Tag: Amarnath Cave

  • ಅಮರನಾಥದಲ್ಲಿ ಮೇಘಸ್ಪೋಟ, 8 ಮಂದಿ ಸಾವು – NDRF, BSF ತಂಡಗಳಿಂದ ಕಾರ್ಯಾಚರಣೆ

    ಅಮರನಾಥದಲ್ಲಿ ಮೇಘಸ್ಪೋಟ, 8 ಮಂದಿ ಸಾವು – NDRF, BSF ತಂಡಗಳಿಂದ ಕಾರ್ಯಾಚರಣೆ

    ಶ್ರೀನಗರ: ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಅಮರನಾಥದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ.

    ಇಂದು ಸಂಜೆ 5.30ರ ವೇಳೆಯಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ NDRF, SDRF ಹಾಗೂ BSF ತಂಡಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:  ಅಮರನಾಥ ಯಾತ್ರೆಗೆ ಎರಡೇ ದಿನ: ಯಾತ್ರಾರ್ಥಿಗಳಿಗೆ ಆಧಾರ್, ಸರ್ಕಾರಿ ಗುರುತಿನ ಚೀಟಿ ಕಡ್ಡಾಯ

    ಘಟನಾ ಪ್ರದೇಶಕ್ಕೆ NDRF, SDRF, BSF ಮತ್ತು ಸ್ಥಳೀಯ ರಕ್ಷಣಾಪಡೆಗಳು ಭೇಟಿ ನೀಡಿದ್ದು, ಘಟನಾ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಜೊತೆಗೆ ಮಾತುಕತೆ ನಡೆಸುತ್ತಿದ್ದಾರೆ. ಜನರ ಜೀವ ಉಳಿಸುವುದು ನಮ್ಮ ಆದ್ಯತೆ ಎಂದು ಶಾ ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ `ಕಾಳಿ’ ಹಿಂದುತ್ವವನ್ನು ಕಿತ್ತೊಗೆಯುತ್ತಾಳೆ: ಲೀನಾ ಮಣಿಮೇಕಲೈ ಸ್ಫೋಟಕ ಹೇಳಿಕೆ

    2 ವರ್ಷಗಳ ಬಳಿಕ ಅಮರನಾಥ ಯಾತ್ರೆ: ಸತತ 2 ವರ್ಷಗಳ ನಂತರ ಅಮರನಾಥ ಯಾತ್ರೆ ಮತ್ತೆ ಪ್ರಾರಂಭವಾಗಿದ್ದು, ಸುಮಾರು 2,750 ಯಾತ್ರಿಕರ ಬ್ಯಾಚ್ ಇಂದು ಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ದಕ್ಷಿಣ ಕಾಶ್ಮೀರ ಹಿಮಾಲಯದಲ್ಲಿ ಸ್ವಾಭಾವಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗವನ್ನು ಹೊಂದಿರುವ ಗುಹಾ ದೇಗುಲ ಜಗತ್‍ಪ್ರಸಿದ್ಧವಾಗಿದೆ. ಅನಂತನಾಗ್ ಜಿಲ್ಲೆಯ ಪಹಲ್ಗಾಮ್‍ನಲ್ಲಿರುವ ನುನ್ವಾನ್ ಬೇಸ್ ಕ್ಯಾಂಪ್‍ನಲ್ಲಿ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲಾ ಅವರು ಯಾತ್ರೆಗೆ ಚಾಲನೆ ನೀಡಿದ್ದರು. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಬೇಸ್ ಕ್ಯಾಂಪ್‍ನಿಂದ 4,890 ಯಾತ್ರಾರ್ಥಿಗಳ ಮೊದಲ ಬ್ಯಾಚ್‍ಗೆ ಚಾಲನೆ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಪವಿತ್ರ ಅಮರನಾಥ ಗುಹೆಯಲ್ಲಿ ಮಂತ್ರ ಪಠಿಸುವಂತಿಲ್ಲ: ಎನ್‍ಜಿಟಿ ಆದೇಶ

    ಪವಿತ್ರ ಅಮರನಾಥ ಗುಹೆಯಲ್ಲಿ ಮಂತ್ರ ಪಠಿಸುವಂತಿಲ್ಲ: ಎನ್‍ಜಿಟಿ ಆದೇಶ

    ನವದೆಹಲಿ: ಯಾತ್ರಾರ್ಥಿಗಳಿಗೆ ಸರಿಯಾಗಿ ಮೂಲಭೂತ ಸೌಕರ್ಯ ಒದಗಿಸಲು ವಿಫಲವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹಸಿರು ಪೀಠ(ಎನ್‍ಜಿಟಿ) ಅಮರನಾಥ ಗುಹೆಯಲ್ಲಿ ಮಂತ್ರಗಳ ಪಠಣಕ್ಕೆ ನಿಷೇಧ ಹೇರಿ ಆದೇಶ ಪ್ರಕಟಿಸಿದೆ.

