Tag: Amareesh

  • ಕಾಂಗ್ರೆಸ್ ನಿಂದ ದೂರ ಉಳಿದಿರೋ ಅಂಬರೀಶ್ ಜೆಡಿಎಸ್ ಸೇರ್ತಾರಾ?

    ಕಾಂಗ್ರೆಸ್ ನಿಂದ ದೂರ ಉಳಿದಿರೋ ಅಂಬರೀಶ್ ಜೆಡಿಎಸ್ ಸೇರ್ತಾರಾ?

    ಬೆಂಗಳೂರು: ಚುನಾವಣಾ ಸನ್ಯಾಸ ಘೋಷಿಸಿರುವ ಹಿರಿಯ ನಟ ಮತ್ತು ಮಾಜಿ ಸಚಿವ ರೆಬೆಲ್ ಸ್ಟಾರ್ ಅಂಬರೀಶ್‍ರನ್ನು ಶನಿವಾರ ರಾತ್ರಿ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.

    ಬೆಂಗಳೂರಿನ ಗಾಲ್ಫ್ ಕ್ಲಬ್‍ನಲ್ಲಿರುವ ಅಂಬಿ ಮನೆಗೆ ಕುಮಾರಸ್ವಾಮಿ ತೆರಳಿ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಮಂಡ್ಯದಲ್ಲಿ ನಮ್ಮ ಪಕ್ಷವನ್ನು ಬೆಂಬಲಿಸಿ ಅಂತ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

    ಈ ವೇಳೆ ಅಂಬಿ ಕಾಂಗ್ರೆಸ್‍ನಲ್ಲಿ ನನಗೆ ಅವಮಾನ ಮಾಡಿದ್ದಾರೆ. ಹೇಳದೇ ಕೇಳದೇ ಸಚಿವ ಸ್ಥಾನದಿಂದ ತೆಗೆದುಹಾಕಿದ್ದಾರೆ. ಅದೇ ಕಾರಣಕ್ಕೆ ಚುನಾವಣೆಗೆ ನಿಲ್ಲುತ್ತಿಲ್ಲ ಅಂತ ತಮ್ಮ ನೋವು ತೋಡಿಕೊಂಡಿದ್ದಾರೆ. ಈ ಹಿಂದೆ ಜೆಡಿಎಸ್ ಬಗ್ಗೆ ಅಂಬಿ ಹೊಗಳಿದ್ದರು. ಆದರೆ ಈಗ ಜೆಡಿಎಸ್ ಸೇರ್ಪಡೆ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುತ್ತೀನಿ ಎಂದು ಹೇಳಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.