆ ಬಾಡಿಗೆ ಕೊಡುವಂತಿಲ್ಲ – ಪೊಲೀಸ್ ಕ್ಲಿಯರೆನ್ಸ್ ಕಡ್ಡಾಯ

    ಮೈಸೂರಿನಲ್ಲಿ ಬೇಕಾಬಿಟ್ಟಿ ಮನೆ ಬಾಡಿಗೆ ಕೊಡುವಂತಿಲ್ಲ – ಪೊಲೀಸ್ ಕ್ಲಿಯರೆನ್ಸ್ ಕಡ್ಡಾಯ

    ಮೈಸೂರು: ನಗರದಲ್ಲಿ ಇನ್ಮುಂದೆ ಬೇಕಾಬಿಟ್ಟಿಯಾಗಿ ಮನೆ, ರೂಂ ಗಳನ್ನು ಬಾಡಿಗೆ (House For Rent) ನೀಡುವಂತಿಲ್ಲ. ರೂಂ, ಮನೆ ಬಾಡಿಗೆ ಕೊಡುವ ಮುನ್ನಾ ಸ್ಥಳೀಯ ಪೊಲೀಸರಿಂದ ಕ್ಲಿಯರೆನ್ಸ್ (Police Clearance) ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯವಾಗಿದೆ.

    ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ (Mangaluru Bomb Blast) ಮಾಡಿದ ಶಾರೀಕ್ (Shariq) ಮೈಸೂರಿನಲ್ಲಿ (Mysuru) ಮನೆ ಬಾಡಿಗೆ ಪಡೆದು ವಾಸವಿದ್ದ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಪೊಲೀಸರು ಮನೆ ಬಾಡಿಗೆ ಪಡೆಯಲು ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಮನೆ ಮಾಲೀಕರಿಗೂ ಅರಿವು ಮೂಡಿಸುವ ಕೆಲಸವನ್ನು ಪೊಲೀಸರು ಆರಂಭಿಸಿದ್ದಾರೆ. ಇದನ್ನೂ ಓದಿ: ಬಾಣಂತಿ ಡಿಸ್ಚಾರ್ಜ್ ಮಾಡಲು ಲಂಚಕ್ಕೆ ಬೇಡಿಕೆ – ಇಬ್ಬರು ವೈದ್ಯ ಸಿಬ್ಬಂದಿ ಅಮಾನತು

    ಶಾರೀಕ್ ಆರೋಗ್ಯದಲ್ಲಿ ಚೇತರಿಕೆ:
    ಶಂಕಿತ ಉಗ್ರ ಶಾರೀಕ್ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾನೆ. ಈ ನಡುವೆ ಉಗ್ರನ ಲಿಂಕ್ ರಹಸ್ಯ ಮತ್ತಷ್ಟು ಭೇದಿಸಿರುವ ಪೊಲೀಸರಿಗೆ ಆತಂಕಕಾರಿ ಮಾಹಿತಿಗಳು ಲಭ್ಯವಾಗಿವೆ. 26/11 ಮುಂಬೈನ ದಾಳಿಯಂತೆಯೇ ಅದೇ ದಿನವಾದ ಇಂದು ಕೂಡಾ ಮಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ ಅನ್ನೋ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ಇದನ್ನೂ ಓದಿ: ಭದ್ರತಾ ಪಡೆಗಳಿಂದ ಎನ್‌ಕೌಂಟರ್‌ – ನಾಲ್ವರು ಮಾವೋವಾದಿಗಳ ಹತ್ಯೆ

    ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ:
    ವೆಂಟಿಲೇಟರ್‌ನಲ್ಲಿದ್ದ ಶಾರೀಕ್ ಇಂದು ಸ್ವಲ್ಪಮಟ್ಟಿಗೆ ಚೇತರಿಕೆ ಕಂಡಿದ್ದಾನೆ. ಈ ನಡುವೆ ಪೊಲೀಸರು ಭದ್ರತೆ ಹೆಚ್ಚಿಸಿದ್ದು, ಆತ ಇರುವ 5ನೇ ಮಹಡಿ ಹಾಗೂ ಐಸಿಯುನಲ್ಲಿ ಸಿಸಿ ಕ್ಯಾಮರಾ ಅಳವಡಿಸಿದ್ದು, ಮೂರು ಪಾಳಿಯಲ್ಲಿ ಪೊಲೀಸರು ಆತನ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ. ಸ್ಫೋಟಕ ಹ್ಯಾಂಡ್ಲರ್‌ಗಳು, ಸ್ಲೀಪರ್ ಸೆಲ್‌ಗಳನ್ನು ಆಕ್ವೀವ್ ಮಾಡಿ ಆತನನ್ನು ಮುಗಿಸುವ ಯತ್ನ ನಡೆಸಿರುವ ಶಂಕೆ ಇದ್ದು ಈ ಹಿನ್ನಲೆಯಲ್ಲೂ ಪೊಲೀಸರು ಆಕ್ಟೀವ್ ಆಗಿದ್ದಾರೆ. ಸ್ವತಃ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ನಿಯೋಜಿಸಿದ್ದು, ಹಿರಿಯ ಅಧಿಕಾರಿಗಳು ಆಸ್ಪತ್ತೆಯಲ್ಲೇ ಬೀಡು ಬಿಟ್ಟಿದ್ದಾರೆ.