    ಬುಧವಾರ, ಮುಖ್ಯ ನ್ಯಾಯಮೂರ್ತಿ ಸ್ವಾತಂತ್ರ ಕುಮಾರ್ ನೇತೃತ್ವದ ಎನ್ ಜಿಟಿ ಪೀಠವು ಗುಹಾ ದೇವಾಲಯದಲ್ಲಿ ಘಂಟಾನಾದ ಮಾಡುವಂತಿಲ್ಲ. ದೇವಾಲಯದಲ್ಲಿ ಭಕ್ತರು ಯಾವುದೇ ಮಂತ್ರ ಮತ್ತು ಜೈಕಾರವನ್ನು ಹೇಳುವಂತಿಲ್ಲ ಎಂದು ಆದೇಶಿಸಿದೆ.

    ಯಾತ್ರಾರ್ಥಿಗಳಿಗೆ ಸಾಕಷ್ಟು ಮೂಲಭೂತ ಸೌಕರ್ಯ ಒದಗಿಸಲು ವಿಫಲವಾದ ಹಿನ್ನೆಲೆಯಲ್ಲಿ ಹಸಿರು ಪೀಠವು ಕಳೆದ ತಿಂಗಳು ಅಮರನಾಥ ದೇವಾಲಯ ಮಂಡಳಿಯಿಂದ ಆಡಳಿತವನ್ನು ತಾನು ವಹಿಸಿಕೊಂಡಿತ್ತು. ಆಡಳಿತವನ್ನು ವಶಕ್ಕೆ ಪಡೆದ ಪೀಠ ಈಗ ಈ ಆದೇಶವನ್ನು ಪ್ರಕಟಿಸಿದೆ.

    ಅಮರನಾಥ ದೇವಾಲಯವನ್ನು ನೋಡಿಕೊಳ್ಳುವ ಆಡಳಿತ ಮಂಡಳಿಗೆ ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದೆ. ಅಷ್ಟೇ ಅಲ್ಲದೇ ಭಕ್ತರು ಸುಲಭವಾಗಿ ದರ್ಶನ ಮಾಡುವಂತಾಗಲು ಶಿವಲಿಂಗದ ಮುಂಭಾಗದಲ್ಲಿರುವ ಕಬ್ಬಿಣದ ಸರಳುಗಳನ್ನು ತೆಗೆಯುವಂತೆ ಆದೇಶ ನೀಡಿದೆ.

    ಭಕ್ತರು ತಮ್ಮ ಮೊಬೈಲ್ ಮತ್ತು ಇತರೇ ವಸ್ತುಗಳನ್ನು ಕೊನೆಯ ಚೆಕ್ ಪೋಸ್ಟ್ ನಲ್ಲಿ ಇಡಬೇಕು. ಈ ವಸ್ತುಗಳನ್ನು ಇಡಲು ಬೋರ್ಡ್ ಒಂದು ಜಾಗವನ್ನು ನಿರ್ಮಿಸಬೇಕು ಎಂದು ಪೀಠ ಸೂಚಿಸಿದೆ.

    ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದಲ್ಲಿ ಒಂದು ಸಮಿತಿಯನ್ನು ಪೀಠ ರಚಿಸಿದ್ದು, ಯಾತ್ರಿಗಳ ರಕ್ಷಣೆ ಸಂಬಂಧಿಸಿದಂತೆ ಯಾವುದೆಲ್ಲ ಕ್ರಮಗಳನ್ನು ಕೈಗೊಳ್ಳಬಹುದು ಆ ಕ್ರಮಗಳನ್ನು ಬಗ್ಗೆ ಮೂರು ವಾರದಲ್ಲಿ ವರದಿ ನೀಡುವಂತೆ ಸಮಿತಿಗೆ ಆದೇಶಿಸಿದೆ.

    ಜಮ್ಮು ಕಾಶ್ಮೀರದಲ್ಲಿ ಸಮುದ್ರ ಮಟ್ಟದಿಂದ 3,888 ಮೀಟರುಗಳಷ್ಟು ಎತ್ತರದಲ್ಲಿರುವ ಅಮರನಾಥ ಕ್ಷೇತ್ರ ಹಿಂದೂಗಳ ಪವಿತ್ರ ದೇವಾಲಯವಾಗಿದೆ.