Tag: Amarinder Singh

  • ಪಕ್ಷ ವಿರೋಧಿ ಚಟುವಟಿಕೆ – ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಪತ್ನಿಯನ್ನು ಅಮಾನತುಗೊಳಿಸಿದ ಕಾಂಗ್ರೆಸ್

    ಪಕ್ಷ ವಿರೋಧಿ ಚಟುವಟಿಕೆ – ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಪತ್ನಿಯನ್ನು ಅಮಾನತುಗೊಳಿಸಿದ ಕಾಂಗ್ರೆಸ್

    ಚಂಡೀಗಢ: ಪಂಜಾಬ್‍ನ (Punjab) ಮಾಜಿ ಸಿಎಂ ಅಮರಿಂದರ್ ಸಿಂಗ್ (Amarinder Singh) ಪತ್ನಿ ಲೋಕಸಭೆ ಸಂಸದೆ (MP) ಪ್ರಣೀತ್ ಕೌರ್ (Preneet Kaur) ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಕಾಂಗ್ರೆಸ್ (Congress) ಪಕ್ಷದಿಂದ ಅಮಾನತುಗೊಳಿಸಿದೆ (Suspend).

    ಪ್ರಣೀತ್ ಕೌರ್ ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಬಿಜೆಪಿ (BJP) ಪರ ಕೆಲಸ ಮಾಡುತ್ತಿರುವ ಬಗ್ಗೆ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾಗೆ ದೂರುಗಳು ಬಂದ ಬಳಿಕ ಈ ಬಗ್ಗೆ ಎಚ್ಚರಿಕೆ ನೀಡಿದ್ದರು. ಬಳಿಕ ದೂರನ್ನು ಎಐಸಿಸಿ ಶಿಸ್ತು ಕ್ರಮ ಸಮಿತಿಗೆ (DAC) ನೀಡಲಾಗಿತ್ತು. ಇದೀಗ ಡಿಎಸಿ ಪಕ್ಷದಿಂದ ಉಚ್ಚಾಟಿಸಿದೆ. ಇದನ್ನೂ ಓದಿ: ಶಾ ಭೇಟಿಯಾದ ರಮೇಶ್ ಜಾರಕಿಹೊಳಿ – ಸಿಬಿಐ ತನಿಖೆಗೆ ಮನವಿ

    ಪ್ರಣೀತ್ ಕೌರ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಬಗ್ಗೆ ಪಕ್ಷವು ಹಲವು ದೂರುಗಳು ಬಂದಿವೆ. ಪಕ್ಷದ ರಾಜ್ಯ ಘಟಕವು ಅವರ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸುತ್ತಿದೆ. ಪಕ್ಷದ ಶಿಸ್ತು ಸಮಿತಿಯು ಅವರನ್ನು ಅಮಾನತುಗೊಳಿಸಲು ನಿರ್ಧರಿಸಿದೆ. ಈಗಾಗಲೇ ಪ್ರಣೀತ್ ಕೌರ್‌ಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ತಾರಿಕ್ ಅನ್ವರ್ ಹೇಳಿದ್ದಾರೆ. ಇದನ್ನೂ ಓದಿ: BBC ಸಾಕ್ಷ್ಯಚಿತ್ರ ನಿಷೇಧ – ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

    ಪ್ರಸ್ತುತ ಬಿಜೆಪಿಯಲ್ಲಿರುವ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು 2021ರ ನವೆಂಬರ್‌ನಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಹೊರಬಂದಿದ್ದರು. ಈ ಮೊದಲು ಪಂಜಾಬ್ ಕಾಂಗ್ರೆಸ್‍ನಲ್ಲಿ ಕಾಣಿಸಿಕೊಂಡಿದ್ದ ಬಂಡಾಯದಿಂದಾಗಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದರು. ಇದೀಗ ಬಿಜೆಪಿಯಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೀವ ಬೆದರಿಕೆ – ಐವರು BJP ನಾಯಕರಿಗೆ `Y-ಶ್ರೇಣಿ’ ಭದ್ರತೆ

    ಜೀವ ಬೆದರಿಕೆ – ಐವರು BJP ನಾಯಕರಿಗೆ `Y-ಶ್ರೇಣಿ’ ಭದ್ರತೆ

    ಚಂಡೀಗಢ: ಪಂಜಾಬ್‌ನ (Panjab) ಐವರು ಬಿಜೆಪಿ ನಾಯಕರಿಗೆ (BJP Leader) ಜೀವ ಬೆದರಿಕೆ ಇರುವುದಾಗಿ ಗುಪ್ತಚರ ಇಲಾಖೆ ವರದಿ ಮಾಡಿದ ಬಳಿಕ ಐವರಿಗೆ Y-ಶ್ರೇಣಿ ಭದ್ರತೆ (Y-Category Security) ಕಲ್ಪಿಸಲಾಗಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