    ಮುಂಬೈ ಸ್ಫೋಟದಂತೆ ಪ್ಲ್ಯಾನ್‌
    ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾತನಾಡಿದ್ದು, ಉಗ್ರ ಶಾರೀಕ್ ತನಿಖಾಧಿಕಾರಿಗಳ ಜೊತೆ ಮಾತನಾಡದೇ ಇದ್ರೂ ಸಾಕಷ್ಟು ಸ್ಫೋಟಕ ಸಂಗತಿಗಳು ಬೆಳಕಿಗೆ ಬಂದಿದೆ. ಶಾರೀಕ್ 26/11ರ ಮುಂಬೈ ಸ್ಫೋಟದಂತೆಯೇ (Mumbai BombBlast) ಮಂಗಳೂರಿನಲ್ಲೂ ಅದೇ ದಿನ ಅಂದರೆ ಇಂದು ನವೆಂಬರ್ 26 ಆಗಿರೋದ್ರಿಂದ ಇಂದೇ ಮತ್ತೊಮ್ಮೆ ಸರಣಿ ಸ್ಫೋಟ ನಡೆಸಲು ತಯಾರಿ ನಡೆಸಿದ್ದನಂತೆ. ಮುಂಬೈ ಸ್ಫೋಟದ ಉಗ್ರ ಕಸಬ್‌ನಂತೆಯೇ ಹಿಂದೂ ಸೋಗಿನಲ್ಲೇ ಮಂಗಳೂರಿಗೆ ಬಂದಿದ್ದ ಶಾರೀಕ್ ಕಳೆದ ನ.19ರ ಶನಿವಾರ ಕುಕ್ಕರ್ ಬಾಂಬ್ ಸ್ಫೋಟ ಮಾಡಲು ಬಂದು ವಿಫಲನಾಗಿ ಸಿಕ್ಕಿಬಿದ್ದಿದ್ದಾನೆ. ಒಂದು ವೇಳೆ ಆತನ ಪ್ಲ್ಯಾನ್‌ ನಂತೆಯೇ ಸ್ಫೋಟಗೊಂಡಿದ್ದರೆ ಮತ್ತೆ ಮೈಸೂರಿಗೆ ತೆರಳಿ ಬಾಂಬ್ ತಯಾರಿಸಿ ಶನಿವಾರ (ನವೆಂಬರ್ 26) ಮಂಗಳೂರಿನಲ್ಲಿ ಸರಣಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಎಂದು ಹೇಳಿದ್ದಾರೆ.

    ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಮಾತನಾಡಿ, ಉಗ್ರ ಶಾರೀಕ್‌ಗೆ ಐಸಿಸ್ ಸೇರಿ ಹಲವು ಉಗ್ರರ ಸಂಪರ್ಕವಿತ್ತು ಅನ್ನೋದು ಬೆಳಕಿಗೆ ಬಂದಿದೆ. ಈತ ಮುಸ್ಲಿಂ ಭಾಷಣಕಾರ ಝಾಕೀರ್ ನಾಯ್ಕ್ನಿಂದ ಪ್ರೇರೇಪಿತನಾಗಿದ್ದ ಅನ್ನೋದು ಮತ್ತೆ ಸಾಬೀತಾಗಿದೆ. ಸ್ಫೋಟಗೊಂಡ ಒಂದೂವರೆ ಗಂಟೆಯಲ್ಲೇ ಮಲೇಶಿಯಾದಲ್ಲಿರೋ ಝಾಕೀರ್ ನಾಯ್ಕ್ ಆತನ ಟ್ವೀಟರ್‌ನಲ್ಲಿ ಇಸ್ಲಾಂನಲ್ಲಿ ಆತ್ಮಾಹುತಿ ಬಾಂಬ್‌ಗೆ ಅವಕಾಶ ಇದ್ಯಾ ಎಂದು ಟ್ವೀಟ್ ಮಾಡಿದ್ದ. ಆತ್ಮಾಹುತಿ ಬಾಂಬ್‌ನ ಬಗೆಗಿನ ತನ್ನ ವಿಡಿಯೋವನ್ನೂ ಪೋಸ್ಟ್ ಮಾಡಿದ್ದ. ಇದೆಲ್ಲವನ್ನೂ ನೋಡುವಾಗ ಉಗ್ರ ಶಾರೀಕ್‌ನ ಲಿಂಕ್ ದೊಡ್ಡ ಮಟ್ಟದಲ್ಲೇ ಇತ್ತು ಅನ್ನೋದು ಸಾಬೀತಾಗಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್ ಬಾಂಬ್ ಬ್ಲಾಸ್ಟ್‌ – ತಮಿಳುನಾಡು, ಕೇರಳದಲ್ಲೂ ತನಿಖೆ ಚುರುಕು : ಪ್ರವೀಣ್ ಸೂದ್