    ಗುಪ್ತಚರ ಇಲಾಖೆ (Intelligence Bureau) ವರದಿ ಆಧರಿಸಿ ಗೃಹ ಸಚಿವಾಲಯವು (Home Affairs Ministry) ಅಮರಿಕ್ ಸಿಂಗ್ ಅಲಿವಾಲ್, ಹರ್ಜಿಂದರ್ ಸಿಂಗ್, ಹರ್ಚಂದ್ ಕೌರ್, ಪ್ರೇಮ್ ಮಿತ್ತಲ್ ಹಾಗೂ ಕಮಲದೀಪ್ ಸೈನಿ ಐವರು ನಾಯಕರಿಗೆ ಭದ್ರತೆ ಕಲ್ಪಿಸಿದೆ. ಈ ಐವರು ನಾಯಕರು ಪಂಜಾಬ್ (Punjab) ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರೊಂದಿಗೆ ಬಿಜೆಪಿ ಸೇರಿದ್ದರು. ಇದನ್ನೂ ಓದಿ: ಪೂರ್ಣ ಬಹಿಷ್ಕಾರಕ್ಕೆ BJP ಎಂಪಿಯಿಂದ ಕರೆ – ಮುಸ್ಲಿಮರ ವಿರುದ್ಧ ಯುದ್ಧ ಸಾರಲಾಗಿದೆ ಎಂದ ಓವೈಸಿ

    ಹೀಗಿರಲಿದೆ Y-ಶ್ರೇಣಿ ಭದ್ರತೆ: ವೈ ಶ್ರೇಣಿ ಭದ್ರತೆಯು ದೇಶದ 4ನೇ ಹಂತದ ಭದ್ರತಾ ಶ್ರೇಣಿಯಾಗಿದೆ. ವೈ-ಶ್ರೇಣಿಯಲ್ಲಿ ಒಬ್ಬರು ಅಥವಾ ಇಬ್ಬರು ಎನ್‌ಎಸ್‌ಜಿ ಕಮಾಂಡೋಗಳು (NSG commandos) ಹಾಗೂ ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಯನ್ನು ಒಳಗೊಂಡಿರುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಪಂಜಾಬ್ ಸಿಎಂ ಬೆಂಗಾವಲಿಗೆ 42 ಕಾರು- ವಿಐಪಿ ಸಂಸ್ಕೃತಿ ಎಂದು ಕಾಂಗ್ರೆಸ್ ಕಿಡಿ

    ಪಂಜಾಬ್ ಸಿಎಂ ಬೆಂಗಾವಲಿಗೆ 42 ಕಾರು- ವಿಐಪಿ ಸಂಸ್ಕೃತಿ ಎಂದು ಕಾಂಗ್ರೆಸ್ ಕಿಡಿ

    ಚಂಡೀಗಢ: ಪಂಜಾಬ್ (Panjab) ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರು ತಮ್ಮ ಬೆಂಗಾವಲಿಗಾಗಿ 42 ಕಾರುಗಳನ್ನು (Car) ಹೊಂದಿರುವ ಮಾಹಿತಿ ಬಹಿರಂಗವಾಗಿದೆ.

    ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ತಮ್ಮ ಬೆಂಗಾವಲಿಗಾಗಿ 42 ಕಾರುಗಳನ್ನ ಹೊಂದಿರುವ ಮಾಹಿತಿ ಆರ್‌ಟಿಐನಿಂದ (RTI) ಬಹಿರಂಗವಾಗಿದ್ದು, ಇದು ವಿಐಪಿ ಸಂಸ್ಕೃತಿಯನ್ನು ಸೂಚಿಸುತ್ತದೆ ಎಂದು ಕಾಂಗ್ರೆಸ್ (Congress) ಕಿಡಿಕಾರಿದೆ. ಇದನ್ನೂ ಓದಿ: ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲರಿಂದ ಅಂಕಿತ

    ಈ ಕುರಿತು ಆರ್‌ಟಿಐನಿಂದ ಪಡೆದ ಮಾಹಿತಿಯನ್ನು ಹಂಚಿಕೊಂಡಿರುವ ಕಾಂಗ್ರೆಸ್ ನಾಯಕ ಪ್ರತಾಪ್‌ಸಿಂಗ್ ಬಾಜ್ವಾ (Pratap Singh Bajwa), ಪಂಜಾಬ್ ಸಿಎಂ ಭಗವಂತ್ ಮಾನ್ ಅವರು ತಮ್ಮ ಬೆಂಗಾವಲು ಪಡೆಯಲ್ಲಿ 42 ಕಾರುಗಳನ್ನು ಹೊಂದಿದ್ದಾರೆ. ಇದು ಹಿಂದಿನ ಮುಖ್ಯಮಂತ್ರಿಗಳಾದ ಪ್ರಕಾಶ್ ಸಿಂಗ್ ಬಾದಲ್, ಅಮರೀಂದರ್ ಸಿಂಗ್ (Amarinder Singh) ಮತ್ತು ಚರಣ್‌ಜಿತ್ ಸಿಂಗ್ ಚನ್ನಿ (Charanjit Singh Channi) ಅವರ ಬೆಂಗಾವಲು ಪಡೆಗಿಂತಲೂ ಹೆಚ್ಚಿನದ್ದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: T20ಯಲ್ಲಿ 11 ದೇಶಗಳ ವಿರುದ್ಧ ಅರ್ಧಶತಕದಾಟ – ವಿಶೇಷ ದಾಖಲೆ ಬರೆದ ಕನ್ನಡಿಗ

    2007ರಿಂದ 2017ರ ವರೆಗೆ ಸಿಎಂ ಆಗಿದ್ದ ಪ್ರಕಾಶ್ ಸಿಂಗ್ ಬಾದಲ್ ಬೆಂಗಾವಲು ಪಡೆಗೆ 33 ವಾಹನ, ಅಮರೀಂದರ್ ಸಿಂಗ್ ಸಹ 33 ವಾಹನ ಹೊಂದಿದ್ದರು. 2021ರ ಸೆ. 20ರಿಂದ 2022ರ ಮಾರ್ಚ್ 16ರವರೆಗೆ ಸಿಎಂ ಆಗಿದ್ದ ಚರಣ್‌ಜಿತ್ ಸಿಂಗ್ ಚನ್ನಿ 39 ವಾಹನಗಳನ್ನು ಹೊಂದಿದ್ದರು. ಆದರೆ ಭಗವಂತ್ ಮಾನ್ ಅವರು, ತಮ್ಮ ಬೆಂಗಾವಲು ಪಡೆಯಲ್ಲಿ 42 ಕಾರುಗಳನ್ನು ಹೊಂದಿದ್ದಾರೆ ಎಂಬುದನ್ನು ಆರ್‌ಟಿಐ ಬಹಿರಂಗಪಡಿಸಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಭಗವಂತ್ ಮಾನ್ ಅವರು ಸಿಎಂ ಆಗುವ ಮುನ್ನ ಉಪದೇಶ ಮಾಡುತ್ತಿದ್ದಕ್ಕೂ, ಈಗ ನಡೆದುಕೊಳ್ಳುತ್ತಿರುವುದಕ್ಕೂ ವ್ಯತ್ಯಾಸವಿದೆ. ಇಷ್ಟು ದೊಡ್ಡ ವಾಹನಗಳ ಬೆಂಗಾವಲಿನಿಂದ ಏನನ್ನು ಪಂಜಾಬ್ ಜನತೆಗೆ ಕೊಡುತ್ತೇನೆ ಎಂದು ಅವರು ಹೇಳುತ್ತಾರೆಯೇ? ಅಷ್ಟು ಬೆಂಗಾವಲು ಹೊಂದಲು ಹೇಗೆ ಸಾಧ್ಯ? ತೆರಿಗೆದಾರರ ಹಣವನ್ನೇಕೆ ಮನಬಂದಂತೆ ವ್ಯಯಿಸುತ್ತಿದ್ದಾರೆ? ಇದು ವಿಐಪಿ ಸಂಸ್ಕೃತಿ ಸೂಚಿಸುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ ತೊರೆದ 8 ತಿಂಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರಾ ಅಮರಿಂದರ್ ಸಿಂಗ್?

    ಕಾಂಗ್ರೆಸ್ ತೊರೆದ 8 ತಿಂಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರಾ ಅಮರಿಂದರ್ ಸಿಂಗ್?

    ಚಂಡೀಗಢ: ಕಳೆದ ವರ್ಷ ಕಾಂಗ್ರೆಸ್ ತೊರೆದಿದ್ದ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

    ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ತಮ್ಮ ಬೆನ್ನು ಶಸ್ತ್ರಚಿಕಿತ್ಸೆಗಾಗಿ ಲಂಡನ್ ತೆರಳಿದ್ದರು. ಮುಂದಿನ ವಾರ ಅವರು ಲಂಡನ್‌ನಿಂದ ಭಾರತಕ್ಕೆ ಮರಳಲಿದ್ದು, ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: 2.5 ವರ್ಷಗಳ ಹಿಂದೆಯೇ ಸೇನಾ ನಾಯಕನಿಗೆ ಬಿಜೆಪಿ ಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದರೆ MVA ಹುಟ್ಟುತ್ತಿರಲಿಲ್ಲ: ಠಾಕ್ರೆ

    ಕಳೆದ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು, 5 ದಶಕಗಳ ವರೆಗೆ ಕಾರ್ಯ ನಿರ್ವಹಿಸಿದ್ದ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದರು. ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರಿಗೆ ಸಿಂಗ್ ಬರೆದಿದ್ದ ಪತ್ರದಲ್ಲಿ, ತಾವು ನಾಯಕತ್ವದಲ್ಲಿ 3 ಬಾರಿ ಅವಮಾನಕ್ಕೊಳಗಾಗಿದ್ದೇನೆ. ಇನ್ನು ಮುಂದೆ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದರು.