    ಕುಕ್ಕರ್ ಬಾಂಬ್ ಬ್ಲಾಸ್ಟ್‌ – ತಮಿಳುನಾಡು, ಕೇರಳದಲ್ಲೂ ತನಿಖೆ ಚುರುಕು : ಪ್ರವೀಣ್ ಸೂದ್

    ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್‌ಗೆ (Mangaluru Bomb Blast Case) ಸಂಬಂಧಿಸಿದಂತೆ ತಮಿಳುನಾಡು (Tamil Nadu), ಕೇರಳ ಎಲ್ಲಾ ಕಡೆಗಳಲ್ಲೂ ತನಿಖೆ ಚುರುಕುಗೊಳಿಸಲಾಗಿದೆ ಎಂದು ಡಿಜಿಪಿ ಪ್ರವೀಣ್ ಸೂದ್ (Praveen Sood) ಹೇಳಿದ್ದಾರೆ.

    ಮಂಗಳೂರು ಪೊಲೀಸ್ ಆಯುಕ್ತರ (Mangaluru Police Commissioner) ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾರೀಕ್ (Shariq) ಕೃತ್ಯಕ್ಕೆ ಹಣದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಈಗಲೇ ಎಲ್ಲ ಮಾಹಿತಿಗಳನ್ನು ಬಹಿರಂಗಗೊಳಿಲು ಸಾಧ್ಯವಿಲ್ಲ. ಸದ್ಯ ಆರೋಪಿಯ ಪ್ರಾಣ ಉಳಿಸಬೇಕು, ಅದು ನಮಗೆ ಅತೀ ಅಗತ್ಯ. ಅವನ ವಿಚಾರಣೆ ಬಳಿಕ ಮತ್ತಷ್ಟು ಸತ್ಯ ಹೊರಗೆ ಬರುತ್ತೆ. ಈಗಲೇ ಎಲ್ಲ ಮಾಹಿತಿಯನ್ನು ಬಹಿರಂಗಗೊಳಿಸಿದ್ರೆ ಮುಂದಿನ ವಿಚಾರಣೆಗೆ ತೊಂದರೆಯಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಸಾವು-ಬದುಕಿನ ನಡುವೆ ಶಂಕಿತ ಉಗ್ರ ಶಾರೀಕ್ ನರಳಾಟ- ಪೊಲೀಸರಲ್ಲಿ ಆತಂಕ

    ಎನ್‌ಐಎ (NIA) ಮತ್ತು ಕೇಂದ್ರದ ತನಿಖಾ ಸಂಸ್ಥೆಗಳು ನಮ್ಮ ಜೊತೆ ಇದೆ. ಸದ್ಯದಲ್ಲೇ ಸದ್ಯದಲ್ಲೇ ಅಧಿಕೃತವಾಗಿ ಈ ಪ್ರಕರಣ ಎನ್‌ಐಎಗೆ ಹಸ್ತಾಂತರ ಆಗಲಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ತಮಿಳುನಾಡು, ಕೇರಳ ಎಲ್ಲಾ ಕಡೆಗಳಲ್ಲೂ ನಮ್ಮ ತನಿಖೆ ಆಗ್ತಿದೆ. ನಮ್ಮ ಪೊಲೀಸರು ಕೂಡ ಈ ಬಗ್ಗೆ ವಿಚಾರಣೆ ಮುಂದುವರಿಸುತ್ತಾರೆ. ಪ್ರತಿಯೊಬ್ಬರ ಸಹಕಾರಕ್ಕಾಗಿ ನಾವು ಹಲವು ಜನರನ್ನ ವಿಚಾರಣೆ ಮಾಡುತ್ತೇವೆ. ಅವರನ್ನು ನಾವು ಅರೆಸ್ಟ್ ಮಾಡ್ತಿಲ್ಲ. ವಿಚಾರಣೆಗೆ ಮಾತ್ರ ಕರೆದು ತರ್ತೀವಿ ಅಷ್ಟೇ ಹೊರತು ಅವರು ಅಪರಾಧಿಗಳಾಗಿರುವುದಿಲ್ಲ. ಅವರನ್ನು ಅಪರಾಧಿಗಳಂತೆ ಬಿಂಬಿಸುವುದನ್ನು ಬಿಡಬೇಕು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಉಗ್ರ ಕೃತ್ಯಕ್ಕೆ ಹಿಂದುತ್ವ ಹಣೆಪಟ್ಟಿಗೆ ಸಂಚು – ಮುಂಬೈ ಕಸಬ್‌ನಂತೆ ದಾಳಿಗೆ ಬಾಂಬರ್‌ ಶಾರೀಕ್ ಸ್ಕೆಚ್‌