    3 ಬಾರಿ ಸಿಎಂ ಆಗಿದ್ದ ಅಮರಿಂದರ್ ಸಿಂಗ್ ಕಾಂಗ್ರೆಸ್‌ನಿಂದ ಅವಮಾನಕ್ಕೊಳಗಾದರೂ ಬಿಜೆಪಿ ಸೇರಲು ನಿರಾಕರಿಸಿದ್ದರು. ಕಳೆದ ವರ್ಷ ಕಾಂಗ್ರೆಸ್ ಅನ್ನು ತೊರೆದ ಬಳಿಕ ತಮ್ಮದೇ ಪಕ್ಷವನ್ನು ಪ್ರಾರಂಭಿಸಿದರು. ಏಪ್ರಿಲ್-ಮೇ ತಿಂಗಳಿನಲ್ಲಿ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದರು. ಇದನ್ನೂ ಓದಿ: ದೇವೇಗೌಡ್ರು ಇಬ್ಬರ ಮೇಲೆ ಕೈ ಹಾಕ್ಕೊಂಡು ಹೋಗ್ತಾವ್ರೆ… ನಾಲ್ವರ ಮೇಲೆ ಹೋಗೋದು ಹತ್ತಿರದಲ್ಲೇ ಇದೆ: KN ರಾಜಣ್ಣ

    ಅಮರಿಂದರ್ ಸಿಂಗ್ ಅವರ ಶಸ್ತ್ರಚಿಕಿತ್ಸೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಅವರನ್ನು ಸಂಪರ್ಕಿಸಿದ್ದಾರೆ ಎನ್ನಲಾಗಿದ್ದು, ಶೀಘ್ರವೇ ಅವರು ಬಿಜೆಪಿಗೆ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

    Live Tv

  • ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಗಾಂಧಿ ಕುಟುಂಬವೇ ಹೊಣೆ: ಅಮರೀಂದರ್ ಸಿಂಗ್

    ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಗಾಂಧಿ ಕುಟುಂಬವೇ ಹೊಣೆ: ಅಮರೀಂದರ್ ಸಿಂಗ್

    ಚಂಡೀಗಢ: ದೇಶಾದ್ಯಂತ ಜನರು ಗಾಂಧಿ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಕಳೆದುಕೊಂಡಿದ್ದಾರೆ. ಇದರಿಂದಾಗಿ ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಗೆ ಗಾಂಧಿ ಕುಟುಂಬವೇ ಸಂಪೂರ್ಣ ಹೊಣೆಗಾರರು ಎಂದು ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ವಾಗ್ದಾಳಿ ನಡೆಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಮೊದಲು ಅಸಮರ್ಥ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ರಾಜ್ಯ ಮುಖ್ಯಸ್ಥರನ್ನಾಗಿ ಹಾಗೂ ಭ್ರಷ್ಟ ಚರಣ್‍ಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿತ್ತು. ಆ ದಿನವೇ ಕಾಂಗ್ರೆಸ್ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡಿತು ಎಂದು ಟೀಕಿಸಿದರು.

    ಕಾಂಗ್ರೆಸ್ ಪಂಜಾಬ್ ಮಾತ್ರವಲ್ಲದೆ ಉತ್ತರಪ್ರದೇಶ, ಉತ್ತರಖಂಡ, ಗೋವಾ ಮತ್ತು ಮಣಿಪುರದಲ್ಲಿಯೂ ಹೀನಾಯ ಸೋಲನುಭವಿಸಿದೆ. ಅವರು ತಮ್ಮ ಸ್ವಂತ ಪ್ರಮಾದಗಳನ್ನು ಒಪ್ಪಿಕೊಳ್ಳುವ ಬದಲು ಪಂಜಾಬ್‍ನ ಸೋಲಿನ ಹೊಣೆಯನ್ನು ನನ್ನ ಮೇಲೆ ಹಾಕಲು ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದರು.

    ಹಿರಿಯ ಕಾಂಗ್ರೆಸ್ಸಿಗರು ಆಂತರಿಕ ಕಲಹ ಮತ್ತು ಸಿಧು ಅವರ ಪಕ್ಷ ವಿರೋಧಿ ಹೇಳಿಕೆಗಳನ್ನು ದೂಷಿಸಿದ್ದಾರೆ. ಪ್ರಸ್ತುತ ವ್ಯವಸ್ಥೆಯಲ್ಲಿ ಕಾಂಗ್ರೆಸ್‍ಗೆ ಭವಿಷ್ಯವಿಲ್ಲ ಎಂದರು. ಇದನ್ನೂ ಓದಿ: ‘ಕಾಪಾಡಿ ಕಾಪಾಡಿ’ ಎನ್ನುತ್ತ ಜನರ ಕಣ್ಣೆದುರೇ ನದಿಯಲ್ಲಿ ಮುಳುಗಿ ಪ್ರಾಣ ಬಿಟ್ಟ ಯುವಕರು

    ಕಳೆದ ವರ್ಷ ಮುಖ್ಯಮಂತ್ರಿಯಾಗಿ ಪದಚ್ಯುತಗೊಂಡ ನಂತರ, ಅಮರಿಂದರ್ ಸಿಂಗ್ ಕಾಂಗ್ರೆಸ್ ತೊರೆದು ತಮ್ಮದೇ ಆದ ಪಂಜಾಬ್ ಲೋಕ ಕಾಂಗ್ರೆಸ್ ಅನ್ನು ಪ್ರಾರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ನಡೆಸಿದ ಪಂಚ ರಾಜ್ಯಗಳಲ್ಲಿ ಪಕ್ಷದ ಸೋಲಿನ ಅವಲೋಕನ ಸಭೆಯಲ್ಲಿ ಪಂಜಾಬ್ ಸೋಲಿಗೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ಕಾರಣ ಎಂದು ದೂಷಿಸಿತ್ತು. ಇದನ್ನೂ ಓದಿ: ಕಬಡ್ಡಿ ಪಂದ್ಯದ ವೇಳೆಯೇ ಅಂತರರಾಷ್ಟ್ರೀಯ ಆಟಗಾರನನ್ನು ಗುಂಡಿಕ್ಕಿ ಹತ್ಯೆ

    ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ 117 ಕ್ಷೇತ್ರದಲ್ಲಿ ಕಾಂಗ್ರೆಸ್ ಕೇವಲ 18 ಸ್ಥಾನಗಳನ್ನು ಪಡೆದಿದ್ದು, ಆಮ್ ಆದ್ಮಿ ಪಕ್ಷ 92 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ,

  • ಚುನಾವಣೆ ನಂತರ ಪಂಜಾಬ್‌ನಲ್ಲಿ ಕಾಂಗ್ರೆಸ್ ನಿರ್ನಾಮ: ಅಮರಿಂದರ್ ಸಿಂಗ್

    ಚುನಾವಣೆ ನಂತರ ಪಂಜಾಬ್‌ನಲ್ಲಿ ಕಾಂಗ್ರೆಸ್ ನಿರ್ನಾಮ: ಅಮರಿಂದರ್ ಸಿಂಗ್

    ಚಂಡೀಗಢ: ಈ ಬಾರಿಯ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಿಂದ ನಿರ್ನಾಮವಾಗಲಿದೆ ಎಂದು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಭವಿಷ್ಯ ನುಡಿದರು.

    ಪಟಿಯಾಲಾದಲ್ಲಿ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವಿಭಿನ್ನ ಜಗತ್ತಿನಲ್ಲಿ ವಾಸಿಸುತ್ತಿದೆ. ಇದರಿಂದಾಗಿ ಈ ಬಾರಿ ಪಂಜಾಬ್‌ನಲ್ಲಿ ಅಧಿಕಾರ ಕಳೆದುಕೊಳ್ಳುತ್ತದೆ ಎಂದು ಟೀಕಿಸಿದ ಅವರು, ತಾವು ಈ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

    ಇದೇ ವೇಳೆ ಎಎಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಭಗವಂತ್ ಮಾನ್ ದೇಶ ವಿರೋಧಿ ಹಾಗೂ ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ ಅವರು, ತಮ್ಮ ಪಕ್ಷವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ರಾಜ್ಯದಲ್ಲಿ ಸಕಾರಾತ್ಮಕ ವರದಿಗಳು ಬರುತ್ತಿವೆ ಎಂದರು. ಇದನ್ನೂ ಓದಿ:  ಪಂಜಾಬ್ ರಾಜ್ಯವನ್ನು ಇಷ್ಟ ಪಡುವವರು, ಮಾಫಿಯಾ ನಡುವಿನ ಚುನಾವಣೆ ಸ್ಪರ್ಧೆಯಾಗಿದೆ: ಸಿಧು

    ಕಾಂಗ್ರೆಸ್, ಆಮ್ ಆದ್ಮಿ ಪಕ್ಷ (ಎಎಪಿ), ಶಿರೋಮಣಿ ಅಕಾಲಿದಳ-ಬಹುಜನ ಸಮಾಜ ಪಕ್ಷ ಮೈತ್ರಿ, ಮತ್ತು ಬಿಜೆಪಿ ಹಾಗೂ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷದ ಮೈತ್ರಿ ಈ ಬಾರಿ ಪ್ರಮುಖ ಪಕ್ಷಗಳಾಗಿ ಸ್ಪರ್ಧಿಸಲಿದೆ. ಇಂದು ಎಲ್ಲಾ 117 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ತೃಣಮೂಲ ಕಾಂಗ್ರೆಸ್ ಹಿರಿಯ ನಾಯಕ ಸಾಧನ್ ಪಾಂಡೆ ಇನ್ನಿಲ್ಲ