    ಈಗಾಗಲೇ ಬೆಂಗಳೂರು ಸೇರಿ 8 ಕಡೆ ದಾಳಿ ನಡೆಸಿ, 4 ಜನರನ್ನ ವಶಕ್ಕೆ ಪಡೆದು ವಿಚಾರಣೆ ಮಾಡ್ತಿದ್ದೇವೆ. ಆದರೆ ಆರೋಪಿಗಳು ಅಂತ ಯಾರನ್ನೂ ಕರೆತಂದಿಲ್ಲ. ಒಬ್ಬರನ್ನು ಹಿಡಿಯುವ ಪ್ರಶ್ನೆಯಲ್ಲ, ಕೃತ್ಯದ ಹಿಂದಿರುವವರೂ ನಮಗೆ ಬೇಕು. ಅದಕ್ಕಾಗಿ ನಾವು ಎಲ್ಲಾ ರೀತಿಯಿಂದಲೂ ತನಿಖೆ ಮಾಡ್ತಾ ಇದೀವಿ ಎಂದು ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಂಗಳೂರು ಬಾಂಬ್ ಬ್ಲಾಸ್ಟ್ ಕೇಸ್ – ನಾಳೆ ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

    ಮಂಗಳೂರು ಬಾಂಬ್ ಬ್ಲಾಸ್ಟ್ ಕೇಸ್ – ನಾಳೆ ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

    ಬೆಂಗಳೂರು: ಬಾಂಬ್ ಬ್ಲಾಸ್ಟ್ (Mangaluru Bomb Blast) ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

    ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ (Praveen Sood) ಹಾಗೂ ಎಡಿಜಿಪಿ ಅಲೋಕ್ ಕುಮಾರ್ (Alok Kumar) ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಭೇಟಿ ಸಂದರ್ಭದಲ್ಲಿ ಸಚಿವರು, ಬಾಂಬ್ ಸ್ಫೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನೂ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ. ಇದನ್ನೂ ಓದಿ: ಶಾಲಾ ಪಠ್ಯದಲ್ಲಿ ಭಗವದ್ಗೀತೆ, ರಾಮಾಯಣ ಸೇರ್ಪಡೆ – ಸ್ವಾಮೀಜಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಚಿಂತನೆ

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಂಗಳೂರು ಆಟೋ ರಿಕ್ಷಾ ಬಾಂಬ್ ಸ್ಫೋಟ ಘಟನೆಯನ್ನು (Mangaluru Bomb Blast Case) ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಭಯೋತ್ಪಾದನೆ ಚಟುವಟಿಕೆಗಳನ್ನು ಆಮೂಲಗ್ರಹವಾಗಿ ತನಿಖೆ ಮಾಡಿ, ದ್ರೋಹಿಗಳನ್ನು ಮಟ್ಟ ಹಾಕಲು ಪೋಲಿಸರು ಶ್ರಮಿಸುತ್ತಿದ್ದಾರೆ. ರಾಷ್ಟ್ರೀಯ ತನಿಖಾ ದಳವೂ (NIA) ಇದಕ್ಕೆ ಸಹಕರಿಸುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಏರ್‌ಟೆಲ್‌ ಪ್ಯಾಕ್‌ ದರ ಏರಿಕೆ: ಶೀಘ್ರವೇ ಮೊಬೈಲ್‌ ರಿಚಾರ್ಜ್‌ ದುಬಾರಿ

    ಈವರೆಗಿನ ಮಾಹಿತಿ ಆಧರಿಸಿ, ರಾಜ್ಯ ಪೊಲೀಸರು ಉಗ್ರಗಾಮಿ ಚಟುವಟಿಕೆಗಳಿಗೆ ಸಹಕರಿಸಿದವರ ವಿರುದ್ಧ ತನಿಖೆ ತೀವ್ರಗೊಳಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್‌ನಿಂದ ಇನ್ನೂ ಹೆಚ್ಚಿನ ಮಾಹಿತಿಗಳು ಹೊರಬರಬೇಕಿದೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]