  • ಪಂಜಾಬ್ ರಾಜ್ಯವನ್ನು ಇಷ್ಟ ಪಡುವವರು, ಮಾಫಿಯಾ ನಡುವಿನ ಚುನಾವಣೆ ಸ್ಪರ್ಧೆಯಾಗಿದೆ: ಸಿಧು

    ಪಂಜಾಬ್ ರಾಜ್ಯವನ್ನು ಇಷ್ಟ ಪಡುವವರು, ಮಾಫಿಯಾ ನಡುವಿನ ಚುನಾವಣೆ ಸ್ಪರ್ಧೆಯಾಗಿದೆ: ಸಿಧು

    ಚಂಡೀಗಢ: ಈ ವಿಧಾನಸಭಾ ಚುನಾವಣೆಯೂ ಪಂಜಾಬ್ ರಾಜ್ಯವನ್ನು ಇಷ್ಟ ಪಡುತ್ತಿರುವವರ ಹಾಗೂ ಮಾಫಿಯಾ ವ್ಯವಸ್ಥೆಯ ನಡುವಿನ ಸ್ಪರ್ಧೆಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅಭಿಪ್ರಾಯಪಟ್ಟರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯವು ಭಯೋತ್ಪಾದನೆಯಿಂದ ಒಂದು ಪೀಳಿಗೆಯನ್ನೆ ಕಳೆದುಕೊಂಡಿದೆ. ಮತ್ತೆ ಮಾಫಿಯಾ ವ್ಯವಸ್ಥೆಗೆ ಬೆಂಬಲ ನೀಡಿದರೆ ಮುಂದಿನ ಪೀಳಿಗೆಯನ್ನು ಕಳೆದುಕೊಳ್ಳುವ ಆತಂಕ ಎದುರಗುತ್ತದೆ. ಇದರಿಂದಾಗಿ ಮತದಾರರು ಯೋಚನೆಯಿಂದ ಮತಚಲಾಯಿಸಿ ಎಂದು ಮನವಿ ಮಾಡಿದರು.

    ಈ ವಿಧಾನಸಭಾ ಚುನಾವಣೆಯಲ್ಲಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಪ್ರಕಾಶ್ ಸಿಂಗ್ ಬಾದಲ್ ಅವರ ಕುಟುಂಬಗಳ ಮಾಫಿಯಾಗಳು ತಮ್ಮ ವೈಯಕ್ತಿಕ ಹಿತಾಸಕ್ತಿಗಳಿಗಾಗಿ ಪಂಜಾಬ್ ಅನ್ನು ಲೂಟಿ ಮಾಡಿದರೆ ಮತ್ತೊಂದೆಡೆ ರಾಜ್ಯವನ್ನು ಪ್ರೀತಿಸುವ ಹಾಗೂ ಜನರ ಅಭಿವೃದ್ಧಿಗಾಗಿ ಶ್ರಮಿಸುವ ಪಕ್ಷಗಳ ನಡುವಿನ ಪೈಪೋಟಿಯಾಗಿದೆ ಎಂದು ನುಡಿದರು. ಇದನ್ನೂ ಓದಿ: ಭಾರತೀಯ ಧರ್ಮ, ಪರಂಪರೆ ಇತರ ಧರ್ಮಗಳ ವಿರುದ್ಧ ಇಲ್ಲ: ಆರಗ ಜ್ಞಾನೇಂದ್ರ

    ಒಟ್ಟು 2.15 ಕೋಟಿ ಮತದಾರರನ್ನು ಹೊಂದಿರುವ ಪಂಜಾಬ್‌ನ ಎಲ್ಲಾ 117 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಒಟ್ಟು 24,740 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಬಾರಿ ಕಾಂಗ್ರೆಸ್‌ಗೆ ಆಪ್ ಪಕ್ಷ ಪ್ರಬಲ ಪೈಪೋಟಿಯನ್ನು ನೀಡಿದೆ. ಇದನ್ನೂ ಓದಿ: ತೃಣಮೂಲ ಕಾಂಗ್ರೆಸ್ ಹಿರಿಯ ನಾಯಕ ಸಾಧನ್ ಪಾಂಡೆ ಇನ್ನಿಲ್ಲ

  • ಆಪ್ ನಾಯಕರು ಬಿಜೆಪಿಗೆ ನಿಷ್ಠೆ ತೋರಿಸುತ್ತಿದ್ದಾರೆ: ಪ್ರಿಯಾಂಕಾ ಗಾಂಧಿ

    ಆಪ್ ನಾಯಕರು ಬಿಜೆಪಿಗೆ ನಿಷ್ಠೆ ತೋರಿಸುತ್ತಿದ್ದಾರೆ: ಪ್ರಿಯಾಂಕಾ ಗಾಂಧಿ

    ಚಂಡೀಗಢ: ಆಮ್ ಆದ್ಮಿ ಪಕ್ಷವು ಆರ್‌ಎಸ್‍ಎಸ್‍ನೊಂದಿಗೆ ಹೊರಹೊಮ್ಮಿದ್ದು, ಆಪ್ ನಾಯಕರು ಬಿಜೆಪಿಗೆ ನಿಷ್ಠೆಯನ್ನು ತೋರುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದರು.

    ಕೊಟ್ಕಾಪುರದಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಸೈದ್ಧಾಂತಿಕ ಸಿದ್ಧಾಂತಕ್ಕೆ ಬಿಜೆಪಿ ನಾಯಕರಿಗಿಂತ ಆಪ್ ಪಕ್ಷ ಹೆಚ್ಚು ಹತ್ತಿರವಾಗಿದ್ದೇವೆ ಎಂದು ಎಎಪಿ ನಾಯಕರೇ ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು.

    ದೆಹಲಿಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆಗಳ ಹೆಸರಿನಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ. ರಾಜಕೀಯ ಪಕ್ಷಗಳು ಮತ್ತು ಅವರ ನಾಯಕರ ಬಗ್ಗೆ ಸತ್ಯವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದ ಅವರು, ಪಂಜಾಬ್‍ನ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ನಿಮ್ಮ ನಡುವಿನ ಸಾಮಾನ್ಯ ವ್ಯಕ್ತಿಯಾಗಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಪ್ರಧಾನಿಗೆ ಭದ್ರತೆ ನೀಡಲು ಸಾಧ್ಯವಾಗದ ಚನ್ನಿ ಪಂಜಾಬ್‍ನ್ನು ಹೇಗೆ ಕಾಪಾಡಿಕೊಳ್ಳುವರು: ಅಮಿತ್ ಶಾ

    ಕಳೆದ 5 ವರ್ಷಗಳಿಂದ ಪಂಜಾಬ್‍ನಲ್ಲಿ ನಾವು ಸರ್ಕಾರವನ್ನು ನಡೆಸುತ್ತಿದ್ದೇವೆ. ಇದಕ್ಕೂ ಮೊದಲು ಅಮರೀಂದರ್ ಸಿಂಗ್ ಬಿಜೆಪಿಯೊಂದಿಗೆ ಸಮ್ಮಿಶ್ರ ಸರ್ಕಾರ ಮಾಡಿಕೊಂಡಾಗ ಪಂಜಾಬ್‍ನಿಂದ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸಿತ್ತು. ಬದಲಿಗೆ ದೆಹಲಿಯಿಂದ ಕಾರ್ಯನಿರ್ವಹಿಸಿತ್ತು. ಬಿಜೆಪಿಯ ಗುಪ್ತ ಮೈತ್ರಿ ಈಗ ಸಾರ್ವಜನಿಕವಾಗಿ ಹೊರಬಂದಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸ್ವಾತಂತ್ರ್ಯ ಪೂರ್ವದಿಂದಲೂ ಹಿಜಬ್‌ ಧರಿಸುತ್ತಿದ್ದಾರೆ: ಜಮೀರ್ ಅಹ್ಮದ್

    ಫೆಬ್ರವರಿ 20ರಂದು ಪಂಜಾಬ್ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ. ರಾಜ್ಯದಲ್ಲಿ 2017ರ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಪೂರ್ಣ ಬಹುಮತವನ್ನು ಗಳಿಸಿತ್ತು. 10 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಎಸ್‍ಎಡಿ-ಬಿಜೆಪಿ ಸರ್ಕಾರವನ್ನು ಸೋಲಿಸಿ ಕಾಂಗ್ರೆಸ್ ಸರ್ಕಾರ ರಚಿಸಿತ್ತು.

  • ಅಕ್ರಮ ಮರಳುಗಾರಿಕೆಯಲ್ಲಿ ಸೋದರಳಿಯ ಬಂಧನಕ್ಕೆ ಪಂಜಾಬ್ ಸಿಎಂ ಪ್ರತಿಕ್ರಿಯೆ

    ಅಕ್ರಮ ಮರಳುಗಾರಿಕೆಯಲ್ಲಿ ಸೋದರಳಿಯ ಬಂಧನಕ್ಕೆ ಪಂಜಾಬ್ ಸಿಎಂ ಪ್ರತಿಕ್ರಿಯೆ

    ಚಂಡೀಗಢ: ಅಕ್ರಮ ಮರಳುಗಾರಿಕೆಯಲ್ಲಿ ತನ್ನ ಸೋದರಳಿಯನನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬಂಧಿಸಿರುವ ಕುರಿತು ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ಕಾನೂನು ತನ್ನ ಕೆಲಸವನ್ನು ಮಾಡುವುದಕ್ಕೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

    ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಿರುವ ಸಂದರ್ಭದಲ್ಲೇ, ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ತಮ್ಮ ಸೋದರಳಿಯ ಭೂಪೇಂದ್ರ ಸಿಂಗ್ ಹನಿ ಅವರನ್ನು ಬಂಧಿಸಿರುವ ಕುರಿತು ಪ್ರತಿಕ್ರಿಯಿಸಿದ್ದಾರೆ. ಕಾನೂನು ತನ್ನ ಕೆಲಸವನ್ನು ಮಾಡಿದೆ. ಅದಕ್ಕೆ ನಾವು ಯಾವುದೇ ಆಕ್ಷೇಪಣೆ ಮಾಡಲ್ಲ ಎಂದಿದ್ದಾರೆ. ಇದನ್ನೂ ಓದಿ: ಹಿಜಬ್ ವಿವಾದ- ಹೈಕೋರ್ಟ್ ತೀರ್ಪಿನ ನಂತರ ಕ್ರಮ: ಬಿಸಿ ನಾಗೇಶ್

    ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಚನ್ನಿ ಅವರ ಸೋದರಳಿಯನ ಬಂಧನದ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇದೊಂದು ರಾಜಕೀಯ ಒತ್ತಡ ಸೃಷ್ಟಿಸಲು ಅವರನ್ನು ಬಂಧಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

    ಬಂಧನದ ಬಗ್ಗೆ ಪ್ರತಿಕ್ರಿಯಿಸಿರುವ ಪಂಜಾಬ್ ಲೋಕ ಕಾಂಗ್ರೆಸ್ ಸಂಸ್ಥಾಪಕ ಕ್ಯಾಪ್ಟನ್ ಅಮರೀಂದರ್ ಸಿಂಗ್, ತನಿಖಾ ಸಂಸ್ಥೆ ತನ್ನ ಕೆಲಸವನ್ನು ಮಾಡಿದೆ. ಇದಕ್ಕೆ ರಾಜಕೀಯ ಪಕ್ಷವನ್ನು ಏಕೆ ದೂಷಿಸಬೇಕು ಎಂದು ಪ್ರಶ್ನಿಸಿದ್ದಾರೆ.

    ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ಭೂಪೇಂದ್ರ ಸಿಂಗ್ ಹನಿ ಅವರನ್ನು ಇ.ಡಿ. ವಿಚಾರಣೆಗೆ ಒಳಪಡಿಸಿತ್ತು. ನಂತರ ಜಾರಿ ನಿರ್ದೇಶನಾಲಯ ಗುರುವಾರ ತಡರಾತ್ರಿ ಬಂಧಿಸಿದೆ. ಮನಿ ಲ್ಯಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‍ಎ)ಯ ನಿಬಂಧನೆಗಳ ಅಡಿಯಲ್ಲಿ ಅವರನ್ನು ಜಲಂಧರ್‍ನಿಂದ ಬಂಧಿಸಲಾಗಿದೆ. ಇದನ್ನೂ ಓದಿ: ನಾಳೆಯಿಂದ ಥಿಯೇಟರ್‌ ಹೌಸ್‌ ಫುಲ್‌- ಸರ್ಕಾರದಿಂದ ಅನುಮತಿ

    ಪಂಜಾಬ್‍ನಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಕಳೆದ ತಿಂಗಳು ಭೋಪೇಂದ್ರ ಸಿಂಗ್ ಹನಿ ಅವರ ನಿವಾಸ ಹಾಗೂ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ 8 ಕೋಟಿ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಆಸ್ತಿ ವಹಿವಾಟಿಗೆ ಸಂಬಂಧಿಸಿದ ದಾಖಲೆಗಳು, ಮೊಬೈಲ್ ಫೋನ್‍ಗಳು, 21 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನ ಮತ್ತು 12 ಲಕ್ಷ ಮೌಲ್ಯದ ರೋಲೆಕ್ಸ್ ವಾಚ್ ವಶಪಡಿಸಿಕೊಳ್ಳಲಾಗಿದೆ.

  • PLC ಪಕ್ಷಕ್ಕೆ ಹಾಕಿ ಸ್ಟಿಕ್, ಬಾಲ್ ಚಿಹ್ನೆ ಸಿಕ್ಕಿದೆ: ಅಮರಿಂದರ್ ಸಿಂಗ್

    PLC ಪಕ್ಷಕ್ಕೆ ಹಾಕಿ ಸ್ಟಿಕ್, ಬಾಲ್ ಚಿಹ್ನೆ ಸಿಕ್ಕಿದೆ: ಅಮರಿಂದರ್ ಸಿಂಗ್

    ಚಂಡೀಗಢ: ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿದ್ದು, ಫೆಬ್ರವರಿ 14ರ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಚಿಹ್ನೆಯಾನ್ನಾಗಿ ಹಾಕಿ ಸ್ಟಿಕ್ ಮತ್ತು ಬಾಲ್ ಚುನಾವಣಾ ಆಯೋಗ ನೀಡಿದೆ.

    ಈ ಕುರಿತಂತೆ ಅಮರಿಂದರ್ ಸಿಂಗ್ ಅವರು, ಪಂಜಾಬ್ ಲೋಕ ಕಾಂಗ್ರೆಸ್ ಹಾಕಿ ಸ್ಟಿಕ್ ಮತ್ತು ಬಾಲ್ ತನ್ನ ಪಕ್ಷದ ಚಿಹ್ನೆಯಾಗಿ ಪಡೆದಿದೆ ಎಂದು ಹೇಳಲು ಸಂತೋಷವಾಗುತ್ತಿದೆ. ಸದ್ಯ ಗುರಿಯನ್ನು ತಲುಪುವುದು ಮಾತ್ರ ಬಾಕಿ ಇದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಫಸ್ಟ್ ಟೈಂ ಮನುಷ್ಯನಿಗೆ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ

    ರಾಜ್ಯ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಪಿಎಲ್‍ಸಿ ಚುನಾವಣೆಗೂ ಮುನ್ನವೇ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರೊಂದಿಗಿನ ವಿವಾದಗಳ ನಂತರ ಕಳೆದ ವರ್ಷ ರಾಜೀನಾಮೆ ನೀಡಿದ್ದ ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ತೊರೆದು ನಂತರ ತಮ್ಮದೇ ಆದ ರಾಜಕೀಯ ಸಂಘಟನೆ ಪಂಜಾಬ್ ಲೋಕ ಕಾಂಗ್ರೆಸ್ ಸ್ಥಾಪಿಸಿದ್ದರು. ಫೆಬ್ರವರಿ 14 ರಂದು ಪಂಜಾಬ್‍ನಲ್ಲಿ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಮಕರ ಸಂಕ್ರಾಂತಿಗೆ ಗಾಳಿಪಟ ಹಾರಿಸೋದೇಕೆ? ವಿಶೇಷತೆ ಏನು?